ನನ್ನೊಳು ಸುನಾಮಿಯೊ
ನನ್ನ ಕೊಳಲು ಚಂದ್ರಪ್ರಭ ಬಿದಿರ ರಂಧ್ರಗಳಲಿ ತೂರಿ ತುಳುಕುವಾಗ ನೀನು ಕೊಳಲ ಮಾಧುರ್ಯ.. ಇಂಪು ಸೊಂಪಿನ ಅದೇ ಮೋಡಿ ಬೀಸಿ ಬಂದ ಬಿರುಗಾಳಿಯಲಿ ಬೆರೆವಾಗ ಅಲುಗುವುದೇಕೆ ಅಸ್ತಿತ್ವದ ಸೌಧ..! ಮತ್ತದೇ ಗಾಳಿ ಭೋರ್ಗರೆವ ಸುನಾಮಿಯಲಿ ಬೆರೆವಾಗ ನನ್ನೊಳು ಸುನಾಮಿಯೊ ಸುನಾಮಿಯೊಳು ನಾನೊ..!! ನಿನ್ನ ಹೊರತು ಸಾಗದ ಉಸಿರು.. ಅಳವಿಗೇ ಸಿಕ್ಕದ ನಿನ್ನ ಗಾಳಿ ಎಂದವರಾರು..?
ಕಾವ್ಯಯಾನ
ನಾನು ನಿನ್ನಾತ್ಮದ ಗುರುತಾಗಿದ್ದೆ ಬಿದಲೋಟಿ ರಂಗನಾಥ್ ಹೌದು ನಾನು ನಿನ್ನಾತ್ಮದ ಗುರುತಾಗಿದ್ದೆ ಆ ನಿನ್ನ ನೋಡುವ ನೋಟದ ಬಿಸುಪಿಗೆ ಚಳಿಯಾಗಿದ್ದೆ ಮಳೆಯಾಗಿದ್ದೆ ಮುಗಿಲೇ ಆಗಿದ್ದೆ ನಿನ್ನ ಮೈಯೊಳಗಿನ ಬಿಸಿಗೆ ಬೆರೆತ ಜೀವವಾಗಿದ್ದೆ ನೀನು ನಡೆದ ದಾರಿಯ ಮೇಲಿನ ಹೆಜ್ಜೆಯನು ಮುಟ್ಟಿ ಬೆಳಕಿನ ಕಿರಣಗಳ ಮುಡಿಸಿದ್ದೆ ಉಳಿದ ಮಾತುಗಳ ನಿಟ್ಟುಸಿರ ಮೌನಕೆ ಕಾಲದ ಸವಾರ ಕುಂಟಾಗಿ ಬಿದ್ದಿದ್ದ ಎದೆಯೊಳಗಿನ ಗಿಲಕಿಗೆ ಕೀ ಕೊಡುವ ನಿನ್ನ ಹೃದಯದ ಕೋಮಲ ಕೈಗಳು ನನ್ನಿಂದ ಜಾರಿಹೋದಾಗಿನ ಶೂನ್ಯತೆಯಲಿ ಕತ್ತಲ ಮನೆಯಲಿ ದಿನಗಳ ಎಣಿಸುತ್ತ […]
ಕಾವ್ಯಯಾನ
ನಾಲ್ಕಾರು ಮಳೆ ಹನಿಗಳು: ದೇವು ಮಾಕೊಂಡ ಸಿಂದ್ಗಿ ನನಗೆ ನಾನೇ ಬಂಧಿಯಾಗಿರುವೆ ಎರಡು ಕಳ್ಳ ಹುದುಲಗಳ ನಡುವೆ ಸಿಲುಕಿ ಬೇರೆರಡರ ಇಕ್ಕಟಿನಲಿ ಬೆಳೆದ ಈಚಲು ಸಸಿಯ ಹಾಗೆ ವಿಶಾಲ ಭೂಮಿ ಬಾನುಗಳ ನಡುವೆ ತಳಕು ಹಾಕಿಕೊಂಡಿರುವೆ ಪರೀಧಿಯೊಳಗಿನ ಕೇಂದ್ರದ ಹಾಗೆ ಬೆಳಗು ಬೈಗು ಪ್ರೀತಿ ಇಮ್ಮಡಿಗೊಳ್ಳುತ್ತದೆ ಸೂರ್ಯ ಬಿಸಲ ಪ್ರಖರ ಶಾಖಗೆ ಕಾಮ ಕಸ್ತೂರಿ ಅರಳಿದ ಹಾಗೆ ಎಲ್ಲೋ ಎಸೆದ ಬೀಜ ಮೊಳಕೆಯೊಡೆದು ನನ್ನೊಳಗೆ ಹೂವು ಬಿಡುತ್ತಿದೆ ತಿಂಗಳ ಚಂದಿರ ಮೂಡಿದ ಹಾಗೆ ಇರುಳ ರಾತ್ರಿ ಪುಟಿದೇಳುತ್ತಿದೆ […]
ಕಾವ್ಯಯಾನ
ಮೌನ ಮಾತಾದಾಗ ಸರೋಜಾ ಶ್ರೀಕಾಂತ ಅಮಾತಿ ಎದೆಯಗೂಡೊಳಗೆ ಬಚ್ಚಿಟ್ಟು ಮರೆಮಾಚಿದ ಮಾತುಗಳೆಷ್ಟೋ!? ನುಡಿಯದೇ ಮೌನರಾಗವಾದ ಶ್ರುತಿ,ತಾಳಗಳಿಲ್ಲದ ಹಾಡುಗಳೆಷ್ಟೋ!!? ತುಟಿಯ ಬಿಟ್ಟು ಹೊರಬರದೇ ಅಡಗಿಸಿಟ್ಟ ನಲಿವು-ನೋವ ಬಗೆಯ! ಬಿಡಿ ಬಿಡಿಸಿ ನಿನ್ನ ಮುಂದಿಡುವೆ ನಾನೀಗ ಕೇಳದಿರಬೇಡ ಗೆಳತಿ ಮನದ ಮಾತೀಗ!! ಅಳಿಯದೆ ಉಳಿದ ಭಾವಗಳಿಗೆ ಜೀವ ಬಂದಿದೆ ಮತ್ತೊಮ್ಮೆ ಈಗ! ಮನದ ಮೂಲೆಯಲಿ ಅವಿತಿರುವ ಆಸೆ ಹಕ್ಕಿಗೆ ಹಾರಲು ರೆಕ್ಕೆ ಬಂತೀಗ!! ನನ್ನೀ ಮೌನ ಮಾತಾಗಬೇಕೆಂದರೂ ಬೇಕು ನಿನ್ನ ಸನಿಹ ಸಾಂಗತ್ಯ ನಾ ಬರೆವ ಲೇಖನಿ ನೀನೆಂಬುದು ಸತ್ಯ! […]
ಕಾವ್ಯಯಾನ
ದಾರಿಹೋಕನೆಂದು ನಂಬಿ ಬಿಟ್ಟೆ! ಅವ್ಯಕ್ತ ಕುಶಲ ಚೇಷ್ಟೆಗಳ ಕನಸ ಮಾರುವ ಕಾಂತನೆ ಹೆಣ್ಣಿನ ಒಳಮನಸ್ಸ ಮರ್ಮವ ಹೇಳುವೆ ತಿಳಿದುಕೊ… ನಿನ್ನ ನಿಜ ಲೋಕದ ಕಡಲ ಮುತ್ತು ಗಳಂತಿರುವ, ಮೌನ ವನಿತೆಯರ ಸಖಿಗುಟ್ಟಿದು.. ಮುಂಗುರುಳ ನಡುವೆ ನಲಿವ ಕಣ್ಣಲ್ಲಿ ಕನಸೊಂದ ಹುಡುಕುವುದು ತಪ್ಪೇನಲ್ಲಾ.. ತುಂಟ ನಗುವಿನೊಳಗೆ ರಸಿಕತೆಯ ಬಯಕೆಯು ಅಲ್ಪಾಯುಷಿಯೂ ಅಲ್ಲಾ.. ಸಭ್ಯತೆಯ ನೀಳ ಸೆರಗ ಜಾರಿಸಲು ಬಾಡದ ನಿತ್ಯಾನುರಾಗವ ಹುಡುಕುವಳಷ್ಟೆ, ಸಹಜ ಜೀವನದಲ್ಲಿರುವ ತಿರುವುಗಳ ಮಧ್ಯೆ ಸ್ಪಷ್ಟ ಮನದ ಮದುರ ಪ್ರೀತಿಯ ಅರಸುವಳಷ್ಟೇ. ಉದಾಸೀನ ಪುರುಷನ ಭೂಷಣವಾದರೆ, […]
