ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಕೆಂಚಬೆಕ್ಕಿಗೆ ಏನಾಯ್ತು ವಿಜಯಶ್ರೀ ಹಾಲಾಡಿ ಕೆಂಚಬೆಕ್ಕಿಗೆ ಏನಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಗಡಗಡ ಚಳಿಗೆ ಬಿಸಿ ಬಿಸಿ ಬೋಂಡಾ ಪಾಕಂಪಪ್ಪನು ತಿಂದಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಇರುವೆ ಸಾಲನು ಹಾ….ರಿ ನೆಗೆದು ಪುಟ್ಟಿಯ ಮನೆಗೆ ಬಂದಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಮೀನಿನ ಮುಳ್ಳು ದೊಂಡೆಗೆ ಸಿಕ್ಕಿ ಕೆಮ್ಮಿ ಕೆಮ್ಮಿ ಸುಸ್ತಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಗಡವ ಬೆಕ್ಕು ಹೊಯ್ ಕಯ್ ಮಾಡಿ ಕಾಲಿನ ಮೂಳೆ ಮುರಿದಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಟ್ರಾಫಿಕ್ ಜಾಮಲಿ ರಸ್ತೆಯ ಕಾದು ಬೋರೂ ಬೋರು ಹೊಡೆದಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ನೆತ್ತಿಗೆ ಸಿಟ್ಟು ಸರ್ರನೆ ಏರಿ ಬಾಗಿಲು ಜಡಿದು ಮಲಗಾಯ್ತು.. ********************

ಕಾವ್ಯಯಾನ Read Post »

ಕವಿತೆ ಕಾರ್ನರ್

ಕವಿತೆ ಕಾರ್ನರ್

ನಕ್ಷತ್ರದಂತವಳನ್ನು ಪ್ರೀತಿಸಿದ ಕವಿಯ ಕಥೆ ಕು.ಸ.ಮದುಸೂದನ ನಕ್ಷತ್ರದಂತವಳನ್ನು ಪ್ರೀತಿಸಿದ ಕವಿಯ ಕಥೆ! ನಕ್ಷತ್ರದಂತವಳನ್ನು ಪ್ರೀತಿಸಿದ ಕವಿಯ ಕಥೆ! ಬರೆಸಿಕೊಳ್ಳಲು ಕವಿತೆ ಒಪ್ಪದಿದ್ದಾಗ ಗದ್ಯದತ್ತ ಮುಖ ಮಾಡಲು ಮನಸು ಒಲ್ಲೆಂದಾಗಲೆಲ್ಲ ಅವನು ಮಾಡುತ್ತಿದ್ದುದು ಒಂದೇ ಕೆಲಸ ಅವಳಿಗೆ ಪ್ರೆಮಪತ್ರಗಳನ್ನು ಬರೆಯುತ್ತಿದ್ದು. ಅವನೇನು ಆ ಪತ್ರಗಳನ್ನು ಪ್ರಿಯೆ ಎಂದೊ ಇಲ್ಲಾ ಅವಳ ಹೆಸರಿನಿದಲೋ ಶುರು ಮಾಡುತ್ತಿರಲಿಲ್ಲ ಪ್ರತಿ ಪತ್ರವೂ ಹಿಂದಿನ ಪತ್ರದ ಮುಂದುವರಿಕೆಯಂತಿರುತ್ತಿತ್ತು ಅಲ್ಲಿಯೂ ಅವನೇನು ಅವಳನ್ನು ಚಿನ್ನ ರನ್ನ ಎಂದು ಮುದ್ದಿಸುತ್ತಿರಲಿಲ್ಲ. ಕಳೆದ ರಾತ್ರಿಯ ತನ್ನ ಒಂಟಿತನದ ಬಗ್ಗೆ, ಈಗೀಗ ಹೆಚ್ಚುಹಣವಿಲ್ಲದ್ದರಿಂದ ತಾನು ತರುತ್ತಿರುವ ಅಗ್ಗದ ಮದ್ಯದಬಗ್ಗೆ ಅದೂ ಕಲಬೆರಕೆಯಾಗುತ್ತಿರುವ ಬಗ್ಗೆ ಈಗ ತಾನಿರುವ ಮನೆಯ ಕೋಣೆಗಳಿಗೆ ತಿಳಿಗುಲಾಬಿಯ ಬಣ್ಣ ಬಳಿಸಿ ನವೀಕರಣಗೊಳಿಸುತ್ತಿರುವ ಬಗ್ಗೆ ಅಂಗಳದ ತುಂಬೆಲ್ಲ ಗುಲಾಬಿಹೂಗಳ ಹೊಸ ಹೂಕುಂಡಗಳ ತಂದಿಡುವ ತನ್ನ ಯೋಜನೆಗಳ ಬಗ್ಗೆ ಅದಕ್ಕಾಗಿಯೇ ತಾನು ಸ್ವಲ್ಪಸ್ವಲ್ಪ ಹಣ ಉಳಿಸುತ್ತಿರುವ ಬಗ್ಗೆ ಈ ದಾವಂತದಲ್ಲಿ ಎಷ್ಟು ಕುಡಿದರೂ ಏರದ ನಿಶೆಯ ಬಗ್ಗೆ ತಾನು ಬರೆಯಲಿಚ್ಚಿಸಿದ್ದ ಅವಳ ಮೇಲಿನ ಅದೊಂದು ಅದ್ಬುತ ಪ್ರೇಮಕಾವ್ಯದ ಬಗ್ಗೆ ಪ್ರತಿಬಾರಿ ಅದನ್ನು ಪ್ರಾರಂಭಿಸಲು ಹೊರಟಾಗಲು ತನ್ನದೇ ಸಾವಿನ ಚರಮಗೀತೆಯ ಸಾಲುಗಳು ಮೂಡಿ ತಾನು ಗಲಿಬಿಲಿಗೊಳ್ಳುವುದರ ಬಗ್ಗೆ ಮತ್ತು ಮುಂದೊಂದು ದಿನ ಅಜರಾಮರವಾಗಿರಬಹುದಾದ ಪ್ರೇಮ ಕಾವ್ಯವ ಬರೆದು ಅವಳಿಗರ್ಪಿಸುವ ತನ್ನ ಕನಸಿನ ಬಗ್ಗೆ ಬರೆಯುತ್ತ ಹೋಗುತ್ತಿದ್ದ. ಹೀಗೆ ಎಷ್ಟೋ ವರುಷಗಳ ಕಾಲ ಅವನು ಬರೆಯುತ್ತಲೇ ಹೋದ ಪತ್ರಗಳ ಲಕೋಟೆಯೊಳಗಿಟ್ಟು ಅಂಚೆಗೂ ಹಾಕದೆ ತನ್ನ ಕೋಣೆಯ ಕಪಾಟಿನಲ್ಲಿ ಜೋಡಿಸಿಡುತ್ತಲೇ ಹೋದ. ಅದೊಂದು ದಿನ ಅವನು ಸತ್ತಾಗ ಅಂತ್ಯಕ್ರಿಯೆ ಮಾಡಲು ಅವನ ಬಂದುಗಳು ಯಾರೂ ಇಲ್ಲವೆಂದಾದಾಗ ಸದ್ಯ ಅವನನ್ನು ಸುಡಲು ಸೌದೆಗೆ ಹಣವನ್ನು ಸರಕಾರ ಖರ್ಚು ಮಾಡಬೇಕಿಲ್ಲವಲ್ಲ ಎಂದುಕೊಂಡ ನಗರಸಭೆಯ ಅಧಿಕಾರಿಗಳು ಸಮಾದಾನದ ನಿಟ್ಟುಸಿರು ಬಿಟ್ಟರು ಈಗಲೂ ಅವನ ಪಕ್ಕದ ಊರಿನ ಅಂಚೇ ಕಚೇರಿಗೆ ಪ್ರತಿನಿತ್ಯ ಬಂದು ನಿಲ್ಲುವ ಅವಳು ನನಗೇನಾದರು ಕಾಗದವಿದೆಯೇ? ಎಂದು ಅಂಚೆಯವನನ್ನು ಕೇಳಿ ನಿರಾಸೆಯಿಂದ ತಲೆತಗ್ಗಿಸಿ ಹೋಗುತ್ತಾಳೆ. ******** ..

ಕವಿತೆ ಕಾರ್ನರ್ Read Post »

