ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಚಂದ್ರು ಪಿ ಹಾಸನ್ ಅವರ ಕವಿತೆ”ಓ ನಲ್ಲೇ ..”

ಕಾವ್ಯ ಸಂಗಾತಿ ಚಂದ್ರು ಪಿ ಹಾಸನ್ “ಓ ನಲ್ಲೇ ..” ನನ್ನೆದೆ ಕೋಗಿಲೆ ಕೂಗಿದೆಹೃದಯದ ತುಡಿತವ ಕೇಳದೆಎಲ್ಲಿರುವೆ?  ನೀನೆಲ್ಲಿರುವೆ?ಗೆಳತಿ ನಿನ್ನೇ ಕಾದಿರುವೆ ವಸಂತಕ್ಕೆ ವಸುಂಧರೆಹಸನಾಗಿ ಸೂಸುತ್ತಿದೆಸರಸರನೆ ಕೋಕಿಲೆಸೊಗಸಾಗಿ ಹಾಡುತ್ತಿದೆ ಹಸನಾದ ಸಮಯವುಬೆಸುಗೆಗೆ ಸಮ್ಮತಿಸಿದೆನಲ್ಲೇ ಯಾಕೀಗೆ ಕಸರತ್ತು?ಒಲ್ಲೇ… ಸಾಕಾಗಿದೆ ಬೇಸತ್ತು ಗೆಳತಿಯ ನನ್ನೊಡತಿಯಬರುವಿಕೆ ನೋಡುತ್ತಿರೇನಿನ್ನ ಅರಿವನ್ನು ಅರಿಯದೇಎನ್ನ ಮನವಿಲ್ಲಿ ಸೊರಗಿದೆ ತಂಪಾಗಿ ಇಂಪಾಗಿಬೀಸುವ ಗಾಳಿಯೇಒಮ್ಮೆ ನನ್ನವಳ ಸ್ಪರ್ಶಿಸಿ ನನ್ನೋಲೆಯಾ ತಿಳಿಸುವೆಯಾ? ಕನಸಲ್ಲೂ ಮನಸಲ್ಲೂಇನ್ಯಾರನೂ ನಾನೊಲ್ಲೇನೆಲೆಸಿ ಹರ್ಷಿಸಿ ಪೋಷಿಸಿನಿಲ್ಲೇ ಈ ಕನ್ನಡಿಗನಲ್ಲೇ…. ಚಂದ್ರು ಪಿ ಹಾಸನ್, 

ಚಂದ್ರು ಪಿ ಹಾಸನ್ ಅವರ ಕವಿತೆ”ಓ ನಲ್ಲೇ ..” Read Post »

ಇತರೆ, ಲಹರಿ

“ಒಡಲಿನ ನೋವಿಗೆ ಮಡಿಲಿನ  ಸಾಂತ್ವನ”        ಜಯಶ್ರೀ.ಜೆ.ಅಬ್ಬಿಗೇರಿ

ಲಹರಿ ಸಂಗಾತಿ “ಒಡಲಿನ ನೋವಿಗೆ ಮಡಿಲಿನ  ಸಾಂತ್ವನ”        ಜಯಶ್ರೀ.ಜೆ.ಅಬ್ಬಿಗೇರಿ  ಮೊನ್ನೆ ಪೇಟೆಯಲ್ಲಿ ಗೆಳತಿ ಸುಮತಿ ಬಹಳ ದಿನಗಳ ನಂತರ  ತನ್ನ ಮಗಳೊಂದಿಗೆ ಭೇಟಿಯಾದಳು. ಮುಖದಲ್ಲಿ ಮೊದಲಿದ್ದ ಗೆಲುವು ಕಾಣಲಿಲ್ಲ. ನಗೆಯೂ ಮುಖದಿಂದ ದೂರವೇ ಉಳಿದಿತ್ತು. ನಾನೇ ಒತ್ತಾಯಿಸಿ ಹೊಟೆಲ್ಲಿಗೆ ಕರೆದೊಯ್ದೆ. ಸದಾ ಉತ್ಸಾಹದ ಕಾರಂಜಿಯoತೆ ಚಿಮ್ಮುತ್ತಿದ್ದ ನೀನು ಇದೇಕೆ ಇಷ್ಟು ಸಪ್ಪಗಾಗಿ ಬಿಟ್ಟಿದ್ದಿಯಾ? ಎಂದಾಗ ಕಣ್ಣಂಚಿನಲ್ಲಿ ನೀರು ತಂದು ತನ್ನ ಪ್ರವರ ಬಿಚ್ಚಿಟ್ಟಳು. ಇಬ್ಬರೂ ದುಡಿತೀವಿ ಹೀಗಾಗಿ ಮನೆಯಲ್ಲಿ ಎಲ್ಲದಕ್ಕೂ ಆಳು. ಹಣಕ್ಕಂತೂ ಕೊರತೆಯಿಲ್ಲ.ಮುದ್ದಾದ ಮಗಳು ಮನೆಯಂಗಳದಲ್ಲಿ ನಲಿದಾಡ್ತಾಳೆ. ಇವರದೇ ಸಮಸ್ಯೆ ಆಗಿದೆ.ಎಂದಳು.  ಇಷ್ಟೆಲ್ಲಾ ಇರೋವಾಗ ನಿಮ್ಮ ಪತಿದೇವರದು ಏನು ಸಮಸ್ಯೆ  ಎಂದು ಕುತೂಹಲದಿಂದ ಪ್ರಶ್ನಿಸಿದೆ. ಅದಕ್ಕೆ ಸುಮತಿ,ಮೊದಲೆಲ್ಲ ಚೆನ್ನಾಗಿಯೇ ಇದ್ದ ರಮೇಶ ಕೆಲಸದ ಒತ್ತಡ ಹೆಚ್ಚಾಗಿದೆ ಎಂದು  ಪಾರ್ಟಿ ಕ್ಲಬ್ ಪಬ್‌ನ್ನು ಮನರಂಜನೆಗೆoದು  ರೂಢಿಸಿಕೊಂಡು ಇತ್ತೀಚಿಗೆ ಅತಿಯೆನಿಸುವಷ್ಟು ಕುಡಿದು ಮನೆಗೆ ತಡರಾತ್ರಿ  ಬಂದು ಸುಮ್ಮನೆ ಮಲಗಿ ಬಿಡ್ತಾರೆ. ಮೊದಲೇ ಮಾತು ಕಮ್ಮಿ ಈಗಂತೂ ಮನೆಯಲ್ಲಿ ಮಾತಿಲ್ಲ ಕತೆಯಿಲ್ಲ.ದಿನಕ್ಕೆ ಒಂದೊ ಎರಡೊ ಮಾತನಾಡಿದರೆ ಹೆಚ್ಚು  ನಾನಾಗಲೇ ಮೇಲೆ ಬಿದ್ದು ಮಾತನಾಡಿಸಿದಾಗ ಹೂಂ ಹಾಂ ಅಷ್ಟೆ, ಸಿಟ್ಟಿಗೆದ್ದು ಜೋರಾಗಿ ಕಿರುಚಿದರೆ ಏನೂ ಪ್ರಯೋಜನವಿಲ್ಲ. ನನಗೇನಾಗಿಲ್ಲ ನಾನು ಇರೋದೆ ಹೀಗೆ ಮೊದಲಿನಿಂದ ಹೀಗೆ ಇದ್ದೀನಿ ನಿನಗೆ ಹಾಗೆನಿಸ್ತಿದೆ ಅಂತ ಹೇಳುತ್ತ ಜಾಗ ಖಾಲಿ ಮಾಡ್ತಾರೆ.ಸಂಬoಧಿಕರ ಮದುವೆ ಮುಂಜವಿಗoತೂ ಜಪ್ಪಯ್ಯ ಅಂದರೂ ಬರೋದಿಲ್ಲ.  ಮಗಳ ಜೊತೆ ಮಾತು ಅಷ್ಟಕ್ಕಷ್ಟೆ. ದೈಹಿಕ ಸುಖ ಬೇಕೆಂದಾಗ ಬಳಿ ಬರುತ್ತಾರೆ. ಇಂಥ ಮದುವೆಯಿಂದ ಪಡೆಯುತ್ತಿರುವದು ಏನೂ ಇಲ್ಲ. ನನ್ನಲ್ಲಿರುವ ಪ್ರೀತಿಯ ಭಾವನೆಗಳೆಲ್ಲ ಬತ್ತಿ ಹೋಗುತ್ತಿವೆ. ದಿನ ದಿನಕ್ಕೆ ಬದುಕು ಕ್ರೂರವೆನಿಸುತ್ತಿದೆ. ಏನು ಮಾಡಲೂ  ತೋಚುತ್ತಿಲ್ಲ. ಕೋರ್ಟ್ ಕಛೇರಿ ಮೆಟ್ಟಿಲು  ಹತ್ತಿದರೆ ಮನೆ ಮರ್ಯಾದೆ ಪ್ರಶ್ನೆ.ದಿನವೂ ವಿಷ ನುಂಗತಿದಿನಿ. ಮಗಳ ಮುಖ ನೋಡಿ ಅವರೊಂದಿಗೆ ದಿನ ದೂಡತಿದಿನಿ. ಎಂದಾಗ  ಮಗಳು ಸುಮತಿಯ ಕಣ್ಣೊರೆಸುತ್ತ ಅವ್ವಾ ,ಅಪ್ಪ ಮೊದಲಿನಿಂತೆ ಆಗ್ತಾರೆ ಬಿಡವ್ವ ನೀ ಆಳಬೇಡ ಎಂದಳು. ಸುಮತಿ ಮಗಳ ಕೆನ್ನೆಗೆ ಮುತ್ತಿಕ್ಕಿ ಕಿರುನಗೆ ಬೀರಿದಳು. ತಾಯಿಯ ಖಾಸಗಿ ಜಗತ್ತು ಹೆಣ್ಣುಮಕ್ಕಳಿಗೆ ಹೆಚ್ಚು ಅರ್ಥವಾಗುತ್ತದೆ.ತಾಯಿ ಮಗಳ  ನಡುವಿರುವ ಸಲುಗೆ, ಮುಕ್ತವಾಗಿ ಹಂಚಿಕೊಳ್ಳುವ ಮನದಾಳದ ಮಾತುಗಳು ಹೆಣ್ಣು ಹೆತ್ತ ತಾಯಂದಿರಿಗೆ ಅದರ ಸೌಖ್ಯ ತಿಳಿಯೋದು. ಹೆಣ್ಣು ಅಂದರೆ ಹುಣ್ಣು ಅಂತ ತಿಳಿಯೋ ಜನರೇ ಜಾಸ್ತಿ ಆದರೆ ಹೆಣ್ಣು ಮಕ್ಕಳು ತೋರುವ ಆತ್ಮೀಯತೆ ಆಪ್ತತೆ ಮನಸ್ಸಿಗೆ ಅತಿಯಾದ ಆನಂದ ಮತ್ತು ಹಿತ ನೀಡುವದಂತೂ ಖಚಿತ. ಎಷ್ಟೊ ಬಾರಿ ಗಂಡನೊoದಿಗೆ ಹಂಚಿಕೊಳ್ಳಲಾಗದ ಮನದ ದುಗುಡಗಳನ್ನುಅವ್ವನೊಂದಿಗೆ ಹಂಚಿಕೊoಡು ನಿರಾಳವಾಗಿ ಮತ್ತೆ ಜೀವನೋತ್ಸಾಹ ತುಂಬಿಕೊಳ್ಳುತ್ತಾಳೆ.  ರಶ್ಮಿಗೆ ತಾಯಿಯೇ ಜಗತ್ತು. ಮಗಳ ಬದುಕು ಹಸನಾಗಿರಲೆಂದು ಬಯಸುವ ತಾಯಿ ಮಗಳ ಬದುಕಿನಲ್ಲಿ ಸಣ್ಣ ಬಿರುಕು ಬಿಡುತ್ತಿದೆ ಎಂದು ತಿಳಿದರೆ ಎದೆ ಒಡೆದುಕೊಳ್ಳುತ್ತಾಳೆಂದು ರಶ್ಮಿ ಅತ್ತೆಯ ಮನೆಯಲ್ಲಿ ಕೊಡುವ ಕಿರುಕುಳಗಳನ್ನು ಗಂಡನ ವರ್ತನೆಯಲ್ಲಾದ ಬದಲಾವಣೆಯನ್ನು ಬಾಯಿಮುಚ್ಚಿ ಸಹಿಸಿಕೊಳ್ಳುತ್ತಿದ್ದಾಳೆ.