ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ನಾನೀಗ ತಮ್ಮೊಂದಿಗೆ ಹಂಚಿಕೊಳ್ಳುತ್ತಿರುವುದು ಅವಮಾನದ ಒಂದು ಪ್ರಸಿದ್ಧ ಉದಾಹರಣೆ; ಪವಿತ್ರ ನರ್ಮದಾ ನದಿಯಲ್ಲಿ ಒಮ್ಮೆ ಸಂತ ಏಕನಾಥ ಸ್ನಾನ ಮಾಡಿ ಹೊರ ಬರುತ್ತಿದ್ದ.ಆಗ ಪಠಾಣನೊಬ್ಬ ಮನದಲ್ಲಿ ವಿಷ ತುಂಬಿಕೊAಡು ಸಂತನ ಮೇಲೆ ಉಗುಳಿದ. ಏಕನಾಥ ‘ಜೈ ವಿಠ್ಠಲ’ ಎನ್ನುತ್ತ ಮತ್ತೆ ನರ್ಮದೆಗಿಳಿದ. ಈ ರೀತಿ ಮುಂಜಾನೆಯಿoದ ಸಂಜೆಯವರೆಗೂ ಇಬ್ಬರ ನಡುವೆ ನಡೆಯಿತು ಯಾರು ಸೋಲುತ್ತಾರೆಂದು ನದಿ ತಟದಲ್ಲಿ ಜನ ನಿಂತು ನೋಡುತ್ತಿದ್ದರು. ಕೊನೆಗೆ ಪಠಾಣ, ಸಂತರನ್ನು ಉದ್ದೇಶಿಸಿ ನಾನು ಯಾವುದೇ ಕಾರಣವಿಲ್ಲದೇ ನಿಮ್ಮನ್ನು ಹೀಗೆ ಅವಮಾನಗೊಳಿಸುತ್ತಿದ್ದೇನೆ ಅಶುದ್ಧಿಗೊಳಿಸುತ್ತಿದ್ದೇನೆ.ಆದರೆ ನೀವು ನನ್ನ ಮೇಲೆ ಕೋಪಿಸಿಕೊಳ್ಳದೇ ನಗುತ್ತಲೇ ನನ್ನನ್ನು ಸ್ವೀಕರಿಸುತ್ತಿದ್ದೀರಿ ಇದು ಹೇಗೆ ಸಾಧ್ಯವೆಂದು ಕೇಳಿದ. ’ನೀನು ನನ್ನ ಪೋಷಕ.’ನಿನ್ನಿಂದಾಗಿ ಇಂದು ಪವಿತ್ರ ನರ್ಮದೆಯಲ್ಲಿ ಇಷ್ಟು ಬಾರಿ ಮಿಂದೆದ್ದೆ. ನನ್ನನ್ನು ಶುದ್ಧೀಕರಿಸಿಕೊಳ್ಳಲು ಒಂದು ಅವಕಾಶ ನೀಡಿದೆ ಎಂದನoತೆ.

ಫೋರ್ಡ್ ಕಾರಿನ ಹೆನ್ರಿ ,ವಿಮಾನ ಸಂಶೋಧಿಸಿದ ರೈಟ್ ಬ್ರದರ್ಸ್, ಅಬ್ರಹಾಂ ಲಿಂಕನ್,ಇತಿಹಾಸ ಪ್ರಸಿದ್ಧ ಚಾಣಕ್ಯ, ಮಹಾತ್ಮ ಗಾಂಧಿ, ಹಿಂದಿ ಚಿತ್ರ ಲೋಕದ ದಿಗ್ಗಜ ಅಮಿತಾಬ್ ಬಚನ್, ಸಾವಿರ ಸಂಶೋಧನೆಗಳ ಸರದಾರ ಥಾಮಸ್ ಅಲ್ವಾ ಎಡಿಸನ್‌ನಂಥ ಸಾವಿರ ಗೆಲುವಿನ ಸರದಾರರು ಅವಮಾನದ ತಿರುವುಗಳನ್ನೇ ಗೆಲುವಿನ ಮೈಲಿಗಲ್ಲುಗಳನ್ನಾಗಿ ರೂಪಿಸಿಕೊಂಡಿದ್ದು ಈಗ ಇತಿಹಾಸ.

