ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಒಬ್ಬ ಅಮ್ಮನ ಕಥೆ

ಧಾರಾವಾಹಿ-23 ರುಕ್ಮಿಣಿ ನಾಯರ್ ಒಬ್ಬ ಅಮ್ಮನ ಕಥೆ ಗೆಳತಿಯ ಸಹಾಯ ತಾಯಿ ಊಟ ಮಾಡಿದ ನಂತರ ಅಕ್ಕ ತಂಗಿಯರಿಬ್ಬರೂ ಹೊರಡಲು ಅನುವಾದರು….. “ಅಮ್ಮಾ…. ನಾವಿಬ್ಬರೂ ಹೊರಗೆ ಹೋಟೆಲ್ ನಲ್ಲಿ ಊಟ ಮಾಡುತ್ತೇವೆ….ತಂಗಿ ದೊಡ್ಡಕ್ಕನ ಮನೆಗೆ ಹೋಗುತ್ತಿದ್ದಾಳೆ…. ಅಕ್ಕನಿಗೂ ನೀನು ಆಸ್ಪತ್ರೆಯಲ್ಲಿ ಇರುವ ವಿಷಯ ತಿಳಿಸಬೇಕಿದೆ…. ಅಲ್ಲಿಂದ ಹಾಗೇ ನಾನು ಆಶ್ರಮಕ್ಕೆ ತೆರಳುತ್ತಿದ್ದೇನೆ…. ಸಂಜೆ ನಿನ್ನೊಂದಿಗಿರಲು ಬರುತ್ತೇನೆ…. ನನ್ನ ಗೆಳತಿಯೊಬ್ಬಳು ಅನಾಥಾಶ್ರಮದಲ್ಲಿ ಇರುವುದರಿಂದ ನಿನ್ನ ಜೊತೆ ನನಗಿರಲು ಅವಕಾಶವಾಗಿದೆ… ಆಕೆ ಇತ್ತೀಚೆಗೆ ಬಂದಿದ್ದರು ಕೂಡ ಎಷ್ಟೋ ವರ್ಷಗಳ ಗೆಳತಿಯಂತೆ ನನ್ನ ಸಹಾಯಕ್ಕೆ ಹೆಗಲು ಕೊಡುತ್ತಿದ್ದಾಳೆ… ಆದರೂ ನನ್ನ ಜವಾಬ್ದಾರಿಯನ್ನು ನಾನು ನಿರ್ವಹಿಸಬೇಕಿದೆ…. ಎಂದು ಮಗಳು ತಿಳಿಸಿದಾಗ, ಸರಿ ಎನ್ನುವಂತೆ ತಲೆಯಾಡಿಸಿದಳು ಸುಮತಿ. ಏನೋ ನೆನಪಾದಂತೆ ಅನಿಸಿ….. ಒಂದು ನಿಮಿಷ ಇರು ಮಗೂ… ನನ್ನ ವಿಧವಾ ಪೆನ್ಷನ್ ಬರುವುದಿದೆಯಲ್ಲ…. ಅದನ್ನು ಹೇಗೆ ಪಡೆದುಕೊಳ್ಳುವುದು?… ನಾನು ಇಲ್ಲಿ ಆಸ್ಪತ್ರೆಯಲ್ಲಿದ್ದೇನೆ…. ನನ್ನ ಸಹಿ ಇಲ್ಲದೆ ಆ ರೂ.50 ಸಿಗುವುದಿಲ್ಲ…. ನನ್ನ ಕಷ್ಟವನ್ನು ಅರಿತ ನಮ್ಮೂರಿನ ಪೋಸ್ಟ್ ಮಾಸ್ಟರ್ ನನ್ನಿಂದ ಅರ್ಜಿಯನ್ನು ಹಾಕಿಸಿ, ಈ ವಿಧವಾ ಪೆನ್ಷನ್ ಬರುವಂತೆ ಮಾಡಿದ್ದರು…. ಅವರ ಈ ಸಹಾಯವನ್ನು ನಾನೆಂದಿಗೂ ಮರೆಯುವುದಂತೆ ಇಲ್ಲ…. ಎಂದು ಸುಮತಿ ಅಂದಾಗ, ಮಕ್ಕಳಿಗೆ ತಾಯಿ ಹೇಳಿದ್ದು ಸರಿ ಅನಿಸಿತು. ತಾಯಿ ಈ ವಿಧವಾ ಪೆನ್ಷನ್ ಗಾಗಿ ಕಚೇರಿಗಳಿಗೆ ಓಡಾಡಿದ್ದು ನೆನಪಾಯಿತು…. ಅದಕ್ಕಾಗಿ ನಮ್ಮ ಹೋಬಳಿಯ ಪೋಸ್ಟ್ ಮಾಸ್ಟರ್ ಮಾಡಿದ ಸಹಾಯ ಅಷ್ಟಿಷ್ಟಲ್ಲ. ಅವರ ಪರಿಶ್ರಮದಿಂದ ನಮ್ಮ ತಾಯಿಗೆ ತಿಂಗಳಿಗೆ 50 ರೂಪಾಯಿ ವಿಧವಾ ಪೆನ್ಷನ್ ಬರುತ್ತಿದೆ. ಕೆಲವೊಮ್ಮೆ ಪ್ರತಿ ತಿಂಗಳೂ ಬರದೇ ಎರಡು ಮೂರು ತಿಂಗಳಿನ ಹಣ ಒಟ್ಟಾಗಿ ಬರುತ್ತಿತ್ತು.  ಅದನ್ನು ತಾಯಿ ನಮಗಾಗಿ ತಿಂಡಿ ತಿನಿಸುಗಳನ್ನು ಮಾಡಿಕೊಡಲು ಅಥವಾ ಬಟ್ಟೆ-ಬರೆ ಕೊಡಿಸಲು ಖರ್ಚು ಮಾಡುತ್ತಿದ್ದಳು. ಈವರೆಗೂ ನಾವು ಗಮನಿಸಿದಂತೆ ನಮ್ಮ ತಾಯಿ ಅದರಿಂದ ಒಂದು ನಯಾ ಪೈಸೆಯನ್ನು ಕೂಡ ತನಗಾಗಿ ಖರ್ಚು ಮಾಡಿಕೊಂಡಿರಲಿಲ್ಲ. ಈ ಹಣವು ಕೂಡ ತಾಯಿಗೆ ಕೆಲವೊಮ್ಮೆ ಆಪದ್ಬಾಂಧವನಂತೆ ಸಹಾಯ ಮಾಡಿದ್ದೂ ಇದೆ. ಅದೂ ಕೂಡ ನಮಗಾಗಿ, ಎನ್ನುವುದನ್ನು ನೆನೆದಾಗ ಮಕ್ಕಳಿಬ್ಬರ ಕಣ್ಣುಗಳು ಹನಿ ಗೂಡಿದವು. ತಾನು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರೂ ಕೂಡ ಈಗಲೂ ನಮ್ಮ ತಾಯಿಗೆ ನಮ್ಮದೇ ಚಿಂತೆ ಅಲ್ಲವೇ?