ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ನಿಮ್ಮೊಂದಿಗೆ

ಮಹಿಳಾದಿನದ ವಿಶೇಷ, ನಾಗರತ್ನ ಎಚ್ ಗಂಗಾವತಿ

ಮಹಿಳಾದಿನದ ವಿಶೇಷ, ನಾಗರತ್ನ ಎಚ್ ಗಂಗಾವತಿ ಶಕ್ತಿಯ ಪ್ರತಿರೂಪ ಹೆಣ್ಣು ಮಹಿಳೆಯರು ಕುಟುಂಬದ ಆಧಾರ ಸ್ಥಂಭವಾಗಿದ್ದು ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ ಆದರೆ ಹಿಂದೂ ಅನೇಕ ಸಾಮಾಜಿಕ ಅಡೆತಡೆಗಳನ್ನು ಎದುರಿಸುತ್ತಿರುವುದು ದುಃಖಕರ. ಕುಟುಂಬದ ನಿರ್ವಹಣೆಯಿಂದ ಹಿಡಿದು ಬಾಹ್ಯಾಕಾಶದ ವರೆಗೂ ಮಹಿಳೆ ಪುರುಷನಿಗೆ ಸಮಾನವಾಗಿ ಸಾಧನೆ ಮಾಡುತ್ತಿದ್ದರು ಲಿಂಗ ಸಮಾನತೆ ಮತ್ತು ಶಿಕ್ಷಣ ಭದ್ರತೆಯ ವಿಷಯದಲ್ಲಿ ಇಂದಿಗೂ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದಾಳೆ. “*ಯತ್ರ ನಾರಿಸ್ತು ಪೂಜಂತೆ ರಮಂತು ತಂತ್ರ ದೇವತಾ*” ಎಂಬ ವೇದವಾಕ್ಯದಂತೆಎಲ್ಲಿ ನಾರಿಯನ್ನು ಪೂಜಿಸುತ್ತಾರೆ ಅಲ್ಲಿ ದೇವರುಗಳು ನೆಲೆಸಿರುತ್ತಾರೆ ಎನ್ನುವಂತೆ ಪ್ರತಿಯೊಬ್ಬರೂ ಕೂಡ ಹೆಣ್ಣನ್ನು ಗೌರವಿಸುವುದು ಅಷ್ಟೇ ಮುಖ್ಯ. ಹಾಗೂ ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯ ಸ್ಥಾನಮಾನವೂ ಕಾಲದಿಂದ ಕಾಲಕ್ಕೆ ಬದಲಾಗುತ್ತಾ ಬಂದಿದೆ. ಮಹಿಳಾ ಸಬಲೀಕರಣವು ಸಮಾನ ಅವಕಾಶಗಳನ್ನುಒದಗಿಸುವ ಮೂಲಕ ಸಮೃದ್ಧ ಸಮಾಜದ ನಿರ್ಮಾಣಕ್ಕೆ ಅಡಿಪಾಯವಾಗಿದೆ. ಆದರೂ ಕೂಡ ಹೆಣ್ಣು ಪ್ರತಿಯೊಂದು ಕ್ಷೇತ್ರದಲ್ಲಿ ತನ್ನದೇ ಆದ ಉತ್ತಮ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಇಂದು ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂಚೂಣಿಯಲ್ಲಿದ್ದಾರೆ ಹಾಗೂ ವಿಜ್ಞಾನ, ತಂತ್ರಜ್ಞಾನ ,ರಾಜಕೀಯ ಮತ್ತು ಕಾರ್ಪೊರೇಟ್ ವಲಯಗಳಲ್ಲಿ ಮಹಿಳೆಯರು  ಸಾಧನೆ ಮಾಡುತ್ತಿದ್ದಾರೆ. ಸಮಾಜದ ಮತ್ತೊಂದು ದುಃಖಕರ ಸಂಗತಿ ಎಂದರೆ ಈಗಲೂ ಕೂಡ ಹೆಣ್ಣಿನ ಮೇಲೆ ದೌರ್ಜನ್ಯಗಳು ಕಿರುಕುಳ ಬ್ರೂಣ ಹತ್ಯೆ ಗಳು ದೊಡ್ಡ ಪಿಡುಗುಗಳಾಗಿವೆ. ಮಹಿಳೆಯರ ಸಬಲೀಕರಣ ಎಂದರೆ ಕೇವಲ ಉದ್ಯೋಗವಲ್ಲ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಬೆಳೆಸುವುದು ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಇಡೀ ಕುಟುಂಬಕ್ಕೆ ಶಿಕ್ಷಣ ನೀಡಿದಂತೆ ಕಾನೂನುಗಳ ಕಟ್ಟುನಿಟ್ಟಿನ ಜಾರಿ ಸುರಕ್ಷಿತ ವಾತಾವರಣ ಮತ್ತು ಪುರುಷರ ಮನೋಭಾವನೆಯಲ್ಲಿ ಬದಲಾವಣೆ ತರುವುದು ಅತಿ ಮುಖ್ಯವಾಗಿದೆ. ಹಾಗೂ ಮಹಿಳೆಯರು ಬಲಿಷ್ಠವಾದಾಗ ಮಾತ್ರ ಸಮಾಜವು ಬಲಿಷ್ಠ ವಾಗುತ್ತದೆ. ಎನ್ನುವಂತೆ ಸಮಾಜದಲ್ಲಿ ಮಹಿಳೆಯರ ಸ್ಥಾನಮಾನ ಸಮಾನತೆಯತ್ತ ಧನಾತ್ಮಕ ಹೆಜ್ಜೆ ಇಡುತ್ತಿದ್ದು ನಿಜವಾದ ಪ್ರಗತಿಯನ್ನು ಸಾಧಿಸಲು ಕಾರಣವಾಗುತ್ತಿದೆ. ಸ್ವ ಸಹಾಯ ಗುಂಪುಗಳ ಮೂಲಕ ಉದ್ಯೋಗಾವಕಾಶಗಳು ಮತ್ತು ಆಸ್ತಿ ಹಕ್ಕು ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯವನ್ನು ನೀಡಿವೆ. ತಾಳ್ಮೆಯ ಗುಣವೇ ಹೆಣ್ಣಿನ ಗೆಲುವಿಗೆ ಕಾರಣ ಎನ್ನುವಂತೆ ಮಹಿಳೆ ತನ್ನ ತಾಳ್ಮೆಯಿಂದ ಎಲ್ಲರನ್ನು ಗೆಲ್ಲುವ ಸಾಮರ್ಥ್ಯವನ್ನು ಹೊಂದಿದ್ದಾಳೆ. *ಹೆಣ್ಣು ಸಂಸಾರದ ಕಣ್ಣು*  ಎನ್ನುವಂತೆ ಕುಟುಂಬದಲ್ಲಿ ಹಲವಾರು ಸಮಸ್ಯೆಗಳನ್ನ ಎದುರಿಸುತ್ತಾ ಎಲ್ಲರ ಮನಸ್ಸನ್ನು ಗೆಲ್ಲುವ ಮನೆ ಬೆಳಗುವ ಮಹಾಲಕ್ಷ್ಮಿಯಂತೆ ಎಲ್ಲರನ್ನ ಸಂತೈಸಿ ಮನಸನ್ನ ಗೆಲ್ಲುವ ಪ್ರತಿಭೆ ಇವಳು. ಮಗಳಾಗಿ, ಹೆಂಡತಿಯಾಗಿ, ತಾಯಿಯಾಗಿ ಪ್ರತಿಯೊಂದು ಹಂತದಲ್ಲೂ ತನ್ನದೇ ಆದ ಜವಾಬ್ದಾರಿ ಯೊಂದಿಗೆ ಸಂಸಾರವನ್ನು ನಡೆಸುವಲ್ಲಿ ಯಶಸ್ಸನ್ನು ಕಾಣುವ ನಗೆಯ ಚಿಲುಮೆ . ಸ್ವಾತಂತ್ರ್ಯ ಹೋರಾಟದಲ್ಲಿ ಕೂಡ ಮಹಿಳೆ ತನ್ನ ಅಪ್ರತಿಮ ಸಾಧನೆಯನ್ನು ಮಾಡಿದ್ದಾಳೆ.ಉದಾಹರಣೆ:  ಕಿತ್ತೂರಾಣಿ ಚೆನ್ನಮ್ಮ, ಜಾನ್ಸಿ ರಾಣಿ ಲಕ್ಷ್ಮೀಬಾಯಿ ,ಒನಕೆ ಓಬವ್ವ, ರಾಣಿ ಅಬ್ಬಕ್ಕ, ಇನ್ನು ಹಲವಾರು ಮಹಿಳೆಯರು ತಮ್ಮದೇ ಆದ ಸಾಧನೆಯನ್ನು ಮಾಡಿದ್ದಾರೆ. ಆದರೂ ಇಂದಿನ ಆಧುನಿಕ ಸಮಾಜದಲ್ಲಿ ಮಹಿಳೆ ಒತ್ತಡದ ಬದುಕಿನಲ್ಲಿ ಹಲವಾರು ಸಮಸ್ಯೆಗಳನ್ನ ಎದುರಿಸಿ ಮೆಟ್ಟಿ ನಿಲ್ಲುವ ಧೈರ್ಯವಂತೆ ಹೆಣ್ಣು. ಪ್ರತಿ ವರ್ಷವೂ ಕೂಡ ಮಾರ್ಚ್ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಾರೆ ಹಾಗೂ ಅಂದು ಹಲವಾರು ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಗೌರವಿಸಿ ಸನ್ಮಾನಿಸುತ್ತಾರೆ.  ವಿಶೇಷವಾಗಿ ಕಾರ್ಮಿಕ ಚಳುವಳಿಗಳ ಭಾಗವಾಗಿ ಈ ಆಚರಣೆ ಪ್ರಾರಂಭವಾಯಿತು. 1975ರಲ್ಲಿ ಯುನೈಟೆಡ್  ನೇಷನ್ ಅಧಿಕೃತವಾಗಿ ಮಾರ್ಚ್ 8 ಅನ್ನು ಅಂತಾರಾಷ್ಟ್ರೀಯ ಮಹಿಳಾ ದಿನವಾಗಿ ಘೋಷಿಸಿತು. ಉದ್ದೇಶವೇನೆಂದರೆ ಮಹಿಳೆಯರ ಮೇಲಿನ ದೌರ್ಜನ್ಯ ತಡೆ , ಸಮಾನ ವೇತನ, ರಾಜಕೀಯ ಸಾಮಾಜಿಕ  ಪ್ರಾತಿನಿಧ್ಯ ಮತ್ತು ಲಿಂಗ ತಾರತಮ್ಯ ತೊಡೆದು ಹಾಕುವುದು. ಆದರೂ ಹೆಣ್ಣಿನ ಬಗ್ಗೆ ಹೇಳುವುದಾದರೆ ಪದಗಳೇ ಸಾಲದು ಪ್ರತಿಯೊಬ್ಬರೂ ಕೂಡ ಹೆಣ್ಣನ್ನು ಗೌರವಿಸಿದಾಗ ಮಾತ್ರ ಸಮಾಜದ ಏಳಿಗೆ ಸಾಧ್ಯ. ನಾಗರತ್ನ ಎಚ್ ಗಂಗಾವತಿ

ಮಹಿಳಾದಿನದ ವಿಶೇಷ, ನಾಗರತ್ನ ಎಚ್ ಗಂಗಾವತಿ Read Post »

ಇತರೆ

ಮಹಿಳಾದಿನದ ವಿಶೇಷ, ಲತಾ ಎ ಆರ್‌ ಬಾಳೆಹೊನ್ನೂರು

ಮಹಿಳಾದಿನದ ವಿಶೇಷ ಲತಾ ಎ ಆರ್‌ ಬಾಳೆಹೊನ್ನೂರು ದಿಟ್ಟ ಮಹಿಳೆ ತಂದೆ ತಾಯಿಯರ ಮುದ್ದಿನ ಮಗಳಿವಳುಅಣ್ಣಾ ಅಕ್ಕಾ ರ ಮುದ್ದಿನ ತಂಗಿಯಿವಳುಎಲ್ಲರ ಜೊತೆ ಸಮನಾಗಿ ಬೆರೆತವಳುಸಂತಸದ ಸೆಲೆ ಕುಟುಂಬಕ್ಕೆ ಕೊಟ್ಟವಳು ವಿದ್ಯೆಯನು ಚಂದದಿ ಶಾಲೆಯಲಿ ಕಲಿತವಳುಬದುಕಿಗೆ ಬಾಳಿನ ಬೆಳಕು ತಂದುಕೊಂಡವಳುದಿಟ್ಟ ಮಹಿಳೆಯಾಗಿ ಬದುಕು ಕಟ್ಟಿದವಳುಸಮಾಜಕ್ಕೆ ಸುಖದ ಹೊನಲು ಹರಿಸಿದವಳು ಏಳು ಬೀಳುಗಳ ಜೊತೆ ಸಾಗಿದವಳುಸುಖ ಸಂಸಾರದ ಸವಿ ಕಂಡವಳುಬಂದ ನೋವುಗಳ ಮೌನದಿ ಸಹಿಸಿದವಳುಮನೆ ಬೆಳಗುವ ಸಾತ್ವಿಕ ಮನದವಳು ಎಲ್ಲಾ ರಂಗದಲಿ ಸೈ ಎನಿಸಿದವಳುಲೋಕದ ಸೃಷ್ಟಿಗೆ ಕಾರಣ ಆದವಳುಎಲ್ಲರ ಮನ ಗೆದ್ದ ವಿನಯವಂತಳುಸೌಹೃದಯದ ಕರುಣಾಳು ಸಾಹಸಿ ಗುಣದವಳು ಡಾ.ಲತಾ ಎ.ಆರ್ ಬಾಳೆಹೊನ್ನೂರು

ಮಹಿಳಾದಿನದ ವಿಶೇಷ, ಲತಾ ಎ ಆರ್‌ ಬಾಳೆಹೊನ್ನೂರು Read Post »

