ಗಝಲ್
ಗಝಲ್ ವಿನಿ ಬೆಂಗಳೂರು ಒಲವ ಬಂಧದಲಿ ಮನವು ಉಲ್ಲಾಸದಿ ತೇಲುತಿದೆಯಲ್ಲ ಗೆಳತಿ ಬಾಳ ಪಯಣದಲಿ ಸಂತಸವೆ ತುಂಬುತಿದೆಲ್ಲ ಗೆಳತಿ ಪ್ರಕೃತಿಗೆ ಮತ್ತೆ ಚೈತ್ರ ಮೂಡಿಸಿ ವಸಂತ ನಗುತಿದೆಯಲ್ಲ ನೋಡು ಕವಿ ಮನದಲಿ ಶೃಂಗಾರ ಕಾವ್ಯಕೆ ಮುನ್ನುಡಿ ಬರೆದಿದೆಯಲ್ಲ ಗೆಳತಿ ಮೊದಲ ಮಳೆಗೆ ಹೂಗಳರಲಿ ಸುಗಂಧವನು ಬಿರುತಿದೆಯಲ್ಲ ಇಲ್ಲಿ ಭೃಂಗವದು ಮಕರಂದ ಬಯಸಿ ಹೂಗಳಲಿ ಮಧುವ ಹೀರುತಿದೆಯಲ್ಲ ಗೆಳತಿ ಬೀಸುವ ಗಾಳಿಯಲಿ ಮಾಧುರ್ಯ ತುಂಬಿ ಸೆಳೆಯುತಿದೆಯಲ್ಲ ತಂಪಾದ ಮನದಲಿ ಹೊಸ ಕನಸುಗಳು ಮೂಡುತಿದೆಯಲ್ಲ ಗೆಳತಿ ಕಣ್ಗಳು ತುಂಬಿ ಬಯಕೆಗಳನು […]
ಕಾವ್ಯಯಾನ
ಬರಿಗಾಲಿನ ಭಾರತ ಶಿವಶಂಕರ ಸೀಗೆಹಟ್ಟಿ. ಹಸಿವು ಇವರ ಹೊಟ್ಟೆಗಿದೆ ಬಟ್ಟೆ ಜೋಳಿಗೆಗಳು ಇವರ ಹೆಗಲಿಗಿವೆ ಅರಸಿ ಹೊರಟಿದ್ದಾರೆ ಊರ ಹಾದಿ ದಾರಿ ಸಾಗುತ್ತಿಲ್ಲ ದಿನವೂ ಮೂರು ಮೈಲಿ ಕಾಲಿಗೂ ಕಾಲಕ್ಕು ಹೊಂದಾಣಿಕೆ ತಪ್ಪಿ ಹೋಗಿದೆ ನಡೆಯುವವರ ಕಾಲುಗಳು ಬಿಗಿಯುತ ರಕ್ತ ಸುರಿಸುತ್ತಿವೆ ಅಲ್ಲಲ್ಲಿ ಕಂಡು ಕೇಳುವ ಬೂಟುಗಾಲಿನ ಸದ್ದುಗಳು ಗಾಬರಿ ಹುಟ್ಟಿಸುತ್ತಿವೆ ಹಸಿವು ಕಾಣದವರು ಆಹಾರದ ಉಸ್ತುವಾರಿಗಳಾಗಿದ್ದಾರೆ ದೂರದೂರಿಗೆ ಹೊಟ್ಟೆ ಹೊರೆಯಲು ಬಂದವರು ಒಟ್ಟಿಗೆ ನಡೆಯುತ್ತಿದ್ದಾರೆ ಹೊತ್ತು ಹೊತ್ತಿಗೂ ಇಲ್ಲಿ ಹೊಟ್ಟೆ ಸಾಕದವರು ಈಗ ನಿಟ್ಟುಸಿರು ಬಿಟ್ಟಿದ್ದಾರೆ […]
ಕಾವ್ಯಯಾನ
ನನ್ನ ದನಿ ವೀಣಾ ನಿರಂಜನ ‘ನಿನ್ನನ್ನು ಬಂಧಿಸಲು ಆಜ್ಞೆಯಾಗಿದೆ. ನೀನು ಯಾರು?’ ಕೇಳಿದರವರು ‘ನಾನು ಕವಿತೆ’ ಎಂದೆ. ಅವರೆಂದರು – ‘ಹಾಗಾದರೆ ನಿನ್ನ ನಾಲಿಗೆ ಸೀಳಬೇಕು.’ ನಾನು ತಣ್ಣಗೆ ‘ಉಸಿರು’ ಎಂದೆ. ಅವರು ಮತ್ತೆ ನಿನ್ನ ಕತ್ತು ಹಿಸುಕಬೇಕು’ ಎಂದರು ನನ್ನುಸಿರು ಗಾಳಿಯಲ್ಲಿ ಬೆರೆತು ಹೋಗಿದೆ’ ಎಂದೆ! ಅವರೀಗ ಗಾಳಿಯ ಜೊತೆ ಗುದ್ದಾಡುತ್ತಿದ್ದಾರೆ !! ಎಲ್ಲೋ ದೂರದಲ್ಲಿ ಯಾರೋ ಅಳುವ ದನಿ ನಾನು ತಟ್ಟಿ ಮಲಗಿಸುತ್ತಿದ್ದೇನೆ ನನ್ನ ಮಗುವನ್ನು ಎದೆಯ ಬೇಗುದಿಗೆ ಸಾಂತ್ವನ ಹೇಳಬೇಕಿತ್ತಲ್ಲ! ** ನಾನು […]
ಕಾವ್ಯಯಾನ
ಶಬರಿ ಡಾ.ಗೋವಿಂದ ಹೆಗಡೆ ಯಾವುದೋ ಬೇಡರ ಹುಡುಗಿ ಹೆಸರಿಲ್ಲದೇ ಮರೆಗೆ ಸಲ್ಲುವ ಬದಲು ‘ಶಬರಿ’ ಎನಿಸಿ ತಪಕೆ ಹೆಸರಾಗಿ ನಿಂತಿದ್ದು ರಾಮನ ಮಹಿಮೆಯೇ ಶಬರಿಯದೇ ಕನಸ ಕಂಡಿರಬಹುದೇ ಹುಡುಗಿ ಕುದುರೆಯೇರಿ ಬರುವ ಯಾವುದೋ ಉತ್ತರದ ರಾಜಕುವರನದು ಹುಡುಗಿ ಹೆಣ್ಣಾಗಿ ಹಣ್ಣಾಗಿ ಹಪ್ಪು ಮುದುಕಿಯಾಗುವವರೆಗೂ ಕಾದು ಕಾದು ಪಾತ್ರ ಬದಲಿಸಿ ಹರಿದಿರಬೇಕು ನದಿ ಕಾದ ಕಾಯುವ ಕಾವಿನಲ್ಲಿ ಕಾಮನೆಗಳು ಕರಗಿ ನೋಡುವ ಊಡುವ ಬಯಲ ಬಯಕೆ ಉಳಿದು ಕಣ್ಣು ಮುಚ್ಚುವ ಮೊದಲು ಕಂಡೇನೇ ಎಂದು ಕಣ್ಣ ಕೊನೆಯಲ್ಲೆ ಜೀವವನಿರಿಸಿ […]
ಕಾವ್ಯಯಾನ