…..”ನೋಡೋಣ ಅಮ್ಮಾ…. ನಾನು ದೊಡ್ಡಕ್ಕನ ಮನೆಯಿಂದ ನಮ್ಮ ಮನೆಗೆ ಹಿಂತಿರುಗುವಾಗ ಪೋಸ್ಟ್ ಮಾಸ್ಟರ್ ಮನೆಗೆ ಹೋಗಿ ಈ ಬಗ್ಗೆ ತಿಳಿದುಕೊಳ್ಳುತ್ತೇನೆ”…. ಎಂದು ಮೂರನೇ ಮಗಳು ಹೇಳಿದಳು. ಸರಿ ಎನ್ನುವಂತೆ ತಲೆ ಆಡಿಸಿದಳು ಸುಮತಿ. ಅಕ್ಕತಂಗಿಯರಿಬ್ಬರೂ ಆಸ್ಪತ್ರೆಯಿಂದ ಹೊರ ನಡೆದರು.  ತಂಗಿಯ ಜೊತೆಗೆ ಬಸ್ ನಿಲ್ದಾಣದವರೆಗೂ ಬಂದು, ಅವಳನ್ನು ದೊಡ್ಡಕ್ಕನ ಮನೆಯ ಕಡೆಗೆ ಹೋಗುವ ಬಸ್ ಹತ್ತಿಸಿ ತಾನು ಆಶ್ರಮದ ಕಡೆಗೆ ನಡೆದಳು. ದೊಡ್ಡಕ್ಕನ ಮನೆಗೆ ಹೋದ ತಂಗಿಯು ಅಮ್ಮನ ಅನಾರೋಗ್ಯದ ವಿಷಯ ಹಾಗೂ ಆಸ್ಪತ್ರೆಯಲ್ಲಿ ದಾಖಲಾಗಿರುವ ಬಗ್ಗೆ ತಿಳಿಸಿದಳು. ಅಮ್ಮನ ಅನಾರೋಗ್ಯದ ಬಗ್ಗೆ ತಿಳಿದು ಅವಳಿಗೂ ಬಹಳ ಸಂಕಟವಾಯಿತು….. “ಬಾವ ಕೆಲಸಕ್ಕೆ ಹೋಗಿದ್ದಾರೆ…. ಸಂಜೆ ಅವರು ಬಂದ ನಂತರ ನಾನು ಮತ್ತು ಬಾವ ಆಸ್ಪತ್ರೆಗೆ ಹೋಗುತ್ತೇವೆ”…. ಎಂದಳು ದೊಡ್ಡಕ್ಕ.  ದೊಡ್ಡಕ್ಕನ ಮಾತಿಗೆ ಹೂಂಗುಟ್ಟಿದಳು. ತನ್ನ ಎರಡನೇ ಅಕ್ಕ ಉಳಿದ ವಿಷಯಗಳನ್ನು ತಾನೇ ದೊಡ್ಡಕ್ಕನಿಗೆ ತಿಳಿಸುತ್ತೇನೆ ಎಂದು ಹೇಳಿದ್ದರಿಂದ ಅವಳು ಹೆಚ್ಚಾಗಿ ಇನ್ನೇನೂ ಹೇಳಲಿಲ್ಲ. ಸ್ವಲ್ಪ ಹೊತ್ತು ಅಕ್ಕನ ಮನೆಯಲ್ಲಿದ್ದು ಮಕ್ಕಳ ಜೊತೆ ಕಾಲ ಕಳೆದು ನಂತರ ಸಕಲೇಶಪುರದ ಬಸ್ ನಿಲ್ದಾಣಕ್ಕೆ ಬಂದು ತನ್ನ ಊರ ಕಡೆಗೆ ಹೋಗುವ ಬಸ್ ಹತ್ತಿ ಒಬ್ಬಳೇ ಊರ ಕಡೆಗೆ ಹೊರಟಳು. ಒಬ್ಬಳೇ ಬಸ್ಸ್ ನಲ್ಲಿ ಕುಳಿತು ಕಿಟಕಿಯ ಆಚೆಗೆ ನೋಡುತ್ತಾ ನಿಟ್ಟಿಸಿರು ಬಿಟ್ಟಳು. ನಮ್ಮ ತಾಯಿ ಇಷ್ಟು ಬೇಗ ನಮ್ಮಿಂದ ದೂರವಾಗುತ್ತಾಳೆಯೇ? ಎನ್ನುವ ವಿಷಯ ಮನಸ್ಸಿಗೆ ಬಂದಾಗ ಅವಳಿಗ ಅರಿವಿಲ್ಲದಂತೆಯೇ ಕಣ್ಣುಗಳಿಂದ ನೀರು ಜಾರಿತು. ಯಾರಿಗೂ ಕಾಣದೆಂದು ಕಿಟಕಿಯ ಆಚೆ ನೋಡುತ್ತಾ ಕುಳಿತಳು. ಮನದ ತುಂಬಾ ನೋವು ಮಡುಗಟ್ಟಿತ್ತು. ಬಸ್ಸು ಯಾವಾಗ ಊರಿಗೆ ತಲುಪಿತು ಎಂಬುದು ತಿಳಿಯಲಿಲ್ಲ. ಬಸ್ಸಿನಿಂದ ಇಳಿದು ಮನೆ ತಲುಪಿದಳು. ಇಂದೇಕೋ ಮನೆ ಎಂದಿಗಿಂತ ಬಿಕೋ ಎನ್ನುವಂತೆ ಇತ್ತು. ತೀವ್ರ ಮೌನ ಆವರಿಸಿದಂತೆ ಅನಿಸಿತು. ಅಮ್ಮ ಬೇಗ ಆರೋಗ್ಯಪೂರ್ಣಳಾಗಿ ಮನೆಗೆ ಹಿಂದಿರುಗುತ್ತಾಳೆ ಎನ್ನುವ ಆಸೆಯನ್ನು ಹೊತ್ತು ಒಬ್ಬಳೇ ಹೇಗೋ ಕಾಲ ಕಳೆಯುತ್ತಿದ್ದಳು. ಆದರೆ ಈಗ ಜೊತೆಗೆ ನೋವನ್ನು ಮರೆಯಲು ಅಕ್ಕನ ಹೆಗಲೂ ಇಲ್ಲ. ಅಮ್ಮನೂ ಇಲ್ಲ. ಹೊರಡುವಾಗ ದೊಡ್ಡಕ್ಕ….” ಇವತ್ತು ಇಲ್ಲೇ ಇರೇ… ಒಬ್ಬಳೇ ಮನೆಗೆ ಹೋಗಬೇಡ…. ಎಂದರೂ ಕೇಳಲಿಲ್ಲ ನಾನು…. ಏನು ಮಾಡುವುದು ಇಲ್ಲಿ ನಾನು ಶಾಲೆಗೆ ಹೋಗದಿದ್ದರೆ ಅಮ್ಮನ ಕೆಲಸ ಕೈ ಬಿಟ್ಟು ಹೋಗುತ್ತದೆ…..ನನಗೂ ಈಗ ಜೊತೆಗೆ ಅಕ್ಕಂದಿರಿಬ್ಬರಲ್ಲಿ ಯಾರಾದರೂ ಬೇಕಿತ್ತು…. ಈ ನೋವನ್ನು ನಾನೊಬ್ಬಳೇ ಸಹಿಸಲಾರೆ… ಏನು ಮಾಡಲಿ?…” ಎಂದು ತನ್ನಷ್ಟಕ್ಕೆ ತಾನೇ ಹೇಳಿಕೊಳ್ಳುತ್ತಾ ಬಿಕ್ಕಿ ಬಿಕ್ಕಿ ಅಳುತ್ತಾ ಹಾಸಿಗೆ ಮೇಲೆ ದೊಪ್ಪನೆ ಉರುಳಿದಳು. ಇತ್ತ ಆಶ್ರಮಕ್ಕೆ ಹೋದವಳಿಗೆ ತಂಗಿಯನ್ನು ಒಬ್ಬಳನ್ನೇ ಮನೆಗೆ ಕಳುಹಿಸಿದ್ದರ ಬಗ್ಗೆ ಬಹಳ ಬೇಸರವಿತ್ತು. ಆದರೆ ಏನು ಮಾಡುವುದು? ಅನ್ಯಮಾರ್ಗವಿರಲಿಲ್ಲ. ಆಶ್ರಮಕ್ಕೆ ಬಂದ ಕೂಡಲೇ ಅವಳ ಗೆಳತಿ ಅವಳ ತಾಯಿಯ ಬಗ್ಗೆ ವಿಚಾರಿಸಿಕೊಂಡಳು. ಈಗ ಈ ಗೆಳತಿಯ ಜೊತೆಯೇ ಈ ಹುಡುಗಿಗೆ ಆಧಾರ. ಅವಳ ಹೆಗಲ ಮೇಲೆ ತಲೆ ಇಟ್ಟು ಸ್ವಲ್ಪ ಹೊತ್ತು ಕಣ್ಣು ಮುಚ್ಚಿದಳು. ಅವಳು ಇವಳ ತಲೆಯನ್ನು ನೇವರಿಸುತ್ತಾ ಸಮಾಧಾನಪಡಿಸಿದಳು. ಸ್ವಲ್ಪ ಹೊತ್ತಿನ ನಂತರ ಸುಮತಿಯ ಮಗಳು ಆಶ್ರಮದ ಮಕ್ಕಳ ಓದಿನ ಕಡೆಗೆ ಗಮನಹರಿಸಿದಳು. ಅವಳು ಮಕ್ಕಳಿಗೆ ಪಾಠ ಮಾಡುತ್ತಿದ್ದಾಗ ಗೆಳತಿ ಅಡುಗೆ ಮಾಡುತ್ತಿದ್ದಳು. ಅಷ್ಟೊತ್ತಿಗೆ ಸಂಜೆಯಾಗಿತ್ತು. ಮಾಡಿದ ಅಡುಗೆಯನ್ನು ಗೆಳತಿ ಈ ಹುಡುಗಿಗೆ ಬಡಿಸಿ, ಒಂದು ಪುಟ್ಟ ಡಬ್ಬಿಯಲ್ಲಿ ತಾನು ಮಾಡಿದ ಈರುಳ್ಳಿ ಸೋಗೆಯ ಪಲ್ಯವನ್ನು ತುಂಬಿಕೊಟ್ಟು….. “ಇಲ್ಲಿಯ ಉಳಿದ ಕೆಲಸವನ್ನು ಮಾಡಿ, ಮಕ್ಕಳ ಕಲಿಕೆಗೆ ನಾನು ಸಹಾಯ ಮಾಡುತ್ತೇನೆ…. ನೀನು ಆಸ್ಪತ್ರೆಗೆ ತೆರಳಿ ನಿನ್ನ ತಾಯಿಯ ಯೋಗ ಕ್ಷೇಮವನ್ನು ನೋಡಿಕೋ…. ಎಂದಳು. ತನಗೆ ಈ ಸಮಯದಲ್ಲಿ ಆಸರೆಯಾಗಿ ಬಂದ ತನ್ನದೇ ಪ್ರಾಯದ ಗೆಳತಿಯನ್ನು ಬಿಗಿಯಾಗಿ ಅಪ್ಪಿಕೊಂಡು…. ಯಾವ ಜನ್ಮದಲ್ಲಿ ನೀನು ನನಗೆ ಅಕ್ಕ ಅಥವಾ ತಂಗಿ ಆಗಿದ್ಯೋ ತಿಳಿಯದು… ನಿನ್ನ ಈ ಋಣವನ್ನು ನಾನು ಈ ಜನ್ಮದಲ್ಲಿ ತೀರಿಸಲು ಸಾಧ್ಯವಿಲ್ಲ ಗೆಳತಿ…. ಎಂದು ಹೇಳುತ್ತಾ ತನ್ನ ಕೃತಜ್ಞತೆಯನ್ನು ತಿಳಿಸಿದಳು…. “ಹೇಯ್ ಇದೆಲ್ಲಾ ಏನೂ ದೊಡ್ಡ ಕೆಲಸವಲ್ಲ…. ನನಗೂ ತಾಯಿ ಇದ್ದಾಳೆ… ನಿನ್ನ ನೋವು ನನಗೂ ಅರ್ಥವಾಗುತ್ತೆ…. ನಡಿ ಮೊದಲು ಆಸ್ಪತ್ರೆಗೆ ಹೋಗು…. ಎಂದು ಹೇಳುತ್ತಾ ಬಾಗಿಲವರೆಗೂ ಜೊತೆಗೆ ಬಂದು ಬಿಳ್ಕೊಟ್ಟಳು.

Read Post »

ಕಾವ್ಯಯಾನ

ವಿಜಯಲಕ್ಷ್ಮಿ ಹಂಗರಗಿ ಅವರ “ವಚನಕಾರರ ಹರಿಕಾರ:ಫಗು ಹಳಕಟ್ಟಿ”

ಕಾವ್ಯ ಸಂಗಾತಿ ವಿಜಯಲಕ್ಷ್ಮಿ ಹಂಗರಗಿ “ವಚನಕಾರರ ಹರಿಕಾರ:ಫಗು ಹಳಕಟ್ಟಿ” ನಾಡಿನ ನೆಲದ ನಂದಾದೀಪ,ನುಡಿಯ ಬೆಳಕಿನ ಶಾಶ್ವತ ರೂಪ;ಫಗು ಹಳಕಟ್ಟಿ ಮಹನೀಯರ ಹೆಸರು,ಕನ್ನಡಿಗರ ಹೃದಯದ ಚಿರಸ್ಮರಣೆ// ಧಾರವಾಡದ ಧರೆಗೆ ಜನಿಸಿ,ಧೀಮಂತ ಚಿಂತನೆ ಹೊತ್ತು ಬೆಳೆದು;ಸರಳ ಬದುಕಿನ ಸತ್ಯದ ದಾರಿಯಲ್ಲಿ,ಸಾಹಿತ್ಯ ಸೇವೆಯೇ ಜೀವನವಾಗಿಸಿ// ವಚನಗಳ ಅಮೃತವನು ಹುಡುಕುತ್ತ,ಹಳ್ಳಿ-ಹಳ್ಳಿ ಹೆಜ್ಜೆ ಇಟ್ಟರು;ತಾಳೆಗರಿ, ಹಸ್ತಪ್ರತಿ, ಹಳೆಯ ಗ್ರಂಥಗಳಲಿ,ಅಮೂಲ್ಯ ನಿಧಿಯನು ಕಾಪಾಡಿದರು// ಚದುರಿದ ವಚನ ಮುತ್ತುಗಳನು,ಒಂದೊಂದು ಹಾರವ ಮಾಡಿ ಜೋಡಿಸಿ;ಶರಣರ ಸಂದೇಶದ ಸಿರಿಯನ್ನು,ಜಗದ ಮುಂದೆ ಬೆಳಗಿಸಿದರು// ಶ್ರಮವೇ ಅವರ ಉಸಿರಾಯಿತು,ಸೇವೆಯೇ ಅವರ ಜೀವನವಾಯಿತು;ನಿರಹಂಕಾರದ ನಗುವಿನೊಳಗೆ,ಜ್ಞಾನಜ್ಯೋತಿ ಸದಾ ಹೊಳೆಯಿತು// ವ್ಯಕ್ತಿತ್ವದ ಎತ್ತರ ಬೆಟ್ಟದಷ್ಟು,ವಿನಯದ ಆಳ ಸಾಗರದಷ್ಟು;ಕಾಯಕವೇ ಕೈಲಾಸವೆಂಬ ತತ್ತ್ವವನು,ತಮ್ಮ ಬದುಕಿನಲ್ಲೇ ತೋರಿದರು// ವಚನ ಸಾಹಿತ್ಯದ ರಕ್ಷಕರಾಗಿ,ಕನ್ನಡದ ಕಾವಲುಗಾರರಾದರು;ಶರಣರ ಚಿಂತನೆ ಚಿರಂಜೀವಿಯಾಗಿ,ಮುಂದಿನ ಪೀಳಿಗೆಗೆ ಉಡುಗೊರೆಯಾದರು// ಫಗು ಹಳಕಟ್ಟಿ ಎಂಬ ಹೆಸರು,ಕನ್ನಡದ ಕಿರೀಟದ ಹೊಳೆಯುವ ರತ್ನ;ವಚನಗಳ ಬಟ್ಟೆ ನೇಯ್ದ ಮಹಾಶಿಲ್ಪಿ,ಸಾಹಿತ್ಯ ಲೋಕದ ಅಮರ ಚೇತನ// ನಾವು ಹೋಗೋಣ ಅವರ ಹಾದಿಯನು,ನಾವು ಬೆಳಗೋಣ ಜ್ಞಾನದ ದೀಪವನು;ವಚನಗಳ ಮೌಲ್ಯ ಉಳಿಸೋಣ ಎಲ್ಲರೂ,ಫಗು ಹಳಕಟ್ಟಿ ಆದರ್ಶವನು ಪಾಲಿಸೋಣ ಸದಾಕಾಲ// ವಚನಗಳ ವನದ ಕಾವಲುಗಾರ,ಕನ್ನಡ ನುಡಿಯ ಅಪರೂಪದ ಸೇವಕ;ಫಗು ಹಳಕಟ್ಟಿ ಚಿರಸ್ಮರಣೀಯ,ಸಾಹಿತ್ಯಾಕಾಶದ ಧ್ರುವತಾರೆ// ವಿಜಯಲಕ್ಷ್ಮಿ ಹಂಗರಗಿ

ವಿಜಯಲಕ್ಷ್ಮಿ ಹಂಗರಗಿ ಅವರ “ವಚನಕಾರರ ಹರಿಕಾರ:ಫಗು ಹಳಕಟ್ಟಿ” Read Post »

ಕಾವ್ಯಯಾನ

ಹಮೀದ್ ಹಸನ್ ಮಾಡೂರು ಅವರ ಕವಿತೆ “ನ್ಯಾಯದ ಕೂಗು”

ಕಾವ್ಯ ಸಂಗಾತಿ ಹಮೀದ್ ಹಸನ್ ಮಾಡೂರು “ನ್ಯಾಯದ ಕೂಗು” ಬಡಿಯೋಣ ನ್ಯಾಯದ ಕದಮೌನದ ಗೋಡೆ ಕುಸಿಯುವ ತನಕ,ಮುಖವಾಡಧಾರಿಗಳನಿಜಮುಖ ಬೆಳಕಿಗೆ ಬರುವ ತನಕ,! ಎಚ್ಚೆದ್ದು ಕೊಳ್ಳೋಣ….ನಿದ್ರಿಸಿದ ಮನಸ್ಸುಗಳನ್ನೆಬ್ಬಿಸಿ,ಕಪಟದ ನೆರಳಲ್ಲಿ ಬೆಳೆದಶಾಂತಿ ಕದಡುವ ದುಷ್ಟರ ಓಡಿಸಿ,! ಹೋರಾಡೋಣ….ಸುಳ್ಳಿನು ಬಿತ್ತುವ ಕಣಿವೆಗಳಲ್ಲಿ,ದ್ವೇಷದ ಬೆಳೆಯನು ಬೆಳೆಸುವಕಾಣದ ಕೈಗಳ ವಿರುದ್ಧ ಸಟೆದು ನಿಂತು,! ಧ್ವನಿಯಾಗೋಣ….ನಿಶ್ಯಬ್ದದ ಕಣ್ಣೀರಿಗೆ ಧ್ವನಿಯಾಗಿ,ನ್ಯಾಯದ ಹಾದಿಯಲಿ ನಡೆವಶೋಷಿತರ ನಂಬಿಕೆಗಳ ಪರ ನಿಂತು,! ಚಿಂತಿಸಿ ಬಾಳೋಣ…ಸತ್ಯದ ದೀಪಗಳ ಎಲ್ಲೆಡೆ ಬೆಳಗಿಸಿ,ಮೋಸದ ಜಾಲವನು ಬೀಸಿದಕೈಗಳಿಗೆ ಕಾನೂನಿನ ಬಿಸಿ ಮುಟ್ಟಿಸಿ.! ಹಮೀದ್ ಹಸನ್ ಮಾಡೂರು.

ಹಮೀದ್ ಹಸನ್ ಮಾಡೂರು ಅವರ ಕವಿತೆ “ನ್ಯಾಯದ ಕೂಗು” Read Post »

ಕಾವ್ಯಯಾನ

ಕಾವ್ಯ ಸುಧೆ ಅವರ ಕವಿತೆ “ನನ್ನಾತ್ಮ ಸಖ”

ಕಾವ್ಯ ಸಂಗಾತಿ ಕಾವ್ಯ ಸುಧೆ “ನನ್ನಾತ್ಮ ಸಖ” ಏಕಾಂತದಲ್ಲಿ ಜೊತೆಯಾದವನು ನೀನುಭವಸಾಗರವ ದಾಟಿಸಿದವ ನೀನು.ದಣಿದಾಗ ಮೈದಡವಿ ಮಲಗಿಸಿದವ ನೀನು,ನನ್ನೆಲ್ಲಾ ಕನಸಿಗೆ ಕಾವಲಾದವನು ನೀನು. ಮನನೊಂದಾಗ ಸಾಂತ್ವಾನಿಸಿದವ ನೀನುಬೇಸರಕೆ ನನ್ನ ಹಾಡಾದವ ನೀನುಲೋಕದ ನಜರಿಗೆ ಎದೆಗೊಟ್ಟು ನಿಂತವ ನೀನು,ಸೋತೆನಾ ಎಂದಾಗ ಗೆಲುವು ತಂದವ ನೀನು ಕನ್ನಡಿಯಲ್ಲಿ ಪ್ರತಿಬಿಂಬವಾಗಿ ನಕ್ಕವನು ನೀನುಉಸಿರಿನ ಜಪದಲ್ಲಿ ಓಂಕಾರವಾಗಿ ಮಿಡಿದವ ನೀನುನನ್ನೊಳಗೆ ನಾ ಹುಡುಕಿ ಕಂಡುಕೊಂಡ ಸತ್ಯನನ್ನೊಳಗಿನ……..ನನ್ನಾತ್ಮಸಖ ನೀನು ! ಕಾವ್ಯ ಸುಧೆ

