ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com
ಇತರೆ

“ದೊಡ್ಡ ಸಿರಿ – ಹೃದಯ ಸಿರಿ” ಜಯಶ್ರೀ.ಜೆ. ಅಬ್ಬಿಗೇರಿ

ವಿಶೇಷ ಸಂಗಾತಿ ಜಯಶ್ರೀ.ಜೆ. ಅಬ್ಬಿಗೇರಿ “ದೊಡ್ಡ ಸಿರಿ – ಹೃದಯ ಸಿರಿ” ಒಬ್ಬ ವ್ಯಕ್ತಿ ಅವನ ಗೆಳೆಯನ ಮನೆಗೆ ಬಂದಿದ್ದ. ‘ಈ ಮನೆ ಯಾರದು?’ ಎಂದು ಗೆಳೆಯನಿಗೆ ಕೇಳಿದ. ವ್ಯಕ್ತಿ ಹೇಳಿದ ‘ಇದು ನನ್ನದೇ ಮನೆ ಎಂದು. ಅದನ್ನು ಕೇಳಿದ ಅಡುಗೆ ಮನೆಯಲ್ಲಿದ್ದ ಆ ವ್ಯಕ್ತಿಯ ಪತ್ನಿ ಮುಗುಳುನಗೆಯನ್ನು ಬೀರಿ ಸುಮ್ಮನಾದಳು. ಏಕೆಂದರೆ ಆ ಮನೆಯನ್ನು ಆಕೆಯ ತಂದೆ ಅಂದರೆ ಮಾವ ಕಾಣಿಕೆಯಾಗಿ ನೀಡಿದ್ದ. ಆದ್ದರಿಂದ ಆತನ ಪತ್ನಿ ಮುಗುಳ್ನಗೆ ಬೀರಿ ತನ್ನದೆಂದು ಹೇಳುತ್ತಾನೆ ಹೇಳಲಿ ಎಂದು ಮೌನವಾದಳು. ಹಾಗೆಯೇ ಎಲ್ಲವನ್ನೂ ನಾವು ನಿಸರ್ಗದಿಂದ ಪಡೆದು, ಈ ಮನೆ ನನ್ನದು ಈ ಹೊಲ ನನ್ನದು ಕಣ್ಣಿಗೆ ಕಂಡಿದ್ದೆಲ್ಲ ನನ್ನದು ಎಂದು ಹೇಳುತ್ತೇವೆ. ‘ನಾನು ಆಗರ್ಭ ಶ್ರೀಮಂತ.’ ಎಂದು ಜಂಭದಿAದ ಹೇಳಲು ಮುಂದಾಗುತ್ತೇವೆ. ಇದನ್ನು ಕೇಳಿದ ನಿಸರ್ಗದೇವತೆ ಮರಳು ಮಾನವ ಏನೂ ತಿಳಿಯದೇ ಹೇಳುತ್ತಾನೆಂದು ಮೌನ ವಹಿಸುತ್ತಾಳೆ.ಕೂಡಿಡುವ ಸ್ವಭಾವಬರುವಾಗ ಏನೂ ತಂದಿಲ್ಲ ಹೋಗುವಾಗ ಏನೂ ಒಯ್ಯುವುದಿಲ್ಲ ಅಂತ ಗೊತ್ತಿದ್ದರೂ ಭೂಮಾತೆಯ ಗರ್ಭವನ್ನು ಬಗೆದು ಕಾಡುಗಳನ್ನು ಕಡಿದು ಪ್ರಾಣಿಗಳನ್ನು ತನ್ನ ಲಾಭಕ್ಕೆ ಉಪಯೋಗಿಸಿಕೊಂಡು ಸ್ವಾರ್ಥ ಜೀವನ ನಡೆಸುವ ಪ್ರಕೃತಿ ಮಾತೆ ಮುನಿಸಿಕೊಂಡಾಗ ಮನುಷ್ಯನದ್ದು ಏನೂ ನಡೆಯುವುದಿಲ್ಲ. ಸೃಷ್ಟಿಯಲ್ಲಿರುವ ಯಾವ ಪ್ರಾಣಿಗಳು ತನಗೆ ಹೊಟ್ಟೆ ತುಂಬಿದ ಮೇಲೆ ಯಾವ ಪ್ರಾಣಿಗಳನ್ನು ಭೇಟಿ ಆಡಲು ಹೋಗುವುದಿಲ್ಲ. ತನ್ನ ಗಾತ್ರಕ್ಕಿಂತ ೧೫೦ ಪಟ್ಟು ಜಾಸ್ತಿ ಭಾರವನ್ನು ಹೊರುವ ಇರುವೆ ಸಕ್ಕರೆ ಡಬ್ಬದ ಸುತ್ತ ಸುತ್ತುತ್ತಿದ್ದರೂ ಸಕ್ಕರೆ ಡಬ್ಬಿಯನ್ನು ಹೊತ್ತಯ್ಯುವ ಯೋಜನೆ ಹಾಕುವುದಿಲ್ಲ. ಮಳೆಗಾಲದಲ್ಲಿ ಆಹಾರ ಅಭಾವ ಕಾಡುವುದೆಂದು ಮುಂದಾಲೋಚನೆಯಿAದ ಸಂಗ್ರಹ ಮಾಡುತ್ತದೆ. ಆದರೆ ಮುಂದಿನ ಪೀಳಿಗೆಗೆ ಆಗುವಷ್ಟು ಬೇಕೆಂದು ದುರಾಸೆಯಿಂದ ಹೆಚ್ಚೆಚ್ಚು ಕೂಡಿಡುವುದಿಲ್ಲ. ಆದರೆ ಮನುಷ್ಯ ಮಾತ್ರ ಬೇಡವಾದಾಗಲೂ ತಿನ್ನುವ, ಅವಶ್ಯಕತೆ ಇಲ್ಲದಿರುವಾಗಲೂ ಕೊಳ್ಳುವ, ತನಗೆ ಎಲ್ಲವೂ ಸಿಗಬೇಕೆನ್ನುವ, ತನ್ನ ಹತ್ತಿರ ಎಲ್ಲವೂ ಅತ್ಯಧಿಕ ಪ್ರಮಾಣದಲ್ಲಿರಬೇಕೆಂದು ಕೂಡಿಡುವ ಸ್ವಭಾವ ಹೊಂದಿದ್ದಾನೆ.ಹಣವಿದ್ದರೆ?ಅರೆ! ಇದೇನು ಶ್ರೀಮಂತಿಕೆ ಯಾರಿಗೆ ಬೇಡ ಹೇಳಿ ಅಂತಿರೇನು? ಪ್ರತಿಯೊಬ್ಬರೂ ಅದನ್ನು ತಮ್ಮದಾಗಿಸಿಕೊಳ್ಳಬೇಕೆಂದೇ ಹಗಲು ರಾತ್ರಿ ಹಂಬಲಿಸುತ್ತಾರೆ. ಬಹುಶಃ ಅದರ ಹಿಂದೆ ಬೀಳದವರು ಬಹುತೇಕ ಇಲ್ಲವೆಂದರೂ ಅತಿಶಯೋಕ್ತಿ ಏನಲ್ಲ. ಸಿರಿತನ ಒಂದಿದ್ದರೆ ಸಾಕು ಮನದಲ್ಲಿಯ ಬಯಕೆಗಳನ್ನೆಲ್ಲ ಈಡೇರಿಸಬಹುದು. ನಮ್ಮವರಿಗೆ ಏನೇನು ಬೇಕೋ ಅದನ್ನು ಅವರು ಬಾಯಿ ತೆಗೆಯುವ ಮುನ್ನವೇ ಕಣ್ಮುಂದೆ ಹಿಡಿಯಬಹುದು. ನಮ್ಮಲ್ಲಿ ಹಣವಿದ್ದರೆ ಎಲ್ಲ. ಇಲ್ಲದಿದ್ದರೇನೂ ಇಲ್ಲ ಎನ್ನುವ ಮನೋಭಾವ ಬೇರೂರಿ ಬಿಟ್ಟಿದೆ. ಲಕ್ಷಿö್ಮದೇವಿಯ ಮಹಿಮೆಗೆ ಮರಳಾಗದವರು ಯಾರಿದ್ದಾರೆ? ಹಣವಂತನ ಜೀವನದಲ್ಲಿ ಯಾವ ಸಮಸ್ಯೆಗಳೂ ಇರುವುದಿಲ್ಲ ಎಂಬ ಸುಳ್ಳು ಸಂಗತಿ ಬೇರೆ ತಲೆಯಲ್ಲಿ ಅಚ್ಚಳಿಯದಂತೆ ಅಚ್ಚೊತ್ತಿದೆ. ಶ್ರೀಮಂತಿಕೆ.ಶ್ರೀಮAತಿಕೆ ಅನ್ನುವುದು ಗೆಲುವಿನಂತೆ ವ್ಯಾಖ್ಯಾನಿಸುವುದು ಸುಲಭವಲ್ಲ. ಏಕೆಂದರೆ ಒಬ್ಬೊಬ್ಬರು ಒಂದೊAದು ಅರ್ಥ ಕೊಡುತ್ತಾರೆ. ಸಾಮಾನ್ಯವಾಗಿ ಬಹುತೇಕರು ಹೇಳುವುದು ಕೈ ತುಂಬ ಹಣ ಕೈಗೊಂದು ಆಳು ಕಾಲಿಗೊಂದು ಆಳು ಇದ್ದರೆ ಅವರು ಶ್ರೀಮಂತರು. ಮನೆಯಲ್ಲಿ ಲಕ್ಚಿö್ಮÃ ನೆಲೆಸಿರಬೇಕು. ಸಿರಿ-ಸಂಪತ್ತು ಆಸ್ತಿ ಐಶ್ವರ್ಯ ಹಣಕಾಸಿನ ಸಮೃದ್ಧತೆ ಯಾವುದಕ್ಕೂ ಕೊರತೆ ಇರಬಾರದು. ಲೆಕ್ಕ ಹಾಕದೇ ಖರ್ಚು ಮಾಡುವಷ್ಟು ಹಣವಿರಬೇಕು. ಐಷಾರಾಮಿ ಬದುಕು ಸಾಗಿಸಲು ಯಾವುದೇ ಅಡೆತಡೆ ಇರಬಾರದು. ಏನೇ ಬೇಕಾದರೂ ಕೊಂಡುಕೊಳ್ಳುವ ಶಕ್ತಿ ಇರಬೇಕು. ಬಯಸಿದ್ದನ್ನೆಲ್ಲ ಚಿಟಿಕೆ ಹೊಡೆಯುವಷ್ಟರಲ್ಲಿ ಪಡೆಯವುದು. ಬಂಧು ಬಾಂಧವರ ಮುಂದೆ ನಾವು ಹೆಂಗಿದಿವಿ ನೋಡಿ ಅಂತ ಗರ್ವದಿಂದ ಮೆರೆಯಬೇಕು.ಮಾನದಂಡಹೀಗೆ ಶ್ರೀಮಂತಿಕೆಯ ಬಗೆಗೆ ವಿವಿಧ ರೀತಿಯ ಅಭಿಪ್ರಾಯಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಇದನ್ನೆಲ್ಲ ನೋಡಿದಾಗ ಶ್ರೀಮಂತಿಕೆ ಎಂಬುದು ಕೇವಲ ಹಣಕಾಸಿನ ಶ್ರೀಮಂತಿಕೆಯೇ? ಎಂಬ ಪ್ರಶ್ನೆ ಹುಟ್ಟುತ್ತದೆ. ಶ್ರೀಮಂತಿಕೆಯನ್ನು ಅಳೆಯಲು ಹಣಕಾಸಿನ ಒಂದೇ ಒಂದು ಮಾನದಂಡ ಸಾಕೇ? ಎಂಬ ಪ್ರಶ್ನೆಯೂ ಅದರ ಬೆನ್ನ ಹಿಂದೆಯೇ ಹುಟ್ಟಿಕೊಳ್ಳುತ್ತದೆ. ದೈಹಿಕ, ಮಾನಸಿಕ ಸ್ಥಿತಿಗತಿ ಇವು ಯಾವವೂ ಲೆಕ್ಕಕ್ಕೆ ಬರುವುದಿಲ್ಲವೇ ಎಂಬ ಸಂದೇಹವೂ ಬರುತ್ತದೆ.