ಸಂಬಂಧಗಳ ಸಂಗಾತಿ
ವನಜ ಮಹಾಲಿಂಗಯ್ಯ
“ಸಂಬಂಧಗಳ ಬಿರುಕು –
ನಮ್ಮಿಂದಲೇ ಸರಿಪಡಿಸೋಣ”


*ಬೆಳಗಾಗೆದ್ದು Good Morning ಕಳಿಸೋ ನೂರು ಜನ ಇದಾರೆ. ಆದ್ರೆ ರಾತ್ರಿ ನಿದ್ದೆ ಬರದೇ ಒದ್ದಾಡಿದಾಗ ಮಾತಾಡೋ ಒಬ್ಬನೂ ಇಲ್ಲ.* ಇದೇ ಇವತ್ತಿನ ಸಂಬಂಧಗಳ ಸ್ಥಿತಿ.
ಯಾಕೆ ಹೀಗಾಯ್ತು? ಮುಂದೆ ಓದುತ್ತಾ ಹೋಗಿ.
ಮೊಬೈಲ್ ಮೊದಲಾಯ್ತು, ಮನುಷ್ಯ ಎರಡನೆಯವನಾದ*
ಒಂದೇ ಮನೆಯಲ್ಲಿ ನಾಲ್ಕು ಜನ ಇದ್ರೂ ನಾಲ್ಕು ಮೂಲೆಯಲ್ಲಿ ಕುಳಿತು ನಾಲ್ಕು ಮೊಬೈಲ್ ನೋಡ್ತಾರೆ. ಅಪ್ಪನಿಗೆ ಮಗ ಏನ್ ಓದ್ತಿದ್ದಾನೆ ಗೊತ್ತಿಲ್ಲ. ಮಗನಿಗೆ ಅಮ್ಮನ ಆರೋಗ್ಯದ ಚಿಂತೆ ಇಲ್ಲ. ಊಟದ ಟೇಬಲ್‌ನಲ್ಲಿ ಮಾತಿಗಿಂತ ರೀಲ್ಸ್ ಮುಖ್ಯವಾಯ್ತು. “ಸಂಪರ್ಕ ಇದೆ, ಸಂಬಂಧ ಇಲ್ಲ.”
. ಸಲುಗೆ ಸ್ವಾತಂತ್ರ್ಯವಾಯ್ತು ಹೇಗೆ ಅಂದರೆ,
“ನನ್ನ ಲೈಫ್, ನನ್ನ ರೂಲ್ಸ್” ಅಂತ ಮಕ್ಕಳು ಅಂದ್ರೆ, “ನಮ್ಮ ಕಾಲದಲ್ಲಿ ಹೀಗಿರಲಿಲ್ಲ” ಅಂತ ಹೆತ್ತವರು ಅಂದ್ರೆ. ಇಬ್ಬರ ಮಧ್ಯೆ ಗೋಡೆ ಬೆಳೆಯುತ್ತೆ. 8-9 ತಿಂಗಳು ಹೊತ್ತು ಹೆತ್ತ ತಾಯಿಯ ಮಾತಿಗಿಂತ 3 ದಿನದ ಹಿಂದೆ Insta ದಲ್ಲಿ ಪರಿಚಯವಾದವನ ಮೆಸೇಜಿಗೆ ಬೆಲೆ ಜಾಸ್ತಿ ಆಯ್ತು. “ಹೆತ್ತವರ ಪ್ರೀತಿ ಹಳೇದಾಯ್ತು, ಅಪರಿಚಿತರ ಮಾತು ಹೊಸದಾಯ್ತು.”
ಈಗ ಎಲ್ಲವೂ Instant. ನೂಡಲ್ಸ್ 2 ನಿಮಿಷ, ಪ್ರೀತಿ 2 ದಿನ. ಸಣ್ಣ ಜಗಳಕ್ಕೆ Block, ಸಣ್ಣ ತಪ್ಪಿಗೆ Disconnect. ಸಂಬಂಧ ಕಟ್ಟೋಕೆ ವರ್ಷ ಬೇಕು, ಮುರಿಯೋಕೆ ಒಂದು Status ಸಾಕು. “ಕ್ಷಮಿಸೋ ಮನಸ್ಸು ಸತ್ತು, ಅಹಂ ಬೆಳೆದು ನಿಂತಿದೆ.”