ಮಕ್ಕಳ ಕವಿತೆ
ಚಂದ್ರಯಾನ ಎನ್. ಶಂಕರರಾವ್ ಆಹಾ ಚಂದಿರ ಪೂರ್ಣ ಚಂದಿರ ಎಷ್ಟು ಎತ್ತರ ನಿಲುಕದಷ್ಟು ದೂರ. ನಾ ನೀ ಜೊತೆ ಜೊತೆಯಲಿ ಆಡುವ ಬಾ ಚಂದಿರ, ಮೋಡದಿ ಮರೆಯಾಗದಿರು ಅಂಬರದಿ ತೇಲಾಡದಿರು. ನಿಲ್ಲು ಅಲ್ಲೇ ಚಂದಮಾಮ ಎಲ್ಲಿ ಅವಿತೆ ಬಾನಲಿ ನೀನು, ಬಲ್ಲೆ ನಿನ್ನ ಕಣ್ಣುಮುಚ್ಚಾಲೆ ಜಲದ ಹಿಂದೆ ಅವಿತೆಯೇಕೆ. ಹುಣ್ಣಿಮೆಯ ಸುಂದರ ಚಂದಿರ ವಿಧು ನೀ ಬಾನಲಿ ಮಂದಿರ, ಮುದದಲಿ ಪ್ರಕಾಶಿಸು ನಿರಂತರ ಬದುಕಿಗೆ ನೀ ಭಾಸುರ. ವಿಜ್ಞಾನದ ಪರಿಶ್ರಮ ಭಾರತದ ಚಂದ್ರಯಾನ, ನೋಡತಲಿರು ಮುಂದೊಮ್ಮೆ ನಿನ್ನಲ್ಲಿಗೆ […]
ಕಾವ್ಯಯಾನ
ಹೇಳಿ ಹೋಗು ಕಾರಣ ಪ್ರಮಿಳಾ ಎಸ್.ಪಿ. ದಿಂಬಿನ ಕೆಳಗಿನ ಜಂಗಮ ಗಂಟೆಯನ್ನು ಮತ್ತೊಮ್ಮೆ ಮಗದೊಮ್ಮೆ ಹುಡುಕಿ ನೋಡುತ್ತಿದ್ದೆ….. ಕೆಂಪು ಗುಲಾಬಿ ಅದರ ಮುದ್ರೆ ಹೃದಯದ ಇಮೇಜು ಇದ್ದಿರಬಹುದು ನಿನ್ನ ಕಡೆಯಿಂದ…ಎಂದು!!! ಈಗೆಲ್ಲವು ಶೂನ್ಯ… ಅದೆಷ್ಟು ದಿನ ಅಂತರಂಗದ ಒಡೆನಾಟವಿತ್ತೋ… ಅಷ್ಟೂ ದಿನ ನಿನ್ನ ಡಿಪಿ ಗೊಂದು ಬೆಲೆಯಿತ್ತು…. ಈಗ ಕೊನೆಯ ಸೀನ್ ಎಷ್ಟು ಗಂಟೆಗೆ ನೋಡಿರುವೆ… ಎಂಬುದು ಒಂದೇ ಬಾಕಿ ನನಗೆ… ಹೇಳಿ ಹೋಗು ಕಾರಣ ಎನ್ನುವುದಿಲ್ಲ ನಾನು ಕಾರಣ ಹೇಳದೆ ಬಂದಿದ್ದವನು ನೀನು….!!!
