ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ಜೀವನ

“ಮನೋಬಲ ಮುಗಿಲೆತ್ತರಕ್ಕೇರಿಸಿದರೆ ದುರಂತದ ನೋವೂ ನಗಣ್ಯ!!” ಜಯಶ್ರೀ.ಜೆ.ಅಬ್ಬಿಗೇರಿ

ಬದುಕಿನ ಸಂಗಾತಿ ಜಯಶ್ರೀ.ಜೆ.ಅಬ್ಬಿಗೇರಿ “ಮನೋಬಲ ಮುಗಿಲೆತ್ತರಕ್ಕೇರಿಸಿದರೆ ದುರಂತದ ನೋವೂ ನಗಣ್ಯ!!” ಸುತ್ತು ಬಳಸಿ ಮತ್ತೆ ಮತ್ತೆ ಸಮಸ್ಯೆಗಳೆಲ್ಲ ನನ್ನ ಪಾಲಿಗೆ ಏಕೆ ಬರುತ್ತಿವೆ? ಉಳಿದವರೆಲ್ಲ ಹಾಯಾಗಿದ್ದಾರೆ ನನಗೆ ಮಾತ್ರ ಹೀಗಾಗುತ್ತಿದೆ. ಎಂದು ಬಹಳಷ್ಟು ಸಲ ಅಂದುಕೊಳ್ಳುತ್ತೇವೆ.. ಪ್ರೀತಿ ಪಾತ್ರರು ಮರಣಿಸಿದಾಗ, ಬಹಳಷ್ಟು ಇಷ್ಟ ಪಟ್ಟದ್ದು ಸಿಗದೇ ಇದ್ದಾಗ, ಅಂದುಕೊoಡದ್ದು ಅಂದುಕೊoಡoತೆ ಆಗದೇ ಇದ್ದಾಗ ನನ್ನ ಬದುಕಿನಲ್ಲಿ ದುರಂತಗಳ ಸರಮಾಲೆ ಬೆನ್ನು ಬಿಡದ ಬೇತಾಳನಂತೆ ಬೆನ್ನು ಹತ್ತಿವೆ. ನನಗೇ ಏಕೆ ಹೀಗೆ ಆಗುತ್ತೆ? ಎನ್ನುವ ಪ್ರಶ್ನೆ ತಲೆ ಹೊಕ್ಕು ಕಟ್ಟಿಗೆ ಹುಳು ಕೊರೆಯುವಂತೆ ಕೊರೆಯುತ್ತದೆ. ಪದೇ ಪದೇ ತೊಂದರೆ ಕೊಡುವ, ನಮ್ಮನ್ನು ಏಳ್ಗೆ ಆಗದಂತೆ ತಡೆಯುವ ಈ ಪ್ರಶ್ನೆಯಿಂದ ಬಚಾವಾಗುವುದು ಹೇಗೆ? ಎಂದು ಯೋಚಿಸುತ್ತೇವೆ. ಅಲ್ಲವೇ? ಈ ಕಾಡುವ ಯೋಚನೆಗೆ ಪೂರ್ಣ ವಿರಾಮ ಹಾಕಲು ಸಹಕಾರಿಯಾಗುವ ಅಂಶಗಳತ್ತ ಒಮ್ಮೆ ಗಮನ ಹರಿಸಿ.