ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

‘ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲದು’ ಇದು ಸಾಬೀತಾಗಿ ಶತಮಾನಗಳೇ ಕಳೆದರೂ ನಮ್ಮ ಕಸಾಪ ಗೆ ಒಮ್ಮೆಯೂ ಮಹಿಳಾ ಅಧ್ಯಕ್ಷರ ಆಯ್ಕೆ ಆಗಿಲ್ಲ, ಯಾರೂ ಸಹ ಸ್ಪರ್ಧಿಸಲಾಗಿಲ್ಲ. ಭಾರತವೆಂಬ ದೊಡ್ಡ ಪ್ರಜಾಪ್ರಭುತ್ವದ ರಾಷ್ಟ್ರವನ್ನ ಇಂದಿರಾ ಗಾಂಧಿಯವರು ಆಳಿದರು. ಅಂತೆಯೇ ನಮ್ಮ ಕಸಾಪ ಗೂ ಮಹಿಳಾ ಅಧ್ಯಕ್ಷೆಯ ಆಯ್ಕೆ ಆಗಬೇಕು. ಮನೆಯಲ್ಲಿ ಅಡುಗೆ ಮಾಡುವುದರಿಂದ ಹಿಡಿದು ಆಕಾಶದಲ್ಲಿ ವಿಮಾನ ಚಾಲನೆ, ಅಷ್ಟೇ ಏಕೆ ಅಂತರಿಕ್ಷದವರೆಗೂ ಮಹಿಳೆ ತಲುಪಿಯಾಗಿದೆ. ಪ್ರತಿ ಕ್ಷೇತ್ರದಲ್ಲೂ ಮಹಿಳೆ ತನ್ನ ಪ್ರತಿಭೆ ಮೆರೆದಾಗಿದೆ. ಇಲ್ಲಿ ಮಹಿಳೆ ಪುರುಷನಿಗೆ ಸಮ ಎಂದು ಹೇಳುವದಕ್ಕಿಂತ ಮಹಿಳೆಗೆ ಒಂದು ಕೈ ಹೆಚ್ಚೇ ಸಾಮರ್ಥ್ಯವಿದೆ ಎಂದರೆ ಖಂಡಿತ ಉತ್ಪ್ರೇಕ್ಷೆ ಅಲ್ಲ! ಮನೆ, ಮಕ್ಕಳು, ಸಂಸಾರ, ಉದ್ಯೋಗ, ಕೆರಿಯರ್, ಆಸಕ್ತಿಗಳು ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುತ್ತಿರುವಂತಹ ಮಹಿಳೆ ಕಸಾಪ ಅಧ್ಯಕ್ಷೆ ಆಗಿಯೂ ಬಹಳಷ್ಟು ಕೆಲಸಗಳನ್ನ ಪರಿಷತ್ತಿನ ಔನ್ಯತ್ಯಕ್ಕಾಗಿ ಮಾಡಬಲ್ಲಳು. ಶರಣರ ಕಾಲದಿಂದಲೂ ಕವಯಿತ್ರಿಯರು ಕನ್ನಡ ಸಾಹಿತ್ಯಕ್ಕೆ ಉತ್ಕೃಷ್ಟ ಕೊಡುಗೆ ಮಹಿಳೆಯರು ನೀಡುತ್ತಲೇ ಬಂದಿದ್ದಾರೆ. ಪ್ರಸ್ತುತ ನಮ್ಮಲ್ಲಿ ಬಹಳಷ್ಟು ಹಿರಿಯ ಮಹಿಳಾ ಸಾಹಿತಿಗಳಿದ್ದಾರೆ, ಅವರಲ್ಲಿ ಯಾರಾದರೂ ಸ್ಪರ್ಧಿಸಿ ಅಧ್ಯಕ್ಷರ ಸ್ಥಾನ ತುಂಬಿದರೆ ಇಲ್ಲಿಯವರೆಗೂ ಮಹಿಳಾ ಅಧ್ಯಕ್ಷೆ ಇಲ್ಲ ಎನ್ನುವ ಕೊರಗೂ ನೀಗುತ್ತೆ. ಮತ್ತಷ್ಟು ಹೊಸ ಕನ್ನಡ ಪರ ಕೆಲಸಗಳನ್ನ, ಹೊಸ ಸಾಹಿತ್ಯಿಕ ಚಟುವಟಿಕೆಗಳನ್ನ ಮಾಡಿ ಪರಿಷತ್ತಿನ ಜೀರ್ಣೋದ್ಧಾರ ಮಾಡಲಿ ಅನ್ನೋದು ನನ್ನ ಆಶಯ.

****************************************************************

ಚೈತ್ರಾ ಶಿವಯೋಗಿಮಠ

About The Author

2 thoughts on “ಕಸಾಪಗೆ ಮಹಿಳಾ ಅಧ್ಯಕ್ಷರು ಬೇಕು”

  1. ಸಾಹಿತ್ಯದಲ್ಲಿ ಹೆಣ್ಣಿನ ಅಮೋಘ ಪಾತ್ರವನ್ನು ಗುರುತಿಸಿ ಅಧ್ಯಕ್ಷ ಸ್ಥಾನಕ್ಕೆ ಅವಳನ್ನ ಮುನ್ನೆಲೆಗೆ ತಂದಿದ್ದೀರಿ ಅಭಿನಂದನೆಗಳು

Leave a Reply

You cannot copy content of this page

Scroll to Top