ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಗಾಳಿಯ ಉತ್ಸವ ಪ್ರೇಮಶೇಖರ ಗಕ್ಕನೆ ಹಾರಿ ಗಬಕ್ಕನೆ ಹಿಡಿದು ನುಂಗೇಬಿಟ್ಟಿತು ನಮ್ಮೂರ ಕೆರೆಯ ಮೀನೊಂದನು ಸಾವಿರ ಸಾವಿರ ಮೈಲು ದೂರದ ಸೈಬೀರಿಯಾ ದಿಂದ ಹಾರಿ ಬಂದು ಬೆಳ್ಳಂಬೆಳಿಗ್ಗೆ ಕೆರೆ ಏರಿ ಮೇಲಿನ ಅರಳೀಮರದ ಕೊಂಬೆಯೇರಿ ಕೂತ ಸ್ವಾಲೋ ಹಕ್ಕಿಯೊಂದು. ಇಂದು ನವೆಂಬರ್ ಒಂದು. ತುರ್ತಾಗಿ ಹೋಗ ಬೇಕಿದೆ ನಾನೀಗ ರಾಜ್ಯೋತ್ಸವದಾಚರಣೆಗೆ, ನನಗಾಗಿ ಕಾದು ನಿಂತಿದೆ ಕಾರ್ಯಕರ್ತನ ಬೈಕು, ಕೂಗಿ ಕರೆಯುತ್ತಲೂ ಇದೆ ಮೈಕು. ಭದ್ರವಾಗಿದೆ ನನ್ನ ಜೇಬಿನಲಿ ಭಾಷಣದ ಹಾಳೆ, ಸಿಕ್ಕಿನಿಂತಿದೆ ನನ್ನ ಗಂಟಲಲಿ ಸ್ವಾಲೋ ನುಂಗಿದ ಮೀನು ಮೂಳೆ. ಇದೇರೀ ಯುಗಯುಗದ ಕತೆ ಅನ್ನುತ್ತಿದ್ದಾಳೆ ಅರಳೀಮರ ಸುತ್ತಿಬಂದ ಲಲಿತೆ. ಹೌದು, ನೀರಲೊಂದು ಮೀನು ಆಡುತಿದೆ, ಮೇಲೊಂದು ಸ್ವಾಲೋ ಹೊಂಚು ಹಾಕುತಿದೆ ಅರಳೀಮರ ನಿಂತು ನೋಡುತಿದೆ. ಗಾಳಿ…? ಅದು ತನ್ನ ಪಾಡಿಗೆ ತಾನು ಬೀಸುತ್ತಿದೆ, ಇಂದಿಲ್ಲಿ, ನಾಳೆ ಇನ್ನೆಲ್ಲೋ. **********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕ್ಷಮಿಸದಿರಿ ಸಂಕಟಗಳನ್ನು ಕವಿತೆ ಮಾಡುವುದು ಕ್ರೂರ ಅನ್ನಿಸಿ ಎಷ್ಟೋ ಸಲ ಸುಮ್ಮನಾಗುತ್ತೇನೆ.. ಇದು ಕವಿತೆಯಲ್ಲ; ಒಡಲ ಉರಿ. ವಿಜಯಶ್ರಿ ಹಾಲಾಡಿ ಆಸ್ಟ್ರೇಲಿಯಾದ ಕಾಳ್ಗಿಚ್ಚಿಗೆಬೆಂದ ನರಳಿದ ನೊಂದಅಳಿಲುಗಳೇ ಮೊಲಗಳೇಜಿಂಕೆಗಳೇ ನವಿಲುಗಳೇಹುಲಿ ಚಿರತೆ ಹಾವುಗಳೇಕ್ರಿಮಿ ಕೀಟ ಜೀವಾದಿಗಳೇಮರ ಗಿಡ ಪಕ್ಷಿಗಳೇಕೆಲಸಕ್ಕೆ ಬಾರದ’ ಕವಿತೆ’ಹಿಡಿದು ನಿಮ್ಮೆದುರುಮಂಡಿಯೂರಿದ್ದೇನೆಕ್ಷಮಿಸದಿರಿ ನನ್ನನ್ನುಮತ್ತುಇಡೀ ಮನುಕುಲವನ್ನು ಹಸಿರು ಹೂವು ಚಿಗುರೆಂದುಈ ನೆಲವನ್ನು ವರ್ಣಿಸುತ್ತಲೇಕಡಿದು ಕೊಚ್ಚಿ ಮುಕ್ಕಿಸರ್ವನಾಶ ಮಾಡಿದ್ದೇವೆಇಷ್ಟಾದರೂಹನಿ ಕಣ್ಣೀರಿಗೂ ಬರಬಂದಿದೆನಮ್ಮ ನಮ್ಮ ಲೋಕಗಳುಮಹಲುಗಳನ್ನು ನಾವಿನ್ನೂಇಳಿದಿಲ್ಲ ಇಳಿಯುವುದೂ ಇಲ್ಲಕ್ಷಮಿಸಲೇಬೇಡಿ ಕೊನೆಗೊಂದು ಅರಿಕೆಪ್ರಾಣಿಪಕ್ಷಿಗಳೇಮತ್ತೊಂದು ಜನ್ಮವಿದ್ದರೆ ನನಗೆದಯಮಾಡಿ ನಿಮ್ಮ ಸಂಕುಲಕ್ಕೆಕರೆದುಕೊಳ್ಳಿ- ಇಲ್ಲವೆಂದಾದರೆನಿಮ್ಮ ಪಾದ ಸೋಕಿನಕಲ್ಲೋ ಮುಳ್ಳೋ ಮಣ್ಣೋಆಗಲಾದರೂ ಹರಸಿಬಿಡಿ ಹೆಚ್ಚು ಹೇಳುವುದಿಲ್ಲನಿಮ್ಮುಸಿರಿನ ಬೇಗುದಿನಮ್ಮೆಲ್ಲರ ಜೀವಾತ್ಮಗಳ ಬೇಯಿಸಲಿ. *******