ಇತರೆ

ಮಹಿಳಾದಿನದ ವಿಶೇಷ,ಜಯಶ್ರೀ ಭ. ಭಂಡಾರಿ 

ಮಹಿಳಾದಿನದ ವಿಶೇಷ ಜಯಶ್ರೀ ಭ. ಭಂಡಾರಿ  ವಿಶ್ವ ಮಹಿಳಾ ದಿನಾಚರಣೆ ವಿಶೇಷತೆ. ನಾರಿ ಹಿ ಸಾರಿ ಕಿ ಹೈ.ಸಾರಿ‌ ಹಿ ನಾರಿ ಕಿ ಹೈ.“ಎಲ್ಲವೂ ನಾರಿಯೇ. ನಾರಿಯೇ ಎಲ್ಲಾ’” ಮಾತೃದೇವೋ ಭವ ಪೂಜ್ಯತೆ ಪಡೆದವಳು. ಎಲ್ಲ ಕಡೆ ತಾನಿರಲಾಗುವುದಿಲ್ಲವೆಂದೇ ಪ್ರತಿ ಮನೆಯಲಿ ಒಬ್ಬ ತಾಯಿಯನ್ನು ದೇವರು ಸೃಷ್ಟಿ ಮಾಡಿದನಂತೆ. ತಾಯಿಯ ಎದೆ ಹಾಲೆಂಬ ಬಿಳಿ ಮಸಿ  ಮಗುವಿನ  ಭವಿಷ್ಯ ರೂಪಿಸುತ್ತದೆ. ಕಾರಣ‌ ತಾಯಿ ಹಾಲೂಡಿಸುವಾಗ ” ಈ‌ ನನ್ನ ಕಂದ ಜಗತ್ತನ್ನೇ ಗೆಲ್ಲುವ ಬಲಶಾಲಿಯಾಗಲಿ ” ಎಂದು ಮಮತೆ ತುಂಬಿ ಹಾರೈಸಿ ಹರಸುವಳು. “ಜನನೀ ಜನ್ಮ ಭೂಮಿಶ್ಚ ಸ್ವರ್ಗಾದಪಿ  ಗರಿಯಸಿ”  ಎಂದರೆ ಹೆತ್ತ‌ ತಾಯಿ,ಹೊತ್ತ ಭೂಮಿ ಇವೆರಡೂ ಸ್ವರ್ಗಕ್ಕಿಂತಲೂ ಮಿಗಿಲು. ಇವರಿಬ್ಬರ ಋಣ ತೀರಿಸಲಾಗದು. ತಾಯಿ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ. ತಾಯಿಯೆಂಬ ಮಹಿಳೆಗೂ ಒಂದು ದಿನವಿದೆ. ಅದೆಂದರೆ ” ವಿಶ್ವ ಮಹಿಳಾ ದಿನಾಚರಣೆ”. ವಿಶ್ವದೆಲ್ಲೆಡೆ ಸಂಭ್ರಮದಿಂದ. ಆಚರಿಸಲಾಗುತ್ತದೆ   1910ರ ಆಗಸ್ಟ್‌ನಲ್ಲಿ ಡೆನ್ಮಾರ್ಕ್‌ನ ಕೋಪೆನ್‌ಹೇಗನ್‌ನಲ್ಲಿ ಎರಡನೆಯ ಅಂತರರಾಷ್ಟ್ರೀಯ ಸೋಷಿಯಲಿಸ್ಟ್ ಮಹಿಳಾ ಸಮ್ಮೇಳನ ನಡೆಯಿತು. ಅಲ್ಲಿನ ಕಾರ್ಮಿಕರ ಪ್ರತಿನಿಧಿ ಸಭೆಯ ಸಭಾಂಗಣದಲ್ಲಿ 17 ದೇಶಗಳ ಪ್ರತಿನಿಧಿಗಳು ಸೇರಿದ್ದರು. ಅಮೆರಿಕೆಯ ಹಲವಾರು ಕಾರ್ಮಿಕ ಸಂಘಟನೆಗಳ ನಾಯಕಿಯರು ಬಂದಿದ್ದರು. ಈ ಸಮ್ಮೇಳನಕ್ಕೆ ಅಂತರರಾಷ್ಟ್ರೀಯ ಮಹಿಳಾ ಸೆಕ್ರೆಟೇರಿಯೆಟ್‌ನ ಮುಖ್ಯಸ್ಥೆಯಾಗಿದ್ದ ಕ್ಲಾರಾ ಜೆಟ್‌ಕಿನ್ ಅಧ್ಯಕ್ಷೆಯಾಗಿದ್ದಳು. ಈ ಸಮ್ಮೇಳನದಲ್ಲಿ ಚರ್ಚಿತವಾದ ಎರಡು ವಿಷಯಗಳೆಂದರೆ ಸಾರ್ವತ್ರಿಕ ಮತದಾನದ ಹಕ್ಕು ಮತ್ತು ಮಹಿಳೆಯರ ಹೆರಿಗೆ ಭತ್ಯೆ ಮತ್ತು ಇತರ ಸೌಕರ್ಯಗಳು. ಕ್ಲಾರಾ ಜೆಟ್‌ಕಿನ್ ಈ ಸಮ್ಮೇಳನದಲ್ಲಿ ಮಾರ್ಚ್ 8ನ್ನು ಮಹಿಳಾ ದಿನವನ್ನಾಗಿ ಆಚರಿಸಬೇಕೆಂದು ೧೯೧೧ರಲ್ಲಿ ನಿರ್ಣಯ ಮಂಡಿಸಿದರು. ಅಲ್ಲಿ ನೆರೆದಿದ್ದ ವಿವಿಧ ರಾಷ್ಟ್ರಗಳ ಸದಸ್ಯ ಪ್ರತಿನಿಧಿಗಳು ಸರ್ವಾನುಮತದಿಂದ ಸಮ್ಮತಿಸಿದರು. ಈ ಸಮ್ಮೇಳನದಲ್ಲಿ ಫಿನ್ಲೆಂಡ್‌ನಲ್ಲಿ ಆಗಷ್ಟೇ ಚುನಾಯಿತರಾಗಿದ್ದ ಮೂವರು ಮಹಿಳೆಯರಿದ್ದು, ಅವರು ಜೆಟ್‌ಕಿನ್‌ ಸಲಹೆಯನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಹೀಗೆ ಅಂತರರಾಷ್ಟ್ರೀಯ ಮಹಿಳಾ ದಿನವೆನ್ನುವುದು ಪ್ರತಿಭಟನೆ ಮತ್ತು ರಾಜಕೀಯ ಕ್ರಿಯಾಶೀಲತೆಯ ದಿನವಾಗಿ ಅಸ್ತಿತ್ವಕ್ಕೆ ಬಂದಿತು.  ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಥವಾ ವಿಶ್ವ ಮಹಿಳೆಯರ ದಿನ ಪ್ರತಿ ವರ್ಷ ಮಾರ್ಚ್ ೮ ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯಲಾಗುತ್ತದೆ. ತಮ್ಮ ಹಕ್ಕುಗಳನ್ನು  ಬೇಡಿಕೆಯಾಗಿಟ್ಟುಕೊಂಡು ಮೊದಲ ಬಾರಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು. ಇದಕ್ಕೂ ಮೊದಲು 1903ರಲ್ಲಿ ಅಮೆರಿಕೆಯಲ್ಲಿ ಮತದಾನದ ಹಕ್ಕಿಗಾಗಿ ಹೋರಾಟ ನಡೆಸಿದ್ದ ಮಹಿಳಾ ಕಾರ್ಮಿಕ ಸಂಘಟನೆಗಳು ‘ಮಹಿಳೆಯರ ಟ್ರೇಡ್ ಯೂನಿಯನ್ ಲೀಗ್’ ಸ್ಥಾಪಿಸಿ ರಾಜಕೀಯ ಮತ್ತು ಆರ್ಥಿಕ ಕಲ್ಯಾಣವನ್ನು ತಮ್ಮ ಸಂಘಟನೆಯ ಮುಖ್ಯ ಧ್ಯೇಯವನ್ನಾಗಿಸಿಕೊಂಡವು. 1908ರ ಫೆಬ್ರುವರಿ ಕೊನೆಯ ಭಾನುವಾರ ಅಮೆರಿಕೆಯಲ್ಲಿ ಮತದಾನದ ಹಕ್ಕಿಗಾಗಿ ಬೃಹತ್ ಪ್ರತಿಭಟನಾ ಪ್ರದರ್ಶನಗಳು ನಡೆದಿದ್ದವು. ನಂತರ 1909ರಲ್ಲಿ ಸಿದ್ಧ ಉಡುಪುಗಳ ಕಾರ್ಖಾನೆಗಳಲ್ಲಿ 20,000ದಿಂದ 30,000ದಷ್ಟು ಮಹಿಳೆಯರು ಚಳಿಗಾಲದಲ್ಲಿ 13 ವಾರಗಳ ಕಾಲ ಮುಷ್ಕರ ನಡೆಸಿ ದಸ್ತಗಿರಿಯಾದರು. ಮಹಿಳೆಯರ ಟ್ರೇಡ್ ಯೂನಿ ಯನ್ ಲೀಗ್‌ನವರು ಜಾಮೀನು ನೀಡಿ ಬಂಧಿತ ಕೆಲಸ ಗಾರರನ್ನು ಬಿಡಿಸಿಕೊಂಡರು. ಈ ಅಮೆರಿಕದ ಮಹಿಳೆಯರ ಹೋರಾಟದಿಂದ ಸ್ಫೂರ್ತಿಗೊಂಡ ಕ್ಲಾರಾ ಜೆಟ್‌ಕಿನ್ ಸೋಷಿಯಲಿಸ್ಟ್ ಮಹಿಳೆಯರ ಸಮ್ಮೇಳನದಲ್ಲಿ ವರ್ಷಕ್ಕೊಮ್ಮೆ ದಿನವನ್ನು ನಿಗದಿಪಡಿಸಿ ಮಹಿಳೆಯರು ತಮ್ಮ ಬೇಡಿಕೆಗಳನ್ನು ಒತ್ತಾಯಿಸಲು ಅನುವಾಗುವಂತಹ ವ್ಯವಸ್ಥೆಗಾಗಿ ಸಲಹೆ ನೀಡಿ ಕಾರ್ಯರೂಪಕ್ಕೆ ತರಲು ಶ್ರಮಿಸಿದಳು. ಸಬಲತೆ ಅಥವಾ ಸಶಕ್ತತೆ ಎಂಬ ಪರಿಕಲ್ಪನೆಯು ಅಧಿಕಾರ ಹೊಂದುವುದು ಮತ್ತು ಶಕ್ತಿಯುತರಾಗುವುದುನ್ನು ಸೂಚಿಸುತ್ತದೆ. ಸಬಲತೆ ಎನ್ನುವುದು ಸ್ತ್ರೀ-ಪುರು‍ಷರಿಬ್ಬರಿಗೂ ಸಮಾಜದಲ್ಲಿ ಬದುಕಲು ಬೇಕಾದ ಶಕ್ತಿ. ಒಬ್ಬ ಮಹಿಳೆಯು ಶಕ್ತಿವಂತಳಾಗಿ, ಸ್ವತಂತ್ರವಾಗಿ ತನ್ನ ಇಚ್ಛೆಯಂತೆ ಸ್ವಾಲಂಬಿಯಾಗಿ ಬಾಳುವ ಸ್ಥಿಯನ್ನು ಸಾಮಾನ್ಯ ಅದನ್ನು ಸಬಲತೆ ಎನ್ನಬಹುದು. ಒಬ್ಬ ಮಹಿಳೆ ತನ್ನ ಜೀವನದ ಬಗ್ಗೆ ಪರಿಪೊರ್ಣ ಜ್ಞಾನವನ್ನು ಹೊಂದುವುದು, ತನ್ನ ಜೀವನದಬಗ್ಗೆ ನಿರ್ಣಯ ಹಾಗೂ ತೀರ್ಮಾನಗಳನ್ನು ಕೈಗೊಲಳ್ಳುವ ಸ್ವಾತಂತ್ರ್ಯ ಹೊಂದುವುದು, ಅಧಿಕಾರ ಹಾಗೂ ಸಂಪನ್ಮೂಲಗಳನ್ನು ಬಳಸಿಕೂಳ್ಳುವ ಅವಕಾಶಗಳನ್ನು ಹೊಂದುವುದು. ಯಾವುದೇರೀತಿಯ ಅಸಮಾನತೆ,ಶೋಷಣೆಗಳಿಗೆ ಒಳಗಾಗದೆ ಶಿಕಣ, ಉದ್ಯೋಗ, ವಿವಾಹ, ಜೀವನ, ಸಂತಾನೋತ್ಪತ್ತಿ ಆರೋಗ್ಯ ಮತ್ತು ಹಕ್ಕುಗಳನ್ನು ಹೊಂದುವುದು. ಸಾಮಾಜಿಕ ಚಾಲನೆ, ರಾಜಕೀಯ ಮತ್ತು ಆಡಳಿತದಲ್ಲಿ ಪಾಲ್ಗೋಳ್ಳುವಿಕೆ ಇಂತಹ ಅಂಶಗಳ ಬಗ್ಗೆ ಸ್ವತಂತ್ರ್ಯ ಹೊಂದಿ ಸ್ವಾಭಿಮಾನಿಯಾಗಿ ಅತ್ಮ ವಿಸ್ವಾಸದಿಂದ ಬಾಳುವಶಕ್ತಿಯೇ ಮಹಿಳಾ ಸಬಲತೆ. ಮಹಿಳಾ ಸಬಲತೆಯು ಮೂಲಭೂತವಾಗಿ ಮಹಿಳೆಯರ ಮಾನಸಿಕ ಸಬಲತೆಯೂಗಿದ್ದು ಅವರು ಪ್ರಜ್ನಾಪೂರ್ವಕವಾಗಿ ಶಕ್ತಿ ವಂತರಾಗುವ ಸ್ಥಿತಿ. ಮಹಿಳೆಯರ ಯೋಚನೆ, ಶಕ್ತಿ,ಸಾಮರ್ಥ್ಯ, ಅರಿವು, ಅಭಿವ್ಯಕ್ತಿ, ಆರೋಗ್ಯ, ನಿರ್ಣಯ, ಆತ್ಮವಿಶ್ವಾಸ,ಪಾಲ್ಗೊಳ್ಳುವಿಕೆ ಮತ್ತು ಸಾಮಾಜಿಕ ಚಾಲನೆಗಳಿಂದ ಹಂತ ಹಂತವಾಗಿ ಶಕ್ತಿವಂತಳಾಗಿ, ಸ್ವಾಲಂಬಿಯಾಗಿ ವಿಕಾಸವಾಗುವ ಕ್ರಿಯೆಯೇ ಸಬಲತೆ. ಮಹಿಳಾ ಸಬಲತೆಯು ಬಹು ಆಯಾಮಗಳ ಪ್ರಕ್ರಿಯೆಯಾಗಿದ್ದು ವ್ಯಕ್ತಿಗತವಾಗಿ ಹಾಗೂ ಸಾಮಾಜಿಕ ಹಿನ್ನಲೆಯಲ್ಲಿ ಮೂಡಿಬರುವಂತಹದ್ದು. ವ್ಯಕ್ತಿತ್ವದೂದಿಂಗೆ ಮಹಿಳೆಯು ತನ್ನನ್ನು ಗುರುತಿಸಿಕೂಳ್ಳುವುದು, ತನ್ನ ಜೀವನದ ಬಗ್ಗೆ ಪೂರ್ಣ ಅಧಿಕಾರ ಹೊಂದುವ ಸ್ಥಿತಿ. ಪುರುಷರಿಗೆ ಸರಿಸಮಾನವಾಗಿ ಸ್ಥಾನ ಮಾನ, ವ್ಯಕ್ತಿಗೌರವ ಮತ್ತು ಘನತೆ ಹೊಂದುವುದು. ಸಾಮಾಜಿಕ ಚಾಲನೆ,ಆರ್ಥಿಕ ಸ್ವಾವಲಂಬನೆ, ಹಕ್ಕುಗಳ ಬಗ್ಗೆ ಅರಿವು, ಆರೋಗ್ಯಸೇವೆಗಳು ಮತ್ತು ಸಂಪನ್ಮೂಲಗಳ ಮೇಲಿನ ಒಡೆತನ, ಆರ್ಥಿಕ ಚಟುವಟಿಕೆಗಳು ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಆತ್ಮವಿಶ್ವಾಸದಿಂದ ಸಶಕ್ತವಾಗಿ ಬಾಳಬಹುದು.     ಮಹಿಳಾ ಸಬಲೀಕರಣದ ಉದ್ದೇಶಗಳು. ೧. ಸಮಾಜದಲ್ಲಿ ಆಚರಣೆಯಲ್ಲಿರುವ ಲಿಂಗ ತಾರತಮ್ಯವನ್ನು ತೊಡೆದುಹಾಕಿಮಹಿಳೆಯರ ಘನತೆ, ಗೌರವ ಹಾಗೂ ಸಾಮಾಜಿಕಸ್ಥಾನ ಮಾನಗಳನ್ನು ಉನ್ನತಿಗೊಳಿಸುವುದು. ೨. ಮಹಿಳೆಯರಲ್ಲಿ ಸುಪ್ತವಾಗಿರುವ ಅಪೂರ್ವ ಸಾಮರ್ಥ್ಯಗಳನ್ನು ಗುರ್ತಿಸಿ ವೃದ್ಥಿಗೂಳಿಸಿ ಅವರು ಬದಲಾವಣೆಯ ನಿಯೋಗಿಗಳಾಗಿ ರೂಪುಗೊಳ್ಳುವಂತೆ ಆತ್ಮವಿಶ್ವಾಸ ಮೂಡಿಸುವುದು. ೩. ಮಹಿಳೆಯರು ತಮ್ಮ್ ಅಭಿವೃದ್ಧಿಗೆ ಅವಕಾಶಗಳನ್ನು ಗುರುತಿಸಿಕೊಂಡು ಅಭಿವೃದ್ಧಿಯಾಗಲು ಪ್ರೋತ್ಸಾಹ ನೀಡುವುದು. ೪. ಮನೆ ಹಾಗು ಸಮುದಾಯದಲ್ಲಿ ಲಭ್ಯವಿರುವ ವಿವಿಧ ರೀತಿಯ ಸಂಪನ್ಮೂಲಗಳ ಮೇಲೆ ಅಧಿಕರ ಹೊಂದುವುದು ಹಾಗೂ ಅವುಗಳನ್ನು ಬಳಸಿಕೊಳ್ಳು ತಿಳಿವಳಿಕೆಮತ್ತು ತಂತ್ರಗಳನ್ನ್ನು ಬೆಳೆಸುವುದು. ೫. ಮಹಿಳೆಯರ ಸಂತಾನೋತ್ಪತಿ ಆರೋಗ್ಯ, ಶಿಶು ಜನನ ಮತ್ತು ಮಕ್ಕಳ ಪಾಲನೆಗಳ ಬಗ್ಗೆ ಅರಿವು ನೀಡುವುದು. ೬. ಅಸಮಾನತೆ, ಹಸಿವು, ಶೋಷಣೆ, ಹಿಂಸೆ ಹಾಗೂ ನಿಂದನೆಗಳ ವಿರುದ್ದ ಜಾಗೃತರಾಗಿ ಸಮಾನತೆಗಾಗಿ ಹಾಗೂ ಅಭಿವೃದ್ಧಿಗಾಗಿ ಸಂಘಟನಾತ್ಮಕ ಹೋರಾಟ ಮಾಡುವ ಆತ್ಮವಿಶ್ವಾಸ ಬೆಳೆಸುವುದು . ೭. ಹಕ್ಕುಗಳು ಹಾಗೂ ಅಭಿವೃದ್ಧಿಯ ಅವಕಾಶಗಳ ಬಗ್ಗೆ ಅರಿವು ಮೂಡಿಸುವುದು. ೮. ಮಹಿಳೆಯರಲ್ಲಿ ವ್ಯಕ್ತಿತ್ವ ವಿಕಾಸದೂಂದಿಗೆ ನಾಯಕತ್ವದ ಗುಣಗಳನ್ನು ಬೆಳೆಸುವುದು. ೯. ಮಹಿಳೆಯರಲ್ಲಿ ತನ್ನ ಹಾಗೂ ಕುಟುಂಬದ ಶೈಕ್ಷಣಿಕ, ಆರೋಗ್ಯ, ಆರ್ಥಿಕ ವಿಷಯಗಳಲ್ಲಿ ಸ್ವತಂತ್ರವಾಗಿ ಯೋಚಿಸುವ ಸಾಮರ್ಥ್ಯ, ಜವಾಬ್ದಾರಿ ಹೊರುವ ಹಾಗೂ ನಿರ್ಣಯ ತೆಗೆದುಕೊಳ್ಳುವ ಶಕ್ತಿಯನ್ನು ಬೆಳೆಸುವುದು. ಆದರೆ ಇಂದು ಸಮಾಜದಲ್ಲಿ ಮಹಿಳೆಯ ಮೇಲಿನ ಅತ್ಯಾಚಾರ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಾ ಸಾಗಿವೆ. ಇದಕ್ಕೆ ಕಡಿವಾಣ ಹಾಕಬೇಕಿದೆ. ಯಾವ ದೇಶದಲ್ಲಿ ಸ್ತ್ರೀಯರಿಗೆ ಅತ್ಯುನ್ನತ ಸ್ಥಾನ,ಮಾನ ಗೌರವ ಇರುವುದೊ ಆ ದೇಶ ಮುಂದುವರಿದ ದೇಶವಾಗಿರುತ್ತದೆ. “ಭೇಟಿ ಬಚಾವೋ ,ಭೇಟಿ ಪಡಾವೋ”ಸದಾ ಎಲ್ಲರ ಮನದಲ್ಲಿ ಅನುರಣಿಸಲಿ. ಜೋಗುಳ ಹಾಡಿ ಬೆಳೆಸಿದ ತಾಯಿಯನ್ನು ಸದಾ ಸ್ಮರಿಸೋಣ. ಇಳೆಯ ಕಳೆ ಹೆಚ್ಚಿಸುವ ಮಹಿಳೆ ಸದಾ ಸಂತಸದಿಂದ ಬದುಕಲಿ.  ಅವಳ ನೆರಳಿನಲ್ಲಿ ನಾವೆಲ್ಲ ಅನುಗಾಲ ಸುಖವಾಗಿರೋಣ.  ಜಯಶ್ರೀ ಭ. ಭಂಡಾರಿ  

