ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ನಿಮ್ಮೊಂದಿಗೆ

ಆ ಪ್ರೀತಿಯನ್ನು

ಕವಿತೆ ಆ ಪ್ರೀತಿಯನ್ನು ಮೀನಾಕ್ಷಿ ಹರೀಶ್ ಅವ್ಯಕ್ತ ವಾದ ಇಚ್ಛೆ ಇದ್ದರೂವ್ಯಕ್ತ ಮಾಡದೆ, ಕ್ಷಣ ಕ್ಷಣಕ್ಕೂ ಮುಗುಳು ನಗುತ್ತಲೇದಿನಗಳು ಸವೆದವು ನಿರ್ಲಿಪ್ತತೆ ಯಿಂದ ಹಗಲಲ್ಲಿ ಮುಗುಳು ನಗುಇರುಳಲ್ಲಿ ಮೌನದ ನಗುಪ್ರೀತಿಗಾಗಿ ಹುಡುಕಿದವು ಕಣ್ಣುಗಳುನಿಂತಲ್ಲೇ ಕಡಲನಿರೀಕ್ಷೆಯೊಳು ಕಾಯುತ್ತಸರಿದು ಹೋದವು ಹಲವಾರು ವಸಂತಗಳು ಕಂಗಳು ತುಂಬಿದವು ಸೋಲಿನ ಹನಿಯಿಂದಮತ್ತೆ ಮತ್ತೆ ಸೋಲುತ್ತ ನಿರಾಸೆಯಲಿಹೃದಯದೆಲ್ಲಇಷ್ಟಗಳು ಕಷ್ಟಗಳಾದವುಕಾಮನೆಗಳು ವೈರಾಗ್ಯಕ್ಕೆ ವಾಲಿದವು ಅಂಗಳದಲ್ಲಿ ನೂರಾರು ದೀಪಗಳು ಒಮ್ಮೆಲೆ ಬೆಳಗಿದವುತಾಳದಾಯಿತು ಆ ವೈರಾಗ್ಯಕ್ಕೆ ಆ ಬೆಳಕು,ಹೋಗಿಬಿದಲೇ ಆ ಒಲವಿನತ್ತಬಿಗುಮಾನ ಬಿಟ್ಟುನಿಂತುಬಿಡಲೇ ಎನಿಸಿತು ಆ ಪ್ರೀತಿಯ ಉಸಿರಿನತ್ತಬಿಡಲೋಲ್ಲದು ನಾ ಕಟ್ಟಿದ ವೈರಾಗ್ಯವು ಆ ಉಸಿರಿನತ್ತ ಬೇಕೆನಿಸಿತು ಮನಕೆ ನಿರ್ಮಲವಾದ ಪ್ರೀತಿಯ ಆಸರೆಯೊಂದಸಿಗುವುದೇ ಆ ನಿರ್ಮಲ ಪ್ರೀತಿಯು ಆ ಕಡಲಿಂದನಿಂತಲ್ಲೇ ಕುಳಿತೆನು ವೈರಾಗ್ಯದನಿಟ್ಟುಸಿರಿನಿಂದಕಳೆದುಕೊಳ್ಳಲಾರೆನು ಆ ಪ್ರೀತಿಯನ್ನು ***********************************************

ಆ ಪ್ರೀತಿಯನ್ನು Read Post »

ಕಾವ್ಯಯಾನ

ತಿಮಿರ

ಕವಿತೆ ತಿಮಿರ ಡಾ. ಅಜಿತ್ ಹರೀಶಿ ಸೂಡಿ ಹಿಡಿದು ಓಡಾಡುವ ಕಾಲದಲ್ಲಿಕೊಳ್ಳಿ ದೆವ್ವಗಳು ಕಾಲಿಗೊಂದು ತಲೆಗೊಂದುಹರದಾರಿ ನಡೆದು ಸಾಗುವ ದಿನಗಳಲ್ಲಿಅವುಗಳ ಜಾತ್ರೆ ರಸ್ತೆ ಪಕ್ಕದಲ್ಲಿ ಕಳೆದ ಬಾಯಿ ಮುಚ್ಚದಂತೆ ಲಾಟೀನು-ಬೆಳಕಿನಲ್ಲಿ ಕೇಳಿ ಸುದ್ದಿ ಹೆದರಿಕೆ ಬೇಜಾನುತಿರುಚಿದ ಪಾದ ಗುರುತರವಾದ ಗುರುತುದೆವ್ವ ಕಂಡವನಿಂದ ಇತರರಿಗೆ ತರಬೇತು! ಕತ್ತಲಿನಲ್ಲಿ ಇಣುಕುವ ಬೆಳಕು, ಬರುವ ಶಬ್ದಎಂತಹವರನ್ನೂ ಮಾಡುವುದು ಸ್ತಬ್ಧಎಲ್ಲರೊಳಗೊಬ್ಬ ಕವಿ, ಆಗ ರವಿಯಿಲ್ಲಕಲ್ಪನೆಗೆ ಕಾಲು ಬಾಲ ಗಲ್ ಗಲ್, ಸರ ಪರಚಿತ್ತದಲ್ಲಿ ಮೂಡುವ ಚಿತ್ರಗುಂಡಿಗೆಯಲ್ಲಿ ನಡುಕಆಕ್ರಮಿಸುವ ಆತಂಕ ಅಕ್ರಮಕ್ಕೆ ಸೂಕ್ತ ಅಮಾವಾಸ್ಯೆವಿದ್ಯುತ್ ಕಡಿತಗೊಳಿಸಿಯೂಹುಟ್ಟಿಸುವರು ಅಮಾಸೆಯ ಸಮಸ್ಯೆಚುನಾವಣೆಯ ಹಿಂದಿನ ದಿನಗಂಧದ ಮರ ನಾಪತ್ತೆಯಾದ ಕ್ಷಣ ಕತ್ತಲು ಬಗ್ಗೆ ಅಜ್ಜಿ ಹೆದರಿಸಿದ್ದುಹುಳ ಹುಪ್ಪಟೆ ತುಳಿಯದಿರಲೆಂದುಕೂರುತ್ತದೆ ಮಗುವಿನ ಮಿದುಳೆಂಬಹಸಿ ಗೋಡೆಯಲ್ಲಿ ಮಣ್ಣಾಗಿಕತ್ತಲು ಭಯಾನಕ ಕಪ್ಪಾದಾಗ ನೆರಳು ಮಂದಬೆಳಕಿನಾಟಆಕೃತಿಗಳಿಗೆ ಜೀವ, ಪಿಶಾಚಿ ಕಾಟಆತ್ಮಸ್ಥೈರ್ಯದ ಅಗ್ನಿಪರೀಕ್ಷೆಪಾಪ ಪ್ರಜ್ಞೆ ಭೂತವಾಗಿ ಶಿಕ್ಷೆ ರಕ್ತ ಕಾರಿ, ಬೆನ್ನಮೇಲೆ ಮೂಡಿ ಬೆರಳುಮುರಿದು ಗೋಣು, ಧ್ವನಿಯಡಗಿಸತ್ತವರ ಕತೆಯೆಲ್ಲ ಎದ್ದು ಬಂದುಅಂತರ್ಪಿಶಾಚಿಯಾಗಿ ಅಲೆದಾಡಿ ಮುಗಿಯದ ಕತೆ; ಹೆದರಿಮೂತ್ರ ವಿಸರ್ಜನೆ ಮಾಡಿದವರದುಅದನ್ನೇ ದಿಗ್ಬಂಧನದ ವೃತ್ತವಾಗಿಸಿದವರದು ಕತ್ತಲು ಮಾತ್ರ ದಿಗಿಲು ಸೃಷ್ಟಿಸುವುದಾದರೆಕುರುಡನ ಜೀವನ ಹೇಗೆ? ಬೆಳಕ ಕಂಡವಗೆ ಕತ್ತಲ ಭಯಬಾಳ ಅನುಭವಿಸಿದವಗೆ ಸಾವ ಭಯಹಗ್ಗ ಹಾವಾಗಿ ಹತನಾಗುವ ಉಪಮೆಅರಿವ ಹಣತೆ ಆರದಿರೆ ನಿತ್ಯ ಹುಣ್ಣಿಮೆ.**************************************************************

ತಿಮಿರ Read Post »

ಇತರೆ

ಭಗತ್ ಸಿಂಗ್ ಮಾತೆ ಮೈಸೂರಿನಲ್ಲಿ

ನೆನಪು ಭಗತ್ ಸಿಂಗ್ ಮಾತೆ ಮೈಸೂರಿನಲ್ಲಿ ಡಾ. ಅರಕಲಗೂಡು ನೀಲಕಂಠ ಮೂರ್ತಿ ಸರಿಸುಮಾರು ಐದು ದಶಕಗಳ ಹಿಂದಿನ ಸಮಾಚಾರ. ಸಾವಿರದ ಎಪ್ಪತ್ತು ಎಪ್ಪತ್ತೊಂದರ ಸಮಯ. ನನಗೆ ಕರಾರುವಾಕ್ಕಾಗಿ ದಿನಾಂಕ ಮತ್ತು ಮಾಹೆ ಸದ್ಯ ಜ್ಞಾಪಕ ಇಲ್ಲ. ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ನಾನು ನಾಲ್ಕನೇ ವರ್ಷದಲ್ಲಿ ಓದುತ್ತಿದ್ದಾಗ. ಆ ಕಾಲಕ್ಕೆ ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ, ಅದರಿಂದಾಗಿ ಸಾಂಸ್ಕೃತಿಕ ಚಟುವಟಿಕೆಗಳು ಉತ್ತುಂಗಕ್ಕೆ ಏರಿದ್ದ ಕಾಲ. ಈಗ ಹೇಗೋ ನಾ ಕಾಣೆ. ವಾಸ್ತವವಾಗಿ ವಾರ್ಷಿಕೋತ್ಸವದಲ್ಲಿ ನಾಟಕ ನಿರ್ದೇಶನಕ್ಕೆ ಸಿನಿಮಾ ಹಿರಿಯ ನಟರಾಗಿದ್ದ ಸಂಪತ್ ಅವರೇ ಸ್ವತಃ ಬರುತ್ತಿದ್ದುದು ವಿಶೇಷ; ನಾವು ದಿನಾಂಕ ಮಾತ್ರ ಮುಂಚಿತ ತಿಳಿಸಬೇಕಿತ್ತು. ಅವರ ಮನೆ ಮತ್ತು ಪ್ರಿಂಟಿಂಗ್ ಪ್ರೆಸ್ ನಮ್ಮ ಕಾಲೇಜಿಗೆ ಸನಿಹವೇ ಇವೆ. ಅದೇನೋ ಕಾಣೆ ಸಂಪತ್ ಅವರಿಗೆ ನಮ್ಮ ಕಾಲೇಜಿನ ಬಗ್ಗೆ ಬಹಳ ಅಭಿಮಾನ ಇತ್ತು. ಆ ಸಮಯದಲ್ಲಿ ನಾನು ಲಿಟರರಿ ಕಾರ್ಯದರ್ಶಿಯಾಗಿದ್ದೆ. ಎಲ್ಲ ಥರದ ಸಾಂಸ್ಕೃತಿಕ ಚಟುವಟಿಕೆಗಳೂ ಲಿಟರರಿ ಕಾರ್ಯದರ್ಶಿಯ ಜವಾಬ್ದಾರಿಯಾಗಿತ್ತು. ಜನರಲ್ ಸೆಕ್ರೆಟರಿಯಾಗಿ, ಅತ್ಯಂತ ಕ್ರಿಯಾಶೀಲರಾಗಿದ್ದ ಡಾ. ಉಮೇಶ್ ಕಾಮತ್ (ಸದ್ಯ ಅವರು ಮೈಸೂರಿನ ಸರಸ್ವತಿಪುರಂನ ಕಾಮಾಕ್ಷಿ ಆಸ್ಪತ್ರೆಯ ಮೇಲ್ವಿಚಾರಕರಾಗಿ ಸೇವೆಯಲ್ಲಿದ್ದಾರೆ) ಆವರು ಚುನಾಯಿತರಾಗಿದ್ದರು. ಶಹೀದ್ ಭಗತ್ ಸಿಂಗ್ ಅವರ ಮಾತೆ, ವಿದ್ಯಾವತಿ ಅವರು, ಮೈಸೂರಿಗೆ ಬರುವ ವಿಷಯ ನಮಗೆ ತಿಳಿಯಿತು. ಪತ್ರಿಕೆಗಳಲ್ಲಿ ಸಹ ಅದರ ಸುದ್ದಿ ಪ್ರಾಮುಖ್ಯ ಪಡೆದಿತ್ತು. ಹಾಗಾಗಿ ಅವರಿಗಾಗಿ ನಮ್ಮ ಕಾಲೇಜಿನಲ್ಲೂ ಕಾರ್ಯಕ್ರಮ ಒಂದನ್ನು ಏರ್ಪಾಡು ಮಾಡಲು ತೀರ್ಮಾನಿಸಿ, ಡಾ.ಕಾಮತ್ ಮತ್ತು ನಾನು ಒಪ್ಪಿಗೆಗಾಗಿ ನಮ್ಮ ಡೀನ್ ಅವರ ಕಛೇರಿಗೆ ಹೋಗಿದ್ದಾಗ, “ರಾಜಕೀಯದವರನ್ನೆಲ್ಲ ಕಾಲೇಜಿಗೆ ಕರೆಯುವುದು ಬೇಡ” ಅಂದು ಆರಂಭಕ್ಕೇ ತಣ್ಣೀರು ಎರಚಿದ್ದರು. ಅವರಿಗೆ ಭಗತ್ ಸಿಂಗ್ ಅವರ ವಿವರ ಇತ್ತ ಮೇಲೆ, “ಇಂತಹ ಕಾರ್ಯಕ್ರಮಕ್ಕೆ ಯಾರು ಬರ್ತಾರೋ ನಾ ಕಾಣೆ” ಅಂತಲೇ ಮನಸ್ಸಿಲ್ಲದೆ ಒಪ್ಪಿದ್ದರು. ನಮಗಷ್ಟೇ ಸಾಕಾಗಿತ್ತು. ಆಹ್ವಾನ ಒಂದನ್ನು ತಯಾರಿಸಿ, ಡೀನ್ ರವರ ಸಹಿ ಪಡೆದು ನಾನು ಮತ್ತು ಕಾಮತ್ ನೇರ ಭಗತ್ ಸಿಂಗ್ ಅವರ ತಾಯಿ ವಾಸ್ತವ್ಯದಲ್ಲಿದ್ದ ಮೈಸೂರಿನ ಸರಕಾರದ ಅಥಿತಿಗೃಹಕ್ಕೆ ಹೋಗಿದ್ದೆವು. ಎಂಭತ್ತು ವರ್ಷ ವಯಸ್ಸು ಮೀರಿದ ಆ ಮಾತೆ ತಮ್ಮ ಕೊಠಡಿಯಿಂದ ಹೊರಬಂದಾಗ ನಮಗೆ ರೋಮಾಂಚನ. ದೇವತೆಯೊಬ್ಬರ ದರ್ಶನ ಆದಂತಹ ಖುಷಿಯಲ್ಲಿ, ನಾನು ಕಾಮತ್ ಇಬ್ಬರೂ ಸಾಷ್ಟಾಂಗಪ್ರಣಾಮ ಮಾಡಿದ್ದೆವು. ಆ ವಿದ್ಯುತ್ ಕ್ಷಣ ನಮ್ಮ ಬದುಕಿನ ಅಮೋಘ ಘಳಿಗೆ! ಇಂದಿಗೂ ಅದನ್ನು ನೆನೆದಾಗ ಮೈನವಿರೇಳುವುದರ ಜೊತೆಗೆ ಕಣ್ಣುಗಳೂ ತೇವವಾಗುತ್ತವೆ! ಮಾತೆ ವಿದ್ಯಾವತಿಯವರ ಸಂಗಡ ಅವರ ಪುತ್ರ ಕುಲ್ಬೀರ್ ಸಿಂಗ್ ಹಾಗೂ ಅವರ ಪತ್ನಿ ಬಂದಿದ್ದರು. ನಮ್ಮ ಆಹ್ವಾನವನ್ನು, ಅವರಿಗೆ ಇನ್ನೂ ಅನೇಕ ಕಾರ್ಯಕ್ರಮಗಳು ಇದ್ದರೂ, ಕಿಂಚಿತ್ತೂ ತಕರಾರಿಲ್ಲದೆ ಒಪ್ಪಿದ್ದರು. ಮಾರನೇ ದಿನವೇ ಅವರು ಬರುವವರಿದ್ದರು. ಹಾಗಾಗಿ ನಮಗೆ ತರಾತುರಿ. ಭಗತ್ ಸಿಂಗ್ ಅವರ ಬಗ್ಗೆ ತಿಳಿಯದೆ ಇರುವವರು ವಿರಳ ಅನಿಸುತ್ತೆ. ಆದರೂ ಆ ವಿರಳರಿಗಾಗಿ ಸಂಕ್ಷಿಪ್ತ: ಭಗತ್ ಸಿಂಗ್ ಜನನ ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ,   ಫೈಸಲಾಬಾದ್ ಜಿಲ್ಲೆಯ, ಬಂಗ (Banga) ಠಾಣೆಯ, ಐತಿಹಾಸಿಕ ಗ್ರಾಮ, ಖಾಟ್ಕರ್ ಕಲನ್ (Khatkar Kalan) ಎಂಬ ಗ್ರಾಮದಲ್ಲಿ, 1907ನೇ ಇಸವಿಯ ಸೆಪ್ಟೆಂಬರ್ ತಿಂಗಳಿನಲ್ಲಿ. ತಾಯಿ ವಿದ್ಯಾವತಿ, ತಂದೆ ಕಿಷನ್ ಸಿಂಗ್. ಒಡಹುಟ್ಟಿದವರು ಐವರು ಸಹೋದರರು ಮತ್ತು ಮೂವರು ಸಹೋದರಿಯರು. ತಮ್ಮ ಹದಿಮೂರನೇ ವಯಸ್ಸಿಗೇ ಓದಿಗೆ ತಿಲಾಂಜಲಿ ಹೇಳಿ, ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕುತ್ತಾರೆ. ಬಹಳ ಚಿಕ್ಕ ವಯಸ್ಸಿನಲ್ಲೇ, ಇನ್ನೂ ಯೌವನದ ಇಪ್ಪತ್ತಮೂರರ ವಯಸ್ಸಿಗೇ,  ಮಾರ್ಚ್ 23, 1931ರಂದು, ತಮ್ಮ ಸಹ ಹೋರಾಟಗಾರರಾಗಿದ್ದ ರಾಜಗುರು ಹಾಗೂ ಸುಖದೇವ್ ಅವರೊಡನೆ ಬ್ರಿಟಿಷರಿಂದ ನೇಣುಗಂಬಕ್ಕೆ ಶರಣಾಗುತ್ತಾರೆ, ಈಗಿನ ಪಾಕಿಸ್ತಾನದ ಲಾಹೋರ್ ಜೈಲಿನಲ್ಲಿ. (ಲಾಲ ಲಜಪತ್ ರಾಯ್ ಅವರ ಸಾವಿಗೆ ಕಾರಣನಾಗಿದ್ದ ಪೋಲೀಸ್ ಮುಖ್ಯಸ್ಥನನ್ನು ಕೊಲ್ಲಲು ಹೋಗಿ, ಬದಲಿಗೆ ಜೆ. ಪಿ. ಸಾಂಡರ್ಸ್ ಅವರ ಕೊಲೆಗೆ ಕಾರಣವಾಗಿದ್ದುದಕ್ಕಾಗಿ). ಹುಟ್ಟಿನಿಂದ ಸಿಖ್ ಧರ್ಮೀಯರೇ ಆಗಿಯೂ ಸಹ, ಭಗತ್ ಅವರು ತಲೆ ಕೂದಲ ಕ್ಷೌರವೇ ಅಲ್ಲದೆ, ಮುಖದ ಶೇವ್ ಸಹ ಮಾಡಿಸಿಕೊಳ್ಳುತ್ತಿದ್ದರು;    ತಮ್ಮ ಗುರುತು ಸಿಗಬಾರದೆಂದು. “ಇಂಕಿಲಾಬ್ ಜಿಂದಿಬಾದ್” ಎಂಬ ವೀರಘೋಷಣೆಯನ್ನು ಪ್ರಖ್ಯಾತ ಗೊಳಿಸಿದ್ದು ಅವರು. ಅವರು ಶಹೀದ್ ಭಗತ್ ಸಿಂಗ್ ಎಂದೇ ಪ್ರಸಿದ್ಧರಾದರು – ಇಂದಿಗೂ ಸಹ. ಅಂತಹ ಧೀರ ಪುತ್ರನನ್ನು ದೇಶಕ್ಕೆ ಕೊಡುಗೆ ಕೊಟ್ಟ ಮಹಾತಾಯಿಯ ದರ್ಶನ ಭಾಗ್ಯ ನಮ್ಮ ಹೆಮ್ಮಯಾಗಿತ್ತು. ಮತ್ತು ಅಂತಹ ತಾಯಿಯ ದರ್ಶನ ಭಾಗ್ಯ ನಮ್ಮ ಕಾಲೇಜಿನ ಎಲ್ಲರಿಗೂ ಅಂದು ದೊರಕುವಂತೆಯೂ ಆಗಿತ್ತು! ನಾಳೆಯೇ ಕಾರ್ಯಕ್ರಮ. ನಮ್ಮ ಡೀನ್ ಬೇರೆ ಕಷ್ಟದಿಂದ ಒಪ್ಪಿದ್ದರು. ಅಂದಮೇಲೆ ಜಯಭೇರಿಯ ಜವಾಬ್ದಾರಿ ನಮ್ಮ ಹೆಗಲ ಮೇಲೆ. ನಮ್ಮ ಕಾಲೇಜಿನವನೇ ಆದ, ನನಗೆ ಪರಿಚಯವಿದ್ದ, ಬ್ರಿಜ್ ಮೋಹನ್ ಕುಮಾರ್ ಎಂಬ ವಿದ್ಯಾರ್ಥಿಯೊಬ್ಬ, ಮೆಡಿಕಲ್ ಎಕ್ಸಿಬಿಷನ್ ನಡೆದಿದ್ದ ಸಮಯದಲ್ಲಿ ದೊಡ್ಡ ಕಟೌಟ್ ಮಾಡಿದ್ದು ನೋಡಿದ್ದೆ. ಆತನಿಗೇ ಮನವಿ ಮಾಡಿಕೊಂಡು ಒಪ್ಪಿಸಿ, ಅರ್ಧರಾತ್ರಿಯವರೆಗೂ ಎಚ್ಚರ ಆಗಿದ್ದು, ಕಲರ್ ಕಾಗದದಲ್ಲಿ ಇಡೀ ಗೋಡೆಯಷ್ಟು ಎತ್ತರವಿದ್ದ  ಭಗತ್ ಸಿಂಗ್ ಮುಖದ ಚಿತ್ರ ಮಾಡಿಸಿದ್ದೆ. ಅರ್ಧಂಬರ್ಧ ನಿದ್ದೆ ಆದರೂ ಆ ಹುಮ್ಮಸ್ಸು ಮತ್ತು ಮಾರನೆ ದಿನದ ಸಂಭ್ರಮ ಎಲ್ಲವನ್ನೂ ಮರೆಸಿತ್ತು. ಮತ್ತು ಆ ಮಾರನೆಯ ದಿನ ದಿಢೀರ್ ಬಂದೇಬಿಟ್ಟಿತ್ತು… ಮಾತೆ ವಿದ್ಯಾವತಿಯವರ ಆಗಮನ ಇನ್ನೂ ಆಗಿರಲಿಲ್ಲ. ಆಗಲೇ ಜನಜಂಗುಳಿ! ಬರೀ ವಿದ್ಯಾರ್ಥಿಗಳೇ ಅಲ್ಲ; ಹೊರಗಿನವರೂ ಬರತೊಡಗಿದ್ದಾಗ ಹೊರಗೆ ಸ್ಪೀಕರ್ ಗಳನ್ನು ಅಳವಡಿಸಬೇಕಾಗಿತ್ತು. ನಮ್ಮ ಡೀನ್ ಅವರಿಗೆ ಜಾತ್ರೆ ಆಗಿದ್ದ ಪ್ರೇಕ್ಷಕರನ್ನು ಕಂಡು ಅಚ್ಚರಿ! ಅಂತೂ ವಯೋವೃದ್ಧ ಮಾತೆ, ಜೊತೆಯಲ್ಲಿ ಭಗತ್ ರವರ ಸಹೋದರ ಕುಲ್ಬೀರ್ ಸಿಂಗ್ ಮತ್ತವರ ಪತ್ನಿ ಬಂದಿಳಿದಾಗ,  ಸಮಗ್ರ ವಾತಾವರಣದಲ್ಲಿ ಹಾಗೂ ಬೀಸುವ ಗಾಳಿಯಲ್ಲಿಯೂ ಸಹ ಹಿಂದೆ ಎಂದೂ ಕಂಡರಿಯದಂಥ ಪುಳಕ! ಇಡೀ ಸಮೂಹದಲ್ಲಿ ಸಾಕ್ಷಾತ್ ಭಗತ್ ಸಿಂಗ್ ಅವರ ದರ್ಶನ ಆದಷ್ಟೇ ಆನಂದ ಮತ್ತು  ಅಂಥ ಪುಣ್ಯ ದೊರಕಿದ್ದಷ್ಟು ಅನಂತ ಸಂತುಷ್ಟತೆ!                 ನಮ್ಮ ಕಾಲೇಜಿನಲ್ಲಿ ಸಾಮಾನ್ಯವಾಗಿ ವಾರ್ಷಿಕೋತ್ಸವ ಬಿಟ್ಟು, ಎಲ್ಲ ಸಮಾರಂಭಗಳು ಜರುಗುತ್ತಿದ್ದುದು ವಿಶಾಲವಾಗಿದ್ದ ಪೆಥಾಲಜಿ ಹಾಲ್ ನಲ್ಲಿ. ಅಂದು ಒಳಹೊರಗಲ್ಲ ಜನರೋ ಜನ! ನನಗಂತೂ ಅಂದು ಅತ್ಯಂತ ಆನಂದ ಕೊಟ್ಟ ಕ್ಷಣವೆಂದರೆ, ಆ ಮಹಾತಾಯಿಯ ಕೊರಳಿಗೆ ಹಾರ ಹಾಕುವ ಕಾಯಕ ನನ್ನದಾಗಿ ಒದಗಿ ಬಂದದ್ದು. (ಆ ಫೋಟೋ ಅಂದಿನ ಪತ್ರಿಕೆಗಳಲ್ಲೂ ಅಚ್ಚಾಗಿದ್ದು, ನನ್ನ ಪತ್ನಿ, ಕಮಲ, ಅದರ ಪ್ರತಿ ಒಂದನ್ನು ಬಹಳ ಜತನದಿಂದ ಇಟ್ಟಿದ್ದರು. ಅದೀಗ ಕಾಣದಾಗಿರುವುದು ವಿಶಾದ). ಎಂಭತ್ತು ಮೀರಿದ ಮಾತೆ ಕೂತಲ್ಲೇ ತುಂಬುಸಭೆಯನ್ನು ಉದ್ದೇಶಿಸಿ, ತಮ್ಮ ಪುತ್ರ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದನ್ನು  ನೆನೆದಿದ್ದರು. ಅವರ ಇಡೀ ವಂಶವೇ ದೇಶಕ್ಕಾಗಿ ಹೋರಾಡಿದ್ದುದನ್ನು ಸಹ ಜ್ಞಾಪಕ ಮಾಡಿಕೊಂಡಿದ್ದರು. ಕುಲಬೀರ್ ಸಿಂಗ್ ಕೂಡ ಕೆಲ ಕ್ಷಣಗಳು ಮಾತನಾಡಿದ್ದರು. ಅಧ್ಯಕ್ಷ ಭಾಷಣವನ್ನೂ ನಮ್ಮ ಡೀನ್ ಸಾಹೇಬರು ಸಂಕ್ಷಿಪ್ತ ಮಾಡಿದ್ದರು. ಅಂದು ಮಾತಿಗಿಂತ  ಆ ಅಥಿತಿಗಳ ನೋಡಿ ಕಣ್ಣು ತುಂಬಿಸಿಕೊಳ್ಳುವುದೇ ಎಲ್ಲರ ಉದ್ದೇಶ ಆಗಿದ್ದ ಹಾಗೆ! ಒಟ್ಟಿನಲ್ಲಿ ಕಾಲೇಜಿನ ಸುತ್ತಮುತ್ತ ಆ ದಿನ ನೂತನ ಹಬ್ಬವೊಂದರ ವಾತಾವರಣ ಸೃಷ್ಟಿಯಾಗಿದ್ದುದು ಅತಿಶಯೋಕ್ತಿ ಅಲ್ಲ… ಮಾರನೇ ದಿನ ನಮ್ಮ ಡೀನ್ ನಮ್ಮಕಾರ್ಯಕ್ರಮದ ಆಯೋಜನೆ ಬಗ್ಗೆ ಅತ್ಯಂತ ಖುಷಿಯಿಂದ ಮಾತನಾಡಿದ್ದಾಗ ನಮಗೆ ಸಾರ್ಥಕ ಎನಿಸಿತ್ತು! ಇಂದಿಗೂ, ಈ ಕ್ಷಣಕ್ಕೂ ನನ್ನ ಬದುಕಿನ ಒಂದು ಶ್ರೇಷ್ಠ ದಿನ…ಆ ದಿನ…! ಮತ್ತು ಆ ಮಹಾತಾಯಿಯ ಕಾಲಿಗೆ ದೀರ್ಘದಂಡ ನಮಸ್ಕಾರ ಮಾಡಿದ್ದ …ಆ ಘಳಿಗೆ…! ***************************************** .

ಭಗತ್ ಸಿಂಗ್ ಮಾತೆ ಮೈಸೂರಿನಲ್ಲಿ Read Post »