ಕಾವ್ಯಯಾನ Read Post »

ಅನುವಾದ

ಅನುವಾದ ಸಂಗಾತಿ

ಜಾನ್ ಆಶ್ಬರಿ ಅಮೇರಿಕಾ ಕವಿ ಕನ್ನಡಕ್ಕೆ: ಕಮಲಾಕರ ಕಡವೆ “ಒಳ ಬರುವ ಮಳೆ” ಅಟ್ಟದಲ್ಲಿ ಹಸನು ಉದ್ದಿಟ್ಟ ಬ್ಲಾಕ್ ಬೋರ್ಡು. ತಾರೆಗಳ ಬೆಳಕನ್ನು ಈಗ ಗಟ್ಟಿಯಾಗಿಸಿದೆ ಗಾಳಿ. ಯಾರಿಗಾದರೂ ಕಾಣಸಿಗುತ್ತೆ. ಯಾರಿಗಾದರೂ ಗೊತ್ತಾಗುತ್ತೆ. ಈ ಮಹಾನ್ ಗ್ರಹದ ಮೇಲೆಲ್ಲಾದರೂ ಸತ್ಯವ ಕಂಡುಕೊಂಡರೆ – ಒಂದು ತುಂಡು, ಬಿಸಿಲಲ್ಲಿ ಒಣಗಿಸಿದ್ದು – ತನ್ನದೇ ಅಪಖ್ಯಾತಿ ಮತ್ತು ದೈನ್ಯತೆಯಲ್ಲಿ ಅದು ಹುಲ್ಲು ಕಡ್ಡಿಯ ಆಧಾರದಲ್ಲಿ ಇರುತ್ತೆ. ಯಾರೂ ಉದ್ದಾರವಾಗಲಾರರು, ಆದರೂ ಪರಿಸ್ಥಿತಿ ಇನ್ನೂ ಎಷ್ಟು ಹದಗೆಡಲು ಸಾಧ್ಯ? ಮುಂದುವರಿಯಲಿ ಆಟ, ಆಡುತ್ತಾ ಪಡೆದು ಪ್ರಾವೀಣ್ಯತೆ ಈ ಅಶಾಂತಿಯೊಳಗೆ ಕಾಲಿಡಲು. ಕಾಣಲಾರೆಯೇ ನೀನು, ಇಷ್ಟೇ ಮಾಡಲಾದೀತು ನಮಗೆ. ಅಷ್ಟರಲ್ಲಿಯೇ, ಕಿಚ್ಚು ಹೊತ್ತಿ ಕೊಂಡಿದೆ, ಮೆದೆಗೆ ಬೆಂಕಿ ಬಿದ್ದಂತೆ. ಗಡಿಯಾರದ ಮುಳ್ಳನ್ನು ಹೊಂದಿಸಿ ಆಗಿದೆ ಅದು ಮಾತ್ರ ಅನಿಷ್ಟ ಸೂಚಿಸಿದೆ. ಬಾಳ್ವೆಯ ಸೌಜನ್ಯ ಅದರೊಂದಿಗೆ ಸಂಚು ಹೂಡಿದೆ. ಇಲ್ಲಿಯೇ ಇನ್ನೀಗ ನಮ್ಮ ಮನೆಯೂ. ಎಲ್ಲಿಂದ ಎಂದು ಸೂಚಿಸಲು, ಜನರಿಗೂ ಕೇಳಲು ಒಂದು ಜಾಗ. ******* Rain Moving In” The blackboard is erased in the attic And the wind turns up the light of the stars, Sinewy now. Someone will find out, someone will know. And if somewhere on this great planet The truth is discovered, a patch of it, dried, glazed by the sun, It will just hang on, in its own infamy, humility. No one Will be better for it, but things can’t get any worse. Just keep playing, mastering as you do the step Into disorder this one meant. Don’t you see It’s all we can do? Meanwhile, great fires Arise, as of haystacks aflame. The dial has been set And that’s ominous, but all your graciousness in living Conspires with it, now that this is our home: A place to be from, and have people ask about.