ಕಥಾಗುಚ್ಛ

ಕಥಾಯಾನ

ಗೂಡು ಕು.ಸ.ಮ. ಗೂಡು ಅದೊಂದು ಸಾದಾರಣವಾದ ಕೆಂಪು ಹೆಂಚಿನ ಮನೆ. ಇತ್ತ ದೊಡ್ಡದೂ ಅಲ್ಲ,ಅತ್ತ ಚಿಕ್ಕದೂ ಅಲ್ಲ,ಅಂತಹುದು. ಮನೆಯ ಮುಂದೆ ಒಂದಷ್ಟು ದಾಸವಾಳ,ಕಣಗಿಲೆ.ನೀಲಿ ಗೊರಟೆ ಹೂವಿನ ಗಿಡಗಳು. ಪುಟ್ಟ ಕಾಂಪೋಂಡ್,ಹಿತ್ತಲಲಿ ಬಟ್ಟೆ ತೊಳೆಯುವ ಕಲ್ಲು,ಒಂದು ನುಗ್ಗೆ ಮರ,ಬಚ್ಚಲು ನೀರು ಹೋಗುವ ಚರಂಡಿಗೆ ಹೊಂದಿಕೊಂಡಂತೆ ಹರಡಿಕೊಂಡ ಬಸಳೆ ಬಳ್ಳಿ. ಆ ಮನೆಯಲ್ಲಿ ಇದ್ದವರು ಇಬ್ಬರೆ,ಅವನು-ಅವಳು. ಅವರ ಮದುವೆಯಾಗಿ ಎರಡು ವರ್ಷವಾಗಿತ್ತು.ಪ್ರಶಾಂತವಾಗಿ ಹರಿಯುವ ನದಿಯಂತೆ ಬದುಕು ಸಾಗುತ್ತಿತ್ತು.ಅವನು ಬೆಳಿಗ್ಗೆ ಬೇಗಗ ಏಳುತ್ತಿದ್ದ.ತಣ್ಣೀರ ಸ್ನಾನ ಮಾಡಿ ಅಂಗಳದ ಗಿಡಗಳಿಂದ ಹೂ ಬಿಡಿಸಿ ತಂದು ದೇವರ ಗೂಡಿನ ಪಟಗಳಿಗಿಟ್ಟು, ಗಟ್ಟಿಯಾಗಿ ಮಂತ್ರ ಹೇಳುತ್ತ ಪೂಜೆ ಮಾಡುತ್ತಿದ್ದ. ಅಷ್ಟರಲ್ಲವಳು ಬಚ್ಚಲು ಹಂಡೆಗೆ ಉರಿಹಾಕಿ,ಕಾಫಿಗಿಟ್ಟು ಕೆಲಸ ಶುರು ಮಾಡುತ್ತಿದ್ದಳು. ತಿಂಡಿ ತಿಂದವನು ಕ್ಯಾರಿಯರ್ ಹಿಡಿದು ಆಫೀಸಿಗೆ ಹೊರಟರೆ ಅವಳಿಗೆ ನಿರಾಳ. ಕೆಲಸವೆಲ್ಲ ಮುಗಿಸಿ, ಹಿತ್ತಲಿನ ನುಗ್ಗೆಮರದ ಕೆಳಗೆ ಕುಳಿತು ಕತೆ ಪುಸ್ತಕದೊಳಗೊ ಅಥವಾ ತವರಿನ ನೆನಪೊಳಗೊ ಮುಳುಗುತ್ತಿದ್ದಳು ಆ ನೆನಪುಗಳೊಳಗೆ ಸುಖವಿತ್ತು.ತವರು ಮನೆಯ ಹಿತ್ತಲಿಗೆ ಆತುಕೊಂಡಂತೆ ಹರಿಯುತ್ತಿದ್ದ ಭದ್ರಾ ನದಿ,ವಿಶಾಲವಾದ ಮನೆಯಂಗಳದಲ್ಲಿನ ಮಾವಿನ ಮರ,ಸಂಪಿಗೆಮರ,ಸೀಬೆಮರ, ತೂಗುಹಲಗೆ ಉಯ್ಯಾಲೆ,ಕಾಡು ಗಿಡಗಳಪೊದೆ,ಮಲ್ಲಿಗೆ ಹಂದರ,ಎಲ್ಲ ಅಂದರೆ ಎಲ್ಲ ನೆನಪಾಗಿ ಕಾಡುತ್ತಿದ್ದವು! ಅವಳಿಗೆ ಮಾತು ಬೇಕಿತ್ತು. ಯಾವಾಗಲೂ ಗಲಗಲ ಅನ್ನುವ ಜನರು ಸುತ್ತ ಇರಬೇಕು ಅನಿಸುತ್ತಿತ್ತು. ಸೃಷ್ಠಿಯ ಪ್ರತಿ ವಸ್ತುವಿನಲ್ಲೂ ಅವಳಿಗೆ ಅಧಮ್ಯ ಕುತೂಹಲ. ಅವಳು ಎಲ್ಲವನ್ನೂ,ಎಲ್ಲರನ್ನೂ ಪ್ರೀತಿಸುತ್ತಿದ್ದಳು.ಅವನು ಆಫೀಸಿಗೆ ಹೋದ ತಕ್ಷಣ ಮನೆಯ ೆಲ್ಲ ಕಿಟಕಿ-ಬಾಗಿಲುಗಳನ್ನು ತೆರೆದು ಒಳಬರುತ್ತಿದ್ದ ಸೂರ್ಯನ ಬೆಳಕಿನಲ್ಲಿ ಮೀಯುತ್ತ,ಹಿತವಾದ ಗಾಳಿಗೆ ಮೈಯೊಡ್ಡಿ ಕನಸು ಕಾಣುತ್ತಿದ್ದಳು.. ಆದರವನು ಇದಕ್ಕೆ ತದ್ವಿರುದ್ದ. ಮೊದಲಿನಿಂದಲೂ ಅವನು ಮಿತಬಾಷಿ. ಆಡಿದರೂ ಅಗತ್ಯವಿದ್ದಷ್ಟು. ತನ್ನ ಆಫೀಸು,ಬೆಳಗಿನ ಪೂಜೆ,ಸಂಜೆಯ ಸಂಧ್ಯಾವಂದನೆಗಳಲ್ಲಿ ಕಳೆದು ಹೋಗುತ್ತಿದ್ದ. ರಜಾದಿನಗಳಲ್ಲಿ ಮನೆಯ ಎಲ್ಲ ಕಿಟಕಿ ಬಾಗಿಲುಗಳನ್ನು ಹಾಕಿಕೊಂಡು ಒಳಗಿನ ಧಗೆಯಲ್ಲಿ ಬೇಯುತ್ತಲೇ ನಿರಾಳವಾಗಿ ರಾಮಕೃಷ್ಣಪರಮಹಂಸರ ಪುಸ್ತಕಗಳನ್ನೊ ಭಗವದ್ಗೀತೆಯ ಸಾರವನ್ನೋ ಓದುತ್ತ ಕೂರುತ್ತಿದ್ದ. ಅವರಿಬ್ಬರೂ ಎರಡು ದೃವಗಳಾಗಿದ್ದರು. ಅವಳಿಗೆ ಅವನ ಬಗ್ಗೆ ವಿಚಿತ್ರ ಕುತೂಹಲ: ಅವನ ದೇವರ ಪೂಜೆ,ಆ ತನ್ಮಯತೆ,ಅಂತರ್ಮುಖತನ,ಪಾಪ-ಪುಣ್ಯಗಳ ಸ್ವರ್ಗ ನರಕಗಳ ಬಗೆಗಿನ ಅಪಾರ ನಂಬಿಕೆಗಳನ್ನು ಕಂಡು ಆಶ್ಚರ್ಯ! ಅವನಿಗೆ ಸಣ್ಣಪುಟ್ಟ ವಿಷಯಗಳಲ್ಲೂ ಅವಳು ಪಡೆಯುತ್ತಿದ್ದ ಸುಖದ ಬಗ್ಗೆ ತಿರಸ್ಕಾರ.ಅವಳ ಅತಿಯೆನಿಸುವಷ್ಟು ಪ್ರೀತಿ,ಜೋರಾಗಿ ಮಾತನಾಡಿದರೆ ಸಾಕು, ಕಣ್ಣು ತುಂಬಿ ಬರುವ ಸೂಕ್ಷ್ಮತೆ ಕಂಡು ಬೇಸರ. ಇಷ್ಟಿದ್ದರೂ ಅವರ ನಡುವೆ ಮಾತುಗಳಿಗೆ ನಿಲುಕದ ಪ್ರೀತಿಯಿತ್ತು. ಬದುಕು ಹೀಗೇ ಸಾಗುತ್ತಿರುವಾಗ, ಅದೊಂದು ದಿನನ ಆ ಗುಬ್ಬಚ್ಚಿಗಳು ಅವಳನ್ನು ಸೆಳೆದವು.ಅಡುಗೆ ಮನೆಯ ಪಕ್ಕದಲ್ಲಿದ್ದ ಸ್ಟೋರ್ ರೂಮಿನ ಸೂರಿನಲ್ಲಿ ಅವು ಗೂಡು ಕಟ್ಟಲು ಪ್ರಾರಂಬಿಸಿದ್ದವು. ಮೊದಮೊದಲು ಅವಳು ಅವುಗಳನ್ನು ಗಮನಿಸಿರಲಿಲ್ಲ. ಬರುಬರುತ್ತ ಅವುಗಳ ಕಿಚಕಿಚ ಶಬ್ದ ಜಾಸ್ತಿಯಾದಂತೆ ಅವಳ ಕಣ್ಣಿಗವು ಬಿದ್ದವು. ಬಂಗಾರದ ಬಣ್ಣದ ಒಣ ಹುಲ್ಲುಕಡ್ಡಿಗಳನ್ನು ಬಾಯಲ್ಲಿ ಕಚ್ಚಿತಂದು ಸೂರಿನಲ್ಲಿ ಸಿಗಿಸುತ್ತಿದ್ದವು..ಅವು ಕಿಟಕಿಯಲ್ಲಿ ಕೂತು ಅರ್ಥವಾಗದ ಬಾಷೆಯಲ್ಲಿ ಮಾತಾಡುವುದು,ಪುರ್ರನೆ ಹಾರಿಹೋಗಿ ಹುಲ್ಲು ತರುವುದು,ಕೊಕ್ಕಿನಿಂದ ೊಂದೊಂದೇ ಹುಲ್ಲು ಸೇರಿಸಿ ಕಲಾತ್ಮಕವಾಗಿ ಗೂಡು ಕಟ್ಟುವುದು,ಇವನ್ನೆಲ್ಲ ನೋಡುವುದು ಅವಳಿಗೆ ಹೊಸ ರೀತಿಯ ಅನುಭವ ಅನಿಸಿತು.ಆ ಪುಟ್ಟ ಹಕ್ಕಿಗಳ ಬದುಕು ಅದ್ಬುತವಾಗಿ ತೋರತೊಡಗಿತು.ಅವುಗಳ ನಿತ್ಯದ ಚಟುವಟಿಕೆಗಳನ್ನು ನೋಡುವುದರಲ್ಲಿ ಅವಳೆಷ್ಟು ತನ್ಮಯಳಾಗಿ ಬಿಟ್ಟಳೆಂದರೆ,ಅವನು ಆಫೀಸಿಗೆ ಹೋದ ತಕ್ಷಣ ಸ್ಟೋರಿನ ಬಾಗಿಲ ಬಳಿ ಬಂದು ಕೂರುತ್ತಿದ್ದಳು. ಪ್ರತಿನಿತ್ಯ ಅಕ್ಕಿಯ ಕಾಳುಗಳನ್ನುಅವುಗಳಿಗೋಸ್ಕರ ತಂದು ಹಾಕುವುದು,ಅದನ್ನು ತಿನ್ನುವಂತೆ ಹುಶ್ಹುಶ್ ಎಂದು ಸಂಕೇತದಲ್ಲಿ ಮಾತಾಡಿಸುವುದು ಮಾಮೂಲಿಯಾಗುತ್ತಾ ಹೋಯಿತು. ದಿನಕಳೆದಂತೆ ಗುಬ್ಬಚ್ಚಿಗಳ ಗೂಡು ಪೂರ್ಣವಾಯಿತು. ಸಂಜೆ ಅವು ಬಂದಾಗ ಸ್ಟೋರಿನ ಬಾಗಿಲು ಹಾಕಿದ್ದರೆ ಕೊಕ್ಕಿನಿಂದ ಕುಕ್ಕಿ ಶಬ್ದ ಮಾಡುತ್ತಿದ್ದವು. ಆಗವಳು ಓಡಿಹೋಗಿ ಬಾಗಿಲು ತೆಗೆದ ತಕ್ಷಣ ಗೂಡು ಸೇರುತ್ತಿದ್ದವು. ಬೆಳಿಗ್ಗೆ ಎದ್ದು ಕಿಟಕಿ ತೆಗೆಯುವುದು ಒಂದು ಕ್ಷಣ ತಡವಾದರೆ ಸಾಕು ಕಿಚಕಿಚ ೆಂದು ಹುಯಿಲೆಬ್ಬಿಸುತ್ತಿದ್ದವು. ಹೀಗವಳು ಗುಬ್ಬಚ್ಚಿಗಳ ಪ್ರಪಂಚದಲ್ಲಿ ಬೆರೆಯುತ್ತ ಹೋದಳು. ಹೀಗಿರುವಾಗ ಻ವಳು ಎರಡು ತಿಂಗಳು ಮುಟ್ಟಾಗಲಿಲ್ಲ. ಆಸ್ಪತ್ರೆಯಲ್ಲಿ ಲೇಡಿ ಡಾಕ್ಕರ್ ನಗುತ್ತಾ ನೀವು ತಂದೆಯಾಗಲಿದ್ದೀರಿ ಅಂದಾಗ ಅವನ ಮುಖ ಅರಳಿತ್ತು. ಅವು ಅಷ್ಟೊಂದು ಸಂತೋಷ ಪಟ್ಟಿದ್ದನ್ನು ಈ ಎರಡು ವರ್ಷಗಳಲ್ಲಿ ಅವಳು ಒಮ್ಮೆಯೂ ನೋಡಿರಲಿಲ್ಲ..