ಆರೋಗ್ಯ ಸಂಪತ್ತುಮೇಲ್ನೋಟಕ್ಕೆ ಹಣಕಾಸಿನ ಸ್ಥಿತಿಗತಿ ಸಿರಿವಂತಿಕೆಯನ್ನು ನಿರ್ಧರಿಸುತ್ತದೆ ಹೌದಾದರೂ ವಾಸ್ತವವಾಗಿ ಹೇರಳ ಹಣವೊಂದೇ ಶ್ರೀಮಂತಿಕೆಯಲ್ಲ. ಕುಬೇರನ ವಂಶಸ್ತನೇ ಇರಬೇಕು ಎನ್ನುವಷ್ಟು ಶ್ರೀಮಂತಿಕೆ ಇದ್ದರೂ ದೇಹ ರೋಗದ ಗೂಡಾಗಿದ್ದರೆ ಬಯಸಿದ್ದನ್ನು ಬಾಯಿಗೆ ಹಾಕದೇ ಕೊರಗಬೇಕಾಗುತ್ತದೆ. ಕಣ್ಮುಂದೆ ಏನೆಲ್ಲ ಇದ್ದರೂ ತಿನ್ನುವ ಭಾಗ್ಯ ಅವನಿಗಿರುವುದಿಲ್ಲ. ಅವನ ಪಾಲಿಗೆ ಔಷಧಿಯೇ ಆಹಾರ ಇಲ್ಲಿ ನಾನು ಹೇಳ ಹೊರಟಿದ್ದು ಇಷ್ಟೆ ಹಣದಿಂದ ಔಷಧಿಯನ್ನು ಕೊಳ್ಳಬಹುದು ಆದರೆ ಆರೋಗ್ಯವನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ಹಿರಿಯರು ಹೇಳಿದ್ದು ಆರೋಗ್ಯ ಸಂಪತ್ತಿಗಿAತ ದೊಡ್ಡ ಸಂಪತ್ತಿಲ್ಲವೆAದು.ಹಣವಿದ್ದೂ , , , ,ಹಣಕಾಸಿನ ಅನುಕೂಲತೆ ಇದ್ದು, ಆರೋಗ್ಯ ಚೆನ್ನಾಗಿದ್ದು ಮನಸ್ಸಿಗೆ ನೆಮ್ಮದಿ ಇಲ್ಲದಿದ್ದರೆ ಬದುಕು ಸಾಕ್ಷಾತ್ ನರಕ ದರ್ಶನ. ಹಣದಿಂದ ಒಂದೊಳ್ಳೆ ಹಾಸಿಗೆಯನ್ನು ಕೊಳ್ಳಬಹುದು. ಆದರೆ ನಿದ್ದೆಯನ್ನಲ್ಲ. ಒಳ್ಳೆಯ ಮನೆ ಕೊಂಡುಕೊಳ್ಳಬಹುದು. ಆತ್ಮೀಯರ ಪ್ರೀತಿ ವಿಶ್ವಾಸ ಕೊಂಡುಕೊಳ್ಳಲು ಸಾಧ್ಯವಿಲ್ಲ. ಹಣವಿದ್ದು ಅದನ್ನು ಉಳಿಸುವ ಬೆಳೆಸುವ ಜ್ಞಾನವಿರದಿದ್ದರೆ ಸಿರಿವಂತಿಕೆ ಅಧೋಗತಿ ಕಾಣುವುದು ಖಂಡಿತ. ಹಣದಿಂದ ಪುಸ್ತಕವನ್ನು ಕೊಳ್ಳಬಹುದೇ ಹೊರತು ಜ್ಞಾನವನ್ನಲ್ಲ. ಇವೆಲ್ಲ ಉದಾಹರಣೆಗಳಿಂದ ತಿಳಿದು ಬರುವುದೇನೆಂದರೆ ಹಣವೊಂದೇ ಸಿರಿವಂತಿಕೆಯಲ್ಲ. ಯಾರಿಗೆ ಯಾವುದು ಇಲ್ಲವೋ ಅದನ್ನು ಪಡೆದುಕೊಳ್ಳಲು ಹೋರಾಡಿ ಪಡೆಯುವುದು ಶ್ರೀಮಂತಿಕೆ.ಕೃಷಿಮನುಷ್ಯರಿಗೆ ಹೋಲಿಸಿದರೆ ಲಕ್ಷಾಂತರ ಪಟ್ಟು ಚಿಕ್ಕದಿರುವ ಇರುವೆಯ ಬದುಕಿನಿಂದ ನಾವು ಕಲಿಯಬೇಕಾದ್ದು ಬಹಳ ಇದೆ. ಯಶಸ್ವಿ ಸಹಬಾಳ್ವೆ, ವ್ಯವಸ್ಥಿತ, ಅತ್ಯಂತ ಸಮರ್ಥ ಜೀವನ ಕೌಶಲವನ್ನು ಅಳವಡಿಸಿಕೊಳ್ಳಬೇಕಿದೆ. ಇತ್ತೀಚಿನ ಶೋಧಗಳ ಪ್ರಕಾರ ಪ್ರಸ್ತುತ ಧರೆಯಲ್ಲಿ ಸುಮಾರು ೧೨೦೦೦ ಇರುವೆ ಪ್ರಭೇದಗಳಿವೆ. ೮೦೧ ಕೋಟಿ ಜನರ ಪ್ರತಿಯೊಬ್ಬರಿಗೂ ಸರಾಸರಿ ಹನ್ನೆರಡುವರೆ ಲಕ್ಷ ಇರುವೆಗಳು. ಇಷ್ಟು ದೊಡ್ಡ ಸಂಖ್ಯೆಯಲ್ಲಿವೆ. ಈ ಅಲ್ಪಗಾತ್ರದ ಜೀವಿ ಬೆರಗು ಹುಟ್ಟಿಸುವ ಕೌತುಕಗಳಿಂದ ಕೂಡಿದೆ. ಪ್ರಕೃತಿಗೆ ಇರುವೆಗಳಿಂದ ಮಹತ್ತರ ಕೊಡುಗೆಯೂ ಇದೆ. ಇಡೀ ಜೀವಲೋಕದಲ್ಲಿ ಕೃಷಿ ಕೆಲಸ ಕೈಗೊಳ್ಳುವ ಏಕೈಕ ಮನುಷ್ಯೇತರ ಪ್ರಭೇದ ಇರುವೆ ಲೋಕದಲ್ಲಿದೆ. ರೈತ ಇರುವೆ ಎಂದೇ ಹೆಸರಾಗಿರುವ ಈ ಇರುವೆಗಳು ನಿಧಿಷ್ಟ ಸಸ್ಯಗಳ ಎಲೆಗಳನ್ನು ಕತ್ತರಿಸಿ ಸಾಗಿಸಿ ಗೂಡಿನಲ್ಲಿ ರಾಶಿ ಹಾಕುತ್ತವೆ. ಆ ಎಲೆ ರಾಶಿಯ ಮೇಲೆ ವಿಶಿಷ್ಟ ಶಿಲೀಂದ್ರಗಳನ್ನು ಬಿಟ್ಟು ಆಹಾರ ತಯಾರಿಸಿಕೊಳ್ಳುತ್ತವೆ. ಆಧುನಿಕ ಮನುಷ್ಯ ಪ್ರಕೃತಿ ಪ್ರೇಮಿಯಾಗಿ ಬಾಳಬೇಕಿದೆ.ಕಾರಣಪರಿಸರ ಸ್ನೇಹಿ ಬದುಕನ್ನು ಬದುಕುವ ಇರುವೆಗಳಂತೆ ನಾವು ಆಪತ್ಕಾಲಕ್ಕೆ ಮಾತ್ರ ಕೂಡಿಡುವ ಸ್ವಭಾವವನ್ನು ಬೆಳೆಸಿಕೊಳ್ಳಬೇಕು. ನಮ್ಮ ಬಳಿ ಎಷ್ಟು ಹಣವಿದೆ ಎಂದು ನಮಗೆ ತಿಳಿರುತ್ತದೆ. ಆದರೆ ನಮ್ಮ ಬಳಿ ಎಷ್ಟು ಸಮಯವಿದೆ ಎಂದು ನಮಗೆ ತಿಳಿದಿಲ್ಲ. ಸಮಯ ಬರುವ ಮುನ್ನ ಶ್ರೀಮಂತಿಕೆಯ ಭ್ರಮೆಯಲ್ಲಿ ಬದುಕುವುದನ್ನು ಬಿಡಬೇಕು. ಜಗತ್ತಿನ ಎಲ್ಲ ಸಮಸ್ಯೆಗಳಿಗೆ ಎಲ್ಲವೂ ನನಗೆ ಬೇಕು ಎಂಬ ಭಾನೆಯೇ ಕಾರಣವಾಗಿದೆ. ಈ ಭಾವ ನಾಶವಾದಾಗ ಮಾತ್ರ ಉತ್ತಮ ಸಮಾಜದ ನಿರ್ಮಾಣ ಸಾಧ್ಯ. ಮನಸ್ಸು ಸುಮಧುರ ಸ್ಥಿತಿಯಲ್ಲಿದ್ದಾಗ ಆರೋಗ್ಯಕರ ಭಾವನೆಗಳು ಹೊರಹೊಮ್ಮುತ್ತವೆ.ದೊಡ್ಡ ಸಿರಿ ಶ್ರೀಮಂತರೆAದು ಅಟ್ಟಹಾಸ ಮೆರೆದವರು ಯಾರೂ ಜನಮಾನಸದ ನೆನಪಿನಲ್ಲಿ ಉಳಿದಿಲ್ಲ. ಹೃದಯ ಸಿರಿವಂತರು ಮಾತ್ರ ಜನರ ಹೃದಯಗಳನ್ನು ಗೆದ್ದಿದ್ದಾರೆ. ಭಾವ ಮಾಧುರ್ಯದ ಶ್ರೀಮಂತಿಕೆಯಿAದ ಕೂಡಿರುವ ಜೀವನ ಜನಪ್ರಿಯವಾಗುತ್ತದೆ ಎಂಬುದನ್ನು ಮರೆಯುವಂತಿಲ್ಲ. ಸಿರಿವಂತಿಕೆ ಕೇವಲ ಪಡೆಯುವುದರÀಲ್ಲಿಲ್ಲ. ಅವಶ್ಯವಿರುವವರಿಗೆ ದಾನ ಮಾಡುವುದರಲ್ಲಿದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದರಲ್ಲಿದೆ. ಚೂರಾದ ಮನಗಳನ್ನು ಪೋಣಿಸೋಣ. ಇನ್ನಾದರೂ ಎಚ್ಚೆತ್ತುಕೊಂಡು ಹೃದಯಸಿರಿಯೇ ದೊಡ್ಡ ಸಿರಿಯೆಂದು ಸರಿಯಾಗಿ ತಿಳಿದುಕೊಂಡು ಒಬ್ಬರಿಗೊಬ್ಬರು ಅಕ್ಕರೆಯ ಸಕ್ಕರೆಯ ತಿನಿಸುತ್ತ ಮಾನವೀಯತೆಯ ಸಿರಿವಂತಿಕೆಯನ್ನು ಮೆರೆಯೋಣವಲ್ಲವೇ? ಜಯಶ್ರೀ.ಜೆ. ಅಬ್ಬಿಗೇರಿ

“ದೊಡ್ಡ ಸಿರಿ – ಹೃದಯ ಸಿರಿ” ಜಯಶ್ರೀ.ಜೆ. ಅಬ್ಬಿಗೇರಿ Read Post »

ಇತರೆ

“ವಿಶ್ವ ಹಾಲು ಪೂರೈಕೆ ಹಾಗೂ ಭಾರತದಲ್ಲಿ ಮಹಿಳಾ ಸಬಲೀಕರಣ” ವಿಶೇಷ ಲೇಖನ ಎನ್.ವಿ.ರಮೇಶ್

ಮಹಿಳಾ ಸಂಗಾತಿ ಎನ್.ವಿ.ರಮೇಶ್ “ವಿಶ್ವ ಹಾಲು ಪೂರೈಕೆ ಹಾಗೂ ಭಾರತದಲ್ಲಿ ಮಹಿಳಾ ಸಬಲೀಕರಣ” “ನಾವು ಹಿಂದಿನ ಗ್ರಾಮೀಣ ಮಹಿಳೆಯರಲ್ಲ – ಇಂದು ವಿಶ್ವ ಮಾನ್ಯತೆ ಪಡೆದವರು” “ಪುಟ್ಟಮರಿ ಪುಟ್ಟಮರಿ ಏನು ಮಾಡುವೆ?ಹಾಲು ಕುಡಿದು ಗಟ್ಟಿಯಾಗಿ ನಾನು ಆಡುವೆ” ಹಾಡಿನ ಈ ಸಾಲುಗಳನ್ನು ಕೇಳಿದಾಗ ನಿಮ್ಮ ಕಣ್ಣು ಮುಂದೆ ಏನು ಬರುತ್ತದೆ? ಕೃಷ್ಣನ ಬಾಲರೂಪದಲ್ಲಿ ನಾವು ಅನೇಕ ಚಿತ್ರಗಳಲ್ಲಿ, ಕ್ಯಾಲೆಂಡರ್‌ಗಳಲ್ಲಿ, ಹಾಲು ಕುಡಿಯುತ್ತಾ, ಕೈಯಲ್ಲಿ ಬೆಣ್ಣೆ ಹಿಡಿದುಕೊಂಡಿರುವ ಮುದ್ದು ಬಾಲಕೃಷ್ಣನ ಚಿತ್ರ ನಮ್ಮ ಕಣ್ಣ ಮುಂದೆ ಬರುತ್ತದೆ. ಹಿಂದಿನ ಕಾಲದಲ್ಲಿ ಮಕ್ಕಳಿಗೆ ಹುಟ್ಟಿದ ನಂತರ ತಾಯಿಯ ಹಾಲು, ನಂತರ ಮೇಲಿನ(ಹಸುವಿನ) ಹಾಲು ಹಾಗೂ ಮೂರರಿಂದ ಐದು ವರ್ಷವಾಗುವವರೆಗೆ ಪ್ರತಿನಿತ್ಯ ಹಸಿವಿನ ಹಾಲನ್ನು ಕೊಡುತ್ತಿದ್ದರು.ಈ ಸಂದರ್ಭದಲ್ಲಿ ಮಕ್ಕಳಿಗೆ ಹಾಲು ಕೊಡುವ ತಾಯಂದಿರ ಜೊತೆಗೆ ಈ ಹಾಲು ಉತ್ಪಾದಿಸುವ ಹೈನುಗಾರಿಕೆಯ ಕ್ಷೇತ್ರದಲ್ಲಿ ಅನೇಕ ಭಾರತೀಯ ಮಹಿಳೆಯರಿದ್ದಾರೆ. ಮಹಿಳೆಯರ ಸಬಲೀಕರಣ ಎಂದು ಗಮನಿಸಿದಾಗ ಭಾರತದ ಸಾವಿರಾರು ಹಳ್ಳಿಗಳಲ್ಲಿ ಮಹಿಳೆಯರು ಹೈನುಗಾರಿಕೆ ಕ್ಷೇತ್ರದಲ್ಲಿ ತಮ್ಮನ್ನು ತಾವೇ ತೊಡಗಿಸಿಕೊಂಡು ವೈಯಕ್ತಿಕವಾಗಿ ಅಥವಾ ಸಾಮೂಹಿಕವಾಗಿ ಸಹಕಾರ ತತ್ವದ ಡೈರಿಗಳ ಮೂಲಕ ತಾವು, ತಮ್ಮ ಕುಟುಂಬ, ತಮ್ಮ ಹಳ್ಳಿ ಇವುಗಳನ್ನು ಅಭಿವೃದ್ಧಿಪಡಿಸಿರುವುದಲ್ಲದೇ ರಾಷ್ಟಿçÃಯ ಅಭಿವೃದ್ಧಿಗೂ ಸತತ ತಮ್ಮ ಹಾಲು ಕೊಡುತ್ತಾ, ಪುರುಷರೊಂದಿಗೆ ಸರಿಸಮಾನವಾಗಿ ಹೈನುಗಾರಿಕೆ ಕ್ಷೇತ್ರದ ಅಭಿವೃದ್ಧಿಯ ಅರಿಕಾರರಾಗಿದ್ದಾರೆ. ಈಗಲೂ ಎಷ್ಟೋ ಜನ ಬೆಳಗ್ಗೆ ಒಂದು ಗ್ಲಾಸ್ ಹಾಲು ಕುಡಿಯುತ್ತಾರೆ. ಹಾಗೂ ರಾತ್ರಿ ಮಲಗುವ ಮುಂಚೆ ಒಂದು ಲೋಟ ಬಿಸಿಹಾಲನ್ನು ಕುಡಿದು ಮಲಗುವ ಪದ್ಧತಿ ಬಹಳ ಜನರಲ್ಲಿದೆ. ಸ್ವಲ್ಪ ನೆಗಡಿ, ಕೆಮ್ಮು, ಮೈಕೈನೋವಿದ್ದರೆ, ರಾತ್ರಿ ಮಲಗುವ ಮೊದಲು ಕುಡಿಯುವ ಒಂದು ಗ್ಲಾಸ್ ಹಾಲಿಗೆ ಕೊಂಚ ಅರಿಶಿನ, ಒಂದೆರಡು ಜಜ್ಜಿದ ಮೆಣಸು ಹಾಕಿ ಕುಡಿದರೆ, ಚೆನ್ನಾಗಿ ರಾತ್ರಿ ನಿದ್ದೆ ಬರುವುದಲ್ಲದೇ ಬೆಳಗ್ಗಿನ ಹೊತ್ತಿಗೆ ಆರೋಗ್ಯ ಸುಧಾರಿಸಿಕೊಳ್ಳುತ್ತದೆ ಎಂಬ ಅನುಭವ ನನ್ನಂತಹವರದು. ಆರೋಗ್ಯ ರಕ್ಷಣೆಗೆ ಹಾಲು ಪರಿಪೂರ್ಣ ಆಹಾರ ಎಂದು ತಜ್ಞರು ಹೇಳುತ್ತಾರೆ. ನಂತರದ ಕಾಲದಲ್ಲಿ ಹಸು/ಎಮ್ಮೆ ಹಾಲಿಗೆ ಪರ್ಯಾಯವಾಗಿ ಅನೇಕ ಕೃತಕ ಹಾಲಿನ ಪುಡಿಗಳು, ಸುವಾಸನೆ ಬೀರುವ ಹಾಲು, ಇವೆಲ್ಲಾ ಮಾರುಕಟ್ಟೆಗೆ ಬಂದಿವೆ. ಈ ಹಿನ್ನೆಲೆಯಲ್ಲಿ ಇಡೀ ವಿಶ್ವದಲ್ಲಿ ಜೂನ್ ಒಂದರಂದು “ವಿಶ್ವ ಹಾಲಿನ ದಿನ”ವನ್ನು ಆಚರಿಸುತ್ತಾರೆ. ಹೀಗಾಗಿ ಈ ದಿನದ ಮಹತ್ವವನ್ನು ಸಂಕ್ಷಿಪ್ತವಾಗಿ ಈಗ ತಿಳಿಯೋಣ. ಜೂನ್ ಒಂದರಂದು ವಿಶ್ವದಾದ್ಯಂತ ಆಚರಿಸುವ ವಿಶ್ವ ಹಾಲು ದಿನಾಚರಣೆ ಯಂದು ಹಾಲು ಹಾಗೂ ಅದಕ್ಕೆ ಸಂಬಂಧಪಟ್ಟ ಹೈನುಗಾರಿಕೆ ವಿಭಾಗದ ಬಗ್ಗೆ ಕೊಂಚ ಗಮನಿಸೋಣ.