ಗಝಲ್
ನೀ ಮೌನವಾದರೆ ಏನೆಂದು ತಿಳಿಯಲಿ ನಾನು
ಹೇಳಿಬಿಡು ನಿನ್ನ ಮನಸಿಗೆ ಏನಾಯಿತು ಮೈಲಿಗೆ ಸಖಾ
ಪ್ರಶ್ನೆಗಳು ಭಾಗ್ಯ ಸಿ. ಕಾಣದ ವಿಧಿಯು ಸೂತ್ರದಾರನಾಗಿಹಿಡಿದಿಟ್ಟಿರುವನು ಜೀವನವನು ಎನ್ನುವರುಯೋಜನೆ ಮೇಲೊಂದು ಯೋಜನೆ ಮಾಡಿದರೂಅಣತಿಯಂತೆ ಸಾಗಿತ್ತಿಲ್ಲ ಬದುಕು ಕ್ರಮಿಸಬೇಕಾದ ಹಾದಿ ಬಹಳ ದೂರವಿದೆಏಕಾಂಗಿಯಾಗಿ ದಾರಿ ಸವಿಸಬೇಕಿದೆಕಿತ್ತೆಸೆಯಬೇಕಿದೆ ಸುತ್ತಲಿನ ಮುಳ್ಳನುಇರಿಸಬೇಕಿದೆ ಅಂತರಾಳದಲಿ ಕಲ್ಲನುನೊಯದಿರಲಿ ಅಪಹಾಸ್ಯದಿಂದಲಿ ಒಂದು ಹೆಜ್ಜೆ ಗುರಿಯಡೆಗೆಜಗ್ಗುತ್ತಿದೆ ಎರಡೆಜ್ಜೆ ಹಿಂದುಗಡೆಗೆಹಿಡಿದೆಳೆಯುತ್ತಿರುವವರ ನಾ ಅರಿಯೆವಿಧಿಯಾಟವೆನ್ನುತ್ತಿದೆ ಪ್ರಪಂಚಶಿಕ್ಷೆಯಾಗಬೇಕು ತಪ್ಪಿಗೆ ಅರಿವಿದೆತಿಳಿಯದೆ ಪ್ರತಿಕೂಲ ಪರಿಣಾಮವೇಕೆ? ಶಿಸ್ತಿನ ಯೋಜನೆಗೆ ಜಯ ಬೇಕಿದೆಪ್ರಶ್ನೆ ಎದ್ದಿದೆ ಮನಸ್ಸಿನಲಿಕಾಣದ ವಿಧಿಯೇಕೆ ಅಡ್ಡಗಾಲುಭವಿಷ್ಯ ನಿರ್ಮಾಣದಲಿ *********************
ಮುನಿಸೇತಕೆ ಈ ಬಗೆ ಸ್ಮಿತಾ ರಾಘವೇಂದ್ರ ಮಳೆ ಇಲ್ಲದೇ ಬದುಕು ಸಾಗುತ್ತದಾ ಜೀವ ಉಳಿಯುತ್ತದಾ, ಬೆಳೆ ಬೆಳೆಯುತ್ತದಾ? ಇವೆಲ್ಲ ಕಾಲ ಕಾಲಕ್ಕೆ ತಕ್ಕಂತೆ ಆಗುತ್ತಿದ್ದರೇ ಚಂದ. ಕೋಪ ಯಾಕೆ ಬರುತ್ತದೆ ಹೇಳು ತಪ್ಪು ಮಾಡಿದಾಗ ತಾನೇ. ಪ್ರಕೃತಿ ಕೋಪಿಸಿಕೊಳ್ಳಲೂ ಸಕಾರಣವಿರುತ್ತದೆ. ನೀರು, ವಾಯು,ಅಗ್ನಿ, ಶಿವನ ಮೂರು ಕಣ್ಣುಗಳು. ಎಲ್ಲಿ ಯಾವುದು ಬೇಕು ಹೇಗೆ ತರೆದು ಕೊಳ್ಳಬೇಕು ಎಂಬುದು ಆ ಶಿವನೇ ನಿರ್ಧರಿಸುತ್ತಾನೆ. ಪ್ರಕೃತಿ ಮಾತೆ ಎಷ್ಟೊಂದು ನೋವಿಗೆ ಒಳಗಾಗಿದ್ದಾಳೆ. ಕ್ರೂರ ಕೈಗಳ ನಡುವೆ ನುಲುಗಿ ಹೋಗಿದ್ದಾಳೆ. ಕಿತ್ತು ತಿನ್ನುವ ದುರುಳರು ಇಂಚಿಚೂ ಬಿಡೆದೇ ಕಬಳಿಸಿ ಬಿಟ್ಟಿದ್ದಾರೆ. ನಮ್ಮದಲ್ಲದ ಭೂಮಿಯಲ್ಲಿ ನಮ್ಮದೇ ಮಹಲು ಕಟ್ಟಿ ಬೀಗುವಾಗ, ಸಾಕು ಸಹನೆ ಎಂದು ಸ್ವಲ್ಪವೇ ಸ್ವಲ್ಪ ಕೊಸರಾಡುತ್ತಾಳೆ ಭೂಮಿ ತಾಯಿ ಅಷ್ಟೇ.. ಪ್ರಕೃತಿ ಮಾತೆಗೆ ನಿನ್ನ ಸಮತೋಲನವನ್ನು ನೀನೇ ಕಾಪಾಡಿಕೋ ಎಂದು ಆ ಶಿವ ಸೃಷ್ಟಿಯ ಆರಂಭದಲ್ಲೇ ಹೇಳಿಬಿಟ್ಟಿದ್ದಾನೆ, ಹೆಣ್ಣಿಗೂ ಅಷ್ಟೇ… ನಿನ್ನಿಂದಲೂ ಅಗದೇ ಹೋದಾಗ ನಾನು ನಿನ್ನ ಸಹಾಯಕನಾಗಿ ಬರುತ್ತೇನೆ ಯಾವುದಾದರೂ ರೂಪದಲ್ಲಿ ಎಂದಿದ್ದಾನೆ. ಇವೆಲ್ಲ ದೈವ ಸೃಷ್ಟಿಯ ಗುಟ್ಟು. ಎಂದು ತಾತ ತನ್ನ ಪುಟ್ಟ ಮೊಮ್ಮಗಳನ್ನು ಎದುರು ಕುಳ್ಳಿರಿಸಿಕೊಂಡು ಪಾಠದಂತೆ ಹೇಳುತ್ತಿದ್ದರು. ಅವಳಿಗೆ ಎಷ್ಟು ಅರ್ಥವಾಯಿತೋ ಬಿಟ್ಟಿತೋ, ತನ್ನ ಪುಟಾಣಿ ತಲೆಯಲ್ಲಿ ಕಟ್ಟಿದ ಎರಡು ಚೋಟು ಜಡೆಗಳನ್ನು ಅಲ್ಲಾಡಿಸುತ್ತಾ ಹೌದಾ ತಾತಾ,,,ಮಳೆ ನನ್ನ ಪ್ರೀತಿಯ ಗೆಳತಿ ಎನ್ನುತ್ತ ಛಂಗನೇ ಜಿಗಿದು ತನ್ನ ಆಟದ ಮೈದಾನದತ್ತ ಸಾಗಿಯೇ ಬಿಟ್ಟಳು. ಆಗಷ್ಟೇ ದೊಡ್ಡ ಪ್ರವಾಹ ವೊಂದರಲಿ ಮಿಂದೆದ್ದ ನನಗೆ ಅವರ ಮಾತು ಬಹಳವೇ ಕಾಡ ತೊಡಗಿತು. ಎಷ್ಟು ಚಂದಗೆ ಹಾಸಿಕೊಂಡ ಹಚ್ಚ ಹಸಿರಿನ ಊರು ಮೈದುಂಬಿ ನಿಂತ ಇಳೆಯೊಡಲ ಬೆಳೆಗಳು. ಪ್ರಕೃತಿಯೇ ದೇವರೆಂದು ಪೂಜಿಸುವ ಮುಗ್ಧ ಜನರು. ಭೂಮಿ ತಾಯಿಯ ಸೇವೆಯಲ್ಲಿ ಸದಾ ಸನ್ನದ್ದರು. ಆಧುನಿಕ ಬದುಕಿನ ಗೊಡವೆಯೇ ಬೇಡವೆಂದು ತಮ್ಮದೇ ಗೂಡಿನ ಬೆಚ್ಚಗಿನ ಭಾವದಲಿ ಜೀವಿಸುತ್ತ ಕಾಯಕವೇ ಕೈಲಾಸವೆಂದವರು. ಆ ಒಂದು ದಿನ ಬಾರದೇ ಹೋಗಿದ್ದರೆ,? ಇಂದು ಆ ಕೈಗಳಿಂದ ಸಾವಿರಾರು ಜನರ ತಟ್ಟೆ ತುಂಬುತಿತ್ತಲ್ಲ, ಯಾರದ್ದು ವಿಕೃತಿ ಯಾರದ್ದು ಸಂಸ್ಕೃತಿ ,ಯಾವುದು ಪಾಪ ಯಾವುದು ಪುಣ್ಯ. ಆದಿನಗಳು ನನ್ನ ಮನದೊಳಗೆ ಮೆಲ್ಲನೇ ಚಲಿಸ ತೊಡಗಿದವು. ದಿನದಿನಕ್ಕೂ ಧಾರಾಕಾರವಾಗಿ ಸುರಿದ ಮಳೆ ಜನ ಜೀವನವನ್ನು ಅಸ್ತವ್ಯಸ್ತ ಗೊಳಿಸುವಲ್ಲಿ ದಾಪುಗಾಲಿಡುತ್ತ ಸಾಗಿತ್ತು. ಊರು