 ಅವಮಾನವನ್ನು ಹೇಗೆ ಸ್ವೀಕರಿಸುತ್ತೇವೆ ಎನ್ನುವುದರ ಮೇಲೆ ಅವು ಮೈಲಿಗಲ್ಲುಗಳಾಗುವುದು ಅವಲಂಬಿತವಾಗುತ್ತದೆ.
ಅವಮಾನವನ್ನು ಅನುಭವಿಸಿದವರು ಕೋಟಿ ಕೋಟಿ ಜನ ಆದರೆ ಅದನ್ನು ಗಂಭೀರವಾಗಿ ಕೈಗೆತ್ತಿಕೊಂಡವರ ಸಂಖ್ಯೆ   ಸಾವಿರ ಇಲ್ಲವೇ ಲಕ್ಷ ದಾಟುವುದಿಲ್ಲ. ಉಳಿದವರಿಗೆ ಸವಾಲಾಗದೇ ಕಾಡದೇ ಇದ್ದುದು ಎದುರಿಸಿ ನಿಲ್ಲಬೇಕೆನ್ನುವವರಿಗೆ ಸವಾಲಾಗಿ ಕಂಡಿದ್ದು ನಿಜ. ಅಳ್ಳೆದೆಯವರಿಗೆ ಅವಮಾನವೆಂಬ ಪದವೇ ದೂರ ಸರಿಯುವಂತೆ ಮಾಡುವುದೂ ಅಷ್ಟೇ ಸತ್ಯ. ದೂರು ಸರಿಯುವ ಬದಲು ಗಟ್ಟಿ ಧೈರ್ಯ ಮಾಡಿದರೆ ಅವಮಾನದೊಂದಿಗೆ  ಮುಖಾಮುಖಿಯಾಗಬಹುದು.

ಹಾಗಾದರೆ ಅವಮಾನವೆಂದರೇನು? ಅದರ ಲಕ್ಷಣಗಳೇನು? ಪರಿಣಾಮಗಳು ಎಂಥವು? ಅದನ್ನು ನಿರ್ವಹಿಸುವ ಕಲೆ ಹೇಗೆ ಎಂಬುದನ್ನು ತಿಳಿಯೋಣ ಬನ್ನಿ.

ಅವಮಾನವೆಂದರೆ. . . . ?

ಯಾರಿಗೂ ಹೇಳಿಕೊಳ್ಳಲಾಗದ ಅನುಮಾನದ ನೋವುಗಳನ್ನು ಎದೆಯ ತೆಕ್ಕೆಯಲ್ಲಿ ಬಚ್ಚಿಟ್ಟುಕೊಂಡು ತಿರುಗುವ ನೋವು ನಮ್ಮ ಶತ್ರುಗಳಿಗೂ ಬೇಡ. ‘

“ನಮ್ಮ ಭೀಮ ಗಾತ್ರದ ಶಕ್ತಿಗಳನ್ನು ಲವಲೇಶಕ್ಕೂ ಬೆಲೆ ಇಲ್ಲದಂತೆ ಲಘುವಾಗಿಸುವ ಪ್ರಯತ್ನ ನಡೆಸುವುದೇ ಅವಮಾನ.”

ಅವಮಾನಿಸಿಯೇ ನಮ್ಮ ಗಮನ ಸೆಳೆಯುವವರೂ ಕಾಣ ಸಿಗುತ್ತಾರೆ. ಅದಕ್ಕೆಲ್ಲ ಬೇಸರಿಸಿಕೊಳ್ಳುವ ಹಾಗಿಲ್ಲ. ಅವರ ಹೀಯಾಳಿಕೆಯನ್ನೇ ಹೆಗ್ಗಳಿಕೆಯಾಗಿಸಿಕೊಳ್ಳುವುದೇ ಜಾಣತನ. ಭಯ ಆತಂಕದಿoದಲೇ ಪಡೆಯಬೇಕಾದುದನ್ನು ಮನಸಾರೆ ಸ್ವೀಕರಿಸಿದರೂ ಅಗಾಧ ಬದಲಾವಣೆಯನ್ನು ತರುವ ಅಪಾರ ಶಕ್ತಿ ಅವಮಾನಕ್ಕೆ ಉಂಟು. ಅವಮಾನಿಸಿದವರ ಮುಂದೆ ತಲೆ ಎತ್ತಿ ಬದುಕಬೇಕೆಂದರೆ ಅವಮಾನವನ್ನೇ ಉತ್ಸಾಹವಾಗಿಸಿಕೊಳ್ಳಬೇಕು. ಅದೇ ಉತ್ಸಾಹ ನಮ್ಮನ್ನು ಉತ್ತೇಜಿಸುತ್ತದೆ. ಹೀಗೆ ದೊರೆತ ಉತ್ಸಾಹ ಬದಲಾಗುತ್ತ ಬೆಳೆಯುತ್ತ ಹೋಗುತ್ತದೆ. ಸನ್ಮಾನದತ್ತ ತಂದು ನಿಲ್ಲಿಸುತ್ತದೆ.