ಈ ದಿನಾಚರಣೆಯ ಕೇಂದ್ರೀಕೃತ ಗಮನವು ಜನರ ಪಥ್ಯ-ಆಹಾರದಲ್ಲಿಯ ಹಾಲಿನ ಮಹತ್ವದ ಅರಿವಿನ ಬಗ್ಗೆ ಇದೆ. ಒಂದೆಡೆ ನಮ್ಮ ಆಹಾರ ಉತ್ಪಾದನೆಯ ಮೇಲೆ ಹಾಲಿನ ಪರಿಣಾಮ ಗಮನಿಸಿದರೇ ಇನ್ನೊಂದೆಡೆ ಹೈನುಗಾರಿಕೆಯಲ್ಲಿ ಇರುವವರ ಜೀವನ ಮಟ್ಟದ ಬಗ್ಗೆ ಇದೆ. ಹಾಲಿನ ಉತ್ಪನ್ನಗಳಾದ, ಮೊಸರು, ಬೆಣ್ಣೆ, ಚೀಸ್, ಪನ್ನೀರ್ ಇವೆಲ್ಲಾ ನಮ್ಮ ದೇಹಕ್ಕೆ ಅವಶ್ಯಕವಾದ ಜೀವಸತ್ವಗಳು, ಖನಿಜಗಳು, ಇವುಗಳನ್ನು ಪೂರೈಸಿ ನಮ್ಮ ಜೀವನಶೈಲಿಯನ್ನು ಆರೋಗ್ಯವಂತ ಜೀವನಕ್ಕೆ ಕೊಂಡೊಯ್ಯುವುದು. ಹಾಲು ನಮ್ಮ ಮೂಳೆಗಳ ರಕ್ಷಣೆಗೆ ಬೇಕಾದ ಕ್ಯಾಲ್ಸಿಯಂನ್ನು ಕೊಡುತ್ತದೆ. ಅಲ್ಲದೇ ನಮಗೆ ಬೇಕಾದ ಉತ್ತಮ ಗುಣಮಟ್ಟದ ಸಸಾರಜನಕ, ಅತ್ಯಾವಶ್ಯಕವಾದ ಬಿ-೧೨ ಹಾಗೂ ಡಿ ಜೀವಸತ್ವಗಳನ್ನು ಪೂರೈಸುತ್ತದೆ. ಅಲ್ಲದೇ ಇದು ಹೃದಯ ರೋಗ, ಮಂಡಿಯ ಮೂಳೆ ಸವೆಯುವುದು, ಹಾಗೂ ಮಧುಮೇಹ-೨ ಇವುಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಅಲ್ಲದೇ ಹಾಲು ಪೋಟ್ಯಾಸಿಯಂದ ಉತ್ತಮ ಮೂಲವಾಗಿದ್ದು, ಇದು ರಕ್ತದ ಒತ್ತಡವನ್ನು ನಿಯಂತ್ರಿಸುತ್ತದೆ. ೨೦೨೫ರಲ್ಲಿ ಚಿಲಿ ದೇಶದ ಸಾಂಟಿಯಾಗೋದಲ್ಲಿ ನಡೆದ ಐ.ಡಿ.ಎಫ್. ವಿಶ್ವ ಹೈನುಗಾರಿಕೆ ಸಮಾವೇಶದಲ್ಲಿ, ಭಾರತದ ರಾಷ್ಟಿçÃಯ ಡೈರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಮೀನೇಶ್ ಷಾಅವರು ತಮ್ಮ ಉಪನ್ಯಾಸದಲ್ಲಿ ಹೈನುಗಾರಿಕೆ ಕ್ಷೇತ್ರದಲ್ಲಿಯ ಮಹಿಳೆಯರ ಸಬಲೀಕರಣಕ್ಕಾಗಿ ಭಾರತ ದೇಶದ ಮುಖ್ಯ ಘಟ್ಟಗಳ ಬಗ್ಗೆ ಒತ್ತಿ ಹೇಳಿದರು. ಭಾರತ ದೇಶದಲ್ಲಿ ವಿಶ್ವದಲ್ಲೇ ಅತ್ಯಂತ ದೊಡ್ಡ ಹಾಲು ಉತ್ಪಾದನೆಯನ್ನು ಸಾಧಿಸಿರುವುದರ ಜೊತೆಗೆ ದೇಶದಾದ್ಯಂತ ಗ್ರಾಮೀಣ ಸಮುದಾಯಗಳಲ್ಲಿಯ ಮಹಿಳೆಯರ ಸಾಮಾಜಿಕ ಪರಿವರ್ತನೆಗೆ ವೇಗ ದೊರತಿರುವುದರ ಬಗ್ಗೆ ಇವರು ವಿವರಿಸಿದರು. ನಮ್ಮ ದೇಶದಲ್ಲಿ ಸಣ್ಣ ಪ್ರಮಾಣದ ಕೃಷಿ ವ್ಯವಸ್ಥೆ ಇರುವುದರಿಂದ, ದೇಶದಲ್ಲಿಯ ೨,೩೦೦೦೦ ಗ್ರಾಮೀಣ ಹಾಲು ಸಹಕಾರ ಸಂಸ್ಥೆಗಳು ಹದಿನೆಂಟು ದಶಲಕ್ಷಕ್ಕಿಂತ ಹೆಚ್ಚು ಕುಟುಂಬಗಳಿಗೆ ಜೀವನ ನೀಡಿವೆ. ಸಹಕಾರಿ ಕ್ಷೇತ್ರದ ಸದಸ್ಯರಲ್ಲಿ ಮೊದಲು ೩೫% ಜನ ಮಹಿಳೆಯರಿದ್ದರು. ಇದು ಸತತವಾಗಿ ಬೆಳೆಯುತ್ತಾ ಒಟ್ಟೂ ಸದಸ್ಯತ್ವದಲ್ಲಿ ೫೦%ರಷ್ಟು ಈಗ ಮಹಿಳೆಯರಿದ್ದಾರೆ. ನಮ್ಮ ಪ್ರತಿನಿತ್ಯದ ಡೈರಿ ವ್ಯವಸ್ಥೆ ಬೇರೆ ದೇಶಗಳಿಗಿಂತ ಭಿನ್ನವಾಗಿದೆ. ಇದು ಸಣ್ಣ ಪ್ರಮಾಣದ ಹೈನುಗಾರಿಕೆ ಕೃಷಿ ವ್ಯವಸ್ಥೆ. ಇಲ್ಲಿ ಉತ್ಪಾದನೆ ಮಾಡುವವರು ಸಹಸ್ರಾರು ಜನ ೯೨% ಪ್ರಮಾಣ ಹೈನುಗಾರಿಕೆ ಕೃಷಿ ಮಾಡುವವರಲ್ಲಿ ೯೨% ಜನ ಒಂದರಿAದ ನಾಲ್ಕು ಹಸು ಅಥವಾ ಎಮ್ಮೆ ಹೊಂದಿದ್ದಾರೆ. ಇದು ೮೦ ದಶಲಕ್ಷ ಗ್ರಾಮೀಣ ಮನೆಗಳ ಜೀವನಕ್ಕೆ ಅನುಕೂಲ ಒದಗಿಸಿ ಕೊಟ್ಟಿದ್ದು, ಹಾಲಿನಿಂದ ಕುಟುಂಬದ ಸದಸ್ಯರಿಗೆ ಪೌಷ್ಠಿಕತೆ ದೊರೆಯುತ್ತಿದೆ. ಸಹಕಾರ ತತ್ವದ ಈ ಮಾದರಿ ಸದ್ಯದಲ್ಲಿ ಮಹಿಳಾ ಸಬಲೀಕರಣದ ಒಂದು ದಾರಿಯಾಗಿದೆ. ಇದು ಅವರವರ ಮನೆಗಳಲ್ಲೇ ಹೆಚ್ಚು ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರö್ಯ ಹಾಗೂ ಅಧಿಕಾರ ಕೊಡಿಸಿದೆ. ಅಲ್ಲದೇ ಡಿಜಿಟಲೀಕರಣ ಇವರಿಗೆ ಬ್ಯಾಂಕ್ ಖಾತೆ ಸಂಪರ್ಕ, ಅನನ್ಯತೆಯ ದೃಢೀಕರಣ ಕೊಟ್ಟಿರುವುದರಿಂದ ಹೆಚ್ಚು ಹೆಚ್ಚು ಮಹಿಳೆಯರು ಸಹಕಾರಿ ಸಂಸ್ಥೆಗಳ ಸದಸ್ಯರಾಗುತ್ತಿದ್ದಾರೆ. ಒಟ್ಟೂ ಸಹಕಾರಿ ಸಂಸ್ಥೆಗಳು ಪ್ರತಿದಿನ ೬೮ ದಶಲಕ್ಷ ಲೀಟರ್ ಹಾಲು ಸಂಗ್ರಹಿಸಿದರೆ ಮಹಿಳೆಯರು ೨೪ ದಶಲಕ್ಷ ಲೀಟರ್ ಹಾಲಿನ ತಮ್ಮ ಸಂಗ್ರಹದ ಪಾಲನ್ನು ಕೊಡುತ್ತಿದ್ದಾರೆ.ಮಹಿಳೆಯರಿಗೆ ಇದರಿಂದ ಸಂಪಾದನೆಗೆ ನೇರ ಮಾರ್ಗ ಸಿಕ್ಕಿದ್ದು, ಕುಟುಂಬದ ಕಲ್ಯಾಣಕ್ಕಾಗಿ, ಶಿಕ್ಷಣ, ಆರೋಗ್ಯ, ಉತ್ತಮ ಜೀವನ ಮಟ್ಟಗಳಿಗಾಗಿ ಅವರು ಈ ಹಣವನ್ನು ತೊಡಗಿಸಲು ಅವಕಾಶ ಸೃಷ್ಟಿಸಲಾಗಿದೆ. ಇದು ಮಹಿಳೆಯರ ವಿಶ್ವಾಸ ಹೆಚ್ಚು ಮಾಡಿ ಅವರು ಕುಟುಂಬ ಹಾಗೂ ಸಮುದಾಯಗಳ ವಿಷಯಗಳಲ್ಲಿ ನಿರ್ಧಾರ ಮಾಡುವ ಮುಖ್ಯ ಪಾತ್ರವನ್ನು ಕೊಟ್ಟಿದೆ. ಗಮನಿಸಿ ನೋಡಿದರೆ, ಹೈನುಗಾರಿಕೆಗೆ ಸಂಬAಧಪಟ್ಟ ಕೆಲಸಗಳಲ್ಲಿ ಶೇಕಡಾ ೬೦ ರಿಂದ ಶೇಕಡಾ ೯೫ ರವರೆಗೆ ಇವರು ಹೆಚ್ಚಿನ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಶೇಕಡಾ ೫೦ ರಷ್ಟು ನಿರ್ಧಾರ ತೆಗೆದುಕೊಳ್ಳುವಲ್ಲಿ ಇವರು ಸಫಲರಾಗಿದ್ದಾರೆ.ಇಡೀ ಜಗತ್ತಿನಲ್ಲಿ ವಿಶ್ವ ಹಾಲು ದಿನಗಳಂದು ಹಾಲು ಕರೆಯುವ ಪ್ರದರ್ಶನಗಳು, ಕೃಷಿ ಭೂಮಿಗೆ ಭೇಟಿ, ಆಟಗಳು, ಸ್ಪರ್ಧೆಗಳು, ಸಂಗೀತ ಕಾರ್ಯಕ್ರಮಗಳು, ಹಾಲಿನ ಉತ್ಪನ್ನಗಳ ಹಂಚಿಕೆ, ನಡೆಯುತ್ತವೆ. ಇದೇ ದಿನ ಹೆಚ್ಚಿನದನ್ನು ತಿಳಿದು ಕಲಿಯಲು ಹಾಗೂ ಅನುಭವಗಳನ್ನು ಹಂಚಿಕೊಳ್ಳಲು ಸಮಾವೇಶಗಳು ಹಾಗೂ ವಿಚಾರ ಸಂಕೀರ್ಣಗಳು ನಡೆಯುತ್ತವೆ.ನಮ್ಮ ದೇಶದಲ್ಲಿಯ ಹೈನುಗಾರಿಕೆ ವಿಭಾಗದಲ್ಲಿ ಮಹಿಳೆಯರ ಸಬಲೀಕರಣದ ಪ್ರಭಾವಕ್ಕೆ ಅಂತರ್ ರಾಷ್ಟಿçÃಯ ಮಾನ್ಯತೆ ಸಿಕ್ಕಿದ್ದು, ಐ.ಡಿ.ಎಫ್. ಸಂಶೋಧನಾ ಪ್ರಶಸ್ತಿ ಸಹ ಸಿಕ್ಕಿದೆ. ಸೃಜಾ ಉತ್ಪಾದನಾ ಸಂಘದ ಅಧ್ಯಕ್ಷರಾದ ಶ್ರೀದೇವಿ ಅವರನ್ನು ಗಮನಿಸಿದರೆ ಒಬ್ಬ ಸಾಮಾನ್ಯ ಹಾಲು ಉತ್ಪಾದಕರ ಸ್ಥಾನದಿಂದ ನಾಯಕರಾಗಿ ಮುಂದೆ ಬಂದಿರುವ ಇವರ ಪರಿವರ್ತನಾ ಪ್ರಯಾಣವನ್ನು ಗಮನಿಸಬಹುದು. ಇವರ ಮಗಳು ಈಗ ಅಮೆರಿಕಾದಲ್ಲಿ ಉಚ್ಛ ಶಿಕ್ಷಣ ಪಡೆಯುತ್ತಿದ್ದಾಳೆ. ಇಂತಹ ಹಲವಾರು ಉದಾಹರಣೆಗಳಿಂದ ಮಹಿಳೆಯರು ತಮ್ಮ ಸಾಂಪ್ರದಾಯಿಕ ಪಾತ್ರಗಳಿಗೆ ಹೊಸ ರೂಪವನ್ನು ಕೊಟ್ಟಿದ್ದಾರೆ. ಗ್ರಾಮೀಣ ಉತ್ಪಾದನಾ ಕಾರ್ಯದ ಬೇರಿನಿಂದ ಹೊರಟು ವಿಶ್ವದ ಮಾನ್ಯತೆಯನ್ನು ಪಡೆದಿದ್ದಾರೆ. ಇವರ ಅನುಭವಗಳಿಂದ ತಿಳಿಯುವುದೇನೆಂದರೆ, ಆರ್ಥಿಕ ಸಬಲೀಕರಣದ ಪ್ರಭಾವದಿಂದ ವಿಶಾಲ ಸಾಮಾಜಿಕ ಪರಿಣಾಮವನ್ನು ಹೊಂದಿ ಮುಖ್ಯ ಕ್ಷೇತ್ರಗಳಲ್ಲಿ ಮಹಿಳಾ ಭಾಗವಹಿಸುವಿಕೆಗೆ ಸತತ ಬೆಂಬಲ ದೊರೆಯಲು ಇವು ಕಾರಣೀಭೂತವಾಗಿವೆ. ಎನ್.ವಿ.ರಮೇಶ್

