ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಪ್ರಸ್ತುತ

16ನೇಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನ ಕಲ್ಕುಳಿ ವಿಠಲ ಹೆಗಡೆಯವರ ಅಧ್ಯಕ್ಷ ಬಾಷಣ [15:50, 1/10/2020] H C. 2: ನಮ್ಮ ಶೃಂಗೇರಿಯ ಆದಿಕವಿ ಬಾಹುಬಲಿಯನ್ನು ಸ್ಮರಿಸುತ್ತಾ ನನ್ನ ಭಾಷಣವನ್ನು ಪ್ರಾರಂಭಿಸುತ್ತಿದ್ದೇನೆ. ಜಿಲ್ಲಾ ೧೬ನೇ ಕನ್ನಡ ಸಾ ಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪದವಿಯ ಈ ಗೌರವವನ್ನು ನಾನು ಬಯಸಿರಲಿಲ್ಲ; ನಿರೀಕ್ಷಿಸಿಯೂ ಇರಲಿಲ್ಲ. ಆದರೂ ನೀವೆಲ್ಲರೂ ಪ್ರೀತಿಯಿಂದ ಈ ಗೌರವ ನೀಡಿದ್ದೀರಿ. ಇದಕ್ಕಾಗಿ ನಾನು ನಿಮಗೆಲ್ಲರಿಗೂ ಅಭಾರಿಯಾಗಿದ್ದೇನೆ.. ನಾನು ಈ ಮೊದಲು ಸ್ಮರಿಸಿದ ಬಾಹುಬಲಿ ಎಂಬ ಜೈನ ಕವಿಯು, ಶೃಂಗೇರಿಯೂ ಆಡಳಿತಕ್ಕೊಳಪಟ್ಟಿದ್ದ ಕಾರ್ಕಳದ ದೊರೆ ಭೈರವೇಂದ್ರನ ಆಸ್ಥಾನದಲ್ಲಿ ಕವಿಯಾಗಿದ್ದನೆಂದು ಇತಿಹಾಸ ಹೇಳುತ್ತದೆ. ಈತನ ಗ್ರಂಥ ‘ನಾಗಕುಮಾರ ಚರಿತೆ’ಯಲ್ಲಿ ಮುಖ್ಯವಾಗಿ ಕರ್ಮಮಾರ್ಗದ ಪ್ರಸ್ತಾಪ ಬರುತ್ತದೆ. ನನ್ನದೂ ಕರ್ಮಮಾರ್ಗವೇ. ನಮ್ಮ ನೆಲ, ಜಲ ಮತ್ತು ನಮ್ಮ ಜನರಿಗೆ ಸರ್ಕಾರದಿಂದಲೇ ಆಗಲಿ, ಇನ್ಯಾರಿಂದಲೇ ಆಗಲಿ ಸಂಕಷ್ಟ ಬಂದಾಗಲೆ ಧ್ವನಿ ಎತ್ತುವ ಕಾಯಕ ಮಾಡಿದ್ದೇನೆ. ಅಗತ್ಯ ಬಿದ್ದಾಗ ಹೋರಾಟಕ್ಕಿಳಿದಿದ್ದೇನೆ. ಇದು ನನ್ನ ಕರ್ತವ್ಯವಾಗಿದೆ. ಈ ಅಧ್ಯ ಕ್ಷ ಸ್ಥಾನವು ಈ ಹಿಂದಿನ ನನ್ನೆ ಹೋರಾಟಕ್ಕೆ ಸಂದ ಗೌರವ ಎಂದು ಭಾವಿಸಿ ದ್ದೇನೆ . ನನ್ನ ಹೋರಾಟದ ಅನುಭವ ಮತ್ತು ಚಿಂತನೆಗಳು ನನ್ನ ಕೃತಿ, ಪ್ರಬಂಧ, ಲೇಖನಗಳಲ್ಲಿ ಅಭಿವ್ಯಕ್ತಗೊಂಡಿದ್ದು, ಅವೇ ಈ ವೇದಿಕೆಯನ್ನು ತಮ್ಮೆಲ್ಲರ ಅಭಿಮಾನದ ಮೇರೆಗೆ ದೊರಕಿಸಿಕೊಟ್ಟಿತ್ತೆಂದು ಕೊಳ್ಳುತ್ತೇನೆ. ನನ್ನನ್ನು ಆಯ್ಕೆಮಾಡಿದ ಜಿಲ್ಲ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯ ಕ್ಷರು, ಪದಾಧಿಕಾರಿಗಳಿಗೆ, ಅಭಿಮಾನಿಗಳಿಗೆ, ಸ್ನೇಹಿತರಿಗೆ, ಸಮಸ್ತರಿಗೆ ಮೊದಲಿಗೆ ಅಂತರಾಳದ ನಮಸ್ಕಾರ ತಿಳಿಸುತ್ತೇನೆ. ಶೃಂಗೇರಿ ಎಂದರೆ ಹಾವು ಗರ್ಭಿಣಿ ಕಪ್ಪೆಗೆ ನೆರಳು ನೀಡಿದ ಜಾಗ. ಸೌಹಾರ್ದತೆಯ ಪರಂಪರೆಗೆ ಇದಕ್ಕಿಂತ ದೊಡ್ಡ ಉದಾಹರಣೆ ನನಗಂತೂ ಸಿಕ್ಕಿಲ್ಲ. ಈ ಕಾರಣದಿಂದ ನನಗೆ ನನ್ನೂರಿನ ಬಗ್ಗೆ ಹೆಮ್ಮೆ ಎಲ್ಲರಿಗಿಂತಲೂ ಒಂದು ಹಿಡಿ ಹೆಚ್ಚು. ಇಂತಹ ನನ್ನೂರಿನಲ್ಲಿ ನಡೆಯುತ್ತಿರುವ ಈ ಕನ್ನಡ ಹಬ್ಬದಲ್ಲಿ ಈ ಗೌರವ ಪಡೆಯುತ್ತಿರುವುದರಿಂದ ಆಗುತ್ತಿರುವ ಸಂತೋಷವನ್ನು ಪದಗಳಲ್ಲಿ ಹೇಳಲಾರೆ. ಪ್ರಿಯ ಬಂಧುಗಳೇ, ಇದೊಂದು ಸಾಹಿತ್ಯ ಸಮ್ಮೇಳನ ಎಂಬುದಕ್ಕಿಂತ ಕನ್ನಡಿಗರ ಸ್ವಾಭಿಮಾನದ ಸಮಾವೇಶವಾಗಿ ಇತಿಹಾಸದಲ್ಲಿ ದಾಖಲಾಗಲಿದೆ. ಇದು ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನವಾಗಿದ್ದರೂ, ಬುದ್ದಿಗೇಡಿಗಳಿಂದಾಗಿ ಅಖಿಲ ಕರ್ನಾಟಕ ಮಟ್ಟದಲ್ಲಿ ಸುದ್ದಿ ಮಾಡಿ ಪ್ರಚಾರ ಪಡೆದಿದೆ. ಎಷ್ಟೇ ಅಡೆ-ತಡೆಗಳು ಎದುರಾದರೂ ಇದರ ಯಶಸ್ಸಿಗಾಗಿ ಹಲವಾರು ಕನ್ನಡ ಕಾರ್ಯಕರ್ತರು ಹಗಲಿರುಳು ಶ್ರಮಿಸಿ ದ್ದಾರೆ. ಅನೇಕರು ತಮ್ಮ ಕೈಯಲ್ಲಾದಷ್ಟು ಆರ್ಥಿಕ ನೆರವು ನೀಡಿದ್ದಾರೆ. ಆ ಮೂಲಕ ಕನ್ನಡಿಗರ ಸ್ವಾಭಿಮಾನಕ್ಕೆ ಎಸೆದ ಸವಾಲನ್ನು ದಿಟ್ಟವಾಗಿ ಎದುರಿಸಿದ್ದಾರೆ. ಇದು ನನ್ನಲ್ಲಿ ಹೋರಾಟದ ಕಾವನ್ನು ಇನ್ನಷ್ಟು ಹೆಚ್ಚಿಸಿದೆ ಎಂದಷ್ಟೇ ನಾನು ಈ ಸಂದರ್ಭದಲ್ಲಿ ಹೇಳಬ ಲ್ಲೆ. ನನ್ನನ್ನು ಈ ಸಮ್ಮೇಳನದ ಅಧ್ಯ ಕ್ಷ ರಾಗಿ ಆಯ್ಕೆ ಮಾಡಲಾಗಿದೆ ಎಂದು ಜಿ ಕಸಾಪ ಅಧ್ಯ ಕ್ಷ ರು ಮಾಹಿತಿ ನೀಡಿದ ಕೂಡಲೇ ನನ್ನ ನೆನಪಿಗೆ ಬಂದವರು, ಪರಂಪರೆಯ ಕಥೆಗಳನ್ನು ಮತ್ತು ಜೀವನಾನುಭವದ ಸಂಗತಿಗಳನ್ನು ಧಾರೆ ಎರೆದು ಪೋಷಿಸಿದ ನನ್ನ ಅಪ್ಪ-ಅಮ್ಮ, ಆನಂತರ ನನ್ನನ್ನು ಬೆಳೆಸಿದ ಪ್ರಗತಿಪರ ಚಳವಳಿ ಗಳು, ಸಾರ್ವಜನಿಕ ಬದುಕಿನ ಬವಣೆಗಳ ಮುಖಾಮುಖಿಗೆ ಬೆನ್ನೆಲುಬಾಗಿ ನಿಂತ ಕುಟುಂಬವರ್ಗ ಮತ್ತು ನನ್ನ ಸಂಗಾತಿಗಳು, ಸ್ನೇಹಿತರು. ಈ ಎಲ್ಲರಿಗೂ ನನ್ನ ನಮನಗಳು ಸಲ್ಲುತ್ತವೆ. ಈ ಆತಂಕದ ಸಂದರ್ಭದಲ್ಲಿಯೂ ದೂರ ದೂರದ ಊರಿನಿಂದ ಬಂದಿರುವ ಮತ್ತು ಇಲ್ಲಿಯ ಕನ್ನಡಾಭಿಮಾನಿಗಳಿಗೆ ನಾನು ಋಣಿ. ಏನನ್ನಾದರೂ ಬರೆದು ಓದಬೇಕೆಂದರೆ ನನಗೆ ಎಲ್ಲಿಲ್ಲದ ಹಿಂಜರಿಕೆ. ನಾನೆಂದೂ ಜನರೆದುರು ನಿಂತನಿಲುವಿನಲ್ಲಿ ಆಲೋಚಿಸುತ್ತಲೇ ಹೊಳೆದಂತೆ ಮಾತಾಡುವವನು. ಇಲ್ಲಿಯೂ ಹಾಗೆ ಮಾಡಬೇಕೆಂಬ ಆಸೆ ನನ್ನದಾಗಿತ್ತು. ಆದರೆ ಸತ್‌ಸಂಪ್ರದಾಯವನ್ನು ಮೀರಬಾರದೆಂಬ ಕಾರಣಕ್ಕೆ ಭಾಷಣವನ್ನು ಓದುತ್ತಿ ದ್ದೇನೆ. ಭಾಷಣ ಮಾಡುವುದಕ್ಕಿಂತ ಭಾಷಣ ಬರೆಯುವುದು ಹೆಚ್ಚು ತ್ರಾಸದ ಕೆಲಸವೆಂಬುದು ನನಗೆ ಕಳೆದ ಒಂದು ತಿಂಗಳಿನಲ್ಲಿ ಅರಿವಾಗಿದೆ. ನಾನು ಈ ಭಾಷಣವನ್ನು ನನ್ನೊಳಗೇ ಅಂದುಕೊಳ್ಳುತ್ತ, ತಿದ್ದಿಕೊಳ್ಳುತ್ತ, ಆಡಬೇಕೆಂದು ಅನ್ನಿಸುವ ಈ ನನ್ನ ಮಾತುಗಳು ಅವಶ್ಯಕವೇ? ಈಗಿನ ವಿದ್ಯಮಾನದಲ್ಲಿ ಎಷ್ಟು ಪ್ರಸ್ತುತವಾದೀತು ಎಂದು ಆಲೋಚಿಸುತ್ತ, ವಿಶ್ಲೇಷಿಸುತ್ತ ಕಾಲಕಳೆದಿ ದ್ದೇನೆ. ಅಧ್ಯ ಕ್ಷ ನಾಗಿ ಆಯ್ಕೆಯಾದದ್ದನ್ನು ತಿಳಿದ ದಿನದಿಂದಲೂ ಈಗ ಇಲ್ಲಿ ನಿಮ್ಮೆದುರು ಮಾತಾಡಲು ನಿಂತಿರುವ ಕ್ಷ ಣವನ್ನು ಆತಂಕದಿಂದ ಊಹಿಸಿಕೊಳ್ಳುತ್ತ ಕಳೆದಿ ದ್ದೇನೆ. ಈ ಹೊತ್ತಲ್ಲಿ ನಿಮ್ಮ ಮುಂದೆ ಆಡಲೇ ಬೇಕಾಗಿರುವ ಹಲವು