ಹಾಯ್ಕುಗಳು
ಹಾಯ್ಕುಗಳು ವಿ.ಹರಿನಾಥ ಬಾಬು ಕೂಗಿತು ಕೋಳಿಹರಿಯಿತು ಬೆಳಕುನಗುವ ಸೂರ್ಯ ಉರಿವ ಬೆಂಕಿಒಲೆಯ ಮೇಲೆ ಅನ್ನಹಸಿದ ಕಂದ ಸೂರ್ಯ ಸಿಟ್ಟಾದಭೂಮಿ ಬಳಲಿ ಬೆಂಡುಹಾಳಾದ ರೈತ ಜೋರಾದ ಮಳೆಕೊಚ್ಚಿಹೋದ ಫಸಲುಹತಾಷ ರೈತ ತುಂತುರು ಹನಿಪುಲಕಗೊಂಡ ಭೂಮಿಪ್ರಸನ್ನ ಜನ ****************************
ಅಂಕಣ ಬರಹ ರಾತ್ರಿಬಸ್ಸುಗಳೊಂದಿಗೆ ಮಾತುಕತೆ ರಾತ್ರಿಬಸ್ಸಿನಲ್ಲಿ ಎಷ್ಟೆಲ್ಲ ಕನಸುಗಳು ಪಯಣಿಸುತ್ತಿರುತ್ತವೆ; ತಲುಪಬೇಕಾದ ಸ್ಥಳವನ್ನು ಗಮನದಲ್ಲಿಟ್ಟುಕೊಂಡು ಹವಾಮಾನಕ್ಕೆ ತಕ್ಕ ಬಟ್ಟೆ ತೊಟ್ಟು ಬೆಳಗೆನ್ನುವ ಬೆರಗಿಗೆ ಕಣ್ಣುಬಿಡಲು ತಯಾರಾಗಿ ಹೊರಟುನಿಂತಿರುತ್ತವೆ! ಬಗಲಲ್ಲೊಂದು ಹಗುರವಾದ ಪರ್ಸು, ಕೈಯಲ್ಲೊಂದು ಭಾರವಾದ ಬ್ಯಾಗು, ಕೂದಲನ್ನು ಮೇಲೆತ್ತಿ ಕಟ್ಟಿದ ರಬ್ಬರ್ ಬ್ಯಾಂಡು ಎಲ್ಲವೂ ಆ ಕನಸುಗಳೊಂದಿಗೆ ಹೆಜ್ಜೆಹಾಕುತ್ತಿರುತ್ತವೆ. ಅವಸರದಲ್ಲಿ ಮನೆಬಿಟ್ಟ ಕನಸುಗಳ ಕಣ್ಣಿನ ಕನ್ನಡಕ, ಕೈಗೊಂದು ವಾಚು, ಬಿಸಿನೀರಿನ ಬಾಟಲಿಗಳೆಲ್ಲವೂ ಆ ಪಯಣದ ಪಾತ್ರಧಾರಿಗಳಂತೆ ಪಾಲ್ಗೊಳ್ಳುತ್ತವೆ. ಅರಿವಿಗೇ ಬಾರದಂತೆ ಬದುಕಿನ ಅದ್ಯಾವುದೋ ಕಾಲಘಟ್ಟದಲ್ಲಿ ಹುಟ್ಟಿಕೊಂಡ ಆ ಕನಸುಗಳನ್ನೆಲ್ಲ ಅಪರಿಚಿತ ರಾತ್ರಿಯೊಂದರ ಬೋರ್ಡಿಲ್ಲದ ಬಸ್ಸು ತನ್ನದಾಗಿಸಿಕೊಂಡು ಸಾಗಿಸುತ್ತಿರುತ್ತದೆ. ಒಂದೊಂದೇ ಬೀದಿದೀಪಗಳನ್ನು ದಾಟುತ್ತ ಚಲಿಸುತ್ತಲೇ ಇರುವ ಅವು ಆ ಸ್ಥಾನಪಲ್ಲಟದ ಮಾರ್ಗಮಧ್ಯದಲ್ಲಿ ಹುಟ್ಟು-ಕೊನೆಗಳ ಆಲೋಚನೆಯನ್ನು ಬದಿಗಿಟ್ಟು, ಬಸ್ಸಿನ ಚಲನೆಯನ್ನೇ ತಮ್ಮದಾಗಿಸಿಕೊಂಡು ಸೀಟಿಗೊರಗಿ ಸುಧಾರಿಸಿಕೊಳ್ಳುತ್ತವೆ. ಹಾಗೆ ದಣಿವಾರಿಸಿಕೊಳ್ಳುತ್ತಿರುವ ಕನಸುಗಳನ್ನು ಹೊತ್ತ ಬಸ್ಸು ಹಳೆ ಸಿನೆಮಾವೊಂದರ ರೊಮ್ಯಾಂಟಿಕ್ ಹಾಡಿನ ಟ್ಯೂನಿನಂತೆ ತನ್ನದೇ ಆದ ಗತಿಯಲ್ಲಿ ದಾರಿಯೆಡೆಗೆ ದೃಷ್ಟಿನೆಟ್ಟು ಓಡುತ್ತಿರುತ್ತದೆ. ಈ ರಾತ್ರಿಬಸ್ಸುಗಳೆಡೆಗಿನ ಮೋಹವೂ ಹಳೆಯ ಹಾಡುಗಳೆಡೆಗಿನ ಮೋಹದಂತೆ ತನ್ನಿಂತಾನೇ ಹುಟ್ಟಿಕೊಂಡಿತು. ಚಿಕ್ಕವಳಿದ್ದಾಗ ಜಾತ್ರೆಗೆ ಹೋದಾಗಲೋ ಅಥವಾ ಮಳೆಗಾಲದ ದಿನಗಳಲ್ಲಿ ಸಂಚಾರವ್ಯವಸ್ಥೆಗಳೆಲ್ಲ ಅಸ್ತವ್ಯಸ್ತವಾಗಿ ಬಸ್ಸುಗಳೆಲ್ಲ ಕ್ಯಾನ್ಸಲ್ ಆಗುತ್ತಿದ್ದ ಸಂದರ್ಭಗಳಲ್ಲೋ, ಲಾಸ್ಟ್ ಬಸ್ಸಿಗಾಗಿ ಬಸ್ ಸ್ಟ್ಯಾಂಡಿನಲ್ಲಿ ಕಾಯುತ್ತಿದ್ದ ಸಮಯಗಳಲ್ಲಿ ಹೊರಊರುಗಳಿಗೆ ಸಂಚರಿಸುತ್ತಿದ್ದ ರಾತ್ರಿಬಸ್ಸುಗಳು ಬಂದು ನಿಲ್ಲುತ್ತಿದ್ದವು. ಹಾಗೆ ಬಸ್ಸು ಬಂದು ನಿಲ್ಲುತ್ತಿದ್ದಂತೆಯೇ ಒಂದು ಕೈಯ್ಯಲ್ಲಿ ಟಿಕೆಟ್ ಹಿಡಿದುಕೊಂಡು ಇನ್ನೊಂದು ಕೈಯಲ್ಲಿ ಲಗೇಜು ಎತ್ತಿಕೊಂಡು ಗಡಿಬಿಡಿಯಲ್ಲಿ ಬಸ್ಸಿನೆಡೆಗೆ ಓಡುವವರನ್ನು ಕಂಡಾಗಲೆಲ್ಲ, ಈ ರಾತ್ರಿಯ ಸಮಯದಲ್ಲಿ ಇಷ್ಟೊಂದು ಜನರು ಊರು ಬಿಟ್ಟು ಅದೆಲ್ಲಿಗೆ ಹೋಗುತ್ತಿರಬಹುದು ಎನ್ನುವ ಪ್ರಶ್ನೆ ಹುಟ್ಟಿಕೊಳ್ಳುತ್ತಿತ್ತು. ಪರ್ಸನ್ನು ಭದ್ರವಾಗಿ ಹಿಡಿದುಕೊಂಡು ಸ್ವೆಟರನ್ನು ಸರಿಪಡಿಸಿಕೊಳ್ಳುತ್ತ ಬಸ್ಸಿನಿಂದ ಇಳಿದು ಟಾಯ್ಲೆಟ್ಟಿನ ಬೋರ್ಡನ್ನು ಹುಡುಕುವವರನ್ನು ನೋಡುವಾಗಲೆಲ್ಲ, ಅವರೆಲ್ಲ ಅದ್ಯಾವುದೋ ಬೇರೆಯದೇ ಆದ ಲೋಕದೊಂದಿಗೆ ನನ್ನನ್ನು ಕನೆಕ್ಟ್ ಮಾಡುತ್ತಿರುವಂತೆ ಭಾಸವಾಗುತ್ತಿತ್ತು. ಹಾಗೆ ಒಂದೊಂದಾಗಿ ಸ್ಟ್ಯಾಂಡಿಗೆ ಬರುತ್ತಿದ್ದ ರಾತ್ರಿಬಸ್ಸುಗಳಿಂದಾಗಿ ಬಸ್ ಸ್ಟ್ಯಾಂಡಿನ ಬೇಕರಿಯ ಬ್ರೆಡ್ಡು-ಬಿಸ್ಕಿಟ್ಟುಗಳೂ ಒಂದೊಂದಾಗಿ ಖಾಲಿಯಾಗಿ ಅಂಗಡಿಯವನ ಮುಖದಲ್ಲೊಂದು ಸಮಾಧಾನ ಕಾಣಿಸಿಕೊಳ್ಳುತ್ತಿತ್ತು. ಆ ರೀತಿಯ ಹಗಲಲ್ಲಿ ಕಾಣಸಿಗದ ಒಂದು ವಿಚಿತ್ರವಾದ ಅವಸರದ, ಉಮೇದಿನ, ಸಮಾಧಾನದ ವಾತಾವರಣವನ್ನು ಸೃಷ್ಟಿ ಮಾಡುತ್ತಿದ್ದ ರಾತ್ರಿಬಸ್ಸುಗಳು ಒಂದನ್ನೊಂದು ರಿಪ್ಲೇಸ್ ಮಾಡುತ್ತಿರುವ ಸಮಯದಲ್ಲಿ ಲಾಸ್ಟ್ ಬಸ್ಸುಗಳು ಒಂದೊಂದಾಗಿ ಬಸ್ ಸ್ಟ್ಯಾಂಡಿನಿಂದ ಜಾಗ ಖಾಲಿಮಾಡುತ್ತಿದ್ದವು. ಹಾಗೆ ಲಾಸ್ಟ್ ಬಸ್ಸಿನಲ್ಲಿ ಕಿಟಕಿಪಕ್ಕದ ಸೀಟಿನಲ್ಲಿ ಕುಳಿತ ನಾನು ರಾತ್ರಿಬಸ್ಸಿನೊಳಗೆ ಕುಳಿತ ಜನರನ್ನು ಬೆರಗಿನಿಂದ ಇಣುಕಿ ನೋಡುತ್ತ, ಅವುಗಳ ಬಗ್ಗೆಯೇ ಯೋಚಿಸುತ್ತ ಬಸ್ಸಿನ ಸರಳಿಗೊರಗಿ ನಿದ್ರೆ ಮಾಡುತ್ತಿದ್ದೆ. ನಾನೂ ಅಂಥದ್ದೇ ರಾತ್ರಿಬಸ್ಸಿನೊಳಗೆ ಕುಳಿತು ಊರುಬಿಟ್ಟು ರಾತ್ರಿಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಕ್ಯಾಬ್ ಗಳಿಗೆ ಎದುರಾಗುತ್ತಿದ್ದ ರಾತ್ರಿಬಸ್ಸುಗಳ ಬೋರ್ಡಿನೆಡೆಗೆ ದೃಷ್ಟಿ ಹಾಯಿಸುತ್ತಿದ್ದೆ; ಬೋರ್ಡುಗಳೇ ಇರದ ಬಸ್ಸುಗಳ ಡ್ರೈವರುಗಳೆಡೆಗೆ ಇಣುಕಿ ನೋಡುವ ಒಂದು ವಿಚಿತ್ರವಾದ ಚಟವೂ ಅಂಟಿಕೊಂಡಿತ್ತು. ಅವರ ಕಣ್ಣುಗಳಲ್ಲಿರುತ್ತಿದ್ದ ತೀಕ್ಷ್ಣತೆ-ಜಾಗರೂಕತೆಗಳೆಲ್ಲ ಕಂಪ್ಯೂಟರಿನೆದುರಿಗೆ ಕುಳಿತು ಮಂಜಾಗಿರುತ್ತಿದ್ದ ನನ್ನ ಕಣ್ಣುಗಳಲ್ಲೊಂದು ಹೊಸ ಚುರುಕನ್ನು ತುಂಬಿದಂತೆನ್ನಿಸಿ ಖುಷಿಯಾಗಿ, ಆ ಡ್ರೈವರುಗಳ ಮತ್ತು ನನ್ನ ಬದುಕಿನ ನಡುವಿನಲ್ಲೊಂದು ವಿಚಿತ್ರವಾದ ಹೋಲಿಕೆಯಿರುವಂತೆ ಭಾಸವಾಗುತ್ತಿತ್ತು. ಆ ಸಾಮ್ಯತೆಯೇ ಎಲ್ಲ ಬದುಕುಗಳ ನಿಜಸ್ಥಿತಿಯನ್ನು ಕಣ್ಣೆದುರು ತೆರೆದಿಟ್ಟಂತೆನ್ನಿಸಿ, ಹುಟ್ಟು-ಕೊನೆಗಳನ್ನು ಮರೆತು ಬಸ್ಸಿನಲ್ಲಿ ಚಲಿಸುತ್ತಿರುವ ಕನಸುಗಳು ಒಂದಿಲ್ಲೊಂದು ನಿಲುಗಡೆಯಲ್ಲಿ ಇನ್ನೊಂದು ಬಸ್ಸಿನ ಕನಸುಗಳೊಂದಿಗೆ ಸಂಧಿಸಿ ಎಲ್ಲರ ಬದುಕುಗಳನ್ನು ನಿರ್ಧರಿಸುತ್ತಿರುವಂತೆ ತೋರುತ್ತಿತ್ತು. ರಾತ್ರಿಬಸ್ಸಿನ ಮುಚ್ಚಿದ ಕಿಟಕಿಗಳ ಕರ್ಟನ್ನಿನ ಹಿಂದಿರುವ ಕನಸುಗಳೆಲ್ಲ ಬೆಳಗಾಗುವುದನ್ನೇ ಕಾಯುತ್ತಿರಬಹುದು, ಆ ಕಾಯುವಿಕೆಯ ಪ್ರಕ್ರಿಯೆಯೊಂದಿಗೇ ಅವುಗಳ ಸತ್ಯತೆಯೂ ಕೆಲಸ ಮಾಡುತ್ತಿರಬಹುದು ಎನ್ನುವಂತಹ ಯೋಚನೆಗಳೆಲ್ಲ ಪ್ರತಿದಿನವೂ ಬಸ್ಸಿನೊಂದಿಗೆ ಎದುರಾಗುತ್ತಿದ್ದವು. ಇಷ್ಟೆಲ್ಲ ಯೋಚನೆಗಳ ನಡುವೆಯೂ ಕೊನೆಯ ರಾತ್ರಿಬಸ್ಸು ಯಾವ ಸಮಯಕ್ಕೆ ಬಸ್ ಸ್ಟ್ಯಾಂಡನ್ನು ಬಿಡಬಹುದು, ಬಸ್ ಸ್ಟ್ಯಾಂಡಿನಲ್ಲಿರುವ ಬಿಸ್ಕಿಟಿನ ಅಂಗಡಿಯ ಬಾಗಿಲು ಯಾವಾಗ ಮುಚ್ಚಬಹುದು, ಬ್ಯಾಗಿನ ತುಂಬ ಕನಸುಗಳನ್ನು ತುಂಬಿಕೊಂಡು ರಾತ್ರಿಬಸ್ಸು ಹತ್ತಿರುವವರ ಕನಸುಗಳೆಲ್ಲ ಯಾವ ತಿರುವಿನಲ್ಲಿ ಚಲಿಸುತ್ತಿರಬಹುದು ಎನ್ನುವ ಪ್ರಶ್ನೆಗಳೆಲ್ಲ ಪ್ರಶ್ನೆಗಳಾಗಿಯೇ ಉಳಿದಿವೆ. ಈ ರಾತ್ರಿಬಸ್ಸಿಗಾಗಿ ಕಾಯುವವರೆಲ್ಲ ಸೇರಿ ಅಲ್ಲೊಂದು ಹಗಲುಗಳಿಂದ ಬೇರೆಯದೇ ಆದ ಪ್ರಪಂಚವನ್ನು ಸೃಷ್ಟಿ ಮಾಡಿರುತ್ತಾರೆ. ಸ್ಕರ್ಟು ತೊಟ್ಟು ಅದಕ್ಕೆ ತಕ್ಕ ಹೈ ಹೀಲ್ಸ್ ಧರಿಸಿ ಎಸಿ ರೂಮಿನಲ್ಲಿ ನಿರಂತರವಾಗಿ ಕ್ಲೈಂಟ್ ಮೀಟಿಂಗಿನಲ್ಲಿರುವ ಹುಡುಗಿಯೊಬ್ಬಳು ಸಾಧಾರಣವಾದ ಚಪ್ಪಲಿ ಕಾಟನ್ ಬಟ್ಟೆಯನ್ನು ಧರಿಸಿ ಮೆಟ್ಟಿಲುಗಳ ಮೇಲೆ ಕುಳಿತು, ಎಣ್ಣೆಹಾಕಿ ತಲೆಬಾಚಿ ಕನಕಾಂಬರ ಮುಡಿದ ಅಪರಿಚಿತ ಹೆಂಗಸಿನೊಂದಿಗೆ ತರಕಾರಿ ರೇಟಿನ ಬಗ್ಗೆ ಮಾತನಾಡುತ್ತಿರುತ್ತಾಳೆ; ಕೆಲಸದ ಒತ್ತಡದಲ್ಲಿ ತಮ್ಮವರೊಂದಿಗೆ ಮಾತನಾಡಲು ಸಮಯವೇ ಸಿಗದ ಹುಡುಗನೊಬ್ಬ ಬಸ್ಸು ತಡವಾಗಿ ಬರುತ್ತಿರುವುದಕ್ಕೆ ಕಾರಣವನ್ನೋ, ಆಫೀಸಿನ ಪ್ರಮೋಷನ್ ವಿಷಯವನ್ನೋ, ಸ್ನೇಹಿತನ ಮದುವೆಯ ಸಂಗತಿಯನ್ನೋ ಅಕ್ಕ-ತಂಗಿಯರೊಂದಿಗೆ ಹರಟುತ್ತ ಆಚೀಚೆ ಓಡಾಡುತ್ತಿರುತ್ತಾನೆ; ಹೆಂಡತಿಯನ್ನು ಬಸ್ ಹತ್ತಿಸಲು ಬಂದವನ ಕಾರಿನಲ್ಲಿ ಹಳೆಯ ಗಝಲ್ ಗಳು ಒಂದೊಂದಾಗಿ ಪ್ಲೇ ಆಗುತ್ತ ಹೊಸದೊಂದು ಸಂವಹನವನ್ನು ಹುಟ್ಟುಹಾಕುತ್ತವೆ; ಡಿಸ್ಕೌಂಟಿನಲ್ಲಿ ಖರೀದಿಸಿದ ರೇಷ್ಮೆ ಸೀರೆ, ಹೊಸ ಸಿನೆಮಾವೊಂದರ ನಾಯಕನ ಹೇರ್ ಸ್ಟೈಲ್, ಕ್ರಿಕೆಟ್ಟಿನ ಬೆಟ್ಟಿಂಗ್ ನಲ್ಲಿ ಕಳೆದುಕೊಂಡ ಹಣ, ಟ್ರೆಕ್ಕಿಂಗ್ ನಲ್ಲಿ ಸಿಕ್ಕಿದ ಹೊಸ ಗೆಳೆಯರು, ಅತ್ತೆ-ಸೊಸೆಯರ ಮನಸ್ತಾಪಗಳೆಲ್ಲವೂ ಮಾತಾಗಿ ಹೊರಬಂದು ಬಸ್ ಸ್ಟಾಪಿನ ಪ್ಲಾಟ್ ಫಾರ್ಮ್ ಮೇಲೆ ಒಂದರೊಳಗೊಂದು ಸೇರಿಹೋಗುತ್ತವೆ. ಹಾಗೆ ಸಂಧಿಸಿದ ಮಾತುಕತೆಗಳೆಲ್ಲವೂ ಆ ಕ್ಷಣದ ಬದುಕನ್ನು ತಮ್ಮದಾಗಿಸಿಕೊಂಡು ಬಸ್ಸನ್ನೇರಲು ರೆಡಿಯಾಗುತ್ತವೆ. ರಾತ್ರಿಬಸ್ಸಿನೊಳಗಿನ ಮಾತುಕತೆಗಳದ್ದೂ ಒಂದು ವಿಶಿಷ್ಟವಾದ ಪ್ರಪಂಚ. ಸ್ನೇಹವೊಂದು ಅದೆಷ್ಟು ಸುಲಭವಾಗಿ ಹುಟ್ಟಿಕೊಳ್ಳಬಹುದೆನ್ನುವ ಪ್ರಾಕ್ಟಿಕಲ್ ಎನ್ನಬಹುದಾದಂತಹ ಕಲ್ಪನೆ ಈ ಬಸ್ಸುಗಳೊಳಗೆ ಸಿದ್ಧಿಸುತ್ತದೆ. ಅಂಥದ್ದೊಂದು ಸ್ನೇಹ ಹುಟ್ಟಿಕೊಳ್ಳಲು ಒಂದೇ ರೀತಿಯ ಆಸಕ್ತಿಯಾಗಲೀ, ಹವ್ಯಾಸಗಳಾಗಲೀ, ಮನೋಭಾವಗಳಾಗಲೀ ಅಗತ್ಯವಿಲ್ಲ; ವಯಸ್ಸಿನ ಇತಿಮಿತಿಗಳಂತೂ ಮೊದಲೇ ಇಲ್ಲ! ಪಕ್ಕದಲ್ಲಿ ಕುಳಿತವರೆಲ್ಲ ಸಲೀಸಾಗಿ ಸ್ನೇಹಿತರಾಗಿ, ಕಷ್ಟ-ಸುಖಗಳ ವಿನಿಮಯವೂ ಆಗಿ, ಮಧ್ಯರಾತ್ರಿಯಲ್ಲಿ ಅದ್ಯಾವುದೋ ಊರಿನಲ್ಲಿ ಬಸ್ಸು ನಿಂತಾಗ ಒಟ್ಟಿಗೇ ಕೆಳಗಿಳಿದು ಜೊತೆಯಾಗಿ ಟೀ ಕುಡಿದು, ಬೆಳಗ್ಗೆ ಬಸ್ಸಿಳಿದ ನಂತರ ಸಂಪರ್ಕವೇ ಇಲ್ಲದಿದ್ದರೂ, ರಾತ್ರಿಬಸ್ಸಿನಲ್ಲಿ ಜೊತೆಯಾಗಿ ಪ್ರಯಾಣ ಮಾಡಿದವರ ಚಹರೆ-ಸಂಭಾಷಣೆಗಳೆಲ್ಲವೂ ಮನಸ್ಸಿನಲ್ಲಿ ಉಳಿದುಹೋಗಿರುತ್ತವೆ. ಆ ವ್ಯಕ್ತಿಯನ್ನು ಮತ್ತೆಂದೂ ಭೇಟಿಯಾಗದಿದ್ದರೂ ಅಲ್ಪಕಾಲದ ಆ ಸ್ನೇಹದ ತುಣುಕೊಂದು ನೆನಪಾಗಿ ಉಳಿದು, ಯಾವುದೋ ಸಂದರ್ಭದ ಯಾವುದೋ ಸಂಗತಿಗಳೊಂದಿಗೆ ತನ್ನನ್ನು ತಾನು ಜೋಡಿಸಿಕೊಂಡು ಸದಾಕಾಲ ಜೊತೆಗಿರುತ್ತದೆ. ಅಂತಹ ಚಿಕ್ಕಪುಟ್ಟ ಸ್ನೇಹಗಳೇ ಒಂದಾಗಿ ಮಾನವೀಯ ನೆಲೆಯಲ್ಲಿ ಅಂತರಂಗದೊಂದಿಗೆ ಮಾತುಕತೆ ನಡೆಸುತ್ತ ಚಾಕಲೇಟ್ ಬಾಕ್ಸಿನೊಳಗಿನ ಬೊಂಬೆಗಳಂತೆ ಬದುಕಿನ ಸವಿಯನ್ನು ಹೆಚ್ಚಿಸುತ್ತಿರುತ್ತವೆ. ಈ ರಾತ್ರಿಬಸ್ಸುಗಳನ್ನು ಏರುವಾಗಲೆಲ್ಲ ನನ್ನನ್ನೊಂದು ವಿಚಿತ್ರವಾದ ಭಯವೂ ಆವರಿಸಿಕೊಳ್ಳುತ್ತಿತ್ತು. ಚಿಕ್ಕವಳಿದ್ದಾಗ ವಿಧಿ-ಹಣೆಬರಹಗಳ ಕಥೆಗಳನ್ನೆಲ್ಲ ಕೇಳುತ್ತ ಬೆಳೆದಿದ್ದ ನನಗೆ ಈ ಬೋರ್ಡುಗಳಿಲ್ಲದ ಬಸ್ಸುಗಳನ್ನು ಏರುವಾಗಲೆಲ್ಲ, ಹಣೆಬರಹವನ್ನೇ ಬರೆದಿರದ ಬದುಕಿನೊಂದಿಗೆ ಓಡುತ್ತಿರುವ ಅನುಭವವಾಗಿ ವಿಚಿತ್ರವಾದ ತಳಮಳವಾಗುತ್ತಿತ್ತು. ಐದನೇ ಕ್ಲಾಸಿನಲ್ಲಿ ಕಲಿತ ಇಂಗ್ಲಿಷ್ ಅಕ್ಷರಮಾಲೆಯನ್ನು ಮತ್ತೊಮ್ಮೆ ಮನನ ಮಾಡಿಕೊಂಡು, ಬೋರ್ಡಿನ ಬದಲಾಗಿ ಗ್ಲಾಸಿನ ಮೇಲೆ ಬರೆದಿರುತ್ತಿದ್ದ ಅಕ್ಷರವನ್ನು ಮತ್ತೆಮತ್ತೆ ಓದಿಕೊಂಡು, ವಿಧಿಯ ಮೇಲೆ ಭಾರ ಹಾಕುತ್ತಿರುವ ಭಾವದಲ್ಲಿ ಬಸ್ಸಿನೊಳಗೆ ಲಗೇಜು ಇಳಿಸುತ್ತಿದ್ದೆ. ಲಗೇಜಿನಲ್ಲಿರುವ ಟೆಡ್ಡಿಬೇರ್-ಚಾಕಲೇಟುಗಳೆಲ್ಲ ಸುಸೂತ್ರವಾಗಿ ಮಕ್ಕಳ ಕೈಯನ್ನು ತಲುಪುವಂತಾಗಲಿ ಎಂದು ಪ್ರಾರ್ಥಿಸುತ್ತ ಡ್ರೈವರಿನ ಮುಖವನ್ನೊಮ್ಮೆ ನೋಡುತ್ತಿದ್ದೆ. ಎರಡು ತಿಂಗಳಿಗೊಮ್ಮೆಯಾದರೂ ರಾತ್ರಿಬಸ್ಸಿನೊಂದಿಗೆ ಒಡನಾಟವಿಟ್ಟುಕೊಂಡಿದ್ದ ನನಗೆ ಎಷ್ಟೋ ಸಲ ಮುಖಪರಿಚಯವಿರುವ ಡ್ರೈವರಿನ ದರ್ಶನವಾಗಿ, ವರುಷಗಳಿಂದ ಬದಲಾಗದೇ ಪೀಠದಲ್ಲಿ ಕುಳಿತಿರುವ ದೇವರನ್ನು ನೋಡಿದ ಸಮಾಧಾನವಾಗುತ್ತಿತ್ತು. ಆ ನೆಮ್ಮದಿಯ ಭಾವದಲ್ಲಿಯೇ ಸೀಟಿನ ನಂಬರನ್ನು ಹುಡುಕಿ ಕಾಲುಚಾಚಿದ ತಕ್ಷಣ, ಅದೇ ಲಾಸ್ಟ್ ಬಸ್ಸಿನ ಕಿಟಕಿಪಕ್ಕದ ಸೀಟು ತಪ್ಪದೇ ನೆನಪಾಗುತ್ತಿತ್ತು. ರಾತ್ರಿಬಸ್ಸೊಂದು ಕನಸಿನಂತೆ ಮನಸ್ಸನ್ನಾವರಿಸಿಕೊಂಡು, ನಿಧಾನವಾಗಿ ನೆನಪುಗಳೊಂದಿಗೆ ಒಡನಾಡುತ್ತಿರುವ ಸಮಯದಲ್ಲಿಯೂ ಅವುಗಳೆಡೆಗಿನ ಮೋಹ ಮಾತ್ರ ಟಿವಿ ಸ್ಟ್ಯಾಂಡಿನಲ್ಲಿರುವ ಹಳೆಯ ಹಾಡುಗಳ ಸಿಡಿಗಳಂತೆ ಹಳತಾಗದೇ ಉಳಿದುಕೊಂಡಿದೆ. ಮಾತುಕತೆಗಳೆಲ್ಲ ಮೊಬೈಲಿಗೆ ಸೀಮಿತವಾಗಿಹೋಗುತ್ತಿರುವ ಕಾಲದಲ್ಲಿಯೂ ರಾತ್ರಿಬಸ್ಸುಗಳಲ್ಲಿ ಸುಂದರವಾದ ಸಂಬಂಧವೊಂದು ಹುಟ್ಟಿಕೊಂಡು ಕಾಂಟ್ಯಾಕ್ಟ್ ನಂಬರುಗಳನ್ನು ವಿನಿಮಯ ಮಾಡಿಕೊಳ್ಳುತ್ತಿರಬಹುದು; ನಿಲುಗಡೆಯ ಚಹಾದ ಅಂಗಡಿಯಲ್ಲೊಬ್ಬ ಬಿಸ್ಕಿಟ್ ಪ್ಯಾಕೆಟ್ಟುಗಳಲ್ಲಿ ಸ್ನೇಹವನ್ನು ಹಂಚುತ್ತಿರಬಹುದು; ಲಗೇಜಿನೊಳಗಿನ ಮಾರ್ಕ್ಸ್ ಕಾರ್ಡು, ಲಗ್ನಪತ್ರಿಕೆ, ನೆಲ್ಲಿಕಾಯಿ, ತುಳಸಿಬೀಜಗಳೆಲ್ಲವೂ ನಿಶ್ಚಿಂತೆಯಿಂದ ಕನಸುಕಾಣುತ್ತಿರಬಹುದು. *************************************** ಮೂಲತ: ಉತ್ತರ ಕನ್ನಡದವರಾದ ಅಂಜನಾ ಹೆಗಡೆಯವರು ಸದ್ಯ ಬೆಂಗಳೂರಲ್ಲಿ ನೆಲೆಸಿರುತ್ತಾರೆ. ‘ಕಾಡ ಕತ್ತಲೆಯ ಮೌನ ಮಾತುಗಳು’ ಇವರು ಪ್ರಕಟಿಸಿದ ಕವನಸಂಕಲನ.ಓದು ಬರಹದ ಜೊತೆಗೆ ಗಾರ್ಡನಿಂಗ್ ಇವರ ನೆಚ್ಚಿನ ಹವ್ಯಾಸ
ಅಂಕಣಬರಹ ಅದುಮಿಟ್ಟ ಮನದ ಮಾತುಗಳು ಕವಿತೆಗಳಾದಾಗ ಪುಸ್ತಕ- ಸಂತೆ ಸರಕುಕವಿ- ಬಿ ಎ ಮಮತಾ ಅರಸೀಕೆರೆಪ್ರಕಾಶನ- ನಾಕುತಂತಿ ಬೆಲೆ- ೮೦/- ಸಿದ್ಧ ಸೂತ್ರ ಬದಲಾಗಬೇಕುಅಜ್ಜಿ ಕಥೆಯಲ್ಲಿಅರಿವು ಜೊತೆಯಾಗಬೇಕುಹೊಸ ಕಥೆಗಳ ಬರೆಯಬೇಕುಅಕ್ಷರ ಲೋಕದಲಿಅಕ್ಷರ ಲೋಕದಲ್ಲಿ ಬದಲಾವಣೆ ಬಯಸುವ ಮಮತಾ ಆಡಲೇ ಬೇಕಾದ ಮಾತುಗಳೊಂದಿಗೆ ನಮ್ಮೆದುರಿಗಿದ್ದಾಳೆ. ಮಮತಾ ಅಂದರೇ ಹಾಗೆ. ಹೇಳಬೇಕಾದುದನ್ನು ಮನದೊಳಗೇ ಇಟ್ಟುಕೊಂಡಿರುವವಳಲ್ಲ. ಹೇಳಬೇಕಾದುದ್ದನ್ನು ಥಟ್ಟನೆ ಹೇಳಿಬಿಡುವವಳು. ಆ ಮಾತಿನಿಂದ ಏನಾದರೂ ವ್ಯತಿರಿಕ್ತವಾದರೆ ನಂತರದ ಪರಿಣಾಮಗಳ ಬಗ್ಗೆ ಕೊನೆಯಲ್ಲಿ ಯೋಚಿಸಿದರಾಯಿತು ಎಂದುಕೊಂಡಿರುವವಳು. ಹೊಸದಾಗಿ ನೋಡುವವರಿಗೆ ಇದ್ಯಾಕೆ ಹೀಗೆ ಎಂದು ಅಚ್ಚರಿಯಾದರೂ ಜೊತೆಗೇ ಇರುವ ನಮಗೆ ಇದು ಅತ್ಯಂತ ಸಹಜ. ಏನಾದರೂ ಒಂದು ಘಟನೆ ನಡೆದಾಗ ಅದಕ್ಕೆ ಮಮತಾ ತಕ್ಷಣ ಪ್ರತಿಕ್ರಿಯಿಸದೇ ಇದ್ದರೆ ಮಮತಾ ಎಲ್ಲಿ? ಆರಾಂ ಇದ್ದಾಳೆ ತಾನೆ? ಎಂದು ಸ್ನೇಹಿತ ಬಳಗದಲ್ಲಿ ಕೇಳಿಕೊಳ್ಳುವಷ್ಟು ಅವಳು ಶೀಘ್ರ ಉತ್ತರ ನೀಡುವವಳು. ಹೀಗಾಗಿ ಮಮತಾ ತಮ್ಮ ಈ ಸಂಕಲನದಲ್ಲಿ ಹೀಗೆ ನೇರಾನೇರ, ಎದೆಗೆ ಢಿಕ್ಕಿ ಹೊಡೆಯುವ ಅನೇಕ ಸಾಲುಗಳೊಂದಿಗೆ ನಮಗೆ ಎದುರಾಗುತ್ತಾರೆ. ನಿನಗೆ ನೀನೆ ಕತೆಯಾಗುವುದನಿಲ್ಲಿಸಿ ಬಿಡಲಾಗದೇನೆ ಸಖಿಸಾಕು ಮಾಡಲಾಗದೇನೆಅವನ ಹಂಬಲಿಕೆಬರೀ ನಿನ್ನದೇ ಬಿಕ್ಕಳಿಕೆ ಎಂದು ಪ್ರಾರಂಭವಾಗುವ ‘ಅವತಾರಗಳು’ ಎಂಬ ಕವಿತೆ ಆದಿಯಿಂದ ಹಿಡಿದು ಇಡೀ ಪುರಾಣಗಳನ್ನು ಜಾಲಾಡಿ ಹೆಣ್ಣಿನ ಕಣ್ಣೀರನ್ನು ಹುಡುಕುವ ಪ್ರಯತ್ನ ಮಾಡುತ್ತದೆ. ಇಡೀ ಪುರಾಣ, ಭಾರತದ ಇತಿಹಾಸದ ತುಂಬೆಲ್ಲ ಹೆಣ್ಣಿನ ಬಿಕ್ಕಳಿಕೆಯ ನೋವುಗಳೇ ತುಂಬಿದೆ. ಕಣ್ಣಿಗೆ ಕಾಣದ ಸಂಪ್ರದಾಯಗಳ ಹೊರೆ ಇರುವ ಲಕ್ಷ್ಮಣರೇಖೆ ಎಲ್ಲಾ ಹೆಣ್ಣುಗಳ ಸುತ್ತಲೂ ಆವರಿಸಿಕೊಂಡಿದೆ. ಅದನ್ನು ಮೀರಿದರೆ ಅನರ್ಥ ಎಂದು ಆ ಕಾಲದಿಂದಲೂ ಹೆಣ್ಣನ್ನು ಬಲವಂತವಾಗಿ ನಂಬಿಸುತ್ತ ಬರಲಾಗಿದೆ. ಮತ್ತು ಆಗುವ ಎಲ್ಲಾ ಅನಾಹುತಗಳಿಗೂ ಹೆಣ್ಣೇ ಕಾರಣ ಎಂದು ಪ್ರಪಂಚವನ್ನು ಒಪ್ಪಿಸುತ್ತಲೇ ಬಂದಿದೆ ಈ ಪುರುಷಪ್ರಧಾನ ಸಮಾಜ. ಹೆಣ್ಣು ಮಾತನಾಡಿದರೆ ತಪ್ಪು, ಹೆಣ್ಣು ನಕ್ಕರೆ ತಪ್ಪು, ಹೆಣ್ಣು ಏನಾದರೂ ಆಸೆಪಟ್ಟರೆ ತಪ್ಪು, ಕೊನೆಗೆ ಹೆಣ್ಣು ಅತ್ತರೂ ತಪ್ಪು. ಆಕೆ ಗಂಡು ಆಡಿಸಿದಂತೆ ಆಡುವ ಗೊಂಬೆ ಅಷ್ಟೇ. ಆತ ಏನು ಹೇಳಿದರೂ ಮರು ಮಾತನಾಡದೇ ಒಪ್ಪಿಕೊಳ್ಳಬೇಕಾದ ಜೀವವಿರುವ ವಸ್ತು. ಆತನ ಮನೆ, ಹೊಲಗದ್ದೆ, ಬೈಕು, ಕಾರು ಮತ್ತು ಉಳಿದೆಲ್ಲ ಐಶಾರಾಮಿ ವಸ್ತುಗಳಂತೆಯೇ. ನಿರ್ಧಾರ ತೆಗೆದುಕೊಳ್ಳಬೇಕಾದವನು ಅವನು ಮತ್ತು ಅದರ ಬಗ್ಗೆ ಏನೂ ಕೇಳದೆ ಜಾರಿಗೆ ತರಬೇಕಾದವಳು ಮಾತ್ರ ಅವಳು. ಬದುಕಿನಲ್ಲಿ ತನ್ನಷ್ಟೇ ಅವಳೂ ಮುಖ್ಯವಾದವಳು ಎಂಬುದನ್ನು ಕನಸಿನಲ್ಲೂ ಯೋಚಿಸದ ಆತ ತನ್ನಷ್ಟಕ್ಕೆ ತಾನು ತೆಗೆದುಕೊಳ್ಳುವ ಏಕಮುಖಿ ನಿರ್ಧಾರಗಳಿಗೆ, ಜೀವನದ ಮಹತ್ವದ ತೀರ್ಮಾನಗಳಿಗೆ ಆಕೆ ಬದಲು ಮಾತನಾಡದೇ ಒಪ್ಪಿಕೊಳ್ಳಬೇಕು. ‘ಪ್ರೀತಿಸುತ್ತೇನೆ ಬಾ’ ಎಂದರೆ ಹರಕೆಯ ಕುರಿಯಂತೆ ಹತ್ತಿರ ಬರಬೇಕು, ‘ನೀನು ನನಗೆ ಬೇಡ’ ಎಂದರೆ ಬದಲು ಹೇಳದೇ ದೂರ ಸರಿಯಬೇಕು. ಅದರಲ್ಲಿಯೇ ಆಕೆಯ ಶ್ರೇಯಸ್ಸಿದೆ ಎಂದು ಶತಶತಮಾನಗಳಿಂದ ಹೆಣ್ಣನ್ನು ಭ್ರಮೆಯಲ್ಲಿ ಇಡುತ್ತ ಬರಲಾಗಿದೆ. ಆಕೆ ಸಮಾನತೆಯ ಬಗ್ಗೆ ಮಾತನಾಡುವುದೇ ಅಪರಾಧ. ಹೀಗಾಗಿಯೇ ಸಮಾನತೆಯ ಪ್ರತಿಭಟನೆನಿನ್ನದಲ್ಲ ಜೋಕೆಎಂದು ಅವಳನ್ನು ಎಚ್ಚರಿಸುತ್ತ ಆಕೆ ಏನಾದರೂ ಮಾತನಾಡಿದರೆಚಾರಿತ್ರವಧೆ, ಆಸಿಡ್ ದಾಳಿಕಲ್ಕಿಯ ಲೋಕದ ಕಾಣಿಕೆ ಎಂಬಂತೆ ಅವಳನ್ನು ಜೀವಂತವಿರುವಾಗಲೇ ಸಾಯಿಸಿ ಬಿಡುತ್ತದೆ. ಆದರೆ ಈ ಗಂಡುಲೋಕದ ಲೆಕ್ಕಚಾರಗಳೇ ವಿಚಿತ್ರ. ಕುಸಿದು ಬಿದ್ದರೆ ಎತ್ತಲು ಹತ್ತಾರು ಕೈಗಳು ಸಹಾಯ ಬೇಡದೆಯೂ ಮುಂದೆ ಬರುತ್ತವೆ. ‘ಮೈದಡವಿ’ ಸಾಂತ್ವಾನ ಹೇಳುತ್ತವೆ. ಕೇಳದೆಯೂ ‘ಎದೆಗೊರಗಿಸಿಕೊಂಡು’ ಸಮಾಧಾನ ಹೇಳುತ್ತವೆ. ಇಂತಹ ಪುರಾಣ ಸೃಷ್ಟಿಕೃತ ಪುರುಶೋತ್ತಮರನ್ನು ನಾವು ಪ್ರತಿದಿನವೂ ಕಾಣುತ್ತಿದ್ದೇವೆ ಎಂದು ಕವಯತ್ರಿ ಅಭಿಪ್ರಾಯ ಪಡುತ್ತಾರೆ. ಪುರುಷ ಪ್ರಪಂಚದ ಈ ದ್ರಾಷ್ಟ್ಯಕ್ಕೆ ಹೆಣ್ಣಿನ ನವಿರು ಲೋಕ ನಲುಗಿಹೋಗಿದೆ. ಕಣ್ಣಲ್ಲೇ ಅಳೆದು ಬಿಡುತ್ತೀರಿಕರಾರುವಕ್ಕಾದ ಅಳತೆಗಳುಬೇಡವೇ ಬೇಡ ನಿಮಗೆಯಾವುದೇ ಸಿದ್ಧ ಮಾಪಕಗಳುಬಾಯಿತುಂಬಾ ಚಪ್ಪರಿಸುತ್ತೀರಿಮತ್ತೆ ಮತ್ತೆ ಸವಿಯುತ್ತೀರಿಅದೆಷ್ಟು ತೆವಲೋಅದೇ ಧ್ಯಾನ ಅದೇ ಉಸಿರುರಸಗವಳವೇ ಅಂಗಾಂಗಗಳ ಹೆಸರು ನಯವಾದ ರೇಷ್ಮೆ ಬಟ್ಟೆಯಲ್ಲಿ ಸುತ್ತಿಕೊಂಡು ಮತ್ತಗೆ ಭಾರಿಸಿದಂತಹ ಈ ಸಾಲುಗಳು ನೀಡುವ ಮೂಕೇಟು ಅತ್ತಯಂತ ಕಠೋರವಾದವುಗಳು. ರಕ್ತ ಹೊರಬರಲಾರದು. ಆದರೆ ಒಳ ಏಟಿಗೆ ಚರ್ಮ ನೀಲಿಗಟ್ಟುವುದನ್ನು ತಡೆಯಲಾಗದು. ಆದರೆ ಈ ಏಟು ತಮಗೇ ನೀಡಿದ್ದು ಎಂದು ಈ ಸಮಾಜ ಅರ್ಥ ಮಾಡಿಕೊಳ್ಳಬೇಕು ಅಷ್ಟೇ. ಪುರುಷರ ತವಲಿಗೆ ಇನ್ನೊಂದು ಪದ ಬೇಡ. ದೀಪ ಮತ್ತು ಕಲಣಿವೆ ಎನ್ನುವ ಕವಿತೆಯನ್ನೋದಿದರೆ ಈ ಪುರುಷ ವಿಕೃತಿಯ ಭೂತೋಚ್ಛಟನೆ ಆಗುವುದಂತೂ ಸತ್ಯ. ಆದರೆ ಕವನ ಓದಿ ಸಮಾಜ ಬದಲಾಗುತ್ತದೆಯೇ? ಬದಲಾಯಿಸುವ ಅವಕಾಶ ಸಿಕ್ಕರೆ ಎಲ್ಲವನ್ನು ಬದಲಿಸಿಬಿಡಬಹುದಿತ್ತು ಎನ್ನುವ ಕವಯತ್ರಿಯ ಮನದಾಳದ ಮಾತು ಇಲ್ಲಿ ಕವಿತೆಯಾಗಿದೆ ಸದ್ಯಮೂರನೇ ಕಣ್ಣುಕೊಡಲಿಲ್ಲ ಪ್ರಭುವೆಶಾಪಗಳೂ ಕೂಡ ಫಲಿಸಲಾರವು ಹಾಳಾಗಿ ಹೋಗಲಿ ಎಂದು ನಾವು ನೀಡುವ ಶಾಪ, ಬೆನ್ನ ಹಿಂದಿನ ಬೈಗುಳಗಳು ಈ ಮಾನಗೆಟ್ಟವರನ್ನು ಏನೂ ಮಾಡದು ಎನ್ನುವ ಪರಿಜ್ಞಾನ ಅವರಿಗಿದೆ. ಹೀಗಾಗಿಯೇ ಮಮತಾ ಮತ್ತೆ ಮತ್ತೆ ಅಕ್ಕನನ್ನು ಆತುಕೊಳ್ಳುತ್ತಾರೆ ಹಾದಿಯಲಿ ಹೆಜ್ಜೆ ಗುರುತು ಬೇಡಗೆಜ್ಜೆ ಸದ್ದು ಕೇಳದಾದೀತುನಾ ನಿನ್ನ ಹಿಂಬಲಿಸುವಹಂಬಲ ಬೇಡಅಕ್ಕನ ಕಾಂಬ ಗುರಿಮಾಸಿ ಹೋದೀತು ಎನ್ನುತ್ತಾರೆ. ತನ್ನ ಹಾದಿಯಲ್ಲಿ ತಾನು ದೃಢವಾಗಿ ಹೆಜ್ಜೆ ಇಡುತ್ತಿರುವಾಗ ತನ್ನ ಹಾದಿಯಲ್ಲಿ ಬಂದರೆ ಗೆಜ್ಜೆ ಸದ್ದು ಕೇಳದಾಗುತ್ತದೆ ಎನ್ನುವುದಲ್ಲದೇ ಯಾವುದೇ ಕಾರಣಕ್ಕೂ ತಾನು ಅವನನ್ನು ಹಿಂಬಾಲಿಸುವ ಗುರಿ ಹೊಂದಿಲ್ಲ ಎನ್ನುತ್ತಾರೆ. ಯಾಕೆಂದರೆ ಅವರ ಗುರಿ ಒಂದೆ. ಅಕ್ಕನ ಹಾದಿಯಲ್ಲಿ ನಡೆದು ತಮ್ಮ ಜೀವನಕ್ಕೆ ತಾನು ಜವಾಬ್ಧಾರರೆನ್ನುವವರನ್ನು ಒಲೆಗಿಕ್ಕುವುದು. ಇದು ಮಾಮೂಲಿಯಾಗಿ ಬರುವಂಥಹುದ್ದಲ್ಲ. ಅದಕ್ಕೊಂದು ದಿಟ್ಟತನಬೇಕು. ಅಂತಹ ದೃಢತೆಗಾಗಿ ಮತ್ತೆ ಅಕ್ಕನನ್ನೇ ಮೊರೆ ಹೋಗಬೇಕು. ಕಾಯುತಿವೆ ಜೀವಗಳುಜಿಗಿದು ಪರದೆಯಿಂದಾಚೆಸೀಳಿ ಬಲೆಗಳನ್ನುಅಕ್ಕ ಹೇಳೆನೀನ್ಹೇಗೆ ದಾಟಿದೆಬಂಧನದ ಸುಳಿಗಳನ್ನು ಎನ್ನುತ್ತ ಈ ಸಂಬಂಧಧ ಸುಳಿಗಳು ಮೇಲೇಳಲು ಪ್ರಯತ್ನಿಸಿದಷ್ಟೂ ಒಳಗೆಳೆದುಕೊಂಡು ಮುಳುಗಿಸುವ ಚೋದ್ಯಕ್ಕೆ ಬೆರಗಾಗುತ್ತಾರೆ.