ಕಾವ್ಯಯಾನ
ಮದುವೆಯ ಪ್ರಸ್ತಾಪ ಹರ್ಷಿತಾ ಕೆ.ಟಿ. ನೋಡುನೋಡುತ್ತಿದ್ದಂತೆ ಆಕಾಶದಲ್ಲೊಂದು ಕದ ತೆರೆದುಕೊಂಡಿತು ಯಾವುದೋ ಕೈಯೊಂದೂ ಚಾಚಿ ಕರೆಯಿತು ನಿಂತಲ್ಲಿಂದಲೇ ಕತ್ತು ನೀಳ ಮಾಡಿ ಎಟುಗಿಸಿ ನೋಡಿದೆ ಕದದ ಆ ಬದಿಯ ಲೋಕ ಅಲ್ಲಿ ಎಲ್ಲವೂ ಕಲ್ಪಿಸಿಕೊಂಡಿದ್ದಕಿಂತ ಅಚ್ಚುಕಟ್ಟು ಜೋಡಿಸಿಟ್ಟ ಕನಸುಗಳಿಗೆ ಧೂಳು ತಾಕಿರಲಿಲ್ಲ ಅಲ್ಲಿ ಹಸಿವು ಬಾಯಾರಿಕೆಗಳೂ ಊಳಿಡುವುದಿಲ್ಲ ಬತ್ತಿ ಸಿಕ್ಕಿಸಿ ಎಣ್ಣೆ ತುಂಬಿಸಿಟ್ಟ ದೀಪಗಳು ಬೆಳಗುವುದೊಂದೇ ಬಾಕಿ ಆದರೂ ಎತ್ತಲೂ ಈಗಾಗಲೇ ಬೆಳಕು ಈ ಭೂಮಿಯಂತಲ್ಲ ಕಸದ ರಾಶಿ ಇಲ್ಲ ಅಂಗಳವೂ ಇಕ್ಕಟ್ಟಿಲ್ಲ ಒಲೆಯೇರಿ ಕುಳಿತ ಮಡಿಕೆಗೆ […]
ಕಾವ್ಯ ಯಾನ
ಆ ಕರಾಳ ಇರುಳು ಮಧು ವಸ್ತ್ರದ್ ನಾವು ಮುಂಬಯಿ ಮಾಯಾ ನಗರದ ದಿಟ್ಟನಿವಾಸಿಗಳು.. ಮರೆಯೆವು ಎಂದೂ 26-11ರ ಆ ಕರಾಳ ಇರುಳು.. ಉತ್ಸಾಹದ ಕೆಲಸದೊತ್ತಡದ ಗಜಿಬಿಜಿಯ ದಿನಗಳು.. ಅರಿವಿಲ್ಲದೆ ಬಲಿಯಾದರು ತಪ್ಪನೆಸಗದ ಮುಗ್ಧಜನಗಳು.. ಶತ್ರುಗಳು ನುಗ್ಗಿದರು ಮೋಸದಿ ಸಮುದ್ರಮಾರ್ಗದೊಳು.. ಯಾರಿಗೂ ಕಾಣಲಿಲ್ಲ ಆ ನೀಚ ಕಪಟಿಗಳ ನೆರಳು.. ಅಕಸ್ಮಾತ್ತಾಗಿಎರಗಿದ ಭೀಕರ ಗುಂಡು ಸಿಡಿಮದ್ದುಗಳು.. ಜೀವತೆತ್ತರನೇಕ ಕಾರ್ಯನಿರತ ಪೋಲಿಸ್ ಕರ್ಮಚಾರಿಗಳು.. ಸೋತುಬಳಲಿದವುಮುಂಬೈನ ಎತ್ತರದ ಕಟ್ಟಡಗಳು.. ಮೌನವಾದವು ಫುಟ್ ಪಾತ್ ಗಳು..ಖಾವುಗಲ್ಲಿಗಳು.. ಹೋಟೆಲ್ ತಾಜ್ಒಳಾಂಗಣದಿ ಪೋಲಿಸರ ಕಸರತ್ತು ಗಳು ಮೂರುದಿನಗಳವರೆಗೆ […]
ಮಕ್ಕಳ ಪದ್ಯ
ಪಟ್ ಪಟೆಕಾಯಿ ಚಟ್ ಪಟ ಎಂದು! ವಿಜಯಶ್ರೀ ಹಾಲಾಡಿ ಪಟ್ ಪಟೆಕಾಯಿ ಚಟ್ ಪಟ ಎಂದು ಹಾಡು ಕಟ್ತಿತ್ತು ಮೆತ್ತನೆ ಹೆಜ್ಜೆಯ ಬೆಳ್ಳಿ ಬೆಕ್ಕು ಕದ್ದು ಕೇಳ್ತಿತ್ತು ಪಟ್ ಪಟೆಕಾಯಿ ಚಟ್ ಪಟ ಎಂದು ನಕ್ಕು ಉರುಳಿತ್ತು ಮುಳ್ಳಿನ ಮರೆಯ ಓತಿಕ್ಯಾತವು ಫೋಟೋ ಹಿಡಿದಿತ್ತು ಪಟ್ ಪಟೆಕಾಯಿ ಚಟ್ ಪಟ ಎಂದು ಅಳುತಾ ಕೂತಿತ್ತು ಓಡುತ ಬಂದ ಇರುವೆಯಣ್ಣ ಗಲ್ಲ ಸವರಿತ್ತು ಪಟ್ ಪಟೆಕಾಯಿ ಚಟ್ ಪಟ ಎಂದು ಗೊರಕೆ ಹೊಡೆದಿತ್ತು ನಿದ್ದೆ ಬಾರದೆ ಬಾಲವ ಸುತ್ತಿ […]