ಸುತ್ತ ಕಣ್ಣು ಹರಿಸಿ ದುರಂತಗಳು ಸಂಭವಿಸಿದಾಗ, ವಿಷಮ ಗಳಿಗೆಯಲ್ಲಿ ಭವಿಷ್ಯದ ದಾರಿಯೇ ಕಾಣದೇ ಕತ್ತಲೆಯಲ್ಲಿ ಕುಳಿತಾಗ ನನಗೇಕೆ ಹೀಗೆ? ಎನ್ನುವ ಮನಸ್ಥಿತಿಯಿಂದ ಹೊರಬಂದು ನಿಮ್ಮಸುತ್ತ ಮುತ್ತಲಜನ-ಜೀವನದೆಡೆಗೆ ಕಣ್ಣು ಹರಿಸಿ ಇತರರು ನಿಮ್ಮಂತೆ ಸಮಸ್ಯೆಯಲ್ಲಿದ್ದರೂ ಅದನ್ನು ದೊಡ್ಡದಾಗಿಸಿದೇ ನಗುವ ಮೊಗವ ಹೊತ್ತು ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿರುತ್ತಾರೆ. ಆದ ನೋವಿನ ಕಡೆ ಹೆಚ್ಚು ಗಮನ ಕೊಡದೇ ನೋವುಂಡರೂ ನಗುವ ಪ್ರಯತ್ನ ಮಾಡುತ್ತಾರೆ. ಇತರರ ದುಃಖಕ್ಕೆ ಕಿವಿಗೊಡುವದರಲ್ಲಿ ಸಂತೃಪ್ತಿ ಕಾಣುತ್ತಾರೆ. ‘ನಾನು ಬರಿಗಾಲಲ್ಲಿ ನಡೆಯಬೇಕಿದೆ ನನ್ನ ಬಳಿ ಪಾದರಕ್ಷೆಗಳಿಲ್ಲ ಎಂದು ಕಣ್ಣೀರಿಡುತ್ತಿರುವಾಗ ಕಾಲಿಲ್ಲದವನನ್ನು ಕಂಡೆ ನನ್ನ ನೋವು ನೋವೇ ಅಲ್ಲ ಅನಿಸಿತು. ದೇವರಿಗೆ ಕೃತಜ್ಞನಾಗಿರಬೇಕು ನಾನು.’ ಎಂದೊಮ್ಮೆ ವಿಲಿಯಮ್ ಶೇಕ್ಸ್ಪಿಯರ್ ಹೇಳಿದ ಮಾತು ಎಷ್ಟೊಂದು ಮಾರ್ಮಿಕವಾಗಿದೆ. ದುರಂತವೆoದರೆ ನಾವು ನಮ್ಮ ಸುತ್ತ ರೇಷ್ಮೆ ಹುಳುವಿನಂತೆ  ಗೂಡು ಕಟ್ಟಿಕೊಂಡು ಯಾರೋ ನಮ್ಮನ್ನು ಮೇಲೇಳದಂತೆ ತಡೆಯುತ್ತಿದ್ದಾರೆ ಎಂದು ಗೋಳಿಡುವುದುಕಣ್ಣು ಹೊರನೋಟಗಳನ್ನು ನೋಡಲಿ.  ಅಂತರಗಣ್ಣಿನಿoದ ಪರಾಮರ್ಶಿಸಲಿ. ಆಗ ನಿಮಗೆ ಬಂದ ಸಂಕಟ ಏನೂ ಅಲ್ಲವೇ ಅಲ್ಲ ನನಗಿಂತ ಕಷ್ಟದಲ್ಲಿರುವವರು ತುಂಬಾ ಜನರಿದ್ದಾರೆ. ನನಗೆ ದೇವರು  ಅಂಥ ದುಸ್ಥಿತಿ ಬರದಂತೆ ಕಾಪಾಡಿದ್ದಾನೆ ಎಂದೆನಿಸುವುದು.ದುಃಖದಿoದ ಹೊರಬಂದು ಅದೇ ಅನುಭವ ಪಡೆದ ಇತರರ ಬಗ್ಗೆ ಯೋಚಿಸಿ. ಅವರೊಂದಿಗೆ ಮಾತನಾಡಿ ಆಗ ಅವರ ಬಗೆಗೆ ನಿಮಗೆ ಅನುಕಂಪ ತಾದ್ಯಾತ್ಮತೆ ಮೂಡುತ್ತದೆ.ನೀವಿನ್ನೂ ಅನುಕೂಲಕರ ಪರಿಸ್ಥಿತಿಯಲ್ಲಿರುವಿರಿ ಎಂದೆನ್ನಿಸುವುದು.   ದುರ್ಘಟನೆ ಆಹ್ವಾನಿಸದಿರಿ ಎಲ್ಲ ದುರಂತಗಳು  ಒಮ್ಮಿಂದೊಮ್ಮೆಲೇ ಧುತ್ತನೇ ಘಟಿಸುವುದಿಲ್ಲ. ಕೆಲವೊಂದು ನಮ್ಮ ಸ್ವಯಂ ಕೃತ ತಪ್ಪುಗಳಿಂದ ಉದಾಸೀನತೆಯಿಂದ ಘಟಿಸುತ್ತವೆ. ಅವುಗಳನ್ನು ನಾವೇ ಕೈ ಹಿಡಿದು ತಂದು ನಮ್ಮ ಬಾಳಲ್ಲಿ ಮಣೆ ಹಾಕಿ ಕೂಡ್ರಿಸಿ ಕೊಳ್ಳುತ್ತೇವೆ.ನಮಗರಿವಿಲ್ಲದಂತೆ ಗೆದ್ದಲು ಹುಳುವಿನಂತೆ ನಮ್ಮ ಅಸ್ತಿತ್ವವನ್ನು ಇಲ್ಲದಂತೆ ಮಾಡಲು ದಿನವೂ ಕಾರ್ಯನಿರತಆಗಿರುತ್ತವೆ ತುರ್ತು ಜರೂರು ಮಹತ್ವದ ವಿಷಯಗಳನ್ನು ಪರಿಗಣಿಸಿ ಕ್ರಿಯಾಶೀಲರಾದರೆ, ನಡೆಯುವ ದುರ್ಘಟನೆಗಳ ಅವಕಾಶದ ಬಾಗಿಲು ಮುಚ್ಚಿದರೆ ಸದಾ ಕಾಲಕ್ಕೂ ಮುಚ್ಚಿ ಹೋಗುತ್ತವೆ. ಇನ್ನು ನಿಮ್ಮ ನಿಯಂತ್ರಣದಾಚೆಗೆ ನಡೆವ ದುರಂತಗಳಿಗೆ ಪ್ರತಿಯಾಗಿ  ಸಹನ ಶಕ್ತಿಯಿಂದ ದಿಟ್ಟತನದಿಂದ ಪ್ರತಿಕ್ರಿಯಿಸಿದರೆ ಸಮಸ್ಯೆ ಉಲ್ಬಣಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ.ಏಳು ಬಾರಿ ಟೂರ್ ಡೇ ಫ್ರಾನ್ಸ್ ಗೆದ್ದ  ಲ್ಯಾನ್ಸ್ ಆರ್ಮಸ್ಟಾ ಹೀಗೆ ಹೇಳುತ್ತಾರೆ.‘ಬಹಳಷ್ಟು ಜನರು ಕೊನೆಗೆ ಇಟ್ಟುಕೊಳ್ಳುವ ಶೇಕಡಾ ಒಂದು ಮೀಸಲು ಶಕ್ತಿಯು ಕ್ರೀಡಾಪಟು ಬಳಸಲು ದಿಟ್ಟತನ ತೋರುವ ಹೆಚ್ಚುವರಿ ಶಕ್ತಿಯಾಗಿದೆ.’