ಮಹಿಳಾದಿನದ ವಿಶೇಷ,ಜಯಶ್ರೀ ಭ. ಭಂಡಾರಿ  Read Post »

ಇತರೆ

ಮಹಿಳಾದಿನದ ವಿಶೇಷ, ಶ್ರೀದೇವಿ. ಮ. ಗುಮ್ಮಗೋಳ

ಮಹಿಳಾದಿನದ ವಿಶೇಷ ಶ್ರೀದೇವಿ. ಮ. ಗುಮ್ಮಗೋಳ ಮಾನಿನಿಯ ಮನ ಮಾರಿಯೆಂದರುಮಾಯಾಂಗನಿ ಎಂದು ಮೊದಲಿಸಿದರೂ….ಅರಿವಿಲ್ಲದೆ ಅದೇ ಮಾಯಾಜಾಲದಲಿಬಂದಿಯಾದರೂ ಆ ಚಕ್ರವ್ಯೂಹ ಭೇದಿಸಿದಳು ನೀನು… ಬಾಯಬಡಿಕಿ ಎಂದರುಎಲ್ಲ ತಿಳಿದ ಮಳ್ಳಿ ಎಂದರೂ….ಹೊರ ಪ್ರಪಂಚದಲ್ಲಿದ್ದುಏನೂ ಅರಿದ ಕಪ್ಪೆಯಂತಿದ್ದವಳು….ಸಂಸಾರವೆಂಬ ಬಾವಿಯೊಳಗೆಎಲ್ಲವ ಅರಿತು ಮೌನವಾದವಳು ನೀನು… ಬುದ್ದಿ ಮೊನಕಾಲ ಕೆಳಗೆಂದರುಮತಿಹೀನಳೆಂದರೂ…ದೇಶದ ಚುಕ್ಕಾಣಿ ಹಿಡಿದವಳು ನೀನು…ದೇಶದ ಚಿತ್ತ ಹರಿಸಿ ವಿತ್ತ ಓದಿದವಳು ನೀನು….. ಬಜಾರಿ ಎಂದರೂಹೆಮ್ಮಾರಿ ಎಂದರೂ…..ಕಟ್ಟಳೆಗಳ ಗೆರೆ ಎಳೆದರೂ…ಇನಿಯನ ಬರುವಿಗಾಗಿ ಶಬರಿಯಂತೆ ಕಾದವಳು ನೀನು….ದೇಶಭಕ್ತಿ, ದೈವಭಕ್ತಿ ಪ್ರೇಮಭಕ್ತಿಯ ಮೆರೆದು‌ ಸ್ಪುಟವಾದವಳು ನೀನು….ಆಟ, ಓಟ, ಪಾಠ ಎಲ್ಲಂದರಲ್ಲೂ ಸೈ ಎನಸಿಇತಿಹಾಸ ಪುಟವಾದವಳು ನೀನು… ಮನೆಗೆ ಭಾರವೆಂದರೂ…ಇದಿಯಾದವಳೆಂದರೂ…ಪ್ರೀತಿ ಅಕ್ಕರೆಯ ತೋರಿ ಸಾಕಿ ಸಲುಹಿದಮಗನೇ ಬೆನ್ನು ತಿರುಗಿಸಿದಾಗಹೆತ್ತವರನ್ನೆ ದೂಡಿ ಬಿಸಾಕಿದಾಗಹೆಗಲು ಕೊಟ್ಟವಳು ನೀನು…ಅಕ್ಕರೆಯಿಂದ ಆಸರೆಯಾಗಿ ಸಲುಹಿದವಳು ನೀನು..ಕಡೆಗೆ ಸತ್ತಾಗ ಅದೇ ಜೀವಗಳಿಗೆ ಅಳುತಹಿಡಿ ಮಣ್ಣು ಹಾಕಿದವಳು ನೀನು.. ಅಬಲೆಯೆಂದರೂ‌‌….ಮೂಲ ಹುಡಕಬೇಡವೆಂದರೂ…ಮಾನಿನಿ ನಿನ್ನ ಬಾಳಲ್ಲಿಮಾಗಿ ಹಣ್ಣಾದವಳು ನೀನು…ಬಾಗಿ ಸಣ್ಣಾದವಳು ನೀನು…ತೂಗಿ ಹೊನ್ನಾದವಳು ನೀನು…ತನ್ನತನವ ತೊರೆದುಇತರರಿಗಾಗಿ ಬಾಳಿದವಳು ನೀನು…ಕೊನೆಗೆ ನಿನ್ನ ಅಸ್ತಿತ್ವ ನೀನೆ ಹುಡುಕುತಮಣ್ಣಾದವಳು ನೀನು…. ಶ್ರೀದೇವಿ. ಮ. ಗುಮ್ಮಗೋಳ   ಶ್ರೀದೇವಿ. ಮ. ಗುಮ್ಮಗೋಳ

ಮಹಿಳಾದಿನದ ವಿಶೇಷ, ಶ್ರೀದೇವಿ. ಮ. ಗುಮ್ಮಗೋಳ Read Post »

ಇತರೆ

ಮಹಿಳಾದಿನದ ವಿಶೇಷ,ಕಲ್ಪನಾ ಎಸ್ ಪಾಟೀಲ

ಮಹಿಳಾ ದಿನದ ವಿಶೇಷ ಕಲ್ಪನಾ ಎಸ್ ಪಾಟೀಲ ನಾವೇಕೆ ಹೀಗೆ.!? ಸಂಬಂಧಗಳನೆಲ್ಲ ಅಳೆದುತೂಗುವದಿಲ್ಲ, ಎಲ್ಲರೂನನ್ನವರೇ ಎನ್ನುವೆವಲ್ಲ, ನಾವೇಕೆ ಹೀಗೆ.?! ವೈಯಕ್ತಿಕ ಆಸೆ, ಕನಸುಗಳನೆಲ್ಲಹತ್ತಿಕ್ಕಿ ಬದುಕ ನಡೆಸಿದೆವಲ್ಲತಮಗಾಗಿ ಬದುಕಲಿಲ್ಲ, ನಾವೇಕೆ ಹೀಗೆ.!? ತವರುಮನೆಯ ತೊರೆಯಬೇಕುಗಂಡನಮನೆಯಲಿ ಬೆರೆಯಬೇಕುಇಲ್ಲಿಯೂ ನಮಗಾಗಿ ಅಲ್ಲ, ನಾವೇಕೆ ಹೀಗೆ.!? ಸಣ್ಣ ಸಣ್ಣ ಕ್ಷಣಗಳ ಆನಂದಿಸುವಳುಅಡುಗೆ ಮನೆಯೇ ತನ್ನದೆನ್ನುವಳುನಮಗೆಲ್ಲಾ‌ ಅದ್ಯಾಕ ಎನ್ನುವಳು ಅವಳೇಕೆ ಹೀಗೆ.?! ಮಾತಿಗೆ ಮೊದಲೇ ಸಹನಾಮೂರ್ತಿಯಾಗಿಹಳುಸಿಟ್ಟು ಕೋಪವ ಒಳಗೊಳಗೆ ನುಂಗುವಳುತನ್ನ ರಕ್ತವ ಸುಟ್ಟುಕೊಳ್ಳುವಳು ಇವಳೇಕೆ ಹೋಗೆ.?! ಗಂಡ ಗದರಿದರೂ ಮರಳಿ ಗದರಿಸದವಳುಮಕ್ಕಳು ಹೆದರಿಸಿದರೂ ಹೆದರುವಳುಮನಕೆ ಘಾಸಿಯಾದರೂ ಸಹಿಸುವಳು ಇವಳೇಕೆ ಹೀಗೆ.!? ಇಂದು ಮಹಿಳಾ ದಿನಾಚರಣೆಯಂತೆಒಂದಿನಕೆ ಆಚರಣೆಗಾದರೆನಿತ್ಯಕೆ ಅದಾವ/ರ ಆಚರಣೆ.!? ಕಲ್ಪನಾ ಎಸ್ ಪಾಟೀಲ

ಮಹಿಳಾದಿನದ ವಿಶೇಷ,ಕಲ್ಪನಾ ಎಸ್ ಪಾಟೀಲ Read Post »

