ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಮೊದಲ ಕವಿತೆಯ ಹುಟ್ಟು

ಮೊದಲ ಕವಿತೆಯ ರೋಮಾಂಚನ ಅರ್ಪಣಾ ಮೂರ್ತಿ ಸುಮಾರು ಮೂರು ವರ್ಷಗಳ ಹಿಂದಿರಬಹುದು, ಸ್ಮಾರ್ಟ್ ಫೋನ್ ಬಳಸಲು ಬಾರದ ದಿನಗಳಲ್ಲಿ ಅಚಾನಕ್ಕಾಗಿ ಉಡುಗೊರೆಯಾಗಿ ಸಿಕ್ಕಿದ ಸ್ಮಾರ್ಟ್ ಫೋನ್ ಮಂತ್ರದಂಡ ಕೈಗೆ ಸಿಕ್ಕಷ್ಟೇ ಖುಷಿ ತಂದಿತ್ತು. ಸಾಮಾಜಿಕ ಜಾಲತಾಣಗಳ ಬಳಕೆ ಅಭ್ಯಾಸವಿಲ್ಲದ ನನಗೆ ಎಫ್ಬಿಯ ಕುರಿತು ಒಂದು ಸಣ್ಣ ಕುತೂಹಲವನ್ನು ನನ್ನೊಳಗೆ ಮೂಡಿಸಿತ್ತು. ಪರಿಚಯದ ಗೆಳೆಯರ ಮಾತಿನಂತೆ ಕೆಲವೇ ಕೆಲವು ಬರಹಗಾರರ ಕವಿಗಳ ಸ್ನೇಹಪಟ್ಟಿಯಲ್ಲಿ ನಾನೂ ಸಹ ಸ್ಥಾನ ಗಿಟ್ಟಿಸಿದ್ದೆ. ಎಫ್ಬಿ ಲೋಕದಲ್ಲಿ ಗುರುತಿಸಿಕೊಂಡಿದ್ದ ಕವಿಗಳ ಸಾಲಿನಲ್ಲಿ ನಾ ಕಾಣದ ಬಿಂದುವಿನಂತಿದ್ದರೂ, ಅವರುಗಳು ಕವಿತೆ ಕಟ್ಟುವ ಪರಿ ನನಗಂತೂ ಅತೀ ಸೋಜಿಗ, ಕವಿತೆಯೆಡೆಗಿನ ಕುತೂಹಲ ತಣಿಸಿಕೊಳ್ಳಲಾದರೂ ಅವರುಗಳನ್ನ ಮಾತನಾಡಿಸಿಬಿಡಲೇ ಎಂದು ಅದೆಷ್ಟೋ ಬಾರಿ ಅನಿಸಿದ್ದರೂ ಅವರ ಹಮ್ಮು ಬಿಮ್ಮುಗಳ ನಡುವೆ ನನ್ನ ಸಂಕೋಚ ದುಪ್ಪಟ್ಟಾಗಿತ್ತು. ಈ ನಡುವೆ ಅತೀ ಹೆಚ್ಚು ಪ್ರೇಮಕವಿತೆಗಳ ನವಿರಾಗಿ ಹೆಣೆಯುತ್ತಿದ್ದ ಕವಿಮಿತ್ರರೊಬ್ಬರನ್ನು ಕೇಳಿಯೇ ಬಿಟ್ಟಿದ್ದೆ, ಇಷ್ಟು ಚೆಂದದ ಪದಗಳ ಹೆಣಿಕೆ ಹೇಗೆ ಸಾಧ್ಯ ಸರ್ ಅಂತ, ಆ ಕವಿಮಿತ್ರರಂತೂ ಅವರ ಕವಿತೆಯಷ್ಟೇ ಸರಳ ವ್ಯಕ್ತಿ, ಎಷ್ಟು ಮುಕ್ತವಾಗಿ ಮಾತಿಗಿಳಿದರೆಂದರೆ ಒಂದು ಆತ್ಮೀಯತೆಯ ಪರಿಧಿಯೊಳಗೆ ಸೇರಿದ ಅನುಭವವಾಯ್ತು. ಅವರು ಹೇಳಿದ್ದಿಷ್ಟು, ನೋಡು ಹುಡುಗಿ ಕವಿತೆ ಕಟ್ಟುವುದು ಕಷ್ಟವಲ್ಲ, ನೀ ಕೂಡ ಚೆಂದವಾಗಿ ಪದ ಕಟ್ಟಬಹುದು, ಸುತ್ತಲಿನ ಲೋಕ ಅವಲೋಕಿಸು, ನಂತರ ಅದನ್ನೆಲ್ಲ ಕಣ್ಮುಚ್ಚಿ ಧ್ಯಾನಿಸು, ಮನದೊಳಗೆ ಮೂಡಿದ ಪದಗಳ ಒಂದಕ್ಕೊಂದು ನಾಜೂಕಾಗಿ ಸೇರಿಸು ಇದಿಷ್ಟೇ ಕವಿಯ ಗುಟ್ಟು ಅಂದಿದ್ರು. ನಾ ನಕ್ಕು ಸುಮ್ಮನಾಗಿದ್ದೆ. ನಾನೋ ಕಾಲೇಜು ದಿನಗಳಲ್ಲಿ ಓದಿದ ಪದ್ಯಗಳ ಹೊರತಾಗಿ ಕವಿತೆಯ ಗಂಧಗಾಳಿಯೇ ಅರಿಯದವಳು ಇನ್ನು ಕವಿತೆ ಕಟ್ಟುವುದಂತೂ ಅಸಾಧ್ಯ ಎನ್ನುತ್ತಲೇ ಸುಮ್ಮನಾಗಿದ್ದೆ. ಅಪರೂಪಕ್ಕೊಮ್ಮೆ ಮಾತಿಗಿಳಿಯುತ್ತಿದ್ದ ಕವಿಮಿತ್ರರ ಮೊದಲ ಪ್ರಶ್ನೆ, ಏನಾದರೂ ಬರೆಯಲು ಪ್ರಯತ್ನಿಸಿದಿರಾ ಎನ್ನುವುದೇ ಆಗಿತ್ತು. ಇಲ್ಲ ಗುರುಗಳೇ ನನ್ನಿಂದ ಆಗದ ಕೆಲಸ ಎಂದು ನಾ ಕೂಡ ಸುಮ್ಮನಾಗುತ್ತಿದ್ದೆ. ಈ ನಡುವೆ ಪದವಿ ಕಾಲೇಜಿನ ಪರೀಕ್ಷೆಗಳು ಶುರುವಾಗಿತ್ತು, ಇನ್ನೂ ನೆನಪು ಹಸಿಯಿದೆ, ಡಿಸೆಂಬರ್ ಎರಡನೇ ತಾರೀಖು ಮಧ್ಯಾಹ್ನದ ಪರೀಕ್ಷಾ ಕರ್ತವ್ಯ ನನ್ನದಿತ್ತು. ಪರೀಕ್ಷೆ ಶುರುವಾಗಿ ವಿದ್ಯಾರ್ಥಿಗಳು ಬರೆಯಲು ತೊಡಗಿದ ಅರ್ಧ ಗಂಟೆಗೆಲ್ಲಾ ಧೋ ಎಂದು ಮಳೆ ಶುರುವಾಗಿತ್ತು. ಮಳೆಯೆಂದರೆ ಯಾವಾಗಲೂ ಹೀಗೆ ಮನದೊಳಗೆ ಸಣ್ಣ ಪುಳಕ ಹುಟ್ಟಿಸದೇ ಇರಲಾರದೇನೋ, ಕೊಠಡಿಯಲ್ಲಿ ಅಡ್ಡಾಡುತ್ತಾ ಕಿಟಕಿ ಎದುರು ಬಂದು ನಿಂತಿದ್ದೆ. ಗುಬ್ಬಿ ಗಾತ್ರಕ್ಕಿಂದ ಸ್ವಲ್ಪವೇ ದೊಡ್ಡದಿದ್ದ ಒಂದು ಚೆಂದದ ಹಕ್ಕಿ, ವಿದ್ಯುತ್ ತಂತಿಯ ಮೇಲೆ ವೈರಾಗ್ಯ ತಳೆದಂತೆ ಮಳೆಯಲ್ಲಿ ತೊಯ್ದು ಮುದ್ದೆಯಂತೆ ಕೂತಿತ್ತು. ಅರೇ ಇದೇನಾಯ್ತು ಈ ಹಕ್ಕಿಗೆ ಎಂದು ಕೌತುಕದಲ್ಲೇ ಅದರತ್ತ ದೃಷ್ಟಿ ನೆಟ್ಟು ನಿಂತಿದ್ದೆ, ಸುಮಾರು ಎರಡು ಗಂಟೆಗಳ ಕಾಲ ಕುಂಭದ್ರೋಣ ಮಳೆಯಂತೆ ಸುರಿದ ಮಳೆಯಲ್ಲಿ ಅಲುಗದೇ ಕುಳಿತ ಆ ಹಕ್ಕಿ ನನ್ನ ಮನಸ್ಸನ್ನು ಅಲುಗಿಸಿದ್ದು ಸುಳ್ಳಲ್ಲ. ಮಳೆ ನಿಂತಂತೇ ಆ ಹಕ್ಕಿ ಅದೆತ್ತಲೋ ಹಾರಿತ್ತು. ಆಗಲೇ ಕವಿಮಿತ್ರರ ಮಾತು ನೆನಪಾಗಿತ್ತು, ಸುತ್ತ ಕಂಡದ್ದು ಅವಲೋಕಿಸು, ಧ್ಯಾನಿಸು, ಪದ ಪೋಣಿಸು… ಹೌದು, ಆಗ ಹುಟ್ಟಿದ ನನ್ನ ಮೊದಲ ಕವಿತೆಯ ಮೊದಲ ಸಾಲು “ಅದಾವ ಮುನಿಸೋ ಇಲ್ಲ ಕಲ್ಲಾದ ಮನಸೋ, ಗೌತಮನ ಹಾದಿ ಕಾದ ಅಹಲ್ಯೆಯ ಕಂಗಳ ಕಾಯುವಿಕೆಯೋ, ಇಲ್ಲ ಕಲ್ಲೊಳಗಿನ ಮನದ ವೇದನೆಯೋ” ಬಾಲಿಶವೋ, ಅಪಕ್ವವೋ ಒಟ್ಟಿನಲ್ಲಿ ಮೊದಮೊದಲು ಮನದೊಳಗೆ ನಾ ಕಟ್ಟಿದ ಪದಗಳ ಸಾಲು ಈಗಲೂ ನವಿರು ನೆನಪುಗಳ ಸಾಲಿನಲ್ಲಿ ಸೇರಿ ಹೋಗಿದೆ. ಕೊನೆಗೂ ಪೂರ್ಣಗೊಳಿಸಿದ ಈ ಕವಿತೆಯನ್ನು ಅತಿ ಹಿಂಜರಿಕೆಯಿಂದಲೇ ಮುಖಪುಸ್ತಕದ ಗೋಟೆಗಂಟಿಸಿದ್ದೆ. ಎಲ್ಲರ ಪ್ರತಿಕ್ರಿಯೆ ಹೇಗಿರಬಹುದೆಂದು ನೆನೆದು, ನೆನೆದು ಮುದ್ದೆಯಾದ ಹಕ್ಕಿಗಿಂತಲೂ ಹೆಚ್ಚಿಗೆ ಸಂಕೋಚದಿಂದಲೇ ಮುದ್ದೆಯಾಗಿದ್ದೆ. ನನ್ನ ನಿರೀಕ್ಷೆ ಹುಸಿಗೊಳಿಸುವಂತೆ ಎಲ್ಲರಿಂದಲೂ ಉತ್ತಮ ಪ್ರತಿಕ್ರಿಯೆ ಬಂತು. ಮೊದಲ ಕವಿತೆ ನನ್ನ ಉಳಿದ ಕವಿತೆಗಳಿಗೆ ಅಡಿಪಾಯವಾಯ್ತು, ಬರೆಯುವ ಉತ್ಸಾಹ ಹೆಚ್ಚಿದಂತೆಲ್ಲಾ ಈಗೀಗ ಮತ್ತಷ್ಟು ಪಕ್ವವಾಗಿ ಪದಗಳನ್ನು ಜೋಡಿಸಲು ಕಲಿಯುತ್ತಿದ್ದೇನೆ. ಅದೆಷ್ಟೇ ಕವಿತೆಗಳನ್ನು ಬರೆದರೂ, ಧೋ ಎಂದು ಸುರಿವ ಮಳೆ ನನ್ನ ಮೊದಲ ಕವಿತೆಯ ರೋಮಾಂಚನ ಇಮ್ಮಡಿಗೊಳಿಸುತ್ತದೆ ಈಗಲೂ. ************************************************************

