ಅಂಕಣ ಸಂಗಾತಿ
ಸುಜಾತಾ ರವೀಶ್
ವೃತ್ತಿ ವೃತ್ತಾಂತ
ವೃತ್ತಿ ಬದುಕಿನ ಹಿನ್ನೋಟ-36


ನಾವು ಆ ಶಾಖೆಗೆ ಹೋದಾಗ ಶಾಖಾಧಿಕಾರಿ ಆಗಿದ್ದವರು ಶ್ರೀ ಸತ್ಯನಾರಾಯಣ ಅವರು. ಅವರು ಮೂಲತಃ ಶ್ರೀನಿವಾಸಪುರರದವರು. ನನ್ನ ತಂದೆಯ ಊರು ಸಹ ಅದೇ ಆಗಿದ್ದು ಕೆಲವು ಹಳಬರನ್ನು ನೆನೆಸಿಕೊಂಡು ಮಾತನಾಡುತ್ತಿದ್ದೆವು. ಅವರಿಗೆ ಆಫೀಸಿನಲ್ಲೇ ಹೃದಯಘಾತ ಆಗಿತ್ತು. .ನಂತರ ಚೇತರಿಸಿಕೊಂಡರು. ಆದರೆ ನಮಗೆಲ್ಲ ಒಂದು ರೀತಿಯ ಶಾಕ್ ಆಗಿದ್ದಂತೂ ನಿಜ .ಆಗ ಇಷ್ಟೆಲ್ಲ ಹೃದಯಾಘಾತಗಳ ವಿಷಯ ಕೇಳದೆ ಇದ್ದರಿಂದ ಅದು ಅಪರೂಪದ ಸಂಗತಿಯಾಗಿತ್ತು.
ಹಾಗೆಯೇ ಶಾಖೆ ಎರಡರಲ್ಲಿ ಅತ್ಯಂತ ನೆನಪಿನಲ್ಲಿ ಉಳಿದ ವಿಷಯವೆಂದರೆ ಜನವರಿ ಒಂದನೆಯ ತಾರೀಕು ನಾವು ಹೆಂಗಳೆಯರೆಲ್ಲ ಸೇರಿ ಗೋಸಾಯಿ ಘಾಟ್ ಗೆ ಪ್ರವಾಸ ಹೋಗಿದ್ದು.
ಆ ಬಾರಿ ಜನವರಿ ಒಂದನೆಯ ತಾರೀಕು ಶನಿವಾರ ಬಂದದ್ದು ಅಂದು ನಮಗೆ ಅರ್ಧ ದಿನ ಮಾತ್ರ ಕಚೇರಿ ಆದ್ದರಿಂದ ನೀವು ಪ್ರವಾಸವನ್ನು ಯೋಚಿಸಿದೆ ಕೆಳಗಡೆ ಇದ್ದ ಟ್ರಾವೆಲ್ ಏಜೆನ್ಸಿಯಲ್ಲಿ ಒಂದು ಸಣ್ಣ ಮೆಟದ ಬುಕ್ ಮಾಡಿಕೊಂಡು ಮದ್ಯಾಹ್ನ ಹೊರಟೆವು ಎಲ್ಲರೂ ಅವರವರ ಮನೆಯಿಂದ ವಿಶೇಷ ತಿಂಡಿಗಳನ್ನು ಮಾಡಿಕೊಂಡು ಬರುವುದಾಗಿ ನಾನು ಅಂದು ಅವರೇ ಕಾಳು ರೊಟ್ಟಿ ಮಾಡಿ ತಂದಿದ್ದೆ. ಹತ್ತು ರೊಟ್ಟಿಗಳು ನಮಗಾಗಿ ಹಾಗೂ ಮತ್ತೆ ಎರಡು ಬೇರೆ ಬಾಕ್ಸ್ ನಲ್ಲಿ ಮಂಜುಗಾಗಿ. ತುಂಬಾ ಖುಷಿಯಾಗಿ ತಿಂದಿದ್ದ ಅಂದು.
