ಕಾವ್ಯಯಾನ
ಸ್ಪಟಿಕವಾಗಬೇಕಿದೆ ಮೂಗಪ್ಪ ಗಾಳೇರ ಹಕ್ಕಿಗಳಿಗೆ ಗೂಡ ಕಟ್ಟಲು ಯಾವ ಮರದ ಅನುಮತಿ ಬೇಕಿಲ್ಲ ಇರುವೆಗಳು ಸಾಲಾಗಿ ನಡೆಯಲು ಯಾವ ಅಭಿಯಂತರರ ನೀಲಿನಕ್ಷೆ ಬೇಕಿಲ್ಲ ಹಾಗಂತ ಈ ಹೃದಯವೇನು ಬಿಟ್ಟಿ ಬಿದ್ದಿಲ್ಲ ನಿನ್ನಿಷ್ಟ ಬಂದಾಗೆ ಬಂದು ಹೋದಾಗೆ ಹೋಗಲು………. ಶಾಂತ ಸಾಗರದಲ್ಲಿ ತೇಲುವ ನಾವೆಯಂತೆ ಈ ಹೃದಯ ಮೊದಲು ದಡ ಸೇರಬೇಕೋ ಇಲ್ಲೇ ಇದ್ದು ಸಾಗರದ ಸವಿ ಸವಿಯಬೇಕೋ……. ಎದೆಯೊಳಗೆ ನೂರೆಂಟು ತಳಮಳ ಏಕಾಂತದಲ್ಲಿ ಇದ್ದರು ನಿನ್ನದೇ ಪ್ರೀತಿಯ ಪರಿಮಳ ಮತ್ತೆ ಮತ್ತೆ ಹೃದಯದ ಕೋಣೆಯಲ್ಲಿ ನಿನ್ನದೇ ಸಡಗರ…….. […]
ಕಾವ್ಯಯಾನ
ಹೋರಾಟ ಪ್ಯಾರಿ ಸುತ ದೈತ್ಯಶಹರ ರಾಜಬೀದಿಯೊಳಗೆ ಹೋರಾಟ ಮುಚ್ಚುಮರೆಯಲಿ ಜಮಾಯಿಸಿ ಇಟ್ಟ ಕಲ್ಲುಗಳತೂರಾಟ ಎತ್ತರದಲ್ಲಿ ಜೋತುಬಿದ್ದ ಮೈಕಿನಲ್ಲಿ ರಕ್ತಕುದಿಸುವ ಘೋಷಣೆಗಳ ಕೂಗಾಟ ಕಪ್ಪುನೀಲಿಶಾಯಿ,ರಕ್ತದಿಂದ ಬರೆಯಲ್ಪಟ್ಟ ರಟ್ಟು,ತಗಡು,ಬಿಳಿಬಟ್ಟೆಗಳ ಹಾರಾಟ ಗುಂಪುಗಳ ಮಧ್ಯಸಿಕ್ಕು ಕಾರು,ಬೈಕು,ಬಸ್ಸು ಲಾರಿ, ರೀಕ್ಷಾಗಳ ಚೀರಾಟ ಹಳ್ಳಿಕೇರಿಗಳಿಂದ ಸಂತೆಬಜಾರಿಗೆ ಬಂದವರ, ಊರಿಂದ ಊರಿಗೆ ಹೋಗುವವರ ಶಾಲಾಕಾಲೇಜು ಮಕ್ಕಳ,ಓಪ್ಪತ್ತು ಊಟದ ವ್ಯಾಪಾರಸ್ಥರ,ಕೂಲಿ ನಂಬಿದ ಸ್ಟೇಷನ್ ಕೂಲಿಕಾರ್ಮಿಕರ, ಊರುಕೇರಿಯ ಸಾರ್ವಜನಿಕರ ಪರದಾಟ ಅವರದೇ ಜೀವನದಲ್ಲೊಂದಿಷ್ಟು ಗೋಳಾಟ ಅರೆಸೇನೆ,ಪೊಲೀಸಪಡೆಗಳಿಂದ ಮದ್ದುಗುಂಡು, ಅಶ್ರುವಾಯುಗಳ ಎರಚಾಟ ಕಟ್ಟಾಳು ಕರೆ ತಂದವರಿಗೆ ಬಿರಿಯಾನಿ ಬಾಡೂಟ ಬೀರುಬ್ರಾಂಡಿ,ವಿಸ್ಕಿ […]
ಕಾವ್ಯಯಾನ