ಆಗಿನಿಂದ ಅವನು ಬದಲಾಗತೊಡಗಿದ. ಅವಳೊಡನೆ ಹೆಚ್ಚು ಮಾತಾಡತೊಡಗಿದ. ಕಣ್ಣಲ್ಲಿ ಕಣ್ಣಿಟ್ಟು ಅವಳ ಆರೈಕೆ ಮಾಡತೊಡಗಿದ. ಅವಳ ಆರೋಗ್ಯಕಾಗಿ ಕಂಡಕಂಡ ದೇವರುಗಳಿಗೆ ಅರ್ಚನೆ ಮಾಡಿಸತೊಡಗಿದ. ಅವನ ಪ್ರೀತಿಯ ನಡವಳಿಕೆ,ಗುಬ್ಬಚ್ಚಿಗಳ ಗೂಡು ಅವಳ ಬದುಕನ್ನು ಸುಂದರಗೊಳಿಸತೊಡಗಿದವು. ಒಂದು ಬಾನುವಾರ ಮದ್ಯಾಹ್ನ ಅವನು ಮನೆಯನ್ನು ಸ್ವಚ್ಚಗೊಳಿಸುತ್ತಿದ್ದ. ಒಂದು ಉದ್ದನೆಯ ಬಿದಿರು ಕಡ್ಡಿಗೆ ಪೊರಕೆ ಕಟ್ಟಿ ಸೂರಿನ ಜೇಡರ ಬಲೆಯನ್ನು ತೆಗೆಯಹತ್ತಿದ. ಸ್ಟೋರಿಗೆ ಬಂದಾಗ ಆ ಗುಬ್ಬಚ್ಚಿ ಗೂಡು ಅವನ ಕಣ್ಣಿಗೆ ಬಿತ್ತು. ಮನೆಯೊಳಗಿದಗದ ಗೂಡು ಅವನಿಗೆ ಅಸಹ್ಯವಾಗಿಯೂ ಅಪಶಕುನವಾಗಿಯೂ ಕಂಡಿತು. ಅದನ್ನು ತೆಗೆಯಲು ಪ್ರಯತ್ನಿಸಿದಾಗ ಅವಳು ತಡೆದಳು. ಆ ಗೂಡನ್ನು ಮುಟ್ಟದಂತೆ ಅವನನ್ನು ವಿನಂತಿಸಿದಳು. ಅದೇಕೋ ಅವನು ಅವಳ ಮಾತಿಗೆ ಕಿವಿಗೊಡದೆ ಗೂಡನ್ನು ಕೋಲಿನಿಂದ ತಳ್ಳಿದ. ತಳ್ಳಿದ ರಭಸಕ್ಕೆ ಗೂಡು ನೆಲಕ್ಕೆ ಬಿತ್ತು.ಅದರೊಳಗಿದ್ದ ಬಿಳಿಯ ಬಣ್ಣದ ಪುಟ್ಟಮೊಟ್ಟೆಗಳು ಒಡೆದು ಹೋದದ್ದನ್ನು ನೋಡಿದ ಻ವಳು ಬಿಕ್ಕಿಬಿಕ್ಕಿ ಅಳ ತೊಡಗಿದಳು. ಅವನ ಯಾವ ಸಮಾಧಾನವೂ ಅವಳನ್ನು ಸಣತೈಸಲಾಗಲಿಲ್ಲ.಻ವನು ಕಳಚಿ ಬಿದ್ದ ಗೂಡು ,ಒಡೆದ ಮೊಟ್ಟೆಗಳನ್ನು ಹೊರಗೆಸೆದು ಬಂದರೂ ಅವಳ ಻ಳು ನಿಂತಿರಲಿಲ್ಲ. ಬೇಸಿಗೆಯ ಧಗೆಗೆ,ಅತ್ತ ಸುಸ್ತಿಗೆ ತಲೆ ಸುತ್ತಿದಂತಾಗಿ ಕೆಳಗೆ ಬಿದ್ದಳು. ಅವಳನ್ನು ಎತ್ತಿಕೊಂಡುಹೋಗಿ ಹಾಸಿಗೆಯಲ್ಲಿ ಮಲಗಿಸಿ,ಮುಖಕ್ಕೆ ನೀರು ಚುಮುಕಿಸಿದ.ಪ್ರಜ್ಞೆ ಮರಳಿದ ಅವಳ ಕಣ್ಣುಗಳಲ್ಲಿದ್ದ ಬಾವನೆಗಳನ್ನು ಅವನಿಂದ ೋದಲಾಗಲಿಲ್ಲ. ಅವಳ ಸೂಕ್ಷ್ಮ ಮನಸ್ಸಿಗೆ ಒಡೆದ ಮೊಟ್ಟೆಗಳ ಚಿತ್ರವನ್ನು ಮರೆಯಲಾಗಲಿಲ್ಲ. ಒಂದು,ಎರಡು,ಮೂರು..ಹೀಗೆ ದಿನಗಳು ಉರುಳುತ್ತ ಹೋದವು.ಅವಳಿಗ ಮಾತು ಕಡಿಮೆ ಮಾಡಿದ್ದಳು. ಅವನ ಪ್ರಶ್ನೆಗಳಿಗೆ ಮೌನವೊಂದೇ ಉತ್ತರವಾಗ ತೊಡಗಿತ್ತು. ಅವಳ ಶೂನ್ಯದತ್ತ ನೆಟ್ಟದೃಷ್ಠಿ, ಅನ್ಯಮನಸ್ಕತೆಯಿಂದಾಗಿ ಅವನ ಻ಸಹನೆ ಹೆಚ್ಚುತ್ತ ಹೋಯಿತು. ಮನಸ್ಸು ಸ್ಥಿಮಿತದಲಿಟ್ಟುಕೊಳ್ಳಲು ಮತ್ತಷ್ಟು ಪೂಜೆ-ಪುನಸ್ಕಾರಗಳಲ್ಲಿ ಹೊತ್ತು ಕಳೆಯ ತೊಡಗಿದ. ಻ವನ ಮೌನಕ್ಕೆ ಅವಳಮೌನವೂ ಸೇರಿ ಆ ಮನೆಯಲ್ಲಿ ಶಬ್ದಗಳು ಕಳೆದುಹೋದವು. ಹೀಗಾಗಲೆ ಅವಳಿಗೆ ನಾಲ್ಕು ತಿಂಗಳು ತುಂಬುತ್ತ ಬಂದಿತ್ತು.ಒಂದು ಸಂಜೆ ಅವನು ಆಫೀಸಿನಿಂದ ಬಂದಾಗವಳು ಸ್ಟೋರ್ ರೂಮಿನ ಬಾಗಿಲಲ್ಲಿ ಬಿದ್ದಿದ್ದಳು. ಅವಳನ್ನು ಎತ್ತಕೊಂಡು ಆಸ್ಪತ್ರೆಗೆ ಓಡಿ ಹೋದ. ಡಾಕ್ಟರ್ ಅವಳಗೆ ಗರ್ಬಪಾತವಾಗಿದೆ, ತಕ್ಷಣಕ್ಕೆ ಮತ್ತೆ ಗರ್ಬಿಣಿಯಾದರೆ ಅಪಾಯವಿದೆ ಹುಶಾರಾಗಿ ನೋಡಿಕೊಳ್ಳಿ ಅಂದರು. ಒಂದಷ್ಟು ದಿನಗಳ ಾಸ್ಪತ್ರೆಯ ವಾಸದ ನಂತರ ಮತ್ತೆ ಮನೆಗೆಬಂದವಳೆಷ್ಟು ಕಂಗೆಟ್ಟಿದ್ದಳೆಂದರೆ ಯಾವಾಗಲೂ ಸೂರು ನಿಟ್ಟಿಸುತ್ತ ಮಲಗಿರುತ್ತಿದ್ದಳು. ಕಣ್ಣು ಬಿಟ್ಟರೆ ಸಾಕು ಅವನು ಗೂಡು ಕಿತ್ತೆಸೆದಂತೆ,ಸಂಜೆ ಗೂಡು ಕಾಣದೆ ತಾರಾಡುತ್ತಿದ್ದ ಗುಬ್ಬಚ್ಚಿಗಳ ದೃಶ್ಯವೇ ಕಾಣುತ್ತಿತ್ತು. ಹಗಲು-ರಾತ್ರಿ ಬಾಗಿಲುಕಿಟಕಿಗಳನ್ನು ಹಾಕಿಕೊಂಡೇ ಮಲಗಿರುತ್ತಿದ್ದಳು. ರಾತ್ರ ಻ವನು ದೀಪ ಹಾಕಿದರೆ ಅವಳದನ್ನು ಆರಿಸಿ ಮಾತಾಡದೆ ಮಲಗುತ್ತಿದ್ದಳು. ಅವಳೀಗ ಕತ್ತಲನ್ನು ಆರಿಸಿಕೊಂಡಿದ್ದಳು. ಅವಳ ಪರಿಸ್ಥಿತಿಯನ್ನು ಕಂಡು ಅವನು ದಿಗ್ಬ್ರ್ರಮೆಗೊಳಗಾಗಿದ್ದ. ಻ವಳ ೀ ಸ್ಥಿತಿಗೆ ತಾನೇಕಾರಣವೇ ಎಂಬ ಪ್ರಶ್ನೆ ಅವನನ್ನ ಕಾಡತೊಡಗಿತು. ಪಾಪಪುಣ್ಯಗಳ ಬೀತಿಯಲ್ಲೇ ಬೆಳೆದವನಿಗೆ ತಾನು ಒಡೆದ ಮೊಟ್ಟೆಗಳಿಗೂ,ಅವಳ ಗರ್ಬಪಾತಕ್ಕೂ ಸಂಬಂದವಿರಬಹುದೆನಿಸಿ ಪಾಪಪ್ರಜ್ಞೆಯಲಿ ನರಳತೊಡಗಿದ. ಮಾತಾಡಲು ಪ್ರಾರಂಬಿಸಿದವನು ಮತ್ತೆ ಮೌನಿಯಾದ. ಾ ಪುಟ್ಟ ಮನೆಯೊಳಗೆ ಮಾತುಗಳಿಲ್ಲವಾಗಿ ವಿಷಾದದ ನೆರಳು ಆವರಿಸ ತೊಡಗಿತು. ಅವನೀಗ ಮನೆಯ ಎಲ್ಲ ಕೆಲಸಗಳನ್ನೂ ತಾನೇ ಮಾಡುತ್ತಾನೆ. ಬೆಳಿಗ್ಗೆ ಅವಳಿಗೆ ತಿಂಡಿ ಕೊಟ್ಟು ಆಫೀಸಿಗೆ ಹೋಗುತ್ತಾನೆ. ಹೋಗುವ ಮುಂಚೆ ಸ್ಟೋರಿನ ಕಿಟಕಿ ಬಾಗಿಲುಗಳನ್ನು ತೆರೆದಿಡುತ್ತಾನೆ. ಸಂಜೆ ತಿರುಗಿ ಬಂದವನು ಅವಳಿಗೆ ತಿನ್ನಲು ಏನಾದರು ಕೊಟ್ಟು ಸ್ಟೋರ್ ರೂಮಿಗೆ ಹೋಗುತ್ತಾನೆ,ತಾನೇ ಕಿತ್ತು ಹಾಕಿದ ಗೂಡಿನ ವಾರಸುದಾರ ಗುಬ್ಬಚ್ಚಿಗಳ ಹಾದಿ ಕಾಯುತ್ತಾನೆ. ಪ್ರತಿನಿತ್ಯವೂ ಅವನು ಹಾಕಿಟ್ಟ ಅಕ್ಕಿ ಕಾಳುಗಳು ಹಾಗೆ ಬಿದ್ದಿವೆ. ಓ! ದೇಚರೆ ,ಮತ್ತೆ ಆಗುಬ್ಬಚ್ಚಿಗಳು ಬರಲಿ, ಈ ಮನೆಯೊಳಗೆ ಗೂಡು ಕಟ್ಟಲಿ ಎಂದು ಪ್ರಾರ್ಥಿಸುತ್ತಾನೆ. ಆದರೆ, ತೆರೆದ ಕಿಟಕಿಗಳು ತೆರೆದೇ ಇವೆ! *******************************************************

