ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಗಜಲ್

ಪ್ರಭಾವತಿ ಎಸ್ ದೇಸಾಯಿ

Royalty-free sad woman statue photos free download | Pxfuel

ಪ್ರೀತಿ ಧಿಕ್ಕರಿಸಿದವನಿಗಾಗಿ‌ ನೆನೆಯುತ್ತಿರುವೆ ನಾನೇಕೆ ಹೀಗೆ
ಒಂದು ನುಡಿ ಆಡದವನಿಗಾಗಿ ಕೂಗುತ್ತಿರುವೆ ನಾನೇಕೆ ಹೀಗೆ

ಬರುವನೆಂದು ಪಾರಿಜಾತ ಹೂಗಳನ್ನು ಹಾಸಿದ್ದೆ ಹಾದಿಗುಂಟ
ಒಳಗೆ ಹೆಜ್ಜೆ ಇಡದವನಿಗಾಗಿ ಕಾಯುತ್ತಿರುವೆ ನಾನೇಕೆ ಹೀಗೆ

ಹೊಂಗೆ ಮರದಲ್ಲಿ ದುಂಬಿಗಳ ಚಲ್ಲಾಟ ಕಂಡು ಉದ್ವೇಗಗೊಂಡೆ
ಇರುಳೆಲ್ಲಾ ಅವನಿಗಾಗಿ ಕನವರಿಸುತ್ತಿರುವೆ ನಾನೇಕೆ ಹೀಗೆ

ಹಂದರದ ಬಳ್ಳಿಯಲಿ ತುಂಬಿ ನಲಿಯುತಿದೆ ಸಿಹಿ ಬಂಡು ಹೀರುತ್ತಾ
ತುಟಿಗೆ ಮಧು ಹಚ್ಚದವನಿಗಾಗಿ ಭಜಿಸುತ್ತಿರುವೆ ನಾನೇಕೆ ಹೀಗೆ

ಒಂಟಿ ಕೋಗಿಲೆ ವಸಂತಾಗಮಕೆ ಸಂತಸದಲಿ ಹಾಡುತಿದೆ” ಪ್ರಭೆ “
ಮಿಡಿಯದ ಹೃದಯ ಮಿಲನಕ್ಕಾಗಿ ಬಯಸುತ್ತಿರುವೆ ನಾನೇಕೆ ಹೀಗೆ

*************************************

About The Author

1 thought on “ಗಜಲ್‌”

  1. Yallappa yakolli

    ಈ ಪ್ರೀತಿ‌ ಇದೇಕೆ ಹೀಗೆ
    ತಿಳಿಯದ ಹಾದಿಯನ್ನು ಗಜಲ್ ಸುಂದರವಾಗಿ ಅನುನಯಿಸಿದೆ
    ಅಭಿನಂದನೆಗಳು ಹಿರಿಯ ಗಜಲ್ ಕಾರರಿಗೆ
    ವಂದನೆಗಳು‌ಮೆಡಮ್

Leave a Reply

You cannot copy content of this page

Scroll to Top