“ಹೋಲಿಕೆ ರೋಗ ಇದ್ದಂತೆ”
“ಅವನ ಮಗ BMW ತಂದ, ನನ್ನವನು ಯಾಕೆ ತರಲಿಲ್ಲ?” ಅಂತ ಅಪ್ಪ. “ಅವಳ ಗಂಡ ವಿದೇಶಕ್ಕೆ ಕರ್ಕೊಂಡು ಹೋದ, ನೀನು ಯಾಕೆ ಹೋಗಲಿಲ್ಲ?” ಅಂತ ಹೆಂಡತಿ. ಪಕ್ಕದ ಮನೆ ಹುಲ್ಲು ಯಾವಾಗಲೂ ಹಸಿರು. “ನಮ್ಮ ಬಳಿ ಇರೋದರ ಬೆಲೆ ಮರೆತು, ಇಲ್ಲದ್ದಕ್ಕೆ ಹಂಬಲಿಸೋಕೆ ಶುರು ಮಾಡಿದ್ವಿ.”
ದುರಂತ ಏನು ಗೊತ್ತಾ?
ಮನೆ ತುಂಬಾ ಜನ ಇದ್ದರೂ ಒಂಟಿತನ. ಅಪ್ಪ ಅಮ್ಮ ದುಡಿದು ದುಡಿದು ಮಕ್ಕಳಿಗೆ ಎಲ್ಲಾ ಕೊಟ್ಟರೂ, ಕೊನೆಗೆ ವೃದ್ಧಾಶ್ರಮ. ಮಕ್ಕಳು ಪ್ರೀತಿಗಾಗಿ ಪರದಾಡಿ, ಕೊನೆಗೆ ಮೋಸ ಹೋಗಿ ಜೀವ ಕಳೆದುಕೊಳ್ಳೋದು. *ಗೋಡೆ ಕಟ್ಟೋಕೆ ಗೊತ್ತಿದ್ದ ನಮಗೆ, ಸೇತುವೆ ಕಟ್ಟೋಕೆ ಮರೆತು ಹೋಯ್ತು.
ದಿನಾ 15 ನಿಮಿಷ ಮೊಬೈಲ್ ದೂರ ಇಟ್ಟು ಮನೆಯವರ ಜೊತೆ ಕೂತು ಮಾತಾಡಿ. ಊಟ ಒಟ್ಟಿಗೆ ಮಾಡಿ.
ಬುದ್ಧಿ ಹೇಳೋಕಿಂತ ಮೊದಲು, ಮಕ್ಕಳ ಮನಸ್ಸಿನ ಮಾತು ಕೇಳಿ. ಹೆತ್ತವರ ನೋವು ಅರ್ಥ ಮಾಡಿಕೊಳ್ಳಿ.
:ತಪ್ಪು ಮಾಡದ ಮನುಷ್ಯ ಇಲ್ಲ. ಒಂದು ತಪ್ಪಿಗೆ ಸಂಬಂಧವನ್ನೇ ಕಡಿದುಕೊಳ್ಳಬೇಡಿ.
ಸಮಯ ಕೊಡಿ, ದುಡ್ಡು, ಬಟ್ಟೆ, ಬೈಕ್ ಕೊಟ್ರೆ ಸಾಲದು. ನಿಮ್ಮ ಸಮಯ, ನಿಮ್ಮ ಪ್ರೀತಿ ಕೊಡಿ.
ಮೆಚ್ಚುಗೆ ಸೂಚಿಸಿ: “ಥ್ಯಾಂಕ್ಸ್ ಕಣೋ”, “ಚೆನ್ನಾಗಿ ಮಾಡಿದ್ದೀಯ” ಅನ್ನೋ ಎರಡು ಮಾತು ಸಂಬಂಧ ಗಟ್ಟಿ ಮಾಡುತ್ತೆ.
ಕೊನೆಯ ಮಾತು:
ಸಂಬಂಧ ಅಂದ್ರೆ AC ರೂಮಲ್ಲಿಡೋ ಹೂವಿನ ಹಾಗಲ್ಲ. ಬಿಸಿಲು, ಮಳೆ, ಗಾಳಿ ಎಲ್ಲಾ ತಾಗಬೇಕು. ಜಗಳ ಬರಬೇಕು, ಮುನಿಸು ಬರಬೇಕು, ಆದ್ರೆ ಬಿಟ್ಟು ಹೋಗೋ ಯೋಚನೆ ಬರಬಾರದು.
*ಮೊಬೈಲ್‌ನಲ್ಲಿ ಸಾವಿರ Friend Request ಇರಬಹುದು. ಆದ್ರೆ ಕಷ್ಟ ಅಂದಾಗ ಹೆಗಲು ಕೊಡೋದು ರಕ್ತ ಸಂಬಂಧ, ಮನಸ್ಸಿನ ಸಂಬಂಧ ಮಾತ್ರ.*
ಸಂಬಂಧಗಳು ಸರಿಯಿಲ್ಲ ಅಂದ್ರೆ, ಸರಿ ಮಾಡೋಕೆ ಶುರು ಮಾಡೋಣ. ಇವತ್ತಿಂದ, ಈಗಿಂದ, ನಮ್ಮಿಂದಲೇ.
ವನಜಾ ಮಹಾಲಿಂಗಯ್ಯ



