ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com
ಕಾವ್ಯಯಾನ

ಎಮ್ಮಾರ್ಕೆ ಅವರ ಗಜಲ್

ಕಾವ್ಯ ಸಂಗಾತಿ ಎಮ್ಮಾರ್ಕೆ ಗಜಲ್ ಬಾಳ ಸಂತೆಯೊಳಗೆ ಭಾವಗಳನ್ನು ಬಿಕರಿಗಿಡಲಾಗಿದೆಮೋಸ ಹೋದ ಹೃದಯಗಳನ್ನು ಹರಾಜಿಗಿಡಲಾಗಿದೆ ಪ್ರೀತಿ ಪ್ರೇಮಗಳೆಲ್ಲವೂ ಸಹಿತ ಆಟದ ವಸ್ತುಗಳಾಗಿವೆಹಾರೋ ಹಕ್ಕಿಗಳ ಪಂಜರದೊಳಗೆ ಬಂಧಿಸಿಡಲಾಗಿದೆ ದೂರಾದವರ ಬಗ್ಗೆ ದೂರನು ಕೊಡವುದಾದರೂ ಹೇಗೆ?ಸುತ್ತಿದ ಗಿಡಮರ ಬೆಟ್ಟಗುಡ್ಡದ ಸಾಕ್ಷಿ ನಿರಾಕರಿಸಲಾಗಿದೆ ಮುಖಕ್ಕಷ್ಟೇ ಅಲ್ಲ ಮನಸಿಗೂ ಬಣ್ಣವ ಬಳಿಯಲಾಗಿದೆದೋಸೆಯಷ್ಟೇ ಸಲೀಸಾಗಿ ಮಾತನು ತಿರುಚಿಡಲಾಗಿದೆ ಕುಂಬಾರನ ಎದೆಕಲಶದ ತುಂಬಾ ಪರಿಶುದ್ಧ ಪ್ರೀತಿಯಿದೆಸುಖಾಸುಮ್ಮನೆ ಅನುಮಾನದ ಬೀಜ ಎದೆಗಿಳಿಸಲಾಗಿದೆ ಎಮ್ಮಾರ್ಕೆ

ಎಮ್ಮಾರ್ಕೆ ಅವರ ಗಜಲ್ Read Post »

ಕಾವ್ಯಯಾನ

ಅನುರಾಧಾ ರಾಜೀವ್ ಅವರ ಕವಿತೆ “ಸ್ಪಂದನ”

ಕಾವ್ಯ ಸಂಗಾತಿ ಅನುರಾಧಾ ರಾಜೀವ್ “ಸ್ಪಂದನ” ಮುಂಜಾನೆಯ ಮಂಜಿನಲಿ ಪ್ರಕೃತಿನಾಟ್ಯವಾಡುತ ಬಂದಳೇಅಂಜುತ್ತಾ ಅಳುಕುತ್ತಾ ಇಳೆಯಸೌಂದರ್ಯ ನೋಡಿ ನಿಂದಳೇ ಜೀವನದ ಅನಿತ್ಯತೆ ಅರೆಕ್ಷಣ ಬಂದುಹೋಗುವ ಮಿಂಚಿನಂತೆಕವಿಹೃದಯ ಮಿಡಿಯುತಿದೆ ಮೆಲ್ಲನೆಎದೆಯ ಸಂವಹನದಂತೆ ಕೊಳಲ ಕರೆಯಲಿ ಅದೆಂತಹ ಉತ್ಕೃಷ್ಟಪ್ರೇಮದ ಉತ್ಕಟತೆಕೇಳಿದಷ್ಟೂ ತಳಮಳ ಅಂತರಾಳದಲಿಬೇಕಿದೆ ಕ್ಷಮತೆ ಮಿಲನದ ಹೂರಣ ತುಂಬಿಟ್ಟೆ ಮನದಿಸವಿಯುವ ಆಕಾಂಕ್ಷೆಸಲಿಲದ ಬಿಂದುವಾಗಿ ಹರಿಯುತಬೇಡುವೆ ಒಲವ ಬಿಕ್ಷೆ ಬಚ್ಚಿಟ್ಟ ಭಾವದ ಪೆಟ್ಟಿಗೆಯ ಕಾಯುತ್ತಾಕುಳಿತಿರುವೆ ತೆರೆಯಲುಮುಚ್ಚಿಟ್ಟ ಬೆಚ್ಚನೆಯ ಮಾತುಗಳ ನಿರೀಕ್ಷೆಒಲುಮೆಯ ಎರೆಯಲು ಅನುರಾಧಾ ರಾಜೀವ್

ಅನುರಾಧಾ ರಾಜೀವ್ ಅವರ ಕವಿತೆ “ಸ್ಪಂದನ” Read Post »

