ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಚರ್ಚೆ

ಶ್ರೀ ಬಸವರಾಜ ಕಾಸೆ ಅವರ ಪಲುಕುಗಳು ಝಲಕುಗಳು ಲೇಖನಕ್ಕೆ ಡಾ.ಗೋವಿಂದ ಹೆಗಡೆಯವರ ಪ್ರತಿಕ್ರಿಯೆ ಶ್ರೀ ಬಸವರಾಜ ಕಾಸೆ ಅವರ ಪಲುಕುಗಳು ಝಲಕುಗಳು ಲೇಖನಕ್ಕೆ ಸಂಬಂಧಿಸಿ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ಶ್ರೀ ಕಾಸೆ ಅವರನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಸುಮಾರು ಎರಡು ವರ್ಷಗಳಿಂದ ಬಲ್ಲೆ. ಅವರೊಬ್ಬ ಉತ್ಸಾಹಿ. ತುಂಬ ಬರೆಯುವ, ಏನಾದರೂ ಸಾಧಿಸಬೇಕೆಂಬ ತಹತಹವುಳ್ಳ ಲೇಖಕ. ಆದರೆ ಈ ಸಂದರ್ಭದಲ್ಲಿ ಅವರು ತಮ್ಮ ಮನೆಗೆಲಸವನ್ನು- ಹೋಂವರ್ಕ್-ಸರಿಯಾಗಿ ಮಾಡಿದಂತಿಲ್ಲ. ಮೊದಲನೆಯದಾಗಿ ಅವರು ಹೇಳುವ ಈ “ಫಲಕುಗಳು- ಝಲಕುಗಳು” ಪದಪುಂಜವನ್ನು ನೋಡೋಣ. ಕನ್ನಡದಲ್ಲಂತೂ ಫಲಕು ಎಂಬ ಪದವಿಲ್ಲ ಅದು ಪಲುಕು ಆಗಬೇಕು. ಪಲುಕು ಶಬ್ದಕ್ಕೆ ನುಡಿ, (ಧ್ವನಿಯ) ಬಳುಕು, ಹಾಡು ಹೇಳುವಿಕೆ, ಅಂತರಾರ್ಥ ಕಲ್ಪನೆ, (ಸಂಗೀತದಲ್ಲಿ) ಧ್ವನಿಯ ಬಳುಕು ಎಂಬ ಅರ್ಥಗಳನ್ನು ನಿಘಂಟು ಕೊಡುತ್ತದೆ. ಇನ್ನು ಝಲಕ್ ಎಂದರೆ ಲಹರಿ ,ಹೊಳಹು, (ಆಲೋಚನೆಯ)ಮಿಂಚು ಇಂದು ಅನುವಾದಿಸಿ ಕೊಳ್ಳಬಹುದು ಎಂದು ತೋರುತ್ತದೆ. ಆಂಗ್ಲದಲ್ಲಿ ಝಲಕ್ ಪದಕ್ಕೆ flash, gleam, Dawn, flavour ಮೊದಲಾದ ಪದಗಳನ್ನು ಅರ್ಥವಾಗಿ ನೀಡಲಾಗಿದೆ. ಕಾಸೆ ಅವರು ಈ ಪಲುಕಗಳು ಮತ್ತು ಝಲಕುಗಳು ಯಾವ ಮೂಲದವು ಎಂಬುದನ್ನು ಸ್ಪಷ್ಟಪಡಿಸಿಲ್ಲ.”ಕನ್ನಡದಲ್ಲಿ ಇವು ಹೆಚ್ಚಾಗಿ ಬಂದಿಲ್ಲ”,”ಪೂರ್ಣಪ್ರಮಾಣದ ಕೃತಿ ಇನ್ನೂ ಬರಬೇಕಿದೆ”ಎನ್ನುತ್ತಾರೆ.ಅಲ್ಲಿಗೆ ಇದು ಕನ್ನಡಕ್ಕೆ ಆಮದಾದ ಪ್ರಕಾರ ಎಂದು ತಿಳಿಯಬೇಕೇ? ಎಲ್ಲಿಂದ ಅವರು ಇದನ್ನು ತಂದಿದ್ದಾರೆ? ಆ ಭಾಷೆಯಲ್ಲಿ ಇದು ಎಷ್ಟರಮಟ್ಟಿಗೆ ಪ್ರಾಚುರ್ಯ ಪಡೆದಿದೆ? ಅಲ್ಲಿ ಯಾವ ಮಹತ್ವದ ಕವಿಗಳು ಈ “ಪ್ರಕಾರ”ದಲ್ಲಿ ಕೃಷಿ ಮಾಡಿದ್ದಾರೆ? ಎಷ್ಟು ಪುರಾತನವಾದ ಕಾವ್ಯ ಪ್ರಕಾರ ಇದು? ಈ ಯಾವ ವಿವರಗಳನ್ನೂ ಅವರು ನೀಡಿರುವುದಿಲ್ಲ. ಇನ್ನು ಅವರು ಈ ಪ್ರಕಾರ ದ ನಿಯಮ ಗುಣಲಕ್ಷಣಗಳನ್ನು ವಿವರಿಸಿದ್ದಾರೆ. ನಾಲ್ಕೈದು ಸಾಲುಗಳ ಲಹರಿಗಳು, ಅಂತಹ ಲಹರಿಗಳನ್ನು -ಝಲಕ್ ಗಳನ್ನು-ಹತ್ತಕ್ಕೆ ಕಡಿಮೆ ಇಲ್ಲದಂತೆ ಹೊಂದಿರಬೇಕು ಎನ್ನುವುದನ್ನು ಅವರು ಪ್ರಮುಖವಾಗಿ ಹೇಳಿದ್ದಾರೆ. ವಸ್ತು ಯಾವುದೇ ಇರಬಹುದು ಎಂಬುದು ಅವರ ಮಾತು. ಆದರೆ ಸಾಲುಗಳ ಬಂಧಕ್ಕೆ ಸಂಬಂಧಿಸಿ ಅವರು ಏನನ್ನೂ ಹೇಳಿಲ್ಲ ಎನ್ನುವುದು ಗಮನಾರ್ಹ. ಅಂದರೆ ಆ ಲಹರಿಗಳು ನಮ್ಮ ಹನಿಗವನಗಳಂತೆ, ಮುಕ್ತಕಗಳಂತೆ, ಛಂದೋಮುಕ್ತವಾಗಿ ಬರೆಯುವ ಅವಕಾಶ ಇರುವಂತೆ ತೋರುತ್ತದೆ. ಇಂದಿನ ಮಾತುಗಳಲ್ಲಿ ಇಂತಹ ಮುಕ್ತಕಗಳನ್ನು “ಶಾಯರಿ” ಎನ್ನುವುದಿದೆ. ಆ ದೃಷ್ಟಿಯಲ್ಲಿ ಇದನ್ನು ಶಾಯರಿಗಳ ಮಾಲಿಕೆ ಎನ್ನಬಹುದು. ಇರಲಿ. ಕಾಸೆ ಅವರು ಹೇಳಿದ ಈ ಲಕ್ಷಣಗಳಿಂದಲೇ ಇದೊಂದು ವಿಭಿನ್ನವಾದ ಕಾವ್ಯಪ್ರಕಾರವಾಗುತ್ತದೆ ಎಂದು ನನಗನಿಸುತ್ತಿಲ್ಲ. ಗಜಲ್, ನಜಮ್, ರುಬಾಯಿ, ಫರ್ದ್, ಹಾಯ್ಕುಗಳಂತೆ ಸ್ವತಂತ್ರ ಕಾವ್ಯಪ್ರಕಾರ ಇದು ಎಂದು ಕಾಸೆಯವರು ವಿವರಿಸಿದ ನಿಯಮ ಲಕ್ಷಣಗಳಿಂದಷ್ಟೇ ಹೇಳಲಾಗದು. ಒಂದು ವಿಷಯ ವಸ್ತುವನ್ನು ಹಲವಾರು ಹನಿಗಳ/ಕಿರು ಕವನಗಳ ಮೂಲಕ ಕಟ್ಟುವ ಕ್ರಮ ಕನ್ನಡದಲ್ಲಿ ಹಲವಾರು ವರ್ಷಗಳಿಂದ ಇದೆ. ಜಯಂತ ಕಾಯ್ಕಿಣಿಯವರ ಕೊಡೈ: ಕೆಲವು ಪದ್ಯಗಳು ಮತ್ತು ರಾಮಚಂದ್ರ ಶರ್ಮರ ಬೀದರ್: ಕೆಲವು ಭಗ್ನ ಪ್ರತಿಮೆಗಳು ಈಗ ನನಗೆ ನೆನಪಿಗೆ ಬರುತ್ತಿರುವ ಎರಡು ಉದಾಹರಣೆಗಳು. ಪಲುಕುಗಳು ಝಲಕುಗಳು ಕೂಡ ಅಂತಹ ಒಂದು ಪ್ರಯತ್ನ, ಪ್ರಯೋಗ ಅಷ್ಟೇ ಎಂದು ನನಗನಿಸುತ್ತದೆ. ಕಾಸೆಯವರು ತಮ್ಮ ಈ ಲೇಖನಕ್ಕೆ ಬೇರೆ ಭಾಷೆಯಲ್ಲಿನ ಈ ಪ್ರಕಾರದಲ್ಲಿನ ಕೃಷಿಯನ್ನು ಆಕರವಾಗಿ, ಆಧಾರವಾಗಿ ಹೊಂದಿದ್ದರೆ ಅದನ್ನು ಅವರು ವಿವರಿಸಬೇಕೆಂದೂ, ಉಲ್ಲೇಖಿಸಬೇಕೆಂದೂ ಕೋರುತ್ತೇನೆ. ಆಗ ಈ ಸಂಗತಿಯನ್ನು ಇನ್ನೂ ಹೆಚ್ಚು ವಿವರವಾಗಿ, ಆಳವಾಗಿ ಗಮನಿಸಲು ಸಾಧ್ಯವಾದೀತು. ಕೊನೆಯ ಟಿಪ್ಪಣಿ: ಅವರು ಇಲ್ಲಿ ಉಲ್ಲೇಖಿಸಿದ ಪಲುಕಿಗೆ ಸಂಬಂಧಿಸಿದಂತೆ. “ಬಿತ್ತಿ ಉತ್ತಿದ ಬೀಜದ ಫಲ” ಎಂಬ ಸಾಲಿದೆ. ಅದು “ಉತ್ತು ಬಿತ್ತಿದ” ಎಂದಾಗಬೇಕು ಅಂತ ಅನಿಸುತ್ತಿದೆ. ಉಳುಮೆ ಮಾಡಿದ ಮೇಲೆ, ಉತ್ತಮೇಲೆ ಬಿತ್ತುವುದು. ಉಲ್ಟಾ ಅಲ್ಲ.

ಚರ್ಚೆ Read Post »