ಮಾತುಗಳು ನನ್ನ ಮುಂದಿವೆ. ಅವುಗಳಲ್ಲಿ ಕೆಲವು ವಿಷಯಗಳನ್ನು ಮಾತ್ರ ನಾನಿಲ್ಲಿ ಪ್ರಸ್ತಾಪಿಸುತ್ತೇನೆ. ಆತ್ಮೀಯ ಕನ್ನಡ ಪ್ರೇಮಿಗಳೇ, ಸಾಹಿತ್ಯ ಸಮ್ಮೇಳನಗಳು ಕನ್ನಡ ನುಡಿ ಜಾತ್ರೆಗಳಾಗಿವೆಯೇ ಹೊರತು, ಕನ್ನಡಿಗರ ಧ್ವನಿಯಾದ ಉದಾಹರಣೆಗಳು ಬಹಳ ಕಡಿಮೆ. ಇನ್ನು ಸಮ್ಮೆಳನಾಧ್ಯ ಕ್ಷರ ಭಾಷಣದಲ್ಲಿನ ವಿಷಯಗಳನ್ನು ಮುಂದಿಟ್ಟುಕೊಂಡು ಗಂಭೀರ ಚರ್ಚೆ ನಡೆಸಿದ್ದಿಲ್ಲ. ಅಧ್ಯಕ್ಷೀಯ ಭಾಷಣದಲ್ಲಿನ ಬೇಡಿಕೆ, ಅಹವಾಲುಗಳಾಗಲೀ, ಅಥವಾ ಸಾವಿರಾರು ಕನ್ನಡಿಗರ ಸಮ್ಮುಖದಲ್ಲಿ ತೀರ್ಮಾನಿಸಿದ ನಿರ್ಣಯಗಳಾಗಲೀ, ಜಾರಿಗೆ ಬಂದಿದ್ದು, ನಾಡು-ನುಡಿಯ ಸಮಸ್ಯೆಗಳು ಬಗೆಹರಿದಿದ್ದು ಅಪರೂಪ. ನನ್ನ ಹೋರಾಟದ ಅನುಭವದಲ್ಲಿ ಹೇಳುವುದಾದರೆ ನಾನು ತುಮಕೂರಿನಲ್ಲಿ ಮತ್ತು ಶಿವಮೊಗ್ಗದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ, ರಾಜ್ಯ ಮತ್ತು ಮಲೆನಾಡಿನ ವಿಷಯಗಳನ್ನು ಪ್ರಸ್ತಾಪಿಸಿ ದ್ದೇನೆ. ಇವುಗಳನ್ನು ಸಮ್ಮೇಳನದ ನಿರ್ಣಯಗಳಲ್ಲಿ ಸೇರಿಸಬೇಕೆಂದು ಒತ್ತಾಯ ಮಾಡಿ, ಪ್ರತಿಭಟನೆ ಕೂಡ ಮಾಡಿ, ಅದರಲ್ಲಿ ಯಶಸ್ವಿಯೂ ಆಗಿ ದ್ದೇನೆ. ಆದರೆ ಮುಖ್ಯಮಂತ್ರಿಗಳೇ ಭರವಸೆ ನೀಡಿದ್ದರೂ ಈ ನಿರ್ಣಯಗಳು ಕಾರ್ಯರೂಪಕ್ಕೆ ಬಂದಿಲ್ಲವೆಂಬ ಬಹುದೊಡ್ಡ ವಿಷಾದ ನನ್ನಲ್ಲಿದೆ. ಅಂದ ಮಾತ್ರಕ್ಕೆ ಈ ರೀತಿಯ ಸಮ್ಮೇಳನದಲ್ಲಿ ನ್ಯಾಯಯುತ ಬೇಡಿಕೆಗಳನ್ನು, ಸಮಾಜದ ಸಂಕಟಗಳನ್ನು ಪ್ರಸ್ತಾಪಿಸುವುದು ವ್ಯರ್ಥವೆಂಬುದು ನನ್ನ ಅಭಿಪ್ರಾಯವಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ತಮ್ಮ ಅಹವಾಲನ್ನು, ಬೇಡಿಕೆಗಳನ್ನು ಸಲ್ಲಿಸುವುದು ಸಂವಿಧಾನಾತ್ಮಕ ಹಕ್ಕು. ಜನ ಜಾಗೃತರಾದರೆ ಸರ್ಕಾರಗಳು ಇವುಗಳಿಗೆ ಬೆಲೆ ನೀಡಲೇಬೇಕಾಗುತ್ತದೆ. ಆ ದೃಷ್ಟಿಯಿಂದ ಇಂದು ನಾನಿಲ್ಲಿ ಪ್ರಸ್ತಾಪಿಸುವ ವಿಷಯಗಳು ನಾವೆಲ್ಲರೂ ಸೇರಿ ನೀಡುತ್ತಿರುವ ಆದೇಶವೆಂದೂ, ಇದು ನನ್ನ ಜವಾಬ್ದಾರಿಯೂ ಹೌದೆಂದು ತಿಳಿದು ಈ ಭಾಷಣವನ್ನು ಮುಂದುವರೆಸುತ್ತೇನೆ. ಈ ಸಾಹಿತ್ಯ ಸಮ್ಮೇಳನದಲ್ಲಿ ನಾನು ವಿನಮ್ರವಾಗಿ ಒಪ್ಪಿಕೊಳ್ಳುವುದೆಂದರೆ ನಾನು ಮೂಲತಃ ಸಾಹಿತ್ಯವನ್ನು ಶಾಸ್ತ್ರೀಯವಾಗಿ ಕಲಿತವನಲ್ಲ. ತಮಗೆಲ್ಲರಿಗೂ ಗೊತ್ತಿರುವಂತೆ ನಾನು ಪರಿಸರ ಮತ್ತು ಸಾಮಾಜಿಕ ಹೋರಾಟದ ಕಾರ್ಯಕರ್ತ. ಕಳೆದ ಭರ್ತಿ ನಾಲ್ಕು ದಶಕಗಳಿಂದ ಒಂದಿಂದು ಹೋರಾಟಗಳಲ್ಲಿ ತೊಡಗಿಸಿಕೊಂಡು ಬಂದಿದ್ದೇನೆ. ಹಾಗೆ ಹೇಳುವುದಾದರೆ ಯಾರಾದರೂ ನನ್ನ ಇತ್ತೀಚಿನ ಕೃತಿಗಳನ್ನು ಓದಿ ನನ್ನನ್ನು ಸಾಹಿತಿ ಎಂದು ಗುರುತಿಸುವುದಕ್ಕಿಂತ ಹೋರಾಟಗಾರನೆಂದರೆ ನನಗೆ ಹೆಚ್ಚು