ಕಾರ್ಮಿಕ ದಿನದ ವಿಶೇಷ-ಕವಿತೆ
ನಾವು ಮತ್ತು ಅವರು ಶೋಭಾ ನಾಯ್ಕ. ಹಿರೇಕೈಕಂಡ್ರಾಜಿ. ನಾವು ಮತ್ತು ಅವರು ಇಲಿ ಕೊರೆದ ಮನೆ ಗೋಡೆಗೆ ಮಣ್ಣ ಮೆತ್ತಿಯೇ ಬಂದಿದ್ದಾರಿಲ್ಲಿ ಮಹಡಿ ಮನೆಗೆರಡು ಕಂಬ ಎಬ್ಬಿಸಲು ಅವರ ಮೈ ಬೆವರಿಗಷ್ಟು ಕೂಡಿಸಿ, ಕಳೆದು ಲೆಕ್ಕಹಾಕಿ ಕೂಲಿ ಕೊಡುವ ನಾವುಗಳು ನಮ್ಮ ಮೈ ಬೆವರನ್ನು ಹೇಳಿದಷ್ಟು ಕಟ್ಟಿ ಇಳಿಸಿ ಬರುತ್ತೇವೆ. ಸಂಜೆ ಮೀನು ಮತ್ತು ಮಾರುದ್ದ ಜಡೆಯ ಮಗಳಿಗೆರಡು ರಿಬ್ಬನ್ನು ಒಯ್ಯುವಾಗ ನಗುತ್ತವೆ ಅವರ ಕೈಯಲ್ಲಿ ನಾವೇ ಕೊಟ್ಟ ನೋಟುಗಳು ಇಲ್ಲಿನ ಬರಕತ್ತಿನ ಬದುಕ ಕಂಡು ಕೊನೆಗೂ […]
ಕಾರ್ಮಿಕ ದಿನದ ವಿಶೇಷ-ಕವಿತೆ
ಕವಿತೆ ನಾವು ಕಾರ್ಮಿಕರು ಸಾಯಬಣ್ಣ ಮಾದರ ನಾವು ಕಾರ್ಮಿಕರು ನಮ್ಮಗರಿವಿಲ್ಲದೆ ಹಗಲು ಇರುಳು ಚಲಿಸುತ್ತಿವೆ ಕಷ್ಟಕಾರ್ಪಣ್ಯಕೆ ಬರವಿಲ್ಲದೆ ಚಲಿಸುತ್ತಿದೆ ಜೀವ ಮುಸುಕು ಹೊದ್ದು ಹಸುರನುಟ್ಟು ನಾಳೆ ಎಂಬುವುದು ಭಯವಿಲ್ಲದೆ! ತಲೆಯೊಡೆದು ಬದಕುವವರು ನಾವಲ್ಲ ಬರಿ ದುಡಿದು ತಿನ್ನುವರು ನಾವೆಲ್ಲ ! ನಿಮ್ಮ ಗೋಪುರ ಮೀನಾರಗಳಿಗೆ ನಮ್ಮ ಎಲುಬುಗಳೆ ಹಂದರವಾಗಿ ನಿಮ್ಮ ತೆವಳುವ ಕನಸುಗಳಿಗೆ ನಮ್ಮ ಸ್ವಪ್ನದೆಲೆಗಳಾಗಿ ಚಲಿಸುತ್ತಿದ್ದೇವೆ ಮಾಸಿದ ಬಣ್ಣ ಬಳಿದುಕೊಂಡು ನಿಮ್ಮ ಭಾಷೆ-ಭಾವಗಳು ನುಂಗಿ ಹಾಕಿವೆ ಎಷ್ಟೊಂದು ಜೀವಗಳು ಉಸಿರಿನ ಸಮಾಧಿಗಳ ಮೇಲೆ ಆಕಾಶದಲ್ಲಿ ಹಾರಾಡಿ […]
ಕಾರ್ಮಿಕ ದಿನದ ವಿಶೇಷ-ಕವಿತೆ
