ಕಾವ್ಯ ಸಂಗಾತಿ
ಎಮ್ಮಾರ್ಕೆ
ಗಜಲ್


ಬೋಳುಮರವೂ ಭರವಸೆ ತೋರುತಿದೆ ಈಗ
ಚಿಗುರೆಲೆ ಹೊಸತು ಸಂದೇಶ ಸಾರುತಿದೆ ಈಗ
ಖಾಲಿ ಕೊಂಬೆ ಮೇಲೀಗ ಕೋಗಿಲೆ ದರ್ಬಾರು
ಕುಹೂ ಕುಹೂ ಕೂಗೋ ರಾಗ ಕೇಳುತಿದೆ ಈಗ
ನೋವು-ನಲಿವುಗಳಿದ್ದಾಗಲೇ ಬಾಳಿಗೊಂದರ್ಥ
ಬೇವು ಬೆಲ್ಲ ರುಚಿಯ ಜಿಹ್ವೆ ನೋಡುತಿದೆ ಈಗ
ಸೃಷ್ಠಿ ತಾ ಸೊಬಗು ತೋರೇ ಅದೆಂಥ ಗಾರುಡಿ
ಕ್ರೋಧಿನಾಮ ಘಳಿಗೆ ಶುಭ ಕೋರುತಿದೆ ಈಗ
ಕುಂಬಾರನಿಗೆ ಯುಗಾದಿಯೇ ಹೊಸ ವರ್ಷವು
ರತ್ನಪಕ್ಷಿಯೇ ಕಣ್ಣ ಮುಂದಣ ಹಾರುತಿದೆ ಈಗ
ಎಮ್ಮಾರ್ಕೆ



