Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ಹೆಣ್ಣಿನಂತರಾಳ ವಾಣಿ ಮಹೇಶ್ ಮಮತೆಯ ಮಡಿಲಲ್ಲಿ ಮಮತೆಯ ಕಾಣದೆ ಮರುಗುವುದ ಕಲಿತೆ ಮರುಳ ಮನಸು ಅರಿಯದೆಲೆ ಆಸೆಗಳು ಕಂಗಳ ತುಂಬಿವೆ / ಕೊರಳುಬ್ಬಿ ಕಂಗಳ ಕಂಬನಿ ಜಾರಲು.. ಹೆದರಿ ಅಲ್ಲೇ ಅವಿತು ತನ್ನಿರವ ಸೂಚಿಸಿದೆ / ಪ್ರೇಮಮಯಿ ಮಾತೆ ತನ್ನಿರವ ಮರೆತಳು ನಾ ಬರೆದ ರಾಗಕೆ ಸ್ವರವೇ ಇಲ್ಲವಾಗಿಸಿಹಳು ತಂತಿ ಕಡಿದು ಜೀವವೀಣೆ ಜೀವಚ್ಛವವಾಗಿದೆ/ ರಾಗಾಲಾಪಗಳು ಶೋಕದಿ ಬಿಕ್ಕುತಿವೆ ಬಯಸಿದ ಮಮತೆ ದೂರ ಸಾಗಿ ಹೋಗಿದೆ.. ಕಾಣದಾ ಲೋಕಕೆ ನೆನಪು ಹಚ್ಚ ಹಸಿರಾಗಿ ಬೊಬ್ಬಿಡುತಿದೆ / ಮೌನ […]

ಕಾವ್ಯಯಾನ

ಅಂತಃಶುದ್ಧಿಯ ಸಮಯ…!! ಅರ್ಚನಾ ಹೆಚ್ ಜಾತಿ ಧರ್ಮಗಳ ಸುಳಿಯಲರಳಿದ ಕುಸುಮಗಳಿಂದು‌ ಶಿವಪೂಜೆಗೊದಗದೆ ಬರಿದೆ ಬಾಡಿದ ಬೆರಗು..!! ಹೆತ್ತ ಮಡಿಲಲಿ ಮತ್ತೆ ಕೂಸುಗಳು..! ಬದುಕಿದರೂ ಸತ್ತರೂ ಅವಳೊಡಲೇ ಗಮ್ಯ.. ಮಣ್ಣಾಗಬಾರದವುದೆಂಬುದೊಂದೇ ತಾಯಿ ಹರಕೆ..!! ನಾನು ನನ್ನಂದೆಂಬ ತುಂಬು ಗರ್ವದಲಿದ್ದೆ..!!?? ಮತ್ತೆ ಮೇಲಿಹನಾಗ್ರಹ..! ಕಣ್ಣೆವೆಯಿಕ್ಕದೆ ದಿಟ್ಟಿಸಿ ನೋಡು..! ಸ್ವಾರ್ಥ ದುರಾಗ್ರಹದ ಪೀಡೆಯೊಳಾಡಿದ ಮರುಳ ಮಾನವರಿಗಿದೇಟು! ರಣತಂತ್ರ!! ವಿಕೃತ ಮನಸ್ಥಿತಿಗಳಾಟ! ವಿಶ್ವವ್ಯಾಪಿ ಬೀಸಿ ಚಾಟಿಯೇಟು..!! ಧನವೋ! ಋಣವೋ!?? ಶಕ್ತಿಯಾಟದಲಿ ಸತ್ತವರ ಲೆಕ್ಕಗಳು ಸರ್ವವ್ಯಾಪಿ! ಮೃತ್ಯು ಕಡುಕೋಪಿ..!! ಮಾತೃಭೂಮಿಯ ಸೊಗಡು ಭಕ್ತಿ ಮರೆತವಗೆ […]