ಮೊದಲ ಕವಿತೆಯ ಹುಟ್ಟು Read Post »

ಕಾವ್ಯಯಾನ

ಸ್ನೇಹದ ಫಸಲು

ಗೆಳೆತನದ ದಿನಕ್ಕೊಂದು ಕವಿತೆ ರೇಶ್ಮಾಗುಳೇದಗುಡ್ಡಾಕರ್ ಗೆಳೆತನವಿದು ಪ್ರೀತಿ ,ಸ್ನೇಹದಆಗರವಿದು ಗೆಳೆತನವಿದು ನಂಬಿಕೆ ,ವಿಶ್ವಾಸಗಳಚಿನ್ನದ ಗಣಿಯಿದು ಗೆಳೆತನವಿದು ನೋವು,ನಲಿವಿಗೆಭಾಗಿಯಾಗಿ ಜೊತೆ ನಡೆವುದು ಗೆಳೆತನವಿದು ತಪ್ಪುಗಳ ತಿದ್ದಿತೀಡಿ ಬದುಕಿಗೆ ಸರಿದಾರಿ ತೋರುವದು ಗೆಳೆತನವಿದು ಹೆಣ್ಣು-ಗಂಡು ಎಂಬಭೇದವಿಲ್ಲದೆ ಸ್ನೇಹದ ಕೊಂಡಿಯಾಗುವದು ಗೆಳೆತನವಿದು ಜಾತಿ-ವಿಜಾತಿ ಎನದೆಗಡಿಗಡಿಗಳಾಚೆ ನಮಗಾಗಿ ಮಿಡಿಯುವದು ಗೆಳೆತನವಿದು ಸಂಬಂಧದ ಹಂಗಿಲ್ಲದೆಸಿರಿತನದ ಬೇರುಇಲ್ಲದೆ ಚಿಗುರುವದು ಗೆಳತೆನವಿದು ಹಿರಿಯರು ಕಿರಿಯರುಎನದೆ ಕೈಹಿಡಿದು ಮುನ್ನಡೆಸುವದು ಗೆಳೆತನವಿದು ಬಾಳಿನ ಹೊಸ ಮಗ್ಗಿಲಿಗೆಆರದ ದೀವಿಗೆಯಾಗುವದು ಗೆಳೆತನವಿದು ಪ್ರತಿಫಲ ಬಯಸದೆಫಸಲು ನೀಡುವದು ಎಂದಿಗೋ ನಿಜವಾದ ಸ್ನೇಹವಿದು *********************

ಸ್ನೇಹದ ಫಸಲು Read Post »

