ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಸಿರ್ವಂತೆ ಕ್ರಾಸ್

ದಿನೇಶ ಹುಲಿಮನೆ

ಮಲೆನಾಡಿನ ಬದುಕಿನ ಆಗುಹೋಗುಗಳ ಹಂದರವೇ ಆಗಿದೆ ದಿನೇಶ ಹುಲಿಮನೆಯವರ ‘ಸಿರ್ವಂತೆ ಕ್ರಾಸ್’ ಕಥೆಗಳ ಸಂಕಲನ..!

ದಿನೇಶ ಹುಲಿಮನೆಯವರು ಮಲೆನಾಡು ಆದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಲಿಮನೆಯವರು. ಹಾಗಾಗಿ ಇಲ್ಲಿ ಬರುವ ಎಲ್ಲಾ ಕಥೆಗಳೂ ದಿನೇಶ ಹಲಿಮನೆಯವರ ಮಲೆನಾಡಿನ ಕಲರವವಿದ್ದಂತೆ ಭಾಸವಾಗುತ್ತವೆ. ಭಾಸವಾಗುವುದೇನು ಬಂತು ಇದು ನಿಜವೂ ಆಗಿದೆ.
ಏಕೆಂದರೆ ಈ ದಿನೇಶ ಹುಲಿಮನೆಯವರ ಈ ‘ಸಿರ್ವಂತೆ ಕ್ರಾಸ್’ ಈ ಕಥೆಗಳ ಸಂಕಲನವು ‘ಸಿರ್ವಂತೆ ಕ್ರಾಸ್‌’ ಕಥೆಯೂ ಸೇರಿದಂತೆ ಒಟ್ಟು ೧೮ ಸಣ್ಣ ಸಣ್ಣ ಕಥೆಗಳನ್ನು ಒಳಗೊಂಡಿದೆ ಮತ್ತು ಮಲೆನಾಡಿನಲ್ಲಿ ನಡೆಯುವ ವಿದ್ಯಮಾನಗಳಾಗಿವೆ ಇಲ್ಲಿಯ ಕಥೆಗಳು.

ದಿನೇಶ ಹಲಿಮನೆಯವರು ಮಲೆನಾಡನ್ನು ಬಿಟ್ಟು ಇರಲಾರರು. ಹಾಗಾಗಿಯೇ ಇವರ ಕಥೆಗಳು ಮಲೆನಾಡಿನ ಬದುಕು-ಬವಣೆಗಳನ್ನು ತೆರೆದಿಡುತ್ತವೆ ಇಲ್ಲಿನ ಕಥೆಗಳು.
ದಿನೇಶ ಹುಲಿಮನೆಯವರೇ ಹೇಳುವಂತೆ ‘ನನ್ನ ಬದುಕು-ಬರಹ ಮಲೆನಾಡನ್ನು ಬಿಟ್ಟು ಇರಲಾರವು. ಹಾಗಾಗಿಯೇ ಇಲ್ಲಿಯ ಕಥೆಗಳೆಲ್ಲಾ ಮಲೆನಾಡಿನ ಆಗು-ಹೋಗಗಳಾವೆ’ ಎಂದು.

ಈ ಕಥೆಗಳ ಸಂಕಲನದಲ್ಲಿಯ ‘ಸಿರ್ವಂತೆ ಕ್ರಾಸ್’ ‘ಮಧ್ಯ ರಾತ್ರಿಯ ಮಾತು’ನಂತಹ ಕಥೆಗಳು ಮಲೆನಾಡಿನ ಬೆಟ್ಟಗುಡ್ಡಗಳನ್ನು ಹತ್ತಿಳಿದು, ಅಂಕು-ಡೊಂಕಾದ ಮಣ್ಣು ರಸ್ತೆಗಳಲ್ಲಿ ಸಂಚರಿಸಿದರೆ ‘ಸ್ಮಾರ್ಟ್ ಜಗತ್ತು’ ‘ಕನ್ನಡದ ಕಂದ’ದಂತಹ ಕೆಲ ಚುಟುಕು ಕಥೆಗಳು ಬೆಂಗಳೂರು ಕಾಂಕ್ರೀಟ್ ಹಾದಿಯಲ್ಲಿ ನುಸುಳುವಂತೆ ಭಾಷವಾಗುತ್ತವೆ.

‘ಅರ್ಧ ಸತ್ಯ!’, ‘ಎಡ-ಬಲಗಳ ನಡುವೆ’, ‘ತಳವಾರ ತಿಮ್ಮ’, ‘ಪ್ರಜಾ ಸಮಾಧಿ’, ‘ಕೃಷ್ಣನ ಪ್ರಣಯ ಪ್ರಸಂಗ’, ‘ಕಿಲಾರ’ದ ಹುಡುಗರು’ ಒಟ್ಟಾರೆ ಎಲ್ಲಾ ಕಥೆಗಳೂ ಓದಿಸಿಕ್ಕೊಂಡು ಹೋಗುವ ಕಥೆಗಳಷ್ಟೇ ಅಲ್ಲ,‌‌ ವಾಸ್ತವ ಬದುಕಿನ ಪಯಣವೇ ಆಗಿವೆ ಎಂದು ನನ್ನ ಅನಿಸಿಕೆ.

