ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಗಝಲ್

ರತ್ನರಾಯ ಮಲ್ಲ

Little Feet, Kerala India | Flickr - Photo Sharing! | Leg chain, Anklet,  Happy feet

ಅಕ್ಕಸಾಲಿಗನಲ್ಲಿ ಕಾಲ್ಗೆಜ್ಜೆ ತಂದಿರುವೆನು ಪ್ರೀತಿಯಿಂದ
ಬಲಗಾಲು ಮುಂದೆಯಿಡು ತೊಡಿಸುವೆನು ಪ್ರೀತಿಯಿಂದ

ಮಯೂರವು ವಿಹರಿಸಿದಂತಾಗುತಿದೆ ಈ ಹೃದಯದಲ್ಲಿ
ಹಂಸದ ನಡಿಗೆಯನು ಪ್ರೀತಿಸುತಿರುವೆನು ಪ್ರೀತಿಯಿಂದ

ಹಕ್ಕಿಗಳ ಕಲರವವು ಆಲಂಗಿಸುತಿದೆ ಈ ಮೈ-ಮನಗಳನ್ನು
ಶಕುಂತಲೆಯ ನಾಟ್ಯದಿ ಮೈ ಮರೆತಿರುವೆನು ಪ್ರೀತಿಯಿಂದ

ಗೆಜ್ಜೆ ಎದೆ ಬಡಿತದೊಂದಿಗೆ ಪ್ರೇಮ ರಾಗವ ನುಡಿಸುತಿದೆ
ನಿದ್ದೆ ಮರೆತು ನಿನ್ನನ್ನೆ ಕನವರಿಸುತಿರುವೆನು ಪ್ರೀತಿಯಿಂದ

‘ಮಲ್ಲಿ’ ನಿನ್ನ ಹೆಜ್ಜೆಯಲ್ಲಿ ಗೆಜ್ಜೆಯನು ಹುಡುಕುತಿರುವನು
ನಿನ್ನ ಪಾದಗಳನ್ನು ಅಲಂಕರಿಸುತಿರುವೆನು ಪ್ರೀತಿಯಿಂದ

**********************************

About The Author

1 thought on “ಗಝಲ್”

Leave a Reply

You cannot copy content of this page

Scroll to Top