ಅಂಕಣ ಸಂಗಾತಿ ವೃತ್ತಿ ವೃತ್ತಾಂತ ಸುಜಾತಾ ರವೀಶ್ ವೃತ್ತಿ ಬದುಕಿನ ಹಿನ್ನೋಟ-29 ವೃತ್ತಿ ವೃತ್ತಾಂತವೃತ್ತಿ ಬದುಕಿನ ಹಿನ್ನೋಟನೋಟ ~ ೨೯ ಈ ಹಿಂದೆ ಮೈಸೂರಿನಿಂದ ವರ್ಗವಾಗಿ ಹೋಗಿದ್ದ ರೇಣುಕುಮಾರಿ ಹಾಗೂ ಪದ್ಮಿನಿ ಎನ್ನುವರು ಅಲ್ಲಿ ಒಬ್ಬರ ಮನೆಯಲ್ಲಿ ಪೇಯಿಂಗ್ ಗೆಸ್ಟ್ ಆಗಿ ಇದ್ದರು. ಅವರು ಮತ್ತೆ ವಾಪಸ್ ಮೈಸೂರಿಗೆ ವರ್ಗವಾಗಿದ್ದರಿಂದ ಅವರ ಜಾಗದಲ್ಲಿ ಆ ಹಾಸ್ಟೆಲಿಗೆ ನಾವು ಸೇರುವುದು ಎಂದು ಈಗಾಗಲೇ ನಾನು ಸುಲೋಚನ ನಿರ್ಧರಿಸಿದ್ದೆವು. ರವೀಶ್ ನನ್ನ ಜೊತೆ ಬರಲು ನಿರ್ಧರಿಸಿದ್ದರಿಂದ ಸುಲೋಚನ ಅವರ ಅಕ್ಕ ಬರುವುದು ಬೇಡ ಎಂದು ಹೇಳಿ ನಾವು ಡಿಸೆಂಬರ್ ೧ ೧೯೯೭ರ ಬೆಳಿಗ್ಗೆ 5:30 ಬಸ್ಸಿಗೆ ಸಕಲೇಶಪುರಕ್ಕೆ ಹೊರಟೆವು.ಮೊದಲು ರವೀಶ್ ಅವರ ಸಂಬಂಧಿ ಸತ್ಯ ಅವರ ಮನೆಗೆ ಹೋಗಿ ತಿಂಡಿ ತಿಂದು ನಂತರ ಆಫೀಸಿನ ಕಡೆ ಹೋದೆವು. ಮಾಮೂಲಿನಂತೆ ಡ್ಯೂಟಿ ರಿಪೋರ್ಟ್ ಹಾಗೂ ವರ್ಗಾವಣೆ ಅರ್ಜಿ ಎರಡನ್ನು ಸಲ್ಲಿಸಿಆಯಿತು. ಆದರೆ ಕನ್ಫರ್ಮೇಷನ್ ಆಗುವ ತನಕ ನಮ್ಮ ಅರ್ಜಿಗೆ ಮಾನ್ಯತೆ ಇರುವುದಿಲ್ಲ. ನಾನು ಈಗಾಗಲೇ ಹೊಸ ವ್ಯವಹಾರ ವಿಭಾಗದಲ್ಲಿ ವಿಭಾಗ ಕಚೇರಿಯಲ್ಲಿ ಇದ್ದುದರಿಂದ ನನಗೆ ಅದೇ ಡಿಪಾರ್ಟ್ಮೆಂಟ್ ಕೊಟ್ಟರು. ಸುಲೋಚನಾ ಅವರು ಪಾಲಿಸಿ ಸೇವಾ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವುದರಿಂದ ಅವರಿಗೆ ಗೊತ್ತಿದ್ದ ಅದೇ ಡಿಪಾರ್ಟ್ಮೆಂಟ್. ಮಧ್ಯಾಹ್ನ ರವೀಶ್ ಅವರು ವಾಪಸ್ ಹೋದರು. ಸಂಜೆ ಕಚೇರಿ ಮುಗಿದ ನಂತರ ರೇಣು ಅವರ ಜೊತೆಯಲ್ಲಿ ಹಾಸ್ಟೆಲ್ ಗೆ ಹೋದೆವು. ಈಗಾಗಲೇ ಅಲ್ಲಿ ಮತ್ತೊಬ್ಬರು ಉಪಾಧ್ಯಾಯಿನಿ ಶಿಲ್ಪ ಎನ್ನುವವರು ಇದ್ದರು. ಒಟ್ಟು ಮೂರು ಜನ ಒಂದು ಕೋಣೆಯಲ್ಲಿ ಇದ್ದುದ್ದು. ನಾವು ಹೊಸಬರು ಡ್ಯೂಟಿ ರಿಪೋರ್ಟ್ ಮಾಡಿಕೊಂಡ ನಂತರ ಮುಂದಿನ ವಾರ ಅವರು ಅಲ್ಲಿಂದ ರಿಲೀವ್ ಆಗಬೇಕಿದ್ದು ಹಾಗಾಗಿ ಆ ಒಂದು ವಾರ ಆ ಚಿಕ್ಕ ಕೋಣೆಯಲ್ಲಿ ನಾವು ಇರಲು ಸಾಧ್ಯವಿರಲಿಲ್ಲ. ಆ ಪ್ರಶ್ನೆ ನಮಗೆ ಎದುರಾಗಿಯೇ ಇರದುದ್ದರಿಂದ ಎಲ್ಲಿ ಇರುವುದು ಎನ್ನುವ ಪ್ರಶ್ನೆ ಉದ್ಭವವಾಯಿತು. ಸಂಬಂಧಿಗಳ ಮನೆ ಸಹ ಚಿಕ್ಕದಾಗಿದ್ದರಿಂದ ಅಲ್ಲಿ ಉಳಿಯುವುದು ಸಾಧ್ಯವಿರಲಿಲ್ಲ. ಕಡೆಗೆ ಊರಿಗೆ ವಾಪಸ್ ಆಗಿ ಮುಂದಿನ ವಾರ ಬರುವುದು ಎಂಬ ನಿರ್ಧಾರಕ್ಕೂ ಬಂದೆವು. ಸದ್ಯ ಅಲ್ಲಿಯೇ ಮೂರು ಜನ ಬೇರೆ ನಮ್ಮ ಕಚೇರಿಯ ಉದ್ಯೋಗಿಗಳು ಒಂದು ಮನೆ ಮಾಡಿಕೊಂಡು ಇದ್ದರು. ಇನ್ನುಳಿದ ಐದು ದಿನ ಇಲ್ಲಿಯೇ ಇರಿ ಎಂದು ಅವರು ಆಹ್ವಾನಿಸಿದ್ದರಿಂದ ರಜೆ ಹಾಕುವ ಯೋಚನೆ ಕೈ ಬಿಟ್ಟು ಅಲ್ಲಿಯೇ ಇರಬೇಕಾಯಿತು. ಬಸ್ ಸ್ಟ್ಯಾಂಡ್ ಪಕ್ಕದಲ್ಲಿ ಇದ್ದ ಅವರ ಮನೆ ಅಲ್ಲೇ ಬಸ್ಟಾಂಡ್. ಎದುರಿಗೆ ಆಫೀಸ್. ಅಂತೂ ಅವರ ಜೊತೆ ಅವರಿಗೆ ತೊಂದರೆ ಕೊಟ್ಟುಕೊಂಡು 5 ದಿನ ಇದ್ದು ಹಾಸ್ಟೆಲ್ ಗೆ ಅಡ್ವಾನ್ಸ್ ಕೊಟ್ಟು ಜಾಗ ಖಚಿತಪಡಿಸಿಕೊಂಡಿದ್ದಾಯಿತು.ನನಗೆ ಹೊಸ ವ್ಯವಹಾರ ವಿಭಾಗದಲ್ಲಿ ಆಗ ಜವರಯ್ಯ ಮತ್ತು ಕುಮಾರ್ ಎಂಬುವವರು ಸಹಾಯಕರು. ಇಸ್ಮಾಯಿಲ್ ಎನ್ನುವರು ಅಲ್ಲಿನ ರೆಕಾರ್ಡ್ ಕ್ಲರ್ಕ್. ತುಂಬಾ ಹೊಂದಿಕೊಳ್ಳುವಂತಹ ವ್ಯಕ್ತಿತ್ವದವರು. ಅಲ್ಲಿ ಇದ್ದ ಚಂದ್ರು ಎನ್ನುವವರು ಕ್ಯಾಶಿಯರ್ ಆಗಿ ಹೋಗಿದ್ದರು ಸ್ವಲ್ಪ ಕೆಲಸ ಬಾಕಿ ಉಳಿದಿತ್ತು ಡಿಸೆಂಬರ್ ಅಂತ್ಯದ ವೇಳೆಗೆ ಶೆಡ್ಯೂಲ್ ಗಳನ್ನು ಸಲ್ಲಿಸಬೇಕಿತ್ತು ಅದರ ಕಡೆಯ ಕೆಲಸ ಏನು ಆಗಿರಲಿಲ್ಲ ಸ್ವಲ್ಪ ಹೆಚ್ಚಿನ ಶ್ರಮ ಹಾಕಬೇಕಿತ್ತು.