ಅಂಕಣ ಸಂಗಾತಿ, ರಹಮತ್ ತರೀಕೆರೆ ಬರೆಯುತ್ತಾರೆ

ಉಗಾದಿ ಚಿತ್ರಗಳು ಕೆರೆಕೋಡಿ ಪಕ್ಕದಲ್ಲಿದ್ದ ಬೀದಿಯೊಂದರಲ್ಲಿ ನನ್ನ ತಾರುಣ್ಯ ಕಳೆಯಿತು. ಅಲ್ಲಿ ಬೆಸ್ತರು, ಈಡಿಗರು, ಬಡಗಿಗೆಲಸದ ಆಚಾರಿಗಳು, ಕಮ್ಮಾರರು, ಮಂಡಕ್ಕಿಭಟ್ಟಿಯವರು, ಮೇದಾರರು ಇದ್ದರು. ಎಲ್ಲರೂ ಬಸವಣ್ಣನವರ ವಚನದಲ್ಲಿ ಬರುವಂತೆ `ಅಂದಂದೆ ಹುಟ್ಟಿತ್ತು ಅಂದಂದೆ ಹೊಂದಿತ್ತು’ ಎಂಬಂತೆ ಹಗಲ ದುಡಿಮೆ- ರಾತ್ರಿಯ ಊಟದ ಅವಸ್ಥೆಯವರು. ಒಬ್ಬರ ಮನೆಯ ಹಬ್ಬ ಇಡೀ ಬೀದಿಯ ಹಬ್ಬವಾಗುತ್ತಿತ್ತು. ರಂಜಾನ್ ದಿನ ಶೀರ್‍ಕುರುಮಾ ಬಟ್ಟಲನ್ನು ಬೀದಿಯ ಎಲ್ಲರ ಮನೆಗೆ ತಲುಪಿಸುವುದು ನಮಗೆ ಲೋಕಮಹತ್ವದ ಕಾಯಕವಾಗಿತ್ತು. ಉಗಾದಿಯ ದಿನ ಬೇರೆಯವರ ಮನೆಗಳಿಂದ ಬರುತ್ತಿದ್ದ ಹೋಳಿಗೆ, ಕೋಸಂಬರಿ, ಹೋಳಿಗೆ ಸಾರು, ಚಿತ್ರಾನ್ನ, ಮಜ್ಜಿಗೆ ಮೆಣಸಿನಕಾಯಿ, ಸಂಡಿಗೆಗಳಿಂದ ಅಲಂಕೃತವಾದ ದೊಡ್ಡ ತಾಟನ್ನು ಬಾಗಿಲಲ್ಲಿ ಖುದ್ದು ನಿಂತು ಸ್ವಾಗತಿಸುವ ಕೆಲಸವನ್ನು ಮುತುವರ್ಜಿಯಿಂದ ನಾವು ಮಾಡುತ್ತಿದ್ದೆವು. ಮಕ್ಕಳು ಅವರಿವರ ಮನೆಯ ಅಡಿಗೆಗೆ ಕಾಯಬಾರದೆಂದು ಅಮ್ಮ ಹೋಳಿಗೆ ಮಾಡುತ್ತಿದ್ದಳು. ಆದರೆ ನೆರೆಮನೆಯ ಹೋಳಿಗೆಯ ಸ್ವಾದವೇ ಬೇರೆ. ಬೀದಿಯ ಜನ, ಉಗಾದಿಯಂದು ಹೊತ್ತು ಕಂತುವ ಸಮಯಕ್ಕೆ ಪುರಿಭಟ್ಟಿಯ ಅಕ್ಕಿ ಒಣಗಲು ಮಾಡಿದ್ದ ಕಣದಲ್ಲಿ ಜಮಾಯಿಸುತ್ತಿತ್ತು. ಕೆರೆ ಕೆಳಗಿನ ಅಡಿಕೆ ತೋಟಗಳ ತಲೆಯ ಮೇಲೆ, ಬಣ್ಣಬಣ್ಣದ ಮೋಡಗಳು ವಿವಿಧ ಆಕೃತಿಗಳಲ್ಲಿ ಲಾಸ್ಯವಾಡುವ ಪಡುವಣದಾಗಸದಲ್ಲಿ, ಬೆಳ್ಳಿ ಕುಡುಗೋಲಿನಂತಹ ಉಗಾದಿ ಚಂದ್ರನನ್ನು ಹುಡುಕುವ ಕಾರ್ಯ ನಡೆಸುತ್ತಿತ್ತು. ನಾವು ವಯಸ್ಸಾಗಿ ಕಣ್ಣು ಮಂಜಾದವರಿಗೆ ಚಂದ್ರನನ್ನು ತೋರಿಸುವ ಕೆಲಸ ಮಾಡುತ್ತಿದ್ದೆವು. ಅವರ ಬೆನ್ನಹಿಂದೆ ನಿಂತು, ಅವರ ಎಡಹೆಗಲ ಮೇಲೆ ಕೈಯಿಟ್ಟು, ಅವರ ಕಿವಿಯ ಪಕ್ಕ ನಮ್ಮ ಕೆನ್ನೆ ತಂದು, ತೋರುಬೆರಳನ್ನು ನಿಮಿರಿಸಿ ಚಂದ್ರನಿಗೆ ಅವರ ದಿಟ್ಟಿಯನೊಯ್ದು ಮುಟ್ಟಿಸಲು ಯತ್ನಿಸುತ್ತಿದ್ದೆವು. “ಅಗೋ ಆ ಕರೇ ಮಾಡ ಐತಲ್ಲಜ್ಜಿ, ಅದರ ಪಕ್ಕ ಮೊಸಳೆ ತರಹ ಒಂದು ಮಾಡ ಎದ್ದೀತಲ್ಲ, ಅದರ ಬಲಗಡೀಕ್ ನೋಡು, ಸಣ್ಣಗೆ ಬೆಳ್ಳಗೆ ಗೆರೆ ಥರ” ಎಂದು ವೀಕ್ಷಕ ವಿವರಣೆ ಕೊಡುತ್ತಿದ್ದೆವು. ರಂಜಾನ್ ತಿಂಗಳಲ್ಲೂ ಚಂದ್ರನನ್ನು ಹೀಗೇ ಹುಡುಕುತ್ತಿದ್ದವು. ಅವನು ಕಂಡನೆಂದರೆ ನಾಳೆ ನಮಾಜು ಗ್ಯಾರಂಟಿ. ಉಗಾದಿ ಚಂದ್ರನನ್ನು ತೋರಿಸುವಾಗ ಈಡಿಗರ ಅಜ್ಜಿಗೆ ಕಾಣದಿದ್ದರೂ ಚದುರಿದ ಮೋಡದ ಚೂರನ್ನು ಕಂಡು `ಹ್ಞೂಕಣಪ್ಪಾ, ಕಾಣ್ತುಕಾಣ್ತು. ಸ್ವಾಮೀ ನಮಪ್ಪಾ. ಈಸಲ ಒಳ್ಳೆ ಮಳೆಬೆಳೆ ಕೊಡಪ್ಪಾ” ಎಂದು ಮುಗಿಲಿಗೆ ಕೈಮುಗಿಯುತ್ತಿತ್ತು. ಅದೇ ಹೊತ್ತಲ್ಲಿ ಅಪ್ಪ, ಬೀದಿಯಲ್ಲಿ ಹಿರೀಕನಾಗಿ ಅಂಗಳದಲ್ಲಿ ಕುರ್ಚಿ ಹಾಕಿಕೊಂಡು ಜಗದ್ಗುರುವಿನಂತೆ ಪಾದಗಳನ್ನು ನೀಟಾಗಿ ಜೋಡಿಸಿಕೊಂಡು ಕೂರುತ್ತಿದ್ದ. ಚಿಕ್ಕವರೆಲ್ಲರೂ ಅಪ್ಪನಿಗೆ `ಸಾಬರೇ ಚಂದ್ರ ಕಾಣ್ತು, ಆಶೀರ್ವಾದ ಮಾಡ್ರಿ’ ಎಂದು ಕಾಲುಮುಟ್ಟಿ ಹಾರೈಕೆ ಪಡೆಯುತ್ತಿದ್ದರು. ಯುಗಾದಿ ಹಬ್ಬದ ದಿನ ಭದ್ರಾವತಿ ಆಕಾಶವಾಣಿಯವರು ಬೆಳಗಿನ ವಾರ್ತೆಗಳ ಬಳಿಕ 7.45ಕ್ಕೆ `ಯುಗಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ’ ಹಾಡನ್ನು ಕಡ್ಡಾಯವೆಂಬಂತೆ ಹಾಕುತ್ತಿದ್ದರು. ಜಾನಕಿಯವರ ದನಿಯಲ್ಲಿ ಮೂಡಿಬಂದಿರುವ ಬೇಂದ್ರೆ ವಿರಚಿತ ಈ ಹಾಡು, ನನ್ನ ಸ್ಮತಿಯಲ್ಲಿ ಭದ್ರವಾಗಿ ಕೂತಿದೆ. ಕೋಡಿಹಳ್ಳದ ದಂಡೆಗೆ ಹೊಂಗೆಗಿಡಗಳಿದ್ದ ಕಾರಣ “ಹೊಂಗೆಹೂವ ತೊಂಗಲಲಿ ಭೃಂಗದ ಸಂಗೀತ ಕೇಳಿ ಮತ್ತೆ ಕೇಳಬರುತಿದೆ” ಎಂಬ ಸಾಲು ನಮಗೆ ಅನುಭವವೇದ್ಯವಾಗಿತ್ತು. ಈ ಸಾಲನ್ನು ಮೈಸೂರಿನಲ್ಲಿ ಕುಕ್ಕರಹಳ್ಳಿ ಪಕ್ಕದ ಹಾಸ್ಟೆಲಿನಲ್ಲಿರುವಾಗ, ಕೆರೆದಂಡೆಯ ಮೇಲೆ ಅಡ್ಡಾಡುತ್ತ ಮತ್ತೂ ದಿವಿನಾಗಿ ಅನುಭವಿಸಿದೆ. ಸಾಹಿತ್ಯದ ವಿದ್ಯಾರ್ಥಿಯಾಗಿ `ಯುಗಾದಿ’ ಕವನ ಓದುವಾಗ ಗೊತ್ತಾಯಿತು- ಇದು ನಿಸರ್ಗದ ಸಂಭ್ರಮಾಚರಣೆಯ ಹಾಡು ಮಾತ್ರವಲ್ಲ, ವಿಷಾದಗೀತೆ ಕೂಡ ಎಂದು. “ವರುಷಕೊಂದು ಹೊಸ ಜನುಮ ವರುಷಕೊಂದು ಹೊಸತು ನೆಲೆಯು ಅಖಿಲ ಜೀವ ಜಾತಕೆ; ಒಂದೇ ಜನ್ಮದಲಿ ಒಂದೇ ಬಾಲ್ಯ ಒಂದೇ ಹರೆಯ ನಮಗದಷ್ಟೇ ಏತಕೆ?”ಎಂಬ ಪ್ರಶ್ನೆ ನನ್ನೊಳಗೆ ಕಂಪನದಾಯಕ ಅಸಹಾಯಕತೆ ಹುಟ್ಟಿಸಿತು. ಯಾಕೀ ಅನ್ಯಾಯ ಎಂದು ಆಕ್ರೋಶ ಬರಿಸಿತು. ಯುಗದ ಆದಿಯನ್ನು ಸೂಚಿಸುವ ಈ ಹಬ್ಬ, ಕಾಲನ ಕಠೋರತೆಯನ್ನೂ ಸೂಚಿಸುತ್ತ ತಲ್ಲಣವನ್ನು ನನ್ನೊಳಗೆ ಖಾಯಂ ಸ್ಥಾಪಿಸಿಬಿಟ್ಟಿತು. ಇದನ್ನೆಲ್ಲ ಧೇನಿಸುತ್ತ್ತ ಮನೆಯ ಮುಂದೆ ನಾವೇ ಬೆಳೆಸಿರುವ ಹೊಂಗೆಗಿಡಗಳನ್ನು ನೋಡುತ್ತೇನೆ. ನಮ್ಮ ತಾಪತ್ರಯಗಳಲ್ಲಿ ಅವಕ್ಕೆ ವಾರದಿಂದ ನೀರುಣಿಸುವುದಕ್ಕೂ ಆಗಿರಲಿಲ್ಲ. ಎಮ್ಮೆಗಳು ಕೋಡಿನ ತುರಿಕೆ ಕಳೆಯಲು ತಿಕ್ಕಾಡಿದ್ದರಿಂದ ಲಾಠಿಜಾರ್ಜಿಗೆ ಒಳಗಾದ ಭಿಕ್ಷರಂತಾಗಿದ್ದವು ಅವು. ಆದರೀಗ ಗಾಯಗೊಂಡ ಅವುಗಳ ಕೊಂಬೆಗಳಿಂದ ಜೀವರಸ ಹೊಮ್ಮಿದಂತೆ ತೆಳುಕೆಂಬಣ್ಣದ ತಳಿರು ಮೂಡಿವೆ-ಯಾರ ಹಂಗೂ ಇಲ್ಲದೆ ದೇಹದೊಳಗಿನ ಜವ್ವನವು ಉಕ್ಕಿ ಮುಖದಲ್ಲಿ ಕಾಂತಿ ಹೊಮ್ಮಿಸುವಂತೆ.ಕಳೆದೆರಡು ವಾರಗಳಿಂದ ನಮ್ಮ ಹಿತ್ತಲ ಮರಗಿಡಗಳು ಎಲೆಯುದುರಿಸುತ್ತಿವೆ. ನನ್ನ ಹೆಂಡತಿ ಗೊಣಗಿಕೊಂಡು ಅವನ್ನು ಗುಡಿಸುತ್ತ ಮರದ ಬುಡಕ್ಕೇ ಸುರಿಯುತ್ತಿದ್ದಾಳೆ. ಎಲೆಯುದುರುವ ಸದ್ದು ಸಾಮಾನ್ಯವಾಗಿ ಕೇಳುವುದಿಲ್ಲ. ಆದರೆ ದಿವಿಹಲಸಿನ ಗಿಡದ ದಪ್ಪನೆಯ ಎಲೆ ಕಳಚಿ ಬೀಳುವ ಖಟ್ ಸದ್ದು ಮಾತ್ರ ಶ್ರವಣೀಯ. ತನ್ನ ಮೈಯ ತೊಗಲೊಡೆದು ಹುಟ್ಟಿದ ಎಲೆಯನ್ನು ವರ್ಷವಿಡೀ ಇರಿಸಿಕೊಂಡಿದ್ದ ಮರ, ಹಣ್ಣಾದ ಬಳಿಕ ಎಷ್ಟು ನಿರಾಳವಾಗಿ ಕೈಬಿಡುತ್ತಿದೆ! ಚಿಕ್ಕಂದಿನಲ್ಲಿ ಅಮ್ಮ ಹೇಳುತ್ತಿದ್ದಳು. ಸ್ವರ್ಗದಲ್ಲಿ ಒಂದು ಮರವಿದೆಯಂತೆ. ಅದರಲ್ಲಿ ನಮ್ಮ ಹೆಸರಿನ ಎಲೆಗಳಿವೆಯಂತೆ. ಅದು ಉದುರಿದ ದಿನ ಇಲ್ಲಿ ನಮ್ಮ ಪ್ರಾಣ ಹೋಗುತ್ತದಂತೆ. ಉದುರಿದ ಎಲೆಯ ಜಾಗದಲ್ಲಿ ಹೊಸ ಚಿಗುರು ಬರಬಹುದು. ಆದರೂ ಉದುರಿದ ಎಲೆಯ ತಬ್ಬಲಿತನ ಇನ್ನಿಲ್ಲದಂತೆ ಕಾಡುತ್ತದೆ. ಎಲೆಯುದುರಿಸಿದ ಮರಗಳೀಗ ಮುಂದಿನ ಉಗಾದಿ ತನಕ ಅಭಯಕೊಡುವಂತೆ ಚಿಗುರುತ್ತಿವೆ. ಮನೆಯೆದುರಿನ ಬೇವು ಮುತ್ತಿನ ಮೂಗುಬೊಟ್ಟಿನಂತಹ ಹೂಗಳನ್ನು ಗೊಂಚಲಾಗಿ ಬಿಟ್ಟಿದೆ. ಇಂತಹ ಋತುಚಕ್ರದ ಯಾವ ಕರಾರಿಗೂ ಸಹಿಹಾಕದ ಬಾಳೆಗೆ ಎಲೆಬದಲಿಸುವ ಗರಜಿಲ್ಲ. ಕೆಂಡಸಂಪಿಗೆ ಗಿಡದಲ್ಲಿ ಉಳಿದಿರುವ ಕೊನೆಯ ಮೊಗ್ಗುಗಳು, ಮನೆಗೆಲಸಕ್ಕೆ ಹೋಗಿಬರುವ ಬಡ ಹುಡುಗಿಯರಂತೆ ಸೊರಗಿ ಸಣ್ಣಗೆ ಅರಳುತ್ತಿವೆ. `ಇದು ಗೊಡ್ಡು ಬಿದ್ದಿದೆ ಕಂಡ್ರಿ, ಕಡಿದು ಎಸೀರಿ ಅತ್ಲಾಗೆ’ ಎಂದು ಸಾರ್ವಜನಿಕ ಒತ್ತಾಯವಿದ್ದರೂ, ನನ್ನ ವೀಟೊ ಕಾರಣದಿಂದ ನಿಂತಿರುವ ಕಾಡುನೆಲ್ಲಿ, ರೆಂಬೆಗಳಲ್ಲಿ ಗಿಣಿಹಸುರಿನ ಸಣ್ಣಚಿಗುರು ತಳೆದು ಇನ್ನೊಂದು ಅವಕಾಶ ಕೊಡಿ ಎಂದು ಅರ್ಜಿ ಹಾಕುತ್ತಿದೆ. ನುಗ್ಗೆ, ಜೋಗಮ್ಮನ ಜಡೆಗಳಂತೆ ಕಾಯಿಗಳನ್ನು ಇಳಿಬಿಟ್ಟು ತೃಪ್ತಿಯಿಂದ ನಿಂತಿದೆ. ಅಂಜೂರ ಮಾತ್ರ ಎಮ್ಮೆಕಿವಿಯಂತಹ ಎಲೆಗಳ ಮೇಲೆ ಧೂಳನ್ನು ಹೊತ್ತು ತಾಪ ಕೆರಳಿಸುತ್ತಿದೆ. ಜಂಬುನಾಥನ ಬೆಟ್ಟದಲ್ಲಿ ನಿಶ್ಯಬ್ದವಾಗಿ ಮಲಗಿದ್ದ ಅದಿರನ್ನು ಬಲಾತ್ಕಾರವಾಗಿ ಮೇಲೆಬ್ಬಿಸಿ, ವಿದೇಶಗಳಿಗೆ ಕಳಿಸಿ ರೊಕ್ಕ ಬಾಚುತ್ತಿರುವ ಧಣಿಗಳು ಎಲ್ಲಿದ್ದಾರೊ ಏನೊ, ಅವರು ಹಬ್ಬಿಸಿದ ಧೂಳು ನಮ್ಮ ಮರದೆಲೆಗಳ ಮೇಲೆ ತಬ್ಬಲಿಯಂತೆ ಪವಡಿಸಿದೆ. ಗಣಿಯೂರಲ್ಲಿ ನೆಲೆಸಿರ್ದ ಬಳಿಕ ಕೆಂಧೂಳಿಗೆ ಅಂಜಿದೊಡೆ ಹೇಗೆ ಎಂದುಕೊಂಡು, ವಾಸ್ತವವಾದಿ ಅಂಜೂರ ಗಿಡ ನೀಳತೊಟ್ಟಿನ ಚಪ್ಪಟೆಮುಖದ ಹಸಿರುಕಾಯನ್ನು ಮೈತುಂಬ ಕಚ್ಚಿಕೊಂಡಿದೆ. ಆದರೆ ಇಷ್ಟಪಟ್ಟು ನೆಟ್ಟ ಬದಾಮಿ ಮಾವು ಮಾತ್ರ ಚಿಗುರಿ ನಿರಾಶೆ ತಂದಿದೆ. ಅದರ ಕೆಂದಳಿರು ಮೋಹಕವಾಗಿದೆ. ಅದು ಈ ಸಲ ಫಲವಿಲ್ಲ ಎಂದು ಕೊಟ್ಟಿರುವ ನೋಟಿಸಾಗಿದ್ದು ಅದರ ಸೌಂದರ್ಯ ಅಹಿತವಾಗಿ ಕಾಣುತ್ತಿದೆ. ವಸಂತಮಾಸದಲ್ಲಿ ಮಾವಿನ ಚಿಗುರು ತಿನ್ನಲು ಕೋಗಿಲೆಗಳು ಬಂದು ಕೂಗುತ್ತವೆ ಎಂಬುದು ಕವಿಸಮಯ. ನಮ್ಮ ಮಾವಿನ ಮರ ಕಂಡಂತೆ ಸದಾ ಮೆರೂನ್ ಬಣ್ಣದ ಕೆಂಬೂತಗಳು ಬಂದು ಕುಳಿತು, ಗಂಟಲನ್ನು ಕ್ಯಾಕರಿಸಿ ಸರಿಪಡಿಸಿಕೊಳ್ಳುವವರಂತೆ ಖ್‍ಖ್‍ಖ್ ನಾದ ಹೊರಡಿಸುತ್ತ ಸುರತಕೇಳಿ ಮಾಡುತ್ತವೆ. ಇಷ್ಟಾಗಿಯೂ ಮೂರು ಕೊಂಬೆಗಳು ಚಿಗರದೆ ಕಪ್ಪುಹಸಿರಿನ ಹಳೇಎಲೆಗಳನ್ನು ಇಟ್ಟುಕೊಂಡು, ಹೂತು ಮಾವು ಬಿಡುವ ಭರವಸೆ ನೀಡುತ್ತಿವೆ. ಒಂದಷ್ಟು ಬಲಿತ ಕಾಯಿ, ಒಂದಷ್ಟು ಮಿಡಿ, ಒಂದಷ್ಟು ಹೂವು ಎಲ್ಲವೂ ಒಟ್ಟೊಟ್ಟಿಗೆ ಇವೆ. ಅರೆಹುಚ್ಚನಂತಿರುವ ಮಾವಿನ ಮರವನ್ನೂ, ಬೀದಿ ಮಣ್ಣಲ್ಲಿ ಆಡಿಬಂದ ಮಗುವಿನಂತಹ ಅಂಜೂರ ಗಿಡವನ್ನೂ ನೋಡುತ್ತಿರುವಂತೆ, ಉಗಾದಿ ವಿಚಿತ್ರ ಭಾವವನ್ನು ಸ್ಫುರಿಸುತ್ತಿದೆ. ಬಾಲ್ಯದ ಮಧುರ ನೆನಪುಗಳೂ, ಬೇಂದ್ರೆ ಕವನ ಹುಟ್ಟಿಸಿದ ಕಂಪನಗಳೂ ಕೆಂಧೂಳಿನ ವಾಸ್ತವತೆಗಳೂ ಮಿಶ್ರಗೊಂಡು ನುಗ್ಗುತ್ತಿವೆ. ತಮ್ಮೆಲ್ಲ ದುಗುಡಗಳೊಳಗೆ ಬದುಕುವ ಯಾವುದೊ ತ್ರಾಣ ಜನರಲ್ಲಿದೆ. ಹಬ್ಬ ಬರುವುದೇ ದಣಿದ ಜೀವಗಳಿಗೆ ಚೈತನ್ಯ ತುಂಬಲು. ಬೀದಿಯಲ್ಲಿ ಕಟ್ಟುತ್ತಿರುವ ಕಟ್ಟಡಗಳನ್ನು ಕಾಯಲೆಂದು ಊರುಬಿಟ್ಟು ಬಂದಿರುವ ವಾಚ್‍ಮನ್ ಶೆಡ್ಡುಗಳತ್ತ ನೋಡಿದೆ. ಕವನದ ಮೊದಲ ಭಾಗದಲ್ಲಿರುವ `ಭೃಂಗದ ಕೇಳಿ’ ಮಕ್ಕಳಿಂದ ಹೊಮ್ಮಿ ಬರುತ್ತಿದೆ. ಕವನದ ಕೊನೆಯ ಭಾಗವನ್ನೇ ಧೇನಿಸುತ್ತ ವಿಷಾದಮುಖಿಯಾಗಿರುವ ನನ್ನನ್ನು ಅಣಕಿಸುತ್ತಿದೆ. ಯುಗಕ್ಕೆ ಆದಿ ಯಾವುದೊ ಏನೊ? ಅದರ ಅಂತ್ಯವನ್ನೇ ಕುರಿತು ಯಾಕೆ ಚಿಂತಿಸಬೇಕು. ಮನುಷ್ಯರಿಗೆ ಅಂತ್ಯವಿರುವುದು ನಿಜ. ಆದರೆ ಪಯಣದ ಹಾದಿಯಲ್ಲಿ ದೊರಕುವ ನೋಟಗಳು ಅನಂತವಾಗಿವೆ. ಇದು ಬೇಂದ್ರೆಯವರಿಗೂ ಅರಿವಿತ್ತು. ಎಂತಲೇ ತಾವೇ ಬರೆದ `ಯುಗಾದಿ’ ಕವನಕ್ಕೆ ಡಿಕ್ಕಿಹೊಡೆಯುವಂತೆ `ಈ ತುಂಬಿಬಾಳು ತುಂಬಿರುವ ತನಕ ತುಂತುಂಬಿ ಕುಡಿಬೇಕು’ ಎಂಬ ಸಾಲನ್ನೂ ಬರೆದರು. ಉಮರ್ ಖಯಾಮನನ್ನು ಕನ್ನಡಿಸುತ್ತ ಹುಟ್ಟಿದ ಸಾಲುಗಳಿವು. ಸಾವು ಹತಾಶೆಯನ್ನು ಮಾತ್ರವಲ್ಲ, ತೀವ್ರವಾಗಿ ಬದುಕುವ ಉತ್ಕಟತೆಯನ್ನೂ ಹುಟ್ಟಿಸಬಲ್ಲದು. (ಪಂಡಿತ್ ಬಿಜಾಪುರೆ ಲೇಖನಕ್ಕೆ ಸಿಕ್ಕ ಮೆಚ್ಚುಗೆ ಕಂಡಬಳಿಕ, ಈ ಹಿಂದೆ ಬರೆದ ಆದರೆ ಪುಸ್ತಕರೂಪದಲ್ಲಿನ್ನೂ ಬಂದಿರದ ಕೆಲವು ಟಿಪ್ಪಣಿಗಳನ್ನು ಹಂಚಿಕೊಳ್ಳಬಹುದು ಅನಿಸಿ ಈ ಈ ಬರಹ.) *********************** ಲೇಖಕರ ಬಗ್ಗೆ: ರಹಮತ್ ತರಿಕೆರೆಯವರು- ಕನ್ನಡದ ಗಮನಾರ್ಹ ಲೇಖಕ. ಹಂಪಿ ವಿಶ್ವವಿದ್ಯಾಲಯದ ಪ್ರೋಫೆಸರ್. ನಾಡಿನ ಸಂಸ್ಕೃತಿ, ಸೌಹಾರ್ದತೆಯ ಬೇರುಗಳ ಜಾಡು ಹಿಡಿದು, ಆಯಾ ಊರುಗಳಿಗೆ ಹೋಗಿ, ಮಾಹಿತಿ ಹಾಕಿ, ಅಲ್ಲಿನ ಜನರ ಜೊತೆ ಬೆರೆತು, ಸಂಶೋಧನಾ ಲೇಖನಗಳನ್ನು ಬರೆದವರು.‌ಕರ್ನಾಟಕದ ಸಂಗೀತಗಾರರು ಹಾಗೂ ಅವರು ದೇಶದ ಇತರೆ ಭಾಗಗಳಲ್ಲಿ ನೆಲೆಸಿದವರ ಬಗ್ಗೆ ಹುಡುಕಾಡಿ ಬರೆದವರು. ಅವರ ನಿರೂಪಣಾ ಶೈಲಿ ಅತ್ಯಂತ ಆಕರ್ಷಕ. ಮನಮುಟ್ಟುವಂತೆ ಬರೆಯುವ ರಹಮತ್ ತರೀಕೆರೆ ಕನ್ನಡದ ,ಬಹುತ್ವದ ,ಸೌಹಾರ್ದತೆಯ ಪ್ರತೀಕವೂ ಆಗಿದ್ದಾರೆ

