ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ಜೀವನ

ಲಾಕ್ಡೌನ್ ಕಾಲಘಟ್ಟದ ದಾಂಪತ್ಯ

ಲೇಖನ ಲಾಕ್ಡೌನ್ ಕಾಲಘಟ್ಟದ ದಾಂಪತ್ಯ ಅಂಜಲಿ ರಾಮಣ್ಣ ಬೆಳಗಿನಲ್ಲಿ ಅವನು ಬಲು ಸುಭಗ. ರಾತ್ರಿಯಾಯಿತೆಂದರೆ ಕೀಚಕನೇ ಮೈಯೇರಿದ್ದಾನೆ ಎನ್ನುವಂತೆ ಇರುತ್ತಿದ್ದ. ಅವಳ ಮೈಮೇಲಿನ ಹಲ್ಗುರುತು, ಉಗುರ್ಗೆರೆ, ಸಿಗರೇಟಿನ ಬೊಟ್ಟು ಕತ್ತಲಲ್ಲೂ ಮಿರಮಿರ ಉರಿಯುತ್ತಿತ್ತು. ಸಹಿಸುತ್ತಲೇ ಅವಳ ದಾಂಪತ್ಯಕ್ಕೆ ಮೂರು ವರ್ಷ ಕಳೆದುಹೋಗಿತ್ತು. ಸ್ನಾನದ ನೀರು ಬಿದ್ದರೆ ಧಗಧಗ ಎನ್ನುವ ದೇಹ ದಹನಕ್ಕೆ ಹೆದರಿದ್ದ ದಾಕ್ಶಾಯಣಿ  ಅವಳು ಅದೆಷ್ಟೋ ದಿನಗಳಿಗೆ ಒಮ್ಮೆ ಸ್ನಾನ ಮಾಡುತ್ತಿದ್ದಳು. ಕತ್ತಲಲ್ಲಿ ಅವಳಾತ್ಮವನ್ನು ಹೀಗೆ ಚರ್ಮದಂತೆ ಸಂಸ್ಕರಿಸುತ್ತಿದ್ದವ ಬೆಳಕಿನಲ್ಲಿ ಬೆಕ್ಕಿನ ಮರಿಯಂತೆ ಆಗುತ್ತಿದ್ದ. ಆಫೀಸಿನಲ್ಲಿ ಬಹಳವೇ ಪ್ರಾಮಾಣಿಕ. ನೆಂಟರಿಷ್ಟರ ಗೋಷ್ಠಿಯಲ್ಲಿ ಇವನೇ ಗೋಪಾಲಕೃಷ್ಣ. ಸಹಿಸಿದಳು, ಸಹಿಸಿದಳು ಅವಳು. ಸಹನೆ ಖಾಲಿಯಾಯ್ತು. ಉಪಾಯ ಒಂದು ಯಮಗಂಡಕಾಲದಂತೆ ಅವಳ ತಲೆ ಹೊಕ್ಕಿತು.  ನಿತ್ಯವೂ ಅವನ ರಾತ್ರಿ ಊಟದಲ್ಲಿ ಬೇಧಿ ಮಾತ್ರೆ ಬೆರಸಿಕೊಡಲು ಶುರುವಿಟ್ಟಳು. ಆರು ತಿಂಗಳು ಮೈಯ್ಯಿನ ನೀರು ಆರಿ ಅವನು ಹೈರಾಣಾದ. ಸ್ಕ್ಯಾನಿಂಗ್ ಸೆಂಟರ್ಗಳಿಂದ ತಿಮ್ಮಪ್ಪನ ದರುಶನದವರೆಗೂ ಎಡುಕಾಡುತ್ತಾ ಮೆತ್ತಗಾದ. ಇವಳ ಮನಸ್ಸು ಉಸಿರಾಡಲು ಶುರುವಿಟ್ಟಿತು, ಶರೀರದ ಮೇಲಿನ ಗಾಯ ಒಣಗುವತ್ತ ಮುಖ ಮಾಡಿತ್ತು. ಅವಳು ಈ ಕಥೆಯನ್ನು ಮತ್ತ್ಯಾರದ್ದೋ ಜೀವನದ ಘಟನೆಯಂತೆ ಏರಿಳಿತವಿಲ್ಲದೆ ಹೇಳಿದಾಗ ಸಂಬಂಧಗಳ ನಡುವಿನ ಥಣ್ಣನೆಯ ಕ್ರೌರ್ಯಕ್ಕೆ ದಂಗಾಗಿ ಹೋಗಿದ್ದೆ. ದೌರ್ಜನ್ಯಕ್ಕೆ ದಶಕಂಠ ಎಂದರಿವಿದ್ದವಳಿಗೆ ಅದು ಮುಖವಿಹೀನ ಎನ್ನುವುದು ಅರಿವಿಗೆ ಬಂದಿತ್ತು. ಹೀಗೆ ಗಂಡಹೆಂಡಿರು ಅವರ ಸಮಸ್ಯೆಗಳನ್ನು ಹೇಳಿಕೊಂಡಾಗಲೆಲ್ಲಾ ಟೆಬಲ್‍ನ ಈ ಬದಿಯಲ್ಲಿ ಕುಳಿತ ನನ್ನದು ಸಾಧಾರಣವಾಗಿ ಒಂದು ಸಿದ್ಧ ಉತ್ತರ ಇರುತ್ತಿತ್ತು  “ಒಟ್ಟಿಗೆ ಕುಳಿತು ಮಾತನಾಡಿ” ಅಥವಾ “ಹೆಚ್ಚು ಸಮಯವನ್ನು ಒಬ್ಬರ ಜೊತೆ ಒಬ್ಬರು ಕಳೆಯಿರಿ” ಎನ್ನುತ್ತಿದ್ದೆ.   ಉದ್ಯೋಗ, ಹಣ ಇವುಗಳ ಬೆನ್ನ ಮೇಲೆ ತಮ್ಮ ವಿಳಾಸವನ್ನು ಕೆತ್ತಿಡಬೇಕು ಎನ್ನುವ ಧಾವಂತದಲ್ಲಿಯೇ ಶ್ವಾಸಕೋಶ ತುಂಬಿಕೊಳ್ಳುವ ಅವನು-ಅವಳು ಇವರ ಮಧ್ಯೆ ಸಮಯ ಮತ್ತು ಮಾತು ಇವುಗಳನ್ನುಳಿದು ಇನ್ನೆಲವೂ ಇರುವುದನ್ನು ಕಂಡಿದ್ದರಿಂದ, ಬಂದವರಿಗೆಲ್ಲಾ “ಟೈಮ್ ಕೊಟ್ಟು ಟೈಮ್ ಕೊಳ್ಳಿ” ಎನ್ನುತ್ತಿದ್ದೆ. ಇದನ್ನು ಕೇಳಿಸಿಕೊಂಡಿತೇನೋ ಎನ್ನುವ ಹಾಗೆ ಬಂದು ಬಿಟ್ಟಿತು ಕರೋನ ಸಾಂಕ್ರಾಮಿಕ ಪಿಡುಗು. ನಾನೊಂದು ತೀರ ನೀನೊಂದು ತೀರ ಎಂದು ಹಾಡುತ್ತಿದ್ದವರೆಲ್ಲಾ, ನೀನೆಲ್ಲೋ ನಾನಲ್ಲೇ ರಾಗವಾಗುವಂತೆ ಆಯಿತು. ಆಹಾ, ಇನ್ನು ಎಲ್ಲರ ದಾಂಪತ್ಯ ಕೆ.ಎಸ್.ನ ಅವರ ಕವಿತೆಗಳಂತೆ ಎಂದು ಭಾವಿಸುವ ಹೊತ್ತಿನಲ್ಲಿ ವಿಶ್ವಸಂಸ್ಥೆಯಾದಿಯಾಗಿ, ಸಚಿವಾಲಯ ಮತ್ತು ಪ್ರಪಂಚದಾದ್ಯಂತ ಹಲವಾರು ವಿಶ್ವವಿದ್ಯಾಲಯಗಳು “ ಲಾಕ್ಡೌನ್ ಸಮಯದಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಗಣನೀಯ ಏರಿಕೆ” ಎನ್ನುವ ಕ್ಷಾರ ಸತ್ಯವನ್ನು ಒಮ್ಮೆಲೆ ಅಂಕಿಅಂಶಗಳ ಸಹಿತ ಹೊರಹಾಕಿರುವುದು ದಾಂಪತ್ಯ ಎನ್ನುವ ಪರಿಕಲ್ಪನೆಯನ್ನು ಮೂಕವಾಗಿಸಿದೆ. ಮನೆಯಿಂದಲೇ ಕೆಲಸ ಮಾಡಬೇಕಾದ ಅನಿವಾರ್ಯತೆ ಹೆಚ್ಚಿದೆ. ಅದೆಷ್ಟೋ ಮನೆಗಳಲ್ಲಿ ನಿರುದ್ಯೋಗ ಎನ್ನುವ ವೈರಸ್ ಕಣ್ಣೀರಾಗಿ ಹರಿಯುತ್ತಿದೆ. ಶಾಲೆಗಳಿಲ್ಲದೆ ಮಕ್ಕಳು ಬಳ್ಳಿಗೆ ಭಾರ ಎನ್ನುವಂತಾಗಿದೆ. ಹೆಣ್ಣು-ಗಂಡಿನ ನಡುವಲ್ಲಿ ಮಾಧುರ್ಯ ಕುರುಡಾಗಿದೆ, ಸಂಯಮ ಮನೆಬಿಟ್ಟು ಹೊರಟಿದೆ. ಅಹಂ ಅಸಹನೆಯಲ್ಲಿ ಮಾತಾಗುತ್ತಿದೆ. ಮೌನ ನೋವು ನುಂಗುತ್ತಿದೆ. “ಮೇಡಂ ನಿಮ್ಮನ್ನು ಮೀಟ್ ಮಾಡಬೇಕು” ಎಂದು ಫೋನ್‍ನಲ್ಲಿದ್ದವಳು ಕೇಳಿದಾಗ “ಈಗ ಕಷ್ಟ, ಲಾಕ್ದೌನ್ ಇದೆಯಲ್ಲ” ಎಂದೆ. “ನೀವೇ ಏನಾದರೂ ಸಲಹೆ ಕೊಡಿ, ನನ್ನಿಂದ ಇನ್ನು ಈ ಮದುವೆಯನ್ನು ತಡೆದುಕೊಳ್ಳಲು ಆಗುತ್ತಿಲ್ಲ” ಎಂದವಳ ಮದುವೆಗೆ ಮೂವತ್ತಾರು ತಿಂಗಳಷ್ಟೇ. “ಏನಾಯ್ತು?” ಎನ್ನುವ ಚುಟುಕು ಪ್ರಶ್ನೆಗೆ ಅವಳು “ ಮೇಡಂ ಆಫೀಸಿಗೆ ಹೋಗುತ್ತಿದ್ದಾಗ ಹೇಗೊ ಎರಡೆರಡು ಶಿಫ್ಟ್ ಹಾಕಿಸಿಕೊಂಡು ಮ್ಯಾನೇಜ್ ಮಾಡ್ತಿದ್ದೆ. ಆದರೆ ಈಗ ನಮ್ಮ ಆಫೀಸಿನಲ್ಲಿ ಇನ್ನೊಂದು ವರ್ಷ ಮನೆಯಿಂದಲೇ ಕೆಲಸ ಮಾಡಿ ಎಂದು ಬಿಟ್ಟಿದ್ದಾರೆ. ನನ್ನ ಗಂಡನಿಗೂ ಮನೆಯಿಂದಲೇ ಕೆಲಸ. ಜೊತೆಲಿರೋದು ಬಹಳ ಕಿರಿಕಿರಿ” ಎಂದು ಮುಂದುವರೆದಳು. “ ಹತ್ತು ನಿಮಿಷಕೊಮ್ಮೆ ನನ್ನ ಅತ್ತೆ ಊರಿನಿಂದ ಮಗನಿಗೆ ಫೋನ್ ಮಾಡ್ತಾರೆ. ಅವರಿಗೆ ನಾವಿಬ್ಬರು ಮನೆಲಿದ್ದೀವಿ ಒಟ್ಟಿಗೆ ಎಂದರೆ ಏನೋ ಇನ್ಸೆಕ್ಯುರಿಟಿ. ಏನೇನೋ ಮಗನ ಕಿವಿಗೆ ಊದುತ್ತಾರೆ. ಅದನ್ನು ಕೇಳಿಕೊಂಡು ನನ್ನ ಗಂಡ ಇಲ್ಲಸಲ್ಲದ್ದಕ್ಕೆ ಜಗಳ ಮಾಡ್ತಾನೆ. ಪ್ಲೀಸ್ ಏನಾದರು ಲೀಗಲ್ ರೆಮಿಡಿ ಹೇಳಿ ಮೇಡಂ” ಎಂದು ನನ್ನ ಕಿವಿ ತುಂಬಿಸಿದಳು. ಒಳ್ಳೆ ಅಡುಗೆ ಮಾಡಿಕೊಂಡು ತಿನ್ನಿ, ಪುಸ್ತಕ ಓದಿ, ಒಟ್ಟಿಗೆ ಟಿವಿ ನೋಡಿ, ರಾತ್ರಿಗಳನ್ನು ರಂಗಾಗಿಸಿಕೊಳ್ಳಿ ವಗೈರೆ ವಗೈರೆ ಸಲಹೆಗಳು ಲಾಕ್ಡೌನ್ ಕಾಲಘಟ್ಟದ ದಾಂಪತ್ಯಕ್ಕೆ ಅದೆಷ್ಟು ಪೇಲವ. ಒಂದೇ ಮುಖವನ್ನು ಸದೊಂಭತ್ತು ಕಾಲವೂ  ನೋಡುತ್ತಿದ್ದರೆ ಆಕ್ಸಿಟೋಸಿನ್ ಹಾರ್ಮೋನ್ ತನ್ನ ಫ್ಯಾಕ್ಟರಿಯನ್ನು ಬಂದು ಮಾಡಿಬಿಡುತ್ತದೆ ಎನ್ನಿಸುತ್ತೆ. ಅಥವಾ ಸೈರಣೆಗೂ ಕೋವಿಡ್-19 ಆಕ್ರಮಣ ಮಾಡಿದೆಯೇನು? ಪರಸ್ಪರ ವಿಶ್ವಾಸ , ಗೌರವಗಳು ಆಷಾಢಕ್ಕೆ ತವರಿಗೆ ಹೋದವೇನು?! ಮನೆವಾರ್ತೆ ಸಹಾಯಕಿಯ ಹೆಸರು ರಾತ್ರಿ ಹತ್ತು ಗಂಟೆಗೆ ಮೊಬೈಲ್‍ನಲ್ಲಿ ಸದ್ದಾದಾಗ “ಓಹೋ ನಾಳೆ ಪಾತ್ರೆ ತೊಳೆಯಬೇಕಲ್ಲಪ್ಪಾ” ಎಂದು ಗೊಣಗಿಕೊಂಡು “ಏನು” ಎಂದೆ.  ಅವಳು ಜೋರಾಗಿ ಅಳುತ್ತಾ “ಅಕ್ಕಾ ನಂಗೆ ಜೀವ್ನ ಸಾಕಾಯ್ತಕ್ಕ, ಏನಾರಾ ಮಾಡ್ಕೊಳವಾ ಅನ್ದ್ರೆ ಮಕ್ಕ್ಳ್ಮುಕ ಅಡ್ಡ ಬತ್ತದೆ” ಎಂದು ಗೋಳಾದಳು. “ ಮೊದ್ನಾಗಿದ್ದ್ರೆ ಬೆಳಗೆಲ್ಲಾ ಗಾರೆ ಕೆಲ್ಸುಕ್ಕ್ ಓಗಿ ಎನ್ಗೋ ಸನ್ಜೆಗೆ ಬಾಟ್ಲೀ ತಂದು ಕುಡ್ಕೊಂಡು, ಉಣ್ಣಕ್ಕಿಕ್ದಾಗಾ ಉಣ್ಣ್ಕೊಂಡು ಮನೀಕೊಳೋನು. ಈಗ ಮನೇಲೆ ಇರ್ತಾನೆ ಅಕ್ಕ. ಕುಡ್ಯಕ್ಕೂ ಸಿಂಕ್ತಿಲ್ಲ. ಸುಮ್ಕೆ ಇಲ್ಲ್ದಕೆಲ್ಲಾ ಕ್ಯಾತೆ ತಗ್ದು ಒಡಿತಾನೆ ಅಕ್ಕ. ಮೈಯಲ್ಲಾ ಬಾಸುಂಡೆ ಬಂದೈತೆ” ಅವಳು ಅಳುತ್ತಿದ್ದಳು. “ಅಳ್ಬೇಡ ಸುಮ್ಮ್ನಿರು. ಪೋಲಿಸ್ ಕಂಪ್ಲೇಂಟ್ ಕೊಡ್ತೀನಿ ಅನ್ನು” ಎನ್ನುವ ಸಲಹೆ ಕೊಟ್ಟೆ. “ ಉಂ, ಅಕ್ಕ ಅಂಗೇ ಏಳ್ದೆ ಅದ್ಕೆ ಈಗ ಲಾಕ್ಡೋನು ಯಾವ ಪೋಲೀಸು ಏನು ಮಾಡಲ್ಲ. ಅದೇನ್ ಕಿತ್ಕೋತೀಯೋ ಕಿತ್ಕೋ ಓಗು ಅಂದ ಕಣಕ್ಕ” ಎಂದು ಮುಸುಗುಟ್ಟಿದಳು. ಕರೋನಾದ ಕರಾಳ ಮುಖ ಕಾಣುತ್ತಿರುವುದು ಬರೀ ಆಸ್ಪತ್ರೆಗಳಲ್ಲಿ ಅಲ್ಲ ಅದೆಷ್ಟು ಗುಡಿಸಲು, ಶೆಡ್ಡುಗಳಲ್ಲೂ ವೆಂಟಿಲೇಟರ್ಗಳನ್ನು ಬಯಸುತ್ತಿದೆ ಬದುಕು. ವಿವಾಹ ಆಪ್ತಸಮಾಲೋಚನೆ ಎನ್ನುವ ವಿಷಯವನ್ನೇ ವಿದೇಶದ  ಕಾಲೇಜುಗಳಲ್ಲಿ ಕಲಿಸಲಾಗುತ್ತದೆ. ಮದುವೆಗೆ ಮೊದಲೇ ವಧು-ವರ ಇಬ್ಬರಿಗೂ ಸಂಸಾರ ಎಂದರೆ ಏನು ಎಂದು ಹೇಳಿಕೊಡುವ, ಹೊಂದಾಣಿಕೆಯ ಪಾಠ ಮಾಡುವ ತರಬೇತಿ ಶಿಬಿರಗಳು ಈಗ ನಮ್ಮ ದೇಶದಲ್ಲೂ ವ್ಯಾಪಾರ ಮಾಡುತ್ತಿವೆ. ಮದುವೆಯಾದವಳಿಗೆ ಸ್ತ್ರೀಧನ ಹಕ್ಕು ತಿಳಿ ಹೇಳುತ್ತೆ ಕಾನೂನು. ದೇಹಗಳ ಸಮಾಗಮದ ಬಗ್ಗೆ, ಲೈಂಗಿಕ ಆರೋಗ್ಯದ ಬಗ್ಗೆ ಖುಲ್ಲಂಖುಲ್ಲಾ ವಿವರಿಸಲು ತಜ್ಞರಿದ್ದಾರೆ. ಗಂಡಹೆಂಡತಿಯರ ಜಗಳ ಉಂಡು ಮಲಗುವ ತನಕ ಎಂದು ಕಂಡುಕೊಂಡಿದ್ದ ಮನೆ ಹಿರೀಕರೂ ’ಸಲಹೆಕೋರ’ರಾಗಿದ್ದಾರೆ. ಕೌಟುಂಬಿಕ ನ್ಯಾಯಾಲಯ ಇದೆ, ಸಹಾಯವಾಣಿ ಕೆಲಸ ಮಾಡುತ್ತಿದೆ. ಸ್ನೇಹಿತರಿದ್ದಾರೆ. ಮನೆ ಕಟ್ಟುವವರಿದ್ದಾರೆ. ಮನಮುರುಕಿದ್ದಾರೆ. ಹಳೆ ಹುಡುಗಿ ನೆನಪೂ ಇದೆ ಹೊಸಗೂಸ ತೊಟ್ಟಿಲು ತೂಗುತ್ತಿದೆ. ಇಬ್ಬರಿಗೂ ಆಸ್ತಿ ಜಗಳವಿದೆ, ಮುನಿಸು ಕದನವೂ ಇದೆ. ಶಾಂತಿ ನೆಮ್ಮದಿ ಕುಂಟಿದರೂ ಮನೆ ಮೂಲೆಯಲ್ಲಿ ಇನ್ನೂ ಇದೆ. ಹೀಗೆ ’ಇರುವ’ ಇವರುಗಳು ಯಾರೂ ಊಹೆ ಮಾಡಿದ್ದಿರದ ಒಂದೇ ವಿಷಯ  “ ಗಂಡ ಹೆಂಡತಿ ಹೆಚ್ಚು ಸಮಯ ಜೊತೆಯಲ್ಲಿ ಇದ್ದರೆ ಕೌಟುಂಬಿಕ ದೌರ್ಜನ್ಯ ಹೆಚ್ಚುತ್ತದೆ” ಎನ್ನುವುದು.  ಮುಂದಿನ ವರ್ಷ ತಮ್ಮ ಮದುವೆಯ ಅರವತ್ತನೆಯ ವಾರ್ಷಿಕೋತ್ಸವಕ್ಕೆ ಖುಷಿಯಿಂದಲೇ ತಯಾರಿ ಮಾಡಿಕೊಳ್ಳುತ್ತಿದ ಆ ಯಜಮಾನನಿಗೆ ನಿತ್ಯವೂ ಕ್ಲಬ್‍ಗೆ ಹೋಗಿ ಒಂದು ಪೆಗ್ ಜೊತೆ ನಾಲ್ಕು ಸುತ್ತು ಇಸ್ಪೀಟಾಟ ಮುಗಿಸಿ ಸ್ನೇಹಿತರ ಜೊತೆ ಹರಟಿ ಬರುವುದು, ಮೂವತ್ತು ವರ್ಷಗಳಿಂದ ರೂಢಿಸಿಕೊಂಡಿದ್ದ ಹವ್ಯಾಸ. ಈಗಾತ ಹಿರಿಯ ನಾಗರೀಕ. ಕರೋನ ಹೊಸಿಲಲ್ಲೇ ಕುಳಿತಿದೆ. ಕ್ಲಬ್‍ಗೆ ಹೋಗುವುದು ಇನ್ನು ಕನಸಿನಂತೆಯೇ. ಯಜಮಾನನಿಗೆ ಈಗ ಜುಗುಪ್ಸೆ. ಸಿಟ್ಟು ತೋರಿಸಲು ಮನೆಯಲ್ಲಿ ಇರುವುದು ಎಂಭತ್ತರ ಹೆಂಡತಿ ಮಾತ್ರ. ಆಕೆ ಈಗ ದೂರದೇಶದ ಮಗಳು ಅಳಿಯನಿಗೆ ನಿತ್ಯವೂ ಫೋನ್ ಮಾಡಿಕೊಂಡು ಅಳುತ್ತಾರೆ. “ಇವರ ಬೈಗುಳ ತಡೆಯಕ್ಕಾಗ್ತಿಲ್ಲ” ಎಂದು ಗೋಳಿಡುತ್ತಾರೆ. ವಯಸ್ಸು ನಡೆದಂತೆ ಮನಸ್ಸು ಕೂರುವುದು ಎಂನ್ನುವ ನಂಬಿಕೆ ಇದ್ದ ದಾಂಪತ್ಯಗಳಲ್ಲಿ ಈಗ ಕರೋನ ಮಾಗುವಿಕೆಯನ್ನು ಅನಿರ್ಧಿಷ್ಟ ಕಾಲಕ್ಕೆ ಮುಂದೂಡಿದೆ.  ಅದೆಷ್ಟೋ ವರ್ಷಗಳ ಹಿಂದೆಯೇ ಹಳ್ಳಿ ಬಿಟ್ಟು ಪಟ್ಟಣ ಸೇರಿದ ಇವನು ಈ ಊರಿನಲ್ಲಿಯೇ ಟ್ಯಾಕ್ಸಿ ಓಡಿಸುತ್ತಲೇ ಒಂದು ಸೈಟು, ವಾಸಕ್ಕೆ ಮನೆ ಮತ್ತು ಮದುವೆಯನ್ನೂ ಮಾಡಿಕೊಂಡ. ಈಗ ಒಂದು ವರ್ಷದಲ್ಲಿ ತಮ್ಮನನ್ನು ಅವನಾಕೆಯನ್ನೂ ಕರೆಸಿಕೊಂಡು ತನ್ನ ಬಳಿಯೇ ಇರಿಸಿ ಕೊಂಡಿದ್ದಾನೆ. ತಮ್ಮನಿಗೆ ಅಪಾರ್ಟ್‍ಮೆಂಟ್ ಒಂದರಲ್ಲಿ ಸೆಕ್ಯುರಿಟಿ ಕೆಲಸ ನಾದಿನಿಗೆ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಕೊಡಿಸಿ ನೆಮ್ಮದಿಯ ಮೀಸೆ ತಿರುವುತ್ತಾ ಸುಖದಿಂದ ಇದ್ದ.  ಬಸುರಿ ಹೆಂಡತಿ ಮೊದಲ ಮಗುವಿನೊಡನೆ ಊರಿಗೆ ಹೋದೊಡನೆ ಲಾಕ್ಡೌನ್ ಬಂತು. ಮನೆಯಲ್ಲಿನ ಮೂವರೂ ಈಗ ಬರಿಗೈಯಾಗಿದ್ದಾರೆ. ಹತ್ತಿದ ಜಗಳ ಹರಿಯುತ್ತಿಲ್ಲ. ಅಣ್ಣತಮ್ಮರ ಜಗಳದ ನಡುವೆ ಬಿಡಿಸಲು ಹೋದವಳ ತಲೆಗೆ ಹಾರೆಯೇಟು ಬಿದ್ದಿದೆ. ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಅಜ್ಞಾವಸ್ಥೆಯಲ್ಲಿ ಬಿದ್ದಿದ್ದಾಳೆ.  ಮದುವೆ ಇಲ್ಲದ ಮೂವರು ಅಕ್ಕಂದಿರು ಅವರ ಹಾಸಿಗೆ ಹಿಡಿದ ತಾಯ್ತಂದೆಯರು ನಡುವೆ ಮನೆಗೊಬ್ಬನೇ ಕುಲೋದ್ಧಾರಕ. ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾನೆ. ಬಾಲ್ಯದಿಂದಲೂ ಅಕ್ಕಂದಿರ ಮಾತಿಗೆ, ಬಿರುಸಿಗೆ ನಲುಗಿದ್ದವ ಒಂದ್ನಾಲ್ಕು ವರ್ಷವಾದರೂ ಎದೆ ಪೂರ್ತಿ ಉಸಿರು ತುಂಬಿಕೊಳ್ಳಲು ಬಯಸಿದ್ದ. ಮೊನ್ನೆ ಜನವರಿಯಲ್ಲಿ ಅವನ ಕಂಪನಿಯವರು ಒಂದು ಪ್ರಾಜೆಕ್ಟಿಗೆ ಇವನನ್ನು ಮುಖ್ಯಸ್ಥನನ್ನಾಗಿಸಿ ಸಿಂಗಾಪೂರಿಗೆ ವರ್ಗಾವಣೆ ನೀಡಿದ್ದರು. ಉತ್ಸಾಹದಲ್ಲಿ ಹೊರಟಿದ್ದವನೀಗ ವರ್ಗಾವಣೆಯ ರದ್ದತಿ ಪತ್ರ ಮಾತ್ರ ಹಿಡಿದಿಲ್ಲ, ಕೆಲಸ ಕಳೆದುಕೊಳ್ಳುವ ಭಯವನ್ನೂ ಹೊತ್ತು ಕುಳಿತಿದ್ದಾನೆ. ಹೌದು, ಕುಟುಂಬ ಎಂದರೆ ಕೇವಲ ಗಂಡ ಹೆಂಡಿರಲ್ಲ ಅದಕ್ಕೇ ದೌರ್ಜನ್ಯ ಎಂದರೂ ಅವರಿಬ್ಬರ ನಡುವಿನದ್ದು ಮಾತ್ರವಲ್ಲ. ಭೂಗೋಳದ ಈ ಭಾಗ “ಸಂಬಂಧಗಳು ಋಣದಿಂದ ಆಗುವುದು” ಎಂದು ನಂಬಿದ್ದರೆ ಆ ಭಾಗ “ಮದುವೆಗಳು ಸ್ವರ್ಗದಲ್ಲಿ ನಿರ್ಧಾರವಾಗುತ್ತವೆ” ಎಂದು ನೆಚ್ಚಿದೆ. ಆದರೆ ಬಂದೆರಗಿರುವ ವೈರಸ್ ಮಾತ್ರ ಜಗತ್ತು ದುಂಡಗಿದೆ ಮತ್ತು ಮನುಷ್ಯ ಮೂಲಭೂತವಾಗಿ ಒಂದು ಪ್ರಾಣಿ ಮಾತ್ರ ಎನ್ನುವ ಸತ್ಯವನ್ನು ಬೇಧವಿಲ್ಲದೆ  ಪುನಃಪ್ರಸಾರ ಮಾಡುತ್ತಿದೆ. ಅರ್ಥಶಾಸ್ತ್ರಜ್ಞರು ಕೋವಿಡ್-19ಗಾಗಿಯೇ ಇನ್ಸ್ಯೂರೆನ್ಸ್ ತೆಗೆದುಕೊಳ್ಳಿ ಎನ್ನುತ್ತಿದ್ದಾರೆ. ಸೀಲ್‍ಡೌನ್ ಆಗಿರುವ ಸಂಬಂಧಗಳು ಕೌಟುಂಬಿಕ ದೌರ್ಜನ್ಯದಲ್ಲಿ ನೊಂದವರಿಗೆ ಯಾವುದಾದರೂ ವಿಮೆ ಇದೆಯೇ ಎಂದು ಹುಡುಕುತ್ತಿವೆ. ಅವಳಿಗೆ ಹದಿಮೂರುಹದಿನಾಲ್ಕು ವರ್ಷ ವಯಸ್ಸಿರಬೇಕು. ಮೂಕಿ ಕಿವುಡಿ ಹುಡುಗಿ. ಸಣ್ಣ ಕೋಣೆಯ ಮನೆಯಲ್ಲಿ ಕೆಲಸ ಕಳೆದುಕೊಂಡ ಹನ್ನೊಂದು ಜನ ಇರಬೇಕಾದ ಪ್ರಸ್ತುತತೆ. ಭಾರ ಕಳಚಿಕೊಳ್ಳಲು ಇವಳ ಕೈಮೇಲೆ ಹೆಸರು, ಊರಿನ ಹಚ್ಚೆ ಹಾಕಿಸಿ ಯಾವುದೋ ರೈಲು ಹತ್ತಿಸಿ ಮನೆಯವರೇ ಕಳುಹಿಸಿಬಿಟ್ಟಿದ್ದಾರೆ. ಪ್ರೀತಿ, ಸಾಹಚರ್ಯ ಎಲ್ಲಾ ಅನಿವಾರ್ಯದ ಕೈಗೆ ಸಿಕ್ಕಿ ವಿರುದ್ಧ ದಿಕ್ಕಿನಲ್ಲಿ ಪ್ರಯಾಣ ಬೆಳಿಸಿವೆ. ಮೊದಲೆಲ್ಲಾ ಇವುಗಳಿಗೆ ಯಾರೋ ತುತ್ತುಣಿಸಿ ಮತ್ತ್ಯಾರೋ ನೀರು ಹನಿಸುತ್ತಿದ್ದರು. ಆದರೀಗ ಸಹಾಯ ಹಸ್ತ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದೆ. ಅಮ್ಮನಿಗೆ ಅಪ್ಪ ಬೇಡವಾಗಿದ್ದಾನೆ, ಅವನಿಂದ ಮಕ್ಕಳು ದೂರವಾಗಿದ್ದಾರೆ, ಅಣ್ಣತಮ್ಮಂದಿರ ಫೋನ್ ಕರೆನ್ಸಿ ಖಾಲಿಯಾಗಿದೆ. ವಾರೆಗಿತ್ತಿ ನಾದಿನಿಯರು ತಮ್ಮತಮ್ಮ ಸ್ಥಿತಿಗಳನ್ನು ತಕ್ಕಡಿಯಲ್ಲಿ ತೂಗುತ್ತಿದ್ದಾರೆ. ಸಚಿವ, ವೈದ್ಯ, ಉಪಾಧ್ಯಾಯ, ಪೋಲೀಸ್, ಪುರೋಹಿತ ಯಾರನ್ನೂ ಬಿಟ್ಟಿಲ್ಲ ಎಂದು ಕೂಗುತ್ತಿದ್ದ ಮಾಧ್ಯಮಗಳಿಗೂ ಕರೋನ ಆಸ್ಪತ್ರೆಯಲ್ಲಿ ವಾರ್ಡ್ ಖಾಲಿ ಇಲ್ಲ ಎನ್ನುವ ಬೋರ್ಡ್ ಎದುರಾಗುತ್ತಿದೆ. ಇವರೆಲ್ಲರಿಗೂ ಕುಟುಂಬ ಇದೆ. ನಾಲ್ಕು ಗೋಡೆಗಳ ಮಧ್ಯೆ ದೌರ್ಜನ್ಯ ವಲಸೆ ಹೋಗಲೂ ಆಗದೆ ಕಾರ್ಮಿಕನಂತೆ ನೋಯುತ್ತಿದೆ, ನೋಯಿಸುತ್ತಿದೆ. ಆದರೂ ಪ್ರಪಂಚ ಕುಟುಂಬವನ್ನು ಹಿಡಿದಿಡುವ ಪ್ರಯತ್ನ ಬಿಟ್ಟಿಲ್ಲ. ಅದಕ್ಕೇ ಮಾನಸಿಕ ತಜ್ಞರು ತಾವು ಸಹಾಯ ಮಾಡಲು ತಯಾರಿದ್ದೇವೆ ಎಂದು ಸಹಾಯವಾಣಿಗಳ ಮೂಲಕ ಕೂಗಿ ಹೇಳುತ್ತಿದ್ದಾರೆ. ಸಹಾಯ ಬೇಕಿದ್ದವರು ನೆವ ಹೇಳದೆ ಪಡೆಯಬೇಕಿದೆ ಅಷ್ಟೆ.  ******************************** ಲೇಖನ ಕೃಪೆ:ಮೈಸೂರಿನ ಆಂದೋಲನ ಪತ್ರಿಕೆ ಮತ್ತು ಅಸ್ಥಿತ್ವ ಲೀಗಲ್ ಬ್ಲಾಗ್

