ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಗಝಲ್

blue and green peacock

ವಿನಿ (ಬೆಂಗಳೂರು)

ಮಾಮರದಲಿ ಕುಳಿತ ಕೋಗಿಲೆಯ ದನಿ ಮಧುರವಂತೆ ಗೆಳೆಯಾ
ಭೃಂಗವದು ಗೂಯ್ ಎನುವ ಝೇಕಾರ ಸೆಳೆದಂತೆ ಗೆಳೆಯಾ

ಭೋರೆನುವ ಜಲಪಾತದ ರಮಣೀಯ ದೃಶ್ಯವದು ಮನಮೋಹಕವಂತೆ
ಕಾನನದ ರೌದ್ರ ಮೌನವದು ಎದೆನಡುಗಿಸಿದಂತೆ ಗೆಳೆಯಾ

ಬೇಲೂರ ಹಳೇಬೀಡಿನ ಶಿಲ್ಪವದು ಶಿಲ್ಪಿಯ ಅದ್ಭುತ ಕೈಚಳಕವಂತೆ
ಒಂದೊಂದು ಮದನಿಕೆಯರು ಸೌಂದರ್ಯದ ಪ್ರತೀಕದಂತೆ ಗೆಳೆಯಾ

ಪ್ರಕೃತಿಯ ಮಡಿಲಲಿ ಮೈಮರೆತು ಸಂತಸವನು ಆಸ್ವಾದಿಸಿದಂತೆ
ಹುಣ್ಣಿಮೆಯ ಪೂರ್ಣಚಂದಮನು ಸೊಗಸಾಗಿ ಕಣ್ಮನ ಸೆಳೆದಂತೆ ಗೆಳೆಯಾ

ಸಪ್ತಸ್ವರಗಳ ನಾದದಲಿ ವಿಜಯಳು ದನಿಗೂಡಿಸಿದಂತೆ
ಬಾಳ ಪಲ್ಲವಿಗೆ ನಿನ್ನೊಲವಿನ ಸಾಲುಗಳೆ ಭಾವಗೀತೆಯಂತೆ ಗೆಳೆಯಾ

******************

About The Author

Leave a Reply

You cannot copy content of this page

Scroll to Top