ಐದು ವರೆಗೆ ಸರಿಯಾಗಿ ನಾವು ಹೊರಟರೆ ಅಲ್ಲಿ ಎಲ್ಲರಿಗೂ ಆಶ್ಚರ್ಯ. ಎಲ್ಲರೂ ಅಲ್ಲಿ ಆರು ವರೆ ಏಳು ಗಂಟೆಯ ತನಕ ಆಫೀಸಿನಲ್ಲಿಯೇ ಇರುತ್ತಿದ್ದವರು. ಕೆಲಸ ಬಾಕಿ ಉಳಿದಿದ್ದವರು ಕೆಲಸ ಮಾಡುತ್ತಿದ್ದರು. ಇಲ್ಲದಿದ್ದವರು ಕೇರಂ ಅಥವಾ ಟಿಟಿ ಆಡುತ್ತಾ ಕಾಲ ಕಳೆಯುತ್ತಿದ್ದರು. ಬಹಳಷ್ಟು ಜನ ಮನೆಗಳಿಂದ ದೂರ ಬಂದು ಇಲ್ಲಿ ರೂಮ್ ಮಾಡಿಕೊಂಡು ಇರುತ್ತಿದುದರಿಂದ ಇಲ್ಲಿ ಅದೇ ಸಂಸ್ಕೃತಿ ಬೆಳೆದು ಬಂದಿತ್ತು. ಆ ಒಂದು ವಾರ ನಾವು ಉಳಿದಿದ್ದ ನಮ್ಮ ಉದ್ಯೋಗಿಗಳು ಎಲ್ಲರೂ ಉಡುಪಿಯ ಕಡೆಯವರು. ಅವರಲ್ಲಿ ನೀರಜ ಎನ್ನುವವರಿಗೆ ಮದುವೆಯಾಗಿ ಒಂದು ಮಗುವಿತ್ತು. ಈ ಹಿಂದೆ ಪೋಸ್ಟಲ್ ಡಿಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದವರು ಅದನ್ನು ಬಿಟ್ಟು ಇಲ್ಲಿ ಸೇರಿದ್ದರು. ಮಂಗಳೂರಿಗೆ ವರ್ಗಾವಣೆ ಅರ್ಜಿ ಕೋರೊದ್ದರು. ಪ್ರತಿ ಶನಿವಾರ ಮಧ್ಯಾಹ್ನ ಅವರು ಮಂಗಳೂರಿಗೆ ಹೋಗಿ ಸೋಮವಾರ ಬೆಳಿಗ್ಗೆ ವಾಪಸ್ ಆಗುತ್ತಿದ್ದರು. ಇನ್ನೊಬ್ಬರು ಶುಭದಾ. ಅವರು ಅಷ್ಟೇ ಉಡುಪಿಯವರು. ಅವರ ತಂದೆ ಸಹ ಭಾರತೀಯ ಜೀವ ವಿಮಾ ನಿಗಮದಲ್ಲಿ ಸೇವೆ ಸಲ್ಲಿಸುತ್ತಿದ್ದರು ಅವರಿಗೂ ಒಂದು ಪುಟ್ಟ ಮಗು ಇತ್ತು .ಮತ್ತು ಒಬ್ಬರು ಶ್ರೀಲತಾ ಆಗತಾನೇ ವಿವಾಹವಾಗಿ ವಿವಾಹದ ಆಧಾರದ ಮೇಲೆ ಮಂಗಳೂರಿಗೆ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದರು. ಈಗ ಅವರೊಂದಿಗೆ ನಾವು ಇಬ್ಬರು ಸೇರಿದ್ದೆವು ತುಂಬಾ ಒಳ್ಳೆಯವರು ಚೆನ್ನಾಗಿ ಹೊಂದಿಕೊಂಡು ಹೋಗುತ್ತಿದ್ದರು ನಮ್ಮ ಕಡೆಯ ಅಡುಗೆ ಇಷ್ಟವಾಗಿದ್ದರಿಂದ ಆ ಐದು ದಿನ ಅಡುಗೆಯ ಹೊಣೆ ನಾನೇ ಹೊತ್ತಿದ್ದೆ ಅಲ್ಲಿ ಎಷ್ಟು ಹೊಂದಾಣಿಕೆ ಇತ್ತೆಂದರೆ ಹಾಸ್ಟೆಲ್ ಬದಲು ಅಲ್ಲೇ ಮುಂದುವರೆಯಬಹುದಿತ್ತು ಆದರೆ ಐದು ಜನಕ್ಕೆ ಆ ಮನೆ ಸ್ವಲ್ಪ ಚಿಕ್ಕದಾಗುತ್ತಿತ್ತು ಹಾಗಾಗಿ ಆ ಯೋಜನೆ ಕೈ ಬಿಟ್ಟೆವು. ನಮ್ಮ ಜೊತೆಗೆ ಶಶಿಕಲಾ ಎನ್ನುವವರು ಹುಣಸೂರಿನಿಂದ ಇಲ್ಲಿಗೆ ಉನ್ನತ ದರ್ಜೆ ಸಹಾಯಕಿಯಾಗಿ ಬಂದಿದ್ದರು ಅವರಿಗೆ ಇಬ್ಬರು ಮಕ್ಕಳು, ಬೆಂಗಳೂರಿನಲ್ಲಿ ಅವರ ಪತಿ ಹಾಗೂ ತಾಯಿಯ ಮನೆ ಇತ್ತು ಪ್ರತಿವಾರ ಬೆಂಗಳೂರಿಗೆ ಹೋಗಲು ಕಷ್ಟ ಎಂದು ಎರಡು ವಾರಕ್ಕೊಮ್ಮೆ ಹೋಗುತ್ತಿದ್ದರು ಅವರು ಈ ಬೇರೆ ಇನ್ನೊಂದು ಹಾಸ್ಟೆಲ್ ಸೇರಿದ್ದರು ಆದರೆ ಅದು ನಾನ್-ವೆಜ್ ಸಹ ಇರುವುದರಿಂದ ನಾವು ಹೋಗಲು ಇಷ್ಟಪಡಲಿಲ್ಲ.ಮೊದಲು ನಮ್ಮ ಶಾಖೆ ಬಸ್ ನಿಲ್ದಾಣದ ಎದುರಿನ ರಸ್ತೆ ಮಸೀದಿಯ ಎದುರು ಇತ್ತು ಆದರೆ ಜನವರಿ ತಿಂಗಳಿನಲ್ಲಿ ಬಸ್ ನಿಲ್ದಾಣದ ಎದುರು ಮುಖ್ಯರಸ್ತೆಯ ಒಂದು ಹೊಸ ಕಾಂಪ್ಲೆಕ್ಸ್ ನ ೧ ಹಾಗೂ ೨ ನೆಯ ಮಹಡಿಗೆ ಸ್ಥಳಾಂತರ ಗೊಳ್ಳಲಿತ್ತು. ಆ ನಿಟ್ಟಿನಲ್ಲಿ ಪ್ಯಾಕಿಂಗ್ ಮತ್ತು ಸಾಗಣೆ ಕೆಲಸಗಳ ಹೊರೆಯೂ ಇತ್ತು.ಈ ಹಿಂದೆ ಹೊಸದಾಗಿ ಕೆಲಸಕ್ಕೆ ಸೇರುವಾಗ ನಮ್ಮ ಜೊತೆಯ ಬ್ಯಾಚ್ನಲ್ಲಿ ಇದ್ದ ಮುಕುಂದನ್ ಅವರೂ ಸಹ ಉನ್ನತ ದರ್ಜೆ ಸಹಾಯಕರಾಗಿ ಈ ಶಾಖೆಯಲ್ಲೇ ಇದ್ದರು. ವಿಕ್ರಯ ವಿಭಾಗದಲ್ಲಿ ಅವರಿದ್ದುದು. ಅವರ ಪತ್ನಿ ಅಲ್ಲಿನ ಕಾರ್ಪೊರೇಷನ್ ಬ್ಯಾಂಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದುದರಿಂದ ಅವರು ಇಲ್ಲಿಗೆ ವರ್ಗಾವಣೆ ತೆಗೆದುಕೊಂಡಿದ್ದರು. ನಮ್ಮ ಹೊಸ ವ್ಯವಹಾರ ವಿಭಾಗಕ್ಕೆ ಸಹಾಯಕ ಆಡಳಿತ ಅಧಿಕಾರಿಯಾಗಿ ಇದ್ದವರು ಮಂಜುನಾಥ್ ಎಂಬವರು ಅವರ ಪತ್ನಿ ನವರತ್ನಮ್ಮ ಅವರು ಸಹ ನಮ್ಮ ನಿಗಮದ ಉದ್ಯೋಗಿ ಅದೇ ಶಾಖೆಯಲ್ಲಿ ಇದ್ದರು. ಇತ್ತೀಚಿಗೆ ಸರ್ವಿಸ್ ನಲ್ಲಿ ಇದ್ದಾಗಲೇ ನವರತ್ನ ಅವರು ನಿಧನ ಹೊಂದಿದ್ದರು. ತುಂಬಾ ಒಳ್ಳೆಯವರು. ಸ್ನೇಹಜೀವಿ ಕೂಡ. ಮೊದಲ ವಾರ ಶನಿವಾರ ಮುಗಿದ ನಂತರವೇ ನಾನು ಸುಲೋಚನಾ ಮೈಸೂರಿಗೆ ವಾಪಸ್ ಆದೆವು. ಆನಂತರ ಒಂದೆರಡು ಮೂರು ದಿನ ರಜಾ ಹಾಕಿ ಮತ್ತೆ ಬರುವುದು ಎಂದು ನಿರ್ಧರಿಸಿದ್ದರಿಂದ ಗುರುವಾರದ ದಿನ ಸಕಲೇಶಪುರಕ್ಕೆ ಹೋಗಿ ಸಂಜೆ ಹಾಸ್ಟೆಲ್ ಗೆ ಹೋದೆವು. ಸಕಲೇಶಪುರದ ಚಂಪಕ ನಗರದಲ್ಲಿ ರೋಟರಿ ಎಕ್ಸ್ಟೆಂಶನ್ ಎಂದು ಅದನ್ನು ಕರೆಯುತ್ತಿದ್ದರು. ಮೊದಲ ದಿನ ಮಾತನಾಡಲು ಹೋದಾಗಲೇ ತಲಾ 600 ಅಡ್ವಾನ್ಸ್ ತೆಗೆದುಕೊಂಡಿದ್ದರು. ಚಿಕ್ಕ ರೂಂ ಒಂದು ಡಬಲ್ ಕಾಟ್ ಹಾಕಿದರೆ ಬೆಳಗ್ಗೆ ಸ್ವಲ್ಪ ಜಾಗ ಉಳಿದಿರುತ್ತಿತ್ತು ಅಷ್ಟೇ, ಮೂರು ಜನ ಆದುದರಿಂದ ಹಾಸಿಗೆಯನ್ನು ಸಹ ನಾವೇ ತೆಗೆದುಕೊಳ್ಳಬೇಕು ಎಂದು ಹೇಳಿದರು. ಇಬ್ಬರು ಮಂಚದ ಮೇಲೆ ಒಬ್ಬರು ನೆಲದ ಮೇಲೆ. ಏಕೋ ವಾತಾವರಣವೇ ಸರಿ ಹೋಗಲಿಲ್ಲ .ಇನ್ನು ಊಟ ತಿಂಡಿ ಆ ದೇವರಿಗೆ ಪ್ರೀತಿ .ಎಲ್ಲಾ ಮಾಡಿ ಡೈನಿಂಗ್ ಟೇಬಲ್ ಮೇಲೆ ಇಟ್ಟುಬಿಡುತ್ತಿದ್ದರು. ನಾವು ತಿನ್ನಲು ಹೋಗುವ ವೇಳೆಗೆ ಆರಿ ಅಕ್ಷತೆ ಆಗಿರುತ್ತಿತ್ತು. ಲೆಕ್ಕಾಚಾರವಾಗಿ ಅಷ್ಟೇ ಇಡುತ್ತಿದ್ದರು ನಮಗೇನು ಆ ರುಚಿ ಗೆ ಹೆಚ್ಚು ಬೇಕಾಗುತ್ತಲೂ ಇರಲಿಲ್ಲ. ಆದರೆ ಒಂದು ತರಹ ಇರಸುಮುರಸು ಮೊದಲ ದಿನದಿಂದಲೇ. ನಾಲ್ಕೈದು ದಿನ ಕಳೆದ ನಂತರ ನಮಗೆ ಇಲ್ಲಿ ಸರಿ ಬರುವುದಿಲ್ಲ ಬೇರೆ ಮನೆ ಮಾಡಿಕೊಳ್ಳುವ ಎಂದು ನಿರ್ಧರಿಸಿದೆವು. ಆಫೀಸಿನಲ್ಲಿ ಎಲ್ಲರಿಗೂ ಮನೆ ನೋಡಲು ಹೇಳಿದೆವು. ಸಂಜೆ ಆಯಿತೆಂದರೆ ಯಾರಾದರೂ ಮನೆ ಖಾಲಿ ಇದೆ ಎಂದು ಹೇಳಿದ ಕಡೆ ಹೋಗುವುದು. ಮನೆ ನೋಡುವುದು .ಆದರೆ ಯಾಕೋ ಯಾವುದೂ ಸರಿ ಹೋಗುತ್ತಿರಲಿಲ್ಲ. ಸರಿ ಹೋದ ಮನೆಗೆ ಸಿಕ್ಕಾಪಟ್ಟೆ ಬಾಡಿಗೆ. ಸಕಲೇಶಪುರ ಬೆಂಗಳೂರಿಗಿಂತಲೂ ದುಬಾರಿ ಎಂದು ನಮಗೆ ಅರಿವಾಗಿದ್ದು ಆಗಲೇ. ಹೋಗಲಿ ಎಂದರೆ ಯಾವುದು ಸರಿ ಹೋಗುತ್ತಲೂ ಇರಲಿಲ್ಲ .ಮೈಸೂರಿನಿಂದಲೇ ಒಂದಷ್ಟು ಪುಡಿಗಳು ಚಟ್ನಿಪುಡಿ ಮೆಂತ್ಯದ ಹಿಟ್ಟು ಅನ್ನದ ಪುಡಿ ತುಪ್ಪ ಮತ್ತು ಉಪ್ಪಿನಕಾಯಿ ತೊಕ್ಕುಗಳನ್ನು ತೆಗೆದುಕೊಂಡು ಹೋಗಿದ್ದರಿಂದ ಹೇಗೋ ಅದನ್ನೇ ಬಳಸಿಕೊಂಡು ಊಟ ಮಾಡುತಿದ್ದೆವು. ಬೆಳಿಗ್ಗೆ ಕಾಫಿಗೆ ಹೋದಾಗ ಎದುರುಗಿನ ಹೋಟೆಲ್ನಲ್ಲಿ ಅಲ್ಲಿನ ಸ್ಪೆಷಾಲಿಟಿ ಕಡುಬು ಮತ್ತು ಅಕ್ಕಿ ರೊಟ್ಟಿ ಒಂದರಲ್ಲಿ ಅರ್ಧ ಮಾಡಿ ತ ತಿನ್ನುತ್ತಿದ್ದುದು. ಸಂಜೆ ಕಚೇರಿ ಮುಗಿದ ನಂತರ ಮನೆ ಹುಡುಕಲು ಯಾರಾದರೂ ಮನೆಗೆ ಹೋದಾಗ ಅಲ್ಲಿ ಕಾಫಿ ಇನ್ನೇನಾದರೂ ಆತಿಥ್ಯ ಆಗುತ್ತಿತ್ತು. ಇಲ್ಲದಿದ್ದರೆ ಸಂಜೆಯ ವೇಳೆಯೂ ಅಲ್ಲಿ ಹೋಗಿ ತಿಂಡಿ ತಿಂದು ಮನೆಗೆ ಹೋಗುತ್ತಿದ್ದುದು.. ಹೋದ ತಕ್ಷಣ ಒಂದರ್ಧ ಲೋಟ ಕಾಫಿ ಕೊಡುತ್ತಿದ್ದರು ಅಷ್ಟೇ. ರಾತ್ರಿಯ ಊಟವೂ ಅಷ್ಟೇ ಬೆಳಗ್ಗೆ ಉಳಿದದ್ದನ್ನು ಹಾಕುತ್ತಿದ್ದು ಎಷ್ಟು ಬಾರಿ ಹೇಳಿದರು ಒಂದು ದಿನವೂ ಬಿಸಿ ಊಟ ತಿಂಡಿ ಹಾಕಲಿಲ್ಲ .