ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಗಜಲ್

ಶ್ರೀ ಲಕ್ಷ್ಮಿ ಅದ್ಯಪಾಡಿ

Woman with flowers. Woman with purple flowers. Focus on flowers royalty free stock photography

ನಿನ್ನ ಉಸಿರ ರಾಗಕ್ಕಾಗಿ ಹುಡುಕಾಡುತ್ತಿರುವೆ
ನಿನ್ನ ಒಲವ ಪಿಸುನುಡಿಗಾಗಿ ಹುಡುಕಾಡುತ್ತಿರುವೆ..

ಕದ್ದು ನೋಡುವ ಸಾವಿರಾರು ಕಣ್ಣುಗಳ ನಡುವೆ
ನಿನ್ನ ಪ್ರೇಮದ ನೋಟಕ್ಕಾಗಿ ಹುಡುಕಾಡುತ್ತಿರುವೆ..

ನನ್ನ ಕುಡಿ ನೋಟಕ್ಕೆ ಕಾದಿವೆ ನೂರು ಭ್ರಮರಗಳು
ಕೆನ್ನೆ ಸವರಿದ ಪುಟ್ಟ ಹೂವಿಗಾಗಿ ಹುಡುಕಾಡುತ್ತಿರುವೆ..

ಬಣ್ಣಗಳಲ್ಲಿ ಅದ್ದಿದ ಸಾವಿರ ಕುಂಚಗಳು ಕಾದಿವೆ
ನಿನ್ನ ನೆನಪಿನ ಒಂದು ರೇಖೆಗಾಗಿ ಹುಡುಕಾಡುತ್ತಿರುವೆ

ಜಗದ ಬನದೊಳು ಅರಳಿವೆ ವಿಧವಿಧವಾದ ಹೂಗಳು
ಒಡಲ ಕಂಪು ಸೂಸಿದ ಕಸ್ತೂರಿಗಾಗಿ ಹುಡುಕಾಡುತ್ತಿರುವೆ

*****************************

About The Author

Leave a Reply

You cannot copy content of this page

Scroll to Top