ಕಾವ್ಯ ಸುಧೆ ಅವರ ಕವಿತೆ “ನನ್ನಾತ್ಮ ಸಖ” Read Post »

ಅಂಕಣ ಸಂಗಾತಿ, ಅರ್ಜುನ ಉವಾಚ

ಧಾರಾವಾಹಿ ಸಂಗಾತಿ-32 ಅರ್ಜುನ ಉವಾಚ ವಿಶ್ವನಾಥ್‌ ಎನ್‌ ನೇರಳೆಕಟ್ಟೆ ಅಸುರರನ್ನು ಮಣಿಸಿದೆ ಅಂಜನಾಸುತನ ಬಲದಿಂದ ನಮ್ಮೆಡೆಗೆ ಮುನ್ನುಗ್ಗಿಬರುತ್ತಿದ್ದ ದೈತ್ಯಸೇನೆಯಲ್ಲಿ ಅಪರಿಮಿತ ಬಲದ ರಾಕ್ಷಸಿಯರೂ ಇದ್ದರು. ಯುದ್ಧಕ್ಕೆ ಸಿದ್ಧನಾಗಿ ನಿಂತಿದ್ದ ನನ್ನ ರಥದಲ್ಲಿದ್ದ ಧ್ವಜವದು ಅವರ ಕ್ರೂರದೃಷ್ಟಿಗೆ ಬಿತ್ತು. ನಾನು ಹನುಮಧ್ವಜಧಾರಿ. ನನ್ನ ರಥದ ಬಾವುಟದಲ್ಲಿದ್ದವನು ಆ ಶ್ರೀರಾಮನ ಪ್ರಿಯಭಂಟ ಹನುಮಂತ. ರಕ್ಕಸಿಸಮೂಹವದು ಅಳುಕಿತು ಮಾರುತಸುತನನ್ನು ಕಂಡೊಡನೆಯೇ. ಅಂದು ಸಾಗರ ಉಲ್ಲಂಘನದ ಆ ಸಮಯದಲ್ಲಿ ತನ್ನನ್ನು ನುಂಗಿದ ರಾಕ್ಷಸಿಯ ದೇಹ ಸೀಳಿದವನು ಆಂಜನೇಯ. ಲಂಕೆಗೆ ಹೋದ ಬಳಿಕ ಅಲ್ಲಿ ಎದುರಾದ ರಕ್ಕಸಿ ಪಡೆಗೆ ರಾಕ್ಷಸ ರೂಪ ತೋರಿದವನು ವಾಯುಪುತ್ರ. ಆ ಭೀಕರ ನೆನಪು ಮೂಡಿತು ನನ್ನನ್ನು ಎದುರಿಸಲು ಬಂದಿದ್ದ ರಾಕ್ಷಸಿಯರಿಗೆ.ಅಂದು ಲಂಕಿಣಿಯನ್ನು ಬಲವಾಗಿ ಒದೆದ ಬಲಶಾಲಿ ಹನುಮಂತ ಇಂದಿಲ್ಲಿಗೆ ಮತ್ತೆ ಬಂದಿದ್ದಾನೆ ಎಂಬ ಭ್ರಮೆಗೆ ಒಳಗಾದ ರಕ್ಕಸಿಯೊಬ್ಬಳು ದೂರದೂರಕ್ಕೆ ಓಡಿದಳು, ರಣದ ಆಸಕ್ತಿಯನ್ನೇ ತೊರೆದವಳಂತೆ, ಮರಣ ಭಯಕ್ಕೆ ಒಳಗಾದವಳಂತೆ.ಬಾಲಕ್ಕೆ ಬಿದ್ದ ಬೆಂಕಿಯಿAದ ಲಂಕೆಗೆ ಬೆಂಕಿಯಿತ್ತ ಹನುಮ ಸಾಹಸ ನೆನಪಾಯಿತು ಇನ್ನೊಬ್ಬ ರಕ್ಕಸಿಗೆ. “ಮೊದಲೇನಿದ್ದರೂ ನನ್ನ ಮನೆಯನ್ನು ಉಳಿಸಿಕೊಳ್ಳುತ್ತೇನೆ. ಆಮೇಲೆ ಯುದ್ಧದ ಮಾತು” ಎಂದು ಬೊಬ್ಬೆ ಹೊಡೆದವಳು ತನ್ನ ಮನೆಗೆ ಓಡಿದಳು. ಮನೆಯೊಳಗಿದ್ದ ಸರಕನ್ನೆಲ್ಲಾ ಹೊರಗೆಸೆಯಲು ಶುರುಮಾಡಿದಳು.“ರಕ್ಕಸಿಯ ನೆರಳನ್ನು ಸಹಿಸುವುದಿಲ್ಲ ಈ ಕಪಿ” ಎಂದ ಇನ್ನೊಬ್ಬ ರಾಕ್ಷಸಿ ತನ್ನ ನೆರಳದು ಭೂಮಿಯ ಮೇಲೆ ಬೀಳದಂತಹ ತಾಣವನ್ನು ಹುಡುಕಿ ಅಲ್ಲಿ ಹೋಗಿ ನಿಂತಳು.