ಆ ಡಿಸೆಂಬರ್ ಚಳಿಗೆ ಆ ಊರಿನ ವಾತಾವರಣಕ್ಕೆ ಆರಿದ್ದು ತಿನ್ನುವುದು ತುಂಬಾ ಹಿಂಸೆ ಎನಿಸುತ್ತಿತ್ತು. ಯಾವಾಗ ನಾವು ನಮಗೆ ಬೇರೆ ಮನೆ ಮಾಡುತ್ತೇವಪ್ಪಾ ಅಂತ ಅನ್ನಿಸತೊಡಗಿತ್ತು. ಯಾವುದೇ ಹಾಸ್ಟೆಲ್ ನಲ್ಲಿದ್ದು ಅಭ್ಯಾಸ ಇಲ್ಲದ ನಮಗೆ ಹೊರಗಿನ ಊಟದ ಕಷ್ಟ ಏನೆಂದು ಆಗ ಅರ್ಥವಾಯಿತು. ಅಲ್ಲದೆ ಹೆಚ್ಚು ಕಡಿಮೆ ಮೂರು ಕಿಲೋಮೀಟರ್ ದೂರ ಇತ್ತು ಅದು ನಮ್ಮ ಕಚೇರಿಯಿಂದ. ಹೋಗಿ ಬರುವುದು ಸಹ ಕಷ್ಟವೇ. ಸದ್ಯ ಆಗ ಡಿಸೆಂಬರ್ ನಲ್ಲಿ ಮಳೆ ಇಲ್ಲದಿದ್ದರಿಂದ ಹೇಗೋ ನಡೆಯಿತು ಹಾಗಾಗಿ ಕಚೇರಿಗೆ ಹತ್ತಿರದ ಸ್ಥಳಗಳಲ್ಲಿ ನಾವು ಮನೆ ಹುಡುಕುತ್ತಿದ್ದು. ಕೆಲವು ದೂರದ ಪ್ರದೇಶ ಏರಿಯಾದಲ್ಲಿ ಮನೆ ಸಿಕ್ಕುತ್ತಿದ್ದರು ನಮ್ಮ ಬಳಿ ವಾಹನ ಇಲ್ಲದ್ದರಿಂದ ಅಲ್ಲಿನ ಮಳೆ ಸಮಯದಲ್ಲಿ ಓಡಾಡಲು ಕಷ್ಟ ಎಂದು ಎಲ್ಲರೂ ಹೇಳಿದ್ದರಿಂದ ದೂರದ ಏರಿಯಾಗಳಿಗೆ ಹೋಗಲು ಮನಸ್ಸು ಮಾಡಲಿಲ್ಲ.ಕಡೆಗೆ ಕಚೇರಿಯಿಂದ ಒಂದೇ ಕಿಲೋಮೀಟರ್ ದೂರ ಇದ್ದ ಕುಶಾಲನಗರ ಎಕ್ಸ್ಟೆಂಶನ್ ಎಂಬಲ್ಲಿ ಮಹಡಿಯ ಮೇಲೆ ಒಂದು ಮನೆ ಖಾಲಿ ಇದೆ ಎಂದು ತಿಳಿಯಿತು ರಾಜಮ್ಮ ಎನ್ನುವವರು ಅಲ್ಲಿನ ರಾಜಕೀಯ ಪುಡಾರಿ ಅವರದೇ ಮನೆ. ಕೆಳಗಡೆ ಅವರದೊಂದು ದೊಡ್ಡ ಮನೆ. ಪಕ್ಕದಲ್ಲಿ ಸ್ವಲ್ಪ ಜಾಗ ಅವರ ಮನೆಗೆ ಸೇರಿದಂತೆಯೇ ಮಹಡಿಯ ಮೇಲೆ ಎರಡು ಮನೆಗಳು ಅಲ್ಲಿ ಕೆಳಗಡೆ ಅಟಾಚ್ಡ್ ಬಾತ್ರೂಮ್ ಇರುವಂತಹ ಎರಡು ಕೊಠಡಿಗಳು. ಅಂತಹ ಒಂದು ಕೊಠಡಿಯಲ್ಲಿ ನಮ್ಮದೇ ಆಫೀಸಿನ ಹೊಸ ರೆಕ್ರೂಟ್ಮೆಂಟ್ ಆದ ಆನಂದ್ ಮತ್ತು ಮೋಹನ್ ಎನ್ನುವವರು ಇದ್ದುದರಿಂದ ಅವರ ಮೇಲಿನ ಮನೆ ಖಾಲಿಯಾಗುತ್ತದೆ ಎಂದು ತಿಳಿಸಿದರು. ಹಾಗಾಗಿ ಅಲ್ಲಿ ನೋಡಲು ಹೋದೆವು. ಅವರ ಮನೆಯಲ್ಲಿ ಟೀ ಚೌಚೌ ಆತಿಥ್ಯ ಸ್ವೀಕರಿಸಿ ಮನೆ ನೋಡಲು ಹೋದೆವು. ಒಂದು ರೂಮಿನ ಮನೆ. ಮನೆ ಏನೋ ಚೆನ್ನಾಗಿತ್ತು ಆದರೆ ಅಲ್ಲಿ ಯಾರು
ಡಾ ಶಶಿಕಾಂತ ಪಟ್ಟಣ ರಾಮದುರ್ಗ ಅವರ ಕವಿತೆ “ಬಹುಮಾನ”
ಕಾವ್ಯ ಸಂಗಾತಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ “ಬಹುಮಾನ” ಸದ್ದು ಗದ್ದಲವಿಲ್ಲದಪ್ರಸಿದ್ಧಿ ಪ್ರಚಾರವಿಲ್ಲದಗಟ್ಟಿ ಜೀವಹಲವು ಕನಸುನಿತ್ಯ ಪಯಣಹೆಜ್ಜೆ ಹಾಕುವುದುನಿಂತಿಲ್ಲ ಸೋಲೋ ಗೆಲುವೋಗೊತ್ತಿಲ್ಲಅಳುಕು ಆತಂಕಆನಂದ ಐಸಿರಿಎಲ್ಲವೂ ವಿಧಿಯಾಟನಡೆದ ದಾರಿಯಶ್ರಮ ದೂರಸಂತೃಪ್ತಿ ಮೌನನನ್ನ ನಿನ್ನಯಪ್ರೀತಿ ಬಹುಮಾನ ಡಾ ಶಶಿಕಾಂತ ಪಟ್ಟಣ ರಾಮದುರ್ಗ
ಡಾ ಶಶಿಕಾಂತ ಪಟ್ಟಣ ರಾಮದುರ್ಗ ಅವರ ಕವಿತೆ “ಬಹುಮಾನ” Read Post »
ಡಾ.ಗೀತಾ ದಾನಶೆಟ್ಟಿ ಕವಿತೆ “ಬಚ್ಚಿಟ್ಟ ಬಯಕೆ”
ಕಾವ್ಯ ಸಂಗಾತಿ ಡಾ.ಗೀತಾ ದಾನಶೆಟ್ಟಿ “ಬಚ್ಚಿಟ್ಟ ಬಯಕೆ” ಎದೆಯ ಗೂಡಿನಲ್ಲಿತುಂಬಿ ತುಳುಕುವಬಚ್ಚಿಟ್ಟ ಬಯಕೆಗಳನುಬಿಚ್ಚಿಡುವ ಆತುರ ಮನದ ಆಲಯದಲ್ಲಿಹುದುಗಿದ್ದ ಅದೆಷ್ಟೋಆಕರ್ಷಣೆಗಳ ಸೆಳೆತಕೆತೆರೆದುಕೊಳ್ಳುವ ಕಾತುರ ಮುಗಿಯದಷ್ಟು ಮಾತುಗಳುಮನದಾಳದಲ್ಲಿ ಮೊಳೆತಿವೆಚಿಗುರೊಡೆವ ಬಯಕೆಗೆಕನಸುಗಳು ಸಾವಿರ ಮಾತುಗಳು ಮೌನವಾಗಿಮೌನದಲ್ಲೇ ಹರಿಸಿ ಹಾರೈಸಿಸ್ಪಂದಿಸುವ ಜೀವಕ್ಕೆನೆನಪುಗಳ ನಿರಾಳತೆ ಮಧುರ ಕಾಣದ ಕಡಲನುಸೇರುವ ಕಾತುರಅಬ್ಬರದ ಅಳೆಗಳನ್ನುಅಪ್ಪಿಕೊಳ್ಳುವ ಅವಸರ ಆಕಾಶದ ನೀಲಿಗೆಕಾರ್ಮೋಡಗಳ ತೋರಣಇಳೆಗೆ ಮಳೆಯ ಸಿಂಚನಸೇರಲು ಮಾನಸ ಸರೋವರ ಡಾ.ಗೀತಾ ದಾನಶೆಟ್ಟಿ
ಡಾ.ಗೀತಾ ದಾನಶೆಟ್ಟಿ ಕವಿತೆ “ಬಚ್ಚಿಟ್ಟ ಬಯಕೆ” Read Post »
ಸಿದ್ದಲಿಂಗಪ್ಪ ಬೀಳಗಿ ಅವರ ತನಗಗಳು
ಕಾವ್ಯ ಸಂಗಾತಿ ಸಿದ್ದಲಿಂಗಪ್ಪ ಬೀಳಗಿ ತನಗಗಳು ೧ಸೋತು ಹೋದೆನೆನ್ನುವಪಾಪ ಪ್ರಜ್ಞೆ ಬಿಸಾಕುಗೆಲುವಿನ ಕುದುರೆಹತ್ತಿ ಓಡಿಸು ಸಾಕು೨ಸಾಸಿವೆಯ ತರಲುಸಾಲುಗಟ್ಟಿದ ಜನಸಾವಿಲ್ಲದ ಮನೆಯಹುಡುಕಿ ಕಳಾಹೀನ೩ನನ್ನ ನಿನ್ನ ನಡುವೆಸುಮ್ಮನೇಕೆ ಬಿರುಕುತಣ್ಣನೆಯ ಪ್ರೀತಿಯುನೆಮ್ಮದಿಯ ಸರಕು೪ಮುಡಿ ತುಂಬ ಮಲ್ಲಿಗೆಮೊಗದಿ ನಗು ಹಾರನೋಡುವ ಮನದಲಿಪ್ರೀತಿ ಪೋಣಿಸು ದಾರ೫ಊರ ಮಂದಿಗೆ ಅಂಜಿಊರೂರು ಸುತ್ತಿದಾತದಾರಿ ಸರಿದ ಮೇಲೆವಾಸ್ತವಕೆ ಬಂದಾತ೬ನಗೆ ಬೀರಿದಾಗೊಮ್ಮೆಎದೆಯಲಿ ನಡುಕಹದವಾಗಿ ತಬ್ಬಲುಬಿಸಿ ಗಾಳಿಯ ತಾಪ ಸಿದ್ದಲಿಂಗಪ್ಪ ಬೀಳಗಿ
