Category: ಕಾವ್ಯಯಾನ

ಕಾವ್ಯಯಾನ

ವ್ಯಾಲಂಟೈನ್ ಸ್ಪೆಶಲ್

ಗಝಲ್ ಮಾಲತಿ ಹೆಗಡೆ ಗಜಲ್ ಅವನ ಕಣ್ಣಲ್ಲಿ ‌ನನ್ನ ಬಿಂಬ ಕಂಡಾಗ ಮೂಡಿತ್ತು ಪ್ರೀತಿ ಮನಸೆಳೆವ ಮಾತಿಗೆ ಮರುಳಾದಾಗ ಮೂಡಿತ್ತು ಪ್ರೀತಿ ಪ್ರತಿದಿನವೂ ಕನಸಲ್ಲೂ ನನಸಲ್ಲೂ ಕಾಡಿದ್ದೇನೂ ಸುಳ್ಳಲ್ಲ ಕಾಯಾ ವಾಚಾ ಮನಸಾ ನಿನ್ನವನೆಂದಾಗ ಮೂಡಿತ್ತು ಪ್ರೀತಿ ನಮ್ಮಿಚ್ಛೆಯಂತೆ ಮದುವೆಯಾಗುವುದು ಏನು ಹುಡುಗಾಟವೇ? ನಾನೆಲ್ಲ ನೋಡಿಕೊಳುವೆ ಭಯಬೇಡವೆಂದಾಗ ಮೂಡಿತ್ತು ಪ್ರೀತಿ ದೇವರು ಗುರುಹಿರಿಯರು ಅಗ್ನಿ ಸಾಕ್ಷಿಯಾಗಿ ಕಟ್ಟಿದ ಮಾಂಗಲ್ಯ ಉರುಳಾಗದಂತೆ ಬಲು ಕಾಳಜಿ ಮಾಡಿದಾಗ ಮೂಡಿತ್ತು ಪ್ರೀತಿ ಈ ‘ಮಾಲಿ”ಗೆ ಒಲಿದವನೊಂದಿಗೆ ಬದುಕುವ ಸುಯೋಗ ಸುಖ ದುಃಖದಲಿ […]

ವ್ಯಾಲಂಟೈನ್ಸ್ ಡೇ ಸ್ಪೆಶಲ್

ಪ್ರೀತಿಯೆಂದರೆ ಹೀಗೇ ಏನೋ!!?? ಸೌಜನ್ಯ ದತ್ತರಾಜ ಪ್ರೀತಿಯೆಂದರೆ ಹೀಗೇ ಏನೋ!!?? ಮೊದಮೊದಲು ನಿದ್ದೆ ಕೆಡಿಸಿ, ನೆಮ್ಮದಿ ಕಳೆದು ಸಾವಿರ ಪ್ರಶ್ನೆಗಳ ಸುಳಿಯೊಳಗೆ ಸಿಲುಕಿಸಿ ಅವಗಣನೆಯೋ, ಅವಮಾನವೋ ಎಂದೆಲ್ಲಾ ಅನುಮಾನಗಳ ಹುಟ್ಟಿಸಿ ಸ್ವಾಭಿಮಾನ, ಸ್ವಾರ್ಥಗಳೆಲ್ಲವ ಮಧ್ಯೆ ತೂರಿಸಿ ನಂಬದ ದೇವರನ್ನೂ ಮತ್ತೆ ಮತ್ತೆ ನೆನೆಸಿ ನಿರ್ಧಾರಗಳೆಲ್ಲವ ಏರುಪೇರಾಗಿಸಿ ಭೂಮಿ ಬಾನುಗಳ ತಲೆಕೆಳಗಾಗಿಸಿ ಅಬ್ಬಬ್ಬಬ್ಬಾ……. ಅವೆಷ್ಟೆಲ್ಲಾ ಚಿತ್ರ ವಿಚಿತ್ರ ಭಾವನೆಗಳು ಒಮ್ಮೆ ಪ್ರೀತಿ ನಮ್ಮೆಡೆ ತಿರುಗಿ ನಕ್ಕರೆ ಆಯ್ತು ಒಪ್ಪಿಕೊಂಡರಂತೂ ಸರ್ವಸ್ವವೂ ಸುಂದರ ಅರಳುವ ಮನ, ನೆಮ್ಮದಿಯ ನಿದ್ದೆ ಪ್ರಶ್ನೆಗಳಿಗೆಲ್ಲಾ […]

ಕಾವ್ಯಯಾನ

ಗಝಲ್ ಸುಜಾತಾ ಲಕ್ಮನೆ ಗಜಲ್ ಕದ್ದು ಕದ್ದು ನೋಡುತ್ತ ಎಗ್ಗಿಲ್ಲದೇ ಕಿರುನಗೆ ತೂರಿದ್ದು ಅವನೇನಾ ಕದಪು ಕೆಂಪಾಗಿಸಿ, ಊರ ತೇರಲ್ಲಿ ಹಿಂದ್ಹಿಂದೆ ಬಂದಿದ್ದು ಅವನೇನಾ ಚುಮು ಚುಮು ಚಳಿಯ ಮುಂಜಾನೆಗೂ ಬೆಚ್ಚನೆಯ ಕನಸು ಮೈಯೆಲ್ಲ ಚುಂಗೇರುವಂತೆ ಕಣ್ ಮಿಟುಕಿಸಿ ನಕ್ಕಿದ್ದು ಅವನೇನಾ ಒರತೆ ಕಾಣದ ಒಡಲಾಳವೆಲ್ಲ ನೀರು ನೀರಾದ ಅನುಭಾವವೆನಗೆ ಒಸರುವ ಜೀವ-ಭಾವಗಳಿಗೆ ಸುಖದಮಲು ತುಂಬಿದ್ದು ಅವನೇನಾ ಹಿಡಿತ ತಪ್ಪಿ, ತೇಲಾಡಿ ಎಲ್ಲೆಂದರಲ್ಲಿ ಮನ ಬೀಡುಬಿಟ್ಟ ಕ್ಷಣಗಳೆಷ್ಟೋ ಎನ್ನೆಲ್ಲ ತುಮುಲಗಳಿಗೆ ದಿಕ್ಕು ದಿಕ್ಕಾಗಿ ಒಡ್ಡು ಕಟ್ಟಿದ್ದು ಅವನೇನಾ ಬೆಳಗೇರಿದಂತೆ ಇಬ್ಬನಿಯ ಮೈಯೊಳಗೆ ಹನಿ-ಹನಿಯಾಗುವ ಭಯ ಬೆಡಗು […]

ವ್ಯಾಲಂಟೈನ್ಸ್ ಡೇ ವಿಶೇಷ

ವ್ಯಾಲಂಟೈನ್ಸ್ ಡೇ ಗಝಲ್ ಎ.ಹೇಮಗಂಗಾ ಗಝಲ್ ಬೆಳದಿಂಗಳ ರಾತ್ರಿಯೊಂದನು ನಿನ್ನ ಜೊತೆಯಲಿ ಕಳೆಯಬೇಕಿದೆ ತಿಂಗಳ ತಿಳಿಬೆಳಕ ತಂಪಲಿ ಹರವಾದ ನಿನ್ನೆದೆಗೆ ಒರಗಬೇಕಿದೆ ಕಣ್ಣ ಸನ್ನೆಯಲೇ ಪ್ರೀತಿ ನಿವೇದಿಸಿ ಒಲಿಸಿ ಒಲಿದು ನಲಿವ ತಂದೆ ಸಂವೇದಿಸುವ ನಿನ್ನೆದುರು ಹೂತ ಭಾವಗಳ ತೆರೆದು ಇಡಬೇಕಿದೆ ಒಡ್ಡನ್ನೊಂದನು ಕಟ್ಟಿದ್ದೇನೆ ಅಂತರಾಳದ ನೂರು ನೋವ ತೊರೆಗೆ ಜಗದ ಜಂಜಡವನ್ನೆಲ್ಲಾ ನಿನ್ನ ತೋಳ್ಸೆರೆಯಲಿ ಮರೆಯಬೇಕಿದೆ ಬಲವೆಲ್ಲಿದೆ ತನುವಲಿ ವಿರಹಾಗ್ನಿ ಅಣುಅಣುವನೂ ಸುಡುತಿರಲು ? ಅಧರ ಮಧುಪಾನದಿ ಪ್ರಾಣಕೆ ತ್ರಾಣವನು ತುಂಬಿಕೊಳ್ಳಬೇಕಿದೆ ಬದುಕ ಹಾದಿಯಲಿ ನಿನ್ನೊಲವ […]

