ಪ್ರೀತಿ ಇಲ್ಲದ ಜೀವನ ವ್ಯರ್ಥ
ಶಮ್ಸ್-ಏ-ತಬ್ರಿಜ್ ಅನುವಾದ : ರುಕ್ಮಿಣಿ ನಾಗಣ್ಣವರ
ನೀನಿಲ್ಲದೇ
ಗುಲ್ ಮೊಹರ ಹಾಸುತ್ತಿತ್ತು ಕಣ್ಣಿನ ಬದಲು ಕೆನ್ನೆ ಕೆಂಪಾಗಿಯೇ ಇರುತ್ತಿತ್ತು
ದಾರಾವಾಹಿ ಆವರ್ತನ ಅದ್ಯಾಯ-37 ಗೋಪಾಲನಿಗೆ ಬಿದ್ದ ಕನಸಿನಲ್ಲಿ ಅವನ ಮನೆಯೆದುರಿನ ನಾಗಬನದಿಂದ ಘಟಸರ್ಪವೊಂದು ಅವನ ಮನೆಯತ್ತಲೇ ಧಾವಿಸುವುದನ್ನು ಕಂಡವನು ಹೆದರಿ ಕಂಗಾಲಾಗಿ ಮಡದಿ, ಮಕ್ಕಳನ್ನು ಎಬ್ಬಿಸಲು ಮುಂದಾಗುತ್ತಾನೆ. ಆದರೆ ಅವರಲ್ಲಿ ಯಾರಿಗೂ ಎಚ್ಚರವಾಗುವುದಿಲ್ಲ. ತಾನಾದರೂ ಎದ್ದು ಓಡಿಹೋಗಬೇಕು ಎಂದುಕೊಳ್ಳುತ್ತಾನೆ. ಆದರೆ ಆಶ್ಚರ್ಯ! ತನ್ನ ಕೈಕಾಲುಗಳನ್ನು ಯಾರೋ ಬಿಗಿಯಾಗಿ ಕಟ್ಟಿ ಹಾಕಿರುವಂತೆ ಭಾಸವಾಗುತ್ತದೆ. ಜೋರಾಗಿ ಅರಚಿಕೊಳ್ಳುತ್ತಾನೆ. ಆದರೂ ಬಿಡುಗಡೆ ದೊರಕುವುದಿಲ್ಲ. ವಿಧಿಯಿಲ್ಲದೆ ಮರಳಿ ತನ್ನ ಕುಟುಂಬವನ್ನು ತಬ್ಬಿಕೊಂಡು ಮುದುಡುತ್ತಾನೆ. ಅಷ್ಟರಲ್ಲಿ ರಾಧಾಳಿಗೆ ಎಚ್ಚರವಾಗುತ್ತದೆ. ಅವಳೂ ಆ ಮಹಾಸರ್ಪವನ್ನು ಕಂಡು ಕಿಟಾರ್ರನೇ ಕಿರುಚುತ್ತಾಳೆ. ‘ಅಯ್ಯೋ ದೇವರೇ… ಇದೇನಿದು ಭಯಂಕರ ಹಾವು! ಏಳಿ ಮಾರಾಯ್ರೇ… ಎದ್ದೇಳಿ ಮಕ್ಕಳನ್ನು ಎತ್ತಿಕೊಳ್ಳಿ. ಇಲ್ಲಿಂದ ಓಡಿ ಹೋಗುವ. ಆ ಹಾವು ಎಲ್ಲರನ್ನೂ ಕಚ್ಚಿ ಸಾಯಿಸಿಯೇ ಬಿಡುತ್ತದೆ. ನಿಮ್ಮ ದಮ್ಮಯ್ಯ ಎದ್ದೇಳಿ ಮಾರಾಯ್ರೇ…!!’ ಎಂದು ಕಿರುಚುತ್ತಾಳೆ. ಆದರೆ ಗೋಪಾಲನಿಗೆ ಹೇಗ್ಹೇಗೆ ಪ್ರಯತ್ನಿಸಿದರೂ ಕುಳಿತಲ್ಲಿಂದ ಚೂರೂ ಅಲ್ಲಾಡಲಾಗುವುದಿಲ್ಲ. ‘ಇಲ್ಲ ರಾಧಾ, ನನ್ನ ಕೈಕಾಲುಗಳು ಬಿದ್ದು ಹೋಗಿವೆ. ನೀನಾದರೂ ಮಕ್ಕಳನ್ನೆತ್ತಿಕೊಂಡು ದೂರ ಹೋಗಿ ಬದುಕಿಕೋ. ಹ್ಞೂಂ ಹೊರಡು!’ ಎಂದು ಕೂಗುತ್ತಾನೆ. ‘ಅಯ್ಯೋ ಇಲ್ಲ ಮಾರಾಯ್ರೇ… ನಿಮ್ಮನ್ನು ಬಿಟ್ಟು ನಾವು ಎಲ್ಲಿಗೂ ಹೋಗುವುದಿಲ್ಲ. ಸಾಯುವುದಿದ್ದರೆ ಒಟ್ಟಿಗೆ ಸಾಯುವ!’ ಎಂದು ಅಳುತ್ತಾಳೆ. ಅಷ್ಟರಲ್ಲಿ ಆ ಕಾಳಸರ್ಪವು ಗೋಪಾಲನ ಮನೆಯತ್ತ ಬಂದೇ ಬಿಟ್ಟಿತು ಮತ್ತದು ನೋಡು ನೋಡುತ್ತಿದ್ದಂತೆಯೇ ಬೆಳೆಯತೊಡಗಿತು. ಬೆಳೆಯುತ್ತ ಬೆಳೆಯುತ್ತ ಅವನ ಮನೆಯನ್ನೂ ಮೀರಿ ಆಕಾಶದೆತ್ತರಕ್ಕೆ ಬೆಳೆದು ಸೆಟೆದು ನಿಂತುಕೊಂಡಿತು! ಅದರ ವಿರಾಟರೂಪವನ್ನೂ, ಎದೆ ನಡುಗುವಂಥ ಫೂತ್ಕಾರವನ್ನೂ ಕೇಳಿದ ರಾಧಾ ಪ್ರಜ್ಞೆ ತಪ್ಪಿಬಿದ್ದಳು. ಗೋಪಾಲ ಮೂಕನಂತಾದ. ಅತ್ತ ಹಟ್ಟಿಯಲ್ಲಿದ್ದ ದನಕರು, ನಾಯಿ, ಕೋಳಿಗಳ ಕೂಗು, ಆಕ್ರಂದನ ಮುಗಿಲು ಮುಟ್ಟಿತು. ಆ ಮುಗ್ಧಜೀವಿಗಳ ಆರ್ತನಾದವನ್ನೂ ಗೋಪಾಲನ ಅಸಹಾಯಕತೆಯನ್ನೂ ಕಂಡ ಸರ್ಪವು ತನ್ನ ಒಂದೊಂದು ಹೆಡೆಯನ್ನು ಒಂದೊಂದು ರೀತಿಯಲ್ಲಿ ಕೊಂಕಿಸಿ, ಕುಣಿಸಿ ಅಟ್ಟಹಾಸ ಮಾಡತೊಡಗಿತು. ಅಷ್ಟರಲ್ಲಿ ಗೋಪಾಲನಿಗೆ ಅಲ್ಲಿ ಇನ್ನೊಂದು ಆಘಾತವೂ ಬಡಿಯಿತು. ಆ ಮಹಾಸರ್ಪವನ್ನು ವಠಾರದ ಮಂದಿಯೆಲ್ಲ ವಿಸ್ಮಯದಿಂದ ನೋಡುತ್ತ ನಿಂತಿದ್ದಾರೆ. ಆದರೆ ಅವರಲ್ಲಿ ಯಾರಿಗೂ ಚೂರೂ ಭಯವಿರಲಿಲ್ಲ. ಎಲ್ಲರೂ ಗೋಪಾಲನ ಕುಟುಂಬದ ಒದ್ದಾಟವನ್ನು ನೋಡಿ ಗೇಲಿ ಮಾಡುತ್ತ ನಗುತ್ತಿದ್ದಾರೆ! ಅವನಿಗೆ ಅವರಲ್ಲಿ ಯಾರ ಗುರುತೂ ಸರಿಯಾಗಿ ಹತ್ತುವುದಿಲ್ಲ. ಆದರೆ ಸುಮಿತ್ರಮ್ಮ ಮಾತ್ರ ಸ್ಪಷ್ಟವಾಗಿ ಕಾಣಿಸುತ್ತಾರೆ. ಅವನಲ್ಲಿ ಸ್ವಲ್ಪ ಧೈರ್ಯ ಮೂಡುತ್ತದೆ. ‘ಸುಮಿತ್ರಮ್ಮಾ, ಸುಮಿತ್ರಮ್ಮಾ… ನಿಮ್ಮ ದಮ್ಮಯ್ಯ. ನಮ್ಮನ್ನು ಕಾಪಾಡಿಯಮ್ಮಾ…!’ ಎಂದು ಗೋಗರೆಯುತ್ತಾನೆ. ಆದರೆ ಸುಮಿತ್ರಮ್ಮನೂ ಅವನನ್ನು ಕಂಡು ಗಹಗಹಿಸಿ ನಗುತ್ತಾರೆ! ಅವನಿಗೆ ಇನ್ನಷ್ಟು ಆಘಾತವಾಗುತ್ತದೆ. ಭಯದಿಂದ ಹಾವಿನತ್ತ ನೋಡುತ್ತಾನೆ. ಅದು ಅವನ ಮಣ್ಣಿನ ಗೋಡೆಯ, ತಾಳೆಮರದ ಪಕ್ಕಾಸಿನ ಮೇಲೆ ಮೂರನೇ ದರ್ಜೆಯ ಹೆಂಚು ಹೊದೆಸಿದ್ದ ಸಣ್ಣ ಮನೆಯನ್ನು ತನ್ನ ಬಲಿಷ್ಠ ಹೆಡೆಗಳಿಂದ ಬೀಸಿ ಅಪ್ಪಳಿಸಿ ಪುಡಿ ಮಾಡಲು ಮುಂದಾಯಿತು ಎಂಬಷ್ಟರಲ್ಲಿ, ‘ಅಯ್ಯಯ್ಯಮ್ಮಾ…!?’ ಎಂದು ಗೋಪಾಲ ವಿಕಾರವಾಗಿ ಕಿರುಚುತ್ತ ನಿಜವಾದ ನಿದ್ರೆಯಿಂದ ಎಚ್ಚೆತ್ತು ಎದ್ದು ಕುಳಿತುಕೊಳ್ಳುತ್ತಾನೆ. ಗಂಡನ ಬೊಬ್ಬೆಗೆ ರಾಧಾಳೂ ಬೆಚ್ಚಿಬಿದ್ದು ಎದ್ದಳು. ಗೋಪಾಲ ಚಳಿಜ್ವರದಿಂದ ನಡುಗುತ್ತಿದ್ದ. ಅವಳಿಗೆ ಗಾಬರಿಯಾಯಿತು. ಗಂಡನನ್ನು ತಬ್ಬಿಕೊಂಡು ಸಂತೈಸುತ್ತ, ‘ಏನಾಯ್ತು ಮಾರಾಯ್ರೇ… ಜ್ವರ ಈಗಲೂ ಸುಡುತ್ತಿದೆಯಲ್ಲಾ…? ಯಾಕೆ ಕಿರುಚಿಕೊಂಡ್ರೀ…, ಕೆಟ್ಟ ಕನಸು ಬಿತ್ತಾ…?’ ಎಂದು ಅಕ್ಕರೆಯಿಂದ ಅವನ ಹಣೆ ಮತ್ತು ಎದೆಯನ್ನು ಒರಸುತ್ತಾ ಕೇಳಿದಳು. ಆದರೆ ಗೋಪಾಲ ಇಹದ ಪ್ರಜ್ಞೆಯೇ ಇಲ್ಲದವನಂತೆ ಹೆಂಡತಿಯನ್ನು ನೋವಿನಿಂದ ದಿಟ್ಟಿಸಿದ. ಅವನ ಕಣ್ಣಗುಡ್ಡೆಗಳು ಕೆಂಪಾಗಿ ಹೊರಚಾಚಿದ್ದವು. ಗಂಟಲ ನರಗಳು ಉಬ್ಬಿ ಕಾಣುತ್ತಿದ್ದವು. ಒಮ್ಮೆ ವಿಚಿತ್ರವಾಗಿ ತನ್ನ ಮೈಕೊಡವಿಕೊಂಡವನು, ‘ಆದಷ್ಟು ಬೇಗ ನಾವಿಲ್ಲಿಂದ ದೂರ ಹೊರಟು ಹೋಗಬೇಕು ಮಾರಾಯ್ತೀ… ಈ ಜಾಗ ನಮಗಿನ್ನು ಖಂಡಿತಾ ಆಗಿ ಬರುವುದಿಲ್ಲ!’ ಎಂದು ನಡುಗುತ್ತ ಅಂದವನು ದೊಪ್ಪನೆ ಅಂಗಾತ ಬಿದ್ದ. ಇಡೀ ದೇಹವನ್ನು ಬಿರುಸಾಗಿ ಹಿಂಡುತ್ತ ಅತ್ತಿತ್ತ ಹೊರಳಾಡತೊಡಗಿದ. ನಂತರ ವಿಚಿತ್ರವಾಗಿ ನುಲಿಯುತ್ತ ಕೋಣೆಯಿಡೀ ತೆವಳತೊಡಗಿದ!…
ಹುಟ್ಟುತ್ತಿಲ್ಲ ಕವಿತೆ
ಅದೇಕೋ ಗೊತ್ತಿಲ್ಲ! ಇತ್ತೀಚೆಗೆ ಹುಟ್ಟುತ್ತಿಲ್ಲ ಕವಿತೆಯ ಸಾಲುಗಳು…
ಮಹಿಷಾ ಮಂಡಲದಲ್ಲಿ ಬೌದ್ಧ ಪರಂಪರೆ
ನಮ್ಮ ಆಚರಣೆಗಳಲ್ಲಿಯೇ ನಮ್ಮ ಚರಿತ್ರೆಗಳನ್ನು ಕಂಡುಕೊಳ್ಳಬೇಕಿದೆ. ಮಹಿಷಾ ಮಂಡಲದಲ್ಲಿ ಬೌದ್ಧರ ನಾಶದ ಹಿಂದೆ ಒಂದು ಚಾರಿತ್ರಿಕ ವಂಚನೆಯನ್ನು ಗ್ರಹಿಸಬೇಕಿದೆ.
ಹೀಗೆ ರಸ್ತೆಗೆ ಚೆಲ್ಲುವ ಮುನ್ನ
ರಕ್ತವಿಲ್ಲ ಕಣ್ಣೀರೂ ಇಲ್ಲ ಕೊಲೆ! ಯಾತರ ಕೊಲೆ?