ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಥಾಗುಚ್ಛ

ನಿಯತ್ತು

ಕಥೆ ನಿಯತ್ತು ಎಂ. ಆರ್.ಅನಸೂಯ ಹೊರಗಡೆ ಯಾರೋ ಬೆಲ್ ಮಾಡಿದರು,ಆಗ  ಅಡುಗೆ ಮನೆಯಲ್ಲಿದ್ದ ಜಾನಕಿ ಅಲ್ಲಿಂದಲೇ ಮಗಳಿಗೆ” ನೋಡೇ ಸುಧಾ ಅದ್ಯಾರು”. ಬಾಗಿಲು ತೆಗೆಯದೆ ಕಿಟಕಿಯಿಂದಲೇ ಹೊರಗಡೆ ನಿಂತಿದ್ದವರನ್ನು ಸುಧಾ “ಯಾರು ಬೇಕಿತ್ತು”  ಎಂದು ಕೇಳಿದಳು. ಸುಮಾರು ಐವತ್ತು ವರ್ಷದ  ಅವರು “ನನ್ನ ಹೆಸರು ಇಸ್ಮಾಯಿಲ್. ನಿಮ್ಮ ತಾಯಿಯವರ ಹತ್ರ ಮಾತಾಡ ಬೇಕಿತ್ತು . ಸ್ವಲ್ಪ ಕರೆಯಮ್ಮ’ ಎಂದರು.  ಒಳಗೆ  ಬಂದು ” ಅಮ್ಮ, ಅದ್ಯಾರೊ  ಇಸ್ಮಾಯಿಲ್ ಅಂತೆ ನಿನ್ನತ್ರ ಮಾತಾಡಬೇಕಂತೆ” ಎಂದಾಗ ಯಾರಪ್ಪ ಅವ್ರು ಎನ್ನುತ್ತಾ ಬಂದು ಅವರನ್ನು  ನೋಡುತ್ತಿದ್ದಂತೆಯೇ ” ಓ ನೀವಾ” ಎಂದರು. ಆ ವ್ಯಕ್ತಿ ಕೈ ಮುಗಿದು ನಮಸ್ಕರಿಸುತ್ತ ” ಒಳಗೆ ಬರಬಹುದೇನ್ರಮ್ಮ” ಎಂದು ಕೇಳುತ್ತ ಅಲ್ಲೇ ನಿಂತಿದ್ದರು. ಆಗ ಜಾನಕಿ ಇಷ್ಟವಿಲ್ಲದಿದ್ದರೂ “ಬನ್ರಿ”ಎನ್ನ ಬೇಕಾಯ್ತು. ಜಾನಕಿ ಕುಳಿತುಕೊಳ್ಳಿ ಎಂದು ಕುರ್ಚಿ ಕಡೆ ತೋರಿಸಿದರು  ಕುಳಿತ ಮೇಲೆ “ನಿಮಗೆ ನನ್ನ ಮೇಲೆ ಸಿಟ್ಟೈತೆ. ಬೇಜಾರ್ ಮಾಡ್ಕಬೇಡ್ರಿ. ನಿಮಗೆ ಸಿಟ್ಟು ಬರಂಗೆ ನಡ್ಕಂಡಿದೀನಮ್ಮ ಏನೋ ಕೆಟ್ಟ ಕಾಲ. ಇವತ್ತು ನಿಮ್ಮ ಋಣ ತೀರಿಸೊ ಕಾಲ ಬಂತ್ರಮ್ಮ. ತಗೊಳ್ರಿ ನೀವು ಕೊಟ್ಟ ಐವತ್ತು ಸಾವಿರವನ್ನ ಅಸಲಷ್ಟೆ ಕೊಡ್ತಿರೋದು. ನನ್ನ ಕೈಲಾಗದು ಇಷ್ಟೇನಮ್ಮ ಮುಂದೆ ಆ ಅಲ್ಲಾ ಶಕ್ತಿ ಕೊಟ್ರೆ ಬಡ್ಡೀನು ತೀರಿಸಿ ಬಿಡ್ತೀನಿ”  ಎನ್ನುತ್ತಾ ಟೇಬಲ್ ಮೇಲೆ ನೋಟುಗಳ ಕಂತೆಯಿಟ್ಟರು. ಆಗ ಜಾನಕಿ ದುಡ್ಡನ್ನು ತೆಗೆದುಕೊಳ್ಳುತ್ತ “ಈ ದುಡ್ಡು ಮತ್ತೆ     ವಾಪಸ್ ಬರುತ್ತೆ ಅನ್ಕೊಂಡೇ ಇರಲಿಲ್ಲ. ಅದರ  ಆಸೇನ ನಾವು ಯಾವತ್ತೋ ಕೈ ಬಿಟ್ಟು ಸುಮ್ಮನಾಗಿದ್ವಿ. ಏನೋ ನಿಮಗೆ  ಆ ದೇವರು ಒಳ್ಳೆ ಬುದ್ದಿ ಕೊಟ್ನಲ್ಲ. ನಾವು ನಿಮ್ಮ ಸ್ಥಿತಿ ಅರ್ಥ ಮಾಡ್ಕಂಡು ವಿಧಿಯಿಲ್ಲದೆ ಸುಮ್ಮನಾಗಿ ಬಿಟ್ವಿ  ಆ ದುಡ್ಡು ನಮ್ಮದಾಗಿದ್ದರೆ ನಮಗೆ ಸಿಗುತ್ತೆ ಇಲ್ಲದಿದ್ದರೆ ಇಲ್ಲಾ ಅಂತ” ಎಂದು ಹೇಳಿ ಸುಧಾಳಿಗೆ ಟೀ ಮಾಡಲು ಹೇಳಿದರು.ಟೀ ಕುಡಿಯುವಾಗ ” ನೀವು ಎಲ್ಲಿದೀರಿ ಈಗ” ಎಂದು ಜಾನಕಿ ಕೇಳಿದರು”ನಾನು ಬೆಂಗ್ಳೂರಲ್ಲೆ ಇದೀನಿ ನಾನವತ್ತು ನಿಮ್ಮನೆಗೆ ಬಂದಿದ್ನಲ್ಲ ಅದರ  ಮಾರನೆಯ ದಿನವೇ ಬೆಂಗ್ಳೂರಿಗೆ  ಹೋಗ್ಬಿಟ್ಟೆ. ಸಾಲ ಕೊಟ್ಟವರು  ಸುಮ್ಮನೆ ಬಿಡ್ತಾರಾ. ಸಾಲಗಾರರ ಕಾಟ  ತಡೀಲಾರದೆ ಅಂಗಡಿಯಲ್ಲಿದ್ದ ಸಾಮಾನು ಮಾರಿ ಅಂಗಡಿ ಮನೇನ ಅಡವಿಟ್ಟು ಸಾಲ ತೀರ್ಸಿದೆ ಬಾಡಿಗೆಯನ್ನು  ಮತ್ತೊಬ್ಬ ಸಾಲಗಾರನಿಗೆ ಬರೆದು ಕೊಟ್ಟುಬಿಟ್ಟೆ. ಮಗ ಓದ್ತಿದ್ದ. ಮನೆ ನಡಿಬೇಕಲ್ಲ. ಬೆಂಗಳೂರಲ್ಲಿದ್ದ ನನ್ನ ಹೆಂಡ್ತಿ ಅಣ್ಣನೆ ನಿಮ್ಮಂಥಾ ದೊಡ್ಡ ವ್ಯಾಪಾರಸ್ಥರ ಹತ್ರ ಸ್ಟೋರ್ ಕೀಪರ್  ಕೆಲ್ಸ ಕೊಡಿಸಿದ. ನನ್ನ ಕೆಲಸ ಅವ್ರಿಗೆ ಇಷ್ಟ ಆಯ್ತು. ಅವ್ರೇ ರಾತ್ರಿ ವಾಚ್ಮನ್ ಕೆಲಸನೂ ನನಗೆ ಕೊಟ್ರು.ಇರಕ್ಕೆ ಒಂದು ರೂಂ  ಕೊಟ್ರು. ಎರಡೂ  ಕೆಲ್ಸಕ್ಕೂ ಸೇರಿ  ಮೂವತ್ತು ಸಾವಿರ ಕೊಡ್ರಿದ್ರು. ಮನೆಗೆ ಹದಿನೈದು ಸಾವಿರ ಕೊಟ್ಟರೆ. ಸಾಲಕ್ಕಂತ ಹತ್ತು ಸಾವ್ರ ಹೋಗಿ ನನ್ನ ಖರ್ಚಿಗೆ  ಐದು ಸಾವಿರ ಇಟ್ಕಂತಿದ್ದೆ. ನಮ್ಮಮ್ಮನೂ ನನ್ನ ಹೆಂಡ್ತಿ ಮನೇಲಿ ಸುಮ್ನೆ ಇರದೆ ಹೂ ಕಟ್ಟಿ ಸಂಪಾದನೆ ಮಾಡಿದ್ರು. ಈಗ ಮಗನಿಗೆ ಕೆ.ಇ.ಬಿ. ನಲ್ಲಿ ಕೆಲಸ ಸಿಕ್ಕಿತು ಶಿವಮೊಗ್ಗದಲ್ಲಿ ಮನೆ ಮಾಡಿ ವರ್ಷ ಆಯ್ತು. ಎಲ್ಲರೂ ಅಲ್ಲೆ ಇದ್ದಾರೆ.ಮಗನು ದುಡಿದು ಸಾಲ ತೀರಿಸ್ತಿದಾನೆ.ಮನೆನೂ ಬಾಡಿಗೆ ಕೊಟ್ಟು ಅದರ ದುಡ್ಡನ್ನು ಸಾಲಕ್ಕೆ ಕಟ್ತಾ ಇದೀವಿ. ಸಾಲ ತೀರಿದ  ಮೇಲೆ ಮಗನಿಗೆ ಮದ್ವೆ ಮಾಡಿ ನಾನು ಕೆಲ್ಸ ಬಿಟ್ಬಿಟ್ಟು ಬಂದು ಎಲ್ಲಾರೂ ಒಂದತ್ರ ಇರ್ತಿವಿ. ಈ ಐವತ್ತು ಸಾವಿರ ನಾನು ದುಡಿದಿರ  ದುಡ್ಡು. ನಾನು ಊರು ಬಿಟ್ಟೋಗಿ ಎಂಟು ವರ್ಷ ಆಯ್ತು ವನವಾಸ ಆದಂಗಾಯ್ತು ಮಗನಿಗೆ ಕೆಲಸ ಸಿಕ್ಕಿದ ಮೇಲೆ ನೆಮ್ಮದಿಯಾಗಿ ನಿರಾಳವಾಯ್ತು”ಎಂದು ಹೇಳಿ ಮುಗ್ಸಿದ.  