ಅಂಕಣ ಸಂಗಾತಿ, ರಂಗ ರಂಗೋಲಿ

ಅಂಕಣ ಬರಹ “ಆಕಾಶವಾಣಿಯ ಅವಕಾಶದಾಕಾಶ” “ಬರೆದ ಕಥೆ ಹಾಗೇ ಬಿಡುವಂತಿಲ್ಲ. ವಿಳಾಸ ಕೊಡುತ್ತೇನೆ. ಆಕಾಶವಾಣಿಗೆ ಕಳುಹಿಸು. ನೋಡೋಣ! ನೀನು ಎಂತಹ  ಕಥೆಗಾರ್ತಿ”.ನಾನು ಬರೆದ ಕಥೆಯೊಂದು ಸರ್ ಗೆ ಸಿಕ್ಕಿ ಗಂಡ- ಹೆಂಡತಿ ಅದನ್ನು ಓದಿ ಮುಂದಿನ ಬಾರಿ ಅವರ ಮನೆಗೆ ಹೋದಾಗ ಇಬ್ಬರೂ ಸೇರಿ ವಿಚಾರಣೆಗೆ ಕಟಕಟೆಯಲ್ಲಿ ನಿಲ್ಲಿಸಿದ್ದರು. ತಲೆತಗ್ಗಿಸಿದವಳ ಪರ ಲಾಯರ್ ಆಗಿ ಅವರ ಶ್ರೀಮತಿ ನಿಂತಿದ್ದರು. ಕೊನೆಗೂ ತೀರ್ಪು ಹೊರಬಿದ್ದಿತ್ತು.  ಚಿಕ್ಕನಡುಕ,ಸಂಭ್ರಮ ಜೊತೆಯಾಗಿತ್ತು. ಆದರೆ ಸರ್ ಗೆ ಆಕಾಶವಾಣಿಯಲ್ಲಿ ಪರಿಚಯವಿದೆ. ಅವರು ಒಂದು ಮಾತು ಸಂಬಂಧಪಟ್ಟವರಿಗೆ ಹೇಳಬಾರದೇ ಎಂಬ ತಳಮಳಕ್ಕೆ ಉತ್ತರ ಎಂಬಂತೆ ನುಡಿದಿದ್ದರು. ” ನಾನು ವಿಳಾಸವಷ್ಟೆ ಕೊಡುವುದು. ನಿನ್ನ ಅರ್ಹತೆಯ ಆಧಾರದಲ್ಲೇ ನಿನ್ನ ದಾರಿ ಸ್ಪಷ್ಟವಾಗಬೇಕು.”  ಕಥೆ ಆಯ್ಕೆಯಾಗಿತ್ತು. ಅದುವರೆಗೂ ಉಡುಪಿಯ ನಾನು ಮಂಗಳೂರನ್ನು ನೋಡಿಯೇ ಇರಲಿಲ್ಲ. ಅಕಾಶವಾಣಿ ಹೊಸ ಊರು ಹೊಸ ಪುಳಕ,ಸಂಭ್ರಮಗಳನ್ನು ಹೊಸ ಹೆದರಿಕೆಯೊಂದಿಗೆ ಪರಿಚಯಿಸಿತ್ತು. ಮಣಿಯಕ್ಕ ಆಕಾಶವಾಣಿಗೆ ಹೋಗುವ ಹಿಂದಿನ ದಿನ ಬಾಯಿಗೆ ಸಕ್ಕರೆ ಹಾಕಿ ” ಇನ್ನೂ ಹೆಚ್ಚು ಬರೆಯಬೇಕು. ಹೆಸರು ಬರಬೇಕು” ಎಂದು ಆಶೀರ್ವದಿಸಿ,ಹಾರೈಸಿ ಕಳುಹಿಸಿದ್ದರು. ಯಾರು, ಈ ಸರ್ ಮತ್ತು ಮಣಿಯಕ್ಕ! ಕೇಳಿ. ಉಡುಪಿಯ ಎಂ.ಜಿ.ಎಂ.ಕಾಲೇಜಿನ ಎತ್ತರದ ಕಾಂಪೌಂಡ್ ಗೋಡೆಯ ಕೊನೆ ನೊನೆಯಲ್ಲಿ ನಿಂತ ಗೇಟು ದಾಟಿ ಹೊರಗೆ ಬಂದರೆ ರಸ್ತೆಯುದ್ದಕ್ಕೆ ಎರಡೂ ಬದಿ ಬೇರುಬಿಟ್ಟು ಕೂತ ಒಂದೇ ಬಗೆಯ ಸಾಲು ಮನೆಗಳು.  ಪದವಿ ತರಗತಿಯಲ್ಲಿರುವಾಗ ಗೆಳತಿಯರ ಜೊತೆ ಹರಟೆ ಹೊಡೆಯುತ್ತ ಅಲ್ಲಿ ಕಳ್ಳರಂತೆ ಅಲೆದು” ಇದು ಯಾರದ್ದು? ಅದು? ಈ ಕಡೇದು?. ಇಲ್ಲಿ ನೋಡು!. ಓ ಆಚೆ ಕೂಡ ಮನೆಗಳು!” ಎಂದು ಪರಸ್ಪರ ಪ್ರಶ್ನೆ ಉತ್ತರ ತಡಕಾಡಿ ಯಾವ ಸರ್ ಗೆ ಯಾವ‌ ಮನೆ ಎಂದು ಗುರುತಿಸಿ ಖುಷಿ ಪಟ್ಟದ್ದೆವು. ಸಾಹಿತ್ಯದ ವಿದ್ಯಾರ್ಥಿಗಳಿಗೆ, ಉಳಿದ ವಿದ್ಯಾರ್ಥಿಗಳಿಗಿಂತ ಉಪನ್ಯಾಸಕರ ಬಳಿ ತುಸು ಹೆಚ್ಚೇ ಸಲುಗೆ. ಮಾತಿಗೆ ಸಾವಿರ ವಿಷಯ.  ಕವಿತೆ, ಕಥೆ, ಕಾದಂಬರಿ, ಹರಟೆ, ಪಾಠ ಎಲ್ಲವೂ ಬೇವು ಬೆಲ್ಲ ಪಾನಕ.  ಪಾಠ ಎಂದೂ ಬರಡೆನಿಸದು.  ಬೇರೆ ವಿಷಯಗಳ ತರಗತಿಯಾಗುವಾಗಲೂ ಕನ್ನಡ ಉಪನ್ಯಾಸಕರು ನಡೆದು ಹೋದರೆ ಸಣ್ಣನೆಯ ಖುಷಿಯೇ  ಸರಿದುಹೋದಂತೆ. ಆಗಲೇ ಆ ಏಳು ನಂಬರ್ ನ ಕ್ವಾರ್ಟರ್ಸ್ ಕಂಡದ್ದು. ಅದರ ಬಾಗಿಲಲ್ಲಿ  ‘ ಹೊಸ್ಕೆರೆ ಎಸ್. ಶಿವಸ್ವಾಮಿ’ ಎಂಬ ನಾಮ ಫಲಕ. ಕಂಚಿನ ಕಂಠದ ಪಾಠ. ಚಂದ್ರಮತಿಯ ವಿಲಾಪ, ಹರಿಶ್ಚಂದ್ರ ಕಾವ್ಯವನ್ನು ಮನಸ್ಸಿನಲ್ಲಿ ನೆಟ್ಟವರು. ಪರೀಕ್ಷೆ ಗೆಂದೇ ಓದುವ ಅಗತ್ಯವೇ ಕಂಡಿರಲಿಲ್ಲ. ಕ್ಲಾಸಿನಲ್ಲಿ ಪಾಠ ಕೇಳಿದರಾಯಿತು. ಪರೀಕ್ಷೆ ಹಾಲ್ ನಲ್ಲಿ ಅದನ್ನೇ ನೆನಪಿಸಿದರೆ ಮನಸ್ಸಿನಲ್ಲಿ ಅಚ್ಚಾದ ಅವರ ಧ್ವನಿ  ಚಿತ್ರಕಗಳು  ಪೇಪರಿನ ಮಡಿಲಿನಲ್ಲಿ ಒಂದೊಂದೇ ಪಾತ್ರಗಳಾಗಿ ಮಾತು, ಭಾವ, ಜೀವ ಪಡೆಯುತ್ತಿದ್ದವು.   ರಂಗವು ಮನದ ಭಿತ್ತಿಯೊಳಗೆ ಹುಟ್ಟಿ ಪರೀಕ್ಷೆಯಲ್ಲಿಯೂ ನಾಟಕ ನಡೆಯುತ್ತಲೇ ಇತ್ತು. ನಾನು ಅದರ ವಿವರ ಬಿಳಿ ಪೇಪರಿನಲ್ಲಿ ದಾಖಲಿಸುತ್ತಿದ್ದೆ. ಪರೀಕ್ಷಾ ಕೊಠಡಿಯಿಂದ ಹೊರಬಂದರೂ ಅದೇ ನಶೆ, ಗುಂಗು. ಆ ಪಾತ್ರಗಳು ನನ್ನ ಹಿಂಬಾಲಿಸುತ್ತಿದ್ದವು. ಅಂತಹ ಮನೋಹರ ಶೈಲಿಯ ಪಾಠ ಅವರದ್ದು. ಕನ್ನಡದಲ್ಲಿ ಸ್ನಾತಕೋತ್ತರ ಓದು ಬೇಕೆನ್ನುವ ಆಸೆಗೆ ಮತ್ತಷ್ಟು ಬಲ ತುಂಬಿದ್ದು ಆಗಲೇ.  ಪದವಿ ಮುಗಿದು ಎಂ.ಎ ಓದಿಗೆ ಹೆಸರು ನೋಂದಾಯಿಸಿ ಆಗಿತ್ತು. ಮನೆಯಲ್ಲಿ ಕೂತು ಓದು. ಜೊತಗೆ ಉದ್ಯೋಗ. ಹಳೆಗನ್ನಡ, ಕೆಲವು ಪಠ್ಯ  ಅರ್ಥವಾಗದೇ ಹೋದಾಗ ಸರ್ ಮನೆಗೆ ಹೋಗಿ ಬಹು ಅಂಜಿಕೆಯಲ್ಲಿ ಬಾಗಿಲು ತಟ್ಟಿದ್ದೆ. ಕೆಂಪು ಸೀರೆ ಉಟ್ಟ,ಅಚ್ಚ ಬಿಳಿಬಣ್ಣದ, ಉದ್ದಮೂಗಿನ, ಹೊಳಪು ಕಣ್ಣಿನ ವಯಸ್ಸಾದವರು ಕಂಡಿದ್ದರು. ಏನು? ಎಂದಾಗ ಏನೂ ಹೇಳಲು ತೋಚದೆ ಖಾಲಿಯಾಗಿ ಬೆಪ್ಪಳಂತೆ ನಿಂತಿದ್ದೆ.  ಅವರ ಹಿಂದೆ ತೆಳ್ಳಗಿನ ಉದ್ದ ದೇಹದ ಮಹಿಳೆ. ಬೈತಲೆ ತೆಗೆದು ಕಟ್ಟಿದ ಸೂಡಿ. ಹಣೆಯಲ್ಲಿ ಹದಗಾತ್ರದ ಹೊಳೆಯುವ ಕೆಂಪು ಚಂದಿರ. ಸೌಮ್ಯ ಮುಖ. ಹಿರಿಯಕ್ಕನಂತೆ ” ಬನ್ನಿ ಒಳಗೆ” ಎಂದು ಕೂರಿಸಿ”ಮೇಷ್ಟ್ರನ್ನು ಮಾತನಾಡಿಸಬೇಕಿತ್ತೇ”ಎಂದು ಮೃದು ವಾಗಿ ಕೇಳಿದ್ದರು. ತಲೆಯಲುಗಿಸಿದ್ದೆ. ಹೊಸದೊಂದು ನವಿರು ಬಾಂಧವ್ಯ ಮನಸ್ಸಿಗೆ ಕಟ್ಟಿ ಅವರು ಒಳನಡೆದರು. ಅದು ಗುರುಗಳ ಅಮ್ಮ ಹಾಗೂ ಹೆಂಡತಿ. ನನಗೆ ಅರ್ಥವಾಗದ ಪಾಠಗಳನ್ನು ಸರ್ ಹೇಳಿ ಕೊಟ್ಟರು. ಗುರುಪತ್ನಿ ನಾಗಮಣಿ ಅಮ್ಮ ಅವರು ತಿಂಡಿ, ಕಾಫಿ, ಊಟ, ಪ್ರೀತಿ, ಭಾವ, ಕಾಳಜಿ, ಹಾರೈಕೆ ತುತ್ತು ಉಣಿಸುತ್ತಾ ಹೋದರು. ನಾನು ಆ ಮನೆಯಲ್ಲಿ ಬದುಕಿನಲ್ಲಿ ಎಂದೂ ಸಿಗಲಿಲ್ಲವೆಂದುಕೊಂಡ ವಾತ್ಸಲ್ಯ ಉಂಡು ಚಿಗುರುತ್ತ ಚಿಗುರುತ್ತ ನಡೆದೆ. ನಾನು ಹೋಗುವಾಗೆಲ್ಲ ಸರ್ ತಮ್ಮ ಕುರ್ಚಿಗೆ ಅಂಟಿ ಮೇಜಿನ ಮೇಲೆ ಪೇಪರ್ ಹರವಿ ಬರೆಯುತ್ತಿದ್ದರು. ಕವನ, ಕಥೆ..ಇನ್ನೂ ಏನೋ..ತಮ್ಮ ಇಷ್ಟದ ಭಾವ ತಮಗಿಷ್ಟ ಆಗುವ ಪರಿಯಲ್ಲಿ ಅಕ್ಷರವಾಗಿಸುತ್ತಿದ್ದರು‌ ನಾನು ಸದ್ದಾಗದಂತೆ ಒಳ ನಡೆದು ಅಡುಗೆ ಮನೆಯ ಒಡತಿಯ ಅಕ್ಕರೆಗೆ ಮಗುವಾಗುತ್ತಿದ್ದೆ. ಅಕ್ಷರ ಮತ್ತು ಅಕ್ಕರೆ ಆ ಮನೆಯ ಅವಳಿ ಮಕ್ಕಳು!. ಅವರ ಮನದ ಭಾವತರಂಗಗಳ ನಾದಕ್ಕೆ ನಾನು ಕಿವಿ.  ಆಗ ಸರ್ ಆಕಾಶವಾಣಿಗೆ ಚಿಂತನ ಬರೆದು ಕಳುಹಿಸುತ್ತಿದ್ದರು. ” ಕೇಳು” ಎನ್ನುತ್ತಿದ್ದರು. ನಿಧಾನವಾಗಿ ಗುರುಪತ್ನಿಯ ಚಿಂತನಗಳು ಬರತೊಡಗಿದವು. ಅವರ ಮನದ ಚಿಂತನಗಳು ಶ್ರವಣಕೇಂದ್ರವಾಗಿ ಅಚ್ಚರಿ, ಸೋಜಿಗವಾಗುತ್ತಿತ್ತು. ಹೊಸದೊಂದು ಸೆಳೆತ.  ರೇಡಿಯೋ ಕಥೆ,ಕವನ,ನಾಟಕ. ಎಲ್ಲಿಯೋ ಆಡಿದ ಮಾತು. ಧ್ವನಿತರಂಗಗಳು ಮನೆಯ ಒಳ ಬಂದು ಪಟ್ಟಾಂಗವಾಡುವುದು. ಆಗಲೇ ನಾನು ಬರೆದ ಕಥೆಯನ್ನು ಅವರಿಬ್ಬರೂ ಓದಿ, ಆಕಾಶವಾಣಿಗೆ ಕಳುಹಿಸಿದ್ದು. ಕಥೆ ಓದುವುದು ಹೊಸ ಅನುಭವ.” ಆರಾಮವಾಗಿ ಓದು. ಭಾವ ತುಂಬಿ ಓದು.  ಅವಸರಿಸಬೇಡ” ನಾಗಮಣಿ ಅಮ್ಮನ ಸಕ್ಕರೆ ಜೊತೆಗಿನ ಅಕ್ಕರೆ ವಾಣಿ ಒಳಗೊಳಗೇ ಮತ್ತೆ ಮತ್ತೆ ಧ್ವನಿಸುತ್ತಿತ್ತು. ಮೊದಲ ಓದು ತಿಳಿಸಿಕೊಟ್ಟವರು ಆಗ ಆಕಾಶವಾಣಿಯಲ್ಲಿ ಯುವವಾಣಿಯ ಜವಾಬ್ದಾರಿ ನಿರ್ವಹಿಸುತ್ತಿದ್ದ ಶರಭೇಂದ್ರಸ್ವಾಮಿಯವರು. ಕಣ್ಣ ಮುಂದೆ ಮನಸ್ಸಿನಲ್ಲಿ ಗೆಜ್ಜೆಕಟ್ಟಿ ಕೂತಿದ್ದ ಪಾತ್ರಗಳು ಅಕ್ಷರಗಳಾಗಿ, ಮಾತಾಗಿ, ಧ್ವನಿಯಾಗಿ ಹೊರಟಿದ್ದವು. ಮುಂದೆ ಬದುಕಿನಲ್ಲಿ ಕಂಡ ಕಥೆ ಕಥೆಗಳು ಅಕ್ಷರಗಳಾದವು. ಗುರುಪತ್ನಿಯ ಶಿಫಾರಸ್ಸು.” ಎಷ್ಟು ಚೆಂದ ಬರ್ದಿದೀಯೇ ಹುಡುಗೀ..”” ನಿನ್ನ ಕಥೆ ನನಗಿಷ್ಟ” ಎನ್ನುತ್ತಾ ನಾಗಮಣಿ ಅಮ್ಮ, ತನ್ನ ಮಡಿಲಲ್ಲಿ ಕೂರಿಸಿ, ಒಪ್ಪ ಮಾಡಿ ಒಬ್ಬ ಕಥೆಗಾರ್ತಿಯನ್ನು ಕಟ್ಟುತ್ತಲೇ ನಡೆದರು. ” ಏನು,ಯಾವ ಕಥೆ? ಬರೆದಿರುವೆಯಾ, ತಾ ಇಲ್ಲಿ. ಕೊಡು.”  ” ವ್ಹಾ, ಮಣಿ ಕಂಡೆಯಾ, ಎಂತಹ ಹೋಲಿಕೆ, ಏನು ಚೆಂದ” ಎನ್ನುತ್ತಾ ಸರ್ ಅವರು,  ನನ್ನೊಳಗೆ ಇದ್ದ, ಇದ್ದೂ  ಇಲ್ಲದಂತಿದ್ದ ಕಥೆಗಾರ್ತಿಯನ್ನು ಬೆಳೆಸಿದರು. ಆಕಾಶವಾಣಿಯೆಂಬ ಅದ್ಬುತ ನನಗೆ ಹೊಸ ಲೋಕದ ದೊರೆತನವನ್ನೇ ಕಾಣಿಕೆ ನೀಡಿದಂತೆ ಶ್ರೀಮಂತಗೊಳಿಸಿತು.  ಜೊತೆಜೊತೆಗೆ ಗುರುದಂಪತಿಗಳ ವಾತ್ಸಲ್ಯ. ಮೊಗೆಮೊಗೆದು ಕೊಟ್ಟ ಪ್ರೀತಿಗೆ ಎಣೆಯುಂಟೇ? ಯಾವ ಹಬ್ಬವಾಗಲಿ ಕರೆ ಬರುತ್ತಿತ್ತು. ಹೋಗಲು ಸಾಧ್ಯವಾಗದ ಸಂದರ್ಭದಲ್ಲಿ ಮಾಡಿದ ಸಿಹಿತಿಂಡಿ ಮುಚ್ಚಟೆಯಾಗಿ ತೆಗೆದಿರಿಸಿ ಅವರ ಮನೆಗೆ ನಾನು ಹೋದಾಗ ಕೊಡುತ್ತಿದ್ದರು. ತಾನು ಹೆತ್ತ ಕಂದ ಇವಳು ಎಂಬಂತೆ. ಮನಸ್ಸಿನ ಮಾತು ಹಂಚಿಕೊಳ್ಳುತ್ತಿದ್ದರು. ” ನಿನಗಿಂತ ಆತ್ಮೀಯಳು ಯಾರು ಹೇಳು?” “ಹೇ ಹುಡುಗಿ ,ನನ್ನ ಮಾತು ಸರ್ ಬಳಿ ಹೇಳಬೇಡ.”  “ಎಲ್ಲಿದ್ದಿಯೇ,ಮನೆಗೆ ಬಾ. ಅದೆಷ್ಟು ಮಾತಿದೆ.”  “ನನ್ನ ಬಗ್ಗೆ ಒಂದು ಕಥೆ ಬರಿ ನೋಡುವಾ”  “ಸಂಕ್ರಾಂತಿಯ ಎಳ್ಳು ಬೆಲ್ಲ ಬೇಡ್ವಾ”  ” ನಿನ್ನ ಕಥೆ ನೋಡು ತುಷಾರದಲ್ಲಿ ಬಂದಿದೆ. ಬೇಗ ಬಾ. ಸ್ವೀಟ್ ಹಿಡಕೊಂಡು ಬಾ.” ” ಹೇ,ನಾನೇ‌ ಮಾಡಿದ್ದೇನೆ. ಬಾ ಈಗ”. ಹೀಗೆ ಸದಾ ತೊಟ್ಟಿಕ್ಕುತ್ತಿದ್ದ  ಎಂದೂ ಬತ್ತದ ಮಮತೆಯ ಮಾತುಗಳು.ತಾನೇ ನಾನಾದಂತೆ ನಾನೇ ಆಗಿ ಉಳಿದ ತಾಯಿ. ಈ ಬಂಧ ಹಾಗೇ ಉಳಿದಿದೆ. ಊರು ಬದಲಾದರೇನು? ಮನದ ಭಾವ ಬದಲಾದೀತೇ?”ನಿನ್ನಿಂದ ಸಾಧ್ಯ, ಮಾಡು!. ಮಾಡು!!” ಅನ್ನುತ್ತ ಅಂಜುಬುರುಕಿ ಹೆಣ್ಣನ್ನು ಕಲೆಯ ಮಹಲೊಳಗೆ ಕಿರುಬೆರಳು ಹಿಡಿದು ನಡೆಸಿದವರು.ರಂಗದ ಮೆಟ್ಟಲು ಹತ್ತಲು ಇಂತಹ ದೇವತೆಗಳೂ ಬೇಕಾಗುತ್ತಾರೆ ಎನ್ನುವ ತಿಳಿವು ಮೂಡಿಸಿದವರು.ತಾನು ಕಥೆ ಬರೆದಾಗ ಓದಿ ನೋಡು. ನೀನು ಹೇಳಿದರೆ ನನಗೊಂದು ನೆಮ್ಮದಿ ಎನ್ನುತ್ತ ಆತ್ಮವಿಶ್ವಾಸ ಗಂಟು ನನ್ನಲ್ಲಿ ಜೋಪಾನವಾಗಿಸಿದರು. ಆಕಾಶವಾಣಿಯಲ್ಲಿ ಕಥೆಗಳ ಓದು,ಕಥೆಯ ರಚನೆಗೆ ಮೂಲ ಶಕ್ತಿಯಾದಂತೆ ಮುಂದೆ ರೇಡಿಯೋ ನಾಟಕದ ಹುಚ್ಚು ಆಸೆ ತುಂಬಿತು. ಮುದ್ದು ಮೂಡುವೆಳ್ಳೆಯಂತವರ ನಿರ್ದೇಶನದಲ್ಲಿ ಆಕಾಶವಾಣಿ ಕಲಾವಿದಳಾದೆ.  ರೇಡಿಯೋ ನಾಟಕಗಳಲ್ಲಿ ಅವಕಾಶ ದೊರಕಿದಾಗ ಹೊಸಹೊಸ ನಾಟಕಗಳ ಓದು, ಕಲ್ಪನೆ. ಜೊತೆಗೆ ಶರಭೇಂದ್ರ ಸ್ವಾಮಿಯಂತ ನುರಿತ ನಿರ್ದೇಶಕರು, ಸ್ವರಭಾರ, ಧ್ವನಿಪೆಟ್ಟಿಗೆ, ಭಾವದ ಏರಿಳಿತ ಹೇಳಿ  ಕಲೆಯ ವ್ಯಾಮೋಹ ಅಮಲು ನನ್ನೊಳಗೆ ಹರಿದುಬರಲು ಪ್ರೇರಕ ಶಕ್ತಿಯಾದರು. ಅದು ಪೂರ್ತಿ ಹೊಸ ನಶೆ. ರಂಗದ ಪ್ರವೇಶಕ್ಕೆ ನಿಜವಾದ ಪ್ರವೇಶಿಕೆ. ಆಕಾಶವಾಣಿಯ ಅವಕಾಶದಾಕಾಶ ತೆರೆದ ಗುರುಗಳು ಈ ವರ್ಷ, ಸೂಚನೆ ನೀಡದೆ ನಡೆದಿದ್ದಾರೆ. ನನ್ನ ಬದುಕಿನ  ಗುಡಿಯಲ್ಲಿ ಮಾತ್ರ ಇವರು ಸದಾ ಪ್ರತಿಷ್ಠೆಗೊಂಡು, ಬೆಳಗ್ಗಿನ ಮೊದಲ ಪೂಜೆ ಇವರಿಗೇ ಅನ್ನುವಷ್ಟು ಪ್ರಾತಃಸ್ಮರಣೀಯರು. **************************** ಪೂರ್ಣಿಮಾ ಸುರೇಶ್ ರಂಗಭೂಮಿ ಹಾಗೂ ಕಿರುತೆರೆ ಕಲಾವಿದೆ.ಕವಯತ್ರಿ. ಕನ್ನಡ,ತುಳು,ಕೊಂಕಣಿ ಭಾಷೆ ಯ ಸಿನೇಮಾಗಳಲ್ಲಿ ಅಭಿನಯ. ಕೊಂಕಣಿ ಸಿನೇಮಾ ” ಅಂತು” ವಿನ ಅಭಿನಯಕ್ಕೆ ರಾಷ್ಟ್ರಮಟ್ಟದ Hyssa Cini Global Award Best supporting actor ದೊರಕಿದೆ. ” ಸಿರಿ” ಏಕವ್ಯಕ್ತಿ ಪ್ರಸ್ತುತಿ 30 ಯಶಸ್ವೀ ಪ್ರದರ್ಶನ ಕಂಡಿದೆ.ಮಂಗಳೂರು ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠದ ಸದಸ್ಯೆ. ಪ್ರಸ್ತುತ ರಾಜ್ಯ ಕೊಂಕಣಿ ಸಾಹಿತ್ಯ ಅಕಾಡಮಿ ಸದಸ್ಯೆ. “ಅಮೋಘ ಎಂಬ ಸಂಸ್ಥೆ ಹುಟ್ಟುಹಾಕಿ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ. ಆಕಾಶವಾಣಿ ಕಲಾವಿದೆ.ಇದುವರೆಗೆ 3 ಕವನ ಸಂಕಲನ ಸೇರಿದಂತೆ 6 ಪುಸ್ತಕಗಳು ಪ್ರಕಟಗೊಂಡಿವೆ. GSS ಕಾವ್ಯ ಪ್ರಶಸ್ತಿ,ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ,GS Max ಸಾಹಿತ್ಯ ಪ್ರಶಸ್ತಿ. ಹಲವಾರು ಕವಿಗೋಷ್ಠಿಯಲ್ಲಿ ಭಾಗವಹಿಸುವಿಕೆ