ಖುಷಿಯಾಗುತ್ತದೆ. ವಾಸ್ತವವೆಂದರೆ ರಾಜ್ಯದಾದ್ಯಂತ ನಡೆದ ಹೋರಾಟಗಳಲ್ಲಿ ಭಾಗವಹಿಸಿದ್ದರಿಂದ ನನಗೆ ಸಿಕ್ಕ ಸ್ನೇಹಿತರು, ಅಭಿಮಾನಿಗಳ ಬೆಂಬಲವೆಷ್ಟೋ ಅಷ್ಟೇ ನನ್ನ ಕೃತಿ ‘ಮಂಗನಬ್ಯಾಟೆ’ಗೂ ವಿಸ್ತತೃತವಾದ ಸ್ಪಂದನೆ ಸಿಕ್ಕಿದೆ. ಇದರ ಅರಿವೂ ನನಗಿದೆ. ಹೋರಾಟ ಸಾಹಿತ್ಯದಿಂದ ಹೊರತಲ್ಲ. ಸಾಹಿತ್ಯವೂ ಹೋರಾಟದಿಂದ ಹೊರತಲ್ಲ. ಅವು ಒಂದಕ್ಕೊಂದು ಪೂರಕವೇ. ಸೈದ್ಧಾಂತಿಕ ಪ್ರೇರಣೆಯಿಲ್ಲದ ಹೋರಾಟಗಳಾಗಲೀ; ಸಾಮಾಜಿಕ ಬದ್ಧತೆಯಿಲ್ಲದ ಸಾಹಿತ್ಯವಾಗಲೀ- ಎರಡೂ ಜೊಳ್ಳು. ಜನಸಮಾನ್ಯರ ಸಂಕಟಗಳನ್ನು ಪರಿಹರಿಸುವಲ್ಲಿ ಹೋರಾಟಗಳಿಗೆ ಎಷ್ಟು ಜವಾಬ್ದಾರಿ ಇರುತ್ತದೋ ಅಷ್ಟೇ ಜವಾಬ್ದಾರಿ ಸಾಹಿತ್ಯಕ್ಕೂ ಇರುತ್ತದೆ. ಮೌಲ್ಯಯುತ ಸಾಹಿತ್ಯ ಸಾಮಾಜಿಕ ಬದ್ಧತೆಯಿಂದ ಕೂಡಿರಬೇಕಾಗುತ್ತದೆ. ಈ ಬದ್ಧತೆಯ ವಿಷಯ ಬಂದಾಗ ನನ್ನ ಆತ್ಮೀಯರಾದ, ಖ್ಯಾತ ಚಿಂತಕ ಡಾ. ಬರಗೂರು ರಾಮಚಂದ್ರಪ್ಪ ಅವರ ಮಾತು ನೆನಪಿಗೆ ಬರುತ್ತದೆ, ಅವರು ‘ಸಾಹಿತ್ಯ ಮತ್ತು ಬದ್ಧತೆ’ ಲೇಖನದಲ್ಲಿ ಹೀಗೆ ಬರೆಯುತ್ತಾರೆ; ‘ಸಾಮಾಜಿಕ ಕಳಕಳಿಯ ಹಿನ್ನೆಲೆಯುಳ್ಳ ಬದ್ಧತೆ ಈ ಕಾಲದ ಅಗತ್ಯ. ಚರಿತ್ರೆ ಇಚ್ಛಿಸುವ ಸ್ಥಿತಿಯೆಂದರೆ ಸರಿಯಾದೀತು’. ಸಾಹಿತ್ಯ ಒಣ ಹರಟೆ, ಪುಂಡರ ಗೋಷ್ಠಿಯಲ್ಲ. ಅದು ಪ್ರತಿಪಾದಿಸುವುದೇನೆಂದರೆ ಮನುಷ್ಯನನ್ನು ಮನುಷ್ಯನನ್ನಾಗಿ ಕಾಣುವುದು, ಮನಸ್ಸನ್ನು ಅರಳಿಸುವುದು. ಅವನಲ್ಲಿ ಹುದುಗಿರುವ ದುರಾಸೆ, ಕ್ರೌರ್ಯ, ಅಸೂಯೆ, ಆಕ್ರಮಣ ಪ್ರವೃತ್ತಿಗಳನ್ನು ತೊಡೆದು ಉದಾತ್ತತೆಯಿಂದ, ಸುಂದರ ಸುಖಮಯ ನೆಮ್ಮದಿಯನ್ನು ಅಭಿವ್ಯಕ್ತಿಸುವುದು. ಹಾಗೆ ನೋಡಿದರೆ ಈ ಮನುಷ್ಯ ಸಮಾಜವನ್ನು ಆಳುತ್ತಿರುವುದು ಸಾಹಿತ್ಯದ ಮೂಲಕವೇ. ಗೀತೆ, ಬೈಬಲ, ಖುರಾನ್ ನಂತಹ ಮಹಾದ್ ಧರ್ಮಗ್ರಂಥಗಳು ಕೋಟಿ ಕೋಟಿ ಜನರನ್ನು ನಿಯಂತ್ರಿಸುತ್ತಿವೆ. ಒಂದು ಕಾಲದಲ್ಲಿ ಪ್ರಪಂಚದ ಮೂರನೇ ಎರಡರಷ್ಟು ಜನರನ್ನು ಮಾನವತಾವಾದಿ ಕಾರ್ಲ್ ಮಾರ್ಕ್ಸ್ ಸಮಾಜವಾದ ಸಿದ್ಧತಾಂತದ ಕಮ್ಯುನಿಸಂ (ಪ್ರಣಾಳಿಕೆ) ನಿಯಂತ್ರಿಸುತ್ತಿತ್ತು. ಧರ್ಮ- ಸಿದ್ಧಾಂತಗಳು ತಮ್ಮ ತಮ್ಮ ಅನುಯಾಯಿಗಳನ್ನಷ್ಟೇ ನಿಯಂತ್ರಿಸಿದರೆ ಸಾಹಿತ್ಯ ಸಮಾಜದ ಎಲ್ಲರೂ ಮಾನವಂತರಾಗಿ ಬದುಕಲು ಸಹಾಯ ಮಾಡುತ್ತದೆ. ಹುಟ್ಟಿದವರಿಗೆ ಸಾವಿದೆ; ಆದರೆ ಬರೆದ ಸಾಹಿತ್ಯಕ್ಕೆಂದೂ ಅಳಿವಿಲ್ಲ ಎಂಬ ಮಾತಿದೆ. ಈ ಮಾತಿಗೆ ಪುಷ್ಟಿದಾಯಕವಾದ ವಿಚಾರವೆಂದರೆ ಯುಗದಕವಿ, ಜಗದ ಕವಿ, ಮಲೆನಾಡಿನ ಕವಿ, ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯ. ಕನ್ನಡ ಜೀವಂತವಿರುವವರೆಗೂ ನಮ್ಮ ಈ ಹೆಮ್ಮೆಯ ಕವಿಯ ಸಾಹಿತ್ಯ ಜೀವಂತವಾಗಿರುತ್ತದೆ. ಕುವೆಂಪು ಎಂದರೆ ಮಲೆನಾಡು. ಅವರು ಈ ನಮ್ಮ ಮಲೆನಾಡಿನ ಪರಿಸರವನ್ನು ರಮ್ಯವಾಗಿ ವರ್ಣಿಸಿ ವಿಜೃಂಭಿಸಿದರು. ‘ಹಕ್ಕಿ ಬಳಗ ಸುತ್ತ ಕೂಡಿ ಬೈಗಂ ಬೆಳಗು ಹಾಡಿ ಹಾಡಿ ಮಲೆನಾಡ ಸಗ್ಗ ಮಾಡಿ’ ಎನ್ನುತ್ತಾ ಅವರು ಬರೆದ ಕವಿತೆ-ಕಾದಂಬರಿಗಳು ನನ್ನನ್ನು, ನನ್ನಂತಹ ಅನೇಕರನ್ನು ಪರಿಸರವಾದಿಯಾಗಿ ರೂಪಿಸಿದೆ ಎಂದರೆ ಸಾಹಿತ್ಯದ ಶಕ್ತಿ ಅಪೂರ್ವವಾದದ್ದು ಎಂದೆನಿಸುವುದಿಲ್ಲವೇ? ನಾನು ಯಾವುದೇ ಸಾಹಿತ್ಯದ ಕೃತಿಯನ್ನಾದರೂ ವ್ಯಸನಕ್ಕಾಗಿಮಾತ್ರ ಓದುವುದಿಲ್ಲ, ಸಂಶೋಧನಾ ದೃಷ್ಟಿಯಿಂದಲೇ ಅಭ್ಯಾಸ ಮಾಡುತ್ತೇನೆ. ಆದ್ದರಿಂದ ನಾನು ಎಂದೆಂದೂ ಸಾಹಿತ್ಯದ ವಿದ್ಯಾರ್ಥಿಯೇ. ನನ್ನ ಹಾಗೂ ನನ್ನಂತಹ ಕೋಟ್ಯಂತರ ಜನರ ಅರಿವನ್ನು ಹೆಚ್ಚಿಸಿದ್ದು, ಹೆಚ್ಚಿಸುತ್ತಿರುವುದು ನಮ್ಮ ಭಾಷೆ ಕನ್ನಡ. ಕನ್ನಡ ಭಾಷೆಯೇ ನಮ್ಮ ಆಸ್ತಿ. ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಈ ಭಾಷೆಯ ಪರಂಪರೆಯೇ ಸೌಹಾದತೆ. ಹತ್ತನೇ ಶತಮಾನದಲ್ಲಿ ಆದಿಕವಿ ಪಂಪ ‘ಮಾನವ ಜಾತಿ ತಾನೊಂದೇ ವಲಂ’ ಎಂದು ಮಾನವತೆಯನ್ನು ಸಾರಿದ. ಸರ್ವಜೀವಿಗಳ ಆತ್ಮದಲ್ಲೂ ಪರಮಾತ್ಮನಿದ್ದಾನೆಂದು ಸಾರಿದ ಶಂಕರಾಚಾರ್ಯರು, ಚಾಂಡಾಲನಲ್ಲಿ ಈಶ್ವರನನ್ನು ಕಂಡರು. ಕನ್ನಡ ನೆಲದ, ವಿಶ್ವಮಾನ್ಯ ಧಾರ್ಮಿಕ ಹೋರಾಟಗಾರ ಬಸವಣ್ಣ ಮನುಷ್ಯ ಮನುಷ್ಯರಲ್ಲಿ ಬೇಧವು ಸಲ್ಲದು ಎನ್ನುವುದನ್ನು ಸರಳವಾಗಿ ಹೇಳಿದ್ದು ಹೀಗೆ; ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ. ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ. ಕೂಡಲಸಂಗಮದೇವಾ ನಿಮ್ಮ ಮನೆಯ ಮಗನೆಂದೆನಿಸಯ್ಯಾ ಇಂತಹ ಭವ್ಯ ಪರಂಪರೆ ಕನ್ನಡಕ್ಕಿದೆ. ಕುವೆಂಪು ಅವರ ವಿಶ್ವದೃಷ್ಠಿ, ವಿಶ್ವಮಾನವ ಸಂದೇಶದ ‘ಅನಿಕೇತನ’ ಕವನ ನಮ್ಮೆಲ್ಲರ ಮಂತ್ರವಾಗಬೇಕು. ನೂರು ಮತದ ಹೊಟ್ಟ ತೂರಿ, ಎಲ್ಲ ತತ್ವವೆಲ್ಲ ಮೀರಿ, ನಿರ್ದಿಗಂತವಾಗಿ ಏರಿ, ಓ ನನ್ನ ಚೇತನ, ಆಗು ನೀ ಅನಿಕೇತನ ಈ ಕವನದ ಸಾಲುಗಳು ನಮಗೆ ಬೇಕಾದುದು ಆ ಮತ, ಈ ಮತ ಅಲ್ಲ, ಮನುಜಮತ. ಆ ಪಥ ಈ ಪಥ ಅಲ್ಲ, ವಿಶ್ವಪಥ. ಆ ಒಬ್ಬರ ಈ ಒಬ್ಬರ ಉದಯ ಮಾತ್ರವಲ್ಲ. ಸರ್ವದ ಸರ್ವಸ್ತರ ಉದಯ ಎಂದು ಸಾರುತ್ತವೆ. ಇದು ಎಂದೆಂದಿಗೂ ಸರ್ವಕಾಲಿಕ ಪ್ರೇರಣೆಯಾಗಿದೆ. “ಕುವೆಂಪು ಅವರು ವಿಶ್ವಮಾನವನಾಗಲು ನಾವು ಸಾಧಿಸಲೇಬೇಕಾದ ಮೂಲಭೂತ ಸ್ವರೂಪದ ತತ್ತ್ವ ಪ್ರಣಾಳಿಕೆಯನ್ನು ಈ ಕವನದಲ್ಲಿ ಕೊಟ್ಟಿ ದ್ದಾರೆ” ಎಂದು ನಮ್ಮ ತಾಲೂಕಿನವರೇ ಆದ ಖ್ಯಾತ ಕವಿ ಶೃಂಗೇರಿ ವಿದ್ಯಾರಣ್ಯಪುರ ಪರಮೇಶ್ವರ ಭಟ್ಟ (ಎಸ.