ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com
ಕಾವ್ಯಯಾನ

ಟಿ.ಪಿ.ಉಮೇಶ್ ಚಿತ್ರದುರ್ಗ ಅವರ ಕವಿತೆ “ಮಳೆಗೆ ನೆಲದ ಮೇಲೆ ಪ್ರೇಮವಿತ್ತೋ”

ಕಾವ್ಯ ಸಂಗಾತಿ ಟಿ.ಪಿ.ಉಮೇಶ್ ಚಿತ್ರದುರ್ಗ “ಮಳೆಗೆ ನೆಲದ ಮೇಲೆ ಪ್ರೇಮವಿತ್ತೋ” ಅಗೋ ಅದಾವ ಮೋಡ ಮೊದಲು ಕಣ್ಣೀರಿಟ್ಟಿತೊ?ಅದಾವ ಗಾಳಿ ಅದನ್ನು ಹೊತ್ತು ತಂದಿತೊ?ಅದಾವ ಎಲೆ ಚಿಗುರು ಮೊದಲು ತೇವಗೊಂಡಿತೊ?ಅದಾವ ಮಣ್ಣು ಅದನ್ನು ತನ್ನದಾಗಿಸಿಕೊಂಡಿತೊ?ಜಾರಿದ ಹನಿಗಳ ಲೆಕ್ಕ ಹಿಡಿದಷ್ಟುಸುಲಭವಲ್ಲಆಕಾಶದ ಮನಸ್ಸಿನ ಆಳ ಅಗಲ ಅರಿಯುವುದು! ತೇಲಿದ್ದು ಸಾಕೆಂದು ಸುರಿದವೊ?ಬರುವ ದಾರಿಯಲ್ಲೇ ಕರಗಿದವೊ?ಎಲೆಯ ತುದಿಯಲ್ಲಿ ನಿಂತು ತೂಗುವಹನಿಗಳ ನಡುಕವನ್ನು ಓದಿದಷ್ಟುಸುಲಭವಲ್ಲಬೀಳದ ಹನಿಯ ಕನಸು ಅರ್ಥಮಾಡಿಕೊಳ್ಳುವುದು! ನೆಲ ಮುಟ್ಟದ ಮಳೆಹನಿಯ ವ್ಯಥೆಮೋಡದೊಳಗೆ ಉಳಿದ ಮಳೆಹನಿಯ ಮಾತುಯಾರ ಕಿವಿಗು ಸಂಪೂರ್ಣ ಕೇಳುವುದಿಲ್ಲ! ಯಾರೋ ಕೊಡೆ ಬಿಚ್ಚಿ ಹಿಡಿದು ನಡೆದರು!ಯಾರೋ ಕೈಚಾಚಿ ನೆನೆಯುತ್ತ ನಿಂತರು!ಯಾರೋ ಮನೆಮಬೆಯ ಕಿಟಕಿಯ ಗಾಜಿನ ಮೇಲೆತಮ್ಮ ಏಕಾಂತ ಬರೆದು ಜಾರಿಹೋದರು!ಮಳೆ ಸದಾ ಏಕಾಂಗಿಮಳೆಯಿಂದ ಒದ್ದೆಯಾದನೆಲದ ಮನ ಮನೆಗಳ ಕಥೆಗಳು ಮಾತ್ರ ಬೇರೆ ಬೇರೆ! ಮಳೆಗೆ ನೆಲದ ಮೇಲೆ ಪ್ರೇಮವಿತ್ತೊ?ಬರುವ ಬಾನ ದಾರಿಯಲ್ಲೇ ಕರಗುವ ಆಸೆಯಿತ್ತೊ?ಭುವಿಯಲ್ಲಿ ನದಿಯಾಗುವ ದಾಹವಿತ್ತೊ?ಸಮುದ್ರ ಸೇರುವ ಪ್ರತಿಜ್ಞೆಯಿತ್ತೊ?ಮಳೆಯ ಉನ್ಮಾದ ಉಮ್ಮೇದುಗಳ ಬಲ್ಲವರಾರು?ಮಳೆಯಲ್ಲಿ ಸುಮ್ಮನೆ ನೆನೆದವರುಮತ್ತೆ ಮತ್ತೆ ಮಳೆಯನ್ನು ಕಾಯುವರು!ಅರ್ಧ ನೆನೆದವರುಆಕಾಶವನ್ನೇ ದೂರುವರು!ಮೋಡಗಳನ್ನೇ ಗದರಿಸುವರು! ಒಂದು ಹನಿನೆತ್ತಿ ಹಣೆ ಮೂಗು ಕೆನ್ನೆಈ ಎದೆಯ ಮೇಲೆ ಬಿದ್ದುನೆನಪಾಗುವುದು ಸಾಮಾನ್ಯವಲ್ಲ! ತೇವಗೊಂಡ ತುಮುಲಒಣಗಿದ ಮಣ್ಣಿಗು ಮರೆಯುವುದಿಲ್ಲ!ಮಳೆ ಬರೆಯುವಮಣ್ಣ ಕಥೆಗಳಿಗೆ ಯಾವತ್ತೂ ಅಂತ್ಯವಿಲ್ಲ!ಕಾಯುತ್ತಿರುವ ಹೃದಯಗಳಿಗುಮಳೆ ಹೊರತು ಸಂಪೂರ್ಣ ತೃಪ್ತಿಯಿಲ್ಲ! ಟಿ.ಪಿ.ಉಮೇಶ್ ಚಿತ್ರದುರ್ಗ

