ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

(ಇಂದು ಲಂಕೇಶರ ಜನ್ಮದಿನಕ್ಕೊಂದು ಗಜಲ್

ಸಿದ್ಧರಾಮ ಹೊನ್ಕಲ್

ಯಾರಿಗೂ ಏನನ್ನೂ ಬೇಡಲಿಲ್ಲ,ಬಯಸಲಿಲ್ಲ ಈ ಲಂಕೇಶರು
ಎಲ್ಲರಿಗೂ ಪಾಪಪ್ರಜ್ಞೆಯಾಗಿ ಕಾಡದೇ ಬಿಡಲಿಲ್ಲ ಈ ಲಂಕೇಶರು

ತಾನು ನಡೆದದ್ದು ಬರೀ ದಾರಿಯಲ್ಲ ಈ ಲಂಕೇಶರಿಗೆ
ಅದು ರಾಜಮಾರ್ಗವೆಂದು ತೋರಿದನಲ್ಲ ಈ ಲಂಕೇಶರು

ಕನ್ನಡದ ಮೇರು ಲೇಖಕ ಮೇಲಾಗಿ ನಿರ್ಭೀತ ಪತ್ರಕರ್ತ
ಶತಮಾನದ ದೃಷ್ಟಿಕೋನ ಬದಲಿಸಿದನಲ್ಲ ಈ ಲಂಕೇಶರು

ಕಥೆ,ಕವಿತೆ,ಪತ್ರಿಕೆ,ಸಿನೆಮಾ ನಿರ್ದೇಶನ ಹೀಗೆ ನಡೆದಂತೆಲ್ಲಾ ದಾರಿಗಳು
ದಾರಿಯಗುಂಟ ಇದ್ದ ಮುಳ್ಳುಗಳ ಹಸನಾಗಿಸಿದರಲ್ಲ ಈ ಲಂಕೇಶರು

ಯಾರಿಗೂ ಅಂಜಲಿಲ್ಲ ಅಳುಕಲಿಲ್ಲ ಯಾರ ಬಿಢೆಗೂ ಬೀಳಲಿಲ್ಲ
“ಹೊನ್ನಸಿರಿ”ಕರ್ನಾಟಕಕ್ಕೆ ಹೊಸ ಮನ್ವಂತರ ಸೃಷ್ಟಿಸಿದರಲ್ಲ ಈ ಲಂಕೇಶರು


About The Author

1 thought on “ಲಂಕೇಶರ ಜನ್ಮದಿನ”

Leave a Reply

You cannot copy content of this page

Scroll to Top