ಲಕ್ಷಣ

ಕಪಾಳಮೋಕ್ಷ,
ಗುದ್ದುವುದು, ಅಪಹಾಸ್ಯದ ನಗು, ಮುಖದಲ್ಲಿಯ ಅಭಿವ್ಯಕ್ತಿ  ಹೀಗೆ ದೈಹಿಕವಾಗಿರಬಹುದು. ಇಲ್ಲವೇ ಸಾಮಾನ್ಯವಾಗಿ ವ್ಯಂಗ್ಯವಾಡುವುದು, ಅಣುಕಿಸುವುದು, ಅವಾಚ್ಯ ಶಬ್ದಗಳ ಬಳಕೆ ಅಸಂಬದ್ಧ ಟೀಕೆಗಳನ್ನು ಮಾಡುವುದಿರಬಹುದು.

ಪರಿಣಾಮಗಳು

ಅವಮಾನ ಮಾಡುವ ಅಡ್ಡ ಪರಿಣಾಮಗಳು ಒಂದೇ ಎರಡೇ? ಅದರ ಪಟ್ಟಿ ಮಾಡುತ್ತ ಸಾಗಿದರೆ ಹನುಮನ ಬಾಲದಂತೆ ಬೆಳೆಯುತ್ತಲೇ ಹೋಗುತ್ತದೆ. ಮೊದಲನೆಯದಾಗಿ ನಮ್ಮ ಸಂತೋಷವನ್ನೇ ಹಾಳು ಮಾಡುತ್ತದೆ. ಆತ್ಮವಿಶ್ವಾಸವನ್ನು ಸ್ವ ಗೌರವವನ್ನು ಒಮ್ಮಿಂದೊಮ್ಮೆಲೇ ಕೆಳಕ್ಕೆ ತಳ್ಳುತ್ತದೆ.ಏಕಾಂಗಿಯಾಗಿಸುತ್ತದೆ. ಸಿಟ್ಟು ತರಿಸುತ್ತದೆ. ಆತಂಕಕ್ಕೆ ಒಳಪಡಿಸುತ್ತದೆ. ಅಷ್ಟೇ ಅಲ್ಲ ಇನ್ನೂ ಮುಂದಕ್ಕೆ ಹೋಗಿ ಖಿನ್ನತೆಯೂ ಆವರಿಸುವಂತೆ ಮಾಡುತ್ತದೆ.

ನಿರ್ವಹಿಸುವ ಬಗೆ ಹಲವು ಅವು ಇಲ್ಲಿವೆ ನೋಡಿ  

ಸಿಟ್ಟು

ಅವಮಾಕ್ಕೆ ಸಿಟ್ಟಿನಿಂದ ಉತ್ತರಿಸುವುದು ನಿಜಕ್ಕೂ ತುಂಬ ಅಶಕ್ತವೆನಿಸುತ್ತದೆ. ಅವಮಾನಿಸಿದವರನ್ನು ಮತ್ತು ಅವಮಾನವನ್ನು ಅತಿ ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎನ್ನುವುದನ್ನು ಎತ್ತಿ ತೋರಿಸುತ್ತದೆ. ಅವಮಾನದಲ್ಲಿ ಸತ್ಯವಿದೆ ಎನಿಸುತ್ತದೆ. ಮನದ ಸ್ಥಿರತೆಯನ್ನು ತಗ್ಗಿಸುತ್ತದೆ. ಮತ್ತಷ್ಟು ಅವಮಾನಕ್ಕೆ ಎಡೆಮಾಡುತ್ತದೆ. ಹೀಗಾಗಿ ಅವಮಾನವನ್ನು ಸಿಟ್ಟಿನಿಂದ ಎದುರಿಸುವುದ ಅಷ್ಟು ಸೂಕ್ತವಲ್ಲ ಎನಿಸುತ್ತದೆ.