ಕಾವ್ಯಯಾನ

ಶಾಪ ಡಾ.ಗೋವಿಂದ ಹೆಗಡೆ ಶಾಪ ಸಣ್ಣ ಪುಟ್ಟವು ಸಾಲುವುದಿಲ್ಲ ಅಂತ ದೊಡ್ಡ ಹಂಡೆ, ಬಾನಿ, ಕೊಪ್ಪರಿಗೆ ಗಳನ್ನೇ ಆಳಕ್ಕಿಳಿಸಿದೆ ಕವಿತೆಗಳ ತುಂಬಿ- ಕೊಂಡು ಬರಲೆಂದು ಒಡಲ ತುಂಬ ಖಾಲಿ ಖಾಲಿ ಹೊರಳಿ ಬಂದಿವೆ ಬಾವಿಲಿ ಜಲ ಬತ್ತಿ ಹೋಯ್ತೆ ಈಗ ನಡೆದಿದೆ ಕವಿತೆಯ ಸುಳಿವೇ ಇರದ ಪೊಳ್ಳು ಪದಗಳ ಸಂತೆ ( ಇದೂ ಅವುಗಳಲ್ಲಿ ಒಂದಂತೆ?!) ** ಭಾರೀ ಜರಿ ಪೋಷಾಕು ಆಳೆತ್ತರದ ಹೂ ಹಾರ ಮಸ್ತು ಗುಲಾಲು ಬಾಜಾ ಬಜಂತ್ರಿ ಗಳಲ್ಲಿ ನಡೆದಿದೆ ಶವದ ಮೆರವಣಿಗೆ […]

ಕಾವ್ಯಯಾನ

ಯಾಕಿಷ್ಟು ಬೇಸರ? ದೀಪಿಕಾ ಬಾಬು ಯಾಕಿಷ್ಟು ಬೇಸರ ಈ ಮನಸಿಗೆ ನೀ ಬಾರದೆ ಹೋದರೆ ನನ್ನ ಕನಸಿಗೆ..! ಉಳಿಗಾಲ ವಿಲ್ಲ ಈಗ ಆ ನಿದೆರೆಗೆ ನೀ ಬೇಗ ಬರುವೆಯಾ ನನ್ನ ಮನಸಿಗೆ…!! ದೂರದ ‌ಪರಿಚಯ ನಮ್ಮದು ಆದೇವೂ ಆತ್ಮೀಯರಿಂದು, ಕಾರಣವೇ ಬೇಕೆಯೆಂದು ಬಯಸದು ಮನಸಿದು ಇಂದು..!! ನಮ್ಮಯ ಸಲ್ಲಾಪದ ಪ್ರೀತಿಗೆ ಸಿಕ್ಕಿದೆ ಮನೆಯಲ್ಲಿ ಒಪ್ಪಿಗೆ ಮದುವೆ ದಿಬ್ಬಣದ ಹೊತ್ತಿಗೆ ಆಗುವೆವು ಆದರ್ಶದ ಜೋಡಿಗೆ..!! ಮೋಡಿ ಯದು ಮಾಡಿದೆ ನೋಡು ನಿ‌ನ್ನೆದೆಯ ಉಸಿರಿನ ಹಾಡು..! ಹಿಡಿದಿರುವ ಪ್ರೀತಿಯ ಜಾಡು […]

ಕಾವ್ಯಯಾನ

ಸಾಲಿನ ಜಾಡು ಹಿಡಿದು ಡಾ.ಗೋವಿಂದ ಹೆಗಡೆ “ಕತ್ತಲಿನ ಮುಖ ಮೀಸೆ…” ಮತ್ತು “ರೆಪ್ಪೆಗಳ ತಂತಿಯ ಮೇಲೆ…” ಸುಮಾರು ೧೯೮೭- ೮೮ ಇರಬೇಕು. ಮೈಸೂರಿನಲ್ಲಿ ಎಂಬಿಬಿಎಸ್ ಓದುತ್ತಿದ್ದೆ .ತಿಂಗಳ ತುಷಾರ ಮಾಸ ಪತ್ರಿಕೆಯ ಚಿತ್ರ ಕವನ ಸ್ಪರ್ಧೆಯ ಬಹುಮಾನಿತ ಕವನ ಮನಸೆಳೆಯಿತು. ಮೊದಲಿಗೆ ಚಿತ್ರದ ಬಗ್ಗೆ ಹೇಳಬೇಕು. ಕತ್ತಲಿನಲ್ಲಿ ದೀಪದ ಕಂಬ, ಉರಿಯುತ್ತಿರುವ ದೀಪದ ಕುಡಿ, ಸೊಡರು. ಅದನ್ನು ತಿದ್ದಲು ಮುಂದೆ ಬಂದಿರುವ ಹೆಣ್ಣಿನ, ತುಂಬು ಬಳೆಗಳಿರುವ ಅಂದದ ಕೈ.ಚಿತ್ರ ‘ಯಜ್ಞ’ ಮಂಗಳೂರು ಅವರದು ಇರಬೇಕು, ಖಾತ್ರಿಯಾಗಿ ನೆನಪಿಲ್ಲ. […]

ಕಾವ್ಯಯಾನ

ಬೇಕಿತ್ತ..? ಮದುಸೂದನ ಮದ್ದೂರು ಬೇಕಿತ್ತ..? ತಂಗಾಳಿಗೆ ಮೈಯೊಡ್ಡಿದೆ ಬಿರು ಬಿಸಿಲಲಿ ಬಸವಳಿದೆ ತೆರೆದ ಮನದ ಕಿಟಕಿಗಳ ಮುಚ್ಚಿದೆ ಹಳೆಯ ನೆನಪುಗಳ ಕಸ ಗುಡಿಸಿದೆ ಉಸ್ಸೆನ್ನುತಾ ಹಾಸಿಗೆಗೆ ಅಡ್ಡಾದೆ ಕಂಬಳಿ ಕವುಚಿ ಕಣ್ಮುಚ್ಚಿದೆ ನಿದ್ದೆ ಬರುತ್ತಿಲ್ಲ….. ಹೃದಯದೀ ನಿನ್ನ ಪಿಸುದನಿ ಮಾರ್ದನಿ ನೆನಪುಗಳ ಮೆರವಣಿಗೆ ನಿನ್ನ ಮರೆವಣಿಕೆಗೆ ಇಷ್ಟೇಲ್ಲಾ ಬೇಕಿತ್ತ…. ಗೊತ್ತಾಗುತ್ತಿಲ್ಲ… ********

ಕಾವ್ಯಯಾನ

ಜೀವಾತ್ಮಕ್ಕೆಲ್ಲ ದೀಪಿಕಾ ಬಾಬು ಮನದುಂಬಿ ಬರೆದಿಹೆನು ಇದನು ನಾನೂ ನೀವು ಓದಿದರೆ ಸಾರ್ಥಕವು, ನನಗೆ ಇನ್ನೂ….!! ನನ್ನ ಬರಹಗಳೆನು ಶ್ರೇಷ್ಠ ಕಾವ್ಯಗಳಲ್ಲಾ, ನೀವೆಳುವ ಮುನ್ನ ತಿಳಿದಿಹೆನು ನಾನೆಲ್ಲಾ….!!. ಬರೆದ ಸಾಲಿನ ನಡುವೆ ಮೂಡಿದ ಭಾವಗಳೆಲ್ಲಾ ನಿಮ್ಮನು ಒಮ್ಮೆ ಹೀಗೆ ತಲ್ಲಣ ಗೊಳಿಸುವವೆಲ್ಲಾ..!! ಅಕ್ಷರ ಪಾತ್ರದ ಒಳಗೆ ನೂರಾರು ದುಗುಡವನೆಲ್ಲಾ ಗೀಚಿಬರದೆ ನಾನು ನಿಕ್ಷಲ್ಮಶ ಹೃದಯದ ಹೊನಲಾ..!! ಏನಿದೇ ನಿನ್ನಯ ಒಳಗೆ ಅರ್ಥವಿರದ ಪದಗಳೆಲ್ಲಾ, ಸಹನೆ ಎಂಬುದೇ ಬೇಕು ತಿಳಿಯುವ ಉದ್ದೇಶವಲ್ಲಾ..!! ನೂರಾರು ಸಾವಿರಾರು ಕಲ್ಪನೆಯ ಕುಸುಮಗಳಿಗೆಲ್ಲಾ ಬರಹದ […]

ಕಾವ್ಯಯಾನ

ತೋಳ ಉಯ್ಯಾಲೆ ಶಾಂತಾ ಜೆ ಅಳದಂಗಡಿ ತೋಳ ಉಯ್ಯಾಲೆ ಅಂದದ ಸುಂದರ ಬಂಧುರ ಭಾವದ ಕವಿತೆಯ ಬರೆದನು ನನ್ನೀ ಬಾಳಿನ ಪುಟದಲ್ಲಿ ಕಾವ್ಯದ ನವ್ಯತೆ ಬಲು ನಾವೀನ್ಯತೆ ಬೆಳಗಿತು ನನ್ನಯ ಹೃದಯದ ಹಣತೆ ಚೆಲ್ಲುವೆ ನನ್ನವ ನಡೆಯುವ ಹಾದಿಗೆ ಘಮ ಘಮ ಅನ್ನುವ ಮನಸ್ಸಿನ ಮಲ್ಲಿಗೆ ತೋಳ ಉಯ್ಯಾಲೆ ಪ್ರೇಮದೆ ಕಟ್ಟುವೆ ಜತೆಯಾಗಿ ಕುಳಿತು ಜೋಕಾಲಿ ಆಡುವೆ ಸ್ವರ್ಗವೆ ಇರಲಿ ನರಕವೆ ಬರಲಿ ಹೂವು ನಾರಿನ ಬಂಧವು ಬೆಸೆಯಲಿ ******

Back To Top