ವಿ. ಪರಮೇಶ್ವರ ಭಟ್ಟ) ಹೇಳಿರುವುದನ್ನು ನಾನಿಲ್ಲಿ (ಕೃತಿ: ರಸಋಷಿ ಕುವೆಂಪು) ನೆನಪಿಸುತ್ತೇನೆ. ಅರವತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದ ನಮ್ಮ ತಾಲೂಕಿನ ಈ ಹೆಮ್ಮೆಯ ಸಾಹಿತಿಯನ್ನು ಸ್ಮರಿಸುತ್ತೇನೆ. ಕುವೆಂಪು ಅವರು ‘ಹೋಗುವೆನು ನಾ’ ಕವನದಲ್ಲಿ; ಅಲ್ಲಿ ಇಂತಿರಬೇಕು, ಇಂತಿರಬಾರದೆಂಬುವುದಿಲ್ಲವೈ; ಅಲ್ಲಿ ಹೊರೆ ಹೊಣೆಯಿಲ್ಲ; ಶಾಸ್ತ್ರದ ವಿಧಿ ನಿಷೇಧಗಳಿಲ್ಲವೈ; ಜಾತಿಗೀತಿಯ ವೇದಭೇದದ ಕಟ್ಟುಕಟ್ಟಳೆ ನಿಲ್ಲದೈ: ಅಲ್ಲಿ ಪ್ರೀತಿಯೆ ನೀತಿ; ಧರ್ಮಕೆ ಬೇರೆ

ಪ್ರಸ್ತುತ Read Post »

ಕಾವ್ಯಯಾನ

ಕಾವ್ಯಯಾನ

ಸೀರೆಯ ಸಹವಾಸ ತ್ರಿವೇಣಿ ಜಿ.ಹೆಚ್ ಸೀರೆಯ ಸಹ ವಾಸ. ಸೆರಗು ನಿರಿಗೆಗಳ ಸಮೀಕರಿಸಿ ಉಬ್ಬಿದೆದೆ ಕಂಡೂ ಕಾಣಿಸದಂತೆ ಮಣಿಸಿ ನಡುವೆ ‌”ನಡು”ವಿನ ಆಕಾರವ ಅಂದಗಾಣಿಸಿದರೂ ಜಗ್ಗುವ ಬೊಜ್ಜು. ಒಂದೊಂದು ಸೀರೆ ಉಟ್ಟಾಗಲೂ ಮತ್ತೆಷ್ಟೋ ನೆನಪುಗಳ ಕದ ಬಡಿದು ಅಳಿಸಲಾಗದವನ್ನಲ್ಲೇ ಮುಚ್ಚಿಟ್ಟು… ಕಣ್ಣ ಕನಸುಗಳನ್ನೂ ಬೆಚ್ಚಗಿಟ್ಟು… ಜರಿ ಅಂಚಿನ ಸೀರೆ, ಅಲ್ಲಲ್ಲಿ ಸಣ್ಣ ಹೂಬಳ್ಳಿಯಂಚು, ನವಿರು ಭಾವ ಒಲವ ಮೆಲುಕು. ಚಿತ್ತಾಕರ್ಷಕ ಚಿತ್ತಾರ. ಉಟ್ಟು ತೊಟ್ಟು ಸಂಭ್ರಮಿಸಿದ ಆ ಘಳಿಗೆ. ಅಷ್ಟೊಂದು ಸುಲಭವಲ್ಲ ಸೆರಗ ತುದಿಯಲ್ಲಿ ಕನಸು ಕಟ್ಟಿಕೊಂಡೇ ಸಾಗುವುದು, ಅತ್ತಿತ್ತ ಓಲಾಡುವ ನಿರಿಗೆಗಳ ಸಂಭಾಳಿಸುತ್ತಲೇ ನಡೆಯವುದು, ಅಷ್ಟಕ್ಕೇ ಮುಗಿಯುವುದಿಲ್ಲ, ಊಹೂಂ ಸೀರೆಗೊಪ್ಪುವ ರವಿಕೆ, ಕುಚ್ಚು, ಬಿಂದಿ ಫಾಲು, ಕೇಶ ವಿನ್ಯಾಸ , ಪಿನ್ನು, ಚಪ್ಪಲಿ, ಉಫ್ ಒಂದೇ ಎರಡೇ ಸಾಲು ಸಾಲು ಸಾಲದು. ಮೊದಲ ಸಲ ಸೀರೆಯುಟ್ಟು ಮುಗ್ಗರಿಸಿದ್ದು ಅಮ್ಮನ ಕಣ್ಣು ತಪ್ಪಿಸಿ ಕ್ಲಾಸ್ ಮೇಟಿಗೆ ಸೀರೆ ಕೊಟ್ಟದ್ದು ವಾರ್ಡ್ರೋಬಿನ ತುಂಬ ತುಂಬಿರುವ ಥರಾವರಿ ಕಂಡು ತುಟಿಯಲ್ಲಿ ಮಂದಹಾಸ ಮೂಡಿದ್ದು… ಈಗಲೂ ಅಷ್ಟೇ ಅಮ್ಮನ ತಬ್ಬಿದ ಕಂದನಂತೆ ನಿರಿಗೆಗಳು ಅಪ್ಪಿವೆ. ಅದೆಂತಹ ಕಚಗುಳಿ, ಒಳಗೊಳಗೇ ಪುಳಕ. ನಿನ್ನೆಗಳ ಕಳೆದದ್ದು , ನಲ್ಲನ ಜೊತೆಗೆ ಸಾಗಿದ್ದು, ಭ್ರಮೆಯಲ್ಲಿ ತೇಲಿದ್ದು *********

ಕಾವ್ಯಯಾನ Read Post »

ಪುಸ್ತಕ ಸಂಗಾತಿ

ಪುಸ್ತಕ ವಿಮರ್ಶೆ

ವಲಸೆ, ಸಂಘರ್ಷ ಮತ್ತು ಸಮನ್ವಯ ಪುಸ್ತಕ ವಿಮರ್ಶೆ ಪುಸ್ತಕದ ಹೆಸರು: ವಲಸೆ ಸಂಘರ್ಷ ಸಮನ್ವಯ ಲೇಖಕರು: ಪುರುಷೋತ್ತಮ ಬಿಳಿಮಲೆ ಪ್ರಕಟನ ವರ್ಷ: 2019 ಬೆಲೆ: 400 ರೂಪಾಯಿ  ಪ್ರಕಾಶಕರು: ಅಕೃತಿ ಆಶಯ ಪಬ್ಲಿಕೇಶನ್ ಮಂಗಳೂರು ಲೋಕೇಶ ಕುಂಚಡ್ಕ ಡಾ. ಪುರುಷೋತ್ತಮ ಬಿಳಿಮಲೆಯವರ 400 ಪುಟಗಳ ಈ ಕೃತಿಗೆ 1985ರಲ್ಲಿ ಮಂಗಳೂರು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ. ಅಲ್ಪ ಸ್ವಲ್ಪ ಬದಲಾವಣೆಯೊಂದಿಗೆ ಪ್ರಸ್ತುತ ಸಂಶೋಧನ ಕೃತಿಯು ಇದೀಗ ಪ್ರಕಟವಾಗಿದೆ. ಒಮ್ಮೆ ಬರೆದಾದ ಸಂಶೋಧನ ಪ್ರಬಂಧವನ್ನು ಪರಿಷ್ಕರಣೆ ಮಾಡುವುದು ಸುಲಭದ ಕೆಲಸವಲ್ಲ, ಇನ್ನೊಂದು ಪ್ರಬಂಧವನ್ನು ಬರೆದ ಹಾಗೆ ಆಗುತ್ತದೆ. ದೆಹಲಿಯಲ್ಲಿ ಕುಳಿತುಕೊಂಡು ಈ ಕೆಲಸ ಮಾಡಿದ ಡಾ.ಬಿಳಿಮಲೆಯವರ ಸಾಹಸ ಅಭಿನಂದನೀಯವಾಗಿದೆ. ಇವತ್ತು ಪ್ರತಿಯೊಬ್ಬ ಗೌಡರ ಮನೆಯಲ್ಲಿ ಇರಬೇಕಾದ ಪುಸ್ತಕವಿದು. ಮುನ್ನುಡಿಯಲ್ಲಿ ಪ್ರೊ. ವಿವೇಕ ರೈಅವರು ಹೇಳಿದಂತೆ ‘ನಿಚ್ಚಮ್ ಪೊಸತು’ ಎನ್ನುವ ಮಾತಿಗೆತಕ್ಕಂತೆ ಈ ಕೃತಿ ಸಿದ್ದಗೊಂಡಿದೆ. ಪುಸ್ತಕದಲ್ಲಿ ಅನೇಕ ಹಳೆಯ ವಿಚಾರಗಳೂ ಇವೆ, ಹೊಸ ಸಂಗತಿಗಳೂ ಇವೆ. ಈ ನಿಟ್ಟಿನಲ್ಲಿ ‘ಹಳೆ ಬೇರು, ಹೊಸ ಚಿಗುರು ಕೂಡಿರಲು ಮರ ಸೊಬಗು’ ಎಂಬ ಮಾತುಇಲ್ಲಿ ಸಾರ್ಥಕಗೊಂಡಿದೆ. ತಲೆಮಾರುಗಳ ಜೊತೆಗಿನ ನಮ್ಮ ಸಂಬಂಧಗಳನ್ನು ಈ ಕೃತಿಯು ಗಟ್ಟಿಯಾಗಿ ಬೆಸೆಯುತ್ತದೆ. ‘ಮುಂದೇನು?’ ಎನ್ನುವ ಪ್ರಶ್ನೆಗೂ ಪುಸ್ತಕವು ಕೆಲವು ಉತ್ತರಗಳನ್ನು ನೀಡುತ್ತದೆ.  ಒಂದು ಸಮುದಾಯದ ಚರಿತ್ರೆಯನ್ನು ಕಟ್ಟುವ ಸಮಯದಲ್ಲಿ ಅಧ್ಯಯನಕಾರ ಅದನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು ಎನ್ನುವುದಕ್ಕೆ ಇದು ಒಂದು ಮಾದರಿ. ಇಂದು ಒಂದು ದೇಶ, ಒಂದು ಭಾಷೆ, ಒಂದು ಧರ್ಮ, ಒಂದು ಬಾವುಟ ಎಂಬೆಲ್ಲಾ ಮಾತುಗಳು ಕೇಳಿ ಬರುತ್ತಿರುವಾಗ ಪ್ರಸ್ತುತ ಪುಸ್ತಕವು ಗೌಡರು ಮತ್ತು ಅವರಂಥ ಅನೇಕ ಸಣ್ಣ ಸಮುದಾಯಗಳು ಭಾರತವನ್ನು ಹೇಗೆ ಕಟ್ಟಿವೆ ಎಂಬ ಕುರಿತು ನಮ್ಮ ಗಮನವನ್ನು ಸೆಳೆಯುತ್ತದೆ. ಆ ಮೂಲಕ ಸುಳ್ಯದಲ್ಲಿ ಬಹುಸಂಖ್ಯಾತರಾದ ಗೌಡ ಸಮುದಾಯದ ಕುರಿತು ನಡೆಸಿದ ಅಧ್ಯಯನಗಳಲ್ಲಿ ಈ ಕೃತಿ ಮೇರು ಪಂಕ್ತಿಯಲ್ಲಿ ನಿಲ್ಲುವ ಅರ್ಹತೆಯನ್ನು ಪಡೆದುಕೊಂಡಿದೆ. ಲಿಖಿತ ಸಾಮಗ್ರಿಗಳಿಲ್ಲದೇ ಇರುವ ಸಮುದಾಯವೊಂದg Àಚರಿತ್ರೆಯನ್ನು ಕಟ್ಟುವ ಕ್ರಮ ಹೇಗೆ ಎಂದು ಸಂಶೋಧಕರಿಗೆ ತಿಳಿದಿಲ್ಲದಿರುವಾಗ, ಅವರಿಗೆ ಮಾರ್ಗದರ್ಶನ ಮಾಡುವ ರೀತಿಯಲ್ಲಿ ಈ ಪುಸ್ತಕವನ್ನು ಬರೆಯಲಾಗಿದೆ. ಇದು ಸುಲಭದ ಕೆಲಸವೇನೂ ಅಲ್ಲ.  ವಲಸೆ ಸಂಘರ್ಷ ಸಮನ್ವಯಗಳ ಕಥನ ಪುಸ್ತಕದ ಶೀರ್ಷಿಕೆಗೆ ತಕ್ಕಂತೆ, ‘ವಲಸೆ ,ಸಂಘರ್ಷ, ಮತ್ತು ಸಮನ್ವಯ” ಎನ್ನುವ ಪರಿಕಲ್ಪನೆಗಳು ವಿಶಾಲವಾದ ವ್ಯಾಪ್ತಿಯನ್ನು ಹೊಂದಿವೆ. ಈ ಕೃತಿ ಸುಳ್ಯ ಪರಿಸರದ ಗೌಡರ ಚರಿತ್ರೆಯನ್ನು ಕಟ್ಟಿಕೊಡುತ್ತಾ, ಅಸ್ತಿತ್ವ ಮತ್ತು ಅಸ್ಮಿತೆಗಳ ನಡುವೆ ಒಂದು ರೀತಿಯಲ್ಲಿ ಕೊಂಡಿಯಾಗಿ, ಮತ್ತೊಂದು ಕಡೆ ತನ್ನೊಳಗಿನ ಅನೇಕ ಅಂಶಗಳನ್ನು ಕೃತಿಯೊಳಗೆ ದಾಖಲಿಸುತ್ತದೆ. ಗೌಡ ಸಮುದಾಯವು ತನ್ನ ವಲಸೆಯ ಸಮಯದಲ್ಲಿ, ಪ್ರಭುತ್ವದ ಜೊತೆಗೆ ನಡೆಸಿದ ಸಂಘರ್ಷ, ಮತ್ತು ಆ ಬಳಿಕ ಸಾಧಿಸಿಕೊಂಡ ಸಮನ್ವಯತೆಯನ್ನು ಕೃತಿಯು ಸಾಧಾರವಾಗಿ ವಿವೇಚಿಸುತ್ತದೆ.  