ಕತ್ತಲ ಕೋಣೆಯಲ್ಲಿ ಕಣ್ಣಿರು ಹರಿಸುತ್ತಿದ್ದಾಳೆ. ಇದು ರಶ್ಮಿಯ ತಾಯಿಗೆ ತಿಳಿದಾಗ ದೇವರು ಒಳ್ಳೆಯವರನ್ನೇ ಪರೀಕ್ಷಿಸುತ್ತಾನೆ ಅಂತ ನೀನೇ ಹೇಳತಿದ್ದೆಲ್ಲವ್ವಾ ಈಗ ಕಷ್ಟದ ಕಾಲ ಮುಂದೊoದು ದಿನ ಸುಖ ಬಂದೇ ಬರುತ್ತದೆ. ಎಂದು ನೊಂದ ತಾಯಿಗೆ ಸಾಂತ್ವನದ ಮಾತುಗಳನ್ನಾಡುತ್ತ ಉಕ್ಕಿ ಬರುವ ದುಃಖವನ್ನು  ತಡೆಯುತ್ತಾಳೆ. ಹೆಣ್ಣಿಗೆ ತವರೆಂದರೆ ಪಂಚ ಪ್ರಾಣ ಅದರ ನಂಟನ್ನು ಕಳೆದುಕೊಳ್ಳಲು ಅವಳಿಷ್ಟ ಪಡುವದಿಲ್ಲ. ಮಗಳನ್ನು ತಮ್ಮನಿಗೋ ಅಣ್ಣನ ಮಗನಿಗೋ ಧಾರೆಯೆರೆದು ತವರನ್ನು ಉಳಿಸಿಕೊಳ್ಳಲು ಹಂಬಲಿಸುತ್ತಾಳೆ. ಹೀಗೆ ತವರನ್ನು ಉಳಿಸಿಕೊಳ್ಳಲು ಶಾಂತಮ್ಮ ಮಗಳನ್ನು ಅಣ್ಣನ ಮಗನಿಗೆ ಕೊಟ್ಟು ತನ್ನ ತವರನ್ನು ಉಳಿಸಿಕೊಳ್ಳುವಲ್ಲಿ ಗೆದ್ದಿದ್ದಳು. ಅಳಿಯ ಬೇರೊಬ್ಬಳೊಂದಿಗೆ ಅನೈತಿಕ ಸಂಬoಧದಲ್ಲಿ ತೊಡಗಿ ಮಗಳಿಗೆ ಕೊಡುವ ಚಿತ್ರ ಹಿಂಸೆ ಕಂಡು ಕಂಗಾಲಾಗಿದ್ದಾಳೆ. ತನ್ನ ಮಗಳ ಬಾಳನ್ನು ತಾನೇ ಹಾಳು ಮಾಡಿದನೆಂದು ನಿಂತ ನೆಲವೇ ಬಾಯಿ ಬಿಟ್ಟರೆ ಎಲ್ಲಿ ಹೋಗೋದು? ಎಂದು ಹಾಸಿಗೆ ಹಿಡಿದು ಕೊರಗುತ್ತಿರುವ ತಾಯಿಗೆ ಮದುವೆ ಅನ್ನೋದು ಸ್ವರ್ಗದಲ್ಲಾಗಿರುತ್ತದೆ ಇದರಲ್ಲಿ ನಿನ್ನದೇನು ತಪ್ಪಿಲ್ಲವ್ವಾ ಎಂದು ಶಾಂತಮ್ಮನಿಗೆ ಮಗಳು ಸವಿತಾ ತನ್ನ ದುಃಖವನ್ನೆಲ್ಲ ಮರೆಮಾಚಿ ಸುಖ ದುಃಖಗಳನ್ನು ಸಮನಾಗಿ ನೋಡಬೇಕೆಂದು, ಇಂದು  ದುಃಖವಾದರೆ ನಾಳೆ ಸುಖ ಎಂದು ತತ್ವಜ್ಞಾನಿಯಂತೆ ಮಾತನಾಡುತ್ತ ಬೇಗನೆ ಹುಷಾರಾಗುವಂತೆ ಸೂಚಿಸುತ್ತಾಳೆ. ಒಬ್ಬಳೇ ಮಗಳೆಂದು ತುಂಬಾ ಪ್ರೀತಿಯಿಂದ ಸಾಕಿ ಸಲುಹಿ ಮದುವೆ ಮಾಡಿ ಅಳಿಯನನ್ನು ಮನೆಗೆ ಕರೆ ತಂದ ರತ್ನಮ್ಮ ಅಳಿಯನಿಗೆ ದಿನನಿತ್ಯ ಹಾಲು ತುಪ್ಪ ಸುರಿದರೂ ಆತನ ದರ್ಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.ಮನೆಗೆ ಸಂಬoಧಿಕರು ಆಪ್ತ ಸ್ನೇಹಿತರು ಬಂದರoತೂ ದರ್ಪ ಅತಿರೇಕಕ್ಕೇರುತ್ತೆ. ಇದು  ಮಗಳಿಗೂ ನುಂಗಲಾರದ ತುತ್ತಾಗಿದೆ. ಎಷ್ಟೋಸಾರಿ ಆತನ ವರ್ತನೆಗೆ ತಾಯಿ ಮಗಳ ಕಣ್ಣಾಲಿಗಳು ತುಂಬಿಕೊಳ್ಳುತ್ತವೆ. ಅಪ್ಪ ದುರ್ವ್ಯಸನದಲ್ಲಿ ಮುಳುಗಿರದಿದ್ದರೆ ಅಳಿಯನ ದರ್ಪಕ್ಕೆ ಕಡಿವಾಣ ಹಾಕಬಹುದಿತ್ತೆನೋ ಎಂದು ಮನದಲ್ಲೇ ಮರ ಮರ ಮರಗುತ್ತಾಳೆ. ತನ್ನ ಒಡಲಿನಲ್ಲಿ ಬೆಂಕಿ ಇಟ್ಟುಕೊಂಡು ಕತ್ತಲಾದ ಬಾಳಿಗೆ ಬೆಳಕು ಬಂದೇ ಬರುತ್ತದೆಯೆಂದು ಭರವಸೆಯ ಮಾತನಾಡಿ ಅವ್ವನಿಗೆ ಸಂತೈಸುತ್ತಾಳೆ. ಚೈನಿ ಚೆನ್ನಪ್ಪನ ಹಾಗೆ ಡ್ರೆಸ್ ಮಾಡಿಕೊಂಡು ಮೈ ತುಂಬ ಧಿಮಾಕು ತುಂಬಿಕೊoಡು ನಯಾಪೈಸೆ ದುಡಿದು ತರಲಾರದೆ ಹೆಂಡತಿ ಕೂಲಿ ಮಾಡಿ ತಂದ ಹಣವನ್ನು ಲಪಟಾಯಿಸಿ ತನ್ನ ಶೋಕಿಗೆ ಬಳಸುತ್ತಾನೆ. ಭೀಮಪ್ಪ. ಓದೋ ಮಕ್ಕಳಿಗೆ ಊರೆಲ್ಲ ಸಾಲ ಮಾಡಿ ಸಾಲ ತೀರಿಸೋ ಚಿಂತೆಗೆ ಗಂಗವ್ವನ ಕೈಯಲ್ಲಿ ಬಿರುಕು ಬಿಟ್ಟ ಗಾಯಗಳಾಗಿದ್ದರೂ ದಿನ ಬೆಳಗಾದರೆ ಕೂಲಿ ತಪ್ಪುವದಿಲ್ಲ. ಅವ್ವನ ಪಾಡು ಕಂಡು ಮಮ್ಮಲ ಮರಗುವ ಹದಿನಾಲ್ಕರ ಪೋರಿ ಗೌರಿ ನಾನು ಓದಿ ನಿನ್ನ ಕಷ್ಟವನ್ನು ನೀಗಿಸುತ್ತೇನೆಂದು ತಾಯಿಯ ಕಂಗಳಲ್ಲಿ ಆಶಾ ಕಿರಣ ಮೂಡಿಸಿ ಮುಖದಲ್ಲಿ ನಗು ತುಂಬುತ್ತಾಳೆ. ಇವು ಕೆಲವು ಉದಾಹರಣೆಗಳಷ್ಟೆ ಇಂಥ ಒಡಲಿನ ನೋವುಗಳು ಸಮಾಜದಲ್ಲಿ ಭರಪೂರ ಎನ್ನುವಂತೆ ತುಂಬಿವೆ. ತಾನುರಿದು ಇತರರಿಗೆ ಬೆಳಕು ನೀಡುವ  ದೀಪದಂತೆ ದುಃಖದ ಬೆಂಕಿಯನ್ನು ತನ್ನ ಸೆರಗಲ್ಲಿ ಕಟ್ಟಿಕೊಂಡು ಒಡಲಲ್ಲಿ ಹುಟ್ಟಿ ಮಡಿಲಲ್ಲಿ ಬೆಳೆದ ಮಗಳು ತಾಯಿಗೆ ತಾಯಿಯಾಗಿ ಸಂತೈಸುವ ಪರಿ ಮಾನವ ಕುಲದ ಮನ ಕಲುಕುವಂಥದ್ದು . ತನ್ನಲ್ಲಿ  ನೋವಿದ್ದರೂ ಒಡಲಿನ ನೋವಿಗೆ ಮಡಿಲಿನ ಸಾಂತ್ವನ ಹೇಳುತ್ತ  ನಲಿವಿನ ಸಂತಸದ ಭರವಸೆ ತುಂಬುವ ಪರಿ ಮೆಚ್ಚುವಂಥದ್ದು. ಜಯಶ್ರೀ.ಜೆ.ಅಬ್ಬಿಗೇರಿ