ಲಾಕ್ಡೌನ್ ಕಾಲಘಟ್ಟದ ದಾಂಪತ್ಯ Read Post »

ಇತರೆ

ಪರಿಣಾಮ

ಲೇಖನ ಪರಿಣಾಮ ಡಾ. ಅರಕಲಗೂಡು ನೀಲಕಂಠ ಮೂರ್ತಿ ಮನುಷ್ಯ ಸಾಮಾನ್ಯವಾಗಿ ಯಾವುದೇ ಕೆಲಸ ಮಾಡಬೇಕಾದರೆ, ಅಥವ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಮೊದಲು, ಅದರ ಪರಿಣಾಮದ ಬಗ್ಗೆ ಖಂಡಿತ ಕೂಲಂಕುಷವಾಗಿ ಚಿಂತಿಸುತ್ತಾನೆ. ಆದರೆ ಎಂಥ ಸಂದರ್ಭಗಳಲ್ಲೂ ಸಹ ಕೆಲವರು, ಉಡಾಫೆ ಬದುಕಿನವರು, ಪ್ರಪ್ರಥಮವಾಗಿ ಆಳವನ್ನೂ ಅಂದಾಜಿಸದೆ, ನೇರ ಭಾವಿಗೇ ದಿಢೀರಂತ ಧುಮಿಕಿಬಿಡುತ್ತಾರೆ. ನಂತರ ಪರಿಣಾಮದತ್ತ ಗಮನ ಹರಿಸಿದ ಹಾಗೆ, ಕೈಕಾಲುಗಳನ್ನು ಆತುರಾತುರವಾಗಿ ಬಡಿಯತೊಡಗುತ್ತಾರೆ. ಆಗ ತುಂಬ ತಡವಾಗಿ ಪಶ್ಚಾತ್ತಾಪ ಪಟ್ಟು ಸಂಕಟದ ಕೆಸರೊಳಗೆ ಒದ್ದಾಡುತ್ತಾರೆ. ಬಹಳ ಒಳ್ಳೆಯ, ಆದರೆ ದಿನನಿತ್ಯದ ನಮ್ಮನಿಮ್ಮೆಲ್ಲರ ನಿದರ್ಶನದಿಂದಲೇ ಆರಂಭಿಸೋಣ. ನಾವೆಲ್ಲ ಆಗಾಗ್ಗೆ ಕ್ಷೌರಕ್ಕಾಗಿ ಹೋಗುತ್ತೇವೆ. ತನ್ನ ಕಾಯಕದಲ್ಲಿ ನೈಪುಣ್ಯ ಇಲ್ಲದ ಯಡವಟ್ಟನ ಹತ್ತಿರ   ಅಕಸ್ಮಾತ್ ಹೋದರೆ, ನಿಮ್ಮ ಕೂದಲನ್ನು ಕುರಿಯ ಉಣ್ಣೆ ಕೆರೆದಂತೆ, ಜೋಕರ್ ಕಟಾವು ಮಾಡಿ ಎಲ್ಲರೆದುರು  ನಗೆಪಾಟಲಿಗೆ ಕಾರಣ ಮಾಡುತ್ತಾನೆ. ಏಕೆ? ನೀವು ಅಂಥ ಕಡೆ ಹೋದ ಪರಿಣಾಮ! ಆದ್ದರಿಂದ ಈ ಪರಿಣಾಮ ಎಂಬುದು ಯಕಃಶ್ಚಿತ್ ಪದವೇ ಆಗಿದ್ದರೂ, ಅದರ ಪ್ರಭಾವ ಮಾತ್ರ ಅಗಾಧ. ಎಂಥ ಅಲ್ಲೋಲಕಲ್ಲೋಲ ಸೃಷ್ಟಿಸಿ ಮುಜುಗರಕ್ಕೆ ನೂಕುತ್ತದೆ ಅಲ್ಲವೇ? ಅಲ್ಲಾರೀ, ಅದು ನೀವೇ ದಿನ ಶೇವ್ ಮಾಡುವಾಗ, ಸೈಡ್ ಬರ್ನ್ಸ್ ಅಕಸ್ಮಾತ್ ವ್ಯತ್ಯಾಸ ಆದರೆ ನಿಮಗೇ ಹಿಂಸೆ ಅಲ್ಲವೇ, ಹಾಗೆ…”Patriotism is the last refuge of a scoundrel”. “ದೇಶಭಕ್ತಿ ಅಥವ ರಾಷ್ಟ್ರಪ್ರೇಮ ಎಂಬುದು ಒಬ್ಬ ದುಷ್ಟ ಮನುಷ್ಯನ ಅಂತಿಮ ಆಶ್ರಯ”.(Scoundrel = ನೀಚ, ಲುಚ್ಚ, ದುಷ್ಟ, ದಗಾಕೋರ, ದಗಲ್ಬಾಜಿ…New Modern Dictionary; Eglish-English-Kannada)  ಎಂಬ ಪ್ರಸಿದ್ಧವಾದ ಹೇಳಿಕೆ ಘೋಷಿಸಿದ್ದು ಡಾ. ಸ್ಯಾಮ್ಯುಯಲ್ ಜಾನ್ಸನ್ ಅವರು. ಅಂತಹ ವ್ಯಕ್ತಿ ಹೇಳಿದ್ದರ ಪರಿಣಾಮ ಜಗತ್ತಿನಾದ್ಯಂತ ದೇಶಭಕ್ತರು ಇಲ್ಲವೇ ಇಲ್ಲವಾಗಿಬಿಟ್ಟರೆ? ಹಾಗೇನೂ ಖಂಡಿತ ಇಲ್ಲವಲ್ಲ! ವಾಸ್ತವ ಏನೆಂದರೆ ಇನ್ನೂ ವಿಪುಲ, ಬಣ್ಣಬಣ್ಣದ ಭಕ್ತ ಶಿರೋಮಣಿಗಳೇ ಜನ್ಮ ತಾಳಿದ್ದಾರೆ; ಈಗಲೂ ಸಹ ದಿಢೀರನೆ ಕಂಡಕಂಡಲ್ಲೆಲ್ಲ ಪ್ರತ್ಯಕ್ಷ ಆಗುತ್ತಲೇ ಇದ್ದಾರೆ/ಇರುತ್ತಾರೆ. ಎಲ್ಲೆಲ್ಲೂ  ಭಕ್ತಿಯ ಹೆಸರಿನ ನಾಮ ಹಚ್ಚಿಕೊಂಡ ಭಾರಿ ಭಕ್ತಿಯ  “ಭುಕ್ತ”ರೂ ಅನಂತವಾಗಿದ್ದಾರೆ. ಮುಂದೂ ಇದ್ದೇ ಇರುತ್ತಾರೆ — ಭಕ್ತಿ ಅಲ್ಲವೇ? ಅದೂ ದೇಶಕ್ಕಾಗಿ! ಪರಿಣಾಮ…?ಆ ಪ್ರಸಿದ್ಧ ಡಾ. ಜಾನ್ಸನ್ ಅವರು  ಹಾಗೆ ಹೇಳಿದ್ದು ಉಪಯೋಗ ಇಲ್ಲ ಅಂತಲೇ ಅಥವ ಅಂಥ ಕೆಲಸಕ್ಕೆ ಬಾರದ ಹೇಳಿಕೆಗಳು ಯಾರಿಗೆ ಬೇಕು; ಉಪ್ಪು ಕಾರ ಹುಳಿ ಇಲ್ಲದ ಮೇಲೆ ಅಂತಲೇ? ಹಾಗಾದರೆ ಅವರ ನಂತರ ಬಂದ ಇನ್ನೊಬ್ಬ ಮಹನೀಯರಾದ ಜಾರ್ಜ್ ಬರ್ನಾರ್ಡ್ ಷಾ ಅವರು ಜಾನ್ಸನ್ ಹೇಳಿದ್ದನ್ನೇ ಇನ್ನೂ ಉತ್ತಮ ಪಡಸಿ,”Politics is the last refuge of a scroundrel” ಅಂತ, ಅಂದರೆ, “ಒಬ್ಬ ದಗಾಕೋರನ ಅಂತಿಮ ಆಶ್ರಯ ರಾಜಕೀಯ” ಅಂದಿದ್ದರು. ಪರಿಣಾಮ! ಬರ್ನಾರ್ಡ ಷಾ ಅಂತಹ ಮಹಾನ್ ವ್ಯಕ್ತಿಯ ಉವಾಚ, ರಾಜಕೀಯಕ್ಕೇ ಯಾರೂ ಬರದ ಹಾಗೇನೂ ಮಾಡಿಲ್ಲವಲ್ಲ! ಬದಲಿಗೆ ಸ್ಕೌಂಡ್ರೆಲ್ ಗಳಿಗಾಗಿಯೇ ಮತ್ತೊಂದು ನವೀನ ನಮೂನೆಯ ಶ್ರೇಣಿಯನ್ನೇ ಸೃಷ್ಟಿಸಲಾಗಿದೆ, ಬಹುಷಃ! ಅದರಲ್ಲಿಯೂ ಅತ್ಯಂತ ಕೆಳ ಸ್ತರದ, ಅಂದರೆ ಸ್ಕೌಂಡ್ರೆಲ್ ಗಳಲ್ಲೇ ಅತ್ಯಂತ ಕೊನೆ ಬೆಂಚಿನ   ಹಂತದಲ್ಲೇ ಕೂರುವ  ಸ್ಕೌಂಡ್ರೆಲ್ ಅಂಥವರೇ ಈಗ ಅಧಿಕ!                ಕೌರವರೊಳ್ ಕೆಳದರ್ಜೆ ಕೌರವರಾಗಿ, ಇನ್ನೂ ಭಯಂಕರ ಆಯುಧಗಳನ್ನು ಹೆಗಲುಗಳಲ್ಲಿ ಹೊತ್ತುಕೊಂಡೇ ರಾಜಕೀಯ ಎಂಬ ಕುರುಕ್ಷೇತ್ರಕ್ಕೆ ಧುಮುಕುತ್ತಿಲ್ಲವೇ? ಪರಿಣಾಮ? ಪಾಪ ನೊಬೆಲ್ ಪಾರಿತೋಷಕ ಪಡೆದೂ ಬರ್ನಾರ್ಡ್ ಷಾ ಅವರ ಬೆಲೆ ಕುಲಗೆಟ್ಟ ನೀರಿನಲ್ಲಿ ಅದ್ದಿ ಬಿಸಾಡಿದ ಕಳಪೆ ಡಿಗ್ರಿಗಳ ಹಾಗೇನು? ಖಂಡಿತ ಇಲ್ಲ.ಅಂದಮೇಲೆ ಈ ಪರಿಣಾಮ ಎಂಬ ಮಹಾನ್ ಮಾಂತ್ರಿಕ ‘ದಂಡ’ಕ್ಕೆ ಬೆಲೆ ಕಿಂಚಿತ್ತೂ ಇಲ್ಲ ಅಂತಲೇ? ಇದ್ದರೆ ಅದಕ್ಕೂ ಒಂದು ‘ಪರಿಮಾಣ’ ಅಂತ ಇರಬೇಕಲ್ಲವೇ?ಇಂದಿನ ಕಾಲಖಂಡದಿಂದ ಏಕದಂ ಅಂದಿನ ಮಹಾಭಾರತ ಸಂದರ್ಭದ ಶಕುನಿ ಮಹಾಶಯನ ಕೃತ್ರಿಮ ಮಾಯಾದಂಡ ಎಂಬ ಆ ಪಗಡೆ ಮತ್ತು ಅದರ ಆಟದ ಕಡೆ ಸ್ವಲ್ಪ ಹೊರಳೋಣ. ದುರ್ಯೋಧನ ತನ್ನ ಸಾಮ್ರಾಜ್ಯದ ಮತ್ತು ಚಕ್ರಾಧಿಪತ್ಯದ ದುರಾಸೆಗೆ, ಮತ್ತದನ್ನು ಪೋಷಿಸುವ ತನ್ನ ಮಾವನ ಕುಟಿಲ ಮಾತಿಗೆ ಬದ್ಧನಾಗಿ ಪಗಡೆ ಆಟ ಆಡಲು ಪಾಂಡವರಿಗೆ ಆಹ್ವಾನ ಕಳಿಸಿದ. ಅದನ್ನು ತಿರಸ್ಕರಿಸುವ ಅಧಿಕಾರ ಸಾಮ್ರಾಟನಾಗಿದ್ದ ಧರ್ಮರಾಯನಿಗೆ ಖಂಡಿತ ಇತ್ತು. ಹಾಗಾಗಿದ್ದರೆ, ಆ ‘ಪರಿಣಾಮ’ವೇ ಬೇರೆ ಆಗುತ್ತಿತ್ತು. ಬಹುಷಃ ಯುದ್ಧ ಇಲ್ಲದೇ ಇದ್ದಿದ್ದರೆ ಆಗ ಅದು ಮಹಾಭಾರತ ಹಾಗಿರಲಿ, ಬದಲಿಗೆ ಒಂದು ಸಣ್ಣ ಭಾರತ ಕತೆಯೂ ಆಗುತ್ತಿರಲಿಲ್ಲ, ಅಲ್ಲವೇ?  ಜನ ಈಗ ಹೇಗೆ ಕಪ್ಪುಬಿಳುಪು ಸಿನಿಮಾ ನೋಡಲು ನಿರಾಕರಿಸುತ್ತಾರೋ, ಹಾಗೆ ಯಾರೂ ಅದನ್ನು ರಾತ್ರಿಯೆಲ್ಲ ಕಣ್ಣಿಗೆ ಎಣ್ಣೆ ಸುರಿದುಕೊಂಡು ನೋಡುತ್ತಿರಲಿಲ್ಲ ಅಲ್ಲವೇ. ಅಷ್ಟೇ ಅಲ್ಲ; ಫೈಟಿಂಗೇ ಇಲ್ಲ ಅಂದಮೇಲೆ ಅಂಥ ಸಿನಿಮಾ ತಾನೆ ಯಾರು ಮೂಸುತ್ತಾರೆ ಅನ್ನುವ ಹಾಗೆ (ಅದು ಕನ್ನಡ ಸಿನಿಮಾದ ನಿರ್ಮಾಪಕರ ತರ್ಕ ಅನ್ನುವುದೇ ವಿಪರ್ಯಾಸ!); ಅದೇ ನೋಡಿ ಆ ಪಗಡೆಯ ‘ಮಹಾಪರಿಣಾಮ’! ಶಕುನಿಮಾವ, ದುರ್ಯೋಧನ, ದೃತರಾಷ್ಟ್ರ ಮುಂತಾದ  ಇನ್ನೂ ಅನೇಕರೆಲ್ಲ ಪರಿಣಾಮಗಳ ಒಡೆಯರು! ಕುರುಕ್ಷೇತ್ರ ಯುದ್ಧದ ಫಲಿತಾಂಶವೇ ಒಡೆತನ! ಅದೇ ರೀತಿಯ ಒಡೆಯರು/ಒಡೆತನಗಳು ಪುಂಖಾನುಪುಂಖವಾಗಿ ಕಾಲಕಾಲಕ್ಕೆ ಜನುಮ ಅಂತ ತಳೆದರೆ ತಾನೆ ಇತಿಹಾಸದ ಸೃಷ್ಟಿ! ಅನೇಕ ಬಾರಿ ಅಂತಹ ಇತಿಹಾಸ ‘ಮಹಾಹಾಸ್ಯ’ ಆಗುವುದೂ ಅಥವಾ ಸುಳ್ಳುಗಳನ್ನೇ ಪೋಣಿಸಿದ ಸರಪಟಾಕಿ ಕೂಡ ಆಗುವುದು ಇರಬಹುದು… ಪರಿಣಾಮ ಅನ್ನೋದು ಬಹುಷಃ ಮಾಯಾಚಾಪೆ ಥರ. ಮೇಲಕ್ಕೆ ಏರಿಸಲೂಬಹುದು, ಕೆಳಕ್ಕೆ ಧೊಪ್ಪಂತ ಎತ್ತಿ ಹಾಕಲೂಬಹುದು. ಹಾಗಾಗಿ ಪ್ರತಿ ಕೆಲಸದಲ್ಲೂ, ಪ್ರತಿ ಹಂತದಲ್ಲೂ ಒಂದೊಂದು ರೀತಿ ಪರಿಣಾಮದ ಪರಿಮಾಣ ಇದ್ದೇ ಇರುತ್ತದೆ. ಹಾಗಾಗಿ ಈ ಪರಿಣಾಮದ ತಕ್ಕಡಿಯಲ್ಲಿ ಯಾವುದಾದರೂ ಒಂದು ಕಡೆಗೆ ಯಕಃಶ್ಚಿತ್ ಜಾಸ್ತಿ ಆದರೂ ಆ ತಕ್ಕಡಿಯ ಪರಿಮಾಣ ವ್ಯತ್ಯಾಸವಾಗಿ ಆ ಒಂದು ಕಡೆಯ ತಟ್ಟೆ ಅಷ್ಟು ಕೆಳಕ್ಕೆ ಕುಸಿಯುತ್ತದೆ. ಆದರೆ ಅಲ್ಲಿ, ಅಂದರೆ ಆ ತಕ್ಕಡಿಯ ವಿಷಯದಲ್ಲಿ ಅದು ಕೆಳಕ್ಕಿಳಿದಷ್ಟೂ ಬೆಲೆ! “ಬೇಡ ಬೇಡ ಅಂದರೂ ಕೇಳಲಿಲ್ಲ. ನಿಮ್ಮಂಥ ಗಂಡಸರೇ ಹಾಗೆ. ಎಲ್ಲಿ ಹೆಂಡತಿ ಮಾತು ಕೇಳಿ ಬಿಟ್ಟರೆ ತಮ್ಮ ತಲೆಮೇಲಿರೋ ಕೋಡಿಗೆ ಧಕ್ಕೆ ಆಗುತ್ತೋ ಅಂತ. ಜೊತೆಗೆ ದುರಾಸೆ ಬೇರೆ. ಹಣ ಹಣ ಹಣ ಅಂತ ಮತ್ತು ಹತ್ತಿರದ ನಂಟುಕಣೇ ಅಂತೆಲ್ಲಾ ಒಗ್ಗರಣೆ ಹಾಕಿ, ಮಗನಿಗೆ ಈ ಬೊಂಬಾಯಿ ತಂದು ಕಟ್ಟಿದಿರಿ. ಪರಿಣಾಮ ನೀವೇ ಉಣ್ಣುತ್ತಾ ಇದ್ದೀರಿ…!” ಇದು ಒಂದು ಮನೆಯ ಕಥೆ ಪರಿಣಾಮ. ಇನ್ನೊಬ್ಬರ ಮನೇಲಿ: “ಕನ್ನಡ ಕನ್ನಡ ಅಂತ ಕನ್ನಡ ಭಕ್ತರ ಥರ ಮೇಲೆ ಕೆಳಗೆ ಕುಣಿದಿರಿ; ಈ ಸರ್ಕಾರಿ ಸ್ಕೂಲಿಗೆ ಅಷ್ಟು ಚನ್ನಾಗಿ ಓದೋ ಮಗೂನ ಸೇರಿಸಿದಿರಿ. ಪರಿಣಾಮ ನಿಮ್ಮೆದುರಿಗೇ ನರ್ತನ ಮಾಡ್ತಾ ಇದೆ ಕಣ್ತುಂಬ ನೋಡ್ಕೊಳಿ! ಕಾನ್ವೆಂಟಿಗೆ ಸೇರಿಸಿದರೆ ದುಡ್ಡು ಖರ್ಚು ಅಂದರಿ. ನೀವು ದುಡಿಯೋದಾದರೂ ಯಾರಿಗಾಗಿ…ಛೆ!” ಮತ್ತೊಂದು ಕಡೆ: “ಸ್ವಲ್ಪ ಲಂಚ ಅಂತ ಕೊಟ್ಟರೂ ಪರವಾಗಿಲ್ಲ, ಮಗನಿಗೆ ಒಳ್ಳೆ ಕೆಲಸ ಕೊಡಿಸಿ ಅಂತ ಬೇಡ್ಕೊಂಡೆ. ಕೇಳಿದ್ರಾ, ಊಹ್ಞು! ಹರಿಶ್ಚಂದ್ರನ ಮೊಮ್ಮಗನ ಥರ ಒಂದೇ ಒಂದು ಗೆರೆ ಅಷ್ಟೂ ಮುಂದುವರೀಲಿಲ್ಲ. ಪರಿಣಾಮ ನೋಡಿ ನಿಮಗೇನೂ ಹೊಟ್ಟೇನೇ ಉರಿಯೋಲ್ಲವೆ? ಎಲ್ಲೆಲ್ಲಿಯೋ ಕೆಲಸ ಕೆಲಸ ಅಂತ ಅಲೆದೂ ಅಲೆದೂ ಸೋತು ಹೋದ ಮಗ. ನಿಮ್ಮ ಮಗಾನೇ ರೀ ಅವನು…!” ಇಂತಹ ಪರಿಣಾಮಗಳಿಂದಾದ ಅನಂತ ವಿಧವಿಧದ ಪ್ರಭಾವಗಳು ಎಲ್ಲರ ಬದುಕಿನಲ್ಲೂ ಯಥೇಚ್ಛ! ಈಗ ಸ್ವಲ್ಪ ವಿರುದ್ಧ ದಿಕ್ಕಿನತ್ತಲೂ ಹೊರಳೋಣ. ಅಕಸ್ಮಾತ್ ಗಂಡಸರ  ಬದಲು ಹೆಂಗಸರು ದುಡಿಯುತ್ತಿದ್ದರೆ ಮತ್ತು ಮನೆಯ ರಥ ಉರುಳಿಸುವ ಕಾಯಕ ಅವರ ಕೈಲಿ ಇದ್ದಿದ್ದರೆ…ರೆ? ಆಗ! ಒಂದು ರೀತಿಯಲ್ಲಿ ಅದು ಒಳ್ಳೆಯದೇ ಆಗುತ್ತಿತ್ತು; ಬಹುಷಃ. ಮೊದಲಿಗೆ ದಿನದಿನವೂ ‘ಬಾರ್’ ಗಾಗಿ ಅಂತ ಅಥವ ಒಂದೆರಡು ಪೆಗ್ಗು, ಗಡಂಗಿಂದ ತಂದು ಮನೆಯಲ್ಲೇ ಅಂತಲೋ, ಆ ಗಂಡು ಎಂಬ ದೈನಾಸ ಹೇಗೆ ತಾನೆ ಕುಗ್ಗಿ ಕುಗ್ಗಿ ಹೆಂಡತಿಯನ್ನ     ಬೇಡುವುದು?  ಮತ್ತು ಬೀಡಿ ಸಿಗರೇಟು ಮುಂತಾದ ಗತಿ? ಪೆಗ್ಗೇ ಭಿಕ್ಷೆ; ಇನ್ನು ಅದರ ಮೇಲೆ ದಮ್ಮು ಅಂತ ಬೇರೆ! ಯಾವ ಯಜಮಾನಿ ತಾನೆ ಕೊಟ್ಟುಬಿಡ್ತಾಳೆ? ಪರಿಣಾಮ ಅಲ್ಲಿ ಆಗಾಗ ಉಳಿತಾಯ – ಅದು ಎಷ್ಟೇ ಕನಿಷ್ಠ ಇರಲಿ. ಅಷ್ಟೇ ಅಲ್ಲ; ಕಳಸಪ್ರಾಯದಂತೆ ಯಾವ ಯಜಮಾನಿ ಹೆಣ್ಣು ತಾನೆ ಬಾರಿಗೆ ಹೋಗುವಳು? ಅಲ್ಲೂ ಉಳಿತಾಯ! ಇತ್ತೀಚೆಗೆ ಈ ಸ್ತರದಲ್ಲಿ ಸಹ ವಿಮೋಚನೆಯ ಹವಾ ಬೀಸಿ ಬೀಸಿ  ಆನಂದ ಆಗ್ತಾ ಇದೆ! ಅದು ಬೇರೆ ಮಾತು; ಲಿಬರೇಷನ್ ಕಾಂಡ! ಆದರೆ…ಹೌದು, ಹಾಗಂತ  ಅವರೇನೂ ಅವರ ಗಂಡುಮಕ್ಕಳ ಮದುವೆಯ ವರದಕ್ಷಿಣೆಗೆ ಕೈ ಒಡ್ಡುತ್ತಿರಲಿಲ್ಲವೇ? ಮಿಲಿಯನ್ ಡಾಲರ್ ಪ್ರಶ್ನೆ! ಹೆಣ್ಣಾದರೇನು ಗಂಡಾದರೇನು ದುಡ್ಡು ಇಬ್ಬರಿಗೂ ದೊಡ್ಡ ಡ್ಯಾಡೀನೇ ತಾನೇ! ಅಂತೆಯೇ ಮಕ್ಕಳ ಕೆಲಸಕ್ಕೆ ಲಂಚ, ಪ್ರೈವೇಟ್ ಶಾಲೆ ಫೀಸು, ಮುಂತಾಗಿಯೂ ಖಂಡಿತ ಇದ್ದರೂ ಇರಬಹುದು. ಉತ್ತಮತೆಗಾಗಿ ಈಗ ಹೆಂಗಸು ಸದಾ ಸನ್ನದ್ಧ!          ಹಾಗಂತ ಅವರಿಗಾಗಿ ಒಳ್ಳೊಳ್ಳೆ ಬಟ್ಟೆ, ಚಿನ್ನಗಿನ್ನ, ವೈನಾದ ಲಿಪ್ ಸ್ಟಿಕ್ಕು, ಅತ್ಯುತ್ತಮ ವಾಸನೆಯ ಇಂಪೋರ್ಟೆಡ್ ಪರ್ಫ್ಯೂಮ್, ಸಾಕಷ್ಟು ಎತ್ತರಕ್ಕೆ ಎತ್ತುವ ಹೈ ಹೀಲ್ಡ್  ಎಕ್ಕಡಗಳು ಇನ್ನೂ ಮುಂತಾಗಿ ಕೊಳ್ಳುತ್ತಿರಲಿಲ್ಲವೇ… ಮನೆ ಯಜಮಾನಿ ಬೇರೆ, ಅಲ್ಲದೆ ಹೊರಗೆ ದುಡಿಯೋ ಹಂಗಸು ಅಂದಮೇಲೆ ಎದ್ದು ಕಾಣೋ ಥರ, ಬೇರೆ ಬೇರೆ ಭುಜಗಳ ಮೀರಿ ನಡೆಯೋ ಥರ ಇರಲಿಲ್ಲ ಅಂದರೆ ಆ ಮನೆಯ ಗಂಡಸಿಗೇ ಅವಮಾನ ಅಲ್ಲವೇ…? ನೋಡಿ ಇಲ್ಲೂ ಸಹ ಪರಿಣಾಮ ಎಂಥದ್ದು ಅಂತ ತೋರಿಸಿಕೊಟ್ಟಿದೆ. ಇಲ್ಲಿ ಸಹ ತಮ್ಮ ಗಂಡಸರ ಮರ್ಯಾದೆ ಬಗ್ಗೆ ಕಾಳಜಿ! ಹ್ಞಾ, ಇನ್ನೊಂದು ಮಾತು; ಮಕ್ಕಳ ಬಟ್ಟೆ ಮತ್ತು ಅವರ ಮೇಕಪ್ ಕಡೆ ಕೂಡ ಹೆಂಗಸರದೇ ಮಿತಿಮೀರಿದ  ಮುತುವರ್ಜಿ…!ಕೊನೆಯಲ್ಲಿ ಪರಿಣಾಮ ಎಂಬ ನಾಣ್ಯದ ಮತ್ತೊಂದು, ಕಾರಾಳ ಹಾಗೂ ರಕ್ಕಸ ಮುಖದತ್ತ: ಹೌದು ನಮ್ಮ ನಮ್ಮ ಬದುಕಿನಲ್ಲಿ ಬಂದೊದಗುವ ನತದೃಷ್ಟ  ದುಷ್ಪರಿಣಾಮಗಳ ಹಾಗೆಯೇ ಜಗತ್ತಿಗೂ, ಹಾಗಾಗಿ ಆ ಮೂಲಕ ಜಗದೆಲ್ಲ ಜೀವಿಗಳ ಮೇಲೂ, ಸಸ್ಯ, ಮತ್ತಿತರ ಪ್ರಾಣಿ, ಜಂತುಗಳ ಮೇಲೂ, ದುರ್ಘಟನೆಗಳಿಂದ ಅಸಂಖ್ಯ ರೀತಿಯಲ್ಲಿ ಹಾನಿಕಾರಕ ಪರಿಣಾಮಗಳು ಆಗಾಗ ಜರುಗುತ್ತಲೇ ಬಂದಿವೆ…ಸಾವಿರದ ಒಂಭೈನೂರ ಹದಿನೆಂಟರಿಂದ ಇಪ್ಪತ್ತರಲ್ಲಿ ಜಗತ್ತನ್ನು ಆವರಿಸಿದ್ದ ಸ್ಪ್ಯಾನಿಷ್ ಫ್ಲೂ ಸರಿಸುಮಾರು ಐದು ಕೋಟಿಯಷ್ಟು  ಜನರ ಬಲಿ ತೆಗೆದುಕೊಂಡಿತ್ತು ಎಂದು ಅಂದಾಜಿಸಲಾಗಿದೆ. ಎಂಥ ಸಂಕಷ್ಟದ ಪರಿಣಾಮವನ್ನು ಅಂದಿನ ಜನ ಅನುಭವಿಸಿರಬಹುದು! ಹೀಗೆಯೇ ಪ್ಲೇಗ್ ಮಹಾಮಾರಿಗಳು, ಪಶ್ಚಿಮ ಆಫ್ರಿಕಾದ ಎಬೋಲೋ ವೈರಸ್, ನಂತರದ ಜೀಕಾ ವೈರಸ್! ಇವುಗಳ ಜೊತೆಜೊತೆಗೇ ಆಳುವವರ ದರ್ಪದ ಕಠಿಣ ಶಿಕ್ಷೆಗಳು, ಯುದ್ಧಗಳು, ಒಂದ ಎರಡ… ಮಹಾಯುದ್ಧಗಳಲ್ಲದೆ ಇನ್ನೂ ಅನೇಕ!  ಇದೀಗ ನಮ್ಮನ್ನು ಅರೆಯುತ್ತಿರುವ ಈ ಕರೋನ ಮಹಾಮಾರಿ! ಅದರ ಪರಿಣಾಮ ನಾವು ದಿನನಿತ್ಯ ಕಾಣುತ್ತಿರುವ ಈ ಸಾವು ನೋವು. ಈಗ ಶವಗಳೂ ಕ್ಯೂ ನಲ್ಲಿ ಮಲಗಿ ಅಂತಿಮ ಘಳಿಗೆಗಾಗಿ ಕಾಯುವ ವಿಪರ್ಯಾಸ! ಇಷ್ಟಾದರೂ ಯಾವ ಪರಿಣಾಮಕ್ಕೂ ತಲೆ ಕೆಡಿಸಿಕೊಳ್ಳದೆ ಮಾಸ್ಕ್ ಇಲ್ಲದೇ ಓಡಾಡುವ ಅನಂತ ಬೇಜವಾಬ್ದಾರಿ ಜನ! ಇಂಥವರಿಗೆ ಆಸ್ಪತ್ರೆಗಳ, ಮಸಣಗಳ ದರ್ಶನ ಮಾಡಿಸಬೇಕು; ಅಮೆರಿಕದಲ್ಲಿ ದೊಡ್ಡದೊಂದು ಗುಂಡಿ ಅಗೆದು ಹೆಣಗಳ ರಾಶಿ ರಾಶಿ ಬಿಸಾಡಿದ ಕಂಡರಿಯದಿದ್ದಂತಹ ದೃಷ್ಯ ತೋರಿಸಬೇಕು…ಕನಿಷ್ಠ ತಮ್ಮ ಸಹಜೀವಿಗಳ ಇರುವಿಕೆಯ ಕಾಳಜಿಗಾಗಿ! ಇಂಥವರ ಮಧ್ಯೆ ಬದುಕು ಎಷ್ಟು