Read Post »

ಕಾವ್ಯಯಾನ

ದಾಖಲೆಗಳಿವೆ

ಕವಿತೆ ದಾಖಲೆಗಳಿವೆ ವಸುಂಧರಾ ಕದಲೂರು ಸುಧಾರಕರನು ಹುಚ್ಚರೆಂದುಕರೆದು ಥಳಿಸಿದುದಕೆ, ಕೂಡುರಸ್ತೆಗಳ ನಡುವಲ್ಲಿ ಹೀಗಳೆದುಕಲ್ಲುತೂರಿ ಕಟುನುಡಿ ಮಳೆಗರೆದು,ತೋಯಿಸಿ ನೋಯಿಸಿದುದಕೆ. ಗಾಸೀಪು ತೂಪಾಕಿಗಳ ತೂಫಾನುಸಿಡಿಸಿ ಗಡೀಪಾರು ಮಾಡಿಸಿ; ಗುಲ್ಲೆಬ್ಬಿಸಿ ಗಲ್ಲಿಗೇರಿಸಿ, ಗುಂಪುಗುಂಪಾಗಿ ಗುಟ್ಟು ಮಾಡಿ; ಒಳಸಂಚು ಮಾಡಿ ಮೂಲೆ ಗುಂಪಾಗಿಸಲು ಕಾರ್ಯ ಗೇಯ್ದದದಕೆ. ಇದರ ನಡುವೆಯೂ ಅವರು, ಅವರ ವರ್ತಮಾನಗಳಲಿ ದಂತಕತೆಗಳಾಗಿ, ಭವಿಷ್ಯತ್ತಿನಲಿ ಹುತಾತ್ಮರಾಗಿ ಇತಿಹಾಸದ ಪುಟಗಳಲಿ ಮಹಾತ್ಮರಾಗಿ ಸೇರಿಹೋದುದಕೆ ಸಾಕ್ಷ್ಯಗಳಿವೆ.. ********************************************

ದಾಖಲೆಗಳಿವೆ Read Post »