ಈ ಹೇಳಿಕೆಯಂತೆ  ನಮ್ಮ ದಿಟ್ಟತನದಿಂದ ತೋರುವ ಹೆಚ್ಚುವರಿ ಶಕ್ತಿಯ ಸದುಪಯೋಗಪಡಿಸಿಕೊಳ್ಳಿ. ಸಹಜವಾಗಿರಿ ಸದಾ ಇತರರೊಂದಿಗೆ ಹೋಲಿಸಿಕೊಳ್ಳುವುದನ್ನು ಕೈ ಬಿಡಬೇಕು. ಈ ಹೋಲಿಕೆ ಇತರರಿಗಿಂತ ಕೆಳ ಮಟ್ಟದಲ್ಲಿದ್ದೇನೆ ಎಂದು ನಿತ್ರಾಣಗೊಳಿಸುವ ಕೀಳರಿಮೆ ಇಲ್ಲವೇ ಮೇಲರಿಮೆಯ ಅಹಂಕಾರವನ್ನು ಹುಟ್ಟು ಹಾಕುತ್ತದೆ. ನಿಮ್ಮ ನಿಜ ಸ್ವರೂಪ ನೀಡದ ಕಲ್ಪಿತ ಭ್ರಮಾಲೋಕವು ಇಲ್ಲದ ತೊಂದರೆಗಳನ್ನು ತಂದು ನಿಮ್ಮ ಬದುಕಿನ ಮಡಿಲಲ್ಲಿ ಚೆಲ್ಲುತ್ತದೆ. ನಿಜದಲ್ಲಿ ತಾನು ತಾನಾಗದ ಹುಸಿ ಲೋಕದಲ್ಲಿ ಸಮಸ್ಯೆಗಳ ಜಾಲವನ್ನು ಮೈ ಮೇಲೆ ಎಳೆದುಕೊಳ್ಳುವಂತೆ ಮಾಡುತ್ತದೆ. ಕೆಲವೊಮ್ಮೆ ನುಡಿಯಲ್ಲಿ ಎಚ್ಚೆತ್ತುಕೊಳ್ಳುತ್ತೇವೆ. ನಡೆಯಲ್ಲಿ ತಪ್ಪುತ್ತೇವೆ. ಜ್ಞಾನ ಕ್ರಿಯೆಗಳು ಸಮನಾಗಿರಿಸಿ ನಡೆಯುವುದು ಹಗ್ಗದ ಮೇಲಿನ ನಡಿಗೆ ಇದ್ದಂತೆ. ಹೂದೋಟದಲ್ಲಿ ಮೈ ಅರಳಿಸಿ ನಿಂತ ಹೂಗಳು ತನಗಿಂತ ದೊಡ್ಡ ಇಲ್ಲ ಚಿಕ್ಕ ಹೂಗಳನ್ನು ನೋಡಿ ಕಣ್ಣ ಹನಿ ಸುರಿಸುವುದಿಲ್ಲ. ತನ್ನಷ್ಟಕ್ಕೆ ತಾನೆ ಬಿಮ್ಮನೇ ಅರಳಿ ಗಾಳಿ ಬೀಸಿದಲ್ಲೆಲ್ಲ ತನ್ನ ಕಂಪು ಸೂಸುವವು. ಬಿರಿದ ಕುಸುಮಗಳಂತೆ ಸಹಜವಾಗಿರಿ. ಛಲ ಬಲ ತುಂಬಿಕೊಳ್ಳಿ ಅಮಾನುಷ, ಭೀಕರ, ಹೃದಯ ವಿದ್ರಾವಕ, ಘೋರ ಹತ್ಯಾಕಾಂಡಗಳಲ್ಲಿ ಸಾವಿನ ಬಾಗಿಲು ತಟ್ಟಿ ಬಂದವರು ಸಮರ್ಥವಾಗಿ ಬದುಕಿ ತೋರಿದವರು  ಸಾಧನೆಯ ಉತ್ತುಂಗಕ್ಕೆ ಏರಿದವರು ಹಸಿರಾದ ಪ್ರೀತಿಯನ್ನು ಇತರರ ಬಾಳಲ್ಲಿ ತಂದವರ ಪಟ್ಟಿಯೇ ಇದೆ. ಇತಿಹಾಸ ಪುಟಗಳಲ್ಲಿ ದಾಖಲಾಗಿರುವ ಇಂಥ ವೀರ ಮಹನೀಯರ ಜೀವನ ಚರಿತ್ರೆಯನ್ನೊಮ್ಮೆ ಓದಿ. ನಿಮ್ಮಲ್ಲೂ ಛಲ ಬಲ ತುಂಬಿಕೊoಡರೆ  ಶೌರ್ಯದ ಖಣಿ ನೀವಾಗುವಿರಿ.   ಕವಿ ಕೆ ಎಸ್ ನಿಸ್ಸಾರ ಅಹ್ಮದ್ ರವರು  ‘ಹುದ್ದೆ ಮುದ್ದೆ ನಿದ್ದೆ ಈ ಬದುಕು ಇಷ್ಟೇ ಪೆದ್ದೆ?ಎಂಬ ಲೇಖನದಲ್ಲಿ ‘ದಿನವಹಿಯ ಊಟ ಬಟ್ಟೆಗಳ ಅಗತ್ಯಗಳನ್ನು ದಾಟದ, ಉಸಿರಾಡಿ ಅಸ್ತಿತ್ವವನ್ನು ಉಳಿಸಿಕೊಳ್ಳುವ ಅನಿವಾರ್ಯತೆಯ ಪುನರಾವರ್ತಿತ ಯಾಂತ್ರಿಕ ಚಟುವಟಿಕೆಯೇ ಅನೇಕಾನೇಕರ ಪಾಲಿಗೆ ಬಾಳ್ವೆ ಎನ್ನಿಸುತ್ತಿದೆ.’ಎಂದು ವಿಷಾದದಿಂದ ಬರೆದಿದ್ದಾರೆ.ಜೀವನದ ಪ್ರತಿ ಸಂಕುಚಿತ ದೃಷ್ಟಿಕೋನ ತೊರೆಯಿರಿ ಎಂಬ ಸಂದೇಶ ನೀಡದ್ದಾರೆ. ಪರಿಹಾರದತ್ತ ಗಮನ ಹರಿಸಿಬಂದ ಸಂಕಟದತ್ತ ನೋಡುತ್ತ ಕುಳಿತರೆ ಅದು ದಿನೇ ದಿನೇ ದೊಡ್ಡದೆನಿಸತೊಡುತ್ತದೆ. ಬೃಹದಾಕಾರವಾಗಿ ಬೆಳೆದು ನಮ್ಮನ್ನೇ ನುಂಗಿ ಬಿಡುವುದೇನೋ ಎಂಬ ಚಿಂತೆ ಆವರಿಸಿಕೊಳ್ಳುತ್ತದೆ. ಸಮಸ್ಯೆಯನ್ನು ಎಲ್ಲರ ಮುಂದೆ ಹೇಳುತ್ತ ತಿರುಗ ಬೇಡಿ. ಏಕೆಂದರೆ ಇಲ್ಲಿ ನಿಮ್ಮ ದುಃಖಗಳ ಪ್ರಚಾರಕ್ಕೆ ಜಾಗವಿಲ್ಲ. ಅದಲ್ಲದೇ ಸಮಸ್ಯೆಗಳಿಲ್ಲದವರು ಯಾರೂ ಇಲ್ಲ. ಸಮಸ್ಯೆಯ ಮೂಲ ಹುಡುಕಿದರೆ ಪರಿಹಾರ ತನ್ನಿಂದ ತಾನೇ ಹೊಳೆಯುತ್ತದೆ.