ಪರಿಣಾಮ Read Post »

ಪುಸ್ತಕ ಸಂಗಾತಿ

ನಾನು ದೀಪ ಹಚ್ಚಬೇಕೆಂದಿದ್ದೆ ಕವನಗಳು

ಪುಸ್ತಕ ಸಂಗಾತಿ ನಾನು ದೀಪ ಹಚ್ಚಬೇಕೆಂದಿದ್ದೆ ಕವನಗಳು ಈಗಾಗಲೇ ಆರು ಕೃತಿಗಳನ್ನು ಬರೆದಿರುವ ಅಕ್ಷತಾ ಕೃಷ್ಣಮೂರ್ತಿ ನಾಡಿಗೆ ಚಿರಪರಿಚಿತರು. ನಾನು ದೀಪ ಹಚ್ಚಬೇಕೆಂದಿದ್ದೆ ಇವರ ಏಳನೇ ಪುಸ್ತಕ. ಕಡೆಂಗೋಡ್ಲು ಶಂಕರಭಟ್ಟ ಕಾವ್ಯ ಪ್ರಶಸ್ತಿ ಪಡೆದ ಕೃತಿ ಇದು. ಅಂಕಣ, ವ್ಯಕ್ತಿಚಿತ್ರ, ವಿಮರ್ಶೆ, ಸಂಪಾದನೆ, ಕವಿತೆ ಹೀಗೆ ಅಕ್ಷತಾ ಅವರು ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃಷಿ ಮಾಡಿದ್ದಾರೆ.  ೪೨ ಕವಿತೆಗಳ ಈ ಸಂಕಲನದಲ್ಲಿ ಮಕ್ಕಳ ಕವನಗಳು ಇವೆ. ನನ್ನ `ವಿಷಕನ್ಯೆ’ಯ `ಅವನು’ ಇಲ್ಲಿಯೂ ಪ್ರಧಾನವಾಗಿರುವುದು ನನಗೆ ಖುಷಿಯೆನಿಸಿತು. ಹರೆಯದ ಮಹತ್ವವೇ ಅದು. ಜೊತೆಗಿದ್ದು ಒಂಟಿಯಾದ ಭಾವ, ಸರಸ, ವಿರಸ, ಹುಸಿಮುನಿಸು ಇವೆಲ್ಲವೂ `ಯುವಕಾವ್ಯ’ದ ಲಕ್ಷಣಗಳೇ. ಅವರ ಕಾವ್ಯಾತ್ಮಕತೆಗೊಂದು ಉದಾಹರಣೆ ನೋಡೋಣ: ನೆನಪಿದೆಯಾ ಅಂದು ನಾವಿಬ್ಬರೆ                                       ಬಿದ್ದ ಎಲೆಗಳನ್ನಾರಿಸುತ್ತಿದ್ದೆವು                                           ಚಳಿ ಬೆರಗಲಿ ನಮ್ಮ ನೋಡುತ್ತಿದ್ದರೂ                                       ಲೆಕ್ಕಿಸದೆ ( ಚಳಿಗೆ ಅದರುವ ಪದಗಳು) `ನೀನು ಮತ್ತು ಚಳಿ’ ಅದರ ವಿಸ್ಕೃತ ಭಾವವೇ ಕವನದ ಕೊನೆಯ ಭಾಗದಲ್ಲಿ , ಗೋರಿಯಲ್ಲಿ ಮಲಗಿದ                                              ಅವನ ಮೈ ಮೇಲೆ                                                  ತೊಟ್ಟು ಕಳಚಿದ ಎಲೆ   ಬೀಳುತ್ತದೆ                                                       ಸದ್ದೆಬ್ಬಿಸಿ ಈ ಚಳಿಯಲಿ                                                             ಇಲ್ಲಿ ಮಾತು ಮೌನಗಳ ಅನುಸಂಧಾನವೂ ಇದೆ. ಪ್ರೀತಿಯ ಉತ್ಕಟತೆಯೂ ಹರಳುಗಟ್ಟಿದೆ. ಇಷ್ಟೇ ಆಗಿದ್ದರೆ ಅಕ್ಷತಾ `ಗಜಲ’ ಬರೆದು `ಪ್ರೇಮ ಕವಯತ್ರಿ’ ಎಂದು ಬ್ರ್ಯಾಂಡ್ ಆಗುತ್ತಿದ್ದರು. ಆದರೆ ಹಾಗಾಗದೇ ಸ್ತ್ರೀ ಪರ ವಾದ, ಕಾಳಜಿ, ದಾಂಪತ್ಯದ ಬಂಧನ, ಒಲ್ಲದ ಗಂಡನ ಆಕ್ರೋಶ, ಹೆಣ್ಣು ಈಗಲೂ ದ್ವೀತಿಯ ದರ್ಜೆಯ ಪ್ರಜೆಯಾಗಿರುವುದು.. ಹೀಗೆ ಕವನಗಳು ಕುಡಿಯೊಡೆಯುತ್ತದೆ. ನಾನು ದೀಪ ಹಚ್ಚಬೇಕೆಂದಿದ್ದೆ ಎಂಬ ಶೀರ್ಷಿಕೆ ಕವನವನ್ನು ಪರಿಶೀಲಿಸಿದರೆ, ಇದು ಸ್ಪಷ್ಟವಾಗುತ್ತದೆ. ಹೆಣ್ಣಿನ ಆಶಯ ಒಂದು, ವಾಸ್ತವ ಬೇರೊಂದು. ಹೀಗೆ ವೈರುದ್ಯಗಳನ್ನು ಕಾಣಿಸುವ `ಕವಿತೆ’ ಇದು. ದೀಪ ಹಚ್ಚುತ್ತೇನೆ                                                ಎಲ್ಲರೆದೆಯಲ್ಲಿ ಎಂದೆ                                                ಸುದ್ದಿ ಮಾಡು ಎಲ್ಲ                                                               ಗೊತ್ತಾಗಲಿ ಎಂದರು                                                ಪುಕ್ಕಟ್ಟಿನ ಜಾಹೀರಾತಾಗಿಬಿಟ್ಟೆ ಹೀಗೆ ಹೆಣ್ಣಿನ ದುಸ್ಥಿತಿ ಈಗಲೂ ಮುಂದುವರೆದಿರುವದನ್ನು ನೋವಿನಿಂದ ಚಿತ್ರಿಸಿದ್ದಾರೆ. ಒಬ್ಬರ ಅಡಿಯಾಗಬೇಕಾದ ದುರವಸ್ಥೆಗೆ ಒತ್ತು ನೀಡಿದ್ದಾರೆ. ಕತ್ತಿ ರಕ್ತ ಮೀಯುತಿದೆ, ಮಸರಿಯಾಗಬಾರದು ಈ ಎರಡು ಕವನಗಳು ನನಗೆ ವಿಶಿಷ್ಟವೆನಿಸಿದ್ದು. ನೋವಿನ ಘಳಿಗೆಯೊಂದು ನಗುವ ಅರಸುತಿದೆ ಎಂಬ ಕವನದಲ್ಲಿ ಎರಡು ಧರ್ಮಗಳ ಆತ್ಮೀಯತೆ, ಬಾಲ್ಯ ಕಳೆಯುತ್ತಿದ್ದಂತೆ ಬೇರೆಯಾಗುವ ಪರಿ, ಹುಡುಗಿ ಬೆಳೆದಂತೆ ಮಸೀದಿಗೆ ಪ್ರವೇಶವಿಲ್ಲ ಎಂದು ಸಾರುವ ಫಲಕ ಆಗಲೇ ತಿಳಿದದ್ದು                                                     ನನ್ನ ಫ್ರಾಕಿನ ಅಳತೆ ಬದಲಾಗಿದೆಯೆಂದು      ಎಂಬ ಮಾತು ಧ್ವನಿಪೂರ್ಣವಾಗಿದೆ ( ಈಗ ಮಹಿಳೆಯರಿಗೆ ಮಸೀದಿಯ ಪ್ರತ್ಯೇಕ ಭಾಗದಲ್ಲಿ ಪ್ರಾರ್ಥನೆಗೆ ಅವಕಾಶ ಕಲ್ಪಿಸಲಾಗಿದೆ ಆ ಮಾತು ಬೇರೆ) ಗ್ರಾಮೀಣ ಭಾಗದಲ್ಲಿ ಮೂಲಭೂತವಾದಿ ಸ್ತ್ರೀ ಸಮಾನತೆಯನ್ನು ಒಪ್ಪಿಕೊಳ್ಳುತ್ತಿಲ್ಲ ಎಂಬ `ಸತ್ಯ’ವನ್ನು ಒಂದು ಕಥನ ಕವನದ ಗುಣವುಳ್ಳ ಕವನದ ಮೂಲಕ ಬಿಂಬಿಸಿದ್ದಾರೆ. ಇಲ್ಲಿ ನನಗೆ ಮಲೆಯಾಳಿ ಕಥೆಗಾರ್ತಿ ಪಿ ವತ್ಸಲಾ ಅವರ ನಾನು ಅನುವಾದಿಸಿದ ಕಥೆ ನೆನಪಾಯಿತು. ಸ್ತ್ರೀ ಪರ ಹೋರಾಟದ ಕಥನಗಳು ಮುಗಿಯದು. ಇದಲ್ಲದೆ ಪ್ರವಾಹದ ಅತಂತ್ರ ಬದುಕು, ಶ್ರಮಿಕರ, ರೈತರ ಕುರಿತು ಕಾಳಜಿಗಳು ಈ ಸಂಕಲನದಲ್ಲಿ ವ್ಯಕ್ತವಾಗಿವೆ. ಭತ್ತ ಬೆಳೆಯುವ ಹೊತ್ತು                                             ರೈತನ ಹಸ್ತದಂಚಿನಲಿ                                                                 ಜನಿಸಿದ ಜಲ ಒಟ್ಟಾರೆ ಅಕ್ಷತಾ ಅವರ ಈ ಕೃತಿ ಏಕಾಂತ ಲೋಕಾಂತವಾಗುವ ಪ್ರಕ್ರಿಯೆಯಲ್ಲಿರುವುದು ಸ್ವಾಗತಾರ್ಹವಾಗಿದೆ. ************************************************                                          ಡಾ.ಕಮಲಾಹೆಮ್ಮಿಗೆ                                                                                                                                                                                                                                                                                        

