ವೈವಾಹಿಕ ಸಂಗಾತಿ
ವನಜ ಮಹಾಲಿಂಗಯ್ಯ
“ರಹಸ್ಯ ಪ್ರೇಮ ವಿವಾಹ ಒಳ್ಳೆಯದಲ್ಲ”


“ರಹಸ್ಯ ಪ್ರೀತಿ, ಮದುವೆ ಒಳ್ಳೆಯದಲ್ಲ.”
ದುಶ್ಯಂತ ಶಾಕುಂತಳೆಯನ್ನು ಮದುವೆಯಾಗಿರುವುದನ್ನೆ ಮರೆತುಬಿಟ್ಟಿದ್ದಾನೆ. ಅಲ್ಲಿ ಶಕುಂತಳೆ ಗರ್ಭವತಿಯಾಗಿದ್ದಾಳೆ. ಅವಳನ್ನು ದುಷ್ಯಂತನ ಬಳಿಗೆ ಬಿಟ್ಟುಬರಲು ಕಣ್ವಮಹರ್ಷಿಗಳು ಶಿಷ್ಯ ನೊಂದಿಗೆ ಶಕುಂತಲೆಯನ್ನು ಅರಮನೆಗೆ ಕಳುಹಿಸುತ್ತಾರೆ.ಅಲ್ಲಿ ದುಷ್ಯಂತ ಹಾಗು ಶಿಷ್ಯ ಶಾಂಘ್ರವನಿಗೂ ಮಾತು ಕತೆ ನಡೆಯುತ್ತದೆ. ಶಂಕುತಳೆ ನಿನ್ನ ಹೆಂಡತಿಯೆಂದು ಕಣ್ವರ ಶಿಷ್ಯ ಎಷ್ಟು ಹೇಳಿದರೂ ದುಷ್ಯಂತ ಒಪ್ಪುವುದಿಲ್ಲ.
ಆಗ ಶಾಂಘ್ರವನಿಗೆ ಶಕುಂತಳೆಯ ಮೇಲೆ ಕೋಪ ಬರುತ್ತದೆ.ಕಾರಣ ಇವಳ ಒಂದು ಕ್ಷಣದ ಅವಿವೇಕದಿಂದ ಎಂತಹ ಅಪಹಾಸ್ಯಕ್ಕೆ ಗುರಿಯಾದಳೆಂದು. ಆಗ ಒಂದು ಮಾತನ್ನು ಹೇಳುತ್ತಾನೆ.ಯಾರಿಗೂ ಗೊತ್ತಿಲ್ಲದಂತೆ ಪ್ರೀತಿಸುವಾಗ ಅಥವಾ ರಹಸ್ಯವಾಗಿ ಮದುವೆಯಾಗುವಾಗ ಆ ವ್ಯಕ್ತಿಯ ಬಗ್ಗೆ ಚನ್ನಾಗಿಪರೀಕ್ಷೆ ಮಾಡಿರಬೇಕು. ಅವರ ಸ್ವಭಾವ ಸರಿಯಾಗಿ ತಿಳಿಯದಿದ್ದರೆ ಪ್ರೀತಿಯೂ ಸಹ ದ್ವೇಷವಾಗಿ ಮಾರ್ಪಾಡಾಗಲು ತುಂಬಾ ಸಮಯವಾಗುವುದಿಲ್ಲ.
ದುಷ್ಯಂತ ಹಾಗು ಶಂಕುತಳೆ ಗುಟ್ಟಾಗಿ ಸೇರಿದವರು. ಅವರಿಬ್ಬರ ಸಂಬಂಧಕ್ಕೆ ಯಾವ ಸಾಕ್ಷಿಯೂ ಇರಲಿಲ್ಲ. ಇದ್ದ ಒಂದು ಉಂಗುರವೂ ಕಳೆದುಹೋಗಿದೆ. ಅವರಿಬ್ಬರ ಮದುವೆಯಾಗಿದ್ದು ಹಿರಿಯರಿಗೆ ಗೊತ್ತಿದ್ದರೆ ಶಕುಂತಳೆಯನ್ನು ಹೆಂಡತಿಯೆಂದು ದುಷ್ಯಂತ ಒಪ್ಪಿಕೊಳ್ಳಬೇಕಿತ್ತು. ರಹಸ್ಯವಾಗಿ ಮದುವೆಯಾಗಿದ್ದರಿಂದ ಶಕುಂತಳೆಯ ಪೋಷಕರು
ಅಸಹಾಯಕರು.
ಅಂದು ಕಾಳಿದಾಸ ಈ ನಾಟಕ ಬರೆದ ಸಮಯ ಈಗಿನ ಸಮಯಕ್ಕೂ ತುಂಬಾ ಅಂತರ ವಿದ್ದರೂ ಪರಿಸ್ಥಿತಿ ಮಾತ್ರವೇ ಬದಲಾಗಿಲ್ಲ. ಇಂದಿನ ಮಕ್ಕಳು ಗುಟ್ಟಾಗಿ ಪ್ರೀತಿಸಿ ಓಡಿಹೋಗಿ ಮದುವೆಯಾಗಿ ಮುಂದಿನ ದಿನಗಳಲ್ಲಿ ಎಡವಟ್ಟಾಗಿ ತುಂಬಾ ನೋವು ಅನುಭವಿಸುತ್ತಾರೆ. ಪಾಲಕರಿಗೂ ಕಷ್ಟ ಕೊಡುತ್ತಾರೆ.ಅದರಲ್ಲೂ ಹೆಚ್ಚು ಕಷ್ಟಕ್ಕೆ ಗುರಿಯಾಗುವವರು ಅಪ್ಪ ಅಮ್ಮ.