ಒಮ್ಮೊಮ್ಮೆ ಅಚಾತುರ್ಯದಿಂದ ಅಲಕ್ಷö್ಯದಿಂದ ಸಮಸ್ಯೆ ಬೆಳೆದು ನಿಲ್ಲುತ್ತದೆ ಆಗ ಅನುಭವಿಕರನ್ನು ಜ್ಞಾನಿಗಳನ್ನು ಸಂಪರ್ಕಿಸಿದರೆ ಅಡ್ಡಗೋಡೆಯಾಗಿ ನಿಂತಿದ್ದ ನೋವು ತಾನೇ ಮಂಜಿನoತೆ ಕರಗುವುದು.ಕೆಲವೊಂದು ತೊಂದರೆಗಳಿಗೆ ಕಾಲವೇ ಉತ್ತರಿಸುವುದು ಕಾಲಕ್ಕಿಂತ ಉತ್ತಮ ಆರೈಕೆ ಮತ್ತೊಂದಿಲ್ಲ. ದೊಡ್ಡ ದೊಡ್ಡ ಅವಘಡಗಳಲ್ಲಿ ಕುಟುಂಬ ಸದಸ್ಯರನ್ನು  ಕಳೆದುಕೊಂಡವರು ಬೆಳಕಿನ ಆಶಾ ಕಿರಣ ಕಾಣದವರು ಜೀವನವೇ ಬೇಡ ಅಂದುಕೊoಡವರು ಬದುಕು ದುಸ್ತರ ಎಂದುಕೊoಡವರು  ಕಾಲ ಉರುಳಿದಂತೆ ಜೀವನ ಪ್ರೀತಿಗೆ ಸಿಲುಕಿ ಸಂತಸದ ಜೀವನ ಸಾಗಿಸುವುದನ್ನು ಆದರ್ಶವಾಗಿಸಿಕೊಳ್ಳಿ.  ದುಃಖ ದುಮ್ಮಾನ ಅವಮಾನಗಳ ಸರಣಿಯನ್ನೇ ಸವಾಲಾಗಿ ಸ್ವೀಕರಿಸಿ ಬದುಕಿನ ಹೋರಾಟವನ್ನು ಹೇಗೆ ಜಯಸಬೇಕೆಂಬುದನ್ನು ತೋರಿದ ಅಂಬೇಡ್ಕರ್ ಅಬ್ರಾಹಾಂ ಲಿಂಕನ್‌ರoಥವರ ದೊಡ್ಡ ಕೀರ್ತಿಗೆ ಪಾತ್ರರಾದ ಅದರ್ಶಗಳನ್ನು ಮೈಗೂಡಿಸಿಕೊಳ್ಳಲು ಪ್ರಯತ್ನಿಸಿ ನಿಮ್ಮ ವಿಚಾರ ವೈಖರಿಯನ್ನು ಬದಲಿಸಿದರೆ ಎಂದೆoದಿಗೂ ವ್ಯಥೆಯಾಗಿ ಉಳಿಯುವ ದುರಂತವೂ ಪ್ರಬಲರನ್ನಾಗಿಸುವ ಅಚ್ಚರಿ ಬದಲಾವಣೆಯನ್ನು ನೀವೇ ಗಮನಿಸಬಹುದು. ಕೊನೆ ಹನಿಮನೋಬಲ ಮುಗಿಲೆತ್ತರಕ್ಕೇರಿಸಿದರೆ ದುರಂತದ ನೋವೂ ನಗಣ್ಯ ಮನೋಬಲವನ್ನು ಬಾನಿಗೆ ಹಾರಿಸೋಣ. ಬದುಕನ್ನು ಶ್ರೇಷ್ಠ ಪಥಕ್ಕೆ ಹೊರಳಿಸೋಣ.   ಜಯಶ್ರೀ.ಜೆ.ಅಬ್ಬಿಗೇರಿ

