ಕಾವ್ಯಯಾನ
ಮರಳಿ ಕಟ್ಟಬೇಕಲ್ಲವೇ ಸಂಮ್ಮೋದ ವಾಡಪ್ಪಿ ಹದವಾದ ಮಣ್ಣ ಅಡಿಯಿಂದ ತೇವವಾದ ಕಣ್ಣು, ನೋವುಂಡ ಒಡಲಿಂದ ಎದ್ದುನಿಲ್ಲುತಿದೆ ಒಂದು ಮೊಳಕೆ ಚಿಗುರೊಡೆದು ಟಿಸಿಲಾಗಿ ಹರಡಿದೆ ಬೆಂದ ಧರೆಗೆ ಆಗಸದ ಮುತ್ತು ಈ ಕೂಸಿಗಾಗಿಯೆ ಮೇಲೇಳಲೆಂದು ಕೂಸು ನಗುನಗುತ ಉದರದಿ ಸರಿದು ಕಾಲಿಗೆ ಶಕ್ತಿ ಅಲ್ಪ, ಅಂಬೆಗಾಲಲಿ ಎದ್ದು ಹಗಲಿರುಳು ಓಟ ಕಲಿಸುತಿದೆ ಜೀವನ ಪಾಠ ತಾಯ ಸೆರಗಲಿ ಧೈರ್ಯ, ವಸುದೇವನ ಮೌಲ್ಯ ಎತ್ತರವಾಗುತಿದೆ ಬಾಳು, ಧ್ಯೇಯಗಳ ತುಂಬಿ ಕೌಶಲ್ಯಲ ಅತ್ತ ಇತ್ತ, ಕಲಿಕೆ ಅನುಭವಗಳು, ನವ್ಯಗ್ರಹಿಕೆ ನಡೆಯು ನುಡಿಯು,ಹೊಸ […]
ಕಾವ್ಯಯಾನ
ಅವಳು ನಾಗರೇಖಾ ಗಾಂವಕರ ಅವಳು -1 ಬಿಂಬಕ್ಕೆ ಸರಿಯಾಗಿ ಪ್ರತಿಬಿಂಬ ಮೂಡಿಸುವ ಕನ್ನಡಿಯ ನಾಜೂಕಿನಿಂದಲೇ ಕಾಯ್ದಿರಿಸಿದ್ದಾಳೆ ಅವಳು ಕನ್ನಡಿ ಹೇಳುತ್ತಲೇ ಇರುವ ಬಿಂಬ ಪ್ರತಿಬಿಂಬದ ಸರಳ ಸೂತ್ರ ಆಕೆಗೇನೂ ಅರ್ಥವಾಗುವುದಿಲ್ಲ. ತಲ್ಲಣಗಳ ತಕ್ಕಡಿ ಹಿಡಿದೇ ಎದುರು ಬದುರಾಗುವ ಮುಖಗಳು ಬಿಂಬ ಪ್ರತಿಬಿಂಬವಾದರೂ ಒಂದನ್ನೊಂದು ಬೆಂಬಲಿಸುವುದೇ ಇಲ್ಲ ಬಿಂಬದ ಎಡಕೈ ಎತ್ತಿದರೆ ಕನ್ನಡಿಯಲ್ಲಿ ಏರುವ ಬಲಗೈ ಕನ್ನಡಿಯ ಬೆನ್ನಿಗಂಟಿದ ಪಾದರಸದ ಲೇಪನ ಅಲ್ಲಲ್ಲಿ ಕಿತ್ತು ಹೋಗಿದೆ ಈಗೀಗ ಬಿಂಬ ಪ್ರತಿಬಿಂಬ ಮೂಡಿಸುವುದು ಕನ್ನಡಿಗೂ ಕಷ್ಟವಾಗಿದೆ. ಆದರೂ ಆ ಕನ್ನಡಿಯಲ್ಲಿಯೇ […]
ಕಾವ್ಯಯಾನ
ವರ್ಕ್ ಫ್ರಂ ಹೋಂ ಸುಜಾತಾಗುಪ್ತ ವರ್ಕ್ ಫ್ರಂ ಹೋಂ ವರ್ಕ್ ಫ್ರಂ ಹೋಂ ಕೇಳಲು ಖುಷಿಯಾಯಿತು ಕರೋನ ಬಿಸಿಯಲು ಮನ ತಂಪಾಯ್ತು ಪತಿರಾಯನ ಸಾಂಗತ್ಯಕೆ ವಾರಾಂತ್ಯವೇ ಬೇಕಿಲ್ಲ ಅಹಾ..ಎನಿಸಿತು ಆ ಕ್ಷಣ. ಮನೆಯಲ್ಲೇ ಇದ್ದರೂ ಕಂಪ್ಯೂಟರ್ ಸಂಗ ಉಷೆ ಸಂಧ್ಯೆಯ ಸ್ವಾಗತಿಸೋತನಕ ತಪ್ಪದ ಬವಣೆ.. ಆಯ್ತು ಮನೆಯೇ ಕಛೇರಿ.. ಕರೋನ ಬೆನ್ನಲೆ ಬಂತು ಮಕ್ಕಳಿಗೆ ಬೇಸಿಗೆ ರಜೆ ಶಾಲೆಯು ಸ್ವೇಚ್ಛೆಯ ನೀಡಿತ್ತು ಕರೋನ ಅದ ನುಂಗಿತ್ತು ರಜೆಯ ಮಜದ ಮೂಡಲ್ಲಿದ್ದ ಮಕ್ಕಳಿಗೆ ಗೃಹ ಬಂಧನ… ಅದೆಂಥ ವಿಪರ್ಯಾಸ.. […]
ಕಾವ್ಯಯಾನ
ಪದ್ಯ ಸೌತೇಕಾಯಿ ಅಶ್ವಥ್ ಪದ್ಯ ಸೌತೇಕಾಯಿ ರಾಮನವಮಿಗೆಂದೇ ಪೋಷಿಸಿ ಪಾಲಿಸಿ ಬೆಳೆಯಿಸಿದ ಸೌತೇಬಳ್ಳಿ ನೀರುಣಿಸಿ ಹೂವರಳಿ, ಈಚು ಕಾಯಾಗಿ ಹೊರಳಿ ಮರಿ ಮುನ್ನೂರೆಣಿಸುವ ಉದ್ದ ಬಳ್ಳಿ ರುಚಿಯಲ್ಲೆಣೆಯಿಲ್ಲ ಹೋಲಿಕೆಯೆಲ್ಲಾ ಸಣ್ಣ ಹೇಳತೀರದ ಹೊಳಪು, ಕೆನೆಯಂಥಾ ಬಣ್ಣ ಬಾಯಿ ತಾಕಿದರಾಗ ಗರಿಗರಿಯಾದ ಸದ್ದು ನಾಲಗೆಯು ಬಾಚಿ ಮಾಡುವುದು ಮುದ್ದು ತಣ್ಣನೆಯ ಆ ಅನುಭವ ತರಿಸುವುದು ಮುಗುಳ್ನಗೆ ಹೊತ್ತ ಮುಖವನ್ನೊಂದು ಎಂಥಾ ಬದಲಾವಣೆ , ಮನ ಧಿಮ್ಮಗೆ ಸಾಧ್ಯವುಂಟೇ ಒಂದು ಸೌತೇಕಾಯಿಗೆ ನುಂಗಿಯಾದ ಮೇಲೆ ರುಚಿಯೆಲ್ಲ ಮಾಯ ಆದರೂ ಮುಗಿದೇ […]
ಕಾವ್ಯಯಾನ
ಮಾರ್ಕೆಟ್ಟು, ಮಾತು ಮತ್ತು ಶಬರಿ ಅಂಜನಾ ಹೆಗಡೆ ಬ್ರ್ಯಾಂಡೆಡ್ ಶರ್ಟು ತೊಟ್ಟು ಸರ್ವಾಲಂಕೃತನಾದ ರಾಮ ಮಾರ್ಕೆಟ್ಟಿನಲ್ಲಿ… ಇದೇ ಮೊದಲಭೇಟಿ!! ಕಣ್ಣಗಲಿಸಿ “ಹೌ ಆರ್ ಯೂ” ಎಂದು ಕೈ ಕುಲುಕಿದೆ ಥಟ್ಟನೆ ಪ್ರತ್ಯಕ್ಷನಾಗಿದ್ದಕ್ಕೆ ಒಂದು ಪ್ರೀತಿಯ ಆಲಿಂಗನ… ಬಿಲ್ಲು ಬಾಣಗಳೆಲ್ಲಿ ಎಂದೆ… ಉತ್ತರವಿಲ್ಲ ಕಣ್ಣು ಮಿಟಕಿಸಿದ ಥೇಟು ಕಮರ್ಷಿಯಲ್ ಸಿನೆಮಾವೊಂದರ ನಾಯಕನಂತೆ… ಕಣ್ತಪ್ಪಿಸಿಕೊಂಡಿದ್ದ ಟೀನೇಜಿನ ಕನಸೊಂದು ವನವಾಸದಿಂದ ಮಾರ್ಕೆಟ್ಟಿಗೆ… ಮಿಟಕಿಸಿದ್ದು ಎಡಗಣ್ಣೋ ಬಲಗಡೆಯದೋ ಗೊಂದಲ… ಕೌಸಲ್ಯೆ ಸುಮಿತ್ರೆ ಅಹಲ್ಯೆ ಸೀತೆ…. ಎಲ್ಲರ ಪ್ರೀತಿಯ ರಾಮ ಅದ್ಯಾರ ಹಂಬಲಗಳ ಉತ್ಸವಮೂರ್ತಿ […]
ಗಝಲ್
ಗಝಲ್ ವಿನಿ ಬೆಂಗಳೂರು ಒಲವ ಬಂಧದಲಿ ಮನವು ಉಲ್ಲಾಸದಿ ತೇಲುತಿದೆಯಲ್ಲ ಗೆಳತಿ ಬಾಳ ಪಯಣದಲಿ ಸಂತಸವೆ ತುಂಬುತಿದೆಲ್ಲ ಗೆಳತಿ ಪ್ರಕೃತಿಗೆ ಮತ್ತೆ ಚೈತ್ರ ಮೂಡಿಸಿ ವಸಂತ ನಗುತಿದೆಯಲ್ಲ ನೋಡು ಕವಿ ಮನದಲಿ ಶೃಂಗಾರ ಕಾವ್ಯಕೆ ಮುನ್ನುಡಿ ಬರೆದಿದೆಯಲ್ಲ ಗೆಳತಿ ಮೊದಲ ಮಳೆಗೆ ಹೂಗಳರಲಿ ಸುಗಂಧವನು ಬಿರುತಿದೆಯಲ್ಲ ಇಲ್ಲಿ ಭೃಂಗವದು ಮಕರಂದ ಬಯಸಿ ಹೂಗಳಲಿ ಮಧುವ ಹೀರುತಿದೆಯಲ್ಲ ಗೆಳತಿ ಬೀಸುವ ಗಾಳಿಯಲಿ ಮಾಧುರ್ಯ ತುಂಬಿ ಸೆಳೆಯುತಿದೆಯಲ್ಲ ತಂಪಾದ ಮನದಲಿ ಹೊಸ ಕನಸುಗಳು ಮೂಡುತಿದೆಯಲ್ಲ ಗೆಳತಿ ಕಣ್ಗಳು ತುಂಬಿ ಬಯಕೆಗಳನು […]
ಕಾವ್ಯಯಾನ
ಬರಿಗಾಲಿನ ಭಾರತ ಶಿವಶಂಕರ ಸೀಗೆಹಟ್ಟಿ. ಹಸಿವು ಇವರ ಹೊಟ್ಟೆಗಿದೆ ಬಟ್ಟೆ ಜೋಳಿಗೆಗಳು ಇವರ ಹೆಗಲಿಗಿವೆ ಅರಸಿ ಹೊರಟಿದ್ದಾರೆ ಊರ ಹಾದಿ ದಾರಿ ಸಾಗುತ್ತಿಲ್ಲ ದಿನವೂ ಮೂರು ಮೈಲಿ ಕಾಲಿಗೂ ಕಾಲಕ್ಕು ಹೊಂದಾಣಿಕೆ ತಪ್ಪಿ ಹೋಗಿದೆ ನಡೆಯುವವರ ಕಾಲುಗಳು ಬಿಗಿಯುತ ರಕ್ತ ಸುರಿಸುತ್ತಿವೆ ಅಲ್ಲಲ್ಲಿ ಕಂಡು ಕೇಳುವ ಬೂಟುಗಾಲಿನ ಸದ್ದುಗಳು ಗಾಬರಿ ಹುಟ್ಟಿಸುತ್ತಿವೆ ಹಸಿವು ಕಾಣದವರು ಆಹಾರದ ಉಸ್ತುವಾರಿಗಳಾಗಿದ್ದಾರೆ ದೂರದೂರಿಗೆ ಹೊಟ್ಟೆ ಹೊರೆಯಲು ಬಂದವರು ಒಟ್ಟಿಗೆ ನಡೆಯುತ್ತಿದ್ದಾರೆ ಹೊತ್ತು ಹೊತ್ತಿಗೂ ಇಲ್ಲಿ ಹೊಟ್ಟೆ ಸಾಕದವರು ಈಗ ನಿಟ್ಟುಸಿರು ಬಿಟ್ಟಿದ್ದಾರೆ […]
ಕಾವ್ಯಯಾನ