ಕಾವ್ಯಯಾನ

ಗಝಲ್ ವೆಂಕಟೇಶ ಚಾಗಿ ಆಕಾಶವನು ಮುಟ್ಟುವೆನು ಒಂದು ದಿನ ಚಿಂತಿಸದಿರು ಅಪ್ಪ ನೆಲದ ಮೇಲಿನ ಡೊಂಬರಾಟದ ಬದುಕಿಗೆ ಚಿಂತಿಸದಿರು ಅಪ್ಪ || ನಿನ್ನ ಬಲವನೆಲ್ಲ ಸೇರಿಸಿ ಆಕಾಶಕ್ಕೊಮ್ಮೆ ಚಿಮ್ಮಿ ಬಿಡು ನಿನ್ನ ನನಸುಗಳ ಹೊತ್ತು ತರುವೆ ನೋಡುತಿರು ಅಪ್ಪ || ಹಸಿವಿನ ಆಟವನು ನೋಡಲು ನೆರೆಯುವರು ನಾಟಕದ ಮಂದಿ ನಿನ್ನಾಟದ ಗತ್ತು ಗಮ್ಮತ್ತುಗಳ ತೋರಿಸುವುದ ಮರೆಯದಿರು ಅಪ್ಪ || ಚಂದ್ರಮನ ತೋರಿಸಿ ಅಮ್ಮ ತುತ್ತು ಉಣಿಸುವಳು ಅಷ್ಟೇ ತುತ್ತುಗಳ ಕೂಡಿಡಲು ನನ್ನ ಎಂದಿಗೂ ಕಡೆಗಣಿಸದಿರು ಅಪ್ಪ || […]

ಕಾವ್ಯಯಾನ

ಗಝಲ್ ಪ್ರತಿಮಾ ಕೋಮಾರ ಕಹಿಯೂರಲ್ಲೊಂದು ಸಿಹಿ ಗಿಡವ ನೆಡುವ ಸಹಕರಿಸು ಬಂದು ನೆಟ್ಟ ಗಿಡಕೆ ಜೀವ ಜಲ ಕೊಟ್ಟು ಪೊರೆಯುವ ಸಹಕರಿ‌‌ಸು ಬಂದು ಬಾಗಿ ಬಸವಳಿದು ಉರುಳಿದ ಜೀವಕೆ ಸಾಂತ್ವನವೇ ಮದ್ದು ಮಾನವತೆಯ ನೆಲೆಯಲ್ಲಿ ಮಮತೆಯನು ಹನಿಸುವ ಸಹಕರಿಸು ಬಂದು ಕೋಟೆಗಳ  ಕಟ್ಟಿ ಹಕ್ಕಿಯೆಂದಾದರೂ ತನ್ನ ಬಂಧಿಸಿಕೊಂಡೀತೇ? ಮನಗಳ ನಡುವೆ ಹಬ್ಬಿರುವ ಬೇಲಿಯನು ಕಡಿಯುವ ಸಹಕರಿಸು ಬಂದು ಸ್ವಾಥ೯ದ ಮಾರುಕಟ್ಟೆಯಲ್ಲಿ ಬಿಕರಿಯಾಗುವವು ಬರೀ ಸ್ವಾಥ೯ಗಳೇ ನಿಸ್ವಾಥ೯ತೆಯ ದೀಪ ಹಚ್ಚಿ ಬದುಕ ಬೆಳಗುವ ಸಹಕರಿಸು ಬಂದು ಗಂಧಕ್ಕೆ ಮುಚ್ಚಿ,ಬಿಚ್ಚಿ,ಬೊಬ್ಬೆ ಹೊಡೆವ […]

ಕಾವ್ಯಯಾನ

ಪ್ರಿಯ ಸಖ H. ಶೌಕತ್ ಆಲಿ  ಬೆಳದಿಂಗಳಲ್ಲಿ ತಂಪು ತಂಗಾಳಿಯಲ್ಲಿ ನಮ್ಮ ಮಿಲನ ಆಲಿಂಗನ ಅರಳಿದ ನೈದಿಲೆಯ ಚಂದಿರನ ಚುಂಬನ ಪ್ರಶಾಂತವಾದ ಹೃದಯ ಮನಸೆಲ್ಲಾ ಅವನಲ್ಲೇ ಲೀನಾ ಆಧ್ಯಾತ್ಮವೂ ಅಮರ ಪ್ರೇಮವೂ ಬುದ್ಧ ನನ್ನ ಪ್ರಿಯ ಸಖ ಬೆಳಕಾಗಬೇಕು ಈ ಭೂಮಿಯು ಈ ಸುಂದರ ಪ್ರಕೃತಿ ನೆನಪಿರಲಿ ಶ್ವೇತ ಮೋಡಗಳು ಆಗಸದಲ್ಲಿ ಹೃನ್ಮನಗಳು ಏಕಾಂತವಾಗಿ ಭಾವನೆಗಳು ಹೂವಂತೆ ಅರಳಿ ಸುಖದ ಸೆಲೆಯಾಗಿ ಅವ ನಿಂತ ಬುದ್ಧ ನನ್ನ ಪ್ರಿಯ ಸಖ ನೋಟದಲ್ಲಿ ಸಾವಿರ ಅರ್ಥ ಜನ್ಮಜನ್ಮಾಂತರ ಪುನೀತ […]

ಕಾವ್ಯಯಾನ

ಪೂರ್ಣವಾಗದ ಸಾಲುಗಳು ಶೀಲಾ ಭಂಡಾರ್ಕರ್ ಮನಸ್ಸು ಒಮ್ಮೊಮ್ಮೆತೊಟ್ಟಿಕ್ಕುತ್ತಾ ಶಬ್ದಗಳಾಗಿ, ಹಾಳೆಯ ಮೇಲೆ ಒಂದೊಂದಾಗಿ ಬಿದ್ದು ಹರಡಿಕೊಳ್ಳುತ್ತಾ…. ಶುರುವಿಟ್ಟುಕೊಳ್ಳುತ್ತದೆ ಆಡಲು ಶಬ್ದಗಳ ಆಟ. ಹೊಂದಿಕೊಳ್ಳಲು ಹೆಣಗುವ ಭಾವನೆಗಳ ಮಾಟ. ಕವಿತೆಯಾಗಲು ಹೊರಟ ನಿಶ್ಶಬ್ದ ಶಬ್ದಗಳ ಅರ್ಧಂಬರ್ಧ ಸಾಲುಗಳು. ನೋಡಲು ಯಾವುದೋ ನಿರ್ಭಾವುಕ ಚಹರೆಯಂತಹ ಉಲ್ಲೇಖಗಳು. ಹಿಂದೊಮ್ಮೆ ಮುಂದೊಮ್ಮೆ ನಿಲ್ಲಲು ಸೆಣಸಾಟ. ಅರ್ಥವಿಲ್ಲದವುಗಳ ಮೂಲೆಗೆ ತಳ್ಳಾಟ ಮನುಷ್ಯರಲ್ಲಿ ಮಾತ್ರವಲ್ಲ ಶಬ್ದಗಳಿಗೂ ಸಂಬಂಧಗಳಲ್ಲಿ ಹೊಂದಾಣಿಕೆ ಬೇಕು ಎಂದರೆ ಒಪ್ಪುವಿರಾ? *********