ಮನುಷ್ಯ ಸಂಬಂಧ ಯಾವತ್ತೂ ಕುತೂಹಲಕರವಾದದ್ದು. ಅದು ತಂದೆ ತಾಯಿಗಳೊಟ್ಟಿಗೆ ಇರುವ ಮಕ್ಕಳ ಸಂಬಂಧವಾಗಿರಬಹುದು, ಸಹೋದರ, ಸಹೋದರಿಯರ ನಡುವಣ ಬಂಧವಾಗಿರಬಹುದು ಗಂಡ ಹೆಂಡತಿಯ ನಡುವಣ ಸಂಬಂಧವಾಗಿರಬಹುದು. ಅಥವಾ ಸ್ನೇಹವಾಗಿರಬಹುದು ಇಲ್ಲವೇ ವ್ಯಾಖ್ಯಾನವೇ ಕೊಡಲು ಅಸಾಧ್ಯವಾದ ಪ್ರೇಮ ಸಂಬಂಧವಿರಬಹುದು. ಅವುಗಳಿಗೆ ಅರ್ಥ ಹಚ್ಚುವುದು ಅಸಾಧ್ಯವೇ ಸರಿ. ಮಮತಾ ಕೂಡ ‘ಮೇಲಾಟ’ ಕವನದ ಮೂಲಕ ಇಡೀ ಮನುಷ್ಯ ಸಂಬಂಧಗಳಿಗೆ ಕನ್ನಡಿ ಹಿಡಿದಿದ್ದಾರೆ. ಈ ಸಂಬಂಧಗಳ ಎಳೆ ಅದೆಷ್ಟು ಸೂಕ್ಷ್ಮ. ಕೆಲವೊಮ್ಮೆ ಎಂತಹ ಆಘಾತಗಳಿಗೂ ಕಿತ್ತು ಹೋಗದ ಸಂಬಂಧಗಳು ಒಮ್ಮೊಮ್ಮೆ ಸಣ್ಣ ಎಳೆದಾಟಕ್ಕೂ ತುಂಡಾಗಿ ಹೋಗುವ ನವಿರು ಎಳೆಗಳಂತೆ ಕಾಣುತ್ತದೆ. ಹಾಗಾದರೆ ಸಂಬಂಧಗಳು ಹದಗೊಳ್ಳುವುದು ಯಾವಾಗ? ಕವಯತ್ರಿಗೂ ಈ ಪ್ರಶ್ನೆ ಬೃಹದಾಕಾರವಾಗಿ ಕಾಡಿದೆ. ಹೀಗಾಗಿಯೇ ಸಂಬಂಧಗಳನ್ನು ಹದಗೊಳಿಸಲು ಬೇಯಲಿಡುತ್ತಾರೆ. ಕಾವು ಕೊಟ್ಟರೆ ಮಾತ್ರ ಮೊಟ್ಟೆಯೊಡೆಯುವ ಕ್ರೀಯೆಯಂತೆ ಹದವಾಗಿ ಕಾವು ಹೆಚ್ಚಿಸಿ ಒಂದು ಕುದಿತ ಬರಲಿ ಎಂದು ಕಾಯುತ್ತಾರೆ. ಇಲ್ಲಿ ಕವಿಯತ್ರಿ ಸಂಬಂಧವನ್ನು ಹದಗೊಳಿಸುವ ಪ್ರಕ್ರಿಯೆ ಅಕ್ಕಿಯನ್ನು ನೀರು ಹಾಕಿ ಕೊತಕೊತನೆ ಕುದಿಸುವ ಅನ್ನ ಮಾಡುವ ರೂಪಕದಂತೆ ಕಾಣುತ್ತದೆ. ಅನ್ನದ ಎಸರು ಕುದಿಯುವಾಗ ತಕತಕನೆ ಕುಣಿಯುತ್ತ ಮುಚ್ಚಿದ ತಟ್ಟೆಯನ್ನೇ ಬೀಳಿಸುತ್ತದೆ. ಸಂಬಂಧ ಗಟ್ಟಿಯಾಗುವಾಗಲೂ ಅಷ್ಟೇ. ಅದೆಷ್ಟು ಶಬ್ಧ, ಅದೆಷ್ಟು ರಾಣಾರಂಪ. ಕೆಲವೊಮ್ಮೆ ಈ ಸಂಬಂಧ ಮುರಿದೇ ಹೋಯಿತು ಎಂಬಷ್ಟು ಶಬ್ಧ ಮಾಡುತ್ತದೆ. ಆದರೆ ನಿಜವಾದ ಸಂಬಂಧಗಳು ಹಾಗೆ ಮುಗಿಯುವುದೂ ಇಲ್ಲ. ಚಿಕ್ಕಪುಟ್ಟ ಜಗಳಗಳಿಗೆ ಹೆದರುವುದೂ ಇಲ್ಲ. ಆದರೆ ಹಾಗೆಂದುಕೊಳ್ಳುವುದೂ ಕೆಲವೊಮ್ಮೆ ತಪ್ಪಾಗುತ್ತದೆ. ಏನೇನೂ ಮುಖ್ಯವಲ್ಲದ ವಿಷಯಗಳು ಸಂಬಂಧವನ್ನು ಮುರಿದ ಅದೆಷ್ಟೋ ಉದಾಹರಣೆಗಳು ನಮ್ಮ ಕಣ್ಣೆದುರಿಗೇ ಇವೆ. ಆದರೆ ಕೊನೆಗೂ ಒಂದು ಪ್ರಶ್ನೆ ಹಾಗೆಯೇ ಉಳಿದು ಹೋಗುತ್ತದೆ. ಅದನ್ನೇ ಮಮತಾ ಮುಖ್ಯವಾಗಿ ಎತ್ತಿ ತೋರಿಸುತ್ತಾರೆ. ಸಂಬಂಧಗಳಲ್ಲಿರುವ ಮೇಲಾಟ. ತಾನು ಹೆಚ್ಚು, ನಾನು ಹೆಚ್ಚು ಎನ್ನುವ ಅಹಂ ನಮ್ಮ ಸಂಬಂಧವನ್ನು ನುಂಗಿ ನೊಣೆಯುತ್ತದೆ. ಎಲ್ಲಿ ಅಹಂ ಹಾಗೂ ಸ್ವಾರ್ಥ ಇರುತ್ತದೋ ಅಲ್ಲಿ ಸಂಬಂಧಗಳು ಬಹುಕಾಲ ಬಾಳಲಾರವು. ಮತ್ಸರ ಹಾಗೂ ಅಸೂಯೆಗಳು ಸಂಬಂಧಗಳ ನಡುವೆ ಬೆಂಕಿ ಹಚ್ಚುತ್ತವೆ. ಎಲ್ಲಿ ತಾವೇ ಹೆಚ್ಚು ಎನ್ನುವ ಹೆಚ್ಚುಗಾರಿಕೆ ಇಬ್ಬರ ನಡುವೆ ಉಂಟಾಗುತ್ತದೋ ಅಲ್ಲಿ ಸಂಬಂಧ ಹಳಸಲಾಗುತ್ತದೆ. ಎಲ್ಲಿ ಒಬ್ಬರ ಉನ್ನತಿಯನ್ನು ಸಹಿಸಲಾಗದೇ ಹೊಟ್ಟೆಕಿಚ್ಚಿನ ಕಿಡಿ ಹೊಗೆಯಾಡುತ್ತದೋ ಅಲ್ಲಿ ಆ ಸಂಬಂಧ ಮುಕ್ತಾಯಗೊಳ್ಳುತ್ತದೆ ಎನ್ನುತ್ತಾರೆ. ತಕ್ಕಡಿಯಲ್ಲಿ ಒಂದು ತೂಕದ ಬಟ್ಟಲು ಒಮ್ಮೆ ಕೆಳಕ್ಕೆಳೆದರೆ ಮತ್ತೊಮ್ಮೆ ಇನ್ನೊಂದು ತೂಕದ ಬಟ್ಟಲು ಸೆಣೆಸಾಟಕ್ಕೆ ನಿಲ್ಲುತ್ತದೆ. ಕೆಳಗೆ ಜಗ್ಗುವ ಈ ಪ್ರಕ್ರಿಯೆ ನಿರಂತರ. ಇಷ್ಟಾಗಿಯೂ ಕವಯತ್ರಿ ಸಂಬಂಧಗಳನ್ನು ಸುಲಭವಾಗಿ ಬಿಟ್ಟುಕೊಡಲು ಒಪ್ಪುವುದಿಲ್ಲ. ಹೀಗಾಗಿ ಕಾದು ನೋಡುತ್ತೇನೆ ಎನ್ನುತ್ತಾರೆ. ಹಠಕ್ಕೆ ಬೀಳುವ ಸಂಬಂಧಗಳಿಗೆ ಹೊಸ ಸೂತ್ರ ಬರೆಯುತ್ತ ಏಣಿಯಾಗುವ ಮನಸ್ಸಿದೆ ಕವಯತ್ರಿಗೆ. ಸಂಬಂಧಗಳ ನಡುವೆ ಸೇತುವಾಗುವ ಹಂಬಲವಿದೆ. ರೂಪಕಗಳಲ್ಲಿ ಮಾತನಾಡುವ ಸಂಕಲನದ ಅತ್ಯುತ್ತಮ ಕವಿತೆಗಳಲ್ಲಿ ಇದೂ ಒಂದು ಎಂದು ನಿಸ್ಸಂದೇಹವಾಗಿ ಹೇಳಬಹುದು. ಹಾಗೆಂದು ಯಾವ ಸಂಬಂಧಗಳೂ ಅನಿವಾರ್‍ಯವಲ್ಲ. ಅವು ಆಯಾ ಕಾಲದ ಆಯ್ಕೆಗಳಷ್ಟೇ. ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸಿದವನು ಒಂದು ಮಾತನ್ನೂ ಹೇಳದೇ ಇಬ್ಬರಿಗೂ ಸೇರಿದ್ದ ಬದುಕಿನ ನಿರ್ಧಾರವನ್ನು ಒಬ್ಬನೇ ತೆಗೆದುಕೊಂಡು ಹೊರಟುಬಿಡುವಾಗ ನೋವಾಗುತ್ತದೆ ನಿಜ. ಆದರೆ ಕಾಲ ಆ ನೋವನ್ನು ಮರೆಸುವ ಶಕ್ತಿ ಹೊಂದಿದೆ. ವಿರಹವನ್ನೂ ಕಾಲದ ತೆಕ್ಕೆಗೆ ಒಪ್ಪಿಸಿಬಿಡಬಹುದು ಎನ್ನುವ ಭಾವದ ಕವಿತೆ ನನ್ನದೀ ಸಮಯ. ನಿಜ. ಅವನಿಗಾಗಿ ಕಾದು, ಕಾತರಿಸಿ, ಪರಿಪರಿಯಾಗಿ ಬೇಡಿಕೊಂಡರೂ ತನ್ನೊಬ್ಬನ ನಿರ್ಧಾರಕ್ಕೆ ಅಂಡಿಕೊಂಡವನಿಗಾಗಿ ಯಾವ ಸಮಯ ಕಾಯುತ್ತದೆ ಹೇಳಿ? ಹೀಗಾಗಿಅನಿವಾರ್ಯವಲ್ಲ ಈಗ ನೀ ನನಗೆ ಗೆಳೆಯಜೀವಭಾವಕೆ ಹೊಸ ಚೈತನ್ಯ ನನ್ನದೀ ಸಮಯಎನ್ನುತ್ತ ತನಗಿಂತಲೂ ಮುಖ್ಯವಾದ ಗುರಿಯೊಂದನ್ನು ಹುಡುಕುವೆ ಎಂದು ಹೊರಟವನಿಗೆ ಪ್ರಸ್ತುತ ಅವನ ಸ್ಥಾನದ ಅರಿವು ಮಾಡಿಕೊಡುತ್ತಾರೆ. ಬದುಕಿನ ಗತಿ ಬದಲಾಗುತ್ತಿರುತ್ತದೆ. ಅಜ್ಜಿಯ ಕಥೆಯಲ್ಲಿ ಬರುವ ಒಕ್ಕಣ್ಣಿನ ರಾಕ್ಷಸ ಏಳುಮಲ್ಲಿಗೆ ತೂಕದ ರಾಜಕುಮಾರಿಯನ್ನು ಹೊತ್ತೊಯ್ದಾಗ ಏಳು ಸಮುದ್ರ ದಾಟಿ, ಏಳು ಸುತ್ತಿನ ಕೋಟೆಯೊಳಗಿಂದ ರಾಜಕುಮಾರಿಯನ್ನು ರಕ್ಷಿಸುವ ರಾಜಕುಮಾರ ಈಗ ಎಲ್ಲಿದ್ದಾನೆ? ಹಾಗೆ ಬೇರೆ ಯಾರಿಂದಲೋ ರಕ್ಷಿಸಿಕೊಳ್ಳಬೇಕಾದ ನಿರೀಕ್ಷೆಯಲ್ಲೂ ರಾಜಕುಮಾರಿ ಇರುವುದಿಲ್ಲ. ಯಾಕೆಂದರೆ ತನ್ನ ರಕ್ಷಣೆಯ ಹೊಣೆಯೂ ಅವಳದ್ದೇ. ತನ್ನನ್ನು ತಾನು ಸಂತೈಸಿಕೊಂಡು ನಿಭಾಯಿಸಿಕೊಳ್ಳಬೇಕಾದ ಹೊರೆಯೂ ಆಕೆಯದ್ದೇ. ಒಕ್ಕಣ್ಣಿನ ರಾಕ್ಷಸನೂ ಈಗ ಅದೆಲ್ಲೋ ಹಸಿರು ಗಿಣಿರಾಮನಲ್ಲಿ ಪ್ರಾಣವನ್ನಿಡುವುದಿಲ್ಲ. ಎನ್ನುತ್ತ ಎಲ್ಲವೂ ಬದಲಾದ ಕಥೆಯೊಂದನ್ನು ಎದುರಿಗಿಡುತ್ತಾರೆ. ಜಲಜಲನೆ ಧಾರೆಯಾಗುವ ಇಳೆ ಮೋಡವಾಗಿ ಮತ್ತೆ ಸೂರ್‍ಯನ ಕಾವಿಗೆ ಧರೆಗಿಳಿಯುವಾಗ ಎಲ್ಲ ಆಕೃತಿಗಳು ಬದಲಾಗುವಂತೆ ನಮ್ಮೆಲ್ಲರ ಬದುಕಿನ ಗತಿಗಳೂ ಆಗಾಗ ಬದಲಾಗುತ್ತವೆ ಎನ್ನುತ್ತಾರೆ. ತೆರೆದ ಹಾಗೂ ಮುಚ್ಚಿದ ಬಾಗಿಲಿನ ನಡುವೆ ಆಯ್ಕೆ ಮಾಡಿಕೊಳ್ಳಲು ಹತ್ತಾರು ಗೊಂದಲಗಳಿರುವುದು ಸಹಜ. ತರೆದ ಬಾಗಿಲು ಮುಚ್ಚದೇ, ಮುಚ್ಚಿದ ಬಾಗಿಲ ಹಿಂದೆ ಏನಿದೆ ಎಂಬ ಅರಿವಾಗದೇ ಗೊಂದಲದ ಗೂಡಾಗುವುದು ಎಲ್ಲರ ಬಾಲಿನಲ್ಲೂ ಸಹಜ. ಹಾಗೆ ನೋಡಿದರೆ ಈ ತೆರೆದ ಮತ್ತು ಮುಚ್ಚಿದ ಬಾಗಿಲುಗಳ ರಹಸ್ಯ ಬಿಡಿಸುವುದರಲ್ಲಿಯೇ ನಮ್ಮೆಲ್ಲರ ಜೀವಮಾನದ ಬಹುಕಾಲ ಸಮದುಹೋಗುತ್ತದೆ ಎಂಬುದು ಮಾತ್ರ ಸತ್ಯ. ಆದರೂನಾ ಹಾಡುವಭಾವಗೀತೆಗೆ ನೀನೇ ಸಾಹಿತ್ಯಹಾಡುವೆ ಪ್ರತಿನಿತ್ಯಎನ್ನುವ ಪ್ರಣಯದ ಸಾಲುಗಳಿಗೆ ಇಲ್ಲೇನೂ ಬರ ಇಲ್ಲ. ಆದರೂ ಒಂಟಿತನದ ಸೆಳವನ್ನು ಮೀರುವುದಾದರೂ ಹೇಗೆ? ಒಂಟಿತನವೆಂಬುದು ಏನಿರಬಹುದು. ಹಾಗೆನೋಡಿದರೆ ಒಂಟಿತನವೆಂದರೆಕೈ ಚಾಚಿತಪ್ಪಿ ಹೋದ ಪ್ರೀತಿಇಲ್ಲೆಲ್ಲೋ ನಮ್ಮ ಪ್ರೀತಿಯಿದೆ ಎಂದು ಕೈ ಚಾಚಿಯೂ ಆ ಪ್ರೀತಿ ತಪ್ಪಿ ಹೋದರೆ? ಅಥವಾ ಅದು ಅರ್ಹ ಎಂದು ಅನ್ನಿಸದೇ ಹೋದರೆ?ಒಂಟಿತನವೆಂದರೆಆಪ್ತವಿಲ್ಲದ ಸಾಮಿಪ್ಯಮಾತಿಲ್ಲದ ನಿಶ್ಯಬ್ಧಒಂಟಿತನಕ್ಕೆ ಎಲ್ಲಿ ಆಪ್ತತೆ ಇರುತ್ತದೆ ಹೇಳಿ? ಅದು