ಸರಿ ಅಲ್ಲಿ ಮಧ್ಯಾಹ್ನ ಹೋದ ತಕ್ಷಣ ಎಲ್ಲರೂ ಡಬ್ಬಿಗಳಿಂದ ಹಂಚಿಕೊಂಡು ತಿಂದದ್ದಾಯಿತು. ಇನ್ನು ಮೂರು ರೊಟ್ಟಿಗಳು ಉಳಿದಿದ್ದನ್ನು ರಾಜಿ ಮನೆಗೆ ತೆಗೆದುಕೊಂಡು ಹೋದಳು. ಸುಮಾ ತಂದಿದ್ದ ಉಳಿದ ಪೂರಿ ಆಲೂಗೆಡ್ಡೆ ಪಲ್ಯ ನಾನು ಮನೆಗೆ ತೆಗೆದುಕೊಂಡು ಬಂದೆ. ಸ್ವಲ್ಪ ಹೊತ್ತು ನೀರಿನಲ್ಲಿ ಇಳಿದು ಹಾಡಿ ನಂತರ ದೋಣಿಯಲ್ಲಿ ಒಂದು ರೌಂಡ್ ಹೋಗಿ ಬಂದು ಐದು ಗಂಟೆಗೆ ಮತ್ತೆ ಮೈಸೂರಿಗೆ ವಾಪಸ್ ಆಗಿದ್ದೆವು ಪ್ರತಿ ವರ್ಷ ಜನವರಿ ಒಂದನೆಯ ತಾರೀಕು ಆ ದಿನ ನಾವು ಹೋದ ಪ್ರವಾಸದ ನೆನಪು ಆಗುತ್ತಲೇ ಇರುತ್ತದೆ.
ಹಾಗೆ ಮತ್ತೊಂದು ಕಹಿ ನೆನಪು ಎಂದರೆ ಪ್ರತಿ ನಿಧಿ ಬಾಂಧವರೂ ಪರ ಮನೆಯ ಗೃಹಪ್ರವೇಶಕ್ಕೆ ಹೋದಾಗ ನನ್ನದೊಂದು ಸಣ್ಣ ಚಿನ್ನದ ಸರ ಕಳೆದುಹೋದದ್ದು. ನಂಜನಗೂಡಿನ ಗೆಳತಿ ಇಂದುಮತಿ ಅವರ ತಮ್ಮನ ಮೂಲಕ ದುಬೈ ನಿಂದ ತರಿಸಿದ್ದ ೫ ಗ್ರಾಂ ನ ಸರ. ಬಹಳ ವರ್ಷಗಳಿಂದ ಭೇಟಿ ಆಗದೆ ಇದ್ದ ಪಿಯುಸಿ ಗೆಳತಿ ಲತಾ ಅವರ ನೆರೆಯ ಮನೆಗೆ ನಾವು ಗೃಹಪ್ರವೇಶಕ್ಕೆ ಹೋಗಿದ್ದು ಅವಳು ಸಿಕ್ಕಿದ್ದು ತುಂಬಾ ಖುಷಿಯಾಗಿತ್ತು. ಆಗಿನು ಮೊಬೈಲು ಕಾಲಿಟ್ಟ ಸಮಯ ಅವಳ ಬಳಿ ನನ್ನ ಬಳಿ ಇಬ್ಬರ ಬಳಿಯೂ ಮೊಬೈಲ್ ಇರಲಿಲ್ಲ ಹಾಗಾಗಿ ಮತ್ತೆ ಸ್ನೇಹ ಮುಂದುವರಿಸಲು ಆಗಲಿಲ್ಲ.
ಮೊದಲೇ ಹೇಳಿದಂತೆ ಮನೆಯ ಬಳಿ ಇದ್ದ ಶಾಖೆ ಐದಕ್ಕೆ ವರ್ಗಾವಣೆ ಕೇಳಿದ್ದು ಆದರೆ ಅಲ್ಲಿ ಹೆಚ್ ಜಿ ಎ ಅಂದರೆ ನಮ್ಮ ಪೋಸ್ಟ್ ಖಾಲಿ ಇರಲಿಲ್ಲ. ಅಲ್ಲಿಗೆ ವರ್ಗಾವಣೆ ಬಯಸಿದವರಲ್ಲಿ ನನ್ನ ಜೊತೆಗೆ ಬಂದು ರಿಪೋರ್ಟ್ ಆದ ಮೊದಲನೇ ಸ್ಥಾನ ಹಾಗೂ ನನ್ನದು ಎರಡನೆಯ ಸ್ಥಾನ. ಅಲ್ಲಿ ಪೋಸ್ಟ್ ಖಾಲಿ ಇಲ್ಲ ಅಂದಮೇಲೆ ಈ ವರ್ಷ ನಮಗೆ ವರ್ಗಾವಣೆ ಇಲ್ಲ ಎಂದು ಖಾತ್ರಿ ಯಾಗಿತ್ತು ಆದರೆ ಇಲ್ಲಿನ ವಾತಾವರಣ ತುಂಬಾ ಚೆನ್ನಾಗಿ ಇದ್ದುದರಿಂದ ಇನ್ನೂ ಒಂದು ವರ್ಷ ಹಾಯಾಗಿ ಇರಬಹುದು ಆದರೆ ಈ ಶಾಖೆ ಇವಾಗ ಕಟ್ಟಡಕ್ಕೆ ಅಂದರೆ ಬನ್ನಿ ಮಂಟಪಕ್ಕೆ ಸ್ಥಳಾಂತರ ಗೊಳ್ಳುವ ಯೋಜನೆ ಇತ್ತು. ಹಾಗಾಗಿ ಸ್ಥಳಾಂತರಗೊಳ್ಳುವ ಮೊದಲು ನಮಗೆ ವರ್ಗಾವಣೆ ಸಿಕ್ಕಿದರೆ ಒಳ್ಳೆಯದು ಎಂದಿತ್ತು. ಏಕೆಂದರೆ ನಮ್ಮ ಏರಿಯಾದಿಂದ ಬನ್ನಿಮಂಟಪಕ್ಕೆ ಎರಡೆರಡು ಬಸ್ ಹಿಡಿದು ಹೋಗಬೇಕಿತ್ತು. ಬಹಳ ದೂರವೂ ಇತ್ತು.