ನಾನು ದೀಪ ಹಚ್ಚಬೇಕೆಂದಿದ್ದೆ ಕವನಗಳು Read Post »

ಕಾವ್ಯಯಾನ

ಮಣ್ಣು ,ಅನ್ನ ಮತ್ತು ಪ್ರಭು

ಕವಿತೆ ಮಣ್ಣು ,ಅನ್ನ ಮತ್ತು ಪ್ರಭು ಬಿ.ಶ್ರೀನಿವಾಸ ನೆಲಕೆ ಬಿದ್ದರೆ ಅನ್ನದಾತದಂಗೆಯೇಳುತ್ತದೆ ಅನ್ನ * ಮಕ್ಕಳ ಮುಂದೆ ಅಪ್ಪ ಅಳಬಾರದು ಅಪ್ಪನ ಮುಂದೆ ಮಕ್ಕಳು ಸಾಯಬಾರದು ಪ್ರಭುಗಳ ಮುಂದೆ ಪ್ರಜೆಗಳು ನರಳಬಾರದು ಸುಳ್ಳಾಯಿತುಲೋಕರೂಢಿಯ ಮಾತು. * ಮಣ್ಣಿನೆದೆಯ ಮೇಲೆಯೆ ಇದ್ದವು ಪಾದಗಳುನೆಲದ ಮೇಲಿರುವ ತನಕ ಅದೇ ಮಣ್ಣಿನ ಮೃದು ಪಾದಗಳುನೆಲದಡಿಗೆ ಸೇರಿದವನ ಎದೆಯ ಮೇಲೆ * ಮಣ್ಣಿಗೂಅಪ್ಪನಿಗೂ ಸಂಬಂಧ ಕೇಳುವಿರಿ ನೀವು ಇದೆಅಜ್ಜ-ಮೊಮ್ಮಗನ ಸಂಬಂಧ! * ಉಣ್ಣುವ ಅನ್ನದ ಕಣ್ಣುಎದುರಿಸಲಾಗದ ಕೊಲೆಗಾರ ಹೇಡಿಹೇಡಿಯೆಂದು ಕಿರುಚಾಡುತ್ತಾನೆ * ಕಳಚಿ ಬಿದ್ದಿವೆಪದವಿಗಳು,ಪುರಸ್ಕಾರಗಳುಅಕ್ಷರಗಳು….ಬೀದಿಯ ತುಂಬಾ ನಾನೀಗಲೋಕದ ಸಾಲಿಯ ಪಾಲಿನ ಬೆತ್ತಲೆ ಅಪರಾಧಿ * ಮಾತುಮಾತು…ಬರೀ ಮಾತೂಮಾತಾಡುತ್ತಲೇ ಇದ್ದಾನೆ ಪ್ರಭು ದಯವಿಟ್ಟು ಯಾರಾದರೂ ಸುಮ್ಮನಿರಿಸಿನಾವು ಉಸಿರಾಡಬೇಕಿದೆ. *********************

ಮಣ್ಣು ,ಅನ್ನ ಮತ್ತು ಪ್ರಭು Read Post »

ಕಾವ್ಯಯಾನ

ತೀಡುವ ತಂಗಾಳಿಯಲ್ಲಿ ನಿನ್ನ ದನಿಯು ಕೇಳಿದೆ

ಕವಿತೆ ತೀಡುವ ತಂಗಾಳಿಯಲ್ಲಿ ನಿನ್ನ ದನಿಯು ಕೇಳಿದೆ ನಾಗರಾಜ್ ಹರಪನಹಳ್ಳಿ. ಆಗೋ ನೋಡುಈ ಉರಿಬಿಸಿಲಲ್ಲಿ ಸಮುದ್ರ ನಿದ್ದೆ ಹೋಗಿದೆ ||ತೀಡುವ ತಂಗಾಳಿಯಲ್ಲಿ ನಿನ್ನ ದನಿಯು ಕೇಳಿದೆ|| ತಂಗಾಳಿ ನಿನ್ನ ಪ್ರೀತಿಯ ಮಿಂದು ಬಂದಿದೆ ||ಈ ಕಾರಣಮರಗಿಡಗಳು ಹೂ ಬಟ್ಟೆ ತೊಟ್ಟಿದೆ ||ಮೈತುಂಬಿದ ಮಾವುಬಯಲಲಿ ನಿಂತು ನಕ್ಕಿದೆ || ನೀನಲ್ಲಿ ಕೈ ತುಂಬಾ ಬಳೆ ತೊಟ್ಟು ||ತೆಳು ನೀಲಿ ಮಿಶ್ರಿತ ಹಳದಿ ಬಣ್ಣದ ರೇಶಿಮೆ‌ ಸೀರೆಯುಟ್ಟು ||ಹೊಸದಾಗಿ ತಂದ ಬಂಗಾರದ ಓಲೆ ತೊಟ್ಟು ||ನಿನ್ನ ನೀನೇ ಕನ್ನಡಿಯಲ್ಲಿ ದೃಷ್ಟಿ ನೆಟ್ಟು ||ಹಣೆಗಿದೆ ‌ನೋಡು ನನ್ನದೇ ಕುಂಕುಮ ಬೊಟ್ಟು || ಮಗಳ ಮದುವೆಯ ಸಂತಸವ ತೊಟ್ಟು ||ದೂರದೂರಲಿ ನಾ ನಿನ್ನ ಸಂಭ್ರಮವ ಎದೆಯಲಿಟ್ಟು || ಶಬ್ದಮಿಂದ ಹಕ್ಕಿ ಹಾಡು ಪ್ರೇಮವ ಹೊತ್ತು ಭೂಮಿ‌ ಸುತ್ತ ತಿರುಗಿದೆ ||ನದಿಯೊಳಗಿನ ಮೀನು ಗಗನದಿ ಹಕ್ಕಿಯ ಕಂಡು ನಲಿದಿದೆ || ಹಾಡು ಹಬ್ಬ ಪ್ರೇಮ ಪ್ರೀತಿಇಡಿ ಜಗವ ತುಂಬಲಿ ||ನನ್ನ ನಿನ್ನ ಭೇಟಿಗಾಗಿ ಇಡೀ ಪ್ರಕೃತಿ ಎದೆತುಂಬಿ ಹರಸಲಿ || **********************************************

ತೀಡುವ ತಂಗಾಳಿಯಲ್ಲಿ ನಿನ್ನ ದನಿಯು ಕೇಳಿದೆ Read Post »