ಟಿ.ಪಿ.ಉಮೇಶ್ ಚಿತ್ರದುರ್ಗ ಅವರ ಕವಿತೆ “ಮಳೆಗೆ ನೆಲದ ಮೇಲೆ ಪ್ರೇಮವಿತ್ತೋ” Read Post »

ಕಾವ್ಯಯಾನ, ಗಝಲ್

ಡಾ ಅನ್ನಪೂರ್ಣ ಹಿರೇಮಠ ಅವರ ಗಜಲ್

ಕಾವ್ಯಸಂಗಾತಿ ಡಾ ಅನ್ನಪೂರ್ಣ ಹಿರೇಮಠ ಗಜಲ್ ದೇಹವೀಣೆಯಿದು ನಿಲ್ಲದೆ ಕಂಪಿಸುತಿದೆ ನೀ ನುಡಿಸದೇಮನ ಮಂದಾರವಿದು ತಾಪದಿ ಮರುಗುತಿದೆ ನೀ ಬರದೇ ನೆನಪಿನಂಗಳದ ತುಂಬ ಕನಸುಗಳ ಬಣ್ಣದ ರಂಗೋಲಿಜೀವತಂತಿಯಿದು ಬಿಗಿದು ಗಟ್ಟಿಗೊಂಡಿದೆ ನೀ ಬಾರಿಸದೇ ದುಃಖ ಉಮ್ಮಳಿಸಿ ಕಣ್ಣೀರ ಹನಿ ಧಾರೆಯಾಗಿ ಸುರಿಯುತಿವೆಸ್ಪರ್ಶಸುಖವಿಲ್ಲದೆ ರಕ್ತ ಹೆಪ್ಪುಗಟ್ಟಿ ಕೊಲ್ಲುತಿದೆ ನೀ ಸೋಕದೇ ತಂಗಾಳಿಯ ಚಾಮರವೂ ಸುಡುತಿದೆ ಕ್ಷಣ ಕ್ಷಣ ಪ್ರತಿಕ್ಷಣವಿರಹವೇದನೆ ಒಂದೇ ಸವನೇ ಬಾಧಿಸುತಿದೆ ನೀ ಸೇರದೇ ಬಾನ ಬಯಲಲ್ಲೆಲ್ಲಾ ಒಲವಿನೋಲೆಯ ಅಕ್ಷರಗಳ ಕಲರವಎದೆಪುಟದಚ್ಚಾದ ಪ್ರೇಮದ ಚಿತ್ರ ಕೊರೆಯುತಿದೆ ನೀ ಇರದೇ ಅಂತರಂಗದಲ್ಲೆಲ್ಲಾ ನಿನ್ನ ಪ್ರೀತಿ ಪರಿಮಳದ ನೀನಾದದ ಸದ್ದುಕನವರಿಕೆಯ ತರಂಗಗಳ ಭೋಗ೯ರೆತ ಕೊಚ್ಚುತಿದೆ ನೀ ತಬ್ಬದೇ ಅನುಳ ಭಾವಬಿಂದಿಗೆಯಲಿ ಹೊಮ್ಮೊ ಬಯಕೆಗಳ ತೊಳಲಾಟಮುತ್ತಿನಾ ಕತ್ತು ಒತ್ತರಿಸಿ ಮೈಮರೆಸಿ ಮರುಗಿಸಿದೆ ನೀ ಕೂಡದೇಡಾ ಅನ್ನಪೂರ್ಣ ಹಿರೇಮಠ

ಡಾ ಅನ್ನಪೂರ್ಣ ಹಿರೇಮಠ ಅವರ ಗಜಲ್ Read Post »

