ಹಾಯ್ಕುಗಳು
ಹಾಯ್ಕುಗಳು ಭಾರತಿ ರವೀಂದ್ರ 1)ಹೆಣ್ಣಲ್ಲವೇ ನೀ :ಕಲ್ಲು ರೂಪದಿ ಕೂಡಾಮಮತೆ ಸೆಲೆ. 2)ಕಲ್ಲಾಗಿ ಹೋದೆ :ಸ್ವಾರ್ಥಿ ಜಗವು ಕೊಟ್ಟನೋವು ಕಾಣಿಕೆ. 3)ಹಣೆಯ ಬೊಟ್ಟುಅವನಿಟ್ಟ ನೆನಪುಹೃದಯೋಡೆಯ 4)ಕಾದು ಕಲ್ಲಾದೆ :ನಲ್ಲನ ಆಗಮನಕಾಮನಬಿಲ್ಲು. 5)ಅಹಲ್ಯ ರೂಪಶ್ರೀ ರಾಮ ಬರುವನೇ,ಕಲಿಯುಗದಿ. 6)ಗಂಭೀರ ಮೊಗಕಂದನಂದದ ಮನಬಾಳು ನಂದನ. 7)ಮೌನದ ತಾಣಹೆಣ್ಣು ಜೀವದ ಕಣ್ಣು,ತೀರದ ಋಣ. *************************************
ಗಜಲ್
ಗಜಲ್ ಅಶೋಕ ಬಾಬು ಟೇಕಲ್ ಹಾಲುಂಡ ಹಸುಳೆಯೇ ಹದ್ದಂತೆ ಕುಕ್ಕಿ ಕುಕ್ಕಿ ತಿನ್ನುತ್ತಿದೆ ಈಗಹೊತ್ತೊತ್ತಿಗೂ ಮಡಿಲೇರಿದ ಕೂಸೇ ಕಾಳ ಸರ್ಪದಂತೆ ಬುಸುಗುಟ್ಟುತ್ತಿದೆ ಈಗ ನಿತ್ರಾಣಗೊಂಡು ಪಾತಾಳ ತುಳಿದಾಗ ಕೈ ಹಿಡಿದು ಮೇಲೆತ್ತಿದ್ದೆಕೃತಜ್ಞತೆಯ ಮರೆತು ನೇಣು ಕುಣಿಕೆ ಹುರಿಗೊಳಿಸುತ್ತಿದೆ ಈಗ ಮಾನವೀಯತೆ ಮುಂದೆ ಮಿಕ್ಕೆಲ್ಲವೂ ಗೌಣವೆಂದೇ ಭಾವಿಸಿದ್ದೆಅದೇ ಮಾನವೀಯತೆಗೆ ಚಟ್ಟ ಕಟ್ಟಿ ಬೀದಿಗಿಟ್ಟು ಹರಾಜಾಕುತ್ತಿದೆ ಈಗ ಊರಿಗೆ ಊರೇ ಅಪಸ್ವರದ ಕೊಳಲು ನುಡಿಸುತಿತ್ತು ಅಲ್ಲಿ !ಬುದ್ಧ ಸಾಗಿ ಬಂದ ಹಾದಿಯೂ ಮುಳ್ಳುಗಳನು ಮೊಳೆಸುತ್ತಿದೆ ಈಗ ಈಚಲು ಮರದ ನೆರಳು […]
ಕವಿತೆ ಮತ್ತೆ ಯುಗಾದಿ ಹೊಸ ವರ್ಷವ ಸ್ವಾಗತಿಸುತ ಬಂದಿದೆ ಯುಗಾದಿಯುಗ ಯುಗಗಳ ಹೊಸ ಪಲ್ಲವಿಯನು ಹಾಡಿ. ಮಾರನ ಹೂ ಬಾಣದ ಜುಮ್ಮೆನ್ನುವ ಅಮಲುಪ್ರತಿ ಹೃದಯದ ಮೇಲೆರಗಿದೆ ಮೈಗಂಧದ ಘಮಲು. ಎಲೆಯುದುರುವ ಕಾಡಲ್ಲಿ ಚಿಗುರಿನ ದನಿ ಹಾಡುಪ್ರತಿ ಗಿಡಗಳು ಹಸಿರುಟ್ಟಿವೆ ಹೂ ಬಟ್ಟೆಯ ನೋಡು. ಹೂ ಹೂಗಳ ಕೇಸರದಲಿ ದುಂಬಿಯ ಹೂ ಮುತ್ತುಗಿಡ ಮರಗಳು ಅನುಭವಿಸಿವೆ ಪ್ರಣಯದ ನಶೆ ಮತ್ತು! ಒಣ ಶಿಶಿರವು ಚೇತರಿಸದು ಹೂ ಚೈತ್ರದ ಹೊರತುವನಮಾಲಿಯ ಅಡಿ ಅಡಿಯಲು ಮಧು ಮಾಸದ ಗುರುತು. ಪ್ರತಿ ಕಾಡಲು […]
ಗಜ಼ಲ್
ಗಜ಼ಲ್ ಎ. ಹೇಮಗಂಗಾ ಕೊರೋನಾ ಕನಸುಗಳ ಕಮರಿಸಿದೆ ಮರಳಿ ಊರ ಸೇರುವುದು ಹೇಗೆ ?ಹಾಳು ಸುರಿವ ಬೀದಿ ಮಸಣವಾಗಿದೆ ಮರಳಿ ಊರ ಸೇರುವುದು ಹೇಗೆ ? ಶಾಂತವಾಗಿ ಹರಿಯುತ್ತಿದ್ದ ಬಾಳಕಡಲಿನಲಿ ಎಣಿಸದ ಉಬ್ಬರವಿಳಿತಇರುವ ನೆಲೆ ಜೀವಗಳ ನಲುಗಿಸಿದೆ ಮರಳಿ ಊರ ಸೇರುವುದು ಹೇಗೆ ? ದುಡಿಮೆ ಆದಾಯವಿಲ್ಲದ ಬದುಕು ನರಕಸದೃಶವಲ್ಲದೇ ಮತ್ತೇನು ?ತಿನ್ನುವ ಅನ್ನಕೂ ತತ್ವಾರವಾಗಿದೆ ಮರಳಿ ಊರ ಸೇರುವುದು ಹೇಗೆ ? ಅನುಕಂಪವಿಲ್ಲದ ಸಾವು ಹಗಲಲ್ಲೂ ಭೀತಿಯ ಕಾರಿರುಳ ಹರಡಿದೆಬೆದರಿದ ಮನ ದೃಢತೆ ಕಳೆದುಕೊಂಡಿದೆ ಮರಳಿ […]
ಅರಳುವುದೇಕೋ.. ?ಬಾಡುವುದೇಕೋ
ಕವಿತೆ ಅರಳುವುದೇಕೋ.. ?ಬಾಡುವುದೇಕೋ ಲಕ್ಷ್ಮೀ ಮಾನಸ ಕಾಲದ ಗಾಲಿಯುಉರುಳುತ್ತಾ,ಜವದಿಂದೆಸೆದಅಗಣಿತ ಪ್ರಶ್ನೆಗಳಸರಮಾಲೆಯಲ್ಲಿ,ಮೃದು ಹೃದಯ ಸಿಲುಕಿ,ಅರಳಿ ಮುದುಡುವುದುರಅರ್ಥ ಅರಿಯಲು,ಕಾಲವನ್ನೇ ಮರೆಯುತಿದೆ….. ಕುಸುಮಗಳ ಸರಮಾಲೆಯಲ್ಲಿ,ಸುಮಗಳಿಂದು ನಲುಗುತಿವೆ,ನೀರವ ಮೌನದಲ್ಲಿ….,ಬಿಸಿಲು -ಮಳೆಯೆನ್ನದೆ,ಬಾಳ ಕೊನೆಯನರಿಯದೆ…… ತಾನಾಗಿಯೂ ಅರಳಲಿಲ್ಲ,ತಾನಾಗಿಯೂ ಮುದುಡಲಿಲ್ಲ,….,ಅರಳುವ ಆಸೆಯೂ ಇರಲಿಲ್ಲ,ಮುದುಡುವ ಬಯಕೆಗೂ ಬರವಿಲ್ಲ…, ಬಿಡಿಸಲಾಗದ ಗಂಟುಗಳಲ್ಲಿ,ಉತ್ತರವಿಲ್ಲದ ಪ್ರಶ್ನೆಗಳಲ್ಲಿ,ಪ್ರಶ್ನೆಗಳಿಗೇ ಪ್ರಶ್ನೆಯಾಗಿ,ಬಾಳುತಿರುವ ಈ ಕುಸುಮಅರಳುವುದೇಕೋ… ?ಮುದುಡುವುದೇಕೋ… ? ************************
ಗಜಲ್
ಗಜಲ್ ಅರುಣಾ ನರೇಂದ್ರ ನಿನ್ನೆದೆಗೆ ಒರಗಿ ವೇದನೆ ಮರೆಯಬೇಕೆಂದಿರುವೆ ದೂರ ಸರಿಸದಿರುನಿನ್ನ ಮಡಿಲ ಮಗುವಾಗಿ ನಗೆ ಬೀರಬೇಕೆಂದಿರುವೆ ದೂರ ಸರಿಸದಿರು ಬೀಸುವ ಗಾಳಿ ಸೆರಗೆಳೆದು ನಕ್ಕು ಕಸಿವಿಸಿಗೊಳಿಸುತ್ತಿದೆನಿನ್ನ ತೋಳ ತೆಕ್ಕೆಯಲಿ ಚುಕ್ಕಿಗಳ ಎಣಿಸಬೇಕೆಂದಿರುವೆ ದೂರ ಸರಿಸದಿರು ಕಡಲ ಮೊರೆತ ಕಿವಿಗೆ ಅಪ್ಪಳಿಸಿದಾಗ ಜನ್ಮ ಜನ್ಮದ ವಿರಹ ಕೇಕೆ ಹಾಕುತ್ತದೆಮೈ ಬೆವರ ಗಂಧದಲಿ ರಾತ್ರಿಗಳ ಕಳೆಯಬೇಕೆಂದಿರುವೆ ದೂರ ಸರಿಸದಿರು ಉಕ್ಕೇರುವ ಯೌವನದ ಮಧು ಬಟ್ಟಲು ನಿನ್ನ ತುಟಿ ಸೋಕಲು ಕಾಯುತ್ತಿದೆನಶೆ ಏರಿದ ನಿನ್ನ ಕಣ್ಣ ಕೊಳದಲ್ಲಿ ಈಜಾಡಬೇಕೆಂದಿರುವೆ ದೂರ […]
ನಿನ್ನ ಪಾಪದ ಹೆಣ
ಕವಿತೆ ನಿನ್ನ ಪಾಪದ ಹೆಣ ಬೆಂಶ್ರೀ. ರವೀಂದ್ರ ಹೇಳಿ ಬಿಡಬಹುದಿತ್ತು ಈ ಮಾತುಗಳಪ್ರತಿಮೆ ರೂಪಕಗಳಲ್ಲಿಕತೆಯೊಂದರ ಮುಸುಕಿನಲ್ಲಿಪುರಾಣಗಳ ಪುಣ್ಯಕತೆಗಳ ಅವತರಣಿಕೆಗಳಲಿಅಥವಾಆಧುನಿಕತೆಯ ಹೆಸರಿನಲಿಎಲ್ಲೆ ಮುರಿದಿದ್ದನ್ನು ತರ್ಕಿಸಿ ಸುಸಂಬದ್ಧಗೊಳಿಸಬಹುದಿತ್ತು.ಪ್ರಾಣಿಗಳ ಹುಟ್ಟುಗುಣವಿದು ಎಂದು ಮನಶ್ಶಾಸ್ತ್ರದ ಮೆರಗನೀಯಬಹುದಿತ್ತು ಹೇಳಿಬಿಡುತ್ತೇನೆ ಎಲ್ಲವೀಗಬಟಾಬಯಲಲ್ಲಿ ನಿಂದುನಿನಗೆ ನಿನ್ನಂತವರಿಗೆ ಹಿಂದಿನವರಿಗೆ ಮುಂದಿನವರಿಗೆ ಸಾಕು ಸಾಕಾಗಿದೆನಿಶಸ್ತ್ರಿಯ ಮೇಲೆ ದುರಹಂಕಾರದ ನಿನ್ನ ಶಸ್ತ್ರವ ತೂರಿ ಆಕ್ರಮಿಸುವುದನ್ನು ಸಹಿಸಹಿಸಿ. ಮತ್ತಿಂದುಪೋಲಿಸು ಠಾಣೆಗಳಲ್ಲಿ, ಪತ್ರಿಕೆಗಳಲಿ, ಮುಗಿಲಿಗೆ ಲಗ್ಗೆ ಹಾಕಿದ ಭುಗಿಲುಮಾಧ್ಯಮಗಳಲಿಗುಪ್ತ ವಿಚಾರಣೆಗಳಲಿ ನ್ಯಾಯಾಲಯಗಳಲಿ ಮತ್ತೆನನ್ನ ನಗ್ನಗೊಳಿಸಿ ಹುರಿದು ಮುಕ್ಕುವ ನಿನಗೆ ಹಳೆಯದು,ಹೊಸದಾಗಿ ಹೊಸೆದ ಹಳೆಯಶಾಸ್ತ್ರಗಳ ಧಿಕ್ಕರಿಸಿ […]
ಕೊಡಲಾಗದ್ದು – ಪಡೆಯಲಾಗದ್ದು
ಮರೀಚಿಕೆಯಾದ ಪ್ರೀತಿಗಾಗಿ ಹಂಬಲವೋ
ದೂರ ಸರಿದವರಿಗಾಗಿ ಬೇಡುವಿಕೆಯೋ
ಪ್ರಶ್ನಿಸಿದ ಮನಕೆ
ಅವಳದು ನಿರುತ್ತರ
ಸಿಲುಕಬಾರದು
ದುಡಿದು ಕಾಯಸವೆಸಿ ಕಾಲವನೂ ದೂಡಿಬಿಡಬಹುದೇನೋ
ನೆನಪುಗಳ ಅಬ್ಬರದ ಅಲೆಗಳ
ಒಳಗೆ ನುಸುಳಿಕೊಳ್ಳಬಾರದು
ಅರಣ್ಯ ರೋಧನ
ಕರೆದು ಮಣೆ ಹಾಕಿ
ಭೂರೀ ಭೋಜನ ಬಡಿಸಿ
ಕಿರೀಟವಿಟ್ಟು ಮೆರೆಸುವರೆ ಮಂದಿ