ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಗಝಲ್

Political cartoons in the age of memes - The Hindu

ಲಕ್ಷ್ಮಿ ದೊಡಮನಿ

ರಾಜಕಾರಣದ ಈ ಜೀವನ ಥಳುಕೆನಿಸುತ್ತದೆ ಎಚ್ಚರದಿಂದಿರು
ಕುರ್ಚಿ ತಲ- ತಲಾಂತರವಾಗಿ ತಮಗೆ ದಕ್ಕ ಬೇಕೆನಿಸುತ್ತದೆ ಎಚ್ಚರದಿಂದಿರು

ಬದಲಾವಣೆ ಇಲ್ಲಿನ ನಿಯಮ ಯಾವುದೂ ಶಾಶ್ವತವಲ್ಲ
ಮೃಗಜಲಕ್ಕೆ ಬೆನ್ನಟ್ಟಿದ ಪಶುವಿನಂತಾಗುತ್ತದೆ ಎಚ್ಚರದಿಂದಿರು

ಬಿತ್ತಲಿಕ್ಕೆ ಹೋದವರು ಹೆಗ್ಗಣ ಬಿಲವನ್ನು ತೋಡಿದರಂತೆ
ದಾರಿ ತಪ್ಪಿಸುವ ಆಸೆ-ಆಮಿಷಗಳನ್ನು ಒಡ್ಡಲಾಗುತ್ತದೆ ಎಚ್ಚರದಿಂದಿರು

ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಬಹುದೆಂಬ ತರಬೇತಿಯುಂಟು
ಮನ ನಾಚಿಕೆ,ಮಾನ ತೊರೆದು ಕೊರಡಿನಂತಾಗುತ್ತದೆ ಎಚ್ಚರದಿಂದಿರು

ನಿಜಕ್ಕೆ ಸಮಾಧಿ ಕಟ್ಟಿ ಸುಳ್ಳಿಗೆ ಕಲಶವೇರಿಸುತ್ತಾರೆ ‘ಚೆಲುವೆ’
ನಿನ್ನನ್ನೇ ನೀನು ನಂಬದಂತೆ ಭ್ರಮೆ ಹುಟ್ಟಿಸಲಾಗುತ್ತದೆ ಎಚ್ಚರದಿಂದಿರು

********

About The Author

1 thought on “ಕಾವ್ಯಯಾನ”

Leave a Reply

You cannot copy content of this page

Scroll to Top