ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಅಂದು ಕಾಳಿದಾಸ ಈ ನಾಟಕ ಬರೆದ ಸಮಯ ಈಗಿನ ಸಮಯಕ್ಕೂ ತುಂಬಾ ಅಂತರ ವಿದ್ದರೂ ಪರಿಸ್ಥಿತಿ ಮಾತ್ರವೇ ಬದಲಾಗಿಲ್ಲ. ಇಂದಿನ ಮಕ್ಕಳು ಗುಟ್ಟಾಗಿ ಪ್ರೀತಿಸಿ ಓಡಿಹೋಗಿ ಮದುವೆಯಾಗಿ ಮುಂದಿನ ದಿನಗಳಲ್ಲಿ ಎಡವಟ್ಟಾಗಿ ತುಂಬಾ ನೋವು ಅನುಭವಿಸುತ್ತಾರೆ. ಪಾಲಕರಿಗೂ ಕಷ್ಟ ಕೊಡುತ್ತಾರೆ.ಅದರಲ್ಲೂ ಹೆಚ್ಚು ಕಷ್ಟಕ್ಕೆ ಗುರಿಯಾಗುವವರು ಅಪ್ಪ ಅಮ್ಮ.
ಪ್ರಾಯದ ಬಿಸಿಯಲ್ಲಿ  ಪ್ರೀತಿಯ ಗುಂಡಿಗೆ ಬೀಳಲು ಒಂದು ಕ್ಷಣ ಸಾಕು. ಆದರೆ ಒಬ್ಬರನ್ನು ಒಬ್ಬರು ಅರಿತುಕೊಳ್ಳದೇ ಆಕರ್ಷಣೆಗೆಪ್ರೀತಿಸಿದರೆ ಅದು ಹೆಚ್ಚುಕಾಲ ಉಳಿಯವುದು ಅಕ್ಷರಶಃ ಸುಳ್ಳು.  ಯಾವ ವ್ಯಕ್ತಿಯ ಗುಣ ಸರಿಯಾಗಿ ಗೊತ್ತಿರುವುದಿಲ್ಲವೋ ಅಂತಹ ವ್ಯಕ್ತಿಯು ವೈರಿಯಾಗುತ್ತಾನೆ. ಅಂದಾಗಲಿ ಇಂದಾಗಲಿ ಸಂಬಂಧಗಳೇ ಸಾಕ್ಷಿಯನ್ನು ಹೇಳುತ್ತವೆ.  ನಾವಿಬ್ಬರೂ ಮದುವೆಯಾಗಿದ್ದೇವೆ ಎಂದರೆ  ಸಾಕ್ಷಿ ತೋರಿಸಲು ಕೋರ್ಟು ಕೇಳುತ್ತದೆ. ಅಂದು ದುಷ್ಯಂತನು  ಶಕುಂತಳೆಗು ಅದನ್ನೆ ಕೇಳಿದ್ದು. 

ಅದಕ್ಕೆ ಗುಟ್ಟಾಗಿ ಮದುವೆ ಮಾಡಿಕೊಂಡು ಹೆತ್ತವರಿಗೂ ಸಂಬಂಧಿಕರಿಗೂ ಅವಮಾನ ಮಾಡಬೇಡಿ. ಜೀವ ಚಿಕ್ಕದು, ಜೀವನ ದೊಡ್ಡದು.  ಎಲ್ಲರ ಒಪ್ಪಿಗೆಯಿಂದ ನಡೆದ ಮದುವೆಗಳಲ್ಲಿ ಏನಾದರೂ ತೊಂದರೆಯಾದರೆ ಹೇಳಲು  ನಿಮ್ಮವರು ಎಲ್ಲರೂ ಇರುತ್ತಾರೆ.ಗುಟ್ಟಾಗಿ ಮದುವೆಯಾಗಿ ಆತ್ಮಹತ್ಯಗೆ ಶರಣಾಗಿ ಹೆತ್ತವರ ಮನಸ್ಸು ನೋಯಿಸಬೇಡಿ.

ಅಂದು ದುಷ್ಯಂತ ಶಕುಂತಳೆಯ ಮದುವೆ ಸಾಕ್ಷಿಯಾಗಿದ್ದುದು ಒಂದು ಉಂಗುರ, ಹಾಗು ಕಣ್ವಾಶ್ರಮದಲ್ಲಿದ್ದ ಒಂದು ಜಿಂಕೆ ಮಾತ್ರವೆ.  ಆದರೆ ಉಂಗುರ ಕಳೆದಿತ್ತು .  ಪಾಪ ಜಿಂಕೆ ಸಾಕ್ಷ್ಯ ಯಾರು ಕೇಳುತ್ತಾರೆ?  


About The Author

1 thought on ““ರಹಸ್ಯ ಪ್ರೇಮ ವಿವಾಹ ಒಳ್ಳೆಯದಲ್ಲ”ವಿಶೇಷ ಲೇಖನ ವನಜ ಮಹಾಲಿಂಗಯ್ಯ”

Leave a Reply

You cannot copy content of this page

Scroll to Top