ಅಕ್ಷರಶಃ ಜಲಸಮಾಧಿ ಸ್ಥಿತಿಯಲ್ಲಿ ಇತ್ತು. ಯಾವಾಗ ಏನು ಸಂಭವಿಸಬಹುದು ಎಂಬ ಭಯ, ಜೀವ ಉಳಿಸಿಕೊಳ್ಳುವ ಬಗೆ ಹೇಗೆಂಬುದೇ ಯೋಚನೆ. ಸಹಾಯ ಹಸ್ತ ಎಲ್ಲರಿಗೂ ಬೇಕು. ಕೈ ಚಾಚುವವರು ಯಾರು!? ಎಲ್ಲೆಲ್ಲಿಂದಲೋ ಚಾಚಿದ ಕೈಗಳು ಕೈ ಕೈ ಸೇರಿ ಒಂದು ಸಂಕವಾಗಿ ಮಾನವೀಯತೆ ಮೆರೆಯುತ್ತಿದ್ದರೆ. ಜನ ಮಾನಸದಲ್ಲಿ ಕಲ್ಪಿಸದ ಪ್ರವಾಹವೊಂದು ಅಗಾಧ ಗುರುತು ಉಳಿಸಿ ನಡೆದೇ ಬಿಟ್ಟಿತ್ತು . ರಾತ್ರಿ ಬೆಳಗಾಗುವದರೊಳಗೆ ತನ್ನ ಕದಂಬಬಾಹುವನ್ನು ಚಾಚಿ ತನ್ನ ಕಾರ್ಯವ್ಯಾಪ್ತಿಯ ಪ್ರದೇಶಗಳನ್ನು ಪ್ರತೀ ನದಿಗಳೂ ತೋರಿಸಿದ್ದು ನಿಜ. ಆವತ್ತು ಬೆಳಕು ಹರಿಯುವ ಹೊತ್ತಿಗೆ ಬದುಕು ಮೂರಾಬಟ್ಟೆಯಾಗಿದ್ದೂ ನಿಜ. ಹರಗಿಕೊಂಡ ಬೆಳೆಗಳು ಪೇರಿಸಿಟ್ಟ ಬದುಕಿನ ಉಳಿಕೆಗಳು,ಕ್ಷಣ ಮಾತ್ರದಲ್ಲಿ ಪಳೆಯುಳಿಕೆಗಳಾಗಿದ್ದವು. ಅಲ್ಲೆಲ್ಲೋ ಸಿಕ್ಕಿ ಕೊಂಡ ನಾಯಿ ಮರಿಯೊಂದು ತನ್ನ ಒಡೆಯನಿಗಾಗಿ ಆಕ್ರಂದಿಸುತ್ತಲೇ ಇತ್ತು. ಯಾವುದೋ ಮರವೇರಿ ಕುಳಿತ ಬೆಕ್ಕು ಕಕ್ಕಾಬಿಕ್ಕಿಯಾಗಿತ್ತು. ಹಾಲನಿತ್ತು ಸಲಹಿದ ಹಸುಗಳಿಗೆ ಹಾಲಾಹಲವನೇ ಇತ್ತ ನೋವು. ಏನು ಅಂತ ಬಾಚಿ ಕೊಳ್ಳುವದು. ಇಷ್ಟು ದಿನದ ಬದುಕಿಗೆ ಜೊತೆಯಾದ ಒಂದೇ ಒಂದು ವಸ್ತುವನ್ನೂ ನಾನು ಬಿಟ್ಟು ಬರಲಾರೆ ಎಂದು ಎಪ್ಪತ್ತರ ಹರೆಯದ ವ್ಯಕ್ತಿಯೊಬ್ಬ ಮನೆಯ ಬಿಟ್ಟು ಕದಲದೇ ಕುಳಿತು ಕೊಂಡಿದ್ದನೆಂದರೆ ಅವನೊಳಗಿನ ವೇದನೆ ಊಹಿಸಲಾಗಲಿ ಧಾಖಲಿಸಲಾಗಲೀ ಆದೀತೆ? ಪುಟ್ಟ ಮಗುವೊಂದು ತನ್ನ ಆಟಿಕೆಯನ್ನು ತನ್ನ ಮನೆಯಿರುವ ಜಾಗಕ್ಕೆ ಹೋಗಿ ಮಣ್ಣಿನಲ್ಲಿ ಕೆದರಿ ಕೆದರಿ ಹುಡುಕುತ್ತಿತ್ತು. ಶಾಲೆಯ ಅಳಿಸಿಹೋದ ಅಕ್ಷರಗಳ ಪುಸ್ತಕ ಎತ್ತಿಕೊಂಡ ಎಳೆಯ ಮುಖದೊಳಗೆ ಬದುಕೇ ಅಳಿಸಿ ಹೋದ ವೇದನೆ. ಯುದ್ದ ಮುಗಿದ ಸ್ಮಶಾನ ಮೌನ. ನದಿ ಹೊತ್ತುತಂದ ರಾಶಿ ರಾಶಿ ಕಸಗಳು, ಸೇಡು ತೀರಿಸಿಕೊಳ್ಳಲು, ಮುರಿ ತೀರಿಸಲು ಮನೆ ಬಾಗಿಲಿಗೇ ಬಂದು ಸುಂಕ ಕೇಳಿ ಹೋದಂತೆ ಭಾಸವಾಗುತ್ತಿತ್ತು. ಅದೊಂದು ದಟ್ಟವಾದ ಕಾಡು ಯಾವ ರಸ್ತೆಯೂ ಇಲ್ಲದ ನಡೆದು ನಡೆದೇ ಸವೆದ ಕಾಲುದಾರಿ.ಪ್ರಮುಖ ರಸ್ತೆಯಿಂದ ಸುಮಾರು ನಾಲ್ಕೈದು ಕಿಲೋಮೀಟರ್ ಚಲಿಸಿದ ನಂತರ ಮೂರು ನಾಲ್ಕು ಗುಡಿಸಲು ಅವರು ಆದುನಿಕ ಪ್ರಪಂಚದಿಂದ ಬಹಳ ದೂರ. ಕಾಡೇ ಅವರ ಜೀವನಾಧಾರ ಕಾಡೇ ಭಕ್ತಿ,ಕಾಡೇ ಪ್ರೀತಿ,ಭೂತಾಯಿಗಾಗಲೀ ಪ್ರಕೃತಿ ಮಾತೆಗಾಗಲೀ ನೋವು ಮಾಡುವದು ಅಂದರೆ ಅವರಿಗೆ ಗೊತ್ತೇ ಇಲ್ಲ,ಭೂತಾಯಿಯನ್ನು ದೇವರಂತೆ ಮಕ್ಕಳಂತೆ ಸಲಹುವ ನಿರ್ಮೋಹ ಮನಸಿನವರು. ಪಕ್ಕದಲ್ಲೇ ಹರಿಯುವ ತೊರೆ ಇತ್ತು. ಇದ್ದಕ್ಕಿದ್ದಂತೆ ಬಂದ ಮಳೆಯ ಆರ್ಭಟ ಪ್ರವಾಹದಿಂದ ಎಲ್ಲ ಮನೆಗಳೂ ಜಲಸಮಾಧಿ ಯಾಗತೊಡಗಿತ್ತು. ಜೀವ ಉಳುಸಿಕೊಳ್ಳಲು ಎಲ್ಲೆಲ್ಲಿಯೋ ಬೆಟ್ಟ ಗುಡ್ಡಗಳನ್ನು ಅಲೆದು ಒಂದೆರಡು ದಿನಗಳ ನಂತರ ಒಂದು ಆಶ್ರಯಕೇಂದ್ರಕ್ಕೆ ಬಂದು ಸೇರಿಕೊಂಡರು. ಅದರಲ್ಲೊಂದು ಕುಟುಂಬ. ಮೂರು ಮಕ್ಕಳು, ತಂದೆ,ತಾಯಿ. ಸುಮಾರು ತಿಂಗಳಿಗೂ ಹೆಚ್ಚುಕಾಲ ಆಶ್ರಯ ಕೇಂದ್ರದಲ್ಲೇ ಇರಬೇಕಾಗಿ ಬಂತು. ಒಂದೇ ಸಮನೆ ಸುರಿವ ಮಳೆ ಯಾರ ಕಣ್ಣೀರಿಗೂ ನಿಲ್ಲಲೇ ಇಲ್ಲ. ಕಣ್ಣೀರು ಸುರಿಸುತ್ತ, ಪ್ರವಾಹ ತಗ್ಗಿದ ಮೇಲೆ ಮನೆಯ ಅವಶೇಷಗಳತ್ತ ಸಾಗಿದ ಆ ಮೂರು ಮಕ್ಕಳ ಅಸಹಾಯಕ ತಂದೆ. ತನ್ನ ಧರ್ಪ ನಿನ್ನ ಮೇಲಿನ ಪ್ರಹಾರ ಇನ್ನೂ ಮುಗಿದಿಲ್ಲವೆಂದು,ಯುದ್ಧ ಭೂಮಿಯಲ್ಲಿ ಸೋತು ಶರಣಾಗಿ ಶಸ್ತ್ರಾಸ್ತ್ರ ತ್ಯಜಿಸಿದ ಮೇಲೂ ಹಿಂದಿನಿಂದ ಬಂದು ಆಕ್ರಮಣ ಮಾಡಿದ ದ್ರುಷ್ಟದ್ಯುಮ್ನ ನಂತೆ, ಮನೆಯ ಉಳಿದ ಅರ್ಧ ಗೋಡೆ ಅವನ ಮೈ ಮೇಲೆ ದೊಪ್ಪನೇ ಬಿತ್ತು. ಅಷ್ಟೇ ಮತ್ತೆ ಅವನು ಕಣ್ಣೀರು ಹಾಕಲೇ ಇಲ್ಲ. ಆ ಮಕ್ಕಳು ತಮ್ಮ ಅಪ್ಪನ ಹೊರಗೆ ತನ್ನಿ ಬದುಕಿಸಿ ಕೊಡಿ ಎಂದು ಕಂಡ ಕಂಡವರ ಹತ್ತಿರ ಮೌನ ಭಾಷೆಯಲ್ಲಿ ಅಂಗಲಾಚುತ್ತಿದ್ದರು. ಆಗಲೇ ಗೊತ್ತಾಗಿದ್ದು ಆ ಮಕ್ಕಳಿಗೆ ಮಾತು ಬಾರದು ಎಂದು. ಈ ದೃಷ್ಯವನ್ನು ನೋಡಲಾಗದೇ ನಾನು ಅಲ್ಲಿಂದ ಹೊರಟೇ ಹೋದೆ. ಒಂದಿನ ಪೇಪರ್ ನಲ್ಲಿ ಸುದ್ದಿ ಪ್ರಕಟವಾಗಿತ್ತು ಆಶ್ರಯ ಕೇಂದ್ರದಲ್ಲಿ ವಾಸವಾಗಿದ್ದ ಮಾತು ಬಾರದ ಮಕ್ಕಳ ತಾಯಿ ಕಾಯಿಲೆಗೆ ತುತ್ತಾಗಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರಕದೇ ಸಾವನ್ನಪ್ಪಿದಳು ಎಂದು .ತಕ್ಷಣ ಆ ಊರಿನ ನನ್ನ ಪರಿಚಯದವರಿಗೆ ಪೋನಾಯಿಸಿ ಕೇಳಿದೆ . ಹೌದು ತಂದೆ ಕಳೆದು ಕೊಂಡ ಅದೇ ಕುಟುಂಬ. ಮಕ್ಕಳು!?? ಎಂದೆ. ಮಿಡಿಯಾದವರು ಊರ ಜನ ಎಲ್ಲ ಬಹಳ ಮಂದಿ ಬಂದಿದ್ರು,ಯಾರೋ ಕರ್ಕೊಂಡು ಹೋದರು. ಮಕ್ಕಳನ್ನು ನಾವು ನೋಡಿಕೊಳ್ತೀವಿ ಅಂತ ಅಂದರು. ಏನು ಮಾಡ್ತಾರೋ ಗೊತ್ತಿಲ್ಲ ಪಾಪ,, ಅವನ ಮಾತಲ್ಲಿ ದುಗುಡವಿತ್ತು.ಮಾತು ಒಬ್ಬರಿಗೂ ಬರಲ್ಲ ಮೆಡಮ್ ಅನ್ನುತ್ತಿದ್ದರೆ, ಭಾರವಾದ ಮನಸಿಂದ ಪೋನ್ ಇಟ್ಟೆ, ಯಾರ ಪಾಪಕ್ಕೆ ಯಾರಿಗೆ ಶಿಕ್ಷೆ. ನೇರವಾಗಿ ತಪ್ಪಿತಸ್ತನಿಗೇ ಶಿಕ್ಷೆ ಕೊಡುವ, ಅಧರ್ಮ ಸಂಭವಿಸುವಲ್ಲೇ ಧರ್ಮ ಎತ್ತಿಹಿಡಿಯುವ ಕೆಲಸ ಆ ದೇವರು ಎಂದು ಮಾಡುತ್ತಾನೋ. ಯಾರೋ ಮಾಡಿದ ತಪ್ಪಿಗೆ ಇನ್ನಾರಿಗೋ ಶಿಕ್ಷೆ ನೀಡುವುದು ದೇವರ ಕಟಕಟೆಯಲ್ಲೂ ಮುಗಿದು ಹೋಗಲಿ. ಮತ್ತೆ ಆ ದೇವರಲ್ಲೇ ಪ್ರಾರ್ಥಿಸಿದೆ.. ಯಾಕೋ ಆ ಪುಟ್ಟ ಮಗುವಿಗೆ ತಾತ ಹೇಳುತ್ತಿದ್ದ ವೇದಾಂತ ಬರೀ ವೇದಾಂತವಾಗಿಯೇ ಕಂಡಿತು. ಆ ಕ್ಷಣಕ್ಕೆ..
ಸರಳವೇ ಸುಂದರ ಇಂಗ್ಲೀಷ್ ಮೂಲ:ಮ್ಯಾಥಿವ್ ಪಿ ಥಾಮಸ್ ಕನ್ನಡಕ್ಕೆ:ಚೈತ್ರಾ ಶಿವಯೋಗಿಮಠ ಪುಟ್ಟ ವೃಕ್ಷಮಾತೆಯೊಬ್ಬಳು ಕೈಚಾಚಿ ಕರೆದಳು,ತನ್ನ ಪ್ರೀತಿಯ ತೆಕ್ಕೆಯಲ್ಲಿ ನನ್ನ ಎತ್ತಿ ಮೇಲಕ್ಕೆಸೆದು ಆಡಿಸಿದಳುಅಲ್ಲಿ ಮೇಲೆ, ಸಣ್ಣ ಬಿಳಿ ಹತ್ತಿಯಂತಹ ಮೋಡಗಳು ತೇಲುವುದ ಕಂಡೆಬಾಳಿನ ಅವ್ಯಕ್ತ ಚಿತ್ರಗಳನು ತಿಳಿ ನೀಲಿ ಬಾನ ಪಟದ ಮೇಲೆ ಬಿಡಿಸಿದಂತೆ. ಅವಳು ತನ್ನ ನೆಮ್ಮದಿಯ ನೆಳಲಿನ ಮಡಿಲಲಿ ನನ್ನ ಮಲಗಿಸಿದಳು.ದೂರದೂರುಗಳ, ಹಚ್ಚ ಹಸಿರು ಬಯಲುಗಳ ಕನಸ ಕಂಡೆಅಲ್ಲಿ, ಉಕ್ಕಿ ಹರಿಯುವ ನದಿಗಳು ಪ್ರತಿ ಕಲ್ಲುಗಳನ್ನು ನುಣುಪಾಗಿಸುವುವುಅಲ್ಲಿ, ನವಿಲು ತನ್ನ ನಲ್ಲೆಯ ಹೃದಯದ ತಾಳಕೆ ಹೆಜ್ಜೆ ಹಾಕುವುದುಅಲ್ಲಿ, ಹುಲ್ಲೆ-ಹುಲಿಗಳು ಸ್ವಚ್ಛಂದವಾಗಿ ಒಂದೇ ಕೊಳದಲಿ ನೀರು ಕುಡಿಯುವವುಅಲ್ಲಿ, ಮಕ್ಕಳು ಗಾಳಿಯಲ್ಲಿ ಅಚ್ಚ ಬಿಳಿ ಹೊಗೆಯುಂಗುರಗಳನು ಹಿಡಿಯಲು ಯಾವ ಅಳುಕಿಲ್ಲದೆ ಓಡುವರು.ಅಲ್ಲಿ, ಮುಂಬೆಳಗಲಿ ಮುಗಿಲು ಬೆಟ್ಟಗಳನು ತಬ್ಬುವುದು.ದೂರದೂರುಗಳ, ಹಚ್ಚ ಹಸಿರು ಬಯಲುಗಳ ಕನಸ ಕಂಡೆ ವರುಷಗಳ ನಂತರ….. ವಿಮಾನದಲ್ಲಿ ಕುಳಿತು ಮುಗಿಲ ಮೇಲೆ ಹಾರಿದೆ.ಎತ್ತರದ ಕಾರ್ಖಾನೆ-ಕಟ್ಟಡಗಳು ಉಗುಳುವ ಹೊಗೆ-ಧೂಳುಗಳಿಂದ ಮೋಡಗಳು ಕಡುಗಪ್ಪಾಗಿ ಬಿಮ್ಮನಿಸಿದ್ದವುಹಾಲು-ಜೇನುಗಳ ಸಮೃದ್ಧ ನಾಡನ್ನು ಕಟ್ಟಲು,ಕಲ್ಲಿನ ಗಣಿಗಳು, ಬೆಳ್ಳಿ-ಬಂಗಾರದ ಖನಿಗಳ ಕನಸ ಕಂಡೆಆಯುಧದ ಬಲಿಪೀಠಗಳು, ಹುತಾತ್ಮರ ಪ್ರತಿಮೆಗಳ ಕನಸ ಕಂಡೆಮರಮುಟ್ಟು, ಉಕ್ಕು, ಗಾರೆ, ಇಟ್ಟಿಗೆಗಳ ಕನಸ ಕಂಡೆಇಷ್ಟೆಲ್ಲ ಕನಸುಗಳುವಿಮಾನ ಕೆಳಗಿಳಿದು, ವಿವಿಧ ಆಕಾರದ ಮುಖಗವಸುಗಳ ತೊಟ್ಟಮನುಷ್ಯರು ಅಂತರ ಕಾಯ್ದುಕೊಂಡು ನನ್ನನ್ನು ಸ್ವಾಗತಿಸುವವರೆಗೆ! ಆ ದೇವರ ಸೃಷ್ಟಿಯ ಒಂದು ಸಣ್ಣ ವೈರಾಣುವಿನಿಂದಾಗಿಮತ್ತೆ ಸ್ವಚ್ಛ ಆಕಾಶ, ಸ್ವಚ್ಛ ಭೂಮಿಯ ಕನಸ ಕಂಡೆ.ಇನ್ನಿಲ್ಲದ ಮರದ ಅಪ್ಪುಗೆ ಬಯಸಿ ಹಂಬಲಸಿದೆ! “ಸರಳವೇ ಸುಂದರ”ವೆಂದು ಮಮ್ಮಲ ಮರುಗಿದೆ! ********************************
ಎಚ್ ಎನ್ ರವರ ಸರಳತೆ ಮತ್ತು ಸಾಮಾಜಿಕ ಚಿಂತನೆ. ನಾಡು ಕಂಡ ಅಪರೂಪದ ಧೀಮಂತ ಸಜ್ಜನ ವ್ಯಕ್ತಿ,ಅಧ್ಯಾಪಕ, ಆಡಳಿತಗಾರ, ಸ್ನೇಹಮಯ ಮಾನವತಾವಾದಿ, ಪ್ರಗತಿಪರವಿಚಾರವಾದಿ, ಹಾಸ್ಯ ಪ್ರಜ್ಞೆಯ ವ್ಯಕ್ತಿತ್ವ,ರಾಷ್ಟ್ರೀಯವಾದಿ,ಖಾದಿ ಬಟ್ಟೆಯನ್ನೇ ಕೊನೆಯವರೆಗೂ ಧರಿಸುತ್ತಿದ ಮೇಧಾವಿ,ಬದುಕಿನೂದ್ದಕ್ಕೂ ಸರಳತೆ ಜೀವನಸಾಗಿಸಿದ ಸಾಧಕ. ಕಡು ಬಡತನದ ನಡುವೆಯೂ ಬದುಕನ್ನು ತಮ್ಮ ಇಷ್ಟದಂತೆ ಕಟ್ಟಿಕೊಂಡು ಬೆಳೆದಕರುಣಾಮೂರ್ತಿ ಡಾ.ಎಚ್.ನರಸಿಂಹಯ್ಯನವರು. ದಟ್ಟ ದಾರಿದ್ರ್ಯದ ಮಧ್ಯೆಯೂ ತನ್ನಲ್ಲಿ ಅಂತರ್ಗತವಾಗಿದ್ದ ಪ್ರತಿಭೆಯ ಮೂಲಕ ವ್ಯಕ್ತಿಯೋರ್ವ ಎಂಥ ಎತ್ತರಕ್ಕೆ ಬೆಳೆದು ನಿಲ್ಲಬಹುದೆನ್ನುವುದನ್ನು ಜಾಗತಿಕ ಪ್ರಪಂಚಕ್ಕೆ ತೋರಿಸಿಕೊಟ್ಟ ಮಾಹಾಪುರುಷ.ಹಾಗಾಗಿಶಿಸ್ತು ಮತ್ತು ಸರಳತೆಗೆ ಎಚ್ಚೆನ್ ರವರು ಹೆಚ್ಚು ಆದ್ಯತೆ ನೀಡಿದವರು.ಜೊತೆಗೆ ಕರ್ನಾಟಕದ ಮೂಡಲಸೀಮೆಯ ಹುಡುಗನೊಬ್ಬ ಅಮೆರಿಕ್ಕೆ ಹೋದರೂ ಉಪ್ಪಿಟ್ಟು ತಿನ್ನುವ, ಗಾಂಧಿಟೊಪ್ಪಿಯನ್ನೇ ತೊಡುವ ಮೂಲಕ ಭಾರತದ ಹಿರಿಮೆಯನ್ನು ಕಾಪಾಡಿಕೊಂಡು ಬಂದ ಶಿಕ್ಷಣಪ್ರೇಮಿ ಎನ್ನುವುದು ನಾವ್ಯಾರು ಮರೆಯುವಂತಿಲ್ಲ.ಸರಳತೆ, ಪ್ರಾಮಾಣಿಕತೆ, ಸಮಾಜಿಕ ಚಿಂತನೆ, ಪರಿಶುದ್ಧತೆಯನ್ನು ತಮ್ಮ ಬಾಳಿನುದ್ದಕ್ಕೂ ಒಂದು ವ್ರತದಂತೆ ಕಾಯ್ದುಕೊಂಡು ಬಂದ ಎಚ್ಚೆನ್‍ರ ಬದುಕು ಇಂದಿನ ಸಮಾಜಕ್ಕೆ ಆದರ್ಶ ಮತ್ತು ಮಾರ್ಗದರ್ಶನ ಎಂಬುವುದರಲ್ಲಿ ಎರಡು ಮಾತಿಲ್ಲ ಬಂಧುಗಳೆ. ಡಾ.ಎಚ್ ಎನ್ ರವರ ಸರಳತೆ:ಡಾ.ಎಚ್ ಎನ್ ರವರ ಬದುಕಿನಲ್ಲಿ ಅವರು ಕಂಡ ನೋವು, ಸಂಕಟ, ಅನುಭವಿಸಿದ ಬಡತನ, ತಂದೆಯ ಸಾವು, ಓದಿಗಾಗಿ ಊರೂರು ಅಲೆದದ್ದು, ಬರಿಗಾಲಿನಲ್ಲಿ ನಡೆದುಕೊಂಡೆ ಬೆಂಗಳೂರು ತಲುಪಿದ್ದು, ಬದುಕಿಗೊಂದು ಹೊಸ ತಿರುವು ನೀಡಿದ ನ್ಯಾಷನಲ್ ಹೈಸ್ಕೂಲು, ಉಚಿತ ಪ್ರಸಾದ ನಿಲಯದಲ್ಲಿ ಪ್ರವೇಶ ಪಡೆಯಲು ಮಾಡಿದ ಹೋರಾಟ, ಬರೀ ನೀರು ಕುಡಿದೇ ದಿನಗಳನ್ನು ನೂಕಿದ್ದು, ಫೇಲಾದರೆ ಮತ್ತೆ ಮರಳಿ ಊರಿಗೆ ಹೋಗಬೇಕಲ್ಲ ಎನ್ನುವ ಭೀತಿಯಿಂದ ಓದಿದ್ದು, ಪ್ರತಿ ತರಗತಿಯಲ್ಲೂ ಪಟ್ಟಣದ ಹುಡುಗರಿಗೆ ಸ್ಪರ್ಧೆ ಒಡಿದ್ದು ಹೀಗೆ ಹತ್ತು ಹಲವು ಸಂಗತಿಗಳು ಅವರ ಸರಳತೆಗೆ ಸಾಕ್ಷಿಯಾಗಿದೆ. ಅವರು ಬಾಲ್ಯದಲ್ಲಿ ಅನುಭವಿಸಿದ ಕಡು ಬಡತನ ಮತ್ತು ವಿದ್ಯಾಭ್ಯಾಸಕ್ಕಾಗಿ ಮಾಡಿದ ಹೋರಾಟ ನಂತರದ ಪ್ರಾಮಾಣಿಕ ಸರಳತೆಯ ಬದುಕಿಗೆ ಗಟ್ಟಿ ಅಡಿಪಾಯ ಒದಗಿಸಿತು ಎನ್ನುವುದು ಸುಳ್ಳಲ್ಲ.ನಂತರದ ಭಾಗ ಶಿಕ್ಷಕರಾಗಿ ಎಚ್.ನರಸಿಂಹಯ್ಯನವರು ಮಾಡಿದ ಸಾಧನೆಗಳು ಅದ್ಭುತ. ತಮ್ಮ ಇಡೀ ಬದುಕನ್ನು ಶಿಕ್ಷಕ ವೃತ್ತಿಗಾಗಿ ಮುಡಿಪಾಗಿಟ್ಟ ನರಸಿಂಹಯ್ಯನವರ ಸರಳ ಬದುಕು ಇಂದಿನ ಜನರಿಗೆ ಪ್ರೇರಣೆ ನೀಡುತ್ತದೆ. ಅಮೇರಿಕಾದಂಥ ಆಕರ್ಷಕ ರಾಷ್ಟ್ರದಲ್ಲಿ ಅಧ್ಯಯನ ಮಾಡಿಯೂ ತಾಯ್ನಾಡಿನಲ್ಲಿ ಸೇವೆ ಸಲ್ಲಿಸಬೇಕೆನ್ನುವ ಅವರ ಹಂಬಲ, ವಿದ್ಯೆ ಕೊಟ್ಟು ಬದುಕು ರೂಪಿಸಿದ ನ್ಯಾಷನಲ್ ಶಿಕ್ಷಣ ಸಂಸ್ಥೆಯಲ್ಲೆ ಕೆಲಸ ಮಾಡಬೇಕೆನ್ನುವ ಅವರ ತುಡಿತ, ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ನಿವೃತ್ತಿಯ ನಂತರ ನ್ಯಾಷನಲ್ ಕಾಲೇಜಿಗೆ ಮರಳಿ ಬಂದ ಅವರ ಸರಳತೆಯ ನಿಷ್ಠೆ, ದೊಡ್ಡ ಹುದ್ಧೆಯಲ್ಲಿದ್ದೂ ವಿದ್ಯಾರ್ಥಿಗಳ ವಸತಿ ಗೃಹದ ಸಣ್ಣ ಕೋಣೆಯಲ್ಲಿ ವಾಸಿಸುತ್ತಿದ್ದ ಅವರ ಸರಳತೆ, ನ್ಯಾಷನಲ್ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗಾಗಿ ಬದುಕಿನುದ್ದಕ್ಕೂ ಶ್ರಮಿಸಿದ್ದು, ಕನ್ನಡ ಪ್ರಾಧಿಕಾರದ ಅಧ್ಯಕ್ಷರಾಗಿ ಮಾಡಿದ ಸೇವೆಗಳು, ಪವಾಡಗಳ ದುರುಪಯೋಗವನ್ನು ವಿರೋಧಿಸಿದ ಅವರ ವೈಚಾರಿಕ ಕ್ರಾಂತಿ, ತಮ್ಮ ಅಂತ್ಯಕ್ರಿಯೆಯನ್ನು ಅತ್ಯಂತ ಸರಳವಾಗಿ ಮಾಡಬೇಕೆಂದು ಅವರು ಬರೆದಿಟ್ಟ ಉಯಿಲು ಹೀಗೆ ಅನೇಕ ಸಂಗತಿಗಳ ಮೂಲಕ ಎಚ್ಚೆನ್ ಅವರ ಅಗಾಧ ಸರಳ ವ್ಯಕ್ತಿತ್ವ ವಿಶ್ವಕ್ಕೆ ಮಾದರಿ ಎನ್ನಬಹುದು. ಅತ್ಯಂತ ಪ್ರಜ್ಞಾಪೂರ್ವಕವಾಗಿ ಅವರು ರೂಢಿಸಿಕೊಂಡಿದ್ದ ಸರಳ ಬದುಕು ಎಚ್ಚೆನ್ ಯವರು ಇಂದಿನ ಆಧುನಿಕ ಸಮಾಜಕ್ಕೆ ಇಷ್ಟವಾಗಲು ಮುಖ್ಯಕಾರಣವಾಗುತ್ತದೆ. ಸರಳತೆಗೆ ಇನ್ನೊಂದು ಹೆಸರೇ ಎಚ್.