ಕವಿತೆ ಕಾರ್ಮಿಕರ ಕೂಗು ಈರಪ್ಪ ಬಿಜಲಿ ಕಾರ್ಮಿಕರ ಕೂಗು” ಚೋಟುದ್ದದ ಹೊಟ್ಟೆಚೀಲವ ತುಂಬಿಸಲು ಮನುಜ ಮಾಡುವನು ಕೂಲಿ ಕೆಲಸಗಳನು ಕಟ್ಟಡ,ಬಡಗಿತನ,ವೆಲ್ಡಿಂಗ್ ,ಪೈಪ್ಲೈನಗಳು ಪೇಂಟರ್,ಪೌರ,ಸಿಂಪಿಗಕಮ್ಮಾರಿಕೆ,ಅನೇಕ ಕರ್ಮಗಳು।।1।। ನಮ್ಮಿ ಕಾರ್ಮಿಕರಿಗಿಲ್ಲ ಜೀವನದ ಭದ್ರೆತೆ ಅವರ ಜೀವನವಿರುವುದು ಬಲು ವಿಭಿನ್ನತೆ ಬಂಡ್ವಾಳಷಾಹಿ,ಕಾರ್ಮಿಕರಲ್ಲಿನ ತಾರತಮ್ಯತೆ ದೂರಾಗಿ ಮೂಡಿಬರಲಿ ಎರಡೂಗುಂಪಲಿ ಸರಿಸಮಾತೆ।।2।। ಕಾರ್ಮಿಕರ ಕೂಗು ನೊಂದ ಮನಗಳ ಕೂಗು ಕೇಳುತ ಧನಿಕರು ಹಿಗ್ಗಿಸುವರು ತಮ್ಮಯ ಮೂಗು ಹೃದಯಸಿರಿವಂತಿಕೆಲಿ ಕಾರ್ಮಿಕರ ಮನಸ್ಸದು ಮಗು ವೇತನದ ದಿನದಂದು ಇವರ ಮುಖದಲಿ ಕಿಲಕಿಲ ನಗು।।3।। ಜೀವದ ಅಂಗುತೊರೆದು ಅವಿರತ […]
ಕಾರ್ಮಿಕ ದಿನದ ವಿಶೇಷ -ಕವಿತೆ
ಕವಿತೆ ಬಿಸಿಲ ಹೂಗಳ ಬದುಕು ಲಕ್ಷ್ಮಿ ಪಾಟೀಲ್ ಬಿಸಿಲ ಹೂಗಳ ಬದುಕು ನನಗೆ ನೆರಳಿಗಿಂತಲೂ ಬಿಸಿಲೇ ಇಷ್ಟ ಒಳಗಿನ ಬೆಂಕಿ ಹೊರಗೆ ನೀರಾಗಿ ಹರಿಯುವ ವಿಸ್ಮಯಕ್ಕೆ ಕಾವುಗಳನ್ನೆಲ್ಲ ಕರಗಿಸಿ ನೀರಾಗುವುದನ್ನು ಕಲಿಸುತ್ತವಲ್ಲ ಅದೆಷ್ಟು ಸಲೀಸು… ಬಿಸಿಲನ್ನು ಹಾಸಿ ಹೊದೆದು, ಶ್ರಮದಲ್ಲಿ ಬೆವರಿಳಿಸಿ ಬಿಸಿಲ ಹಾಡುಗಳನ್ನು ಕಟ್ಟಿ ಜೀವನೋತ್ಸಾಹ ಹೇರಿಕೊಂಡು ಹೊರಟವರನ್ನು ಕಂಡು ನಾನೀಗ ದುಃಖಿಸುವುದಿಲ್ಲ ಭಾವಕೋಶಗಳನು ಅರಳಿಸಿ ಬಿಡುವ ಬಾಡದ ಹೂವಾಗಿ ಉಳಿದು ಬಿಡುವ ಬದುಕಿನರ್ಥಗಳನ್ನು ಹಿಗ್ಗಿಸುವ ಇವರನ್ನು ಕಂಡು ಹಿಗ್ಗುತ್ತೇನೆ ಬೆವೆರಿಳಿಸುವ ಕಸಬಿಗೆ ಜೀವ ತುಂಬುತ್ತೇನೆ… […]