ಅಂಕಣ ಸಂಗಾತಿ, ಪಾರಿಜಾತ

ಅಂಕಣ ಬರಹ ಸವಡಿಯಾಗುವ ಸವತಿಯರು ಭಾರತ ಬಹುಸಂಸ್ಕೃತಿ ನಾಡು. ಅಂತೆಯೆ ಬಹು ಪತ್ನಿತ್ವ ಸಮಾಜವುಳ್ಳ ಕೇಂದ್ರಸ್ಥಾನವೂ ಹೌದು.ಒಬ್ಬ ಪುರುಷನನ್ನು ಇಬ್ಬರು ಮಹಿಳೆಯರು ಮದುವೆಯಾದರೆ ಅವರು ಒಬ್ಬರಿಗೊಬ್ಬರು ಸವತಿಯಾಗುವರು. ‘ಸವತಿ’ ಎನ್ನುವ ಈ ಶಬ್ದ ಮೂಲತಃ ಸಹವರ್ತಿ ಎನ್ನುವ ಪದದಿಂದ ಬಂದಿದ್ದು. ಇದರ ಅರ್ಥ ಇಬ್ಬರೂ ಸಮಾನ ಹಕ್ಕು ಹೊಂದಿರುವುದು ಎಂದಾಗುತ್ತದೆ. ಸಮಾನ ಹಕ್ಕುಗಳು, ಸಮಾನ ಸಕಲ ಸವಲತ್ತುಗಳನ್ನು ಸಮಾನವಾಗಿ ಪಡೆಯುವರನ್ನು ಸವತಿ ಎಂದು ಕರೆಯುವರು‌. ಈ ಸವತಿ ಎನ್ನುವ ಪದ ಹೊಟ್ಟೆಕಿಚ್ಚು, ಮತ್ಸರ, ವೈರಿ, ಅಸಹನೆ ಎಂಬ ನಾನಾರ್ಥಗಳನ್ನು ಕೊಡುತ್ತವೆ. ಹಾಗೇ ನೋಡಿದರೆ ಈ ಸವತಿ ಎಂಬ ಸಂಸ್ಕೃತಿ ಮತ್ತು ಸಂಪ್ರದಾಯ ಬೆಳೆದು ಬರಲು ಮುಖ್ಯ ಕಾರಣ ಪುರುಷರ ಪ್ರತಿಷ್ಠೆ ಮತ್ತು ಲೈಂಗಿಕ ಬಯಕೆಗಳು, ಸಂತಾನ ಅಪೇಕ್ಷೆಗಳು ಪ್ರಮುಖ ಎಂದು ಹೇಳಬಹುದು. ಇಲ್ಲಿಯೂ ಸವತಿಯರಾಗಿ ಬಂದ ಸ್ತ್ರೀಯರನ್ನು ಇನ್ನಷ್ಟು ದುಸ್ಥಿತಿಗೆ ಸಿಲುಕಿಸಿತು. ಇದೊಂದು ಕೆಟ್ಟ ಸಾಮಾಜಿಕ ಸಮಸ್ಯೆ ಎಂದೇ ಹೇಳಬಹುದು. ಗಂಡನು ಇನ್ನಾವುದೋ ಕಾರಣದಿಂದ ಎರಡನೆಯ ಮದುವೆಯಾದರೆ ಮೊದಲ ಸತಿಯ ಎದೆ, ಮನಸು ಒಪ್ಪದಿದ್ದರೂ ಅದಕ್ಕೆ ಶಾಂತವಾಗಿ, ಮೌನವಾಗಿ ಸಮ್ಮತಿಯನ್ನು ಕೊಡಬೇಕು. ಅಂದು ಸ್ತ್ರೀಯು ತನ್ನ ಒಡಲಾಳದ ನೋವು ಗಂಭೀರ ಆಗಿದ್ದರೂ ಅವಳು ತನ್ನ ಗಂಡನ ಎದುರು ಹೇಳಿಕೊಳ್ಳುವಂತಿರಲಿಲ್ಲ. ಅಂತಹ ಕೆಟ್ಟ ವ್ಯವಸ್ಥೆಯನ್ನು ಎದುರಿಸಿ ನಿಲ್ಲುವ ಶಕ್ತಿ ಅವಳಾಗ ಪಡೆದುಕೊಂಡಿರಲಿಲ್ಲ. ಪತ್ನಿಯ ಮುಂದೆ ಎರಡನೆಯ ಮದುವೆ ವಿಚಾರ ಪ್ರಸ್ತಾಪಿಸಿ ಅವಳ ಒಪ್ಪಿಗೆಗಾಗಿ ಕಾಯುವುದು ಅಂದಿನ ವ್ಯವಸ್ಥೆಗೆ ಹೊಂದದ ನಿಯಮವನ್ನಾಗಿ ಮಾಡಿಕೊಂಡಿತು ಈ ಪುರುಷ ಸಮಾಜ. ಇಂತದ್ದೆ ಒಂದು ಉದಾಹರಣೆ ನೋಡಲಾಗಿ, ‘ಮರಳಿ ಮಣ್ಣಿಗೆ’ ಕಾದಂಬರಿಯಲ್ಲಿ ರಾಮೈತಾಳರು ತಮ್ಮ ಎರಡನೆಯ ಮದುವೆ ವಿಷಯದಲ್ಲಿ ಸಂಶಯ ಗ್ರಹಸ್ಥನಾದ ಶೀನಮ್ಮಯ್ಯನಿಗೆ ಮನವರಿಕೆ ಮಾಡುವ ಹೇಳಿಕೆಯನ್ನು ನಿದರ್ಶನವಾಗಿ ನೋಡಬಹುದು. “ಶೀನ ನಮ್ಮ ಮನೆಯ ಪಂಚಾಯಿತಿ ನಿನಗೆ ಗೊತ್ತಿಲ್ಲ.ನಮ್ಮಲ್ಲಿ ಒಬ್ಬ ಯಜಮಾನ ಎಂದರೆ ಸಿಂಗಲ್ ಯಜಮಾನ.ಗಂಡನು ಒಂದು ಹೇಳುವುದು, ಹೆಂಡತಿ ಇನ್ನೊಂದು ಹೇಳುವುದು ಈವರೆಗೆ ನಡೆದಿಲ್ಲ”. ಇಂತಹ ವ್ಯವಸ್ಥೆಯ ಬೇರು ಗಟ್ಟಿಯಿರುವಾಗ ಸ್ತ್ರೀ ಅದನ್ನು ವಿರೋಧಿಸುವಂತಿಲ್ಲ.ಆದಾಗ್ಯೂ ಹೆಂಡತಿಯ ಬಗೆಗೆ ದ್ವೇಷ ಮಾಡಿಕೊಳ್ಳವ ಬದಲು ಇಲ್ಲಿ ಪಾರ್ವತಿಯು ಸತ್ಯಭಾಮೆಯರೊಂದಿಗೆ ಬಹು ಅಕ್ಕರೆಯಿಂದಲೇ ನಡೆದುಕೊಳ್ಳುತ್ತಾಳೆ. ಆದರೂ ಇಲ್ಲಿ ಮೊದಲು ಸವತಿಯ ಮೇಲೆ ಹೊಟ್ಟೆಕಿಚ್ಚು ಹೊಂದಿದಳು ಅನ್ನುವದಂತು ನಿಜ. ಈ ವ್ಯವಸ್ಥೆ ಹೇಗೆ ಪುರುಷನ ನಿಯಂತ್ರಣದಲ್ಲಿರುತ್ತದೆ, ಹೆಣ್ಣು ತನ್ನ ಕೋಪವನ್ನು ಹೇಗೆ ಹೆಣ್ಣಿನ ಮೇಲೆ ಸಾಧಿಸಿಕೊಂಡು ಪುರುಷನ ಮೇಲೆ ತೀರಿಸಿಕೊಳ್ಳುತ್ತಾಳೆ ಅಂದ್ರೆ, ಅವಳು ತನ್ನ ಸಿಟ್ಟುನ್ನು ಹೊಸದಾಗಿ ಬಂದ ಹೆಣ್ಣಿನ ಮೇಲೆ ಜಗಳ, ಅಸಹನೆ ತೋರುವುದರ ಮೂಲಕ ತೀರಿಸಿಕೊಳ್ಳುವಳು. ಹೀಗೆ ಇದು ಸವತಿಯರ ಮತ್ಸರಯುದ್ದ ಎಂದೇ ಹೇಳಬಹುದು. ಇಂತದ್ದೆ ಒಂದು ಉದಾಹರಣೆ ‘ಅಂತರಂಗ’ ಕಾದಂಬರಿಯಲ್ಲಿ ಪಾತಮ್ಮ ಸಾಕ್ಷಿಯಾಗಿ ನಿಲ್ಲುತ್ತಾಳೆ. ಇಲ್ಲಿ ಭಟ್ಟರು ತೀರ್ಥಯಾತ್ರೆ ಕೈಗೊಂಡು ಪ್ರಯಾಣದ ನಡುವೆ ಬಸವಿ ಗೌರಮ್ಮಳಿಗೆ ಮನಸೋತು ಹೋಗುವನು. ಬಸವಿಯಾದ ಗೌರಮ್ಮ ಯಾರಿಗೂ ಕಣ್ಣೆತ್ತಿ ನೋಡದ ಅವಳು ಇಲ್ಲಿ ಭಟ್ಟರಿಗೆ ಮನಸೋತು ಹೋಗುತ್ತಾಳೆ. ಭಟ್ಟರು ತೀರ್ಥ ಯಾತ್ರೆ ಮುಗಿಸಿಕೊಂಡು ಮನೆಗೆ ಬಂದ ಕೆಲವು ದಿನಗಳಲ್ಲಿ ಬಸವಿ ಗೌರಮ್ಮ ಕೂಡಾ ಮನೆಗೆ ಬರುವಳು. ವಿಶಾಲ ನಿರ್ಮಲ ಪ್ರೇಮದ ಗೌರಮ್ಮ ವೈರಾಗ್ಯ ನಿಧಿಯಂತೆ ಇರುತ್ತಾಳೆ. ಆದರೆ ಭಟ್ಟರು ಗೌರಮ್ಮಳ ಕುರಿತು ತನ್ನ ಸ್ನೇಹಿತರಿಗೆ, ಸಂಬಂಧಿಕರ ಎದುರಿಗೆ ಮಾಡುವ ವರ್ಣನೆಯಿಂದ ಭಟ್ಟರ ಮೊದಲ ಹೆಂಡತಿ ಪಾತಮ್ಮ ಮೂರ್ಛೆ ಹೋಗುತ್ತಾಳೆ. ಅಂದಿನಿಂದ ಅವಳು ಗಂಡನನ್ನು ದ್ವೇಷಿಸುತ್ತಾಳೆ .ಹೀಗೆ ಇಲ್ಲಿ ಗಂಡನನ್ನ ತಿರಸ್ಕಾರದ ಮನಸ್ಸು ಬೀರುವುದರೊಂದಿಗೆ ಸವತಿಯರ ಅಸಹನೆ ಎದ್ದು ಕಾಣುತ್ತದೆ. ಪುರುಷನದೆ ಸಮಾಜ ಅಲ್ವ ಇದು! ಇಲ್ಲಿ ಎಂಥದ್ದೇ ಸಮಸ್ಯೆಗಳಾದರೂ ಪರಿಹಾರ ಅವಳಿಂದಲೇ ಅನ್ನುವುದು ಆಲ್ರೆಡಿ ಶಾಸನ ಹೊರಡಿಸಿ ಆಗಿದೆ ಈ ನೆಲದ ಮಣ್ಣಿನ ಮೇಲೆ. ಅಂತಹ ಸಾಮಾಜಿಕ ಸಮಸ್ಯೆಗಳು ಕಾದಂಬರಿಯಲ್ಲಿ ಪ್ರಸ್ತಾಪಿಸುವ ಮೂಲಕವೇ ಈ ವ್ಯವಸ್ಥೆಯನ್ನು ಹೀಗೆಳೆಯುವುದು ಒಂದು ಉಸಿರು ಬೇರೆಡೆ ಬಿಡುವಂತೆ ಮಾಡುತ್ತದೆ. ಅಂತೆಯೆ ಇನ್ನೊಂದು ಕಾದಂಬರಿಯಾದ ‘ಪ್ರಬುದ್ಧ ಪದ್ಮನಯನೆ’ ಯಲ್ಲಿ ಪದ್ಮನಯನೆ ಮತ್ತು ಜೀವನಕಲಾ ಸವತಿಯರಾದರೂ ಇಲ್ಲಿ ಅವರಿಬ್ಬರೂ ಬಲುಪ್ರೇಮ ಅಕ್ಕರೆಯಿಂದ ಇದ್ದವರು. ಆದರೂ ಬದಲಾವಣೆ ಮತ್ತು ಹೊಂದಾಣಿಕೆಯ ಮನಸುಗಳು ಕೆಲವೊಂದು ಸಲ ಅನಿವಾರ್ಯತೆಗೆ ಒಗ್ಗಿಕ್ಕೊಳ್ಳುತ್ತವೆ ಅನ್ನುವುದಕ್ಕೆ ಇದೊಂದು ದೃಷ್ಟಾಂತ. ಹೊಯ್ಸಳ ದೊರೆ ವಿಷ್ಣುವರ್ಧನ ಶಾಂತಲೆಗೆ ಮನಸೋತಾಗ ಒಬ್ಬರನ್ನೊಬ್ಬರು ಬಿಟ್ಟಿರಲಾರದ ಬಂಧವನ್ನು ಹೊಂದಿದ್ದ ನಾಟ್ಯರಾಣಿ ಶಾಂತಲೆ ಹಾಗೂ ಲಕ್ಷ್ಮೀ ಇಬ್ಬರೂ ಕೊನೆಗೆ ವಿಷ್ಣುವರ್ಧನನ ಪತ್ನಿಯರಾಗಿ ಕೊನೆಗೆ ತ್ಯಾಗದ ಮೂರ್ತಿಯಾಗುವ ಕತೆಯನ್ನು ‘ಕೆ ವಿ ಅಯ್ಯರ್ ರವರ ‘ಶಾಂತಲೆ’ ಕಾದಂಬರಿಯಲ್ಲಿ ಕಾಣಬಹುದು. ಈ ಸವತಿಯರು ಸಂಪ್ರದಾಯ ಇವತ್ತು ನಿನ್ನೆಯದಲ್ಲ. ಇದು ವೇದ ಕಾಲದಿಂದ ಹಿಡಿದು ರಾಜ ಮಹಾರಾಜರ ಕಾಲದಲ್ಲಿ ವಿಫುಲವಾಗಿ ಸಂಚರಿಸಿಕೊಂಡು ಬಂದ ಒಂದು ಪದ್ಧತಿ. ಒಬ್ಬರಿಗೊಬ್ಬರ ಬಗೆಗೆ ಸಿಟ್ಟಲ್ಲಿ  ಮತ್ಸರವಿದ್ದರೂ ಆ ಸವತಿಯರು ಈ ಸಮಾಜದಲ್ಲಿ ಸವತಿಯರಾಗಿ ಉಳಿಯದೇ ಅಕ್ಕತಂಗಿಯರಾಗಿ ಬದುಕು ಸಾಗಿಸುವ ಪರಿ ಗಮನಾರ್ಹವಾದುದು. ಹೀಗೆ ಹೆಣ್ಣು ಈ ಸಮಾಜದಲ್ಲಿ ಭೋಗಕ್ಕೆ ಸಿಲುಕಿದಂತೆ ತ್ಯಾಗಕ್ಕೂ ಸೈ ಅನ್ನುವ ಆದರ್ಶನಾರಿಯೇ ಆಗಿದ್ದಾಳೆ. ******************************************    ತೇಜಾವತಿ ಹೆಚ್ ಡಿ

Read Post »