ಇತರೆ

ಅಭಿನಂದನೆ

ಕೆ.ಶಿವು.ಲಕ್ಕಣ್ಣವರ ಸಾಹಿತಿ, ರಂಗಭೂಮಿ ಕಲಾವಿದೆ, ಪತ್ರಕರ್ತೆ ಡಾ.ವಿಜಯಮ್ಮನವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದ್ದು ಸಮಂಜಸವಾಗೇ ಇದೆ..! ಸಾಹಿತಿ, ಲೇಖಕಿ, ರಂಗಭೂಮಿ ಕಲಾವಿದೆ ಡಾ.ವಿಜಯಾ (ವಿಜಯಮ್ಮ) ಅವರಿಗೆ 2019 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಾನ್ ಪಿಕ್ಸನ್ ನ ಕನ್ನಡ ಭಾಷಾ ವಿಭಾಗದಲ್ಲಿ ಅವರ ‘ಕುದಿ ಎಸರು’ ಆತ್ಮಕಥೆಗೆ ಈ ಪ್ರಶಸ್ತಿ ಸಂದಿದೆ… ಕೇಂದ್ರ ಸಾಹಿತ್ಯ ಅಕಾಡೆಮಿಯು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದೆ. ಇವರ ಜೊತೆ ದೇಶದ 21 ಭಾಷೆಯ 23 ಲೇಖಕರು, ಸಾಹಿತಿಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೂಲತಃ ದಾವಣಗೆರೆ ಜಿಲ್ಲೆಯವರಾದ ವಿಜಯಮ್ಮ ಅವರು ಬೆಂಗಳೂರಿನಲ್ಲಿ ನೆಲಸಿದ್ದಾರೆ. ಇಳಾ ಎಂಬ ಪುಸ್ತಕ ಪ್ರಕಾಶನ ಮೂಲಕ 200 ಕ್ಕೂ ಹೆಚ್ಚು ಲೇಖಕರ ಪುಸ್ತಕಗಳನ್ನು ಪ್ರಕಟಿಸಿದ್ದಾರೆ… ಶ್ರೀರಂಗರ ನಾಟಕಗಳ ಕುರಿತು ಪಿ ಎಚ್ ಡಿ ಪಡೆದಿರುವ ವಿಜಯಮ್ಮ, ರಂಗಭೂಮಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವರು… ಈಗ ದೊರೆತಿರುವ ಈ ಪ್ರಶಸ್ತಿಯೂ 1 ಲಕ್ಷ ರುಪಾಯಿ ನಗದು ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ. ಫೆಬ್ರುವರಿ 25, 2020 ರಂದು ನವದೆಹಲಿಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಸದ್ಯ ಕನ್ನಡಿಗ, ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ… ಡಾ.ವಿಜಯಾ(ವಿಜಯಮ್ಮ)ರ ಬದಕು-ಬರಹದ ಬಗೆಗೆ ನೋಡೋಣ… ಡಾ.ವಿಜಯಾರವರು ಸಾಮಾಜಿಕ ಅಸಮಾನತೆ, ಶೋಷಣೆ, ದಬ್ಬಾಳಿಕೆ, ಅನ್ಯಾಯಗಳ ವಿರುದ್ಧ ದನಿ ಎತ್ತುವ, ಮಹಿಳೆಯರ ಸಮಸ್ಯೆಗಳು, ಭಾಷಾ ಚಳವಳಿ ಮುಂತಾದ ಚಳವಳಿಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಳ್ಳುವ ದಿಟ್ಟ ಪರ್ತಕರ್ತೆ. ಡಾ.ವಿಜಯಾರವರು ಹುಟ್ಟಿದ್ದು ದಾವಣಗೆರೆಯಲ್ಲಿ ೧೯೪೨ರ ಮಾರ್ಚ ೧೦ರಂದು. ಇವರ ತಂದೆ ಶಾಮಣ್ಣ, ತಾಯಿ ಸರೋಜ. ಪ್ರಾರಂಭಿಕ ಶಿಕ್ಷಣ ದಾವಣಗೆರೆ, ಹೊಸಪೇಟೆಯ ಅಮರಾವತಿ ನಂತರ ಬೆಂಗಳೂರಿನಲ್ಲಿ ಬಿ.ಎ.ಪದವಿ ಮುಗಿಸಿದರು. ಹಾಗೂ ‘ಶ್ರೀರಂಗರ ನಾಟಕಗಳು: ಒಂದು ಅಧ್ಯಯನ’ ಕುರಿತು ಪ್ರೌಢ ಪ್ರಬಂಧ ಮಂಡಿಸಿ ಪಡೆದ ಪಿಎಚ್‌ಡಿ ಪದವಿ ಪಡೆದರು… ಹದಿನಾರರ ಹರೆಯದಲ್ಲಿಯೇ ವಿವಾಹಬಂಧನಕ್ಕೊಳಗಾದರೂ ಕುಟುಂಬದ ಕರ್ತವ್ಯಗಳಿಗಷ್ಟೇ ಸೀಮಿತಗೊಳಿಸಿಕೊಳ್ಳದೆ, ಅರ್ಥಪೂರ್ಣ ಬದುಕನ್ನು ತಮ್ಮದಾಗಿಸಿಕೊಳ್ಳುವ ಛಲದಿಂದ ಸಾಧನೆಯಲ್ಲಿ ತೊಡಗಿಸಿಕೊಂಡು ಪದವಿ ಮತ್ತು ಡಾಕ್ಟರೇಟ್‌ಗಳನ್ನು ಪಡೆದದ್ದು ವಿವಾಹದ ನಂತರವೇ… ಪತ್ರಕರ್ತೆಯಾಗಿ ವೃತ್ತಿ ಪ್ರಾರಂಭಿಸಿದ್ದು ಪ್ರಜಾಮತ ಪತ್ರಿಕೆಯಲ್ಲಿ. ಪತ್ರಿಕೋದ್ಯಮಿಯಾದವರು ೧೯೬೮ರಲ್ಲಿ. ನಂತರ ಮಲ್ಲಿಗೆ, ತುಷಾರ, ರೂಪತಾರ ಪತ್ರಿಕೆಗಳ ಸಹಾಯಕ ಸಂಪಾದಕಿಯಾಗಿ ಹೊತ್ತ ಜವಾಬ್ದಾರಿಗಳು. ಚಲನಚಿತ್ರ ಸುದ್ದಿಗಳಿಗಷ್ಟೇ ಸೀಮಿತವಾಗಿದ್ದ ‘ರೂಪತಾರ’ ಪತ್ರಿಕೆಯಲ್ಲಿ ಅನೇಕ ಪ್ರಖ್ಯಾತ ಸಾಹಿತಿಗಳ ಸಾಹಿತ್ಯಕ ವಿಚಾರಗಳನ್ನು ಪ್ರಕಟಿಸಿ ಪತ್ರಿಕೆಗೊಂದು ಸಾಹಿತ್ಯಕ ಮೌಲ್ಯವನ್ನು ತಂದು ಕೊಟ್ಟವರು ಡಾ.ವಿಜಯಮ್ಮನವರು… ಉದಯವಾಣಿ ಪತ್ರಿಕೆಯ ಅಂಕಣ ಬರಹಗಳ ಮೂಲಕ ತಮ್ಮ ಸೃಜನಾತ್ಮಕ ಬರವಣಿಗೆಯಿಂದ ಬಹಳ ಬುದ್ಧಿಜೀವಿಗಳ ಗಮನ ಸೆಳೆದರು. ‘ಅರಗಿಣಿ’ ಚಲನಚಿತ್ರ ಪತ್ರಿಕೆಯ ಸಾಪ್ರಾಹಿಕದ ಗೌರವ ಸಂಪಾದಕಿಯಾಗಿ, ‘ಬೆಳ್ಳಿಚುಕ್ಕಿ’ ವಿಡಿಯೋ ಮ್ಯಾಗಜಿನ್ ಸಮಾಲೋಚಕ ಸಂಪಾದಕಿಯಾಗಿ, ‘ನಕ್ಷತ್ರಲೋಕ’ ಚಲನಚಿತ್ರ ಸಾಪ್ತಾಹಿಕದ ಸಂಪಾದಕಿಯಾಗಿ, ಪ್ರತಿಷ್ಠಿತ ‘ಕರ್ಮವೀರ’ ಪತ್ರಿಕೆಯ ಸಾಪ್ತಾಹಿಕದ ಸಲಹೆಗಾರ್ತಿಯಾಗಿ, ‘ನಮ್ಮಮಾನಸ’ ಮಹಿಳಾ ಪತ್ರಿಕೆಯ ಸಲಹೆಗಾರ್ತಿಯಾಗಿ ‘ಹೊಸತು’ ಮಾಸ ಪತ್ರಿಕೆಯ ಸಲಹಾಮಂಡಲಿಯ ಸದಸ್ಯೆಯಾಗಿ – ಹೀಗೆ ಸುಮಾರು ನಾಲ್ಕು ದಶಕಗಳಿಗೂ ಹೆಚ್ಚು ಕಾಲದಿಂದಲೂ ಪತ್ರಿಕೋದ್ಯಮದಲ್ಲಿದ್ದು ಆಗಾಗ್ಗೆ ಬರೆದ ತಮ್ಮ ವಿಶಿಷ್ಟ ರೀತಿಯ ಬರಹಗಳಿಂದ ಜನಪ್ರಿಯ ಲೇಖಕಿ ಎನಿಸಿದ್ದಾರೆ ಡಾ.ವಿಜಯಮ್ಮ… ೧೯೭೦ರಲ್ಲಿ ಸ್ಥಾಪಕ ಸದಸ್ಯೆಯಾಗಿ ಎ.ಎಸ್.ಮೂರ್ತಿ, ಎ.ಎಲ್. ಶ್ರೀನಿವಾಸಮೂರ್ತಿ ಮುಂತಾದವರುಗಳೊಡನೆ ಸೇರಿ ಸ್ಥಾಪಿಸಿದ್ದು ‘ಪಪೆಟ್ ‌ಲ್ಯಾಂಡ್’ ಹೆಣ್ಣು ಮಕ್ಕಳೇ ಬೊಂಬೆಗಳನ್ನು ತಯಾರಿಸಿಕೊಂಡು, ವಿಶಿಷ್ಟ ರೀತಿಯ ಚಲನಗತಿಯನ್ನು ಕೊಟ್ಟು ಹಲವಾರು ಘಟನೆಗಳಿಗೆ ಹಿನ್ನೆಲೆಯಲ್ಲಿ ಧ್ವನಿಮೂಡಿಸಿ, ನಡೆಸಿಕೊಟ್ಟ ಬೊಂಬೆಯಾಟದ ಪ್ರದರ್ಶನಗಳು ಕರ್ನಾಟಕದಾದ್ಯಂತ ಮನೆ ಮಾತಾಗಿತ್ತು. ಇದಕ್ಕೆ ಅಂದು ಪ್ರಜಾವಾಣಿಯಲ್ಲಿದ್ದ ಟಿ.ಎಸ್.ರಾಮಚಂದ್ರರಾವ್ ರವರು ಆಸಕ್ತಿ ತೋರಿಸಿದ್ದರಿಂದ ರಾಷ್ಟ್ರಾದ್ಯಂತ ಪ್ರಚಾರ ಸಿಕ್ಕಿ ಚಂದ್ರಶೇಖರ ಕಂಬಾರರ ‘ಕಿಟ್ಟಿಕತೆ’, ಗಿರೀಶ್‌ಕಾರ್ನಾಡರ ‘ಮಾನಿಷಾದ’, ಚಂದ್ರಶೇಖರ ಪಾಟೀಲರ ‘ಟಿಂಗರ ಬುಡ್ಡಣ್ಣ’ ಮತ್ತು ಗಿರಡ್ಡಿ ಗೋವಿಂದ ರಾಜರ ‘ಕನಸು’ಗಳನ್ನು ಬೊಂಬೆಯಾಟಕ್ಕೆ ಅಳವಡಿಸಿ ಪಡೆದ ಪ್ರಸಿದ್ಧಿ ಪಡೆದರು… ನಾಟಕ ಗೃಹಗಳಿಗೆ ಸೀಮಿತವಾಗಿದ್ದ ನಾಟಕಗಳನ್ನು ಜನ ಸಾಮಾನ್ಯರ ಬಳಿಗೆ ಕೊಂಡೊಯ್ಯುವಲ್ಲಿ ಕ್ರಾಂತಿಕಾರಕ ಬದಲಾವಣೆ ತಂದು, ‘ಚಿತ್ರ ಗೆಳೆಯರ ಗುಂಪು’ ೧೯೭೩ರಲ್ಲಿ ಪ್ರಾರಂಭಿಸಿದ್ದು ಬೀದಿ ನಾಟಕಗಳ ಪ್ರದರ್ಶನ… ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಮೂಲಭೂತ ಹಕ್ಕುಗಳಿಗೆ ಚ್ಯುತಿ ಬಂದಾಗ ಚಳವಳಿಯ ರೂಪ ಪಡೆದು ಇವರು ರಚಿಸಿದ ತೀಕ್ಷ್ಣ ವಿಡಂಬನೆಯ ನಾಟಕಗಳು ‘ಬಂದರೋ ಬಂದರು’, ‘ಉಳ್ಳವರ ನೆರಳು’, ‘ಕೇಳ್ರಪ್ಪೋ ಕೇಳ್ರೀ…’, ಮುಖವಿಲ್ಲದವರು, ಕುವೆಂಪುರವರ ‘ಧನ್ವಂತರಿ ಚಿಕಿತ್ಸೆ’ (ರೂಪಾಂತರ) ನಾಟಕಗಳು ರಾಜ್ಯಾದ್ಯಂತ ಪ್ರದರ್ಶನಗೊಂಡು ಪುಸ್ತಕರೂಪದಲ್ಲಿಯೂ ಪ್ರಕಟವಾಗಿವೆ… ಇವರ ಮತ್ತೊಂದು ಸಾಹಸದ ಕೆಲಸವೆಂದರೆ ಕಲೆಗಾಗಿಯೇ ಪ್ರಾರಂಭಿಸಿದ ಪತ್ರಿಕೆ. ಕಲೆಯ ಎಲ್ಲ ಕ್ಷೇತ್ರಗಳು, ಇತರ ಶಾಸ್ತ್ರಗಳು ಒಬ್ಬಾಗಿ ಕೆಲಸಮಾಡುವ ಪ್ರಕ್ರಿಯೆಯ ಶೋಧ ಮತ್ತು ಅವುಗಳನ್ನು ಅನುಭವಿಸುವ, ಅರ್ಥೈಸುವ ಮಾರ್ಗಗಳನ್ನು ಕಂಡುಕೊಳ್ಳುವ ಉದ್ದೇಶದಿಂದ ೧೯೯೩ರ ನವಂಬರ್‌ನಲ್ಲಿ ದ್ವೈಮಾಸಿಕವಾಗಿ ಪ್ರಾರಂಭಿಸಿದ ಡಾ.ವಿಜಯಮ್ಮ ‘ಸಂಕುಲ’ ಪತ್ರಿಕೆಯು ಆಯಾಯ ಕ್ಷೇತ್ರದ ವಿದ್ವಾಂಸರುಗಳ ಸಲಹೆ, ಸಹಕಾರಗಳಿಂದ ಹಲವಾರು ಆಕರ ವಿಷಯಗಳ ಸಮೃದ್ಧ ಮಾಹಿತಿಯ ಪ್ರೌಢ ಲೇಖನಗಳಿಂದ ಕೂಡಿದ್ದು, ಕಲೆಗಾಗಿಯೇ ಮೀಸಲಾಗಿದ್ದ ಪತ್ರಿಕೆಯು ಐದು ವರ್ಷಗಳ ನಂತರ ಕಾರಣಾಂತರದಿಂದ ನಿಂತು ಹೋದದ್ದು ಕಲಾಪ್ರಿಯರಿಗಾದ ನಷ್ಟವಾಯಿತು ಆಗ… ಹಲವಾರು ಸಂಘ ಸಂಸ್ಥೆಗಳೊಡನೆ ಒಡನಾಟ ಹೊಂದಿರುವ ವಿಜಯಾರವರು ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ, ಅಧ್ಯಕ್ಷೆಯಾಗಿ; ಕಲಾಮಂದಿರ ಕಲಾ ಶಾಲೆ, ಸುಚಿತ್ರ ಫಿಲಂ ಅಕಾಡಮಿ ಮುಂತಾದವುಗಳ ಉಪಾಧ್ಯಕ್ಷೆಯಾಗಿ, ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಿತಿ, ರಾಷ್ಟ್ರೀಯ ಚಲನಚಿತ್ರ ತೀರ್ಪುಗಾರರ ಮಂಡಲಿ, ಕೇಂದ್ರ ಸಾಹಿತ್ಯ ಅಕಾಡಮಿ ಸಲಹಾ ಮಂಡಳಿ, ಕರ್ನಾಟಕ ಸರಕಾರದ ಪುಟ್ಟಣ ಕಣಗಾಲ್ ಪ್ರಶಸ್ತಿ ಆಯ್ಕೆ ಸಮಿತಿ, ಬೆಂಗಳೂರು ದೂರದರ್ಶನ ಚಲನಚಿತ್ರ ಸೆನ್ಸಾರ್‌ ಸಮಿತಿ, ಕರ್ನಾಟಕ ಲೇಖಕಿಯರ ಸಂಘದ ಅನುಪಮ ಪ್ರಶಸ್ತಿ ಆಯ್ಕೆ ಸಮಿತಿ, ಮೈಸೂರು ವಿಶ್ವವಿದ್ಯಾಲಯದ ಮಹಿಳಾ ವಿಷಯಕ ಅಧ್ಯಯನ ಕೇಂದ್ರ ಸಲಹಾ ಮಂಡಲಿ ಮುಂತಾದ ಸಮಿತಿಗಳ ಸದಸ್ಯೆಯಾಗಿ – ಹೀಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಿತಿಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದರು ಡಾ.ವಿಜಯಮ್ಮನವರು… ಕನ್ನಡ ಪುಸ್ತಕ ಪ್ರಕಾಶನದಲ್ಲಿ ಮುದ್ರಣದ್ದೇ ದೊಡ್ಡ ಸಮಸ್ಯೆಯ ಎನಿಸಿದಾಗ ಸಣ್ಣ ಪ್ರಮಾಣದಲ್ಲಿ ಪ್ರಾರಂಭಿಸಿದ ‘ಇಳಾ’ ಪ್ರಕಾಶನವು ಪ್ರತಿಷ್ಠಿತ ಪ್ರಕಾಶನ ಸಂಸ್ಥೆಯಾಗಿ ರೂಪಗೊಂಡು ಪ್ರಖ್ಯಾತ ಬರಹಗಾರರದಷ್ಟೇ ಅಲ್ಲದೆ ಅನೇಕ ಉದಯೋನ್ಮುಖ ಬರಹಗಾರರನ್ನು ಬೆಳಕಿಗೆ ತಂದರು. ಸುಮಾರು ೨೦೦ಕ್ಕೂ ಹೆಚ್ಚು ಮೌಲಿಕ ಕೃತಿಗಳನ್ನು ಪ್ರಕಟಿಸಿದರು… ಆಗಾಗ್ಗೆ ಪತ್ರಿಕೆಗೆ ಬರೆದ ಲೇಖನಗಳು, ಕಾಲಂ ಬರಹಗಳು ಎಲ್ಲವೂ ಪುಸ್ತಕ ರೂಪದಲ್ಲಿ ಪ್ರಕಟಗೊಂಡಿಲ್ಲದಿದ್ದರೂ ‘ಮಾತಿನಿಂದ ಲೇಖನಿಗೆ’, ‘ಸುದ್ದಿ ಕನ್ನಡಿ’, ‘ನಿಜ ಧ್ಯಾನ’ – ಲೇಖನಗಳ ಸಂಗ್ರಹ; ಸತ್ಯಜಿತ್ ರಾಯ್ ಮತ್ತು ಅ.ನ.ಸುಬ್ಬರಾವ್ – ವ್ಯಕ್ತಿ ಚಿತ್ರಣ; ಶ್ರೀರಂಗ-ರಂಗ-ಸಾಹಿತ್ಯ-ಸಂಪ್ರಬಂಧ; ನೇಮಿಚಂದ್ರ – ಕರ್ನಾಟಕ ಸಾಹಿತ್ಯ ಅಕಾಡಮಿಯಿಂದ – ಹೀಗೆ ಹಲವಾರು ಕೃತಿಗಳ ಪ್ರಕಟಣೆಯ ಜೊತೆಗೆ ಬಹಳಷ್ಟು ಕೃತಿಗಳನ್ನು ಸಂಪಾದಿಸಿದ್ದಾರೆ ಡಾ.ವಿಜಯಮ್ಮ… ಪರ್ವ – ಒಂದು ಸಮೀಕ್ಷೆ, ಇನಾಂದಾರ್‌, ಇಂದಿನ ರಂಗ ಕಲಾವಿದರು, ಕನ್ನಡ ಸಿನಿಮಾ ಸ್ವರ್ಣ ಮಹೋತ್ಸವ, ಮಕ್ಕಳ ಸಿನಿಮಾ, ಕಿರಿಯರ ಕರ್ನಾಟಕ, ಪದ್ಮಾತರಂಗ (ಆಕಾಶವಾಣಿ ಕಲಾವಿದೆ ಎಸ್.ಕೆ. ಪದ್ಮಾದೇವಿಯವರ ಜೀವನ-ವೃತ್ತಿ) ‘ಅಕ್ಕರೆ’ (ವ್ಯಾರಾಯ ಬಲ್ಲಾಳರ ಅಭಿನಂದನ ಗ್ರಂಥ), ಕನ್ನಡ ಚಲನಚಿತ್ರ ಇತಿಹಾಸ, ಸ್ವಾತಂತ್ಯ್ರೋತ್ತರ ಕನ್ನಡ ಸಾಹಿತ್ಯ-ಸಂಸ್ಕೃತಿ, ಬೆಂಗಳೂರು ದರ್ಶನ, ಕರ್ನಾಟಕ ಕಲಾದರ್ಶನ ಮುಂತಾದವು ಪ್ರಮುಖವಾದವುಗಳು… ಹೀಗೆ ಚಲನಚಿತ್ರ, ನಾಟಕ ಸಾಹಿತ್ಯದಲ್ಲಿ ತೊಡಗಿಸಿಕೊಂಡಿರುವ ಇವರಿಗೆ ಸಂದ ಪ್ರಶಸ್ತಿಗಳು ಹಲವಾರು. ಬಂದರೋ ಬಂದರು (ಬೀದಿನಾಟಕ) ನಾಟಕಕ್ಕೆ ರಾಜ್ಯ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಸಂಕುಲ (ಲೇಖನ ಸಂಕಲನ) ಕೃತಿಗೆ ಗೀತಾ ದೇಸಾಯಿ ಪ್ರಶಸ್ತಿ; ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಸಂದೇಶ ಪ್ರಶಸ್ತಿ, ಆರ್‌.ಎನ್.ಆರ್‌. ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡಮಿ ಪ್ರಶಸ್ತಿ, ಲೋಕ ಶಿಕ್ಷಣ ಟ್ರಸ್ಟ್ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡಮಿ ಫೆಲೊಶಿಪ್, ಮಾಸ್ತಿ ಪ್ರಶಸ್ತಿ, ಹಾರ್ನಳ್ಳಿ ಟ್ರಸ್ಟ್ ಪ್ರಶಸ್ತಿ ಮುಂತಾದ ಪ್ರಶಸ್ತಿ ಗೌರವಗಳು ಡಾ.ವಿಜಯಮ್ಮನವರಿಗೆ ದೊರೆತವು… ಈ ಪ್ರಶಸ್ತಿಗಳ ಜೊತೆ ಬಂದ ಹಣವನ್ನು ಅನೇಕ ಸಂಘ ಸಂಸ್ಥೆಗಳಿಗೆ ಕೊಡುಗೆಯಾಗಿ ನೀಡಿದಂತೆ ಹಾರ್ನಳ್ಳಿ ರಾಮಸ್ವಾಮಿ ಟ್ರಸ್ಟ್ ಪ್ರಶಸ್ತಿಯ ಜೊತೆಗೆ ಕೊಡ ಮಾಡಿದ ಒಂದು ಲಕ್ಷ ರೂ. ಹಣವನ್ನು ನಾಲ್ಕು ಜನ ಲೇಖಕರು ತರಲು ಉದ್ದೇಶಿಸಿರುವ ನಾಲ್ಕು ಗ್ರಂಥಗಳ ಪ್ರಕಟಣೆಗೆ ನೆರವು ನೀಡಿರುವುದಲ್ಲದೆ ಮಾಸ್ತಿ ಪ್ರಶಸ್ತಿಯಿಂದ ಬಂದ ೨೫೦೦೦ ರೂಪಾಯಿಗಳನ್ನು ಗಾರ್ಮೆಂಟ್ಸ್ ಟೆಕ್ಸ್‌ಟೈಲ್ ವರ್ಕರ್ಸ್ ಯೂನಿಯನ್‌ಗೆ ನೀಡಿ ಶ್ರಮ ಜೀವಿಗಳ ಹೋರಾಟದ ಬದುಕಿಗೆ ಬೆನ್ನೆಲುಬಾಗಿದರು ಡಾ.ವಿಜಯಮ್ಮನವರು..! ಹೀಗೆಯೇ ತಮ್ಮನ್ನು ತಾವು ಬರಹ, ನಾಟಕ, ಹಲವಾರು ಕೆಲಸಗಳಲ್ಲಿ ತೊಡಗಿಸಿಕೊಂಡರು ಡಾ.ವಿಜಯಮ್ಮ. ಈಗ ಈ ವಿಜಯಮ್ಮನವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ದೊರೆತಿದ್ದು ಸಮಂಜಸವಾಗೇ ಇದೆ..! ‌‌ ————– ಡಾ.ವಿಜಯಮ್ಮ ಬದುಕು-ಬರಹ