ಸುಧಾಳನ್ನು ನೋಡಿ “ಎಲ್ಲಾ ಅವರಜ್ಜಿ ಇದ್ದಂಗೆ” ಎಂದು ಹೇಳಿ ಜಾನಕಿಯವರ ಅತ್ತೆ ಕಮಲಮ್ಮನವರನ್ನು ಕೇಳಿದ  ಅವರು ತಮ್ಮ ಮಗಳ ಮನೇಲೀ ನಾಲ್ಕೈದು ದಿನ ಇದ್ದು ಬರಲು ಹೋಗಿದ್ದಾರೆ ಎಂದಾಗ ಅವರ ಕೈ ರುಚಿಯನ್ನು ಕೊಡುತ್ತಿದ್ದ ಊಟತಿಂಡಿಯನ್ನು ನೆನೆದು ಹೊಗಳಿದರು ಜಾನಕಿಯ ಗಂಡ ಪ್ರಕಾಶಣ್ಣನು ಬೆಂಗಳೂರಿಗೆ ಹೋದ ವಿಚಾರ ತಿಳಿದು ಮತ್ತೊಮ್ಮೆ ಬಂದಾಗ ಮಾತಾಡಿಸ್ತೀನಿ ಎನ್ನುತ್ತ ಹೊರಡುವಾಗ ಮತ್ತೆ ನಡೆದ ವಿಷಯಗಳಿಗೆಲ್ಲ ಬೇಸರ ಮಾಡಿ ಕೊಳ್ಳಬಾರದೆಂದುಹೇಳಿದರು. ಅವರು ಹೋದ ಮೇಲೆ ಸುಧಾ ” ಯಾರಮ್ಮ ಇವ್ರು ನನಗೀಗ ಇವರನ್ನು ನೋಡಿದ ನೆನಪಾಯ್ತು” ಎಂದು  ಕೇಳಿದಾಗ ಜಾನಕಿ “ಅದೊಂದು ದೊಡ್ಡ ಕತೆ” ಎನ್ನುತ್ತಲೇ ಅಡುಗೆ ಮನೆಯತ್ತ ನಡೆದರೆ ಸುಧಾ ಸಹಾ ಅವರ ಹಿಂದೆಯೇ ಹೊರಟಳು. ಜಾನಕಿ ಕಥೆಯ ಪೀಠಿಕೆ ಶುರು ಮಾಡಿದಳು “ಈಗ ಬಂದಿದ್ದಲ್ಲ ಇಸ್ಮಾಯಿಲ್ ಅವ್ರ ತಂದೆ ಇಬ್ರಾಹಿಂ ಹಾಗು ನಿಮ್ಮ ತಾತ ಚಿಕ್ಕಂದಿನಿಂದ್ಲೂ ಒಳ್ಳೆಯ ಸ್ನೇಹಿತರು ಇಬ್ಬರ ನಡುವೆ ಹಣಕಾಸಿನ ವ್ಯವಹಾರವೂ ಇತ್ತು. ಅದು ನಂಬಿಕೆ ಹಾಗೂ ನಿಯತ್ತಿನಿಂದ ಕೂಡಿತ್ತು. ಆ ಸ್ರೇಹ ಹಾಗೆ ಮುಂದುವರಿಯುತ್ತ ಅವರ ಮಕ್ಕಳ ಕಾಲಕ್ಕೂ ಬಂದಿತ್ತು ಎರಡು ಕುಟುಂಬಗಳ ನಡುವಿನ ವಿಶ್ವಾಸಕ್ಕೆ ಯಾವುದೇ  ಭಂಗ ಬರದೆ ಎಲ್ಲವು ಚೆನ್ನಾಗೆ ಇತ್ತು. ಇಬ್ರಾಹಿಂರವರು ಸಣ್ಣಕಿರಾಣಿ ಅಂಗಡಿ ಇಟ್ಟಿದ್ದರು. ಅವರಪ್ನ ತೀರಿಕೊಂಡ ಮೇಲೆ ಇಸ್ಮಾಯಿಲ್ ನಡೆಸಿಕೊಂಡು ಹೋಗುತ್ತಿದ್ದರು. ಅಂಗಡಿಯ ಜೊತೆಗೆ ತೆಂಗಿನಕಾಯಿಯ ಹೋಲ್ ಸೇಲ್ ವ್ಯಾಪಾರ ಮಾಡುವ ಉತ್ಸಾಹದಿಂದ ಶುರುಮಾಡಿದರು.  ತಾವು ಕೂಡಿಟ್ಟ ಹಣದೊಂದಿಗೆ ಸ್ಟಲ್ಪ ಸಾಲವನ್ನು ಮಾಡಿ ಹಣ ಹೊಂದಿಸಿಕೊಂಡು ಹೊಸ ವ್ಯವಹಾರಕ್ಕೆ ಹಾಕಿದ್ದರು ಯಾಕೋ ಏನೋ ಹೊಸ ವ್ಯವಹಾರದಲ್ಲಿ ಏಳ್ಗೆಯಾಗದೆ  ನಷ್ಟವಾಗ ತೊಡಗಿತು. ಹೊಸ ವ್ಯವಹಾರದ ಆಸಕ್ತಿಯ ಫಲವಾಗಿ ಕಿರಾಣಿ ಅಂಗಡಿಯೂ ಸರಿಯಾಗಿ ನಡೆಯದೆ  ಅದರಲ್ಲೂ ಆದಾಯ ಕಡಿಮೆಯಾಯಿತು.ಅಂದುಕೊಂಡ ಹಾಗೆ ಏನೂ ನಡೆಯದೆ ಎಲ್ಲವೂ ಏರುಪೇರಾಗಿ ಬಿಟ್ಟಿತು ಒಟ್ನಲ್ಲಿ ಗ್ರಹಚಾರ ಕೆಟ್ಟ ಪರಿಣಾಮವೋ ಏನೋ ಅವರ ಕೆಟ್ಟ ದಿನಗಳು ಪ್ರಾರಂಭವಾದವು. ಅದು ಸಾಲದೆಂಬಂತೆ  ಆಗಲೇ ಅವರ ತಾಯಿಗೆ ಅನಾರೋಗ್ಯದಿಂದಾಗಿ ಆಸ್ಪತ್ರೆ ಸೇರಬೇಕಾಯ್ತು. ಹೊಸ ವ್ಯವಹಾರದಲ್ಲಾದ ನಷ್ಟ ಮತ್ತು ಆಸ್ಪತ್ರೆ ಖರ್ಚಿಗಾಗಿ ಮತ್ತೆ ಸಾಲಮಾಡದೆ ಬೇರೆ ದಾರಿಯೆ ಇರಲಿಲ್ಲ ಆಗ ನಮ್ಮ ಹತ್ರ ಒಂದು ಲಕ್ಷ ರೂಪಾಯಿ ಸಾಲ ತೆಗೆದರು. ಅವರ ತಾಯಿ ಆರೋಗ್ಯವಂತರಾಗಿ ಮನೆಗೇ  ಬಂದರೂ ಹಣಕಾಸಿನ ಪರಿಸ್ಥಿತಿ ಮಾತ್ರ ತೀರ ಹದಗೆಟ್ಟು ಹೋಗಿತ್ತು ಸಾಲಗಾರರ ಕಾಟದಿಂದಾಗಿ ಮರ್ಯಾದೆಗೆ ಹೆದರಿ ಅವರದೆ ಸ್ವಂತ ಅಂಗಡಿ ಮನೆಯನ್ನು ಭೋಗ್ಯಕ್ಕೆ ಹಾಕಿ ಅರ್ಧ ಸಾಲ ತೀರಿಸಿ ಹೆಂಡತಿಯ ಒಡವೆಗಳನ್ನೂ ಮಾರಿದರು. ಆಗ ನಿಮ್ಮಪ್ಪ ಸಾಲದ ದುಡ್ಡು ಕೇಳಿದರು. ಆಗ ಅವನಲ್ಲಿದ್ದ ಐವತ್ತು ಸಾವಿರ ಕೊಟ್ಟು “ಉಳಿದ ಹಣ ಈಗಲೇ ಕೊಡಕ್ಕೆ ಆಗಲ್ಲ. ಬೇರೆ ಕಡೆ ಇನ್ನೂ ಸಾಲ ಐತೆ ನೀವು ಈಗಲೇ ಕೊಡಬೇಕು ಅಂದ್ರೆ ನೇಣು ಹಾಕ್ಕಂಡು ಸಾಯದು ಬಿಟ್ರೆ ಇನ್ನೇನೂ ಮಾಡಕ್ಕಾಗಲ್ಲ. ನನಗೆ ಸ್ಟಲ್ಪ ಟೈಂ ಕೊಡ್ರಿ ನಿಮ್ಮ ಋಣ ಇಟ್ಕೊಂಡು ಸಾಯಲ್ಲ” ಎಂದು ಕೈ ಮುಗಿದು ಕೇಳ್ಕಂಡಿದ್ದರು. ಆಗ ನಿಮ್ಮಅಜ್ಜಿ ನಿಮ್ಮಪ್ಪನ ಹತ್ರ “ಪ್ರಕಾಶ, ಒತ್ತಡ ಹಾಕ್ಬೇಡ. ನಿಯತ್ತಿನ ಮನುಷ್ಯನೇ ಪಾಪ.ಲೇಟಾದ್ರು ದುಡ್ಡು ಬರುತ್ತೆ”ಎಂದುಹೇಳ್ಬಿಟ್ಟಿದ್ದರು.   ಮಾರನೇ ದಿನವೇ ಇಸ್ಮಾಯಿಲ್ ಊರು ಬಿಟ್ಟಿದ್ದ. ಆಗ ನಿಮ್ಮಪ್ಪ ಹಣ ವಾಪಸ್ ಬರುವ ಆಸೆಯನ್ನೇ ಕೈ ಬಿಟ್ಟರು “ಅದಾದ ಮೇಲೆ ಇವತ್ತೇ ನಾನು ನೋಡ್ತಿರೋದು. ಇನ್ನು ಮುಂದಿನ ಕತೆನೆಲ್ಲಾ ಅವನೇ ಹೇಳಿದನಲ್ಲ. ಅಂತು ಅವ್ರ ನಿಯತ್ತು ಮೆಚ್ಚಬೇಕು.ಅದಕ್ಕೆ ಅಲ್ವೇ ಹೇಳೋದು ದುಡ್ಡು ಶಾಶ್ವತ ಅಲ್ಲ ಅಂತ “ಎಂದು ಜಾನಕಿ ಹೇಳಿದರೆ ” ಎಂಟು ವರ್ಷ ಆದ ಮೇಲೆ ಅವರಾಗೇ ಬಂದು ದುಡ್ಡು ಕೊಟ್ಟು ಸಾಲ ತೀರ್ಸಿದಾರೆ.ಅವ್ರು ನಿಜವಾಗ್ಲೂ ಈಗಿನ ಕಾಲಕ್ಕೇ ಗ್ರೇಟ್ ಕಣಮ್ಮ”ಎಂದು ಸುಧಾ ಸಹಾ ಹೊಗಳಿದಳು. …….

ನಿಯತ್ತು Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಶ್ರೀಲಕ್ಷ್ಮಿ ಆದ್ಯಪಾಡಿ. ಕಣ್ಣ ಜಗತ್ತಿನಲ್ಲೇ ಸಾವಿರ ಸಾವಿರ ನಕ್ಷತ್ರಗಳ ಚಿಮ್ಮಿಸಿದವನು ಅವನಿರುವುದೇ ಹಾಗೆ ಮೀಸೆಯ ತುಂಟ ನಗೆಯಲ್ಲೇ ಸಾವಿರ ಕನಸುಗಳ ಹೊಮ್ಮಿಸಿದವನು ಅವನಿರುವುದೇ ಹಾಗೆ ಮೌನವನ್ನಪ್ಪಿದ್ದ ನನ್ನೆದೆಯ ತಂತಿಯನ್ನು ಮತ್ತೆ ಬಿಗಿದು ಹೊಸ ರಾಗ ಮೀಟಿದನು ನನ್ನದೆಯ ಪ್ರತಿ ಬಡಿತದಲ್ಲೂ ನಲಿವಿನ ರಾಗಗಳ ಬೆರೆಸಿದವನು ಅವನಿರುವುದೇ ಹಾಗೆ ಕುದಿಯುತ್ತಿದ್ದ ತಪ್ತ ಎದೆಗೆ ತಂಪಿನ ಹನಿ ಬೆರೆಸಿ ಬದುಕಿನಲ್ಲಿ ಹೊಸ ಕನಸ ಬಿತ್ತಿದನು ಕಮರಿ ಹೋಗಿದ್ದ ಕನಸುಗಳಿಗೆ ಮತ್ತೆ ಹೊಸ ಜೀವ ತುಂಬಿದವನು ಅವನಿರುವುದೇ ಹಾಗೆ ಮೊರೆಯುತ್ತಿದ್ದ ಕಡಲಿಗೇನು ಗೊತ್ತಿತ್ತು ತನಗಾಗಿ ಹಂಬಲಿಸುವ ನದಿ ಎಲ್ಲಿದೆಯೆಂದು ಕಾಯುವ ಬದುಕಿಗೇ ವಿದಾಯ ಹೇಳಿ ಒಲವಿನಿಂದ ನಲಿದು ಬಂದವನು ಅವನಿರುವುದೇ ಹಾಗೆ ಕಾರ್ಗತ್ತಲ ಗೂಡಿನೊಳಗೆ ಒಂಟಿತನದ ನೋವಿನಲ್ಲೇ ಕೊರಗುತ್ತಿದ್ದ ಪುಟ್ಟ ಹಕ್ಕಿಯಾಗಿದ್ದೆ ಹಾರಲು ಪ್ರೇಮದ ವಿಶಾಲ ಆಗಸವಿದೆಯೆಂದು ತೋರಿ ರೆಕ್ಕೆಯಾದವನು ಅವನಿರುವುದೇ ಹಾಗೆ **********************************************