ಸ್ವೀಕರಿಸುವಿಕೆ

ಮೇಲ್ನೋಟಕ್ಕೆ ಅವಮಾನವನ್ನು ಸ್ವೀಕರಿಸುವುದು ಅಶಕ್ತವೆನಿಸಿದರೂ ಸಶಕ್ತ ವಿಧಾನವಾಗಿದೆ. ಅವಮಾನಿತಗೊಂಡಾಗ ಮೂರು ವಿಷಯಗಳನ್ನು ಪರಿಗಣಿಸಬೇಕು. ಅವಮಾನ ಸತ್ಯದ ಆಧಾರದ ಮೇಲಿದೆಯೇ? ಅವಮಾನಿಸಿದವರು ಯೋಗ್ಯರೇ? ಅವಮಾನ ಏಕೆ ಮಾಡಲ್ಪಟ್ಟಿತು? ಸತ್ಯವೆನಿಸಿದರೆ, ಯೋಗ್ಯರೆನಿಸಿದರೆ, (ಪಾಲಕರು, ಗುರುಗಳು, ಗೆಳೆಯರು) ಉದ್ದೇಶ ಒಳ್ಳೆಯದಿತ್ತು ಎನಿಸಿದರೆ ಅವಮಾನವ ಮಾಡಿದವರು ನೀವು ಗೌರವಿಸುವ ವ್ಯಕ್ತಿಯಾಗಿದ್ದರೆ ಆ ಅವಮಾನವನ್ನು ಉಡಾಫೆ ಮಾಡುವಂತಿಲ್ಲ. ಅದನ್ನು ಗಂಭೀರವಾಗಿ ಪರಿಗಣಿಸಬೇಕು. ಸತ್ಯಾಸತ್ಯತೆಯನ್ನು ಅರಿತು ಬದಲಾಗಲು ಸ್ವೀಕರಿಸಬೇಕು.

ಮರಳಿಸುವಿಕೆ

ಅವಮಾನವನ್ನು ಮರಳಿಸುವಿಕೆಯಲ್ಲಿ ಕೆಲವೊಂದಿಷ್ಟು ವಿಷಯಗಳು ಹುದುಗಿವೆ. ಆದ ಅವಮಾನ ಮರಳಿಸಲು ಯೋಗ್ಯವಾಗಿರಬೇಕು. ಸರಿಯಾದ ಸಮಯಕ್ಕೆ ಜಾಣತನದಿಂದ ಉತ್ತರಿಸುವಂತಿರಬೇಕು.’ಪರಿಪೂರ್ಣತೆಯನ್ನು ಕಡಿಮೆ ಮಾಡುವುದು ವಿರಳವಾಗಿ ಉತ್ತಮ ಪ್ರತಿಕ್ರಿಯೆ’ ಎಂದಿದ್ದಾನೆ ಆಸ್ಕರ್ ವೈಲ್ಡ್. ಆದರೆ ಹೀಗೆ ಕಡಿಮೆ ಮಾಡುವ ಪ್ರತಿಕ್ರಿಯೆಯ ಒಂದು ಮುಖ್ಯ ಸಮಸ್ಯೆ ಎಂದರೆ ಎಷ್ಟೇ ಜಾಣರಾಗಿದ್ದರೂ ಅದು ನಮ್ಮನ್ನು ಅವಮಾನಿಸಿದವರ ಮಟ್ಟಕ್ಕೆ ಇಳಿಸುತ್ತದೆ. ಹೀಗಾಗಿ ಇದು ಅಂದವಾದ ದುರ್ಬಲವಾದ ವಿಧಾನ. ಇದರಲ್ಲಿನ ಅವಮಾನಿಸಿದವರನ್ನು ಕೆರಳಿಸಿ ಮತ್ತಷ್ಟು ಆಕ್ರಮಣಗಳನ್ನು ಹೆಚ್ಚಿಸುವ ಸಾಧ್ಯತೆ ಹೆಚ್ಚು. ಆದರೆ ಈ ವಿಧಾನವನ್ನು ಹಾಸ್ಯಮಯವಾಗಿ ಗೆಳೆಯರೊಂದಿಗೆ ಸಮವಯಸ್ಕರೊಂದಿಗೆ ಬಳಸಬಹುದು.