“ವಿಶ್ವ ಹಾಲು ಪೂರೈಕೆ ಹಾಗೂ ಭಾರತದಲ್ಲಿ ಮಹಿಳಾ ಸಬಲೀಕರಣ” ವಿಶೇಷ ಲೇಖನ ಎನ್.ವಿ.ರಮೇಶ್ Read Post »

ಅಂಕಣ ಸಂಗಾತಿ, ಅರ್ಜುನ ಉವಾಚ

ಧಾರಾವಾಹಿ ಸಂಗಾತಿ ಡಾ.ವಿಶ್ವನಾಥ್‌ ಎನ್‌ ನೇರಳೆಕಟ್ಟೆ ಅರ್ಜುನ ಉವಾಚ ಮದನಾರಿಯಂತಿತ್ತು ಮಣಿಪುರ ಮದನಾರಿಯಂತಿತ್ತು ಮಣಿಪುರ ಮಣಿಪುರವನ್ನು ನಾವು ಸೇರಿದ ವೇಳೆಗೆ ಮಳೆಯ ಮಣಿಗಳು ಗಗನಮುಖದಿಂದ ಧರಣಿವದನದೆಡೆಗೆ ಬೀಳುತ್ತಿದ್ದವು. ವರ್ಷ ಕಾಲ ಆರಂಭವಾಗಿತ್ತು. ಮಳೆಯ ನೀರಿಗಾಗಿಯೇ ಕಾದುಕುಳಿತಿದ್ದ ಚಾತಕ ಪಕ್ಷಿಗಳು ಹನಿಹನಿಗಳನ್ನು ಕುಡಿಯುತ್ತಿದ್ದ ಪರಿಯನ್ನು ಕಂಡು ಅಸೂಯೆಯನ್ನು ತಾಳದಾದವು ಹಂಸಗಳು. ತಮಗೆ ಸಲ್ಲಬೇಕಾದ ವರ್ಷಧಾರೆಯನ್ನು ಭೂಮಿ ಸೇರುವುದಕ್ಕೂ ಮೊದಲೇ ಕುಡಿದು ಮುಗಿಸುತ್ತಿವೆ ಚಾತಕ ಪಕ್ಷಿಗಳು ಎಂಬ ಮತ್ಸರ ಹಂಸಗಳಲ್ಲಿ. ಭರದಿಂದ ಓಡುತ್ತಿದ್ದವು ಆಚೆಗೆ.ಮಣಿಪುರದ ಸಮೃದ್ಧತೆಯನ್ನೇ ಕಾಣುತ್ತಾ ಬರುತ್ತಿದ್ದೆ ನಾನು. ಚಿನ್ನ ಬೆಳ್ಳಿಗಳ ಕೋಟೆಗಳಿದ್ದವು. ಮಾಣಿಕ್ಯ ವಜ್ರವೈಢೂರ್ಯಗಳಿಂದ ಮಾಡಲ್ಪಟ್ಟ ಕೊತ್ತಳಗಳ ಸಾಲುಗಳಿದ್ದವು. ಕೆಂಪು ಹವಳದ ತೋರಣಗಳಿದ್ದವು. ಮುತ್ತು ರತ್ನಗಳಿಂದ ನಿರ್ಮಿಸಲಾದ ಗೋಪುರಗಳಿದ್ದವು. ಚಿತ್ರಚಿತ್ತಾರಗಳಿಂದ ಶೋಭಿಸುತ್ತಿದ್ದವು ಅಲ್ಲಿಯ ದ್ವಾರಗಳು. ಹಗಲಿಗೆ ಹೆದರಿ ಚದುರಿಹೋಗಿದ್ದ ಬೆಳದಿಂಗಳು ಮಣಿಪುರವನ್ನು ಹೊಕ್ಕು, ಮುತ್ತಿಗೆ ಹಾಕಿ, ಯುದ್ಧಕ್ಕಾಗಿ ಕಾದು ಕುಳಿತಿರಲು ಅದರ ಜೊತೆಗಿನ ಯುದ್ಧಕ್ಕಾಗಿ ಇಲ್ಲಿಗೆ ಬಂದು ಇಡಿಯ ನಗರವನ್ನು ವಶಪಡಿಸಿಕೊಂಡಿದೆ ಎಳೆಬಿಸಿಲು ಎಂಬAತೆ ತೋರುತ್ತಿತ್ತು ಮಣಿಪುರದಲ್ಲಿದ್ದ ಸೌಧಗಳು, ಕೋಟೆಗಳು. ಬೆಳದಿಂಗಳ ಕಾಂತಿಯನ್ನು ಎತ್ತರೆತ್ತರದ ಸೌಧಗಳಲ್ಲಿ ಕಾಣಬಹುದಾಗಿತ್ತು. ಹೊಚ್ಚಹೊಸತಾದ ಚಿನ್ನದ ಕೋಟೆಗಳ ಹೊಳಪದು ಎಳೆಬಿಸಿಲಿನ ನೆನಪನ್ನು ಮೂಡಿಸುವಂತಿತ್ತು.ಶ್ರೇಷ್ಠವಾದ ಗಿರಿಶಿಖರಗಳನ್ನು ಮೀರಿಸುವಂತಿದ್ದ ಅಲ್ಲಿಯ ಚಿನ್ನದ ಗೋಪುರಗಳು ಹೆಣ್ಣಿನ ದಪ್ಪ ಮೊಲೆಯಂತೆ ತೋರಿದವು, ನನ್ನ ಕಣ್ಣಿಗೆ. ಲಾವಣ್ಯವತಿಯ ಬಾಹುಬಳ್ಳಿಯಂತೆ ಕಾಣುತ್ತಿತ್ತು ಅಲ್ಲಿಯ ರಾಜಮಾರ್ಗ. ಕಮಲಮುಖಿಯ ಸುಂದರ ವದನದಂತಿತ್ತು ಅರಮನೆ. ಮೇಲೆ ಹಾರಾಡುತ್ತಿದ್ದ ಧ್ವಜಗಳು ಮುಗುದೆಯ ಮುಂಗುರುಳನ್ನು ಜ್ಞಾಪಿಸುವಂತಿದ್ದವು. ಮದನಾರಿಯ ಮಣಿಹಾರವಾಗಿತ್ತು ಕಟ್ಟಿದ್ದ ತೋರಣಗಳು. ಕೋಟೆಗಳವು ಹೆಣ್ಣಿನ ಮೈಯ್ಯಲ್ಲಿ ಶೋಭಿಸುವ ಉಡುಗೆಯಿದ್ದ ಹಾಗೆ. ನಗರದ ಗಡಿಯದು ಸುಂದರಿಯ ಸೊಂಟವನ್ನಲAಕರಿಸುವ ಡಾಬು. ಅಲ್ಲಿನ ಶ್ವೇತವರ್ಣದ ಗೃಹಗಳು ಹೆಣ್ಣಿನ ದಂತಗಳು. ಮಣಿಪುರ ನಗರವದು ಚೆಲುವ ನಾರಿಯಂದದಿ ಗೋಚರವಾಯಿತು ನನ್ನ ದೃಷ್ಟಿಗೆ.ಅತೀವ ಜನಸಮೂಹವಿತ್ತು ನಗರದೊಳಗೆ. ಗುಂಪುಗುAಪಾಗಿ ನಗರವನ್ನು ಪ್ರವೇಶಿಸುವವರಿದ್ದರು. ಅಲ್ಲಿಂದ ತಂಡೋಪತAಡವಾಗಿ ಹೊರಹೋಗುವವರಿದ್ದರು. ಆನೆಗಳು, ಕುದುರೆಗಳು ಎಲ್ಲೆಡೆಯೂ ಕಾಣಸಿಗುತ್ತಿದ್ದವು. ಪುರಜನರು ತೋರುತ್ತಿದ್ದರು ದೆಸೆದೆಸೆಯಲ್ಲಿ. ಮಣಿಪುರದ ಅರಸನಾಗಿದ್ದವ ಬಭ್ರುವಾಹನ. ಇವನಿಗೆ ಅನುದಿನವೂ ಸಾವಿರ ಬಂಡಿಗಳಷ್ಟು ಧನಕನಕಗಳು ಸಲ್ಲುತ್ತಿದ್ದವು ರಾಜರ ಕಡೆಯಿಂದ. ನನ್ನ ಜೊತೆಯಲ್ಲಿದ್ದ ಹಂಸಧ್ವಜ ಅರಸನೂ ಸಹ ಬಭ್ರುವಾಹನನಿಗೆ ತಪ್ಪದೆಯೇ ಕಪ್ಪಕಾಣಿಕೆಗಳನ್ನು ಸಲ್ಲಿಸುವವನಾಗಿದ್ದ.