ಉರಿಪಾದವ ಊರಿನಿಂತ ಹೆಜ್ಜೆಗೆ ಎಸ್.ಕೆ.ಮಂಜುನಾಥ್ ಇಟ್ಟಿಗೆ ಕಲ್ಲು ಹೊತ್ತು ಕಟ್ಟಿದ ಯಾವ ಮಹಲು ನಮ್ಮದಲ್ಲ ನೆರಳನು ನೀಡುತ್ತಿಲ್ಲ ಕೈಬೀಸಿ ಕರೆದ ನಗರ ಕತ್ತು ಹಿಡಿದು ನೂಕಿತ್ತಲ್ಲ ಹಸಿವೆಂದು ಬಂದೆವು ಹಸಿವಿಗಾಗಿ ದುಡಿದೆವು ಮತ್ತೆ ಮತ್ತೆ ಹಸಿವ ಹೊಟ್ಟೆ ಬೆನ್ನ ಮೇಲೆ ಹೊರೆಯ ಕಟ್ಟೆ ಹಸಿವಿನಿಂದ ಅಳುವ ಮಗು ಬೀದಿಬದಿಯ ಅನ್ನದೊಡೆಯ ಕಾಣದಾದನು ಎಲ್ಲಿಗೋದನು ಕರೆತಂದು ಬಿಟ್ಟ ಯಾವ ಬಸ್ಸು ರೈಲು ಕಾಣುತ್ತಿಲ್ಲ ಈ ಹೆಜ್ಜೆಗೂ ಈ ದಾರಿಗೂ ನಂಟು ಇನ್ನು ಮುಗಿದಿಲ್ಲ ಹಸಿವ ಗಂಟುಮೂಟೆ ಕಟ್ಟಿಕೊಂಡು ತಲೆಯ […]
ಕಾವ್ಯಯಾನ
ಗಝಲ್ ವಿನಿ (ಬೆಂಗಳೂರು) ಮಾಮರದಲಿ ಕುಳಿತ ಕೋಗಿಲೆಯ ದನಿ ಮಧುರವಂತೆ ಗೆಳೆಯಾ ಭೃಂಗವದು ಗೂಯ್ ಎನುವ ಝೇಕಾರ ಸೆಳೆದಂತೆ ಗೆಳೆಯಾ ಭೋರೆನುವ ಜಲಪಾತದ ರಮಣೀಯ ದೃಶ್ಯವದು ಮನಮೋಹಕವಂತೆ ಕಾನನದ ರೌದ್ರ ಮೌನವದು ಎದೆನಡುಗಿಸಿದಂತೆ ಗೆಳೆಯಾ ಬೇಲೂರ ಹಳೇಬೀಡಿನ ಶಿಲ್ಪವದು ಶಿಲ್ಪಿಯ ಅದ್ಭುತ ಕೈಚಳಕವಂತೆ ಒಂದೊಂದು ಮದನಿಕೆಯರು ಸೌಂದರ್ಯದ ಪ್ರತೀಕದಂತೆ ಗೆಳೆಯಾ ಪ್ರಕೃತಿಯ ಮಡಿಲಲಿ ಮೈಮರೆತು ಸಂತಸವನು ಆಸ್ವಾದಿಸಿದಂತೆ ಹುಣ್ಣಿಮೆಯ ಪೂರ್ಣಚಂದಮನು ಸೊಗಸಾಗಿ ಕಣ್ಮನ ಸೆಳೆದಂತೆ ಗೆಳೆಯಾ ಸಪ್ತಸ್ವರಗಳ ನಾದದಲಿ ವಿಜಯಳು ದನಿಗೂಡಿಸಿದಂತೆ ಬಾಳ ಪಲ್ಲವಿಗೆ ನಿನ್ನೊಲವಿನ ಸಾಲುಗಳೆ […]
ಕಾವ್ಯಯಾನ