ಅದಿಂಬಾದೊಳು ರೇಖಾ ವಿ.ಕಂಪ್ಲಿ ಅಪಸ್ವರವು ಹಾಡುತಿದೆ ಧ್ವನಿಯ ಗೂಡಿನೊಳು ಇಂದುಮಂಡಲದಿಂ ಬೆಳಕಿಲ್ಲದ ಅಂಗಳದೊಳು ಉಪರೋಚಿತ ಮನದಿಂ ಉಪಾದಿ ಕನಸೊಳು ಋತುಮಾನದ ತಾಡನವಿಲ್ಲ ಕಾಲಮಾನದೊಳು ಎಕ್ಕತಾಳಿ ಎಡಬಿಡಂಗಿ ಕೊಡಂಗಿ ಎಡೆಸೆಳೆಯೊಳು ಒಡಕಲು ಗೆಳೆತನದ ಹಸಿಮುಸಿ ಬಂಧದೊಳು ಕಗ್ಗಾಡಿನಲಿ ಹೆದ್ದಾರಿಯ ಬಯಸುತ ಮಬ್ಬಿನೊಳು ಗವಯ ಯಾನ ಯಾವುದೆಂದು ಅರಿಯಲ್ಕೆಯೊಳು ಚಕ್ರಬಂಧದಲಿ ಅಕ್ಷರಗಳ ಸುಳಿ ಕಾಣಿಸದೊಳು ಜಡಮತಿಯು ಕವಿದ ಜಗದ ನಿಯಮದೊಳು ಟಂಕಾರವಿಹುದೆ ಬಿಲ್ಲು ಬಾಣಗಳಿಲ್ಲದೊಳು ಡಂಬಕ ದೇಹ ಅಲಂಕಾರ ಬಿನ್ನಾ ವೈಯಾರದೊಳು ತಡಕಾಡಿಹೆ ಎಲ್ಲಾ ನಶಿಸಿದ ಬಳಿಕವೂ ಅದರೊಳು ದಂಡನೀತಿ […]
ಕಾವ್ಯಯಾನ
ಮತ್ತೆ ನೀನು ಔಷಧಿಯಾಗು ಮೂಗಪ್ಪ ಗಾಳೇರ ಮತ್ತೆ ನೀನು ಔಷಧಿಯಾಗು ನನ್ನ ಬಿಟ್ಟು ಹೋದ ಮೇಲೆ ಒಳ್ಳೆಯ ದಿನಗಳು ಬರಬಹುದೆಂದಿನಿಸಿರಬಹುದು ನಿನಗೆ ಸತ್ಯಶೋಧನೆಯ ಹಾದಿಯಲ್ಲಿ ಪ್ರೀತಿಯ ಅದೆಷ್ಟೋ ಕನಸುಗಳು ಸತ್ತು ಸ್ವರ್ಗಕ್ಕೂ ಸೇರದೆ ನರಕಕ್ಕೂ ನಿಲುಕದೆ ಬೇತಾಳ ಗಳಂತೆ ನಿನ್ನ ನೆನಪಿನ ಹಿಂದೆ ಸುತ್ತ ಬಹುದೆಂಬ ಒಂದಿಷ್ಟು ಅರಿವಿರಬಾರದೆ……. ಪ್ರೀತಿಯನ್ನು ಹುಡುಕುತ್ತಾ ಹೋಗುತ್ತೇನೆ ಎಂಬುವುದು ಹುಡುಗಾಟದ ವಿಚಾರವಲ್ಲ……… ಯಾಕಾದರೂ ನೀನು ನನ್ನ ಅರ್ಧ ದಾರಿಯಲ್ಲಿ ಕೈ ಬಿಟ್ಟು ಹೋದೆನೆಂದು ಮರುಗುವ ದಿನಗಳು ಬರಲು ದೂರವಿಲ್ಲ…… ಹೃದಯದ ಒಳ […]
ಕಾವ್ಯಯಾನ
ಹನಿಮೂನ್ ಗಿರೀಶ ಜಕಾಪುರೆ, ಮೈಂದರ್ಗಿ ಹನಿಮೂನ್ ಈ ಬಿಕನಾಶಿ ಚಂದ್ರನಿಗೆ ಬುದ್ಧಿಯಿಲ್ಲ ಸುರಿಯುತ್ತಾನೆ ವಿರಹದ ಅಗ್ನಿಗೆ ತುಪ್ಪ..! ಲಾಲ್ಬಾಗ್ಗೆ ಹೊರಟಿದ್ದವು ಎರಡು ಹಕ್ಕಿಗಳು ಹನಿಮೂನ್ಗೆಂದು ಸಮುದ್ರತೀರದ ಕಾಂಕ್ರೀಟ್ ಕಾಡಿನಿಂದ, ಒಂದೇಸಮನೆ ಧಾವಿಸುತ್ತಿತ್ತು ಎದೆಯಲ್ಲಿ ನಿಗಿನಿಗಿ ಕೆಂಡವಿರಿಸಿಕೊಂಡು ಉಸಿರಿನಿಂದ ಬಿಸಿಹೊಗೆ ಚಿಮ್ಮುವ ಉಗಿಬಂಡಿ.., ನಾನೋ ಅಲೆಮಾರಿ, ಹತ್ತಿದೆ ರೈಲು ಅವಳು ನನ್ನ ತೊರೆದುಹೋದ ನಿಲ್ದಾಣದಲಿ ಕಾಲಿಡಲೂ ಅವಕಾಶವಿರದಷ್ಟು ರಶ್ಶು ಆದರೂ ನನಗೆ ರೈಲಿನ ಮೇಲೆ ಏನೋ ಕ್ರಶ್ಶು ಅವರು ಇಬ್ಬರು, ಎರಡು ಬರ್ಥಗಳು ನಾನು ಎಂದಿನಂತೆಯೇ ವೇಟಿಂಗ್ ಲಿಸ್ಟು..! […]
ಕಾವ್ಯಯಾನ
ಮೌನ ಮತ್ತು ಕವಿ ಕೊಟ್ರೇಶ್ ಅರಸಿಕೆರೆ ಅದು ಹಾರಾಡುವ ರೀತಿಗೆ, ರೆಕ್ಕೆಗಳಿವೆ ಎಂಬ ಖುಷಿಗೆ , ಮನ ಸೋತಿದ್ದೆ ಆ ಚಿಟ್ಟೆಗೆ! ಇತ್ತೀಚೆಗೆ….. ಯಾಕೋ ಕಿರಿಕಿರಿ ಎನಿಸಿತು ಭಾರೀ ಶಬ್ದ ಎಂದೆನಿಸಿತು; ಮೌನ ನಾಶಮಾಡುತ್ತಿದೆ ಅನಿಸಿತು ಈಗ ಸರಿಯಾಗಿ ನೋಡಲೆತ್ನಿಸಿದೆ ಚಮಕ್ ಬೆಳಕಿಗೆ ಅದು ಆಕರ್ಷಿತ ಆಗುತ್ತಿತ್ತು! ನೋಡಿದೆ…ಪರಿಶೀಲಿಸಿದೆ…ಅಯ್ಯೋ ಅದು ಏರೋಪ್ಲೇನ್ ಚಿಟ್ಟೆ!! ಮೌನ ಅರಿಯದ ಕವಿಯೊಬ್ಬ ಕವಿಯೇ? ವರ್ತಮಾನಕ್ಕೆ ಸ್ಪಂದಿಸುವ ನೆಪ ಎಷ್ಟೆಲ್ಲಾ ಕೂಳತನ! ಹಡೆದವ್ವನ ಝಾಡಿಸಿ ಒದೆಯುವ ದುಷ್ಟತನ!! ಆಗ…. ಕವಿಯೊಬ್ಬ ಹಾಡಿದನೆಂದರೆ ದೇಶವೇ […]
ಕಾವ್ಯಯಾನ
ಹೆರಳನ್ನೊಮ್ಮೆ ಬಿಚ್ಚಿಬಿಡು ವಿಜಯಶ್ರೀ ಹಾಲಾಡಿ ಆ ಬೆಚ್ಚನೆ ರಾತ್ರಿಗಳಲ್ಲಿಈ ತಣ್ಣನೆ ಹಗಲುಗಳಲ್ಲಿನಿನ್ನ ಪಾದಕ್ಕೆ ತಲೆಯೂರಿಮಲಗಿದ ಬೆಕ್ಕನ್ನೊಮ್ಮೆನೋಡು …. ಕರುಣೆಯ ಕತ್ತಲುಹಣ್ಣುತುಂಬಿದ ಮರಹಗುರ ತುಂಬೆ ಹೂ..ಹೆರಳನ್ನೊಮ್ಮೆ ಬಿಚ್ಚಿಬಿಡು ಸುತ್ತುವ ಭೂಮಿಯನ್ನುನಿಲ್ಲಿಸು ಅಥವಾಮತ್ತಷ್ಟು ವೇಗವಾಗಿಸುತ್ತಿಸುಹೊಸ ಹೆಜ್ಜೆಕಚ್ಚಿಕೊಳ್ಳಬೇಕಿದೆ ನಿಹಾರಿಕೆ ಉಲ್ಕೆಗಳುಸಾಗರ ಸುನಾಮಿಗಳುಅಪ್ಪಳಿಸಲಿಇಲ್ಲವೇಬ್ರಹ್ಮಾಂಡದಾಚೆಕರೆದೊಯ್ಯಲಿ …. ಮಧುಶಾಲೆಗೂ ನನಗೂಸಂಬಂಧವಿಲ್ಲನೋವನ್ನೇ ಬಟ್ಟಲಿಗಿಳಿಸಿಗಟಗಟನ ಕುಡಿಯುತ್ತಿದ್ದೇನೆ ………! *******************