ಪ್ರಸ್ತುತ ಮದ್ಯಪಾನ ಮತ್ತು ಮಾದಕ ದ್ರವ್ಯಗಳ ನಿಷೇಧದ ಕುರಿತು ಮಹಾತ್ಮ ಗಾಂಧೀಜಿ ಡಾ.ಎಸ್.ಬಿ. ಬಸೆಟ್ಟಿ ಮಹಾತ್ಮ ಗಾಂಧೀಜಿಯವರು ಜನರು ಬಯಸುವ ಹಾನಿಕಾರಕ ಮತ್ತು ಅನಾವಶ್ಯಕ ಮಾದಕ ವಸ್ತುಗಳನ್ನು ವಿರೋಧಿಸುತ್ತಿದ್ದರು. ಗಾಂಧೀಜಿಯವರು ತಂಬಾಕು ಮತ್ತು ಮಧ್ಯವನ್ನು ಜನರ ಆರೋಗ್ಯಕ್ಕೆ ಅತ್ಯಂತ ಹಾನಿ ಕಾರಕ ವಸ್ತುಗಳೆಂದು ಪರಿಗಣಿಸಿದ್ದರು ಜೊತೆಗೇ ಚಹಾ ಮತ್ತು ಕಾಫಿಯನ್ನು ಕೂಡಾ ಅನಾವಶ್ಯಕ ವಸ್ತುಗಳೆಂದು ಭಾವಿಸಿದ್ದರು. “ಬೆಂಕಿ ದೇಹವನ್ನು ನಾಶ ಮಾಡಿದರೆ, ಮದ್ಯ ಮತ್ತು ಮಾದಕ ವಸ್ತು ದೇಹ ಮತ್ತು ಆತ್ಮ ಎರಡನ್ನೂ ನಾಶ ಮಾಡುತ್ತದೆ” ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದಾರೆ. ವೈದ್ಯರು, ಮದ್ಯಪಾನಿಯಗಳು ಮತ್ತು ಅಫೀಮು ವ್ಯಸನಿಗಳನ್ನು ಈ ಶಾಪದಿಂದ ಹೊರತರುವ ದಾರಿಗಳನ್ನು ಕಂಡುಹಿಡಿಯಬೇಕು. ಪ್ರೀತಿಯಿಂದ ಈ ವ್ಯಸನಿಗಳನ್ನು ತಮ್ಮ ಮಾತು ಕೇಳುವಂತೆ ಮಾಡಿ ಅದರ ಸೇವನೆಯಿಂದಾಗುವ ಕೆಡಕನ್ನು ಅವರಿಗೆ ಮನದಟ್ಟು ಮಾಡಿ ಕೆಟ್ಟ ಚಟವನ್ನು ಬಿಡುವಂತೆ ಮನವರಿಕೆ ಮಾಡಬೇಕು ಎಂದಿದ್ದರು. ಮಾದಕ ವಸ್ತುಗಳಲ್ಲಿ ಹೊಗೆಸೊಪ್ಪು, ಭಂಗಿ, ಗಾಂಜಾ, ಅಫೀಮು, ಬ್ರಾಂದಿ, ವಿಸ್ಕಿ, ರಮ್ಮ, ಜಿನ್, ವೈನ್, ಶೇಂದಿ, ಸಾರಾಯಿ ಹೀಗೆ ಇನ್ನೂ ಹತ್ತು ಹಲವಾರು ಬಗೆಯ ವಸ್ತುಗಳು ಸೇರಿವೆ. ಇವುಗಳ ಅವಶ್ಯಕತೆ ನಮ್ಮ ಶರೀರಕ್ಕೆ ಖಂಡಿತಾ ಇಲ್ಲ. ಇವುಗಳಿಂದ ಶರೀರದ ಆರೋಗ್ಯ ಹಾಳಾಗಿ ಆರ್ಥಿಕವಾಗಿ ಸಂಸಾರ ಸರ್ವನಾಶವಾಗುತ್ತದೆ. ಅಗೌರವಯುತ ಬಾಳು ದಕ್ಷತೆಗೆ ಕುಂದು ಮತ್ತು ದೇಶದ ಗೌರವಕ್ಕೆ ಚ್ಯುತಿ ತರುತ್ತದೆ. ಇದಕ್ಕೆ ದಾಸನಾದವನು ತನ್ನ ಮತ್ತು ಸಂಸಾರದ ಮಾನ ಮರ್ಯಾದೆಯನ್ನು ಬೀದಿ ಬೀದಿಗಳಲ್ಲಿ ಹರಾಜು ಹಾಕುತ್ತಾನೆ. ಈ ಮಾದಕ ವಸ್ತುಗಳನ್ನು ದೇಶದಿಂದ ಸಂಪೂರ್ಣವಾಗಿ ಪ್ರತಿಬಂಧಿಸಬೇಕೆಂಬುದು ಗಾಂಧೀಜಿಯವರ ಅದಮ್ಯ ಕನಸು. ಆದರೆ ಇಂದಿನ ಸರಕಾರಗಳು ಬದುಕಿರುವುದೇ ಅಬಕಾರಿ ಬಾಬ್ತಿನ ವರಮಾನದಿಂದ ಯಾವ ಪಕ್ಷದ ಸರ್ಕಾರಗಳಿದ್ದರೂ ಇದರ ಬಗೆ ಗಮನ ಹರಿಸಲು ಹಿಂಜರಿಯುತ್ತವೆ. ಗಾಂಧೀಜಿಯವರ ಪರಿಕಲ್ಪನೆಯ ಸಂಪೂರ್ಣ ಪಾನನಿಷೇದ ಎಂದೆಂದಿಗೂ ಸಾಧ್ಯವಾಗದಿರಬಹುದು. ಆದರೆ ಗುಜರಾತ್ ನಂತರ ಇತ್ತೀಚಿನ ವರ್ಷಗಳಲ್ಲಿ ಬಿಹಾರದಲ್ಲಿ ಪಾನ ನಿಷೇದ ಜಾರಿಗೆ ಬಂದಿದೆ. ತಮಿಳುನಾಡು ಮೊದಲು ನಂತರ ಕರ್ನಾಟಕ ರಾಜ್ಯಗಳು ಸರಾಯಿ ನಿಷೇಧಿಸಿದವು. ಆದರೆ ಆ ನಂತರ ಹೆಚ್ಚೆಚ್ಚು ವೈನಶಾಪ ತೆರೆಯಲು ಅನುಮತಿ ನೀಡಿದವು. ಒಂದು ಅವಿವೇಕದ ವಾದವನ್ನು ಪ್ರತಿಪಾದಿಸುವವರು ಇದ್ದಾರೆ. ಸ್ವಲ್ಪ (ಅತೀಕಡಿಮೆ) ಮಧ್ಯಪಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ. ಸರ್ವರೋಗಕ್ಕೂ ಸರಾಯಿ ಮದ್ದು ಎನ್ನುತ್ತಾರೆ. ಇಂದಿನ ಜಗತ್ತಿಗೆ ಸವಾಲಾಗಿರುವ ಮಹಾಮಾರಿ ಕೋವಿಡ-೧೯ ರೋಗಕ್ಕೂ ಸರಾಯಿ ಮದ್ದು ಎನ್ನುವವರಿದ್ದಾರೆ. ಆದರೆ ಈ ವಾದಕ್ಕೆ ಹುರುಳಿಲ್ಲ. ಪಾರ್ಸಿ ಜನಾಂಗದವರು ಹೆಂಡ ಕುಡಿಯುವುದನ್ನು ಒಳ್ಳೆಯದೆಂದು ಪ್ರತಿಪಾದಿಸುತ್ತಿದ್ದರು. ಇದು ಮಾದಕ ವಸ್ತುವಾದರೂ ಆಹಾರವೂ ಸಹ ಆಗಬಲ್ಲದು ಎಂದು ಹೇಳುತ್ತಿದ್ದರು. ಆದರೆ ತಜ್ಞರ ಪ್ರಕಾರ ಇದು ಸತ್ಯವಲ್ಲ. ‘ನೀರಾ’ ಭಟ್ಟಿ ಇಳಿಸಿದ ತಕ್ಷಣ ಮದ್ಯವಲ್ಲ. ನಿಜ ಅದು ಒಂದು ಆಹಾರ. ಇದನ್ನು ಕುಡಿದರೆ ಮಲಬದ್ಧತೆ ಇರುವುದಿಲ್ಲವೆಂದು ಕೇಳಿ ಗಾಂಧೀಜಿಯವರೇ ಕೆಲವು ದಿನಗಳ ಕಾಲ ‘ನೀರಾ’ ಕುಡಿಯಲು ಪ್ರಾರಂಭಿಸಿದಾಗ ಅವರಿಗೆ ಅದರ ಉಪಯುಕ್ತತೆಯ ಅರಿವಾಗುತ್ತದೆ. ಪಾಮ್ ಜಾತಿಗೆ ಸೇರಿದ ತೆಂಗು, ಈಚಲು, ಖರ್ಜೂರ ಇತ್ಯಾದಿ ಇವುಗಳಲ್ಲಿ ಕಾಂಡ ಕೊರೆದು ತೆಗೆಯುವ ಬಣ್ಣವಿಲ್ಲದ ನೀರಿನಂತಹ ರಸಕ್ಕೆ ಅಥವಾ ಹಾಲಿಗೆ ‘ನೀರಾ’ ಎಂದು ಕರೆಯುತ್ತಾರೆ. ತೆಗೆದ ಕೆಲವೇ ನಿಮಿಷಗಳಲ್ಲಿ ಈ ‘ನೀರಾ’ ಹುಳಿ ಬಂದು ಜನರಿಗೆ ಅಮಲೇರಿಸಿ ಹುಚ್ಚೆಬ್ಬಿಸುತ್ತದೆ. ಮಹಾತ್ಮಾ ಗಾಂಧೀಜಿಯವರು ಮಧ್ಯಪಾನವನ್ನು ಒಂದು ಘೋರ ಖಾಯಿಲೆ ಎಂಬುದಾಗಿ ಕರೆಯುತ್ತಾರೆ. ಆದರೆ ವೈದ್ಯಕೀಯ ಉದ್ದೇಶಕ್ಕೆ ಮದ್ಯ ಬಳಸುವುದನ್ನು ಗಾಂಧೀಜಿಯವರು ಆಕ್ಷೇಪಿಸುವುದಿಲ್ಲ. ಕುಡಿತದ ಬಗ್ಗೆ ಗಾಂಧೀಜಿಯವರು ಹೀಗೆ ಹೇಳಿದ್ದಾರೆ, “ಕುಡಿತ ಎನ್ನುವುದು ದುರಾಚಾರ ಎನ್ನುವುದಕ್ಕಿಂತಲೂ ಹೆಚ್ಚಾಗಿ ಅದನ್ನು ಕಾಯಿಲೆ ಎಂದು ಕರೆಯಬಹುದು. ಬಹಳ ಮಂದಿ ಸಾಧ್ಯವಾಗುವುದಾದರೆ ಸಂತೋಷದಿಂದ ಕುಡಿತವನ್ನು ಬಿಟ್ಟುಬಿಡುವರು ಎಂದು ನನಗೆ ಗೊತ್ತಿದೆ. ಪ್ರಲೋಭನೆಗೆ ಒಳಗಾಗಿರುವ ಕೆಲವರು ಅದನ್ನು ದೂರವಿರಿಸಬಹುದು ಎಂದು ನನಗೆ ಗೊತ್ತಿದೆ. ನಿರ್ದಿಷ್ಟ ಪ್ರಸಂಗದಲ್ಲಿ ಆ ಪ್ರಲೋಭನೆಯನ್ನು ದೂರವಿರಿಸುವವರು ಕಳ್ಳತನದಲ್ಲಿ ಕುಡಿಯುತ್ತಾರೆ ಎಂದು ನನಗೆ ಗೊತ್ತಿದೆ. ಆದ್ದರಿಂದ ಪ್ರಲೋಭನೆಯನ್ನು ಕಿತ್ತು ಹಾಕುವುದು ತಪ್ಪು ಎಂದು ನಾನು ಭಾವಿಸುವುದಿಲ್ಲ. ಕಾಯಿಲೆಯಾಗಿರುವ ವ್ಯಕ್ತಿಗಳು ಅವರಷ್ಟಕ್ಕೆ ಅವರೇ ಸಹಾಯ ಮಾಡಿಕೊಳ್ಳಬೇಕು”.( ಯಂಗ ಇಂಡಿಯಾ – ೧೨-೧-೧೯೨೮) ಗಾಂಧೀಜಿಯವರು “ನಾನು ನನ್ನನ್ನು ಶ್ರಮಿಕರ ಜತೆಯಲ್ಲಿ ಗುರುತಿಸಿಕೊಂಡಿರುವುದರಿಂದ ಕುಡಿತದ ಚಟಕ್ಕೆ ಅಂಟಿಕೊಂಡಿರುವ ಶ್ರಮಿಕರ ಮನೆಗಳಿಗೆ ಕುಡಿತವು ಎಂತಹ ಹಾನಿಯನ್ನುಂಟು ಮಾಡಿದೆ ಎಂದು ನನಗೆ ಗೊತ್ತಿದೆ. ಅವರಿಗೆ ಸುಲಭವಾಗಿ ದೊರೆಯುವಂತಿಲ್ಲದಿದ್ದರೆ ಅವರು ಮಧ್ಯವನ್ನು ಮುಟ್ಟುವುದಿಲ್ಲ ಎಂದು ನನಗೆ ಗೊತ್ತಿದೆ. ಅನೇಕ ಪ್ರಸಂಗಗಳಲ್ಲಿ ಕುಡುಕರೇ ಸ್ವತಃ ಪಾನನಿರೋಧಕ್ಕೆ ಕೋರಿಕೆ ಸಲ್ಲಿಸಿದ್ದಾರೆ ಎಂಬುದಕ್ಕೆ ನಮ್ಮ ಬಳಿ ಸಮಕಾಲೀನ ಸಾಕ್ಷ್ಯಗಳಿವೆ” (ಹರಿಜನ ಪತ್ರಿಕೆ -೩-೬-೧೯೩೯) ಎಂದು ಹೇಳಿದ್ದಾರೆ. “ಆರ್ಥಿಕ ನಷ್ಟಕ್ಕಿಂತ ಯಾವಾಗಲೂ ನೈತಿಕ ನಷ್ಟ ಹೆಚ್ಚಿನದು” ಎಂಬುದು ಗಾಂಧೀಜಿಯವರ ವಾದ. ಏಕೆಂದರೆ ಅವರು ಹೀಗೆ “ಕುಡಿತದ ಚಟವು ಮನುಷ್ಯನ ಆತ್ಮವನ್ನು ಹಾಳು ಮಾಡುತ್ತದೆ ಮತ್ತು ಅವನನ್ನು ಮೃಗವಾಗಿ ಪರಿವರ್ತಿಸುತ್ತದೆ. ಹೆಂಡತಿ, ತಾಯಿ ಮತ್ತು ಸಹೋದರಿಯ ನಡುವಣ ಬೇಧವನ್ನು ಗ್ರಹಿಸಿಕೊಳ್ಳಲಾರದಷ್ಟು ಅಸಮರ್ಥವಾಗುತ್ತಾನೆ. ಮಧ್ಯದ ಪ್ರಭಾವದಡಿಯಲ್ಲಿ ಈ ಬೇಧವನ್ನು ಮರೆಯುವವರನ್ನು ನಾನು ಕಂಡಿದ್ದೇನೆ. ಮತ್ತು ಅಮಲೇರದೆ ಶಾಂತಚಿತ್ತನಾಗಿರುವ ಸಮಯದಲ್ಲಿ ತನ್ನ ಹೀನ ಕೃತ್ಯಗಳಿಗೆ ನಾಚಿಕೆಪಟ್ಟುಕೊಳ್ಳುತ್ತಾನೆ. ಆದುದರಿಂದ ಕುಡಿತ ಅತ್ಯಂತ ನೀಚತನದ ಕೆಲಸ” (ಹರಿಜನ ಪತ್ರಿಕೆ- ೯-೩-೧೯೩೪) ಎಂದಿದ್ದಾರೆ. ಕುಡುಕರ ಪತ್ನಿಯರ ಬಗ್ಗೆ ಗಾಂಧೀಜಿಯವರು ಕನಿಕರ ವ್ಯಕ್ತಪಡಿಸುತ್ತಾರೆ. ಅವರು ಕೊಡುವ ಎರಡು ಉದಾಹರಣೆಗಳು ಕುಡಿತದ ದುಷ್ಪರಿಣಾಮಗಳನ್ನು ತಿಳಿಸುತ್ತದೆ. ಹಡುಗುಗಳ ಕ್ಯಾಪ್ಟನ್ಗಳು ಪಾನಮತ್ತರಾಗಿದ್ದಲ್ಲಿ. ಅವರಿಗೆ ಯಾವ ರೀತಿಯಿಂದಲೂ ಹಡಗನ್ನು ನಿಯಂತ್ರಿಸಲು ಸಾಧ್ಯವಾಗದು. ಅವರ ಕುಡಿತದ ಅಮಲು ಇಳಿದು ಅವರು ಯಥಾಸ್ಥಿತಿಗೆ ಬಂದ ನಂತರ ಮಾತ್ರ ಸಾಧ್ಯವಾಗಬಹುದು. ಅದೇ ರೀತಿ ಓರ್ವ ವಕೀಲ ಪಾನಮತ್ತನಾಗಿ ನಡೆಯಲಾಗದೆ ಚರಂಡಿಯಲ್ಲಿ ಉರುಳಿ ಬಿದ್ದಲ್ಲಿ ಪೋಲಿಸರು ಆತನನ್ನು ಹೊತ್ತೊಯ್ದು ಆತನ ಮನೆ ತಲುಪಿಸಬೇಕಾಗಬಹುದು. “ಕುಡಿತದಿಂದ ಸರ್ವನಾಶ” ಕುಡಿತವು ಆತನ ಸಂಸಾರದ ಮತ್ತು ಸಮಾಜದ ಸ್ವಾಸ್ಥವನ್ನು ಕೆಡಿಸುತ್ತದೆ. ಗಾಂಧೀಜಿಯವರು ಹೀಗೆ “ಕುಡಿತ ಮತ್ತು ಮಾದಕವಸ್ತುವಿನ ಚಟದ ಕೆಡಕು ಅನೇಕ ರೀತಿಗಳಲ್ಲಿ ಮಲೇರಿಯಾ ಮತ್ತು ಅದರಂತಹ ಕಾಯಿಲೆಗಳಿಂದ ಉಂಟಾಗುವ ಕೆಡುಕಿಗಿಂತಲೂ ಅಪಾರವಾಗಿ ಹಾನಿಯನ್ನುಂಟು ಮಾಡುವುದಾಗಿರುತ್ತದೆ. ಏಕೆಂದರೆ ಕಡೆಯದು ದೇಹಕ್ಕೆ ಅಪಾಯವನ್ನುಂಟು ಮಾಡಿದರೆ ಕುಡಿತ ಮತ್ತು ಮಾದಕ ವಸ್ತುಗಳು ದೇಹ ಮತ್ತು ಆತ್ಮ ಜೀವ ಎರಡನ್ನು ಹಾಳು ಮಾಡುತ್ತದೆ” (ಯಂಗ್ ಇಂಡಿಯಾ – ೩-೩-೧೯೨೭) ಎಂದಿದ್ದಾರೆ. ದೇಶ ದಿವಾಳಿಯಾದರೂ ಚಿಂತೆಯಿಲ್ಲ ನಮ್ಮ ಮಧ್ಯೆ ಸಾವಿರಾರು ಮಂದಿ ಕುಡುಕರು ಇರುವ ಸಮಾಜವನ್ನು ನೋಡಲು ನಾನು ಇಷ್ಟಪಡುವದಿಲ್ಲವೆನುತ್ತಿದ್ದರು. ಅಬಕಾರಿ ಸುಂಕದಿಂದ ಬರುವ ಆದಾಯದಿಂದ ನಾವು ಶಿಕ್ಷಣ ಕೊಡುತ್ತೇವೆಂದಾದರೆ ಅಂತಹ ಶಿಕ್ಷಣವೇ ನಮಗೆ ಬೇಡವೆನ್ನುತ್ತಿದ್ದರು. ಗಾಂಧೀಜಿಯವರು ಹೀಗೆ ಹೇಳಿದ್ದಾರೆ, “ಕುಡಿತದ ಚಟಕ್ಕೆ ಬಲಿಯಾಗಿರುವ ರಾಷ್ಟ್ರದ ಮುಖದಲ್ಲಿ ವಿನಾಶವಲ್ಲದೇ ಬೇರೆನೂ ಕಣ್ಣಿಗೆ ಹೊಳೆಯುವಂತಿರುವುದಿಲ್ಲ. ಆ ಚಟದ ಮೂಲಕ ಸಾಮ್ರಾಜ್ಯಗಳು ಹಾಳಾಗಿವೆ ಎಂದು ಇತಿಹಾಸ ದಾಖಲಿಸಿದೆ. ಶ್ರೀ ಕೃಷ್ಣ ಸೇರಿದ್ದ ಪ್ರಸಿದ್ಧ ಸಮುದಾಯವೊಂದು ಆದ್ದರಿಂದ ಪತನಗೊಂಡಿತು ಎಂದು ಭಾರತದ ಇತಿಹಾಸದಲ್ಲಿ ದಾಖಲಾಗಿದೆ. ರೋಮ್ನ ಪತನಕ್ಕೆ ನೇರವಾಗಿ ಈ ಭಯಾನಕ ಮಧ್ಯವೇ ಕಾರಣವಾಗಿತು”್ತ.( ಯಂಗ್ ಇಂಡಿಯಾ- ೪-೪-೧೯೨೯) ಗಾಂಧೀಜಿಯವರು ಹೀಗೆ ಹೇಳಿದ್ದಾರೆ, ‘ಇಡೀ ಭಾರತಕ್ಕೆ ನನ್ನನ್ನು ಒಂದು ಗಂಟೆ ಕಾಲ ಸರ್ವಾಧಿಕಾರಿಯೆಂದು ನೇಮಿಸಿದರೆ ನಾನು ಮಾಡಲಿರುವ ಮೊದಲ ಕೆಲಸವೆಂದರೆ ಪರಿಹಾರ ನೀಡದೇ ಎಲ್ಲ ಮಧ್ಯದಂಗಡಿಗಳನ್ನು ಮುಚ್ಚಿಸುವುದು ಮತ್ತು ಖಾರಕಾನೆ ಮಾಲೀಕರುಗಳಿಗೆ ಅವರ ಕೆಲಸಗಾರರುಗಳಿಗೆ ಮಾನವೀಯ ಸೌಲಭ್ಯಗಳನ್ನು ಒದಗಿಸಲು ಬಲವಂತಪಡಿಸುವುದು ಮತ್ತು ಈ ಶ್ರಮಿಕರುಗಳು ಪರಿಶುದ್ಧ ಪಾನೀಯಗಳನ್ನು ಮತ್ತು ಮನರಂಜನೆಗಳನ್ನು ಪಡೆಯುವಂತಹ ಆಹಾರ ಪಾನೀಯಗಳ ಮತ್ತು ಮನರಂಜನಾ ರೂಮುಗಳನ್ನು ತೆರೆಯುವಂತೆ ಸೂಚನೆ/ಸಲಹೆ ನೀಡುತ್ತಾರೆ’ .(ಯಂಗ್ ಇಂಡಿಯಾ-೨೫-೬-೧೯೩೧) ರಷ್ಯಾ ದೇಶದ ಲಿಯೋ ಟಾಲ್ಸ್ಟಾಯ್ ಎಂಬ ಮಹಾಶಯ ತಾನೇ ಈ ಚಟಕ್ಕೆ ಚಿಕ್ಕ ವಯಸ್ಸಿನಲ್ಲಿಯೇ ಬಲಿಯಾಗಿ ನಂತರ ತ್ಯಜಿಸಿ, ಹೊಗೆಸೊಪ್ಪಿನ ಯಾವುದೇ ರೂಪದ ಸೇವನೆ ಎಲ್ಲಾ ಚಟಗಳಿ ಗಿಂತ ಅತ್ಯಂತ ದುಷ್ಟ ಚಟವೆಂದಿದ್ದನು. ಈ ಚಟ ‘ದುಶ್ಚಟಗಳ ರಾಜ’ ‘ತಂಬಾಕು ಅತ್ಯಂತ ಹೀನ ಮಾದಕ ವಸ್ತು ಎಂದು ಆ ಮಹಾನುಭಾವ ಹೇಳಿದ್ದ. ಸಾಮಾನ್ಯವಾಗಿ ಹದಿಹರೆಯದವರು ಎರಡು ರೀತಿಯ ದುಶ್ಚಟಗಳಿಗೆ ಸಿಲುಕಿಕೊಳ್ಳುತ್ತಾರೆ. ಕೆಲವರು ಸಿಗರೇಟ, ಮದ್ಯಪಾನದ ಸುಳಿಗೆ ಬಿದ್ದರೆ, ಇನ್ನೂ ಕೆಲವರು ಮಾದಕ ದ್ರವ್ಯಗಳ ದಾಸರಾಗುತ್ತಾರೆ. ಸಿಗರೇಟ, ಮದ್ಯಪಾನದ ಸುಳಿಯಲ್ಲಿ ಬಿದ್ದವರು ಚಟವನ್ನು ತುಂಬ ದಿನ ರಹಸ್ಯವಾಗಿ ಕಾಪಾಡಿಕೊಳ್ಳಲು ಸಾಧ್ಯವಿಲ್ಲ. ಸಿಗರೇಟ ಸೇದುವುದು ಒಂದು ಬೇಜವಾಬ್ದಾರಿಯುತ ವರ್ತನೆಯ ಪ್ರತೀಕ ಬಸ್ಸ್, ರೈಲು, ಟ್ಯಾಂಗಾ, ಮನೆಯಲ್ಲಿ ಅಕ್ಕಪಕ್ಕದವರ ನಿಂದನೆಯನ್ನು ಲೆಕ್ಕಿಸದೇ ಮಾಡುವ ಒಂದು ಅನಾಗರಿಕ ವರ್ತನೆ ಹೊಗೆಸೊಪ್ಪು ಪಾತಕ ಕೃತ್ಯಗಳನ್ನು ಮಾಡಲು ಪ್ರೇರೇಪಿಸುತ್ತದೆಂದು ತಜ್ಞರು ಸಾಬೀತುಪಡಿಸಿದ್ದಾರೆ. ಸರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇದಿಸಿದ್ದರೂ. ಸಿಗರೇಟ ಸೇವನೆ ಕಡಿಮೆಯಾಗಿಲ್ಲ. ಧೂಮಪಾನ ಮಾಡುವವನು ಪ್ರಜ್ಞೆ ಇಲ್ಲದೆ ಸುತ್ತಲೂ ಹೊಗೆ ಮತ್ತು ವಾಸನೆ ಹರಡಿ ಪಕ್ಕದವರಿಗೆ ಅಸಹ್ಯ ಹುಟ್ಟಿಸುತ್ತಾನೆ. ಆದರೆ ಮಾದಕ ದ್ರವ್ಯದ ವ್ಯಸನ ಹಾಗಲ್ಲ. ಮಕ್ಕಳು ಡ್ರಗ್ ದಾಸರಾಗಿ ಅತಿರೇಕಕ್ಕೆ ಹೋಗುವವರೆಗೂ ಪೋಷಕರಿಗೆ ತಮ್ಮ ಮಗ ಮಾದಕ ವ್ಯಸನಿ ಎಂಬ ಸಣ್ಣ ಸುಳಿವು ಕೂಡ ಸಿಕ್ಕಿರುವುದಿಲ್ಲ. ಸೈಲೆಂಟ ಕಿಲ್ಲರ್ನಂತೆ ತನ್ನ ಚಟಕ್ಕೆ ಬಿದ್ದವರನ್ನು ಅಪೋಶನ ತೆಗೆದುಕೊಂಡಿರುತ್ತದೆ. ಹಾಗಾಗಿ ಯುವಸಮುದಾಯದ ಪಾಲಿಗೆ ಮಾದಕದ್ರವ್ಯ ಯಾವತ್ತಿಗೂ ಅತಿಘೋರ ಶಾಪವಿದ್ದಂತೆ. ವಾಸ್ತವವಾಗಿ ಮದ್ದು ಎಂದರೇನು? ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಯಾವುದೇ ಪದಾರ್ಥವನ್ನು ಜೀವಿಯೊಂದು ಸೇವಿಸಿದಾಗ ಅದರ ಸ್ವಾಭಾವಿಕ ಕ್ರಿಯೆಗಳಲ್ಲಿ ವ್ಯತ್ಯಾಸ ಉಂಟುಮಾಡುವ ಸಾಮರ್ಥ್ಯ ಹೊಂದಿದ್ದರೆ. ಅದನ್ನು ಮದ್ದು ಎಂದು ಕರೆಯಲಾಗುತ್ತದೆ. ‘ನಾರ್ಕೋಟಿಕ್ ಡ್ರಗ್ಸ್’ ಇಂದು ಬಹಳಷ್ಟು ಚರ್ಚೆಗೆ ಗ್ರಾಸವಾಗುತ್ತಿರುವ ವಿಷಯವಾಗುತ್ತಿವೆ. ಸುಂಕದ ಇಲಾಖೆಯವರು ವಿಮಾನ ನಿಲ್ದಾಣಗಳಲ್ಲಿ ಅವುಗಳನ್ನು ವಶಪಡಿಸಿಕೊಂಡ ಸುದ್ಧಿ ಸಮಾಚಾರಗಳನ್ನು ಪತ್ರಿಕೆಗಳಲ್ಲಿ ಆಗಾಗ್ಗೆ ಓದುತ್ತೇವೆ. ಹೆಚ್ಚೆÀಚ್ಚ್ಚು ಯುವಜನರು ಅದರ ಕಪಿಮುಷ್ಟಿಗೆ ಸಿಕ್ಕಿಹಾಕಿಕೊಳ್ಳುತ್ತಾರೆ. ಮದ್ದುಗಳ ಕಳ್ಳ ಸಾಗಾಣಿಕೆ ಮತ್ತು ಅವುಗಳ ದುರ್ಬಳಕೆಯ ಅವಳಿ ಸಮಸ್ಯೆ ಇಂದು ನಮ್ಮೆದುರಿಗೆ ಬೃಹದಾಕಾರವಾಗಿ ತಲೆಯೆತ್ತಿ ನಿಂತಿದೆ. ಭೌಗೋಳಿಕವಾಗಿ ನಮ್ಮ ದೇಶ ಮದ್ದುಗಳನ್ನು ಕದ್ದು ಸರಬರಾಜು ಮಾಡುವ ಎರಡು ಪ್ರಮುಖ ವಲಯಗಳ ನಡುವೆ ನೆಲೆಯಾಗಿರುವುದು ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಿದೆ, ಆಗ್ನೇಯ ಏಷ್ಯಾದ ರಾಷ್ಟ್ತಗಳಾದ ಬರ್ಮಾ, ಥೈಲ್ಯಾಂಡ, ಮತ್ತು ಲಾವೋಸ್ (ಸುವರ್ಣ ತ್ರಿಕೋಣ) ಮತ್ತು ಸನಿಹದ ಮದ್ಯಪೂರ್ವ ದೇಶಗಳಾದ ಪಾಕಿಸ್ತಾನ, ಅಪಘಾನಿಸ್ಥಾನ ಮತ್ತು ಇರಾನ್ (ಬಂಗಾರದ ಅರ್ಧಚಂದ್ರ) ಕೇಂದ್ರ ಕಾರ್ಯಸ್ಥಾನಗಳಾಗಿದ್ದು ಭಾರತ ಅವುಗಳ ನಡುವೆ ಸ್ಯಾಂಡವಿಜ್ ನಂತೆ ಸೇರಿಕೊಂಡಿವೆ. ಹೀಗಾಗಿ ಭಾರತ ಮದಕ ವಸ್ತುಗಳ ಕಳ್ಳ ಸಾಗಾಣಿಕೆಯ ಪ್ರಮುಖ ಹೆದ್ದಾರಿಯಾಗಿ ಪರಿವರ್ತನೆಗೊಂಡಿದೆ. ಜೊತೆಗೆ ಮರಿಜುವಾನ ಮತ್ತು ಹಶೀಶಗಳನ್ನು ವಿಶ್ವದ ಮಾರುಕಟ್ಟೆಗಳಿಗೆ ಸರಬರಾಜು ಮಾಡುವ ನೇಪಾಳ ನಮ್ಮ ಉತ್ತರಕ್ಕಿದೆ. ಸದ್ಯ ಬಾಲಿವುಡ್ ನಟ ಸುಶಾಂತಸಿಂಗ್ ಆತ್ಮಹತ್ಯೆಯ ಹಿನ್ನೆಲೆಯಲ್ಲಿ ಮದ್ದಿನ ವಿರಾಟ್ ಸ್ವರೂಪ ಬಯಲಾಗಿಬಿಟ್ಟಿದೆ. ಎನ್ಸಿಬಿ ಅಧಿಕಾರಿಗಳು ರಾಜ್ಯದ ಡ್ರಗ್ಸ್ ದಂಧೆಯಲ್ಲಿ, ಬಾಲಿವುಡ್, ಹಾಗೂ ಕನ್ನಡ ಚಿತ್ರರಂಗದ ನಟ-ನಟಿಯರು ನಂಟು ಬೆಸೆದುಕೊಂಡಿರುವುದನ್ನು ಪತ್ತೆ ಮಾಡಿದ್ದಾರೆ. ಇದು ಪ್ರಕರಣಕ್ಕೆ ಇನ್ನಷ್ಟು ರೋಚಕತೆ ತಂದುಕೊಟ್ಟಿದೆ. ಜೊತೆಗೆ ರಾಜಕೀಯ ಕೆಸರೆರಚಾಟಕ್ಕೂ ಈ ಪ್ರಕರಣ ಹಾದಿ ಮಾಡಿಕೊಟ್ಟಿದೆ. ರಾಜಕೀಯ ಆರೋಪ ಪ್ರತ್ಯಾರೋಪಗಳಿಂದ ಡ್ರಗ್ ವಿರುದ್ಧದ ಹೋರಾಟ ಹಾದಿ ತಪ್ಪುತ್ತಿದೆ. ಈಗ ರಾಜಕೀಯ ಮಾಡುತ್ತಾ ಕುಳಿತುಕೊಳ್ಳುವ ಬದಲು ಅತ್ಯಂತ ಕೆಟ್ಟ ಪಿಡುಗಾಗಿರುವ ಈ ದಂದೆಯನ್ನು ಮಟ್ಟಹಾಕುವ ಬಗ್ಗೆ ಆರೋಗ್ಯಕರವಾಗಿ ಚಿಂತಿಸುವ ಕಾಲ ಸನ್ನಿಹಿತನಾಗಿದೆ. ಇಂದು