“ಒಡಲಿನ ನೋವಿಗೆ ಮಡಿಲಿನ  ಸಾಂತ್ವನ”        ಜಯಶ್ರೀ.ಜೆ.ಅಬ್ಬಿಗೇರಿ Read Post »

ಕಾವ್ಯಯಾನ

ಪರವಿನಬಾನು ಯಲಿಗಾರ ಅವರ ಕವಿತೆ “ಬದುಕು”

ಕಾವ್ಯ ಸಂಗಾತಿ ಪರವಿನಬಾನು ಯಲಿಗಾರ “ಬದುಕು” ಬದುಕುವುದೆಂದರೆ ಕೆಲವರಿಗೆನೀರಿನ ಪ್ರವಾಹದ ಜೊತೆಹುಲು ಕಡ್ಡಿ ತೇಲಿದಷ್ಟೆ ಸರಳ…. ಬದುಕುವುದೆಂದರೆ ಕೆಲವರಿಗೆಸಮರಕ್ಕೆ ಸಿದ್ಧರಾದಂತೆಪ್ರತಿ ಕ್ಷಣವು ಸವಾಲುಗಳ ಜೊತೆ ಸೆಣಸಾಟ…. ಬದುಕುವುದೆಂದರೆ ಕೆಲವರಿಗೆಕಾರ್ಕೋಟಕ ವಿಷದ ಹನಿ ಸೇವಿಸಿದ ಹಾಗೆನಿಧಾನವಾಗಿ ನೀರ್ಜಿವವಾದಂತೆ…… ಬದುಕುವುದೆಂದರೆ ಕೆಲವರಿಗೆಜೇನಿನ ಹನಿಗಳ ಸವಿದಂತೆಕಹಿಯ ಪರಿಚಯವೇ ಇಲ್ಲದಂತೆ….. ಬದುಕುವುದೆಂದರೆ ಕೆಲವರಿಗೆಕೆಲವೊಮ್ಮೆ ಬದುಕುವುದೆ ಬೇಡ ಎನಿಸುವುದುಆದರೆ ಹೊಣೆಗಾರಿಕೆಗಾಗಿ ಬದುಕು ತೆವಳುವರು…. ಪರವಿನಬಾನು ಯಲಿಗಾರ.

ಪರವಿನಬಾನು ಯಲಿಗಾರ ಅವರ ಕವಿತೆ “ಬದುಕು” Read Post »

ಅನುವಾದ

ಮಲಯಾಳಂ ಕವಿತೆ “ನೀನು ಮರಣ ಹೊಂದಿದ್ದರೇ…….!!?” ಕನ್ನಡಕ್ಕೆ-ಐಗೂರು ಮೋಹನ್ ದಾಸ್ ಜಿ

ಅನುವಾದ ಸಂಗಾತಿ ನೀನು ಮರಣ ಹೊಂದಿದ್ದರೆ! ಮಲಯಾಳಂ ಮೂಲ: ಸೋಮನ್ ಕಡಲೂರು.ಕನ್ನಡ ಅನುವಾದ: ಐಗೂರು ಮೋಹನ್ ದಾಸ್ ಜಿ ಓ ಪ್ರಾಣಸಖಿ………,ನೀನು ಮರಣಹೊಂದಿದ್ದರೇ……ಆ ವಿಚಾರ ನನಗೆತಿಳಿಯುತ್ತದೆ ಎಂಬುವುದೇಖಚಿತ ಇಲ್ಲ….! ತಿಳಿದ್ದರೂ ದೂರದಲ್ಲಿರುವನಿನ್ನ ಮನೆಗೆನಾನು ತಲುಪುವುದಿಲ್ಲ….! ತಲುಪಿದ್ದರೂ ನಿನ್ನನ್ನುಮುಟ್ಟಲು ಸಾಧ್ಯವೇ ಇಲ್ಲ….! ಮುಟ್ಟಿದ್ದರೂರೋಧಿಸಿ ಅಳಲುಸಾಧ್ಯವಾಗುವುದಿಲ್ಲ….! ಅತ್ತರೂನನ್ನನ್ನು ಯಾರಿಗೂಅಥ೯ ಮಾಡಿಕೊಳ್ಳಲುಸಾಧ್ಯವಾಗುವುದೇ ಇಲ್ಲ…! ಕೊನದಾಗಿನೀನು ಮರಣಹೊಂದಿದ್ದರೇ……ನಾನು ಬರುವುದುಏಕೆ….? ನನಗೆ ನೀನುಮರಣ ಹೊಂದುವುದೇಇಲ್ಲ….!!! ಮಲಯಾಳಂ ಮೂಲ: ಸೋಮನ್ ಕಡಲೂರು.ಕನ್ನಡ ಅನುವಾದ: ಐಗೂರು ಮೋಹನ್ ದಾಸ್ ಜಿ

ಮಲಯಾಳಂ ಕವಿತೆ “ನೀನು ಮರಣ ಹೊಂದಿದ್ದರೇ…….!!?” ಕನ್ನಡಕ್ಕೆ-ಐಗೂರು ಮೋಹನ್ ದಾಸ್ ಜಿ Read Post »

ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ ಕಂತು-ಏಳು ಜಯದೇವಿ ತಾಯಿ ಲಿಗಾಡೆ ಜೀವನಗಾಥೆ ಸವಿತಾ ದೇಶಮುಖ ತಾಳಲಾರೆ ಯಾತನೆ/ಕೇಳೋಕೂಗು ನೀಲಕಂದರನೆ !! ಪಲ್ಲವಿ!!ಚಂದಿರನ ತಂಗಾಳಿ ನೊಂದ ಮನಕೆ ಬೀರಿ ಕಂದಳನು ಕಾಪಾಡ ಬಾರೋ!!ಬಾಳಿನ ತುಂಬೆಲ್ಲ ತಾಳಬಾರದು ಗೋಳುಹೇಳಲು ಬರೋದು ಎನಗಯ್ಯ !! ಅಂತ ಪಾಡುತ……ಚಂದಿರನ ಬೆಳದಿಂಗಳದ ಕೆಳಗೆ ಕುಳಿತು… ತೊರೆದು ಹೋದ ಚೊಚ್ಚಲ ಮಗುವನ್ನು ನೆಯುತ ಜಯದೇವಿ ತಾಯಿಯವರು ಖಾಲಿ ಹೃದಯ ಹೊತ್ತು, ಕಣ್ಣೀರು ಧಾರೆಯಲಿ ಅಮ್ಮನ ಮಡಿಲಲ್ಲಿ ತಲೆ ಇಟ್ಟು ಬಹಳ ಹೊತ್ತು ಅತ್ತರು. ಆದರೆ ಜೀವನ ಯಾರಿಗೂ ಹೆಚ್ಚು ಕಾಲ ವಿರಾಮ ಕೊಡುವುದಿಲ್ಲವಲ್ಲಾ….!!! ಮತ್ತೆ ಗಂಡನ ಮನೆಗೆ ಹೊರಡಬೇಕು…..!!!ಗಂಡನ ಮನೆಗೆ ಹೋಗುವ ದಿನವೂ ಬಂತು…ತವರ ಬಾಗಿಲು ದಾಟಲು ಕಾಲುಗಳು ಮುಂದೆ ಸಾಗಲಿಲ್ಲ.ಪ್ರತಿ ಹೆಜ್ಜೆಯೂ ಒಂದು ನೆನಪನ್ನು ತುಳಿಯುವಂತೆ……ತವರಿನ ಗೋಡೆಗಳೆಲ್ಲಆ ಮಗು ನಗುವಿನ ಧ್ವನಿ ತುಂಬಿತ್ತು… ಕಳವಳ ಗೊಂಡ ಮನ…. ಕರಳು ಹಿಚುಕುವ ಸನ್ನಿವೇಶ… ಗಂಡನ ಮನೆಗೆ ಹೋಗುವ ದಾರಿಯಲ್ಲಿಮೌನವಾಗಿ ದೇವರನ್ನು ಕೇಳಿದಳು — ಕಳವಳಗೊಳ್ಳುತ್ತಾ ಬಳಲುತ್ತ ಬೇಡುವೆತಿಡಿಗೇಡಿಗೆ ಹೇಳೊ ಮನಶಾಂತಿಯ !! ನೊಂದ ಜೀವ ಬೆಂದ ಮನ ಸಂದುಸಂದಿನನೋವ ಅಂದಿಂದ ಮೈ ಮನಕೆಂದೇ !! ಹಂಣ್ಣಾದ ಈ ಮನಕೆ ಸಣ್ಣ ಮಾಡುವುದಕ್ಕೆ?!ಕಣ್ಣು ತೆರೆದು ಕರುಣಿಸಯ್ಯ ರೋಮರೋಮಂಗಳಿಗೆ ಸ್ವಾಮಿ ನಿನ್ನಯ ಒಲವು ಅಮರ ಧಾರೆಯ ಎರೆಯಯ್ಯಾ!! ಭವ ದೂರ ಭವನಾಶ ‘ಜಯ ಸಿದ್ದರಾಮೇಶನೆ’ ದಯದೋರೊ ಎನ್ನ ಭಯ ದೂರ ಸರಿಸೋ !! ಜಯದೇವಿ ತಾಯಿಯವರ ತಮ್ಮ ಶಿವಶಂಕರ್ ಮಡಕಿ ,ತಂಗಿಶ್ರೀದೇವಿ ಗಾಡವೆ, ,ಮಗಳು ಶಶಿಕಲಾ ಮಡಕಿ, ತಂಗಿ ಸುಮತಿ ಅಸ್ಟುರೆ ಗಂಡನ ಮನೆ ಅವರನ್ನು ಕಾಯುತ್ತಿತ್ತು…..ಆದರೆ ಕಣ್ಣುಗಳಲ್ಲಿ ಜೀವಂತವಾಗಿದ್ದಒಂದು ಚಿಕ್ಕ ಮುಖ…ಒಂದು ಅಪೂರ್ಣ ನಗುವಿನ ನೆನಹು ಮನದಲಿ ತುಂಬಿತ್ತು ………. ಅಲ್ಲಿ ಇನ್ನೂ ಏನ ಗ್ರಹಚಾರವಿದೆಯೋ..ಅತ್ತೆಯ ನೆನಪಾಗಿ ಕೈ ಕಾಲುಗಳು ನಡುಗಲಾರಂಭಿಸಿದವು. ‌‌ ಖಾಲಿ ಕೈಯಲ್ಲಿ ಹೇಗೆ ಹೋಗುವದು ಬರಿದಾದ ಒಡಲನ್ನು ತೆಗೆದುಕೊಂಡು…????ಹೆದರುತ್ತ ಹೆದರುತ್ತಲೇ ಗಂಡನ ಮನೆಯಲ್ಲಿ ಕಾಲಿಟ್ಟ ತಕ್ಷಣ ಅತ್ತೆ ಪ್ರಯಾಗಬಾಯಿ ಎದುರಾದರು …… ಎದುರಾದ ಅತ್ತೆ ಮುಖ ಕಳೆಗುಂದಿತು ಕರುಣಾ ಮಯಿಯಾಗಿ ಕಂಡರು……. ಮಡಿಲಲ್ಲಿ ಮಗು ಇಲ್ಲದ ಸೊಸೆಯ ಕಣ್ಣುಗಳೇ ಸಾವಿರ ಮಾತುಗಳ ಹೇಳುವದ ಕಂಡು……. ಬಾಗಿಲ ಬಳಿ ನಿಂತಿದ್ದ ಸೊಸೆಯನ್ನು ನೋಡಿಅತ್ತೆಯ ಹೃದಯ ಕಗ್ಗತ್ತಲಾಯಿತು…..ಸೊಸೆ ಒಂದು ಹೆಜ್ಜೆ ಒಳಗೆ ಇಟ್ಟಳು…….ಸೊಸೆಯ ಕಾಲನಡಿಗೆಯ ನಡುಗು.ಹೃದಯದಲ್ಲಿ ಹೊತ್ತಿ ಉರಿಯುವ ಶೋಕ……ಕಣ್ಣುಗಳಲ್ಲಿ ಅಳಲು ,ಒಣಗಿದ ಕಣ್ಣೀರು, ನೋವಿನ ನಿರಾಶೆ, ಜೀವ ಒಡೆದುಹೋದ ವ್ಯಥೆ ಹೇಳಿದವು… ಅತ್ತೆ ಮುಂದೆ ಬಂದು “ಇರ್ಲಿ ನಿನ್ನ ಮಗನ ಶಿವ ಕರ್ಸ್ಕೊಂಡಾನ ಇಂತಹ ಹತ್ತು ಮಕ್ಕಳನ್ನು ಮತ್ತೇ ಹೆರುವಂತಿ ಬಾ ಒಳಕ್ಕೆ ಬಾ “ಅಂದರಂತೆ ಕಣ್ಣಲ್ಲಿ ನೀರುತುಂಬಿಕೊಕಡಿದ್ದವು.. ಒಂದು ಕ್ಷಣದಲ್ಲಿ ‘ಅತ್ತೆ’ … ‘ತಾಯಿ’ ಆಗಿಬಿಟ್ಟಳು.ಸೊಸೆಯ ಖಾಲಿ ಕೈಗಳನ್ನು ಮಮತೆಯಿಂದ ಗಟ್ಟಿಯಾಗಿ ಹಿಡಿದರು.ಇದು ಮೊಟ್ಟಮೊದಲ ಬಾರಿ —ಪ್ರೀತಿಯಿಂದ ಸೊಸೆ ಎದೆಗೆ ತಲೆ ಒರಗಿಸಿಮುರಿದು ಬಿದ್ದಳು.