ಕಾವ್ಯಯಾನ
ಕೊಂದು ಕೊಳ್ಳುವೆ ವಿಜಯಶ್ರೀ ಹಾಲಾಡಿ ಕಣ್ಣೀರು ಕೆನ್ನೆಗಿಳಿವಾಗಲೇನಗುತ್ತೇನೆ ಮಣ್ಣ ಘಮಕ್ಕೆ ಸೋತಾಗಅರಳುವುದೇ .. ಕಡಲು ಸೋಕಬೇಕೆಂದಿಲ್ಲಜೀವಕೋಶದೊಳಗಿದೆ ಅಪರಿಚಿತನೆಂದು ಬೀಗಬೇಡಮಾತು ಸುಮ್ಮನೇ ಗೋರಿ ಮೇಲೆ ಹೂ ಅರಳಿದ್ದುಲೋಕರೂಢಿ ಸಾಯುವೆನೆಂದು ಗೋಳಿಡಬೇಡಬೇಕಾದರೆ ಕೊಂದುಕೊಳ್ಳುವೆ **************************
ಕಾವ್ಯಯಾನ
ಕರಿನೆರಳು ಪ್ಯಾರಿಸುತ ಕರಿನೆರಳು ಕರಿಯ ನೆರಳು ಕಾಡುತಿತ್ತು ರಾತ್ರಿ ಹಗಲಿನಲ್ಲಿ ಹಗಲಿನಲ್ಲಿ ಸುಡು ನೆಲದ ಮೇಲೆ ರಾತ್ರಿಯಲ್ಲಿ ಕಪ್ಪು ನೆಲದಮೇಲೆ ಹೆಜ್ಜೆಗೊಂದು ಹಜ್ಜೆ ಹಾಕಿ ಅಷ್ಟು ಬೈದರೂ ಲಜ್ಜೆ ಹೊಸಕಿ ಇಣುಕುತಿತ್ತು,ಕೆಣಕುತಿತ್ತು ಬೆನ್ನ ಹಿಂದೆ ದೂಡಿದಷ್ಟು ಕಾಡುತ್ತಿತ್ತು ,ಬಾಗಿದಷ್ಟು ಬಳಕುತಿತ್ತು ಎತ್ತ ಹೋದರು ಭೂತದಂತೆ..! ದೇಗುಲಕೂ, ಆಶ್ರಮಕೂ ಬರುತಲಿತ್ತು ಕೇಳುತ್ತಿತ್ತು ಹೇಳುತ್ತಿತ್ತು ದೇವರೆದರು ನಾನು ಏಕೆ ಇವರಿಗೆ ಅಂಟು…? ನನಗೂ ಇವರಿಗೂ ಯಾವ ನಂಟು…? ಜೀವ ಇರುವ ನೀನು ಭಾವ ಮೆರೆವ ನಾನು ಜೀವಕೊಂದು ಜೀವವಿರಲು ನನಗೂ […]
ಕಾವ್ಯಯಾನ
ಬಂದು ಹೋಗು ಡಾ.ಗೋವಿಂದ ಹೆಗಡೆ ಬಾ ಶಂಭು, ಬಾ ಕುಳಿತುಕೋ ಕ್ಷಣ ಸಾವರಿಸಿಕೋ ಹುಷಾರು! ನಿನ್ನ ಆ ಹಳೆಯ ಹುಲಿಯದೋ ಆನೆಯದೋ ಚರ್ಮ ಹರಿದುಹೋದೀತು! ಹೊಸದು ಸಿಗುವುದು ಸುಲಭವಲ್ಲ ಮಾರಾಯ! ನಮ್ಮ ಮಂಗಮಾಯ ಕಲೆ ನಿನಗೂ ತಿಳಿಯದೇನೋ ಮತ್ತೆ ಅರಣ್ಯ ಇಲಾಖೆಯವರ ಕೈಯಲ್ಲಿ ಸಿಕ್ಕೆಯೋ ನಿನ್ನ ಕತೆ -ಅಷ್ಟೇ! ಆ ಕೊರಳ ಹಾವು ಆ ಜಟೆ ಅದಕ್ಕೊಂದು ಚಂದ್ರ ಸಾಲದ್ದಕ್ಕೆ ಗೌರಿ! ಕೈಯ ಭಿಕ್ಷಾಪಾತ್ರೆ ತ್ರಿಶೂಲ ಕಪಾಲ ಮಾಲೆ ಯಾಕಯ್ಯ ನಿನಗೆ ಈ ಯುಗದಲ್ಲೂ ಅದೆಲ್ಲ?! ನರಮನುಷ್ಯರಂತೆ […]