ಹೀಗೆ ಯುದ್ಧಾಸಕ್ತರಾಗಿ ಬಂದ ರಕ್ಕಸಿಯರಿಗೆ ಭೀತಿ ಮೂಡಲು ನನ್ನ ಧ್ವಜದಲ್ಲಿದ್ದ ಹನುಮ ಕಾರಣನಾದ. ಹೀಗಿದ್ದಾಗಲೇ ಹನುಮನಿಗೆ ಹೆದರುವವಳು ತಾನಲ್ಲ ಎಂದು ಗತ್ತು ಗಾಂಭೀರ್ಯದಿAದ ಮುಂದೆ ಬಂದಳು ಒಬ್ಬ ರಕ್ಕಸಿ. ತನ್ನ ದೈತ್ಯ ಮೊಲೆಗಳಿಂದಲೇ ಶತ್ರು ಸೈನ್ಯವನ್ನು ಪುಡಿಗಟ್ಟುತ್ತೇನೆ ಎಂದು ಅಬ್ಬರಿಸಿದಳು. ಹಾಗೆ ಹೇಳಿದವಳು ಯೋಜನಸ್ತನಿಯೆಂಬ ರಾಕ್ಷಸಿ. ಅರ್ಜುನ ಸೇನೆಯನ್ನು ನಾಶಮಾಡಲು ನನ್ನ ಹೊಟ್ಟೆಯಿದು ಸಾಕು ಎಂದು ಆರ್ಭಟಿಸಿದಳು ಲಂಬೋದರಿ ಎಂಬ ನಿಶಾಚರಿ ದೈತ್ಯೆ. ಹೀಗೆ ಇವರಿಬ್ಬರೂ ಹೊಟ್ಟೆ, ಮೊಲೆಗಳನ್ನು ಮುಂದುಮಾಡಿಕೊAಡು, ಉಳಿದ ಅಸುರ ಪಡೆಯೊಡನೆ ನಮ್ಮ ಸೇನೆಯನ್ನು ನಾಶಪಡಿಸುವ ಉತ್ಸಾಹ ತೋರಿದರು.ಆಗಲೇ ಭೀಕರ ರೂಪದಲ್ಲಿ ಬಂದ ಭೀಷಣ ಮಹಾಸ್ತçಗಳ ಮಳೆಯನ್ನೇ ಕರೆದ, ನನ್ನ ಮೇಲೆ. ಬಗೆಬಗೆಯ ಮೃಗಗಳ ರೂಪವನ್ನು ತಾಳಿ ಬೆದರಿಸುವ ಯತ್ನ ಮಾಡಿದ. “ನನಗೆ ಜನ್ಮ ಕೊಟ್ಟವನಿಗೆ ಮರಣವನ್ನು ತಂದಿಟ್ಟವನು ನಿನ್ನ ಅಣ್ಣ ಭೀಮ. ನೀನೆಂತು ಪ್ರಾಣ ಉಳಿಸಿಕೊಳ್ಳುವೆಯೋ ನೋಡುತ್ತೇನೆ. ನಿನ್ನನ್ನು ಹಿಡಿದು ನರಮೇಧ ಯಾಗಕ್ಕೆ ಬಲಿಪಶುವಾಗಿಸದೆ ಬಿಡುವುದಿಲ್ಲ” ಎಂದು ಭೂಮಿ ನಡುಗುವಂತೆ ಬೊಬ್ಬಿರಿದ ಭೀಷಣ.ಅವನ ಭೀಕರ ಬೊಬ್ಬೆಯದು ನನ್ನಲ್ಲಿ ನಗು ಮೂಡಿಸಿತು. ನನ್ನ ರಕ್ಷೆಗಾಗಿ ಉಗ್ರವಾದ ಬಾಣವೊಂದನ್ನು ಹೂಡಿದೆ. ನನ್ನ ಒಂಟಿ ಬಾಣದ ಏಟಿಗೆ ಜಂಟಿ ಜಂಟಿಯಾಗಿ ತತ್ತರಿಸಿಹೋದರು ಅಸುರರು. ಒಂದರ ಹಿಂದೊAದರAತೆ ಶರಗಳನ್ನು ಪ್ರಯೋಗಿಸುತ್ತಲೇ ಹೋದೆ ಅಸುರರ ಮೇಲೆ.ಬಿರುಗಾಳಿ ಬೀಸಿದಾಗ ಮೋಡಗಳೆಲ್ಲಾ ಚದುರಿಹೋಗುವಂತೆ ದಿಕ್ಕುದಿಕ್ಕಿಗೆ ಹೋಗಿಬಿದ್ದರು ಅಸುರರು. ಕೆಲವರ ಅಂಗಾAಗಗಳು ಮುರಿದುಹೋದವು. ಕೈಕಾಲುಗಳನ್ನು ಕಳೆದುಕೊಂಡರು ಕೆಲವರು. ಕೆಲವರ ದೇಹದಲ್ಲಿ ನಾನು ಪ್ರಯೋಗಿಸಿದ ಬಾಣಗಳು ನೆಟ್ಟಿದ್ದವು. ವೇದನೆಗಳನ್ನು ತಾಳಲಾರದೆ ಕೆಲವರು ಪ್ರಾಣಬಿಟ್ಟರು. ಜೀವ ಉಳಿಸಿಕೊಳ್ಳುವುದಕ್ಕಾಗಿ ಗಿಡಮರಗಳ ಆಶ್ರಯ ಪಡೆದರು ಕೆಲವರು. ಯುದ್ಧರಂಗದಿAದಲೇ ಓಡಿಹೋಗಿ ಉಳಿದೆವು ತಾವು ಎಂದು ಬೀಗಿದರು ಕೆಲವರು.