“ಮನೋಬಲ ಮುಗಿಲೆತ್ತರಕ್ಕೇರಿಸಿದರೆ ದುರಂತದ ನೋವೂ ನಗಣ್ಯ!!” ಜಯಶ್ರೀ.ಜೆ.ಅಬ್ಬಿಗೇರಿ Read Post »

ಕಾವ್ಯಯಾನ

ನಾಗರಾಜ ಬಿ.ನಾಯ್ಕ ಕವಿತೆ “ಹೂಬೆ ಹೂಬೆ”

ಕಾವ್ಯ ಸಂಗಾತಿ ನಾಗರಾಜ ಬಿ.ನಾಯ್ಕ “ಹೂಬೆ ಹೂಬೆ” ಸೂರು ಕಾಣುವ ಬೆಳಗುಎದ್ದು ಕುಳಿತುಮುಗಿಲು ಮುಟ್ಟುವ ಹಾಡುಮನಸು ಮುಟ್ಟಿಹಂಚಿನ ಮನೆ ಮೇಲೆಚೆಂದ ಬಿಳಿ ಹೊಗೆಯಚಿತ್ತಾರ ಬಿಡಿಸುತ್ತಿತ್ತುಊರ ತುದಿ ದಂಡೆಯಲ್ಲಿದೋಣಿ ಸಾಗಿಮಡಿಕೆಯಲ್ಲಿದ್ದ ಸಾರಿನ ವಾಸನೆ ಊರು ಸುತ್ತುತ್ತಿತ್ತು ಹಳ್ಳಿಯಲ್ಲಿ ಎಲ್ಲವೂಹೂಬೆ ಹೂಬೆಯಾಗಿ ಕಂಡಂತೆಅರಳಿದ ಹೂ ಮಲ್ಲಿಗೆನೆಟ್ಟ ಕೈಗಳಿಗೆ ನಗು ಚೆಲ್ಲಿನಿಂತಿರಲು ಗಾಳಿತಂಗಾಳಿಯಾಗಿ ತಿರುಗಿಮಿಡಿ ಬಿಟ್ಟ ಮಾವುಹೂ ಸೊಬಗು ಚೆಲ್ಲಿಮರದ ಹಕ್ಕಿಗೆ ಹಾಡುಸುಮ್ಮನೇ ಹೇಳಿಸಿತ್ತುಹೊರೆ ಹೊತ್ತ ಬೆವರುಮೊಗ ತುಂಬಿದ ಕನಸುಹಸಿ ಭತ್ತದ ಸಸಿತೆನೆ ಹೊತ್ತ ಮೌನ ಸಾಲುಎಲ್ಲವೂ ಹೂಬೆ ಹೂಬೆಕಂಡಂತೆ ಈಗಲೂ ಹಳ್ಳಿದಣಪೆಯ ಆಚೆಗಿದ್ದದಾಸಾಳ ಗಿಡಕ್ಕೆಹತ್ತಾರು ಹೂಗಳುಬಂದ ಹಕ್ಕಿಗೆಹೂ ನೆರಳ ಕೊಡುವುದಂತೆಅಟ್ಟಲದ ಮರ ಹೂಬಿಟ್ಟಿದೆಯಂತೆಜೇನಿಗೆ ತುಂಬಾಕೆಲಸವಿದೆಯಂತೆಹೂಬೆ ಹೂಬೆಕಾಣುವುದು ಬಳ್ಳಿಯಂತೆಒಂದೆರಡಲ್ಲ ಹಳ್ಳಿಯ ಬಳ್ಳಿಎಲ್ಲೆಡೆ ಹಬ್ಬಿದಂತೆಊರಿಗೆ ಊರೇಗೆಳೆಯರಾದಂತೆ……. ನಾಗರಾಜ ಬಿ.ನಾಯ್ಕ.

ನಾಗರಾಜ ಬಿ.ನಾಯ್ಕ ಕವಿತೆ “ಹೂಬೆ ಹೂಬೆ” Read Post »

ಕಾವ್ಯಯಾನ, ಗಝಲ್

ಮಾಜಾನ್‌ ಮಸ್ಕಿ ಅವರ ಗಜಲ್

ಕಾವ್ಯ ಸಂಗಾತಿ ಮಾಜಾನ್‌ ಮಸ್ಕಿ ಗಜಲ್ ಬೆಳದಿಂಗಳ ನಗು ನೀನಾಗಿರುವೆಬದುಕಿನ ಬೆಳಗು ನೀನಾಗಿರುವೆ ಸಾವಿರಾರು ವೇದನೆ  ತುಂಬಿವೆನಲಿವಿನ ಗುನುಗು ನೀನಾಗಿರುವೆ ಸುಂದರ ಕನಸಿನ ಹೂದೊಟದಲ್ಲಿಸುಗಂಧದ ಸೊಬಗು ನೀನಾಗಿರುವೆ ಹಚ್ಚ ಹಸಿರಿನ ಬದುಕು ಇದಲ್ಲವೇಪ್ರಕೃತಿಯ ಬೆರಗು ನೀನಾಗಿರುವೆ ಮಾಜಾಳ ಹೃದಯ ನೀಲಾಕಾಶದಂತೆನಕ್ಷತ್ರಗಳ ಮಿನುಗು  ನೀನಾಗಿರುವೆ ಮಾಜಾನ್ ಮಸ್ಕಿ