ಪ್ರಾಯದ ಬಿಸಿಯಲ್ಲಿ ಪ್ರೀತಿಯ ಗುಂಡಿಗೆ ಬೀಳಲು ಒಂದು ಕ್ಷಣ ಸಾಕು. ಆದರೆ ಒಬ್ಬರನ್ನು ಒಬ್ಬರು ಅರಿತುಕೊಳ್ಳದೇ ಆಕರ್ಷಣೆಗೆಪ್ರೀತಿಸಿದರೆ ಅದು ಹೆಚ್ಚುಕಾಲ ಉಳಿಯವುದು ಅಕ್ಷರಶಃ ಸುಳ್ಳು. ಯಾವ ವ್ಯಕ್ತಿಯ ಗುಣ ಸರಿಯಾಗಿ ಗೊತ್ತಿರುವುದಿಲ್ಲವೋ ಅಂತಹ ವ್ಯಕ್ತಿಯು ವೈರಿಯಾಗುತ್ತಾನೆ. ಅಂದಾಗಲಿ ಇಂದಾಗಲಿ ಸಂಬಂಧಗಳೇ ಸಾಕ್ಷಿಯನ್ನು ಹೇಳುತ್ತವೆ. ನಾವಿಬ್ಬರೂ ಮದುವೆಯಾಗಿದ್ದೇವೆ ಎಂದರೆ ಸಾಕ್ಷಿ ತೋರಿಸಲು ಕೋರ್ಟು ಕೇಳುತ್ತದೆ. ಅಂದು ದುಷ್ಯಂತನು ಶಕುಂತಳೆಗು ಅದನ್ನೆ ಕೇಳಿದ್ದು.
ಅದಕ್ಕೆ ಗುಟ್ಟಾಗಿ ಮದುವೆ ಮಾಡಿಕೊಂಡು ಹೆತ್ತವರಿಗೂ ಸಂಬಂಧಿಕರಿಗೂ ಅವಮಾನ ಮಾಡಬೇಡಿ. ಜೀವ ಚಿಕ್ಕದು, ಜೀವನ ದೊಡ್ಡದು. ಎಲ್ಲರ ಒಪ್ಪಿಗೆಯಿಂದ ನಡೆದ ಮದುವೆಗಳಲ್ಲಿ ಏನಾದರೂ ತೊಂದರೆಯಾದರೆ ಹೇಳಲು ನಿಮ್ಮವರು ಎಲ್ಲರೂ ಇರುತ್ತಾರೆ.ಗುಟ್ಟಾಗಿ ಮದುವೆಯಾಗಿ ಆತ್ಮಹತ್ಯಗೆ ಶರಣಾಗಿ ಹೆತ್ತವರ ಮನಸ್ಸು ನೋಯಿಸಬೇಡಿ.
ಅಂದು ದುಷ್ಯಂತ ಶಕುಂತಳೆಯ ಮದುವೆ ಸಾಕ್ಷಿಯಾಗಿದ್ದುದು ಒಂದು ಉಂಗುರ, ಹಾಗು ಕಣ್ವಾಶ್ರಮದಲ್ಲಿದ್ದ ಒಂದು ಜಿಂಕೆ ಮಾತ್ರವೆ. ಆದರೆ ಉಂಗುರ ಕಳೆದಿತ್ತು . ಪಾಪ ಜಿಂಕೆ ಸಾಕ್ಷ್ಯ ಯಾರು ಕೇಳುತ್ತಾರೆ?
ಇತ್ತಿಚೆಗೆ ನಡೆಯುತ್ತಿರುವ ಘಟನೆಗಳು ಮೈ ಜುಮ್ಮೆನಿಸುತ್ತದೆ. ತುಂಡು ತುಂಡಾಗಿ ಕತ್ತರಿಸಿ ಬಿಸಾಕಿದ ಹುಡುಗಿಯ ಕತೆ. ಬೇಡ ಮಕ್ಕಳೆ ಯಾರೂ ಅಂತಹ ತಪ್ಪು ಮಾಡಿ ಜೀವಕಳೆದುಕೊಳ್ಳಬೇಡಿ. ಮದುವೆಯ ವಿಷಯದಲ್ಲಿ ದುಡುಕಬೇಡಿ. ಗುಟ್ಟು ಮಾಡಬೇಡಿ. ಹೆತ್ತವರಿಗೆ ಅವರ ಜವಾಬ್ದಾರಿ ಗೊತ್ತಿರುತ್ತದೆ.
ವನಜ ಮಹಾಲಿಂಗಯ್ಯ
ಅಧ್ಕಕ್ಷರು
ವಿಶ್ವವಿನೂತನ ಮಹಿಳಾ ಸಮಾಜ ದಾವಣಗೆರೆ




Super