ನಿಮ್ಮೊಂದಿಗೆ

ಕನಕ -ಷರೀಫ್ ಕಾವ್ಯ ಪುರಸ್ಕಾರಕ್ಕೆ ಸಾಹಿತಿ, ಎ. ಎಸ್. ಮಕಾನದಾರ ಆಯ್ಕೆ

ಪ್ರಶಸ್ತಿ ಸಂಗಾತಿ ಕನಕ -ಷರೀಫ್ ಕಾವ್ಯ ಪುರಸ್ಕಾರಕ್ಕೆ ಸಾಹಿತಿ, ಎ. ಎಸ್. ಮಕಾನದಾರ ಆಯ್ಕೆ ಕನಕ -ಷರೀಫ್ ಕಾವ್ಯ ಪುರಸ್ಕಾರಕ್ಕೆ ಸಾಹಿತಿ, ಎ. ಎಸ್. ಮಕಾನದಾರ ಆಯ್ಕೆ      ಗದಗ -5- ಹಿರಿಯ ಸಾಹಿತಿ, ಮಕಾನದಾರ ಸಾಹಿತ್ಯ ಪ್ರತಿಷ್ಠಾನ, ನಿರಂತರ ಪ್ರಕಾಶನದ ಸಂಚಾಲಕ ಎ. ಎಸ್. ಮಕಾನದಾರ ಅವರು 2024ನೇ ಸಾಲಿನ ರಾಜ್ಯ ಮಟ್ಟದ ಕನಕ -ಷರೀಫ್ ಪುರಸ್ಕಾರಕ್ಕೆ ಆಯ್ಕೆ ಆಗಿದ್ದಾರೆಂದು  ಆಯ್ಕೆ ಸಮಿತಿಯ ಅಧ್ಯಕ್ಷ, ಹಿರಿಯ ಬಂಡಾಯ ಸಾಹಿತಿ  ಡಾ. ಸತೀಶ್ ಕುಲಕರ್ಣಿ ಕಾರ್ಯಕ್ರಮದ ಸಂಚಾಲಕ ಪ್ರೊ. ರಂಜಾನ್ ಹೆಬಸೂರ್ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.     ದೊಡ್ಡಟ ಕಲೆಗೆ ಹೊಸ ಸ್ಪರ್ಶ ನೀಡಿದ ಹಿರಿಯ ರಂಗಕರ್ಮಿ ಉತ್ಸವ ರಾಕ್ ಗಾರ್ಡನ್ ನ ಸಂಸ್ಥಾಪಕರಾದರಾದ ಕಲಾ ಗುರು ಡಾ. ಟಿ.ಬಿ.ಸೊಲಬಕ್ಕನವರ ಅವರ 79ನೇ ಹುಟ್ಟುಹಬ್ಬದ ಸ್ಮರಣಾರ್ಥ ಶಿಗ್ಗಾವಿ ತಾಲೂಕಿನ ಉತ್ಸವ ರಾಕ್ ಗಾರ್ಡನ್ ನಲ್ಲಿ ಧಾರವಾಡ ಜಿಲ್ಲೆಯ ಹೆಬಸೂರ್ ನ ಉತ್ತರ ಸಾಹಿತ್ಯ ವೇದಿಕೆ ಸಂಯುಕ್ತ ಆಶ್ರಯ ದಲ್ಲಿ ರಾಜ್ಯ ಮಟ್ಟದ ಕವಿ ಗೋಷ್ಠಿ. ಗಜಲ್ ಗೋಷ್ಠಿ ಮತ್ತು ಪುಸ್ತಕ ಬಿಡುಗಡೆ ಸಮಾರಂಭ ದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವದುರಾಜ್ಯ ಮಟ್ಟದ ಕನಕ -ಷರೀಫ್ ಕಾವ್ಯ ಪ್ರಶಸ್ತಿ ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಸಲಹಾ ಸಮಿತಿ ಸದಸ್ಯ, ಹಿರಿಯ ಕವಿ ಡಾ. ಚನ್ನಪ್ಪ ಅಂಗಡಿ 2022ನೇ ಸಾಲಿಗೆ, ಶಿಂಧನೂರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಹಿರಿಯ ವಿಮರ್ಶಕ, ಡಾ. ಜಾಜಿ ದೇವೇಂದ್ರಪ್ಪ ಅವರು 2023ನೇ ಸಾಲಿಗೆ, ಕರ್ನಾಟಕ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪುರಸ್ಕಾರ ಪಡೆದ ನ್ಯಾಯಾಂಗ ಇಲಾಖೆಯ ನಿವೃತ್ತ ಉದ್ಯೋಗಿ ಹಿರಿಯ ಸಾಹಿತಿ ಎ ಎಸ್. ಮಕಾನದಾರ ಅವರು 2024ನೇ ಸಾಲಿಗೆ ಮತ್ತು ಹಿರಿಯ ಅನುವಾದಕಿ ಪತ್ರ ಕರ್ತೆ ಮಂಜುಳಾ ಕಿರುಗಾವಲು ಇವರು 2025 ನೇ ಸಾಲಿನ ಪುರಸ್ಕಾರ ಕ್ಕೆ ಭಾಜನರಾಗಿದ್ದಾಗಿ ಆಯ್ಕೆ ಸಮಿತಿಯ ಅಧ್ಯಕ್ಷ ಡಾ. ಸತೀಶ್ ಕುಲಕರ್ಣಿ, ಸದಸ್ಯರಾದ ಅಬ್ದುಲ್ ಹೈ ತೋರಣಗಲ್ಲು, ಶ್ರೀಶೈಲ ಮಾದಣ್ಣವರ, ರಂಜಾನ್ ಹೆಬಸೂರ, ದೀಪಾ ಗೋನಾಳ ಡಾ. ವೇದಾ ರಾಣಿ ದಾಸನೂರ ಮುಂತಾದವರು ಆಯ್ಕೆ ಸಮಿತಿಯಲ್ಲಿದ್ದರು ಈ ಪೂರ್ವ ಕನಕ -ಷರೀಫ್ ಪ್ರಶಸ್ತಿಗೆ  ಹಾವೇರಿ ಜಿಲ್ಲೆಯ ವಿಜಯ ಕಾಂತ್ ಪಾಟೀಲ್, ಗಜಲ್ ಕವಿ ಕೊಪ್ಪಳ ಜಿಲ್ಲೆಯ ಅಲ್ಲಾ ಗಿರಿರಾಜ್, ದಾವಣಗೆರೆ ಜಿಲ್ಲೆಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದ ಮುಖ್ಯ ಆಡಳಿತಾಧಿಕಾರಿ, ಕವಿ ಬಿ. ಶ್ರೀನಿವಾಸ್, ಆಕಾಶವಾಣಿ ಧಾರವಾಡ ಕೇಂದ್ರದ ನಿರ್ದೇಶಕ, ಕತೆಗಾರ ಬೆಳಗಾವಿ ಜಿಲ್ಲೆಯ ಡಾ. ಬಸು ಬೇವಿನ ಗಿಡದ ಅವರು ಭಾಜನರಾಗಿದ್ದನ್ನಿಲ್ಲಿ  ಸ್ಮರಿಸಬಹುದು.