“ಅಧಿಕ ಸೊಗಸಿನಿಂದ ಕಂಗೊಳಿಸುತ್ತಿದೆ ಈ ನಗರ. ಇದನ್ನಾಳುತ್ತಿರುವ ಅರಸ ಯಾರು? ಅವನು ಕುದುರೆಯನ್ನು ಕಟ್ಟಿ, ನಮ್ಮೊಡನೆ ಯುದ್ಧ ಹೂಡುವ ಮನಸ್ಸು ಮಾಡಿಯಾನೇ?” ಎಂದು ಪ್ರಶ್ನಿಸಿದೆ ಹಂಸಧ್ವಜನಲ್ಲಿ.ಮಣಿಪುರದರಸನ ಸಾಮರ್ಥ್ಯವನ್ನು ಬಣ್ಣಿಸತೊಡಗಿದ ಚಂಪಕಾ ನಗರಿಯ ದೊರೆ. “ಮಣಿಪುರವೆಂಬ ಈ ನಗರವನ್ನು ಪಾಲಿಸುತ್ತಿರುವವನು ಬಭ್ರುವಾಹನ ಎಂಬ ರಾಜ. ಸಮರ್ಥ ದೊರೆ ಎಂಬ ಪ್ರಸಿದ್ಧಿ ಪಡೆದವನವನು. ದೊರೆಗಳಲ್ಲಿ ಶ್ರೇಷ್ಠನೆನಿಸಿಕೊಂಡವನು. ಇವನ ಸಾಮರ್ಥ್ಯ ಸಾಧನೆಗಳನ್ನು ಒಪ್ಪಿಕೊಂಡ ಅರಸರು ಪ್ರತೀದಿನವೂ ತಪ್ಪದೆ ಸಾವಿರ ಬಂಡಿ ಕನಕವನ್ನು ತಂದೊಪ್ಪಿಸುತ್ತಾರೆ ಇವನಿಗೆ. ಒಂದುವೇಳೆ ಲೋಪವಾದರೆ ಶಿಕ್ಷೆಯಿತ್ತಾನು ಎಂಬ ಭೀತಿ ಎಲ್ಲರಲ್ಲಿಯೂ ಇದೆ” ಎಂದ ಹಂಸಧ್ವಜ, ಬಭ್ರುವಾಹನನ ಸಚಿವನ ಬಗೆಗೆ ಹೇಳತೊಡಗಿದ.“ಸುಬುದ್ಧಿಯೆಂಬ ಸಚಿವನಿದ್ದಾನೆ ಇವನಿಗೆ. ಈ ನಗರವನ್ನು ನಿಜಾರ್ಥದಲ್ಲಿ ಪಾಲಿಸುತ್ತಿರುವವನು ಅವನೇ. ಧರ್ಮಕ್ಕೆ ಒಂದಿಷ್ಟೂ ಚ್ಯುತಿ ಬಾರದ ರೀತಿಯಲ್ಲಿ ಆಡಳಿತವನ್ನು ನಡೆಸುತ್ತಿದ್ದಾನೆ. ಪ್ರಜೆಗಳ ಬಗೆಗೆ ಅನುರಾಗವನ್ನು ಇಟ್ಟುಕೊಂಡಿದ್ದಾನೆ. ಪುರದ ಜನರಿಗೆ ಸೌಖ್ಯ ನೀಡುವವರಾಗಿ ಗುರುತಿಸಿಕೊಂಡಿದ್ದಾರೆ ಈ ರಾಜ ಸಚಿವರು” ಎಂದ ಹಂಸಧ್ವಜನಿಗೆ ಬಭ್ರುವಾಹನನ ಸೇನೆಯ ಸಾಮರ್ಥ್ಯ ತಿಳಿದಿತ್ತು.ಒಂದೇ ಕಿವಿಯಿರುವ ಕಪ್ಪನೆಯ ಕುದುರೆಗಳು, ಶುದ್ಧ ಶ್ವೇತವರ್ಣದ ಆನೆಗಳು, ಚಿನ್ನದ ರಥಗಳು ಅಗಣಿತ ಸಂಖ್ಯೆಯಲ್ಲಿದ್ದವು ಮಣಿಪುರದಲ್ಲಿ. ಅವುಗಳ ಸಂಖ್ಯೆ ಅದೆಷ್ಟು ಎನ್ನುವುದು ಬಭ್ರುವಾಹನನ ಕರಣಿಕರಿಗೇ ತಿಳಿದಿರಲಿಲ್ಲ. ಉಳಿದ ಸಾಮಾನ್ಯ ಕುದುರೆ, ಆನೆ, ರಥಗಳ ಲೆಕ್ಕಾಚಾರವದು ಸುಲಭವಾಗಿ ಸಿಗುವಂತಿರಲಿಲ್ಲ. ಪರಾಕ್ರಮಶಾಲಿಯಾದ ಅರಸನಿವನು ಎನ್ನುವುದು ನನಗೆ ದೃಢವಾಯಿತು.ಮಣಿಪುರದಲ್ಲಿದ್ದ ಜನರೆಲ್ಲರೂ ಹರಿಭಕ್ತರಾಗಿದ್ದರು. ವೇದ ಶಾಸ್ತçಗಳನ್ನು ತಿಳಿದವರಾಗಿದ್ದರು. ಸತ್ಯವನ್ನೇ ನುಡಿಯುವ ವ್ರತವನ್ನು ಪಾಲಿಸುತ್ತಿದ್ದರು. ಕೋಪವನ್ನು ತೊರೆದವರಾಗಿದ್ದರು. ಅಹಿಂಸೆಯೆಡೆಗೆ ಮನಸ್ಸು ಮಾಡಿದ್ದರು. ತಮ್ಮನ್ನು ತಾವು ಚೆನ್ನಾಗಿ ಅರ್ಥಮಾಡಿಕೊಂಡವರಾಗಿದ್ದರು. ಕದನ ಸಮರ್ಥರಾಗಿದ್ದರು. ದಾನದ ಗುಣವಿತ್ತು. ಅಸೂಯೆ ಇದ್ದವರಲ್ಲ. ಅಲ್ಲಿಯ ಸಕಲ ನಾರಿಯರು ಪತಿವ್ರತೆಯರೆನಿಸಿಕೊಂಡಿದ್ದರು. ಹೀಗೆ ಸರ್ವ ಸಜ್ಜನರನ್ನೇ ಒಳಗೊಂಡ ಈ ನಗರವನ್ನು ಶ್ರೀಮನ್ನಾರಾಯಣ ಎರಡನೇ ವೈಕುಂಠವಿದು ತನ್ನ ಪಾಲಿಗೆ ಎಂಬ ಮಮಕಾರದಿಂದ ಪೊರೆಯುತ್ತಿದ್ದ.“ಬಭ್ರುವಾಹನನೆಂಬ ಈ ಬಲುವೀರ ಕಟ್ಟದಿರುತ್ತಾನೆಯೇ ಯಜ್ಞಾಶ್ವವನ್ನು!” ಎಂದ ಹಂಸಧ್ವಜ. ಹೀಗೆ ಅವನು ನುಡಿದ ಕ್ಷಣದಲ್ಲಿಯೇ ಹದ್ದೊಂದು ಹಾರಿಬಂದು ನನ್ನ ಕಿರೀಟದ ತುದಿಯಲ್ಲಿ ಕಾಲೂರಿ ಕುಳಿತಿತು. ನನ್ನ ಗಮನಕ್ಕಿದು ಬಂದಿರಲಿಲ್ಲ. ನನ್ನ ಜೊತೆಗಿದ್ದ ವೀರರು ವಿವರಿಸಿದರು ಇದನ್ನು. ಸೋಲಿನ ಸೂಚನೆಯಿದು ಎಂದು ನುಡಿದರವರು ಆತಂಕದಿAದ.ಹೀಗೆ ಚಿಂತೆಯ ಕಾರ್ಮೋಡವೊಂದು ನಮ್ಮನ್ನು ಕವಿದ ಕ್ಷಣದಲ್ಲಿಯೇ ಬಭ್ರುವಾಹನ ಅವನ ಸೇವಕರನ್ನು ಅಟ್ಟಿ, ನಮ್ಮ ಕುದುರೆಯನ್ನು ಕೊಂಡೊಯ್ದು, ಕಟ್ಟಿಸಿಯೇಬಿಟ್ಟ. ಡಾ.ವಿಶ್ವನಾಥ್‌ ಎನ್‌ ನೇರಳೆಕಟ್ಟೆ