Read Post »

ಕಾವ್ಯಯಾನ

ಕೆಂಪು ಐರಾವತ

ಕವಿತೆ ಡಾ.ಪ್ರೇಮಲತ ಬಿ.  ರೆಕ್ಕೆಬಿಚ್ಚಿ ಉಡ್ಡಯನಗೈಯ್ಯುವ ಮುನ್ನವೇ ಹಿಡಿಯಬೇಕೆಂದು ಓಡಿದೆ ಒರೆಸುತ್ತ ಹಣೆಯ ಮೇಲಿನ ಬೆವರು ಒಡಲ ತುಂಬುತ್ತ, ಹರಟೆಯೊಡೆಯುತ್ತ ಪುಕ್ಕವರಡಿ ವಿರಮಿಸಿ ನಿಂತಿತ್ತು ದೇದೀಪ್ಯಮಾನವಾದ  ಕೆಂಪು ಐರಾವತ ಏನೋ ಸಂಕಟ, ಬಿಟ್ಟು ಹೊರಟ ತವಕ ನನ್ನದಲ್ಲದ ಊರ, ಮೂರ್ತವಲ್ಲದ ಭಾವ ದಿನಕೊಂದು ಕೊನೆಕಟ್ಟಿ ಗಟ್ಟಿಯಾಗಿರದ ಅಳ್ಳಕ   ಒಂದೇ ಗಂಟೆ ಊರ ತಲುಪಲು ಒಂದೆರಡೇ ದಿನದ ಗಡುವು ಮತ್ತೆ ಮರಳಲು ನಿಟ್ಟುಸಿರಿಟ್ಟೆ ನಕ್ಕು..” ಎಲ್ಲ ಮರುಳು” ಯಾರೋ ಬಂದರು, ಯಾರೋ ಇಳಿದರು ಕಣ್ಣ ಮುಚ್ಚಿ ಕಿಟಗಿಗೊರಗಿ ಗುನುಗಿ ಹಾಡು ವಿದಾಯಗಳ ಮಾತು,ಬೈ ಬೈ ಟಾ..ಟಾ ಪ್ಲಾಸ್ಟಿಕ್ಕಿನ ಸರಬರ ನನ್ನದೇ ಸನಿಹ ಕಣ್ಬಿಟ್ಟರೆ ಸೇಬು ,ಕಿತ್ತಳೆ ,ಬಾಳೆ ಹಿಡಿದು  ಬಂದಿದ್ದೆ ಏನಚ್ಚರಿ ನಿನ್ನ ಆ ಕಕ್ಕುಲಾತಿ.. ಮಾತು ಹೊರಡದ ನಿನ್ನ ಅಮಾಯಕತೆ ಮಾಗಿದ ಪ್ರೀತಿ ಹಣ್ಣಾಗಿ ಹೊಳೆದು ಕಣ್ಣಲ್ಲಿ ಕೂತಿದ್ದವು ನನ್ನ ಉಡಿಯ ತುಂಬಿ…. ************************************************************************ .

