ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಗಜಲ್

ಪ್ರಭಾವತಿ ಎಸ್ ದೇಸಾಯಿ

green and purple yarn ball

ಮಲ್ಲಿಗೆಯಿಲ್ಲ ಮುಡಿಯಲಿ ಘಮವಾದರೂ ಇರುಳಿಗೆ ಇರಲಿ
ಶಶಿಯಿಲ್ಲ ನಭದಲಿ ನಕ್ಷತ್ರ ವಾದರೂ ಇರುಳಿಗೆ ಇರಲಿ

ಬತ್ತಿ ಎಣ್ಣೆ ಕುಡಿದು ಖುಷಿಯಲಿ ಹರಡಿತು ಬೆಳಕು ಕೋಣೆಯಲಿ
ಅಮಲೇರಲು ಪ್ರೀತಿಯ ಮಧುವಾದರೂ ಇರುಳಿಗೆ ಇರಲಿ

ಮೌನ ಚೂರಿಯಿಂದ ಇರಿದು ಗಾಯಗೊಳಿಸಿದೆ ಒಲಿದ ಹೃದಯ
ಎದೆಯ ಉರಿ ಆರಲು ಲಾಲಿ ಹಾಡಾದರೂ ಇರುಳಿಗೆ ಇರಲಿ

ಬಯಕೆಯ ಮೃಗಜಲದ ಬೆನ್ನಹಿಂದೆ ಓಡಿ ಓಡಿ ಬಳಲಿದೆ
ಅನುರಾಗದ ಬದುಕಾಗಲು ಕನಸಾದರೂ ಇರುಳಿಗೆ ಇರಲಿ

ಏಕಾಂಗಿಯ ಬೇಸರದ ಉಸಿರು ಎಣಿಸುತಿದೆ ತಾರೆಗಳ
ನೊಂದ ಜೀವಿಗೆ ಸುಖದ “ಪ್ರಭೆ” ಯಾದರೂ ಇರುಳಿಗೆ ಇರಲಿ

******************************************************

About The Author

2 thoughts on “ಗಜಲ್”

  1. Bhagyavati kembhavi

    ಇರಲಿ, ಇರಲಿ ಬದುಕಲಿ ಭರವಸೆ ಇರಲಿ…
    ತುಂಬಾ ಚೆನ್ನಾಗಿದೆ ಮೇಡಂ

Leave a Reply

You cannot copy content of this page

Scroll to Top