ನಿರ್ಧಾರ
ದಿನಗಳೆದಂತೆ ಯೋಗಿಯೊಂದಿಗಿನ ಆತ್ಮೀಯತೆ ವಿನುತಳಲ್ಲಿ ಹೊಸ ಹುರುಪು ಮೂಡಿಸಿತ್ತು.ಯೋಗಿಯು ವಿನುತಳನ್ನು ಅನುರಾಗದ ಭಾವದಿಂದ ನೋಡುತಿದ್ದ.ಇಬ್ಬರಲ್ಲಿ ಮೂಡಿದ ಪ್ರೀತಿ ತೋರ್ಪಡಿಸದಿರಲು ಇಬ್ಬರು…
ಇಂಟರ್ ಲಾಕ್ ಅಂಗಳ
ಮನೆ ಮುಂದೆ ತಗಡಿನ ಶೀಟ್ ಛಾವಣಿ ಹೊದ್ದು ಬೆಚ್ಚಗೆ ಮಲಗಿದ ಇಂಟರ್ ಲಾಕ್ ಅಂಗಳ ಮನೆ ಮಂದಿಗೆ
ಕನ್ನಡಿ
ತಾವಿಲ್ಲ ಇಷ್ಟ ಕಷ್ಟಗಳಿಗೆ ಸತ್ಯವನ್ನಲ್ಲದೆ ಬೇರೇನೂ ಹೇಳುವುದಿಲ್ಲ ಗತ್ಯಂತರವಿಲ್ಲದೆ ಅಗತ್ಯವಾಗಿರುವೆ.
ಧಾರಾವಾಹಿ ಆವರ್ತನ ಅದ್ಯಾಯ-33 ಆಸ್ಪತ್ರೆಯಲ್ಲಿ ಒಂದು ವಾರ ತೀವ್ರ ನಿಗಾಘಟಕದಲ್ಲಿ ನರಳಿದ ಶ್ರೀನಿವಾಸ ಕೊನೆಗೂ ಬದುಕುಳಿದ. ಆದರೆ ಈ ಘಟನೆಯಿಂದ ಪ್ರವೀಣನ ನಾಗದೋಷದ ಭೀತಿಯು ದುಪ್ಪಟ್ಟಾಗಿ ಪ್ರಜ್ವಲಿಸತೊಡಗಿತು. ತನ್ನ ಅನಾಚಾರದಿಂದಲೇ ಇವೆಲ್ಲ ಅನಾಹುತಗಳು ನಡೆಯುತ್ತಿರುವುದು! ಎಂದು ಭಾವಿಸಿದವನು ಇನ್ನು ತಡಮಾಡಬಾರದು. ತನ್ನ ಜೀವನ ಸರ್ವನಾಶ ಆಗುವುದಕ್ಕಿಂತ ಮುಂಚೆಯೇ ಎಚ್ಚೆತ್ತುಕೊಳ್ಳಬೇಕು ಎಂದು ನಿರ್ಧರಿಸಿದ. ಅದೇ ಸಂದರ್ಭದಲ್ಲಿ ಶಂಕರನ ಶೀಂಬ್ರಗುಡ್ಡೆಯ ನಾಗಬನ ಜೀರ್ಣೋದ್ಧಾರದ ಸಂಗತಿಯೂ ಅವನಿಗೆ ತಿಳಿಯಿತು. ಕೂಡಲೇ ಹಳೆಯ ಗೆಳೆಯನನ್ನು ಹೊಸ ಆತ್ಮೀಯತೆಯಿಂದ ಅರಸಿ ಹೋಗಿ ಭೇಟಿಯಾದ. ಶಂಕರನೂ ಪ್ರವೀಣನನ್ನು ಆಪ್ತತೆಯಿಂದ ಬರಮಾಡಿಕೊಂಡು ಕುಶಲೋಪರಿ ವಿಚಾರಿಸಿದ. ಆದರೆ ಅವನ ಮೂತ್ರ ಪ್ರಸಂಗ, ಚರ್ಮರೋಗ ಮತ್ತು ಹಾವಿನ ಕಡಿತದ ವಿಷಯವನ್ನು ಕೇಳಿದವನು ‘ಇದು ಖಂಡಿತಾ ನಾಗದೋಷದ ಪ್ರತಿಫಲವೇ ಮಾರಾಯಾ…! ಇಲ್ಲದಿದ್ದರೆ ಇಷ್ಟೆಲ್ಲಾ ಆಗುತ್ತಿರಲಿಲ್ಲ!’ ಎಂದು ಆತಂಕ ವ್ಯಕ್ತಪಡಿಸಿದ. ‘ಅಲ್ವಾ ಅಲ್ವಾ ಶಂಕರಣ್ಣಾ…? ನನಗೆ ಆವತ್ತು ಸುರೇಶ ಹೇಳಿದಾಗಲೇ ಅದು ಗೊತ್ತಾಗಿತ್ತು. ಆದರೆ ನನ್ನ ಮನೆಯವಳೂ, ಆ ಚರ್ಮರೋಗದ ಡಾಕ್ಟ್ರೂ ಹೇಳುವುದು ನಾನು ಸರಿಯಾಗಿ ಸ್ನಾನನೇ ಮಾಡುವುದಿಲ್ಲವಂತೆ. ಅದರಿಂದ ಹುಳಕಜ್ಜಿ ಬಂದಿದೆಯಂತೆ! ಹಾಗಾದರೆ ನನ್ನ ಮೈದುನನಿಗೆ ಹಾವು ಯಾಕೆ ಕಚ್ಚಿತು? ಅದೂ ನನ್ನ ಅಂಗಡಿಯ ಒಳಗೆಯೇ ಬಂದು ಕಚ್ಚಬೇಕಿತ್ತಾ…!’ ಎಂದು ಭಯದಿಂದ ಕಣ್ಣುಬಾಯಿ ಬಿಟ್ಟುಕೊಂಡು ಅಂದವನು, ‘ನನಗೀಗ ನೀವು ಹೇಳಿದ ಮೇಲೆ ಧೈರ್ಯ ಬಂತು ಶಂಕರಣ್ಣಾ…ಆದ್ದರಿಂದ ನೀವೇ ಇದಕ್ಕೊಂದು ಪರಿಹಾರವನ್ನೂ ಸೂಚಿಸಬೇಕು!’ ಎಂದು ಕೇಳಿಕೊಂಡ. ‘ನೀನೇನೂ ಹೆದರಬೇಡ ಮಾರಾಯಾ ನಾನಿದ್ದೇನೆ. ಎಲ್ಲಾ ಸಮ ಮಾಡುವ ನಡೀ…!’ ಎಂದು ಶಂಕರ ಗತ್ತಿನಿಂದ ಹೇಳಿದವನು ಕೂಡಲೇ ಅವನನ್ನು ಏಕನಾಥ ಗುರೂಜಿಯವರ ಹತ್ತಿರ ಕರೆದೊಯ್ದ. ಆ ಸಮಯದಲ್ಲಿ ಗುರೂಜಿಯವರು ತಮ್ಮ ಹಳೆಯ ಮನೆಯ ಒಂದು ಪಾಶ್ರ್ವವನ್ನು ಒಡೆದು, ಮುಂದೆ ತಮ್ಮಲ್ಲಿ ನಿರಂತರ ನಡೆಯಲಿರುವ ವಿವಿಧ ಪೂಜಾ ಕೈಂಕರ್ಯಗಳಿಗೆ ಸಹಾಯಕವಾಗುವಂಥ ವಿಶಾಲವಾದ ಆಧುನಿಕ ಪಡಸಾಲೆಯೊಂದನ್ನು ನಿರ್ಮಿಸತೊಡಗಿದ್ದರು. ಅತ್ತ ಶಂಕರನ ಕಾರು ಬಂದು ತಮ್ಮ ಮನೆಯೆದುರು ನಿಂತುದನ್ನೂ, ಅವನೊಂದಿಗೆ ಶ್ರೀಮಂತನೊಬ್ಬ ಇಳಿದು