ಕೆಂಪು ಐರಾವತ Read Post »

ಕಾವ್ಯಯಾನ

ಮಾತು – ಮಳೆ ಹಾಡು

ಕವಿತೆ ಬಾಲಕೃಷ್ಣ ದೇವನಮನೆ ಚಿತ್ರ ಕಟ್ಟಿದ ಚೌಕಟ್ಟು      ಮಾತು ಮಳೆಯಂತೆ      ಧೋ… ಎಂದು ಸುರಿಯುತ್ತಿರುತ್ತದೆ ನಿಲ್ಲುವುದಿಲ್ಲ      ಒಮ್ಮೊಮ್ಮೆ ಮಳೆ ನಿಂತರೂ      ಮಾತು ನಿಲ್ಲುವುದಿಲ್ಲ…      ಮೌನವೂ ಮಾತಾದಂತೆ      ಮಳೆ ನಿಂತ ಮೇಲಿನ ಮರದ ಹನಿಯಂತೆ…      ಚೌಕಟ್ಟಿನೊಳಗೆ ಮಾತು ಮಳೆ ಹಾಡು. ದೃಶ್ಯ ಒಂದು      ಆಕಸ್ಮಿಕದ ಭೇಟಿ      ಎಷ್ಟೋ ಕಾಲದ ಮೇಲೆ      ಮರು ಮಿಳಿತವಾದ ಗೆಳೆತನ      ಮುಗಿಯುತ್ತಿಲ್ಲ ಕ್ಷೇಮ ಕುಶಲೋಪರಿ      ಕೂಡಿ ಆಡಿದ ಹಳೆ ನೆನಪು      ಹೊಸ ಕೆಲಸ, ನೆಲೆ ನಿಂತ ಬದುಕು      ಒಳಗೊಳಗೆ ತಳಮಳದ ಕನಸು      ಎಲ್ಲವೂ… ಮೊಗೆದರೂ ಮುಗಿಯದ ಮಾತು      ಸೇರಿಸಿ ಕೊಟ್ಟಿದೆ ಈ ಮಳೆ      ಒಂದೇ ಕೊಡೆಯ ಕೆಳಗೆ ದೃಶ್ಯ ಎರಡು      ಎಷ್ಟು ಬೆಚ್ಚಗೆ ಬೆಸೆದಿದೆ      ಹಲ ದಿನದ ಸಲ್ಲಾಪಕೆ ಅನಿರೀಕ್ಷಿತವಾಗಿ      ಎದೆಯ ದನಿಯಾಗಿ      ಪಿಸು ನುಡಿಗಳು ಬಿಸಿ ಮಿಡಿತಗಳು      ಜಗವೇ ನಾಚಿ ಕಣ್ಮುಚ್ಚುವಂತೆ      ಯಾರ ಹಂಗೂ ಇರದ ತಮ್ಮದೇ ಪ್ರಪಂಚದಲ್ಲಿ      ಮೈಮರೆವಂತೆ ಸೇರಿಸಿ      ಸುರಿಯುತ್ತಲೇ ಇದೆ ಮಳೆ      ಒಂದೇ ಕೊಡೆಯ ಮರೆಗೆ ದೃಶ್ಯ ಮೂರು      ಸುರಿ ಮಳೆ ನೀ ಸುರಿಯುತ್ತಿರು      ನಾ ನೆನೆವೆ ನಿನ್ನೊಳಗೆ      ನನ್ನ ಸುತ್ತಲ ಜಗವು ಅಣಕಿಸಿ ನಗುತಿರಲು      ನನ್ನೊಳಗಿನ ನೋವು ಹರಿಯಲಿ      ಕಂಬನಿಯಾಗಿ ನಿನ್ನ ಜೊತೆಗೆ      ಬೆನ್ನಲಿ ಕಟ್ಟಿಕೊಂಡ ಉರಿ-      -ಯುವ ಹತಾಶೆಯ ಮೂಟೆ      ತಂಪಾಗಲಿ, ಮೊಳೆಯಲಿ ಒಳಗೊಂದು      ಚೈತನ್ಯದ ಓಟೆ      ಚಿಗುರಿ ಹಸುರಾಗಿ      ಮೋಡ ಮುಸುಕಿದ ಬಾಳ ಕ್ಷಿತಿಜದಲ್ಲಿ      ಕತ್ತಲು ಕರಗಿ ಭರವಸೆಯ ಬೆಳಕಾಗಿ      ಸುರಿ ಮಳೆಯೇ ಮೌನಕ್ಕೆ ಮಾತಾಗುವಂತೆ      ಕೊಡೆಯಿಲ್ಲದೇ ನೆನೆವೆ ನಾ ನಿನ್ನೊಳಗೆ      ಮಳೆಯೇ ಹಾಡಾಗುವಂತೆ…!! *************************

ಮಾತು – ಮಳೆ ಹಾಡು Read Post »

ಇತರೆ

ಬಾಯಿಬಡುಕ ಸಾಮಾಜಿಕ ಮಾಧ್ಯಮಗಳು

ಲೇಖನ ನೂತನ ದೋಶೆಟ್ಟಿ            ಭಾರತದಲ್ಲಿ ಅಸಹನೆ ಹೆಚ್ಚುತ್ತಿದೆ ಎನ್ನುವ ಮಾತು ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಕೇಳಿಬರುತ್ತಿರುವುದಷ್ಟೇ ಅಲ್ಲ ;ಅದನ್ನು ಪುಷ್ಟೀಕರಿಸುವ ಅನೇಕ ಸಂಗತಿಗಳು ಮೇಲಿಂದ ಮೇಲೆ ನಡೆಯುತ್ತಿವೆ. ಮೊದ ಮೊದಲು ಇಂತಹ ಘಟನೆಗಳು ನಡೆದಾಗ  ಆಘಾತವಾಗುತ್ತಿತ್ತು , ವೇದನೆಯಾಗುತ್ತಿತ್ತು . ಕೆಲ ಸಮಯದ ನಂತರ ಅದರಲ್ಲಿ ಕ್ರೂರತೆಯ ಛಾಯೆ ಇಣುಕಿದಾಗ ಕಳವಳವಾಗುತ್ತಿತ್ತು ;ಆಶ್ಚರ್ಯವೂ ಆಗುತ್ತಿತ್ತು. ಈಗ ಗೊಂದಲವಾಗುತ್ತಿದೆ ;ಯಾವುದು, ಯಾರಿಗೆ, ಯಾಕಾಗಿ ಅಸಹನೆಯಾಗುತ್ತದೆ ಎನ್ನುವುದನ್ನು ತಿಳಿಯಲಾಗದೆ ! ಅಭಿಪ್ರಾಯ ಬೇಧಗಳ ಹಿನ್ನೆಲೆಯಲ್ಲಿ ಕಳೆದ ಮೂರು-ನಾಲ್ಕು ವರ್ಷಗಳಲ್ಲಿ ನಡೆದ ಕೆಲವು ‘ಹತ್ಯೆಗಳು’ ಯಾಕಾಗಿ ನಡೆದವು ಹಾಗೂ ಅವುಗಳನ್ನು ಮಾಡಿದ ಅಥವಾ ಮಾಡಿಸಿದವರಿಗೆ ಅದರಿಂದ ಆದ ಲಾಭವೇನು ?ಎನ್ನುವುದು ಇನ್ನೂ ಪ್ರಶ್ನಾರ್ಥಕವಾಗಿದೆ. ಈ ಹತ್ಯೆಗಳು ಸಮಾಜದಲ್ಲಿ ಒಂದು ರೀತಿಯ ಸಂಚಲನವನ್ನು ಉಂಟುಮಾಡಿ ದೌರ್ಜನ್ಯವನ್ನು ಪ್ರಶ್ನಿಸುವ ದಿಟ್ಟ ಯುವ ಸಮುದಾಯವೊಂದನ್ನು ಸಂಘಟಿಸಿದ್ದು ಆ ಸಂದರ್ಭದಲ್ಲಿ ಆದ ಗುಣಾತ್ಮಕ ಬೆಳವಣಿಗೆ ಅಷ್ಟೇ ಅಲ್ಲ. ಪಾರಂಪರಿಕ ಮಾಧ್ಯಮಗಳಲ್ಲಿ ಕಣ್ಮರೆಯಾಗುತ್ತಿರುವ ಸಾಮಾಜಿಕ ಕಳಕಳಿಯನ್ನು, ಅಭಿವ್ಯಕ್ತಿ ಸ್ವಾತಂತ್ರ್ಯದ ಘನತೆಯನ್ನು ಎತ್ತಿ ಹಿಡಿಯುವ ಮೂಲಕ ಅದನ್ನು ತಮ್ಮ ಕೈಗೆ ಸಾಮಾಜಿಕ ಮಾಧ್ಯಮಗಳು ತೆಗೆದುಕೊಂಡಿದ್ದು ಇನ್ನೊಂದು ಗುಣಾತ್ಮಕ ಬೆಳವಣಿಗೆ. ಆದರೆ ದುರದೃಷ್ಟವಶಾತ್‌ ಅದು ಹಾಗೆ ಉಳಿಯಲಾರದೇ ಕೆಚ್ಚು, ರೋಷಾವೇಶ ಹಾಗೂ ಹುಂಬತನಕ್ಕೆ ಇಳಿಯಿತು.ಇದಕ್ಕೆ ಸಾಹಿತ್ಯ ಸಮಾವೇಶಗಳಂಥ ಬೌದ್ಧಿಕ ಪ್ರಜ್ಞೆಯ ತಾಣಗಳೂ ಸಾಕ್ಷಿಯಾದವು.ಈ ಸಂದರ್ಭಗಳಲ್ಲೂ ಸಾಮಾಜಿಕ ಮಾಧ್ಯಮಗಳ ಪಾರುಪತ್ಯವೇ ಎಗ್ಗಿಲ್ಲದೇ ನಡೆಯಿತು. ಮಾತೆತ್ತಿದರೆ ಸಮಾನತೆ, ಸ್ವಾತಂತ್ರ್ಯ, ಮಹಿಳಾಪರತೆ ಎಂದು ಹುಯಿಲೆಬ್ಬಿಸುವ ಈ ಸಾಮಾಜಿಕ ಮಾಧ್ಯಮಗಳು ಈಗ ಎಲ್ಲರನ್ನೂ, ಎಲ್ಲವನ್ನೂ ಪ್ರಶ್ನಿಸುವ ಧಾರ್ಷ್ಟ್ಯ  ತೋರಿಸುತ್ತಿವೆ. ಸಿದ್ಧಗಂಗಾ ಶ್ರೀಗಳ ಕುರಿತು ನಡೆದ ಸಂವಾದ ಇದಕ್ಕೆ ಒಂದು ಉದಾಹರಣೆ.ಒಂದು ಶತಮಾನದ ಕಾಲ ಜಾತಿ, ಮತ, ಲಿಂಗ ಬೇಧಗಳಿಲ್ಲದ ಸೇವೆಯನ್ನು ಇವು ಪ್ರಶ್ನಿಸಿದ್ದವು ಆ ಪ್ರಶ್ನೆಗಳಾದರೂ ಎಂತಹವು ?ಅವರೇನುಜಾತಿ ಪದ್ಧತಿಯ ಕುರಿತು ಒಂದಾದರೂ ಹೇಳಿಕೆ ನೀಡಿದ್ದರೆ? ಸ್ತ್ರೀ  ಸಮಾನತೆಯನ್ನು ಎತ್ತಿ ಹಿಡಿದಿದ್ದರೆ ?ಎಂಬ ತಮ್ಮ ಮೂಗಿನ ನೇರದ ಪ್ರಶ್ನೆಗಳು.ಇಂತಹ ಪ್ರಶ್ನೆಗಳನ್ನು ಅಥವಾ ಈ ಮಾಧ್ಯಮಗಳು ಬಯಸುವ ಪ್ರಶ್ನೆಗಳನ್ನು ಕೇಳಿದವರು ಮಾತ್ರ ಮಹೋನ್ನತರೆ ? ಪ್ರತಿರೋಧವೆಂದರೆ ಗಂಟಲು ಬಿರಿಯುವಂತೆ ಕೂಗುವ ಮೂಲಕ, ವೇದಿಕೆಗಳಲ್ಲಿ ಆರ್ಭಟಿಸುವ ಮೂಲಕ, ಆಯಕಟ್ಟಿನ ಸ್ಥಳಗಳಲ್ಲಿ ಧರಣಿ ಮಾಡುವ ಮೂಲಕ, ಮೊದಲಾದ ಜನಪ್ರಿಯ ಮಾದರಿಗಳು ಮಾತ್ರವೇ? ಇಂಥ ಪ್ರತಿರೋಧಗಳ ಮೂಲಕ ಏನನ್ನು ಸಾಧಿಸಬಹುದು ಎಂಬುದನ್ನು ರೈತ ಚಳುವಳಿಗಳು, ಮಹಿಳಾಪರ ಚಳುವಳಿಗಳು, ಅಂಗನವಾಡಿ ಕಾರ್ಯಕರ್ತೆಯರು, ಗಾರ್ಮೆಂಟ್ ಉದ್ಯೋಗಿಗಳು ಕಾಲಕಾಲಕ್ಕೆ ಈ ನಾಡಿಗೆ ತೋರಿಸಿಕೊಟ್ಟಿದ್ದಾರೆ. ಆದರೆ ಎಲ್ಲ ಹೋರಾಟಗಳೂ ಇದೇ ರೀತಿ ಇರಲು ಸಾಧ್ಯವೆ ಎಂಬ ಪ್ರಶ್ನೆಯನ್ನು ಈ ಮಾಧ್ಯಮಗಳು ಹಾಕಿಕೊಳ್ಳುವುದಿಲ್ಲ. ಇದೇ ಮಾತನ್ನು ಅವು ಸಾಹಿತಿಗಳ ಬಗ್ಗೆಯೂ ಆಡುತ್ತವೆ. ಇಂಥ ಪಶ್ನೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಹರಿಯಬಿಡುವವರು ತಮ್ಮ ಸಾಧನೆಯನ್ನೂ ಗಮನಿಸುವುದು ಒಳಿತು.ಬಸವ, ಬುದ್ಧ, ಅಂಬೇಡ್ಕರ್‌ ಅವರೂ ಕೂಡ ವಿಶಾಲ ದೃಷ್ಟಿಕೋನವನ್ನು ಹೊಂದಿದ್ದು ಸಂಕುಚಿತತೆಯನ್ನು ಪ್ರಶ್ನಿಸಿದರು. ಹಾಗೆ ಪ್ರಶ್ನಿಸುವಾಗ ಅವರು ಅಸಹನೆಯನ್ನು ತೋರಿಸಿರಲಿಲ್ಲ ಹಾಗೂ ಅವರು ಸಮಷ್ಟಿಗಾಗಿ ಪ್ರತಿಪಾದಿಸುತ್ತಿದ್ದರು. ಒಬ್ಬರನ್ನು ಹೀಗಳೆವ, ಕುಬ್ಜರನ್ನಾಗಿಸುವ ಮೂಲಕ ಹಿರಿಮೆಯನ್ನು , ಮೇಲ್ಮೆಯನ್ನು ಸಾಧಿಸ ಹೊರಟಿರುವ ಈ ಸಾಮಾಜಿಕ ಮಾಧ್ಯಮಗಳು ಇಂದು ಅಸಹ್ಯ ಹುಟ್ಟಿಸುವರೀತಿಯಲ್ಲಿ ಬೆಳೆಯುತ್ತಿವೆ. ಹಾಗೆ ನೋಡಿದರೆ ರೆಸಾರ್ಟುಗಳಲ್ಲಿ ಕಚ್ಚಾಡುವ, ಬಡಿದಾಡುವ, ರಾಜಕೀಯ ಮೇಲ್ಮೆ ಸಾಧಿಸಲು ಕೆಸರೆರಚಾಡುವ ರಾಜಕಾರಣಿಗಳಾಗಲಿ, ಇವರಿಗಾಗಲಿ ಯಾವ ವ್ಯತ್ಯಾಸವಿದೆ ? ಈಗಂತೂ ಎಲ್ಲದಕ್ಕೂ ಪರ-ವಿರೋಧಿ ಚರ್ಚೆಗಳು ಕ್ಷಣಾರ್ಧದಲ್ಲಿ ಭೂಮಿಯನ್ನೇ ಸುತ್ತಬಲ್ಲಷ್ಟು ಸಶಕ್ತವಾಗಿವೆ. ಈ ಚರ್ಚೆಗಳಲ್ಲಿ ಅಸಹನೆ ಒಡೆದು ಕಾಣುತ್ತಿರುವುದು ಅಪಾಯಕಾರಿ ಬೆಳವಣಿಗೆ.ಕಾಫಿಯೋ ಚಹಾವೋ ಯಾವತ್ತಾದರೂ ಚರ್ಚೆಗೊಳಗಾಗಿತ್ತೇ?ಇದು ಚರ್ಚಿಸುವ ವಿಷಯವೇ? ಆದರೂ ಚರ್ಚೆಯನ್ನು ಹರಿಯಬಿಡುವುದು. ಎಲ್ಲವೂ ಸ್ವಾರಸ್ಯವಾಗಿಯೇ ಸಾಗಿದರೆ ಅಡ್ಡಿಯಿಲ್ಲ. ಆದರೆ ಒಂದು ಸಣ್ಣ ಮಾತು ಹೇಗೆ ಕಿಚ್ಚು ಹತ್ತಿ ಉರಿಸಬಲ್ಲದು ಎಂಬುದಕ್ಕೆ ನಮ್ಮೆದುರು ಅನೇಕ ನಿದರ್ಶನಗಳಿವೆ. ಇಂದಿನ ಆಧುನಿಕ ಮಾಧ್ಯಮಗಳು ಈ ಕಾಲಕ್ಕೆ ವರದಾನವಾಗಿ ದೊರೆತಂಥವು.ಇವುಗಳನ್ನು ಬಳಸುವ ಜಾಣ್ಮೆಯನ್ನು ರೂಢಿಸಿಕೊಳ್ಳುವುದೊಳಿತು. ಅಭಿಪ್ರಾಯ ಬೇಧಗಳು ಪ್ರಜಾಸತ್ತಾತ್ಮಕ ರಾಷ್ಟ್ರದ ಹೆಗ್ಗುರುತು.ನಮ್ಮ ಸಂವಿಧಾನವು ಮೂಲಭೂತ ಹಕ್ಕಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ.ಆದರೆ ಇಂದು ಸಮಾಜದ ನಡೆ ಅಭಿವ್ಯಕ್ತಿ ಸ್ವಾತಂತ್ರ್ಯದ ನೆಲೆಯಲ್ಲಿ ಬಹಳವೇ ಸೂಕ್ಷ್ಮವಾಗುತ್ತಿದೆ. .ದೃಷ್ಟಿ ಬಹಳ ಸಂಕುಚಿತವಾಗುತ್ತಿದೆ.ಬೇಧಗಳು ವ್ಯಕ್ತಿಗತವಾಗಿ, ಗುಂಪುಗಳಿಗೆ ಅನುಗುಣವಾಗಿ, ಸಮುದಾಯಗಳಿಗೆ ಸಂಬಂಧಿಸಿದಂತೆ ತೀರ ಸಂಕುಚಿತವಾಗುತ್ತಿವೆ. ಇದು ನಮ್ಮ ಸಂವಿಧಾನ ನೀಡಿರುವ  ಮಾದರಿಯ ಸ್ವಾತಂತ್ರ್ಯ  ಅಲ್ಲ. ಬಾಯಿಬಡುಕತನಕ್ಕೂಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ವ್ಯತ್ಯಾಸವಿದೆ ಎಂದು ಈ ಸಾಮಾಜಿಕ ಮಾಧ್ಯಮಗಳು ಅರಿಯಬೇಕಾಗಿದೆ.                             *************************