ಅಭಿನಂದನೆ Read Post »

ಕಾವ್ಯಯಾನ

ಕಾವ್ಯಯಾನ

ತುಂಬು ಡಾ.ಗೋವಿಂದ ಹೆಗಡೆ ನಾನೂ ರಂಗವೇರಿದ್ದೇನೆ ನಿನ್ನೊಂದಿಗೆ ನರ್ತಿಸಲಲ್ಲ.. ಮೂಲೆಯಲ್ಲಿ ನಿಂತು ಕುಣಿಯುವ ನಿನ್ನ ಬಿಂಬವ ಎದೆ ತುಂಬಿಕೊಳ್ಳಲಿಕ್ಕೆ ಗೆಜ್ಜೆಯಿಂದ ಉದುರುವ ಕಿರುಗಂಟೆಯೊಂದನ್ನೆತ್ತಿ ಚುಂಬಿಸಲಿಕ್ಕೆ ನೆನಪಿನಂಗಳದಲ್ಲಿ ತೂಗಿಬಿಡಲಿಕ್ಕೆ- ಅನಂತದವರೆಗೆ…

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಶಕ್ತಿ ಅವ್ಯಕ್ತ ಸೃಷ್ಟಿ-ಸ್ಥಿತಿ-ಲಯ ಗರ್ಭದ ಮುಕ್ತ ರಹಸ್ಯ ರಾಣಿ ನಾ! ಹರಿವ ಜ್ವಾಲಾ ಶಕ್ತಿಯೊಳು ತಂಪೆರೆವ ವಿಮುಕ್ತಿ ನಾ! ಸಖಿ,ಕಾಮಿನಿ, ಧರ್ಮಿಣಿ, ಸಂಹಾರಿಣಿ, ವೈಷ್ಣವಿ ನಾ! ಸುಳಿಗಳೊಳು ಸಿಲುಕದಂತೆ ಗರಿಚಾಚಿ ಹೊಳೆವೆ ನಾ! ಪ್ರೀತಿಯ ಕಾಮನ ಬಿಲ್ಲಲಿ ಕಣ್ಣುಗಳ್ನಲಂಕರಿಸುವೆ, ಸಿಹಿಕನಸಮಳೆಯ ಮೌನ ಮುಗುಳ್ನಗೆಯೋರಳಿಸುವೆ, ಗಂಭೀರ ಮೂಗುತಿಯನ್ನು ಏರಿಸಿ ಕಾಂತಿಯ್ನ್ಹೆಚ್ಚಿಸುವೆ, ಸುಪ್ತ ಜ್ಞಾನ, ಮುಕ್ತ ಪ್ರೇಮ, ನಿರ್ಲಿಪ್ತ ಮನದ ಕುಂಕುಮ ಧರಿಸುವೆ. ವಜ್ರಕಲ್ಲಾಗಿ, ಗುಪ್ತಗಾಮಿನಿಯಾಗುವೆ ಕೇಸರಿದಾರಿಣಿಯಾಗಿಬಿಡುವೆ, ನೋಡದಿರು ಬಿಲೋಳಗಿನ ಆಳದ ಪ್ರೀತಿಯ, ಸವಿಯಲಿಚ್ಚಿಸದ್ದಿದ್ದರೆ.. ಕೇಳದಿರು ಮೌನ ದೇಗುಲದೊಳಿರುವ ಹಾಡ, ಕನಸಕಿನ್ನರನಲ್ಲದಿದ್ದರೆ.. ಮುಟ್ಟದಿರು ಮೂಗುತಿಯ, ಮುಗ್ಧತೆಗೆ ಒಲಿವ ಹರಿಯಾಗದಿದ್ದರೆ.. ಪ್ರೀತಿ, ಪ್ರೇಮ, ಸ್ನೇಹ, ತಾಳ್ಮೆ, ತ್ಯಾಗ, ಜ್ಞಾನ, ಮೌನ.. ಎರಡಕ್ಷರದ ಆಭರಣಗಳೇ ಇಡೆಯಿಂದ ಮುಡಿಗೆ.. ನಗ್ನ ನೋಟಕೆ ಎನ್ನಯ ಶಕ್ತಿಕಾಂತಿಯ ಮೂಲವಾಗಿರಲಿ

ಕಾವ್ಯಯಾನ Read Post »

