ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಗಜಲ್

ಸ್ಮಿತಾ ಭಟ್

ಸ್ಮಿತಾಭಟ್ ಕಾವ್ಯಗುಚ್ಛ

pink and green flower painting

ಬೇಕೋ ಬೇಡವೋ ಈ ಬದುಕನ್ನು ನಡೆದೇ ಮುಗಿಸಬೇಕಿದೆ.
ಕಾಲದ ಕಡುದಾರಿಯ ಕಳವಳಿಸದೇ ಮುಗಿಸಬೇಕಿದೆ

ಉಯ್ಯಾಲೆ ಕಟ್ಟಿದ ರೆಂಬೆಯ ಮೇಲೆ ಅದೆಷ್ಟು ನಂಬಿಕೆ
ಎರಗುವ ನಸೀಬನ್ನು ಎದೆಗುಂದದೇ ಮುಗಿಸಬೇಕಿದೆ.

ಸುತ್ತಿ ಬಳಸುವ ದಾರಿಯಲಿ ಕಾಲಕಸುವು ಕಳೆಯದೇ ಇರದು
ಸಿಗದ ನೂರು ಬಯಕೆ ಕನಸನು ಕೊರಗದೇ ಮುಗಿಸಬೇಕಿದೆ.

ಮೋಡ ಎಲ್ಲವನ್ನೂ ಶೂನ್ಯಗೊಳಿಸುವುದು ಕೆಲವೊಮ್ಮೆ
ಮೆತ್ತಿಕೊಳ್ಳುವ ನೋವನು ಅಳುಕದೇ ಮುಗಿಸಬೇಕಿದೆ.

ಹಿಂತಿರುಗಿದಾಗ ಎಷ್ಟೊಂದು ಏರಿಳಿತಗಳು ಬದುಕಿಗೆ
ಯಾವ ಕಹಿಯನೂ ಉಳಿಸಿಕೊಳ್ಳದೇ ಮುಗಿಸಬೇಕಿದೆ.

ರೆಕ್ಕೆ ಕಟ್ಟಿಕೊಂಡಾಗ ಜಗವದೆಷ್ಟು ಸೋಜಿಗ “ಮಾಧವ”
ಈ ಖುಷಿಗೆ ಯಾರ ಹಂಗು,ವಿಷಾದವಿರದೇ ಮುಗಿಸಬೇಕಿದೆ

*******************************

About The Author

2 thoughts on “ಗಜಲ್”

Leave a Reply

You cannot copy content of this page

Scroll to Top