ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕವಿತೆ ಕಾರ್ನರ್

ಯಾತನೆಯ ದಿನಗಳು

ಇವು ಯಾತನೆಯ ದಿನಗಳುರಾಜಕೀಯ ಪರಿಬಾಷೆಯಲ್ಲಿ ಬಣ್ಣಿಸಲಾಗದಂತಹ,ಕವಿತೆಗಳನ್ನಾಗಿಸಲೂ ಸಾದ್ಯವಿರದಂತಹ-ಕತೆಗಳನ್ನಾಗಿಸಲೂ ಸಂಯಮವಿರದಂತಹ ಕಾಲ! ಅದೆಲ್ಲೊ ಆಧಾರ್ ಲಿಂಕ್ ಇರದೆಹಸಿವಿನಿಂದ ಹೆಣ್ಣು ಮಗುವೊಂದು ಸಾಯುತ್ತದೆಅದೆಲ್ಲೋ ಹೆಣ್ಣೊಬ್ಬಳನ್ನುಅತ್ಯಾಚಾರ ಮಾಡಿ ಯೋನಿಗೆ ಸಲಾಕೆ ತೂರಿಸಿ ಕೊಲ್ಲುತ್ತಾರೆಅದೆಲ್ಲೋ ತುಂಬು ಬಸುರಿಯ ಗರ್ಭಸೀಳಿಹುಟ್ಟಬೇಕಿರುವ ಮಗುವ ಕೊಲ್ಲುತ್ತಾರೆ ಹಸಿದವಳೊಬ್ಬಳು ತುಂಡು ರೊಟ್ಟಿಕದ್ದಿದ್ದಕ್ಕೆ ಬೆತ್ತಲು ಮಾಡಿಮೆರವಣಿಗೆಮಾಡುತ್ತಾರೆಅದೆಲ್ಲೊ ಸತ್ತ ದನದ ಚರ್ಮಸುಲಿದ ತಪ್ಪಿಗೆ ದಲಿತ ಯುವಕರನ್ನುಥಳಿಸಲಾಗುತ್ತದೆಅದೆಲ್ಲೋ ಅವರುಗಳನ್ನೆದುರಿಸಿಮಾತಾಡಿದವರನ್ನು ಹತ್ಯೆಗಯ್ಯಲಾಗುತ್ತದೆ ಇವೆಲ್ಲವನ್ನೂ ಅದೆಲ್ಲೋಅಂತಂದುಕೊಂಡುಮೌನಕ್ಕೆ ಮುಗಿಬಿದ್ದ ನನ್ನಷಂಡತನಕ್ಕೆ ಸಾಕ್ಷಿಯಾಗಿಹೊಟ್ಟೆತುಂಬ ಉಂಡು ತೇಗುತ್ತೇನೆ ಗೆಳೆಯರೊಂದಿಗೆ ಹೊಸದೊಂದುವಾದವಿವಾದಕ್ಕಾಗಿ ಹೊಸಆಯುಧಗಳನ್ನು ಅನ್ವೇಷಿಸಲುಮುಂದಾಗುತ್ತೇನೆ,ಸವಕಲಾದ ಅವೇ ಹಳೆಯ ಶಬುದಗಳಮತ್ತೆ ಮಸೆದು ಮಚ್ಚಾಗಿಸಿಹಲ್ಲು ಕಚ್ಚುತ್ತೇನೆದಿನದಂತ್ಯಕ್ಕೆ ಮಾತಿನಮಲ್ಲಯುದ್ದದಲ್ಲಿ ಗೆದ್ದಸಂಭ್ರಮದಲ್ಲಿಪಲ್ಲಂಗದಲ್ಲಿ ಪವಡಿಸುತ್ತೇನೆ ನಾನು ಬದುಕಿರುವುದಕ್ಕೆ ಸಾಕ್ಷಿಯಾಗಿ ಆಗೀಗಕನ್ನಡಿಯೊಳಗೆ ಇಣುಕಿನನ್ನ ಚಹರೆಯ ಇರುವಿಕೆಯ ಬಗ್ಗೆಖಾತರಿ ಪಡಿಸಿಕೊಳ್ಳುತ್ತೇನೆಇದೀಗ ಯಾತನೆಯ ಕಾಲಬರೆದ ಕವಿತೆ ಕತೆಗಳ ಸುಟ್ಟು ಹಾಕಿಅದೇ ಬೆಂಕಿಯಲ್ಲಿಒಳಿತೊಂದನ್ನು ಅರಸುವ ಕಾಲ

ಯಾತನೆಯ ದಿನಗಳು Read Post »

ಇತರೆ

ಪ್ರೀತಿಯೆನಲು ಹಾಸ್ಯವೇ

ಚಂದ್ರಪ್ರಭ ಅದು ಜಗಳವೆ.. ಕದನವೆ.. ಶೀತಲವೆ.. ಮುಕ್ತವೆ? ಯಾವುದೂ ಅಲ್ಲ. ಆದರೆ ಅವರು ಕಾಯಂ ಗುದ್ದಾಡುವುದಂತೂ ಸತ್ಯ. ಒಮ್ಮೊಮ್ಮೆ ತೆರೆದ ಗುದ್ದಾಟ.. ಒಮ್ಮೊಮ್ಮೆ ಮುಸುಕಿನ ಗುದ್ದಾಟ.. ಕಾಲನ ಪ್ರವಾಹದ ಬಿಸಿ. ಭಿನ್ನ ಭಿನ್ನ ತೀರಗಳಲ್ಲಿದ್ದೇ ದಿನ ದೂಡುವುದು ಸಹಜ ರೂಢಿಯಾಗಿದೆ ಅವರಿಗೆ. ಅದನ್ನು ಆಧುನಿಕತೆ ತಂದ ವಿಪತ್ತು, ನೀವು ಬಲಿಪಶು ಎಂದರೆ ಅವರಿಗೆ ಬೇಸರಾಗುತ್ತದೆ.. ಮಾಡರ್ನ್ ಯುಗದ ಪ್ರೊಡಕ್ಟ್ ಅಂದಾಗ ಕೊಂಚ ಸಮಾಧಾನ. ಸಂತಾನದೆದುರು ಮಾದರಿಯಾಗಿರಲು ಹರಸಾಹಸಪಡುತ್ತಾರೆ ಅವರು.. ಆದರೂ ಎಳೆಯ ಜೀವಗಳಿಗೆ ಇವರ ಜಗ್ಗಾಟದ ವಾಸನೆ ಬಡಿಯುತ್ತದೆ. ವಿರುದ್ಧ ದಿಕ್ಕಿನಲ್ಲಿ ಯೋಚಿಸುವಾಗಲೂ ಅವರು ‘… ಒಲವೆ ನಮ್ಮ ಬದುಕು’ ತರಹದ ಸಾಲುಗಳನ್ನು ಗುನುಗುತ್ತಾರೆ. ಆಗೀಗ ತಾವು ಆಸ್ಥೆಯಿಂದ ಕಟ್ಟಿದ ಮನೆಯಲ್ಲಿ ಒಟ್ಟು ಸೇರಿ ಸಂಭ್ರಮಿಸುತ್ತಾರೆ. ಕರ್ತವ್ಯದ ಕರೆಯಾಲಿಸಿ ನಾಲ್ವರು ನಾಲ್ಕು ದಿಕ್ಕಾಗುವ ಅವರು ಜಾಲ ತಾಣಗಳಲ್ಲಿ ಇಂಟರ್ ಕನೆಕ್ಟೆಡ್ ಆಗುತ್ತಾರೆ. ಸಾಹಿತ್ಯ, ರಾಜಕಾರಣ, ಸಿನಿಮಾ, ಪ್ರಚಲಿತ ವಿದ್ಯಮಾನ ಎಲ್ಲವುಗಳ ಮೇಲೆಯೂ ಕಮೆಂಟಿಸುತ್ತಾರೆ.. ಭೇಟಿಗಳಲ್ಲಿ ಒಮ್ಮೊಮ್ಮೆ ಅಭಿಪ್ರಾಯ ಭೇದ ಕಾಡುವಾಗ ಮುನಿದು ಮುಖ ತಿರುವಿಕೊಳ್ಳುತ್ತಾರೆ. ಉದ್ವಿಗ್ನತೆಯಲ್ಲೂ ನೆನಪಾಗುತ್ತದೆ ಅವರಿಗೆ ಕವಿ ಸಾಲು – ‘… ಹತ್ತಿರವಿದ್ದರೂ ದೂರ ನಿಲ್ಲುವೆವು.. ಕೋಟೆಯಲಿ.. ‘ ತಂತಮ್ಮ ಕೋಟೆಯಲ್ಲಿ ನಿಂತುಕೊಂಡೇ ಕವಿತೆ ಕುರಿತು ಅವರು ವಿಮರ್ಶೆ ಮಾಡುತ್ತಾರೆ..ಆದರೂ ಕೋಟೆ ಒಡೆಯುವ ದಾರಿಗಾಣದೇ ಪರಸ್ಪರ ಬೀಳ್ಕೊಡುವಾಗ ಎಲ್ಲದಕ್ಕೂ ಮುಸುಕೆಳೆದು ನಕ್ಕು ಬಿಡುತ್ತಾರೆ. ಜೀವನ ಪ್ರವಾಹ ತಮ್ಮನ್ನು ಜೊತೆಯಾಗಿ ಕರೆದೊಯ್ಯುತ್ತಿದೆ ಎಂದವರಿಗೆ ಮನವರಿಕೆಯಾಗುತ್ತದೆ.. ಕ್ವಚಿತ್ತಾಗಿ ಸಿಗುವ ಅವಕಾಶಗಳಲ್ಲಿ ಅವರು ಫೋಟೋಕ್ಕೊಂದು ಚಂದದ ಪೋಜು ಕೊಡುತ್ತಾರೆ.. ಅದು ನೀಡುವ ಪುರಾವೆಯಲ್ಲಿ ಜೀವನೋತ್ಸಾಹವನ್ನು ಬಚ್ಚಿಟ್ಟುಕೊಳ್ಳುತ್ತಾರೆ.. ನಿಮ್ಮ ಅಕ್ಕಪಕ್ಕದಲ್ಲೆಲ್ಲೋ ಇವರು ಇದ್ದಾರು.. ಸುಮ್ಮನೆ ಆಚೀಚೆ ಒಮ್ಮೆ ಕಣ್ಣು ಹಾಯಿಸಿ ಬಿಡಿ.. ನನಗೇಕೊ ಕೆ. ಎಸ್. ನ. ಸಾಲು ಗುನುಗುವ ಮನಸ್ಸಾಗುತ್ತಿದೆ… ಒಂದು ಹೆಣ್ಣಿಗೊಂದು ಗಂಡು ಹೇಗೋ ಸೇರಿ ಹೊಂದಿಕೊಂಡು ಕಾಣದೊಂದ ಕನಸ ಕಂಡು ಮಾತಿಗೊಲಿಯದಮೃತವುಂಡು ದುಃಖ ಹಗುರವೆನುತಿರೆ ಪ್ರೀತಿಯೆನಲು ಹಾಸ್ಯವೆ?