ಇಬ್ಬರ ನೋವು ಒಂದಾಗಿ ಹರಿದ ಕ್ಷಣಗಳಿಗೆಆ ಮನೆಯ ಗೋಡೆಗಳು ಸಾಕ್ಷಿಯಾಗಿದ್ದವು —ಕಾಡುತ್ತಿದ್ದ ಅತ್ತೆ ಇವತ್ತು ಕರಗಿಬಿಟ್ಟಳು.ಸೊಸೆ ಮಾತಾಡಲಿಲ್ಲ. ಮೌನವಾಗಿ ಒಳ ನಡೆದರು. ಆ ದಿನದಿಂದ ಆ ಮನೆಯ ವಾತಾವರಣ ಬದಲಾಗಿತು.ಅತ್ತೇಯ ಕಾಡುವ ಮಾತುಗಳು ಇಲ್ಲವಾಗಿದ್ದವು….. ಕಾಲ ಕೆಲವೊಮ್ಮೆ ಶಿಕ್ಷಕ ಆಗುತ್ತೆ ಅಲ್ಲವೇ….!!! ಒಂದು ಮರಣ ಎರಡು ಹೃದಯಗಳನ್ನು ಹತ್ತಿರ ಮಾಡಿತು.ಅದಕ್ಕೆ ಜಯದೇವಿತಾಯಿಯವರು ಹೇಳ್ತಾರೆ “ಕಾಡುವವರು ಇರಬೇಕ/ ಕಡಿತನಕ ಜನುಮಕ್ಕ ನೋಡುವರ ಇರಬೇಕು ವರೆಗೆ ಹಚ್ಚಿ-ಈ ಮನೆಕ ನೀಡುವರು ಇರಬೇಕ ನಿಜದರಿವ!! ಕಾಡುವರು ನನಗ /ಕಡೆತನಕ ಇರಲವ್ವಕೇಡ ಬಯಸಿನು ನಾ ಅವರಿಗ-ಕಡೆತನಹಾಡಿ ಹರಿಸುತ ಸುಖಿಸುವೆ!! ಏಕೆಂದರೆ ಒಂದೊಂದು ಕಠಿಣ ಪರೀಕ್ಷೆಗಳು ಅವರನ್ನು ದೇವರ ಸಮೀಪ ಕರೆದು ಒಯ್ಯಯುತಿವೆ. ಅನ್ನುವುದು ಖಚಿತಗೊಳ್ಳಲಾರಂಭಿಸಿತ್ತು..ಅತ್ತೆಯ ಕಾಟಾಚಾರವು ಕೂಡಾ ಜೀವನದಲ್ಲಿ ಅನೇಕ ಪಾಠಗಳನ್ನು ಕಲಿಸಿದ್ದವು ಅವರಿಗೆ ಸಕಾರಾತ್ಮಕ ಬದುಕನ್ನು ಬದುಕುವ ಪಾಠ ಕಲಿಸಿತ್ತು ಅಂತ ಹೇಳುತ್ತಿದ್ದರು. “ನೋವಿನ ಪೆಟ್ಟು ಬಿದ್ದಂತೇಲ್ಲ ಸಿದ್ದರಾಮನ ಸಾಮಿಪ್ಯಕೆ ಸಮಿಸತಾ ಹೋದೆ…. ಹಾಗೆ ಕನ್ನಡ ತಾಯಿಯನ್ನು ನಾನು ಅಪ್ಪಿಕೊಳ್ತಾ ಹೋದೆ ‌…….ಮನದಲ್ಲಿ ಉಲ್ಬಣಿಸುತ್ತಿದ್ದ ವೇದನೆಗಳು… ಕಾವ್ಯದ ರೂಪದಲ್ಲಿ ಮನದ ಮೂಲೆಯಲ್ಲಿ ಹರಿದು ಬರುತ್ತಿತ್ತು ಕಷ್ಟಗಳನೆಲ್ಲ ನನ್ನ ತಾಯಿ ಭಾಷೆ ಕನ್ನಡಭಾಷೆಯಲ್ಲಿ ತೋಡಿಕೊಳ್ಳುತ್ತಿದ್ದೆ …. ಆದರೆ ಅವುಗಳನ್ನು ಶಬ್ದಾಂಕನ ಗೊಳ್ಳಿಸಲಿಕ್ಕೆ ಬೇಕಾಗುವ ಕನ್ನಡ ಶಬ್ದಗಳು ಬರೆಯುವ ಜ್ಞಾನ ಇನ್ನೂ ನನಗೆ ಇರಲಿಲ್ಲ ಏಕೆಂದರೆ ನಾಲ್ಕನೇ ಇಯತ್ತೆ ಮರಾಠಿ ಕಲಿತವಳು…ಕನ್ನಡ ಭಾಷೆಯನ್ನು ಬರೆಯಲು ನಾನು ಕಲಿತಿರಲಿಲ್ಲ .”ಅಂತ ಹೇಳ್ತಾ ಇದ್ದರು. ಜಯದೇವಿ ತಾಯಿಯವರ ಮೈದುನ ಜಗದೇವಪ್ಪನವರು ಗಂಡ ಚೆನ್ನಮಲ್ಲಪ್ಪನಂತೆ ವ್ಯಾಪಾರದಲ್ಲಿ ಜಾಣರೇನು ಆಗಿರಲಿಲ್ಲ…….!! ಕೆಟ್ಟ ಸಂಗತಿಯ ಗೆಳೆಯರಿಂದ ಅವರು ದಾರಿ ತಪ್ಪುತ್ತಿರುವುದನ್ನು ನೋಡಿದ ಪ್ರಯಾಗಬಾಯಿಯು ಒಬ್ಬ ಸುಂದರ ಮರಾಠವಾಡಾದ ಹೆಣ್ಣನ್ನು ನೋಡಿ ಮದುವೆ ಮಾಡಿದರು.ಆದರೆ ಮದುವೆಯಾಗಿ ಬಂದ ಓರಗಿತ್ತಿಯು ತಾಯಿಯವರ ತದ್ವಿರುದ್ಧ ಅವಳು ತುಂಬಾ ಚಂಚಲೆ, ಚಟಪಟ ಅಂತ ಮಾತನಾಡುವ ಎದುರುತ್ತರ ನೀಡುವ ಸೊಸೆ ….ಅತ್ತಿಯಂದಿರು ಹೇಳಿದ ಮಾತುಗಳನ್ನು ಕೇಳುತ್ತಿರಲಿಲ್ಲ… ಹೀಗಾಗಿ ಮದುವೆಯಾದ ಹೊಸತರಲ್ಲಿ ಪ್ರಯಾಗಬಾಯಿ ಸಣ್ಣ ಸೊಸೆಗೆ ಯಾವುದಾದರೂ ಸಣ್ಣ ಕೆಲಸ ಹೇಳಿದರು ಓರಗಿತ್ತಿಯು ಮಾಡುತ್ತಿರಲಿಲ್ಲ.ಅವಳು ರಾತ್ರಿ ಸಮಯ ಒಂಬತ್ತು ಗಂಟೆ ಆಗುತ್ತಿದ್ದಂತೆ ತನ್ನ ಗಂಡನ ಕೋಣೆಗೆ ಹೋಗಿಬಿಡುತ್ತಿದ್ದಳು . ಸಿರಿಮಂತ ಮನೆಯ ಸೊಸೆ ಅಲ್ಲವೇ ಬೆಳಗ್ಗಿನ ವಿಹಾರಕೆ ಅಂತ ಇಬ್ಬರೂ ಗಂಡ ಹೆಂಡದಿರು ಹೊರಟು ಹೋಗುತ್ತಿದ್ದರು.