ಅಂಕಣ ಸಂಗಾತಿ, ಕಾಲಾ ಪಾನಿ

ಅಂಕಣ ಬರಹ ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ ಸರಣಿಬರಹ……….. ಅದ್ಯಾಯ-6 ಹೌರಾ ಬ್ರಿಜ್ ಹತ್ರ ಬಂದು ನಿಂತು ಸ್ವಲ್ಪ ಹೊತ್ತು ಫೋಟೊ ಶೂಟ್ ಎಲ್ಲಾ ಆಗುವಾಗ, ಅಲ್ಲಿವರೆಗೆ ಸರ್ಕಸ್ ಮಾಡಿ ಬಂದಿದ್ದು ಸಾಕಾಗಿ ಹೋಯ್ತೇನೊ. ಇನ್ನು ಸಾಕು‌. ವಾಪಸ್ ಹೋಗೋಣ ಅಂದರು ಸತೀಶ್. ನೀರಿನಲ್ಲಿ ನಕ್ಷತ್ರ ಮೀನು, ಜೆಲ್ಲಿ ಮೀನು ಇನ್ನೇನೇನೊ ನೋಡುತ್ತಾ ಮಕ್ಕಳು ಮುಂದೆ ಹೋಗಿದ್ದರು.ನೀವು ಮುಂದೆ ಹೋಗಿ ನೋಡಿ ಬನ್ನಿ. ನಾವಿಲ್ಲೇ ಕೂತಿರ್ತೇವೆ ಎಂದು ಸರಸ್ವತಿಗೆ ಹೇಳಿದೆ. ಅಲ್ಲೇ ಒಂದು ಬಂಡೆಯ ಮೇಲೆ ಕೂತು ಸಮುದ್ರ ನೋಡುತ್ತಾ ಇದ್ದಾಗ ನಮ್ಮ ಮ್ಯಾನೇಜರ್ ಬಂದು, ನೀವಿಲ್ಲೇ ಇದ್ದೀರಾ? ಮುಂದೆ ಹೋಗಿ ಬನ್ನಿ ಸರ್ ಎಂದು ಹೇಳಿದರು. ಅವರಿಗೆ ಆಗ್ತಿಲ್ಲ. ಅದಕ್ಕೆ ಇಲ್ಲೇ ಕೂತೆವು ಅಂದೆ. ಯಾಕೆ? ಏನಾಯ್ತು? ಎಂದು ಗಾಬರಿಯಾದರು. ಏನಿಲ್ಲ. ಈಗ ಏನೂ ಆಗಿದ್ದಲ್ಲ. ಒಂದೂವರೆ ವರ್ಷದ ಹಿಂದೆ ಬ್ರೈನ್ ಸ್ಟ್ರೋಕ್ ಆದ ವಿಷಯ ಹೇಳಿದೆ. ನನಗೆ ಗೊತ್ತೇ ಆಗಿಲ್ಲ. ನೀವು ಮೊದಲೇ ಹೇಳಿದ್ದರೆ ನಾನಿಲ್ಲಿ ಅವರ ಜೊತೆ ಇದ್ದು ನೋಡಿಕೊಳ್ತಾ ಇದ್ದೆ. ನೀವು ಹೋಗಿ ಬರಬಹುದಿತ್ತು, ಈಗ ಹೋಗಿ ನಾನಿಲ್ಲಿರ್ತೇನೆ ಅಂದರು. ಅಷ್ಟರೊಳಗೆ ಎಲ್ಲರೂ ವಾಪಸ್ ಬರುತ್ತಾ ಇದ್ದರು. ಅಲ್ಲೊಂದಿಷ್ಟು ಹೊತ್ತು ಮತ್ತೆ ಫೋಟೊ ಶೂಟಿಂಗ್ ಆಯಿತು. ನಂತರ ನಾವು ಹೋಗಿದ್ದು ಲಕ್ಷ್ಮಣಪುರ ಬೀಚ್ ಗೆ. ಸೂರ್ಯ ಮುಳುಗೋದನ್ನು ನೋಡಲು ಅಲ್ಲಿ ತುಂಬಾ ಜನ ಬರ್ತಾರೆ. ಸಂಜೆ ಐದೂವರೆಗೆ ಸೂರ್ಯಾಸ್ತ. ನಾವು ಬೇಗ ಹೋಗಿ ಕೂತರೆ ಒಳ್ಳೆಯ ದ್ರಶ್ಯ ನೋಡಲು ಸಿಗುತ್ತೆ ಅಂತ ಮತ್ತೆ ಬಸ್ಸಿನಲ್ಲಿ ನೀಲ್ ದ್ವೀಪದ ಪಶ್ಚಿಮಕ್ಕಿರುವ ಆ ಬೀಚ್ ತಲುಪುವಾಗ ಐದು ಗಂಟೆ. ಸಣ್ಣ ಚಿರೋಟಿ ರವೆಯಂತ ಮರಳು, ಪುಸ್ ಪುಸ್ ಜಾರುತ್ತಾ ಹೆಜ್ಜೆ ಇಟ್ಟಲ್ಲೇ ಇದ್ದ ಹಾಗೆ, ಮುಂದೆ ಸಾಗುತ್ತಲೇ ಇಲ್ಲ. ಅಂತೂ ಹೋಗಿ ಸೂರ್ಯಾಸ್ತ ಆಗುವ ಜಾಗಕ್ಕೆ ಹೋಗಿ ಸೇರಿದೆವು. ಕಲ್ಲಿನ ಬೆಂಚ್ ತರ ಮಾಡಿ ಇಟ್ಟಿದ್ದಾರೆ. ಜಾಗ ಸಿಕ್ಕಿದಲ್ಲಿ ಕೂತೆವು. ಪಕ್ಕದಲ್ಲಿ ಚಾ ಅಂಗಡಿ. ಯಾವತ್ತೂ ಚಾ ಕುಡಿಯದ ನನಗೆ ಆವತ್ತು ಚಹಾದ ಪರಿಮಳ ತುಂಬಾ ಇಷ್ಟವಾಗಿ ಎಲ್ಲರೊಂದಿಗೆ ನಾನೂ ಚಹಾ ಕುಡಿದೆ. ಇನ್ನೂ ಹತ್ತು ಹದಿನೈದು ನಿಮಿಷ ಬಾಕಿ ಇತ್ತು. ನಮ್ಮ ಜೊತೆಯಲ್ಲಿ ಬಂದವರಲ್ಲಿ ನವವಿವಾಹಿತ ಜೋಡಿ ಒಂದಿತ್ತು. ನಮ್ಮ ಮಕ್ಕಳಿಗೆ ಈ ಬೀಚ್ ಲ್ಲಿ ಅವರಿಬ್ಬರೂ ಸ್ನೇಹಿತರಾದರು. ಎಲ್ಲರೂ ಜೊತೆ ಸೇರಿ ನಗುತ್ತಾ ಹರಟುತ್ತಾ ಹಾಯಾಗಿ ಸಮುದ್ರದ ಬಳಿ ಇದ್ದರು. ಆ ಜಾಗದಲ್ಲಿ ಸಮುದ್ರ ಸ್ವಲ್ಪ ಆಳವಾಗಿದೆ, ತುಂಬಾ ಮುಂದೆ ಹೋಗೋದೆಲ್ಲ ಬೇಡ. ಸೂರ್ಯಾಸ್ತ ನೋಡಿದ ಕೂಡಲೇ ರೆಸಾರ್ಟ್ ಗೆ ಹೊರಡೋದು ಎಂದು ಬರುವಾಗ ಬಸ್ಸಿನಲ್ಲೇ ಹೇಳಿದ್ದರು. ಸೂರ್ಯ ಉರಿಯುತ್ತಾ ಇದ್ದವನೇ.. ಇದ್ದಕ್ಕಿದ್ದ ಹಾಗೆ ಸುತ್ತಲೂ ಆಕಾಶ ಕೆಂಪು ಕೆಂಪಾಗಿ ಮೆಲ್ಲ ಮೆಲ್ಲನೆ ಆ ಕೆಂಪಿನೊಳಗೆ ಜಾರುತ್ತಾ ಸಮುದ್ರವನ್ನೂ ಕೆಂಪಾಗಿಸುತ್ತಾ.. ಸಮುದ್ರದ ನೀರು ನೀಲಿ ಹಸುರಿನ ಜೊತೆ ಕೆಂಪನ್ನೂ ಸೇರಿಸಿ ವರ್ಣರಂಜಿತ. ಅಬ್ಬಾ ನೋಡಲು ಕಣ್ಣುಗಳೇ ಸಾಲುವುದಿಲ್ಲ! ನೋಡನೋಡುತ್ತಿದ್ದಂತೆಯೇ ಸೂರ್ಯ ಸಮುದ್ರದೊಳಗೆ ಕರಗಿಯೇ ಹೋದ. ನೋಡಲು ಕೂತವರ ಮುಖದ ಮೇಲಿನ ಭಾವನೆಗಳ ಜೊತೆ ಆಕಾಶದ ರಂಗೂ ಸೇರಿ ಸುತ್ತಮುತ್ತೆಲ್ಲ ಕೆಂಪಾದವೋ ಎಲ್ಲಾ ಕೆಂಪಾದವೋ.. ಆ ನೀಲಿ ಸಾಗರ, ಸುತ್ತಲಿದ್ದ ಹಸುರು ಮರಗಳು, ಕೂತ ನಾವಷ್ಟೂ ಜನರೂ ಕೆಂಪಾದೆವು!! ಸಂಜೆಯಾ ರಾಗಕೆ ಬಾನು ಕೆಂಪೇರಿದೆ!! ಅಕ್ಷರಶಃ ಕೆಂಪೇರಿತ್ತು. ಎದ್ದು ಬರಲು ಯಾರಿಗೂ ಮನಸ್ಸಿಲ್ಲ.ಹಾಗೇ ಕಾಲೆಳೆದು ನಡೆದು ಬರುವಾಗ ಮಸುಕು ಕತ್ತಲಲ್ಲಿ ಕೆಂದಾಳೆ ಸೀಯಾಳವನ್ನು ಮಾರುತ್ತಾ ನಿಂತವನನ್ನು ದಾಟುವಾಗ ಒಮ್ಮೆಲೇ ಎಲ್ಲರಿಗೂ ಎಳನೀರು ಕುಡಿಯುವ ಬಯಕೆಯಾಯಿತು. ಅದ್ಭುತ ರುಚಿಯ ಆ ಕೆಂದಾಳೆಯ ನೀರು ಒಂದೇ ಚಿಟಿಕೆ ಉಪ್ಪು ಬೆರೆಸಿದ ಹಾಗೆ ಇತ್ತು. ನಮ್ಮನ್ನು ನೋಡಿ ಇನ್ನೂ ಕೆಲವರು ಸೇರಿದರು. ನೋಡ ನೋಡುತಿದ್ದಂತೆ ಅವನ ಸೈಕಲಲ್ಲಿದ್ದ ಅಷ್ಟೂ ಎಳನೀರು ಮಾರಾಟವಾಗಿ ಹೋಯಿತು. ಬಸ್ಸು ಹತ್ತುವುದರೊಳಗೆ ದೊಡ್ಡವಳು.. ಅಮ್ಮಾ ಅಮ್ಮಾ ಅಮ್ಮಾ ನೋಡಿಲ್ಲಿ ಇವಳು ಜೆನಿಶಾ.. ಇದು ಇವಳ ಗಂಡ ಪ್ರವೀಣ್. ಎಂದು ಪರಿಚಯ ಮಾಡಿ ಕೊಟ್ಟಳು.ಶ್… ಏನಿದು.. ಇದು, ಗಂಡ. ಹಾಗೆಲ್ಲಾ ಅನ್ನಬಾರದು ಅಂದೆ.ಆಯ್ತಮ್ಮಾ ನೀನು ಕೂತ್ಕೊ ಎಂದು ಅವರ ಹರಟೆಯಲ್ಲಿ ಅವರು ಮಗ್ನರಾದರು. ಅಷ್ಟರವರೆಗೆ ಇಬ್ಬರು ಹುಡುಗಿಯರು ಒಬ್ಬ ಹುಡುಗ ಒಬ್ಬರಿಗೊಬ್ಬರು ಕೀಟಲೆ ಮಾಡಿಕೊಂಡಿದ್ದವರಿಗೆ ಈಗ ಇನ್ನಿಬ್ಬರು ಸೇರಿ ಅವರ ಲೋಕವೇ ಬೇರೆಯಾಯ್ತು. ಈ ರೆಸಾರ್ಟ್ ತುಂಬಾ ದೊಡ್ಡದಾಗಿದ್ದು ಪ್ರತ್ಯೇಕ ಕಾಟೇಜ್ ಗಳು ತುಂಬಾ ಚೆನ್ನಾಗಿದ್ದವು. ಸುತ್ತಲೂ ಮರಗಿಡಗಳು, ನಮ್ಮನ್ನು ಬಾರ್ಜಲ್ಲಿ ಕರೆದುಕೊಂಡು ಬಂದು ಹೌರಾ ಬ್ರಿಜ್ ನೋಡಲು ಹೋದಾಗ ನಮ್ಮ ಲಗ್ಗೇಜ್ ಗಳು ಇಲ್ಲಿ ಈ ರೆಸಾರ್ಟಲ್ಲಿ ಬಂದು ಕೂತಿದ್ದವು. ನಮ್ಮ ನಮ್ಮ ಕಾಟೇಜ್ ಯಾವುದೆಂದು ನಮಗೆ ತಿಳಿಸಿ, ನಮ್ಮ ಲಗ್ಗೇಜ್ ಗಳನ್ನು ಅಲ್ಲಿನ ಹುಡುಗರು ತಂದಿರಿಸಿದರು. ನಾವೆಲ್ಲಾ ಮತ್ತೊಮ್ಮೆ ಸ್ನಾನ ಮಾಡಿ ಶುಚಿಯಾಗಿ ಎಂಟು ಗಂಟೆಗೆ ರೆಸ್ಟೋರೆಂಟ್ ಗೆ ಬರಬೇಕು ಎಂದು ಹೇಳಿದ್ದರಿಂದ ಅಲ್ಲೇ ಹೋಗಿ ಕೂತೆವು. ಮಾರನೆ ದಿನದ ಕಾರ್ಯಕ್ರಮದ ಬಗ್ಗೆ ತಿಳಿಸಲು ರಾಕೇಶ್ ಮತ್ತು ದರ್ಶನ್ ನಿಂತಿದ್ದರು.ನಾಳೆ ನೀಲ್ ಐಲ್ಯಾಂಡ್ ಲ್ಲಿರುವ ಡೈವಿಂಗ್ ಸ್ಪಾಟ್ ಲ್ಲಿ ಸ್ಕೂಬಾ ಡೈವಿಂಗ್, ಸ್ನೊರ್ಕ್ಲಿಂಗ್, ಗಾಜಿನ ತಳದ ದೋಣಿಯಲ್ಲಿ ಸಮುದ್ರಯಾನ ಮುಂತಾದ ಚಟುವಟಿಕೆಗಳಿಗಾಗಿ ಕರೆದುಕೊಂಡು ಹೋಗುತ್ತೇವೆ. ಸ್ಕೂಬಾ ಡೈವಿಂಗ್ ಮಾಡುವಆಸಕ್ತಿ ಉಳ್ಳವರು ತಯಾರಾಗಿರಿ. ಮದ್ಯಾಹ್ನದವರೆಗೆ ಸಮುದ್ರದ ಬಳಿ ಕಾಲ ಕಳೆದು ಊಟದ ನಂತರ ಮತ್ತೆ ನಾವು ಹಡಗಿನಲ್ಲಿ ಪೋರ್ಟ್ ಬ್ಲೇರ್ ಗೆ ಹೋಗುವವರಿದ್ದೇವೆ ಎಂದು ತಿಳಿಸಿದರು. ರಾತ್ರಿ ಒಳ್ಳೆಯ ನಿದ್ರೆ ಅತೀ ಅವಶ್ಯಕ, ಸಾಕಷ್ಟು ನೀರು ಕುಡಿಯುತ್ತಾ ಇರಿ. ಮತ್ತು ನಾಳೆ ಬೆಳಗಿನ ಉಪಹಾರದಲ್ಲಿ ಎಣ್ಣೆ ಪದಾರ್ಥವನ್ನು ಸೇವಿಸಬೇಡಿ. ಬ್ರೆಡ್, ಬನ್ ಮತ್ತು ಹಣ್ಣುಗಳನ್ನು ಸೇವಿಸಿದರೆ ಒಳ್ಳೆಯದು ಎಂದು ಸೂಚನೆಗಳನ್ನು ಕೊಟ್ಟರು. ಬೆಳಿಗ್ಗೆ ನಿಗದಿತ ಸಮಯಕ್ಕೆ ತಯಾರಾಗಿ ನಮ್ಮ ಸಾಮಾನುಗಳ ಜೊತೆಗೆ ರೆಸ್ಟೋರೆಂಟ್ ಗೆ ಬಂದು ಉಪಹಾರ ಸೇವಿಸಿ ಲಗ್ಗೇಜ್ ಗಳನ್ನು ಅಲ್ಲಿಯೇ ಬಿಟ್ಟು ನಾವೆಲ್ಲರೂ ಬಸ್ಸಿನಲ್ಲಿ ಸಮುದ್ರ ತೀರಕ್ಕೆ ಹೋದೆವು. ಈ ನನ್ನ ಪ್ರವಾಸ ಕಥನದಲ್ಲಿ ನಮ್ಮ‌ ಸುಖಪ್ರವಾಸದ ಬಗ್ಗೆ ನಿಮಗೆ ನನಗೆ ನೆನಪಿದ್ದಷ್ಟು ತಿಳಿಸುತಿದ್ದೇನೆ. ಪ್ರವಾಸ ವೆಂದರೆ ಸಾಹಸ ಎಂದುಕೊಂಡವರಿಗೆ ನೀರಸವೆನಿಸಬಹುದು.ಸಾಮಾನ್ಯವಾಗಿ ನಾವು ಸಂಸಾರದ ಏಕತಾನತೆಯಿಂದ ಬಿಡುಗಡೆ ಹೊಂದಲು ಒಂದಿಷ್ಟು ಸಮಯವನ್ನು ಬೇರೆ ವಾತಾವರಣದಲ್ಲಿ ಕಳೆಯಲು ಎಂದು ಹೋಗುತ್ತೇವೆ. ಆದರೆ ಬಂದ ಮೇಲೆ ಹೋದ ಖುಷಿಗಿಂತ ಕಿರಿಕಿರಿಯೇ ಜಾಸ್ತಿ ಅನಿಸಿ, ಯಾಕಾದರೂ ಹೋಗಬೇಕಿತ್ತೋ! ಅನಿಸುವುದೂ ಇದೆ. ನಾವು ಅಂಡಮಾನ್ ಗೆ ಹೋಗಿ ಬಂದು ಒಂದು ವರ್ಷದ ಮೇಲಾಯ್ತು. ಬಂದ ಕೂಡಲೇ ಬರೆಯಬೇಕು ಎಂದುಕೊಂಡಿದ್ದೆ. ಏನು ಬರೆದರೂ ನಮ್ಮ ಮಧುರ ಅನುಭವಕ್ಕಿಂತ ಸಪ್ಪೆ ಅನಿಸುತಿತ್ತು. ಹಾಗಾಗಿ ಕೈ ಬಿಟ್ಟಿದ್ದೆ. ಅದಾದ ಸ್ವಲ್ಪ ದಿನಕ್ಕೆ ಕೊರೊನಾ, ಲಾಕ್ ಡೌನ್ ಎಂದು ಬೇರೆಯೇ ಪ್ರಪಂಚದಲ್ಲಿದ್ದಂತೆ ದಿನ ಕಳೆದ ಮೇಲೆ ಅಂಡಮಾನ್ ನೆನಪು ಮರೆತೇ ಹೋಗಿತ್ತು. ಇತ್ತೀಚೆಗೆ ರೇಖಾ ಗೌಡ ಅವರು ಪೂರ್ಣ ಚಂದ್ರ ತೇಜಸ್ವಿಯವರ ಅಂಡಮಾನ್ ಪ್ರವಾಸ ಮತ್ತು ನೈಲ್ ಮಹಾನದಿ ಎಂಬ ಪುಸ್ತಕ ಓದಿ ಅಂಡಮಾನ್ ಬಗ್ಗೆ ಬಹಳ ಆಸೆಯಿಂದ ಬರೆದಿದ್ದರು. ಆಗ ನಾವು ಹೋಗಿ ಬಂದ ವಿಷಯ ಹೇಳಿದ್ದೆ ಅವರಿಗೆ. ನೀವು ನಿಮ್ಮ ಅನುಭವ ಬರೆಯಿರಿ ಎಂದು ತುಂಬಾ ಒತ್ತಾಯಿಸಿದರು. ಬರೆಯಲು ಶುರು ಮಾಡಿದಾಗ ಏನೂ ಸರಿಯಾಗಿ ನೆನಪಿರಲಿಲ್ಲ. ಆಮೇಲಾಮೇಲೆ ಒಂದೊಂದೇ ನೆನಪಾಗಲು ತೊಡಗಿತು. ನಾನೂ ಐದಾರು ದಿನಗಳಿಂದ ಅಂಡಮಾನ್ ಲ್ಲೇ ಇದ್ದಂತೆ ಅನಿಸುತ್ತಿದೆ. (ಮುಂದುವರೆಯುತ್ತದೆ..) ********* ಶೀಲಾ ಭಂಡಾರ್ಕರ್.

Read Post »

ಕಾವ್ಯಯಾನ

ಕವಿತೆಯ ಜೀವನ

ಕವಿತೆ ಕವಿತೆಯ ಜೀವನ ಟಿಪಿ.ಉಮೇಶ್ ಅಸಹಾಯಕ ಅಕ್ಷರದ ಕಾಲುಗಳ ಊರುತ್ತಾಪೇಲವ ಮುಖ ಚಿಹ್ನೆಗಳ ಹೊತ್ತು ಬಂದವುಪ್ರೇಯಸಿಯ ಮನೆಗೆ;ಭಿಕ್ಷಾಂದೇಹಿ!ಕೆದರಿದ ಕೂದಲು ಕೆಸರಾದ ಕೈಕಾಲು ಹರಿದ ಬಟ್ಟೆಗಳ ಮುಗ್ಗಲು ನಾರುತ್ತಿರುವಕವಿತೆಗಳ ಕಂಡೊಡನೆ;ಪ್ರೇಯಸಿ ಅನ್ನ ಹಾಕುವುದಿರಲಿಒಂದು ಹಸನಾದ ಮಾತುಹಸನ್ಮುಖ ನಗುವನ್ನು ತೋರದೆದಡಾರನೆ ಕದವಿಕ್ಕಿಗೊಂಡು ಒಳ ಹೋದಳು!ಮರುದಿನಕವಿತೆಪತ್ರಿಕೆಯಲ್ಲಿ ರಾರಾಜಿಸುತ್ತಿದೆ!!ಬಹುಖ್ಯಾತಿಗೊಂಡು ಮನೆ ಮನ ಬೀದಿ ಓಣಿಗಳಲ್ಲಿ ಕುಣಿಯುತ್ತಿದೆ!ಪ್ರೇಯಸಿ ದಾರಿಗಿಳಿದು ಬಂದವಳೇ;ಕವಿತೆಯ ಬೆನ್ನ ನೇವರಿಸಿದಂತೆ ಮಾಡಿಜುಟ್ಟು ಹಿಡಿದುಕೊಂಡುದರದರನೆ ಮನೆಯ ಒಳಗೆ ಎಳೆದೊಯ್ದಳು! ಬೀದಿಯಲ್ಲಿ ನಿಶ್ಯಬ್ಧ!ಮನೆಯಲ್ಲಿ ಸಶಬ್ಧ! ಅವರ ಮನೆ ಕತೆ ನಮಗೆ ನಿಮಗೇಕೆಲೋಕದ ಡೊಂಕು ಕೊಂಕು ತಿದ್ದಲು ನಾನ್ಯಾರು ನೀವ್ಯಾರು? ಕವಿತೆಗೆ ತನ್ನ ಮನೆ ದಕ್ಕಿತಲ್ಲ;ಅನುಭವಿಸಲಿ ಬಿಡಿ ಇನ್ನಾದರೂ ಜೀವನ!