ಪ್ರೀತಿಯೆನಲು ಹಾಸ್ಯವೇ Read Post »

ಕಾವ್ಯಯಾನ

ನನ್ನೊಳು ಸುನಾಮಿಯೊ

ನನ್ನ ಕೊಳಲು ಚಂದ್ರಪ್ರಭ ಬಿದಿರ ರಂಧ್ರಗಳಲಿ ತೂರಿ ತುಳುಕುವಾಗ ನೀನು ಕೊಳಲ ಮಾಧುರ್ಯ.. ಇಂಪು ಸೊಂಪಿನ ಅದೇ ಮೋಡಿ ಬೀಸಿ ಬಂದ ಬಿರುಗಾಳಿಯಲಿ ಬೆರೆವಾಗ ಅಲುಗುವುದೇಕೆ ಅಸ್ತಿತ್ವದ ಸೌಧ..! ಮತ್ತದೇ ಗಾಳಿ ಭೋರ್ಗರೆವ ಸುನಾಮಿಯಲಿ ಬೆರೆವಾಗ ನನ್ನೊಳು ಸುನಾಮಿಯೊ ಸುನಾಮಿಯೊಳು ನಾನೊ..!! ನಿನ್ನ ಹೊರತು ಸಾಗದ ಉಸಿರು.. ಅಳವಿಗೇ ಸಿಕ್ಕದ ನಿನ್ನ ಗಾಳಿ ಎಂದವರಾರು..?

ನನ್ನೊಳು ಸುನಾಮಿಯೊ Read Post »

You cannot copy content of this page

Scroll to Top