ಪ್ರತಿಯೊಬ್ಬ ವ್ಯಕ್ತಿಯೂ ಜೀವನದ ಒಂದು ಹಂತದಲ್ಲಿ ನಾನು ಯಾರು? ನನ್ನ ಅಜ್ಜ ಯಾರು? ನನ್ನ ಅಜ್ಜಿ ಎಲ್ಲಿಯವರು?. ಎಲ್ಲಿಂದ ಬಂದರು? ಹೇಗೆ ಬಂದರು?  ನನ್ನ ಜಾತಿ ಯಾವುದು? ನನ್ನ ಸಮುದಾಯದ ಚರಿತ್ರೆ ಏನು? ನನ್ನ ಮೂಲ ಯಾವುದು? ಇತ್ಯಾದಿ ಪ್ರಶ್ನೆಗಳನ್ನು ಕೇಳಿಕೊಳ್ಳುತ್ತಾನೆ. ಗೌಡರಿಗೆ ಸಂಬಂಧಿಸಿದ ಹಾಗೆ ಅಂತ ಪ್ರಶ್ನೆಗಳಿಗೆ ಈ ಕೃತಿಯು ಸಮಾಧಾನಕರವಾದ ಉತ್ತರವನ್ನು ನೀಡುತ್ತದೆ. ಬೇರಿನ ಸಂಬಂಧ ಇಂದು ಬೇರಿನ ಜೊತೆಗಿನ ಸಂಬಂಧ ಕಡಿದುಕೊಳ್ಳಲಾಗುತ್ತಿದೆ. ಈ ಕಾಲದಲ್ಲಿ, ಈ ಕೃತಿಯು ಬೇರಿನ ಸಂಬಂಧದ ಪ್ರಾಮುಖ್ಯವನ್ನು ದಾಖಲಿಸುತ್ತದೆ, ಜೊತೆಗೆ ಅದರ ವಿಶ್ಲೇಷಣೆಯನ್ನು ನಡೆಸುತ್ತದೆ. ಕೂಡುಕಟ್ಟಿನ ಅಯಾಮದೊಳಗೆ ಗೌಡಸಂಪ್ರದಾಯದ ಬೇರಿನ ಅನೇಕ ಸಂಬಂಧಗಳು ಇವೆ ಎನ್ನುವುದನ್ನು ಹೇಳುತ್ತಾ, ಸಾಂಪ್ರದಾಯಿಕ ಕ್ರಮಗಳಲ್ಲಿ ಇರುವ ಅನನ್ಯತೆಯನ್ನೂ ಇಲ್ಲಿ ದಾಖಲು ಮಾಡಲಾಗಿದೆ. ಅಸ್ಮಿತೆಯ ಹುಡುಕಾಟ ಗೌಡಸಮಾಜದೊಳಗೆ ಏನೆಲ್ಲಾ ಹುದುಗಿಕೊಂಡಿದೆ ಎನ್ನುವುದನ್ನು ಈ ಕೃತಿ ಪರಿಶೀಲಿಸುತ್ತದೆ. ಗೌಡರ ಇತಿಹಾಸ, ಕಲ್ಯಾಣಪ್ಪನ ಹೋರಾಟದ°è ಗೌಡರ ಪಾತ್ರ, ಗೌಡರ ಸಾಂಪ್ರದಾಯ ವಸತಿ ಮತ್ತು ಆಹಾರ ಕ್ರಮಗಳು, ಕುಟುಂಬ ಪದ್ಧತಿ, ಬಳಿಗಳು, ಒಳಾಡಳಿತ, ಹುಟ್ಟು, ಮದುವೆ, ಸಾವಿನ ಆಚರಣೆಗಳು, ಧಾರ್ಮಿಕ ಸಂಪ್ರದಾಯಗಳು, ಸಿದ್ಧವೇಶ, ಅರೆಭಾಷೆ, ಜನಪದ ಸಾಹಿತ್ಯ, ಬೇಟೆ ಮತ್ತು ಆಟಗಳ ಜೊತೆಗೆ ಇತರೆಡೆಯ ಗೌಡರುಗಳ ಬಗೆಗೂ ಇಲ್ಲಿ ಮಾಹಿತಿಗಳಿವೆ. ಇತರ ಸಮುದಾಯದೊಳಗೆ ಇಲ್ಲದೆ ಇರುವ ಅನೇಕ ಅಂಶಗಳು ಗೌಡರಲ್ಲಿರುವುದನ್ನು ಈ ಪುಸ್ತಕದ ಮೂಲಕ ಗುರುತಿಸಬಹುದು. ಈ ಅರ್ಥದಲ್ಲಿ ಇದು ಗೌಡ ಸಂಸ್ಕøತಿಯ ಭಂಡಾರ.     ಈ ಕೃತಿಯನ್ನು ಪ್ರತಿಯೊಬ್ಬರು ಓದಿ “ನಮ್ಮದು” ಎನ್ನುವ ಸಂಸ್ಕøತಿಯ ಮರೆತ ಕಾಯಿಗಳನ್ನು ಮತ್ತೆ ಮಾಲೆಗೆ ಪೋಣಿಸಿ ಧರಿಸಿದರೆ ಗೌಡ ಸಮುದಾಯಕ್ಕೆ ತುಂಬ ಪ್ರಯೋಜನವಿದೆ. ವಲಸೆ ಸಂಘರ್ಷ ಸಮನ್ವಯ ಕೃತಿಯು ಗೌಡ ಸಮುದಾಯದ ಹೆಮ್ಮೆಯ ಕೃತಿ ಎಂದು ಹೇಳಬಹುದು. ಈ ಕೃತಿಯಲ್ಲಿ ಸಂಶೋಧನೆಗೆ ಅನೇಕ ಹೊಳಹುಗಳನ್ನು ನೀಡಲಾಗಿದೆ ಅವುಗಳನ್ನು ಆಧರಿಸಿ ಅಧ್ಯಯನ ನಡೆಸುವವರಿಗೆ ಉತ್ತಮ ಅವಕಾಶಗಳು ಸಿಗಬಹುದು. *******

ಪುಸ್ತಕ ವಿಮರ್ಶೆ Read Post »

You cannot copy content of this page

Scroll to Top