ಅನುವಾದ ಸಂಗಾತಿ Read Post »

ಇತರೆ

ಕುಮಾರವ್ಯಾಸ ಜಯಂತಿ

ಕನ್ನಡ ಸಾಹಿತ್ಯದ ದಿಗ್ಗಜ ಕುಮಾರವ್ಯಾಸ..! ಕೆ.ಶಿವು ಲಕ್ಕಣ್ಣವರ ದಿನಾಂಕ ೯ ಕುಮಾರವ್ಯಾಸನ ಜಯಂತಿ. ಆ ನಿಮಿತ್ತವಾಗಿ ಕುಮಾರವ್ಯಾಸ ಕುರಿತು ಈ ಲೇಖನ… ಕುಮಾರವ್ಯಾಸ (ಕ್ರಿ.ಶ. ೧೩೫೦-೧೪೦೦) ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕನ್ನಡ ಸಾಹಿತ್ಯದ ದಿಗ್ಗಜರಲ್ಲಿ ಒಬ್ಬ ಎಂದರೆ ತಪ್ಪಾಗಲಾರದು. ಕುಮಾರವ್ಯಾಸನ ಮೂಲ ಹೆಸರು ನಾರಾಯಣಪ್ಪ. “ಗದುಗಿನ ನಾರಾಯಣಪ್ಪ” ಎಂದು ಸಾಮಾನ್ಯವಾಗಿ ಕುಮಾರವ್ಯಾಸನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ಮಹಾಭಾರತದ ಅತ್ಯದ್ಭುತ ಕನ್ನಡ ರೂಪವನ್ನು ರಚಿಸಿದ್ದರಿಂದ, ವ್ಯಾಸ ಮಹಾಕವಿಯ ಮಾನಸಪುತ್ರ ತಾನೆನ್ನುವ ವಿನೀತ ಭಾವದಿಂದ ನಾರಣಪ್ಪ ಕುಮಾರ ವ್ಯಾಸನಾಗಿದ್ದಾನೆ. ಈ ಹೆಸರು ಕುಮಾರವ್ಯಾಸನಿಗೆ ಅನ್ವರ್ಥವಾಗಿದೆ. ಕುಮಾರವ್ಯಾಸ ಗದುಗಿನ ವೀರನಾರಾಯಣ ದೇಗುಲದಲ್ಲಿನ ಕಂಬದ ಅಡಿಯಲ್ಲೇ ಗದುಗಿನ ಭಾರತವನ್ನು ರಚಿಸಿ ಓದುತ್ತಿದ್ದ ಎಂಬ ಪ್ರತೀತಿ ಸಹ ಇದೆ… ಕುಮಾರವ್ಯಾಸನ ಕಾಲದ ಬಗ್ಗೆ ಇನ್ನೂ ಚರ್ಚೆಗಳು ನಡೆಯುತ್ತಲೇ ಇವೆ. ಆದರೂ ಕವಿ ಚರಿತಾಕಾರರು ಕೆಲವು ಸಾಹಿತ್ಯದ ಹಿನ್ನೆಲೆಯಿಂದ ಕುಮಾರವ್ಯಾಸನ ಕಾಲವನ್ನು ನಿರ್ಣಯಿಸಲು ಪ್ರಯತ್ನಿಸಿದ್ದಾರೆ. ಕುಮಾರವ್ಯಾಸನ ಹೆಸರು ಹೇಳುವ ಉತ್ತರಕಾಲೀನ ಕವಿಗಳಲ್ಲಿ ಮೊದಲಿಗ ತಿಮ್ಮಣ್ಣ ಕವಿ. ಇವನ ಕಾಲ ಸುಮಾರು ಕ್ರಿ.ಶ. ೧೫೧೦. ಇವನು ವಿಜಯನಗರದ ಶ್ರೀಕೃಷ್ಣದೇವರಾಯನ(ಕ್ರಿ.ಶ.೧೫೦೯ ರಿಂದ ೧೫೨೯ರವರೆಗೆ) ಆಜ್ಞಾನುಸಾರ ‘ಕೃಷ್ಣರಾಜ ಭಾರತ’ಎಂಬ ಕೃತಿಯನ್ನು ರಚಿಸಿದ್ದಾನೆ. ಸುಮಾರು ಕ್ರಿ.