ನನ್ನ ದನಿ ವೀಣಾ ನಿರಂಜನ ‘ನಿನ್ನನ್ನು ಬಂಧಿಸಲು ಆಜ್ಞೆಯಾಗಿದೆ. ನೀನು ಯಾರು?’ ಕೇಳಿದರವರು ‘ನಾನು ಕವಿತೆ’ ಎಂದೆ. ಅವರೆಂದರು – ‘ಹಾಗಾದರೆ ನಿನ್ನ ನಾಲಿಗೆ ಸೀಳಬೇಕು.’ ನಾನು ತಣ್ಣಗೆ ‘ಉಸಿರು’ ಎಂದೆ. ಅವರು ಮತ್ತೆ ನಿನ್ನ ಕತ್ತು ಹಿಸುಕಬೇಕು’ ಎಂದರು ನನ್ನುಸಿರು ಗಾಳಿಯಲ್ಲಿ ಬೆರೆತು ಹೋಗಿದೆ’ ಎಂದೆ! ಅವರೀಗ ಗಾಳಿಯ ಜೊತೆ ಗುದ್ದಾಡುತ್ತಿದ್ದಾರೆ !! ಎಲ್ಲೋ ದೂರದಲ್ಲಿ ಯಾರೋ ಅಳುವ ದನಿ ನಾನು ತಟ್ಟಿ ಮಲಗಿಸುತ್ತಿದ್ದೇನೆ ನನ್ನ ಮಗುವನ್ನು ಎದೆಯ ಬೇಗುದಿಗೆ ಸಾಂತ್ವನ ಹೇಳಬೇಕಿತ್ತಲ್ಲ! ** ನಾನು […]
ಕಾವ್ಯಯಾನ
ಶಬರಿ ಡಾ.ಗೋವಿಂದ ಹೆಗಡೆ ಯಾವುದೋ ಬೇಡರ ಹುಡುಗಿ ಹೆಸರಿಲ್ಲದೇ ಮರೆಗೆ ಸಲ್ಲುವ ಬದಲು ‘ಶಬರಿ’ ಎನಿಸಿ ತಪಕೆ ಹೆಸರಾಗಿ ನಿಂತಿದ್ದು ರಾಮನ ಮಹಿಮೆಯೇ ಶಬರಿಯದೇ ಕನಸ ಕಂಡಿರಬಹುದೇ ಹುಡುಗಿ ಕುದುರೆಯೇರಿ ಬರುವ ಯಾವುದೋ ಉತ್ತರದ ರಾಜಕುವರನದು ಹುಡುಗಿ ಹೆಣ್ಣಾಗಿ ಹಣ್ಣಾಗಿ ಹಪ್ಪು ಮುದುಕಿಯಾಗುವವರೆಗೂ ಕಾದು ಕಾದು ಪಾತ್ರ ಬದಲಿಸಿ ಹರಿದಿರಬೇಕು ನದಿ ಕಾದ ಕಾಯುವ ಕಾವಿನಲ್ಲಿ ಕಾಮನೆಗಳು ಕರಗಿ ನೋಡುವ ಊಡುವ ಬಯಲ ಬಯಕೆ ಉಳಿದು ಕಣ್ಣು ಮುಚ್ಚುವ ಮೊದಲು ಕಂಡೇನೇ ಎಂದು ಕಣ್ಣ ಕೊನೆಯಲ್ಲೆ ಜೀವವನಿರಿಸಿ […]
ಕಾವ್ಯಯಾನ
ಉರಿಪಾದವ ಊರಿನಿಂತ ಹೆಜ್ಜೆಗೆ ಎಸ್.ಕೆ.ಮಂಜುನಾಥ್ ಇಟ್ಟಿಗೆ ಕಲ್ಲು ಹೊತ್ತು ಕಟ್ಟಿದ ಯಾವ ಮಹಲು ನಮ್ಮದಲ್ಲ ನೆರಳನು ನೀಡುತ್ತಿಲ್ಲ ಕೈಬೀಸಿ ಕರೆದ ನಗರ ಕತ್ತು ಹಿಡಿದು ನೂಕಿತ್ತಲ್ಲ ಹಸಿವೆಂದು ಬಂದೆವು ಹಸಿವಿಗಾಗಿ ದುಡಿದೆವು ಮತ್ತೆ ಮತ್ತೆ ಹಸಿವ ಹೊಟ್ಟೆ ಬೆನ್ನ ಮೇಲೆ ಹೊರೆಯ ಕಟ್ಟೆ ಹಸಿವಿನಿಂದ ಅಳುವ ಮಗು ಬೀದಿಬದಿಯ ಅನ್ನದೊಡೆಯ ಕಾಣದಾದನು ಎಲ್ಲಿಗೋದನು ಕರೆತಂದು ಬಿಟ್ಟ ಯಾವ ಬಸ್ಸು ರೈಲು ಕಾಣುತ್ತಿಲ್ಲ ಈ ಹೆಜ್ಜೆಗೂ ಈ ದಾರಿಗೂ ನಂಟು ಇನ್ನು ಮುಗಿದಿಲ್ಲ ಹಸಿವ ಗಂಟುಮೂಟೆ ಕಟ್ಟಿಕೊಂಡು ತಲೆಯ […]