ಅಂಕಣ ಸಂಗಾತಿ

ಹೊತ್ತಾರೆ

ಅಮ್ಮನೂರಿನ ನೆನಪುಗಳು. ಅಮೇರಿಕಾದಿಂದ ಅಶ್ವಥ್ ಅಶ್ವಥ್ ಮೊದಲೇ ಹೇಳಿದಂತೆ, ರಂಗ ತಿಮ್ಮರ ಸಂತೆ ಪ್ರಯಾಣ ನಿಯಮಿತವಾಗಿರುತ್ತಿತ್ತು. ಮೂಟೆಯಲ್ಲಿ ಇರುವ ಪದಾರ್ಥದ ಆಧಾರದ ಮೇಲೆ ನಾಲ್ಕೈದು  ಮಂಡಿಗಳಿಗೆ ಗಾಡಿ ಸಾಗಬೇಕಾಗಿತ್ತು. ಅವುಗಳಲ್ಲಿ ಭತ್ತ, ರಾಗಿ, ತೆಂಗುಗಳದ್ದು ಒಂದೇ ಮಂಡಿ. ಅದು ರಂಗ ತಿಮ್ಮರ ಮೊದಲ ನಿಲ್ದಾಣ, ಆಮೇಲೆ ಬೆಲ್ಲದ ಮಂಡಿ, ನಂತರ ಅಪರೂಪಕ್ಕೊಮ್ಮೆ ಅಡಿಕೆ ಮಂಡಿ. ಇವಿಷ್ಟೂ ರೌಂಡ್ಸ್ ಆದ ಮೇಲೆ ಮನೆಯಿಂದ ತಂದಿರುತ್ತಿದ್ದ ಹುಲ್ಲು ತಿನ್ನುವುದು.  ಗಾಡಿಯ ಕೆಳಭಾಗದಲ್ಲಿ ನೇತುಹಾಕಿರುತ್ತಿದ್ದ ಬಕೆಟ್  ತೆಗೆದು ಸಂತೇಮಾಳದ ಕೈಪಂಪಿನಿಂದ ಹಿಡಿದ (ಕಡೆಗೆ ನಲ್ಲಿಯೂ ಬಂದಿತ್ತೋ ಏನೋ) ನೀರು.  ಇನ್ನು ಮನೆಕಡೆ ಹೊರಡುವುದಕ್ಕಿಂತ ಮೊದಲು ದಿನಸಿ ಅಂಗಡಿಯಲ್ಲಿ ಒಂದು ನಿಲುಗಡೆ, ಕಡಲೇಪುರಿ, ಖರ್ಜೂರ ಸಿಹಿತಿಂಡಿಗಳ ಅಂಗಡಿಯ ಬಳಿ ಮತ್ತೊಂದು ನಿಲುಗಡೆ. ಈ ನಿಲುಗಡೆಗಳೆಲ್ಲ ಕಡ್ಡಾಯವಾಗಿರುವಂತಹವು, ಒಮ್ಮೊಮ್ಮೆ ನಿಲ್ಲಿಸಬೇಕಾದ ಅಗತ್ಯವಿಲ್ಲದಿದ್ದರೂ, ರಂಗ ತಿಮ್ಮರ ಅಭ್ಯಾಸಬಲ ಎಷ್ಟಿತ್ತು ಅಂದರೆ, ಗೌಡಜ್ಜಿಯ ಗಾಡಿ ಅಂಗಡಿ ಮುಂದೆ ನಿಲ್ಲದೇ ಹೋಗುವುದಿಲ್ಲ ಎಂದು ದಿನಸಿ ಅಂಗಡಿಯ ಶೆಟ್ಟರು ಖಡಾಖಂಡಿತವಾಗಿ ಹೇಳುವಷ್ಟು. ಪೇಟೆಯೊಳಗೆ ಮತ್ತು ಸಂತೆಮಾಳದಲ್ಲಿ ಬಸ್ಸು, ಕಾರು ಲಾರಿಗಳ ಮಧ್ಯೆ ಸಂತೆಯ ಜನಜಂಗುಳಿಯಲ್ಲೂ ಸಹ ಯಾರ ಮೇಲ್ವಿಚಾರಣೆಯೂ ಇಲ್ಲದೆ, ಯಾರಿಗೂ ಅಡ್ಡಿಯಾಗದಂತೆ ತಮ್ಮ ಜಾಡನ್ನೇ ಹಿಡಿದು ಸಾಗುವುದು ಅದೆಷ್ಟೋ ಜನರ ಕಣ್ಣಿಗೆ ಆಶ್ಚರ್ಯವೇ ಸರಿ. ಸಂತೆಮಾಳ ಬಿಟ್ಟ ತಕ್ಷಣ, ಮಾವಂದಿರು ಗಾಡಿಯಿಂದ ಇಳಿದು, ರಂಗ ತಿಮ್ಮರನ್ನು ತಮ್ಮ ಪಾಡಿಗೆ ಬಿಟ್ಟು ಊರಿನ ಜನರ ಜೊತೆ ಮಾತನಾಡುತ್ತಾ ಬೇರೆ ಗಾಡಿಗಳಲ್ಲಿ ಬರುತ್ತಿದ್ದರು. ದಿನವೂ ನಾಲ್ಕೂವರೆಗಂಟೆಗೆ ಶಾಲೆ ಮುಗಿದರೂ, ಕತ್ತಲಾಗುವ ತನಕ ಗೆಳೆಯರೊಂದಿಗೆ ಆಡಿಕೊಂಡು ಮನೆ ಸೇರುತ್ತಿದ್ದ ನಾನು, ಮಂಗಳವಾರ ಸಂಜೆ ಆಟದ ನೆನಪೂ ಮಾಡಿಕೊಳ್ಳದೆ ನಮ್ಮನೆಯ ಜಗುಲಿಯ ಮೇಲೆ ಹಾಜರಿರುತ್ತಿದ್ದೆ. ನನ್ನ ಈ ಹಾಜರಿಗೆ ಕಡಲೆಪುರಿ, ಖರ್ಜೂರ, ಸಕ್ಕರೆಅಚ್ಚು, ಬೆಣ್ಣೆಬಿಸ್ಕತ್ತುಗಳು, ಬಾಳೆಹಣ್ಣು ಇರುವ ಚೀಲ ಮುಖ್ಯ ಕಾರಣವಾಗಿದ್ದರೂ, ರಂಗ ತಿಮ್ಮರು ಹದಿನೈದು ಕಿಲೋಮೀಟರು ದೂರದ ಪೇಟೆಯ ಸಂತೆಗೆ ಮಸುಕಿನಲ್ಲಿ ಗಾಡಿಯ ಹೊರೆ ಎಳೆದು ಹೋಗಿ ಮತ್ತೆ ಗೋಧೂಳಿಯ ಹೊತ್ತಿಗೆ ಗಾಡಿಯನ್ನು ಮನೆ ಬಾಗಿಲು ಮುಂದೆ ತಂದು ನಿಲ್ಲಿಸಿ ಬಾಲ ಅಲ್ಲಾಡಿಸುವ ಅವುಗಳ ಹುರುಪು ನೋಡುವುದೇ ಒಂದು ಖುಷಿ. ಸಂತೆಗೆ ಗಾಡಿ ಹೋಗದಿದ್ದ ವಾರವೂ ಸಹ ನಾನು ರಂಗ ತಿಮ್ಮರ ಬರುವಿಕೆಗಾಗಿ ಕಾದಿದ್ದಿದೆ… ರಂಗತಿಮ್ಮರು ಪೇಟೆಯ ರಸ್ತೆಯಿಂದ ಬರದೇ, ಹಿತ್ತಿಲಿನಿಂದ ತಾತ ಹಿಡಿದುಕೊಂಡು ಬರುತ್ತಿದ್ದರೆ, ಗಾಡಿ ನಿಲ್ಲಿಸುತ್ತಿದ್ದ ಮಾಡಿನ ಹತ್ತಿರ ಹೋಗಿ ನೋಡುತ್ತಿದ್ದೆ. ಓಹ್! ಇವತ್ತು ಸಂತೆಗೆ ರಜಾ ಅಂತ ಬೇಸರವಾಗುತ್ತಿತ್ತು. ರಂಗ ತಿಮ್ಮ ಇಬ್ಬರೂ ನಮ್ಮ ಮನೆಯವರ, ಅದರಲ್ಲೂ ತಾತನ ಧ್ವನಿಯನ್ನು ಸಂತೆಯ ಗದ್ದಲದ ಒಳಗೂ ಗುರುತಿಸುತ್ತಿದ್ದವು.  ಇನ್ನು ನಾನು ಹುಟ್ಟಿಬೆಳೆದ ಮನೆಯನ್ನು ನಾನು ಹುಟ್ಟುವುದಕ್ಕಿಂತ ಒಂದೆರಡು ವರ್ಷಗಳ ಮೊದಲು ಕಟ್ಟಿದ್ದು.  ಆ ಮನೆಕಟ್ಟಲು ಮಣ್ಣು ಹೊತ್ತಿದ್ದು, ನೀರು ಹೇರಿ ತಂದಿದ್ದು,  ಮರಮಟ್ಟು ಸಾಗಿಸಿದ್ದು, ಪೇಟೆಯಿಂದ ಹೆಂಚು ಸಾಗಿಸಿದ್ದು ಈ ರಂಗ ತಿಮ್ಮರೇ. ಮಂಗಳೂರು ಹೆಂಚಿನ ನನ್ನ ತಾತನ ಹೊಸಮನೆಯ ಗೋಡೆ ಹೆಂಚುಗಳಿಗೆ ರಂಗ ತಿಮ್ಮರ ದುಡಿಮೆ ಸದಾ ಅಂಟಿಕೊಂಡಿದೆ. ನಾನು ರಂಗ ತಿಮ್ಮರನ್ನು ನೋಡಿದ ಅಷ್ಟೂ ದಿನಗಳಲ್ಲಿ ಕೆಲಸ ಮಾಡಿ ಅವುಗಳು ಬಳಲಿರುವ ದಿನಗಳೇ ಇರಲಿಲ್ಲ. ದುಡಿಮೆ ಅಂದರೆ ಅವುಗಳಿಗೆ ಉಸಿರಾಡುವಷ್ಟು, ಮೇವುತಿನ್ನುವಷ್ಟು ಸಲೀಸು. ಮುಂಗಾರಿನ ಬಿರುಸಾದ ಅಡ್ಡಮಳೆಯಿಂದ ಹಿಡಿದು ಭಾದ್ರಪದದ ಸೋನೆಮಳೆಯೂ ರಂಗ ತಿಮ್ಮರನ್ನು ನೆನೆಯಿಸುತ್ತಿರಲಿಲ್ಲ. ಬೇಸಿಗೆಯ ಜಳಜಳ ಬಿಸಿಲು ಅವುಗಳನ್ನು ಎಂದೂ ಒಣಗಿಸಿರಲಿಲ್ಲ. ಹತ್ತಾರು ಎಕರೆ ಹೊಲ, ಗದ್ದೆ ತೋಟಗಳನ್ನು ಉಳುಮೆ ಮಾಡಿ ಹದಗೊಳಿಸಿದವು ಅವು. ಅವುಗಳ ಹುರುಪಿನ ದುಡಿಮೆಗೆ ತಕ್ಕಂತೆ ಬಂದ ಫಸಲನ್ನು ಅಷ್ಟೇ ಶ್ರಮದಿಂದ ಕಣಕ್ಕೆ ಸಾಗಿಸುತ್ತಿದ್ದವು. ಅದೇ ಪಸಲನ್ನು ವಾರಕ್ಕೊಮ್ಮೆ ಸರದಿಯಲ್ಲಿ ಪೇಟೆಗೆ ಹೊತ್ತು, ಸಂತೆಯನ್ನೂ ಸುತ್ತಿ ಮನೆಗೆ ಉಪ್ಪು, ಎಣ್ಣೆಯಾದಿಯಾಗಿ ದಿನಸಿಯನ್ನು ಸಾಗಿಸುತ್ತಿದ್ದವು. ನನ್ನ ಇಡೀ ಬಾಲ್ಯ ಅವುಗಳ ಮುಂದೆ ಕಳೆಯಿತು… ಅವುಗಳು ಬೆಳೆಯುತ್ತಿದ್ದ ಕರುಗಳಾಗಿದ್ದಾಗಿನ ದಿನಗಳ ತುಂಟಾಟದ ಸಂದರ್ಭಗಳನ್ನೂ ತಾತ, ಅಕ್ಕಪಕ್ಕದ ಮನೆಯವರು, ಮತ್ತು ಊರಿನವರೂ ಹೇಳುತ್ತಿರುತ್ತಿದ್ದರು. ರಂಗ ಹುಟ್ಟಿದಾಗಿನಿಂದ ಕಡೆಯವರೆಗೂ ಮನೆಯವನಂತೆಯೇ ಆಗಿತ್ತು. ತಿಮ್ಮ ಬೇರೆಮನೆಯಲ್ಲಿ ಹುಟ್ಟಿ ನಂತರ ರಂಗನ ಜೊತೆಯಾದರೂ ರಂಗನಷ್ಟೇ ಮನೆಯ ಸ್ವಂತದವನಂತೆ ಇತ್ತು. ಅವುಗಳ ಆಯಸ್ಸೇ ಕಡಿಮೆ… ಇಪ್ಪತ್ತು ವರ್ಷ. ಅವು ಇದ್ದ ಅಷ್ಟೂ ದಿನಗಳಲ್ಲಿ ಅವುಗಳಿಗೆ ಬದುಕಲು ಬೇಕಾಗಿದ್ದು, ಮುಂಗಾರಿನಲ್ಲಿ ಹೊಲದ ಬದುವಿನ ಹಸಿರು ಹುಲ್ಲು, ಬೇಸಿಗೆಯಲ್ಲಿ ಬಣವೆಯಲ್ಲಿನ ಒಣಹುಲ್ಲು ಜೊತೆಗೆ ದಿನದ ಮೂರು ಹೊತ್ತು ಕೆರೆಯ ನೀರು ಅಥವಾ ಕಲಗಚ್ಚು. ಗದ್ದೆನಾಟಿಯ ಸಮಯದಲ್ಲಿ ಕಡಲೆಹಿಂಡಿ, ಬೇಯಿಸಿದ ಹುರುಳಿ. ಅದೇ ಅವುಗಳಿಗೆ ಮೃಷ್ಟಾನ್ನ. ನಾನು ಬೆಳೆಯುತ್ತಿರುವಂತೇ ರಂಗ ತಿಮ್ಮರಿಗೆ ಮುದಿತನ ಆವರಿಸುತ್ತಿತ್ತು. ಇನ್ನು ಇವುಗಳಿಂದ ಕೆಲಸ ಆಗುವುದಿಲ್ಲ ಮಾರಿಬಿಡುವುದು ಒಳ್ಳೆಯದು ಎಂದು ಕೆಲವರ ಅಭಿಪ್ರಾಯ… ಅಷ್ಟು ಸಾಲದು ಅಂತ ತಿಮ್ಮ ಮನೆಯಲ್ಲೇ ಒಬ್ಬರ ಕೆಂಗಣ್ಣಿಗೆ ಗುರಿಯಾದ. ಅದೇನು ಕೇಳಿಸಿತೋ, ಯಾವುದಕ್ಕೆ ಗಾಬರಿಯೋ, ಬದುವಿನಲ್ಲಿ ಮೇಯುವಾಗ, ಇದ್ದಕ್ಕಿದ್ದಂತೆ ಹರಿಹಾಯ್ದಿತೆನ್ನುವ ಒಂದು ಕಾರಣ. ತಿಮ್ಮನಿಗೆ ವಯಸ್ಸಾಗುತ್ತಿದ್ದರೂ ತನ್ನ ಸ್ವಭಾವ ಬದಲಾಗಿರಲಿಲ್ಲ.  