ಇತರೆ, ಜೀವನ

“ಹಳ್ಳಿಗಳಲ್ಲು ಸಂಬಂಧಗಳ ಬಿರುಕು” ವನಜಾ ಮಹಾಲಿಂಗಯ್ಯ

ಕಾವ್ಯ ಸಂಗಾತಿ ವನಜಾ ಮಹಾಲಿಂಗಯ್ಯ “ಹಳ್ಳಿಗಳಲ್ಲು ಸಂಬಂಧಗಳ ಬಿರುಕು” “ಒಂದೇ ಹೊಟ್ಟೆಯಲ್ಲಿ ಹುಟ್ಟಿದರೂ  ಒಂದೇ ಮನಸ್ಥಿತಿಇಲ್ಲ” ಎನ್ನುವ ಮಾತು ಇಂದು ಹಳ್ಳಿಯ ಪ್ರತಿ ಕೇರಿಯಲ್ಲೂ ಕೇಳಿಬರುತ್ತಿದೆ. ಅಣ್ಣ-ತಮ್ಮಂದಿರು ಮುಖ ನೋಡದಂತೆ ಆಗಿದ್ದಾರೆ, ಅಕ್ಕಪಕ್ಕದ ಮನೆಯವರು ಬೇಲಿ ಮೇಲೆ ಜಗಳಕ್ಕೆ ನಿಲ್ಲುತ್ತಾರೆ. ಹಿಂದೆ ಕಷ್ಟ ಬಂದಾಗ ಊರೇ ಒಂದಾಗಿ ನಿಲ್ಲುತ್ತಿದ್ದ ಕಾಲ ಈಗ ಕಥೆಯಾಗಿದೆ. ಯಾಕೆ ಹೀಗಾಯ್ತು? 1. ಹಿಂದಿನ ಹಳ್ಳಿ:  ಒಂದು ಕುಟುಂಬದಂತೆ  50 ವರ್ಷಗಳ ಹಿಂದೆ ಹಳ್ಳಿ ಎಂದರೆ ದೊಡ್ಡ ಅವಿಭಕ್ತ ಕುಟುಂಬ. ಜಮೀನು ಹೆಚ್ಚಿತ್ತು, ಆಸೆ ಕಡಿಮೆ ಇತ್ತು. ಸುಗ್ಗಿ ಬಂತೆಂದರೆ ಎಲ್ಲರೂ ಸೇರಿ ಕೆಲಸ. ಮದುವೆ-ಮುಂಜಿ ಊರ ಹಬ್ಬ. “ನನ್ನದು” ಎನ್ನುವುದಕ್ಕಿಂತ “ನಮ್ಮದು” ಎನ್ನುವ ಭಾವನೆ ಗಟ್ಟಿಯಾಗಿತ್ತು. ಅಣ್ಣ ದೊಡ್ಡವನು, ತಮ್ಮ ಚಿಕ್ಕವನು – ಹಿರಿತನಕ್ಕೆ ಬೆಲೆ ಇತ್ತು. ಮನೆಯಲ್ಲಿ ಸಾಂಬಾರ್ ಮುಗಿದರೆ “ಒಂದು ಲೋಟ ಸಾಂಬಾರ್ ಕೊಡಮ್ಮ”  ಬೆಂಕಿಕಡ್ಡಿ ಖಾಲಿಯಾದರೆ ಒಂದೆರಡು ಬೆಂಕಿಕಡ್ಡಿ ಕೊಡಮ್ಮ ಅಂತ ಪಕ್ಕದ ಮನೆಯಲ್ಲಿ ಕೇಳಲು  ನಾಚಿಕೆ ಇರಲಿಲ್ಲ. ಏಕೆಂದರೆ ನಾಳೆ ಅವರಿಗೂ ಬೇಕಾಗಬಹುದು ಎನ್ನುವ ವಾಸ್ತವ ಅರಿವಿತ್ತು. ಕಷ್ಟ-ಸುಖ ಹಂಚಿಕೊಂಡರೆ ಹಗುರವಾಗುತ್ತದೆ ಎನ್ನುವ ಜೀವನಪಾಠವನ್ನು ಹೆತ್ತವರು ಹೇಳಿಕೊಡುತ್ತಿದ್ದರು. 2. ಬಿರುಕು ಬಿಡಲು ಕಾರಣವೇನು?  ಭೂಮಿ ಸಣ್ಣದಾಯ್ತು, ಆಸೆ ದೊಡ್ಡದಾಯ್ತು  10 ಎಕರೆ 4 ಮಕ್ಕಳಿಗೆ ಹಂಚಿದರೆ ತಲಾ 2.5 ಎಕರೆ. ಈಗ ಅದೇ 2.5 ಎಕರೆ 3 ಮೊಮ್ಮಕ್ಕಳಿಗೆ ಹಂಚಬೇಕು. ಭೂಮಿ ತುಂಡಾದಂತೆ ಮನಸ್ಸುಗಳೂ ತುಂಡಾಗುತ್ತಿವೆ. “ಅವನಿಗೆ ರಸ್ತೆ ಬದಿ ಜಾಗ ಕೊಟ್ಟರು, ನನಗೆ ಬಂಜರು” ಎನ್ನುವ ಲೆಕ್ಕಾಚಾರ ಶುರುವಾಯ್ತು. * ದುಡ್ಡು ಬಂತು, ದುರಹಂಕಾರ ತಂದಿತು  ಒಬ್ಬ ಮಗ ಬೆಂಗಳೂರಲ್ಲಿ ಕೆಲಸಕ್ಕೆ ಸೇರಿ ತಿಂಗಳಿಗೆ ಲಕ್ಷ ಸಂಪಾದಿಸಿದರೆ, ಹಳ್ಳಿಯಲ್ಲಿರುವ ತಮ್ಮನಿಗೆ ಕೀಳರಿಮೆ. “ನಾನು ಮಣ್ಣಲ್ಲಿ ದುಡಿದರೆ ಅವನು ಫ್ಯಾನ್ ಕೆಳಗೆ” ಎನ್ನುವ ಹೊಟ್ಟೆಕಿಚ್ಚು. ಹಬ್ಬಕ್ಕೆ ಬಂದವನು ಕಾರು ತೊಳೆಯುವಾಗ ಅಣ್ಣನ ಟ್ರ್ಯಾಕ್ಟರ್ ಮೂಲೆ ಸೇರುತ್ತದೆ. * ಮೂರನೇ ದನಿ ಜೋರಾಯ್ತು  ಹಿಂದೆ ಮನೆಯ ತೀರ್ಮಾನವನ್ನು ಹಿರಿಯರು ಮಾಡುತ್ತಿದ್ದರು. ಈಗ ಸೊಸೆ-ಅಳಿಯಂದಿರ ಮಾತು ಮನೆಯೊಳಗೆ ಬೆಂಕಿ ಹಚ್ಚುತ್ತದೆ. “ನಿಮ್ಮ ತಮ್ಮನ ಹೆಂಡತಿ ಹಾಗಂದ್ಲು”  ಅತ್ತೆ ಮಾವ ಅವಳನ್ನು ಮಾತ್ರ ಪ್ರೀತಿಯಿಂದ ಮಾತನಾಡಿಸುತ್ತಾರೆ,ಎಂಬ ಒಂದು ಚಾಡಿ ಮಾತು 40 ವರ್ಷದ ಸಂಬಂಧವನ್ನು ಮುರಿಯುತ್ತದೆ. *  ಕಾಲವಿಲ್ಲ, ಕ್ಷಮೆಯೂ ಇಲ್ಲ  ಮೊದಲು ಸಂಜೆ ಎಲ್ಲರೂ ಕಟ್ಟೆಯ ಮೇಲೆ ಸೇರುತ್ತಿದ್ದರು. ಮಾತುಕತೆಯಲ್ಲಿ ತಪ್ಪು ತಿಳುವಳಿಕೆ ಕರಗುತ್ತಿತ್ತು. ಈಗ ಎಲ್ಲರ ಕೈಯಲ್ಲಿ ಮೊಬೈಲ್. ಪಕ್ಕದ ಮನೆಯಲ್ಲಿ ಸಾವು ಆದರೆ ಸ್ಟೇಟಸ್ ಹಾಕಿ ಸುಮ್ಮನಾಗುತ್ತೇವೆ, ಹೆಗಲು ಕೊಡಲು ಸಮಯವಿಲ್ಲ. 3. ಕಳೆದುಕೊಂಡಿದ್ದೇನು?  ನಾವು ಬರೀ ಸಂಬಂಧ ಕಳೆದುಕೊಳ್ಳಲಿಲ್ಲ, ನೆಮ್ಮದಿಯನ್ನೂ ಕಳೆದುಕೊಂಡೆವು. ಕೋರ್ಟ್-ಕಚೇರಿ ಅಲೆದು ದುಡ್ಡು, ಆರೋಗ್ಯ ಎರಡೂ ಹಾಳು. ಮಕ್ಕಳಿಗೆ “ಚಿಕ್ಕಪ್ಪ” ಎಂದರೆ ಕೋರ್ಟ್‌ನಲ್ಲಿ ಕಾಣುವ ಶತ್ರು ಎನ್ನುವ ಚಿತ್ರಣ ಕೊಡುತ್ತಿದ್ದೇವೆ. ಹಬ್ಬ ಬಂದರೂ ಅಡುಗೆ ಮನೆಗೆ 4 ಜನ ಸೇರುವುದಿಲ್ಲ. 4. ಮತ್ತೆ ಒಂದು ಮಾಡುವುದು ಹೇಗೆ?  ಬದಲಾವಣೆ ಸರ್ಕಾರದಿಂದ ಬರಲ್ಲ, ನಮ್ಮ ಮನೆಯ ಒಳಗಿಂದಲೇ ಬರಬೇಕು.   ವಾರಕ್ಕೊಮ್ಮೆ 1 ಗಂಟೆ ಫೋನ್ ದೂರ ಇಟ್ಟು ಮನೆಯವರೆಲ್ಲ ಕೂತು ಮಾತಾಡಿ.   ತಂದೆ-ತಾಯಿ ಇದ್ದಾಗ ಅವರ ಮಾತೇ ಅಂತಿಮವಾಗಿರಬೇಕು. ಅವರು ಹೋದ ಮೇಲೆಅಣ್ಣನ ಸ್ಥಾನ ದೊಡ್ಡದು.  ಪಾರದರ್ಶಕತೆ ಇರಬೇಕು.ಆಸ್ತಿ, ದುಡ್ಡಿನ ವಿಷಯದಲ್ಲಿ ಮುಚ್ಚುಮರೆ ಬೇಡ. ಎಲ್ಲರೂ ಕೂತು ಬರೆದಿಟ್ಟುಕೊಳ್ಳಿ.  ಯಾರಿಂದಲಾದರೂ ತಪ್ಪಾದಾಗ “ಅವನೇ ಮೊದಲು ಬರಲಿ” ಎನ್ನುವ ಅಹಂ ಬಿಡಿ. ನೀವು ಒಂದು ಹೆಜ್ಜೆ ಇಟ್ಟರೆ ಅವನು 2 ಹೆಜ್ಜೆ ಇಡುತ್ತಾನೆ.  ಅಪ್ಪ ಅಮ್ಮಮಕ್ಕಳಿಗೆ ಮಾದರಿ ನಾವು ಅಣ್ಣ-ತಮ್ಮಂದಿರು ಜಗಳವಾಡಿದರೆ ನಾಳೆ ನಮ್ಮ ಮಕ್ಕಳೂ ಹಾಗೇ ಆಗುತ್ತಾರೆ.   ಕೊನೆಯ ಮಾತು  ಹಳ್ಳಿ ಎಂದರೆ ಮಣ್ಣಿನ ವಾಸನೆ ಮಾತ್ರವಲ್ಲ, ಮನುಷ್ಯತ್ವದ ವಾಸನೆಯೂ ಹೌದು. ಬೇಲಿ ಹಾಕಿಕೊಳ್ಳುವುದು ಸುಲಭ, ಪ್ರೀತಿಯ ಸೇತುವೆ ಕಟ್ಟುವುದು ಕಷ್ಟ. ಆದರೆ ಆ ಸೇತುವೆ ಒಮ್ಮೆ ಕಟ್ಟಿದರೆ 7 ತಲೆಮಾರು ನೆಮ್ಮದಿಯಿಂದ ದಾಟಬಹುದು. “ಕೆರೆಗೆ ಹನಿ ನೀರು” ಎನ್ನುವಂತೆ, ಬದಲಾವಣೆ ನಮ್ಮ ಒಂದು ನಗುವಿನಿಂದ, ಒಂದು ಕ್ಷಮೆಯಿಂದ ಶುರುವಾಗಲಿ. ಏಕೆಂದರೆ ಕೊನೆಗೆ ಉಳಿಯುವುದು ಆಸ್ತಿಯಲ್ಲ, ಅನುಬಂಧ. ಅಣ್ಣ-ತಮ್ಮ, ಅಕ್ಕ -ತಂಗಿ, ಅಕ್ಕಪಕ್ಕ – ಇವರೇ ನಮ್ಮ ಮೊದಲ ಮತ್ತು ಕೊನೆಯ ಸಂಬಂಧ. ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ತಾoತ್ರಿಕತೆಯಿಂದ ಸ್ವಲ್ಪ ದೂರವಿರೋಣ.  ವನಜ ಮಹಾಲಿಂಗಯ್ಯ.           