ಕಥಾಯಾನ Read Post »

ಕಾವ್ಯಯಾನ

ಕಾವ್ಯಯಾನ

ನೆನಪಾಗಿಸು.. ಲೋಕೇಶ್ ಮನ್ವಿತ್ ನೆನಪಾಗಿಸು…. ಮುಲಾಮು ಹಚ್ಚಲಾಗದ ಜಾಗದಲ್ಲಿ ಗಾಯ. ಕಾರಣ ಹೊಸದೇನಲ್ಲ ಅರಚುತ್ತೇನೆ ಚೀರುತ್ತೇನೆ ನರಳುತ್ತೇನೆ ಕಾಣಿಸುವುದಿಲ್ಲ ಜಗದ ಕಣ್ಣುಗಳಿಗೆ ಕೇಳಿಸುವುದಿಲ್ಲ ಜಗದ ಕಿವಿಗಳಿಗೆ ನಗುವಿನ ಮುಖವಾಡ ಬದುಕು ಸಾಗಿದೆ ಕೊನೆಯ ಬಿನ್ನಹವಿಷ್ಟೇ ಗಾಯಕ್ಕಿಷ್ಟು ಮುಲಾಮು ಬೇಡ ನಂಜನ್ನಿಟ್ಟು ನೆನಪಾಗಿಸು ನನ್ನವರ ಹೃದಯದಲ್ಲಿ. **********

ಕಾವ್ಯಯಾನ Read Post »

ಇತರೆ

ಶ್ರದ್ದಾಂಜಲಿ

‘ವಿಡಂಬಾರಿ’ ಕಣ್ಮರೆ..! ಕೆ.ಶಿವು ಲಕ್ಕಣ್ಣವರ ಖ್ಯಾತ ಚುಟುಕು ಕವಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ‘ವಿಡಂಬಾರಿ’ ಕಣ್ಮರೆ..! ಖ್ಯಾತ ಚುಟುಕು ಕವಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಡಂಬಾರಿ ಅವರು ಕಡತೋಕೆಯಲ್ಲಿ ತಮ್ಮ ಮಗಳ ಮನೆಯಲ್ಲಿ ನಿನ್ನೆ ನಿಧನರಾಗಿದ್ದಾರೆ… ‘ವಿಡಂಬಾರಿ’ ಕಾವ್ಯನಾಮದಿಂದ ಬರೆಯುತ್ತಿದ್ದ ವಿಷ್ಣುಗ. ಭಂಡಾರಿ ಜನಿಸಿದ್ದು 1935 ಫೆಬ್ರುವರಿ 29 ರಂದು. ‘ವಿಶಾಲ ಕರ್ನಾಟಕ’ದಲ್ಲಿ ಮೊದಲ ಚುಟುಕು ಪ್ರಕಟವಾಯಿತು. ವಿ.ಗ.ಭಂಡಾರಿ ಬದಲು ಸಂಪಾದಕರು ‘ವಿಡಂಬಾರಿ’ ಎಂದು ಬದಲಿಸಿ ಪ್ರಕಟಿಸಿದರು (ಅಂಚೆ ನೌಕರರಾಗಿದ್ದ ವಿಷ್ಣು ಅವರ ಹೆಸರಿನಲ್ಲಿಯೇ ಪ್ರಕಟವಾದರೆ ಅನವಶ್ಯಕ ತೊಂದರೆ ಎಂಬ ಕಾರಣದಿಂದ ಸಂಪಾದಕರೇ ನಾಮಧೇಯ ಬದಲಿಸಿದ್ದರು). ಮುಂದೆ ಅದುವೆ ಕಾವ್ಯನಾಮ ಆಯಿತು. ‘ವಿಡಂಬಾರಿ’ ಅವರ ಬದುಕಿಗೆ ಪಕ್ವತೆ ಬಂದದ್ದು ಭಟ್ಕಳದ ಶಿರಾಲಿಯಲ್ಲಿ. ನಿವೃತ್ತಿ ಆಗುವವರೆಗೂ ಶಿರಾಲಿಯಲ್ಲಿಯೇ ಇದ್ದರು. ಅವರ ಬದುಕಿಗೆ ಹೊಸ ಚಾಲನೆ ನೀಡಿದ್ದು ಶಿರಸಿಯ ‘ಚಿಂತನ’ ಕನ್ನಡ ಪುಸ್ತಕ ಮಳಿಗೆ… ನಿವೃತ್ತಿಯ ನಂತರ ಜಲ್ಲಿ ಕ್ರಶ್ಶರಿನಲ್ಲಿ ಜೀವ ತೇಯುತ್ತಿದ್ದ ‘ವಿಡಂಬಾರಿ’ ಅವರು ಪುಸ್ತಕದಂಗಡಿಯ ಮ್ಯಾನೇಜರ ಆಗಿ ನೇಮಕಗೊಂಡರು. ಸ್ವಂತ ಮನೆ ಇಲ್ಲದ ಅವರು ಶಿರಸಿಗೆ ಸ್ಥಳಾಂತರವಾದರು. ಅಂದಿನಿಂದ ಪುಸ್ತಕಗಳೇ ಅವರ ದಿನಚರಿ. ವಿಡಂಬಾರಿ ಅವರು ಈವರೆಗೆ 4 ಕವನ ಸಂಕಲನ ಪ್ರಕಟಿಸಿದ್ದಾರೆ… ‘ಒಗ್ಗರಣೆ’ (1981), ‘ಕವಳ’ (1986) ‘ಕುದಿ ಬಿಂದು’ (2004) ‘ವಿಡಂಬಾರಿ ಕಂಡಿದ್ದು’ (2010) ಚುಟುಕು ಸಂಕಲನ. ‘ಅಂಚೆ ಪೇದೆಯ ಆತ್ಮ ಕಥನ’ ಅವರ ಆತ್ಮಕಥನ… ಹೀಗೆ 7 ಪುಸ್ತಕ ಪ್ರಕಟವಾಗಿವೆ. ಇತ್ತೀಚೆಗೆ ಆನಾರೋಗ್ಯದಿಂದ ಬಳಲುತ್ತಿದ್ದ ಅವರು ಮಗಳ ಮನೆಯಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಮರಣಾನಂತರ ಅವರ ಕುಟುಂಬದವರು ಕಾರವಾರ ಮೆಡಿಕಲ್ ಕಾಲೇಜಿಗೆ ‘ವಿಡಂಬಾರಿ’ ಅವರ ದೇಹದಾನ ಮಾಡಿದ್ದಾರೆ. ಬದುಕಿನ ಕೊನೆಯಲ್ಲೂ ದೇಹದಾನ ಮಾಡುವ ಮೂಲಕ ‘ವಿಡಂಬಾರಿ’ ಮಾದರಿಯಾಗಿದ್ದಾರೆ ಅವರಿಗೆ ಚಿರಶಾಂತಿ ದೊರೆಯಲೆಂದು ಹಾರೈಸೋಣ..! *************

ಶ್ರದ್ದಾಂಜಲಿ Read Post »

ಕಾವ್ಯಯಾನ

ಚಲಿಸುವ ಮುಳ್ಳು

ಚಲಿಸುವ ಮುಳ್ಳು ಚಂದ್ರಪ್ರಭ ಬಿ. ಚಲಿಸುವ ಮುಳ್ಳು ಆಗಲೇ ನಿನಗೆ ಐವತ್ತಾತs ! ಅವ ತಮಾಷೆಗಿಳಿದ.. ಹ್ಞೂಂ.. ನಿನಗ ಅರವತ್ತಾಗುವಾಗ ನನಗಿನ್ನೆಷ್ಟಾಗಬೇಕು? ಹೆಚ್ಚುತ್ತಿದ್ದ ಈರುಳ್ಳಿ ಕಣ್ಣ ತೋಯಿಸಿತು ‘ಹೆರಳಿಗೆ ಹೂ ಮುಡದರೆ ನೀ ಅದೆಷ್ಟ ಚಂದ ಕಾಣತೀ ಈಗಲೂ’ ಅವ ಹೇಳಿದ ಹೆರಳೆಲ್ಲಿದೆ.. ಈಗಿರವುದು ಒಂದು ಮೋಟು ಜಡೆ ಅಷ್ಟೇ.. ಒಗ್ಗರಣೆ ಹೊತ್ತಕೊಂಡೀತೆಂದು ಉರಿ ಸಣ್ಣ ಮಾಡುತ್ತ ಹೇಳಿದೆ ‘ಆ ಲೇಖಕರು ಮುನ್ನುಡಿ ಬರೆದು ಕೊಟ್ಟರೇನು ನಿನಗೆ.. ಮತ್ತ ನಿನ್ನ ಪುಸ್ತಕ ಬಿಡುಗಡೆ ಯಾವಾಗ?’ ಮುತುವರ್ಜಿಯಿಂದ ಅವ ಕೇಳಿದ ‘ಇಲ್ಲ ನಾಡಿದ್ದು ಭೇಟಿಯಾಗಿ ವಿಚಾರಿಸುವೆ ನಾಳೆ ದೀಪು ಶಾಲೇಲಿ ಪಾಲಕರ ಸಭೆಗೆ ಹೋಗಲಿಕ್ಕುಂಟು’ ‘ಇಳಿ ಸಂಜೆ ಪೇಟೆಗೆ ಹೋಗಿ ಇದನ್ನೆಲ್ಲ ತರಲಿಕ್ಕಿದೆ ಮನೇಲಿರಿ.. ಬೈಕ್ ಮೇಲೆ ತಾಸಿನಲ್ಲಿ ಹೋಗಿ ಬಂದೇವು’ ನನ್ನ ಮಾತು.. ‘ಹಾಗೇ ಐಸ್ ಕ್ರೀಂ ಪಾರ್ಲರ್ ಗೆ ಹೋಗೋಣ ಆ ಹಸಿರು ಸೀರೇಲಿ ನೀ ಚಂದ ಕಾಣುವಿ ಅದನ್ನೇ ಉಟ್ಟುಕೊ…’ ನಾನಾಗಲೇ ಬೂದು ಬಣ್ಣದ ಚೂಡೀದಾರ ಎತ್ತಿಟ್ಟಿದ್ದೆ! ದಿನಸಿ ಅಂಗಡಿಯಲ್ಲಿ ಸಾಮಾನಿನ ಲಿಸ್ಟ್ ಕೊಟ್ಟು ಪಾರ್ಲರಿಗೆ ಹೋಗಿ ಕುಳಿತೆವು ಹುಡುಗ ಒಂದೇ ಉಸಿರಲ್ಲಿ ಐಸ್ ಕ್ರೀಂ ಲಿಸ್ಟ್ ಒಪ್ಪಿಸಿದ ಆತನ ಮುಗ್ಧತೆ ಕಂಡು ಗಲಗಲನೆ ನಕ್ಕು ಬಿಟ್ಟೆ ‘ಹೀಂಗ ನಕ್ಕರ ನೀ ಚಂದ ಕಾಣಸ್ತೀ ನೋಡು’ ಅವ ಅಕ್ಕರೆಯಿಂದ ನುಡಿದ.. ‘ಈ ಸ್ಟ್ರಾಬೆರಿ.. ಕುಲ್ಫೀ ಐಸ್ ಕ್ರೀಂ ಶಶಿದು ಫೇವರಿಟ್ ಕಡೀ ಪೇಪರ ನಾಳೆ ಮುಗೀತದಲ್ಲ.. ನಾಡದು ಬರಬಹುದು ಊರಿಗೆ..’ ನಾ ಹೇಳಿದೆ.. ಫೋನಿನ ಮೇಲೆ ಫೋನು ಬರುತ್ತಲೇ ಇತ್ತು ಅವಗೆ ‘ಯಾರು ಒಂದೇ ಸಮ ಮಾಡ್ತಿರೂದು.. ಏನಂತ?’ ‘ಏನಿಲ್ಲ, ಕಲಾಭವನದಾಗ ಸಂಗೀತ ಸಂಜೆ ಐತಲ್ಲ ಲಗೂ ಬಾ ಅಂದ ಸೋಮು’ ಸಾಮಾನು ಸಮೇತ ನನ್ನ ಮನೆ ತಲುಪಿಸಿ ಅವ ಮತ್ತೊಂದು ರೌಂಡ್ ಹೊರ ಹೊರಟ ‘ ಅವ್ವ ಈ ಲೆಕ್ಕ ನನಗ ತಿಳೀವಲ್ತು ಸ್ವಲ್ಪ ಬಾ ಇಲ್ಲೆ’ ದೀಪು ದನಿ… ‘ಬಂದೆ ಇರು ಮಗಾ.. ಅಜ್ಜಿಗೆ ಮಾತ್ರೆ ಕೊಡೂದಷ್ಟ ಬಾಕಿ’ ಮಗೂ ಲೆಕ್ಕ ಕೇಳಿದ ತಕ್ಷಣ ನೆನಪಾಯ್ತು ನಾಳಿನ ವರ್ಕಶಾಪ್ ಗೆ ನನಗೆ ಪಿಪಿಟಿ ತಯಾರಿ ಮಾಡಲಿಕ್ಕಿತ್ತು! ಜೊತೆಗೆ ಪ್ರಾತ್ಯಕ್ಷಿಕೆ ಮಾದರಿ.. ‘ಆಫೀಸಿಗೆ ಹೋಗ್ತ ಅಪ್ಪನಿಗೆ ನಿನ್ನ ಬಿಟ್ಟ ಹೋಗಾಕ ಹೇಳವ್ವಾ.. ಇವೆಲ್ಲಾ ಹೊತಕೊಂಡ ಯಾವಾಗ ಹೋಗ್ತಿ ನೀ’ ದೀಪು ಮಾತು ತನ್ನನ್ನು ಮೀರಿಸಿ ನಾ ಓಡುತ್ತಿರುವೆನೆಂದು ಮುನಿಸಿಕೊಂಡಿದೆಯೊ ಎಂಬಂತೆ ನಿಂತು ಬಿಟ್ಟಿದ್ದ ಗಡಿಯಾರಕ್ಕೆ ಸೆಲ್ಲು ಬದಲಾಯಿಸಿದೆ ಮುಳ್ಳು ಚಲಿಸತೊಡಗಿತು… ***********

ಚಲಿಸುವ ಮುಳ್ಳು Read Post »

ಕಾವ್ಯಯಾನ

ಕಣ್ಣ ಕನ್ನಡಿ

ಕಣ್ಣ ಕನ್ನಡಿ ಶಾಂತಾ ಜೆ ಅಳದಂಗಡಿ ಕಣ್ಣಕನ್ನಡಿ ಹಸಿರ ಉಸಿರು ಅದುಮಿ ಹಿಡಿದು ತಂಪು ತಂಗಾಳಿ ಏಕಿಲ್ಲ ವೆಂದರೆ ಏನಹೇಳಲಿ ಉತ್ತರ? ಗೈದತಪ್ಪಿಗೆ ಬದುಕಾಗಿದೆ ತತ್ತರ ಕೊಳಕ ಕೊಳಗವ ಚೆಲ್ಲಬಿಟ್ಟು ಶುದ್ಧಪರಿಮಳ ಇಲ್ಲವೆಂದರೆ ಯಾರು ಕೊಡುವರು ಉತ್ತರ? ಪಡೆಯಬೇಕಿದೆ ಕೆಟ್ಟ ವಾಸನೆ ನಿರಂತರ ಬದಿಗೆಕರೆದು ಕಳ್ಳತನದಲಿ ಲಂಚನೀಡಿ ಕೆಲಸ ಮಾಡಿಸಿ ದುಡ್ಡಿನಾಸೆಯ ತೋರಿ ಕೆಡಿಸಿ ರಾಜಕಾರ್ಯವ ನಿಂದಿಸಿದರೆ ಯಾರು ಕೊಡುವರು ಉತ್ತರ ಸರದಿಸಾಲಿನ ಮಧ್ಯೆತೂರಿ ಬಾಯಬಡಿದು ಬಣ್ಣಗೆಟ್ಟರೆ ಮಾನ್ಯ ನೆಂಬ ಪದವಿ ಸಿಗುವುದೆ? ಅರ್ಥವಿಲ್ಲದ ಪ್ರಶ್ನೆಗೆ ಸುಮ್ಮನಿರುವುದೆ ಉತ್ತರ ಕಹಿಯನೀಡಿ ಸಿಹಿಯ ಬಯಸಲು ಸಿಗದು ಎಂದಿಗು ಮಧುರತೆ ಪರರ ಹಿತವನು ಬಯಸೆ ಮನದಲಿ ಖುಶಿಯು ದೊರೆವುದು ಬಾಳಲಿ ಕಣ್ಣಕನ್ನಡಿ ಸಟೆಯನಾಡದು ದಯೆಯ ದರ್ಪಣ ಒಡೆಯಬಾರದು ಒಗ್ಗಟ್ಟಿನಬಲ ಕುಸಿಯಬಾರದು. *********