ಬರುತ್ತಿರುವುದನ್ನೂ ಮತ್ತು ಅವನ ಮುಖದಲ್ಲಿದ್ದ ಕಳವಳವನ್ನೂ ಗ್ರಹಿಸಿದವರಿಗೆ ತಮ್ಮ ಪಡಸಾಲೆಯ ಕೆಲಸವು ನಿರ್ವಿಘ್ನವಾಗಿ ಸಮಾಪ್ತಿಗೊಳ್ಳುವುದರಲ್ಲಿ ಅನುಮಾನವಿಲ್ಲ ಎಂದೆನಿಸಿತು. ಆದ್ದರಿಂದ ಮಂದಹಾಸ ಬೀರುತ್ತ ಇಬ್ಬರನ್ನೂ ಬರಮಾಡಿಕೊಂಡು ತಮ್ಮ ಜ್ಯೋತಿಷ್ಯದ ಕೋಣೆಗೆ ಕರೆದೊಯ್ದರು. ಶಂಕರ ತನ್ನ ಗೆಳೆಯನ ವ್ಯವಹಾರ ಮತ್ತು ಅವನ ಪ್ರಸ್ತುತ ಸಮಸ್ಯೆಯನ್ನು ಗುರೂಜಿಗೆ ಹಳೆಯ ಸಲುಗೆಯಿಂದ ವಿವರಿಸಿದ. ಆದರೆ ಅವರು ಅವನ ಸ್ನೇಹದತ್ತ ಗಮನಕೊಡದೆ ಅವನ ಮಾತುಗಳನ್ನು ಮಾತ್ರವೇ ಗಂಭೀರರಾಗಿ ಕೇಳಿಸಿಕೊಂಡರು ಹಾಗೂ ಕ್ಷಣಹೊತ್ತು ಕಣ್ಣುಮುಚ್ಚಿ ಧ್ಯಾನಸ್ಥರಂತೆ ಕುಳಿತು ಪ್ರವೀಣನ ಸಮಸ್ಯೆಗಳನ್ನು ತಮ್ಮದೇ ದೃಷ್ಟಿಕೋನದಿಂದ ಮಥಿಸಿದರು. ಗುರೂಜಿಯ ಗಾಂಭೀರ್ಯವನ್ನೂ ಅವರು ತನಗಾಗಿ ಧ್ಯಾನಿಸುತ್ತಿದ್ದ ರೀತಿಯನ್ನೂ ಕಂಡ ಪ್ರವೀಣನಿಗೆ ಅರ್ಧಕ್ಕರ್ಧ ಭಯ ಹೋಗಿಬಿಟ್ಟಿತು. ಆದರೆ ಅತ್ತ ಗುರೂಜಿಯ ಯೋಚನಾಲಹರಿ ಈ ರೀತಿ ಸಾಗುತ್ತಿತ್ತು, ‘ಓ ಪರಮಾತ್ಮಾ… ಕೊನೆಗೂ ನೀನು ನಮ್ಮ ಜೀವನಕ್ಕೊಂದು ಭದ್ರ ನೆಲೆಯನ್ನು ಕರುಣಿಸಿಬಿಟ್ಟೆ. ಅದಕ್ಕಾಗಿ ಅನಂತಾನಂತ ಕೃತಜ್ಞತೆಗಳು ದೇವಾ! ಹಾಗೆಯೇ ಈಗ ನಮ್ಮಲ್ಲಿಗೆ ನೀನು ಕಳುಹಿಸಿರುವ ಈ ವ್ಯವಹಾರವೂ ಸಾಂಗವಾಗಿ ನೆರವೇರುವಂಥ ಶಕ್ತಿಯನ್ನು ದಯಪಾಲಿಸು ಪ್ರಭುವೇ!’