ಶ. ೧೫೦೦ ರಲ್ಲಿದ್ದ ‘ತೊರವೆ ರಾಮಾಯಣ’ ಬರೆದ ಕುಮಾರ ವಾಲ್ಮೀಕಿ ಅಥವಾ ತೊರವೆ ನರಹರಿ ಮತ್ತು ‘ಕೃಷ್ಣರಾಯ ಭಾರತ’ ಬರೆದ ತಿಮ್ಮಣ್ಣ ಕವಿ ಕುಮಾರವ್ಯಾಸನನ್ನು ಹೊಗಳಿರುವುದರಿಂದ ಕುಮಾರವ್ಯಾಸನು ಆ ಕಾಲಕ್ಕಿಂತ ಹಿಂದಿನವನೆಂದು ಸಿದ್ಧವಾಗಿದೆ. ಜೀವಂಧರ ಚರಿತೆ ಬರೆದ ಕ್ರಿ.ಶ. ೧೪೨೪ ರಲ್ಲಿದ್ದ ಭಾಸ್ಕರ ಕವಿಯು ಕುಮಾರವ್ಯಾಸನ ಅನೇಕ ನುಡಿಕಟ್ಟುಗಳನ್ನು ಬಳಸಿ ಅವನಿಂದ ಪ್ರಭಾವಿತನಾಗಿರುವುದರಿಂದ, ಕುಮಾರವ್ಯಾಸನು ಅವನಿಗಿಂತ ಹಿಂದಿನವನೆಂದು ಸಂಶೋಧಕರು ನಿರ್ಧರಿಸಿದ್ದಾರೆ… ಕುಮಾರವ್ಯಾಸನ ಹೆಸರಿರುವ ಒಂದು ಶಾಸನ ಗದುಗಿನ ವೀರನಾರಾಯಣ ದೇವಸ್ಥಾನಕ್ಕೆ ಸೇರಿದ ಬಾವಿಯ ಎಡ ಮಗ್ಗುಲ ಗೋಡೆಯ ಮೇಲಿದೆ. ಇದರ ಕಾಲ ಸುಮಾರು ಕ್ರಿ.ಶ. ೨೬-೮-೧೫೩೯ ರಲ್ಲಿ ಬರೆದ ಶಾಸನದಲ್ಲಿ ಕವಿ ಕುಮಾರವ್ಯಾಸನಿಗೆ ಪ್ರಸನ್ನನಾದ ಗದುಗಿನ ವೀರ ನಾರಾಯಣನ ಸನ್ನಿಧಿಯಲ್ಲಿ. ಎಂದು ಕುಮಾರವ್ಯಾಸನ ಹೆಸರನ್ನು ಉಲ್ಲೇಖಿಸಿರುವುದರಿಂದ ಅವನು ಅದಕ್ಕಿಂತ ಹಿಂದಿನವನೆಂದು ಸ್ಪಷ್ಟವಾಗಿದೆ. ಕುಮಾರವ್ಯಾಸ ಶ್ರೀಕೃಷ್ಣದೇವರಾಯನ ಆಳ್ವಿಕೆಯಲ್ಲಿದ್ದವನೆಂದೂ, ‘ಪ್ರಭುಲಿಂಗಲೀಲೆ’ ಬರೆದ ಚಾಮರಸನ ತಂಗಿಯ ಗಂಡನೆಂದೂ, ಇದರ ಪ್ರಕಾರ ಇವನ ಕಾಲ ಸುಮಾರು ೧೪೩೯ ಆಗುತ್ತದೆಂದು ಕವಿಚರಿತಾಕಾರರು ಅಭಿಪ್ರಾಯ ಪಟ್ಟಿದ್ದಾರೆ… ಆದ್ದರಿಂದ ಅವನ-ಕುಮಾರವ್ಯಾಸನ ಕಾಲವನ್ನು ಕ್ರಿ.ಶ. ೧೩೫೦-೧೪೦೦ ಎಂದು ನಿರ್ಣಯಿಸಿರುತ್ತಾರೆ. (ಡಾ.ಟಿ.ವಿ.ವೆಂಕಟಾಚಲಶಾಸ್ತ್ರಿ : ಕುಮಾರವ್ಯಾಸ ಭಾರತ ಸಂಗ್ರಹ ಪ್ರ : ಬಿ.ಎಂ.ಶ್ರೀ. ಪ್ರತಿಷ್ಠಾನ)… ಕುಮಾರವ್ಯಾಸನು ‘ಕರ್ಣಾಟ ಭಾರತ ಕಥಾಮಂಜರಿ’ ರಚಿಸಿ, ವ್ಯಾಸರಾಯರಿಗೆ ತೋರಿಸಿದನೆಂಬ ಐತಿಹ್ಯವಿದೆಯೆಂದು ತಿಳಿಸಿರುವ ಪಂಚಮುಖಿ ಎಂಬ ವಿದ್ವಾಂಸರು- “ಹರಿ ಶರಣರೆನ್ನ ಮನೆಯ ಮೆಟ್ಟಲು ಮನೆ ಪರಮಪಾವನವಾಯಿತು” ಎಂಬ ಸುಳಾದಿಯಲ್ಲಿ ಪುರಂದರದಾಸರು ತಮ್ಮ ಮನೆಗೆ ಕುಮಾರವ್ಯಾಸ ಬಂದುದನ್ನು, ಆತ ತನ್ನ ಕೃತಿಗೆ ಶ್ರೀಕೃಷ್ಣನೇ ಕಥಾನಾಯಕನೆಂದು ಶಾಸ್ತ್ರ ಸಮ್ಮತವಾಗಿ ಹೇಳಿದನೆನ್ನಲಾಗಿದೆ… ಈ ದಿಶೆಯಲ್ಲಿ ಕುಮಾರವ್ಯಾಸ ಅತಿ ಪ್ರಾಚೀನನೂ ಅಲ್ಲ, ಅರ್ವಾಚೀನನೂ ಅಲ್ಲ. ಮಧ್ಯಕಾಲದವನೆಂದೂ, ಅವನ ಭಾಷಾಶೈಲಿಯ ದೃಷ್ಠಿಯಿಂದ ನಿರ್ವಿವಾದವಾಗಿ ಹೇಳಬಹುದು… ಹುಟ್ಟೂರು ಹುಬ್ಬಳ್ಳಿಯ ಕುಂದಗೋಳ ತಾಲ್ಲೂಕಿನ ಕೋಳಿವಾಡವೆಂಬ ಗ್ರಾಮವೆಂದೂ ಅವನ ವಂಶಸ್ಥರು ಈಗಲೂ ಅಲ್ಲಿ ವಾಸಿಸುತ್ತಾರೆಂದೂ ಹೇಳಲಾಗಿದೆ. ಈ ಬಗ್ಗೆ ಸಂಶೋಧನೆ ಮಾಡಿದ ಶ್ರೀ ಎ.ವಿ.ಪ್ರಸನ್ನ, ಕೆ.ಎ.ಎಸ್. ಅವರು ಅವರ ಮನೆಗೆ ಹೋಗಿ ವಿಚಾರ ವಿನಿಮಯ ಮಾಡಿ ಅವರಲ್ಲಿರುವ ಕಾಗದ ಪತ್ರಗಳನ್ನೂ ಕುಮಾರವ್ಯಾಸ ಭಾರತದ ಓಲೆಗರಿ ಪ್ರತಿಗಳನ್ನೂ ಪರಿಶೀಲಿಸಿರುವುದಾಗಿ ತಿಳಿಸಿದ್ದಾರೆ. ಈ ಎಲ್ಲಾ ಪತ್ರಗಳ ಆಧಾರದ ಮೇಲೆ ಕವಿಯ ವಂಶಸ್ಥರು ತಮ್ಮ ವಂಶದ ಚರಿತ್ರೆಯನ್ನು ಈ ರೀತಿ ತಿಳಿಸುತ್ತಾರೆ… ಕುಮಾರವ್ಯಾಸನ ಪೂರ್ವಿಕರಾದ ಚಿನ್ನದ ಕೈ ಮಾಧವರಸಯ್ಯನು ಹಿರೇಹಂದಿಗೋಳ ಗ್ರಾಮದವನಾಗಿದ್ದು ಕೋಳೀವಾಡ ಗ್ರಾಮವನ್ನು ಕ್ರಯಕ್ಕೆ ಪಡೆದು, ಕೋಳೀವಾಡದಲ್ಲಿಯೇ ನೆಲಸಿದ. ಅವರು ಅದ್ವೈತಿಗಳಾಗಿದ್ದು ಹರಿ-ಹರರಲ್ಲಿ ಅಬೇಧವನ್ನು ಕಾಣುವವರು. ಇವರು ಅಗಸ್ತ್ಯ ಗೋತ್ರಕ್ಕೆ ಸೇರಿದವರು. ಈ ಬಗ್ಗೆ ಗದುಗಿನ ಕುಮಾರವ್ಯಾಸ ಸಂಘದ ಅಧ್ಯಕ್ಷರೂ ಆದ ಶ್ರೀ ಎಂ.ಎಚ್ ಹರಿದಾಸ ಅವರು ರಚಿಸಿರುವ ಮಹಾಕವಿ ಕುಮಾರವ್ಯಾಸ (ಪ್ರ.ವಿಕ್ರಮ ಪ್ರಕಾಶನ ಗದಗ) ಕಿರು ಹೊತ್ತಿಗೆಯಲ್ಲಿ ಹೆಚ್ಚಿನ ವಿಷಯವಿದೆ… ಅವನ ವಂಶಸ್ಥರಾದ ದತ್ತಾತ್ರೇಯ ಪಾಟೀಲರು ಶ್ರೀ ಎ.ವಿ.