ಗಜಲ್ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಶಮಾ. ಜಮಾದಾರ. ತರಗಲೆಯ ಅಲುಗಾಟದಲಿ ನಿನ್ನ ಕಾಲ್ಸಪ್ಪಳಕೆ ಕಾಯುತಿರುವೆಕೊರಕಲಿನ ಇಳಿಜಾರಿನಲಿ ನಿನ್ನ ದರುಶನಕೆ ಕಾಯುತಿರುವೆ ಲೋಕದ ನಾಲಿಗೆ ಹೊಸದೊಂದು ಪಟ್ಟಕಟ್ಟಿ ನಗುತಿದೆಅಮವಾಸ್ಯೆ ರಾತ್ರಿಯಲಿ ಬೆಳದಿಂಗಳಕೆ ಕಾಯುತಿರುವೆ ಯುಗಗಳಿಂದಲೂ ಪ್ರೀತಿ ನಿರೀಕ್ಷೆಯಲಿ ಪರಿತಪಿಸಿದೆನಿರ್ಭೀತ ಹೊಸಗಾಳಿಯಲಿ ಉಸಿರಾಟಕೆ ಕಾಯುತಿರುವೆ ಮನುಜ ಮಾಡಿದ ಮತಪಂಗಡಗಳು ಬೇಲಿ ಕಟ್ಟುತ್ತಲಿವೆಸೌಹಾರ್ದದ ಹೃದಯಗಳಲಿ ಸಮನ್ವಯಕೆ ಕಾಯುತಿರುವೆ ಎದೆಯ ಗೂಡುಗಳಲಿ ನಗಬೇಕು ನಿಸ್ವಾರ್ಥ ಶಮೆಗಳುಕಳಚಿದ ಬೇಡಿಗಳಲಿ ಅನುಸಂಧಾನಕೆ ಕಾಯುತಿರುವೆ **********************************

ಗಜಲ್ Read Post »

ಕಾವ್ಯಯಾನ

ಕಾವ್ಯಯಾನ

ಆಯ್ಕೆ ಪವಿತ್ರ ಎಂ. ‘ಮರ ಬೆಳೆಸಿ’ಧರೆ ಉಳಿಸಿಕೂಗುತಿದೆ ಜಾಹಿರಾತು.ಉರುಳಿಸಿ ಅಗಲಿಸಿಡಾಂಬರರಿಸಿ ಪೋಷಿಸುತಿದೆನಿಯಮದಾದೇಶ.ಅದು ಮತಿಗಾಯ್ಕೆ ಅಗ್ನಿಪರೀಕ್ಷೆಜಾಣ್ಮೆಗಾಯ್ಕೆ ವಿವೇಕಕಾಯ್ಕೆಮಗುವ ಚಿವುಟಿ ಲಾಲಿ ಹಾಡ್ವಕವಲದಾರಿ ಪಯಣ!ತೋರಿಕೆಗೇಕೆ ಧೋರಣೆ?ಜನರಾಯ್ಕೆ ನೀನುಕಾಯ್ವ ಹೊಣೆ ನಿನ್ನದೇ. ***********************

ಕಾವ್ಯಯಾನ Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ಫ್ರಾಂಕಿನ್‌ಸ್ಟೆನ್ ಫ್ರಾಂಕಿನ್‌ಸ್ಟೆನ್ಮೂಲ ಇಂಗ್ಲಿಷ್ : ಮೇರಿ ಷೆಲ್ಲಿ ಕನ್ನಡಕ್ಕೆ : ಶ್ಯಾಮಲಾ ಮಾಧವಪ್ರ : ಅಂಕಿತ ಪುಸ್ತಕಪ್ರಕಟಣೆಯ ವರ್ಷ :೨೦೦೭ ಅನುವಾದಕ್ಕಾಗಿ ಸದಾ ಇಂಗ್ಲಿಷ್ ಕ್ಲಾಸಿಕ್‌ಗಳನ್ನೇ ಆರಿಸಿಕೊಳ್ಳುವ ಶ್ಯಾಮಲಾ ಮಾಧವ ಅವರು ಸಾರ್ವಕಾಲಿಕ ಪ್ರಸ್ತುತಿಯುಳ್ಳ ಮೇರಿ ಷೆಲ್ಲಿಯ ‘ಫ್ರಾಂಕಿನ್‌ಸ್ಟೆöನ್’ ಎಂಬ ಅದ್ಭುತ ವಸ್ತುವುಳ್ಳ ಕಾದಂಬರಿಯನ್ನು ಅನುವಾದಿಸಿದ್ದಾರೆ. ನಿಸರ್ಗ ನಿಯಮಗಳ ವಿರುದ್ಧ ಹೋಗುವ ಅಹಂಕಾರವನ್ನು ಮನುಷ್ಯ ತೋರಿಸಿದರೆ ಪರಿಣಾಮವೇನಾಗಬಹುದು ಎಂಬ ವಿಷಯದ ಕುರಿತುಳ್ಳ ಈ ಕಾದಂಬರಿತನ್ನ ನಿರೂಪಣೆಗೆ ಫ್ಯಾಂಟಸಿ ಶೈಲಿಯನ್ನು ಆಯ್ದುಕೊಂಡಿದೆ ಮಾತ್ರವಲ್ಲದೆ ಅದು ಒಂದು ಭಯಾನಕ ವಾತಾವರಣವನ್ನೂ ಸೃಷ್ಟಿಸುತ್ತದೆ. ಹಿಮಾಚ್ಛಾದಿತ ಉತ್ತರ ಧ್ರುವದತ್ತ ಅನ್ವೇಷಕನಾಗಿ ಸಾಹಸ ಯಾತ್ರೆ ಕೈಗೊಳ್ಳುವ ವಾಲ್ಟನ್ ತನ್ನ ಪ್ರಿಯ ಸೋದರಿ ಮಾರ್ಗರೆಟ್‌ಗೆ ಬರೆಯುವ ಪತ್ರಗಳೇ ಇಲ್ಲಿ ಇಡೀ ಕಥೆಯನ್ನು ಹೇಳುತ್ತವೆ. ವಾಲ್ಟನ್ ಹಿಮ ಸಾಗರದಲ್ಲಿ ಭೇಟಿಯಾಗುವ ಫ್ರಾಂಕಿನ್‌ಸ್ಟೆöನ್ ಎಂಬ ವ್ಯಕ್ತಿ ಅವನಲ್ಲಿ ತನ್ನ ಭೀಭತ್ಸ ಅನುಭವಗಳನ್ನು ಹೇಳಿಕೊಳ್ಳುತ್ತಾನೆ. ಪ್ರಾಕೃತಿಕ ವಿಜ್ಞಾನದ ಅವ್ಯಕ್ತ ಸೆಳೆತಕ್ಕೊಳಗಾಗಿ ಆತ ಹಗಲು-ರಾತ್ರಿ ಪರಿಶ್ರಮ ಪಟ್ಟು ಆ ವಿಷಯದ ಆಳಕ್ಕಿಳಿದು ಅಧ್ಯಯನ ನಡೆಸಿ ಅದುವರೆಗೆ ಯಾವ ಮಾನವನೂ ಮಾಡದಿರುವ, ಮೈ ನವಿರೇಳಿಸುವ ಒಂದು ವಿಶಿಷ್ಟ ಪ್ರಯೋಗವನ್ನು ಕೈಗೊಳ್ಳುತ್ತಾನೆ. ಸತ್ತ ಮನುಷ್ಯರ ಶವಗಳಿಂದ ಪ್ರತಿಯೊಂದು ಬಿಡಿ ಭಾಗಗಳನ್ನು ತೆಗೆದು ಅವೆಲ್ಲವನ್ನೂ ಪುನಃ ಸುಸ್ಥಿತಿಯಲ್ಲಿ ಜೋಡಿಸಿ ಒಂದು ದೈತ್ಯಾಕೃತಿಯನ್ನು ನಿರ್ಮಿಸಿ ಅದರೊಳಗೆ ಜೀವ ತುಂಬುವ ಒಂದು ಭಯಾನಕ ಕೃತ್ಯವದು. ರಾಕ್ಷಸನಂತೆ ವಿಕಾರನೂ ಭಯಂಕರನೂ ಆಗಿ ಬರುವ ಆ ದೈತ್ಯ ಮುಂದೆ ಬಂದು ನಿಲ್ಲುತ್ತಲೇ ಫ್ರಾಂಕಿನ್‌ಸ್ಟೆöನ್ ಭಯಗೊಂಡು ಓಡಿ ಹೋಗಿ ತನ್ನ ಊರು ಸೇರುತ್ತಾನೆ. ಆದರೆ ಆ ದೈತ್ಯ ಅವನನ್ನು ಅಲ್ಲಿಗೂ ಬಿಡದೆ ಹಿಂಬಾಲಿಸುತ್ತಾನೆ. ತನ್ನ ಸೃಷ್ಟಿಕರ್ತನನ್ನು ತಾನು ಮುಂದೇನು ಮಾಡಬೇಕೆಂದು ಕೇಳುವ ಅವಕಾಶಕ್ಕಾಗಿ ಕಾಯುತ್ತಾನೆ. ಮನುಷ್ಯ ಸಂಪರ್ಕದಲ್ಲಿ ಇರಲು ಅವನಿಂದ ಸಾಧ್ಯವಾಗುವುದಿಲ್ಲ. ಯಾಕೆಂದರೆ ಅವನನ್ನು ಕಂಡ ಕೂಡಲೇ ಎಲ್ಲರೂ ಕಿಟಾರನೆ ಕಿರುಚಿ ಓಡಿ ಹೋಗುತ್ತಾರೆ, ಇಲ್ಲವೇ ಎಲ್ಲರೂ ಜೊತೆ ಸೇರಿ ಅವನಿಗೆ ಹೊಡೆದು ಹಿಂಸಿಸಿ ಓಡಿಸುತ್ತಾರೆ. ಹೀಗೆ ಒಂಟಿತನದ ನೋವಿನ ಕ್ಷಣಗಳಲ್ಲಿ ದೈತ್ಯನು ತನ್ನ ಸೃಷ್ಟಿಕರ್ತನ ಬಗ್ಗೆ ಸಿಟ್ಟಾಗುತ್ತಾನೆ. ಕೋಪದ ಆವೇಶದಲ್ಲಿ ಅವನು ಫ್ರಾಂಕಿನ್‌ಸ್ಟೆöನ್‌ನ ಪುಟ್ಟ ತಮ್ಮನ ಕತ್ತು ಹಿಚುಕಿ ಅವನನ್ನು ಕೊಲ್ಲುತ್ತಾನೆ. ಆ ಕುರಿತು ಫ್ರಾಂಕಿನ್‌ಸ್ಟೆöನ್ ದುಃಖಿಸುತ್ತಿರುವಾಗ ಒಂದು ದಿನ ಕಾಡು ಪ್ರದೇಶವೊಂದರಲ್ಲಿ ಅವರಿಬ್ಬರು ಭೇಟಿಯಾಗಿ ದೈತ್ಯನು ತನ್ನ ಸೃಷ್ಟಿಕರ್ತನಲ್ಲಿ ತನ್ನ ನೋವನ್ನು ತೋಡಿಕೊಳ್ಳುತ್ತಾನೆ. ತನ್ನನ್ನು ಒಂಟಿತನ ಕಾಡುತ್ತಿದೆಯಾದ್ದರಿಂದ ತನಗೆ ತನ್ನಂತಯೇ ಇರುವ ಹೆಣ್ಣು ಜೀವವೊಂದನ್ನು ಸೃಷ್ಟಿಸಿ ಕೊಡಬೇಕಾಗಿ ದೈತ್ಯನು ಕೇಳಿಕೊಳ್ಳುತ್ತಾನೆ. ಆದರೆ ಇದರಿಂದ ಮಾನವ ಸಮುದಾಯಕ್ಕೆ ಅಪಾಯವಿದೆ ಎಂಬುದನ್ನರಿತ ಫ್ರಾಂಕಿಸ್ಟೆöನ್ ಅದಕ್ಕೊಪ್ಪುವುದಿಲ್ಲ. ರೋಷಗೊಂಡ ದೈತ್ಯನು ಫ್ರಾಂಕಿನ್‌ಸ್ಟೆöನ್‌ನ ಪ್ರೀತಿಪಾತ್ರರೆಲ್ಲರನ್ನೂ ಕೊಂದು ಕೊನೆಗೆ ಅವನನ್ನೂ ಕೊಲ್ಲಲು ಹೊರಡುತ್ತಾನೆ. ಕೊನೆಯ ಹಂತದಲ್ಲಿ ವಾಲ್ಟನ್‌ನ ಮುಂದೆ ಕಾಣಿಸಿಕೊಳ್ಳುವ ಫ್ರಾಂಕಿನ್‌ಸ್ಟೆöನ್ ತಾನಿನ್ನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಹೇಳಿ ಅಲ್ಲಿಂದ ಹೊರಟು ಹೋಗುತ್ತಾನೆ. ವಿಜ್ಞಾನವನ್ನು ಒಂದು ಮಿತಿಗಿಂತ ಆಚೆ ಬಳಸುವವರಿಗೆ ತಮ್ಮ ಸಾಮಾಜಿಕ ಜವಾಬ್ದಾರಿಯ ಅರಿವು ಇರಬೇಕೆಂದು ಈ ಕಾದಂಬರಿ ಎಚ್ಚರಿಸುತ್ತದೆ. ಶ್ಯಾಮಲಾ ಅವರ ಅನುವಾದ ಆಕರ್ಷಣೀಯವಾಗಿದೆ. ********************************** “ ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