ಕನಕ -ಷರೀಫ್ ಕಾವ್ಯ ಪುರಸ್ಕಾರಕ್ಕೆ ಸಾಹಿತಿ, ಎ. ಎಸ್. ಮಕಾನದಾರ ಆಯ್ಕೆ Read Post »

ಅಂಕಣ ಸಂಗಾತಿ, ಒಬ್ಬ ಅಮ್ಮನ ಕಥೆ

ಧಾರಾವಾಹಿ ಸಂಗಾತಿ-124 ರುಕ್ಮಿಣಿ ನಾಯರ್ ಒಬ್ಬ ಅಮ್ಮನ ಕಥೆ ಮೊಮ್ಮಕ್ಕಳು ಬಂದ ಖುಶಿ ಆಸ್ಪತ್ರೆಗೆ ಬಂದ ಸುಮತಿಯ ಎರಡನೇ ಮಗಳು ಸಂಜೆ ವಾರ್ಡಿಗೆ ಕಾಫಿ-ಬ್ರೆಡ್ ಬಂದಾಗ ಸರತಿಯಲ್ಲಿ ನಿಂತು ಪಡೆದುಕೊಂಡು ಅಮ್ಮನಿಗೆ ಕೊಟ್ಟಳು. ಕಾಫಿ ಕುಡಿದು ತಾಯಿ ಮಲಗಿದ ನಂತರ ವಾರ್ಡಿನ ಹೊರಗಿನ ವೆರಾಂಡಾದ ಮೆಟ್ಟಿಲಿನ ಮೇಲೆ ಕುಳಿತು ತನ್ನ ಪಠ್ಯ ಪುಸ್ತಕವನ್ನು ತೆರೆದು ಓದಲು ಪ್ರಾರಂಭಿಸಿದಳು. ಓದಿನಲ್ಲಿ ಸಂಪೂರ್ಣ ಮಗ್ನಳಾಗಿದ್ದ ಅವಳ ಕುತ್ತಿಗೆಯನ್ನು ಎರಡು ಪುಟ್ಟ ಕೈಗಳು ಬಿಗಿಯಾಗಿ ಅಪ್ಪಿಕೊಂಡವು. ತಿರುಗಿ ನೋಡಿದಾಗ ತನ್ನ ಹಿಂದೆ ತುಂಟತನದಿಂದ ನಗುತ್ತಾ ನಿಂತಿದ್ದ ಅಕ್ಕನ ಮಗನನ್ನು ಕಂಡಳು. ತಲೆ ಎತ್ತಿ ನೋಡಿದಾಗ ಬಾವ ಹಾಗೂ ಮಗುವನ್ನು ಎತ್ತಿಕೊಂಡು ನಿಂತಿರುವ ಅಕ್ಕನನ್ನು ಕಂಡಳು. ಅವಳಿಗೆ ಬಹಳ ಆನಂದವಾಯಿತು. ಅಕ್ಕನ ಮಗನನ್ನು ಎತ್ತಿಕೊಂಡು…”ಬನ್ನಿ…ಅಮ್ಮ ಈಗತಾನೇ ಮಲಗಿದ್ದಾಳೆ”…ಎಂದು ಹೇಳುತ್ತಾ ಅಕ್ಕ-ಬಾವನನ್ನು ಒಳಗೆ ಕರೆದುಕೊಂಡು ನಡೆದಳು. ಅಕ್ಕನ ಕಂಕುಳಲ್ಲಿ ಇದ್ದ ಪುಟ್ಟ ಮಗು ಚಿಕ್ಕಮ್ಮನ ಕಡೆಗೆ ಎತ್ತಿಕೋ ಎನ್ನುವಂತೆ ಎರಡೂ ಕೈಗಳನ್ನು ಚಾಚಿತು. ಅಕ್ಕನ ಮಗನ ಕೆನ್ನೆಯನ್ನು ಮೃದುವಾಗಿ ಸವರುತ್ತಾ… “ಪುಟ್ಟಾ ನೀನು ಇಲ್ಲಿ ಕುಳಿತು ಅಜ್ಜಿಯನ್ನು ಎಬ್ಬಿಸು….ನಾನು ನಿನ್ನ ತಂಗಿಯನ್ನು ಎತ್ತಿಕೊಳ್ಳುತ್ತೇನೆ”… ಎಂದ ಚಿಕ್ಕಮ್ಮನ ಮಾತಿಗೆ… “ಹೂಂ”….ಎಂದ ಆ ಮಗು ಖುಷಿಯಿಂದ ಅಜ್ಜಿಯ ಪಕ್ಕ ಕುಳಿತು…..”ಅಮ್ಮಾಮ್ಮಾ…ಣೀಚೇ…ಞಾಯೀ.. ವನ್ನಿಟ್ಟುಂಡ್”….