ಇತರೆ, ದಾರಾವಾಹಿ

ದಾರಾವಾಹಿ- ಅದ್ಯಾಯ-12 ತನ್ನ ಕುತಂತ್ರಕ್ಕೆ ಬಲಿಯಾಗಿ ಬೀದಿ ಬಿಕಾರಿಯಾದ ಸಂತಾನಪ್ಪ, ಇಂದಲ್ಲ ನಾಳೆ ರಾತ್ರೋರಾತ್ರಿ ಊರು ಬಿಟ್ಟೇ ಓಡಿ ಹೋಗುತ್ತಾನೆ ಅಥವಾ ಮುಂಚಿನಂತೆಯೇ ಬಾಲ ಮುದುರಿ ಕೂಲಿನಾಲಿ ಮಾಡಿಕೊಂಡು ಬದುಕುತ್ತಾನೆ ಎಂದು ಭಾವಿಸಿದ್ದ ಶಂಕರನ ಯೋಚನೆಯು ಪರಮೇಶನ ಬಿಸಿಬಿಸಿ ಸುದ್ದಿಯಿಂದ ಪೂರ್ತಿ ತಲೆಕೆಳಗಾಗಿಬಿಟ್ಟಿತು. ಬಯಲುಸೀಮೆಯ ಒಣಹವೆಯನ್ನೂ ಖಡಕ್ ಜೋಳದ ರೊಟ್ಟಿಯೊಂದಿಗೆ ಈರುಳ್ಳಿ ಮತ್ತು ಹಸಿ ಮೆಣಸಿನಕಾಯಿಯಂಥ ವ್ಯಂಜನವನ್ನು ಜಜ್ಜಿ ಜಗಿದುಣ್ಣುತ್ತ ಒರಟು ಮಂದಿಯ ನಡುವೆ ಹುಟ್ಟಿ ಬೆಳೆದ, ಆರಡಿ ಎತ್ತರದ ಆಜಾನುಬಾಹು ಸಂತಾನಪ್ಪ ಬಡತನದ ಬೇಗೆಯಿಂದ ಮುಗ್ಧ ಪ್ರಾಣಿಯಂತೆ ವಿನಯದ ಮುಖವಾಡ ತೊಟ್ಟು ಬದುಕುತ್ತಿದ್ದನೇ ಹೊರತು ಅಸಾಮಾನ್ಯ ಧೈರ್ಯ ಕ್ರೌರ್ಯಗಳು ಅವನ ರಕ್ತದಲ್ಲೇ ಮಡುಗಟ್ಟಿದ್ದವು ಎಂಬ ಸಂಗತಿಯನ್ನು ತಿಳಿಯುವ ಚಾತುರ್ಯ ಶಂಕರನಲ್ಲಿರಲಿಲ್ಲ. ಒಬ್ಬಿಬ್ಬರು ಗಟ್ಟಿಯಾಳುಗಳಿಂದ ಸದೆಬಡಿಯಲಾಗದಷ್ಟು ಬಲಿಷ್ಠ ಆಸಾಮಿಯಾಗಿದ್ದ ಸಂತಾನಪ್ಪನಿಗೆ ತನ್ನ ಶಕ್ತಿ ಸಾಮಥ್ರ್ಯದ ಮೇಲೆ ಸಂಪೂರ್ಣ ವಿಶ್ವಾಸವಿತ್ತು. ಹಾಗಾಗಿಯೇ ಇಂದು ಒಬ್ಬಂಟಿಯಾಗಿ ಶಂಕರನ ಹುಟ್ಟಡಗಿಸಲು ಹೊರಟಿದ್ದ. ಅದಕ್ಕೆ ಸರಿಯಾಗಿ ಅಂದು ರಾತ್ರಿ ಹತ್ತು ಗಂಟೆಯ ಹೊತ್ತಿಗೆ ತನ್ನಿಬ್ಬರು ಆಳುಗಳಿಂದ, ‘ಶಂಕರಣ್ಣ, ಅವನ ಒಬ್ಬ ಸ್ನೇಹಿತನೊಂದಿಗೆ ಸಿಟಿ ಬಸ್ಸು ನಿಲ್ದಾಣ ಸಮೀಪದ ಪಾಳು ಬಿಲ್ಡಿಂಗ್‍ನ ಅಡ್ಡಾವೊಂದರಲ್ಲಿ ಕುಳಿತು ಸಾರಾಯಿ ಕುಡಿಯುತ್ತಿದ್ದಾನೆ!’ ಎಂಬ ಸಿಹಿ ಸುದ್ದಿಯೂ ಸಿಕ್ಕಿದ್ದರಿಂದ ಅವನು ತಟ್ಟನೆ ಚುರುಕಾದ. ‘ಅವ್ನೊಂದಿಗೆ ಒಟ್ಟು ಎಷ್ಟು ಮಂದಿ ಅದಾರಾ ಅಂತ ಸರಿಯಾಗಿ ನೋಡಿದ್ರಲಾ…?’ ಎಂದು ಆಳುಗಳನ್ನು ಗದರಿಸಿಯೇ ವಿಚಾರಿಸಿದ. ‘ಹೌದು ಧಣೇರಾ, ಅವ್ನ್ ಕೋಣೆಯಾಗ ಅವ್ನ್ ಕೂಡಿ ನಮಗಾ ಇಬ್ರೇ ಕಂಡವ್ರೀ…!’ ಎಂದರು ಅವರು. ಸಂತಾನಪ್ಪ ಮತ್ತೆ ತಡಮಾಡಲಿಲ್ಲ. ಕೂಡಲೇ ಶಂಕರನ ಅಡ್ಡಾಕ್ಕೆ ಧಾವಿಸಿದ. ಆ ಹೊತ್ತು ಬಸ್ಸು ನಿಲ್ದಾಣದಲ್ಲಿ ಒಂದೆರಡು ಸಿಟಿ ಬಸ್ಸುಗಳು ಕೊನೆಯ ಟ್ರಿಪ್ಪಿನ ಪ್ರಯಾಣಿಕರನ್ನು ಕಾಯುತ್ತ ನಿಂತಿದ್ದವು. ವಿದ್ಯುತ್ ಕಂಬಗಳ ಅಡಿಯಲ್ಲಿ ಅಲ್ಲೊಂದು ಇಲ್ಲೊಂದು ಗೂಡಂಗಡಿಗಳು ಆಮ್ಲೇಟ್, ಬ್ರೆಡ್ ಮಸಾಲೆಗಳಂಥ ತಿಂಡಿ ತಿನಿಸುಗಳನ್ನು ತಯಾರಿಸಲು ಮೊಟ್ಟೆ ಕಲಕುವ ಮತ್ತು ಬಾಣಲಿಯ ಠಣಠಣ ಸದ್ದು, ಗದ್ದಲಗಳು ಹಗಲಿಡೀ ಕರ್ಕಶ ಶಬ್ದ ಮಾಲಿನ್ಯದಿಂದಲೂ, ವಾಯು ಮಾಲಿನ್ಯದಿಂದಲೂ ಬೆಂದು ಬಸವಳಿದು ಈಗಷ್ಟೇ ವಿರಮಿಸಲು ಹವಣಿಸುತ್ತಿದ್ದ ಆ ಇಡೀ ಪ್ರದೇಶದ ನೀರವ ಮೌನವನ್ನು ಕದಡುತ್ತಿದ್ದವು. ಸಂತಾನಪ್ಪ ಬಸ್ಸು ನಿಲ್ದಾಣದ ಮೇಲೆ ಎಡಭಾಗದಲ್ಲಿರುವ ಪ್ರೇಮ ಬೇಕರಿಯ ಎದುರು ಬಂದು ಕಾರು ನಿಲ್ಲಿಸಿದ. ಥಳಥಳ ಹೊಳೆಯುವ ಅಗಲವಾದ ಮಚ್ಚನ್ನು ಪೇಪರಿನಿಂದ ಸುತ್ತಿ ಬೆನ್ನ ಹಿಂದೆ ಪ್ಯಾಂಟಿನೊಳಗೆ ತುರುಕಿಸಿ ಮರೆಮಾಚಿದ. ಶಂಕರನ ರಹಸ್ಯ ತಾಣಕ್ಕೆ ತಾನು ಸಾಕಷ್ಟು ಬಾರಿ ಬಂದು ಕೆಲಸಕಾರ್ಯಗಳ ಬಗ್ಗೆ ಚರ್ಚಿಸುತ್ತ ಪೆಗ್ಗು ಹೀರುತ್ತ ಕುಳಿತಿರುತ್ತಿದ್ದವನಿಗೆ ಆ ಜಾಗವು ಚಿರಪರಿಚಿತವಿತ್ತು . ಹಾಗಾಗಿ ಧೈರ್ಯದಿಂದ ಅಡ್ಡಾದ ಹತ್ತಿರ ಹೋದ. ಶಂಕರನ ಕೋಣೆಯ ಬಾಗಿಲು ಮುಚ್ಚಿತ್ತು. ನಿಶ್ಶಬ್ದವಾಗಿ ನಿಂತು ಒಳಗಿನ ಶಬ್ದವನ್ನು ಆಲಿಸಿದ. ಯಾರದೋ ಗುಸುಗುಸು ಮೆಲುಧ್ವನಿ ಅಸ್ಪಷ್ಟವಾಗಿ ಕೇಳುತ್ತಿತ್ತು. ಹೌದು, ತನ್ನ ಕಡೆಯವರು ಹೇಳಿದ್ದು ನಿಜ. ಒಳಗೆ ಇಬ್ಬರೇ ಇರುವುದು ಎಂದುಕೊಂಡು ಬಾಗಿಲು ತಟ್ಟಿದ. ಕೆಲಕ್ಷಣದಲ್ಲಿ ಚಿಲಕ ತೆಗೆದ ಸದ್ದಾಯಿತು. ಶಂಕರನೇ ಬಾಗಿಲು ತೆರೆದ. ಆದರೆ ಸಂತಾನಪ್ಪ ಅವಕ್ಕಾದ. ಏಕೆಂದರೆ ಶಂಕರ ಇನ್ನೂ ಮತ್ತನಾಗಿರಲಿಲ್ಲ ಮಾತ್ರವಲ್ಲದೇ ಒಳಗೆ ಇನ್ನಿಬ್ಬರು ವಿಲಕ್ಷಣ ಗಡ್ಡಾಧಾರಿಗಳೂ ಇದ್ದುದು ಅವನಿಗೆ ಕಾಣಿಸಿತು. ಕೋಣೆಯ ಮಂದ ಬೆಳಕಿನಲ್ಲಿ ಆ ಆಗಂತುಕರು ತನ್ನನ್ನು ಕ್ರೂರವಾಗಿ ದಿಟ್ಟಿಸುತ್ತಿರುವಂತೆ ಅವನಿಗೆ ಭಾಸವಾಯಿತು. ಕೆಲವುಕ್ಷಣ ಏನೂ ತೋಚದೆ ನಿಂತುಬಿಟ್ಟ. ಆದರೆ ಶಂಕರ ಏನೂ ನಡೆದಿಲ್ಲವೆಂಬಂತೆ ನಗುತ್ತ, ‘ಓಹೋ…ಏನೋ ಸಂತಾನಪ್ಪ ಇಷ್ಟೊತ್ನಲ್ಲಿ…?’ ಎನ್ನುತ್ತ ಸ್ನೇಹದಿಂದ ಆಹ್ವಾನಿಸಿದ. ಅಷ್ಟೊತ್ತಿಗೆ ಸಂತಾನಪ್ಪನೂ ಹತೋಟಿಗೆ ಬಂದಿದ್ದವನು ಶಂಕರನ ಕುಟಿಲ ಆತ್ಮೀಯತೆಯನ್ನು ಕಂಡು ಕೋಪದಿಂದ ಕುದಿದ. ‘ನೋಡ್ ಶಂಕರಣ್ಣ, ನನ್ನ ಜೊತೆ ಹುಡುಗಾಟ ಆಡ್ ಬ್ಯಾಡ. ನೀನೆಣಿಸಿದಷ್ಟು ಛಲೋ ಮನ್ಷ ನಾನಲ್ಲ ತಿಳ್ಕೋ!’ ಎಂದ ಒರಟಾಗಿ. ‘ಅದು ನನಗೂ ಗೊತ್ತಿದೆ ಮಾರಾಯಾ. ಅದಿರಲಿ ನೀನೀಗ ಇಷ್ಟೊಂದು ಸಿಟ್ಟಾಗುವಂಥದ್ದು ಏನಾಯ್ತು ಅಂತ ಹೇಳಬೇಕಲ್ವಾ…?’ ಎಂದು ಶಂಕರ ವ್ಯಂಗ್ಯವಾಗಿ ನಗುತ್ತ ಪ್ರಶ್ನಿಸಿದ. ಸಂತಾನಪ್ಪನಿಗೆ ಉರಿದು ಹೋಯಿತು. ‘ಏನಲೇ ಹೈವಾನ್! ಮೊನ್ನೆ ನನ್ನಿಂದ ಹೆಬ್ಬೆಟ್ ಒತ್ತುಸ್ಕೊಂಡು ಓಡ್ ಬಂದಿಯಲ್ಲ ಆ ಪತ್ರಗಳು ಎಲ್ಲದಾವಂತ ತೋರ್ಸಲೇ…?’ ಎಂದು ಗುಡುಗಿದ. ‘ಯಾಕೆ ಮಾರಾಯಾ, ಅದರಿಂದೇನಾಯ್ತು? ಅಚ್ಚಡಪಾಡಿಯಲ್ಲಿ ಖರೀದಿಸಿದ ಜಮೀನಿನ ಪತ್ರಗಳೆಂದು ಹೇಳಿದ್ದೆನಲ್ಲಾ!’ ಎಂದ ಶಂಕರ ಅಸಡ್ಡೆಯಿಂದ. ಆದರೀಗ ಸಂತಾನಪ್ಪ ಅದನ್ನು ನಂಬುವಷ್ಟು ಮೂರ್ಖನಾಗಲಿಲ್ಲ. ‘ಓಹೋ, ಹೌದಾ? ಸರಿ ಹಂಗಾದ್ರೆ ನಾನೂ ಅದ್ನ ನೋಡಬೇಕಲೇ?’  ‘ಅರೇ, ಅದೀಗ ಇಲ್ಲೆಲ್ಲಿದೆ ಮಾರಾಯಾ! ಕನ್ವರ್ಶನ್‍ಗೆ ಕೊಟ್ಟಾಯಿತು. ಬೇಕಿದ್ದರೆ ನಾಳೆ ಬೆಳಿಗ್ಗೆ ಫ್ಲಾಟ್‍ಗೆ ಬಾ ಝೆರಾಕ್ಸ್ ಕಾಪಿಗಳಿವೆ, ತೋರಿಸುತ್ತೇನೆ’ ಎಂದ ಶಂಕರ ಉಡಾಫೆಯಿಂದ.    ಆಗ ಸಂತಾನಪ್ಪನಿಗೆ ಚಿಂತೆಗಿಟ್ಟುಕೊಂಡಿತು. ಆ ಸಂಪತ್ತು ತಾನು ಬೆವರು ಸುರಿಸಿ ಸಂಪಾದಿಸಿದ್ದಲ್ಲವಾದರೂ ತನ್ನ ಅದೃಷ್ಟದಿಂದಲೇ ತನಗೆ ದಕ್ಕಿದ್ದು. ತನ್ನ ಎರಡು ಸಂಸಾರಗಳೂ ಅದನ್ನೇ ನಂಬಿಕೊಂಡಿವೆ ಮತ್ತು ಅದರಿಂದಾಗಿಯೇ ತನ್ನ ಊರಲ್ಲೂ ತಾನು ಭಾರಿದೊಡ್ಡ ಕುಳವೆಂಬ ಹೆಗ್ಗಳಿಕೆಗೆ ಪಾತ್ರನಾಗಿರುವುದು. ಹೀಗಿರುವಾಗ ಅಂಥ ಆಸ್ತಿಯನ್ನು ಉಳಿಸಿಕೊಳ್ಳುವಲ್ಲಿ ಎಂಥ ಎಡವಟ್ಟು ಮಾಡಿಕೊಂಡೆನಲ್ಲ! ಈ ಹಾದರಕ್ ಹುಟ್ಟಿದ ನನ್ಮಗ ಖಂಡಿತವಾಗಿಯೂ ಅವೇ ಪತ್ರಗಳಿಗೆ ತನ್ನಿಂದ ರುಜು ಹಾಕಿಸಿಕೊಂಡು ಮಸಲತ್ತು ಮಾಡ್ತಿದ್ದಾನೆ ಎಂದು ಯೋಚಿಸಿದವನ ಆತಂಕ ಇಮ್ಮಡಿಯಾಯಿತು. ‘ನಾಳೆಯವರೆಗೆ ಕಾಯಲು ಸಾಧ್ಯವಿಲ್ಲ ಶಂಕರಣ್ಣಾ. ನಡೆ, ಈಗಲೇ ಫ್ಲಾಟಿಗೆ ಹೋಗೋಣ!’ ಎಂದ ಸಿಡುಕಿನಿಂದ. ಅದಕ್ಕೆ ಶಂಕರ ವ್ಯಂಗ್ಯವಾಗಿ ನಗುತ್ತ ತನ್ನ ಗೆಳೆಯರತ್ತ ದಿಟ್ಟಿಸಿದವನು ಅವರಿಗೇನೋ ಕಣ್ಸನ್ನೆ ಮಾಡಿದ. ಆ ಮುಖಗಳು ಕೂಡಲೇ ಕಠೋರವಾದವು. ‘ಆಯ್ತು ಮಾರಾಯಾ ನಡೆ. ಯಾರೋ ದರವೇಶಿಗಳು ನನ್ನ ಬಗ್ಗೆ ನಿನ್ನಲ್ಲಿ ಸಂಶಯ ಹುಟ್ಟಿಸಿದ್ದಾರೆಂದು ಕಾಣುತ್ತದೆ. ಪರ್ವಾಗಿಲ್ಲ ನಿನ್ನ ಅನುಮಾನ ನಿವಾರಿಸುವ!’ ಎಂದು ಅದೇ ವ್ಯಂಗ್ಯ ನಗುವಿನೊಂದಿಗೆ ಹೇಳಿದವನು ಗೆಳೆಯರತ್ತ ತಿರುಗಿ, ‘ಇವರು ನನ್ನ ಸ್ನೇಹಿತರು. ಅಪರೂಪಕ್ಕೆ ಬಂದಿದ್ದಾರೆ ಮಾರಾಯಾ. ಅವರೊಂದಿಗೆ ಸ್ವಲ್ಪ ಡ್ರಿಂಕ್ಸ್ ಮಾಡುತ್ತ ಮಾತಾಡುವುದಿದೆ. ಬೇಕಿದ್ದರೆ ನಮ್ಮೊಂದಿಗೆ ನೀನೂ ಸೇರಿಕೋ. ನಂತರ ಹೊರಡುವ’ ಎಂದ ಶಂಕರ ನಯವಾಗಿ. ಸಂತಾನಪ್ಪನಿಗೆ ಅವನ ಮಾತು ನಂಬಬೇಕೋ ಬಿಡಬೇಕೋ ಎಂದು ಗೊಂದಲವಾಯಿತು. ಹಾಗಾಗಿ ಶಂಕರ ತೋರಿಸಿದ ಕುರ್ಚಿಯಲ್ಲಿ ಕುಳಿತುಕೊಂಡ. ಶಂಕರನೂ ಗಂಭೀರವಾಗಿ ಸಾರಾಯಿ ಸುರಿದು ಸ್ನೇಹಿತರೊಂದಿಗೆ ಇವನಿಗೂ ಕೊಟ್ಟ. ಸಂತಾನಪ್ಪ ಒಲ್ಲದ ಮನಸ್ಸಿನಿಂದ ಕುಡಿಯತೊಡಗಿದ. ಎರಡು ಪೆಗ್ಗು ಹೊಟ್ಟೆಗಿಳಿಯುವ ಹೊತ್ತಿಗೆ ಅವನ ದೇಹ, ಮನಸ್ಸುಗಳೆರಡೂ ಹುಗುರವಾಗಿ ಬಿಗುಮಾನ ಮಾಯವಾಯಿತು. ಆದರೂ ಯಾರೊಡನೆಯೂ ಮಾತಾಡದೆ ಮೌನವಾಗಿ ಸಾರಾಯಿ ಹೀರತೊಡಗಿದ. ಶಂಕರ ಮಾತ್ರ ಬೇಕೆಂದೇ ಇವನ ಇರುವನ್ನು ಕಡೆಗಣಿಸಿ ಇವನಿಗೆ ಅರ್ಥವಾಗದ ವಿಷಯಗಳನ್ನೆತ್ತಿ ಸ್ನೇಹಿತರೊಂದಿಗೆ ಚರ್ಚಿಸುತ್ತ, ಸೂರು ಕಿತ್ತು ಹೋಗುವಂತೆ ನಗುತ್ತ ಬಾಟಲಿ ಖಾಲಿ ಮಾಡುತ್ತಿದ್ದ. ಇತ್ತ ಸ್ವಲ್ಪಹೊತ್ತಿನಲ್ಲಿ ಐದನೆಯ ಪೆಗ್ಗು ಸಂತಾನಪ್ಪನ ಹೊಟ್ಟೆ ಸೇರುತ್ತಲೇ ಶಂಕರನ ಮೇಲಿನ ಶಂಕೆ ಮತ್ತೆ ಅವನಲ್ಲಿ ಹೆಡೆಯೆತ್ತಿತು. ಜೊತೆಗೆ ತಾನು ಮೊನ್ನೆಯೂ ಇವನ ಇಂಥ ಮೋಡಿಯ ಮಾತುಗಳಿಗೆ ಮೋಸ ಹೋಗಿ ಅನಾಹುತ ಮಾಡಿಕೊಂಡಿದ್ದು ಎಂದನ್ನಿಸುತ್ತಲೇ ಮರಳಿ ಅವನ ತಾಳ್ಮೆ ಕುಸಿಯಿತು. ‘ನಡೆ ಶಂಕರಣ್ಣ ಹೋಗೋಣ. ನನಗೀಗಲೇ ಆ ಪತ್ರಗಳನ್ನು ನೋಡಬೇಕು!’ ಎಂದು ಎದ್ದು ನಿಂತ. ಶಂಕರ ಆಗಲೂ ಅವನ್ನು ಕುಳ್ಳಿರಿಸಿಕೊಳ್ಳಲು ಪ್ರಯತ್ನಿಸಿದ. ಆದರೆ ಆಗ ಮಾತ್ರ ಸಂತಾನಪ್ಪನ ಕೋಪ ನೆತ್ತಿಗೇರಿತು. ‘ಲೇ, ಹಡಿ ಸೂಳೀಮಗನಾ…ನಿನ್ ದಗಲ್ಬಾಜಿನೆಲ್ಲ ನನ್ ಹತ್ರ ಬಿಚ್ಬೇಡಲೇ…! ಪತ್ರಗಳ್ನ ಈಗ್ಲೇ ತಂದೊಪ್ಪಿಸಿದ್ದಿಯೋ ಬಚಾವಾದಿ ಮಗನಾ! ಇಲ್ಲಾ, ನಿನ್ನನ್ ಕಂಬಿ ಎಣಿಸುವಂತೆ ಮಾಡದೆ ಬಿಡಕ್ಕಿಲ್ವೋ ಹೈವಾನ್!’ ಎಂದು ಗುಡುಗಿದ. ಆದರೆ ಆಗ ಶಂಕರನೂ ಹದವಾದ ಮತ್ತಿನಲ್ಲಿದ್ದ. ಅವನ ಮುಖದಲ್ಲೂ ತೀಕ್ಷ್ಣ ಕೋಪ ವಿಜೃಂಭಿಸಿತು. ‘ಓಹೋ ಹೌದಾ ಮಗನೇ…! ಪರ್ವಾಗಿಲ್ಲವಾ ನೀನೂ ಭಾರೀ ಅರ್ಜೆಂಟಿನಲ್ಲಿದ್ದಿ. ಹಾಗಾಗಿ ಇನ್ನು ಟೈಮ್‍ವೇಸ್ಟ್ ಮಾಡುವುದು ನನಗೂ ಸರಿ ಕಾಣುವುದಿಲ್ಲ. ಆಯ್ತು ಹೋಗುವ!’ ಎಂದು ದಢಕ್ಕನೆದ್ದವನು ಗೆಳೆಯರತ್ತ ತಿರುಗಿ ಮತ್ತೇನೋ ಸಂಜ್ಞೆ ಮಾಡಿ ಧುರಧುರನೇ ಹೊರಗೆ ನಡೆದ. ಸಂತಾನಪ್ಪನೂ ಬಿರುಸಿನಿಂದ ಅವನನ್ನು ಹಿಂಬಾಲಿಸಿದ. ಆದರೆ ತನ್ನ ಸೊಂಟದಲ್ಲಿದ್ದ ಕತ್ತಿಯನ್ನೊಮ್ಮೆ ಮೆಲ್ಲನೆ ಸ್ಪರ್ಶಿಸಿ ನೋಡಿ ಸೆಟೆದುಕೊಂಡು ಮುನ್ನಡೆದ. ಶಂಕರ, ಸಂತಾನಪ್ಪನಿಗೆ ಏನೂ ಹೇಳದೆ ಮೂತ್ರ ವಿಸರ್ಜಿಸಲೆಂಬಂತೆ ಸಮೀಪದ ಸಾರ್ವಜನಿಕ ಶೌಚಾಲಯದತ್ತ ಹೊರಟ. ಸಂತಾನಪ್ಪನಿಗೆ ಅನುಮಾನವಾಯಿತು. ‘ಆ ಕಡೆ ಎಲ್ಲಿಗೇ…?’ ಎಂದ ಜೋರಿನಿಂದ.   ‘ಮೂತ್ರ ಹುಯ್ಯಬೇಕು ಮಾರಾಯಾ…!’  ಎಂದ ಶಂಕರ ನಗುತ್ತ.  ‘ನಾನೂ ಬರುತ್ತೇನೆ!’ ಎಂದ ಸಂತಾನಪ್ಪ ಅವನ ಬೆನ್ನು ಹತ್ತಿದ. ಶಂಕರನೂ ಅದನ್ನೇ ನಿರೀಕ್ಷಿಸಿದ್ದವನು ಸಂತಾನಪ್ಪನ ಹುಂಬತನವನ್ನು ನೆನೆದು ಕತ್ತಲಲ್ಲಿ ಭುಜ ಕುಣಿಸಿ ನಗುತ್ತ ನಡೆದ. ಆದರೆ ಶೌಚಾಲಯಕ್ಕೆ ಹೋಗದೆ ಕಟ್ಟಡದ ಹಿಂದೆ ಕುರುಚಲು ಪೊದೆಗಳು ತುಂಬಿದ್ದ ಪಾಳು ಜಾಗವೊಂದಕ್ಕೆ ಹೋದ. ಸಂತಾನಪ್ಪ ಅಲ್ಲಿಗೂ ಹಿಂಬಾಲಿಸಿದ. ಆ ಪ್ರದೇಶದಲ್ಲಿ ದಟ್ಟ ಕತ್ತಲೆ ಗೌವ್ವ್ ಗುಡುತ್ತಿತ್ತು. ಸಂತಾನಪ್ಪನ ಹಿಂದುಗಡೆ ಮತ್ತೆರಡು ಆಕೃತಿಗಳು ಮೆತ್ತಗೆ ಬಂದು ನಿಂತಿದ್ದನ್ನು ಅವನ ಸಾರಾಯಿ ಪ್ರಜ್ಞೆಯು ಗ್ರಹಿಸಲಿಲ್ಲ. ಅತ್ತ ಶಂಕರ ಮೂತ್ರ ಹುಯ್ಯಲು ನಿಂತಂತೆ ನಟಿಸಿದ. ಅಷ್ಟರಲ್ಲಿ ಸಂತಾನಪ್ಪನ ಹಿಂದಿದ್ದವನೊಬ್ಬ ಅವನ ಕೊರಳಿಗೆ ಬಲವಾಗಿ ಹೊಡೆದ. ಸಂತಾನಪ್ಪ, ‘ಯಾವ್ವಾ…!’ ಎಂದು ಚೀರಿ ಧೊಪ್ಪನೆ ಕುಸಿದ. ‘ಏನಲೇ ಬೇವರ್ಸಿ… ನಮ್ಮೂರಿಗೆ ಕೂಲಿಗೆ ಬಂದಂಥ ನಾಯಿ ನೀನು! ನಮ್ಮವರ ಆಸ್ತಿಯನ್ನೇ ಲಪಟಾಯಿಸಿ ಮಜಾ ಉಡಾಯಿಸಬೇಕೆಂದಿದ್ದಿಯೇನೋ…? ಅದನ್ನು ನೋಡಿಯೂ ನನ್ನಂಥವನು ಸುಮ್ಮನಿರುತ್ತಾನೆಂದು ಅದ್ಹೇಗೆ ಭಾವಿಸಿದೆಯೋ? ಮರ್ಯಾದೆಯಿಂದ ನಾಳೆ ಬೆಳಗಾಗುವುದರೊಳಗೆ ನಿನ್ನ ಎರಡು ಸಂಸಾರಗಳನ್ನು ಕಟ್ಟಿಕೊಂಡು ಇಲ್ಲಿಂದ ಜಾಗ ಖಾಲಿ ಮಾಡಿದೆಯೋ ಬಚಾವಾದೆ. ಇಲ್ಲಾ, ನಿನ್ನ ಹೆಣ ಮಸಣದ ಗುಡ್ಡೆಯಲ್ಲೇ ಸುಟ್ಟು ಬೂದಿಯಾಗುವುದು ಗ್ಯಾರಂಟಿ ಬೋಳಿಮಗನೇ!’ ಎಂದು ಕೋಪದಿಂದ ಗುಡುಗಿದ ಶಂಕರ, ಸಂತಾನಪ್ಪನಿಗೆ ಬೀಸಿ ಬೀಸಿ ಒದೆಯತೊಡಗಿದ. ಆದರೆ ಒಂದೆರಡು ಒದೆತಗಳು ಬೀಳುತ್ತಿದ್ದಂತೆಯೇ ಸಂತಾನಪ್ಪನೂ ಗೂಳಿಯಂತೆ ಉಸಿರುದಬ್ಬುತ್ತ ಎದ್ದು ನಿಂತ.    ಅವನ ಬಲಗೈ ರಪ್ಪನೆ ಬೆನ್ನ ಹಿಂದೆ ಸರಿದು ಮಚ್ಚನ್ನು ಎಳೆದುಕೊಂಡಿತು. ಸಂತಾನಪ್ಪನ ರೌದ್ರಾವತಾರವನ್ನೂ ಮತ್ತು ಆ ಕತ್ತಲನ್ನೂ ಮೀರಿ ಮಿರಮಿರನೇ ಮಿಂಚುತ್ತಿದ್ದ ಮಚ್ಚನ್ನೂ ಕಂಡ ಶಂಕರ ದಿಗ್ಭ್ರಾಂತನಾದ. ಅದೇ ಹೊತ್ತಿಗೆ ಸಂತಾನಪ್ಪ ಶಂಕರನ ಕೊರಳಿಗೆ ಗುರಿಯಿಟ್ಟು ಮಚ್ಚು ಬೀಸಿದ. ಆದರೆ ಶಂಕರ ನೂಲಿನೆಳೆಯಷ್ಟು ಅಂತರದಲ್ಲಿ ತಪ್ಪಿಸಿಕೊಂಡ. ಅದರ ಬೆನ್ನಿಗೆ ಸಂತಾನಪ್ಪ ಅವನ ಕಿಬ್ಬೊಟ್ಟೆಗೆ ಜಾಡಿಸಿ ಒದ್ದ. ಶಂಕರ, ‘ಅಯ್ಯಮ್ಮಾ…!’ ಎಂದು ಕಿರುಚುತ್ತ ಅಷ್ಟು ದೂರಕ್ಕೆ ಎಗರಿ ಬಿದ್ದ. ಮರುಕ್ಷಣ ಸಂತಾನಪ್ಪ ಮಿಂಚಿನವೇಗದಲ್ಲಿ ಅತ್ತ ನೆಗೆದವನು ಶಂಕರನ ಕೊರಳನ್ನು ಕಡಿದೇ ಹಾಕುತ್ತಾನೆ ಎಂಬಷ್ಟರಲ್ಲಿ ಶಂಕರನ ಬಾಡಿಗೆ ಗೂಂಡಾಗಳು ಕ್ಷಣದಲ್ಲಿ ಮುನ್ನುಗ್ಗಿ ಸಂತಾನಪ್ಪನನ್ನು ಮಿಸುಕಾಡದಂತೆ ಬಲವಾಗಿ ಹಿಡಿದುಕೊಂಡರು. ಶಂಕರ ತನ್ನ ಜೀವವಮಾನದಲ್ಲಿ ಅಂಥದ್ದೊಂದು ಒದೆತವನ್ನು ಯಾರಿಂದಲೂ ತಿಂದವನಲ್ಲ. ಆದರೆ ಇಂದು ತನ್ನ ಕೂಲಿಯಾಳಿನಿಂದಲೇ ಅಂಥ ದುರ್ದುಸೆ ತನಗೆ ಬಂದುದನ್ನು ನೆನೆದವನಿಗೆ ಅವಮಾನದಿಂದ ಸತ್ತಂತಾಯಿತು. ಎದ್ದು ನಿಲ್ಲಲಾಗದಷ್ಟು ನೋವಿದ್ದರೂ ಕಷ್ಟಪಟ್ಟು ಎದ್ದು ನಿಂತ. ಅವನ ರಕ್ತದ ಕಣಕಣದಲ್ಲೂ ಕ್ರೋಧವು ಪ್ರಜ್ವಲಿಸಿತು. ಸಂತಾನಪ್ಪನ ಕತ್ತಿನ ಪಟ್ಟಿಯನ್ನು ಒರಟಾಗಿ ಎಳೆದು ಹಿಡಿದವನು, ‘ಹಲ್ಕಟ್ ನನ್ಮಗನೇ… ನನ್ನ ಮೇಲೆಯೇ ಕೈಮಾಡುವಷ್ಟು ಸೊಕ್ಕಾ ನಿಂಗೆ…!?’ ಎಂದು ಕ್ಯಾಕರಿಸಿ ಅವನ ಮುಖಕ್ಕೆ ಉಗಿದವನು, ಕಾಲ ಮೊಣಗಂಟಿನಿಂದ ಅವನ ಮರ್ಮಾಂಗಕ್ಕೆ ಬೀಸಿ ಬೀಸಿ ನಾಲ್ಕೈದೇಟು ಜಾಡಿಸಿ ಒದ್ದುಬಿಟ್ಟ. ‘ಯಾವ್ವಾ ಸತ್ತೆನವ್ವಾ…!’ ಎಂದು ಉಸಿರುಗಟ್ಟಿ ಅರಚಿದ ಸಂತಾನಪ್ಪ ಕಡಿದ ಬಾಳೆಯಂತೆ ನೆಲಕ್ಕುರುಳಿದ. ಅವನ ಕೈಯಿಂದ ಮಚ್ಚು ತನ್ನಿಂದ ತಾನೇ ಕಳಚಿಬಿತ್ತು.                                                       *** ಮರುದಿನ ಮುಂಜಾನೆ, ‘ಈಶ್ವರಪುರದ ಸಾರ್ವಜನಿಕ ಶೌಚಾಲಯದಲ್ಲಿ ಉತ್ತರ

Read Post »

You cannot copy content of this page

Scroll to Top