ಇತರೆ, ಗಜಲ್ ವಿಶೇಷ

ಗಜಲ್ ಸಿದ್ಧರಾಮ ಕೂಡ್ಲಿಗಿ ನನಸಾದ ಕನಸುಗಳು ಮತ್ತೆ ಕನಸಾದವಲ್ಲ ಅದೆಂಥ ನೋವುಕಂಬನಿಯೆಲ್ಲ ಮುತ್ತಾಗಿ ಮತ್ತೆ ಕಂಬನಿಯಾದವಲ್ಲ ಅದೆಂಥ ನೋವು ಇರುಳ ಕನವರಿಕೆಗಳೆಲ್ಲ ನೆನಪಿನೊಂದಿಗೆ ಉರಿವ ಚಿಕ್ಕೆಗಳಾದವುತಣ್ಣಗಿದ್ದ ಚಂದಿರ ಮತ್ತೆ ಉರಿಗೋಳವಾದನಲ್ಲ ಅದೆಂಥ ನೋವು ನೀ ನಡೆದು ಹೋದ ಹಾದಿಯ ಹೂಗಳೆಲ್ಲ ಮುಖ ಬಾಡಿಸಿದವುಮುಳ್ಳುಗಳೆಲ್ಲ ಹೂವಾಗಿ ಮತ್ತೆ ಮುಳ್ಳಾದವಲ್ಲ ಅದೆಂಥ ನೋವು ಉಲ್ಲಾಸದಿಂದಿದ್ದ ತಂಗಾಳಿಯೂ ಸಹ ಚಂಡಮಾರುತವಾಯಿತುತಣ್ಣನೆಯ ಮಳೆಯೂ ಕೆಂಡದ ಮಳೆಯಾಯಿತಲ್ಲ ಅದೆಂಥ ನೋವು ನಿನ್ನೆದುರು ನಲಿಯುತ್ತಿದ್ದ ಸಿದ್ಧನ ಹೃದಯ ಮಿಡಿತವನ್ನೇ ಮರೆತಿದೆಸಂತಸದಿಂದಿದ್ದ ಉಸಿರು ವೇದನೆಯ ಉಸಿರಾಯಿತಲ್ಲ ಅದೆಂಥ ನೋವು

Read Post »

ಇತರೆ, ಗಜಲ್ ವಿಶೇಷ

ಗಜಲ್ ಪ್ರೇಮಾ ಹೂಗಾರ ಅಳು ಬಂದರೂ ಅಳಲಾರೆ ಆ ಹನಿಯಲ್ಲಿ ಜಾರಿಹೋಗುವೆ ಎಂಬ ಸಂಕಟನಗು ಬಂದರೂ ನಗಲಾರೆ ಆ ನಗುವಿನೊಂದಿಗೆ ಕಳೆದುಹೋಗುವೆ ಎಂಬ ಸಂಕಟ ನಿನ್ನ ಗಜಲ್ ಸಾಲಿನಲ್ಲಾದರೂ ಜೀವಂತ ಇರುವೆನಲ್ಲ ಎಂಬುದೇ ಸಮಾಧಾನಹಾಡು ಬಂದರೂ ಹಾಡಲಾರೆ ಆ ಹಾಡಿನೊಂದಿಗೆ ಹಾರಿಹೋಗುವೆ ಎಂಬ ಸಂಕಟ ಅಕ್ಷರಗಳ ಜೊತೆಗೇ ಒಂದಾಗಿ ಬೆರೆತೆವು ನಲಿದೆವು ಮುನಿಸ ತೋರಿದೆವು ರೋದಿಸಿದೆವುಬರೆಯಬೇಕೆಂದರೂ ಬರೆಯಲಾರೆ ಆ ಬರಹದೊಂದಿಗೆ ಖಾಲಿಯಾಗುವೆ ಎಂಬ ಸಂಕಟ ಬದುಕಿನ ಪ್ರತಿ ಕ್ಷಣದಲೂ ಜೊತೆಯಾದೆವು ಪ್ರತಿ ಕ್ಷಣವನು ಹಂಚಿಕೊಂಡೆವುನಡೆಯಬೇಕೆಂದರೂ ನಡೆಯಲಾರೆ ಆ ನಡೆಯೊಂದಿಗೆ ಕಾಣೆಯಾಗುವೆ ಎಂಬ ಸಂಕಟ ಬದುಕಿನ ಸುದೀರ್ಘ ಪಯಣದಲಿ ಪ್ರೇಮಳ ಜೊತೆಯಾದೆ ಒಲವಿನಲಿ ಬಂದಿಯಾದೆಮರೆಯಬೇಕೆಂದರೂ ಮರೆಯಲಾರೆ ಆ ಮರೆವಿನೊಂದಿಗೇ ಕಂಬನಿಯಾಗುವೆ ಎಂಬ ಸಂಕಟ ನಾಟಿ ಹೋದ ನೆನಪುಗಳೆಲ್ಲ ಮತ್ತೆ ಮೊಳಕೆ ಒಡೆಯುತ್ತಿವೆತೇಲಿ ಬಿಟ್ಟ ದೋಣಿಗಳೆಲ್ಲ ಮತ್ತೆ ಜಗಕೆ ಕರೆಯುತ್ತಿವೆ ನೀನುಡಿಸಿದ ಕೆಂಪು ಸೀರೆಯ ನೆರಿಗೆಗಳು ಇನ್ನೂ ನಾಚುತಿವೆ ಸಾಕಿನೋಟ ಕಸಿದ ಕಾಡಿಗೆಯೊಳಗೆ ಹೊಸ ಬಯಕೆ ಚಿಮ್ಮುತಿವೆ ನಗುವ ಗೋರಿಯ ಮೇಲೆ ನೇಪಥ್ಯದ ಪ್ರೇಮದ ನೆಪಬೇಡಹೊಣೆಯಿಲ್ಲದ ಕನಸುಗಳಿಗೆ ಚಂದ್ರನ ಕಟ್ಟಿ ನೊಗಕೆ ಜರೆಯುತ್ತಿವೆ ಗೋಧೂಳಿಯು ಹೊತ್ತು ತರುವ ನಂಜಿನ ಆ ಮಹಾಮೌನ………..ಸಾಕು ಸಾಕಿನ್ನು ಮುನಿದ ತೋಳುಗಳು ನೀ ಬರುವ ಹರಕೆ ಬಯಸುತ್ತಿವೆ ನೀ ತುಳಿದು ಹೋದ ಅಂಗಳದ ರಂಗವಲ್ಲಿಯೂ ನನ್ನ ಅಣಕಿಸುತಿದೆಈ ಹೊಸ್ತಿಲು ತಲೆಬಾಗಿಲು ನಮ್ಮ ಪ್ರೀತಿ ಸಾರಲು ಯುಗಕೆ ಕನವರಿಸುತ್ತಿವೆ ಪ್ರೇಮಾ ಕಾದ ಎಲ್ಲ ಘಳಿಗೆಗಳಿಗೂ ಪಂಚಭೂತಗಳೇ ಸಾಕ್ಷಿಹೇಳು ಯಾವ ಕಟ್ಟೆ ಕಟ್ಟಲಿ ನೀನಿರದ ಕಣ್ಣೀರು ಈ ಲೋಕಕೆ ಹರಿಯುತ್ತಿವೆ **********************************