ಅಂಕಣ ಸಂಗಾತಿ, ವೃತ್ತಿ ವೃತ್ತಾಂತ

ಅಂಕಣ ಸಂಗಾತಿ ವೃತ್ತಿ ವೃತ್ತಾಂತ ಸುಜಾತಾ ರವೀಶ್ ವೃತ್ತಿ ಬದುಕಿನ ಹಿನ್ನೋಟ-31 ಈ ಮನೆಯ ಬಾಲ್ಕನಿಯಲ್ಲಿ ನಿಂತರೆ ಇಡೀ ಸಂತೆಯೇ ಕಾಣುತ್ತಿತ್ತು ಗುರುವಾರದ ದಿನ ಬಂತು ಬೆಳಗ್ಗೆ 6 ಗಂಟೆಯಿಂದಲೇ ಜನಗಳ ಗಾಡಿಗಳ ಓಡಾಟ ಮತ್ತೆ ಸಂಜೆಯವರೆಗೂ ಇದೇ ರೀತಿ ರಸ್ತೆ ಬ್ಯುಸಿ ಇರುತ್ತಿತ್ತು. ಸಂಜೆ ಸಂತೆ ಕೆ ಬಂದ ಕೆಲವು ಸಹೋದ್ಯೋಗಿಗಳು ಮನೆಗೆ ಬರುತ್ತಿದ್ದರು ಹಳೆಯ ಮನೆಯ ಬಳಿಯಿದ್ದ ಪರಿಚಿತರು ಬರುತ್ತಿದ್ದರು ಹಾಗಾಗಿ ಗುರುವಾರ ನಾವು ಸಂಜೆ ತುಂಬಾ ಬ್ಯುಸಿ ಆಗಿಬಿಡುತ್ತಿದ್ದೆವು. ಅದೇ ರಸ್ತೆಯ ಕೊನೆಯಲ್ಲಿ ಬಸ್ ಡಿಪೋ ಇದುದರಿಂದ ಬಹಳಷ್ಟು ಬಸ್ ಓಡಾಟ ಸದಾ ಇರುತ್ತಿತ್ತು .ಹೀಗಾಗಿ ಬಾಲ್ಕನಿ ಸದಾ ಧೂಳಾಗಿಯೇ ಇರುತ್ತಿತ್ತು . ಆಗ ಪುಟ್ಟ ಮಗುವಾಗಿದ್ದ ನನ್ನ ತಂಗಿಯ ಮಗ ನಿಶ್ಚಯ್ ಗಂತೂ ಓಡಾಡುತ್ತಿದ್ದ ಆ ಕೆಂಪು ಬಸ್ ಗಳನ್ನು ನೋಡುವುದೇ ಒಂದು ಖುಷಿ.ಈ ಮನೆಯಲ್ಲಿ ಇದ್ದಾಗಲೇ ನಮ್ಮ ಅತ್ತೆ ಮಾವ ಸಹ ಬಂದು ಒಂದು ವಾರ ಇದ್ದರು ನಮ್ಮ ಅತ್ತೆಯ ತಾಯಿಯ ಮನೆ ಸಕಲೇಶಪುರದ ಹತ್ತಿರದ ಊರೇ ಆದ್ದರಿಂದ ಅಲ್ಲಿಗೂ ಒಮ್ಮೆ ಹೋಗಿ ಬಂದರು. ನನ್ನ ಮೈದುನ ಹಾಗೂ ಓರಗಿತ್ತಿ ಸಹ ಒಮ್ಮೆ ಇಲ್ಲಿಗೆ ಬಂದಿದ್ದರು. ಅವರೊಂದಿಗೆ ನಾವು ಹೊರನಾಡು ಹೋಗಿ ದೇವಿ ದರ್ಶನ ಮಾಡಿ ಬಂದೆವು ದಿನವೇ ಐ ಆರ್ ಡಿ ಎ ಬಿಲ್ ಸಹ ಮಂಡಿಸಲ್ಪಟ್ಟು ಇದ್ದಕ್ಕಿದ್ದಂತೆ ಆ ದಿನ ಸ್ಟ್ರೈಕ್ ಕೊಟ್ಟಿದ್ದರು ಹಾಗಾಗಿ ರಜೆಯ ಬದಲು ಸ್ಟ್ರೈಕ್ ನಲ್ಲಿ ಭಾಗವಹಿಸುವ ಹಾಗೆ ಆಯಿತು. ಏನಿದು ಐಆರ್‌ಡಿಎ ಬಿಲ್? ಇದುವರೆಗೆ ಏಕಸ್ವಾಮ್ಯವಾಗಿ ಇದ್ದ ಭಾರತೀಯ ಜೀವವೀಮನಿಗಮ ಮತ್ತು ವಿಮಾ ವಲಯ ಈಗ ಒಂದು ಪ್ರಾಧಿಕಾರದ ಮಿತಿಗೆ ಒಳಪಟ್ಟು ಹೊರಗಿನ ಸಂಸ್ಥೆಗಳು ಸಹ ಜೀವವಿಮ ವಹಿವಾಟು ನಡೆಸಲು ಅರ್ಹವಾಗುತ್ತಿದ್ದವು. ಭಾರತೀಯ ಜೀವ ವಿಮಾ ನಿಗಮದ ಸಾರ್ವಭೌಮತ್ವಕ್ಕೆ ಉಂಟಾಯಿತು. IRDAI ಎನ್ನುವುದು ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಒಂದು ಸ್ವಾಯತ್ತ ಮತ್ತು ಶಾಸನಬದ್ಧ ಸಂಸ್ಥೆಯಾಗಿದೆ. ಇದು ಭಾರತದಲ್ಲಿ ವಿಮಾ ಕ್ಷೇತ್ರವನ್ನು (Insurance Sector) ನಿಯಂತ್ರಿಸುವ ಮತ್ತು ಅಭಿವೃದ್ಧಿಪಡಿಸುವ ಸರ್ವೋಚ್ಚ ಸಂಸ್ಥೆಯಾಗಿದೆ.​ಇದನ್ನು 1999 ರಲ್ಲಿ ‘IRDA ಕಾಯ್ದೆ’ಯ ಅಡಿಯಲ್ಲಿ ರಚಿಸಲಾಯಿತು.ಮಲ್ಹೋತ್ರಾ ಸಮಿತಿಯ ಶಿಫಾರಸಿನ ಮೇರೆಗೆ IRDAI ಅಸ್ತಿತ್ವಕ್ಕೆ ಬಂದಿತು.​ಕೇಂದ್ರ ಕಚೇರಿ ತೆಲಂಗಾಣ ರಾಜ್ಯದ ಹೈದರಾಬಾದ್ ನಲ್ಲಿದೆ. ​IRDAI ಸ್ಥಾಪನೆಯ ಹಿಂದೆ ಪ್ರಮುಖವಾಗಿ ಮೂರು ಉದ್ದೇಶಗಳಿವೆ:​ವಿಮಾದಾರರ ಹಿತರಕ್ಷಣೆ: ವಿಮೆ ಮಾಡಿಸಿದ ಗ್ರಾಹಕರಿಗೆ ಯಾವುದೇ ಅನ್ಯಾಯವಾಗದಂತೆ ನೋಡುವುದು.​ಕ್ಷೇತ್ರದ ನಿಯಂತ್ರಣ: ವಿಮಾ ಕಂಪನಿಗಳು ಸರಿಯಾದ ನಿಯಮಗಳನ್ನು ಪಾಲಿಸುತ್ತಿವೆಯೇ ಎಂದು ಮೇಲ್ವಿಚಾರಣೆ ಮಾಡುವುದು.​ಅಭಿವೃದ್ಧಿ: ವಿಮಾ ಕ್ಷೇತ್ರವು ವ್ಯವಸ್ಥಿತವಾಗಿ ಬೆಳೆಯಲು ಪೂರಕವಾದ ವಾತಾವರಣ ನಿರ್ಮಿಸುವುದು.​IRDAI ಈ ಕೆಳಗಿನ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸುತ್ತದೆ:​ಪರವಾನಗಿ ನೀಡುವುದು: ಹೊಸ ವಿಮಾ ಕಂಪನಿಗಳಿಗೆ ವ್ಯವಹಾರ ನಡೆಸಲು ಪರವಾನಗಿ (License) ನೀಡುವುದು ಮತ್ತು ಅದನ್ನು ನವೀಕರಿಸುವುದು.​ನಿಯಮಗಳ ರೂಪಣೆ: ವಿಮಾ ಪಾಲಿಸಿಗಳು ಹೇಗೆ ಇರಬೇಕು, ಪ್ರೀಮಿಯಂ ದರಗಳು ಮತ್ತು ಕ್ಲೈಮ್ (Claim) ಇತ್ಯರ್ಥದ ಬಗ್ಗೆ ನಿಯಮಗಳನ್ನು ರೂಪಿಸುವುದು.​ದೂರುಗಳ ಪರಿಹಾರ: ವಿಮಾ ಕಂಪನಿ ಮತ್ತು ಗ್ರಾಹಕರ ನಡುವೆ ವಿವಾದ ಉಂಟಾದಾಗ ಅದನ್ನು ಬಗೆಹರಿಸಲು ವೇದಿಕೆ ಕಲ್ಪಿಸುವುದು.​ಬಂಡವಾಳದ ಮೇಲ್ವಿಚಾರಣೆ: ವಿಮಾ ಕಂಪನಿಗಳು ಗ್ರಾಹಕರ ಹಣವನ್ನು ಹಿಂತಿರುಗಿಸಲು ಬೇಕಾದಷ್ಟು ಆರ್ಥಿಕ ಸಾಮರ್ಥ್ಯ ಹೊಂದಿವೆಯೇ ಎಂದು ಪರಿಶೀಲಿಸುವುದು.