ಆದರೂ ಮಾರಲು ಒಂದೋ ಅಥವಾ ಎರಡೋ ಪ್ರಯತ್ನ ನಡೆಸಿದ ತಾತ ಮಾರಲು ಮನಸ್ಸು ಮಾಡದೇ ಸೋತು ಸುಮ್ಮನಿದ್ದರು. ಅವತ್ತೊಂದು ದಿನ, ಅದು ಯಾವ ದಿನ ಎನ್ನುವುದು ನೆನಪಿಲ್ಲ.  ರಂಗನಿಗೆ ಒಂದೆರಡು ದಿನದಿಂದ ಹುಷಾರಿರಲಿಲ್ಲ.  ವಯಸ್ಸಾಗಿದೆಯಲ್ಲ, ಅದಕ್ಕೇ ಹಾಗಾಗಿದೆ,  ಸರಿಹೋಗುತ್ತೆ ಅಂತಲೋ ಏನೋ, ಮದ್ದು ಏನೂ ಕೊಟ್ಟಿರಲಿಲ್ಲ. ಎಂದಿನಂತೆ ಕೊಟ್ಟಿಗೆಯಿಂದ ಮನೆ ಮುಂಭಾಗಕ್ಕೆ ತಂದು ಬಳಪದ ಕಲ್ಲಿಗೆ ಕಟ್ಟಿದ್ದರು. ನಾನು ಶಾಲೆಗೆ ಹೊರಡುವಾಗ ರಂಗ ಮಲಗಿದ್ದಂತೆ ನೆನಪು. ಮಧ್ಯಾಹ್ನ ಊಟಕ್ಕೆ ಮನೆಗೆ ಬರಬೇಕಾಗಿದ್ದರೂ, ನಾನು ಅಪರೂಪಕ್ಕೆ ಮನೆಗೆ ಮಧ್ಯಾಹ್ನದ ಊಟಕ್ಕೆ ಬರುತ್ತಿದ್ದುದು. ಮಿಕ್ಕಂತೆಲ್ಲಾ ಬೆಳಿಗ್ಗೆ ರೊಟ್ಟಿ ತಿನ್ನುವಾಗಲೇ ಒಂದಿಷ್ಟು ಮಿಕ್ಕಿಸಿ ಪುಸ್ತಕದ ಮಧ್ಯೆ ಇಟ್ಟು ಓಡುತ್ತಿದ್ದೆ. ಊಟದ ಬಿಡುವಿನಲ್ಲಿ ಕಳ್ಳಾ-ಪೊಲೀಸು, ಲಗೋರಿ, ಗದ್ದೆಕೊಯ್ಲಿನ ಸಮಯವಾದರೆ ಶಾಲೆಯ ಪಕ್ಕದ ಕಣಗಳಲ್ಲಿ ಇರುತ್ತಿದ್ದ ಬಣವೆಗಳ ನಡುವೆ ಕಣ್ಣಾಮುಚ್ಚಾಲೆ ಹೀಗೆ ತರಹೇವಾರಿ ಆಟಗಳು. ಮಧ್ಯಾಹ್ನದ ಶಾಲೆ ಮುಗಿದು ನಾಲ್ಕೂವರೆ ನಂತರದಿಂದ ಕತ್ತಲಾಗುವ ತನಕ ಮತ್ತೆ ಆಟ. ಅವತ್ತೂ ಹಾಗೇ ಮಾಡಿದ್ದೆ. ಶಾಲೆ ಬಿಟ್ಟ ನಂತರ ಮಾಮೂಲಿನಂತೆ ನನ್ನ ಆಟ…  ಆಮೇಲೆ ಮನೆಗೆ ಬಂದೆ. ಕತ್ತಲಾಗಿತ್ತು. ಮನೆಯವರೆಲ್ಲರೂ ಒಂದು ರೀತಿ ಮೌನವಾಗಿದ್ದರು… ಎಂದಿನ ಲವಲವಿಕೆಯಿಲ್ಲ. ಅಮ್ಮ (ಅಜ್ಜಿ) ಊಟ ಮಾಡಲು ಕೂರದೇ ಏನೋ ಗೊಣಗುತ್ತಿದ್ದರಿಂದ, ಈ ಬಣಗುಡುವ ರಾತ್ರಿಗೆ ಕಾರಣವೇನಿರಬಹುದು ಅಂತ ಅಮ್ಮನನ್ನೇ ದಿಟ್ಟಿಸಿದೆ. “ಅಷ್ಟೊರ್ಷ  ಕಲ್ಲುಬಂಡೆಯಂಗಿದ್ದ ಎತ್ತಿಗೆ ಮೂರೇ ದಿನಕ್ಕೆ ಹಿಂಗಾಯ್ತಲ್ಲ. ಏನೋ, ಅತ್ಲಾಗಿ ಕೊರಗದಂತೆ ಜೀವ ಹೋಯ್ತು” ಅಂದರು.  ಆಗ ಅಡುಗೆಮನೆಯಿಂದ ಕೊಟ್ಟಿಗೆಗೆ ಒಂದು ಸಣ್ಣ ಕಿಟಕಿಯಿತ್ತು.  ನಾನಿನ್ನೂ ಅದನ್ನು ಇಣುಕುವಷ್ಟು ಎತ್ತರ ಬೆಳೆದಿರಲಿಲ್ಲ. ಅಲ್ಲೇ ಇದ್ದ ಸ್ಟೂಲ್ ಎಳೆದು ಅಂತೂ ಇಣುಕಿಯೇಬಿಟ್ಟೆ.  ತಿಮ್ಮ ಒಂದೇ ನಿಂತಿತ್ತು.  ಅದುವರೆಗೆ ಹುಷಾರಿಲ್ಲದಿದ್ದರೂ ಸಹ ಕೊಟ್ಟಿಗೆಯಲ್ಲೇ ಪಕ್ಕದಲ್ಲಿರುತ್ತಿದ್ದ ರಂಗ ಇರಲಿಲ್ಲ. ಜಾಗ ಅಗಲವಾಗಿದ್ದರಿಂದ ತಿಮ್ಮ ಹಿಂದಿನ ಕಾಲನ್ನು ಅತ್ತಿಂದಿತ್ತ ಅಡ್ಡ ಎಸೆಯುತ್ತಾ, ತೆರವು ಮಾಡಿದ್ದ ರಂಗನ ಜಾಗವನ್ನು ಕಾಯ್ದಿರಿಸುವವನಂತೆ ಕಾಣುತ್ತಿತ್ತು. ಮನೆಯವರ ಮೌನದೊಳಗೆ ನಾನೂ ಮುಳುಗಿಹೋದೆ. ನೆಪಕ್ಕೆ ಅನ್ನುವಂತೆ ಊಟಮಾಡಿ ದೀಪ ಆರಿಸಿದೆವು. ಬೆಳಗಾಗುತ್ತಲೇ ಹೊರಗೆ ಹೋಗಿ ಗಮನಿಸಿದೆ.  ಹಿಂದಿನ ದಿನ ರಂಗನನ್ನು ಕಟ್ಟಿದ್ದ ಬಳಪದಕಲ್ಲಿನ ಪಕ್ಕ ಒಂದಿಷ್ಟು ಕುಂಕುಮ, ಕೆಲವು ಅಗರಬತ್ತಿ ತುಂಡುಗಳು, ಹಿತ್ತಲಿನ ಹೂವಿನ ಗಿಡದ ಒಂದಿಷ್ಟು ಬಾಡಿದ ಹೂವುಗಳು. ಇದಾದ ಒಂದು ವಾರದಷ್ಟು ಸಮಯದಲ್ಲಿ ತಿಮ್ಮನ ಒಂಟಿತನ ತಾತನ ಗಮನಕ್ಕೆ ಬಂತು. ನೋಡಕಾಗಲ್ಲ ಮಾರಿಬಿಡು ಅತ್ಲಾಗಿ ಅಂತ ಬೇಸರದಿಂದಲೇ ಹೇಳಿ ಸಂತೆಗೆ ಒಂಟಿತಿಮ್ಮನನ್ನು ಹೊರೆಯನ್ನೇನೂ ಹೊರಿಸದೇ ಕರೆದೊಯ್ದಿದ್ದರು. ಈಗ ಅವುಗಳು ಇಲ್ಲವಾಗಿ ಇಪ್ಪತ್ತು ವರ್ಷಗಳೇ ಕಳೆದಿವೆ. ಇದರ ನಡುವೆ ಜೀವನಚಕ್ರ ಎಷ್ಟೋ ದೂರ ಉರುಳಿದೆ. ತಾತನ ಮನೆಯಲ್ಲಿ ನಾನೇ ಮೊದಲ ಮೊಮ್ಮಗ.  ಅದು ಅಕ್ಕನ(ತಾಯಿ) ತವರಾಗಿದ್ದರೂ, ನಾನು ಅಪ್ಪನ ಮನೆಯನ್ನು ಅಪ್ಪನ ಮನೆ ಎಂದಷ್ಟೇ ನೆನಪಿಸಿಕೊಳ್ಳುವೆನೇ ವಿನಃ, ಬಾಲ್ಯದ ನನ್ನ ಮನೆ ಅಂದರೆ ಈ ರಂಗ ತಿಮ್ಮರ  ಹೆಜ್ಜೆಯ, ಕೊರಳಿನ ಗೆಜ್ಜೆಯ ಸದ್ದು ಇದ್ದ ಮನೆಯೇ. ಅಲ್ಲಿ ಇದ್ದಷ್ಟೂ ದಿನ ಜೀವನದ ಬಿಸಿಲೇ ತಾಕಿರಲಿಲ್ಲ. ರಂಗ ತಿಮ್ಮರಿರುವ ಅಷ್ಟೂ ದಿನ ಮನೆಯಲ್ಲಿ ಸಮೃದ್ಧಿಯಿತ್ತು. ಹೊಸ ಮನೆಯೂ ಆಗಿತ್ತು. ಸುತ್ತಲವರು ಮೆಚ್ಚುವಷ್ಟು ಬೆಳೆಯೂ ಬರುತ್ತಿತ್ತು. ಮನೆಗೆ ಹೋಗಿಬರುವವರು, ನೆಂಟರಿಷ್ಟರು ಅದೆಷ್ಟೋ. ಹಬ್ಬದ ದಿನಗಳು ನಿಜವಾಗಿಯೂ ವಿಶೇಷವಾಗಿರುತ್ತಿದ್ದವು. ಇದೆಲ್ಲದರ ಹಿಂದೆ ಮನೆಯ ಸದಸ್ಯರ ಶ್ರಮ ಇದ್ದರೂ, ಅದಕ್ಕೆ ರಂಗ ತಿಮ್ಮನ ಪಾತ್ರವನ್ನು ಅಳೆಯುವುದಕ್ಕೆ ಸೇರು ಬಳ್ಳಗಳಿಂದಾಗಲಿ, ಮಾರು ಮೊಳಗಳಿಂದಾಗಲಿ, ಮೀಟರು ಕಡ್ಡಿಗಳಿಂದಾಗಲೀ ಸಾಧ್ಯವಿರಲಿಲ್ಲ.  ರಂಗ ತಿಮ್ಮರ ಕತೆ ಹದಿನೈದು-ಹದಿನೆಂಟು ವರ್ಷಗಳಲ್ಲಿ ನಡೆದ ಒಂದು ಮಿನಿ ಮಹಾಭಾರತವೇ ಹೌದು! ರಂಗ ತಿಮ್ಮರಿದ್ದ ಆ ನನ್ನ ಮನೆ ಸಣ್ಣದೊಂದು ನಂದನವನದಂತೆ ಇತ್ತು. ಡಿವಿಜಿ ತಮ್ಮ ಮಂಕುತಿಮ್ಮನ ಕಗ್ಗದಲ್ಲಿ ಹೇಳಿದಾರಲ್ಲ, ‘ಬೆಳಕೀವ ಸೂರ್ಯಚಂದ್ರರದೊಂದೂ ಸದ್ದಿಲ್ಲ’ ಎನ್ನುವಂತೆ  ರಂಗ ತಿಮ್ಮ ಇಬ್ಬರೂ ತಮ್ಮ ಸ್ನಾಯುಶಕ್ತಿಯ ಶ್ರಮದಿಂದಲೇ ಮನೆಗೆ ಬೆಳಕನಿತ್ತು, ಸದ್ದಿಲ್ಲದೇ ಸರಿದುಹೋದರು. ಈಗ ಇವುಗಳ ನೆನಪು ಬಾಯಾರಿದ ಗಂಟಲಿಗೆ ಸಿಹಿನೀರಿದ್ದಂತೆ! ನಾನು ಕಲಾವಿದನಾಗಿದ್ದರೆ, ಮೊನ್ನೆಯ ಕನಸಿನಲ್ಲಿ ದುರುಗುಟ್ಟು ನೋಡುತ್ತಿದ್ದ ತಿಮ್ಮನ ಆ ಕಣ್ಣುಗಳನ್ನು ಅಚ್ಚುಒತ್ತಿದ ಹಾಗೆ ಬಿಡಿಸಿರುತ್ತಿದ್ದೆ! ******