ಎಂದು ಪ್ರಾರ್ಥಿಸಿದರು. ನಂತರ ನಿಧಾನವಾಗಿ ಕಣ್ಣು ತೆರೆದು ಪ್ರವೀಣನನ್ನು ದಿಟ್ಟಿಸಿದರು. ಆಗ ಅವನು ಅವರನ್ನು ದೈನ್ಯದಿಂದ ನೋಡಿದ. ‘ಹೌದು ಪ್ರವೀಣರೇ, ನೀವು ಮಾಡಿರುವುದು ಮಹಾ ಅಪರಾಧವೇ ಆಗಿದೆ! ಅದರಲ್ಲಿ ಎರಡು ಮಾತಿಲ್ಲ’ ಎನ್ನುತ್ತ ಅವನನ್ನು ತೀಕ್ಷ್ಣವಾಗಿ ದಿಟ್ಟಿಸಿದರು. ಪ್ರವೀಣ ಭಯದಿಂದ ಇನ್ನಷ್ಟು ಇಳಿದುಹೋದ. ಅದನ್ನು ಗಮನಿಸಿದ ಗುರೂಜಿ, ‘ಆದರೂ ನೀವಿನ್ನು ಹೆದರಬೇಕಾಗಿಲ್ಲ. ನಿಮ್ಮ ಆ ಪಾಪಕೃತ್ಯವನ್ನು ಸರಿಪಡಿಸುವ ಮಾರ್ಗ ನಮ್ಮಲ್ಲಿದೆ. ಆದರೆ ಅದಕ್ಕೆ ಸಂಬಂಧಿಸಿದ ಕೆಲವು ವಿಧಿವಿಧಾನಗಳನ್ನು ನೆರವೇರಿಸಲು ಸಿದ್ಧರಿದ್ದೀರಾ?’ ಎಂದು ಮುಖದಲ್ಲಿ ನಿರ್ಭಾವ ತೋರಿಸುತ್ತ ಕೇಳಿದರು. ಆದರೂ ಅವರ ಕೆಳದುಟಿಯು ಸಣ್ಣಗೆ ಕಂಪಿಸುತ್ತಿದ್ದುದು ಯಾರ ಗಮನಕ್ಕೂ ಬರಲಿಲ್ಲ. ‘ಆಯ್ತು ಗುರೂಜಿ. ತಾವು ಹೇಗೆ ಹೇಳುತ್ತೀರೋ ಹಾಗೆ ನಡೆದುಕೊಳ್ಳುತ್ತೇನೆ. ಒಟ್ಟಾರೆ ನನ್ನ ಸಮಸ್ಯೆಯನ್ನು ನಿವಾರಿಸಿಕೊಡಬೇಕು ತಾವು!’ ಎಂದ ಪ್ರವೀಣ ನಮ್ರನಾಗಿ ಕೇಳಿಕೊಂಡ. ಆಗ ಗುರೂಜಿಯ ಮುಖದಲ್ಲಿ ನಗು ಮೂಡಿತು. ‘ಆಯ್ತು, ಸರಿಮಾಡಿ ಕೊಡುವ. ಆದರೆ ಅದಕ್ಕಿಂತ ಮೊದಲು ಆ ಜಾಗವನ್ನು ನಾವೊಮ್ಮೆ ನೋಡಬೇಕಲ್ಲಾ…?’ ‘ಆಯ್ತು ಗುರೂಜಿ. ನಿಮಗೆ ಪುರುಸೋತ್ತಿದ್ದರೆ ಈಗಲೇ ಹೋಗಿ ನೋಡಿ ಬರಬಹುದು!’ ಎಂದ ಪ್ರವೀಣನು, ಶಂಕರನ ಮುಖ ನೋಡುತ್ತ,…
ಶಾಂಭವಿ, ಬಣ್ಣ, ಜಾತಿ ಮುಂತಾಗಿ..
ಸಣ್ಣಕಥೆ ಶಾಂಭವಿ, ಬಣ್ಣ, ಜಾತಿ ಮುಂತಾಗಿ.. ಡಾ. ಅರಕಲಗೂಡು ನೀಲಕಂಠ ಮೂರ್ತಿ –01– ಮೊಬೈಲ್ ವಾಟ್ಸ್ಯಾಪ್ ರಿಂಗಾದಾಗ ಸುಮಾರು ರಾತ್ರಿ…