“ಹಳ್ಳಿಗಳಲ್ಲು ಸಂಬಂಧಗಳ ಬಿರುಕು” ವನಜಾ ಮಹಾಲಿಂಗಯ್ಯ Read Post »

ಕಾವ್ಯಯಾನ, ಗಝಲ್

ಅರುಣಾ ನರೇಂದ್ರ ಅವರ ಗಜಲ್

ಕಾವ್ಯ ಸಂಗಾತಿ ಅರುಣಾ ನರೇಂದ್ರ ಗಜಲ್ ಅವನನ್ನು ಮೆತ್ತಗೆ ಮೇಣವಾಗಿಸುವ ಶಬ್ದಗಳ ಎಲ್ಲಿಂದ ತರಲಿ ಉರಿಯುವ ಕೋಪ ತಣ್ಣಗಾಗಿಸುವ ಪದಗಳ ಎಲ್ಲಿಂದ ತರಲಿ ಸ್ವರ ನುಡಿಸುವ ಕೊಳಲೇಕೋ ಉಸಿರು ಮರೆತು ಮೂಲೆ ಸೇರಿದೆಮನಕ್ಕೆ ಮುದ ನೀಡಿ ಖುಷಿಗೊಳಿಸುವ ಗೀತಗಳ ಎಲ್ಲಿಂದ ತರಲಿ ಅವನು ಎಲ್ಲವನ್ನು ಮರೆಯಬೇಕೆಂದು ಮಧು ಶಾಲೆ ಸೇರಿದ್ದಾನೆ ಮತ್ತೆ ಮತ್ತೆ ನನ್ನ ನೆನಪಾಗಿಸುವ ಚಿತ್ರಗಳ ಎಲ್ಲಿಂದ ತರಲಿ ಖಾಲಿಯಾಗಿರುವ ಬಟ್ಟಲನ್ನೇ ನೋಡಿ ಬಡ ಬಡಿಸುತ್ತಾನೆ ಅವನು ಜನುಮದ ಅನುಬಂಧ ತಿಳಿಸುವ ಉಸ್ತಾದ್ ಗಳ ಎಲ್ಲಿಂದ ತರಲಿ ಅವನಿಗಂತೂ ಗೊತ್ತಿದೆ ದಿನ್- ರಾತ್ ಅರುಣಾಕೊರಗುತ್ತಾಳೆಂದುಉದಾಸೀನಕ್ಕೆ ಮದ್ದರೆದು ಮೆಚ್ಚಿಸುವ ತಂತ್ರಗಳ ಎಲ್ಲಿಂದ ತರಲಿ ಅರುಣಾ ನರೇಂದ್ರ

ಅರುಣಾ ನರೇಂದ್ರ ಅವರ ಗಜಲ್ Read Post »

ನಿಮ್ಮೊಂದಿಗೆ

ಪುಸ್ತಕ ಸೊಗಸು ಬಹುಮಾನಕ್ಕೆ ಕವಿ, ಮಕಾನದಾರ ಅವರ “ದರ್ವೇಶಿ ಪದ್ಯ” ಕವನ ಸಂಕಲನ ಆಯ್ಕೆ

ಪುಸ್ತಕ ಸಂಗಾತಿ ಪುಸ್ತಕ ಸೊಗಸು ಬಹುಮಾನಕ್ಕೆ ಕವಿ, ಮಕಾನದಾರ ಅವರ ದರ್ವೇಶಿ ಪದ್ಯ ಆಯ್ಕೆ ಪುಸ್ತಕ ಸೊಗಸು ಬಹುಮಾನಕ್ಕೆ ಕವಿ, ಮಕಾನದಾರ ಅವರ ದರ್ವೇಶಿ ಪದ್ಯ ಆಯ್ಕೆ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರುರವರು ಸನ್ 2025ನೇ ಸಾಲಿನ ಪುಸ್ತಕ ಸೊಗಸು ಮುದ್ರಣ ಸೊಗಸು ಯೋಜನೆ ಅಡಿಯಲ್ಲಿ ಪುಸ್ತಕ ಗಳನ್ನು ಆಯ್ಕೆ ಮಾಡಲಾಗಿದ್ದು. ಹಿರಿಯ ಕವಿ, ಪ್ರಕಾಶಕ ಎ.ಎಸ್. ಮಕಾನದಾರ ಅವರ ದರ್ವೇಶಿ ಪದ್ಯ ಕವನ ಸಂಕಲನದ ಅತ್ಯುತ್ತಮ ಮುಖಪುಟ ವಿನ್ಯಾಸಕ್ಕೆ 10 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸಅವರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.               ನಿರಂತರ ಪ್ರಕಾಶನದ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ಮಹತ್ವದ ಕೃತಿ ಗಳನ್ನು ನೀಡಿದ ಮಕಾನದಾರ ಅವರ ಅಕ್ಕಡಿ ಸಾಲು ಮತ್ತು ಪ್ಯಾರಿ ಪದ್ಯ ಸಂಕಲನಗಳ ಕವಿತೆಗಳು  ಆರು ಭಾಷೆಗಳಿಗೆ ತರ್ಜುಮೆಗೊಂಡಿದ್ದು. ಕುವೆಂಪು ವಿಶ್ವ ವಿದ್ಯಾಲಯ, ವಿಜಯ ನಗರದ ಶ್ರೀಕೃಷ್ಣ ದೇವರಾಯ ವಿಶ್ವ ವಿದ್ಯಾಲಯಗಳ ವಿವಿಧ ಪದವಿಗಳಿಗೆ ಮತ್ತು ಮಹಾರಾಷ್ಟ್ರ ರಾಜ್ಯದ ಶಿವಾಜಿ ವಿಶ್ವ ವಿದ್ಯಾಲಯ ಹಾಗೂ ಪುಣ್ಯ ಶ್ಲೋಕ ಅಹಲ್ಯಬಾಯಿ ಹೋಳ್ಕರ್ ವಿಶ್ವ ವಿದ್ಯಾಲಯಗಳಿಗೆ ಗಜಲ್ ಪಠ್ಯ ಪುಸ್ತಕ ದಲ್ಲಿ ಸೇರ್ಪಡೆಗೊಂಡಿವೆ.           ಬೀದರ್ ಜಿಲ್ಲೆ ಬೇಲೂರ್ ಉರಿಲಿಂಗ ಪೆದ್ದಿ ಸಂಸ್ಕೃತಿ ಕ ವೇದಿಕೆ ಯ ರಾಜ್ಯಮಟ್ಟದ ಅತ್ಯುತ್ತಮ ಪ್ರಕಾಶನ ಪುರಸ್ಕಾರ ನಿರಂತರ ಪ್ರಕಾಶನಕ್ಕೆ ಲಭಿಸಿದ್ದನ್ನಿಲ್ಲಿ ಸ್ಮರಿಸ ಬಹುದು ದರ್ವೇಶಿ ಪದ್ಯ ಒಡಲ ಸಂಕಟದ ಆಯ್ದ ಪದಗಳ ಕಟ್ಟು ಸಂಕಲನದ ಮುಖಪುಟ ಚಿತ್ರ ಕಲಾವಿದ ಈಶ್ವರ. ಬಡಿಗೇರ್ ಅವರು ರಚಿಸಿದ್ದು ನಿರಂತರ ಪ್ರಕಾಶನದಿಂದ ಪ್ರಕಟಣೆಯಾಗಿದೆ. ಸಾಹಿತಿ ಎ ಎಸ್. ಮಕಾನದಾರ ಮತ್ತು ಚಿತ್ರ ಕಲಾವಿದ ಈಶ್ವರ್ ಬಡಿಗೇರ್ ಅವರಿಗೆ ಗದಗ ಜಿಲ್ಲೆಯ ಸಾರಸ್ವತ ಲೋಕದ ಗೆಳೆಯರ ಬಳಗ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ

ಪುಸ್ತಕ ಸೊಗಸು ಬಹುಮಾನಕ್ಕೆ ಕವಿ, ಮಕಾನದಾರ ಅವರ “ದರ್ವೇಶಿ ಪದ್ಯ” ಕವನ ಸಂಕಲನ ಆಯ್ಕೆ Read Post »

ಕಾವ್ಯಯಾನ, ಗಝಲ್

ಡಾ.ರೇಖಾಉದಯ್‌ ಅವರ ಗಜಲ್

ಕಾವ್ಯ ಸಂಗಾತಿ ಡಾ.ರೇಖಾಉದಯ್‌ ಗಜಲ್ ನಾನೆಂಬ ಅಹಂಕಾರ ನಿನ್ನನ್ನೇ ಸುಡುವುದು ಮರುಳೇಅಂತಿಮದಲ್ಲಿ ನಿನ್ನನ್ನೇ ನಾಶ ಮಾಡುವುದು ಮರುಳೇ. ಪ್ರೇಮ ಪ್ರೀತಿಯಲ್ಲಿ ಗೆಲ್ಲಬಹುದು ಜಗದ ಜೀವಿಗಳನ್ನದ್ವೇಷ ಹಗೆಗಳು ಪಾತಾಳಕ್ಕೆ ದೂಡುವುದು ಮರುಳೇ ಹಿರಿಯರು ಕಿರಿಯರೆಂಬ ಗೌರವ ನೀಡುವುದ ಕಲಿತುಕೋನಾನೆಂದು ಮೆರೆದರೆ ಆತ್ಮವೇ ಕಾಡುವುದು ಮರುಳೇ ಹಿತಚಿಂತಕರು ಹಿತಶತ್ರುಗಳ ಗುರುತಿಸುವುದ ತಿಳಿದುಕೋದುರ್ಬುದ್ಧಿಯೊಳಿದ್ದರೆ ವಿಧಿ ಬೇರೆ ಆಡುವುದು ಮರಳೇ ರೇಖೂ ಇರುವ ಬದುಕನು ಚಂದದಿ ಬದುಕಲು ಹೇಳಿಬಿಡುದುರುಳರ ಸಂಗದಿ ನಿನ್ನ ಬದುಕೇ ಕೆಡುವುದು ಮರುಳೇ ಡಾ.ರೇಖಾಉದಯ್

