ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಗಝಲ್

ವಿನಿ ಬೆಂಗಳೂರು

ಒಲವ ಬಂಧದಲಿ ಮನವು ಉಲ್ಲಾಸದಿ ತೇಲುತಿದೆಯಲ್ಲ ಗೆಳತಿ
ಬಾಳ ಪಯಣದಲಿ ಸಂತಸವೆ ತುಂಬುತಿದೆಲ್ಲ ಗೆಳತಿ

ಪ್ರಕೃತಿಗೆ ಮತ್ತೆ ಚೈತ್ರ ಮೂಡಿಸಿ ವಸಂತ ನಗುತಿದೆಯಲ್ಲ ನೋಡು
ಕವಿ ಮನದಲಿ ಶೃಂಗಾರ ಕಾವ್ಯಕೆ ಮುನ್ನುಡಿ ಬರೆದಿದೆಯಲ್ಲ ಗೆಳತಿ

ಮೊದಲ ಮಳೆಗೆ ಹೂಗಳರಲಿ ಸುಗಂಧವನು ಬಿರುತಿದೆಯಲ್ಲ ಇಲ್ಲಿ
ಭೃಂಗವದು ಮಕರಂದ ಬಯಸಿ ಹೂಗಳಲಿ ಮಧುವ ಹೀರುತಿದೆಯಲ್ಲ ಗೆಳತಿ

ಬೀಸುವ ಗಾಳಿಯಲಿ ಮಾಧುರ್ಯ ತುಂಬಿ ಸೆಳೆಯುತಿದೆಯಲ್ಲ
ತಂಪಾದ ಮನದಲಿ ಹೊಸ ಕನಸುಗಳು ಮೂಡುತಿದೆಯಲ್ಲ ಗೆಳತಿ

ಕಣ್ಗಳು ತುಂಬಿ ಬಯಕೆಗಳನು ಹೇಳಲಾರದೆ ತವಕದಲಿ ಕಾಯುತಿದೆಯಲ್ಲ
ಇನಿಯನಾಗಮನವು ವಿಜಯಳ ಬಾಳಿಗೆ ಬೆಳಕಾಗಿ ಚಿಮ್ಮಿದೆಯಲ್ಲ ಗೆಳತಿ

*********

About The Author

Leave a Reply

You cannot copy content of this page

Scroll to Top