ಕಣ್ಣ ಕನ್ನಡಿ Read Post »

ಪುಸ್ತಕ ಸಂಗಾತಿ

ಮುಟ್ಟಬಾರದವರ ಕಥೆ

‘ಉಚಲ್ಯಾ’ ಕೆ.ಶಿವುಲಕ್ಕಣ್ಣವರ ಲಕ್ಷ್ಮಣ ಗಾಯಕವಾಡರ ‘ಉಚಲ್ಯಾ’ ಎಂಬ ಹೀಗೊಂದು ಮುಟ್ಟಬಾರದವರ ಮರಾಠಿ ಕಥೆ..! ಅನುವಾದಕರು- ಚಂದ್ರಕಾಂತ ಪೋಕಳೆ Pages 120 ₹ 75.00 Year of Publication: 2017 Published by: ನವಕರ್ನಾಟಕ ಪ್ರಕಾಶನ Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001 Phone: 080-22203580/01/02 ಉಚಲ್ಯಾ’ ಮರಾಠಿಯ ಪ್ರಖ್ಯಾತ ಲೇಖಕ ಲಕ್ಷ್ಮಣ ಗಾಯಕವಾಡರ ಆತ್ಮಕತೆಯ ಕನ್ನಡಾನುವಾದ. ಚಂದ್ರಕಾಂತ ಪೋಕಳೆಯವರು ಉಚಲ್ಯಾವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಬುಡಕಟ್ಟು ಸಮುದಾಯದಿಂದ ಬಂದ ಲೇಖಕ ತನ್ನ ಜೀವನದ ಭೀಕರೆಯನ್ನು ಬಿಚ್ಚಿಟ್ಟ ಈ ಕೃತಿ ಅತ್ಯಂತ ಪ್ರಸಿದ್ಧ ಕೃತಿಯಾಗಿದೆ. ’ರಕ್ತ ಸುರಿಸಿ ದುಡಿಯುವ ಸಮುದಾಯದ ನಾನು ಸಮಾಜಮುಖಿ ಕಾರ್ಯಕರ್ತ. ನಾನು ಹುಟ್ಟಿದ ಸಮುದಾಯವನ್ನು ಸಮಾಜ ಮತ್ತು ವ್ಯವಸ್ಥೆ ತಿರಸ್ಕರಿಸಿತ್ತು. ಸಾವಿರಾರು ವರ್ಷಗಳಿಂದಲೂ ನಮ್ಮನ್ನು ಪ್ರಾಣಿಗಳಿಂತಲೂ ಕಡೆಯಾಗಿ ಕಾಣುವ ಸಮಾಜದಲ್ಲಿ ಪ್ರಾಣಿ ಸಮಾನಜೀವನ ನಡೆಸುಂತ ಸ್ಥಿತಿ ಇತ್ತು. ಬ್ರಿಟಿಷ್ ಸರ್ಕಾರವಂತೂ ನಮ್ಮ ಜಾತಿಗೆ ಕ್ರಿಮಿನಲ್ ಟ್ರೈಬ್ ಎಂಬ ಹಣೆಪಟ್ಟಿಯನ್ನೇ ಹಚ್ಚಿತ್ತು ಎನ್ನುತ್ತಾರೆ’ ಮೂಲ ಲೇಖಕ ಲಕ್ಷ್ಮಣ ಗಾಯಕವಾಡರು… ಬುಡಕಟ್ಟು ಸಮುದಾಯವೊಂದರ ಬದುಕಿನ ನರಕ ಸದೃಶ್ಯ ಜೀವನವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಉಚಲ್ಯಾ ಕೃತಿ ಹಲವು ಭಾಷೆಗಳಿಗೆ ಅನುವಾದಗೊಂಡಿದೆ. ಮೂಲ ಕೃತಿಗೆ 1988ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇಂಥಹ ಮೌಲ್ಯಯುತ ಕೃತಿಯನ್ನು ಚಂದ್ರಕಾಂತ ಪೋಕಳೆಯವರು ಅಷ್ಟೇ ಸೂಕ್ಷ್ಮವಾಗಿ ಕನ್ನಡೀಕರಿಸಿದ್ದಾರೆ… ಹೀಗೆ ಕನ್ನಡಿಕರಿಸಿದ ಲೇಖಕರು, ಪ್ರಖ್ಯಾತ ಅನುವಾದಕರೂ ಆದ ಚಂದ್ರಕಾಂತ ಪೊಕಳೆ ಅವರು 20-08-1949 ರಂದು ಜನಿಸಿದರು. ಹುಟ್ಟೂರು ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿ. ತಂದೆ- ಮಹಾಬಲೇಶ್ವರ, ತಾಯಿ- ಪಾರ್ವತಿ. ಹೈಸ್ಕೂಲುವರೆಗೆ ಮಂಚಿಕೇರಿಯಲ್ಲಿ ಓದಿದ ಅವರು, ಧಾರವಾಡದ ಕಾಲೇಜಿನಿಂದ ಬಿ.ಎ ಪದವಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಗಳಿಸಿದ್ದಾರೆ. ಧಾರವಾಡದಲ್ಲಿ ವಿದ್ಯಾರ್ಥಿಯಾಗಿದ್ದಾಗಲೇ ಗೌರೀಶ ಕಾಯ್ಕಿಣಿ, ಶಂಬಾ, ಬೇಂದ್ರೆ, ಇವರುಗಳ ಸಾಹಿತ್ಯದಿಂದ ಪ್ರೇರಿತರಾದ ಪೊಕಳೆ, ಅಧ್ಯಾಪಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರು… ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೇಡಕಿಹಾಳದ ಲಠ್ಠೆ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿ ಆರಂಭಿಸಿದ ಅವರು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ. ಚಂದ್ರಕಾಂತ ಅವರು ಕನ್ನಡ, ಮರಾಠಿ ಎರಡು ಭಾಷೆಗಳಲ್ಲೂ ಪ್ರಭುತ್ವ ಪಡೆದಿದ್ದು, ಮರಾಠಿ ಸಾಹಿತ್ಯದ ಎಲ್ಲ ಪ್ರಕಾರಗಳನ್ನೂ ಕನ್ನಡಿಗರಿಗೆ ಪರಚಯಿಸುತ್ತಿದ್ದಾರೆ. ಅಲ್ಲದೇ ಕನ್ನಡ-ಮರಾಠಿ ಭಾಷಾ ಸೇತುವೆಯಾಗಿ ಕೆಲಸಮಾಡುತ್ತಿದ್ದಾರೆ… ಅನುವಾದಕ್ಷೇತ್ರಕ್ಕೆ ತಮ್ಮನ್ನು ಸಮರ್ಪಿಸಿಕೊಂಡು ಅನುವಾದ ಯಜ್ಞದಲ್ಲಿ ತಮ್ಮ ಹವಿಸ್ಸನ್ನೂ ಧಾರೆಎರೆದು ಮರಾಠಿ ಸಾಹಿತ್ಯದಿಂದ ಬಹುಮೌಲಿಕ ಕೃತಿಗಳನ್ನು ಕನ್ನಡಕ್ಕೆ ನೀಡುತ್ತಾ ಬಂದಿರುವ ಲೇಖಕರಲ್ಲಿ ಅತ್ಯಂತ ಪ್ರಮುಖರು… ಬೆಳಗಾವಿಯ ಗಡಿಭಾಗದಲ್ಲಿ ನೆಲೆಸಿರುವ ಚಂದ್ರಕಾಂತ ಪೊಕಳೆ ಆಗಾಗ್ಗೆ ಮರುಕಳಿಸುವ ಭಾಷಾ ವಾದ-ವಿವಾದ, ಏಕೀಕರಣ ಹೋರಾಟ, ಕನ್ನಡದ ಅಸ್ತಿತ್ವದ ಪ್ರಶ್ನೆ, ರಾಜಕಾರಣಿಗಳ ಮಸಲತ್ತುಗಳು ಇವುಗಳ ಮಧ್ಯೆಯೂ ಭಾಷಾ ಸ್ನೇಹಕ್ಕಾಗಿ ನಿರಂತರವಾಗಿ ದುಡಿಯುತ್ತಿದ್ದಾರಿ. ಭಾಷಾ ಬೆಳವಣಿಗೆಗೆ ತಮ್ಮದೇ ಆದ ಹಾದಿ ಕಂಡುಕೊಂಡಿದ್ದಾರೆ. ಕನ್ನಡ-ಮರಾಠಿ ಭಾಷೆಯ ಮೇಲಿನ ಪ್ರಭುತ್ವ, ವಿದ್ವತ್‌, ಅಧ್ಯಯನಶೀಲತೆಯಿಂದ ಸಾಹಿತ್ಯದ ಯಾವುದೇ ಪ್ರಕಾರವನ್ನು ಆಯ್ಕೆಮಾಡಿ ಅನುವಾದಿಸಿದರೂ ಅದು ಸಹಜವಾಗಿ ಅನುವಾದಿತ ಭಾಷೆಗೆ ಹೊಂದಿಕೊಂಡು ಸ್ವಾಭಾವಿಕವೆನಿಸುವಂತಹ ಶೈಲಿ ಇವರ ಬರವಣಿಗೆಯದ್ದು… ಇವರ ಮನೆಮಾತು ಕೊಂಕಣಿ, ಕಲಿತದ್ದು ಕನ್ನಡ, ತಾಯಿ ಹಾಗೂ ಹೆಂಡತಿ ಮರಾಠಿ ಪರಿಸರದಿಂದ ಬಂದವರು. ಇದರಿಂದ ಕೊಂಕಣಿ-ಕನ್ನಡ-ಮರಾಠಿ ಭಾಷೆಗಳ ಸಹಜ-ಒಡನಾಟದಿಂದ ಅನುವಾದ ಕ್ರಿಯೆಗೆ ದೊರೆತ ಭಾಷಾ ಬಂಧುರ. ಭಾಷಾಂತರದ ಹಿಂದೆ ಯಾವುದೇ ಸೈದ್ಧಾಂತಿಕ ನೆಲೆಗಟ್ಟಿರದಿದ್ದರೂ ತಮ್ಮದೇ ಹಾದಿಯಲ್ಲಿ, ಮೂಲದಲ್ಲಿ ಓದಿದಷ್ಟೇ ತೃಪ್ತಿಕೊಡುವಂತಹ ಬರವಣಿಗೆಯಿಂದ ಸುಮಾರು 60 ಕ್ಕೂ ಹೆಚ್ಚು ಕೃತಿಗಳನ್ನು, ಇನ್ನೂರಕ್ಕೂ ಹೆಚ್ಚು ಕಥೆಗಳನ್ನು, 50 ಕ್ಕೂ ಹೆಚ್ಚು ಕವಿತೆಗಳನ್ನು ಕನ್ನಡಕ್ಕೆ ತಂದಿದ್ದಾರೆ… ಇವರು ಮೊದಲು ಅನುವಾದಿಸಿದ ಕೃತಿ ಜಯವಂತ ದಳವಿಯವರ ‘ಚಕ್ರ’ ಕಾದಂಬರಿ. ಈ ಕಾದಂಬರಿಯನ್ನು ಕಸ್ತೂರಿ ಮಾಸ ಪತ್ರಿಕೆಯ ಪುಸ್ತಕ ವಿಭಾಗಕ್ಕಾಗಿ ಸಂಕ್ಷಿಪ್ತವಾಗಿ ಸಂಗ್ರಹಿಸಿದರು. ಈ ಅನುವಾದವನ್ನೂ ಓದಿದ ಐಬಿಎಚ್‌. ಪ್ರಕಾಶನ ಸಂಸ್ಥೆಯು ಪೂರ್ಣ ಪ್ರಮಾಣದಲ್ಲಿ ಅನುವಾದಿಸಿಕೊಡುವಂತೆ ಕೋರಿದಾಗ, ಅನುವಾದದ ಪೂರ್ಣ ಕೃತಿಯು ಪುಸ್ತಕ ರೂಪದಲ್ಲಿ ಪ್ರಕಟಗೊಂಡಾಗ ಕಾದಂಬರಿ ವಲಯದಲ್ಲಿ ಉತ್ತಮ ಪ್ರಾರಂಭ ದೊರೆತು ಅನೇಕ ಕಾದಂಬರಿಗಳನ್ನು ಅನುವಾದಿಸಿದರು… ಮುಂಬಯಿಯ ಜೋಪಡಪಟ್ಟಿಯ ಜೀವನ ಕ್ರಮವನ್ನೂ ನಿರೂಪಿಸುವ ‘ಚಕ್ರ’ (ಮೂಲ ಮರಾಠಿ ಲೇಖಕರು-ಜಯವಂತ ದಳದಿ); ಗೋವೆಯ ದೇವದಾಸಿ ಸಮಸ್ಯೆಯ ಮೇಲೆ ಬೆಳಕುಚೆಲ್ಲುವ ‘ಮಾನು’ (ಜಯವಂತದಳವಿ); ಅನ್ನಕ್ಷುಧೆ-ಕಾಮಕ್ಷುಧೆಯ ತಾಕೂಟದ ವರ್ಣನೆಯ ‘ಶ್ವಪಥ’ (ರಂಗನಾಥ್‌ ಪಠಾರೆ); ದಲಿತರ ಸಾಂಸ್ಕೃತಿಕ ಹೋರಾಟದ ನೆಲೆಗಟ್ಟಿನ ಮೇಲೆ ರೂಪಗೊಂಡಿರುವ ‘ಉಚಲ್ಯಾ’ (ಲಕ್ಷ್ಮಣಗಾಯಕವಾಡ); ಹೆಣ್ಣಿನ ಒಳತುಡಿತಗಳನ್ನು ಎಳೆಎಳೆಯಾಗಿಬಿಡಿಸುವ ‘ಒಂದೊಂದೇ ಎಲೆಯುದುರಿದಾಗ’ (ಗೌರಿದೇಶಪಾಂಡೆ); ಲೇಖಕನ ಬದುಕು ಬರೆಹದಲ್ಲಿ ಇಬ್ಬಂದಿ ಬದುಕಿನ ‘ಕುಣಿಯೆಘುಮಾ’ (ಮಾಧವಿ ದೇಸಾಯಿ); ಮರಾಠ-ಮೊಗಲರ ನಡುವಣ ಚಾರಿತ್ರಿಕ ಸಂಘರ್ಷವನ್ನು ಗುರುತಿಸುವ ‘ಪಾಣಿಪತ’ (ವಿಶ್ವಾಸ ಪಾಟೀಲ)-ಹೀಗೆ ಒಂದೊಂದು ಅನುವಾದಿತ ಕೃತಿಗಳೂ ವಿಶಿಷ್ಟವಾಗಿದ್ದು, ಕನ್ನಡಿಗರಿಗೆ ಹೊಸ ಅನುಭವ ಸಂವೇದನೆಗಳನ್ನೂ ನೀಡುವಂತಹ ಕೃತಿಗಳಾಗಿವೆ. 2004 ರ ಕೇಂದ್ರ ಸಾಹಿತ್ಯ ಅಕಾಡಮಿಯ ಅನುವಾದ ಪ್ರಶಸ್ತಿ ಪಡೆದಿರುವ ‘ಮಹಾನಾಯಕ’ ಕಾದಂಬರಿಯು (ವಿಶ್ವಾಸ ಪಾಟೀಲ) ಮರಾಠಿ ಸಾಹಿತ್ಯ ವಲಯದಲ್ಲಿ ಬಹು ಚರ್ಚಿತ ಕೃತಿಯಾಗಿದ್ದು, ಜನಮನ್ನಣೆ ಗಳಿಸಿದೆ. ಸುಭಾಶ್‌ ಚಂದ್ರ ಬೋಸರ ಬದುಕಿನ ಸಂಘರ್ಷದ ಕಥೆಯ ನಿರೂಪಣೆಯೇ ಈ ಕಾದಂಬರಿಯ ಮುಖ್ಯ ಉದ್ದೇಶವಾಗಿದ್ದು, ಇಂಗ್ಲಿಷ್‌ ಹಾಗೂ ಜಪಾನಿ ಭಾಷೆಯೂ ಸೇರಿ ಭಾರತದ ಹಲವಾರು ಭಾಷೆಗಳಿಗೆ ಅನುವಾಗೊಂಡಿರುವ ವಿಶಿಷ್ಟ ಕೃತಿ. ಕನ್ನಡದಲ್ಲಿ ಎರಡನೆಯ ಮುದ್ರಣ ಕಂಡಿರುವುದಷ್ಟೇ ಅಲ್ಲದೆ ಮರಾಠಿಯಲ್ಲಿ ಹಲವಾರು ಮುದ್ರಣಗಳನ್ನು ಕಂಡಿದ್ದು 80,000 ಕ್ಕೂ ಹೆಚ್ಚು ಪ್ರತಿಗಳು ಮಾರಾಟವಾಗಿ ದಾಖಲೆಯನ್ನೇ ನಿರ್ಮಿಸಿದೆ. ಮಾರಾಠಿ ಸಾಹಿತ್ಯದಿಂದ ಹೀಗೆ ಸುಮಾರು 30 ಕಾದಂಬರಿಗಳು, 8ಆತ್ಮಕಥೆಗಳು,7 ಕಥಾ ಸಂಕಲನಗಳು, 8 ಸಂಶೋಧನ ಕೃತಿಗಳು, ವೈಚಾರಿಕ, ವೈಜ್ಞಾನಿಕ, ಜೀವನ ಚರಿತ್ರೆಗಳು, ನಾಟಕಗಳು, ಕವಿತೆಗಳು, ಪ್ರಬಂಧಗಳು ಸೇರಿ ಒಟ್ಟು 60ಕ್ಕೂ ಹೆಚ್ಚು ಕೃತಿಗಳನ್ನೂ ಕನ್ನಡಕ್ಕೆ ತಂದಿದ್ದಾರೆ. ಕೆಲವೊಂದು ಕಾದಂಬರಿಗಳಲ್ಲಿ ಬರುವ ಪ್ರಾದೇಶಿಕ ಭಾಷೆಯ ವರ್ಣನೆಯನ್ನು ಕನ್ನಡದಲ್ಲಿ ಹಿಡಿದಿಡುವುದು ಬಹುಪ್ರಯಾಸದ ಕೆಲಸವೆಂದು ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಂಡರೂ ಸವಾಲೆನಿಸುವ ಕೃತಿಗಳನ್ನೂ ಅನುವಾದಿಸಿದ್ದಾರೆ. ಜೊತೆಗೆ ಇವರ ಸ್ವತಂತ್ರ ಕೃತಿಗಳಾದ ‘ಮರಾಠಿ ದಲಿತ ರಂಗಭೂಮಿ’, ಮರಾಠಿ ಭಾಷಾ ಸಾಹಿತ್ಯ, ಗಡಿಸಮಸ್ಯೆ ಮುಂತಾದ ವಿಷಯಗಳ ವೈಚಾರಿಕ ಲೇಖನಗಳ ಸಂಕಲನಗಳಾದ ‘ಅನುಸಂಧಾನ’ ಹಾಗೂ ‘ಜಾಗರ’ ಮತ್ತು ವ್ಯಕ್ತಿ ಪರಿಚಯದ ‘ಬಾಬಾ ಅಮ್ಟೆ’ ಕೃತಿಗಳು ಪ್ರಕಟವಾಗಿವೆ. ಇವುಗಳಲ್ಲದೆ ಕನ್ನಡದಿಂದ ಮರಾಠಿ ಭಾಷೆಗೆ ಆಧುನಿಕ ಬರಹಗಳನ್ನು ಭಾಷಾಂತರಿಸಿ ಶಾಂತಿನಾಥ ದೇಸಾಯಿಯವರೊಡನೆ ಹೊರತಂದ ಕೃತಿ ‘ಸಂಬಂಧ’ ಎಂಬ ಮರಾಠಿ ಸಂಕಲನ… ಬಹುಭಾಷೆಯಲ್ಲಿ ಎಷ್ಟೇ ಪಾಂಡಿತ್ಯ ಪಡೆದಿದ್ದರೂ ಅನುವಾದವೆನ್ನುವುದು ಬಹುಕ್ಲಿಷ್ಟಕರವಾದ ಕೆಲಸ. ಒಂದು ಭಾಷೆಯ ಆಡುನುಡಿ, ಗ್ರಾಮ್ಯಭಾಷೆ, ಜನಾಂಗೀಯ ಭಿನ್ನಭಿನ್ನ ಸಂಸ್ಕೃತಿಯ ಮತ್ತೊಂದು ಭಾಷೆಯಲ್ಲಿ ದೊರೆಯುವುದು ವಿರಳವೇ. ಇದಕ್ಕೆ ಮೂಲವಾಗಿ ಬೇಕಾಗಿರುವುದು ಸಾಂಸ್ಕೃತಿಕ, ಜನಾಂಗೀಯ ಅಧ್ಯಯನ ಹಾಗೂ ಭಾಷಾ ಸಂಪತ್ತು. ಇಷ್ಟೆಲ್ಲಾ ಪೂರ್ವ ಸಿದ್ಧತೆಗಳೊಡನೆ ಅನುವಾದ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಚಂದ್ರಕಾಂತ ಪೋಕಳೆಯವರಿಗೆ 1999 ಮತ್ತು 2004 ರಲ್ಲಿ ಶ್ರೀದೇವಿ ಶಾನಭಾಗ ಪ್ರಶಸ್ತಿ, 2001ರಲ್ಲಿ ವರದರಾಜ ಆದ್ಯಪ್ರಶಸ್ತಿ, 2002 ರಲ್ಲಿ ಸಂಗಾತಿ ಅಕಾಡಮಿ ಪ್ರಶಸ್ತಿ , 2002 ಮತ್ತು 2005 ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, 2004 ರಲ್ಲಿ ವಿಶ್ವೇಶ್ವರಯ್ಯ ಸಾಹಿತ್ಯ ಪ್ರಶಸ್ತಿ ಹಾಗೂ ಕೇಂದ್ರ ಸಾಹಿತ್ಯ ಅಕಾಡಮಿ ಅನುವಾದ ಪ್ರಶಸ್ತಿ, 2008ರಲ್ಲಿ ಕುವೆಂಪು ಭಾಷಾ ಭಾರತಿ ಪ್ರಶಸ್ತಿಗಳು ದೊರೆತಿವೆ… ಲೇಖಕರು, ಪ್ರಖ್ಯಾತ ಅನುವಾದಕರೂ ಆದ ಚಂದ್ರಕಾಂತ ಪೊಕಳೆ ಅವರು 20-08-1949 ರಂದು ಜನಿಸಿದರು. ಹುಟ್ಟೂರು ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿ. ತಂದೆ- ಮಹಾಬಲೇಶ್ವರ, ತಾಯಿ- ಪಾರ್ವತಿ. ಹೈಸ್ಕೂಲುವರೆಗೆ ಮಂಚಿಕೇರಿಯಲ್ಲಿ ಓದಿದ ಅವರು, ಧಾರವಾಡದ ಕಾಲೇಜಿನಿಂದ ಬಿ.ಎ ಪದವಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಗಳಿಸಿದ್ದಾರೆ. ಧಾರವಾಡದಲ್ಲಿ ವಿದ್ಯಾರ್ಥಿಯಾಗಿದ್ದಾಗಲೇ ಗೌರೀಶ ಕಾಯ್ಕಿಣಿ, ಶಂಬಾ, ಬೇಂದ್ರೆ, ಇವರುಗಳ ಸಾಹಿತ್ಯದಿಂದ ಪ್ರೇರಿತರಾದ ಪೊಕಳೆ, ಅಧ್ಯಾಪಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೇಡಕಿಹಾಳದ ಲಠ್ಠೆ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿ ಆರಂಭಿಸಿದ ಅವರು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿಯಾಗಿದ್ದಾರೆ… **********************************

