ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಅಂಬೇಡ್ಕರ್ ವಿಶೇಷ ಬರಹ ಭಾರತದ ಸಂವಿಧಾನದ ಪೀಠಿಕೆಯೂ..! ಭಾರತದ ಸಂವಿಧಾನದ ಪೀಠಿಕೆಯೂ..! ಭಾರತ ವಾಸಿಗಳಾದ ನಾವು, ಭಾರತವನ್ನು ಸಾರ್ವಭೌಮ ಸಮಾಜವಾದಿ ಜಾತ್ಯಾತೀತ (೧೯೭೬ರಲ್ಲಿ ಇಂದಿರಾಗಾಂಧಿಯವರಿಂದ ಸೇರಿಸಲ್ಪಟ್ಟದ್ದು). ಲೋಕತಂತ್ರಿಕ ಗಣತಂತ್ರವನ್ನಾಗಿ ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲಾ ಪ್ರಜೆಗಳಿಗೆ ಈ ಕೆಳಗಿನ ಹಕ್ಕುಗಳಾದ– ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ; ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ; ಗಳನ್ನು ದೊರಕಿಸಿ, ವೈಯುಕ್ತಿಕ ಘನತೆ ಮತ್ತು ದೇಶದ ಒಗ್ಗಟ್ಟು ಮತ್ತು ಐಕ್ಯತೆಗೆ ಎಲ್ಲರಲ್ಲೂ ಭ್ರಾತೃತ್ವತೆಯನ್ನು ಪ್ರೋತ್ನಾಹಿಸಲು ನಿರ್ಧರಿಸಿ; ನಮ್ಮ ಸಂವಿಧಾನ ರಚನಾಸಭೆಯಲ್ಲಿ ಈ ೧೯೪೯ರ ನವೆಂಬರ್ ಮಾಹೆಯ ೨೬ನೇ ದಿನದಂದು, ನಾವಾಗಿ ನಾವೇ ಈ ಸಂವಿಧಾನವನ್ನು ಸ್ವೀಕರಿಸಿ, ಶಾಸನವನ್ನಾಗೆ ವಿಧಿಸಿಕೊಂಡೆವು. …… ಸಾಂವಿಧಾನಿಕ ಸ್ಥಾನಮಾನ– ಪೀಠಿಕೆಯು ಭಾರತದ ಸಂವಿಧಾನದ ಒಂದು ಅಂಗವಲ್ಲ; ಏಕೆಂದರೆ ಇದನ್ನು ನ್ಯಾಯಾಲಯದಲ್ಲಿ ಪ್ರಯೋಗಿಸಲು ಸಾಧ್ಯವಿಲ್ಲ. ಹಾಗಿದ್ದರೂ, ಸಂವಿಧಾನದಲ್ಲಿ ದ್ವಂದ್ವ ಇರುವಂತೆ ಕಂಡುಬರುವಲ್ಲಿ ಪೀಠಿಕೆಯನ್ನು ಉಪಯೋಗಿಸಿ ದ್ವಂದ್ವ ನಿವಾರಿಸಬಹುದಾದ ಕಾರಣ ಸರ್ವೋಚ್ಛ ನ್ಯಾಯಾಲಯವು ಪೀಠಿಕೆಯನ್ನು ಸಂವಿಧಾನದ ಒಂದು ಅಂಗವಾಗಿ ಪರಿಗಣಿಸಿದೆ. ಇದಕ್ಕೆ ಉದಾಹರಣೆ, ‘ಕೇಶವಾನಂದ ಭಾರತಿ ಮತ್ತು ಕೇರಳ ಸರ್ಕಾರ’ ಪ್ರಕರಣ. ಅದಾಗ್ಯೂ, ಪೀಠಿಕೆಯನ್ನು ಸಂವಿಧಾನದ ಲೇಖನದಲ್ಲಿ ದ್ವಂದ್ವ ಇದ್ದಾಗ ಮಾತ್ರ, ಮತ್ತಷ್ಟು ಅರ್ಥವತ್ತಾಗಿಸುವ ಸಾಧನವನ್ನಾಗಿ ಬಳಸಬಹುದೇ ಹೊರತು, ಹಕ್ಕು ಸಾಧಿಸುವ ಸಂವಿಧಾನದ ಒಂದು ಪ್ರತ್ಯೇಕ ವಿಭಾಗವೆಂದು ಪರಿಗಣಿಸಲಾಗದು. ಪೀಠಿಕೆಯ ಮೂಲಪ್ರತಿಯಲ್ಲಿ “ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯ” ಎಂದಿತ್ತು. ಎರಡು ಹೆಚ್ಚಿನ ಪದಗಳಾದ “ಸಮಾಜವಾದಿ” ಮತ್ತು “ಜಾತ್ಯಾತೀತ” ಪದಗಳನ್ನು ೧೯೭೬ ರಲ್ಲಿ ಸಂವಿಧಾನದ ೪೨ ನೆಯ ತಿದ್ದುಪಡಿಯಲ್ಲಿ ಸೇರಿಸಲಾಯಿತು. ಆ ಸಮಯದಲ್ಲಿ ತುರ್ತುಪರಿಸ್ಥಿತಿ ಜಾರಿಯಲ್ಲಿದ್ದಿದ್ದರಿಂದ, ಸಂವಿಧಾನಕ್ಕೆ ತಿದ್ದುಪಡಿ ತರಲು ಸಾಧ್ಯವೇ ಎಂಬುದನ್ನು ಹಿಂದಿನ ಅನುಭವದ ಆಧಾರದಲ್ಲಿ ಪರಿಶೀಲಿಸಿ, ಸರ್ದಾರ್ ಸ್ವರಣ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿನ ಸಮಿತಿಯು ಈ ತಿದ್ದುಪಡಿಯನ್ನು ಕಾರ್ಯಗತಗೊಳಿಸಬಹುದೆಂದು ಶಿಫಾರಸು ಮಾಡಿತು. ಪೀಠಿಕೆಯ ಮಹತ್ವ– ಪೀಠಿಕೆಯಲ್ಲಿರುವ ಕೆಲವು ವಾಕ್ಯಗಳು, ಭಾರತದ ಸಂವಿಧಾನವು ರಚಿತವಾಗಿರುವ ಕೆಲವು ಮೂಲಭೂತ ಮೌಲ್ಯಗಳು ಮತ್ತು ಸಾತ್ವಿಕ ಸೂಚಿಗಳನ್ನು ಎತ್ತಿ ತೋರಿಸುತ್ತದೆ. ಈ ಪೀಠಿಕೆಯು ನಮ್ಮ ಸಂವಿಧಾನದ ದಿಕ್ಸೂಚಿಯಂತೆ ಕೆಲಸ ಮಾಡುತ್ತದೆ ಮತ್ತು ನ್ಯಾಯಾಧೀಶರು ಸಂವಿಧಾನವನ್ನು ಇದೇ ದಾರಿಯಲ್ಲಿ ವ್ಯಾಖ್ಯಾನಿಸಿ ಮುನ್ನಡೆಸುತ್ತಾರೆ. ಭಾರತದ ಸಂವಿಧಾನದ ಪೀಠಿಕೆಯಲ್ಲಿ ವ್ಯಕ್ತಪಡಿಸಿರುವ ಹಾಗು ತಿದ್ದುಪಡಿ ಮಾಡಲು ಸಾದ್ಯವಿಲ್ಲದ ಆಶಯಗಳನ್ನು ಬಹಳಷ್ಟು ಸಂದರ್ಭಗಳಲ್ಲಿ ಭಾರತದ ಸರ್ವೋಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ. ಪೀಠಿಕೆಯು ಸಂವಿಧಾನದ ಒಂದು ಭಾಗವಾದರೂ ಅದನ್ನು ಅಥವಾ ಅದರ ಯಾವುದೇ ಅಂಶವನ್ನು ಕಾನೂನಿಗನುಸಾರವಾಗಿ ಜಾರಿ(ಹೇರು) ಮಾಡುವಂತಿಲ್ಲ. ಪೀಠಿಕೆಯ ಮೊದಲ ಪದಗಳು – “ನಾವು, ಜನಗಳು ” – ಭಾರತಲ್ಲಿ ಅಧಿಕಾರ ಜನಗಳ ಕೈನಲ್ಲಿದೆ ಎಂಬ ಅಂಶದ ಪ್ರಾಮುಖ್ಯತೆಯನ್ನು ಹೇಳುತ್ತದೆ. ಪೀಠಿಕೆಯು, ಭಾರತದ ಪ್ರತಿಯೂಬ್ಬ ನಾಗರೀಕ ಹಾಗೂ ಸರ್ಕಾರ ಅನುಸರಿಸಬೇಕಾದ ಮತ್ತು ಸಾಧಿಸಬೇಕಾದ ಬಹು ಮುಖ್ಯ ರಾಷ್ಟ್ರೀಯ ಧ್ಯೇಯಗಳನ್ನು ಬಿಡಿಸಿ ಹೇಳುತ್ತದೆ. ಅವುಗಳೆಂದರೆ ಸಮಾಜವಾದ, ಜಾತಿ ನಿರಪೇಕ್ಷತೆ ಮತ್ತು ರಾಷ್ಟ್ರೀಯ ಭಾವೈಕ್ಯತೆ. ಕೊನೆಯದಾಗಿ ಅದರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ದಿನಾಂಕ – ನವೆಂಬರ್ ೨೬ ೧೯೪೯ ಎಂದು ಹೇಳುತ್ತದೆ. ಪೀಠಿಕೆಯ ಕೆಲವು ಪದಗಳ ನಿರೂಪಣೆ ಸಂಪಾದಿಸಿ ಸಾರ್ವಭೌಮ– ಸಾರ್ವಭೌಮ ಎಂಬ ಪದದ ಅರ್ಥ ಪರಮಾಧಿಕಾರ ಅಥವಾ ಸ್ವತಂತ್ರ ಎಂದು. ಭಾರತವು ಆಂತರಿಕವಾಗಿ ಹಾಗೂ ಬಾಹ್ಯವಾಗಿ ಸಾರ್ವಭೌಮ. ಬಾಹ್ಯವಾಗಿ ಯಾವುದೇ ವಿದೇಶೀ ಶಕ್ತಿಯ ಅಧೀನದಲ್ಲಿ ಭಾರತ ಇಲ್ಲ ಹಾಗೂ ಆಂತರಿಕವಾಗಿ ಒಂದು ಮುಕ್ತ, ಜನರಿಂದ ಆರಿಸಲ್ಪಟ್ಟ ಸರಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತದೆ. ಭಾರತ ಕಾಮನ್ವೆಲ್ತ್ ರಾಷ್ಟ್ರಗಳ ಒಕ್ಕೂಟದಲ್ಲಿ ಸದಸ್ಯ ಸ್ಥಾನ ಪಡೆದಿದೆ. ಹಾಗಂತ ಬ್ರಿಟೀಷರ ಅಡಿಯಾಳಲ್ಲ. ವಿಶ್ವದಲ್ಲಿ ಉತ್ತಮವಾದ ಸ್ಥಾನಮಾನ ಪಡೆಯಲು ಇದು ಅವಶ್ಯಕ. ಅಂತರರಾಷ್ಟ್ರೀಯ ವ್ಯಾಪಾರವನ್ನು ಕೈಗೊಂಡು ದೇಶದ ಆರ್ಥಿಕ ಭದ್ರತೆಗೆ ಈ ರೀತಿಯ ಸದಸ್ಯತ್ವ ಅವಶ್ಯಕವಾಗಿದೆ. ಸಮಾಜವಾದಿ– ಸಮಾಜವಾದಿ ಪದವು ಪೀಠಿಕೆಗೆ ೧೯೭೬ರಲ್ಲಿ ೪೨ನೇ ತಿದ್ದುಪಡಿಯಿಂದ ಸೇರಿಸಲ್ಪಟ್ಟಿತು. ಇದರ ಅರ್ಥ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ. ಸಾಮಾಜಿಕ ಸಮಾನತೆಯ ಅರ್ಥ ಧರ್ಮ, ಜಾತಿ, ಲಿಂಗ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ತಾರತಮ್ಯ ಮಾಡದೇ ಇರುವುದು. ಸಾಮಾಜಿಕ ಸಮಾನತೆಯ ಅಡಿಯಲ್ಲಿ ಎಲ್ಲರಿಗೂ ಸಮಾನ ಸ್ಥಾನಮಾನ ಮತ್ತು ಅವಕಾಶಗಳಿವೆ. ಆರ್ಥಿಕ ಸಮಾನತೆಯ ಅರ್ಥ ಭಾರತ ಸರಕಾರ ಎಲ್ಲರಿಗೂ ಸಮಾನ ಆರ್ಥಿಕ ಅವಕಾಶಗಳನ್ನು ಹಾಗೂ ಎಲ್ಲರಿಗೂ ಯೋಗ್ಯವಾದ ಜೀವನಮಟ್ಟವನ್ನು ಕಲ್ಪಿಸಲು ಯತ್ನಿಸುತ್ತದೆ. ಇದರ ತತ್ತ್ವಾರ್ಥ ಒಂದು ಸುಖೀ ರಾಜ್ಯದ ನಿರ್ಮಾಣಕ್ಕೆ ಬದ್ಧರಾಗುವುದಾಗಿದೆ. ಭಾರತವು ಮಿಶ್ರ ಅರ್ಥವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಸರಕಾರವು ಸಾಮಾಜಿಕ ಸಮಾನತೆಯನ್ನು ಸಾಧಿಸಲು ಬಹಳಷ್ಟು ಕಾನೂನುಗಳನ್ನು ಮಾಡಿದೆ. ಇವುಗಳಲ್ಲಿ ಅಸ್ಪೃಶ್ಯತೆ ಮತ್ತು ಜೀತಪದ್ಧತಿ ನಿವಾರಣೆ, ಸಮಾನ ಭತ್ಯೆ ಮಸೂದೆ ಮತ್ತು ಬಾಲಕಾರ್ಮಿಕ ನಿಷೇಧ ಮಸೂದೆ ಸೇರಿವೆ. ಜಾತ್ಯತೀತ– ಜಾತ್ಯತೀತ ಎಂಬ ಪದವನ್ನು ಪೀಠಿಕೆಗೆ ೧೯೭೬ರ ೪೨ನೇ ತಿದ್ದುಪಡಿಯ ಮೂಲಕ ಸೇರಿಸಲಾಯಿತು. ಇದರ ಅರ್ಥ ಎಲ್ಲ ಧರ್ಮಗಳ ಸಮಾನತೆ ಮತ್ತು ಧಾರ್ಮಿಕ ಸಹನೆ. ಭಾರತವು ಯಾವುದೇ ಅಧಿಕೃತ ಧರ್ಮವನ್ನು ಹೊಂದಿಲ್ಲ. ಪ್ರತಿಯೊಬ್ಬರಿಗೂ ತಮ್ಮ ಆಯ್ಕೆಯ ಧರ್ಮದ ಪ್ರಚಾರವನ್ನು ಮಾಡುವ ಹಾಗೂ ಆಚರಿಸುವ ಹಕ್ಕಿದೆ. ಸರಕಾರವು ಯಾವುದೇ ಧರ್ಮದ ಪರ ಅಥವಾ ವಿರುದ್ಧ ನಿಲುವನ್ನು ತಳೆಯುವಂತಿಲ್ಲ. ಎಲ್ಲ ಪ್ರಜೆಗಳು ತಮ್ಮ ಧಾರ್ಮಿಕ ಭಾವನೆಗಳ ಹೊರತಾಗಿಯೂ ಕಾನೂನಿನ ಕಣ್ಣಿನಲ್ಲಿ ಸಮಾನರಾಗಿದ್ದಾರೆ. ಸರಕಾರೀ ಅನುದಾನಿತ ಶಾಲೆಗಳಲ್ಲಿ ಯಾವುದೇ ಧರ್ಮದ ಆಚಾರ-ಪ್ರಚಾರ ನಡೆಯುವಂತಿಲ್ಲ. ಬೊಮ್ಮಾಯಿ vs ಭಾರತ ಸರಕಾರ ದಾವೆಯಲ್ಲಿ ಸರ್ವೋಚ್ಛ ನ್ಯಾಯಾಲಯವು ಜಾತ್ಯತೀತತೆಯು ಭಾರತ ಸಂವಿಧಾನದ ವಿನ್ಯಾಸದ ಒಂದು ಸಮಗ್ರ ಅಂಗ ಎಂದು ಭಾವಿಸಿದೆ. ಪ್ರಜಾಸತ್ತಾತ್ಮಕ– ಪ್ರಜಾಸತ್ತಾತ್ಮಕವಾದ ಭಾರತ ದೇಶದ ಪ್ರಜೆಗಳು ಕೇಂದ್ರ, ರಾಜ್ಯ ಹಾಗೂ ಪ್ರಾದೇಶಿಕ ವಿಭಾಗಗಳಲ್ಲಿ ತಮ್ಮ ಸರಕಾರವನ್ನು ಸಾರ್ವತ್ರಿಕ ಮತಾಧಿಕಾರದ ಪದ್ಧತಿಯ ಮೂಲಕ ಆರಿಸುತ್ತಾರೆ. ಭಾರತದ ಎಲ್ಲ ೧೮ ವರ್ಷಗಳ ವಯೋಮಿತಿಯ ಮೇಲಿರುವ ಕಾನೂನುಬದ್ಧ ಮತ ಚಲಾಯಿಸುವ ಅಧಿಕಾರ ಹೊಂದಿರುವ ಪ್ರಜೆಗಳು ಧರ್ಮ, ಜಾತಿ, ಮತ, ಲಿಂಗ ಅಥವಾ ಶಿಕ್ಷಣ ಮಟ್ಟದ ಭೇದವಿಲ್ಲದೇ ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ. ಗಣತಂತ್ರ– ಗಣತಂತ್ರವು ರಾಜಪ್ರಭುತ್ವಕ್ಕೆ ವಿರುದ್ದವಾದದ್ದು. ರಾಜಪ್ರಭುತ್ವದಲ್ಲಿ ಒಂದು ರಾಜ್ಯದ ಮುಖ್ಯಸ್ತರು ವಂಶ ಪಾರಂಪರೆಯ ಆಧಾರದ ಮೇಲೆ ಜೀವಮಾನದವರೆಗೆ ಅಥವಾ ಸಿಂಹಾಸನವನ್ನು ತ್ಯಜಿಸುವವರೆಗೆ ನೇಮಿತಗೊಳ್ಳುತ್ತಾರೆ. ಪ್ರಜಾಪ್ರಭುತ್ವದ ಗಣತಂತ್ರದಲ್ಲಿ, ಆ ರಾಜ್ಯದ ಮುಖ್ಯಸ್ತನನ್ನು ಒಂದು ನಿರ್ದಿಷ್ಟ ಅವಧಿಗೆ ಮಾತ್ರ ಆರಿಸಲಾಗುವುದು. ರಾಷ್ಟ್ರಪತಿಯನ್ನು ೫ ವರ್ಷಗಳ ಒಂದು ನಿರ್ಧಿಷ್ಟ ಅವಧಿಗೆ ಚುನಾಯಿಸಲಾಗುವುದು..! ******************************************* ಕೆ.ಶಿವು.ಲಕ್ಕಣ್ಣವರ

Read Post »

ಇತರೆ

ಅಂಬೇಡ್ಕರ್ ಜಯಂತಿ ವಿಶೇಷ ಬರಹ ಅಸ್ಪೃಶ್ಯತೆಯ ವಿರುದ್ದ ಅಂಬೇಡ್ಕರ್ ರವರ ಹೋರಾಟ ೧೯೨೭ರಿಂದ ೧೯೩೨ರವರೆಗೆ, ಅಹಿಂಸಾತ್ಮಕ ಆಂದೋಲನಗಳ ಮುಂದಾಳತ್ವ ವಹಿಸಿ ಅಸ್ಪೃಶ್ಯರಿಗೆ ದೇವಾಲಯ ಪ್ರವೇಶದ ಹಕ್ಕು, ಸಾರ್ವಜನಿಕ ಕೆರೆ, ಬಾವಿಗಳಿಂದ ನೀರು ಸೇದುವ ಹಕ್ಕು ಇತ್ಯಾದಿಗಳಿಗಾಗಿ ಹೋರಾಡಿದರು. ಇವುಗಳಲ್ಲಿ ನಾಸಿಕದಲ್ಲಿಯ ಕಾಳ ರಾಮನ ದೇವಸ್ಥಾನ ಮತ್ತು ಮಹಾಡದ ಚೌಡಾರ್ ಕೆರೆಯ ವಿಷಯವಾಗಿ ಅಸ್ಪೃಶ್ಯರನ್ನು ಹೊರಗಿಟ್ಟಿರುವರ ವಿರುದ್ಧ ಮಾಡಿದ ಆಂದೋಲನಗಳು ಗಮನಾರ್ಹವಾಗಿವೆ. ಸಹಸ್ರಾರು ಅಸ್ಪೃಶ್ಯ ಸತ್ಯಾಗ್ರಹಿಗಳು ಭಾಗವಹಿಸಿದ ಈ ಅಹಿಂಸಾತ್ಮಕ ಚಳುವಳಿಗಳಿಗೆ ಸವರ್ಣೀಯರು ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿದರು. ನ್ಯಾಯಾಲಯದ ಕಟ್ಟೆ ಹತ್ತಿದ ಚೌಡಾರ್ ಕೆರೆಯ ಚಳುವಳಿಯು, ಅನೇಕ ವರ್ಷಗಳ ನಂತರ, ಕೆಳವರ್ಗಗಳ ಪರವಾಗಿ ವಿಜಯ ಸಾಧಿಸು ವುದರೊಂದಿಗೆ ಪರ್ಯವಸಾನ ಹೊಂದಿತು. ಅಸ್ಪೃಶ್ಯರನ್ನು ಸಮಾಜ ನಡೆಸಿಕೊಳ್ಳುತ್ತಿದ್ದ ಕ್ರೂರ ರೀತಿಗೆ ಮೂಲ ಕಾರಣ ‘ಮನುಸ್ಮೃತಿ’ ಎಂದು ಅಂಬೇಡ್ಕರ್ ನಂಬಿದ್ದರು. ಮನುಸ್ಮೃತಿಯನ್ನು ಇದೇ ಚಳುವಳಿಯಲ್ಲಿ ವಿಧ್ಯುಕ್ತವಾಗಿ ದಹನ ಮಾಡಲಾಯಿತು. ಈ ಕೃತಿಯನ್ನು ಹೀಗೆ ಸಾರ್ವಜನಿಕವಾಗಿ ಅವಮರ್ಯಾದೆ ಮಾಡುವುದರ ಮೂಲಕ ಅಂಬೇಡ್ಕರರ ಅನುಯಾಯಿಗಳು ಸಮಾನತೆಯ ಹಕ್ಕು ಪ್ರತಿಪಾದನೆ ಮಾಡಬಯಸಿದ್ದರು. ಆದರೆ, ಹಿಂದೂ ಧರ್ಮದ ಅನುಯಾಯಿಗಳಲ್ಲಿ ಮನುಸ್ಮೃತಿಯ ಮಹತ್ವವೇನು ಎಂಬುದೇ ಅಸ್ಪಷ್ಟ ಹಾಗೂ ವಿವಾದಿತ ವಿಷಯವಾದ್ದರಿಂದ, ಅದರಲ್ಲಿಯೂ ಮುಖ್ಯವಾಗಿ ಮನುಸ್ಮೃತಿಯನ್ನು ಹಿಂದೂ ಧರ್ಮಶಾಸ್ತ್ರಗಳಲ್ಲಿ ಒಂದಾಗಿ ಪರಿಗಣಿಸದೇ ಇದ್ದು, ಹಳ್ಳಿಗಾಡುಗಳಿಂದ ಹೊರಗೆ ಅದಕ್ಕೆ ಧಾರ್ಮಿಕ ಮಹತ್ವವೂ ಇಲ್ಲದಿದ್ದುದರಿಂದ, ಈ ಉದ್ದೇಶ ನೆರವೇರಿತೋ ಇಲ್ಲವೂ ಎಂಬುದು ಚರ್ಚಾಸ್ಪದ. ಮೊದಲೇ ತಮ್ಮ ಚಟುವಟಿಕೆಗಳಿಂದ ಸಂಪ್ರದಾಯಶೀಲ ಹಿಂದೂಗಳ ಅಸಮಾಧಾನವನ್ನು ಗಳಿಸಿದ್ದ ಅಂಬೇಡ್ಕರ್ , ೧೯೩೧-೩೨ ರಲ್ಲಿ ಮತ್ತಷ್ಟು ಅಪ್ರಿಯರಾದರು. ಅವರೇ ಹೇಳಿಕೊಂಡಂತೆ, ಭಾರತದ ಹಿಂದುಗಳು ಅತ್ಯಂತ ದ್ವೇಷಿಸುವ ವ್ಯಕ್ತಿಯಾದರು. ಅಂಬೇಡ್ಕರ್ ದಲಿತರಿಗೆ ಪ್ರತ್ಯೇಕ ಚುನಾವಣಾ ಕ್ಷೇತ್ರಕ್ಕಾಗಿ ಪಟ್ಟು ಹಿಡಿದದ್ದೇ ಈ ಅಸಮಾಧಾನಕ್ಕೆ ಕಾರಣವಾಗಿತ್ತು. ಮಹಾತ್ಮ ಗಾಂಧಿ ಹಾಗೂ ಕಾಂಗ್ರೇಸ್ ಪಕ್ಷದ ಧೋರಣೆ ಇದಕ್ಕೆ ವಿರೋಧವಾಗಿತ್ತು. ಗಾಂಧಿ ಹಾಗೂ ಅಂಬೇಡ್ಕರರಲ್ಲಿ ಈ ವಿಷಯದ ಮೇಲೆ ಎರಡನೆಯ ದುಂಡು ಮೇಜಿನ ಪರಿಷತ್ತಿನಲ್ಲಿ ಚಕಮಕಿಯೂ ನಡೆದಿತ್ತು. ಹಿಂದೂ ಸಮಾಜದಿಂದ ಜಾತಿಪದ್ಧತಿ ಹಾಗೂ ತಾರತಮ್ಯ ವನ್ನು ನಿರ್ಮೂಲನ ಮಾಡುವ ಪರವಾಗಿದ್ದ ಗಾಂಧಿ, ದಲಿತರ ಹಿತರಕ್ಷಣೆಗಾಗಿ ದನಿಯೆತ್ತಿದ ಮೊದಲಿಗರಲ್ಲಿ ಒಬ್ಬರಾಗಿದ್ದರೂ, ಬ್ರಿಟಿಷರಿಗೆ ಈ ವಿಷಯದಲ್ಲಿ ಹಿಂದೂಗಳನ್ನು ಜಾತಿಯ ಆಧಾರದ ಮೇಲೆ, ರಾಜಕೀಯವಾಗಿ ಒಡೆಯಲು ಅವಕಾಶ ಕೊಡಬಾರದೆಂಬುದು ಅವರ ನಿಲುವಾಗಿತ್ತು. ೧೯೩೨ರಲ್ಲಿ ಬ್ರಿಟಿಷರು ಜಾರಿಗೆ ತಂದ ಕೋಮುವಾರು ಕಾನೂನಿನಲ್ಲಿ ಅಸ್ಪೃಶ್ಯರಿಗೆ ಪ್ರತ್ಯೇಕ ಕ್ಷೇತ್ರವನ್ನು ಮಂಜೂರು ಮಾಡಲಾಯಿತು. ಇದಕ್ಕೆ ಪ್ರತಿಭಟನೆಯಾಗಿ ಗಾಂಧಿ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡ ಫಲವಾಗಿ, ಅಂಬೇಡ್ಕರ್, ಕಾಂಗ್ರೇಸ್ ಮತ್ತು ಸನಾತನ ಹಿಂದೂ ಮುಖಂಡರೊಂದಿಗೆ ಚರ್ಚಿಸಿ, ಕೊನೆಗೂ ಪ್ರತ್ಯೇಕ ಕ್ಷೇತ್ರ ಹಾಗೂ ಕೋಟಾ ಬೇಡಿಕೆಯನ್ನು ಕೈಬಿಟ್ಟರು.ಇದಕ್ಕೆ ಪ್ರತಿಯಾಗಿ, ಕಾಂಗ್ರೆಸ್ ಪಕ್ಷವು, ಅಸ್ಪೃಶ್ಯರಿಗೆ ಪ್ರಾತಿನಿಧ್ಯವನ್ನು ಹೆಚ್ಚುಮಾಡಲು ಒಪ್ಪಿಕೊಂಡಿತು. ಹಿಂದೂ ಧಾರ್ಮಿಕ ಮುಖಂಡರುಗಳು ಅಸ್ಪೃಶ್ಯತೆಯ ಹಾಗೂ ಜಾತ್ಯಾಧಾರಿತ ತಾರತಮ್ಯದ ವಿರುದ್ಧವಾಗಿ ಹೆಚ್ಚು ಹೆಚ್ಚಾಗಿ ದನಿಯೆತ್ತ ತೊಡಗಿದರು. ಇಂದು ಡಾ. ಅಂಬೇಡ್ಕರ್ ಅವರನ್ನು ಭಾರತದ ಸಂವಿಧಾನ ಶಿಲ್ಪಿ ಎಂದು ಮುಕ್ತ ಕಂಠದಿಂದ ಹೇಳಲಾಗುತ್ತಿದೆ.ಇದೇ ವೇಳೆಗೆ ಸ್ವತಂತ್ರವಾದ ಅನೇಕ ದೇಶಗಳು ಸಾರ್ವಜನಿಕರ ಹಕ್ಕುಗಳನ್ನು ಕಾಪಾಡಲು ಅಸಮರ್ಥರಾದ ಹಿನ್ನೆಲೆಯಲ್ಲಿ ಭಾರತದ ಈ ಸಂವಿಧಾನ ಎದ್ದು ಕಾಣುತ್ತದೆ ಹಾಗೂ ಇದಕ್ಕೆ ಡಾ. ಅಂಬೇಡ್ಕರ್ ಕೊಡುಗೆಯನ್ನು ಸಾರ್ವಜನಿಕವಾಗಿ ಒಪ್ಪಿಕೊಳ್ಳಲಾಗಿದೆ. ಜಾತಿ ಪದ್ಧತಿಯ ಪುನರ್ವಿಮರ್ಶೆ ನಡೆಸಲು ಸನಾತನಿ ಹಿಂದೂಗಳ ಅನಾಸಕ್ತಿಯಿಂದ, ಭ್ರಮನಿರಸನವಾದಂತೆ ಅನ್ನಿಸಿದ್ದು ಹಾಗೂ ಮಹತ್ವದ ರಾಜಕೀಯ ವಿಷಯಗಳಲ್ಲಿ ಗಾಂಧಿಯವರ ಅಭಿಪ್ರಾಯಗಳಿಗೆ ಮಣಿಯಬೇಕಾಗಿ ಬಂದದ್ದು, ಅಂಬೇಡ್ಕರರನ್ನು ಅಸಮಾಧಾನಕ್ಕೀಡು ಮಾಡಿತು. ಪ್ರತ್ಯೇಕ ಚುನಾವಣಾ ಕ್ಷೇತ್ರದ ವಿಷಯದಲ್ಲಿ ಎದುರಿಸಿದ ಪ್ರತಿಭಟನೆ ಮತ್ತು, ಕೆಲವು ದೇವಸ್ಥಾನಗಳಲ್ಲಿ ಅಸ್ಪೃಶ್ಯರಿಗೆ ಪ್ರವೇಶ ಇನ್ನೂ ನಿಷಿದ್ಧವಾಗಿರುವುದು ಭಾಗಶಃ ಇವುಗಳ ಫಲವಾಗಿ, ಅಂಬೇಡ್ಕರ್ ತಮ್ಮ ಯೋಜನೆಯನ್ನು ಬದಲಾಯಿಸಿದರು. ತಮ್ಮ ಅನುಯಾಯಿಗಳ ಜೀವನಮಟ್ಟವನ್ನು ಹೆಚ್ಚಿಸಿ ಕೊಂಡು , ರಾಜಕೀಯ ಅಧಿಕಾರವನ್ನು ಗಳಿಸುವತ್ತ ಲಕ್ಷ್ಯವಿಡಬೇಕೆಂದು ಆದೇಶಿಸಿದರು.ಜೊತೆಗೆ, “ಹಿಂದೂ ಧರ್ಮದಲ್ಲಿ ಅಸ್ಪೃಶ್ಯರ ಏಳಿಗೆ ಅಸಾಧ್ಯವಾದ್ದರಿಂದ ಅವರು ಬೇರೆಧರ್ಮಕ್ಕೆ ಮತಾಂತರಗೊಳ್ಳಬೇಕು”ಎಂಬ ಆಲೋಚನೆ ಮಾಡತೊಡಗಿದರು. ಇದಕ್ಕೆ ಹಿಂದೂ ಸಮಾಜ ದಿಂದ,ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಆ ವರ್ಷದಲ್ಲಿ ಅಂಬೇಡ್ಕರ್ ಖಾಸಗಿ ಜೀವನದಲ್ಲಿ ಕೆಲವು ಮಹತ್ವದ ಘಟನೆಗಳು ಘಟಿಸಿದವು: ಅಂಬೇಡ್ಕರರನ್ನು ಮುಂಬಯಿಯ ಸರಕಾರೀ ಕಾನೂನು ಕಾಲೇಜಿನ ಪ್ರಾಂಶುಪಾಲರಾಗಿ ನೇಮಕ ಮಾಡಿಕೂಳ್ಳಲಾಯಿತು. ನಂತರ ಅಂಬೇಡ್ಕರರು ತಮ್ಮದೇ ಆದ ಸ್ವಂತ ಮನೆ ಮಾಡಿ, ೫೦,೦೦೦ಕ್ಕೂ ಹೆಚ್ಚಿನ ಪುಸ್ತಕಗಳ ಗ್ರಂಥಾಲಯವನ್ನು ಕಟ್ಟಿಕೊಂಡರು. ಇದೇ ವರ್ಷ ಅವರ ಪತ್ನಿ ರಮಾಬಾಯಿಯವರು ಮರಣ ಹೊಂದಿದರು. ೧೯೦೮ರಲ್ಲಿ ಅವರ ಮದುವೆಯಾದಾಗ ಅಂಬೇಡ್ಕರ್ ವಯಸ್ಸು ಹದಿನಾರಾದರೆ, ಅವರ ಹೆಂಡತಿ ಕೇವಲ ಒಂಭತ್ತು ವರ್ಷದವರಾಗಿದ್ದರು. ಅವರಿಗೆ ಹುಟ್ಟಿದ ಐದು ಮಕ್ಕಳಲ್ಲಿ ಉಳಿದದ್ದು ಒಬ್ಬರೇ. ಅಂಬೇಡ್ಕರ್ ರವರು ಈ ಭೂಮಿ ಮೇಲೆ ಜನಿಸದಿದ್ದರೆ ಇಂದು ಅನೇಕ ಅಸ್ಪೃಷರ ಸ್ಥಿತಿ ಊಹಿಸಲೂ ಅಸಾಧ್ಯ. ಅಸ್ಪೃಶ್ಯ ರಿಗೆ ನ್ಯಾಯ ಒದಗಿಸಲು ಅವರು ಪಟ್ಟ ಶ್ರಮ ನಿಜಕ್ಕೂ ಶ್ಲಾಘನೀಯ. ಅವರ ನಡೆ ನುಡಿ ಆದರ್ಶ ಪ್ರತಿಯೊಬ್ಬರಿಗೂ ಆದರ್ಶಪ್ರಾಯ. *************************** ಆಶಾ ಸಿದ್ದಲಿಂಗಯ್ಯ .