( ಅಜ್ಜೀ ಎದ್ದೇಳು ನಾನು ಬಂದಿದ್ದೇನೆ) ಎಂದು ತೊದಲು ನುಡಿಯಲು, ಮೊಮ್ಮಗನ ಧ್ವನಿ ಕೇಳಿ ಎಚ್ಚೆತ್ತ ಸುಮತಿ ಎದ್ದು ಕುಳಿತು ಮೊಮ್ಮಗನನ್ನು ಅಪ್ಪಿಕೊಂಡಳು. ಹಿರಿಯ ಮಗಳು, ಪುಟ್ಟ ಮೊಮ್ಮಗಳು ಮತ್ತು ಅಳಿಯ ಎಲ್ಲರನ್ನೂ ಕಂಡು ಸುಮತಿ ಹರ್ಷಿತವಾದಳು. ಅಳಿಯನನ್ನು ಉದ್ದೇಶಿಸಿ ಅಲ್ಲಿಯೇ ಇದ್ದ ಸ್ಟೂಲ್ ನ ಮೇಲೆ ಕುಳಿತುಕೊಳ್ಳುವಂತೆ ಹೇಳಿದಳು.  ಅಳಿಯ ‘ಹ್ಮೂ’ಎಂದು ತಲೆಯಾಡಿಸಿ ಸ್ಟೂಲ್ ಮೇಲೆ ಕುಳಿತುಕೊಂಡ. ಹಿರಿಯಮಗಳು ಅಮ್ಮನ ಪಕ್ಕದಲ್ಲಿಯೇ ಕುಳಿತುಕೊಂಡಳು. ಮೊಮ್ಮಗ ಅಜ್ಜಿಯ ತೊಡೆಯನ್ನು ಏರಿ ಕುಳಿತುಕೊಂಡ….”ಅಜ್ಜಿಗೆ ಹುಷಾರಿಲ್ಲ ಕಂದಾ… ಬೆಡ್ ಮೇಲೆ ಕುಳಿತುಕೋ”…. ಎಂದು ಸುಮತಿಯ ಅಳಿಯ ತನ್ನ ಮಗನಿಗೆ ಹೇಳಿದರೂ ಅವನು ಕೇಳಲಿಲ್ಲ. …”ಉಹೂಂ… ಞಾ…. ಇವೀಡೆಯೇ ಇಚ್ಚಾಂ”… (ನಾನು ಇಲ್ಲಿಯೇ ಕುಳಿತುಕೊಳ್ಳುತ್ತೇನೆ) ಎಂದು ಹೇಳುತ್ತಾ ಅಜ್ಜಿಯ ಮುಖವನ್ನೊಮ್ಮೆ ನೋಡಿದ. ಸುಮತಿ ಪ್ರೀತಿಯಿಂದ ಮೊಮ್ಮಗನ ಕೆನ್ನೆಗೆ ಹೂ ಮುತ್ತೊಂದನ್ನು ಕೊಟ್ಟು….”ಕುಳಿತುಕೊಳ್ಳಲಿ ತೊಂದರೆಯಿಲ್ಲ”…. ಎಂದು ಹೇಳುತ್ತಾ ಮೊಮ್ಮಗನ ತಲೆಯನ್ನು ನೇವರಿಸಿದಳು.‌ ಅಳಿಯ ಒಂದು ಕ್ಷಣ ಏನನ್ನೋ ಯೋಚಿಸುತ್ತಾ …”ಅಮ್ಮಾ ಹೇಗಿದ್ದೀರಿ?…ಎಂದು ಕೇಳಿದಾಗ….”ಪರವಾಗಿಲ್ಲಪ್ಪ”… ಎಂದು ಉತ್ತರಿಸಿದಳು ಸುಮತಿ…. “ಡಾಕ್ಟರ್ ಏನು ಹೇಳಿದರು ಅಮ್ಮಾ”…..ಎಂದು ಹಿರಿಯ ಮಗಳು ಸುಮತಿಯನ್ನು ಕೇಳಲು,…”ಸ್ವಲ್ಪ ದಿನ ಇಲ್ಲಿದ್ದು ಔಷಧೋಪಚಾರ ತೆಗೆದುಕೊಂಡರೆ ಸರಿ ಹೋಗುತ್ತದೆ ಎಂದು ಡಾಕ್ಟರ್ ಹೇಳಿದ್ದಾರೆ”….ಎಂದು ಹೇಳುತ್ತಾ ಸುಮತಿ ಎರಡನೇ ಮಗಳ ಕಡೆಗೆ ನೋಡಿದಳು. ಅಕ್ಕನ ಮಗಳನ್ನು ಎತ್ತಿಕೊಂಡು ಅವಳನ್ನು ಮುದ್ದು ಮಾಡುತ್ತಿದ್ದ ಎರಡನೇ ಮಗಳ ಮುಖ ಅಮ್ಮನ ಮಾತು ಕೇಳಿ ಮ್ಲಾನವಾಯಿತು. ಇದನ್ನು ಗಮನಿಸಿದ ಹಿರಿಯ ಮಗಳು ತಂಗಿಯ ಕಡೆಗೆ ನೋಡುತ್ತಾ….”ಏನು ಹೇಳಿದರು ಡಾಕ್ಟರ್?…ನೀನೇಕೆ ಹೀಗೆ ಇದ್ದಕ್ಕಿದ್ದ ಹಾಗೆ ಮಂಕಾದೆ”…. ಎಂದು ಕೇಳಲು ಆಮೇಲೆ ಹೇಳುತ್ತೇನೆ ಎಂಬಂತೆ ಸನ್ನೆ ಮಾಡಿದಳು. ಸುಮತಿ ಇದ್ಯಾವುದನ್ನೂ ಗಮನಿಸದೇ ಮೊಮ್ಮಗನ ಬಾಲಭಾಷೆಯನ್ನು ಕೇಳುವುದರಲ್ಲೇ ಮಗ್ನಳಾಗಿದ್ದಳು.  