ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಒಲವಿನೋಲೆ..

man and woman kissing

ಜಯಶ್ರೀ.ಭ. ಭಂಡಾರಿ

ಓ ಒಲವೇ ನೀ ಎಲ್ಲಿರುವೆ….

ನೀ ನನ್ನ ಹುಡುಕಿಕೊಂಡು ಬಂದು ಆಗಲೇ ೨ ವರ್ಷ ಕಳೆಯಿತು. ನೀ ಬಂದಾಗ ನನಗೆ ನಿನ್ನ ಮೇಲೆ ಅದ್ಯಾವ ಭಾವನೆ ಗಳೇ ಇರಲಿಲ್ಲ. ಈಗ ನಾನು ಈ ಭೂಮಂಡಲಕ್ಕಿಂತ ಹೆಚ್ಚು ಪ್ರೀತಿಸುತ್ತೇನೆ.  ಪ್ರತಿಕ್ಷಣ ನಿನ್ನ ಬಿಟ್ಟರೆ ಹರಿದಾಡುವ ಗಾಳಿಗೂ ಜಾಗವಿಲ್ಲ. ನನ್ನ ಬಾಳಿನ ಕಗ್ಗತ್ತಲು ಬೆಳಗಲು ನೀನೇ ಬೇಕು. ಅತಿಯಾದ ಪ್ರೀತಿಯಲ್ಲಿ ನನ್ನ ನಾ ಮರೆತಿಹೆ.ನೀನಿಲ್ಲದ ಹೊತ್ತು ನೆನೆಯಲು ಸಾಧ್ಯವಿಲ್ಲ. ನಿನ್ನಲ್ಲಿ ಒಂದು ಕೆಟ್ಟ ಹಾಬಿ ಇದೆ.ಡ್ಯೂಟಿಯಲಿ ನಿರತನಾದರೆ ನನ್ನ ಮರೆತು ತನ್ಮಯನಾಗಿ ಬಿಡತಿ. ಅನೇಕ ಸಲ ಫೋನಾಯಿಸಿದರೂ ರಿಸಿವ್ ಮಾಡಲ್ಲ.  ನಾನು ಸಿಟ್ಟಿನಿಂದ ಮುಖ ಉಬ್ಬಿಸಿ ಕೂತರೆ ಸಂಜೆ ನೇರ ಬಂದವನೇ ಕೊರಳಿಗೆ ಬೆರಳಹಾರ ಹಾಕಿ ಕೆನ್ನೆ ಚುಂಬಿಸಿ  ನಿನ್ನ ಬೆವರು ಘಮಲಿನಲ್ಲಿ ಮೀಯಿಸಿ ಬುಟ್ಟಿಗೆ ಹಾಕಿಕೊಳ್ಳುವ ಕಲೆ ಕರಗತವಾಗಿದೆ. ಹೀಗಾಗಿ ನನ್ನ‌ ಸಿಟ್ಟು ಗಾಳಿಗಿಟ್ಪ ದೀಪದಂತೆ ಆಗುತ್ತದೆ. ಅಪ್ಪಾಜಿ ಪ್ಲೀಜ್ ಕ್ಷಮಿಸು ಅಂತ ನನ್ನ ಮುದ್ದು ಮಾಡುವಾಗ ನನಗೆ ಸಿಟ್ಟಿನಲ್ಲಿಯೇ ಒಲವು ಹೆಚ್ಚು ಲವಲವಿಕೆ ನೀಡುತ್ತದೆ. ಚಿನ್ನದ ಮಲ್ಲಿಗೆ ಹೂವೆ ಬಿಡು ನೀ ಬಿಂಕದ ಚೆಲುವೆ ಎಂದು ರಾಗವಾಗಿ ಹಾಡುವ ನಿನ್ನ ದನಿಗೆ ಸೋತು ಶರಣಾಗಿ ಬಿಡುವೆ. 

    ನನಗೆ ಕೊಂಚ ಆರಾಮ ತಪ್ಪಿದರೂ ನಿನ್ನ ಜೀವ ಬಾಡಿ ಬಸವಳಿಯುತ್ತೆ.   ಅತಿಯಾದ ಕಾಳಜಿ ಮಾಡಿ ನನ್ನ ಆರಾಮ ಮಾಡುವೆ.  ಕಣ್ಣ ರೆಪ್ಪೆಯಂತೆ ಕಾಯುವ ನಿನ್ನ ಹೃದಯ ಅನುರಾಗಕೆ ಬಣ್ಣಿಸಲು ಪದಗಳೇ ಇಲ್ಲ ಗೆಳೆಯ. ಟೆಲಿಫೋನ್ ಗೆಳತಿ ನೀನಿಲ್ಲದೆ ಇರಲಾರೆ ಎಂದು ಛೇಡಿಸಿ ಕಾಡುವ ನೀ ಹಿಂಗ ಅಚಾನಕ್  ದೂರಾಗಿ ಹೋಗತಿ ಅಂದುಕೊಂಡಿರಲಿಲ್ಲ ಗೆಳೆಯಾ..

.

ಯಾಕೆ ‌ದೂರಾದೆ ಏನಾಯ್ತು ನಿನ್ನ  ಒಲವು. ಬೊಗಸೆ ಕಂಗಳ ನಿನ್ನ ಗೆಳತಿಯನ್ನು ಮರೆಯಲು ನಾ ಮಾಡಿದ ತಪ್ಪಾದರೂ ಏನು? ನೀನಿಲ್ಲದೆ ಅರೆ ಜೀವವಾಗಿರುವೆ. ಚಂದ್ರನ ತಂಪು ಬಿಸಿಲಾಗಿದೆ.ಸುಳಿಯುವ  ಗಾಳಿಯಲೂ ನಿನ್ನನೇ ಹುಡುಕುವಂತಾಗಿದೆ. ನೀನಿಲ್ಲದೆ ಈ ಜನ್ಮದಲ್ಲಿ ನನಗೆ ಬದುಕುವ ಆಸೆಯಿಲ್ಲ.

ನಿನ್ನ ಸಾನ್ನಿಧ್ಯ, ಆಲಿಂಗನ, ಬಿಸಿಯುಸಿರು ಆ ಮಿಂಚು ಕಂಗಳಲ್ಲಿ ವ್ಯಕ್ತವಾಗುವ ಮಾತು ಗಳಿಗೆ ಮೀರಿದ ಭಾವನೆಗಳನ್ನು ಹೆಂಗೆ ಮರೆಯಲಿ ದೇವರಂಥ ಗೆಳೆಯಾ… ವರ್ಷ ದ ಮೂರೂ ಕಾಲಗಳಲ್ಲಿಯೂ ಧೋ ….. ಎಂದು ಒಲವಿನ ಮಳೆ ಸುರಿಸುತ್ತಿದ್ದರೆ  ಈ ನಿನ್ನ ಗೆಳತಿ ಪುನೀತಳಾಗಿ ಅರಳುತ್ತಿದ್ದಳು.

ಪ್ರೀತಿಯ ಅಮೃತಧಾರೆ ಉಣಿ‌ಸಿ ದೂರ ಹೋದೆ. ನೀ ಬರುವ ದಾರಿಯಲಿ ಕಂಗಳ ಹಾಸಿ ಕಾಯುತಿರುವ….. 

ನಿನ್ನ ಕಪ್ಪು ಕಂಗಳ ಚೆಲುವೆ…

****************************************

About The Author

Leave a Reply

You cannot copy content of this page

Scroll to Top