ಸಿದ್ದಲಿಂಗಪ್ಪ ಬೀಳಗಿ ಅವರ ತನಗಗಳು Read Post »
“ವಿಶ್ವ ಮಾತೃ ಭಾಷಾ ದಿನ” ಗಾಯತ್ರಿ ಸುಂಕದ
ಭಾಷಾ ಸಂಗಾತಿ “ವಿಶ್ವ ಮಾತೃ ಭಾಷಾ ದಿನ” ಗಾಯತ್ರಿ ಸುಂಕದ ನಮ್ಮ ಜೀವನದಲ್ಲಿ ತಾಯಿ, ತಾಯ್ನಾಡು, ಹೇಗೆ ಮುಖ್ಯವೋ ಹಾಗೆ ತಾಯಿ ನುಡಿ ಕೂಡ ಅಷ್ಟೇ ಮುಖ್ಯ.ಮನೆಯೇ ಮೊದಲ ಪಾಠಶಾಲೆ ತಾಯಿಯೇ ಮೊದಲ ಗುರು ಎನ್ನುವಂತೆ ನಮ್ಮ ಮಾತೃ ಭಾಷೆ ಶುರು ಆಗುವುದು ನಮ್ಮ ಮನೆಯಲ್ಲಿ.ಮಾತೃ ಭಾಷೆ ನಮ್ಮ ಭಾವನೆಗಳಿಗೆ ಕನ್ನಡಿ ಇದ್ದ ಹಾಗೆ.ನಾವು ಎಷ್ಟೇ ಬೇರೆ ಭಾಷೆಗಳಲ್ಲಿ ಪರಿಣಿತಿ ಇದ್ದರೂ. ನಮ್ಮ ಭಾವನೆಗಳು ಮಾತೃಭಾಷೆ ಮುಖಾಂತರ ಹೊರ ಬರುತ್ತವೆ.ನಮಗೆ ದುಃಖ ಬಂದಾಗ ಅಯ್ಯೋ ರಾಮ ಅನ್ನುತ್ತವೆಯೋ ಹೊರತು ಬೇರೆ ಯಾವ ಶಬ್ದ ಗಳು ಬರುವುದಿಲ್ಲ.ನಾವು ಚಿಕ್ಕವರಿದ್ದಾಗ ನಮ್ಮ ಮನೆಯಲ್ಲಿ ದೇವರಿಗೆ ಬೇಡಿ ಕೊಳ್ಳಬೇಕಾದಾಗ. ಕೇವಲ ಮಾತೃಭಾಷೆಯಲ್ಲಿ ಬೇಡಿಕೊ, ದೇವರು ಒಲಿಯುತ್ತಾನೆ ಎನ್ನುತ್ತಿದ್ದರು. ಹೀಗಾಗಿಯೇ ಈಗಲೂ ದೇವರ ಮುಂದೆ ನಿಂತಾಗ ನಮ್ಮ ಪ್ರಾರ್ಥನೆಗಳು ನಮ್ಮ ಆಡು ಭಾಷೆಯಲ್ಲಿ ಹೊರ ಬರುತ್ತವೆ.ನಮ್ಮ ಮಾತೃಭಾಷೆ ನಮ್ಮನ್ನು ಪ್ರತಿನಿಧಿಸುತ್ತದೆ. ಲಂಬಾಣಿ ಭಾಷೆ, ಕೊಂಕಣಿ ಭಾಷೆ, ತುಳು ಭಾಷೆ ಈಗಲೂ ಉಳಿಯಬೇಕಾದರೆ ಮುಖ್ಯ ಕಾರಣ ಎಂದರೆ ಅವು ಕೆಲ ಪ್ರದೇಶದ ಜನರ ಮಾತೃಭಾಷೆ ಆಗಿವೆ. ಕೆಲವೊಂದು ಮಾತೃ ಭಾಷೆಗಳು ಲಿಪಿ ಇಲ್ಲದೆ ಇದ್ದರೂ ಈಗಲೂ ತಮ್ಮ ಅಸ್ತಿತ್ವವನ್ನು ಉಳಿಸಿ ಕೊಂಡಿವೆ.ನಮಗೆ ಕೆಟ್ಟ ಕನಸು ಬಿದ್ದರೆ ಅಮ್ಮ ಎಂದು ಕೂಗುತ್ತೇವೆ ಹೊರತು ಬೇರೆ ಯಾವ. ಭಾಷೆ ನಮ್ಮನ್ನು ಕೈ ಹಿಡಿಯುವುದಿಲ್ಲ.ಬನ್ನಿಮಾತೃ ಭಾಷೆ ಯನ್ನೂ ಉಳಿಸಿ ಬೆಳೆಸೋಣ. ಗಾಯತ್ರಿ ಸುಂಕದ
“ವಿಶ್ವ ಮಾತೃ ಭಾಷಾ ದಿನ” ಗಾಯತ್ರಿ ಸುಂಕದ Read Post »
ಹಮೀದ್ ಹಸನ್ ಮಾಡೂರು “ಜೀವನ-ಮರಣ”
ಕಾವ್ಯ ಸಂಗಾತಿ ಹಮೀದ್ ಹಸನ್ ಮಾಡೂರು “ಜೀವನ-ಮರಣ” ಅಯ್ಯೋ ಪ್ರಾಣವೇ…ನಿನಗಲ್ಲ, ನನಗಾಗಿದೆ ಪ್ರಾಯ,ತ್ರಾಣವಿಲ್ಲದ ಎಲುಬುಗಳ ಮಧ್ಯೆಉಸಿರೊಂದೇ ಈಗ ಉಳಿದಿರಲು,! ಪ್ರಾಣವೆಂಬ ಈ ಜೀವಾತ್ಮವುಜೀವನದಾಟಗಳ ಮುಗಿಸಿ ಕೂತಿದೆ,ಉಸಿರು ಹಾರುವ ತವಕದಲಿಜೀವನದ ಬಯಕೆಗಳ ಮುಗಿಸಲು,! ಬರೀ ಗೋಳು, ಈ ಬದುಕುದೇವನೇ ತೆಗೆದು ಬಿಡು ಪ್ರಾಣವ,ನನ್ನೂಸಿರನು ಈ ದೇಹದಿಂದೊಮ್ಮೆಈ ಜನ್ಮವು ಸಾಕು, ಮುಗಿಸಿ ಬಿಡಲು,! ಯಾರಿಗೂ ಹೊರೆಯಾಗದೆಯಾರಿಂದಲೂ ನನ್ನ ತಿರಸ್ಕರಿಸದೆನೋಯಿಸುವ ಮುನ್ನ, ನನ್ನನ್ನೊಮ್ಮೆಕರೆಸಿ ಬಿಡು ದೇವ, ನಿನ್ನ ಬಳಿ ಸೇರಲು,! ನನ್ನಾತ್ಮವನು ಸ್ವೀಕರಿಸಿನಿನ್ನೊಡನೆ ಸುಖವಾಗಿರಲು ಬಿಡು,ನನ್ನಯ ಸತ್ಕರ್ಮಗಳೊಮ್ಮೆಬೇಗನೆ ತೂಲನೆ ನೀ ಮಾಡಿ ಬಿಡಲು,! ದುಷ್ಟರಿಂದ ತುಂಬಿದ ಜಗತ್ತುಜಗಮಗಿಸುತ್ತಿರಲು,ನಾನಿರಲಾರೆ,ಹಿಂಸಿಸಿ ಕೊಲ್ಲುವ ಜನರೊಳಗಿಂದಸುರಕ್ಷಿತ ಮರಣವನು ದಯಪಾಲಿಸಲು.! ಹಮೀದ್ ಹಸನ್ ಮಾಡೂರು
ಹಮೀದ್ ಹಸನ್ ಮಾಡೂರು “ಜೀವನ-ಮರಣ” Read Post »
ಡಾ ತಾರಾ ಬಿ ಎನ್ ಧಾರವಾಡ ಅವರ ಕವಿತೆ “ಚೂರಾದ ಮನ ಗಾಜು”