ನರಸಿಂಹಯ್ಯನವರು ಎನ್ನುವಂತೆ ಅವರು ಬದುಕಿ ಬಾಳಿದರು. ಧರಿಸುವ ಬಟ್ಟೆ, ಸೇವಿಸುವ ಆಹಾರ, ವಾಸಿಸುವ ಕೋಣೆ ಹೀಗೆ ಪ್ರತಿಯೊಂದು ಅವರ ಸರಳ ಬದುಕಿಗೆ ಸಾಕ್ಷಿಯಾಗಿದ್ದವು. ಸರಳತೆಗೂ ಮತ್ತು ಅವರ ಬದುಕಿಗೂ ಒಂದು ರೀತಿಯ ಅವಿನಾಭಾವ ಸಂಬಂಧ. ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಹುದ್ದೆಯನ್ನು ಅಲಂಕರಿಸಿದಾಗಲೂ ಅವರು ತಮ್ಮ ವೇಶ ಭೂಷಣಗಳಲ್ಲಿ ಬದಲಾವಣೆ ಮಾಡಿಕೊಳ್ಳಲಿಲ್ಲ. ಒಂದು ಹಂತದಲ್ಲಿ ಅಂಥದ್ದೊಂದು ಒತ್ತಡ ಬಂದಾಗ ಹುದ್ದೆಯನ್ನು ತ್ಯಜಿಸಲು ಮುಂದಾದರೆ ವಿನಹ ಸರಳತೆಯನ್ನು ಬಿಟ್ಟುಕೊಡಲು ಸ್ವಲ್ಪವೂ ಯೋಚಿಸಲಿಲ್ಲ. ಅನೇಕ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ವ್ಯಕ್ತಿಯೋರ್ವ ತನ್ನ ಬದುಕಿನುದ್ದಕ್ಕೂ ವಿದ್ಯಾರ್ಥಿಗಳ ವಸತಿ ನಿಲಯದ ಸಣ್ಣ ಕೋಣೆಯಲ್ಲಿ ವಾಸವಾಗಿದ್ದರೆನ್ನುವುದು ಕಲ್ಪನೆಗೂ ನಿಲುಕದ ಸಂಗತಿ. ಆ ಕೋಣೆಯಲ್ಲಾದರೂ ಏನಿತ್ತು ಮಲಗಲು ಒಂದೆರಡು ಹಾಸಿಗೆಗಳು, ಬರೆಯಲು ಸಣ್ಣ ಮೇಜು, ಅತಿಥಿಗಳಿಗಾಗಿ ಕೂಡಲು ಎರಡು ಕುರ್ಚಿಗಳು. ವಿಲಾಸಿ ಜೀವನವನ್ನು ನಡೆಸುತ್ತ ಸರಳತೆಯನ್ನು ಕೇವಲ ಉಪದೇಶವಾಗಿಟ್ಟುಕೊಂಡವರಿಗೆ ಎಚ್ಚೆನ್ ಅವರ ಸರಳ ಬದುಕು ಒಂದು ನೀತಿ ಪಾಠವಾಗುತ್ತದೆ. ಡಾ.ಎಚ್ ಎನ್ ರವರ ಸಮಾಜಿಕ ಚಿಂತನೆ :ಏನನ್ನೂ ಪ್ರಶ್ನಿಸದೇಒಪ್ಪದಿರು ಎಂದು ಘಂಟಾ ಘೋಷವಾಗಿ ಹೇಳುತ್ತಿದ್ದರು ಹಾಗೆ ಮಾತನಾಡುತ್ತಿದ್ದರು ವಿಚಾರವಾದಿ,ಸಮಾಜಿಕ ಚಿಂತನೆಯ ಹರಿಕಾರ ಶಿಕ್ಷಣ ತಜ್ಞ ಎಚ್. ನರಸಿಂಹಯ್ಯನವರು. ವೈಜ್ಞಾನಿಕ ಮನೋಧರ್ಮ, ಜೀವಪರತೆ, ಜಾತ್ಯತೀತತೆ ಸಮಾಜಸೇವೆಯಂತಹ ಅನೇಕ ಸಮಾಜಿಕ ಸೇವೆಗಳನ್ನು ಈ ನಾಡಿಗಾಗಿ ಮಾಡಿದ್ದಾರೆ.ನಿಖರತೆ, ನಿಷ್ಠುರತೆಯಿಂದ ವೈಚಾರಿಕತೆಯ ಸಮಾಜಿಕ ಚಿಂತನೆಗಳನ್ನು ಈ ಸಮಾಜದಲ್ಲಿ ಬಿತ್ತಿರುವುದು ಇವರ ಬಹುದೊಡ್ಡ ಗುಣ.ಶಿಕ್ಷಣ ಹಾಗೂ ವಿಜ್ಞಾನ ಕ್ಷೇತ್ರಕ್ಕೆ ಹೆಚ್ಚು ಒತ್ತು ಕೊಡುವ ಮೂಲಕ ಕ್ರಾಂತಿ ಕಾರಿ ಸಮಾಜಿಕ ಚಿಂತನೆಗಳಿಗೆ ಆದ್ಯತೆ ನೀಡಿದ್ದಾರೆ. ಇದರ ಜೊತೆಗೆ ಇವರಿಗೆ ವಿಜ್ಞಾನದಲ್ಲಿ ಅಚಲವಾದ ನಂಬಿಕೆ ಇತ್ತು. ಶೂನ್ಯದಿಂದ ಏನನ್ನೂ ಸೃಷ್ಟಿಸಲು ಸಾಧ್ಯವಿಲ್ಲ ಮೌಢ್ಯದ ವಿರುದ್ಧ ಸತತ ಹೋರಾಟ ಅಗತ್ಯ. ಜನರ ಅಜ್ಞಾನವನ್ನು ಬಂಡವಾಳವನ್ನಾಗಿಸಿಕೊಂಡು ಶೋಷಣೆ ಮಾಡುವವರ ವಿರುದ್ಧ ಹೋರಾಟ ಮಾತ್ರವಲ್ಲ ಅಂಥವರ ಪೊಳ್ಳುತನವನ್ನು ಬಯಲಿಗೆಳೆಯಬೇಕು ಹಾಗೂ ಅವರ ಹಿಡಿತದಿಂದ ಮುಗ್ಧ ಜನತೆಯನ್ನು ರಕ್ಷಿಸಬೇಕೆಂದು ಯಾವಾಗಲೂ ಹೇಳುತ್ತಿದ್ದರು. ಅಂದರಂತೆ ಚಾಚೂ ತಪ್ಪದೇ ನಡೆದುಕೊಂಡು ಹೋಗಿದ್ದಾರೆ. ಸ್ವಾತಂತ್ಯ್ರ ಹೋರಾಟಗಾರ ಎಚ್. ನರಸಿಂಹಯ್ಯ ಅವರು ನಂಬಿದ ತತ್ವಕ್ಕಾಗಿ ಕುಲಪತಿ ಹುದ್ದೆಯನ್ನೇ ಬಿಟ್ಟು ನ್ಯಾಷನಲ್ ಕಾಲೇಜಿಗೆ ಹಿಂದಿರುಗಿದ ಧೀರೋದಾತ್ತ ವ್ಯಕ್ತಿತ್ವ ಹೊಂದಿದ್ದವರು. ತಮ್ಮ ಬದುಕಿನಲ್ಲಿ ನ್ಯಾಯವಾದ ಆಯ್ಕೆಯ ಪ್ರಶ್ನೆ ಎದುರಾದಾಗಲೂ ಅಂಜದೆ ಅಳುಕದೆ ಸ್ಪಷ್ಟ ದಾರಿಯಲ್ಲಿ ನಡೆಯಬಲ್ಲ ದೃಢವಾದ ಮನಸ್ಸು ಅವರಿಗಿತ್ತು. ಅವರು ದೇವರ ಇರುವಿಕೆಯ ಬಗೆಗೆ ನಂಬಿಕೆ ಕಳೆದುಕೊಂಡಿರಲಿಲ್ಲ. ಆದರೆ ಸಾಂಸ್ಥಿಕವಾಗಿರುವ ಧರ್ಮ, ಜಾತಿಗಳ ಬಗೆಗೆ ಅವರಿಗೆ ಸಂದೇಹವಿತ್ತು. ಜಾತಿ, ಧರ್ಮಗಳು ಬದುಕನ್ನು ಸ್ಥಗಿತಗೊಳಿಸುತ್ತಿವೆಯೆಂಬ ನೋವು ಅವರಲ್ಲಿ ಕಾಣುತ್ತಿತ್ತು.