ಡಾ.ರೇಖಾಉದಯ್‌ ಅವರ ಗಜಲ್ Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣ ಸಂಗಾತಿ ಸಾವಿಲ್ಲದ ಶರಣರು ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಪುಣೆ ಕ್ರಾಂತಿಕಾರಿ ಕವಿ ಸರ್ವಜ್ಞ ಸರ್ವಜ್ಞ ಕವಿ 16ನೇ  ಶತಮಾನದಲ್ಲಿ ಜೀವಿಸಿದ್ದ ಕನ್ನಡದ ಅತ್ಯಂತ ಜನಪ್ರಿಯ ಕ್ರಾಂತಿಕಾರಿ ತ್ರಿಪದಿ ಕವಿ, ತತ್ವಜ್ಞಾನಿ ಮತ್ತು ಸಮಾಜ ಸುಧಾರಕರು.  ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನ ಪಡೆದ ಸರ್ವಜ್ಞ ಅಪ್ಪಟ ಬಸವ ಭಕ್ತ ಕ್ರಾಂತಿಕಾರಿ ಕವಿ. ತನ್ನ ಮೊನಚಾದ ಟೀಕೆ ಟಿಪ್ಪಣಿಗಳು ವಿಡಂಬನೆಯಿಂದ ಸುತ್ತಲಿನ ಅಂಕು ಡೊಂಕುಗಳನ್ನು ತಿದ್ದಿದ್ದಾನೆ. ಸಮಾಜದ ಆಷಾಢಭೂತಿತನಕ್ಕೆ ನೇರ ಚಾಟಿ ಏಟು ಬೀಸಿದ್ದಾನೆ. ಮೂರು ಸಾಲುಗಳ ಸರಳ ‘ತ್ರಿಪದಿ’ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿ, ಸಾರ್ವಕಾಲಿಕ ನೀತಿ ಮತ್ತು ಮೌಲ್ಯಗಳನ್ನು ಬೋಧಿಸಿದ ದಾರ್ಶನಿಕರಾಗಿದ್ದಾರೆ.  ಜನನ ಮತ್ತು ಬಾಲ್ಯ ಹುಟ್ಟೂರು: ಇಂದಿನ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಅಬಲೂರು. ನಿಜನಾಮ: ಸಂಶೋಧನೆಗಳ ಪ್ರಕಾರ ಈತನ ನಿಜವಾದ ಹೆಸರು ಪುಷ್ಪದತ್ತ, ‘ಸರ್ವಜ್ಞ’ ಎಂಬುದು ಕಾವ್ಯನಾಮ. ತಂದೆ ತಾಯಿ : ತಂದೆ ಕುಂಬಾರ ಮಲ್ಲ  ಮತ್ತು ತಾಯಿ ಮಾಳೆ (ಮಾಳಲಾದೇವಿ). ತಂದೆ ಕುಂಬಾರ ಮಲ್ಲ ತಾಯಿ ಮಾಳಲಾದೇವಿ ಇಂದು ಧರೆಗೆ ಬಂದ ಚಂದ್ರಶೇಖರ ನಾನು ಸರ್ವಜ್ಞ  ಎಂದು ತನ್ನ ಹುಟ್ಟಿನ ಬಗ್ಗೆಯೇ ಹೇಳಿಕೊಂಡಿದ್ದಾನೆ. ಸಾಹಿತ್ಯ ಮತ್ತು ತ್ರಿಪದಿಗಳ ವೈಶಿಷ್ಟ್ಯ ತ್ರಿಪದಿ ಚಂದಸ್ಸು: ಮೂರು ಸಾಲುಗಳ ಪದ್ಯ ಪ್ರಕಾರವಾದ ತ್ರಿಪದಿಗೆ ಸರ್ವಜ್ಞ ಅತ್ಯಂತ ಪ್ರಸಿದ್ಧರಾಗಿದ್ದಾರೆ. ಜಾತಿ ಪದ್ಧತಿಯ ವಿರೋಧ, ಮೂಢನಂಬಿಕೆಗಳ ಖಂಡನೆ, ನೀತಿ, ಕಾಯಕದ ಮಹತ್ವ, ಸ್ನೇಹ ಮತ್ತು ಲೌಕಿಕ ಜ್ಞಾನ ಇವರ ವಚನಗಳ ಮುಖ್ಯ ವಸ್ತುಗಳಾಗಿದ್ದವು. ಸರಳ ಭಾಷೆ: ಸಾಮಾನ್ಯ ಜನರಿಗೂ ಅರ್ಥವಾಗುವಂತೆ ಉಪಮೆ ಹಾಗೂ ಉದಾಹರಣೆಗಳನ್ನು ಬಳಸಿ ಕಾವ್ಯ ರಚಿಸಿದ್ದಾರೆ.  ಪ್ರಸಿದ್ಧ ವಚನ (ತ್ರಿಪದಿ) ತಮ್ಮ ಜ್ಞಾನದ ಕುರಿತು ಸರ್ವಜ್ಞ ಅತ್ಯಂತ ವಿನಮ್ರವಾಗಿ ಹೀಗೆ ಹೇಳಿಕೊಂಡಿದ್ದಾರೆ:  “ಸರ್ವಜ್ಞನೆಂಬುವನು ಗರ್ವದಿಂದಾದವನೇ? ಸರ್ವರೊಳು ಒಂದೊಂದು ನುಡಿಗಲಿತು ವಿದ್ಯೆಯ ಪರ್ವತವೆ ಆದ ಸರ್ವಜ್ಞ”  ( ನಾನು ಹುಟ್ಟುತ್ತಲೇ ಎಲ್ಲವನ್ನೂ ತಿಳಿದ ಮಹಾಜ್ಞಾನಿಯಾಗಿರಲಿಲ್ಲ ಅಥವಾ ಅಹಂಕಾರದಿಂದ ಸರ್ವಜ್ಞನಾಗಲಿಲ್ಲ. ಸಮಾಜದಲ್ಲಿ ಸಿಗುವ ಪ್ರತಿಯೊಬ್ಬರಿಂದಲೂ ಒಂದೊಂದು ಒಳ್ಳೆಯ ವಿಷಯಗಳನ್ನು ಕಲಿತು ಜ್ಞಾನದ ಪರ್ವತವಾಗಿದ್ದೇನೆ) ಎಂದು ಹೇಳಿಕೊಂಡಿದ್ದಾನೆ. ಸರ್ವಜ್ಞನು ಕಂಡ ಬಸವಣ್ಣ ಸರ್ವಜ್ಞ ತನ್ನ ತ್ರಿಪದಿಗಳಲ್ಲಿ ಬಸವಣ್ಣ ಮತ್ತು ಶರಣರ ಕಾರ್ಯವನ್ನು ನೆನೆಸಿದ್ದಾನೆ. ಕನ್ನಡದ ಪ್ರಸಿದ್ಧ ತ್ರಿಪದಿ ಕವಿ ಸರ್ವಜ್ಞರು 12ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರರಾದ ವಿಶ್ವಗುರು ಬಸವಣ್ಣನವರ ಮಹಿಮೆ, ಭಕ್ತಿ ಮತ್ತು ಆದರ್ಶಗಳನ್ನು ತಮ್ಮ ಕೆಲವು ಪ್ರಮುಖ ತ್ರಿಪದಿಗಳಲ್ಲಿ ಅತ್ಯಂತ ಗೌರವದಿಂದ ಕೊಂಡಾಡಿದ್ದಾರೆ. ಲಿಂಗಾಯತ ಧರ್ಮ ಮತ್ತು ಸಮಾಜಕ್ಕೆ ಬಸವಣ್ಣನವರ ಕೊಡುಗೆಯನ್ನು ಸರ್ವಜ್ಞರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸರ್ವಜ್ಞ ಒಬ್ಬ ನೇರ ದಿಟ್ಟ ನಿರಂತರ ಕ್ರಾಂತಿಕಾರಿ ಕವಿ. ಒಂದು ಅರ್ಥದಲ್ಲಿ ಬಸವಣ್ಣನವರ ಶರಣರ ಕ್ರಾಂತಿಯ ವಾರಸುದಾರ.  ಬಸವಣ್ಣನವರ ಕುರಿತಾದ ಸರ್ವಜ್ಞನ ಪ್ರಮುಖ ತ್ರಿಪದಿಗಳು ಮತ್ತು ಅವುಗಳ ಸರಳ ಭಾವಾರ್ಥಗಳು ೧. ಲಿಂಗಾಯತ ಧರ್ಮದ ಕರ್ತೃ ಬಸವಣ್ಣ ಬಸವ ಗುರುವಿನ ಹೆಸರು ಬಲ್ಲವರಾರಿಲ್ಲ | ಹುಸಿಮಾತನಾಡಿ ಕೆಡದಿರಿ ಲಿಂಗಾಯತಕೆ | ಬಸವಣ್ಣನೆ ಕರ್ತೃ ಸರ್ವಜ್ಞ ||  ಬಸವ ಗುರುವಿನ ಮಹಿಮೆ ಮತ್ತು ಹೆಸರಿನ ಶಕ್ತಿ ಎಲ್ಲರಿಗೂ ತಿಳಿಯದು. ಸುಳ್ಳು ಮಾತುಗಳನ್ನಾಡಿ ನಿಮ್ಮ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ. ಈ ಲಿಂಗಾಯತ ಧರ್ಮಕ್ಕೆ ಮತ್ತು ವೈಚಾರಿಕ ಸಮಾಜಕ್ಕೆ ಬಸವಣ್ಣನವರೇ ನಿಜವಾದ ಮೂಲಪುರುಷ ಅಥವಾ ಕರ್ತೃವಾಗಿದ್ದಾರೆ.  ೨. ಬಸವ ನಾಮಸ್ಮರಣೆಯ ಮಹಿಮೆ ಬಸವನೆಂದಡೆ ಪಾಪ ದೆಶೆಗೆಟ್ಟು ಹೋಗುವುದು | ಬಸವನ ಪಾದವ ನಂಬಿದ ಭಕ್ತರು | ಹಸನಾದರಯ್ಯ ಸರ್ವಜ್ಞ ||  ಬಸವ’ ಎಂಬ ಹೆಸರನ್ನು ಭಕ್ತಿಯಿಂದ ಉಚ್ಚರಿಸಿದರೆ ಸಾಕು, ಮನುಷ್ಯನ ಪಾಪಗಳೆಲ್ಲವೂ ದಿಕ್ಕೆಟ್ಟು ಓಡಿಹೋಗುತ್ತವೆ. ಬಸವಣ್ಣನವರ ತತ್ತ್ವಗಳನ್ನು ಮತ್ತು ಅವರ ಪಾದಗಳನ್ನು ನಂಬಿ ನಡೆದ ಭಕ್ತರ ಜೀವನವು ಅತ್ಯಂತ ಸುಂದರವಾಗಿ ಹಾಗೂ ಪಾವನವಾಗಿ ರೂಪಿತಗೊಂಡಿದೆ.  ೩. ಬಸವಣ್ಣನೇ ಜಗದ ಗುರು ಬಸವನೆ ಜಗದಾದಿ ಬಸವನೆ ಜಗದೀಶ | ಬಸವನೇ ಜಗದ ಗುರುಪ್ರಣವವೆಂದರಿದು | ಬಸವನನು ಜಪಿಸು ಸರ್ವಜ್ಞ ||   ಬಸವಣ್ಣನೇ ಈ ಜಗತ್ತಿನ ಕಲ್ಯಾಣದ ಆದಿಯಾಗಿದ್ದಾನೆ, ಅವನೇ ದೈವಸ್ವರೂಪಿಯಾಗಿದ್ದಾನೆ. ಬಸವಣ್ಣನೇ ಇಡೀ ಜಗತ್ತಿಗೆ ಓಂಕಾರದಂತಹ (ಪ್ರಣವ) ಜ್ಞಾನವನ್ನು ನೀಡಿದ ಜಗದ್ಗುರು ಎಂಬುದನ್ನು ಅರಿತು, ಸದಾ ಆತನ ನಾಮವನ್ನು ಜಪಿಸು.  ೪. ಮಂತ್ರಸಿದ್ಧ ಬಸವಣ್ಣ ಕಂತುಹರ ಬಸವಣ್ಣ ಚಿಂತಾಯಕ ಬಸವಣ್ಣ | ಮಂತ್ರಸಿದ್ದನು ಬಸವಣ್ಣನ ಪಾದಕ್ಕ | ಶರಣೆನ್ನಿರೆಲ್ಲ ಸರ್ವಜ್ಞ  ಕಾಮವನ್ನು ಗೆದ್ದವನು ಬಸವಣ್ಣ. ಭಕ್ತರ ಚಿಂತೆಗಳನ್ನು ಪರಿಹರಿಸುವವನು ಬಸವಣ್ಣ. ಆಧ್ಯಾತ್ಮಿಕ ಮಂತ್ರಸಿದ್ಧಿಯನ್ನು ಹೊಂದಿರುವ ಆ ಬಸವಣ್ಣನ ಪಾದಗಳಿಗೆ ನಾವೆಲ್ಲರೂ ಭಕ್ತಿಯಿಂದ ಶರಣಾಗಬೇಕು. ೫. ಶಂಭುವಿನ ಕರುಣೆ ನಂಬಿ ಹೇಳುವೆ ಬಸವ ನಿಂಬಿಸಿ ಮಹಿಮೆಯ | ಶಂಭುವಿನ ಕರುಣ ನಿನಗುಂಟ ನಾನಿಮ್ಮ | ನಂಬಿ ಹೇಳಿದೆನು ಸರ್ವಜ್ಞ  ಬಸವಣ್ಣನೇ, ನಿನ್ನ ಅಪಾರವಾದ ಮಹಿಮೆಯನ್ನು ನಾನು ಪೂರ್ಣವಾಗಿ ನಂಬಿ ಹೇಳುತ್ತಿದ್ದೇನೆ. ಸಾಕ್ಷಾತ್ ಶಿವನ (ಶಂಭುವಿನ) ಸಂಪೂರ್ಣ ಕೃಪೆ ನಿನ್ನ ಮೇಲಿದೆ ಎಂಬುದನ್ನು ನಾನು ದೃಢವಾಗಿ ನಂಬಿ ಜಗತ್ತಿಗೆ ಸಾರುತ್ತಿದ್ದೇನೆ ಎಂದು ಹೇಳಿದ್ದಾರೆ.  ೬ ಲೋಕಕ್ಕೆ ಬಸವಣ್ಣನೇ ಮುದ್ದು ಹಸಿದೊಡಂಬಲಿ  ಮುದ್ದು ಬಿಸಿಲಿಗೆ ಕೊಡೆ ಮುದ್ದು ಬಸುರಿಗೆ ಶಿಶು ಮುದ್ದು ಲೋಕಕ್ಕೆ ಬಸವಣ್ಣನೇ ಮುದ್ದು ಸರ್ವಜ್ಞ. ಬೇಸಿಗೆಯ ಬಳಲಿಕೆಗೆ ಅಂಬಲಿ ಕೊಟ್ಟಾಗ ಹೊಟ್ಟೆಗೆ ಹಿತವಾಗಿರುತ್ತದೆ. ಹಸಿದ ಹೊಟ್ಟೆ ತಣ್ಣಗೆ ಮಾಡುವ ಅಂಬಲಿ ಆರೋಗ್ಯಕ್ಕೂ ಒಳ್ಳೆಯದು. ಬಿಸಿಲಿಗೆ ಒಂದು ಕೊಡೆ ಇದ್ದರೆ ಅದಕ್ಕಿಂತ ಹೆಚ್ಚಿನ ಆನಂದ ಇನ್ನೊಂದಿಲ್ಲ. ಬಸುರಿ ಹೆಣ್ಣು ಮಗಳು ಓಣಿಯಲ್ಲಿ ಆಡುವ ಎಲ್ಲಾ ಮಕ್ಕಳನ್ನು ಪ್ರೀತಿಯಿಂದ ಮುದ್ದಾಡುತ್ತಾಳೆ ಬಸುರಿ. ೭ ಬಸವ ಪೀಠವು ಎದ್ದು ಬಸವ ಪೀಠವು ಎದ್ದು ಒಸೆದು ನಾಣ್ಯವು ಹುಟ್ಟಿ ಬಸವನ ಮುದ್ರೆ ಮೆರೆದಾವು,ಧರೆಯವಗೆ  ವಶವಾಗದಿಹುದೆ  ಸರ್ವಜ್ಞ ಕಲ್ಯಾಣ ಕ್ರಾಂತಿಯ ನಂತರ ಅನುಭವ ಮಂಟಪವು ಒಂದು ಪ್ರಬಲ ಪ್ರಜಾಪ್ರಭುತ್ವದ ಅಂಗವಾಗಿ ಹೊರ ಹೊಮ್ಮಿತು.ಅದನ್ನೇ ಸರ್ವಜ್ಞ ಬಸವ ಪೀಠವು ಎದ್ದು ಜಾಗೃತಗೊಂಡು ಹೊಸ ನಾಣ್ಯಗಳು ಚಲಾವಣೆಗಾಗಿ ಹುಟ್ಟಿ ಕೊಂಡು ಆ ಚಲಾವಣೆಗೊಳ್ಳುವ ನಾಣ್ಯಗಳ ಮೇಲೆ ಬಸವನ. ಮುದ್ರೆ ನಾಡಲ್ಲಿ ಮೆರೆಯುವಾಗ ಬೆಳಕಿಗೆ ಬರುವಾಗ. ಇಡೀ ಜಗತ್ತು ಅವನಿಗೆ ವಶವಾಗಲು ಸಾಧ್ಯವಿಲ್ಲವೇ ? ಎಂದು ಪ್ರಶ್ನಿಸಿದ್ದಾನೆ. ಸರ್ವಜ್ಞರು ತಮ್ಮ ಈ ತ್ರಿಪದಿಗಳ ಮೂಲಕ ಬಸವಣ್ಣನವರನ್ನು ಕೇವಲ ಒಬ್ಬ ವ್ಯಕ್ತಿಯಾಗಿ ನೋಡದೆ, ಸಮಾಜವನ್ನು ಉದ್ಧಾರ ಮಾಡಲು ಬಂದ ಸಾಕ್ಷಾತ್ ಶಿವ ಕಲ್ಯಾಣದ ಜ್ಯೋತಿಯಾಗಿ ಆರಾಧಿಸಿದ್ದಾರೆ. ಸರ್ವಜ್ಞ ಒಬ್ಬ ದಿಟ್ಟ ಪ್ರಬುದ್ಧ ಪ್ರಾಮಾಣಿಕ ವೈಚಾರಿಕ ವ್ಯಕ್ತಿ. ತನ್ನ ಅನಿಸಿಕೆ ಭಾವನೆಗಳನ್ನು ನೇರವಾಗಿ ಹೇಳುವ ಗಟ್ಟಿತನ ಹೊಂದಿರುವ ಅಪರೂಪದ ಕವಿ. ಆಡು ಮುಟ್ಟದ ಸೊಪ್ಪಿಲ್ಲ ಕವಿ ಸರ್ವಜ್ಞ ಬರೆಯದ ವಿಷಯವಿಲ್ಲ ಎನ್ನುವ ಜಾನಪದ ನಾಣ್ಣುಡಿಯಂತೆ ಸರ್ವಜ್ಞ ಎಲ್ಲಾ ವಿಷಯಗಳ ಬಗ್ಗೆ  ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ. ಆರೋಗ್ಯ ಕುಟುಂಬ ಗಂಡ ಹೆಂಡತಿ ಸಂಬಂಧ ಆಹಾರ ವೈದಿಕ ವ್ಯವಸ್ಥೆಯ ವಿರುದ್ಧ ಟೀಕೆ ಹೀಗೆ ಎಲ್ಲಾ ವಿಷಯಗಳನ್ನು ತನ್ನ ತ್ರಿಪದಿಗಳಲ್ಲಿ ದಾಖಲಿಸಿದ್ದಾನೆ. ಜಯಂತಿ: ಪ್ರತಿ ವರ್ಷ ಫೆಬ್ರವರಿ 20 ರಂದು ಸರ್ವಜ್ಞ ಜಯಂತಿಯನ್ನು ಸರ್ಕಾರಿ ಆಚರಣೆಯಾಗಿ ಆಚರಿಸಲಾಗುತ್ತದೆ.  ಯಾವುದಾದರೂ ಒಂದು ವಿಶ್ವ ವಿದ್ಯಾಲಯದ ಆವರಣದಲ್ಲಿ ಸರ್ವಜ್ಞ ಪೀಠ ಸ್ಥಾಪಿಸಿ ಅವರ ಉಜ್ವಲ ಚಿಂತನೆ ಮಾನವ ಪ್ರೇಮ ಸಾಮಾಜಿಕ ಚಿಂತನೆಗಳ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನ ನಡೆಯಬೇಕು. ________________________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

Read Post »

You cannot copy content of this page

Scroll to Top