ಪ್ರಸನ್ನ ಅವರಿಗೆ ಕೊಟ್ಟ ಕುಮಾರವ್ಯಾಸನ ವಂಶಾವಳಿಯನ್ನು ಗಮಕ ಸಂಪದ ಪತ್ರಿಕೆಯಲ್ಲಿ ಪ್ರಕಟಿಸಿದ್ದಾರೆ. ಒಟ್ಟಿನಲ್ಲಿ ಕವಿ ನಾರಾಯಣಪ್ಪ ಕೋಳಿವಾಡದ ಶಾನುಭೋಗ. ಗದುಗಿನ ವೀರನಾರಾಯಣ ಇವನ ಆರಾಧ್ಯ ದೈವ. ಇವನಿಗೆ ವೇದವ್ಯಾಸ ಮತ್ತು ಅಶ್ವತ್ಥಾಮರ ಅನುಗ್ರಹವಾಗಿತ್ತೆಂದು ಹೇಳಲಾಗುತ್ತದೆ… ಈ ವಂಶಾವಳಿಯಂತೆ, ವೀರನಾರಾಯಣರೆಂಬ ಹೆಸರಿನವರು ಐದು ಜನ ಬರುತ್ತಾರೆ. ಅದರಲ್ಲಿ ವಂಶ ಪ್ರವರ್ತಕ ಚಿನ್ನದ ಕೈ ಮಾಧವರಸಯ್ಯನ ನಂತರ ನಾಲ್ಕನೆಯವನಿಗೆ ೧ ನೇ ವೀರನಾರಾಯಣ ಗೌಡ ಎಂದಿದೆ. ಅವನೇ ಕುಮಾರವ್ಯಾಸನೆಂದು ನಿರ್ಧರಿಸಿದ್ದಾರೆ… ಇಲ್ಲಿ ಗೌಡ ಎಂಬ ಪದ ಜಾತಿ ಸೂಚಕವಲ್ಲ. ಅದು ಗ್ರಾಮ ವೃದ್ಧ ಗಾಮುಂಡ ಗೌಡ ಎಂದು ನಿರ್ಣಯಿಸಿದ್ದಾರೆ. ಆನಂತರ ಕೆಲವು ಅದೇ ಮನೆತನದವರು ಅಯ್ಯ, ಪಾಟೀಲ ಎಂದು ತಮ್ಮ ಹೆಸರಿನ ಕೊನೆಗೆ ಸೇರಿಸಿ ಕೊಂಡಿದ್ದಾರೆ. ವಂಶ ಪ್ರವರ್ತಕ ಚಿನ್ನದ ಕೈ ಮಾಧವರಸಯ್ಯನ ಕಾಲ ಕ್ರಿ.ಶ. ೧೧೪೮. ಇವನ ನಂತರದ ನಾಲ್ಕನೆಯ ತಲೆಮಾರಿನ ಕುಮಾರವ್ಯಾಸ. ಪ್ರತಿ ತಲೆಮಾರಿಗೆ ೨೫ ವರ್ಷವೆಂದು ಹಿಡಿದರೆ, ಕುಮಾರವ್ಯಾಸನ ಕಾಲ ಕ್ರಿ.ಶ. ೧೨೪೮. ಅವನು ಸುಮಾರು ೭೦ ವರ್ಷ ಬದುಕಿದ್ದನೆಂದು ಭಾವಿಸಿದರೂ ಕ್ರಿ.ಶ. ೧೨೪೮ ರಿಂದ ೧೩೧೮ ಎಂದರೆ ೩೦-೪೦ ವರ್ಷ ವ್ಯತ್ಯಾಸ ಬರುತ್ತದೆ… ೧.ವಂಶ ಪ್ರವರ್ತಕ ಚಿನ್ನದ ಕೈ ಮಾಧವರಸಯ್ಯ. ೨.ತಿರುಮಲಯ್ಯ. ೩.ಲಕ್ಕರಸಯ್ಯ. ೪.ವೀರನಾರಾಯಣ ಗೌಡ.; ಕೃಷ್ಣರಸಯ್ಯ ; ತಂಕರಸಯ್ಯ ; ತಿರುಮಲಯ್ಯ. ಅಶ್ಯತ್ಥಯ್ಯ. ೪-೧ ನೇ ವೀರನಾರಾಯಣನೇ ಕುಮಾರವ್ಯಾಸ ನಂತರ ೧೯೪೧ ಕ್ಕೆ ೧೯ ತಲೆಮಾರಿನ ಪಟ್ಟಿ ಇದೆ… ಕುಮಾರವ್ಯಾಸನ ಅತಿ ಪ್ರಸಿದ್ಧ ಕೃತಿ ಕರ್ಣಾಟಕ ಭಾರತ ಕಥಾಮಂಜರಿ. ಇದಕ್ಕೆ ಗದುಗಿನ ಭಾರತ, ಕನ್ನಡ ಭಾರತ, ಕುಮಾರವ್ಯಾಸ ಭಾರತ ಎಂದೂ ಹೆಸರು. ಮಹಾಕವಿ ವ್ಯಾಸರ ಸಂಸ್ಕೃತ ಮಹಾಭಾರತದ ಕನ್ನಡಾನುವಾದ ಎನ್ನಬಹುದು. ಆದರೆ ಕೇವಲ ಅನುವಾದವಾಗಿ ಉಳಿಸದೇ ಕುಮಾರವ್ಯಾಸ ತನ್ನ ಕಾವ್ಯ ಸಾಮರ್ಥ್ಯವನ್ನು ಈ ಕೃತಿಯಲ್ಲಿ ಸಂಪೂರ್ಣವಾಗಿ ಧಾರೆಯೆರೆದಿದ್ದಾನೆ. ಕನ್ನಡ ಸಾಹಿತ್ಯದಲ್ಲಿ ಮೇರು ಕೃತಿಯಾಗಿ ಪರಿಗಣಿತವಾಗಿರುವ ಕನ್ನಡ ಭಾರತ, ಸಂಸ್ಕೃತ ಮಹಾಭಾರತದ ಮೊದಲ ಹತ್ತು ಪರ್ವಗಳು, ೧೪೭ ಸಂಧಿ, ೭೯೭೧ ಪದ್ಯಗಳನ್ನು ಒಳಗೊಂಡಿದೆ. (ತಿದ್ದುಪಡಿ:೧೫೨ ಸಂಧಿಗಳು, 8244ಪದ್ಯಗಳು) ‘ಕುಮಾರವ್ಯಾಸ ಭಾರತ’ದ ಭಾಷೆ ನಡುಗನ್ನಡ. (ಕುಮಾರವ್ಯಾಸ ಭಾರತ-ಆದಿಪರ್ವ)… ಸಂಪೂರ್ಣ ಕಾವ್ಯ ಭಾಮಿನೀ ಷಟ್ಪದಿ ಛಂದಸ್ಸಿನಲ್ಲಿ ರಚಿತವಾಗಿದ್ದು ಕುಮಾರವ್ಯಾಸನ ಕಾವ್ಯ ಪ್ರತಿಭೆ ಓದುಗರನ್ನು ದಂಗು ಬಡಿಸುತ್ತದೆ. ಅವನ ಕಾವ್ಯ ಪ್ರತಿಭೆ ಪೂರ್ಣಶಕ್ತಿಯಲ್ಲಿ ಹೊರಹೊಮ್ಮುವುದು ಅವನ ರೂಪಕಗಳಲ್ಲಿ. ಕುಮಾರವ್ಯಾಸನ ರೂಪಕಗಳ ವೈವಿಧ್ಯತೆ ಮತ್ತು ಆಳ ಅಪಾರವಾದದ್ದು. ಇದೇ ಕಾರಣಕ್ಕಾಗಿ ಕುಮಾರವ್ಯಾಸನ ಹೆಸರು ರೂಪಕ ಸಾಮ್ರಾಜ್ಯ ಚಕ್ರವರ್ತಿ ಎಂದೇ ಖ್ಯಾತಿ ಪಡೆದಿದೆ… “ಬವರವಾದರೆ ಹರನ ವದನಕೆ ಬೆವರ ತಹೆನು” (ಅಭಿಮನ್ಯುವಿನ ವೀರೋಕ್ತಿ!) “ನರಶರದ ಜುಂಜುವೊಳೆಯಲಿ ಜಾರುವನೆ ಜಾಹ್ನವೀಧರ” (ಕಿರಾತಾರ್ಜುನೀಯ ಪ್ರಸಂಗದಲ್ಲಿ) “ಜವನ ಮೀಸೆಯ ಮುರಿದನೋ” (ಉತ್ತರನ ಪೌರುಷದಲ್ಲಿ) “ಅರಿವಿನ ಸೆರಗು ಹಾರಿತು” ರೂಪಕಗಳೊಂದಿಗೆ ಕುಮಾರವ್ಯಾಸನ ಇನ್ನೊಂದು ಸಾಮರ್ಥ್ಯ ಮಾನವ ಪ್ರಕೃತಿಯ ವರ್ಣನೆ… ಕುಮಾರವ್ಯಾಸನ ಪಾತ್ರಗಳು ಕಣ್ಣಿಗೆ ಕಟ್ಟುವಷ್ಟು ಸ್ಪಷ್ಟ. ಅವನ ಎಲ್ಲ ಪಾತ್ರಗಳು ಅವರವರದೇ ರೀತಿಯಲ್ಲಿ ಮಾತನಾಡುತ್ತಾರೆ, ಬೈಯುತ್ತಾರೆ, ನಗುತ್ತಾರೆ, ಹಾಗೂ ಅಳುತ್ತಾರೆ ಸಹ. ಕುಮಾರವ್ಯಾಸ ಅಷ್ಟೇ ಆಳವಾದ ದೈವಭಕ್ತ ಸಹ. ಶ್ರೀ ಕೃಷ್ಣನ ವರ್ಣನೆ ಅವನ ಕಾವ್ಯರಚನೆಯ ಮೂಲೋದ್ದೇಶಗಳಲ್ಲಿ ಒಂದು. (“ತಿಳಿಯ ಹೇಳುವೆ ಕೃ‍ಷ್ಣ ಕಥೆಯನು”) ಅವನ ಮಹಾಭಾರತ ಕಥೆ ಕೃಷ್ಣನ ಸುತ್ತಲೂ ಸುತ್ತುತ್ತದೆ. ಕುಮಾರವ್ಯಾಸ ಕೃಷ್ಣನ ಭಕ್ತ. ಮಹಾಭಾರತದ ಹದಿನೆಂಟು ಪರ್ವಗಳಲ್ಲಿ ಹತ್ತರ (ಗದಾಪರ್ವ) ವರೆಗೆ. ಬರೆದು