Read Post »

ಇತರೆ, ಗಜಲ್ ವಿಶೇಷ

ಗಜಲ್ ಮುರಳಿ ಹತ್ವಾರ್ ಹೊಳೆವ ನೀರ ಮೇಲೆ ಅರಳಿದ ತಾವರೆಯಲ್ಲಿ ನಿನ್ನದೇ ನೆನಪುಸುಳಿವ ತಂಗಾಳಿಗೆ ನಾಚಿ ಸರಿವ ಅಲೆಯಲ್ಲಿ ನಿನ್ನದೇ ನೆನಪು ಶಿಶಿರದಾ ಎಳೆಬಿಸಿಲು ಉಸಿರಿತ್ತು ತೆರೆವ ಚಿಗುರಿನೆಲೆಯಲ್ಲಿಆ ನೆಲೆಯ ಹಕ್ಕಿಗಳ ಚಿಲಿಪಿಲಿಯ ಹಾಡಿನಲ್ಲಿ ನಿನ್ನದೇ ನೆನಪು! ಬಸಿರೊಡೆದ ಮುಗಿಲು ಸುರಿಸುವ ತಿಳಿನೀರ ಹನಿಹನಿಗಳ ಸ್ಪರ್ಶದಲಿಹಸಿರೊಡೆದ ಮನದಿ ಮೂಡುವ ಕಾಮನಬಿಲ್ಲಿನಲ್ಲಿ ನಿನ್ನದೇ ನೆನಪು! ನೆಗೆನೆಗೆದು ಧುಮುಕುತ್ತ ಸರಿಸರಿವ ನದಿಗಳ ಬಳುಕಿನಲ್ಲಿಅಬ್ಬರದ ಅಲೆಗಳಲಿ ದಡವನಪ್ಪುವ ಶರಧಿಯಲ್ಲಿ ನಿನ್ನದೇ ನೆನಪು! ಚಳಿಯೊಡೆವ ಇರುಳುಗಳು ಮಬ್ಬಿಟ್ಟ ನಸುಕಿನ ಮಂಜಿನಲಿರಾಧೆಯ ನೆನೆನೆನೆದು ಮೆರೆವ ಮುರಳಿಯ ಗಾನದಲ್ಲಿ ನಿನ್ನದೇ ನೆನಪು! ಮತ್ತೆ ಬೇಕೆನಿಸಿದೆ…! ತಂಪು ಕನ್ನಡಕಗಳ ಹೊಳಪಿಸಿದ ಆ ಕಿರಣಗಳು ಮತ್ತೆ ಬೇಕೆನಿಸಿದೆಕನಸಿನ ಹೊದಿಕೆಗಳಲಿ ಅರಳಿದ ಆ ಕನಸುಗಳು ಮತ್ತೆ ಬೇಕೆನಿಸಿದೆ ಅಮ್ಮನ ಕೈತುತ್ತು ಅಪ್ಪನ ಕೈ ಬೆರಳು ಬರೆಸಿ ಬೆಳೆಸಿದ ಆ ಹೆಜ್ಜೆಯ ಗುರುತುನಡೆದ ದಾರಿಯ ಅಡಿಅಡಿಗೆ ನೆರಳಿತ್ತ ತಂಪಿನ ಮರಗಳು ಮತ್ತೆ ಬೇಕೆನಿಸಿದೆ ಚಿಗುರೊಡೆದ ಮೀಸೆಯ ಹರೆಯ ಚುಂಬಿಸಲು ನಾಚಿದ ಸವಿ ಹೃದಯಯೌವನದ ದಿನಗಳ ಶೃಂಗರಿಸಿದ ಆ ಗೆಳೆತನಗಳು ಮತ್ತೆ ಬೇಕೆನಿಸಿದೆ ಉರಿ ಬಿಸಿಲ ಕ್ಷಣಗಳ ಪ್ರಯಾಣ ಕೆಲವೊಮ್ಮೆ ನಮ್ಮೀ ಜೀವನ ಯಾನಮೈಮರೆಸಿ ತಣಿಸುವ ಅಮೃತ ಗಾನದ ಆ ಮುರಳಿಯ ಕೊರಳು ಮತ್ತೆ ಬೇಕೆನಿಸಿದೆ! ******************

Read Post »

ಇತರೆ, ಗಜಲ್ ವಿಶೇಷ

ಗಜಲ್ ಸುಜಾತಾ ರವೀಶ್ ನೆಲವ ನೋಡುತ ನಡೆಯಲು ಒಲವು ಪದವಾಗಿ ಇಳಿಯಿತಲ್ಲ ಗೆಳೆಯಾಛಲವ ಬಿಡುತ ಸಾಗಿರಲು ನಲಿವು ಹದನಾಗಿ ಉಳಿಯಿತಲ್ಲ ಗೆಳೆಯಾ ಬಲವ ತೋರಲು ಬದುಕಿದು ಗೆಲುವು ಕಾಣುವುದು ತೋರಿಕೆಯಲಿ ಮಾತ್ರನಿಲುವ ಬದಲು ಮಾಡಿರಲು ಜಗವು ಸೊಗವೆಂದು ತಿಳಿಯಿತಲ್ಲ ಗೆಳೆಯಾ ಹಮ್ಮಿನ ಪರದೆ ಸುತ್ತೆತ್ತಲೂ ಧಿಮ್ಮನೆ ಕವಿಯುತ ಮಂಜಾಯಿತೇಕೆ ದೃಷ್ಟಿ ಬಿಮ್ಮನು ತೊರೆದು ವರ್ತಿಸಲು ಘಮ್ಮನೆ ಪರಿಮಳ ಸುಳಿಯಿತಲ್ಲ ಗೆಳೆಯಾ ಎಳವೆ ಕಲಿಸಿದ ರಾಗಗಳ  ಆಲಾಪ ಮರೆತರೆ ಪ್ರಬುದ್ದರಾದಂತೆಯೇಸುಳಿವೆ ಕಾಣಿಸದೆ ನೋವುಗಳ ಪ್ರಲಾಪ ಜೀವನದಿ ಅಳಿಯಿತಲ್ಲ ಗೆಳೆಯಾ ಅಧ್ಯಾತ್ಮ ಅರಸಿದ ಸುಜಿಮನ ಸಂತೋಷ ಹೊಂದುತ ಶಾಂತವಾಗಿಹುದುತಾಧ್ಯಾತ್ಮ ತಿಳಿಯಲಿ ತೇಲುತಲಿ ಸಂತೃಪ್ತಿ ಬಾಂಧವ್ಯ ಬೆಳೆಯಿತಲ್ಲ ಗೆಳೆಯಾ ***************************** ಜಗದ ಕನ್ನಡಿಯಲ್ಲಿ ಎದೆಯ ಪ್ರತಿಬಿಂಬವ ಕಾಣದಾದೆಯಾ ಮನದ ಮಂಟಪದಲ್ಲಿ ಪ್ರೀತಿಯ ಪ್ರತಿರೂಪ ನೋಡದಾದೆಯಾ   ಮಗುವ ಹೃದಯದಲಿ ಇರದು ದ್ವೇಷಾಸೂಯೆ ಕಲ್ಮಶಗಳು ನಗುವ ಪರಿಮಳದೆ ಇಳೆಯ ಸುಗಂಧಮಯ ಮಾಡದಾದೆಯಾ  ಮನಸು ಮನಸುಗಳ ನಡುವೆ ಅಹಂನ ಬೇಲಿ ಕಟ್ಟಿದವರ್ಯಾರು? ಕನಸು ನನಸುಗಳ ಚೆಲ್ಲಾಟಕ್ಕೆ ಪೂರ್ಣವಿರಾಮ ಕೊಡದಾದೆಯಾ  ಕಲ್ಪನೆ ವಾಸ್ತವಗಳ ಪರಿಧಿಯಂಚಿಗೆ ಲಕ್ಷ್ಮಣರೇಖೆ ಎಳೆದವರಾರು? ಭಾವನೆ ಸ್ಪಂದನೆಗಳ ಸವಿಪ್ರಸಾದದ ರಸದೌತಣ ನೀಡದಾದೆಯಾ  ರಾಜಿಯ ಪ್ರಸಕ್ತಿ ಬರದ ಹಾಗಿಂತು ನಿಷ್ಠುರನಾಗಿ ನಡೆಯಬೇಡ ಸುಜಿಯ ಜೀವನ ನಿನಗಾಗಿಯೇ ಎಂದರಿತಿದ್ದರೂ ಬೇಡದಾದೆಯಾ  ******************************

Read Post »

ಇತರೆ, ಗಜಲ್ ವಿಶೇಷ

ಅಂಕಣ ಗಜಲ್ ಜಯಶ್ರೀ.ಭ. ಭಂಡಾರಿ. ಸರಿದು ಹೋಯ್ತು ಮತ್ತೊಂದು ಪ್ರೇಮಿಗಳ ದಿನಮರೆಯಲಾರೆ ನಾವಿಬ್ಬರೂ ಸಂಧಿಸಿದ ಆ ಸುದಿನ ಸಖನೇ ಜೋರಾದ ಮಳೆ ಅಬ್ಬರಕ್ಕೆ ನಡುಗಿ ನಿಂತಿದ್ದೆ ಮರದ ಕೆಳಗೆಸರಿ ಸಮಯಕೆ ಹಿತವಾಗಿ ಬಂದು ತುಂಬಿ ನಿಂತೆ ಮೈಮನ ಸಖನೇ ಪ್ರೀತಿ ದೇವನಿಟ್ಟ ವರ ಅದಕೆ ನೀ ನನಗೆ ದಕ್ಕಿದೆ ನೀ ನಿಟ್ಟೆ ಹಣೆಗೆ ಚುಕ್ಕಿ ಅದಕೆ ಸಲ್ಲಿಸುವೆ ದೇವಗೆ ನಮನ ಸಖನೇ ಪ್ರತಿ ಬಾರಿ ಈ ದಿನ ನಮ್ಮದೆ ಗುಲಾಬಿಯಲಿ ರಂಗಾಗಲುಹೊಸ ಚೈತನ್ಯ ತುಂಬಿ ಬರುತಿರಲು ಒಲವ ಗಾನ ಸಖನೇ. ನೋವು ನಲಿವುಗಳನ್ನು ಸಮನಾಗಿ ಸ್ವೀಕರಿಸುವ ನಾವುಬದುಕು ಬಂಡಿಯಲಿ ಅಪರಂಜಿಗಳಾಗಿ ಮಾದರಿಯಾಗೋಣ ಸಖನೇ ಪ್ರೇಮಿಗಳು ನಾವು ಪ್ರತಿದಿನ ಪ್ರತಿಕ್ಷಣ ಸಾಂಗತ್ಯದಲ್ಲಿಒಂದೆ ದಿನದ ಆಚರಣೆ ಬೇಕಿಲ್ಲ ಈ ಜಯಳಿಗೆ ಸದಾ ನಿನ್ನದೇ ಧ್ಯಾನ ನಿಶಾಪಾನ ಸಖನೇ ನೀನಗೇಕೆ  ಅರಿವಾಗುತ್ತಿಲ್ಲ ನನ್ನ ಒಲವು ಮೌನವೇನೀ ಹೀಗೆ ಮರೆತು ಕುಳಿತರೆ ಹೇಗೆ ಮೌನವೇ. ಮನಸಿನಾಳಕಿಳಿದ ಈ ಪ್ರೀತಿ ಕೇವಲ ನೆಪವೇನೋಡಿದಾಗಲೆಲ್ಲ ಹತ್ತಿರ ಬರ್ತಿದ್ದೆ ಮೌನವೇ. ನೀ ಮೀಟಿದೆ ಹೃದಯದಿ ಹಿತವಾದ ನೆನಪೇಅಳುಕಿಸಲಾರದು ಯಾವ ಶಾಯಿ ಮೌನವೇ ಪ್ರೇಮಿಗಳು ನಾವು ಮರೆಯದಿರು ಜೀವವೇ.ಅನುರಾಗವಿದು ದುಡುಕಿ ದೂರಾಗದಿರು ಮೌನವೇ. ನೀನಿರದ ಸಂಭ್ರಮ ಯಾತಕೆ ಮನವೇಎಂದಿಗಾದರೂ ಬಾ ಒಪ್ಪಿಕೊಳ್ಳುವೆ ಮೌನವೇ.. ಮೌನ ಮಾತಾಗಿ ಬಾ ಪ್ರೇಮ ಬೊಕ್ಕಸವೇನೋವು ಮರೆತು ಮುತ್ತಾಗೋಣ ಮೌನವೇ. ಜೀವನವೆಂಬ ಜೋಕಾಲಿ ಜೀಕೋಣ ಸಖನೇಸುಖವೆನೆಂದು ಅರಿತು ಬೆರೆತು ಬಾಳೋಣ ಮೌನವೇ ನೆಪವೆಂದು ಹೇಳಿ ತಲ್ಲಣಿಸದಿರು ದೊರೆಯೇದೊರೆಸಾನಿ ಜಯಳಿಗೆ ನಿನ್ನೊಲುಮೆ ನೀಡು ಮೌನವೇ. ******************************

Read Post »

You cannot copy content of this page

Scroll to Top