ಕಾವ್ಯ ಸಂಗಾತಿ ಡಾ ತಾರಾ ಬಿ ಎನ್ ಧಾರವಾಡ ಅ “ಚೂರಾದ ಮನ ಗಾಜು” ಹೆಣ್ಣು ಮೃದು ಮನದ ಪಯಣದಲಿಮುಗ್ಧ ಮನದ ಹೂ ತೋಟದಲ್ಲಿನಂಬಿಕೆಯ ಹೂಗಳು ಅರಳಿದಾಗ,ಸಿಹಿ ಮಾತಿನ ಮಳೆ ಸುರಿಸಿಮನ ಕದಡುವ ಕಟುಕರು ನೆರಳಾಗಿ ನಿಲ್ಲಬೇಕಾದವರುಕಟುವಾಗಿ ವರ್ತನೆ ತೋರುವರುನಂಬಿಕೆಗೆ ಅರ್ಹತೆ ಇಲ್ಲದವರುಮೋಸದ ಮುಖವಾಡದವರು ಕಣ್ಣಿನಲ್ಲಿ ಕನಸು ಕಟ್ಟಿಸಿನಾಳೆಯ ಚಿತ್ರ ಬರೆದವರು,ಅದೇ ಕೈಯಿಂದ ಕನಸು ಕಿತ್ತುಮೌನದ ಗಾಯ ಬಿತ್ತಿದವರು. ಹೃದಯವೆಂಬ ನಾಜೂಕಿನ ಗಾಜಿಗೆಸುಳ್ಳಿನ ಕಲ್ಲು ತೂರಿದವರುಚೂರುಚೂರಾದ ಪ್ರತಿಬಿಂಬದಲ್ಲಿನಗುವೂ ಕಳೆದುಹೋಗಲು ಕಾರಣವಾದವರು ಆದರೂ ಹೆಣ್ಣು ಮಣ್ಣಲ್ಲಮಳೆ ಬಂದರೂ ಕರಗದ ಶಿಲೆ.ಗಾಯಗಳನ್ನೇ ಗರಿಗರಿಯಾಗಿ ಮಾಡಿಹೊಸ ಬದುಕಿಗೆ ಹೆಜ್ಜೆ ಇಡುವವಳು ಆಕೆಯ ಭಾವನೆಗಳ ಜೊತೆ ಆಟವಾಡುವವರಿಗೆಒಂದು ದಿನ ಅರಿವಾಗುತ್ತದೆಹೆಣ್ಣು ಮನವೆಂಬ ಸಮುದ್ರದ ಆಳವನ್ನು ಅಳೆಯಲು ಸಾಧ್ಯವಾಗದು ಎಂದು. ಹೆಣ್ಣು ಹೃದಯವನ್ನು ನೋಯಿಸಿದ ಮನ ,ಕೈಗಳುಒಮ್ಮೆ ಖಾಲಿಯಾಗುವ ಅರಿವಾಗುವುದೇ!ಆದರೆ ಆಕೆಯ ಆತ್ಮಸಮ್ಮಾನಎಂದೆಂದಿಗೂ ಎತ್ತರದಲ್ಲೇ ಇರುವುದು ಡಾ ತಾರಾ ಬಿ ಎನ್ ಧಾರವಾಡ
ಡಾ ತಾರಾ ಬಿ ಎನ್ ಧಾರವಾಡ ಅವರ ಕವಿತೆ “ಚೂರಾದ ಮನ ಗಾಜು” Read Post »
ಚಂದ್ರು ಪಿ ಹಾಸನ್ ಅವರ ಕವಿತೆ”ಓ ನಲ್ಲೇ ..”
ಕಾವ್ಯ ಸಂಗಾತಿ ಚಂದ್ರು ಪಿ ಹಾಸನ್ “ಓ ನಲ್ಲೇ ..” ನನ್ನೆದೆ ಕೋಗಿಲೆ ಕೂಗಿದೆಹೃದಯದ ತುಡಿತವ ಕೇಳದೆಎಲ್ಲಿರುವೆ? ನೀನೆಲ್ಲಿರುವೆ?ಗೆಳತಿ ನಿನ್ನೇ ಕಾದಿರುವೆ ವಸಂತಕ್ಕೆ ವಸುಂಧರೆಹಸನಾಗಿ ಸೂಸುತ್ತಿದೆಸರಸರನೆ ಕೋಕಿಲೆಸೊಗಸಾಗಿ ಹಾಡುತ್ತಿದೆ ಹಸನಾದ ಸಮಯವುಬೆಸುಗೆಗೆ ಸಮ್ಮತಿಸಿದೆನಲ್ಲೇ ಯಾಕೀಗೆ ಕಸರತ್ತು?ಒಲ್ಲೇ… ಸಾಕಾಗಿದೆ ಬೇಸತ್ತು ಗೆಳತಿಯ ನನ್ನೊಡತಿಯಬರುವಿಕೆ ನೋಡುತ್ತಿರೇನಿನ್ನ ಅರಿವನ್ನು ಅರಿಯದೇಎನ್ನ ಮನವಿಲ್ಲಿ ಸೊರಗಿದೆ ತಂಪಾಗಿ ಇಂಪಾಗಿಬೀಸುವ ಗಾಳಿಯೇಒಮ್ಮೆ ನನ್ನವಳ ಸ್ಪರ್ಶಿಸಿ ನನ್ನೋಲೆಯಾ ತಿಳಿಸುವೆಯಾ? ಕನಸಲ್ಲೂ ಮನಸಲ್ಲೂಇನ್ಯಾರನೂ ನಾನೊಲ್ಲೇನೆಲೆಸಿ ಹರ್ಷಿಸಿ ಪೋಷಿಸಿನಿಲ್ಲೇ ಈ ಕನ್ನಡಿಗನಲ್ಲೇ…. ಚಂದ್ರು ಪಿ ಹಾಸನ್,
ಚಂದ್ರು ಪಿ ಹಾಸನ್ ಅವರ ಕವಿತೆ”ಓ ನಲ್ಲೇ ..” Read Post »
“ಒಡಲಿನ ನೋವಿಗೆ ಮಡಿಲಿನ ಸಾಂತ್ವನ” ಜಯಶ್ರೀ.ಜೆ.ಅಬ್ಬಿಗೇರಿ
ಲಹರಿ ಸಂಗಾತಿ “ಒಡಲಿನ ನೋವಿಗೆ ಮಡಿಲಿನ ಸಾಂತ್ವನ” ಜಯಶ್ರೀ.ಜೆ.ಅಬ್ಬಿಗೇರಿ ಮೊನ್ನೆ ಪೇಟೆಯಲ್ಲಿ ಗೆಳತಿ ಸುಮತಿ ಬಹಳ ದಿನಗಳ ನಂತರ ತನ್ನ ಮಗಳೊಂದಿಗೆ ಭೇಟಿಯಾದಳು. ಮುಖದಲ್ಲಿ ಮೊದಲಿದ್ದ ಗೆಲುವು ಕಾಣಲಿಲ್ಲ. ನಗೆಯೂ ಮುಖದಿಂದ ದೂರವೇ ಉಳಿದಿತ್ತು. ನಾನೇ ಒತ್ತಾಯಿಸಿ ಹೊಟೆಲ್ಲಿಗೆ ಕರೆದೊಯ್ದೆ. ಸದಾ ಉತ್ಸಾಹದ ಕಾರಂಜಿಯoತೆ ಚಿಮ್ಮುತ್ತಿದ್ದ ನೀನು ಇದೇಕೆ ಇಷ್ಟು ಸಪ್ಪಗಾಗಿ ಬಿಟ್ಟಿದ್ದಿಯಾ? ಎಂದಾಗ ಕಣ್ಣಂಚಿನಲ್ಲಿ ನೀರು ತಂದು ತನ್ನ ಪ್ರವರ ಬಿಚ್ಚಿಟ್ಟಳು. ಇಬ್ಬರೂ ದುಡಿತೀವಿ ಹೀಗಾಗಿ ಮನೆಯಲ್ಲಿ ಎಲ್ಲದಕ್ಕೂ ಆಳು. ಹಣಕ್ಕಂತೂ ಕೊರತೆಯಿಲ್ಲ.ಮುದ್ದಾದ ಮಗಳು ಮನೆಯಂಗಳದಲ್ಲಿ ನಲಿದಾಡ್ತಾಳೆ. ಇವರದೇ ಸಮಸ್ಯೆ ಆಗಿದೆ.ಎಂದಳು. ಇಷ್ಟೆಲ್ಲಾ ಇರೋವಾಗ ನಿಮ್ಮ ಪತಿದೇವರದು ಏನು ಸಮಸ್ಯೆ ಎಂದು ಕುತೂಹಲದಿಂದ ಪ್ರಶ್ನಿಸಿದೆ. ಅದಕ್ಕೆ ಸುಮತಿ,ಮೊದಲೆಲ್ಲ ಚೆನ್ನಾಗಿಯೇ ಇದ್ದ ರಮೇಶ ಕೆಲಸದ ಒತ್ತಡ ಹೆಚ್ಚಾಗಿದೆ ಎಂದು ಪಾರ್ಟಿ ಕ್ಲಬ್ ಪಬ್‌ನ್ನು ಮನರಂಜನೆಗೆoದು ರೂಢಿಸಿಕೊಂಡು ಇತ್ತೀಚಿಗೆ ಅತಿಯೆನಿಸುವಷ್ಟು ಕುಡಿದು ಮನೆಗೆ ತಡರಾತ್ರಿ ಬಂದು ಸುಮ್ಮನೆ ಮಲಗಿ ಬಿಡ್ತಾರೆ. ಮೊದಲೇ ಮಾತು ಕಮ್ಮಿ ಈಗಂತೂ ಮನೆಯಲ್ಲಿ ಮಾತಿಲ್ಲ ಕತೆಯಿಲ್ಲ.