ಕಾವ್ಯಯಾನ

ನಿಯಮ ಡಾ.ಅಜಿತ್ ಹರೀಶಿ . ಅಪಘಾತಗಳೆಲ್ಲ ಆಕಸ್ಮಿಕಗಳಲ್ಲ ಕಾರಣವಿರಬಹುದಲ್ಲ ಅಲಕ್ಷ್ಯ ಆತುರ ಅತ್ಯುತ್ಸಾಹ ಕಲ್ಪಿಸುವ ಎದುರಿನ ಅಚಾತುರ್ಯ ಬೇಕೆಂದಾಗ ಬಂಜೆತನ ಬೇಡವಾದಾಗ ಫಲಿಸುವ ಗರ್ಭ ಸುರತಕ್ಕೆ ಸುರಕ್ಷಿತ ಸಂಗಾತಿ ಮಾತ್ರ! ಯುಗ ಬದಲಾಗಿದೆ ಸ್ವರ್ಗ ನರಕಗಳೆಲ್ಲವೂ ಸೃಷ್ಟಿಯಾಗಿದೆ ಇಲ್ಲೇ ತೆರೆಯಲಾಗಿದೆ ಬದುಕಿನ ಕಂದಾಯ ಕಟ್ಟುವ ಕೌಂಟರ್ ನಮ್ಮಲ್ಲೇ ದೇವನ ಕಣ್ಣುಗಳು ಮಾರು-ಮಾರಿಗೆ ಎಲ್ಲೆಲ್ಲೂ ಟವರ್ ಲೊಕೇಷನ್ ಅಪರಾಧಿಯಾಗದ ಸೂತ್ರ ಜೀವಿಸುವ ಸಾಫ್ ಸೀದಾ *********

ಬುದ್ಧ ಪೂರ್ಣಿಮೆಯ ವಿಶೇಷ-ಕವಿತೆ

ಬೆಳಕಿನ ಸಂತ ಶಿವಶಂಕರ ಸೀಗೆಹಟ್ಟಿ. ಊರೂರು ಸುತ್ತಿದ ಬಿಕ್ಕುಪಾತ್ರೆ ನನ್ನ ಮುಂದೆಯೇ ಬಂದು ನಿಂತಿದೆ ಪಾತ್ರೆಗೆ ಬೀಳುವ ಎಲ್ಲವೂ ನನ್ನೊಳಗೆ ಅಕ್ಷಯವಾಗುತ್ತಿವೆ ಅಚ್ಚರಿಯೆನಿಸಿತು ನಾನು ಕತ್ತಲನು ಸುರಿದಾಗ ಬೆಳದಿಂಗಳು ನನ್ನ ಕಣ್ಣೆದುರಿಗಿತ್ತು ಊರೂರು ತಿರುಗಿದ ಬೆಳಕು ಮನವೆಂಬ ಗುಡಿಸಲಿಗೂ ಬಂದು ಬೆಳಕು ಕೊಟ್ಟಿದೆ ಬೆಳಕು ಪಡೆಯುವ ತವಕದ ಬಯಕೆಯಲ್ಲಿ ಗಾಳಿ ತಾಗಬಹುದೆಂದು ಬದುಕ ಅಡ್ಡಗಟ್ಟಿದ್ದೇನೆ ಹೆಗಲ ಜೋಳಿಗೆಯಲ್ಲಿ ಬಯಲೆಂಬ ಸಿರಿಯು ಬದುಕುಗಟ್ಟಿದೆ ಬಾಚಿ ತಬ್ಬುವ ತವಕದಲ್ಲಿ ಬೆನ್ನ ಹಿಂದೆಯೇ ಸಾವರಿಸಿ ನಡೆಯುತಿದ್ದೇನೆ ಆಸೆ ಅತಿಯಾಗಬಾರದೆಂಬ ಬುದ್ದಗುರುವಿನ ಮಾತುಗಳನು […]