​ತರಬೇತಿ ಮತ್ತು ಶಿಕ್ಷಣ: ವಿಮಾ ಏಜೆಂಟ್‌ಗಳಿಗೆ ಬೇಕಾದ ಅರ್ಹತೆ ಮತ್ತು ತರಬೇತಿಯ ಮಾನದಂಡಗಳನ್ನು ನಿಗದಿಪಡಿಸುವುದು. ಅಂದಿನ ದಿನಗಳಲ್ಲಿ ಈ ವಿದ್ಯಮಾನಗಳು ತುಂಬಾ ಆತಂಕವನ್ನು ಹುಟ್ಟಿಸಿದ್ದು ಮುಂದಿನ ದಿನಗಳು ಹೇಗೋ ಏನೋ ಎಂಬ ದಿಗಿಲು ಸಹ ಉಂಟಾಗಿತ್ತು. ಆದರೆ ಜೀವ ವಿಮಾನ ನಿಗಮ ತನ್ನ ಸಮರ್ಥ ಆರ್ಥಿಕ ನೀತಿ ಹಾಗೂ ದಕ್ಷ ಆಡಳಿತ ವಿಧಾನಗಳಿಂದ ಈ ಹೊರಗಿನ ಸ್ಪರ್ಧೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಾ ಬಂದಿದೆ ಎಂದು ಹೆಮ್ಮೆಯಿಂದ ಹೇಳಬಹುದು. ಜೂನ್ 1999ರಲ್ಲಿ ನನ್ನ ತಂಗಿ ಪ್ರಯಾಣ ವಿವಾಹ ಆಯಿತು. 15 ದಿನಗಳ ಕಾಲ ರಜೆ ತೆಗೆದುಕೊಂಡು ಹೋಗಿ ಮದುವೆ ಮುಗಿಸಿ ಬಂದಾಯಿತು. ಮದುವೆ ತಿಂಡಿಗಳನ್ನು ಇಟ್ಟಿದ್ದ ಬ್ಯಾಗ್ ಸಕಲೇಶಪುರಕ್ಕೆ ಬರುವಾಗ ಮರೆತು ಬಂದಿದ್ದೆವು. ರವೀಶ್ ಸಹ ಅಂದು ನನ್ನ ಜೊತೆಗೆ ಬಂದುಬಿಟ್ಟಿದ್ದರು ಇನ್ನು ತಿಂಡಿಗಳು ಮಿಸ್ ಆಗುತ್ತದೆ ಎಂದು ಅಷ್ಟು ಆಯಾಸವಾಗಿದ್ದರು ಸಹ ಮಧ್ಯಾಹ್ನವೇ ನಮ್ಮ ತಂದೆ ಅದನ್ನೆಲ್ಲ ತೆಗೆದುಕೊಂಡು ಸಕಲೇಶಪುರಕ್ಕೆ ಬಂದಿದ್ದರು. ಅದನ್ನು ನೆನೆಸಿಕೊಂಡರೆ ಈಗಲೂ ಕಣ್ಣು ತುಂಬಿ ಬರುತ್ತದೆ ಆ ಪ್ರೀತಿಗೆ ಯಾವುದು ತಾನೇ ಸಾಟಿಯಾದೀತು?ಅಣ್ಣ ಅಲ್ಲಿದ್ದಾಗಲೇ ನವ ವಿವಾಹಿತ ಜೋಡಿಯು ಸಹ ಸಕಲೇಶಪುರಕ್ಕೆ ಬಂದಿದ್ದರು ಅಲ್ಲಿ ಸುತ್ತ ಮುತ್ತಲಿನ ಹಾರ್ಲೆ ಎಸ್ಟೇಟ್ ಟೀ ಫ್ಯಾಕ್ಟರಿ ಅವೆಲ್ಲವನ್ನು ಆಗ ಹೋಗಿ ನೋಡಿಕೊಂಡು ಬಂದೆವು. ಸುಲೋಚನಾ ಸಹ ನಮ್ಮೊಂದಿಗೆ ಆಗ ಬಂದಿದ್ದರು.ಮದ್ದೂರಿನಲ್ಲಿ ಸಹಾಯಕ ಆಡಳಿತ ಅಧಿಕಾರಿಯಾಗಿ ಇದ್ದ ನನ್ನ ತಂಗಿ ಔಅಯಳಿಗೆ ಮದುವೆಯ ನಂತರ ಹುಣಸೂರಿಗೆ ವರ್ಗ ಆಯಿತು. ಅವಳ ಪತಿ ಪ್ರಸನ್ನ ಅವರು ಸಹ ಜೀವವಿಮನಿಗಮದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕೆಆರ್ ನಗರಕ್ಕೆ ಸೇರಿದಂತಿದ್ದ ಬೆಟ್ಟದ ಪುರದಲ್ಲಿ ಇದ್ದರು. ಅವರು ನಮಗೆ ಬ್ಯಾಚ್ ನ ಹಿಂದಿನ ಮೊದಲ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿ ಸಹಾಯಕರಾಗಿ ಆಯ್ಕೆಯಾದವರು ನಂತರ ಅಭಿವೃದ್ಧಿ ಅಧಿಕಾರಿಯಾಗಿ ಬದಲಾವಣೆ ತೆಗೆದುಕೊಂಡಿದ್ದರು .ಇಬ್ಬರಿಗೂ ಮಧ್ಯದ ಜಾಗವಾದ ಪಿರಿಯಾಪಟ್ಟಣದಲ್ಲಿ ಮನೆ ಮಾಡಿದ್ದರು.ಅಲ್ಲಿ ಕಚೇರಿ ಸೇವಾ ವಿಭಾಗಕ್ಕೆ ನನಗೆ ಬದಲಾವಣೆ ಸಿಕ್ಕಿತು ಆಗ ಹಿಂದಿ ದಿನಾಚರಣೆಯ ಸಂದರ್ಭ ಬಂದಿತ್ತು. ಆಗ ಸುಮಾರು ಸ್ಪರ್ಧೆಗಳನ್ನು ಏರ್ಪಡಿಸಿ ಎಲ್ಲರೂ ಭಾಗವಹಿಸಲು ಅನುಕೂಲವಾಗುವ ಹಾಗೆ ಒಂದು ಅಂತ್ಯಾಕ್ಷರಿ ಸ್ಪರ್ಧೆಯನ್ನು ಸಹ ಏರ್ಪಡಿಸಿದೆವು ನಾನು ಮತ್ತು ಸುಲೋಚನಾ ಸೇರಿ ಅದನ್ನು ನಡೆಸಿಕೊಟ್ಟವು ಅಲ್ಲಿ ಎಲ್ಲರಿಗೂ ಅದು ತುಂಬಾ ಇಷ್ಟವಾಗಿತ್ತು. ಹೀಗೆ ಒಂದು ಕನ್ನಡದ ಅಂತ್ಯಾಕ್ಷರಿ ಮಾಡಿ ಎಂದು ಹೇಳಿ ಅಲ್ಲಿನ ಅಭಿವೃದ್ಧಿ ಅಧಿಕಾರಿಗಳು ಬಹುಮಾನದ ಪ್ರಾಯೋಜಕತ್ವ ವಹಿಸಿಕೊಂಡರು. ಆಗೊಮ್ಮೆ ಕನ್ನಡ ಅಂತ್ಯಾಕ್ಷರಿಯನ್ನು ಸಹ ನಡೆಸಿಕೊಟ್ಟಿದ್ದೆವು. ವಿವಿಧ ಸ್ಪರ್ಧೆಗಳನ್ನು ಏರ್ಪಡಿಸುವುದು ಅವುಗಳಿಗೆ ಬಹುಮಾನಗಳನ್ನು ಆರಿಸಿ ತರುವುದು ಇವೆಲ್ಲವೂ ತುಂಬಾ ಖುಷಿ ಕೊಟ್ಟ ಕೆಲಸ. ನನಗೆ ಸಹಾಯಕ ಆಗಿದ್ದ ರಘು ಅವರು ಅಲ್ಲಿನ ಅಂಗಡಿಗಳ ಮಾಲೀಕರನ್ನು ಚೆನ್ನಾಗಿ ಬಲ್ಲವರಾದ್ದರಿಂದ ಒಳ್ಳೆಯ ಚೌಕಾಸಿ ನಡೆಸಿ ಗುಣಮಟ್ಟದ ಸಾಮಾನುಗಳನ್ನು ಆದಷ್ಟು ರಿಯಾಯಿತಿಯಲ್ಲಿ ಕೊಂಡು ಬರುತ್ತಿದ್ದೆವು.ನಾವು ಹೋಗಿದ್ದಾಗ ಉಮೇಶ್ ಭಟ್ ಎನ್ನುವವರು ಅಲ್ಲಿನ ಉಪ ಶಾಖಾಧಿಕಾರಿಗಳಾಗಿದ್ದವು ಅವರು ನಟಿ ವಿನಯ ಭಟ್ ಅವರ ಕುಟುಂಬ ಸ್ನೇಹಿತರು ಒಮ್ಮೆ ಸಕಲೇಶಪುರದ ಬಳಿ ಶೂಟಿಂಗ್ ಗೆ ಬಂದಿದ್ದ ವಿನಯ ಭಟ್ ಅವರು ಅವರ ಮನೆಗೆ ಬಂದಿದ್ದರಂತೆ. ಆಗ ನಮ್ಮ ಶಾಖೆಯ ಎಲ್ಲರೂ ಅವರ ಮನೆಗೆ ಹೋಗಿ ಆಕೆಯನ್ನು ಮಾತನಾಡಿಸಿಕೊಂಡು ಬಂದರಂತೆ ನಾನು ಸುಲೋಚನಾ ಆಗ ರಜೆ ಹಾಕಿ ಮೈಸೂರಿಗೆ ಬಂದು ಬಿಟ್ಟಿದ್ದೆವು. ಹಾಗಾಗಿ ನಮಗೆ ಆ ಭೇಟಿ ಸಾಧ್ಯವಾಗಲಿಲ್ಲ ನಮಗೆ ಪುಸ್ತಕದ ಮೇಲಿನ ಪ್ರೀತಿ ನೋಡಿ ಉಮೇಶ್ ಭಟ್ ಅವರು ಹಸ್ತ ಸಾಮುದ್ರಿಕೆಯ ಬಗ್ಗೆ ಇದ್ದ ಒಂದು ಇಂಗ್ಲಿಷ್ ಪುಸ್ತಕವನ್ನು ನಮಗೆ ಅವರು ವರ್ಗವಾಗಿ ಹೋಗುವಾಗ ಉಡುಗೊರೆಯಾಗಿ ಕೊಟ್ಟಿದ್ದರು. ಅವರು