Read Post »

ಕಾವ್ಯಯಾನ

ಮಾಲಾ ಚೆಲುವನಹಳ್ಳಿ ಅವರ”ಮಳೆಗೊಂದು ಮನವಿ”

ಕಾವ್ಯ ಸಂಗಾತಿ ಮಾಲಾ ಚೆಲುವನಹಳ್ಳಿ “ಮಳೆಗೊಂದು ಮನವಿ” ಬಾ ಮಳೆಯೇ ಬಾಕಂಗಾಲಾದ ರೈತರಬದುಕಿಗೆ ಬೆಂಗಾವಲಾಗಿ ಬಾ ಮಿಂಚುತ್ತಾ, ಗುಡುಗುತ್ತಾಆಮಿಷ ತೋರದೇ ಬಾ, ತೋರುತ್ತಾ, ಹಾರುತ್ತಾಹಂಗಿಸಿ, ಅಣಕಿಸದೇ ಬಾ, ನೊಂದು ಹೋದ  ರೈತರಬೆಂದೆದೆಯ ಬೃಂದಾವನ ಮಾಡು ಬಾ ನಿಕೃಷ್ಟವಾದ ಬಡವರಬದುಕ ಉಥ್ಕೃ ಷ್ಟವಾಗಿಸಲು ಬಾ, ಮೇರೆ ಮೀರಿ ಮೆರೆಯುತ್ತಿರುವಸೂರ್ಯನ ತಾಪ ನೀಗಿಸಲು ಬಾ, ಇಳೆಯರಸಿ ನಾ ಕಾಯುತಿರುವೆಮಳೆಯರಸ ನೀ ಬಂದು ಸೇರೆನ್ನ ಮಾಲಾ ಚೆಲುವನಹಳ್ಳಿ

ಮಾಲಾ ಚೆಲುವನಹಳ್ಳಿ ಅವರ”ಮಳೆಗೊಂದು ಮನವಿ” Read Post »

ಕಾವ್ಯಯಾನ, ಗಝಲ್

ಹಮೀದಾಬೇಗಂ ದೇಸಾಯಿ ಅವರ ಗಜಲ್

ಕಾವ್ಯಸಂಗಾತಿ ಹಮೀದಾಬೇಗಂ ದೇಸಾಯಿ ಗಜಲ್ ಮರಳ  ಹೆಜ್ಜೆಗಳನು ಕಡಲು ಅಳಿಸಿದಂತಾಗಿದೆ  ಈ ಬದುಕುಇರುಳು ಕಂಡ ಬಾವಿಗೆ  ಹಗಲು  ಬಿದ್ದಂತಾಗಿದೆ ಈ ಬದುಕು ತಣ್ಣಗೆ  ಉರಿಯುವ  ಬೂದಿಮುಚ್ಚಿದ  ಕೆಂಡ  ಇದಲ್ಲವೇಕೆಸರಿನಲಿ ಅವಿತ ಮುಳ್ಳಿನ ಮೊನೆಯಂತಾಗಿದೆ  ಈ ಬದುಕು ಸಂತೈಸುವ ಕೈಗಳೇ  ಬಸಿರಿಗೆ ಕೊಳ್ಳಿ ಇಟ್ಟು ನಗುತಿವೆಕತ್ತಲೆಯ ಗರ್ಭದಿ ಬೆಳಕು ಕಳೆದಂತಾಗಿದೆ ಈ ಬದುಕು ಹಗಲು ವೇಷಧಾರಿಗಳ ಮೋಜು ಬಲುಜೋರು ಇಲ್ಲಿಸತ್ತ ಹೆಣಗಳ ಸಿಂಗಾರ ನೋಡುವಂತಾಗಿದೆ ಈ ಬದುಕು ಭಾವಗಳ ರೆಕ್ಕೆ  ಮುರಿದು ಬೆತ್ತಲೆಯಾಗಿವೆ ನೊಂದು ಬೇಗಂಪ್ರೀತಿಯನು ಎದೆಯ ಗೋರಿಯಲಿ ಹುಗಿದಂತಾಗಿದೆ ಈ  ಬದುಕು ಹಮೀದಾಬೇಗಂ ದೇಸಾಯಿ

ಹಮೀದಾಬೇಗಂ ದೇಸಾಯಿ ಅವರ ಗಜಲ್ Read Post »

You cannot copy content of this page

Scroll to Top