ಕಾರ್ಮಿಕ ದಿನದ ವಿಶೇಷ-ಕವಿತೆ
ಕವಿತೆ ಇದ್ದಲ್ಲೆ ಇದ್ದು ಬಿಡಿ. ಜ್ಯೋತಿ ಡಿ.ಬೊಮ್ಮಾ. ಇದ್ದಲ್ಲೆ ಇದ್ದು ಬಿಡಿ. ಇದ್ದಲ್ಲೆ ಇದ್ದು ಬಿಡಿ ನೀವು ಆರಾಮವಾಗಿ ನಿಮ್ಮೂರಿಗೆ ನಿಮ್ಮ ಮನೆಗೆ ಕರೆಸಿಕೊಳ್ಳಲು ಸರ್ಕಾರದ ಬಳಿ ಸೌಲಬ್ಯಗಳಿಲ್ಲ. ವಿದೇಶದಿಂದ ಮರಳುವವರಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಕಲಿಯುತ್ತಿರುವವರಿಗೆ ಬಸ್ ,ಏರೋಪ್ಲೇನ್ ಗಳೆಲ್ಲ ಮೀಸಲಾಗಿವೆ. ನೀವು ಇದ್ದಲ್ಲೆ ಇದ್ದುಬಿಡಿ ಕಾರು ಜೀಪುಗಳಿದ್ದವರು ಬರಲಿ ಅವರವರ ಊರಿಗೆ ಚೆಕ್ ಪೋಸ್ಟ್ ನಲ್ಲಿರುವವರಿಗೆ ಚಳ್ಳೆಹಣ್ಣು ತಿನ್ನಿಸಿ ಹೊತ್ತು ಹರಿಯುವ ಮೊದಲು. ನೀವು ಇದ್ದಲ್ಲೆ ಇದ್ದು ಬಿಡಿ ಕೆಲಸವಿಲ್ಲ ,ತಿನ್ನಲು ಆಹಾರವಿಲ್ಲದಿದ್ದರೂ ಹಿಡಿ ಅನ್ನಕೊಟ್ಟು […]
ಕಾರ್ಮಿಕದಿನದ ವಿಶೇಷ-ಕವಿತೆ
ಕವಿತೆ ಮೇ ಕವಿತೆ ಲಕ್ಷ್ಮೀ ದೊಡಮನಿ ಮೇ ಕವಿತೆ ನೆನಪಾಗುವಿರಿ ನೀವಿಂದು ಬಂದಿದೆ ಮೇ ಒಂದು ಹೊಗಳುವೆವು ನಾವಿಂದು ಬಂದಿದೆ ಮೇ ಒಂದು ಬಸವರಸರ ತತ್ವದ ತೆರದಿ ಕೈಲಾಸದಲಿ ಇರುವಿರಿ ಬರೆಯಿಸಿಕೊಳ್ಳುವಿರಿ ನೀವಿಂದು ಬಂದಿದೆ ಮೇ ಒಂದು ಕಣ್ಣ ಗಾರೆ,ಬಸವಳಿದ ಮೊಗ,ತನು ಎಲುಬು ಹಂದರ ಅರಿವಿಗೆ ಬರುವಿರಿ ನಮಗಿಂದು ಬಂದಿದೆ ಮೇ ಒಂದು ನಿಮ್ಮನ್ನು ವಿಭಜಿಸಿ ದುಡಿಸಿಕೊಳ್ಳುವ ಧೂರ್ತರಿಂದ ಅಣಗಿಸಿಕೊಳ್ಳುವಿರಿ ನೀವಿಂದುಬಂದಿದೆ ಮೇ ಒಂದು ನಿಮ್ಮಕಾರ್ಯ,ತ್ಯಾಗ,ಬಲಿದಾನಗಳ ಸಂದರ್ಶನ ನಡೆದು ಪ್ರೇರಣೆಯಾಗುವಿರಿ ನಮಗೆಂದು ಬಂದಿದೆ ಮೇ ಒಂದು ಒಂದೇ […]