ಬಾಯಿಬಡುಕ ಸಾಮಾಜಿಕ ಮಾಧ್ಯಮಗಳು Read Post »

ಕಾವ್ಯಯಾನ

ಕಾವ್ಯವಾಗಿ ಕರಗುತ್ತೇನೆ

ಕವಿತೆ ಪೂಜಾ ನಾರಾಯಣ ನಾಯಕ ನಾನರಿಯಲಾಗದ  ಶೂಲೆಗಳೇ ಆಪ್ತವಾಗಿ ನನ್ನನ್ನು ಬಿಗಿದಪ್ಪಿಕೊಂಡಾಗ ಬದುಕು ಬರಡಾಗಿ ಬೆಂಬಿಡದೆ ಕಾಡಿದಾಗ ನನಗನಿಸುತ್ತದೆ, ನಾನೊಮ್ಮೆ ಜ್ವಾಲಾಮುಖಿಯಂತೆ ಭುಗಿಲೇಳಬೇಕು! ಕಳೆದುಕೊಂಡ ಮಧುರವಾದ ಪ್ರೇಮ ನೆನಪಿನಾಳದಲಿ ಪುಟಿದೆದ್ದು ಕೂತಾಗ ನನ್ನ ನಿಟ್ಟುಸಿರಿನಲೂ ಮಿಣುಕು ಹುಳುವಂತೆ ಮಿನುಗ ತೊಡಗಿದಾಗ ನನಗನಿಸುತ್ತದೆ, ನಾನೊಮ್ಮೆ ಅಗ್ನಿ ಪರ್ವತದಂತೆ ಧಗಧಗಿಸಿ ಉರಿಯಬೇಕು! ಕಗ್ಗತ್ತಲ ವೇಳೆಯಲಿ ನಿಶ್ಯಬ್ದ ನೂರಾರು ಬಯಕೆಗಳ ಹೊತ್ತ ದೂರ ದೂರ ನೇರ ಹಾದಿಗಳಲಿ ನೀರವತೆಯೇ ಮುಗುಳ್ನಕ್ಕಾಗ ನನಗನಿಸುತ್ತದೆ, ನಾನೊಮ್ಮೆ ಶಿವನಂತೆ ರುದ್ರವಾಗಿ ನರ್ತಿಸಬೇಕು! ಏಕಾಂತದಲಿ ಮರೀಚಿಕೆಯಂತ ಕನಸುಗಳು ಎಡಬಿಡದೆ ತಿವಿದಾಗ ಹಿಂದಿನ ಕಹಿ ನೆನಪೇ ತುಡಿದಾಗ ಕಂಬನಿಯೇ ಬೇರುರಿದಾಗ ನನ್ನೆದೆಯ ಶರಧಿಯಲಿ ಮತ್ತೆ ಮತ್ತೆ ಪ್ರವಾಹ ಬಂದೆರಗಿದಾಗ ನನಗನಿಸುತ್ತದೆ, ನಾನು ಹೀಗೆಯೆ ಕಾವ್ಯವಾಗಿ   ಮಂಜುಗಡ್ಡೆಯಂತೆ ಕರಗಿಬಿಡಬೇಕು!. **************

ಕಾವ್ಯವಾಗಿ ಕರಗುತ್ತೇನೆ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಎ.ಹೇಮಗಂಗಾ ಕಡುಗಪ್ಪು ಕುರುಳ ನಡುವೆ ಮೊಗ ಚಂದಿರನಂತೆ ಹೊಳೆದಿದೆ ಗೆಳತಿಬಿರಿದ ಅಧರಗಳ ನಡುವೆ ಮಿಂಚು ನಗು ಹೊರಹೊಮ್ಮಿದೆ ಗೆಳತಿ ಅಪೂರ್ವ ಸೌಂದರ್ಯ ಬಣ್ಣಿಸಲು ಕವಿಯಾಗುವನು ನಿನ್ನ ನಲ್ಲಸೆಳೆವ ಕಾಡಿಗೆ ಕಂಗಳ ಮೇಲಿನ ಹುಬ್ಬು ಕಬ್ಬಿನಂತೆ ಬಾಗಿದೆ ಗೆಳತಿ ಆಗಸದತ್ತ ದಿಟ್ಟಿ ನೆಟ್ಟ ನೋಟದಿ ಅದಾವ ಭಾವ ತುಂಬಿದೆಯೋವಿಚಲಿತಳಾಗದೇ ನೀ ಕುಳಿತ ಭಂಗಿ ಮೋಹಕವಾಗಿ ಕಂಡಿದೆ ಗೆಳತಿ ನಿನ್ನವನ ಚರಣಕೆ ಸಮರ್ಪಿಸಲು ಹೂಗಳ ಗುಚ್ಛ ಹಿಡಿದಿಹೆ ಏನು?ಇಹದ ಅರಿವಿಲ್ಲದೇ ನಗುತಿಹ ಅಭಿಸಾರಿಕೆ ನೀನಾದಂತಿದೆ ಗೆಳತಿ ತುಸು ಹೊತ್ತು ತಾಳಿದರೆ ಸಾಕು ಬಂದೇ ಬರುವನು ಪ್ರಿಯತಮಪ್ರತಿಕ್ಷಣವೂ ಮೆಲುಕು ಹಾಕುವ ಒಡನಾಟದ ಸವಿ ಕಾದಿದೆ ಗೆಳತಿ *************************

ಗಝಲ್ Read Post »

ಇತರೆ, ಲಹರಿ

‘ಎಳೆ ಹಸಿರು ನೆನಪು ..’

