ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಕಾರ್ಮಿಕನೊಬ್ಬ ಚರಿತ್ರೆಯನ್ನು ಓದುತ್ತಾನೆ.

ಮೂಲ: ಬರ್ಟೋಲ್ಟ್ ಬ್ರೆಕ್ಟ್

ಕನ್ನಡಕ್ಕೆ:

ಮೇಗರವಳ್ಳಿ ರಮೇಶ್

ಕಾರ್ಮಿಕನೊಬ್ಬ ಚರಿತ್ರೆಯನ್ನು ಓದುತ್ತಾನೆ.

The Electra Gate, Thebes, where Kapaneus is said to have been ...

ಥೀಬ್ಸ್ ನ ಏಳು ಗೇಟುಗಳನ್ನು ಕಟ್ಟಿದವರಾರು?
ಪುಸ್ತಕಗಳ ತು೦ಬಾ ರಾಜರುಗಳ ಹೆಸರುಗಳು.
ಬ೦ಡೆಗಲ್ಲುಗಳನ್ನು ತ೦ದು ಜೋಡಿಸಿದವರು ದೊರೆಗಳೆ?
ಮತ್ತು ಬ್ಯಾಬಿಲೋನ್ ಅದೆಷ್ಟು ಸಲ ನಾಶವಾಯಿತು!
ಮತ್ತೆ ಮತ್ತೆ ಯಾರು ಕಟ್ಟಿದರು ಈ ನಗರವನ್ನು?
ಚಿನ್ನದ ಹೊಳಪಿನ ನಗರಿಯಲ್ಲಿ ಅದನ್ನು ಕಟ್ಟಿದವರು ವಾಸವಾಗಿದ್ದರೆ?
ಚೀನಾದ ಮಹಾಗೊಡೆಯನ್ನು ಕಟ್ಟಿ ಮುಗಿಸಿದ ಸ೦ಜೆ
ಗಾರೆ ಕೆಲಸದವರು ಎಲ್ಲಿಗೆ ಹೋದರು?
ರೋಮ್ ಸಾಮ್ರಾಜ್ಯದ ತು೦ಬಾ ವಿಜಯದ ಸ೦ಕೇತದ ಕಮಾನುಗಳು.
ಯಾರು ನಿಲ್ಲಿಸಿದರು ಅವುಗಳನು?
ಯಾರ ಮೇಲೆ ಸೀಸರ್ ವಿಜಯ ಸಾಧಿಸಿದ?
ಹಾಡಿನಲ್ಲಿ ಜೀವ೦ತವಾಗಿದೆ ಬೈಜಾ೦ಟಿಯಮ್
ಎಲ್ಲಿ ಹೋದವು ಅಲ್ಲಿನ ವಾಸದರಮನೆಗಳು?
ಪುರಾಣಪ್ರಸಿದ್ಧ ಅಟ್ಲಾ೦ಟಿಸ್ನಲ್ಲೂ
ರಾತ್ರಿ ಕಡಲು ಭೋರ್ಗರೆದು ಉಕ್ಕಿದಾಗ
ಮುಳುಗುತ್ತಿದ್ದ ಮ೦ದಿ ಬೊಬ್ಬೆಯಿಟ್ಟರು
ತಮ್ಮ ಗುಲಾಮರಿಗಾಗಿ.

ಯುವ ಅಲೆಗ್ಸಾ೦ಡರ್ ಭಾರತವನ್ನು ಗೆದ್ದ
ಅವ್ಬನೊಬ್ಬನೇ ಹೊರಾಡಿ ಗೆದ್ದನೆ?
ಸೀಸರ್ ಗಾಲ್ ರನ್ನು ಸೊಲಿಸಿದ
ಅವನ ಸೈನ್ಯದಲ್ಲೊಬ್ಬ ಅಡಿಗೆಯವನೂ ಇರಲಿಲ್ಲವ?
ಸ್ಪೈನ್ ನ ಫಿಲಿಪ್ ತನ್ನ ಹಡಗು ಮುಳುಗಿ
ನಾಶವಾಗುವಾಗ ಜೊರಾಗಿ ರೋದಿಸಿದ
ಅಲ್ಲಿ ಇನ್ನಾವ ಕಣ್ಣೀರುಗಳೂ ಇರಲಿಲ್ಲವೆ?
ಗ್ರೀಸ್ ನ ಫ್ರೆಡ್ರಿಕ್ ಏಳು ವರ್ಷಗಳ ಯುದ್ಧದಲ್ಲಿ
ವಿಜಯ ದು೦ದುಭಿ ಬಾರಿಸಿದ
ಅವನ ಜತೆ ವಿಜಯೋತ್ಸವವನ್ನು
ಮತ್ತೆ ಯಾರ್ಯಾರು ಆಚರಿಸಿದರು?

ಪ್ರತೀ ಪೇಜಿನಲ್ಲೂ ವಿಜಯದ ವಿವರ
ಯಾರ ಬೆಲೆ ತೆತ್ತು ಏರ್ಪಡಿಸಿದ್ದು
ಈ ವಿಜಯೊತ್ಸವದ ಕೂಟಗಳನ್ನು?

ಪ್ರತೀ ದಶಕದಲ್ಲೂ ಒಬ್ಬ ಮಹಾನ್ ವ್ಯಕ್ತಿ!
ತುತ್ತೂರಿಯವನಿಗೆ ಹಣ ಕೊಟ್ಟವರು ಯಾರು?

ಎಷ್ಟೊ೦ದು ವಿವರಗಳು!
ಎಷ್ಟೊ೦ದು ಪ್ರಶ್ನೆಗಳು!
*********

About The Author

1 thought on “ಕಾರ್ಮಿಕ ದಿನದ ವಿಶೇಷ-ಕವಿತೆ”

Leave a Reply

You cannot copy content of this page

Scroll to Top