ದುರ್ಯೋಧನನ ಅವಸಾನದ ನಂತರ, ಕುಮಾರವ್ಯಾಸನು ಮುಂದೆ ಸಂಕ್ಷಿಪ್ತವಾಗಿ, ಶ್ರೀಕೃಷ್ಣನು ಧರ್ಮರಾಜನಿಗೆ ಪಟ್ಟಾಭಿಷೇಕವನ್ನು ಮಾಡಿಸಿ ದ್ವಾರಕೆಗೆ ಹಿಂದಿರುಗುವವರೆಗೆ ಬರೆದಿದ್ದಾನೆ… ಕುಮಾರವ್ಯಾಸನ ಪ್ರತಿಭೆಗೆ ಕನ್ನಡಿಯಾಗಿ ಹಿಡಿದ ಕುವೆಂಪುರವರ ಈ ಸಾಲುಗಳನ್ನು ನೋಡಿ– “ಕುಮಾರ ವ್ಯಾಸನು ಹಾಡಿದನೆಂದರೆ ಕಲಿಯುಗ ದ್ವಾಪರವಾಗುವುದು ಭಾರತ ಕಣ್ಣಲಿ ಕುಣಿವುದು! ಮೈಯಲಿ ಮಿಂಚಿನ ಹೊಳೆ ತುಳುಕಾಡುವುದು!” ಕುಮಾರವ್ಯಾಸನ ಇನ್ನೊಂದು ಕೃತಿ ಐರಾವತ. ಇದು ಅಷ್ಟಾಗಿ ಪ್ರಸಿದ್ಧವಾಗಿಲ್ಲ… ಕುಮಾರವ್ಯಾಸ ಕನ್ನಡ ಸಾಹಿತ್ಯದ ಬೆಳವಣಿಗೆಯ ಮೇಲೆ ಬಹಳಷ್ಟು ಪ್ರಭಾವ ಬೀರಿದ್ದಾನೆ. ಕುಮಾರವ್ಯಾಸ ಭಾರತವನ್ನು ಇಂದಿಗೂ ಸಹ ಕರ್ನಾಟಕದಲ್ಲಿ ಓದಲಾಗುತ್ತದೆ, ವ್ಯಾಖ್ಯಾನ ಮಾಡಲಾಗುತ್ತದೆ. ಕುಮಾರವ್ಯಾಸ ಭಾರತವನ್ನು ಓದುವ ಒಂದು ವಿಶಿಷ್ಟ ಶೈಲಿಯಾದ ಗಮಕ ಕಲೆ ಸಾಕಷ್ಟು ಪ್ರಸಿದ್ಧವಾಗಿದೆ… “ಹಲಗೆ ಬಳಪವ ಪಿಡಿಯದೊಂದ ಗ್ಗಳಿಕೆ ಪದವಿಟ್ಟಳುಪದೊಂದ ಗ್ಗಳಿಕೆ ಪರರೊಡ್ಡವದ ರೀತಿಯ ಕೊಳ್ಳದಗ್ಗಳಿಕೆ ಬಳಸಿ ಬರೆಯಲು ಕಂಠಪತ್ರದ ವುಲುಹುಗೆಡದಗ್ಗಳಿಕೆಯೆಂಬೀ ಬಲುಹು ವೀರನಾರಾಯಣನ ಕಿಂಕರಗೆ” “ವೀರನಾರಾಯಣನೆ ಕವಿ ಲಿಪಿ ಕಾರ ಕುಮಾರವ್ಯಾಸ ಕೇಳುವ ಸೂರಿಗಳು ಸನಕಾದಿಗಳು ಜಂಗಮ ಜನಾರ್ಧನರು ಚಾರು ಕವಿತೆಯ ಬಳಕೆಯಲ್ಲ ವಿ ಚಾರಿಸುವಡಳವಲ್ಲ ಚಿತ್ತವ ಧಾರು ಹೋ ಸರ್ವಜ್ಞರಾದರು ಸಲುಗೆ ಬಿನ್ನಪವ” ಕುಮಾರವ್ಯಾಸನು ತನ್ನ ಕಾವ್ಯದಲ್ಲಿ ಕೆಲವು ಒಗಟು ಪದ್ಯಗಳನ್ನು ಬಳಸಿದ್ದಾನೆ. ಅವಕ್ಕೆ ಮಂಡಿಗೆಗಳೆಂದು ಕರೆಯುತ್ತಾರೆ ಅವು ವ್ಯಾಖ್ಯಾನ ಮಾಡುವವರಿಲ್ಲದಿದ್ದರೆ ಅರ್ಥವಾಗುವುದು ಕಷ್ಟ..! ************

ಕುಮಾರವ್ಯಾಸ ಜಯಂತಿ Read Post »

You cannot copy content of this page

Scroll to Top