ಅಲಕ್ಷಿಸುವಿಕೆ

ಹಾಸ್ಯ, ಶೋಚನೀಯವಾಗಿ ಮರಳಿಸುವಿಕೆಯ ಫಲಿತಾಂಶವನ್ನು ಪಡೆದಿದೆ. ನಿಮ್ಮ ಉತ್ತರ ಮೋಜಿನದಾಗಿರಬೇಕು. ಸರಿಯಾದ ಸಮಯಕ್ಕೆ ಸರಿಯಾದ ಭಾವದೊಂದಿಗೆ ಹೇಳುವಂತಿರಬೇಕು. ನಿಜದಲ್ಲಿ ಅವಮಾನವನ್ನು ಅಲಕ್ಷಿಸುವಿಕೆ ಬಹು ಸರಳ ಮತ್ತು ಹೆಚ್ಚು ಪರಿಣಾಮಕಾರಿ ವಿಧಾನ ಎನ್ನಬಹುದು. ಈ ವಿಧಾನವು ಅಪರಿಚಿತರೊಂದಿಗೆ ಸರಿಯಾಗುತ್ತದೆ. ಆದರೆ ಇದು ನಮ್ಮ ವೈಯಕ್ತಿಕ ವೃತ್ತಿಪರ ಸಂಬoಧಗಳೊoದಿಗೆ ಸರಿ ಹೊಂದುವುದಿಲ್ಲ.ಇoಥ ಸಂದರ್ಭದಲ್ಲಿ ಸರಿಯಾದ ಶಬ್ದವನ್ನು ಬಳಸುವುದು ಆಯ್ಕೆಗೆ ಅರ್ಹವಾದುದು.ಶಬ್ದ ಬಳಸುವಾಗ ನಮ್ಮ ಎಲ್ಲೆಗಳನ್ನು ಮೀರದಂತೆ ಪುನಃ ದೃಢಪಡಿಸಲು ಪ್ರಯತ್ನಿಸಬೇಕು. ವೈಯಕ್ತಿಕ ಮತ್ತು ವೃತ್ತಿಪರ ಆರೋಗ್ಯಕರ ಪರಿಸರ ನಿರ್ಮಿಸುವುದು ಒಂದು ಸವಾಲಿನ ಸಂಗತಿಯೇ ಸರಿ. ಇಲ್ಲಿ ಶಾರೀರಿಕ  ಎಲ್ಲೆಗಳನ್ನು ಎಷ್ಟರಮಟ್ಟಿಗೆ ನಿರ್ಧಿಷ್ಟವಾಗಿ ಕಾಪಾಡಿಕೊಳ್ಳುತ್ತೇವೆ ಎನ್ನುವುದು ಮುಖ್ಯವಾಗುತ್ತದೆ.

ಇದೊಂದು ನಾಯಿ ಬಾಲವನ್ನು ನೆಟ್ಟಗಾಗಿಸಿದಂತೆ.ಪ್ರತಿ ಬಾರಿ ಅದನ್ನು ಪುನಃ ದೃಢಪಡಿಸುವಾಗಲು ಅದು ಬಿಡಿಸದಂತೆ ಡೊಂಕಾಗಿರುತ್ತದೆ. ಇದಕ್ಕೆ ಸಾಕಷ್ಟು ಪ್ರಯತ್ನ ಬೇಕು. ಕೆಲವು ಬಾರಿ ಧೈರ್ಯವೂ ಬೇಕಾಗುತ್ತದೆ. ಆದರೆ ಈ ವಿಧಾನವನ್ನು ಪ್ರಾರಂಭದಿoದಲೇ ರೂಢಿಸಿಕೊಂಡರೆ ಇದು ಬಹು ಪರಿಣಾಮಕಾರಿ ವಿಧಾನ.