ತನ್ನ ಅಣ್ಣ ಅಜ್ಜಿಯ ತೊಡೆಯ ಮೇಲೆ ಕುಳಿತು ಮುದ್ದು ಮಾಡಿಸಿಕೊಳ್ಳುತ್ತಿರುವುದನ್ನು ಕಂಡ ಅವನ ಪುಟ್ಟ ತಂಗಿ ತಾನೂ ಅಜ್ಜಿಯ ಬಳಿ ಹೋಗುತ್ತೇನೆ ಎನ್ನುವಂತೆ ಚಿಕ್ಕಮ್ಮನ ತೋಳಿಂದ ಕೆಳಗೆ ಇಳಿಯುವ ಪ್ರಯತ್ನ ಮಾಡುತ್ತಿದ್ದಳು. ಅದನ್ನು ಗಮನಿಸಿದ ಸುಮತಿ…. “ಬಾ ನನ್ನ ಮುದ್ದು ಮೊಮ್ಮಗಳೇ…. ಅಜ್ಜಿಯ ತೊಡೆ ಮೇಲೆ ಕುಳಿತುಕೋ”… ಎಂದು ಹೇಳುತ್ತಾ ಮೊಮ್ಮಗಳನ್ನು ಎತ್ತಿಕೊಂಡು ಮಗುವಿನ ಕೆನ್ನೆಗೆ ಮುತ್ತಿಟ್ಟಳು. ಮೊಮ್ಮಕ್ಕಳ ಜೊತೆ ಕಾಲ ಕಳೆಯುತ್ತಾ ಸುಮತಿ ತನ್ನ ಅನಾರೋಗ್ಯದ ಆಯಾಸವನ್ನು ಮರೆತಳು. ಅವರಿಬ್ಬರನ್ನು ಮುದ್ದಾಡುತ್ತಾ ಅವಳಿಗೆ ಸಮಯ ಹೋದದ್ದೇ ತಿಳಿಯಲಿಲ್ಲ. ವಾರ್ಡಿನ ಬಾಗಿಲಿನ ಮುಂದೆ ಆಸ್ಪತ್ರೆಯ ಊಟದ ತಳ್ಳುಗಾಡಿ ಬಂದು ನಿಂತಿತು. ಅಡುಗೆಯವ…..” ಎಲ್ಲರೂ ಬನ್ನಿ ಬೇಗ ಊಟ ತೆಗೆದುಕೊಳ್ಳಿ”…. ಎಂದು ಕೂಗಿದ. ಸುಮತಿಯ ಎರಡನೇ ಮಗಳು ಊಟದ ತಟ್ಟೆ ಹಾಗೂ ಒಂದು ಬಟ್ಟಲನ್ನು ಹಿಡಿದು ಸರತಿಯ ಸಾಲಿನಲ್ಲಿ ನಿಂತಳು. ರಾತ್ರಿಯ ಊಟಕ್ಕೆ ಅನ್ನ ಮತ್ತು ಸಾರು ಇತ್ತು. ಮಧ್ಯಾಹ್ನದ ಊಟಕ್ಕೆ ಅನ್ನ ಸಾರು ಒಂದು ಮೊಟ್ಟೆ ಎರಡು ಬಾಳೆಹಣ್ಣು ಆಸ್ಪತ್ರೆಯಿಂದ ಕೊಡುತ್ತಿದ್ದರು. ಅಡುಗೆಯವರು ಊಟ ಬಡಿಸಿದಾಗ ಅದನ್ನು ತೆಗೆದುಕೊಂಡು ಬಂದು ಅಲ್ಲಿದ್ದ ಸಣ್ಣ ಕಪಾಟಿನ ಮೇಲೆ ಮತ್ತೊಂದು ತಟ್ಟೆಯಿಂದ ಮುಚ್ಚಿಟ್ಟಳು….”ಬನ್ನಿ ಮಕ್ಕಳೇ…. ಅಜ್ಜಿ ಊಟ ಮಾಡಲಿ…. ನಾವು ಈಗ ಮನೆಗೆ ಹೋಗೋಣ…. ನಾಳೆ ಮತ್ತೆ ಅಜ್ಜಿಯನ್ನು ನೋಡಲು ಅಮ್ಮನ ಜೊತೆ ನೀವಿಬ್ಬರೂ ಇಲ್ಲಿಗೆ ಬರಬಹುದು”… ಎಂದು ಹೇಳಿ, ಹೆಂಡತಿಯ ಕಡೆಗೆ ತಿರುಗಿ ಹೋಗೋಣವೇ ಎಂಬಂತೆ ನೋಡಿದ. ಪತಿಯ ನೋಟದ ಅರ್ಥವನ್ನು ಅರಿತ ಸುಮತಿಯ ಹಿರಿಯ ಮಗಳು ‘ಸರಿ’ ಎನ್ನುವ ತಲೆ ಆಡಿಸಿ ಮಗಳನ್ನು ಸುಮತಿಯ ಮಡಿಲಿನಿಂದ ಎತ್ತಿಕೊಂಡಳು.  