ಹಾಗೂ ಜಾತೀಯತೆ ಇದ್ದ ಕಡೆ ಧರ್ಮವಿಲ್ಲ. ಪೂಜಾರಿಯಿದ್ದ ಕಡೆ ದೇವರಿಲ್ಲ, ಎಂಬುದು ಅವರ ಸ್ಪಷ್ಟ ನಿಲುವಾಗಿತ್ತು. ಧರ್ಮವು ನಿಂತ ನೀರಾಗಿದ್ದರೆ, ವಿಜ್ಞಾನ ಹರಿಯುವ ನದಿ ಎಂದು ತಿಳಿದಿದ್ದರು. ಮೂಢನಂಬಿಕೆ, ಕಂಧಾಚಾರ, ಬೃಷ್ಟಚಾರ ಹಾಗೂ ನೈತಿಕ ವಲ್ಲದ ವಿಚಾರಗಳಿಗೆ ಎಂದು ಅವರು ಆಸ್ವದ ಕೊಡಲಿಲ್ಲ. ಸ್ವತಃ ಗಾಂಧಿವಾದಿಯಾಗಿದ್ದ ಅವರು ಸಮಾಜಿಕ ವಿಚಾರವಾದಕ್ಕೆ ಅಡ್ಡಿಯಾಗುವುದಿದ್ದರೆ, ಗಾಂಧೀಜಿಯವರ ಸಿದ್ದಾಂತ್ ವನ್ನು ಬದಿಗೆ ಸರಿಸಿ ಮುನ್ನಡೆಯುವ ಬದ್ಧತೆ ತೋರಿಸಿದ್ದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ.ನಮ್ಮ ತಿಳುವಳಿಕೆಯಲ್ಲಿ ಎಷ್ಟೆ ಕಂದರಗಳಿದ್ದರೂ, ವಿಜ್ಞಾನಕ್ಕೆ ತನ್ನದೆ ಆದ ಮಿತಿಗಳಿದ್ದರೂ ಸಮಸ್ಯೆಗಳನ್ನು ಪರಿಹರಿಸಿಕೊಳ್ಳವಲ್ಲಿ ವಿಜ್ಞಾನದ ವಿಧಾನಗಳೇ ಹೆಚ್ಚು ಸಮರ್ಪಕ. ಯಾವುದೇ ಹೇಳಿಕೆ ಅಥವಾ ಸೂಕ್ತಿಯನ್ನು ಒಪ್ಪಿಕೊಳ್ಳವುದು ಸರಿಯಲ್ಲ. ಸಾಧ್ಯವಾದಷ್ಟರಮಟ್ಟಿಗೆ ಅವುಗಳನ್ನು ಪ್ರಯೋಗಗಳ ಮೂಲಕ ಪರಿಕ್ಷೀಸಬೇಕು. ಎಲ್ಲ ಪರಿಶೀಲನ ಮಾರ್ಗಗಳಲ್ಲೂ ವಿಚಾರವು ಅಡಿಪಾಯವಾಗಬೇಕು ಎಂದು ತಿಳುವಳಿಕ ನೀಡುತ್ತಿದರು. ವಿಶ್ವವಿದ್ಯಾಲಯಗಳು ಉನ್ನತ ಧ್ಯೇಯಗಳನ್ನು ಹೊಂದಿ ಮನುಷ್ಯನ ಪ್ರಗತಿಯಲ್ಲಿ ಮುನ್ನುಗ್ಗಬೇಕು. ಅವು ತಮ್ಮ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಿದರೆ, ಜನಗಳಿಗೆ ಹಾಗೂ ದೇಶಕ್ಕೆ ಒಳ್ಳೆಯದನ್ನು ಮಾಡಿದಂತೆ ಆಗುತ್ತದೆಂದು ಎಚ್ಎನ್ ರವರು ಯಾವಾಗಲೂ ಹೇಳುತ್ತಿದ್ದರು .1980 ರಿಂದ 1986 ರವರಿಗೆ ಕರ್ನಾಟಕ ರಾಜ್ಯ ವಿಧಾನ ಪರಿಷತ್‌ನಲ್ಲಿ ( ಶಿಕ್ಷಣ ಮತ್ತು ವಿಜ್ಞಾನವನ್ನು ಪ್ರತಿನಿಧಿಸುವ) ನಾಮಕರಣ ಸದಸ್ಯರಾಗಿ ಸೇವೆಯನ್ನು ಸಲ್ಲಿಸಿದ್ದಾರೆ.ಹೀಗೆ ವಿವಿಧ ಹಂತಗಳಲ್ಲಿ ಸಮಾಜಿಕ ಚಿಂತನೆಯನ್ನು ಜನಸಾಮಾನ್ಯರ ಜೀವನದಲ್ಲಿ ಬಿತ್ತುವ ಕೆಲಸವನ್ನು ಚಾಚೂ ತಪ್ಪದೆ ಮಾಡುತ್ತಾ ,ಕಾರ್ಯರೂಪಕ್ಕೆ ತರುವ ಪ್ರಯತ್ನ ಮಾಡಿದ್ದಾರೆ ಎಂದು ಹೆಮ್ಮೆಯಿಂದ ಹೇಳಬಹುದಾಗಿದೆ. ಡಾ.ಎಚ್ ಎನ್ ರವರಿಗೆ ಸಂಧಪ್ರಶಸ್ತಿ/ಗೌರವಗಳು:ಅವರ ಸರಳತೇಯ ಹೋರಾಟ, ಸಮಾಜಿಕ ಚಿಂತನೆಯ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (1968),ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದಕ್ಕೆ ನೀಡಿದ ತಾಮ್ರಪತ್ರ ಪ್ರಶಸ್ತಿ (1973), ಭಾರತ ಸರ್ಕಾರದಪದ್ಮಭೂಷಣ ಪ್ರಶಸ್ತಿ (1984),ಕಲ್ಬುರ್ಗಿ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪ್ರಶಸ್ತಿ(1988), ದೇವರಾಜ ಅರಸು ಪ್ರಶಸ್ತಿ (1994) ಗಳು ದೊರೆಕಿವೆ. ಮತ್ತುಫೆಲೋಗಳಾಗಿರುವ ಕಮಿಟಿ ಫಾರ್ ದಿ ಸೈಂಟಿಪಿಕ್ ಇನ್ವೆಸ್ಟಿಗೇಷನ್ ಆಫ್ ದಿ ಕ್ಲೈಮ್ಸ್ ಆಫ್ ದಿ ಪ್ಯಾರಾ ನಾರ್ಮಲ್` ( Committee for Scientific Investigation of the claims of the Paranomal) ಸಂಸ್ಥೆಯು ಭಾರತದ ಏಕೈಕ ಫೆಲೋ ಎಂಬ ಗೌರವಕ್ಕೆ ಎಚ್ ಎನ್ ರವರು ಪಾತ್ರರಾಗಿದ್ದಾರೆ. 