ಹೊತ್ತಾರೆ Read Post »

ಅಂಕಣ ಸಂಗಾತಿ

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು ಡಾ.ಸಣ್ಣರಾಮ ಹಿಂದಿನ ಸಂಚಿಕೆಯಿಂದ——— ಇಂದಿನ ಆಧುನಿಕ ಮಹಿಳಾವಾದಿಗಳು ಹೆಣ್ಣು ತನ್ನ ದೇಹ ಮತ್ತು ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಿದರೆ ಪುರುಷ ದೌರ್ಜನ್ಯದಿಂದ ಪೂರ್ಣ ವಿಮುಕ್ತಿ ಪಡೆಯಬಹುದು ಎಂದು ಹೇಳುತ್ತಾರೆ. ಈ ತತ್ವವನ್ನು 12ನೇ ಶತಮಾನದಷ್ಟು ಹಿಂದೆ ಅಕ್ಕ ಹೇಳಿದ್ದಾಳೆ ಎಂಬುವುದನ್ನು ಮಹಿಳಾವಾದಿಗಳು ಗಮನಿಸಬೇಕು. ಅಕ್ಕನ ಬದುಕೆ ಇಂದಿನ ಮಹಿಳಾವಾದಕ್ಕೆ ಮೂಲ ಪ್ರೇರಣೆಯಾಗಬಲ್ಲದು. ಕದಳಿ ಎಂಬುದು ವಿಷಂಗಳು ಕದಳಿ ಎಂಬುದು ಭವ ಘೋರಾರಣ್ಯ ಈ ಕದಳಿ ಎಂಬುದು ಗೆದ್ದು ತಾವೆ ಬದುಕಿ ಬಂದು ಕದಳಿ ಬನದಲ್ಲಿ ಭವಹರನ ಕಂಡೆನು ಭವಗೆದ್ದು ಬಂದ ಮಗಳೆ ಎಂದು ಕರುಣದಿ ತೆಗೆದು ಬಿಗಿದಪ್ಪಿದಡೆ ಚನ್ನಮಲ್ಲಿಕಾರ್ಜುನನ ಹೃದಯ ಕಮಲದಲ್ಲಿ ಅಡಗಿದೆನು- ಈ ವಚನ ಅಕ್ಕನ ಪ್ರೌಢಮೆಗೆ, ಪ್ರಬುದ್ಧ ಚಿಂತನೆಗೆ ಹಿಡಿದ ಕೈಗನ್ನಡಿಯಾಗಿದೆ. ಕೆದಕಿದಷ್ಟು ಅರ್ಥವನ್ನು ಹಿಡಿ ಹಿಡಿಯಾಗಿ ಸಹೃದಯರಿಗೆ ಉಣಬಡಿಸುತ್ತದೆ. “ಕದಳಿ” ಎಂಬ ಪದವನ್ನು ಎಷ್ಟು ಅರ್ಥದಲ್ಲಿ ಬಳಸಿದ್ದಾಳೆಂಬುದು ಗ್ರಹಿಕೆಗೆ ಸಿಕ್ಕರೆ ಭಾಷಾ ಪಂಡಿತರು ಬೆಕ್ಕಸ ಬೆರಗಾಗುತ್ತಾರೆ. ತನು, ಮನ, ಸಂಸಾರ, ಲೌಕಿಕ ಬದುಕು ಮೃದುಭಾವ ಮೊದಲಾದ ಅರ್ಥದಲ್ಲಿ ಕದಳಿ ಎಂಬ ಪದ ಬಳಕೆಯಾಗಿದೆ. ಈ ಸಂಸಾರವೆಂಬ ಘೋರ ಅರಣ್ಯವನ್ನು ಜಯಿಸಲು “ಕದಳಿ” ತನುಬೇಕು. ತನುವಿಲ್ಲದೆ ಪೂರ್ಣ ತತ್ವ ಲಭಿಸುವುದಿಲ್ಲ. ಕದಳಿ ತನುವಿನಿಂದ ಪೂರ್ಣ ತತ್ವವನ್ನು ಇಹದಲ್ಲಿ ಸಾಧಿಸಿದವರು ಪರದಲ್ಲಿ ಪೂರ್ಣವನ್ನು ಪಡೆಯುತ್ತಾರೆ. ಪೂರ್ಣದಲ್ಲಿ ಪೂರ್ಣವು ಸೇರಿದರೆ ಉಳಿಯುವುದು ಬಯಲು. ಈ ಬಗೆಯ ಅದ್ಭುತ ತತ್ವವನ್ನು ಸರಳ ಪದಗಳಲ್ಲಿ ನಿರ್ವಚಿಸಿರುವ ರೀತಿ ಅಪೂರ್ವವಾದುದು. ಪ್ರಾಚೀನ ಕಾಲದಲ್ಲಿಯೂ ಭಾರತದಲ್ಲಿ ಮಹಿಳೆಯರು ಪುರುಷರಷ್ಟೇ ಸಮಾನ ಮಾನ್ಯತೆಯನ್ನು ಪಡೆದಿದ್ದರೆಂಬುದಕ್ಕೆ ನಿಕತ್ತಾ, ಸಾಸ್ವತಿ, ಮೈತ್ರೇಯಿ, ಗಾರ್ಗಿ, ಅಪಲಾ, ಯಯಾಂತ ಇವರು ನಿದರ್ಶನರಾಗಿದ್ದಾರೆ. ಶರಣೆ ಅಕ್ಕಮಹಾದೇವಿ ಕನ್ನಡದ ಮೊದಲ ಮಹಿಳಾವಾದಿಯಂತೆ ಮೊದಲ ಕವಿಯಿತ್ರಿಯೂ ಹೌದು. ಹತ್ತನೆ ಶತಮಾನದಲ್ಲಿ ಕೆಲವು ಸಾಲುಗಳ ಬರವಣಿಗೆ ಇದೆ ಎಂದು ಹೇಳಲಾಗುತ್ತಿರುವ “ಕಂತಿ” ಎಂಬುವಳನ್ನು ಹೊರತು ಪಡಿಸಿದರೆ 354 ವಚನಗಳನ್ನು “ಯೋಗಾಂಗ ತ್ರಿವಿಧಿ”, “ಸೃಷ್ಟಿಯ ವಚನ”, “ಮಂತ್ರ ಗೋಪ್ಯ” ಎಂಬ ಕೃತಿಗಳನ್ನು ರಚಿಸಿದ ಮಹಾದೇವಿ ಅಕ್ಕ ಬರೆದಿದ್ದಾಳೆ. ಅಕ್ಕನ ವಚನಗಳಲ್ಲಿ ತತ್ವವಿದೆ, ಸತ್ವವಿದೆ, ವೇದನೆಯಿದೆ. ಕನ್ನಡ ಸಾರಸ್ವತ ಲೋಕಕ್ಕೆ ಅಕ್ಕನ ಕೊಡುಗೆ ಶ್ಲಾಘನೀಯ. ಅಕ್ಕಮಹಾದೇವಿಯ ವಚನದ ಮಹೋನ್ನತಿಯನ್ನು ಕುರಿತಂತೆ ಚನ್ನಬಸವಣ್ಣನವರು ಆದ್ಯರ ಅರವತ್ತು ವಚನಕ್ಕೆ ದಣ್ಣಾಯಕರ ಇಪ್ಪತ್ತು ವಚನ ದಣ್ಣಾಯಕರ ಇಪ್ಪತ್ತು ವಚನಕ್ಕೆ ಪ್ರಭುದೇವರ ಹತ್ತು ವಚನ ಪ್ರಭುದೇವರ ಹತ್ತು ವಚನಕ್ಕೆ ಅಜಗಣ್ಣನ ಐದು ವಚನ ಅಜಗಣ್ಣನ ಐದು ವಚನಕ್ಕೆ ಕೂಡಲ ಚನ್ನಸಂಗಮದೇವಾ ಮಹದೇವಿಯಕ್ಕನ ಒಂದು ವಚನ ನಿರ್ವಚನ-ಎಂದಿದ್ದಾನೆ. ಅಕ್ಕಮಹಾದೇವಿಯ ವಚನ, ಅನುಭವ ಸಂಪತ್ತು ಅಷ್ಟು ಘನವಾಗಿತ್ತು. ಎಲ್ಲಾ ಆದ್ಯರ, ಹಿರಿಯರ ವಚನಗಳ ಸತ್ವವನ್ನು ಮೀರಿ ನಿಲ್ಲಬಲ್ಲವಾಗಿದ್ದಾವೆ ಎಂದು ಸಾಕ್ಷಿಕರಿಸಿರುವುದು ಗಮನಾರ್ಹ ಸಂಗತಿಯಾಗಿದೆ. ಸತ್ಯಕ್ಕ: ಶರಣರ ಕ್ರಾಂತಿಗೆ ಶಕ್ತಿ ತುಂಬಿದ, ಅಲ್ಲಮ ಪ್ರಭುದೇವ ಮತ್ತು ಅಕ್ಕಮಹಾದೇವಿಯು ಶಿವಮೊಗ್ಗ ಜಿಲ್ಲೆಯವರೇ ಆಗಿದ್ದಾರೆ. ಜಿಲ್ಲೆಯ ಕೀರ್ತಿಯ ಕಿಡಿಯನ್ನು ಇಲ್ಲಿಂದಲೇ ಗುರುತಿಸಬಹುದಾಗಿದೆ. ಇವರೊಂದಿಗೆ ಶರಣೆ ಸತ್ಯಕ್ಕ ಸಹ ಶಿವಮೊಗ್ಗ ಜಿಲ್ಲೆಯ ಶರಣ ಚಳುವಳಿಯ ಕ್ರಾಂತಿಯ ಕಿಡಿ. ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದ ಸಮೀಪದ ಹಿರೇಜಂಬೂರು ಸತ್ಯಕ್ಕಳ ಜನ್ಮಸ್ಥಳ. ಸತ್ಯಕ್ಕ ಜನಪದ ಸಾಹಿತ್ಯದಲ್ಲಿ ಪ್ರವೀಣೆಯಾಗಿ ವಚನಗಾರ್ತಿಯು ಆಗಿದ್ದಳು. ಇವಳ ಕಾಯಕ, ನಿಷ್ಠೆ, ಭಕ್ತಿಯ ಪರಕಾಷ್ಠೆ ಆ ಕಾಲದಲ್ಲಿ ಮನೆಮಾತಾಗಿತ್ತು. ಶಿವಭಕ್ತರ ಮನೆಯ ಅಂಗಳ ಗುಡಿಸುವ ಕಾಯಕ ಇವಳದಾಗಿತ್ತು. ಈ ಕಾಯಕದಲ್ಲಿಯೇ ದೇವರನ್ನು ಕಂಡವಳು ಶಿವ ಶರಣೆ ಸತ್ಯಕ್ಕ. ಶಿವನ್ನಲ್ಲದೆ ಅನ್ಯ ದೈವವನ್ನು ಪೂಜಿಸುವುದಿಲ್ಲ. ಶಿವನ್ನಲ್ಲದೇ ಅನ್ಯ ದೈವದ ಶಬ್ಧವನ್ನು ಕೇಳುವುದಿಲ್ಲವೆಂದು ಪ್ರತಿಜ್ಞೆ ಮಾಡಿದ ಕಟ್ಟಾ ಶಿವಭಕ್ತೆ. ಅಂತೆಯೇ ತನ್ನ ಪ್ರತಿಜ್ಞೆಯನ್ನು ಪಾಲಿಸುತ್ತಾ ಬಂದವಳು. ಒಮ್ಮೆ ಶಿವನು ವೃದ್ಧ ಭಿಕ್ಷುಕನ ರೂಪದಲ್ಲಿ ಸತ್ಯಕ್ಕನ ಶಿವನಿಷ್ಠೆಯನ್ನು ಪರೀಕ್ಷಿಸಲು ಬರುತ್ತಾನಂತೆ. ಸತ್ಯಕ್ಕ ಬಿಕ್ಷೆ ಹಾಕಿದಾಗ ಹರಿದ ಜೋಳಿಗೆಯಿಂದ ಹಾಕಿದ ಬಿಕ್ಷೆಯು ನೆಲದಲ್ಲಿ ಚೆಲ್ಲುತ್ತದೆ. ಬಿಕ್ಷುಕ ರೂಪದ ಶಿವನು “ಅಯ್ಯೋ ಹರಿದ ಹರಿಯಿಂದ ಕಾಳು ಹರಿದು ಹೋಯ್ತು” ಎಂದು ಉದ್ಗರಿಸುತ್ತಾರೆೆ. ಹರಿ ಎಂಬ ಶಬ್ಧ ಕಿವಿಗೆ ಬೀಳುತ್ತಲೇ ಸಿಟ್ಟಾದ ಸತ್ಯಕ್ಕ ಸಿಟ್ಟಾಗಿ ಕೈಯಲ್ಲಿದ್ದ ಸಟ್ಟುಗದಿಂದ ಶಿವನನ್ನೇ ಹೊಡೆದಳೆಂದು ಐತಿಹ್ಯವಿದೆ. ಅಷ್ಟರ ಮಟ್ಟಿಗೆ ಶಿವಭಕ್ತೆಯಾಗಿದ್ದಳು. ಸತ್ಯಕ್ಕನ ಒಟ್ಟು 29 ವಚನಗಳು ದೊರೆತಿವೆ. ಶಂಬುಜಕೇಶ್ವರ ಎಂಬುದು ಅವಳ ಅಂಕಿತನಾಮ. ಜಂಬೂರಿನಲ್ಲಿ ಶಂಬುಕೇಶ್ವರ ಎಂಬ ದೇವರಿದ್ದಾರೆ. ಈ ಶಂಬುಕೇಶ್ವರ ದೇವರ ನಾಮವನ್ನೆ ಸತ್ಯಕ್ಕನ ತನ್ನ ಅಂಕಿತದಲ್ಲಿಟ್ಟುಕೊಂಡಿರಬೇಕು. ಅದು ವ್ಯತ್ಯಾಸವಾಗಿ ಶಂಬುಜಕೇಶ್ವರ ಆಗಿರಬೇಕೆಂಬುದು ವಿದ್ವಾಂಸರು ಅಭಿಪ್ರಾಯ ಪಡುತ್ತಾರೆ. ತಳ ಸಮುದಾಯದ ಸತ್ಯಕ್ಕನ ವಚನಗಳಲ್ಲಿ ಅಪರೂಪದ ತತ್ವಗಳು ತುಂಬಿವೆ. ಸತಿ-ಪತಿಭಾವ, ಸಮರ್ಪಣಭಾವ, ಶಿವನಿಷ್ಠೆಗಳು ಸರಳವಾದ ಭಾಷೆಯಲ್ಲಿ ಮೈದುಂಬಿ ನಿಂತಿವೆ. ಮೊಲೆ ಮುಡಿ ಇದ್ದುದೆ ಹೆಣ್ಣೆಂದು ಪ್ರಾಮಾಣಿಸಲಿಲ್ಲ ಕಾಸೆ ಮಿಸೆ ಕಠಾರವಿದ್ದುದೆ ಗಂಡೆAದು ಪ್ರಮಾಣಿಸಲಿಲ್ಲ ಅದು ಜಗದ ಹಾಹೆ: ಬಲ್ಲವರ ನೀತಿಯಲ್ಲ ಏತರ ಹೆಣ್ಣಾದಡೂ ಮಧುರವೆ ಕಾರಣ ಅಂದವಿಲ್ಲದ ಕುಸುಮಕ್ಕೆ ವಾಸನೆ ಕಾರಣ ಇದರಂದವ ನೀನೇ ಬಲ್ಲೆ ಶಂಭಜಕ್ಕೇಶ್ವರಾ ಸತ್ಯಕ್ಕ ಹಲವಾರು ವಚನಗಳಲ್ಲಿ ಪುರುಷ ಪ್ರಾಧ್ಯಾನತೆಯನ್ನು ದಿಕ್ಕರಿಸಿದ್ದಾಳೆ. ಅನುಭಾವಕ್ಕೆ ಲಿಂಗ ಭೇದವಿಲ್ಲ ಎಂದು ಸಾರಿದ್ದಾಳೆ. ಸ್ತ್ರೀ ಸಮಾನತೆಯನ್ನು ಎತ್ತಿ ಹಿಡಿದಿದ್ದಾಳೆ. ಶಿವಶರಣರ ಕ್ರಾಂತಿಯಲ್ಲಿ ಪಾಲ್ಗೊಂಡು ಅದರ ದನಿಯಲ್ಲಿ ಗಟ್ಟಿದನಿಯನ್ನು ಹೊರಡಿಸಿದ ಶಿವಮೊಗ್ಗದ ಶರಣರು ತಮ್ಮದೇ ಅನನ್ಯತೆಯನ್ನು ಮೆರೆದಿದ್ದಾರೆ. ಶಿವಮೊಗ್ಗ ಕ್ರಾಂತಿಯ ನಾಡೆಂಬುದನ್ನು ಆ ಕಾಲಕ್ಕೆ ತೋರಿದ ಕೀರ್ತಿ ಈ ಶಿವಶರಣ-ಶರಣೆಯರಿಗೆ ಸಲ್ಲುತ್ತದೆ. ಮುಂದುವರೆಯುತ್ತದೆ…

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು Read Post »