ಆ ಪುಟ್ಟ ಮಗು ತಾನು ಬರುವುದಿಲ್ಲವೆಂದು ಹಠ ಮಾಡಿತು. ಮೊಮ್ಮಗನೂ ಅಜ್ಜಿಯ ಕುತ್ತಿಗೆಯನ್ನು ಬಿಗಿಯಾಗಿ ಅಪ್ಪಿಕೊಂಡು ಞಾಯಿ…ವನ್ನಿಲ್ಲ….ಅಮ್ಮಾಮ್ಮೆಡೆ ಕೂಡೆ ಇಚ್ಚಾಂ….(ನಾನು ಬರುವುದಿಲ್ಲ ಅಜ್ಜಿಯ ಜೊತೆ ಇಲ್ಲೇ ಇರುತ್ತೇನೆ) ಎಂದು ಹೇಳಿದ. ಅವನನ್ನು ಪುಸಲಾಯಿಸಿ ಕರೆದುಕೊಂಡು ಹೋಗಲು ಅಳಿಯ ಹರಸಾಹಸ ಪಡಬೇಕಾಯಿತು…._ನಾಳೆ ಮತ್ತೆ ಬರೋಣ”… ಎಂದು ಹೇಳಿದಾಗ ಒಲ್ಲದ ಮನಸ್ಸಿನಿಂದ ವಾರ್ಡಿನ ಬಾಗಿಲಿನಿಂದ ಆಚೆ ಮರೆಯಾಗುವವರೆಗೂ ಅಜ್ಜಿಯನ್ನೇ ನೋಡುತ್ತಾ ಅಪ್ಪ ಅಮ್ಮನ ಜೊತೆಗೆ ಹೋದ. ಮೊಮ್ಮಕ್ಕಳನ್ನು ಕಳುಹಿಸಲು ಸುಮತಿಗೆ ಮನಸ್ಸಿಲ್ಲದಿದ್ದರೂ ಮತ್ತೆ ಬರುತ್ತಾರೆ ಅಲ್ಲವೇ ಎನ್ನುವ ಕಾರಣದಿಂದ ಕಳುಹಿಸಿಕೊಟ್ಟಳು.‌….”ಅಮ್ಮ ಈಗ ಊಟ ಮಾಡು…. ನರ್ಸ್ ಬಂದು ಔಷಧಿ ಕೊಡುವ ಸಮಯವಾಯಿತು…. ತಡ ಮಾಡಬೇಡ”… ಎಂದ ಮಗಳ ಮಾತಿಗೆ ತಲೆಯಾಡಿಸಿ, ಊಟದ ತಟ್ಟೆಯನ್ನು ಅವಳ ಕೈಯಿಂದ ಪಡೆದಳು. ತಾಯಿ ಊಟ ಮುಗಿಸಿದ ನಂತರ ಅಲ್ಲಿಯೇ ತಟ್ಟೆಯಲ್ಲಿ ಕೈ ತೊಳೆಯಲು ನೀರನ್ನು ಕೊಟ್ಟಳು. ಆಸ್ಪತ್ರೆಯ ಕೈ ತೊಳೆಯುವ ಜಾಗ ಸ್ವಲ್ಪ ದೂರ ಇದ್ದಿದ್ದರಿಂದ ದಿನವೂ ಹೀಗೆ ತಟ್ಟೆಯಲ್ಲಿ ಕೈ ತೊಳೆಯಲು ಹೇಳುತ್ತಿದ್ದಳು. ನಂತರ ತಾನು ಹೋಗಿ ಶುಚಿಯಾಗಿ ತಟ್ಟೆಯನ್ನು ತೊಳೆದುಕೊಂಡು ಬಂದು ಇಡುತ್ತಿದ್ದಳು. ನರ್ಸ್ ಬಂದು ರಾತ್ರಿಯ ಔಷಧಿಯನ್ನು ಕೊಟ್ಟರು. ಔಷಧಿಯನ್ನು ಕುಡಿದು ಸುಮತಿ ದಿಂಬನ್ನು ಬೆನ್ನಿನ ಹಿಂದೆ ಇಟ್ಟು ಒರಗಿ ಕುಳಿತುಕೊಂಡಳು. ತಾಯಿಯ ಹಾಸಿಗೆ ಪಕ್ಕದಲ್ಲಿಯೇ ಸ್ಟೂಲನ್ನು ಎಳೆದುಕೊಂಡು ಮಗಳು ಕುಳಿತುಕೊಂಡು ತಾಯಿಯ ಹಸ್ತವನ್ನು ತನ್ನ ಎರಡೂ ಕರಗಳಲ್ಲಿ ಹಿಡಿದುಕೊಂಡ ತಾಯಿಯ ಮುಖವನ್ನೇ ಎವೆಯಿಕ್ಕದೇ ದಿಟ್ಟಿಸಿ ನೋಡಿದಳು.

Read Post »

You cannot copy content of this page

Scroll to Top