ಆ ದೇವರಿಗೆ ನಮ್ಮ ಮೊರೆ ಕೇಳಿಸಿತೇನೋ ಎಂಬಂತೆ ಆ ವರ್ಷ ಶಾಖೆ ಎರಡರ ಇಬ್ಬರಿಗೆ ಸಹಾಯಕ ಅಧಿಕಾರಿಗಳಾಗಿ ಬಡ್ತಿ ಸಿಕ್ಕಿತು ಗಿರಿಜಾ ಮತ್ತು ರೇಣುಕುಮಾರಿ ಇಬ್ಬರು ಪದೋನ್ನತಿ ಹೋಗಲು ಒಪ್ಪಿಗೆ ಕೊಟ್ಟಿದ್ದರಿಂದ ನಮಗೆ ಅಲ್ಲಿ ಎರಡು ಪೋಸ್ಟ್ ಖಾಲಿ ಆಗಿತ್ತು, ಇನ್ನು ವರ್ಗಾವಣೆ ಆದೇಶ ಬರುವುದಷ್ಟೇ ಬಾಕಿ.
ನಾನು ರಜೆ ಹಾಕಿದ್ದೆ. ಒಂದ್ಸಲ ನಮ್ಮ ಮನೆಯಲ್ಲಿ ಕಾಲ್ ಮಾಡಿದ್ದಳು ನನ್ನ ರಿಲವಿಂಗ್ ಆರ್ಡರ್ ಬಂದಿದ್ದು 15ನೆಯ ತಾರೀಕು ನಾವು ಆಗಬೇಕಿತ್ತು ಅಂದೇ ಮಧ್ಯಾಹ್ನ ನಾವಿಬ್ಬರೂ ಯಾಕೆಯವರಿಗೆ ಊಟ ಕೊಡಿಸೋಣವ ಎಂದು ಕೇಳಿದಳು ಆಯಿತು ಎಂದು ಹೇಳಿ ಹಬ್ಬದ ಮಾರನೆಯ ದಿನ ಮಧ್ಯಾಹ್ನ ನಮ್ಮ ಪಾರ್ಟಿ ಕೊಟ್ಟು ಸಂಜೆಗೆ ರಿಲೀಸ್ ಆದದ್ದು 1೭ನೆಯ ತಾರೀಕು ಸೋಮವಾರ ನಾವು ಶಾಖೆ ಐದಕ್ಕೆ ರಿಪೋರ್ಟ್ ಆಗಬೇಕಿತ್ತು ಈ ಹಿಂದೆ ನಂಜನಗೂಡಿನಲ್ಲಿ ನಮಗೆ ಬ್ರಾಂಚ್ ಮ್ಯಾನೇಜರ್ ಆಗಿದ್ದ ಸಿಕೆ ರವಿ ಅವರೇ ಅಲ್ಲಿ ಈಗ ಶಾಖಾಧಿಕಾರಿಗಳು ಅವರು ಶಾಖೆಗೆ ಫೋನ್ ಮಾಡಿ ನನಗೆ ಹೊಸ ವ್ಯವಹಾರ ವಿಭಾಗ ಕೊಡುವುದಾಗಿ ತಿಳಿಸಿದರು. ವತ್ಸಲಾಗೆ ಮಾರುಕಟ್ಟೆ ವಿಭಾಗ. ನನ್ನದೇನೂ ಅಭ್ಯಂತರವಿರಲಿಲ್ಲ.
ಅಂತೂ ಇಂತೂ ಶಾಖೆ ಐದಕ್ಕೆ ಬಂದು ರಿಪೋರ್ಟ್ ಆದೆವು. ಮೊಟ್ಟ ಮೊದಲ ಬಾರಿ ಡ್ಯೂಟಿ ರಿಪೋರ್ಟ್ ಜೊತೆಗೆ ವರ್ಗಾವಣೆ ಕೋರಿಕೆ ಪತ್ರ ಇರಲಿಲ್ಲ. ಮುಂದೆ ನಿವೃತ್ತಿಯಾಗುವವರೆಗೂ ಬರೋಬರಿ 21 ವರ್ಷ ಇದೆ ಶಾಖೆಯಲ್ಲಿ ಸೇವೆ ಸಲ್ಲಿಸುತ್ತೇವೆ ಎಂಬ ಅಂದಾಜು ಸಹ ಅಂದು ಇರಲಿಲ್ಲ.