ಕಾವ್ಯಯಾನ

ಗಝಲ್ ಸಂಗಾತಿ

ಗಝಲ್ ಎ.ಹೇಮಗಂಗಾ ಲೋಕದಾ ನಿಯಮಗಳ ಗಾಳಿಗೆ ತೂರಿ ಬಂದುಬಿಡು ನೀ ಮೆಲ್ಲನೆ ಹೂವೊಳು ಗಂಧ ಬೆರೆತಂತೆ ನನ್ನೊಳು ಸೇರಿಬಿಡು ನೀ ಮೆಲ್ಲನೆ ಟೀಕೆಗಳ ಕತ್ತಿ ಇರಿತಕೆ ನಲುಗಿ ಇದ್ದೂ ಇಲ್ಲದಂತಾಗಿದೆ ಜೀವ ನಲುಮೆ ತೋರಿ ಎದೆಗಪ್ಪಿ ನೋವ ಮರೆಸಿಬಿಡು ನೀ ಮೆಲ್ಲನೆ ನಿನ್ನದೇ ಕನವರಿಕೆಯಲಿ ಮುಳುಗಿ ನಿದಿರೆ ದೂರವಾಗಿದೆ ನನಗೆ ದುಃಖದಿ ಕಂಗಳು ಬಾತುಹೋಗಿರೆ ಸವರಿಬಿಡು ನೀ ಮೆಲ್ಲನೆ ಅದೆಷ್ಟು ಹೇಳಲಾಗದ ಮಾತುಗಳಿದ್ದವು ನನ್ನ ನಿನ್ನ ನಡುವೆ ! ನಗುವನ್ನೇ ಮರೆತ ಅಧರಗಳ ಒಮ್ಮೆ ಚುಂಬಿಸಿಬಿಡು ನೀ ಮೆಲ್ಲನೆ ಗುಡಿಸಲಾದರೂ ಸರಿ, ನಿನ್ನೊಡನೆ ಬಾಳುವಾಸೆ ಇದೆ ಈಗಲೂ ಕಣ್ರೆಪ್ಪೆಯೊಳು ಅವಿತಿಹ ಕನಸ ನನಸು ಮಾಡಿಬಿಡು ನೀ ಮೆಲ್ಲನೆ ನಂಜು ಮುಳ್ಳಾದ ಪ್ರೀತಿಯೇಕೋ ನನ್ನ ಬಲಿಪಡೆಯುತಿದೆ ಹೀಗೆ? ದೇಹ ನಿರ್ಜೀವಗೊಳ್ಳುವ ಮುನ್ನ ನನ್ನವನಾಗಿಬಿಡು ನೀ ಮೆಲ್ಲನೆ ದೀಕ್ಷೆ ತೊಟ್ಟಿಹೆ ನಾ ನೀನಿಲ್ಲಿಗೆ ಬರದೆ ಪ್ರಾಣ ತೊರೆಯೆನೆಂದು ‘ಹೇಮ’ಳ ಅಂತಿಮ ವಿದಾಯಕೆ ಮಡಿಲ ನೀಡಿಬಿಡು ನೀ ಮೆಲ್ಲನೆ ಇವರು ‘ಸಿರಿಗನ್ನಡ ವೇದಿಕೆ’ ಮೈಸೂರಿನ ಜಿಲ್ಲಾಧ್ಯಕ್ಷೆ……ರಾಜ್ಯ ಸಮಿತಿಯ ಉಪಾಧ್ಯಕ್ಷೆ…………..’ ಹೇಮಗಂಗಾ ಕಾವ್ಯ ಬಳಗ’ದ ಅಧ್ಯಕ್ಷೆ ಯಾಗಿ ನೂರಾರು ಕವಿಗಳನ್ನು ಬೆಳಕಿಗೆ ತಂದಿದ್ದಾರೆ . ಅನೇಕ ಸಂಘ , ಸಂಸ್ಥೆಗಳ ಪೋಷಕಿಯಾಗಿ ಸೇವೆ ಸಲ್ಲಿಸಿದ್ದಾರೆ… ಉತ್ತಮ ವಾಗ್ಮಿಯೂ, ಕವಯಿತ್ರಿಯೂ ಆಗಿರುವ ಹೇಮಗಂಗಾ ಇಲ್ಲಿಯವರೆಗೆ ಎರಡು ಕೃತಿಗಳನ್ನು ಬಿಡುಗಡೆ ಮಾಡಿದ್ದಾರೆ…..’ಮುಕ್ತ ವಚನಾಮೃತ’ ‌…..ನೂರು ವಚನಗಳ ಸಂಗ್ರಹ ಮತ್ತು ‘ ಹೃದಯಗಾನ’ ….ಭಾವಗೀತೆಗಳ ಸಂಕಲನ . ಕನ್ನಡ ಗಜ಼ಲ್ ಗಳ ಸಂಕಲನವೊಂದು ಪ್ರಕಟಣೆಯ ಹಂತದಲ್ಲಿದೆ

ಗಝಲ್ ಸಂಗಾತಿ Read Post »

ಕಾವ್ಯಯಾನ

ಕಾವ್ಯಯಾನ

ಮೊಗ್ಗಿನ ಜಡೆ ಜಯಾ ಮೂರ್ತಿ ದಟ್ಟ ಕೂದಲಿನ ಪುಟ್ಟ ಸಹನ ಬಯಸಿದಳು ಒಂದುದಿನ ಜಡೆ, ಮಲ್ಲಿಗೆ ಮೊಗ್ಗಿನ ‘ಅಮ್ಮ ಹಾಕು ಮೊಗ್ಗಿನ ಜಡೆ’ ಮುದ್ದುಗರೆದಳು ಅಮ್ಮನೆಡೆ ಮಗಳ ಇಚ್ಚೆ ಪೂರೈಸಲು ಸಂತೆ ಕಡೆ ಚೀಲ ಹೆಗಲಿಗೇರಿಸಿ ತಂದೆ ಹೊರಟರು ಮಲ್ಲಿಗೆ ಕಡೆ ಘಮ ಘಮ ಮೊಗ್ಗು ಮನೆಸೇರಲು ಅಮ್ಮ ಕುಚ್ಚು, ಬೈತಲೆ ಬೊಟ್ಟು, ಜಡೆಬಿಲ್ಲೆ ಹೊರತೆಗೆದಳು ಗಳಿಗೆಯಲ್ಲಿ  ಉದ್ದ ಕೂದಲ ಬಾಚಿ ಜಡೆ ಹೆಣೆದಳು ನಲಿಯುತಲಿ ಮೊಗ್ಗ ಪೋಣಿಸುತ್ತಾ ಹೊಲೆದಳು ದಟ್ಟ ಜಡೆಗೆ ಮುಗುಳ್ನಗೆ ಯೊಳು ಕುಚ್ಚು ಗಲಗಲ ಎನ್ನಲು ಮುಗುಳ್ನಗಲು ಮೊಗ್ಗುಗಳು ಬೆರೆಯುತ್ತಾ ಕಿಲ ಕಿಲಾ ಸಹನಾಳ ನಗೆಯೊಳು ಉಡಿಸಿಹಳು  ರೇಶಿಮೆ ಸೀರೆ ತಾಯಿ ಮಗಳಿಗೆ,  ಪುಟ್ಟ ಸಹನಾ ಮೆರೆದಿರೆ ಕನ್ನಡಿಯಲ್ಲಿ ಜಡೆ ಪ್ರತಿಬಿಂಬಿಸಿರೆ ತಂದೆ ಚಿತ್ರ ತೆರೆದಿರೆ ಸಂತಸ ಮನೆಯಲ್ಲಿ ಹರಿದಿರೆ ಉಳಿದ ಮೊಗ್ಗುಗಳ ಹಾರ ಕೃಷ್ಣ ನ ವಿಗ್ರಹ ಅಲಂಕರಿಸಿರೆ ದೀಪ ಬೆಳಗಿ ಮಗಳ ಆಶೀರ್ವಾದ ತಾಯಿ ಬಯಸಿರೆ ಮಗಳ ಆನಂದ ಹೀಗೆ ಇರಲಿ ಎನ್ನುತಿರೆ ಉರುಳಿತು ಸಂವತ್ಸರುಗಳು ಇಂದು ವಧುವಾಗಿ ಸಹನಾ ನಿಂತಳು ಬಿಳಿಸೀರೆ, ಆಭರಣ ಗಳ ತೊಟ್ಟ ಮಗಳು ಮೊಗ್ಗಿನಜಡೆ ಅಲಂಕೃತ ವ ಇಮ್ಮಡಿಸಲು ಓಡಿತು ತಾಯ ಹೃದಯ ಅಂದಿನ ಸಹನಾ ಮೊಗ್ಗಿನ ಜಡೆ ಬಯಸಿದ ದಿನ ಕೃಷ್ಣ ನ ಆಶೀರ್ವಾದ ಫಲಿಸಿತ್ತು ಈ ದಿನ ಮಗಳು ಅಳಿಯರು ಮಂಟಪದಲ್ಲಿ ನಿಂತ ಸುದಿನ ಮತ್ತೇನ ಬಯಸುವರು ಜನ್ಮವಿತ್ತ ತಂದೆ ತಾಯಿಯರು ಮಗಳ ಸುಖ ಜೀವನ ಅದೇ ಜೀವನದ ಗುರಿ ಧಾರೆ ಎರೆದರು ಮಗಳ, ತುಂಬಿದ ಸಭೆ ಅಕ್ಷತೆಯ ಮಳೆ ಸುರಿಸಿಹರು          ಶುಭಮಸ್ತು, ಶುಭಾಶಯಗಳ          ಧ್ವನಿ ಪ್ರತಿಧ್ವನಿಸಲು          ಮುಗುಳ್ನಕ್ಕರು ದಂಪತಿಗಳು            ಅವರ ಆಕಾಂಕ್ಷೆ ಫಲಿಸಲು. ಕಿರು ಪರಿಚಯ:          ವಾಸ ಇಟಲಿಯಲ್ಲಿ. ಕರ್ಣಾಟಕ ದಿಂದ ಬೆಂಗಳೂರು ಮೈಸೂರು. ಕವನಗಳನ್ನು ಬರೆಯುವ ಹವ್ಯಾಸ. ಹ್ರತ್ಕಮಲ 50 ಕವನಗಳ ಪುಸ್ತಕ publish ಆಗಿದೆ. 

ಕಾವ್ಯಯಾನ Read Post »

ಕಾವ್ಯಯಾನ

ಗಝಲ್ ಸಂಗಾತಿ

ಗಝಲ್ ರೇಖಾ ಗಜಾನನ ಮೌನವ ಮುರಿದು ಮಾತಿನ ಮನೆಯ ಕಟ್ಟೋಣ ಬಾ ಗೆಳೆಯಾ ನಿನ್ನೆ ಉತ್ತ ಬಯಲಿನಲಿ ಹೊಸ ಬೀಜ ಬಿತ್ತೋಣ ಬಾ ಗೆಳೆಯಾ ಕಾಪಿಟ್ಟ ಮನೋಬಲವು ಬರಿದೇ ಧ್ಯಾನಸ್ಥವಾದರೇನು ಚೆನ್ನ ಕೈಗೆ ಕೈಜೋಡಿಸಿ ಯಶದ ಧನುಸ್ಸನ್ನು ಎತ್ತೋಣ ಬಾ ಗೆಳೆಯ ಒಲವು ಹುಟ್ಟಿತೆಂದರೆ ಅಲ್ಲೊಂದು ಹೊಸಜಗದ ಉಗಮ ತಾನೇ ಹಸಿರ ಹಾಸಿ ಕರೆದಿದೆ ನಮ್ಮಿಬ್ಬರ ಲೋಕ ಸುತ್ತೋಣ ಬಾ ಗೆಳೆಯಾ ಸುತ್ತಮುತ್ತ ಬಂಡೆಗಲ್ಲುಗಳ ಸಾಲು ಬೆಳೆಯುತ್ತಲೇ ಇದೆ ನೋಡು ಕುಶಲದಿಂದ ಕುಂದಿಲ್ಲದ ಮೂರ್ತಿಯನು ಕೆತ್ತೋಣ ಬಾ ಗೆಳೆಯಾ ಜೋಡಿ ‘ರೇಖೆ’ಯ ಪಯಣವಿದು ಜೊತೆಜೊತೆಯಿದ್ದರೆ ಮಾತ್ರ ಗುರಿ ಅದೋ ನೆಮ್ಮದಿಯೆಂಬ ಗಮ್ಯವಿದೆಯಂತೆ ಮುಟ್ಟೋಣ ಬಾ ಗೆಳೆಯಾ ಕಿರು ಪರಿಚಯ: ರೇಖಾ ಗಜಾನನ ಭಟ್ಟ ಹುಟ್ಟೂರು: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಹೊನ್ನಗದ್ದೆ ವೃತ್ತಿ : ಪ್ರಾಥಮಿಕ ಶಾಲಾ ಶಿಕ್ಷಕಿ ಪ್ರವೃತ್ತಿ : ಸಾಹಿತ್ಯದ ಓದು ಹಾಗೂ ಬರೆವಣಿಗೆ ಹಾಗೂ ಗಾಯನ ಪ್ರಥಮ ಕೃತಿಯಾದ ‘ಮಡಿಲ ನಕ್ಷತ್ರ’ ಗಜಲ್ ಸಂಕಲನವು ಕನ್ನಡ ಪುಸ್ತಕ ಪ್ರಾಧಿಕಾರದ ಧನಸಹಾಯ ಯೋಜನೆಯಡಿಯಲ್ಲಿ ಆಯ್ಕೆ ಆಗಿ ,ಪುರಸ್ಕಾರ ಪಡೆದಿದ್ದು, ಈ ವರ್ಷ ಬಿಡುಗಡೆಗೊಂಡಿದೆ. ಗಜಲ್, ಕವನ , ಲೇಖನಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿ

ಗಝಲ್ ಸಂಗಾತಿ Read Post »