ದಿನಕ್ಕೆ ಒಂದೊ ಎರಡೊ ಮಾತನಾಡಿದರೆ ಹೆಚ್ಚು ನಾನಾಗಲೇ ಮೇಲೆ ಬಿದ್ದು ಮಾತನಾಡಿಸಿದಾಗ ಹೂಂ ಹಾಂ ಅಷ್ಟೆ, ಸಿಟ್ಟಿಗೆದ್ದು ಜೋರಾಗಿ ಕಿರುಚಿದರೆ ಏನೂ ಪ್ರಯೋಜನವಿಲ್ಲ. ನನಗೇನಾಗಿಲ್ಲ ನಾನು ಇರೋದೆ ಹೀಗೆ ಮೊದಲಿನಿಂದ ಹೀಗೆ ಇದ್ದೀನಿ ನಿನಗೆ ಹಾಗೆನಿಸ್ತಿದೆ ಅಂತ ಹೇಳುತ್ತ ಜಾಗ ಖಾಲಿ ಮಾಡ್ತಾರೆ.ಸಂಬoಧಿಕರ ಮದುವೆ ಮುಂಜವಿಗoತೂ ಜಪ್ಪಯ್ಯ ಅಂದರೂ ಬರೋದಿಲ್ಲ. ಮಗಳ ಜೊತೆ ಮಾತು ಅಷ್ಟಕ್ಕಷ್ಟೆ. ದೈಹಿಕ ಸುಖ ಬೇಕೆಂದಾಗ ಬಳಿ ಬರುತ್ತಾರೆ. ಇಂಥ ಮದುವೆಯಿಂದ ಪಡೆಯುತ್ತಿರುವದು ಏನೂ ಇಲ್ಲ. ನನ್ನಲ್ಲಿರುವ ಪ್ರೀತಿಯ ಭಾವನೆಗಳೆಲ್ಲ ಬತ್ತಿ ಹೋಗುತ್ತಿವೆ. ದಿನ ದಿನಕ್ಕೆ ಬದುಕು ಕ್ರೂರವೆನಿಸುತ್ತಿದೆ. ಏನು ಮಾಡಲೂ ತೋಚುತ್ತಿಲ್ಲ. ಕೋರ್ಟ್ ಕಛೇರಿ ಮೆಟ್ಟಿಲು ಹತ್ತಿದರೆ ಮನೆ ಮರ್ಯಾದೆ ಪ್ರಶ್ನೆ.ದಿನವೂ ವಿಷ ನುಂಗತಿದಿನಿ. ಮಗಳ ಮುಖ ನೋಡಿ ಅವರೊಂದಿಗೆ ದಿನ ದೂಡತಿದಿನಿ. ಎಂದಾಗ ಮಗಳು ಸುಮತಿಯ ಕಣ್ಣೊರೆಸುತ್ತ ಅವ್ವಾ ,ಅಪ್ಪ ಮೊದಲಿನಿಂತೆ ಆಗ್ತಾರೆ ಬಿಡವ್ವ ನೀ ಆಳಬೇಡ ಎಂದಳು. ಸುಮತಿ ಮಗಳ ಕೆನ್ನೆಗೆ ಮುತ್ತಿಕ್ಕಿ ಕಿರುನಗೆ ಬೀರಿದಳು. ತಾಯಿಯ ಖಾಸಗಿ ಜಗತ್ತು ಹೆಣ್ಣುಮಕ್ಕಳಿಗೆ ಹೆಚ್ಚು ಅರ್ಥವಾಗುತ್ತದೆ.ತಾಯಿ ಮಗಳ ನಡುವಿರುವ ಸಲುಗೆ, ಮುಕ್ತವಾಗಿ ಹಂಚಿಕೊಳ್ಳುವ ಮನದಾಳದ ಮಾತುಗಳು ಹೆಣ್ಣು ಹೆತ್ತ ತಾಯಂದಿರಿಗೆ ಅದರ ಸೌಖ್ಯ ತಿಳಿಯೋದು. ಹೆಣ್ಣು ಅಂದರೆ ಹುಣ್ಣು ಅಂತ ತಿಳಿಯೋ ಜನರೇ ಜಾಸ್ತಿ ಆದರೆ ಹೆಣ್ಣು ಮಕ್ಕಳು ತೋರುವ ಆತ್ಮೀಯತೆ ಆಪ್ತತೆ ಮನಸ್ಸಿಗೆ ಅತಿಯಾದ ಆನಂದ ಮತ್ತು ಹಿತ ನೀಡುವದಂತೂ ಖಚಿತ. ಎಷ್ಟೊ ಬಾರಿ ಗಂಡನೊoದಿಗೆ ಹಂಚಿಕೊಳ್ಳಲಾಗದ ಮನದ ದುಗುಡಗಳನ್ನುಅವ್ವನೊಂದಿಗೆ ಹಂಚಿಕೊoಡು ನಿರಾಳವಾಗಿ ಮತ್ತೆ ಜೀವನೋತ್ಸಾಹ ತುಂಬಿಕೊಳ್ಳುತ್ತಾಳೆ. ರಶ್ಮಿಗೆ ತಾಯಿಯೇ ಜಗತ್ತು. ಮಗಳ ಬದುಕು ಹಸನಾಗಿರಲೆಂದು ಬಯಸುವ ತಾಯಿ ಮಗಳ ಬದುಕಿನಲ್ಲಿ ಸಣ್ಣ ಬಿರುಕು ಬಿಡುತ್ತಿದೆ ಎಂದು ತಿಳಿದರೆ ಎದೆ ಒಡೆದುಕೊಳ್ಳುತ್ತಾಳೆಂದು ರಶ್ಮಿ ಅತ್ತೆಯ ಮನೆಯಲ್ಲಿ ಕೊಡುವ ಕಿರುಕುಳಗಳನ್ನು ಗಂಡನ ವರ್ತನೆಯಲ್ಲಾದ ಬದಲಾವಣೆಯನ್ನು ಬಾಯಿಮುಚ್ಚಿ ಸಹಿಸಿಕೊಳ್ಳುತ್ತಿದ್ದಾಳೆ.ಕತ್ತಲ ಕೋಣೆಯಲ್ಲಿ ಕಣ್ಣಿರು ಹರಿಸುತ್ತಿದ್ದಾಳೆ. ಇದು ರಶ್ಮಿಯ ತಾಯಿಗೆ ತಿಳಿದಾಗ ದೇವರು ಒಳ್ಳೆಯವರನ್ನೇ ಪರೀಕ್ಷಿಸುತ್ತಾನೆ ಅಂತ ನೀನೇ ಹೇಳತಿದ್ದೆಲ್ಲವ್ವಾ ಈಗ ಕಷ್ಟದ ಕಾಲ ಮುಂದೊoದು ದಿನ ಸುಖ ಬಂದೇ ಬರುತ್ತದೆ. ಎಂದು ನೊಂದ ತಾಯಿಗೆ ಸಾಂತ್ವನದ ಮಾತುಗಳನ್ನಾಡುತ್ತ ಉಕ್ಕಿ ಬರುವ ದುಃಖವನ್ನು ತಡೆಯುತ್ತಾಳೆ. ಹೆಣ್ಣಿಗೆ ತವರೆಂದರೆ ಪಂಚ ಪ್ರಾಣ ಅದರ ನಂಟನ್ನು ಕಳೆದುಕೊಳ್ಳಲು ಅವಳಿಷ್ಟ ಪಡುವದಿಲ್ಲ. ಮಗಳನ್ನು ತಮ್ಮನಿಗೋ ಅಣ್ಣನ ಮಗನಿಗೋ ಧಾರೆಯೆರೆದು ತವರನ್ನು ಉಳಿಸಿಕೊಳ್ಳಲು ಹಂಬಲಿಸುತ್ತಾಳೆ. ಹೀಗೆ ತವರನ್ನು ಉಳಿಸಿಕೊಳ್ಳಲು ಶಾಂತಮ್ಮ ಮಗಳನ್ನು ಅಣ್ಣನ ಮಗನಿಗೆ ಕೊಟ್ಟು ತನ್ನ ತವರನ್ನು ಉಳಿಸಿಕೊಳ್ಳುವಲ್ಲಿ ಗೆದ್ದಿದ್ದಳು. ಅಳಿಯ ಬೇರೊಬ್ಬಳೊಂದಿಗೆ ಅನೈತಿಕ ಸಂಬoಧದಲ್ಲಿ ತೊಡಗಿ ಮಗಳಿಗೆ ಕೊಡುವ ಚಿತ್ರ ಹಿಂಸೆ ಕಂಡು ಕಂಗಾಲಾಗಿದ್ದಾಳೆ. ತನ್ನ ಮಗಳ ಬಾಳನ್ನು ತಾನೇ ಹಾಳು ಮಾಡಿದನೆಂದು ನಿಂತ ನೆಲವೇ ಬಾಯಿ ಬಿಟ್ಟರೆ ಎಲ್ಲಿ ಹೋಗೋದು? ಎಂದು ಹಾಸಿಗೆ ಹಿಡಿದು ಕೊರಗುತ್ತಿರುವ ತಾಯಿಗೆ ಮದುವೆ ಅನ್ನೋದು ಸ್ವರ್ಗದಲ್ಲಾಗಿರುತ್ತದೆ ಇದರಲ್ಲಿ ನಿನ್ನದೇನು ತಪ್ಪಿಲ್ಲವ್ವಾ ಎಂದು ಶಾಂತಮ್ಮನಿಗೆ ಮಗಳು ಸವಿತಾ ತನ್ನ ದುಃಖವನ್ನೆಲ್ಲ ಮರೆಮಾಚಿ ಸುಖ ದುಃಖಗಳನ್ನು ಸಮನಾಗಿ ನೋಡಬೇಕೆಂದು, ಇಂದು ದುಃಖವಾದರೆ ನಾಳೆ ಸುಖ ಎಂದು ತತ್ವಜ್ಞಾನಿಯಂತೆ ಮಾತನಾಡುತ್ತ ಬೇಗನೆ ಹುಷಾರಾಗುವಂತೆ ಸೂಚಿಸುತ್ತಾಳೆ. ಒಬ್ಬಳೇ ಮಗಳೆಂದು ತುಂಬಾ ಪ್ರೀತಿಯಿಂದ ಸಾಕಿ ಸಲುಹಿ ಮದುವೆ ಮಾಡಿ ಅಳಿಯನನ್ನು ಮನೆಗೆ ಕರೆ ತಂದ ರತ್ನಮ್ಮ ಅಳಿಯನಿಗೆ ದಿನನಿತ್ಯ ಹಾಲು ತುಪ್ಪ ಸುರಿದರೂ ಆತನ ದರ್ಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.ಮನೆಗೆ ಸಂಬoಧಿಕರು ಆಪ್ತ ಸ್ನೇಹಿತರು ಬಂದರoತೂ ದರ್ಪ ಅತಿರೇಕಕ್ಕೇರುತ್ತೆ. ಇದು ಮಗಳಿಗೂ ನುಂಗಲಾರದ ತುತ್ತಾಗಿದೆ. ಎಷ್ಟೋಸಾರಿ ಆತನ ವರ್ತನೆಗೆ ತಾಯಿ ಮಗಳ ಕಣ್ಣಾಲಿಗಳು ತುಂಬಿಕೊಳ್ಳುತ್ತವೆ. ಅಪ್ಪ ದುರ್ವ್ಯಸನದಲ್ಲಿ ಮುಳುಗಿರದಿದ್ದರೆ ಅಳಿಯನ ದರ್ಪಕ್ಕೆ ಕಡಿವಾಣ ಹಾಕಬಹುದಿತ್ತೆನೋ ಎಂದು ಮನದಲ್ಲೇ ಮರ ಮರ ಮರಗುತ್ತಾಳೆ. ತನ್ನ ಒಡಲಿನಲ್ಲಿ ಬೆಂಕಿ ಇಟ್ಟುಕೊಂಡು ಕತ್ತಲಾದ ಬಾಳಿಗೆ ಬೆಳಕು ಬಂದೇ ಬರುತ್ತದೆಯೆಂದು ಭರವಸೆಯ ಮಾತನಾಡಿ ಅವ್ವನಿಗೆ ಸಂತೈಸುತ್ತಾಳೆ. ಚೈನಿ ಚೆನ್ನಪ್ಪನ ಹಾಗೆ ಡ್ರೆಸ್ ಮಾಡಿಕೊಂಡು ಮೈ ತುಂಬ ಧಿಮಾಕು ತುಂಬಿಕೊoಡು ನಯಾಪೈಸೆ ದುಡಿದು ತರಲಾರದೆ ಹೆಂಡತಿ ಕೂಲಿ ಮಾಡಿ ತಂದ ಹಣವನ್ನು ಲಪಟಾಯಿಸಿ ತನ್ನ ಶೋಕಿಗೆ ಬಳಸುತ್ತಾನೆ. ಭೀಮಪ್ಪ. ಓದೋ ಮಕ್ಕಳಿಗೆ ಊರೆಲ್ಲ ಸಾಲ ಮಾಡಿ ಸಾಲ ತೀರಿಸೋ ಚಿಂತೆಗೆ ಗಂಗವ್ವನ ಕೈಯಲ್ಲಿ ಬಿರುಕು ಬಿಟ್ಟ ಗಾಯಗಳಾಗಿದ್ದರೂ ದಿನ ಬೆಳಗಾದರೆ ಕೂಲಿ ತಪ್ಪುವದಿಲ್ಲ. ಅವ್ವನ ಪಾಡು ಕಂಡು ಮಮ್ಮಲ ಮರಗುವ ಹದಿನಾಲ್ಕರ ಪೋರಿ ಗೌರಿ ನಾನು ಓದಿ ನಿನ್ನ ಕಷ್ಟವನ್ನು ನೀಗಿಸುತ್ತೇನೆಂದು ತಾಯಿಯ ಕಂಗಳಲ್ಲಿ ಆಶಾ ಕಿರಣ ಮೂಡಿಸಿ ಮುಖದಲ್ಲಿ ನಗು ತುಂಬುತ್ತಾಳೆ. ಇವು ಕೆಲವು ಉದಾಹರಣೆಗಳಷ್ಟೆ ಇಂಥ ಒಡಲಿನ ನೋವುಗಳು ಸಮಾಜದಲ್ಲಿ ಭರಪೂರ ಎನ್ನುವಂತೆ ತುಂಬಿವೆ. ತಾನುರಿದು ಇತರರಿಗೆ ಬೆಳಕು ನೀಡುವ ದೀಪದಂತೆ ದುಃಖದ ಬೆಂಕಿಯನ್ನು ತನ್ನ ಸೆರಗಲ್ಲಿ ಕಟ್ಟಿಕೊಂಡು ಒಡಲಲ್ಲಿ ಹುಟ್ಟಿ ಮಡಿಲಲ್ಲಿ ಬೆಳೆದ ಮಗಳು ತಾಯಿಗೆ ತಾಯಿಯಾಗಿ ಸಂತೈಸುವ ಪರಿ ಮಾನವ ಕುಲದ ಮನ ಕಲುಕುವಂಥದ್ದು . ತನ್ನಲ್ಲಿ ನೋವಿದ್ದರೂ ಒಡಲಿನ ನೋವಿಗೆ ಮಡಿಲಿನ ಸಾಂತ್ವನ ಹೇಳುತ್ತ ನಲಿವಿನ ಸಂತಸದ ಭರವಸೆ ತುಂಬುವ ಪರಿ ಮೆಚ್ಚುವಂಥದ್ದು. ಜಯಶ್ರೀ.ಜೆ.ಅಬ್ಬಿಗೇರಿ
“ಒಡಲಿನ ನೋವಿಗೆ ಮಡಿಲಿನ ಸಾಂತ್ವನ” ಜಯಶ್ರೀ.ಜೆ.ಅಬ್ಬಿಗೇರಿ Read Post »
ಪರವಿನಬಾನು ಯಲಿಗಾರ ಅವರ ಕವಿತೆ “ಬದುಕು”
ಕಾವ್ಯ ಸಂಗಾತಿ ಪರವಿನಬಾನು ಯಲಿಗಾರ “ಬದುಕು” ಬದುಕುವುದೆಂದರೆ ಕೆಲವರಿಗೆನೀರಿನ ಪ್ರವಾಹದ ಜೊತೆಹುಲು ಕಡ್ಡಿ ತೇಲಿದಷ್ಟೆ ಸರಳ…. ಬದುಕುವುದೆಂದರೆ ಕೆಲವರಿಗೆಸಮರಕ್ಕೆ ಸಿದ್ಧರಾದಂತೆಪ್ರತಿ ಕ್ಷಣವು ಸವಾಲುಗಳ ಜೊತೆ ಸೆಣಸಾಟ…. ಬದುಕುವುದೆಂದರೆ ಕೆಲವರಿಗೆಕಾರ್ಕೋಟಕ ವಿಷದ ಹನಿ ಸೇವಿಸಿದ ಹಾಗೆನಿಧಾನವಾಗಿ ನೀರ್ಜಿವವಾದಂತೆ…… ಬದುಕುವುದೆಂದರೆ ಕೆಲವರಿಗೆಜೇನಿನ ಹನಿಗಳ ಸವಿದಂತೆಕಹಿಯ ಪರಿಚಯವೇ ಇಲ್ಲದಂತೆ….. ಬದುಕುವುದೆಂದರೆ ಕೆಲವರಿಗೆಕೆಲವೊಮ್ಮೆ ಬದುಕುವುದೆ ಬೇಡ ಎನಿಸುವುದುಆದರೆ ಹೊಣೆಗಾರಿಕೆಗಾಗಿ ಬದುಕು ತೆವಳುವರು…. ಪರವಿನಬಾನು ಯಲಿಗಾರ.
ಪರವಿನಬಾನು ಯಲಿಗಾರ ಅವರ ಕವಿತೆ “ಬದುಕು” Read Post »