ಸಾಹುಕಾರ್ ಚನ್ನಯ್ಯ ರಸ್ತೆಯಲ್ಲಿ ಇದ್ದ ಆ ಶಾಖೆಯ ಪಕ್ಕದಲ್ಲಿ ರಾಜ್ಯ ಸರ್ಕಾರದ ಕೆ ಜಿ ಐ ಡಿ ಕಚೇರಿಯೂ ಸಹ ಇತ್ತು. ರಸ್ತೆಯ ಎಡಬದಿಯಲ್ಲಿ ಇದ್ದ ಆ ಶಾಖೆ 2 ಅಂತಸ್ತಿನದಾಗಿತ್ತು ನನ್ನ ಹೊಸ ವ್ಯವಹಾರ ವಿಭಾಗ ಮೊದಲನೆಯ ಮಹಡಿಯಲ್ಲಿ ಇತ್ತು. ಮೊದಲಿಂದ ಪರಿಚಿತರಾಗಿದ್ದ ಶೈಲಾ ವೀಣಾ ಮಂಗಳ ಶಾಂತ ಹಾಗೂ ಎದುರು ಮನೆಯಲ್ಲಿ ಇದ್ದ ಸಾವಿತ್ರಿ ಎಲ್ಲರೂ ಇಲ್ಲೇ ಇದ್ದರು. ಹೊಸ ವಾತಾವರಣ ಅನಿಸಲೇ ಇಲ್ಲ ತುಂಬಾ ಬೇಗ ಅಂದುಕೊಳ್ಳುವಂತೆ ಆಯಿತು.
ನಮ್ಮ ಹೊಸ ವ್ಯವಹಾರ ವಿಭಾಗಕ್ಕೆ ರಾಜೇಂದ್ರ ಅವರು ಸಹಾಯಕ ಆಡಳಿತ ಅಧಿಕಾರಿಗಳಾಗಿ ಇದ್ದರೆ ಸಹಾಯಕ ರಾಗಿ ನನ್ನದೇ ಹೆಸರಿನ ಜಿ ಸುಜಾತ ಮತ್ತು ಗುರುರಾಜ್ ಅವರು ಅಲ್ಲಿ ಇಬ್ಬರು ಹೆಜ್ಜೆಯಗಳಿದ್ದು ನಮ್ಮದೇ ಯೂನಿಯನ್ ನ ಸಿ ಚಂದ್ರಕುಮಾರ್ ಅವರು ಸಹ ಅದೇ ವಿಭಾಗದಲ್ಲಿ ಇದ್ದರು. ಆಗಿಲ್ಲ ಪಾಲಿಸಿಗಳು ಹೆಚ್ಚಾಗಿ ಬರುತ್ತಿದ್ದು ಆ ವಿಭಾಗದಲ್ಲಿ ಕೈ ತುಂಬಾ ಕೆಲಸ ಇತ್ತು ಆಸಕ್ತಿದಾಯಕವಾಗಿಯೂ ನಾನು ಈ ಮೊದಲು ಅದೇ ಹೊಸ ವ್ಯವಹಾರ ವಿಭಾಗದಲ್ಲಿ ಮಾಡಿದಾಗ ಪೂರ್ತಿ ಮಾನ್ಯುಯಲ್ ಕೆಲಸಗಳಿತ್ತು ಈಗ ಎಲ್ಲವೂ ಕಂಪ್ಯೂಟರ್ನಲ್ಲಿ ಮಾಡಬೇಕಿತ್ತು ಹೊಸದಾಗಿ ಕಲಿಯುವ ಆಸಕ್ತಿಯು ತುಂಬಾ ಖುಷಿಯಾಗುವಂತಿತ್ತು. ರವೀಶ್ ಅವರು ಊರಿನಲ್ಲಿ ಇದ್ದಾಗ ಮದ್ಯಾಹ್ನ ಊಟಕ್ಕೂ ಸಹ ಕರೆದುಕೊಂಡು ಹೋಗಿ ಬಂದು ಬಿಡುತ್ತಿದ್ದರು. ಸಕಲೇಶಪುರ ಬಿಟ್ಟ ಮೇಲೆ ಮಧ್ಯಾಹ್ನ ಮನೆಯ ಬಿಸಿಯೂಟ ಮತ್ತೆ ದೊರೆಯಿತು ಅನ್ನಬಹುದು.(ಮುಂದುವರೆಯುವುದು)
ಸುಜಾತಾ ರವೀಶ್