ಇತರೆ

ಫಲಕುಗಳು-ಝಲಕುಗಳು

*ಫಲುಕುಗಳು ಮತ್ತು ಅದರ ಝಲಕ್ಕುಳು* ಬಸವರಾಜ ಕಾಸೆ ಸಾಹಿತ್ಯದ ಪ್ರಕಾರ ಅದೆಷ್ಟೋ ಇದ್ದರೂ ಅಪರೂಪಕ್ಕೊಮ್ಮೆ ಹೊಸ ಹೊಸ ಪ್ರಕಾರಗಳು ಸೃಷ್ಟಿಯಾಗುತ್ತಲೇ ಸಾಗುತ್ತವೆ. ಅದೆಲ್ಲವನ್ನೂ ತನ್ನೊಳಗೆ ಹುದುಗಿಸಿಕೊಳ್ಳುತ್ತಲೇ ಕುತೂಹಲವನ್ನು ಹೆಚ್ಚಿಸಿ ಹೊಸ ಹೊಸ ಓದುಗರನ್ನು ತನ್ನೆಡೆಗೆ ಸೆಳೆದುಕೊಳ್ಳುವ ಮೂಲಕ ನಿರಂತರವಾಗಿ ಬೆಳವಣಿಗೆ ಹೊಂದುವುದು ಸಾಹಿತ್ಯಕ್ಕೆ ಇರುವ ಹಿರಿಮೆ ಮತ್ತು ಗರಿಮೆ. ಫಲುಕುಗಳು ಎನ್ನುವುದು ಅಂತದ್ದೇ ಒಂದು ಸಾಹಿತ್ಯದ ನೂತನ ಪ್ರಕಾರ. ಹೆಸರು ಮತ್ತು ಶೀರ್ಷಿಕೆಗಳು ವಿಭಿನ್ನವಾಗಿ ಇರುವುದರಿಂದ ಮೊದಲ ನೋಟದಲ್ಲಿಯೇ ಆಕರ್ಷಿಸಿ ಬಿಡುತ್ತೆ ಈ ಬರಹ. ಇನ್ನೂ ಫಲುಕುಗಳ ಓದು ಒಂದು ಓದಿನಲ್ಲಿಯೇ ಓದುಗರನ್ನು ತನ್ನೊಳಗೆ ಹಿಡಿದಿಟ್ಟುಕೊಂಡು ಮತ್ತೆ ಮತ್ತೆ ಓದಿಸಿಕೊಳ್ಳುವ ಸಾಮರ್ಥ್ಯ ಇರುವ ಬರಹ. ಹಾಗಾದರೆ ಫಲುಕುಗಳು ಅಂದರೆ ಏನು, ಅದರ ಗುಣ ಲಕ್ಷಣಗಳು ಮತ್ತು ನಿಯಮಗಳು ಹಾಗೂ ಅದರ ಬರಹ ಹೇಗೆ ಬನ್ನಿ ತಿಳಿದುಕೊಳ್ಳೋಣ. ಯಾವುದಾದರೂ ಒಂದು ನಿರ್ದಿಷ್ಟ ಸನ್ನಿವೇಶವನ್ನು ಆರಿಸಿಕೊಂಡು ಅದನ್ನು ಗಾಢವಾಗಿ ಪರಿಣಾಮ ಬೀರುವಂತೆ ನಮ್ಮದೇ ಪದಗಳಲ್ಲಿ ೨ ರಿಂದ ೪ ೫ ಸಾಲುಗಳಲ್ಲಿ ಚಿತ್ರಿಸುವ ಸಣ್ಣ ಸಣ್ಣ ಬರಹಗಳೇ ಫಲುಕುಗಳು. ವಿಶೇಷವೆಂದರೆ ಇಲ್ಲಿ ಶೀರ್ಷಿಕೆಯ ಹೆಸರು ಸನ್ನಿವೇಶವೇ ಆಗಿರುತ್ತದೆ. ಯಾವ ಸಂದರ್ಭದ ಕುರಿತು ಆ ಫಲುಕುಗಳನ್ನು ಬರೆದಿರಲಾಗಿರುತ್ತದೆಯೋ ಆ ಸಂದರ್ಭವನ್ನು ಸ್ಪಷ್ಟವಾಗಿ ಶೀರ್ಷಿಕೆಯಲ್ಲಿ ಸೂಚಿಸಿರಬೇಕಾಗುತ್ತದೆ. ಒಂದು ಸನ್ನಿವೇಶದ ಮೇಲಿನ ಇಂತಹ ಪ್ರತಿ ಫಲುಕುಗಳು ಕನಿಷ್ಠ ೧೦ ಝಲಕ್ಕುಗಳನ್ನು ಸ್ವಾತಂತ್ರ್ಯವಾಗಿ ಮತ್ತು ಕಡ್ಡಾಯವಾಗಿ ಹೊಂದಿರಬೇಕು, ಇಲ್ಲಿಯೇ ಒಬ್ಬ ಬರಹಗಾರನ ಶಕ್ತಿ ಅನಾವರಣಗೊಳ್ಳುವುದು. ಇಲ್ಲಿ ಝಲಕ್ಕುಗಳು ಎಂದರೆ ಒಂದು ಸ್ವಾತಂತ್ರ್ಯವಾದ ಚರಣ. ಅದಕ್ಕೆ ಇನ್ನೊಂದು ಚರಣದ ಜೊತೆಗೆ ಯಾವುದೇ ಸಂಬಂಧ ಇರುವುದಿಲ್ಲ ಮತ್ತು ಪ್ರತಿ ಝಲಕ್ಕುಗಳು ಸಂದರ್ಭದ ತೀವ್ರತೆಯನ್ನು ಹೆಚ್ಚಿಸುತ್ತಾ ಸಾಗಬೇಕು. ಆದ್ದರಿಂದ ಆ ಎಲ್ಲಾ ಹತ್ತು ಝಲಕ್ಕುಗಳನ್ನು ಒಂದಾದ ನಂತರ ಒಂದು ಕ್ರಮ ಸಂಖ್ಯೆಯ ಮೂಲಕ ಸೂಚಿಸುತ್ತಾ ಹೋಗಬೇಕು. ಪ್ರತಿಯೊಂದು ಝಲಕ್ಕುಗಳು ಸಹ ಆ ಕುರಿತು ವಿಭಿನ್ನ ಭಾವವನ್ನು, ತರಹೇವಾರಿ ದೃಷ್ಟಿಕೋನವನ್ನು ಹೊಂದಿರಬೇಕು. ಇನ್ನೂ ಸಾಲುಗಳ ಮಿತಿ ಕನಿಷ್ಠ ಎರಡು ಮತ್ತು ಗರಿಷ್ಠ ಐದನ್ನು ಮೀರುವಂತಿಲ್ಲ. ಆದಷ್ಟು ಕಡಿಮೆ ಸಾಲುಗಳಲ್ಲಿ ಹೆಚ್ಚಿನ ಭಾವವನ್ನು ಹೊರ ಹೊಮ್ಮಿಸಬೇಕು. ಅನವಶ್ಯಕ ಪದಗಳ ತಾಕಲಾಟ ಇಲ್ಲಿ ಸಲ್ಲದು. ಹಾಗೆಂದು ಬರಹವೇನು ಕಷ್ಟವೇನಲ್ಲ. ಸಂದರ್ಭಗಳ ಕುರಿತ ಜ್ಞಾನ, ವಿಭಿನ್ನ ಬಗೆಯ ಚಿಂತನೆ ಇದ್ದರೆ ಒಮ್ಮೆ ಪ್ರಯತ್ನಿಸಬಹುದು. ಒಂದೇ ಬರಹಕ್ಕೆ ಪರಿಪೂರ್ಣವಾಗದ ಇದನ್ನು ಮತ್ತೆ ಮತ್ತೆ ಓದಿ ತಿದ್ದಿ ತೀಡಿ ಪೂರ್ಣಗೊಳಿಸಬಹುದು. ವಿಷಯದ ನಿರೂಪಣೆಯ ಕುರಿತು ಹೆಚ್ಚಿನ ಜಾಗೃತಿ, ಸ್ಪಷ್ಟ ಕಲ್ಪನೆ, ವಾಸ್ತವಿಕ ಆಗು ಹೋಗುಗಳ ಬಗ್ಗೆ ಈ ಬರಹ ಹೆಚ್ಚಿನ ಜ್ಞಾನವನ್ನು ಅಪೇಕ್ಷಿಸುತ್ತದೆ. ಹಾಗಿದ್ದರೆ ಕನ್ನಡದಲ್ಲಿ ಫಲುಕುಗಳ ಬಗ್ಗೆ ಕೃತಿಗಳು ಬಂದಿದ್ದಾವಾ? ಇದಕ್ಕೆ ಇಲ್ಲ ಎಂದೇ ಹೇಳಬೇಕು. ಇದುವರೆಗೂ ಈ ಪ್ರಕಾರದಲ್ಲಿ ಯಾವುದೇ ಕೃತಿಗಳು ಹೊರ ಬಂದಿಲ್ಲ, ಇನ್ನಷ್ಟೇ ಹೊರ ಬರಬೇಕು. ಆದರೆ ಈ ಪ್ರಕಾರದಲ್ಲಿ ಬೆರಳಣಿಕೆಯಷ್ಟು ಕವಿಗಳು ಮಾತ್ರ ಬರೆಯುತ್ತಿರುವುದರಿಂದ ಇನ್ನೂ ತಡವಾಗಬಹುದು ಅನಿಸುತ್ತೆ.ಈ ಮಾದರಿ ಇನ್ನೂ ಹೆಚ್ಚು ಪ್ರಚಾರದಲ್ಲಿ ಇರದ ಕಾರಣ, ಇದ್ದರೂ ಕೂಡ ಈ ಬಗ್ಗೆ ಮಾಹಿತಿ ಲಭ್ಯವಿರದ ಕಾರಣ ಮತ್ತು ಹೊಚ್ಚ ಹೊಸ ಬಗೆಯ ಪ್ರಕಾರವಾದರಿಂದ ಕೃತಿಗಳು ಹೊರ ಬಂದಿಲ್ಲ. ಅತಿ ಶೀಘ್ರದಲ್ಲೇ ಹೊರ ಬರಲಿ ಎಂದು ಆಶಿಸುತ್ತಾ ನನ್ನದೇ ಫಲುಕುಗಳನ್ನು ಉದಾಹರಣೆಗೆ ನೀಡುತ್ತಿರುವೆ. ಫಲುಕುಗಳು ಸನ್ನಿವೇಶ- ಕೊಟ್ಟು ತೆಗೆದುಕೊಳ್ಳಲಾಗದ ಸಂದರ್ಭ ೧ ಬಪ್ಪರೇ ಮಗನೇ ಚಾಲಾಕಿ ಅಂದರೆ ನೀನೇ ತೆಗೆದುಕೊಂಡಿರುವುದಾ ಮರೆತು ನಾ ಮರೆಯುವಂತೆ ಮರೆಸುವ ನಿನಗೆ ಎಷ್ಟೆಂದು ಉಘೇ ಉಘೇ ಎನ್ನಲಿ ೨ ಕೊಟ್ಟಿರುವದಾ ಕೊಟ್ಟು ಕೂಡಬೇಕು ತೇಲುತ್ತಾ ನಂಬಿಕೆ ವಿಶ್ವಾಸಗಳ ಅಲೆಯಲ್ಲಿ ಇಲ್ಲದಿದ್ದರೆ ಮತ್ತೆ ಮುಖ ತೋರಿಸುವುದು ಹೇಗೆ ಹೇಳಿ ಕೊಡು ನಾಚಿಕೆ ಬಿಟ್ಟು ೩ ಕೊಡುವುದನ್ನು ಕೊಟ್ಟು ಬಿಟ್ಟರೆ ಮುಗಿಯುವುದು ಹೇಗೆ ಎಲ್ಲಾ ಅಲ್ಲಿಗೆ ಬಂಧಗಳು ಗಟ್ಟಿಯಾದಗಲೇ ಚಿಗುರು ಬೆಸೆದು ಹೆಚ್ಚೆಚ್ಚು ಆತ್ಮೀಯತೆ ಅಂಟಂಟು ೪ ಸಂಬಂಧಗಳಲ್ಲಿ ವ್ಯವಹಾರ ಬೇಡ ಎನ್ನುವ ಮನಸ್ಥಿತಿವನಲ್ಲ ನಾನು ಆದರೆ ಸಂಬಂಧಗಳು ವ್ಯವಹಾರ ಅಲ್ಲ ಗೆಳೆಯ ವ್ಯವಹರಿಸುವುದೇ ಸಂಬಂಧವಾದರೆ ಅದು ಕೇವಲ ಲಾಭ ನಷ್ಟಗಳ ವ್ಯಾಪಾರ ೫ ಕೊಡು ತಗೊಳ್ಳುವುದು ಎಲ್ಲಾ ಕಡೆ ಇದ್ದದ್ದೆ ಕೊಟ್ಟು ತಗೋಬೇಕು ಎನ್ನುವರು ಅದಕ್ಕೆ ಮೋಡ ಮಳೆ ನೀಡಿದರೆ ಇಳೆಗೆ ಹಸಿರಾಗಿ ಹರಿದು ಮುಂದೆ ಆವಿಯಾಗಿ ನೀಡುವುದು ತಾ ಪಡೆದುಕೊಂಡಿರುವುದನ್ನು ೬ ಮನುಷ್ಯ ಎಂದ ಮೇಲೆ ಕಷ್ಟ ನೋವುಗಳು ಸಹಜವೇ ಅಲ್ಲವೇ ಗೆಳೆಯ ಒಬ್ಬರಿಗೊಬ್ಬರು ಸಮಯಕ್ಕಾದರೆ ತಾನೇ ಉಳಿಯುವುದು ಅನುರಾಗ ಬಿತ್ತಿ ಉತ್ತಿದಂತೆ ಬೀಜದ ಫಲ ೭ ಚಿಂತಿಸದಿರು ಹೆಚ್ಚಿಗೆ, ನಾನಂತೂ ಚಿಂತಿಸಲಾರೆ ನೀ ಎಲ್ಲಿಯೂ ಹೋಗಲಾರೆ, ನಾನು ಸಹ ಮತ್ತೆ ಆಗುವುದಿದೆ ಮುಖಾಮುಖಿ ನಿನಗಾಗಿ ಆಗ ಕಾದಿರಲಿದೆ ಸರಿಯಾದ ಉತ್ತರ ೮ ಅಯ್ಯೋ ಪಾಪ ಎನಿಸುವ ಯೋಗ್ಯತೆ ಅನುಕಂಪ ಗಿಟ್ಟಿಸಿಕೊಳ್ಳುವಾಗ ಥೂ ಪಾಪಿ ಎನ್ನುವುದಕ್ಕೂ ನಾಲಾಯಕ್ಕು ಅತಿರೇಕಕ್ಕೆ ಏರಿದಾಗ ಪರ್ಯಾಯ ದುರ್ವ್ಯಸನ ೯ ನನ್ನಲ್ಲಿಯೂ ಇದ್ದವು ನಿರೀಕ್ಷೆಗಳು ಅನುಭವ ಬದಲಿಸಿದೆ ಮನೋಭಾವ ನನಗೀಗ ನನಗಾಗುವವರಿಗೆ ಮಾತ್ರ ನಾನಾಗಬೇಕು ಎಂದೆನಿಸಿದೆ ನಿನ್ನಿಂದ ೧೦ ತಲೆ ತಪ್ಪಿಸಿ ತಿರುಗುವವರ ತಲೆ ಕೆಡಿಸುವ ಚುಕ್ತಾಗಳಿಗೆ ತಲೆ ಹಾಕಲಾರೆ ತಲೆಯಿಂದಲೇ ತೆಗೆದ ಮೇಲೆ ನೀನು ಯಾರೋ, ಅದು ಯಾವುದೋ ಈಗೆಲ್ಲವೂ ಬರೀ ಗಾಂಧಿ ಲೆಕ್ಕ

ಫಲಕುಗಳು-ಝಲಕುಗಳು Read Post »

You cannot copy content of this page

Scroll to Top