Read Post »

ಅಂಕಣ ಸಂಗಾತಿ, ಕಾಲಾ ಪಾನಿ

ಅಂಕಣ ಬರಹ ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ ಸರಣಿಬರಹ……….. ಅದ್ಯಾಯ-5 ಹ್ಯಾವ್ಲೊಕ್ ಲ್ಲಿ ನಮ್ಮ ರೆಸಾರ್ಟ್ ಹಿಂಭಾಗದ ಸಣ್ಣ ಖಾಸಗಿ ಬೀಚ್ ನ ಉದ್ದಕ್ಕೂ ಸರಸ್ವತಿ ಮತ್ತು ನಾನು ಎಷ್ಟು ದೂರ ನಡೆದೆವೋ ವಾಪಸ್ಸು ಬರಬೇಕೆಂದೇ ಅನಿಸಲಿಲ್ಲ.  ಮಕ್ಕಳು ಅಲ್ಲಿ ಇಲ್ಲಿ ಓಡಾಡಿಕೊಂಡು ಮೊಬೈಲಲ್ಲಿ, ಕ್ಯಾಮರಾದಲ್ಲಿ ಫೋಟೊ ತೆಗೆದುಕೊಳ್ಳುವುದರಲ್ಲೇ ಮಗ್ನರಾಗಿದ್ದರು. ಗಣೇಶಣ್ಣ ಸತೀಶ್ ಇಬ್ಬರೂ ಅಲ್ಲಿದ್ದ ಬೆಂಚ್ ಮೇಲೆ ಆರಾಮಾಗಿ ಅಲೆಗಳನ್ನು ನೋಡುತ್ತಾ ಕೂತರು. ನಾವು ತಿರುಗಿ ಬಂದರೂ ಮಕ್ಕಳಿಗೆ ರೂಮು ಸೇರಲು ಮನಸ್ಸೇ ಇಲ್ಲ. ಇನ್ನೂ ಸ್ವಲ್ಪ ಇನ್ನೂ ಸ್ವಲ್ಪ ಹೊತ್ತು ಎಂದು ಅಲ್ಲೇ ಇದ್ದುದರಿಂದ ನಾವೂ ಅಲ್ಲೇ ಕೂತು, ಅದು ಇದು ಮಾತು ಹಾಡು ಎಂದು ಹತ್ತೂವರೆಯವರೆಗೆ ಸಮಯ ಕಳೆದು, ಮರುದಿನ ಬೆಳಿಗ್ಗೆ ಎಂಟು ಗಂಟೆಯ ಒಳಗೆ ತಯಾರಾಗಲು ಹೇಳಿದುದರಿಂದ ಮಕ್ಕಳನ್ನು ಹೊರಡಿಸಿ ನಮ್ಮ ನಮ್ಮ ಕಾಟೇಜ್ ಸೇರಿದೆವು. ನಮ್ಮ ಮಕ್ಕಳು ಇಬ್ಬರಿದ್ದುದರಿಂದ ಎಲ್ಲಾ ಕಡೆ, ಅವರಿಗೆ ಪ್ರತ್ಯೇಕ ಕೊಠಡಿ ಅಥವಾ ಕಾಟೇಜ್ ಸಿಗುತಿತ್ತು. ಆದರೆ ಶ್ರೀಪಾದನಿಗೆ ಮಾತ್ರ ಪ್ರತೀ ಸಲವೂ ಅಪ್ಪ ಅಮ್ಮನ ಜೊತೆಯೇ ಅವರ ಕೋಣೆಯೊಳಗೆ ಇನ್ನೊಂದು ಹಾಸಿಗೆ ಹಾಸಿ ಕೊಡುತಿದ್ದರು. ಆ ಒಬ್ಬಳೇ ಬಂದ ಹುಡುಗಿಗೆ ಒಬ್ಬಳಿಗೇ ಒಂದು ಕೋಣೆ. ಇದು ಅನ್ಯಾಯ ಎಂದು ಶ್ರೀಪಾದನಿಗಿಷ್ಟು ಕೀಟಲೆ ಮಾಡುತಿದ್ದರು ಈ ಹುಡುಗಿಯರು. ಇನ್ನೊಮ್ಮೆ ಎಲ್ಲಾದರೂ ಹೋಗುವಾಗ ಅವನ ಟಿಕೇಟ್ ಬೇರೆಯೇ ತಗೊಳ್ಳಿ ಎಂದು ಅವನ ಅಪ್ಪ ಅಮ್ಮನಿಗೆ ಇವರ ಸಲಹೆ. ಪ್ರತಿಯೊಂದು ಕೋಣೆಗೂ ಪ್ರತೀ ದಿನ ಎರಡು ಲೀಟರಿನ ನೀರಿನ ಬಾಟಲ್ ಒದಗಿಸುತಿದ್ದರು. ಬೆಳಗ್ಗಿನ ತಿಂಡಿ ಮತ್ತು ರಾತ್ರಿಯ ಊಟ ನಾವು ಉಳಿದುಕೊಳ್ಳುವ ಹೊಟೇಲ್ ಅಥವಾ ರೆಸಾರ್ಟ್ ಗಳಲ್ಲೇ ಆಗುತಿತ್ತು. ಮದ್ಯಾಹ್ನದ ಊಟವನ್ನು ಆದಷ್ಟು ಒಳ್ಳೆಯ ಹೊಟೇಲ್ ಹುಡುಕಿ ಕರೆದುಕೊಂಡು ಹೋಗುತಿದ್ದರು. ಊಟ ತಿಂಡಿಗೆ ಎಲ್ಲೂ ಯಾವ ತೊಂದರೆಯೂ ಆಗಲಿಲ್ಲ. ಬೆಳಿಗ್ಗೆ ಎದ್ದು ಏಳೂವರೆಗೆ ತಯಾರಾಗಿ ಬೆಳಗಿನ ಉಪಹಾರ ತೆಗೆದುಕೊಂಡು ನಾವು ಹೋಗಲಿದ್ದಿದ್ದು ಅಂಡಮಾನ್ ನಲ್ಲಿ ಮಾತ್ರವಲ್ಲ ಇಡೀ ಏಷಿಯಾದಲ್ಲೇ ಸುಂದರ ರಾಧಾನಗರ್ ಬೀಚ್ ಗೆ. ಅಲ್ಲಿ ಸ್ನಾನ ಮಾಡಲು, ಸಮುದ್ರದಲ್ಲಿ ಆಟವಾಡಲು ಅನುಕೂಲಕರ ವಾತಾವರಣವಿದೆ. ಬಟ್ಟೆ ಬದಲಿಸಲು ವ್ಯವಸ್ಥೆಯೂ ಇತ್ತು. ನಮಗೆ ಅಲ್ಲಿ 12 ರ ವರೆಗೆ ಸಮಯವಿತ್ತು. ಎಲ್ಲರೂ ಮನಸೋ ಇಚ್ಛೆ ಸಮಯ ಕಳೆದರು. ಅಂಡಮಾನಿನ ಸಮುದ್ರದ ಬಗ್ಗೆ ಯೋಚಿಸುವಾಗ ಮೊದಲೆಲ್ಲ.. ಕಾಲಾಪಾನಿ ಎಂಬ ಶಬ್ದವೊಂದು ಭೀಕರವಾಗಿ ಕಿವಿಯೊಳಗೆ ಮೊಳಗುತಿದ್ದುದರಿಂದ ನನಗೇನೋ ಆ ನೀರು ವಿಷಪೂರಿತ, ಗಲೀಜು, ಕರ್ರಗೆ.. ಹೀಗೆ ಏನೇನೋ ಕಲ್ಪನೆಗಳಿದ್ದವು. ಆದರೆ., ಬಂಗಾಳ ಕೊಲ್ಲಿಯ ಸೌಂದರ್ಯಕ್ಕೆ ಸಾಠಿಯೇ ಇಲ್ಲ ಎಂಬುದು ಸ್ವತಃ ನೋಡಿದ ಮೇಲೆ ತಿಳಿಯಿತು. ತಿಳಿ ನೀಲಿ, ತಿಳಿ ಹಸಿರು, ನೀರಿನ ಮೇಲೆ ಬಿಳಿ ನೊರೆಯ ಸಾಲು ಷಿಫಾನ್ ಸೀರೆಯ ಮೇಲೆ ಕಸೂತಿ ಹೊಲಿದಂತೆ ನೋಡಲು ಅತೀ ಸುಂದರ. ತಿಳಿಯಾದ ನೀರು, ಎಲ್ಲೆಲ್ಲೂ ಶುಭ್ರ, ಸ್ವಚ್ಛ, ಸಣ್ಣ ಮರಳು. ಎಳೆ ಬಿಸಿಲಿನ ನಮ್ಮ ಆ ಬೆಳಗಿನ ಸಮಯ. ಸ್ವರ್ಗವೇ ಧರೆಗಿಳಿದಂತೆ ಭಾಸವಾಗುತಿತ್ತು. ಎಷ್ಟೇ ವರ್ಣಿಸಿದರೂ ಆ ನೀರಿನ ಸೊಬಗಿನ ಮುಂದೆ ಶಬ್ದಗಳು ಸಪ್ಪೆಯಾಗುತ್ತವೆ.  ಹ್ಯಾವ್ಲೊಕಿಂದ ಹತ್ತು ಕಿ.ಮೀಟರ್ ದೂರದ ರಾಧಾನಗರ ಬೀಚ್ ಗೆ ನಮ್ಮನ್ನು ಬಸ್ಸಿನಲ್ಲಿ ಕರೆತಂದಿದ್ದರು. ಸಾವಕಾಶವಾಗಿ ಒಂದಿಷ್ಟು ಸಮಯವನ್ನು ಯಾವುದೇ ಗಡಿಬಿಡಿಗಳಿಲ್ಲದೆ ಕಳೆದೆವು. ಹ್ಯಾವ್ಲೊಕ್ ದ್ವೀಪಕ್ಕೆ ಬರುವವರೆಗೆ ಟೂರ್ ಮ್ಯಾನೇಜರ್ ಜೊತೆ ನಮ್ಮ ಪ್ರವಾಸದಲ್ಲಿ ಜೊತೆಗೂಡಿದ್ದು ನಮ್ಮನ್ನು ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದಿಂದ ಕರೆದೊಯ್ಯಲು ಬಂದ ವಿಜಯ್ ಅನ್ನುವ ಹುಡುಗ. ಅಲ್ಲಿಂದ ಮುಂದೆ.. ನಾವು ಹಡಗಿನಲ್ಲಿ ಪ್ರಯಾಣ ಮಾಡಿ ಹ್ಯಾವ್ಲೊಕ್ ದ್ವೀಪಕ್ಕೆ ಬಂದು ತಲುಪಿದಾಗ ಅಲ್ಲಿ ನಮಗೆ ರೆಸಾರ್ಟ್ ಮತ್ತಿತರ ಎಲ್ಲಾ ವ್ಯವಸ್ಥೆ ಮಾಡಿದ್ದು ದರ್ಶನ್. ಮೂಲತಃ ತಮಿಳುನಾಡಿನವರು. ಅವರ ತಂದೆ ಎಷ್ಟೋ ವರ್ಷಗಳ ಹಿಂದಿನಿಂದ ಅಂಡಮಾನ್ ನಲ್ಲಿ ನೆಲೆಸಿ ಟೂರಿಸಂ ನಡೆಸುತಿದ್ದಾರೆ. ಓದು ಮುಗಿಸಿ ದರ್ಶನ್ ಈಗ ಅಪ್ಪನ ಜೊತೆ ಸೇರಿದ್ದಾನೆ. ವ್ಯವಸ್ಥಿತವಾಗಿ, ಪ್ರತಿಯೊಂದು ಸಣ್ಣ ಸಣ್ಣ ವಿಷಯಗಳನ್ನೂ ಮರೆಯದೆ ನಮ್ಮ ಪ್ರವಾಸವನ್ನು ಅತ್ಯಂತ ಸುಖಮಯವಾಗುವಂತೆ ಮಾಡಿದ ಕೀರ್ತಿ ನಿರ್ಮಲಾ ಟ್ರಾವೆಲ್ಸ್ ಜೊತೆಗೆ ವಿಜಯ್ ಮತ್ತು ದರ್ಶನ್ ಅವರದು. ಪೋರ್ಟ್ ಬ್ಲೇರ್ ನಷ್ಟು ಮುಂದುವರಿದಿಲ್ಲವಾದುದರಿಂದ ಈ ಸಣ್ಣ ದ್ವೀಪಗಳಲ್ಲಿ ಇರುವುದರಲ್ಲೇ ಒಳ್ಳೆಯ ಹೋಟೆಲಲ್ಲಿ ಮದ್ಯಾಹ್ನದ ಊಟಕ್ಕೆ ವ್ಯವಸ್ಥೆ ಮಾಡಿಸಿದ್ದರು. ಶುಚಿ-ರುಚಿಯಾದ ಊಟದ ನಂತರ ನಮ್ಮ ಪ್ರಯಾಣ ಮುಂದುವರಿಯಿತು. ನಾವು ಇಂದು ಹೋಗಿ ಸೇರಬೇಕಿರುವುದು ಮತ್ತೊಂದು ದ್ವೀಪಕ್ಕೆ. ಎರಡೂ ದ್ವೀಪಗಳು ಒಂದರಿಂದೊಂದು ಬೇರ್ಪಟ್ಟು ಇರೋದ್ರಿಂದ ಸಮುದ್ರ ಯಾನ ಮಾತ್ರವೇ ಇಲ್ಲಿಯ ಸಂಪರ್ಕ ಸಾಧನ. ಸರಕಾರಿ ಫೆರ್ರಿಯಲ್ಲಿ ನಮ್ಮ ಬಸ್ಸಿನ ಜೊತೆಗೆ ನಮ್ಮ ಪ್ರಯಾಣ ನೀಲ್ ಐಲ್ಯಾಂಡ್ ಗೆ. ನೀಲ್ ಐಲ್ಯಾಂಡ್ ಈಗ ಶಹೀದ್ ದ್ವೀಪವೆಂದು ಮರುನಾಮಕರಣಗೊಂಡಿದೆ. ಬಾರ್ಜ್ ಅಥವಾ ಫೆರ್ರಿಯಲ್ಲಿ ಒಂದೂವರೆ ಗಂಟೆ ಪ್ರಯಾಣ ಮಾಡಿ ನಾವು ನೀಲ್ ದ್ವೀಪದ ಸಮುದ್ರದೊಳಗಿನ ಹವಳದ ಗಿಡಗಳನ್ನು ಮತ್ತು ನೈಸರ್ಗಿಕ ಸೇತುವೆಯನ್ನು ನೋಡಲು ಹೋದೆವು. ನೈಸರ್ಗಿಕವಾಗಿ ಕಲ್ಲುಗಳ ರೂಪದಲ್ಲಿ ಹವಳದ ದಿಂಡಿನಂತಹ ರಚನೆಗಳು ಪ್ರತೀ ಹೆಜ್ಜೆ ಹೆಜ್ಜೆಗೂ ಸಿಗುತಿದ್ದವು. ಉಬ್ಬರವಿಲ್ಲದ ಸಮುದ್ರ ತೀರವದು, ಕಲ್ಲು ಬಂಡೆಗಳಂತ ರಚನೆಗಳು. ಅಲೆಗಳ ಬಡಿತಕ್ಕೆ ನೈಸರ್ಗಿಕವಾಗಿ ಸಮುದ್ರದೊಳಗೆ ಇಂತಹ ಅನೇಕ ಆಕಾರಗಳ ಸೃಷ್ಟಿಯಾಗಿದೆ. ಕಲ್ಲುಗಳ ಮೇಲಿನಿಂದ, ನೀರಿನೊಳಗೆ ತುಂಬಾ ದೂರ ನಡೆದು ಹೋದ ಮೇಲೆ ನೋಡಲು ಸಿಕ್ಕಿದ್ದು ಇಂತಹ ಹವಳದ ಕಲ್ಲುಗಳಿಂದಲೇ ರಚಿತವಾದ ನೈಸರ್ಗಿಕ ಸೇತುವೆ. ಪಶ್ಚಿಮ ಬಂಗಾಳಕ್ಕೂ ಅಂಡಮಾನ್ ಗೂ ವಿಶೇಷ ನಂಟು. ಅನೇಕ ವರ್ಷಗಳದು. ಸೆಲ್ಯುಲರ್ ಜೈಲಿನ ಸಂಬಂಧವೆಂದೂ ಹೇಳಬಹುದು. ಬಂಗಾಳದ ಅನೇಕ ಕ್ರಾಂತಿಕಾರಿ ಹೋರಾಟಗಾರರನ್ನು ಶಿಕ್ಷೆಗೆಂದು ಅಂಡಮಾನ್ ಜೈಲಿಗೆ ಖೈದಿಗಳನ್ನಾಗಿ ಕರೆತಂದಿದ್ದರಿಂದ, ಬಂಗಾಳದ ಜನತೆಗೆ ತಮ್ಮ ಪೂರ್ವಜರ ಬಗ್ಗೆ ಅಪಾರ ಹೆಮ್ಮೆ ಮತ್ತು ಗರ್ವ. ಅಂಡಮಾನ್ ದ್ವೀಪ ಬಂಗಾಳದ ಜನತೆಗೆ ತೀರ್ಥಕ್ಷೇತ್ರಕ್ಕೆ ಸಮ. ಈಗಲೂ ಅಂಡಮಾನ್ ದ್ವೀಪ ಸಮೂಹಗಳಲ್ಲಿ ಬಂಗಾಳಿಗಳು ನೆಲೆಯೂರಿದ್ದಾರೆ. ಅಲ್ಲಿಯೇ ತಮ್ಮ ವ್ಯಾಪಾರ, ಕಸುಬುಗಳನ್ನು ಕೈಗೊಳ್ಳುತಿದ್ದಾರೆ. ನೈಸರ್ಗಿಕವಾಗಿ ರಚನೆಯಾದ ಸೇತುವೆಗೆ ಬಂಗಾಳದ ಜನರು ಮೊದಲಿಗೆ ರಬೀಂದ್ರ ಸೇತು ಎಂದು ಕರೆದರು. ಕಾಲಾನಂತರ ಕಲ್ಕತ್ತಾದ ಹೌರಾ ಬ್ರಿಜ್ ಗೆ ಹೋಲಿಸಿ ಇದನ್ನೂ ಹೌರಾ ಬ್ರಿಜ್ ಎಂದೇ ಕರೆಯುತ್ತಾರೆ. – ಅಂಡಮಾನ್ ಆಲ್ಬಂ (ಮುಂದುವರೆಯುವುದು..) ******************** ಶೀಲಾ ಭಂಡಾರ್ಕರ್.

Read Post »

You cannot copy content of this page

Scroll to Top