ಮುಟ್ಟಬಾರದವರ ಕಥೆ Read Post »

ಕಾವ್ಯಯಾನ

ಕಾವ್ಯಯಾನ

ತಾಮ್ರದ ಕೊಡ ಸಂಜಯ ಮಹಾಜನ ತಾಮ್ರದ ಕೊಡ ಭಾರವಾದವೋ ತಾಮ್ರದ ಕೊಡ ತಲೆಯ ಮೇಲೆ ಭಾರದಾದವೋ ತಾಮ್ರದಕೊಡ ಕಾಣದಾದವೋ ನುರು ವರುಷ ಹೊಳಪು ತಾಳಿತಾದರೂ ತಲೆಯಮೇಲೆ ಹೊತ್ತು ಭಾರ ತಾಳದಾದವೋ ತಾಮ್ರದಕೊಡ ಕಾಣದಾದವೋ ಆರೋಗ್ಯ ವೃದ್ಧಿಸಿದರೂ ತಾಂಮ್ರದ ಕೊಡ ವೃದ್ಧಿಯಾಗಲಾರವೋ ತಾಮ್ರದಕೊಡ ಕಾಣದಾದವೋ ತೂತುಬಿದ್ದ ಕರಳುಗಳಿಗೆ ಅಮೃತ ಬಿಂದು ನೀಡಿತಾದರೂ ಕೊಡದ ತಳಕೆ ಬಿದ್ದ ತೂತು ತುಂಬದಾದವೋ ತಾಮ್ರದಕೊಡ ಕಾಣದಾದವೋ ಹಳೆಯ ಕೊಡ ಅಟ್ಟದಲಿ ಉಳಿಯಿತಾದರೂ ಹೊಳಪು ಕಳೆದುಕೊಂಡು ಕಪ್ಪಾಗಿ ಮಾತನಾಡದಾದವೋ ತಾಮ್ರದಕೊಡ ಕಾಣದಾದವೋ ತವರಿನಿಂದ ಉಡುಗೊರೆಯಾಗಿ ಬಂದಿತಾದರೂ ತವರ ಸಿರಿಯ ನೆನಪು ಮಾಸದಾದವೋ ತಾಮ್ರದಕೊಡ ಕಾಣದಾದವೋ ಶುಭ ಸಮಾರಂಭದಲ್ಲಿ ಅಲ್ಪ ಬಳಕೆಯಾರೂ ಶುಭಾರಂಭಗಳಲ್ಲಿ ಮೊದಲಾದವೋ ತಾಮ್ರದಕೊಡ ಕಾಣದಾದವೋ ವರುಷಗಳ ಹಿಂದೆ ಮೌಲ್ಯ ಕಡಿಮೆಯಾಗಿದ್ದರೂ ವರುಷ ವರುಷ ಉರುಳಿದರೂ ಮೌಲ್ಯ ಕಳೆದುಕೋಳ್ಳದಾದವೋ ತಾಮ್ರದಕೊಡ ಕಾಣದಾದವೋ ***********

ಕಾವ್ಯಯಾನ Read Post »