ಲಹರಿ ವಸುಂಧರಾ ಕದಲೂರು    ಆಗೆಲ್ಲಾ ಮೂರ್ನಾಲ್ಕು ವರ್ಷಗಳಿಗೊಮ್ಮೆ ಮನೆಯ ಸಾಮಾಗ್ರಿಗಳನ್ನು ಗಂಟುಮೂಟೆ ಕಟ್ಟಿಕೊಂಡು ನಮ್ಮ ಕುಟುಂಬ ಊರಿಂದೂರಿಗೆ ಪ್ರಯಾಣಿಸುತ್ತಿತ್ತು. ನಾನು ಸಣ್ಣವಳಿದ್ದಾಗಿನ ವಿಷಯವಿದು. ಈ ಸಂಚಾರದ ನಿರಂತರತೆಗೆ ನಮ್ಮಪ್ಪ ಸರಕಾರಿ ನೌಕರರಾಗಿದ್ದು ಹಾಗೂ ವರ್ಗಾವಣೆಯನ್ನು ಅವರು ಸಹಜವಾಗಿ ಸ್ವೀಕರಿಸುತ್ತಿದ್ದದ್ದು ಪ್ರಮುಖವಾಗಿತ್ತು ಎನ್ನುವುದು ನನಗೀಗ ಅರ್ಥವಾಗುತ್ತಿದೆ.          ಹೀಗೆ ಪದೇ ಪದೇ ವರ್ಗವಾಗುತ್ತಿದ್ದರಿಂದ ನನ್ನ ಶಾಲಾ ಶಿಕ್ಷಣ ಮೈಸೂರು, ಹಾಸನ ಜಿಲ್ಲೆಗಳ ಹಲವು ಹಳ್ಳಿಗಳ ಸರಕಾರಿ ಶಾಲೆಗಳಲ್ಲಿ ನಡೆಯಿತು. ಮತ್ತೆ ಮತ್ತೆ  ಹೊಸ ಶಾಲೆ, ಹೊಸ ಗೆಳೆತನ, ಹೊಸ ಪರಿಸರ. ಈ ಎಲ್ಲವೂ ಆ ಬಾಲ್ಯದಲ್ಲಿ ಸಾಹಸಮಯವಾಗಿ ಕಾಣುತ್ತಿತ್ತು. ಅಂದಿನ ಸೊಗಸಿನ ದಿನಗಳ ಒಂದೆರಡು ಅನುಭವಗಳನ್ನು ಈಗ ಸುಮ್ಮನೆ ನೆನಪಿಸಿಕೊಂಡರೆ  ಸಾಕೂ ಮನಸ್ಸು ಜಿಗಿಯುವ ಹುಲ್ಲೆಮರಿಯಾಗುತ್ತದೆ.   ಆ ದಿನಗಳಲ್ಲಿ ನಮ್ಮದು ತೀರಾ ಹಗುರವಾದ ಬಟ್ಟೆಯಿಂಜ ಮಾಡಿದ ಪಾಟೀಚೀಲ. ಸ್ಲೇಟು, ಬಳಪ, ಪಠ್ಯಪುಸ್ತಕಗಳಿಗಿಂತಲೂ ಹೆಚ್ಚಾಗಿ ವಿವಿಧ ನಮೂನೆಯ ಕಲ್ಲು, ಮಿರುಗುವ ಬಟ್ಟೆ ಚೂರು, ಹಕ್ಕಿ ಪುಕ್ಕ, ಯಾವುದೋ ಹಣ್ಣು- ಕಾಯಿ-ಕಡ್ಡಿ ಚೂರು ಹೀಗೆ ಏನೇನೂ ತುಂಬಿಕೊಂಡು ಅದು ನಮ್ಮ ಅತೀ ಜೋಪಾನ ಮಾಡುವ ಆಸ್ತಿಯಾಗಿ ನಮಗದೇ ಬ್ರಹ್ಮಾಂಡವಾಗುತ್ತಿತ್ತು.  ಯಾರಾದರೂ ಹಲವು ಕೋಟಿ ರೂಪಾಯಿ ಕೊಡುತ್ತೇವೆ ಆ ಚೀಲವನ್ನು ನಮಗೆ ಕೊಡಿ ಎಂದರೆ, ಸಾರಾಸಗಟಾಗಿ ಅಷ್ಟೂ ನಗದನ್ನು ನಿರಾಕರಿಸಲು ಕಾರಣವಾಗಬಹುದಾದ ಅತ್ಯಮೂಲ್ಯ ವಸ್ತುಗಳು ಅದರಲ್ಲಿರುತ್ತಿದ್ದವು. (ಕೋಟಿಗಿರುವ ಸೊನ್ನೆ ಎಷ್ಟೆಂದು, ಅದರ ಮೌಲ್ಯ ಎಷ್ಟೆಂದು ತಾನೇ ಆಗ ಗೊತ್ತಾಗುತ್ತಿತ್ತೇ!?)     ಅದು ಒತ್ತಟ್ಟಿಗಿರಲಿ, ಸದಾ ಆರೇಳು ಮಕ್ಕಳ ಜೊತೆ ಸೇರಿ ಶಾಲಾಪಠ್ಯದೊಡನೆ ಹಲವು ಪರಿಕರಗಳನ್ನು ಹೊತ್ತು ಶಾಲೆಗೆ ಹೋಗುತ್ತಿದ್ದ ನಮ್ಮ ತಂಡವು ಯಾವ ‘ಸಾರ್ಥ’ಕ್ಕೂ (ವ್ಯಾಪಾರೀ ತಂಡ) ಕಡಿಮೆ ಇರುತ್ತಿರಲಿಲ್ಲ. ದಾರಿ ತುಂಬೆಲ್ಲಾ ಗಿಜಿಬಿಜಿ.. ಅದೇನು ಮಾತಾಡಿಕೊಳ್ಳುತ್ತಿದ್ದೆವೋ…!   ಬಟ್ಟೆಯಿಂದ ಮಾಡಿದ ಪಾಟೀಚೀಲದ ಹಿಡಿಕೆಯನ್ನು ತಲೆಯ ಮೇಲೆ ಹಾಕಿಕೊಂಡು, ಬೆನ್ನ ಹಿಂದೆ ಇಳಿಬೀಳಿಸಿ ನಡಿಗೆಯ ಲಯಕ್ಕೆ ಚೀಲವನ್ನು ಬಡಿದುಕೊಳ್ಳುತ್ತಾ, ಕೆಲವೊಮ್ಮೆ ಜೋಳಿಗೆಯಂತೆ ಹೆಗಲಿನಿಂದ ಇಳಿಸಿಕೊಂಡು, ಮತ್ತೆ ಕೆಲವೊಮ್ಮೆ ನೆತ್ತಿಯ ಮೇಲೇರಿಸಿಕೊಂಡು, ಮುಂದಿನ ಬಾರಿ ಎದೆಯ ಮುಂದಿನಿಂದ ಕುತ್ತಿಗೆಗೆ ನೇತು ಬೀಳಿಸಿಕೊಂಡು, ಸೊಂಟ ಕೈಗಳಿಗೆ ಸುತ್ತಿಕೊಂಡು, ಮೊಣಕಾಲುಗಳಿಂದ  ಚೀಲದೊಳಗೆ ಇದ್ದ ಸ್ಲೇಟನ್ನು ಬಡಿಯುತ್ತಾ ಸಾಗುತ್ತಿದ್ದಾಗ ಅದರೊಳಗಿರುವುದು ‘ಸಾಕ್ಷಾತ್ ಸರಸ್ವತಿ ಸ್ವರೂಪ’ ಎನ್ನುವುದು ಸಾಸುವೆಯ ಕಾಳಷ್ಟೂ ನೆನಪಾಗುತ್ತಿರಲಿಲ್ಲವಲ್ಲಾ ! ಅಂಥಾ ಅತಿ ಮುಗ್ಧ ಸೊಗಸುಗಾರಿಕೆಯ ಅನುಭವ ಆರೇಳು ಕೇಜಿ ಭಾರ ತೂಗುವ ಶಾಲಾ ಬ್ಯಾಗ್  ಹಾಗೂ ಮನೆಯ ಮುಂದೆಯೇ ಶಾಲಾ ವಾಹನಗಳನ್ನು ಏರಿಳಿಯುವ ನಮ್ಮೀ ಮಕ್ಕಳಿಗೆಲ್ಲಿ ಸಿಗಬೇಕು ಹೇಳಿ?       ನಾಲ್ಕನೇ ತರಗತಿಯ ವಿದ್ಯಾಭ್ಯಾಸವು ಹಾಸನ ಜಿಲ್ಲೆಯ ಅರಕಲಗೂಡು ಎಂಬ ತಾಲೂಕಿನಲ್ಲಾಯ್ತು. ಅದು ಆ ಕಾಲಕ್ಕಿನ್ನೂ ದೊಡ್ಡ ಹಳ್ಳಿಯಂತೆ ಇತ್ತೇ ಹೊರತು ಪಟ್ಟಣದ ಕುರುಹು ಅಷ್ಟಾಗಿ ಕಾಣುತ್ತಿರಲಿಲ್ಲ. ಮಧ್ಯಾಹ್ನದ ಬಿಸಿ ಊಟ ಸವಿದದ್ದು ಅಲ್ಲಿನ ಶಾಲೆಯಲ್ಲಿಯೇ ಮೊದಲು. ಜೊತೆಗೆ, ಚೈತ್ರ, ವೈಶಾಖ, ಜೇಷ್ಠ.. ಎಂಬ 12 ಮಾಸಗಳೂ, ವಸಂತ , ಗ್ರೀಷ್ಮ, ವರ್ಷ.. ಎಂಬ 6 ಋತುಗಳೂ, ಅಶ್ವಿನಿ, ಭರಣಿ, ಕೃತಿಕಾ, ರೋಹಿಣೀ.. ಎಂಬಿತ್ಯಾದಿ 27 ನಕ್ಷತ್ರಗಳ ಹೆಸರುಗಳನ್ನು ಉರುಹೊಡೆದದ್ದೂ ಸಹ ಆ ಶಾಲೆಯಲ್ಲಿಯೇ. ಆಗ ಅಭ್ಯಾಸ ಮಾಡಿದ್ದು ಈಗ ಪೂರ್ಣ ನೆನಪಿರದಿದ್ದರೂ, ಆ ಊರಿನ ಬಸ್ ನಿಲ್ದಾಣದ ಬಳಿಯಿದ್ದ ಎತ್ತರದ ಮರದ ಮೇಲೆ ತಲೆಕೆಳಗಾಗಿ ನೇತಾಡುತ್ತಿದ್ದ ನೂರಾರು ಕಪ್ಪು ಬಾವಲಿಗಳು ಮಾತ್ರ ನೆನಪಿನಾಳದಲ್ಲಿ ಹಾಗೇ ಕಪ್ಪುಬಣ್ಣದಲಿ ಹೆಪ್ಪುಗಟ್ಟಿವೆ. ಆದರೆ ಅತ್ಯಂತ ಕಡಿಮೆ ಅವಧಿಯ ಆ ಶಾಲೆಯಲ್ಲಿ ದೊರೆತ ಗೆಳೆತನದ ಹೆಸರುಗಳು ಮನದ  ನೇಪಥ್ಯಕ್ಕೆ ಸರಿದು ಮಸುಕಾಗಿರುವುದು ನನ್ನ ದುರಾದೃಷ್ಟ.         ರಾವಂದೂರು ಎಂಬ ಊರಿದೆ. ಹಾಸನ ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ. ಅಲ್ಲಿ ನಾನು ಐದು ಮತ್ತು ಆರನೆಯ ಇಯತ್ತೆ ಓದುವಾಗಿನ ನೆನಪುಗಳು ಮಾತ್ರ ಇನ್ನೂ ಹಸುರಾಗಿ ಸೊಗಸಾಗಿವೆ! ಅಲ್ಲಿನ  ಶಾಲಾ ಕಾರ್ಯಕ್ರಮಕ್ಕೆ ಮೋಟು ಜಡೆಗೆ ಚೌಲಿ ಹಾಕಿಸಿಕೊಂಡದ್ದು, ಡಾನ್ಸ್ ಮಾಡುವಾಗ ಸೀರೆ ಸಡಿಲವಾಗಿ ಜಾರಿಕೊಂಡದ್ದು, ಕೋಗಿಲೆ ಕಂಠವಿಲ್ಲದ ನಾನೂ ಸಹ “ಚೆಲುವಿ ಚೆಲುವಿ ಎಂದು ಅತಿಯಾಸೆ ಪಡಬೇಡ….” ಎಂದು ಜನಪದ ಗೀತೆ ಹಾಡಲು ಹೋಗಿ ಅರ್ಧಕ್ಕೇ ಬಾಯೊಣಗಿ ನನ್ನ ಸ್ವರ ನನಗೇ ಕೇಳಿಸದಂತಾಗಿ ಮುಂದೆ ಹಾಡದೇ ಬಿಟ್ಟದ್ದು, ಒಂದು ದಪ್ಪದಾಗಿರುವ ಜೀವಂತ ಮೀನನ್ನು  ಬಕೇಟಿನ ಒಳಗಿಟ್ಟುಕೊಂಡು ತಂದ ವಿಜ್ಞಾನದ ಮಾಸ್ಟರರು ಮೀನಿನ ರಚನೆ ಬಗ್ಗೆ ಪಾಠ ಮಾಡಿದ್ದು… ಎಲ್ಲವೂ ನನ್ನ ನೆನಪಿನ ಪರದೆಯ ಮೇಲೆ ಇನ್ನೂ ಚಲಿಸುತ್ತಿರುವ ಚಿತ್ರಗಳು.       ರಾವಂದೂರಿನಲ್ಲಿ ನಮಗೊಂದು ರಮಣೀಯ ಸ್ಥಳವಿತ್ತು. ಅದು ನನ್ನಣ್ಣ ಓದುತ್ತಿದ್ದ ಹೈಸ್ಕೂಲು. ಅದೇ ಊರಿನಲ್ಲಿಯೇ ತುಂಬಾ ದೂರದಲ್ಲಿತ್ತು. ಅಲ್ಲಿಗೆ ಒಂದು ಭಾನುವಾರ ನಾನು, ನನ್ನ ಗೆಳತಿಯರಾದ ಪ್ರಿಯಾ, ಬಬಿತಾ, ರೂಪ, ಶ್ವೇತಾ ಮೊದಲಾದವರು ಪಿಕ್ನಿಕ್ ಹೋಗಿದ್ದೆವು. ಬಹುಶಃ ಮನೆಯಲ್ಲಿ ಹೇಳರಲಿಲ್ಲ. ಹೇಳಿದ್ದರೆ ಅಷ್ಟು ದೂರ ಸಣ್ಣ ಮಕ್ಕಳಾದ ನಮ್ಮನ್ನು ಅವರು ಕಳಿಸುತ್ತಲೂ ಇರಲಿಲ್ಲ. ನಮಗೋ ಅದು ಮೋಸ್ಟ್ ಅಡ್ವೆಂಚರಸ್ ಪಿಕ್ನಿಕ್..! ನಾವೆಲ್ಲಾ ಆ ಹೈಸ್ಕೂಲಿನ ವಿಶಾಲ ಜಾಗ, ದೊಡ್ಡ ಕಟ್ಟಡ, ಆ ಶಾಲಾ ಆವರಣದ ಕಾರಂಜಿ ಕೊಳ, ಮರಗಳ ಸಾಲು, ವಿಶಾಲ ಮೈದಾನ ನೋಡಿ ಕಣ್ಣರಳಿಸಿಕೊಂಡು ಸಂಭ್ರಮಿಸಿದ್ದೆವು.     ಹುಣಸೇಹಣ್ಣು, ಉಪ್ಪು , ಸಕ್ಕರೆ, ಖಾರದಪುಡಿ ಬೆರೆಸಿ ಜಜ್ಜಿ ಮಾಡಿಕೊಂಡ ಅದ್ಭುತ ರುಚಿಯ ಉಂಡೆಯೇ ನಮ್ಮ ಪಿಕ್ನಿಕ್ಕಿನ ಊಟ, ಅಲ್ಲಿ ಆಡಿದ ಮರಕೋತಿ ಆಟ.. ಎಷ್ಟು ಸೊಗಸಿತ್ತು! ಮಕ್ಕಳಿನ್ನೂ ಮನೆ ಸೇರಿಲ್ಲವೆಂದು ದೊಡ್ಡವರ ಆತಂಕವು ಅಮೋಘ ಸಾಹಸದಲ್ಲಿ ಮೈ ಮರೆತಿದ್ದ ನಮಗೆ ಹೇಗೆ ಗೊತ್ತಾಗಬೇಕು?       ಸಂಜೆ ಸೂರ್ಯನನ್ನು ಅವನ ಮನೆಗೆ ಕಳಿಸಿಯೇ ನಾವು ನಮ್ಮ ನಮ್ಮ ಮನೆಗೆ  ಬಂದದ್ದು. ಈ ಬೇಜವಾಬ್ದಾರಿತನದ ಸಾಹಸಕ್ಕೆ ನನಗೆ ಮನೆಯಲ್ಲಿ ಬಹುದೊಡ್ಡ ಸನ್ಮಾನ ಕಾಯುತ್ತಿತ್ತು. ಬಾಗಿಲ ಸಂದಿಗೆ ಸೇರಿಸಿ ಕಣ್ಣು ಅಗಲಿಸಿಕೊಂಡು  ರೊಟ್ಟಿ ಮಗುಚುವ ಕೋಲಿನಿಂದ ಅಮ್ಮ ಬಿಸಿಯಾಗಿ ಕೊಟ್ಟ ಏಟಿನ ರುಚಿಯು ಇವತ್ತಿಗೆ ನಗು ಬರಿಸುವುದು ನಿಜವಾದರೂ ಆ ಹೊತ್ತಿನಲ್ಲಿ ಇನ್ಮುಂದೆ ಗೆಳೆಯರೂ ಬೇಡ, ಅವರೊಡನೆ ಮಾಡಬೇಕೆಂದಿರುವ ಪಿಕ್ನಿಕ್ಕೂ ಬೇಡವೆನಿಸುವಂತೆ ಮಾಡಿತ್ತು. ಇಷ್ಟಾದ ಮೇಲೂ ಆ ಶಾಲೆಯ ರಮ್ಯತೆಗೆ, ಅದರ ಸೊಗಸುಗಾರಿಕೆಗೆ ಸೋತ ಮನಸ್ಸು ಹೈಸ್ಕೂಲ್ ಅನ್ನು ಆ ಶಾಲೆಯಲ್ಲಿಯೇ ಓದಬೇಕೆಂದು ಸಂಕಲ್ಪಿಸಿಕೊಂಡಿತ್ತು. ಅದನ್ನು ಮಾತ್ರ ಇನ್ನೂ ಮರೆಯಲಾಗಿಲ್ಲ. ಆದರೆ ನನಗೆ ಅದೊಂದು ಈಡೇರಲಾಗದ ಕನಸಾಗಿಯೇ ಉಳಿದು ಬಿಟ್ಟದ್ದು ಮಾತ್ರ ನನ್ನ ಜೀವನದ ಪರಮ ನಿರಾಸೆಯ ವಿಷಯವಾಗಿದೆ..      ಅಷ್ಟರಲ್ಲಿ ನನ್ನ ಅಪ್ಪನಿಗೆ ಮಂಡ್ಯ ಜಿಲ್ಲೆಯತ್ತ ವರ್ಗವಾಗಿ ಹಳ್ಳಿಗಳ ಗಮ್ಮತ್ತು ನಿಧಾನವಾಗಿ ದೂರವಾಗುತ್ತಾ ಪಟ್ಟಣವೆಂಬ ಬೆರಗಿನ ಬೆಳಕು ಕಣ್ಣೊಳಗೆ ಹಾಯಲು ಶುರುವಾಯಿತು. ***********************