ಮದ್ಯಪಾನ ಮತ್ತು ಮಾದಕ ದ್ರವ್ಯಗಳ ನಿಷೇಧ Read Post »
ಕವಿತೆ ನೆನಪುಗಳು: ಡಾ. ಅರಕಲಗೂಡು ನೀಲಕಂಠ ಮೂರ್ತಿ 1.ನೆನಪುಗಳೇ ಹಾಗೆ —ಒಮ್ಮೆ ಚುಚ್ಚುಸೂಜಿಗಳುಒಮ್ಮೆ ಚಕ್ಕಳಗುಳಿ ಬೆರಳುಗಳುಮತ್ತೊಮ್ಮೆ ಮುಗುಳುನಗೆಯ ಜೋಕುಗಳುಇನ್ನೊಮ್ಮೆ ಕಣ್ಣ ಬಸಿಯುವ ಹಳೆಯ ಹೊಗೆಯ ಅಲೆಗಳು…ಮತ್ತುಪಿಸುಮಾತಲಿ ಮುಲುಗುವಒಲವಿನ ಬಿಸಿ ಬಂಧುರ ಬಂಧನಗಳು…! 2.ನೆನಪುಗಳು —ಪ್ರಪ್ರಥಮ ಮಳೆಗೆ ವಟಗುಟ್ಟುವಕೊರಕಲ ಕಪ್ಪೆಗಳು;ಹರೆಯದ ಹುತ್ತದಲಿ ಭುಸುಗುಟ್ಟುಮತ್ತೆಲ್ಲೋ ಹರಿದು ಮರೆಯಾದಹಾವಿನ ಪೊರೆಗಳು…!ನೆನಪುಗಳು ಏಕಾಂತದಲಿ ಕಳಚುತ್ತವೆದಿರಿಸು ಒಂದೊಂದಾಗಿ,ಎಂದೋ ಹಂಬಲಿಸಿದ ಬಿಸಿಯಬೆಂಕಿಯಾಗಿ… 3.ನೆನಪುಗಳು —ಕಳೆದುಹೋದ ಕೋಲ್ಮಿಂಚಿನ ಹಸಿರ ಚಿಗುರುಈ ಋತು ಒಣಗಿ ಉದುರುವ ತರಗು…ಸಗಣಿ ಗೋಡೆಗೆಸೆವುದು ಬೆರಣಿಗಾಗಿ,ಆ ಬೆರಣಿಯುರಿದು ಬೆಂಕಿ…ಅಷ್ಟೆ! ಎಂಥ ಸುಕೃತವೋ ಏನೋ —ನೆನಪಿನ ಆಯಸ್ಸು ನಮ್ಮಷ್ಟೆಅಥವಾ…ಇನ್ನೂ ಕಮ್ಮಿ…! ****************************
ಅನುಭವ ಚಪ್ಪರದ ಗಳಿಕೆ ಶಾಂತಿವಾಸು ನಮ್ಮ ಮನೆಗೆ ಹೊದ್ದಿಸಿದ ಸಿಮೆಂಟ್ ಶೀಟ್ ಮೇಲೆ ಹತ್ತಿ ನಡೆಯಲಾರಂಭಿಸಿದರೆ ಸುಮಾರು ಇಪ್ಪತ್ತು ಮನೆಗಳನ್ನು ದಾಟಬಹುದಿತ್ತು. ನಲವತ್ತು ವರ್ಷಗಳ ಮೊದಲು ನಮ್ಮ ರಸ್ತೆಯಲ್ಲಿ ಯಾವುದೇ ಮಹಡಿ ಮನೆ ಇರಲಿಲ್ಲ. ನೆರಳಿಗಾಗಿ ನಮ್ಮ ಮನೆಯ ಹೊಸ್ತಿಲಿನ ನಂತರ ಹತ್ತು ಅಡಿಗಳಷ್ಟು ಮುಂದಕ್ಕೆ, ಮೇಲೆ ಕವಲುಹೊಡೆದ ಉದ್ದದ ಊರುಗೋಲುಗಳನ್ನು ನಿಲ್ಲಿಸಿ ಮೇಲೆ ಚೌಕಟ್ಟು ಮಾಡಿ ಇಪ್ಪತ್ತು ಅಡಿಗಳಷ್ಟು ಅಗಲಕ್ಕೆ ತೆಂಗಿನ ಗರಿಗಳನ್ನು ಹೊದಿಸಿದ್ದರು. ನಮ್ಮ ಮನೆ ಬಿಟ್ಟು ಎಡಗಡೆಗೆ ಬಾಡಿಗೆ ಮನೆಗಳು ಹಾಗೂ ಬಲಗಡೆಗೆ ಗಿಡಮರಗಳು (ಮಾವು ಹಾಗೂ ಸೀಬೆ), ಬಟ್ಟೆ ಒಗೆಯುವ ಕಲ್ಲು ಹಾಗೂ ಬಾಡಿಗೆ ಮನೆಯವರಿಗಾಗಿ ಒಂದು ನೀರಿನ ತೊಟ್ಟಿ ಇದ್ದಿತು. ಬೆಳಗ್ಗೆ ಸಂಜೆ ಕಾಫೀ ಕುಡಿಯಲು ಚಪ್ಪರದ ನೆರಳು ಒಳ್ಳೆಯ ಜಾಗವಾಗಿತ್ತು. ನಮ್ಮ ಮನೆಯಲ್ಲಿ ಮೊದಲೇ ಬಾಡಿಗೆಗಿದ್ದ ತಮ್ಮನ ಸಂಸಾರದೊಡನೆ ಸೇರಿಕೊಳ್ಳಲು ಆಂಧ್ರದ ಒಂದು ಹಳ್ಳಿಯಿಂದ ಇಪ್ಪತ್ತು ವರ್ಷ ವಯಸ್ಸಿನ ಮಗನೊಡನೆ ಬಂದ ಕುಂಟಮ್ಮನಿಗೆ (ಶಾಂತಮ್ಮ ಇವರ ಹೆಸರು) ಒಂದು ಕಾಲು ಚಿಕ್ಕದಾದ್ದರಿಂದ ಕುಂಟುತ್ತಾ ಸ್ವಲ್ಪ ದೂರವೂ ನಡೆಯಲಾಗುತ್ತಿರಲಿಲ್ಲ. ಅಲ್ಲದೆ ಒಂದೇ ಕಡೆ ಗಂಟೆಗಟ್ಟಲೆ ಕುಳಿತಿರುತ್ತಿದ್ದರಿಂದ ತುಂಬಾ ದಪ್ಪಗಾಗಿದ್ದರಲ್ಲದೆ ಸೋರುವಂತೆ ತಲೆಗೆ ಹಚ್ಚುತ್ತಿದ್ದ ಎಣ್ಣೆ, ಕಪ್ಪಾಗಿದ್ದ ಮುಖವನ್ನು ಫಳಫಳನೆ ಹೊಳೆಯುವಂತೆ ಮಾಡಿತ್ತು. ವಿಧವೆಯಾದ್ದರಿಂದ ಕುಂಕುಮವಿರದ ಬೋಳು ಹಣೆ, ಕೈಗಳಿಗೊಂದೊಂದು ಮಾಸಿದ ಹಿತ್ತಾಳೆಯ ಬಳೆ, ಕಿವಿಗಳಿಗೆ ತೆಳುವಾದ ಪುಟ್ಟ ಚಿನ್ನದ ಓಲೆ, ಏಳುಕಲ್ಲಿನ ಮೂಗುತ್ತಿ ಧರಿಸಿದ್ದಾಕೆಗೆ ಬೇರೆ ಒಡವೆಗಳಿರಲಿಲ್ಲ. ಬೆಳಗ್ಗೆ ಎಂಟು ಗಂಟೆಗೆಲ್ಲಾ ಚಪ್ಪರದ ಕೆಳಗೆ ಕುಳಿತು ಮುತ್ತುಗದ ಎಲೆಗಳನ್ನು ಒಪ್ಪ ಮಾಡಿ, ಊಟದ ಎಲೆಗಳನ್ನು ಕಡ್ಡಿಗಳಿಂದ ಹೊಲಿಯುತ್ತಿದ್ದರು. ಮಗ ಎಲೆಗಳು ಹಾಗೂ ಅವನ್ನು ಹೊಲಿಯಲು ಕಡ್ಡಿಗಳನ್ನು ತಂದು ಕೊಟ್ಟು ಹೊಲಿದ ಎಲೆಗಳನ್ನು ತೆಗೆದುಕೊಂಡು ಹೋಗಿ ಅಂಗಡಿಗಳಿಗೆ ಮಾರಿ ಬರುತ್ತಿದ್ದ. ಅದರಲ್ಲಿಯೇ ಅಮ್ಮ ಮಗನ ಜೀವನ ನಡೆಯುತ್ತಿತ್ತು. ಅಲ್ಲದೆ ಮತ್ತೊಂದು ಜೊತೆ ಬಿಳಿಕಲ್ಲಿನ ದೊಡ್ಡ ಓಲೆ ಕೊಳ್ಳುವ ಉದ್ದೇಶದಿಂದ ಕಷ್ಟಪಟ್ಟು ಹಣ ಕೂಡಿಡುತ್ತಿದ್ದರು. ನಾವು ಯಾರೇ ಮನೆಯಲ್ಲಿರಲಿ ಬಿಡಲಿ ಕುಂಟಮ್ಮ ಮಾತ್ರ ತಮ್ಮ ವಸ್ತುಗಳೊಡನೆ ನಿಶ್ಚಿತ ಸ್ಥಳದಲ್ಲಿ ಇದ್ದೇ ಇರುತ್ತಿದ್ದರು. ಆರು ಗಂಟೆಯ ನಂತರ ಅವರ ಎಲ್ಲ ವಸ್ತುಗಳನ್ನು ಸುಣ್ಣಬಳಿದ ಗೋಡೆಗೊತ್ತಿ ಬಿಟ್ಟು ಹೋಗುತ್ತಿದ್ದರು. ನಮ್ಮ ಮನೆಗೆ ಬರುವವರಾಗಲಿ ಅಥವಾ ಅವರ ಮನೆಗೆ ಬರುವವರಾಗಲಿ ಚಪ್ಪರದ ಕೆಳಗೆ ಕುಳಿತುಕೊಳ್ಳುತ್ತಿದ್ದರು. ಗಂಡಸರಾದರೆ ಹಲಗೆ ಮುಚ್ಚಿದ ತೊಟ್ಟಿಯ ಮೇಲೆ ಇಬ್ಬರು ಹಾಗೂ ಕಬ್ಬಿಣದ ಮಡಚುವ ಖುರ್ಚಿಯಲ್ಲಿ ಒಬ್ಬರು ಕೂರಬಹುದಿತ್ತು. ಹೆಂಗಸರು ಮಕ್ಕಳೆಲ್ಲಾ ಸಗಣಿಯಿಂದ ಸಾರಿಸಿದ ನೆಲದ ಮೇಲೆ ಕೂರುವುದು ಸಾಮಾನ್ಯವಾಗಿತ್ತು. ಬಂದವರೊಡನೆ ಮಾತನಾಡುತ್ತಲೇ ಪ್ಲಾಸ್ಟಿಕ್ ಬುಟ್ಟಿಗಳನ್ನು ಹೆಣಿಯುತ್ತಿದ್ದ ನಮ್ಮ ತಾಯಿ, ಕೇಳಿದವರಿಗೆ ಮಾರುತ್ತಿದ್ದರು. ನಮ್ಮಮ್ಮ, ಚಪ್ಪರದಾಚೆ ಬಲಗಡೆ ಮಣ್ಣು ಅಗೆದು ಗೊಬ್ಬರ ಹಾಕಿ ಮನೆಯ ಸಿಮೆಂಟ್ ಶೀಟಿನ ಮೇಲೆ ಬರುವಂತೆ ಸಿಹಿಗುಂಬಳ, ಬೂದುಗುಂಬಳ, ಪಡವಲ, ಹೀರೆ, ತುಪ್ಪೀರೆಕಾಯಿಗಳನ್ನು (ಇವ್ಯಾವುದನ್ನೂ ನಮ್ಮ ಮನೆಯಲ್ಲಿ ಯಾರೂ ತಿನ್ನುತ್ತಿರಲಿಲ್ಲ) ಹಾಗೂ ಚಪ್ಪರದ ಮೇಲೆ ಹವಾಮಾನಕ್ಕೆ ತಕ್ಕಂತೆ ಚಪ್ಪರದ ಅವರೆ ಅಥವಾ ಹಾಗಲಕಾಯಿ ಹಾಗೂ ಮನೆಯ ಮುಂದಿನ ಮಣ್ಣಿನ ಜಾಗದಲ್ಲಿ ಹಲವು ಬಗೆಯ ಹೂವುಗಳು, ಟೊಮ್ಯಾಟೋ, ಬೆಂಡೆಕಾಯಿಗಳನ್ನು ಬೆಳೆದು, ಅಗತ್ಯವಿರುವಷ್ಟನ್ನು ಉಪಯೋಗಿಸಿ ಮಿಕ್ಕಿದ್ದನ್ನು ಮಾರುತ್ತಿದ್ದರು. ಇವುಗಳಿಂದ ಬರುವ ವರಮಾನ ನಮ್ಮಮ್ಮನದು. ಮಧ್ಯಾನ್ಹದವರೆಗೂ ಕೆಲಸ, ಊಟ ಮುಗಿಸಿ ಬರುವ ಅಕ್ಕಪಕ್ಕದ ಮನೆಯ ನಮ್ಮಮ್ಮನ ಗೆಳತಿಯರು ಶಾಂತಮ್ಮನ ಊಟದೆಲೆ ಹಾಗೂ ನಮ್ಮಮ್ಮನ ಬುಟ್ಟಿ, ಹೂವು ಹಾಗೂ ತರಕಾರಿಗಳ ಗ್ರಾಹಕರುಗಳಾಗಿದ್ದರು. ನಮ್ಮ ತಾತ ಸ್ವಂತದ ಸೌದೆ ಡಿಪ್ಪೋ ಹೊಂದಿದ್ದರು. ವಯಸ್ಸಾದ ನಂತರ ಅದನ್ನು ಮಾರಿ ಮನೆಯಲ್ಲಿಯೇ ಇರುತ್ತಿದ್ದರು. ಮೂರು ಜನರು ಕೂರಬಹುದಾದ ಮರದ ಬೆಂಚೊಂದನ್ನು ಬೆಳಗ್ಗಾದರೆ ಮನೆಯೊಳಗಿನಿಂದ ಚಪ್ಪರದ ಕೆಳಗೆ ಹಾಕಿಸಿಕೊಂಡು ಕೂರುತ್ತಿದ್ದರು, ಸೊಂಟ ನೋಯುವಾಗ ಮಲಗುತ್ತಿದ್ದರು. ಹಲವಾರು ಮನೆಯ ಪಂಚಾಯಿತಿಗಳು, ಮದುವೆಯ ಮಾತುಕತೆ, ಪಂಚಾಂಗ(ತೆಲುಗು) ನೋಡಿ ಮದುವೆ ದಿನ ಗೊತ್ತು ಮಾಡುವುದೆಲ್ಲವೂ ಈ ಚಪ್ಪರದ ಕೆಳಗೇ ನಮ್ಮ ತಾತನ ಮೇಲುಸ್ತುವಾರಿಯಲ್ಲಿ ನಡೆಯುತ್ತಿತ್ತು. ತಾತನನ್ನು ನೋಡಲು ಬರುವವರು ಕಡಲೆಕಾಯಿ, ಗೆಣಸು, ತೆಂಗಿನಕಾಯಿಗಳನ್ನು ತಂದುಕೊಡುತ್ತಿದ್ದರು. ನಮ್ಮ ತಂದೆ ಆಂಧ್ರದ ಕಡೆಯವರು, ತಾಯಿ ತಮಿಳುನಾಡಿನ ತೆಲುಗು ಭಾಷಿಕರು. ಹೀಗಾಗಿ ಎರಡೂ ಕಡೆಯ ನೆಂಟರಿಂದ ಸದಾ ತುಂಬಿರುತ್ತಿದ್ದ ಮನೆ ನಮ್ಮದು. ಬಂದವರು ಎರಡು ಮೂರು ದಿನ ತಂಗಿ ವಾಪಸ್ಸು ಹೊರಟರೆ, ಈ ಚಪ್ಪರದ ಕೆಳಗೆ ಒಲೆ ಬಾಣಲೆ ಇಟ್ಟು, ಚೆಕ್ಕುಲಿ ಇಲ್ಲದಿದ್ದರೆ ಕರ್ಜಿಕಾಯಿ ಮಾಡಿ ಊರಿಗೆ ಕೊಟ್ಟುಕಳಿಸುವ ದೃಶ್ಯ ಆಗಾಗ ನೆನನಾಗುತ್ತದೆ. ಯಾಕೆಂದರೆ ಅಪ್ಪಿತಪ್ಪಿ ಹುಷಾರಿಲ್ಲದೆಯೋ ಅಥವಾ ಸಮಯ ಒದಗಿ ಬರದೆ ಕುರುಕಲು ಮಾಡಿಕೊಡಲಿಲ್ಲವೆಂದರೆ ಮುಖ ತಿರುವಿ ಹೋದ ನೆಂಟರನ್ನು ಮರೆಯಲಾದೀತೇ?? ದೀಪಾವಳಿ ಹಬ್ಬದ ಹಿಂದಿನ ದಿನ ನಮ್ಮ ಸೋದರಮಾವಂದಿರು ಬಂದು, ಇದೇ ಚಪ್ಪರದ ಕೆಳಗೆ ಕಲ್ಲುಗಳನ್ನು ಪೇರಿಸಿ, ತಲೆಯಮೇಲೆ ಗರಿಕೆ ಹುಲ್ಲು ಸಿಕ್ಕಿಸಿದ ಸಗಣಿಯ ಗಣಪನನ್ನು ಪ್ರತಿಷ್ಠಾಪಿಸಿ, ಪೂಜೆ ಮಾಡಿ, ಒಲೆ ಹಚ್ಚಿ, ಸುತ್ತ ಕುಳಿತು ರಾಶಿರಾಶಿ ಕಜ್ಜಾಯ ಮಾಡುತ್ತಿದ್ದ ಸಂಭ್ರಮವನ್ನು ಎಲ್ಲರೂ ನೆನಪಿಸಿಕೊಳ್ಳುವುದುಂಟು. ನಮ್ಮಲ್ಲಿಯ ಹೆಣ್ಣು ಮಕ್ಕಳು ದಾಟದ ಹತ್ತನೇ ತರಗತಿಯನ್ನು ನಮ್ಮಕ್ಕ ಪಾಸು ಮಾಡಿಬಿಟ್ಟಿದ್ದರು. ನಮ್ಮಪ್ಪ ಹಾಗೂ ತಾತನ ಸಂತೋಷಕ್ಕೆ ಎಲ್ಲೆಯೇ ಇರಲಿಲ್ಲ. ಸಂತೋಷ ಹಂಚಿಕೊಳ್ಳಲು ಲಾಡು ಮಾಡುವವರನ್ನು ಕರೆಸಿ, ಇನ್ನೂರು ಲಾಡುಗಳನ್ನು (ಚಪ್ಪರದ ಕೆಳಗೆ) ಮಾಡಿಸಿ, ಮನೆಗೆ ಬಂದವರಿಗೆ, ರಸ್ತೆಯಲ್ಲಿ ಓಡಾಡುವ ಪರಿಚಯದವರಿಗೆ, ಕೆಲವು ಮನೆಗಳಿಗೆ ನಡೆದು ಮತ್ತು ಬಸ್ಸಿನಲ್ಲಿಯೂ ಹೋಗಿ ಕೊಟ್ಟು ಬಂದರು ನಮ್ಮ ತಂದೆ. ನಮ್ಮ ಚಪ್ಪರದ ಊರುಗೊಲಿಗೆ ಬಾಡಿಗೆ ಮನೆಯ ನಾಗಮ್ಮ ತಮ್ಮ ಒಂದೂವರೆ ವರ್ಷದ ಮಗ, ರಾಜನ ಒಂದು ಕಾಲು ಕಟ್ಟಿಹಾಕಿ ಮನೆಗೆ ಹೋಗಿಬಿಡುವರು. ಅವರು ಕೆಲಸ ಮುಗಿಸಿ ಬರುವವರೆಗೂ ಅಳುತ್ತಲೋ, ಅರಚುತ್ತಲೋ ಉಚ್ಛೆಹುಯ್ದುಕೊಂಡು ಅದರಲ್ಲಿಯೇ ಒದ್ದಾಡಿಕೊಂಡು ಅವನು ಕುಳಿತಿರುತ್ತಿದ್ದ ಕೆಲವೊಮ್ಮೆ ಅಲ್ಲಿಯೇ ನಿದ್ರಿಸಿಯೂ ಬಿಡುತ್ತಿದ್ದ. ರಜಾ ದಿನಗಳಲ್ಲಿ ನಾನು, ನನ್ನ ತಂಗಿ ಉಮಾ ಕೆಲವು ಗೆಳತಿಯರೊಡನೆ ಸೇರಿ ಚಪ್ಪರಕ್ಕೆ ಸೀರೆಗಳನ್ನು ಪರದೆಯಂತೆ ಸಿಕ್ಕಿಸಿ ಒಳಾಂಗಣವನ್ನು ವೇದಿಕೆಯನ್ನಾಗಿಸಿ, ಐದೈದು ಪೈಸೆ ವಸೂಲಿ ಮಾಡಿ ವಿಧವಿಧವಾದ ನಾಟಕಗಳನ್ನಾಡಿ, ಬಂದ ಹಣವನ್ನು ಹಂಚಿ ಕಮ್ಮರ್ಕಟ್ಟು ತಿಂದುಬಿಡುತ್ತಿದ್ದೆವು. ಇಂಥ ಬಹುಪಯೋಗಿ ಚಪ್ಪರವು ನೋಡಲು ಬಹು ಸುಂದರವಾಗಿತ್ತು. ಮೇಲೆ ಬೀಳುವ ಮುಂಜಾವಿನ ಬಿಸಿಲಿನ ತೆಳುಕಿರಣಗಳು ಚಪ್ಪರಕ್ಕೆ ಹಾಸಿದ್ದ ಗರಿಗಳ ಸಂದುಗಳಿಂದ ಓರೆಯಾಗಿ ಬಿದ್ದು ನೆಲವನ್ನು ಒಂದು ತೆರನಾಗಿ ಅಂದಗೊಳಿಸಿದರೆ, ಬೇಸಿಗೆಯಲ್ಲಿ ನೆಲದ ಮೇಲೆ ಮೂಡುವ ದಟ್ಟ ಕಪ್ಪು ನೆರಳಿನೊಂದಿಗಿನ ಬೆಳಕು ವರ್ಣನಾತೀತವಾದದ್ದು. ಮಳೆಗಾಲದಲ್ಲಿ ಪಟಪಟನೆ ಸದ್ದು ಮಾಡಿ ನೀರು ಸೋರುತ್ತಿದ್ದ ಚಪ್ಪರವು, ಚಳಿಗಾಲದ ಬೆಳಗು ಹಾಗೂ ಸಂಜೆ ಕಣ್ಣಿಗೆ ಕಾಣದಷ್ಟು ದಟ್ಟವಾದ ಹಿಮದಿಂದ ಮುಚ್ಚಿ ಹೋಗಿರುತಿತ್ತು. ಈ ಹಿಮದ ಮದ್ಯೆ ಬುಟ್ಟಿ ಹೊತ್ತು ಬಂದ ಹೂವಿನವಳು ಮೊಳ ಹಾಕುತ್ತಿದ್ದ ಮಲ್ಲಿಗೆ ಹೂವಿನ ವಾಸನೆಯ ಅಮಲು, ನೆನೆದಾಗಲೆಲ್ಲಾ ನನ್ನನ್ನು ಸ್ವರ್ಗದಲ್ಲಿ ತೇಲಿಸುತ್ತದೆ. ಇಷ್ಟೆಲ್ಲಾ ಮೇರು ಮಹಿಮೆಯುಳ್ಳ ಚಪ್ಪರದ ಕೆಳಗೆ, ಬೆಳದಿಂಗಳ ಚಂದ್ರನು ಮೂಡಿಸಿದ ಅಂದದ ಚಿತ್ತಾರದ ಮೇಲೆ ಕುಳಿತು ನನ್ನಮ್ಮ ಬೇಳೆ, ಒಣಮೆಣಸಿನಕಾಯಿ ಜೊತೆಗೆ ಟೊಮ್ಯಾಟೋ, ಈರುಳ್ಳಿ, ಬೆಳ್ಳುಳ್ಳಿ, ಹುಣಸೆಹಣ್ಣು, ಉಪ್ಪು ಹಾಕಿ ಬೇಯಿಸಿ ಮಸೆದ ಸಾರು, ನೆಂಚಿಕೊಳ್ಳಲು ಒಂದು ಅಥವಾ ಎರಡು ವರ್ಷ ಹಳೆಯದಾದ ಒಣಗಿಸಿದ ಮಾವಿನಕಾಯಿಯಿಂದ ಮಾಡಿದ ಉಪ್ಪಿನಕಾಯಿ ರುಚಿಯನ್ನು ಬಾಯಿಚಪ್ಪರಿಸುತ್ತಾ ಅಕ್ಕತಂಗಿಯರೊಂದಿಗೆ ಊಟವನ್ನು ಹಂಚಿ ತಿಂದ ನನ್ನ ಭಾಗ್ಯಕ್ಕೆ ಮಿತಿಯೇ ಇಲ್ಲ… *******************************************
ಗಝಲ್ ಶುಭಲಕ್ಷ್ಮಿ ಆರ್ ನಾಯಕ ಹೃದಯ ಸಿರಿವಂತಿಕೆಗೆ ಅರಮನೆ ಗುಡಿಮನೆಗಳೆಂಬ ಭೇದವುಂಟೇ ಸಖೀಗುಣ ಅವಗುಣಗಳಿಗೆ ಬಡವನು ಬಲ್ಲಿದನೆಂಬ ಅಂತರಗಳುಂಟೇ ಸಖೀ ಅವರವರ ಭಾವಗಳಲಿ ಅವರವರ ಅರಿವಿಂಗೆ ಬಂದಂತೆ ಮಾಡುತಿಹರುಸನ್ನಡತೆ ದುರ್ನಡತೆಗಳಿಗೆ ನಾನು ನೀನೆಂಬ ದೂರಗಳುಂಟೇ ಸಖೀ ಸಂಕುಚಿತ ಭಾವದಲಿ ಸ್ವಾರ್ಥದ ಬೆಂಬತ್ತಿ ತಮ್ಮ ತನಗಳ ಮರೆತಿಹರುಜೀವನದಿ ಸ್ವಾರ್ಥವೆಂಬ ಮುಸುಕಿಗೆ ಬಲಿಯಾಗಿ ಗೆದ್ದವರುಂಟೇ ಸಖೀ ಬಡವನಲಿ ಕಾಣಬಹುದಲ್ಲವೇ ನಯ ವಿನಯತುಂಬಿರುವ ವಿಶಾಲ ಹೃದಯವಅವನ ಕಷ್ಟ ತ್ಯಾಗ ಸಹನೆಗಳ ಅಸಹನೆಯಿಂದ ಮರೆಯಲುಂಟೇ ಸಖೀ ಸಂಕುಚಿತ ಸ್ವಾರ್ಥದ ಬದುಕ ಕಂಡು ಶುಭ ಳ ಕೋಮಲ ಹೃದಯ ಚೂರಾಗಿದೆಭೇದ ಭಾವ ಸ್ವಾರ್ಥ ಮೋಹಗಳಿಂದ ಮಹಲುಗಳ ಕಟ್ಟಲುಂಟೇ ಸಖೀ *****************************
ಕವಿತೆ ಮಂಜು ನಳಿನ ಡಿ ಕಾಡುಮಲ್ಲಿಕಾರ್ಜುನನ ಚರಣ ಸೇರಲು ಹಾಡುಹಗಲೇ ಹಂಬಲಿಸಿ,ಬಿದ್ದ ವರುಣನ ತಿರಸ್ಕರಿಸಿ,ಮಾಟಗಾರ ಮಹಾಮಹಿಮ, ಓಜಸ್ವಿ ಓಡೋಡಿ ಹಿಡಿಯಲಾರೆ,ತಪ್ಪಾದರೂ ತಿರುಗಿ ಬರಲಾರೆ,ಕನವರಿಸಿ ಕಾಡಹಾದಿಯ ತಪ್ಪಿಸಿ,ಊರಿಗೆ ದಾರಿ ಒಪ್ಪಿಸಿ,ಗೂಬೆ ಕೂಗಿಗೆ ಕಾಗೆ ಓಡಿಸಿ,ಮುಸ್ಸಂಜೆ ಕಳೆಯಲು, ಬೆಟ್ಟದ ಬಂಡೆಗೆ ಬೆನ್ನುಹಾಸಿ,ಮರೆತು ಹೋದರೂ ಹುಡುಕಿ ತರುವ ಯಾಚಕ,ಸುಭದ್ರ ಸನಿಹದ ಇಳಿಮುಖ ಪ್ರತಿಫಲನ,ಪ್ರೇಮದ ವಕ್ರೀಭವನ,ಘಟಿಸುವವರೆಗೂ,ಮಂಜು ಅರಸಿ ಹಬ್ಬಿ ಕವಿಯುವವರೆಗೂ,ತಬ್ಬಿಬ್ಬು ಮನಸು…ಮಂಜು ನಗಲಿ,ಮಳೆ ಬರಲಿ..ನನ್ನಿರವು ನಿನ್ನಲ್ಲಿ ಸದಾ ಇರಲಿ.. ***********************************
ಕವಿತೆ ಓ.. ಮನಸೇ ವಿಭಾ ಪುರೋಹಿತ್ ಕ್ಷಣದ ಏಕಾಂತದಲಿಅಮೂರ್ತವಾಗಿನನ್ನೆದುರಲ್ಲೇಯಿರುವಿಎದೆಯಲ್ಲಿ ಗೆಜ್ಜೆ ಕಟ್ಟಿ ಥಕಥಕಕುಣಿಸಿ ಅಟ್ಟಕ್ಕೇರಿದ ಅತಿರೇಕನಿನ್ನ ನೋಡಬೇಕೆಂಬಉತ್ಕಟತೆ ಜಲಪಾತಕ್ಕೂಜೋರಾಗಿ ಜೀಕಿದೆಹಾರಿದ ಹನಿಗಳುಚಂದಿರನ ಗಲ್ಲಕ್ಕೆ ಸವರಿದ್ದೇ ತಡತಂಪಿನಲ್ಲೇ ತಾಪ ಅನುಭವಿಸಿಧಗಧಗ ಉರಿಯುತ್ತ ಉರುಳಿಅವಳ ಸ್ಪರ್ಶಕ್ಕೆ ಘರ್ಷಕ್ಕೆಆತು ಕೂತಿರುವೆಮರಿ ಭಾಷ್ಪವಾಗಿನುಡಿಯುತಿರೆ ಮಿಡಿಗಾವ್ಯ ಓ… ಮನಸೇ ಅದ್ಭುತ !ಏನೋ ಭೋರ್ಗರೆತಅದರಲ್ಲೊಂದು ಥಳುಕುಸಣ್ಣ ಸೆಳೆತ ದೇದೀಪ್ಯಮಾನಊಹಿಸಿರಲಿಲ್ಲಶಬ್ದಾತೀತ ಅನುಭೂತಿಮನಸ್ಸು ವಿಚಾರಗಳುಆಯಸ್ಸಿನ ಅಂಕೆವಯಸ್ಸಿನ ಶಂಕೆಇವೆರಡನ್ನೂ ಮೀರಿದನಳನಳಿಸುವ ತಾಜಾತನನವೊನವೋನ್ಮೇಶಎಂಥ ವಿಚಿತ್ರ !ಮನಸಿಗೆ ಪ್ರವಾಸ ಪ್ರಯಾಸಇದ್ದಂತಿಲ್ಲಥಟ್ಟಂತ ಪ್ರತ್ಯಕ್ಷಥಟ್ಟಂತ ಅಂತರ್ಧಾನಸೇರದ ದಾರಿಯೇನಲ್ಲಸೇರುವೆ ಎಂದಾದರೊಮ್ಮೆ
ಕವಿತೆ ಧನಪಾಲ ನಾಗರಾಜಪ್ಪ ಧನ ನಿನ್ನದನಿಕೇಳರಾರೂನಿನ್ನಪಾಡುನೋಡರಾರೂನೆಲ, ಜಲಜನ, ಮನಅಂತೆಲ್ಲಾ ಯಾಕೆ ಬಡಬಡಿಸುವೆ?ಧನವೇ ಇಂಧನಧನವೇ ಪ್ರಧಾನಜಮಾನ ಇದರ ದೀವಾನನಿನಗೆ ಅರ್ಥವಾಗದೆ ಧನು? ಜಾಡ್ಯ ಇಲ್ಲಿಯ ತನಕಏಡ್ಸ್ ಒಂದರ ಹೊರತುಬಹುತೇಕ ಜಾಡ್ಯಗಳಿಗೆಇಲಾಜು ಮಾಡಬಲ್ಲರುಈಗಿನ ವೈದ್ಯರುಶ್ಲಾಘನೀಯ ಸಾಧನೆಯೇ ಸರಿ ಜಾತಿಯ ಅಹಂ ಕೂಡಾಮಾರಕ ಜಾಡ್ಯ ಅಲ್ಲವೆ?ದೂರವಿರಿ ಇದು ಸಾಂಕ್ರಾಮಿಕಮುಂದೆ ಎಂದಾದರೂಏಡ್ಸಿಗೂ ಸಹಔಷಧ ಕಂಡುಹಿಡಿಯಬಹುದೇನೋ!ಆದರೆ ಜಾತಿಯ ಜಾಡ್ಯಕ್ಕೆಮದ್ದು ಅದೆಂದು ಸಿಗುವುದೋ ಧನು? ***************************************
You cannot copy content of this page