ಬುದ್ಧ ಪೂರ್ಣಿಮೆಯ ವಿಶೇಷ -ಕವಿತೆ

ವೈಶಾಖ ಹುಣ್ಣಿಮೆ ರಾತ್ರಿ ಶಾಲಿನಿ ಆರ್. ಮನುಕುಲದ ಭಾಗ್ಯ ನಮ್ಮ ಸರ್ವಾಥ ಸಿದ್ಧ/ ಲೋಕದ ಜನರ ದುಃಖ ನಿವಾರಿಸಲರಿತು ಎದ್ದ// ವೈಶಾಖ ಹುಣ್ಣಿಮೆಯ ರಾತ್ರಿ ಹಳೆನೆನಪುಗಳ ಕಳಚಿತು/ ದಿವ್ಯಚಕ್ಷುವಿನಿಂದಾದ ಯೋಗ ಜ್ಞಾನಜ್ಯೋತಿ ಬೆಳಗಿತು// ದೇದೀಪ್ಯಮಾನ ಬೆಳಗದು ಮನುಕುಲದ ತಮವ ಕಳಚಿತು/ ಧ್ಯಾನದೊಳಿದ್ದರು ಎಚ್ಚರವಾಗಿರುವ ಮನದ ನೇತ್ರ ಅರಳಿತು// ಬಿಂದುವೊಂದು ಸಿಂಧುವಾದ ಆನಂದದಾ ಮೊಗ/ ಅನಿರ್ವಚನೀಯ ಕಲ್ಮಷರಹಿತ ಪರಮಾನಂದದಾ ಯೋಗ// ಮಾನವ ಕುಲ ಒಂದು ಆಸೆಯೇ ದುಃಖಕ್ಕೆ ಕಾರಣ ಎಂದ/ ಸಮ್ಯಕ್ ಬೋಧಿ’ ಸಿದ ಅಷ್ಟಾಂಗ ಮಾರ್ಗ ಅರುಹಿದ// […]

ಬುದ್ಧ ಪೂರ್ಣಿಮೆ ವಿಶೇಷ-ಕವಿತೆ

ಬೆಳಕಿಗೊಂದು ಮುನ್ನುಡಿ ಅರಸುತ. ಪೂರ್ಣಿಮಾ ಸುರೇಶ್ ವಿಶ್ವವೆಲ್ಲವನು ಕಪ್ಪು ಕವಿದಾವರಿಸಿದ ವೇಳೆ ಸೃಷ್ಟಿಯಖಿಲದ ಜೀವಜಾತಗಳಿಗೆಲ್ಲ. ನಿದ್ರೆಯ ಮಾಯೆ ಮುಸುಕಿರುವ ವೇಳೆ ಸೊಬಗಿನೈಸಿರಿಯೆ ಸಾಕಾರಗೊಂಡಂತೆ ಪಕ್ಕದಲಿ ಪವಡಿಸಿದ ಸುಕೋಮಲೆಯ. ಘನವಾದ ಕಟ್ಟಕ್ಕರೆಯ ಚೆಂಬೆಳಕ ಲೆಕ್ಕಿಸದೆ ಹೊರಟೇಬಿಟ್ಟ ಪುಣ್ಯಾತ್ಮ. ಹೊಸ ಬೆಳಕಿನ ಮೂರ್ತತೆಯ ಹುಡುಕಾಟದಲ್ಲಿ ಬದುಕಿನರ್ಥವ ಬಗೆವ ಬೆದಕು ನೋಟದಲ್ಲಿ ನನ್ನೊಳಗೂ ಆಗಾಗ್ಗೆ ತುಂಬಿಕೊಳ್ಳುವ. ಕಪ್ಪಿಗೆ ಕಪ್ಪ ಸಲ್ಲಿಸುತ್ತಲೇ ಬಂದಿರುವೆ. ಆದರೀಗ ಕಪ್ಪಿನೆದೆಯನ್ನಿರಿದು ಆಚೆ ಹೆಜ್ಜೆ ಹಾಕಿರುವೆ. ಅವ್ಯಕ್ತದೆಡೆಗೆ ಅವನಂತೆ ಒಬ್ಬಂಟಿ- ಕೆಮ್ಮಣ್ಣ ಮಾದಕ ಕಂಪನ್ನು ಮೂಸಿ ಮುಟ್ಟಿರುವೆನವನ ಸಂಪ್ರೀತಿ […]

Back To Top