ಹೋದ ನಂತರ ಮೈಸೂರಿನ ಬ್ರಾಂಚ್ ಒಂದರಲ್ಲಿ ಅಭಿವೃದ್ಧಿ ಅಧಿಕಾರಿಯಾಗಿದ್ದ ರಾಜೇಂದ್ರ ಪ್ರಸಾದ್ ಎನ್ನುವವರು ಉಪಶಾಖಾಧಿಕಾರಿಗಳಾಗಿ ಬಂದಿದ್ದರು. ನಾವು ವಾಪಸ್ ಮನೆ ಶಿಫ್ಟ್ ಮಾಡುವ ಸಂದರ್ಭದಲ್ಲಿ ರವೀಶ್ ಅವರನ್ನು ಕರೆದುಕೊಂಡು ಹೋಗಿ ಸಕಲೇಶಪುರದ ವಿಶೇಷವಾದ ಕಾಫಿ ಬೊಡ್ಡೆಯ ಅಲಂಕಾರಿಕ ಸಾಮಗ್ರಿಗಳನ್ನು ಕೊಳ್ಳಲು ಸಹಾಯ ಮಾಡಿದ್ದರು. ಅವುಗಳಲ್ಲಿ ಒಂದು ಈಗಲೂ ನಮ್ಮ ಮನೆಯಲ್ಲಿ ಇದೆ ಸಕಲೇಶಪುರದಲ್ಲಿ ಕೆಲಸ ಮಾಡಿದ ದಿನಗಳ ನೆನಪಿನ ಕುರುಹಾಗಿ. ಛಾಯಾ ಮತ್ತು ಪ್ರಸನ್ನ ನಿರ್ಮಲ ಟ್ರಾವೆಲ್ಸ್ ನ ಮಧ್ಯ ಇಂಡಿಯಾ ಪ್ರವಾಸಕ್ಕೆ ಹೋಗಲು ಯೋಜನೆ ಮಾಡಿದರು. ನಮ್ಮ ತಂದೆ ತಾಯಿ ಹಾಗೂ ಪ್ರಸನ್ನ ಅವರ ತಂದೆ ತಾಯಿ ಅವರುಗಳನ್ನು ಜೊತೆಯಲ್ಲಿ ಕರೆದುಕೊಂಡು ಹೋಗುವ ಉದ್ದೇಶ ಇತ್ತು ನಮಗೂ ಹೇಗೂ ಎಲ್ ಟಿ ಸಿ ದೊರೆಯುತ್ತಿದ್ದರಿಂದ ನಾನು ಮತ್ತು ರವೀಶ್ ಸಹ ಹೊರಡಲು ನಿಶ್ಚಯಿಸಿದೆವು. ಭಾರತೀಯ ಜೀವವಿಮಾನ ನಿಗಮದಲ್ಲೇ ಅಭಿವೃದ್ಧಿ ಅಧಿಕಾರಿಯಾಗಿರುವ ಪ್ರಸನ್ನ ಅವರ ಅಣ್ಣ ಪ್ರಭಾಕರ್ ಹಾಗೂ ಅವರ ಪತ್ನಿ ಶಾಮಲಾ ಮತ್ತು ಮಗಳು ಪ್ರೇರಣಾ ಸಹ ನಮ್ಮ ಜೊತೆಗೆ ಸೇರಿಕೊಂಡರು. ಹೀಗೆ ಹನ್ನೆರಡು ಜನಗಳ ನಮ್ಮ ಗುಂಪು ಮಂಗಳೂರಿನಿಂದ ಹೊರಟ ಆ ಪ್ರವಾಸದಲ್ಲಿ ಸೇರಿದೆವು ತುಂಬಾ ಚೆನ್ನಾಗಿ ನಡೆದ ಪ್ರವಾಸ ಈಗಲೂ ಒಂದು ಸವಿ ನೆನಪು. ನಾವು ಸಕಲೇಶಪುರದಿಂದಲೇ ಮಂಗಳೂರಿಗೆ ಹೋಗಿದ್ದೆವು ಮತ್ತು ಮಂಗಳೂರಿನಿಂದಲೇ ಮತ್ತೆ ವಾಪಸ್ಸಾದೆವು. ಅವರೆಲ್ಲ ಹೊರಡುವಾಗ ಮಂಗಳೂರಿಗೆ ಬಂದಿದ್ದರು. ವಾಪಸ್ ಆಗುವಾಗ ಹುಬ್ಬಳ್ಳಿಯಿಂದಲೇ ಮೈಸೂರಿಗೆ ವಾಪಸ್ ಹೋದರು. ನನ್ನ ಕಡೆಯ ತಂಗಿ ವೈಶಾಲಿ ಮತ್ತು ಮುರಳಿ ಮಗು ಚಿಕ್ಕವನಿದ್ದುದರಿಂದ ಬರಿ ಮಂಗಳೂರು ಪ್ರವಾಸಕ್ಕೆ ಮಾತ್ರ ಜೊತೆಯಾಗಿ ನಂತರ ಮೈಸೂರಿಗೆ ವಾಪಸ್ ಆದರು. ಹಾಗೆ ಹೀಗೆ ಎನ್ನುವಂತೆ ದಿನಗಳು ಕಳೆದು ಮುಂದಿನ ಪದೋನ್ನತಿಗಳ ಸಮಯ ಬಂದೇ ಬಿಟ್ಟಿತು. ಆ ಬಾರಿ ಅದು ತಡವಾಗಿ ಮಾರ್ಚ್ ತಿಂಗಳ ತನಕ ಎಳೆದುಕೊಂಡು ಹೋಗಿದ್ದು. ಬಹಳ ಕಾಲದಿಂದ ನಿರೀಕ್ಷೆ ಇದ್ದ ವರ್ಗಾವಣೆ ಪಟ್ಟಿ ಪ್ರಕಟವಾಗಿತ್ತು ನನಗೆ ನಂಜನಗೂಡಿಗೆ ಸಿಕ್ಕಿತ್ತು ಸ್ವಲ್ಪವೇ ಅಂತರದಿಂದ ಸುಲೋಚನಾ ಅವರಿಗೆ ನಂಜನಗೂಡು ತಪ್ಪಿ ಹೋಗಿ ಚಾಮರಾಜನಗರಕ್ಕೆ ವರ್ಗಾವಣೆ ಸಿಕ್ಕಿತು. ಓಡಾಡಬಹುದಾಗಿತ್ತು ಅವರ ಮನೆ ನಂಜನಗೂಡಿನಲ್ಲಿ ಇದ್ದುದರಿಂದ. ಸ್ವಲ್ಪ ಸಮಾಧಾನ ಅಷ್ಟೇ. ಆದರೆ ಮತ್ತೊಂದು ಸಮಸ್ಯೆ ಎದುರಾಗಿತ್ತು.ನಾವಿದ್ದ ಮನೆಯ ಮಾಲೀಕ ತುಂಬಾ ಸಾಲದ ಸುಳಿಗಳಿಗೆ ಸಿಕ್ಕಿಕೊಂಡು ಮನೆ ಕೋರ್ಟ್ ಆದೇಶದಲ್ಲಿ ಇತ್ತು. ನಾವು ಕೊಟ್ಟಿದ್ದ ಮುಂಗಡ ಹಣ 15000 ವಾಪಸ್ ಮಾಡುವ ಸ್ಥಿತಿಯಲ್ಲಿ ಆತ ಇರಲಿಲ್ಲ .ಆದರೆ ನಾವು ಮನೆಯನ್ನು ಬಿಡಲೇಬೇಕಿತ್ತು.‌ ಕೆಲವರು ಕೊಟ್ಟ ಸಲಹೆಯಂತೆ ಒಂದೆರಡು ಹಳೆಯ ಸಾಮಾನುಗಳನ್ನು ಅಲ್ಲಿಯೇ ಬಿಟ್ಟು ಮನೆಯ ಬೀಗವನ್ನು ಸಕಲೇಶಪುರದಲ್ಲೇ ಇದ್ದ ರವೀಶ್ ಅವರ ಊರಿನವರೇ ಆದ ಸತ್ಯ ಮತ್ತು ಮೋಹನ್ ಅವರಿಗೆ ಕೊಟ್ಟು ಬಂದೆವು. ಆ ಕಾಲಕ್ಕೆ ೧೫೦೦೦ ಸಣ್ಣ ಮೊತ್ತವೇನಲ್ಲ. ವಾಪಸ್ಸು ಬಾರದಿದ್ದರೆ ಹೇಗಪ್ಪಾ ಅಂತಲೂ ಚಿಂತೆ. ಆದರೆ ನಮ್ಮ ತಂದೆ ಮಾತ್ರ ಭರವಸೆ ಇಟ್ಟುಕೊಂಡು ಹೇಳುತ್ತಿದ್ದರು ಕಷ್ಟಪಟ್ಟು ದುಡಿದ ಹಣ ಖಂಡಿತ ವಾಪಸ್ ಬಂದೆ ಬರುತ್ತದೆ ಎಂದು ಅವರ ಆಶೀರ್ವಾದದಂತೆ ಒಂದೆರಡು ತಿಂಗಳ ಬಳಿಕ ಆ ಮನೆಯನ್ನು ಬೇರೊಬ್ಬರು ಕೊಂಡುಕೊಂಡು ಮುಂಗಡ ಹಣ ವಾಪಸ್ ಕೊಟ್ಟು ಕೀ ಪಡೆದುಕೊಂಡರಂತೆ. ಫೋನ್ ಮಾಡಿ ತಿಳಿಸಿದ ಮೇಲೆ ರವೀಶ್ ಅವರು ಹೋಗಿ ಹಣ ತೆಗೆದುಕೊಂಡು ಬಂದರು ಮನಸ್ಸಿಗೆ ಸ್ವಲ್ಪ ನಿರಾಳವಾಯಿತು. ಮೊದಲು ನಾವಿದ್ದ ಮನೆ ಕಟ್ಟಿದ್ದಾಗ ವಾರ್ಡ್ರೋಬ್ ಕೆಲಸಗಳನ್ನು ಮಾಡಿರಲಿಲ್ಲ ಹೀಗಾಗಿ ನಾವು ವಾಪಸ್ ಬರುವಾಗ ಮತ್ತೆ ಮನೆಗೆ ಪೇಂಟ್ ಮಾಡಿಸಿ ವಾರ್ಡ್ರೋಬ್ ಗಳನ್ನು ಮಾಡಿಸಿಕೊಂಡು ಬಂದೆವು..(ಮುಂದಿನವಾರಕ್ಕೆ) ಸುಜಾತಾ ರವೀಶ್

Read Post »

You cannot copy content of this page

Scroll to Top