ಅತ್ತಿಯಂದಿರ ಹೇಳುವ ಕೆಲಸಗಳನ್ನು ಎಷ್ಟು ಕೇಳಬೇಕು ಅಷ್ಟೇ ಕೇಳುವಳು…ತಾನಾಯಿತು ತನ್ನ ಗಂಡನಾಯಿತು ಅಷ್ಟೇ ಅವಳ ಪ್ರಪಂಚವಾಗಿತ್ತು. ಜಯದೇವಿ ತಾಯಿಯವರಂತೆ ಸುಶೀಲ ಸದ್ಗುಣ ಸಾಧ್ವಿ ಸೊಸೆ ಆಗಿರಲಿಲ್ಲ ಹೀಗಾಗಿ ಸಹಜವಾಗಿ ಪ್ರಯಾಗಬಾಯಿಗೆ ಜಯದೇವಿ ತಾಯಿಯವರ ಮೇಲೆ ನಂಬಿಕೆ ಪ್ರೀತಿ ಮಮತೆ ಹುಟ್ಟಲಾರಂಭಿಸಿತು. ಅತ್ತೆಯಂದಿರ ನೆಚ್ಚಿನ ಸೊಸೆಯಾದರು . ಜಯದೇವಿ ತಾಯಿಯವರ ಗಂಡನ ತಮ್ಮನ ಮದುವೆಯಾದ ನಂತರ ತಾಯಿಯವರು ಎರಡನೆಯ ಹೆರಿಗೆ ಹೋದರು ಈ ಸಲ ಮೊದಲ ಹೇರಿಗೆ ಅಂತ ಉತ್ಸಾಹ ಸಂತಸ ಯಾವುದು ಇರಲಿಲ್ಲ ಯಾವ ಸಂಭ್ರಮ ಇರಲಿಲ್ಲ ಸಹಜವಾಗಿ ಹೊರಟು ನಿಂತರು. ಈ ಸಲದ ಹೇರಿಗೆಯು ಸುರಕ್ಷಿತವಾಗಿ ಸುಗಮವಾಗಿ ಸಾಗಿತು. ಅತ್ಯಂತ ಸುಂದರ ಹೆಣ್ಣು ಮಗುವಿಗೆ ಜನ್ಮವನ್ನು ಕೊಟ್ಟರು ಚಂದಿರನಂತೆ ಸುಂದರವಾಗಿದ್ದ ಮಗುವಿಗೆ ‘ಶಶಿಕಲಾ ‘ಎಂದು ನಾಮಕರಣ ಮಾಡಿ ಸಂತೈಸಿದರು .ಇಷ್ಟರಲ್ಲಿ ಬ್ರಿಟಿಷರ ಸೊತ್ತಾಗಿದ್ದ ಲಿಗಾಡೆ ಮನೆತನದ ಆಸ್ತಿಯನ್ನೆಲ್ಲ ಚೆನ್ನಮಲ್ಲಪ್ಪನವರಿಗೆ ಬ್ರಿಟಿಷರು ಆದರದಿಂದ ಒಪ್ಪಿಸಿದ್ದರು.ನಂತರ ಅವರು ಮೂರನೇ ಹೇರಿಗೆ ಹೋರಟರು ಹೀಗೆ ಮೇಲಿಂದ ಮೇಲೆ ತವರು ಮನೆಗೆ ಹೋಗುವುದು ಗಂಡನಿಗೆ ಬೇಸರ ತರುತ್ತಿದ್ದರು ಹೇರಿಗೆಯೂ ಮನೆಯಲ್ಲಿ ಆಗಲಿ ಅಂತ ಹೇಳುವ ಧೈರ್ಯ ಅವರಿಗೆ ಇರಲಿಲ್ಲ. ಅನಿವಾರ್ಯ ಹೋಗಲೇ ಬೇಕಾಲ್ಲ…ಮೂರನೆಯ ಹೇರಿಗೆ ಸುಂದರ ಗಂಡು ಮಗವನ್ನು ಹೆತ್ತರು. ಅವನಿಗೆ ‘ಶ್ರೀಕಂಠ ‘ಅಂತ ಹೆಸರಿಡಲಾಯಿತು. ಅತ್ಯಂತ ಅದ್ದೂರಿಯಾಗಿ ಸಂಭ್ರಮವನ್ನು ಆಚರಿಸಿದರು.ಗಂಡು ಮಗ ಅಂದರೆ ಕೇಳಬೇಕು ಆಗಿನ ಕಾಲದಲ್ಲಿ ಗಂಡು ಮಗ ಹುಟ್ಟಿದರೆ ಸ್ವರ್ಗದ ಬಾಗಿಲ ತೆರೆದಂತೆಆದರೆ ಜಯದೇವಿ ತಾಯಿಯವರು ಹೆಣ್ಣು ಗಂಡು ಎರಡನ್ನು ಸಮಾನತೆಯಲ್ಲಿ ನೋಡುವ ದೃಷ್ಟಿಕೋನವನ್ನು ಚಿಕ್ಕವರಿರುವಾಗಲೇ ಅವರು ಹೊಂದಿದವರಾಗಿದ್ದರು. ಅದಕ್ಕೆ ತಾಯಿಯವರು ಒಂದು ಕಡೆ ಬರೆಯುತ್ತಾರೆ ಹೆಣ್ಣು ಹುಟ್ಟೇದಂತ | ಕಣ್ಣೀರ ಕರಿಬ್ಯಾಡ ಸಣ್ಣಾಗಬ್ಯಾಡ ಮನದಾಗ -ತಾಯವ್ವಹೆಣ್ಣಿನ ಜಗದ ಕಣ್ಣೇನ || ಕಾನೂನು ಬದ್ಧವಾಗಿ ಹೆಣ್ಣು ಗಂಡು ಇಬ್ಬರೂ ಸಮಾನತೆ ಪಡೆಯುವಂತಹ ಕಾಲದಲ್ಲಿ ಜಯದೇವಿ ತಾಯಿಯವರು ಹುಟ್ಟಿದ್ದರೂ ಸಂಪ್ರದಾಯದಾಯಸ್ಥ ಕುಟುಂಬಕ್ಕೆ ಪುಷ್ಟಿ ಕೊಟ್ಟವರು.ಯಾವ ಕಾಲದಲ್ಲೂ ಹೆಣ್ಣು ಹುಟ್ಟಿ ಎರಡು ಮನೆಯಲ್ಲಿ ದೀಪ ಬೆಳಗುವಳಾಗಬೇಕು. ಕುಟುಂಬದ ಹೃದಯವಾಗಿ ನಿಲ್ಲಬೇಕು ನಿಜ . ಸೊಸೆಯಾಗಿ ಬಂದವಳು ಮೊದಲು ಸಹನೆ ಸೈಯ್ಯಮ ವಿನಯತೆ ಅವಳಿಗೆ ಆಭರಣ …ಹಿರಿಯರಿಗೆ ಆದರ ತೋರುತ್ತ ಕುಟುಂಬವ ನಿರ್ವಹಿಸುವುದೇ ಅವಳ ಧರ್ಮ. ಸಂಪ್ರದಾಯದ ಬಳುವಳಿಯನ್ನೇ ಬಳವಿಗೆ ಮಾಡಿದ್ದಾರೆ. ಕುಟುಂಬ ಜೀವನದ ಅನೇಕ ಏರಿಳಿತದ ಬಗ್ಗೆ ಹೇಳ್ತಾ ಹೋಗ್ತಾರೆ … ಗರತಿಯ ಬಗ್ಗೆ ಹೀಗೆ ಹೇಳ್ತಾರೆ “ದಯ ಬೇಕ ನುಡಿಯಲಿ |ಭಯ ಬೇಕ ನಡೆಯಲ್ಲಿ ದಯ ಬೇಕ ಸಕಲ ಜೀವನದಲ್ಲಿ -ತಾಯವ್ವಲಯ ಬೇಕು ಶಿವನ ನೆನಹುನಲಿ|| ಸೊಸೆಯಾದವಳು ಮೊದಲು ಮನೆ ಕೆಲಸ ಮಾಡಿ ಮನೆಯ ಮಂದಿಯ ಮನವನ್ನೇಲ್ಲ ಗೆಲ್ಲಬೇಕು ಗಂಡನ ಮನ ಗೆಲ್ಲಬೇಕು…. ವಿನಯಶೀಲರಾಗಿರಬೇಕು… ಎಲ್ಲರ ಬೇಕು ಬೇಡುಗಳನ್ನು ನೋಡುವಂಥವಳು ಆಗಿರಬೇಕು. ಮಾತಿಗೆ ಮಾತು ಬೆಳೆಸದಂಥವಳಿರಬಾರದು ಹೆಚ್ಚು ಅಗೆದರೆ ತಗ್ಗು ಬೀಳುವುದು ಹೆಚ್ಚು…. ಎಂಬಂತೆ ಮಾತಿನ ಗತಿ ಹೇಗಿರಬೇಕೆಂದರೆ ಮನಗಳನ್ನು ತಿಳಿಯಾಗಿಸಬೇಕು ಅನ್ನುತ್ತಿದ್ದರು ….ಮನೆಯ ಕಂಬವಾಗಿರಬೇಕು ಸೊಸೆ ಆದವಳು. ಸಿಟ್ಟಲಿ ಗಂಡ-ಅತ್ತೆಗ ಎದುರು ಉತ್ತರ ನುಡಿದರೆಮನೆಯವರ ಮನ ಸುಡು ಸುಡು ಸುಟ್ಟುಮರಳಿ ಸೊಸೆಯ ಕಡೆಗೆ ಚಟ್ಟಂತಹ ಸಿಡಿಯುವದಬಿರುಗಾಳಿ ಬೀಸಿದಂಗ ತೂರಿ ಬಂದ ಮಾತುಗಗನಕ್ಕಹಾರಿ ಒಯ್ದು ನೆಲಕ್ಕೆ ದೊಪ್ಪೆಂದ ಒಗೆವದ.. ಅಂತ ಹೇಳುವ ಮಾರ್ಮಿಕವಾದ ಉದಾರಣೆಯನ್ನು ಹೇಳುತ್ತಿದ್ದರು .