ಕವಿತೆಯ ಜೀವನ Read Post »

ಇತರೆ

ಚೆಗುವೆರ ಎಂಬ ಮುಗಿಯದ ಪಯಣ

ಕವಿತೆ ಚೆಗುವೆರ ಎಂಬ ಮುಗಿಯದ ಪಯಣ ಚೆ ಗುವೆರ ೧೯೨೮ ಲ್ಲಿ ರೊಸಾರಿಯೋ,ಅರ್ಜೆಂಟೀನದಲ್ಲಿ ಹುಟ್ಟಿದರು. ಇವರು ಜನಪ್ರಿಯವಾಗಿ ಚೇ ಗುವಾರ, ಎಲ್ ಚೇ ಅಥವ ಬರಿ ಚೇ ಎಂದು ಕರೆಯಲ್ಪಡುತ್ತಾರೆ. ಅರ್ಜೆಂಟೀನಾದಲ್ಲಿ ಹುಟ್ಟಿದ ಮಾರ್ಕ್ಸ್ ವಾದಿ, ಕ್ರಾಂತಿವಾದಿ, ರಾಜಕೀಯ ವ್ಯಕ್ತಿ, ಮತ್ತು ಕ್ಯೂಬ ಮತ್ತು ಅಂತರರಾಷ್ಟ್ರೀಯ ಗೆರಿಲ್ಲಾಗಳ ನಾಯಕ.  ಅವರು ಬ್ಯೂನಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಪಡೆದರು. ವೈದ್ಯನಾಗಲು ಕನಸುಕಂಡಿದ್ದ ಆತ ತನ್ನ ರಜಾದಿನಗಳಲ್ಲಿ ಲ್ಯಾಟಿನ್ ಅಮೆರಿಕದ ಉದ್ದಕ್ಕೂ ಪ್ರವಾಸ ಕೈಗೊಂಡಿದ್ದ.  ಈ ಸಮಯದಲ್ಲಿ ಆತನಲ್ಲಿ ಆದ ಅನುಭವಗಳು ಮತ್ತು ವೀಕ್ಷಣೆಗಳು ಆತನಲ್ಲಿ ಒಂದು ಪ್ರಬಲವಾದ ನಿರ್ಣಯಕ್ಕೆ ಕಾರಣವಾಯಿತು ಅದೇನೆಂದರೆ ಆ ಪ್ರದೇಶದಲ್ಲಿ ಬೇರುಬಿಟ್ಟ ಆರ್ಥಿಕ ಅಸಮಾನತೆ ,ಬಂಡವಾಳಶಾಹಿ, ಏಕಸ್ವಾಮ್ಯತೆ, ತತ್ತ್ವ , ಸಾಮ್ರಾಜ್ಯಶಾಹಿ ಮತ್ತಿತರ ಆಂತರಿಕ ಬಿಕ್ಕಟ್ಟುಗಳು ತೊಲಗಬೇಕಾದರೆ ಇರುವ ಒಂದೇ ಒಂದು ಮಾರ್ಗವೆಂದರೆ ಅದೇ ಕ್ರಾಂತಿ. ಈ ನಂಬಿಕೆಯೇ ಅಧ್ಯಕ್ಷ ಜಾಕೋಬ್ ಅರ್ಬೆಂಜ್ನ ಗ್ವಾಟೆಮಾಲಾ ಸಾಮಾಜಿಕ ಸುಧಾರಣೆಯ ಪಕ್ಷ ಸೇರಲು ಪ್ರೇರೇಪಿಸಿತು. ನಂತರ, ಮೆಕ್ಸಿಕೋ ಸಿಟಿಯಲ್ಲಿ ವಾಸಿಸುತ್ತಿರುವಾಗಲೇ ರೌಲ್ ಮತ್ತು ಫಿಡೆಲ್ ಕ್ಯಾಸ್ಟ್ರೋರ ಭೇಟಿಯಾಗಿ ಅವರ ಜುಲೈ ೨೮ರ ಚಳುವಳಿಯನ್ನು ಸೇರಿದನು ನಂತರ US ಬೆಂಬಲಿತ ಕ್ಯೂಬಾದ ಸರ್ವಾಧಿಕಾರಿ ಫಲ್ಜೆಂಸಿಯೋ ಬಟಿಸ್ಟಾ ನನ್ನು ಅಧಿಕಾರದಿಂದ ಕಿತ್ತುಹಾಕುವ ಉದ್ದೇಶದಿಂದ ಗ್ರನ್ಮ ಎಂಬ ಹಡಗಿನಲ್ಲಿ ಕ್ಯೂಬಾ ತಲುಪಿದನು.  ಗುವೆರಾ ಅತೀ ಶೀಘ್ರದಲ್ಲೇ ಬಂಡುಕೋರರ ನಡುವೆ ಪ್ರಸಿದ್ಧಿಯನ್ನು ಪಡೆದಕಾರಣವಾಗಿ ಎರಡನೆಯ ಅಧಿಕಾರಿಯಾಗಿ ಬಡ್ತಿ ನೀಡಲಾಯಿತು ಮತ್ತು ಬಟಿಸ್ಟಾ ಆಡಳಿತ ಪದಚ್ಯುತಗೊಂಡನಂತರ ತನ್ನ ವಿಜಯದ ಎರಡು ವರ್ಷದ ಗೆರಿಲ್ಲಾ ಅಭಿಯಾನದಲ್ಲಿ ಪ್ರಮುಖ ಪಾತ್ರವಹಿಸಿದ್ದನು ,೧೯೬೪ರಲ್ಲಿ ಗುವೇರಾ ತನ್ನ ಕ್ರಾಂತಿಯನ್ನು ಉತ್ತೇಜಿಸುವ ಉದ್ದೇಶದಿಂದ ಕ್ಯೂಬಾವನ್ನು ಬಿಟ್ಟು ವಿದೇಶ ಪ್ರವಾಸನ್ನು ಕೈಗೊಂಡಿದ್ದ. ಅಕ್ಟೋಬರ್ ೯, ೧೯೬೭ರಂದು CIA ನೆರವಿನಿಂದ ಬೊಲಿವಿಯದಲ್ಲಿ ಸೆರೆಹಿಡಿದು ಅಧಿಕಾರಿಗಳ ಕಟ್ಟಪ್ಪಣೆಯಿಂದ ಗುವೇರನನ್ನು ಗುಂಡುಹೊಡೆದು ಕೊಲ್ಲಲಾಯಿತು. ಗುವೇರ ಪ್ರಬಲ ಬರಹಗಾರ, ದಿನಚರಿಗಾರನೂ ಕೂಡ ಆಗಿದ್ದ ಆತನ ಗೆರಿಲ್ಲಾ ಸಮರ ಕೈಪಿಡಿ ಮತ್ತು ತನ್ನ ಲ್ಯಾಟಿನ್ ಅಮೆರಿಕಾದ ಪ್ರವಾಸದ ಘಟನಾವಳಿಗಳನ್ನು ಒಳಗೊಂಡ ದ ಮೋಟರ್ ಸೈಕಲ್ ಡೈರೀಸ್ ಉತ್ತಮವಾಗಿ ಮಾರಾಟಗೊಂಡ ಕೃತಿಗಳು.  ೨೦೦೪ರಲ್ಲಿ ಸ್ಪೇನ್ ಭಾ‌ಷೆಯಲ್ಲಿ ಚಲನಚಿತ್ರವಾದ ‘ದ ಮೋಟರ್ ಸೈಕಲ್ ಡೈರೀಸ್’ ವಿಮರ್ಶಕರಿಂದ ಉತ್ತಮ ವಿಮರ್ಶೆಯನ್ನು ಪಡೆದು ಯಶಸ್ವಿಚಿತ್ರವೆನಿಸಿತು. ಗುವೇರ ತನ್ನ ಹುತಾತ್ಮದ ಪರಿಣಾಮವಾಗಿ ಒಂದು ಐತಿಹಾಸಿಕ ಪಾತ್ರವಾಗಿ ಬಹುಸಂಖ್ಯೆಯ ಜೀವನಚರಿತ್ರೆ, ಪ್ರಬಂಧ, ಸಾಕ್ಷ್ಯಚಿತ್ರ, ಹಾಡುಗಳು, ಮತ್ತು ಚಿತ್ರಗಳಾಗಿ ಇನ್ನೂ ಬದುಕಿದ್ದಾನೆ. ಟೈಮ್ ನಿಯತಕಾಲಿಕವು ಈತನನ್ನು ೨೦ನೇ ಶತಮಾನದ ೧೦೦ ಅತ್ಯಂತ ಪ್ರಭಾವಿಶಾಲಿ ವ್ಯಕ್ತಿಗಳಲ್ಲಿ ಒಬ್ಬ ಎಂದು ಪ್ರಕಟಿಸಿತ್ತು. Guerrillero Heroico ಎಂಬ ಈತನ ಚಿತ್ರವನ್ನು ವಿಶ್ವದಲ್ಲೇ ಅತ್ಯಂತ ಪ್ರಸಿದ್ಧ ಛಾಯಾಚಿತ್ರ ಎಂದು ಕರೆಯಲಾಗುತ್ತದೆ. ಗುವೇರನನ್ನು ಎರ್ನೆಸ್ಟಿಲೋ ಎಂದೇ ಕರೆಯಲಾಗುತ್ತಿತ್ತು, ತೀವ್ರವಾದಿ ಪ್ರವೃತ್ತಿಗಳ ಕುಟುಂಬದಿಂದ ಬೆಳೆದುಬಂದಿದ್ದ ಗುವೇರನಿಗೆ ಬಾಲ್ಯದಿಂದಲೇ ರಾಜಕೀಯ ದೃಷ್ಠಿಕೋನಗಳು ಅಘಾಧವಾಗಿ ಬೆಳೆಯತೊಡಗಿತ್ತು. ಅವನ ತಂದೆ ಸ್ಪಾನಿಷ್ ಗಣರಾಜ್ಯದ ನಾಗರಿಕ ಯುದ್ಧದ ಧೃಡಬೆಂಬಲಿಗರಾಗಿದ್ದರು ಸಾಮಾನ್ಯವಾಗಿ ಅನೇಕ ಪರಿಣಿತರಿಗೆ ಗುವೇರನ ಮನೆಯಲ್ಲೆ ಔತಣಕೋಟದ ಆತಿಥ್ಯವನ್ನು ಏರ್ಪಡಿಸಲಾಗುತ್ತಿತ್ತು. ತನ್ನ ಜೀವನದುದ್ದಕ್ಕೂ ಅಸ್ತಮ ರೋಗದಿಂದ ಬಳಲುತ್ತಿದ್ದರೂ ಆತ ಒಬ್ಬ ಉತ್ತಮ ಕ್ರೀಡಾಪಟು,ಈಜುಗಾರ,ಫುಟ್ಬಾಲ್,ಗಾಲ್ಫ್ ಹಾಗು ಅತ್ಯುತ್ತಮ ಸೈಕಲ್ ಸವಾರನಾಗಿದ್ದ ಮತ್ತು ಅತ್ಯಾಸಕ್ತ ರಗ್ಬಿ ಯೂನಿಯನ್ ಆಟಗಾರನೂ ಆಗಿದ್ದ ಆತನ ಆಟದ ಶೈಲಿ ಅವನಿಗೆ Fuser(ಸಂಯೋಜಕ) ಎಂಬ ಅಡ್ಡಹೆಸರನ್ನು ತಂದಿತ್ತು. ೨೨ ವರ್ಷದ ಚೆ ಗುವೆರ,೧೯೫೧ ಗುವೇರ ತಂದೆಯಿಂದ ಚೆಸ್ ಆಡುವುದನ್ನು ಕಲಿತನು ತನ್ನ ೧೨ನೇ ವಯಸ್ಸಿನಲ್ಲೇ ಸ್ಥಳೀಯ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಪ್ರಾರಂಭಿಸಿದನು. ಪ್ರೌಢಾವಸ್ಥೆಯಲ್ಲಿ ಮತ್ತು ಜೀವನದುದ್ದಕ್ಕೂ ಕಾವ್ಯದ ಬಗ್ಗೆ ಅಪಾರವಾದ ಅಭಿಮಾನ ಹೊಂದಿದ್ದನು,ವಿಶೇಷವಾಗಿ ಪಬ್ಲೊ ನೆರುಡ,ಜಾನ್ ಕೀಟ್ಸ್,ಆಂಟೋನಿಯೊ ಮಕಾಡೋ,ಫೆಡೆರಿಕೋ ಗಾರ್ಸಿಯಾ ಲೋರ್ಕಾ,ಗಾಬ್ರಿಯೆಲ ಮಿಸ್ಟ್ರಲ್,ಸೀಜರ್ ವ್ಯಾಲೆಜೊ, ಮತ್ತು ವಾಲ್ಟ್ ವಿಟ್ಮನ್ ಅವರ ಕಾವ್ಯಗಳು ಅತ್ಯಂತ ಇಷ್ಟವಾದವುಗಳು,ರುಡ್ಯಾರ್ಡ್ ಕಿಪ್ಲಿಂಗ್ ಅವರ “If—” ಹಾಡು ಬಾಯಿಪಾಟವಾಗಿ ಹೋಗಿತ್ತು. ಗುವೇರನ ಮನೆಯಲ್ಲಿ ೩೦೦೦ಕ್ಕಿಂತ ಹೆಚ್ಚು ಪುಸ್ತಕಗಳಿದ್ದವು ಇದೇ ಅವನನ್ನು ಉತ್ಸಾಹಿ ಮತ್ತು ವಿಶಾಲದೃಷ್ಟಿಯ ಓದುಗನನ್ನಾಗಿ ಮಾಡಿತ್ತು .ಕಾರ್ಲ್ ಮಾರ್ಕ್ಸ್, ವಿಲಿಯಂ ಫಾಲ್ಕ್ನರ್, ಆಂಡ್ರೆ ಗೈಡ್, ಎಮಿಲಿಯೊ ಸಲ್ಗಾರಿ ಮತ್ತು ಜೂಲ್ಸ್ ವರ್ನೆ ಜೊತೆಗೆ ಜವಾಹರಲಾಲ್ ನೆಹರು, ಫ್ರ್ಯಾನ್ಝ್ ಕಾಫ್ಕ, ಆಲ್ಬರ್ಟ್ ಕ್ಯಾಮಸ್, ವ್ಲಾಡಿಮಿರ್ ಲೆನಿನ್, ಮತ್ತು ಜೀನ್ ಪಾಲ್ ಸಾರ್ತ್ರೆ; ಹಾಗೆಯೇ ಅನಾಟೊಲೆ ಫ್ರಾನ್ಸ್, ಫ್ರೆಡ್ರಿಕ್ ಎಂಗೆಲ್ಸ್, HG ವೆಲ್ಸ್, ಮತ್ತು ರಾಬರ್ಟ್ ಫ್ರಾಸ್ಟ್ ಅವರ ಕೃತಿಗಳನ್ನು ಆನಂದಿಸಿ ಓದುತ್ತಿದ್ದ. ಬೆಳೆದಂತೆಲ್ಲಾ ಲ್ಯಾಟಿನ್ ಅಮೆರಿಕನ್ ಬರಹಗಾರರಾದ ಹೊರಾಸಿಯೊ ಕ್ವಿರೋಗಾ, ಸಿರೊ ಅಲ್ಜಿರಿಯಾ, ಜೋರ್ಜ್ ಇಖಾಜಾ, ರುಬೆನ್ ಡರಿಯೊ ಮತ್ತು ಮಿಗುಯೆಲ್ ಆಸ್ಟೂರಿಯಸ್ ರವರ ಬರಹಗಳ ಬಗ್ಗೆ ಆಸಕ್ತಿಯನ್ನು ಬೆಳೆಸಿಕೊಂಡ ಈ ಲೇಖಕರ ಪರಿಕಲ್ಪನೆಗಳನ್ನು ಮತ್ತು ಸಿದ್ಧಾಂತಗಳನ್ನು ತನ್ನ ಕೈ ಬರಹದ ಪುಸ್ತಕದಲ್ಲಿ ದಾಖಲಿಸತೊಡಗಿದ. ಇವುಗಳಲ್ಲಿ ಬುದ್ಧ ಮತ್ತು ಅರಿಸ್ಟಾಟಲ್‌ನ ವಿಶ್ಲೇಷಣಾತ್ಮಕ ರೇಖಾಚಿತ್ರಗಳು ಬರ್ಟ್ರಾಂಡ್ ರಸ್ಸೆಲ್ ನ ಪ್ರೀತಿ ಮತ್ತು ದೇಶಭಕ್ತಿ, ಜಾಕ್ ಲಂಡನ್ ನ ಸಮಾಜದ ಮೇಲೆ, ನೀತ್ಸೆಯ ಸಾವಿನ ಕಲ್ಪನೆ ಸಿದ್ಧಾಂತಗಳನ್ನು ತನ್ನದೇ ಆದ ರೀತಿಯಲ್ಲಿ ಪರೀಕ್ಷಿಸುವುದು ಒಳಗೊಂಡಿದ್ದವು. ಶಾಲೆಯಲ್ಲಿ ಈತನ ನೆಚ್ಚಿನ ವಿಷಯಗಳೆಂದರೆ ತತ್ವಶಾಸ್ತ್ರ,ಗಣಿತಶಾಸ್ತ್ರ,ರಾಜಕೀಯ ವಿಜ್ಞಾನ,ಸಮಾಜಶಾಸ್ತ್ರ,ಇತಿಹಾಸ ಮತ್ತು ಪ್ರಾಕ್ತನ ಶಾಸ್ತ್ರ. ವರ್ಷಗಳ ನಂತರ, ಫೆಬ್ರವರಿ ೧೩, ೧೯೫೮ರಂದು ಬಹಿರಂಗಗೊಂಡ CIA ಜೀವನಚರಿತ್ರೆ ಮತ್ತು ವ್ಯಕ್ತಿತ್ವ ವರದಿ ಯಲ್ಲಿ ಅವನ ಶೈಕ್ಷಣಿಕ ಆಸಕ್ತಿಗಳನ್ನು ಮತ್ತು ಬುದ್ಧಿಶಕ್ತಿಯನ್ನು ಗಮನಿಸಿ ಆತನನ್ನು ಒಬ್ಬ ಬುದ್ದಿವಂತ ಲ್ಯಾಟಿನ್ ಅಮೇರಿಕದ ನಿವಾಸಿ ಎಂದು ಹೇಳಲಾಗಿದೆ. ೧೯೪೮ರಲ್ಲಿ ಗುವೇರ ಔಷಧ ಅಧ್ಯಯನಕ್ಕಾಗಿ ಬ್ಯೂನಸ್ ವಿಶ್ವವಿದ್ಯಾಲಯ ಪ್ರವೇಶಿಸಿದನು. ಜಗತ್ತನ್ನು ಅನ್ವೇಶಿಸುವ ತನ್ನ ಮಹದಾಸೆ ಮೂಲಭೂತವಾಗಿ ಲ್ಯಾಟಿನ್ ಅಮೆರಿಕಾದ ಸಮಕಾಲೀನ ಆರ್ಥಿಕ ಪರಿಸ್ಥಿತಿಗಳನ್ನು ಎರಡು ದೀರ್ಘ ಆತ್ಮಶೋಧಕ ಪ್ರಯಾಣದ ಜೊತೆಗೆ ಅನ್ವೇಷಿಸಿದರು. ೧೯೫೦ರಲ್ಲಿ ಮೊದಲ ದಂಡಯಾತ್ರೆ, ಒಂದು ಸಣ್ಣ ಮೋಟರ್ ಒಳಗೊಂಡಿರುವ ಸೈಕಲ್ ಮೇಲೆ ಉತ್ತರ ಅರ್ಜೆಂಟೀನಾ ಗ್ರಾಮೀಣ ಪ್ರಾಂತ್ಯಗಳಲ್ಲಿ ಒಂಟಿಯಾಗಿ ಪ್ರವಾಸಕೈಗೊಂಡನು ಪ್ರಯಾಣದ ಉದ್ದವು ೪,೫೦೦ ಕಿಲೋಮೀಟರ್ ಆಗಿತ್ತು. ನಂತರದ ಪ್ರವಾಸ ೧೯೫೧ರಲ್ಲಿ ದಕ್ಷಿಣ ಅಮೆರಿಕಾದಾದ್ಯಂತ, ಇದು ೯ ತಿಂಗಳು ಮತ್ತು ೮,೦೦೦ ಕಿಲೋಮೀಟರ್ ಒಳಗೊಂಡ ಯಾತ್ರೆಯಾಗಿತ್ತು. ಎರಡನೆಯದಕ್ಕೆ ಒಂದು ವರ್ಷಗಳ ಕಾಲ ವಿಧ್ಯಾಭ್ಯಾಸಕ್ಕೆ ವಿರಾಮ ತೆಗೆದುಕೊಂಡನು ತನ್ನ ಗೆಳೆಯ ಆಲ್ಬರ್ಟೊ ಗ್ರನಡೋ ಜೊತೆಗೂಡಿ ಅಮೆಜಾನ್ ನದಿಯ ಮೇಲೆ, ಪೆರುವಿನಲ್ಲಿ SAN PABLO ಕುಷ್ಠರೋಗಿಗಳ ಕಾಲೋನಿಯಲ್ಲಿ ಸ್ವಯಂ ಸೇವಕರಾಗಿ ಕೆಲವು ವಾರಗಳವರೆಗೆ ಸೇವೆಸಲ್ಲಿಸುವುದು ಅಂತಿಮ ಗುರಿಯಾಗಿತ್ತು. ಚಿಲಿಯಲ್ಲಿ ಅನಕೊಂಡಾದ ಚುಕ್ವಿಕೆಮೇಟಾ ತಾಮ್ರದ ಗಣಿಯಲ್ಲಿ ಗಣಿಗಾರರ ಕೆಲಸದ ಸ್ಥಿತಿಗತಿಗಳು ಗುವೇರನನ್ನು ಕೆರಳಿಸಿತು, ಅಟಾಕಾಮಾ ಮರುಭೂಮಿಯ ರಾತ್ರಿಯಲ್ಲಿ ಒಂದು ಹೊದಿಕೆಯನ್ನು ಸಹ ಹೊಂದಿರದ ಕಮ್ಯುನಿಸ್ಟ್ ದಂಪತಿಗಳ ಜೊತೆ ರಾತ್ರಿಯನ್ನು ಕಳೆದ ಮತ್ತವರನ್ನು ಬಂಡವಾಳಶಾಹಿ ಶೋಷಣೆಯ ಬಲಿಪಶುಗಳು ಎಂದು ಅವರ ನಿಜಸ್ಥಿತಿಯನ್ನು ವಿವರಿಸಿದ. ಮಚ್ಚು ಪಿಚ್ಚು ಗೆ ಹೋಗುವ ದಾರಿಯಲ್ಲಿ ಆಂಡ್ಸ್ ಪರ್ವತದ ಮೇಲ್ಭಾಗದಲ್ಲಿ ದೂರದ ಗ್ರಾಮೀಣ ಪ್ರದೇಶಗಳಲ್ಲಿ ಶ್ರೀಮಂತ ಭೂಮಾಲೀಕರು ತಮ್ಮ ಒಡೆತನದ ಭೂಮಿಯನ್ನು ಅಲ್ಲಿನ ಬಡರೈತರಿಂದ ಕೃಷಿಮಾಡಿಸುತ್ತಿರುವುದನ್ನು ಕಂಡನು. ನಂತರ ತನ್ನ ಪ್ರಯಾಣದಲ್ಲಿ ಕುಷ್ಠರೋಗದ ಕಾಲೋನಿಯಲ್ಲಿ ವಾಸಿಸುವ ಜನರ ನಡುವೆ ಇರುವ ನಿಕಟಸ್ನೇಹವನ್ನು ಕಂಡು ಪ್ರಭಾವಿತನಾದ, ಮಾನವ ಐಕಮತ್ಯ ಮತ್ತು ನಿಷ್ಠೆ ಅತ್ಯಧಿಕವಾಗಿ ಒಂಟಿಯಾಗಿರುವ ಮತ್ತು ಹತಾಶರಾದ ಜನರಲ್ಲಿ ಕಾಣಸಿಗುತ್ತದೆ ಎಂದು ಹೇಳಿಕೆ ನೀಡಿದ್ದ.  ಗುವೇರ ತನ್ನ ಪ್ರವಾಸದಲ್ಲಿ ಬಳಸಿದ್ದ ಟಿಪ್ಪಣಿಗಳು ‘ದ ಮೋಟರ್ ಸೈಕಲ್ ಡೈರೀಸ್’ ಎಂಬ ಹೆಸರಿನೊಂದಿಗೆ ಪ್ರಕಟವಾಯಿತು ನಂತರ ನ್ಯೂಯಾರ್ಕ್ ಟೈಮ್ಸ್ ನ ಉತ್ತಮ ಮಾರಾಟವಾದ ಪುಸ್ತಕವೂ ಆಯಿತು. ೨೦೦೪ರಲ್ಲಿ ಸ್ಪಾನಿಷ್ ಭಾಷೆಯಲ್ಲಿ ಅದೇ ಹೆಸರಿನ ಪ್ರಶಸ್ತಿ ವಿಜೇತ ಚಿತ್ರವಾಗಿ ಹೊರಹೊಮ್ಮಿತು. ತನ್ನ ಮನೆ ಬ್ಯೂನಸ್ ಏರ್ಸ್ಗೆ ಮರಳುವ ಮುನ್ನ ಗುವೇರ ಒಟ್ಟು ಅರ್ಜೆಂಟೀನಾ, ಚಿಲಿ, ಪೆರು, ಈಕ್ವೆಡಾರ್, ಕೊಲಂಬಿಯಾ, ವೆನೆಜುವೆಲಾ, ಪನಾಮ ಮತ್ತು ಮಿಯಾಮಿಯೆಲ್ಲೆಡೆ ಸುತ್ತಾಡಿಬಂದಿದ್ದ, ಪ್ರವಾಸದ ಕೊನೆಯಲ್ಲಿ ಅವನ ಕಲ್ಪನೆಯಲ್ಲಿ ಲ್ಯಾಟಿನ್ ಅಮೇರಿಕವು ಮಿತಿಯಿಲ್ಲದ ಸಾಮಾನ್ಯ ಲ್ಯಾಟಿನ್ ಪರಂಪರೆಯನ್ನೊಳಗೊಂಡ ಪ್ರತ್ಯೇಕ ರಾಷ್ಟ್ರಗಳ ಸಂಗ್ರಹವಲ್ಲ ಬದಲಿಗೆ ವಿಮೋಚನೆಯಾಗಬೇಕಾಗಿರುವ ಭೂಖಂಡದ ವಿಶಾಲ ಘಟಕವೆಂಬಂತೆ ಕಾಣಿಸಿತು.  ಅರ್ಜೆಂಟೀನಾಗೆ ಮರಳಿದ ನಂತರ ತನ್ನ ಅಧ್ಯಯನವನ್ನು ಪೂರ್ಣಗೊಳಿಸಿ ಜೂನ್ ೧೯೫೩ರಲ್ಲಿ ವೈದ್ಯಕೀಯ ಪದವಿಯನ್ನು ಪಡೆದರು ಮತ್ತು ಅಧಿಕೃತವಾಗಿ ಡಾ||ಎರ್ನೆಸ್ಟೋ ಗುವೇರನಾದರು. ನಂತರ ತನ್ನ ಪ್ರಯಾಣದ ಅನುಭವದಲ್ಲಿ ಲ್ಯಾಟಿನ್ ಅಮೇರಿಕಾವನ್ನು ಟೀಕಿಸಿದರು ಲ್ಯಾಟಿನ್ ಅಮೇರಿಕಾದಲ್ಲಿ ಬಡತನ, ಹಸಿವು ಮತ್ತು ರೋಗದ ಚಿಕಿತ್ಸೆಗೆ ಹಣದ ಕೊರತೆ, ನಿರಂತರ ಹಸಿವು ಮತ್ತು ಜಡ ಸ್ಥಿತಿ ಎದ್ದು ಕಾಣುತ್ತದೆ ಈ ಜನರಿಗೆ ಸಹಾಯ ಮಾಡಬೇಕಾದರೆ ವೈದ್ಯಕೀಯ ಪದವಿ ಬಿಟ್ಟು ಪರಿಪೂರ್ಣ ಸಶಸ್ತ್ರ ಹೋರಾಟದ ಅಗತ್ಯವಿದೆ ಎಂದು ಮನಗಂಡರು. ಜುಲೈ 7, 1953 ರಂದು, ಗುವೇರ ಸವಾರಿ ಮತ್ತೆ ಹೊರಟಿತು ಈ ಬಾರಿ ಬಲ್ಗೇರಿಯಾ, ಪೆರು, ಈಕ್ವೆಡಾರ್, ಪನಾಮ, ಕೋಸ್ಟಾ ರಿಕಾ, ನಿಕರಾಗುವಾ, ಹೊಂಡುರಸ್ ಮತ್ತು ಎಲ್ ಸಾಲ್ವಡಾರ್. ಡಿಸೆಂಬೆರ್ ೧೦ರಂದು ಗ್ವಾಟೆಮಾಲಾ ಬಿಟ್ಟು ಹೊರಡುವ ಮುನ್ನ ಸ್ಯಾನ್ ಜೋಸ್, ಕೋಸ್ಟ ರಿಕಾದಿಂದ ತನ್ನ ಚಿಕ್ಕಮ್ಮ ಬೀಟ್ರಿಜ್ಗೆ ಒಂದು ಸಂದೇಶವನ್ನು ಕಳುಹಿಸಿದ, ಆ ಪತ್ರದಲ್ಲಿ United Fruit Company ಆಡಳಿತದ ಬಗ್ಗೆ ಮತ್ತು ಬಂಡವಾಳಶಾಹಿಗಳ ಕ್ರೂರತನದ ಬಗ್ಗೆ ಮನವರಿಕೆಮಾಡಿದ್ದ . ಗ್ವಾಟೆಮಾಲಾ ನಗರದಲ್ಲಿ, ಗುವೇರ ಪೆರುವಿಯನ್ ಅರ್ಥಶಾಸ್ತ್ರಜ್ಞ “ಹಿಲ್ಡಾ ಗಡಿಯ ಅಕೋಸ್ಟಾ ಳನ್ನು” ಆಶ್ರಯಿಸಿದ್ದ, ಆತ “APRA, American Popular Revolutionary Alliance” ಸಂಗದ ಉತ್ತಮ ರಾಜಕೀಯ ಸದಸ್ಯನಾಗಿದ್ದಳು.ಆಕೆಯಿಂದ Arbenz ಸರ್ಕಾರದ ಉನ್ನತ ಮಟ್ಟದ ಹಲವಾರು ಅಧಿಕಾರಿಗಳ ಪರಿಚಯವಾಯಿತು. ನಂತರ ಕ್ಯೂಬಾದ ಬಹಿಷ್ಕೃತರ ಸಮೂಹ ಸಂಪರ್ಕದಿಂದ ಫಿಡೆಲ್ ಕ್ಯಾಸ್ಟ್ರೋನ ಪರಿಚಯವಾಯಿತು, ಈ ಅವಧಿಯಲ್ಲಿ ಗುವೇರ “ಚೆ” ಎಂಬ ಅಡ್ಡಹೆಸರಿನಿಂದ ಪ್ರಸಿದ್ಧಿಗಳಿಸಿದನು. ಈ ಅವಧಿಯಲ್ಲಿ ಸಶಸ್ತ್ರ ಹೋರಾಟ ಮತ್ತು ಶಿಕ್ಷೆಯ ಮೂಲಕವೇ ಮಾತ್ರ ಸಾಮ್ರಾಜ್ಯಶಾಹಿ ಧೋರಣೆಯ ವಿರುದ್ಧ ಜನಸಾಮಾನ್ಯರ ರಕ್ಷಣೆ ಮತ್ತು ಬಲಪಡಿಸುವುದು ಸಾಧ್ಯ ಎಂದು ಗುವೇರನಿಗೆ ಮನವರಿಕೆ ಮಾಡಿಕೊಟ್ಟಿದ್ದು ಗ್ವಾಟೆಮಾಲ ನಗರ ಎಂದು “ಗಡೆಯ” ತಾನು ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದ. ************************************ ಆಶಾ ಸಿದ್ದಲಿಂಗಯ್ಯ

ಚೆಗುವೆರ ಎಂಬ ಮುಗಿಯದ ಪಯಣ Read Post »

You cannot copy content of this page

Scroll to Top