ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅನುವಾದ

ಅನುವಾದ ಸಂಗಾತಿ

 ವಾಷಿಂಗ್ಟನ್ ಕುಕುರ್ಟೋ ಅರ್ಜೆಂಟೀನಾದ ಕವಿ ಕನ್ನಡಕ್ಕೆ: ಕಮಲಾಕರ ಕಡವೆ ಚೆ ಗುವೆರಾನ ಮುಖ ಇದ್ದ ಮನುಷ್ಯ ಅವನು ಚೆ ಯ ಟ್ಯಾಟೂವ ತನ್ನ ತೋಳುಗಳ ಮೇಲೆ ಹೊಂದಿದ್ದಆ ಕಾಲದಲ್ಲಿ ಯಾರೂ ಟ್ಯಾಟೂ ಹಾಕಿ ಕೊಳ್ಳುತ್ತಿರಲಿಲ್ಲಆ ಕಾಲದಲ್ಲಿ ಯಾರಿಗೂ ಚೆ ಗೊತ್ತೂ ಇರಲಿಲ್ಲಹಾಗಿದ್ದಾಗ ಅವನು ಟ್ಯಾಟೂ ಹಾಕಿಸಿ ಕೊಂಡಿದ್ದ “ಯಾಕಪ್ಪಾ ಹಾಗೆ ಟ್ಯಾಟೂ ಹಾಕಿಸ್ ಕೊಂಡಿದ್ದಿ”ನನ್ನ ಅಜ್ಜಿ ಕೇಳಿದಳು, “ಒಳ್ಳೇ ಜೈಲಿಂದ್ ಹೊರ ಬಂದೋರುಹಾಕಿಸ್ಕೊತಾರಲ್ಲ ಹಾಂಗೆ”.“ಅಮ್ಮ, ಇನ್ನೇನು ನಮ್ ಲೈಫು ಅಂದ್ರೆ,ದೊಡ್ಡದೊಂದು ಜೈಲು ಅಲ್ದಿದ್ರೆ?”ಚೆ ಇನ್ನೂ ಚೆ ಆಗೋಕೆ ಶತಮಾನ ಇರೋವಾಗ್ಲೇಅವನು ತೋಳುಗಳ ಮೇಲೆ ಟ್ಯಾಟೂ ಹಾಕಿಸಿ ಕೊಂಡಿದ್ದಯಾರೂ ಟ್ಯಾಟೂ ಹಾಕಿಸ್ಕೊಳ್ಳೋ ಇರ್ತಾ ಇರದ ಕಾಲದಲ್ಲಿ.ಇಂದು, ಕ್ರಿಸ್ಮಸ್ ನ ಒಂದು ದಿನದ ಮೊದಲುನಾನು ಅವನಿಗೆ ಫೋನು ಮಾಡಿದ್ದೆ, ಹ್ಯಾಪಿ ಹೋಲಿಡೇಸ್ ಹೇಳಲು.ಅವನು ಫೋನು ಉತ್ತರಿಸಿದಾಗ ಪೂರಾ ಕುಡಿದಿದ್ದನನ್ನ ದನಿ ಕೇಳಿ ಅವನಿಗೆ ಖುಷಿ ಆಗಿತ್ತುಆದರೂ ಅವನು ಅದೇನೋ ಹಿಮದ ಕುರಿತು ಮಾತಾಡಿದ್ದ“ಹಿಮದಲ್ಲಿ ಸಿಮ್ಯುಲೇಷನ್ ಮಾಡಿದಂಗೆ ನೀನು ಕಣೋ”ನನ್ನ ಅಪ್ಪ ಸಾರಾಯಿ ಸಾಹೇಬಾಳ ಬಳಿ ಮರಳಿ ಹೋಗಿದ್ದಅವನು ಅವಳಿಗೆ ವಾಪಸಾಗಿದ್ದ“ನಿನ್ನ ಮಕ್ಳು ಎಷ್ಟು ಚಂದ ಇದಾರೋ, ಅಣ್ಣ”ಅಪ್ಪ ನನ್ನ ಅಣ್ಣ ಅಂತ ಕರೆಯೋದು“ಅಪ್ಪಾ, ನಾಳೆ ಕ್ರಿಸ್ಮಸ್”.“ಚೆ ಟ್ಯಾಟೂ ಯಾಕಪ್ಪಾ ಹಾಕಿಸಕೊಂಡೆ ಅಂತ ಬೇಸರ ಆಗ್ತಾ ಇದೆ.ನನಗೆ ಎಲ್ಲದರ ಬಗ್ಗೂ ಬೇಸರಾನೇ, ಚೆ ಕುರಿತೂ”.ಅವನ ಚೆ! ನಮ್ಮ ಬಾಲ್ಯದ ಹೀರೊ ಚೆ!“ನನ್ನ ತೋಳಿನ ಮೇಲೆ ಚೆಗೆನನಗಿಂತಾ ಹೆಚ್ಚು ವಯಸ್ಸಾಗಿ ಬಿಟ್ಟಿದೆ” ನನಗಂದ ಅವನುನನ್ನ ಅಪ್ಪ ಸಾರಾಯಿ ಸಾಹೇಬಾಳ ಬಳಿ ಮರಳಿ ಹೋಗಿದ್ದನನ್ನಪ್ಪ ಅವನ ತೋಳಿನ ಮೇಲೆ ಒರಗಿದ“ಮರೀ ಬೇಡಪ್ಪ ನನ್ನ, ಅಣ್ಣ” ಹೇಳಿದ ಅಪ್ಪ.ಎಂದಿಗೂ ಇಲ್ಲ. ನಾನೆಂದೆ. ಮತ್ತು ಫೋನು ಕೆಳಗಿಟ್ಟೆ. ********

ಅನುವಾದ ಸಂಗಾತಿ Read Post »

ಇತರೆ

ಅಕ್ಷರದ ಅವ್ವ

ಸಾವಿತ್ರಿಬಾಯಿ ಪುಲೆ ಕೆ.ಶಿವು ಲಕ್ಕಣ್ಣವರ ಶೈಕ್ಷಣಿಕ, ಸಾಮಾಜಿಕ ಕ್ರಾಂತಿಯ ‘ಅಕ್ಷರದ ಅವ್ವ’ ಸಾವಿತ್ರಿಬಾಯಿ ಪುಲೆ..! ಇಂದು ಶೈಕ್ಷಣಿಕ, ಸಾಮಾಜಿಕ ಕ್ರಾಂತಿಯ ‘ಅಕ್ಷರದ ಅವ್ವ’ ಸಾವಿತ್ರಿಬಾಯಿ ಪುಲೆ ಹುಟ್ಟಿದ ದಿನ. ಆ ಕಾರಣವಾವಾಗಿ ಈ ಲೇಖನ ಸ್ಮರಣೆ… ಸಾವಿತ್ರಿಬಾಯಿ ಫುಲೆ(೧೮೩೧-೧೮೯೭)ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ. ಭಾರತದ ಮೊಟ್ಟ ಮೊದಲ ಶಿಕ್ಷಕಿ. ದಣಿವರಿಯದ ಸತ್ಯಶೋಧಕಿ. ಆಧುನಿಕ ಶಿಕ್ಷಣದ ತಾಯಿ. ಸಾವಿತ್ರಿಬಾಯಿ ಅವರ ವೇಷ ಭೂಷಣ ಸರಳವಾಗಿತ್ತು. ಖಾದಿ ಸೀರೆಯನ್ನೇ ಅವರು ಧರಿಸುತ್ತಿದ್ದರು ಅವರು… ಸಾವಿತ್ರಿಬಾಯಿ ಫುಲೆ ೧೮೩೧ರ ಜನೆವರಿ ೩ರಂದು ಮಹಾರಾಷ್ಟ್ರದ ಸತಾರ ಜಿಲ್ಲೆಯ ‘ನೈಗಾಂನ್’ನಲ್ಲಿ ಹುಟ್ಟಿದರು. ತಂದೆ ನೇವಸೆ ಪಾಟೀಲ. ಬಾಲ್ಯದಲ್ಲಿಯೇ ಸಾವಿತ್ರಿಬಾಯಿ ಫುಲೆ ಅವರು ಜ್ಯೋತಿಬಾ ಫುಲೆಯವರನ್ನು ಲಗ್ನವಾದರು. ಸಾವಿತ್ರಿಬಾಯಿ ಅವರ ಯಶಸ್ಸು, ಶ್ರೇಯಸ್ಸಿನ ವಿಕ್ರಮಪಾಲು ಜ್ಯೋತಿಬಾ ಫುಲೆ ಅವರದಾಗಿತ್ತು. ಸ್ತ್ರೀ ಶಿಕ್ಷಣವನ್ನು ತೆರೆದ ಕೀರ್ತಿ ಜ್ಯೋತಿಬಾಫುಲೆ ಅವರಿಗೆ ಸಲ್ಲಬೇಕು… ಬಾಲ್ಯ ವಿವಾಹ ರೂಢಿಯಲ್ಲಿದ್ದ ಕಾಲದಲ್ಲಿ ಸಾವಿತ್ರಿಬಾಯಿ ಫುಲೆ ಮದುವೆಯಾದಾಗ ಅವರಿಗೆ ೮ ವರ್ಷ ವಯಸ್ಸು, ಜ್ಯೋತಿಬಾಫುಲೆ ಅವರಿಗೆ ೧೩ ವರ್ಷ ವಯಸ್ಸಾಗಿತ್ತು. ಸಾವಿತ್ರಿಬಾಯಿ ಅವರಿಗೆ ಮನೆಯೇ ಮೊದಲ ಪಾಠಶಾಲೆ, ಪತಿ ಜ್ಯೋತಿಬಾ ಅವರೇ ಗುರುಗಳು. ೧೮೪೭ರಲ್ಲಿ ಸಾವಿತ್ರಿಬಾಯಿ ಶ್ರೀಮತಿ ಮಿಚಲ್ ಅವರ ನಾರ್ಮಲ್ ಶಾಲೆಯಲ್ಲಿ ಶಿಕ್ಷಕಿಯ ತರಭೇತಿ ಪಡೆದರು. ಆಗ ಅವರಿಗೆ ೧೭ ವರ್ಷ. ಹೀಗಾಗಿ ಮಹಾರಾಷ್ಟ್ರದಲ್ಲಿ ತರಭೇತಾದ ಮೊದಲ ಶಿಕ್ಷಕಿಯಾದರು… ಸಾವಿತ್ರಿಬಾಯಿ ಶ್ರೀ ಭಿಡೆಯವರ ಮನೆಯಲ್ಲಿ ಆರಂಭಗೊಂಡ ಕನ್ಯಾಶಾಲೆಯ ಪ್ರಧಾನ ಶಿಕ್ಷಕಿಯಾದರು. ಆ ಕಾಲದಲ್ಲಿ ಹಿಂದೂ ಸ್ರ್ರೀಯೊಬ್ಬಳು ಶಿಕ್ಷಕಿಯಾಗುವುದು ಧರ್ಮಕ್ಕೂ, ಸಮಾಜಕ್ಕೂ ದ್ರೋಹ ಬಗೆದಂತೆ ಎಂಬ ನಿಯಮವಿತ್ತು. ಅವರು ಪಾಠಶಾಲೆಗೆ ಹೋರಟಾಗ ಕೆಲವರು ಕೇಕೇ ಹಾಕಿ ನಗುತ್ತಿದ್ದರು. ಅವರ ಮೇಲೆ ಕೆಸರು, ಸಗಣಿ ಎರಚಿ, ಕಲ್ಲನೂ ತೂರುತ್ತಿದ್ದರು. ಇದರಿಂದ ಧೃತಿಗೆಡದ ಸಾವಿತ್ರಿಬಾಯಿಯವರು ಯಾವಾಗಲೂ ಒಂದು ಸೀರೆಯೊಂದನ್ನು ತಮ್ಮ ಬ್ಯಾಗಿನಲ್ಲಿ ಇಟ್ಟುಕೊಳ್ಳುತ್ತಿದ್ದರು. ದಾರಿಯಲ್ಲಿ ಕೆಸರು, ಸಗಣಿ ಎರಚಿಸಿಕೊಂಡಾಗ, ಬೇಸರ ಗೊಳ್ಳದೆ- ನಮ್ಮ ಮೇಲೆ ಎರಚುವ ಸೆಗಣಿ, ತೂರುವ ಕಲ್ಲುಗಳನ್ನು ಹೂಗಳೆಂದು ಪರಿಭಾವಿಸಿ, ಶಾಲೆಯಲ್ಲಿ ಮಕ್ಕಳು ಬರುವುದರೊಳಗೆ ಬ್ಯಾಗಿನಲ್ಲಿ ಇಟ್ಟುಕೊಂಡಿರುತ್ತಿದ್ದ ಮತ್ತೊಂದು ಸೀರೆಯನ್ನು ಉಟ್ಟುಕೊಂಡು ಪಾಠಕ್ಕೆ ಅಣಿಯಾಗುತ್ತಿದ್ದರು. ೧೮೪೮ರಿಂದ ೧೮೫೨ರ ಅವಧಿಯಲ್ಲಿ ೧೮ ಪಾಠಶಾಲೆಗಳನ್ನು ಫುಲೆ ದಂಪತಿಗಳು ತೆರೆದರು. ಈ ಪಾಠಶಾಲೆಗಳ ಆಡಳಿತದ ಜವಾಬ್ದಾರಿಯನ್ನು ಸಾವಿತ್ರಿಬಾಯಿ ನಿರ್ವಹಿಸಬೇಕಾಗಿತ್ತು. ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಮುಂತಾದ ಕೆಲಸಗಳನ್ನು ಇವರು ಸಮರ್ಪಕವಾಗಿ ನಿಭಾಯಿಸುವುದರ ಮೂಲಕ ಜ್ಯೋತಿಬಾಫುಲೆ ಅವರಿಗೆ ನೆರವಾದರು. ಬ್ರಿಟಿಷ್ ಸರ್ಕಾರದವರು ಅವರ ಕೆಲಸ ಕಾರ್ಯಗಳನ್ನು ಕೂಲಂಕುಷವಾಗಿ ಅವಲೋಕಿಸಿ ಮೆಚ್ಚುಗೆ ಸೂಸಿದ್ದರು. ಇಂದು ಭಾರತದ ಮಹಿಳೆಯರ ಸಮಾಜದ ಎಲ್ಲಾ ಕ್ಷೇತ್ರದಲ್ಲಿ ಸಮಾನತೆಯ ಹಕ್ಕಿಗೆ ಕಾರಣರಾದವರು ಮಾತೆ ಸಾವಿತ್ರಿಬಾಯಿ ಪುಲೆ. ಇವರು ಸಮಾಜದ ಅನಿಷ್ಟ ಪದ್ದತಿಗಳಾದ ಬಾಲ್ಯ ವಿವಾಹ, ಸತಿಸಹಗಮನ ಪದ್ದತಿ, ಕೇಶ ಮುಂಡನೆ ವಿರುದ್ದ ಹೋರಾಟ ಮಾಡಿ, ಮಹಿಳೆಯರಿಗೋಸ್ಕರ ಪ್ರ ಪ್ರಥಮವಾಗಿ ಶಾಲೆಗಳು, ಅಬಲಾಶ್ರಮ ಸ್ಥಾಪನೆ ಮಾಡಿದ ಕೀತಿ೯ ಇವರಿಗೆ ಸಲ್ಲುತ್ತದೆ. ಇವರು ಒಟ್ಟು 14 ಶಾಲೆಗಳನ್ನು ಸ್ಥಾಪನೆ ಮಾಡುತ್ತಾರೆ. ಈ ಎಲ್ಲಾ ಸಾಧನೆಗಳನ್ನು ಪರಿಗಣಿಸಿ,‌ ಬ್ರಿಟಿಷ್ ಸರಕಾರ ಇವರಿಗೆ “ಇಂಡಿಯಾಸ್ ಫಸ್ಟ್ ಲೇಡಿ ಟೀಚರ್” ಎಂದು ಬಿರುದು ಕೂಡ ಕೊಟ್ಟಿತು. ಸ್ತ್ರೀಯರು ಕೂಡ ಪುರುಷರಂತೆ ಶಿಕ್ಷಣವನ್ನು ಪಡೆಯಬೇಕೆಂಬ ಮಹದಾಸೆಯಿಂದ ತಮಗೊದಗಿದ ಕಷ್ಟ – ಕಾರ್ಪಣ್ಯಗಳನ್ನು ಲೆಕ್ಕಿಸದೇ ಸ್ತ್ರೀ ಸಂಕುಲಕ್ಕೆ ಶೈಕ್ಷಣಿಕ ರಹದಾರಿಯನ್ನು ತೋರಿಸಿದರು ಸಾವಿತ್ರಿಬಾಯಿ ಪುಲೆ… ೧೮೫೪ರಲ್ಲಿ ಸಾವಿತ್ರಿಬಾಯಿಯವರು ‘ಕಾವ್ಯಫೂಲೆ'(ಕಾವ್ಯ ಅರಳಿದೆ)ಎನ್ನುವ ಕವನಸಂಕಲನವನ್ನು ಪ್ರಕಟಿಸಿದರು. ಈ ಕಾವ್ಯವು ೧೯ನೇ ಶತಮಾನದ ಸಮಾಜವನ್ನು ದಾಖಲಿಸುವಲ್ಲಿ ಮೈಲಿಗಲ್ಲಾಗಿದೆ. ಇವರು ಈ ಕೃತಿಯನ್ನು’ಅಭಂಗ್’ ಶೈಲಿಯಲ್ಲಿ ರಚಿಸಿದ್ದಾರೆಂದು ವಿಮರ್ಶಕರು ಅಭಿಪ್ರಾಯ ಪಟ್ಟಿದ್ದಾರೆ. ಈ ಕೃತಿಯಿಂದಾಗಿ ಸಾವಿತ್ರಿಬಾಯಿಯವರನ್ನು ಮರಾಠಿ ಕಾವ್ಯದ ಪ್ರವರ್ತಕಿ ಎಂದು ಕರೆಯಲಾಗಿದೆ. ಅವರ ಎರಡನೇಯ ಕೃತಿ ‘ಭವನಕಾಶಿ ಸುಬೋಧ ರತ್ನಾಕರ್'(ಅಪ್ಪಟ ಮುತ್ತುಗಳ ಸಾಗರ) ೧೮೯೧ರಲ್ಲಿ ಪ್ರಕಟವಾಯಿತು. ಇದು ಜ್ಯೋತಿಬಾ ಅವರನ್ನು ಒಳಗೊಂಡಂತೆ ಬರೆದ ಒಂದು ಬಯೋಗ್ರಫಿ. ಮೂರನೆಯದು ಜ್ಯೋತಿಬಾ ಅವರ ಭಾಷಣಗಳ ಸಂಪಾದಿತ ಕೃತಿಯನ್ನು ೧೮೯೨ರಲ್ಲಿ ಸಂಪಾದಿಸಲಾಯಿತು. ನಾಲ್ಕನೇ ಕೃತಿ- ಕರ್ಜೆ(ಸಾಲ) ಎಂಬುದಾಗಿದೆ. ಸಾಮಾಜಿಕ ಕಳಕಳಿಯುಳ್ಳ ಕೃತಿಗಳಾಗಿವೆ… ೧) ಕಾವ್ಯಫೂಲೆ (ಕಾವ್ಯ ಅರಳಿದೆ)-೧೮೫೪. ೨) ಆತ್ಮಕಥೆ. ೩) ಭವನಕಾಶಿ ಸುಬೋಧ ರತ್ನಾಕರ್ (ಮುತ್ತುಗಳ ಸಾಗರ)-೧೮೯೧. ೪) ಜ್ಯೋತಿಬಾ ಅವರ ಭಾಷಣಗಳು -೧೮೯೨. ೫) ಕರ್ಜೆ(ಸಾಲ). ಹೀಗೆ ಸಾಗುತ್ತದೆ ಇವರ ಪುಸ್ತಕ ಪ್ರಕಟಣೆಗಳು… ಜ್ಯೋತಿಬಾ ಅವರ ತತ್ವ್ತ ಮತ್ತು ಪ್ರಗತಿಪರ ದೃಷ್ಟಿಕೋನವನ್ನು ತಮ್ಮದಾಗಿಸಿಕೊಳ್ಳುವ ಸಾವಿತ್ರಿಬಾಯಿಯವರು ಜೀವಮಾನವಿಡೀ ಪತಿಯೊಂದಿಗೆ ಹೆಗಲಿಗೆ ಹೆಗಲುಕೊಟ್ಟು ನಿಲ್ಲುತ್ತಾರೆ. ಇವರಿಬ್ಬರ ನಡುವೆ ಒಂದು ಮಧುರವಾದ ಬಾಂಧವ್ಯ ಮತ್ತು ವೈಯಕ್ತಿಕ ಭಾವನೆಗಳನ್ನು ಗೌರವಿಸಿಕೊಳ್ಳುವ ಗುಣವಿತ್ತು. ಅವರಿಗೆ ಮಕ್ಕಳಿರದಿದ್ದರು ಸಂತೋಷವಾಗಿದ್ದರು. ಪತ್ನೀಯ ಮೇಲೆ ಅಗಾಧ ಪ್ರೀತಿ ಹೊಂದಿದ್ದ ಜ್ಯೋತಿಬಾ ಫುಲೆ ಅವರು ಮಕ್ಕಳಿಗಾಗಿ ಮರುಮದುವೆಯಾಗಲಿಲ್ಲ. ಮುಂದೆ ಫುಲೆ ದಂಪತಿಗಳು ೧೮೭೪ರಲ್ಲಿ ವಿಧವೆಯೊಬ್ಬಳ ಮಗನಾದ ಯಶವಂತನನ್ನು ದತ್ತು ತೆಗೆದುಕೊಂಡು ತೆಗೆದುಕೊಂಡರು. ಆತ ಸಮಾಜದಲ್ಲಿ ಸತ್ಪ್ರಜೆಯಾಗುವ ಅವಕಾಶವನ್ನು ಕಲ್ಪಿಸುತ್ತಾರೆ. ೧೮೬೩ರಲ್ಲಿ ಅನಾಥ ಮಕ್ಕಳಿಗಾಗಿ ಶಿಶು ಕೇಂದ್ರವನ್ನು ತೆರೆಯುತ್ತಾರೆ. ಆ ಅನಾಥ ಮಕ್ಕಳೊಂದಿಗೆ ಪ್ರಾಂಜಲ ಮನಸ್ಸಿನಿಂದ ಬೆರೆಯುತ್ತಾರೆ… ಶಿಕ್ಷಣದ ಹಕ್ಕು, ಸರ್ವಶಿಕ್ಷಣ ಅಭಿಯಾನ ಬಿಸಿಯೂಟದ ಯೋಜನೆಗಳನ್ನು ಕ್ರಾಂತಿಕಾರಿ ಯೋಜನೆಗಳೆಂದು ಕೊಂಡಾಡಲಾಗುತ್ತಿದೆ. ೧೫೦ಕ್ಕೂ ಹೆಚ್ಚು ವರ್ಷಗಳ ಹಿಂದಿಯೇ ಸಾವಿತ್ತಿಬಾಯಿ ಶಾಲೆಯನ್ನು ತೊರೆದ ವಿದ್ಯಾರ್ಥಿಗಳಿಗೆ ಸ್ಟೈಫಂಡ್ ಕೊಡುವ ಯೋಜನೆ ತಂದಿದ್ದರು. ಶಿಕ್ಷಣದಲ್ಲಿ ವೈವಿಧ್ಯತೆ ತಂದಿದ್ದರು. ೧೮೬೦ರ ದಶಕದಲ್ಲಿ ವಿಧವೆಯರ ತಲೆ ಬೋಳಿಸುವ ಪದ್ಧತಿಯನ್ನು ಪ್ರಬಲವಾಗಿ ವಿರೋಧಿಸಿದರು. ವಿಧವೆಯರಿಗೆ, ವಿವಾಹ ಬಾಹಿರವಾಗಿ ಗರ್ಭಿಣಿಯರಾಗುವ ಮಹಿಳೆಯರಿಗಾಗಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಿದರು. ವಿವಾಹ ಬಾಹಿರ ಸಂಬಂಧದಿಂದ ಹುಟ್ಟಿದ ಮಕ್ಕಳಿಗಾಗಿ ಭಿನ್ನವಾದ ಶಿಶು ಕೇಂದ್ರಗಳನ್ನು ಸ್ಥಾಪಿಸಿದರು. ಈ ಬಗೆಯ ಸಾಮಾಜಿಕ ಸಂಘಟನೆಗಳ ಮೂಲಕ ನೂರಾರು ಮಹಿಳೆಯರ ಮತ್ತು ಮಕ್ಕಳ ಬದುಕಿಗೊಂದು ನೆಲೆ ಕೊಟ್ಟರು. ಸಾವಿತ್ರಿಬಾಯಿ ‘ಸತ್ಯೋಧಕ’ ಸಮಾಜದ ಅಧ್ಯಕ್ಷೆಯಾಗಿದ್ದರು. ೧೯ನೇ ಶತಮಾನದ ಇತಿಹಾಸದಲ್ಲಿ ಹಿಂದೂ ಧಾರ್ಮಿಕ ಮದುವೆಗಳನ್ನು ಪೂಜಾರಿಗಳಿಲ್ಲದೇ ನೆರವೇರಿಸಿದ್ದುದು ಒಂದು ಕ್ರಾಂತಿಕಾರಿ ಹೋರಾಟವಾಗಿದೆ. ಈ ಸಂದರ್ಭದಲ್ಲಿ ಬ್ರಾಹ್ಮಣರ ಅಧಿಪತ್ಯವಿಲ್ಲದ ಮದುವೆಗಳನ್ನು ಏರ್ಪಡಿಸುತ್ತಿದ್ದರು. ಅಲ್ಲದೇ ಮೊಟ್ಟ ಮೊದಲ ಬಾರಿ ಕಾನೂನಿನ ನೆರವನ್ನು ಪಡೆದು ಮದುವೆ ನೆರವೇರಿಸಿದ್ದು ಇಂದಿಗೂ ಇತಿಹಾಸದಲ್ಲಿ ದಾಖಲಾಗದೆ ಉಳಿದಿರುವ ಸಂಗತಿಯಾಗಿದೆ… ಮಹಿಳೆಯರ ಹಕ್ಕುಗಳಿಗಾಗಿ ನಿರಂತರ ಚಳುವಳಿ ಸಂಘಟನೆಗಳನ್ನು ಸಂಘಟಿಸಿದರು… ೧೮೪೮ ರಲ್ಲಿ ಪತಿ ಜ್ಯೋತಿಬಾ ಫುಲೆಯವರೊಂದಿಗೆ ಸೇರಿ ತಳ ಸಮುದಾಯದ ಹೆಣ್ಣುಮಕ್ಕಳಿಗಾಗಿ ಪುಣೆಯಲ್ಲಿ ಶಾಲೆಯನ್ನು ಪ್ರಾರಂಭಿಸಿದರು. ೧೮೫೫ ರಲ್ಲಿ ಕೂಲಿ ಕಾರ್ಮಿಕರಿಗಾಗಿ ರಾತ್ರಿ ಪಾಳೆಯದ ಶಾಲೆ ಸ್ಥಾಪನೆ. ೧೮೬೮ ರಲ್ಲಿ ದಲಿತರಿಗಾಗಿ ಮನೆಯ ಕುಡಿಯುವ ನೀರಿನ ಟ್ಯಾಂಕನ್ನು ಬಿಟ್ಟು ಕೊಟ್ಟರು. ಬ್ರಾಹ್ಮಣ ವಿಧವೆಯ ಮಗುವೊಂದನ್ನು ದತ್ತು ತೆಗೆದುಕೊಂಡುದದ್ದು. ಪಶ್ಚಿಮ ಮಹಾರಾಷ್ಟ್ರದ ಕ್ಷಾಮ ಪ್ರದೇಶಗಳಲ್ಲಿ ಎರಡು ವರ್ಷ ಸೇವೆ ಸಲ್ಲಿಸಿದಿದ್ದು ಸಾವಿತ್ರಿಬಾಯಿಯವರ ಹಿರಿದು ಸಮಾಜ ಸೇವೆಯಾಗಿದೆ… ಶಿಕ್ಷಣ ಕೇತ್ರದಲ್ಲಿನ ಸಾಧನೆಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಫುಲೆ ದಂಪತಿಗಳಿಗೆ ಸನ್ಮಾನಗಳು ನಡೆದವು. ಬ್ರಿಟಿಷ್ ಸರಕಾರ ಇವರಿಗೆ “ಇಂಡಿಯಾಸ್ ಫಸ್ಟ್ ಲೇಡಿ ಟೀಚರ್” ಎಂದು ಬಿರುದು ಕೂಡ ಕೊಟ್ಟಿತು… ಈ ಗಣ್ಯರ ದೃಷ್ಠಿಯಲ್ಲಿ ಸಾವಿತ್ರಿಬಾಯಿ ಫುಲೆಯವರು ಹೀಗೆ ಕಂಡರು– ಥಾಮ್ ವುಲ್ಫ್ ಮತ್ತು ಸುಜನ ಆಂಡ್ರಡೆ– ಸಾವಿರಾರು ದೀಪಗಳನ್ನು ಹಚ್ಚಿದ ಆಧುನಿಕ ಶಿಕ್ಷಣದ ತಾಯಿ ಸಾವಿತ್ರಿಬಾಯಿ ಫುಲೆಗೆ ನೀನು ಚಿರಋಣಿಯಾಗಿರಬೇಕು. ಇಂದಿನ ಅಕ್ಷರಸ್ಥ ಭಾರತೀಯ ಪ್ರತಿಯೊಬ್ಬ ಮಹಿಳೆಯ ಮನದಲ್ಲೂ ಸಾವಿತ್ರಿಬಾಯಿ ಫುಲೆ ಇದ್ದಾರೆ. ಮುಖೇಶ್ ಮಾನಸ್ – ಶಿಕ್ಷಣದ ಕ್ಷೇತ್ರಕ್ಕೆ ಯಾವ ಬಗೆಯ ಕಾಣಿಕೆಯನ್ನೂ ನೀಡದಂತಹ ವಿದ್ವಾಂಸರ ಹೆಸರಿನಲ್ಲಿ ಇಂದೂ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತಿದೆ. ಆದರೆ ದಮನಿತ ಸಮುದಾಯಗಳ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಯನ್ನು ಸ್ಥಾಪಿಸಿ, ಕ್ರಾಂತಿಕಾರಿ ಚಳುವಳಿ ಮಾಡಿದ ಸಾವಿತ್ರಿಬಾಯಿ ಫುಲೆ ಅವರ ಬಗ್ಗೆ ಎಷ್ಟು ಜನರಿಗೆ ಗೊತ್ತಿದೆ? ಮೃದುವರ್ಮ– ೧೫೦ ವರ್ಷಗಳ ಹಿಂದೆ ಸ್ತ್ರೀ ವಿಮೋಚನೆ ಕನಸಾಗಿದ್ದ ಕಾಲದಲ್ಲಿ ಅದನ್ನು ನನಸಾಗಿಸಲು ಸಾವಿತ್ರಿಬಾಯಿ ಫುಲೆ ಶ್ರಮಿಸಿದ್ದಾರೆ. ಆದರಿಂದು ಸ್ತ್ರೀ ವಿಮೋಚನೆ ಫ್ಯಾಷನ್ ಆಗಿದೆ. ಗೋವಂಡೆ – ಫುಲೆ ದಂಪತಿಗಳ ಪ್ರಕಾರ ಹುಟ್ಟುವ ಪ್ರತಿಯೊಂದು ಮಗುವು ವಿಶೇಷವಾದುದು. ಮಕ್ಕಳು ಭೂಮಿಯ ಮೇಲಿನ ನಕ್ಷತ್ರಗಳು ಎಂದಿದ್ದಾರೆ. ಅವರ ಈ ಮಾತುಗಳಲ್ಲಿ ಎಷ್ಟೊಂದು ಸತ್ಯ ಅಡಗಿದೆ..! ಹೀಗೆ ಕಂಡರು ಗಣ್ಯರು… ಇಂತಹ ಸಾವಿತ್ರಿಬಾಯಿ ಪುಲೆಯವರು ೧೮೯೭ರಲ್ಲಿ ಪ್ಲೇಗ್ ಪೀಡಿತ ರೋಗಿಗಳ ಸೇವೆಯಲ್ಲಿ ತೊಡಗಿದ್ದಾಗ ಸ್ವತಃ ಸಾವಿತ್ರಿಬಾಯಿ ಫುಲೆ ಅವರೇ ಆ ಕಾಯಿಲೆಯ ಸೋಂಕಿಗೆ ಬಲಿಯಾಗಿ ತೀರಿಕೊಂಡರು… ಹೀಗೆಯೇ ಸಾವಿತ್ರಿಬಾಯಿ ಪುಲೆಯವರ ಶಿಕ್ಷಣ ಕ್ರಾಂತಿ ಮತ್ತು ಸಾಮಾಜಿಕ ಕ್ರಾಂತಿ ನಡೆದಿತ್ತು ಆಗಲೇ… ********

ಅಕ್ಷರದ ಅವ್ವ Read Post »

ಕಾವ್ಯಯಾನ

ಕಾವ್ಯಯಾನ

ಕವಿತೆಯ ಘನತೆ ಬಿ.ಎಸ್.ಶ್ರೀನಿವಾಸ್ ಕವಿತೆಗೊಂದು ಘನತೆಯಿದೆ ಭಾವಗಳ ತೂಕವಿದೆ ಬಂಧಗಳ ಭಾರವಿದೆ ಹೃದಯದ ಪಿಸುದನಿಯಿದೆ ಕವಿತೆಗೊಂದು ಘನತೆಯಿದೆ ಕಾಣದ ಕಂಬನಿಯಿದೆ ಕೇಳಿರದಾ ರಾಗವಿದೆ ರವಿಕಾಣದ ರಸತುಂಬಿದೆ ಕವಿತೆಗೊಂದು ಘನತೆಯಿದೆ ಮೈಮರೆಸುವ ಶ್ರುತಿಲಯವಿದೆ ನೊಂದ ಮನವ ಸಂತೈಸುವ ಸಾತ್ವಿಕ ಶಕ್ತಿಯಿದೆ ಕವಿತೆಗೊಂದು ಘನತೆಯಿದೆ ಹರಿವ ನದಿಯ ಬಳುಕಿದೆ ಗರಿಗೆದರಿ ನರ್ತಿಸುವ ನವಿಲಿನ ಲಾಸ್ಯವಿದೆ ಕವಿತೆಗೊಂದು ಘನತೆಯಿದೆ ಭಕ್ತಿಯಿದೆ ವಿರಕ್ತಿಯಿದೆ ತಿಮಿರವನ್ನು ತೊಲಗಿಸುವ ಸೃಜನ ಸ್ವಯಂಪ್ರಭೆಯಿದೆ

ಕಾವ್ಯಯಾನ Read Post »

You cannot copy content of this page

Scroll to Top