ಈಗ ನನಗೆ ನನ್ನ ಧ್ವಜದಲ್ಲಿ ಕುಳಿತಿದ್ದ ಹನುಮನ ನಿಜ ನೆರವು ದೊರಕಿತು. ಸ್ತನ, ಉದರಗಳಿಂದ ಸೈನಿಕರನ್ನು ಬಡಿಬಡಿದು ಕೊಲ್ಲುತ್ತಿದ್ದ ಯೋಜನಾಸ್ತನಿ, ಲಂಬೋದರಿಯರೆAಬ ರಕ್ಕಸಿಯರನ್ನು ಕಂಡು ಅಚ್ಚರಿಪಟ್ಟ ಅಂಜನಾಸುತ. ಹಿಂದಿನ ನೆನಪೆಲ್ಲವೂ ಬಂತು ಅವನಿಗೆ. ನಸುನಕ್ಕ. ತನ್ನ ಬಾಲವನ್ನು ಅಸುರರಿದ್ದ ದಿಕ್ಕುದಿಕ್ಕಿಗೆ ಬಡಿದ. ಹನುಮಂತನ ಬಾಲದ ಬಲವಾದ ಏಟಿಗೆ ಇನ್ನೂ ಶಕ್ತಿ ಮೂಡದ ಬಾಲರಂತಾಗಿಹೋದರು ರಕ್ಕಸರು. ಜೋರುಜೋರಾಗಿ ಚೀರುತ್ತಾ ಪ್ರಾಣ ಕಳೆದುಕೊಂಡರು. ಎಲ್ಲೆಡೆಯೂ ಅಸುರರ ಉಗ್ರರೂಪವನ್ನು ತೋರುತ್ತಿದ್ದ ರಣರಂಗವೀಗ ಜೀವಂತ ಅಸುರರಿಲ್ಲದೆಯೇ ಶೂನ್ಯವಾಗಿ ತೋರುತ್ತಿತ್ತು. ಅಸುರರನ್ನು ಕೊಲ್ಲುವ ಬಯಲಾಟದೆಡೆಗೆ ಮನಸ್ಸು ಮಾಡಿದ್ದ ಹನುಮಂತ ಈಗ ಅಸುರ ತಾಣವನ್ನು ಬಯಲು ಬಯಲಾಗಿಸಿದ್ದ.ತನ್ನವರನ್ನು ಕಳೆದುಕೊಂಡ ಭೀಷಣ ಭೀತಿಗೆ ಒಳಗಾದ. ತಾನು ಹೀಗೆಯೇ ಇದ್ದರೆ ತನ್ನ ಪ್ರಾಣವೂ ಉಳಿಯಲಾರದು ಎನ್ನುವುದು ದೃಢವಾಯಿತು ಅವನಿಗೆ. ಮಾಯಾವಿಯಾಗಿ ಕೈಚಳಕ ತೋರಿಸಲು ನಿರ್ಧಾರ ಮಾಡಿದ.ತಕ್ಷಣವೇ ಅಲ್ಲೊಂದು ಪುಣ್ಯಾಶ್ರಮ ಕಾಣಿಸಿಕೊಂಡಿತು. ಅಸುರ ರೂಪವನ್ನು ಕಳಚಿಕೊಂಡ ಭೀಷಣ ಮುನಿರೂಪದಲ್ಲಿ ಕಾಣಿಸಿಕೊಂಡ. ಅದೀಗ ಯುದ್ಧರಂಗವಾಗಿರಲಿಲ್ಲ. ಅಸುರ ಪಟ್ಟಣವಾಗಿರಲಿಲ್ಲ. ಎಲ್ಲೆಡೆಯೂ ಗಂಗಾನದಿಯ ನೀರಿನ ಹರಿವು. ಮುನಿಗಳ ಕುಟೀರಗಳು. ಯಜ್ಞಕುಂಡದಿದೆದ್ದ ಹೊಗೆ. ಹೂವಿನ ಗಿಡಗಳು. ಹಣ್ಣಿನ ಮರಗಳು. ಭೀಷಣನ ಭೀಕರತೆಯನ್ನು ಕಣ್ಣಾರೆ ಕಂಡಿದ್ದ ನನ್ನ ಕಣ್ಣಿಗೂ ಭ್ರಾಂತಿ ಮೂಡುವಂತಹ ವಾತಾವರಣವಲ್ಲಿ ನಿರ್ಮಾಣಗೊಂಡಿತ್ತು.ಮುನಿಯ ವೇಷದಲ್ಲಿ ನನ್ನೆದುರು ಬಂದ ಭೀಷಣ “ಅಸುರರನ್ನು ಕೊಲ್ಲುವುದು ಸರಿಯಲ್ಲ. ಹಿಂಸೆಯನ್ನು ಮಾಡದಿರು. ದೇವರ ಅರ್ಚನೆಯ ಮೂಲಕ ಸನ್ಮಾರ್ಗದಲ್ಲಿ ಸಾಗು” ಎಂದು ಕಪಟ ಬೋಧನೆ ಮಾಡಿದ.ತಕ್ಷಣವೇ ಅವನನ್ನು ಗಟ್ಟಿಯಾಗಿ ಹಿಡಿದುಕೊಂಡೆ. ಅವನ ಮೂಲರೂಪವೇ ಒದಗಿಬಂತು. ಮುನಿಯಾಗಿದ್ದವ ಮತ್ತೆ ಅಸುರನಾದ. ಒಡನೆಯೇ ಆಕ್ರಮಿಸಿ ಅವನ ಪಟ್ಟಣದಲ್ಲಿದ್ದ ಸಂಪತ್ತೆಲ್ಲವನ್ನೂ ಸೂರೆಗೊಂಡೆ. ಅದನ್ನು ಹಸ್ತಿನಾವತಿಗೆ ಕಳುಹಿಸಿಕೊಟ್ಟೆ. ಕುದುರೆಯ ಜೊತೆಗೆ ಮುಂದಕ್ಕೆ ಸಾಗಿದ ನಮ್ಮನ್ನು ಕರಬೀಸಿ ಕರೆಯುತ್ತಿತ್ತು ಮಣಿಪುರ… ವಿಶ್ವನಾಥ್‌ ಎನ್‌ ನೇರಳೆಕಟ್ಟೆ

Read Post »

You cannot copy content of this page

Scroll to Top