ಕಾರ್ಮಿಕ ದಿನದ ವಿಶೇಷ-ಕವಿತೆ
ಕವಿತೆ ಕಾರ್ಮಿಕರ ದಿನದಂದು ಹಾಲು ಉಕ್ಕಿದ್ದು ಅಂಜನಾ ಹೆಗಡೆ ಕಾರ್ಮಿಕರ ದಿನದಂದು ಹಾಲು ಉಕ್ಕಿದ್ದು ವಾಟ್ಸಾಪ್ ಫೇಸ್ ಬುಕ್ ಗಳಲ್ಲಿ ಕಾರ್ಮಿಕ ದಿನದ ಶುಭಾಶಯ! “ಕಾಯಕವೇ ಕೈಲಾಸ” ನೆನಪಾಗಿ ಮೈ ನಡುಗಿತು ಕೈಲಾಸ ಕೈತಪ್ಪಿದ ನೋವು ಬಾಧಿಸಿ ಬಾತ್ ರೂಮನ್ನಾದರೂ ತೊಳೆಯಲಿಕ್ಕೆಂದು ಟೊಂಕಕಟ್ಟಿ ನಿಂತೆ ಎಲ್ಲ ಬ್ರ್ಯಾಂಡ್ ಗಳ ಕ್ಲೀನರುಗಳ ಒಂದುಗೂಡಿಸಿ ಬ್ರಶ್ ಗಳನ್ನೆಲ್ಲ ಗುಡ್ಡೆ ಹಾಕಿ ತಲೆಗೊಂದು ಷವರ್ ಕ್ಯಾಪ್ ಹಾಕಿ ಸೈನಿಕಳಾದೆ ಹೊಳೆವ ಟೈಲ್ಸು ಕಾಮೋಡುಗಳೆಲ್ಲ ಜೈಕಾರ ಕೂಗಿದಂತಾಗಿ ಒಳಗೊಳಗೇ ಸಂಭ್ರಮಿಸಿದೆ ವಾಷಿಂಗ್ ಮಷಿನ್ನಿನ […]
ಕಾರ್ಮಿಕ ದಿನದ ವಿಶೇಷ-ಕವಿತೆ
ಕವಿತೆ ಕಾಯಕದ ದಿನ ನಗರ ಸತ್ತು ಹೋಗಿದೆ ನಾಗರಾಜ ಹರಪನಹಳ್ಳಿ ಕಾಯಕದ ದಿನ ನಗರ ಸತ್ತು ಹೋಗಿದೆ ಕಾಯಕ ಜೀವಿಗಳ ದಿನ ನಗರ ಸತ್ತು ಹೋಗಿದೆ ಬೆವರು ಸುರಿಸಿ ಬದುಕುವ ಜನರ ಹೊರದಬ್ಬಿದೆ ಮಹಲುಗಳ ಕಟ್ಟಿ ಗುಡಿಸಲಲಿ ಬದುಕಿದ ಜನ ಗುಳೆಬಂದ ನಾಡಿಗೆ ಹಸಿವು ಹೊತ್ತು ಮರಳಿದ್ದಾರೆ ಮಡಲಲ್ಲಿ ಕಣ್ಣೀರು ನಿಟ್ಟುಸಿರು ತುಂಬಿಕೊಂಡು ಭೂಮಿ ಬಿಟ್ಟು ಬಂದದ್ದಕ್ಕೆ ಪರಿತಪಿಸಿದ್ದಾರೆ ಈ ಬಿಸಿಲಿಗೂ ಕರುಣೆಯಿಲ್ಲ ಕಾಯಕದ ಮಂತ್ರ ಕೊಟ್ಟ ಬಸವಣ್ಣ, ದುಡಿಮೆಯಲ್ಲಿ ಪಾಲು ಕೇಳಿದ ಕಾರ್ಲಮಾರ್ಕ್ಸ ಮಣ್ಣಲ್ಲಿ ಮಣ್ಣಾಗಿ […]