ಅಂಕಣ ಸಂಗಾತಿ

ಜ್ಞಾನಪೀಠ ಪ್ರಶಸ್ತಿ ವಿಜೇತರು

ವಿಶ್ವ ಮಾನವ” ಬರಹಗಾರ ಕುವೆಂಪು..! ಕೆ.ಶಿವು ಲಕ್ಕಣ್ಣವರ ವಿಶ್ವ ಮಾನವ” ಬರಹಗಾರ ಕುವೆಂಪು..! ಮಲೆನಾಡಿನ ಹಿಂದುಳಿದ ವರ್ಗದಿಂದ ಹುಟ್ಟಿ ಬಂದ ಕುವೆಂಪು ಅವರು ತಾವೇ ಹೇಳಿಕೊಂಡಂತೆ ಮಲೆನಾಡಿನ ಕವಿ. ಕುವೆಂಪು ಅವರು ಈ ದೇಶದ ಸಮಕಾಲೀನ ಸೃಜನಶೀಲತೆಯ ಉತ್ಕರ್ಷದ ನಿಜವಾದ ಪ್ರತಿನಿಧಿಯಾಗಿದ್ದಾರೆ. ಅವರ ಸಾಹಿತ್ಯದ ಹರಹು, ವೈವಿದ್ಯ ಮತ್ತು ಎತ್ತರಗಳು ಅವರು ಮೂಡಿಬಂದ ಸಹ್ಯಾದ್ರಿಯ “ಪರ್ವತಾರಣ್ಯ ಪ್ರಪಂಚ”ದಂತೆ ಬೆರಗು ಹುಟ್ಟಿಸುತ್ತದೆ. ಅವರ ಮಹಾಕಾವ್ಯ , ಕಾದಂಬರಿ, ನಾಟಕ, ಕವಿತೆ ಈ ಅರಣ್ಯಾನುಭವಗಳೇ ಮೂಲದ್ರವ್ಯದಂತೆ ಸರ್ವವ್ಯಾಪಿಯಾಗಿದೆ. ಅವರ ಬಹುತೇಕ ಎಲ್ಲ ಪಾತ್ರಗಳು ಈ ಅರಣ್ಯ ಸಂಸ್ಕೃತಿಯ ಪ್ರತೀಕಗಳೇ… ಕುವೆಂಪು ಅವರಲ್ಲಿ ಪ್ರಕಟವಾಗುವ ಅದಮ್ಯವಾದ ನಿಸರ್ಗ ಪ್ರೀತಿ ಮೂಲತಃ ಜೀವನಪ್ರೀತಿಯ ವಿಸ್ತರಣೆ. ಈ ನಿಸರ್ಗದ ಕುರಿತ ಉತ್ಕಟವಾದ ಹಂಬಲ ಕೇವಲ ಸೌಂದರ್ಯನಿಷ್ಠವಾದುದು ಮಾತ್ರವಲ್ಲ, ಅದನ್ನು ಮೀರಿದ ಆಧ್ಯಾತ್ಮಿಕ ಅನ್ವೇಷಣೆಯ ಪರಿಣಾಮ ಕೂಡ ಆಗಿದೆ. ಮಲೆನಾಡಿನ ನಿಸರ್ಗದ ಚೆಲುವಿನ ಜೊತೆಗೆ ಅದರ ಒಡಲಿನ ಸಾಮಾಜಿಕ ಬದುಕನ್ನು, ಅದರ ಸಾಮಾಜಿಕ ಸ್ಥಿತ್ಯಂತರಗಳನ್ನು ದಾಖಲಿಸುತ್ತ ಬಂದಿದ್ದಾರೆ ಕುವೆಂಪುರವರು… ಈ ಅರಣ್ಯ ಕೇಂದ್ರಿತ ಸಾಮಾಜಿಕ ಬದುಕಿನ ಮೂಲಕ ಇಡೀ ಭಾರತೀಯ ಸಾಮಾಜಿಕ ಹಾಗೂ ಸಾಂಸ್ಕೃತಿಕ ಜೀವನದ ಪಲ್ಲಟಗಳೂ, ತಲ್ಲಣಗಳೂ ಅವರ ಗ್ರಹಣ ಶಕ್ತಿಯಿಂದ ವ್ಯಕ್ತವಾಗಿದೆ. ಅವರ ಸೃಜನಶೀಲ ಪ್ರತಿಭೆ ಪೂರ್ವ ಪಶ್ಚಿಮಗಳ ಚಿಂತನಗಳಿಂದ ಶ್ರೀಮಂತವಾಗಿದೆ. ವಿಶ್ವ ಸಾಹಿತ್ಯದಲ್ಲಿ ಕನ್ನಡಕ್ಕೆ ಗೌರವ ಸ್ಥಾನವನ್ನು ತಂದುಕೊಟ್ಟಿದೆ. ರಸಋಷಿಯ ಸಾಹಿತ್ಯವೆಲ್ಲವೂ ಒಂದರ್ಥದಲ್ಲಿ ಸ್ವಾತಂತ್ರ್ಯ ಪೂರ್ವದ ಆಶೋತ್ತರಗಳ ಅಭಿವ್ಯಕ್ತಿಯಾಗಿ ಮತ್ತು ಸ್ವಾತಂತ್ರ್ಯ ಭಾರತದ ವಾಸ್ತವವನ್ನು ಕುರಿತ ವಿಮರ್ಶೆಯಾಗಿ ತೋರುತ್ತದೆ. ಹಾಗೆಯೇ ಸಾಹಿತ್ಯ ನಿರ್ಮಿತಿಯ ನೆಲೆಯಲ್ಲಿ ಈ ದೇಶದ ಪರಂಪರೆಗೆ ಅವರು ತೋರಿದ ಸೃಜನಾತ್ಮಕ ಪ್ರತಿಕ್ರಿಯೆಗಳು ಮತ್ತು ಜಾಗತಿಕ ಪ್ರಜ್ಞೆಯನ್ನು ಅವರನ್ನು ಅರಗಿಸಿಕೊಂಡ ಕ್ರಮಗಳು ಹಾಗೂ ಯುಗ ಪರಿವರ್ತನೆಯ ಸೂಕ್ಷ್ಮತೆಗಳಿಗೆ ಸ್ಪಂದಿಸುತ್ತ ಅವುಗಳನ್ನು ಗುರುತಿಸಿ ತಮ್ಮ ಬರಹದ ಮೂಲಕ ಅದಕ್ಕೆ ಹೊಂದುವಂತೆ ಜನಮನವನ್ನು ಸಜ್ಜುಗೊಳಿಸಿದ ಪ್ರಯತ್ನಗಳು ಕುವೆಂಪು ಅವರನ್ನು ಈ ಯುಗಮಾನದ ಮಹತ್ವದ ಲೇಖಕರನ್ನಾಗಿ ಮಾಡಿವೆ… ಆಧ್ಯಾತ್ಮ, ವ್ಯೆಚಾರಿಕತೆ, ಗಾಢವಾದ ನಿಸರ್ಗ ಪ್ರೀತಿಗಳಲ್ಲಿ ಬೇರೂರಿರುವ ಅವರ ಸಾಹಿತ್ಯ ನಮ್ಮ ಪರಂಪರೆಯನ್ನು, ಸಾಮಾನ್ಯ ಜನರ ಬದುಕನ್ನು ನಿರ್ದೇಶಿಸಿದಂತೆಯೇ ಶೋಷಣೆಗೂ ಒಳಗು ಮಾಡಿದ ಪರಂಪರೆಯನ್ನು ತೀಕ್ಷ್ಣ ಹಾಗು ಚಿಕಿತ್ಸಕ ದೃಷ್ಠಿಯಿಂದ ಕಂಡಿದೆ. ಅಲ್ಲದೆ, ಸರ್ವೋದಯ, ಸಮನ್ವಯ ಮತ್ತು ಪೂರ್ಣ ದೃಷ್ಟಿಯ ಬೆಳಕಿನಲ್ಲಿ ಮನುಷ್ಯನ ವ್ಯಕ್ತಿತ್ವದ ಮುಕ್ತ ಬೆಳವಣಿಗೆಯ ಕಾಳಜಿಯನ್ನೂ ಸ್ಪಷ್ಟವಾಗಿ ವ್ಯಕ್ತಪಡಿಸುತ್ತದೆ. ಕುವೆಂಪು ಅವರ ಚಿಂತನೆ, ಅವರ ಕೊನೆಯ ವರ್ಷದಲ್ಲಿ, ದ್ವೇಷ, ಭಾಷೆ, ಜಾತಿ, ಮತ ಸಿದ್ಧಾಂತಗಳ ಹಾಗೂ ತಮಗೆ ಅತ್ಯಂತ ಪ್ರಿಯವಾದ ಸಾಹಿತ್ಯದ ಮೇರಯನ್ನು ದಾಟಿತ್ತು. ವಿಶ್ವದೃಷ್ಟಿಯನ್ನು ಹೊಂದಿತ್ತು. ಅದರ ಫಲವೇ ವಿಶ್ವಮಾನವ ಸಂದೇಶ, ಇದರ ಗೌರವಾರ್ಥವಾಗಿ ಕುವೆಂಪುರವರಿಗೆ ‘ವಿಶ್ವಮಾನವ’ ಎಂಬ ಬಿರುದಿದ್ದು ಪ್ರಖರ ಬೆಳಕಿನಷ್ಟೇ ಸತ್ಯ… ಕುವೆಂಪು ಅವರ ಕೃತಿಗಳು– ಶ್ರೀ ರಾಮಾಯಣದರ್ಶನಂ-ಮಹಾಕಾವ್ಯ. (ಕನ್ನಡದ ಮೊದಲ ಜ್ಞಾನಪೀಠ ಪ್ರಶಸ್ತಿ ಪಡೆದ ಕೃತಿ) ಕಾನೂರು ಹೆಗ್ಗಡಿತಿ (ಕಾದಂಬರಿ) ಮಲೆಗಳಲ್ಲಿ ಮದುಮಗಳು (ಕಾದಂಬರಿ) ನೆನಪಿನ ದೋಣಿಯಲ್ಲಿ (ಆತ್ಮಚರಿತ್ರೆ) ಕವನ ಸಂಗ್ರಹಗಳು. ನಾಟಕಗಳು. ಕಾವ್ಯ ಮೀಮಾಂಸೆ ಹಾಗೂ ವಿಮರ್ಶಾ ಕೃತಿಗಳು. ವೈಚಾರಿಕ ಲೇಖನಗಳು. ಮಲೆನಾಡಿನ ಚಿತ್ರಗಳು (ಲಲಿತ ಪ್ರಬಂಧಗಳು) ಕಥಾಸಂಕಲನಗಳು. ಜೀವನ ಚರಿತ್ರೆಗಳು. ಕುವೆಂಪುರವರಿಗೆ ಸಂದ ಗೌರವ ಪ್ರಶಸ್ತಿಗಳು ಮಾನವ ಲೆಕ್ಕಕ್ಕೆ ಸಿಗದಷ್ಟು… 1956ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೇಮಕವಾದರು ಅವರು. 1957ರಲ್ಲಿ ಧಾರವಾಡದಲ್ಲಿ 39ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯ್ಕಕ್ಷ ಪದವಿಯನ್ನು ಅಲಂಕರಿಸಿದರು. 1964ರಲ್ಲಿ ರಾಜ್ಯ ಸರ್ಕಾರದಿಂದ ರಾಷ್ಟ್ರ ಕವಿ ಬಿರುದಿನ ಗೌರವವೂ ಅವರನ್ನು ಹುಡುಕಿಕೊಂಡು ಬಂದಿತು. 1968ರಲ್ಲಿ ಶ್ರೀ ರಾಮಾಯಣದರ್ಶನಂ ಕೃತಿಗೆ ಜ್ಞಾನಪೀಠ ಪ್ರಶಸ್ತಿವು ಲಭಿಸಿದ್ದು ಸಹಜವಾಗೇ ಇತ್ತು. 1968ರಲ್ಲಿ ರಾಷ್ಟ್ರಪತಿಗಳಿಂದ ಪದ್ಮವಿಭೂಷಣ ಪ್ರಶಸ್ತಿ ಪ್ರದಾನವಾಗಿದ್ದು, ಆ ಪ್ರಶಸ್ತಿಯ ಗೌರವವನ್ನು ಹೆಚ್ಚಿಸಿತು. 1988ರಲ್ಲಿ ಕರ್ನಾಟಕ ಸರ್ಕಾರದ ಪ್ರಥಮ ಪಂಪ ಪ್ರಶಸ್ತಿ ಪ್ರದಾನ ಮಾಡಿದ್ದು ಸಹಜವಾಗಿತ್ತು. 1992ರಲ್ಲಿ ಕರ್ನಾಟಕ ಸರ್ಕಾರದ ಪ್ರಥಮ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನವಾಗಿದ್ದು ವಿಶ್ವಮಾನವನ ಸ್ಮರಣೆಯಾಗಿತ್ತು. 1956 ರಿಂದ 95- ೮ ಬೇರೆ-ಬೇರೆ ವಿಶ್ವವಿದ್ಯಾಲಯಗಳ ಗೌರವ ಡಾಕ್ಟರೇಟ್ ಪ್ರಶಸ್ತಿಗಳನ್ನು ಬಂದಿದ್ದು ಆ ಡಾಕ್ಟರೇಟ್ ಪ್ರಶಸ್ತಿಗಳ ಘನತೆಯನ್ನು ಎತ್ತಿ ಹಿಡಿದವು. ಕುವೆಂಪುರವರ ಕವಿ ಮನೆ-– ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರು ಹುಟ್ಟಿ ಬೆಳದದ್ದು ಶಿವಮೊಗ್ಗ ಜಿಲ್ಲೆಯ ತೀಥಹಳ್ಳಿ ತಾಲುಕಿನ ಕುಪ್ಪಳ್ಳಿ ಎಂಬ ಗ್ರಾಮದಲ್ಲಿ. ರಾಷ್ಟ್ರಕವಿ ಹುಟ್ಟಿ ಬೆಳದದ್ದು ಕುಪ್ಪಳ್ಳಿ ಮನೆಯಲ್ಲಿ , ಅದು ಈಗ “ಕವಿ ಮನೆ “ಎಂದೇ ಪ್ರಸಿದ್ದವಾಗಿದೆ. ಕ್ರಿ.ಸ ೨೦೦೧ರಲ್ಲಿ ಕವಿ ಮನೆಯನ್ನು ಪುನರ್ ನಿರ್ಮಿಸಿ ಪ್ರತಿಷ್ಟಾಪಿಸಲಾಯಿತು. ೧೫೦ ವರ್ಷಗಳಿಂದ ಕುವೆಂಪುರವರ ಅಜ್ಜ, ಮುತ್ತಜ್ಜಂದಿರು ಬಾಳಿ ಬದುಕಿದ ಮನೆ,ಇದು ಮಲೆನಾಡಿನ ಹಸಿರಲ್ಲಿ ಕಂಗೊಳಿಸುತ್ತ ಇಂದು ಕೂಡ ಪ್ರವಾಸಿಗರ ಕಣ್ಣು ಸೆಳೆಯುತ್ತಿದೆ… “ಕಾಡು ಮತ್ತು ಕೊಡತಲಿರುವ ಸೊಬಗವೀಡು ನನ್ನ ಮನೆ” — ಕುವೆಂಪು… ಇಂತಹ ೧೫೦ ವರ್ಷಗಳ ಹಳೆಯ ಮನೆಯನ್ನು ಈಗ ನವೀಕರಿಸಲಾಗಿದೆ. ಎರಡು ಮಹಡಿಗಳು, ಮದ್ಯ ಒಳ ಅಂಗಳ ಇರುವ ಈ ಮನೆ, ಆ ಕಾಲದ ಮಲೆನಾಡಿನ ಜಮೀನುದರರ ಮನೆಯ ಮಾದರಿಯಾಗಿದೆ. ಭೀಮ ಗಾತ್ರದ ಮುಂಡಿಗೆಗಳು ಕೆತ್ತನೆ ಕೆಲಸದಿಂದ ಕೂಡಿದ್ದು, ಮಲೆನಾಡಿನ ಪ್ರಾಚೀನ ಕಾಷ್ಠ ಶಿಲ್ಪ ವೈಭವವನ್ನು ನೆನಪಿಸುವಂತಿದೆ. ಕುವೆಂಪು ಅವರು ಕುಪ್ಪಳ್ಳಿಯಲ್ಲಿದ್ದಾಗ ಬಳಸುತ್ತಿದ್ದ ಅಧ್ಯಯನ ಕೊಠಡಿ, ಅವರು ಸೂರ್ಯೋದವನ್ನು ವೀಕ್ಷಿಸುತ್ತಿದ್ದ ಪೂರ್ವ ದಿಕ್ಕಿಗೆ ತೆರೆದುಕೊಂದಿರುವ ಮಹಡಿ, ‘ಮನೆಯ ಶಾಲೆ’ ನೆಡುಸುತ್ತಿದ್ದ ಸ್ಥಳ, ‘ಅಜ್ಜಯ್ಯನ ಅಭ್ಯಂಜನದ’ ಬಚ್ಚಲು ಮನೆ, ಕೊಳ,ಮನೆಯ ಸಮೀಪದ ಕೆರೆ ಇವು ಸಂದರ್ಶಕರನ್ನು ಭಾವ ಪರವಶವನ್ನಾಗಿಸುತ್ತವೆ. ಕುವೆಂಪು ಅವರ ವಿವಾಹ ನಡೆದ ಮರದ ಮಂಟಪ, ಮೈಸೂರಿನ ಮನೆಯಲ್ಲಿ ಕುವೆಂಪುರವರು ಬಳಸುತ್ತಿದ್ದ ದಿನನಿತ್ಯದ ಬಳುಸುತ್ತಿದ್ದ ವಸ್ತುಗಳು ಮತ್ತು ಅವರಿಗೆ ಬಂದ ಪ್ರಶಸ್ತಿಗಳನ್ನು ಮಹಡಿಯಲ್ಲಿ ಪ್ರದರ್ಶಿಸಲಾಗಿದೆ. ಅವರ ವಸ್ತುಗಳ ಮೊದಲ ಆವೃತ್ತಿಗಳೂ, ಕೆಲವು ಹಸ್ತ ಪ್ರತಿಗಳೂ ಇಲ್ಲಿವೆ. ಕೆಳ ಅಂತಸ್ತಿನ ಹಿಂಬದಿಯ ಹಜಾರದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರು ಸಂಗ್ರಹಿಸಿರುವ ಕುವೆಂಪು ಅವರ ಚಿಕ್ಕವಯಸ್ಸಿನ ಫೋಟೋಗಳು, ಅವರ ಮಕ್ಕಳು, ಮೊಮ್ಮಕ್ಕಳು, ಬಂದುಗಳ ಛಾಯಚಿತ್ರಗಳು, ಕವಿಯ ಬದುಕಿನ ಕೆಲವು ಅವಿಸ್ಮರಣೀಯ ಘಳಿಗೆಗಳ ಚಿತ್ರಗಳನ್ನು ಸಂಗ್ರಹಿಸಲಾಗಿದೆ. ಕುವೆಂಪು ಅವರ ಕಾಲದಲ್ಲಿ ಮಲೆನಾಡಿನ ಮನೆಗಳಲ್ಲಿ ಬಳಸುತ್ತಿದ್ದ ಗೃಹ ಉಪಯೋಗಿ ವಸ್ತುಗಳನ್ನು, ವ್ಯವಸಾಯದ ಸಲಕರಣೆಗಳನ್ನು ಸಹಾ ಸಂಗ್ರಹಿಸಿ ಪ್ರದರ್ಶನಕ್ಕೆ ಇಡಲಾಗಿದೆ… ಕುವೆಂಪು ಬಳಸಿದ ಕೆಲವು ವಸ್ತುಗಳು– ಕುವೆಂಪು ಅವರು ಬಳಸುತ್ತಿದ್ದ ಎಲ್ಲಾ ದಿನಚರಿ ವಸ್ತುಗಳನ್ನು ಒಂದು ಮರದ ಶೋಕೇಸಿನಲ್ಲಿ ಇರಿಸಲಾಗಿದೆ. ಇದರಲ್ಲಿ ಕುವೆಂಪು ಅವರು ಉಪಯೋಗಿಸುತಿದ್ದ ಪಂಚೆ, ಚಪ್ಪಲಿ, ಬಿಳಿಯ ನಿಲುವಂಗಿ, ಶಾಲು, ಲೋಟ, ಕೊಡೆ, ಕೊಡೆಯಲ್ಲಿ ಸಣ್ಣ, ಮಧ್ಯಮ ಹಾಗೂ ದೊಡ್ಡ ಗಾತ್ರದ ಕೊಡೆ. ಆ ಕೊಡೆಯನ್ನು ಊರುಗೋಲಾಗಿ ಕೂಡ ಬಳಸುತಿದ್ದರು. ಜರಿಯ ರುಮಾಲು, ಕೈವಸ್ತ್ರವನ್ನು ಕಾಣಬಹುದು. ಆ ಶೋಕೇಸಿನ ಮೇಲ್ಬಾಗದಲ್ಲಿ ರಸಕವಿಯ ಪುತ್ತಳಿಕೆ, ವಿಶ್ವವಿದ್ಯಾನಿಲಯದಿಂದ ಪದವಿಯನ್ನು ಪಡೆಯುವಾಗ ಧರಿಸಿದ ವಸ್ತ್ರಗಳನ್ನು ಸಂಗ್ರಹಿಸಿ ಇಡಲಾಗಿದೆ. ಈ ಶೋಕೇಸಿನಲ್ಲಿ ಕವಿಯ ಕೂದಲು ಕೂಡ ಇರುವುದು ವಿಶೇಷವಾಗಿದೆ… ಅವರ ಸ್ಮರಣಿಕೆಗಳು ಮತ್ತು ಪ್ರಶಸ್ತಿಗಳು-– ಈ ಶೋಕೇಸಿನಲ್ಲಿ ವಿಶ್ವಮಾನವನಿಗೆ ಸಂದ ಪ್ರಶಸ್ತಿಗಳು ಹಾಗೂ ನೆನಪಿನ ಕಾಣಿಕೆಗಳನ್ನು ಪ್ರದರ್ಶಿಸಲಾಗಿದೆ. ಇದು ಕುವೆಂಪುರವರ ಜೀವನಮಾನ ಸಾಧನೆ, ಸಾಹಿತ್ಯ ಕೃಷಿಯಲ್ಲಿ ಸಂದ ಗೌರವಗಳ ಪ್ರತೀಕವಾಗಿದೆ. ಇಲ್ಲಿ ಹಲವು ನೆನಪಿನ ಕಾಣಿಕೆಗಳು ಕರ್ನಾಟಕದ ಉಚ್ಚ ಪ್ರಶಸ್ತಿ ಕರ್ನಾಟಕ ರತ್ನವನ್ನು ಕಾಣಬಹುದು. ಇದು ನೋಡುಗರ ಬಹು ಮುಖ್ಯ ಕೇಂದ್ರ ಬಿಂದು ಎಂದರೆ ತಪ್ಪಾಗಲಾರದು… ಹೀಗೆ ಕುವೆಂಪು ಅಜರಾಮರ ವಿಶಿಷ್ಟ ಚೇತನ ವಿಶ್ವ ಮಾನವ ಬರಹಗಾರ… ************

ಜ್ಞಾನಪೀಠ ಪ್ರಶಸ್ತಿ ವಿಜೇತರು Read Post »

You cannot copy content of this page

Scroll to Top