‘ಕಡಲ ಮುತ್ತು’ ‘ಕುಮಟಾದ ಹಳೇ ಬಸ್ ನಿಲ್ದಾಣ’ದಂತಹ ಕಥೆಗಳು ಕರಾವಳಿಯ ಬದುಕನ್ನು ಪರಿಚಯಿಸುತ್ತವೆ.

ಇನ್ನುಳಿದ ಕಥೆಗಳು ಮನುಷ್ಯ ಸಹಜವಾದ ಪ್ರಾಕೃತಿಕ ಆಶೆ-ಅತಿಯಾಶೆ, ಪ್ರೀತಿ-ಪ್ರಣಯ, ಜೀವನ-ಜಂಜಾಟ, ಹಲವಾರು ಬಗೆಯ ಎಡರು-ತೊಡರುಗಳ ಮೇಲೆ ಇಲ್ಲಿಯ ಕಥೆಗಳನ್ನು ಹೆಣದಿದ್ದಾರೆ ದಿನೇಶ ಹಲಿಮನೆಯವರು.

ನಂಬಿಕೆಯೇ ಜೀವನಾಧಾರ, ‘ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡುವುದೇ ಜೀವನ’ ಎಂಬ ಕವಿ ಗೋಪಾಲಕೃಷ್ಣ ಅಡಿಗರ ವಾಣಿಯಂತೆ ಜೀವನದಲ್ಲಿ ಬರುವ ಕೆಲವು ಸಣ್ಣಪುಟ್ಟ ವಿಚಾರಗಳೇ ಇಲ್ಲಿಯ ಕಥಾವಸ್ತು ಅಲ್ಲದೇ ಇಲ್ಲಿಯ ಕಥೆಗಳು ನನ್ನ ದೃಷ್ಟಿಯಲ್ಲಿ ಕೇವಲ ಕಾಲ್ಪನಿಕವಲ್ಲ. ವಾಸ್ತವವೂ ಆದ ಬದುಕಿನ ಹಲವಾರು ಮಜಲುಗಳು.
ಕಥೆಗಳಲ್ಲಿ ಹೆಚ್ಚು, ಹೆಚ್ಚು ವಿಷಯಗಳನ್ನು ತರಲಾಗದಿದ್ದರೂ ದಿನನಿತ್ಯ ನಡೆಯುವ ಬದುಕಿನ ಘಟಕಗಳ ಹಂದರವೇ ಆಗಿದೆ ಇಲ್ಲಿಯ ಕಥೆಗಳ ವಸ್ತು.

ಹೀಗೆಯೇ ಬರುವ ಇಲ್ಲಿನ ಕಥೆಗಳು ವಿಶಿಷ್ಟ ಶೈಲಿಯದ್ದಾಗಿವೆ. ಇಲ್ಲಿಯ ಎಲ್ಲಾ ಕಥೆಗಳು ಓದುಗರನ್ನು ಹಿಡಿದಿಡುತ್ತವೆ.
ದಿನೇಶ ಹಲಿಮನೆಯವರು ಹವ್ಯಾಸಿ ಲೇಖಕರಾಗಿ ಕಳೆದ ನಾಲ್ಕೈದು ವರ್ಷಗಳಲ್ಲಿ ಬರೆದ ಕಥೆಗಳು ಇವು. ಒಂದೆರಡು ನೀಳ್ಗತೆಯೂ ಸೇರಿದಂತೆ ಸಣ್ಣ-ಪುಟ್ಟ ಕಥೆಗಳೂ ಸೇರಿದಂತೆ ಒಟ್ಟು ಹದಿನೆಂಟು ಕಥೆಗಳು ಇಲ್ಲಿವೆ. ಇದು ಈ ದಿನೇಶ ಹಲಿಮನೆಯವರ ಮೊದಲ ಕಥೆಗಳ ಸಂಕಲನವಾಗಿದೆ. ಮೊದಲ ಕಥಾ ಸಂಕಲನ ಮೂಲಕವೇ ಇವರು ಒಬ್ಬ ಉತ್ತಮ ಕಥೆಗಾರರಾಗಿ ಹೊರಹೊಮ್ಮಿದ್ದಾರೆ. ಇವರಿಂದ ಇನ್ನೂ ಇಂತಹ ಕಥಾ ಬರಹವನ್ನು ನಿರೀಕ್ಷಿಸಬಹುದು.
ಅಂಕೋಲಾದ ಶಿಕ್ಷಕಿಯಾದ ಶುಭಾ ಪಟಗಾರರವರ ಬೆನ್ನುಡಿ ಇದೆ.

*********

ಕೆ.ಶಿವು.ಲಕ್ಕಣ್ಣವರ

About The Author

Leave a Reply

You cannot copy content of this page

Scroll to Top