ಕಾರ್ಮಿಕ ದಿನದ ವಿಶೇಷ-ಕವಿತೆ
ಕವಿತೆ ಕಾರ್ಮಿಕರು ನಾವು ಡಾ.ಪ್ರಸನ್ನ ಹೆಗಡೆ ಕಾರ್ಮಿಕರು ನಾವು ಕಾರ್ಮಿಕರು ನಾವು ಯಂತ್ರದ ವೀಣೆಯ ತಂತಿಯ ಮೀಟುವ ವೈಣಿಕರು ನಾವು ಕಾರ್ಮಿಕರು ನಾವು ಆರ್ಥಿಕ ದೋಣಿಯ ಚಂದದಿ ನಡೆಸುವ ನಾವಿಕರು ನಾವು ಕಾರ್ಮಿಕರು ನಾವು ಒಡೆಯನ ಕನಸಿನ ಬೀಜವ ಬಿತ್ತುವ ಜೀವಿಗಳು ನಾವು ಕಾರ್ಮಿಕರು ನಾವು ಹಗಲಿರುಳೆನ್ನದೆ ನಿಲ್ಲದೆ ನಡೆಯುವ ಕಾಲನ ಕಾಲುಗಳು ನಾವು ಕಾರ್ಮಿಕರು ನಾವು ಮಳೆಬಿಸಿಲೆನ್ನದೆ ಕಾರಣ ಒಡ್ಡದೆ ದುಡಿಯುವ ಜನ ನಾವು ಕಾರ್ಮಿಕರು ನಾವು ಗಣಿಯೊಳಗಿಳಿದು ಕುಲುಮೆಯೊಳ್ಬೆಂದು ಹೊನ್ನಾಗುವ ಜನ ನಾವು ಕಾರ್ಮಿಕರು […]
ಕಾವ್ಯಯಾನ
ಸುರಿಮಳೆ ವೀಣಾ ರಮೇಶ್ ಧೋ ಎಂದಿದೆ ನಗುಮಳೆ ಮನಸಿನ ಸುಂದರ ನಗರಿಯಲಿ ನಿನ್ನ ನಸುನಗುವಿನ ಸಿಹಿ ಸಿಂಚನದ ಕಳೆ ಬಿಸಿಯೇರಿದ ವಿರಹದ ಕಾವಿಗೆ ಒಂದಷ್ಟು ತಂಪು ನೀಡಿದೆ,,ಎಡಬಿಡದೆ ಸುರಿವ ನಿನ್ನ ನಗುವಿನ ನರ್ತನದಲಿ ಮನದ ಇಳೆ ನನ್ನ ಮೈ ಮನಗಳು ಒದ್ದೆಯಾಗಿವೆ ತುಸು ಮೆಲ್ಲ ಬೀಸಿದೆ ನೆನಪಿನ ತಂಗಾಳಿ ಕತ್ತಲೆಯ ಮೌನವಷ್ಟೇ ಸೀಳಿದೆ ತಬ್ಬಿ ಈ ಸುಳಿಗಾಳಿ ಮತ್ತದೇ ಸಿಹಿ ಹನಿಗಳು ಆಳಕೆ ಸುರಿದಿದೆ, ನಾ ತೇಲಿ ಹೋಗುವಷ್ಟು ಹರ್ಷ ಧಾರೆಯಲಿ ನೆನೆಯದಂತೆ ಬಚ್ಚಿಟ್ಟು ಕೊಂಡಿರುವೆ ನೆನಪುಗಳು […]