ಅವಮಾನ ಅಪರಾಧವಲ್ಲ

ಅವಮಾನವನ್ನು ಅಪರಾಧವೆಂದು ಎಂದೂ ತಿಳಿಯಬಾರದು. ಅಪರಾಧವು ನಾವು ಅವಮಾನಕ್ಕೆ ಪ್ರತಿಕ್ರಿಯಿಸುವುದರಲ್ಲಿದೆ. ನಮ್ಮ ಪ್ರತಿಕ್ರಿಯೆಗಳು ನಮ್ಮ ಹತೋಟಿಯಲ್ಲಿರುತ್ತವೆ. ಒಬ್ಬ ಗಮಾರನನ್ನು ಗಮಾರನೆಂದು ನಿರೀಕ್ಷಿಸುವುದು ಅಸಮಂಜಸವಾಗಿದೆ. ಅವನ ಕೆಟ್ಟ ನಡುವಳಿಕೆಯಿಂದ ನಮ್ಮನ್ನು ಅಪರಾಧಿಗಳೆಂದುಕೊoಡರೆ ನಮ್ಮನ್ನು ನಾವು ದೂಷಿಸಿಕೊಳ್ಳಬೇಕಾಗುತ್ತದೆ. ಆಯ್ಕೆ ಆದ್ಯತೆಗಳೂ ಕಾರಣವಾಗುತ್ತವೆ. ಅದಕ್ಕಾಗಿಯೇ ಸುತ್ತಲಿನ ಲೋಕ ಚಾಲ್ತಿ ಪಡೆಯುತ್ತದೆ. ಮೇಲ್ನೋಟದಲ್ಲಿ ಅವಮಾನವೆನಿಸುವುದು ಅವಮಾನಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ. ಅದು ನಮ್ಮೊಳಗಿನ ಚೇತನವನ್ನು ಬಡಿದೆಬ್ಬಿಸುವ ದೊಡ್ಡ ಕೆಲಸವನ್ನು ಮಾಡುವ ಮಾಯಾ ಶಕ್ತಿಯನ್ನು  ಹೊಂದಿರುತ್ತದೆ ಎಂಬುದನ್ನು ತಿಳಿದು ನಮ್ಮ ಶಕ್ತಿ ದೌರ್ಬಲ್ಯವನ್ನು ಅಳೆದು ತೂಗಿ ನೋಡಿ ಸಾಧಿಸಬೇಕಾದ ಗುರಿಗೆ ಗುರಿ ಇಡಬೇಕು.

ಅನುಮತಿಯಿಲ್ಲದೇ ಅವಮಾನವಿಲ್ಲ

‘ನಿನ್ನ ಅನುಮತಿ ಇರಲಾರದೇ ನಿನ್ನನ್ನು ಯಾರೂ ಅನುಮಾನಿಸಲಾರರು.’ ಎಂಬುದು ಅನುಭವಿಕರ ನುಡಿ. ಅನುಮಾನದ ಭೀತಿ ಇರುವವರೆಗೂ ಅನುಮಾನಗಳು ನಮ್ಮನ್ನು ಸುತ್ತುವರೆಯುತ್ತವೆ. ಅನುಮಾನದ ಭೀತಿ ತೊರೆದ ಮೇಲೆ ನಮ್ಮನ್ನು ಬಿಟ್ಟು ತೊಲಗುತ್ತವೆ. ಅವಮಾನಕ್ಕೆ ಪ್ರತಿಕ್ರಿಯಿಸಿ ಮತ್ತೆ ಅವಮಾನಿಸಿಕೊಳ್ಳುವುದು ಮೂರ್ಖತನವೇ ಸರಿ.ಅವಮಾನಕ್ಕೆ ಪ್ರತಿಯಾಗಿ ಅಸಂಬದ್ಧ ರೀತಿಯಲ್ಲಿ ಪ್ರತಿಕ್ರಿಯಿಸುತ್ತ ಕುಳಿತರೆ ನಡೆಯುವ ದಾರಿ ತಪ್ಪಿ ಹೋಗುತ್ತದೆ.

ಅವಮಾನ ಎದುರಿಸುವಾಗ ಎಚ್ಚರದಿಂದಿರು. ಅವಮಾನವೆಂಬ ಹೆಸರಿನಲ್ಲಿ ಜೀವನದ ಖಾತೆಗೆ  ನಷ್ಟ. ಜನರ ದೃಷ್ಟಿಯಲ್ಲಿ ಅವಮಾನ ಸಣ್ಣದಿರಲಿ ದೊಡ್ಡದಿರಲಿ ನಮ್ಮ ಪಾಲಿಗಂತೂ ಅದು ದೊಡ್ಡ ಕಹಿಯೇ ‘ಅವಮಾನ ಹೆಚ್ಚಿದಷ್ಟು ಹೆಚ್ಚು ಲಾಭ ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿದರೆ ಮಾತ್ರ..’