ಮಾಜಾನ್‌ ಮಸ್ಕಿ ಅವರ ಗಜಲ್ Read Post »

ಕಾವ್ಯಯಾನ

ಎ.ಹೇಮಗಂಗಾ ಅವರ ತನಗಗಳು

ಕಾವ್ಯ ಸಂಗಾತಿ ಎ.ಹೇಮಗಂಗಾ ತನಗಗಳು ಚಿಕ್ಕದೊಂದು ರಂಧ್ರವೂಬಲಶಾಲಿಯೇ ಹೌದುತೇಲುವ ಹಡಗನ್ನುಮುಳುಗಿಸುವುದದು ಸಾಗರದ ಮೇಲಿದೆಪುಟ್ಟ ಹಿಮ ಪರ್ವತಆಳದಲ್ಲಿದೆ ಇನ್ನೂಕಾಣಲಾಗದು ಕಣ್ಣು ಭೂಮಂಡಲ ಅಗಾಧನಶ್ವರ ಜೀವಿ ನಾನುಒಯ್ಯಲಾರೆ ಏನನ್ನೂಸಾವಪ್ಪಲು ನನ್ನನ್ನು ಪ್ರಾರ್ಥಿಸು ದೇವರಲಿಆಸೆ ಫಲಿಸಲೆಂದುಶ್ರಮದಿ ಸಾಧಿಸಲುಆತ್ಮ ಶಕ್ತಿ ನೀಡೆಂದು ಮನುಜ ಬುದ್ಧಿಜೀವಿಕಟ್ಟುತ್ತಾನೆ ಈಗಲೂಹಿಮದ ದಿಮ್ಮಿ ಮನೆಹೆಸರಾಗಿದೆ ‘ ಇಗ್ಲೂ ‘ ಹಕ್ಕಿಯಂತೆ ಹಾರಿವೆಪುಕಾರುಗಳು ಇಂದುರೆಕ್ಕೆ ಪುಕ್ಕ ಪಡೆದುಬಾಯಿಯಿಂದ ಬಾಯಿಗೆ ಚುಮು ಚುಮು ಚಳಿಗೆಕಂಬಳಿ ಹೊದ್ದ ಮಂದಿಆಗಿದ್ದಾರೆ ಮುಂಜಾನೆಮನೆಯೊಳಗೇ ಬಂದಿ ಚಳಿಗಾಲದ ಚಳಿಬೇಸಿಗೆಯಲ್ಲಿ ಬಿಸಿಎರಡು ಹೆಚ್ಚಾದರೂಜನಕ್ಕೆ ತಲೆ ಬಿಸಿ ಬೆಳೆಯಬೇಕು ನೀನುಯಾರೆಷ್ಟೇ ತುಳಿದರೂಗರಿಕೆ ಹುಲ್ಲಿನಂತೆಛಲವ ಬಿಡದಂತೆ ದಣಿವನ್ನು ತೋರದೇದುಡಿಯುವಳು ತಾಯಿನಗುತ್ತಲೇ ಹೊಣೆಯಪೂರೈಸುವಳು ಮಾಯಿ ಸಾವ ತೆಕ್ಕೆಯೊಳಗೆಜೀವಗಳು ನಿರ್ಜೀವಅನಲ ಅನಾಹುತಸೂತ್ರಧಾರಿ ವಿಧಾತ ಬೆಂಕಿಯು ವ್ಯಾಪಿಸಿತುಎಲ್ಲೆಡೆ ಸರಸರಕೊನೆಗೆ ಉಳಿಯಿತುಬಸ್ಸಿನ ಕಳೇಬರ ಎ. ಹೇಮಗಂಗಾ     

ಎ.ಹೇಮಗಂಗಾ ಅವರ ತನಗಗಳು Read Post »

ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಜಯದೇವಿ ತಾಯಿ ಲಿಗಾಡೆ
ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್ ಚೇತನ
ಅವರಜೀವನಗಾಥೆ ಸವಿತಾ ದೇಶಮುಖ

Read Post »

You cannot copy content of this page

Scroll to Top