2004ರ ದಸರಾ ಮಹೋತ್ಸವದ ಉದ್ಘಾಟನೆ ಮಾಡುವ ಹಿರಿಮೆಗೆ ಭಾಜನರಾಗಿದ್ದಾರೆ . ಹೀಗೆ ಹತ್ತು ಹಲವು ಪ್ರಶಸ್ತಿ, ಗೌರವ, ಸನ್ಮಾನಗಳು ಸಂಧಿವೆ. ಕೊನೆಯ ಮಾತು: ಎಚ್ಚೆನ್ ರವರ ನಿರ್ಮಲ ವ್ಯಕ್ತಿತ್ವ ಅದ್ಭುತ ಗುಣಗಳ ಒಂದು ಗಣಿ. ಕುಗ್ರಾಮವೊಂದರ ಅತ್ಯಂತ ಬಡತನದ ಕುಟುಂಬದಲ್ಲಿ ಹುಟ್ಟಿ ಬಂದ ಹಳ್ಳಿಯ ಹುಡುಗನೊಬ್ಬ ನಿರಂತರವಾದ ಸರಳತೆಯ,ಸಮಾಜಿಕ ಚಿಂತನೆಯ ಶ್ರಮದಿಂದ ಜೊತೆಗೆ ಅಚಲವಾದ ವಿಶ್ವಾಸದಿಂದ, ತನ್ನ ವೈಚಾರಿಕ ಮನೋಭಾವದಿಂದ ಅತ್ಯಂತ ಪ್ರತಿಭಾವಂತನಾಗಿ ಬೆಳೆದು ನಿಂತು ಶೈಕ್ಷಣಿಕ, ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಮಾಡಿದ ಅಪ್ರತಿಮ ಸಾಧನೆ ನಮ್ಮಗೆಲ್ಲರಿಗೂ ಬೆರಗು ಹುಟ್ಟಿಸುತ್ತದೆ. ಜೊತೆಗೆ ಅವರ ಸರಳತೆಯ ಬದುಕು ಅನೇಕರಿಗೆ ಸ್ಪೂರ್ತಿಯ ಸೆಲೆಯಾಗುತ್ತದೆ. ಮನುಷ್ಯ ಹೇಗೆ ಬದುಕಬೇಕೆನ್ನುವುದಕ್ಕೆ ಎಚ್ಚೆನ್ ಸದಾಕಾಲ ಮಾದರಿಯಾಗಿ ನಿಲ್ಲುತ್ತಾರೆ. ಎಚ್ಚೆನ್ ನಮಗೆಲ್ಲ ಇಷ್ಟವಾಗಲು ಅನೇಕ ಸಂಗತಿಗಳು ಕಾರಣವಾಗುತ್ತವೆ. ಅವರ ಸರಳ ಜೀವನ ಶೈಲಿ, ಅನನ್ಯ ರಾಷ್ಟ್ರ ಪ್ರೇಮ, ಬದುಕು ರೂಪಿಸಿದ ಶಿಕ್ಷಣ ಸಂಸ್ಥೆಯ ಮೇಲಿನ ನಿಷ್ಠೆ, ಕಡು ಬಡತನದ ಬದುಕಿನೊಂದಿಗಿನ ಹೋರಾಟ, ಅವರಲ್ಲಿನ ಅಚಲವಾದ ಆತ್ಮವಿಶ್ವಾಸ, ವೈಚಾರಿಕ ಮನೋಭಾವ, ಬದುಕಿನ ಒಂದು ಭಾಗ ಎನ್ನುವಂತೆ ಬೆಳೆಸಿಕೊಂಡು ಬಂದ ನಿಷ್ಟೂರತೆ ಹೀಗೆ ಅನೇಕ ಕಾರಣಗಳಿಂದ ನರಸಿಂಹಯ್ಯನವರ ವ್ಯಕ್ತಿತ್ವ ನಮಗೆ ಆಪ್ತವಾಗುತ್ತದೆ.ಹಳ್ಳಿಯಿಂದ ಬಂದ ಅನಾಥ ಬಾಲಕ ನ್ಯಾಷನಲ್ ಹೈಸ್ಕೂಲಿನಲ್ಲಿ ಪ್ರವೇಶ ಪಡೆದು ತನ್ನ ಸ್ವಂತ ಪರಿಶ್ರಮದಿಂದ ಆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆರಿದ್ದು ಅವರ ಬದುಕಿನ ಮಹತ್ವದ ಸಾಧನೆಗಳಲ್ಲೊಂದು. ವಿಶ್ವವಿದ್ಯಾಲಯದ ಉಪಕುಲಪತಿ, ಮೇಲ್ಮನೆಯ ಶಾಸಕ ಸ್ಥಾನ, ಕನ್ನಡ ಪ್ರಾಧಿಕಾರದ ಅಧ್ಯಕ್ಷತೆ, ಪದ್ಮಭೂಷಣ ಪ್ರಶಸ್ತಿ, ಗೌರವ ಡಾಕ್ಟರೇಟ್ ಈ ಎಲ್ಲವು ಎಚ್ಚೆನ್ ಅವರ ಪ್ರತಿಭೆಗೆ ಸಂದ ಗೌರವಗಳು. ಯಾವುದನ್ನೂ ಅವರು ಅಪೇಕ್ಷಿಸಿದವರಲ್ಲ. ಯಾವ ಪ್ರಶಸ್ತಿ, ಗೌರವಗಳ ಹಿಂದೆ ಬಿದ್ದವರಲ್ಲ. ಒಂದು ಪ್ರಶಸ್ತಿ, ಉನ್ನತ ಹುದ್ದೆ ದೊರೆತಾಗಲೂ ಅವರದು ನಿರ್ವಿಕಾರ ಭಾವ. ತನ್ನದು ಎನ್ನುವ ಒಂದು ಕೌಟಂಬಿಕ ಚೌಕಟ್ಟನ್ನೂ ಕಟ್ಟಿ ಕೊಳ್ಳದ ವ್ಯಕ್ತಿಗೆ ಅನೇಕ ಸ್ಥಾನ ಮಾನಗಳು ಹುಡುಕಿಕೊಂಡು ಬಂದವು. ಪ್ರತಿಭೆ, ನಿರಂತರ ಪರಿಶ್ರಮ, ಪ್ರಾಮಾಣಿಕತೆ ಈ ಗುಣಗಳಿಂದ ಮನುಷ್ಯನೋರ್ವನ ಜೀವನದಲ್ಲಿ ಏನೆಲ್ಲ ಪವಾಡಗಳಾಗಬಹುದೆನ್ನುವುದಕ್ಕೆ ಎಚ್.ನರಸಿಂಹಯ್ಯನವರ ಸರಳತೆ ಬದುಕು, ಸಮಾಜಿಕ ಚಿಂತನೆಗಳು ಸಾಕ್ಷಿ ಹಾಗೂ ನಮಗೆಲ್ಲರಿಗೂ ಪ್ರೇರಣೆಯಾಗಿವೆ. ಸಂಗಮೇಶ ಎನ್ ಜವಾದಿ,
ಒಂದು ವೈರಸ್ ಮುಂದಿಟ್ಟು ಕೊಂಡು ನಾಗರಾಜ ಹರಪನಹಳ್ಳಿ ಅಬ್ಬಾ ಮೊನ್ನೆ ಸ್ವಾತಂತ್ರ್ಯ ಆಚರಸಿದೆವುಅದೆಷ್ಟು ಬಿಗಿ, ಅದೆಷ್ಟು ಭಯಗಳನ್ನಿಟ್ಟುಕೊಂಡುಎಲ್ಲಿಯ ಗಾಂಧೀ, ಎಲ್ಲಿಯ ಬ್ರಿಟಿಷರು, ಎಲ್ಲಿಯ ಸುಭಾಷ್ ಚಂದ್ರ …ಯಾರ ಹಂಗು ಇರಲಿಲ್ಲಒಂದು ವೈರಸ್ ಕಾರಣವಾಗಿ ನಗುವಿಲ್ಲ ಮೊಗವಿಲ್ಲ, ಮಕ್ಕಳಿಲ್ಲ, ಘೋಷಣೆಯಿಲ್ಲ, ಪೋಷಣೆಯಿಲ್ಲಎಲ್ಲವೂ ಕಳೆದುಕೊಂಡ ಭೂಮಿಮಕ್ಕಳನು ಕಳೆದು ಕೊಂಡ ತಾಯಿಏನೂ ಉಸಿರೆತ್ತುವಂತಿಲ್ಲವೈರಸ್ ಕಾರಣವಾಗಿ ಏನಿತ್ತು ಅಲ್ಲಿ , ಭಯ ಬಿಟ್ಟುಮುಖ ಗುರುತು ಸಿಗದಂತೆ ಹಾಕಿದ ಬಾಯಿಪಟ್ಟಿಉಸಿರೆತ್ತದಂತೆ ಕಾಡಿದ ವೈರಸ್ಕಾರಣವಾಗಿ ಹೌದು, ಈಗೀಗ ಎಲ್ಲೆಲ್ಲೂ ಫತ್ವಾಗಳ ಹೊರಡಿಸುವುದೇ ಆಗಿದೆ;ಮನುಷ್ಯನಿಂದ ಮನುಷ್ಯನ ಇಬ್ಬಾಗವಾದರೂಕಸಿದ ಸ್ವಾತಂತ್ರ್ಯ ಪಕ್ಕದಲ್ಲಿ ಇದ್ದವಗೆ ಗೊತ್ತಾಗದಂತೆ ಕಸಿದರೂಮಾತಾಡುವಂತಿಲ್ಲವೈರಸ್ ಕಾರಣವಾಗಿ ಭೂಮಿಯನ್ನು ಮಾತೆ ಎನ್ನುತ್ತಲೇ , ಎದೆಯ ಮೇಲೆ ಕಾಲಿಟ್ಟು ತುಳಿದವರುಅವಳ ಕಾಲಿಗೆ ಕಾಲಬಂಧಿ ಹಾಕಿದರೂ ; ಮಾತಾಡುವಂತಿಲ್ಲಕಾಣದ ವೈರಸ್ ಕಾರಣವಾಗಿ ಸ್ವಾತಂತ್ರ್ಯದ ದಿನ ಸ್ವಾತಂತ್ರ್ಯ ಕಳೆದುಕೊಂಡವರು ,ಕಸಿದುಕೊಂಡವರು, ಇನ್ನೂ ಏನೇನೋ ಬಸಿದುಕೊಂಡವರುಮಾತಾಡುವಂತಿಲ್ಲವೈರಸ್ ಕಾರಣವಾಗಿ ಕಾಣದ ಕೇಳದಕಂಡೂ ಕಾಣದ ವೈರಸ್ ಕೊಲ್ಲಲು ಹಾಗೂಜನರ ಬದುಕಿಸಲು ಕವಿದಾರಿಯಿಲ್ಲದ , ಚಾವಿಯಿಲ್ಲದಮನೆ ಮನದಲ್ಲಿ ಅವಿತಿರುವ ಔಷಧಿ ಹುಡುಕಲು ಹೋಗಿದ್ದಾನೆ ಕವಿ ದೇಶಾಂತರ ಅಲೆದಾಟಕೆ ************************
ಗಝಲ್ ಅಕ್ಷತಾ ಕೃಷ್ಣಮೂರ್ತಿ. ನಿನ್ನ ಮುಂಗೈ ಮೇಲೆ ನನ್ನ ಹೆಸರು ಹೇಗೆ ಬರೆಯಲಿ ನೀನೇ ಹೇಳುನಿನ್ನ ಗಲ್ಲ ಕುಕ್ಕುವ ಮುಂಗುರುಳು ಹೇಗೆ ಮುಟ್ಟಲಿ ನೀನೇ ಹೇಳು. ಆ ಒಂದು ದಿನದ ಸವಿ ನೆನಪು ಕಣ್ಣ ತುಂಬ ಹಾಗೆಯೇ ಉಳಿದಿದೆನಿನ್ನ ಕನಸಿನ ಬಾಗಿಲು ತೆರೆದೆ ಇದೆ ಹೇಗೆ ಮುಚ್ಚಲಿ ನೀನೇ ಹೇಳು. ಮನದ ಅಂಗಳದಲ್ಲಿ ನಿನ್ನ ಹೆಸರಿನ ರಂಗೋಲಿ ಹೂ ನಗುವಿನಂತೆನಿನ್ನ ಮೌನ ಧ್ಯಾನ ಇನ್ನು ಇದೆ ಹೇಗೆ ಎಬ್ಬಿಸಲಿ ನೀನೇ ಹೇಳು. ನೆರಳಿನೊಳಗಿನ ನೆರವಾಗಬೇಕು ನೆನಪಲಿ ನಾನು ನೀನು ಕೈ ಕೈ ಹಿಡಿದುನಿನ್ನ ನಗುವಿನೊಳಗೆ ಇನ್ನೂ ಸಲುಗೆ ಇದೆ ಹೇಗೆ ಮರೆಯಲಿ ನೀನೇ ಹೇಳು. ಉದುರಿದ ಎಲೆಯೊಂದು ನಗುತ ಸ್ವರ್ಗ ಸುಖ ಅನುಭವಿಸುತ್ತಿದೆ ಎನ್ನ ಮುಂದೆನಿನ್ನ ನೆನಪಿನೊಳಗೆ ನೆನಪಾಗದೇ “ಅಕ್ಷತಾ” ಹೇಗೆ ಇರಲಿ ನೀನೇ ಹೇಳು. **********************
ಅವನು.. ಸುಜಾತ ಲಕ್ಷ್ಮೀಪುರ. ಅವನು ಸುಳಿಯುತ್ತಿಲ್ಲ.ಈ ನೀರವ ಸಂಜೆಯಲಿ..ಬರೀ ಮಂಕು ಮಗ್ಗುಲಾಗುತ್ತಿದೆಕತ್ತಲಾವರಿಸಿ ಆಗಸವೂ ಬಿಕ್ಕುತ್ತಿದೆ . ಚಿಕ್ಕಿ ಚಂದ್ರಮರೂ ನಾಪತ್ತೆಪಯಣ ಬೆಳೆಸಿರಬೇಕುಅವನ ಊರಿನ ಕಡೆಗೇ..ಕಿಟಕಿಯಾಚೆ ಮಳೆಮೋಡವೂಕಣ್ಣಂಚಲಿ ತೊಟ್ಟಿಕ್ಕಲುಹವಣಿಸುತಿದೆ ಅರೆಗಳಿಗೆ ಅತ್ತುಬಿಡಲು ಅವಸರಿಸಿವೆ ನಯನಗಳುತಂಗಾಳಿಯೂ ತಂಪೀಯದೆಸುಟ್ಟು ಬೂದಿಯೂ ಆಗಿಸದೆಕಿಡಿ ತಾಗಿಸಿ ಮರೆಯಲಿ ಇಣುಕಿದೆ. ನಿಟ್ಟುಸಿರ ಮೈದಡವಿಮುದ್ದು ಮಾತುಗಳಲಿ ಒಲಿಸಿಜೇನು ಸುರಿಸುವ ಕಣ್ಣಂಚಿನ ಪಿಸುಮಾತೂ ಕಾಣೆಯಾಗಿದೆ ಬರಿದೆ ಹಂಬಲಿಕೆ ಚಡಪಡಿಕೆಮುಗಿಯದಾ ಕಾಲದ ಸಂಚುಸುಕ್ಕಾಗುತ್ತಿದೆ ನಿರೀಕ್ಷೆ.ಅವನು ಸುಳಿಯುತ್ತಿಲ್ಲಾ..ಬೆಳಗು ಬೈಗು ನೆನಪಿನ ಗಾಯಒಳಗೊಳಗೇ ಹಸಿರಾಡುತ್ತಿದೆ. ಬೇಸರದಿ ಆಸರೆಗೆಕತ್ತಲಲ್ಲಿ ಕೈಚಾಚಿದ್ದೇನೆಏಕಾಂತವೆಲ್ಲಾ ಲೋಕಾಂತಆಗಿಸುವ ಬಯಕೆ ಅವನುಮಾಯವಾಗಿದ್ದಾನೆ *****************************
ಶೂರ್ಪನಖಾಯಣ ಮಲಯಾಳಂ ಮೂಲ:ರವೀಂದ್ರನ್ ಪಾಡಿ ಕನ್ನಡಕ್ಕೆ:ಚೇತನಾ ಕುಂಬ್ಳೆ ರಾತ್ರಿ ಕಂಡ ಕನಸಿನಲ್ಲಿನನ್ನ ಮುಂದಿದ್ದಳು ಶೂರ್ಪನಖಿಎಲ್ಲಿಯೂ ಸೀತೆಯನ್ನು ಕಾಣಲಿಲ್ಲಬಳಿಯಲ್ಲಿ ರಾಮನೂ ಇರಲಿಲ್ಲ ಹಲವು ದಿನಗಳಿಂದ ಆಲೋಚನೆಗಳಲ್ಲಿರಾಮ ರಾವಣ ಯುದ್ಧವೇ ತುಂಬಿತ್ತುಯಾರ ಪಕ್ಷ ಸೇರಲಿ?ಮಾನ್ಯರಲ್ಲ ಇಬ್ಬರೂ ಸೀತೆಯೊಂದಿಗೆ ನಿಂತುರಾಮನನ್ನು ದೂಷಿಸಬಹುದೇ?ವಾಲಿಯನ್ನು ವಧಿಸದೆರಾಮನ ವಿರುದ್ಧ ನಿಲ್ಲಬಹುದು ತಾಟಕಿ, ಶಂಬೂಕರುನಮ್ಮ ಪಕ್ಷ ಸೇರುವರುರಾವಣನನುಜ ವಿಭೀಷಣನನ್ನು ಅಂಕೆಯಲ್ಲಿರಿಸಬಹುದು ಹನುಮಂತನನ್ನು ಸೋಲಿಸಲುವಾಲಿಯೊಬ್ಬನೇ ಸಾಕಲ್ಲವೇಪ್ರಜೆಗಳು ಹೇಗಾದರೂ ಇರಲಿಅಮ್ಮನಿಗೆ ಕೈಯೆತ್ತುವರು ಅವರ ಮಾತನಾಲಿಸಿನಾಡಿನಲ್ಲಿ ಬದುಕಲು ಸಾಧ್ಯವೇ?ಗಾಳಿಸುದ್ದಿಯನ್ನೇ ಹಬ್ಬಿಸುವರೆಲ್ಲರೂಬೇರೇನೂ ಕೆಲಸವಿಲ್ಲವಲ್ಲ ವಾಲ್ಮೀಕಿ ಬರೆಯಲಿಅವರು ಕವಿಯಲ್ಲವೇಕವಿತೆಗಳೆಲ್ಲವೂ ಕಥೆಗಳಲ್ಲಕಥೆಗಳೆಲ್ಲವೂ ನಿಜವಲ್ಲ ರಾಮನಿಗೆ ಸೀತೆ ಏನಾಗಬೇಕೆಂದುಚಿಂತಿಸುತ್ತಲೇಜನರು ಸಮಯ ವ್ಯಯಿಸುತ್ತಾರೆಕಾಡುಗಳಲ್ಲಿ ಮತ್ತೆ ಹೂಗಳರಳುತ್ತವೆ ಬಂದುಬಿಡು ಪ್ರಾಣಸಖಿಶೂರ್ಪನಖೀ ನನ್ನೊಲವೇಲಕ್ಷ್ಮಣ ಹೋಗಲಿ ಬಿಡುನಾನಿದ್ದೇನೆ ನಿನಗೆ ****************************
You cannot copy content of this page