ಹಾರು ಗರಿ ಬಿಚ್ಚಿ ಡಾ.ಗೋವಿಂದ ಹೆಗಡೆ ಏನಾದರೂ ಆಗಬೇಕು ಬಾಂಬಿನಂತಹ ಏನೋ ಒಂದು ಸ್ಫೋಟಿಸಿ ಹೊಗೆಯಲ್ಲಿ ಅಥವಾ ಅಗ್ನಿಗೋಲದಲ್ಲಿ ಮರೆಯಾಗಿ ಬೇಡ, ಚಾಚಿದ ಕಾಲಿಗೆ ಅಲ್ಲೆಲ್ಲೋ ಮರಳಲ್ಲಿ ಓಡುವ ಇರುವೆ ಕಚ್ಚಿ ‘ಹ್ಹಾ’ ಎಂದು ಏನಾದರೂ ನಡೆಯಲಿ ಇಲ್ಲಿ ಈ ನಿಷ್ಕ್ರಿಯತೆಯನ್ನು ಹೇಗೆ ಸಹಿಸುವುದು +++ ನಿಷ್ಕ್ರಿಯತೆ ನಿರಾಕರಣೆಯೇ ಅನುಭವವೇ ಆಭಾಸವೇ ಅಲ್ಲೆಲ್ಲೋ ಕೋಗಿಲೆ ಕೂಗಿದೆ ಹಕ್ಕಿ ಜೋಡಿ ಸಂಜೆ ಆಗಸವ ಸೀಳಿ ಹಾರಿವೆ ಎಲೆಯೊಂದು ಟಕ್ಕೆಂದು ತೊಟ್ಟು ಕಳಚಿದೆ ತುಸು ಆಲಿಸಿದರೆ ಕೊಂಬೆಯೊಳಗೆ ಹರಿವ ಜೀವರಸದ […]
ಕಾವ್ಯಯಾನ
ಕ್ವಾರಂಟೈನ್ ದಿನಗಳಿವು ಶಾಲಿನಿ ಆರ್. ಅಮ್ಮನ ಆ ಮೂರು ದಿನ ಕಾಗೆ ಮುಟ್ಟಿದೆ ಮುಟ್ಟ ಬೇಡ ಎಂದು ದೂರ ಕುಳಿತ ಮುಟ್ಟಿನ ಆ ದಿನ, ಇಂದು ನಾನೆ ಯಾರನ್ನು ಮುಟ್ಟಿಸಿಕೊಳದೆ ದೂರದಿ ನಿಂತು ದಿನ ದೂಡುತಿರು ಕ್ವಾರಂಟೈನ್ ದಿನ, ತರಕಾರಿ ಕೊಳ್ಳುವಾಗ ಮಾರುವವನಿಗಿಂತ ಮಾರು ದೂರ ನಿಂತು ಕೊಳ್ಳುವ ಕ್ವಾರಂಟೈನ್ ದಿನ, ದಿನಸಿ ಸಾಮಾನಿನ ಖರೀದಿಗೂ ಬಂದಿದೆ ಕೊಡುವ ಕೊಳ್ಳುವವನ ಮಧ್ಯೆ ಲಕ್ಣ್ಮಣರೇಖೆಯ ಕ್ವಾರಂಟೈನ್ ದಿನ ಪ್ರತಿಯೊಬ್ಬರ ಮಧ್ಯೆದಲ್ಲೂ ಸಿಲುಕಿ ನಲುಗುತಿದೆ ಮುಗಿಯಲಾರದೆ ನರಳುತಿದೆ ಕ್ವಾರಂಟೈನ್ ದಿನ, […]
ಕಾವ್ಯಯಾನ
ಮುಗಿಯದ ಹಾಡು ಎನ್.ಶೈಲಜಾ ಹಾಸನ ಇಡುವ ಹೆಜ್ಜೆ ಜೊತೆ ಜೊತೆಹೆಜ್ಜೆ ಕೂಡಿದ ಪಲುಕುಪರಿ ಪರಿಯ ಕುಲುಕುನಾನೆಂತು ಬಣ್ಣಿಸಲಿನೀ ಒಲಿದೆ,ನನ್ನ ಒಲಿಸಿದೆಬೆಸೆದಿದೆ ಬಂಧನಮನವೀಗ ಹೂ ನಂದನ ಒಲವ ಬಂಧನದಿ ಸುಖವಿದೆಸಿರಿಯಿದೆ,ಮಧುವಿದೆ,ಸವಿಯಿದೆನಡೆದ ಹಾದಿಯಲ್ಲಿಬಣ್ಣಗಳ ಚೆಲುವಿದೆ ಮೌನದ ಹಾಡಲಿನೂರು ಕವಿತೆಕಣ್ಣ ಬೆಳಕಲಿ ಪ್ರೇಮದಣತೆನೋಟದಂಚಿನಲಿಕೋರೈಸುವ ಮಿಂಚುನೋಟದಾಳದಲಿ ನಲ್ಮೆಯ ಜಲಪಾತತುಂಟ ನಗೆಯಲಿಸಾವಿರ ಪುಳಕ ಕನಸುಗಳ ಸಾಕಾರಎದೆಯ ಗೂಡಲಿನಿನ್ನೊಲುಮೆಯಹುಚ್ಚು ನದಿಯಲಿಕೊಚ್ಚಿ ಹೋದವಳುತೇಲಿ ತೇಲಿ ತೇಲುತಲಿಇರುವ ಹುಚ್ಚು ಖೋಡಿಮನಸ್ಸು ನನ್ನದು ಮುಟ್ಟಲಾಗದು,ತಟ್ಟಲಾಗದುಮೆಟ್ಟಲಾಗದುಮುಪ್ಪಾನು ಮುಪ್ಪಿಗೆಒಲುಮೆಯ ಮನಸಿಗೆಗೆಲುವಿನ ಸೊಗಸು ದಾಂಪತ್ಯ ಗೀತೆಗೆಅನುರಾಗದ ಪಲ್ಲವಿಶೃಂಗಾರದ ಅನುಪಲ್ಲವಿಮುಗಿಯದ ಹಾಡು ಇದು *******
ಕಾವ್ಯಯಾನ
ಕನಸಿನೂರಿನ ಅಪ್ಪ ಐಶ್ವರ್ಯ ಎಲ್.. ಬೆಳಕ ಹೊತ್ತು ಬಂದ ಸೂರ್ಯನೂ ಹೋಗುವ ಹೊತ್ತಾಯಿತು ಹೊರಗೆ ಹೋದ ಅಪ್ಪನು ಬಂದಾನೂ, ಕೈ ತುಂಬ ಬೊಂಬೆ ತಿಂಡಿಗಳ ತಂದಾನೂ ಅವರಿವರ ಮನೆಯ ಅಪ್ಪಂದಿರಂತೆಯೇ ನನ್ನಪ್ಪನೆಂದು ಕಣ್ಣಳತೆಗೆ ಎಟುಕುವವರೆಗೂ ಮನೆಯ ಮುಂದಿನ ಕಂಬವನೇರಿ ಕಾದು ಕುಳಿತೆ, ಬೆಳೆದು ಬುದ್ದಿಬರುವವರೆಗೆ…… ಏರಿದ ಕಂಬಕ್ಕಾದರೂ ಅರಿವಾಗಿರಬಹುದು ಅಪ್ಪನೆಂಬ ಕನಸು ಬೇರೂರಿದ್ದು ನನ್ನೊಳಗೆ, ಅರಿವಾಗಲೇ ಇಲ್ಲ ದೇವರಿಗೆ, ಅಪ್ಪನ ಕರೆದೊಯ್ದೆಬಿಟ್ಟಿದ್ದನು ನಂಗೆ ಬುದ್ದಿಬರುವುದರೊಳಗೆ………. ಜಡಕು ಕೂದಲಿಗೆ ಜುಟ್ಟುಕಟ್ಟಿ, ಕಪ್ಪು ಕಾಡಿಗೆಯಲಿ ಕಾಸಗಲದ ಬೊಟ್ಟಿಟ್ಟು ನನ್ನಿಷ್ಟದ ಫ್ರಾಕನ್ನೆ […]