ಕೊನೆ ಹನಿ

ಗೆಲುವಿನೆಡೆಗೆ ಪಯಣ ಬೆಳೆಸುವಾಗ ಅವಮಾನ ಕಟ್ಟಿಟ್ಟ ಬುತ್ತಿ. ಇಲ್ಲಿ ಅವಮಾನ ಯಾರಿಗಿಲ್ಲ ಹೇಳಿ.ಲೋಕದಲ್ಲಿ ಹುಟ್ಟಿದ ಎಲ್ಲರೂ ಅವಮಾನ ಅನುಭವಿಸಿದವರೆ. ಹೆಜ್ಜೆ ಹೆಜ್ಜೆಗೂ ಕಾಡುವ ಅವಮಾನ ಗೆಲುವಿನ ಏಣಿ ಏರಿ ಯಶಸ್ಸಿನ ಶಿಖರವನ್ನು ಮುಟ್ಟಲು ಕಾರಣವಾಗತ್ತದೆ.ಸಣ್ಣ ಪುಟ್ಟ ಘಟನೆಗಳ ಅವಮಾನವೂ ಗಮನ ಸೆಳೆಯುತ್ತದೆ. ಒಮ್ಮೊಮ್ಮೆಯಂತೂ ನಿರುತ್ಸಾಹ ಮೂಡಿಸಿ ಹಿಂಡಿ ಹಿಪ್ಪಿ ಮಾಡಿ ಬಿಡುತ್ತದೆ. ಅವಮಾನಗಳಿಗೆ ಹೆದರುವ ಅಗತ್ಯವಿಲ್ಲ. ಅನಗತ್ಯ ಅವಮಾನವಾಗಿದ್ದರೆ
ಅದಕ್ಕೆ ತಲೆ ಕೆಡಿಸಿಕೊಳ್ಳುವ ಅಗತ್ಯತೆಯಿಲ್ಲ. ಎಲ್ಲರೂ ನಮ್ಮನ್ನು ಮೆಚ್ಚಿಕೊಂಡರೆ ನಾವು ಶುದ್ಧರಾಗುವುದಿಲ್ಲ. ಶುದ್ಧೀಕರಣ ಇತರರು ನಮ್ಮನ್ನು ಪರೀಕ್ಷೆಗೆ ಒಡ್ಡಿದಾಗ ಟೀಕಿಸಿದಾಗ ಉಂಟಾಗುತ್ತದೆ. ಅನುಮಾನವೆಂಬ ದೌರ್ಬಲ್ಯವನ್ನು ಮೆಟ್ಟಿ ನಿಲ್ಲಬೇಕು. ಅವಮಾನದ ಸಂದರ್ಭದಲ್ಲಿ ಗೆಳೆಯರು ಬಂಧುಗಳು ಕೈ ಬಿಟ್ಟರೂ ಸಂಗಾತಿಯಾಗಿ ನಿಲ್ಲುವುದೇ ಆತ್ಮವಿಶ್ವಾಸ.ಅವಮಾನದ ಪ್ರತಿ ತಿರುವನ್ನು ಸವಾಲಾಗಿ ಸ್ವೀಕರಿಸಿದರೆ ಒಂದೊoದು ಅವಮಾನದ ಪ್ರತಿ ತಿರುವೂ ನಿಮ್ಮ ಗೆಲುವಿನ ಮೈಲಿಗಲ್ಲುಗಳಾಗಿ ಜನರು ನಮ್ಮನ್ನು ಅಭಿಮಾನದಿಂದ ತಿರುಗಿ ನೋಡುವಂತೆ ಮಾಡುತ್ತವೆ.ಅವಮಾನಿಸಿದವರೇ ಸನ್ಮಾನಿಸುವಂತೆ ಬೆಳೆದು ತೋರಿಸುವುದೇ ಅವಮಾನಕ್ಕೆ ತಕ್ಕ ಉತ್ತರವಲ್ಲವೇ?


About The Author

Leave a Reply

You cannot copy content of this page

Scroll to Top