ಹೆಣ್ಣಾದವಳು ನಗುನಗುತ ಮಾತಾಡಬೇಕುಹಗೆ ಎದುರಾದರೂ ಹೊಗೆ ನುಡಿ ಸಲ್ಲಕಾಣಲಾರದ ಕಣ್ಣು ಕಂಡ್ನಗ ಕಂಡಹಂಗ ಆಡಿ ಬಾಣಧಾಂಗ ಮಾತು ಮರಳಿ ಬಡೆಯದ ಮುನ್ನ ಜೋಕೆಯಿಂದಿದ್ದುತಾನು ಸುಟ್ಟುಕೊಂಡು ಇತರರ ಮನ ತಂಪಾಗಿರಬೇಕು….. ತುಪ್ಪ ಸಕ್ಕರೆ ಉಪ್ಪ-ಖಾರ ಉಣಿಸಿ ಒಪ್ಪುಳ್ಳ ಮಾತು ಕಲಿಸಿದರೆ ನಾಲಿಗೆ ಹಾಲಿನ ಹೆಪ್ಪುಗೆಡಿಸಿತ್ತು ಆಗಸಿರಿ ಇದ್ದು ಸುತರಿದ್ದು ಸುಖವಿಲ್ಲ ಹಿತವಿಲ್ಲದಿದ್ದರೆ ಫಲವೇನು….. ಎನ್ನುತ್ತಾರೆ ಕಡಿಮೆ ಎಂದರೆ ಮೂರು ತಲೆಮಾರಿನವರು ಜನರು ಕೂಡಿ ಇರುವ ಪದ್ಧತಿಯೇ ನಮ್ಮ ಸಂಸ್ಕೃತಿ ನಮ್ಮ ದೇಶದ ಪರಂಪರೆಯ ಬಳುವಳಿಯನ್ನು ನಾವು ಮೀರಬಾರದು ಅನ್ನುವುದು ಜಯದೇವಿ ತಾಯಿಯವರ ವಾದವಾಗಿತ್ತು. ಐದು ಜನ ಅತೇರ ಕೈಯಲ್ಲಿ ನಡೆದು ನಾಲ್ಕು ಜನ ಸೊಸೆಯೊಂದನ್ನು ನಡೆಸಿಕೊಂಡ ಗೊತ್ತು 23 ಮೊಮ್ಮಕ್ಕಳು ಮರಿ ಮೊಮ್ಮಕ್ಕಳನ್ನು ಕಂಡತುಂಬಾ ಜೀವನದ ಅನುಭವದ ವಿಚಾರ. ಹರೆಯದ ಹೆಣ್ಣು ನೂರಾರು ಆಸೆ ಹೊತ್ತು ಅತ್ತೆಯ ಮನೆಗೆ ಬಂದಾಗ ತನ್ನ ಸುಖಕ್ಕಿಂತ ಮನೆಯಲ್ಲಿಯೇ ಹಿತ ರಕ್ಷಿಸುವುದೇ ಮೇಲು ತನ್ನ ಮನ ನೊಂದರು ಉಳಿದವರ ಮನನೊಯದಂತೆ ನೋಡಿಕೊಳ್ಳಬೇಕು ಅನ್ನುತ್ತಿದ್ದ . ಅವಿಭಕ್ತ ಕುಟುಂಬದಲ್ಲಿ ಬೆಳೆದ ತಾಯಿಯವರು ಸ್ವಾಭಿಮಾನದಿಂದಲೇ ಈ ಮಾತುಗಳ ಹೇಳಿದ್ದಾರೆ ನಮ್ಮ ಸಂಸ್ಕೃತಿಯಿಂದ ದೂರ ಸರಿಯದೇ ವ್ಯಕ್ತಿ ವಿಕಸನವನ್ನು ಮಾಡಿಕೊಳ್ಳಬಹುದು….. ಬೆಳೆಯಬಹುದು ಅನ್ನುವುದು ತೋರಿಸಿಕೊಟ್ಟ ಸಾಕ್ಷಾತ್ ನಿದರ್ಶನ ಅವರ ಜೀವನ. ಹಾಗೆ ಹೆಣ್ಣಾಗಿ ಸತ್ಯಕ್ಕಾಗಿ ಹೋರಾಡಬೇಕು, ಕೆಟ್ಟದ್ದನ್ನು ಪ್ರತಿಭಟಿಸಬೇಕು ,ಗಂಡನಿಗೆ ಸರಿ ಸಮಾನವಾಗಿ ನಿಲ್ಲಬೇಕು ಜೀವನದಲ್ಲಿ ಸಾಧನೆ ಮುಖ್ಯ ಗುರಿ ಆಗಿರಬೇಕು ಜ್ಞಾನಧ ಎತ್ತರಕ್ಕೆ ಇರಬೇಕು ಅನ್ನೋ ಧೋರಣೆಯನ್ನು ಕೂಡ ಹೊಂದಿದ್ದರು. ಮೊದಲು ಹೆಣ್ಣಾದವಳು ಸೋತು ಸೋತು ಗೆಲ್ಲಬೇಕು ಅನ್ನುವ ತಮ್ಮ ಅನುಭವವನ್ನು ಎಲ್ಲರೊಂದಿಗೆ ಹಂಚಿಕೊಳ್ಳುವುದು ವೈಶಿಷ್ಟ ಪೂರ್ಣವಾದ ವ್ಯಕ್ತಿ ವಿಶೇಷತೆ ತೋರುತ್ತದೆ. ವ್ಯಾಪಾರದಲ್ಲಿ ನೈಪುಣ್ಯತೆ ಹೊಂದಿರುವ ತಂದೆ ಚನ್ನಬಸಪ್ಪನವರ ಜೊತೆ ಕೂಡಿ ವ್ಯಾಪಾರವನ್ನು ಮಾಡುತ್ತಿದ್ದರು…ಗಂಡ ಚೆನ್ನಮಲ್ಲಪ್ಪನವರು. ಹಾಗೆ ಜಯದೇವಿ ತಾಯಿಯವರ ಅಕ್ಕ ತಂಗಿಯರು ಅಣ್ಣ ತಮ್ಮಂದಿರನ್ನು ಆದರದಿಂದ ನೋಡಿಕೊಳ್ಳುತ್ತಿದ್ದರು.ಜಯದೇವಿ ತಾಯಿಯವರ ತಂಗಿಯಂದಿರು ಮಕ್ಕಳ ವಯಸ್ಸಿನವರಷ್ಟೇ ಇದ್ದರು .ಆಗಿನ ಕಾಲದಲ್ಲಿ ತಾಯಿ ಮಗಳ ಹೆರಿಗೆ ಜೊತೆ ಜೊತೆಗೆ ಆಗುವುದು ಸಹಜವಾಗಿತ್ತು…..ಹೀಗಾಗಿ ಜಯದೇವಿ ತಾಯಿಯವರ ತಂಗಿಯಂದಿರು ಹಾಗೂ ಮಕ್ಕಳು ಎಲ್ಲರೂ ಸೇರಿ ಶಾಲೆಗೆ ಹೋಗುತ್ತಿದ್ದರು. ಈ ಸಮಯದಲ್ಲಿ ತಾಯಿಯವರಿಗೆ ವಚನವನ್ನು ಓದುವ ಮಹದಾಸೆ ಹೆಚ್ಚಾಗಿ ತೊಡಗಿತ್ತು.ಶರಣರ ಬಗ್ಗೆ ಕೇಳಿ ತಿಳಿದುಕೊಳ್ಳುತ್ತಿದ್ದರು. ಆಳವಾದ ಅಮೂಲ್ಯವಾದ ವಚನ ಸಾಹಿತ್ಯವನ್ನು ಅಭ್ಯೆಸಿಸಬೇಕು ತನ್ನಲ್ಲಿ …ಹುಟ್ಟುವ ಭಾವನೆಗಳನ್ನು ತಾಯಿ ಭಾಷೆಯಲ್ಲಿ ವ್ಯಕ್ತಪಡಿಸಬೇಕು ಅನ್ನುವ ತಳಮಳ ಅವರಲ್ಲಿ ಉಲ್ಬಣಗೊಳ್ಳಲಾರಂಭಿಸಿತು ….ಕನ್ನಡ

Read Post »

You cannot copy content of this page

Scroll to Top