‘ಎಳೆ ಹಸಿರು ನೆನಪು ..’ Read Post »

ಅನುವಾದ

ಬೇಲಿ

ಅನುವಾದಿತ ಕವಿತೆ ಕನ್ನಡ ಮೂಲ: ಸುನೀತ ಕುಶಾಲನಗರ ಇಂಗ್ಲೀಷಿಗೆ:ಸಮತಾ ಆರ್. ಬೇಲಿ ಬೇಲಿ ಹಾಕಲೇಬೇಕೆಂಬುದು ಬಹುದಿನದ ಕನಸು ಹಾಗೆ,ಹೀಗೆ  ಬೇಕಾದ ಸರಕು ಜೋಡಣೆ, ಭರದ ಸಿದ್ಧತೆ ನಮ್ಮದೇ ಭದ್ರತೆಯ ಕೋಟೆಗೆ ಅದೆಂತ ಉತ್ಸಾಹ ಸಂಧಿ,ಗೊಂಧಿಗಳಲೂ ಹಾವು,ಜಂತೂ ನುಸುಳದಂತೆ ಗಿಡ ನೆಟ್ಟು ಬೇಲಿಯಲೂ ಹೂಗಳ ನಿರೀಕ್ಷೆ. ಕನಸಿನಂತೆ ಮೊಗ್ಗು  ಬಿರಿದೇ ಇಲ್ಲವೆಂದಲ್ಲ ಅವು ಆರಂಭ ಶೂರತ್ವ ಗಿಡವಿರಬೇಕು ಅರಳಿ ಉದುರಿದ ಬೀಜ ಚಿಗುರಲೇಕೋ ಆಕಳಿಸಿ ಎದುರಿದ್ದ ಬೇಲಿಯಲಿ ನಳ ನಳಿಸಿದ ನೀಲಿ ಹೂವಲಿ ಬಿದ್ದ ಕಣ್ಣ ಕೀಳಲಾಗದೆ ಝೇಂಕರಿಸುವ ಹುನ್ನಾರ ಕನಸಿನ ಬೇಲಿ ಸೊರಗಿ ಕೊರಡಾಗುವುದನೊಪ್ಪದೆ ಕೊನರಿಸಲೇಬೇಕೆಂಬ ಹಠಕ್ಕೆ ಬಿದ್ದು ಹನಿಸಿದಷ್ಟೂ ಕಣ್ಣು ಕೊಳವಲ್ಲ ಕಡಲು. ಬೇಲಿ ತುಂಬಾ ಅಂತರದ ಬಿರುಕು ಸಲಗ ಪಳಗಿಸುವಂತೆ  ಕಾಷ್ಠ ಪಲ್ಲವಿಸಲು ಹೈರಾಣು. ಮಳೆ ಹೊಯ್ಯುತ್ತಿದೆ ಈಗ  ಹೊಸ ಭರವಸೆಯ ಬೀಜ  ತಂದಿರಿಸಿರುವೆ ತಡ ಮಾಡದೆ ಬೇಲಿಗುಂಟ ಬಿತ್ತಬೇಕಿದೆ. .                A FENCE Since ages,Dreamt of building a fence,Around our own castle.Desparately collected,This and that andWhatever needed,With suchA vigour and speed. Even the smallest of gapsWere filled with plants,For not to let any snakeOr a tiny worm to creep in. The buds did bloom,As I had dreamt,Every plant at firstBlossomed,Like a new knight,Ready to fight.But the seed from the pod,Yawned to sprout.  Then could notTake the eyes offA beaming blue flowerOn the opposite fenceA plot started to buzz. As my fence of dreamsCan’t be seen so dried.Eyes shed to fillNot only pondsBut oceans.Then determinedTo bringBack to life All the sprigs dried. Struggling off to fillThe gaps of fence,Like fighting  to tameA wild elephant. Now, it has startedTo rain again,Have bought someSeeds of hope,To sow along the line Of the fence of mine. *****

ಬೇಲಿ Read Post »

You cannot copy content of this page

Scroll to Top